Tag: by election

  • ಸಿದ್ದರಾಮಯ್ಯ ಗಿಮಿಕ್ ಮಾಡೋದನ್ನು ಬಿಟ್ಟು ಡಿಕೆಶಿ ಜೈಲಿಗೆ ಯಾಕೆ ಹೋದ್ರು ಅನ್ನೋದನ್ನು ತಿಳಿಸಲಿ: ಎಸ್‍ಟಿಎಸ್

    ಸಿದ್ದರಾಮಯ್ಯ ಗಿಮಿಕ್ ಮಾಡೋದನ್ನು ಬಿಟ್ಟು ಡಿಕೆಶಿ ಜೈಲಿಗೆ ಯಾಕೆ ಹೋದ್ರು ಅನ್ನೋದನ್ನು ತಿಳಿಸಲಿ: ಎಸ್‍ಟಿಎಸ್

    ಹಾನಗಲ್(ಹಾವೇರಿ): ಮಾಜಿ ಸಿಎಂ ಸಿದ್ದರಾಮಯ್ಯ ಅವರು ಅಪಪ್ರಚಾರ ಮಾಡುವುದನ್ನು ಬಿಟ್ಟು ಡಿ.ಕೆ ಶಿವಕುಮಾರ್ ಜೈಲಿಗೆ ಯಾಕೆ ಹೋದರು..? ಐಟಿ ದಾಳಿ ಯಾಕೆ ಆಯಿತು..? ಎಂಬುದನ್ನು ಜನತೆಗೆ ತಿಳಿಸಲಿ ಎಂದು ಸಚಿವ ಎಸ್.ಟಿ.ಸೋಮಶೇಖರ್ ಸವಾಲೆಸೆದರು.

    ಹಾನಗಲ್ ನಲ್ಲಿ ಪ್ರಚಾರಕ್ಕೆ ಆಗಮಿಸಿದ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಯಡಿಯೂರಪ್ಪ ಅವರು ಭ್ರಷ್ಟಾಚಾರ ಮಾಡಿದ್ದಾರೆ ಎಂದಾದರೆ ಲೋಕಾಯುಕ್ತ ಇದೆ, ಐಟಿ ಇದೆ. ಲಿಖಿತವಾಗಿ ದೂರು ಕೊಡಲಿ, ಆದರೆ ಯಾವ ದೂರು ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು.

    ಸೋಲುವುದು ಗೊತ್ತಾಗುತ್ತಿದ್ದಂತೆ ಈ ರೀತಿ ಗಿಮಿಕ್ ಮಾಡ್ತಾರೆ. ಗೃಹ ಸಚಿವರಾಗಿ, ನೀರಾವರಿ ಸಚಿವರಾಗಿ ಈಗ ಮುಖ್ಯಮಂತ್ರಿ ಆಗಿರುವ ಬಸವರಾಜ ಬೊಮ್ಮಾಯಿ ಅವರ ಮೇಲೆ ಯಾವುದಾದರೂ ಆರೋಪವಿದೆಯೇ ಜನರಿಗೆ ಒಳ್ಳೆಯ ಕೆಲಸ ಮಾಡಬೇಕೆಂದು ಬಂದಿದ್ದಾರೆ. ಮೋದಿ ಅವರಿಗೆ ವಿಶ್ವದಲ್ಲಿ ಒಳ್ಳೆ ಹೆಸರಿದೆ. ಭಾರತಕ್ಕೆ ಹೆಸರು ತಂದುಕೊಟ್ಟವರು ಎಂದರು.

    ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಹಣ ಹಂಚಿಕೆ ಮಾಡಲಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಚುನಾವಣೆಯಲ್ಲಿ ಬಿಜೆಪಿ ಹಣ ಹಂಚುವ ಕೆಲಸ ಮಾಡಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಪ್ರಕಾರ ಮತಯಾಚಿಸುತ್ತೇವೆ ಹೊರತು ಮತದಾರರಿಗೆ ಹಣ ಹಂಚುವ ಕೆಲಸ ಮಾಡಿಲ್ಲ. ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಒಬ್ಬರಿಗೊಬ್ಬರಿಗೆ ಬಗೆಹರಿಯುತ್ತಿಲ್ಲ. ಅವರದ್ದು ಬಗೆಹರಿಸಿಕೊಳ್ಳಲು ಹೊಸ ಹೊಸದನ್ನು ಹುಡುಕುತ್ತಾರೆ ಎಂದು ಹೇಳಿದರು.

    ಹಾನಗಲ್ ಕ್ಷೇತ್ರದಲ್ಲಿ ಸಿ.ಎಂ.ಉದಾಸಿ ಅವರು ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಹಲವು ಹೊಸ ಹೊಸ ಕಾರ್ಯಕ್ರಮಗಳನ್ನು ಮಾಡಲು ಹುಮ್ಮಸ್ಸು ಹೊಂದಿದ್ದಾರೆ. ಪಕ್ಷದ ಪರ ಮನೆಮನೆ ಪ್ರಚಾರ ಮಾಡಲಾಗುವುದು. ಮುಖ್ಯಮಂತ್ರಿಗಳು ಮತ್ತು ಸಚಿವ ಬಿ.ಸಿ.ಪಾಟೀಲ್ ಅವರು ಇದೇ ಜಿಲ್ಲೆಯವರಾದ್ದರಿಂದ ಬಿಜೆಪಿ ಗೆಲುವು ಸಾಧಿಸಲಿದೆ. ಜನರು ಸಹ ಸಾಕಷ್ಟು ನಿರೀಕ್ಷೆಗಳನ್ನು ಹೊಂದಿದ್ದು ಅದನ್ನು ಮುಖ್ಯಮಂತ್ರಿಗಳು ಈಡೇರಿಸಲಿದ್ದಾರೆ ಎಂದು ಭರವಸೆ ನೀಡಿದರು.

    ಇದೇ ವೇಳೆ ಕೋಲಾರ, ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ನಲ್ಲಿ ಜಿಲ್ಲೆಯ ಎಲ್ಲರಿಗೂ ಸಾಲ ನೀಡದೆ ಕೇವಲ ಎರಡು ಮೂರು ಕ್ಷೇತ್ರದವರಿಗಷ್ಟೇ ಸಾಲ ನೀಡುತ್ತಿದ್ದಾರೆ ಎಂಬ ದೂರುಗಳು ಬಂದಿವೆ. ಈ ಕುರಿತು ಸಭೆ ಕೂಡ ಮಾಡಲಾಗಿದೆ. ಕೋಲಾರ ಡಿಸಿಸಿ ಬ್ಯಾಂಕಿಗೆ ನೋಟಿಸ್ ನೀಡಿ ಕ್ರಮಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದರು. ಇದನ್ನೂ ಓದಿ: ಬಿಜೆಪಿ ಸಾಧನೆ ಶೂನ್ಯ, ಅವಹೇಳನಕಾರಿ ಮಾತಾಡ್ತಿದ್ದಾರೆ: ಡಿಕೆಶಿ ಕಿಡಿ

    ತುಮಕೂರು ಡಿಸಿಸಿ ಬ್ಯಾಂಕ್ ನಲ್ಲಿ ಕೂಡ ಸರಿಯಾಗಿ ಸಾಲ ಕೊಡುತ್ತಿಲ್ಲ ಎಂದು ದೂರು ಬಂದಿದ್ದು ತನಿಖೆ ಮಾಡಲಾಗುತ್ತಿದೆ. ಉಳಿದಂತೆ 19 ಡಿಸಿಸಿ ಬ್ಯಾಂಕ್ ಗಳು ಅಲ್ಪಾವಧಿ, ದೀರ್ಘಾವಧಿ ಸಾಲ ನೀಡುತ್ತಿವೆ. ಎಸ್ ಸಿ, ಎಸ್ ಟಿ, ಒಬಿಸಿ ಸೇರಿದಂತೆ ಎಲ್ಲಾ ಜನಾಂಗದವರಿಗೆ ಸಾಲ ನೀಡಬೇಕೆಂದು ಹೇಳಲಾಗಿದೆ. 20,810 ಕೋಟಿ ರೂ. ಕೃಷಿ ಸಾಲವನ್ನು 30.86 ಲಕ್ಷ ರೈತರಿಗೆ ವಿತರಿಸುವ ಗುರಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು.  ಇದನ್ನೂ ಓದಿ: ಕಟೀಲ್ ಆರೋಪಕ್ಕೆ ಸುಬ್ರಮಣಿಯನ್ ಸ್ವಾಮಿ ಹೇಳಿಕೆ ಸಾಕ್ಷ್ಯ ನೀಡಿದ ಬಿಜೆಪಿ

    ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಬುಧವಾರ ಹಾನಗಲ್, ಆಡರು ಸೇರಿದಂತೆ ನಾನಾಕಡೆ ಶಿವರಾಜ ಸಜ್ಜನ ಪರವಾಗಿ ಪ್ರಚಾರದಲ್ಲಿ ತೊಡಗಿಕೊಂಡು ಮತಯಾಚಿಸಿದರು. ಹಿರೆಹುಳ್ಳಾಳ ಗ್ರಾಮ ಪಂಚಾಯತ್ ನ ತಮರಿಕೊಪ್ಪ, ಬಾಳಂಬೀಡ ಗ್ರಾಮದಲ್ಲಿ ಮುಖಂಡರ ಸಭೆ ನಡೆಸಿದರು. ಇದಕ್ಕೂ ಮುನ್ನ ವಿರಕ್ತಮಠಕ್ಕೆ ಭೇಟಿ ನೀಡಿ ಚಂದ್ರಶೇಖರ್ ಶಿವಾಚಾರ್ಯ ಮಹಾಸ್ವಾಮೀಜಿ, ಮುತ್ತಿನಕಂತಿ ಮಠ, ಶಿವಬಸವ ಮಹಾಸ್ವಾಮೀಜಿಗಳನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಬ್ಯಾಡಗಿ ಶಾಸಕರು, ಯುವ ರಾಜ್ಯಾಧ್ಯಕ್ಷರಾದ ಶ್ರೀ ಸಂದೀಪ್ ಕುಮಾರ್ ಕೆ.ಸಿ. ಹಾಗೂ ಪ್ರಮುಖ ಪದಾಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.

  • ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ, ಮತಭಿಕ್ಷೆ ನೀಡಿ: ಹೆಚ್‍ಡಿಡಿ

    ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ, ಮತಭಿಕ್ಷೆ ನೀಡಿ: ಹೆಚ್‍ಡಿಡಿ

    ವಿಜಯಪುರ: ನಾನು ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ. ನನ್ನ ಜೀವನದ ಕೊನೆಯ ಘಟ್ಟದಲ್ಲಿದ್ದೇನೆ. ಹಾಗಾಗಿ ಮತಭೀಕ್ಷೆ ನೀಡಿ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮತದಾರರಲ್ಲಿ ಮನವಿ ಮಾಡಿದ್ದಾರೆ.

    HDD

    ಬೈ ಎಲೆಕ್ಷನ್ ಕಣ ರಂಗೇರಿದೆ. ಸಿಂದಗಿಯನ್ನು ಉಳಿಸಿಕೊಳ್ಳಲೇಬೇಕು ಎಂದು ಪಣ ತೊಟ್ಟಿರುವ ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರು, ಮತದಾರರ ಮೇಲೆ ಈಗ ಭಾವನಾತ್ಮಕ ಅಸ್ತ್ರ ಪ್ರಯೋಗ ಮಾಡಿದ್ದಾರೆ. ಇದನ್ನೂ ಓದಿ: ಹೆಬ್ಬೆಟ್‌ ಗಿರಾಕಿ ಮೋದಿ ಎಂದ ಕೆಪಿಸಿಸಿ ಐಟಿ ಸೆಲ್‌ ವಿರುದ್ಧ ಡಿಕೆಶಿ ಗರಂ

    HDD

    ಸೋಮವಾರ ವಿಜಯಪುರಕ್ಕೆ ಭೇಟಿ ನೀಡಿ, ಜೆಡಿಎಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಮಾಡಿದ ಅವರು, ನಾನು ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ. ಈಗಾಗಲೇ 89 ವರ್ಷ ಆಗಿದೆ. ನಾನು ಜೀವನದ ಕೊನೆ ಘಟ್ಟದಲ್ಲಿದ್ದೇನೆ. ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಆಡಳಿತಕ್ಕೆ ಬರಬೇಕು. ಅದನ್ನು ನೋಡಬೇಕು. ಅದಕ್ಕಾಗಿ ನಾನು ಮತ ಭಿಕ್ಷೆ ಕೇಳುತ್ತಿದ್ದೇನೆ. ದಯಾಮಾಡಿ ಜೆಡಿಎಸ್ ಪಕ್ಷವನ್ನು ಗೆಲ್ಲಿಸಿ ಎಂದು ಮನವಿ ಮಾಡಿಕೊಂಡರು. ಇದನ್ನೂ ಓದಿ: ರೈತರಿಗೆ ಸಿಹಿಸುದ್ದಿ – ರಸಗೊಬ್ಬರ ಸಬ್ಸಿಡಿ ಭಾರೀ ಏರಿಕೆ

  • ವಿಕೃತ ಮನಸ್ಸಿನವರು ಪೆಟ್ರೋಲ್ ಬೆಲೆ 100 ರೂ. ದಾಟಿದ್ರೂ ಪರವಾಗಿಲ್ಲ ಅಂತಾರೆ: ಖರ್ಗೆ

    ವಿಕೃತ ಮನಸ್ಸಿನವರು ಪೆಟ್ರೋಲ್ ಬೆಲೆ 100 ರೂ. ದಾಟಿದ್ರೂ ಪರವಾಗಿಲ್ಲ ಅಂತಾರೆ: ಖರ್ಗೆ

    ಕಲಬುರಗಿ: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳವಾಗುತ್ತಿದೆ. ನಾವು ಹೇಳಿದ್ರೆ ಜನ, ವಿರೋಧ ಪಕ್ಷದವರು ಹೇಳುತ್ತಾರೆ ಅಂತಾರೆ. ಕೆಲವು ಜನ ಇಂಥಹ ವಿಕೃತ ಮನಸ್ಸಿನವರಿದ್ದಾರೆ ಅವರು 100 ರೂ. ಆಗಲಿ ಪರವಾಗಿಲ್ಲ ಎನ್ನುತ್ತಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.

    ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಕಾಲದಲ್ಲಿ 60 ರೂಪಾಯಿಗೆ ಪೆಟ್ರೋಲ್ ದೊರಕುತಿತ್ತು. ಇದೀಗ ನೂರರ ಗಡಿ ದಾಟಿದವರು ಕೇಂದ್ರ ಸರ್ಕಾರದ ವಿರುದ್ಧ ಯಾರು ಕೂಡ ಪ್ರಶ್ನೆ ಮಾಡುತ್ತಿಲ್ಲ. ಕಚ್ಚಾ ತೈಲ ಬೆಲೆ ಕಡಿಮೆ ಇದ್ದರು, ದೇಶದಲ್ಲಿ ಪೆಟ್ರೋಲ್ ಡೀಸೆಲ್ ನೂರರ ಗಡಿ ದಾಟಿದೆ. ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಹೀಗಾಗಿ ಜನ ಸಾಮಾನ್ಯರಿಗೆ ಹೊರೆಯಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮಾತಾ ಮಾಣಿಕೇಶ್ವರಿ ದರ್ಶನಕ್ಕೆ ಬಂದ ಸಾಧು ಮೇಲೆ ಕಾಲಿನಿಂದ ಒದ್ದು ಹಲ್ಲೆ

    ಹಾನಗಲ್ ಹಾಗೂ ಸಿಂದಗಿ ಉಪ ಚುನಾವಣೆ ಬಗ್ಗೆ ಮಾತನಾಡಿ, ಜೆಡಿಎಸ್ ಮೊದಲ ಬಾರಿಗೆ ಎರಡು ಕಡೆ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಚುನಾವಣೆಗೆ ನಿಲ್ಲಿಸಿದ್ದಾರೆ. ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿದ್ರೆ ಕಾಂಗ್ರೆಸ್ ಗೆ ಹಿನ್ನಡೆ ಎಂದು ತಿಳಿದುಕೊಂಡರೆ ಅದು ತಪ್ಪು ಕಲ್ಪನೆ. ಜನ ಈಗ ಜಾಗೃತರಾಗಿದ್ದಾರೆ ಜಾತ್ಯಾತೀತ ತತ್ವದ ಮೇಲೆ ಕಾಂಗ್ರೆಸ್ ನಡೆಯುತ್ತದೆ. ಹಾಗಾಗಿ ಈ ಎರಡು ಕ್ಷೇತ್ರದಲ್ಲಿ ಜನ ಕಾಂಗ್ರೆಸ್‍ಗೆ ಆಶೀರ್ವಾದ ಮಾಡುತ್ತಾರೆ. ಸಂವಿಧಾನ ಉಳಿಸಬೇಕು, ಜಾತ್ಯಾತೀತ ಇರಬೇಕು, ಬಿಜೆಪಿಗೆ ಪಾಠ ಕಲಿಸಬೇಕು ಎಂದು ಕೆಂಡಕಾರಿದರು. ಇದನ್ನೂ ಓದಿ: ಶಾಸಕ ಗೌರಿಶಂಕರ್‌ಗೆ ಮುಳುವಾಗುತ್ತಾ ವಿದ್ಯಾರ್ಥಿಗಳಿಗೆ ನಕಲಿ ವಿಮಾ ಬಾಂಡ್ ಹಂಚಿಕೆ ಕೇಸ್‌?

    ಛತ್ತೀಸ್‍ಗಢದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮಾತನಾಡಿ, ಅಲ್ಲಿ ಸಿಎಂ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಪಂಜಾಬ್, ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವು ಸರಿಯಾಗಿದೆ. ದೇಶದಲ್ಲೇ ಮೊದಲ ಬಾರಿಗೆ ದಲಿತ ಮುಖ್ಯಮಂತ್ರಿ ಮಾಡಿದ್ದೇವೆ. ಎಲ್ಲರೂ ಅವರಿಗೆ ಸಹಕಾರ ನೀಡಬೇಕು ಎಂದು ಹೈಕಮಾಂಡ್ ಹೇಳಿದೆ. ಹೈಕಮಾಂಡ್ ನಿರ್ಧಾರವೆ ಅಂತಿಮ ನಿರ್ಧಾರ ಎಂದರು. ಇದನ್ನೂ ಓದಿ: ವಿಮಾನದ ಇಂಧನಕ್ಕಿಂತಲೂ ದುಬಾರಿ ಆಯ್ತು ಪೆಟ್ರೋಲ್‌ ಬೆಲೆ

  • ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬೊಮ್ಮಾಯಿ

    ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬೊಮ್ಮಾಯಿ

    ಹುಬ್ಬಳ್ಳಿ: ಹಾನಗಲ್ ಕ್ಷೇತ್ರದ ಉಪ ಚುನಾವಣೆಯ ಹಿನ್ನೆಲೆ ಇಂದು ಪ್ರಚಾರ ಕೈಗೊಳ್ಳುತ್ತಿದ್ದೇನೆ. ಸಿಂದಗಿ ಕ್ಷೇತ್ರದಲ್ಲಿಯೂ ಪ್ರಚಾರ ಮಾಡುತ್ತೇನೆ. ಈ ಎರಡೂ ಕ್ಷೇತ್ರಗಳಲ್ಲಿ ಹೆಚ್ಚಿನ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುವ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.

    ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಕ್ಕರೆ ಕಾರ್ಖಾನೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರು ಮಾಡಿರುವ ಆರೋಪದ ಸುಳ್ಳು. ಸಂಗೂರು ಸಕ್ಕರೆ ಕಾರ್ಖಾನೆಗೆ ತನ್ನದೇ ಆದ ಇತಿಹಾಸವಿದೆ. ಆ ಕಾರ್ಖಾನೆ ಮುಚ್ಚುವಲ್ಲಿ ಕಾಂಗ್ರೆಸ್ ಪಕ್ಷದವರ ಕೊಡುಗೆ ಇದೆ. ಪರಿಸ್ಥಿತಿಯನ್ನು ಪರಿಶೀಲನೆ ಮಾಡಿ ರೈತರ ಕಬ್ಬು ಅರೆಯುವಂತೆ ಮಾಡಿದ್ದು ಬಿಜೆಪಿ ಸರ್ಕಾರ ಎಂದರು. ಇದನ್ನೂ ಓದಿ: ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯಕ್ಕೆ ಸಿದ್ದರಾಮಯ್ಯ ಒಬ್ಬರೇ ನಾಯಕ: ಅನ್ಸಾರಿ

    ಹಾನಗಲ್ ಅಳಿಯ ಬಸವರಾಜ ಬೊಮ್ಮಾಯಿ ಏನು ಕೊಟ್ಟಿದ್ದಾರೆ ಎಂಬ ಸಿದ್ದರಾಮಯ್ಯ ಅವರ ಪ್ರಶ್ನೆಗೆ ಸಿಎಂ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿ, 2,400 ಕೋಟಿ ರೂಪಾಯಿ ಹಣವನ್ನು ಹಾನಗಲ್‍ಗೆ ನೀಡಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 2,400 ಕೋಟಿ ಎಲ್ಲಿದೆ? ಎಲ್ಲಿಂದ ಕೊಟ್ಟಿದ್ದಾರೆ ಎಂದು ತೋರಿಸಲಿ. ಆಗ ನಾನು ಏನು ಕೊಟ್ಟಿದ್ದೇನೆ ಎಂದು ಸೂಕ್ತ ಉತ್ತರ ನೀಡುತ್ತೇನೆ ಎಂದು ನುಡಿದರು. ಇದನ್ನೂ ಓದಿ: ನಿಮ್ಮಂಥ ‘ಮನೆಮುರುಕರು’ ಏಕವಚನ ಪ್ರಯೋಗವನ್ನೇ ಗ್ರಾಮೀಣ ಸಂಸ್ಕಾರ ಅಂದ್ಕೊಂಡಿದ್ದಾರೆ – ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿ

  • ಮೈಸೂರಿನಲ್ಲಿ ಶಾಶ್ವತ ವಸ್ತು ಪ್ರದರ್ಶನಕ್ಕೆ ಚಿಂತನೆ: ಸಿಎಂ

    ಮೈಸೂರಿನಲ್ಲಿ ಶಾಶ್ವತ ವಸ್ತು ಪ್ರದರ್ಶನಕ್ಕೆ ಚಿಂತನೆ: ಸಿಎಂ

    ಮೈಸೂರು: ವಸ್ತು ಪ್ರದರ್ಶನ ಮೈದಾನವನ್ನು ವರ್ಷವಿಡೀ ಉಪಯೋಗ ಮಾಡಿಕೊಳ್ಳುವ ನಿಟ್ಟಿನಲ್ಲಿ ಶಾಶ್ವತ ವಸ್ತುಪ್ರದರ್ಶನ ಆಯೋಜಿಸುವ ಬಗ್ಗೆ ಯೋಜನೆ ರೂಪಿಸಲಾಗುವುದೆಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

    ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಪ್ರವಾಸೋದ್ಯಮ ಸರ್ಕಿಟ್ ರೂಪಿಸಲು ಸಮಗ್ರ ಚಿಂತನೆ ನಡೆಸಿ ನಿರ್ಣಯವನ್ನು ಶೀಘ್ರದಲ್ಲಿಯೇ ಕೈಗೊಳ್ಳಲಾಗುವುದು. ಉತ್ತಮ ರೀತಿಯಲ್ಲಿ ದಸರಾ ನಡೆಸಿಕೊಟ್ಟ ಮೈಸೂರಿನ ಜನತೆಗೆ ವಿಶೇಷ ಅಭಿನಂದನೆಗಳನ್ನು ಸಲ್ಲಿಸಿದರು. ಮುಂಬರುವ ವರ್ಷಗಳಲ್ಲಿ ಪರಿಸ್ಥಿತಿ ಉತ್ತಮಗೊಂಡರೆ ಅದ್ದೂರಿಯಾಗಿ ದಸರಾ ಆಚರಣೆ ಮಾಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಸಾಂಪ್ರದಾಯಿಕ ಆಚರಣೆಗೆ ಬ್ರೇಕ್ ಹಾಕಿ ಪೀಠಾರೋಹಣ ಮಾಡಿದ ಮುರುಘಾ ಶರಣರು

    ಸಿಂಧಗಿ ಮತ್ತು ಹಾನಗಲ್ ಉಪಚುನಾವಣೆ ಸಂಬಂಧ ನಾಲ್ಕು ದಿನಗಳ ಪ್ರಚಾರಕ್ಕೆ ತೆರಳುವುದಾಗಿ ತಿಳಿಸಿದ ಅವರು, ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದರು.

  • ಉದಾಸಿ, ಸಜ್ಜನರ್ ಸೇರಿ ಖಾಲಿ ಚೀಲಗಳನ್ನೂ ಬಿಡದಂತೆ ಸಕ್ಕರೆ ಕಾರ್ಖಾನೆ ನುಂಗಿದ್ದಾರೆ: ಸಿದ್ದರಾಮಯ್ಯ

    ಉದಾಸಿ, ಸಜ್ಜನರ್ ಸೇರಿ ಖಾಲಿ ಚೀಲಗಳನ್ನೂ ಬಿಡದಂತೆ ಸಕ್ಕರೆ ಕಾರ್ಖಾನೆ ನುಂಗಿದ್ದಾರೆ: ಸಿದ್ದರಾಮಯ್ಯ

    ಹಾವೇರಿ: ಸಂಗೂರಿನಲ್ಲಿ ಸಹಕಾರಿ ಸಕ್ಕರೆ ಕಾರ್ಖಾನೆ ಇತ್ತು. ಆಗ ಉದಾಸಿ ಅಧ್ಯಕ್ಷ ಆಗಿದ್ದರು, ಶಿವರಾಜ್ ಸಜ್ಜನರ್ ಉಪಾಧ್ಯಕ್ಷ ಆಗಿದ್ದರು. ಇಬ್ಬರೂ ಸೇರಿ ಖಾಲಿ ಚೀಲಗಳನ್ನೂ ಬಿಡದಂತೆ ಸಹಕಾರಿ ಸಕ್ಕರೆ ಕಾರ್ಖಾನೆ ನುಂಗಿದರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

    ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನಲ್ಲಿ ಉಪಚುನಾವಣೆಯ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಹಕಾರಿ ಸಕ್ಕರೆ ಕಾರ್ಖಾನೆ ಹಾಳಾಗಲು ಮಿಸ್ಟರ್ ಸಜ್ಜನರ್ ಕಾರಣ. ಸಜ್ಜನ್ ಈಗ ಬಿಜೆಪಿ ಅಭ್ಯರ್ಥಿ ಅವರಿಗೆ ವೋಟು ಹಾಕಬೇಡಿ, ಅವನಿಗೆ ಖಾಲಿ ಚೀಲ ಕೊಟ್ಟು ಕಳುಹಿಸಿ, ಹಿಂದೆ ತಿಂದಿದ್ದನ್ನೆಲ್ಲ ಈಗ ಕಕ್ಕಿಸಬೇಕು ಎಂದು ಬಿಜೆಪಿ ಅಭ್ಯರ್ಥಿ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಇದನ್ನೂ ಓದಿ: ಹಾನಗಲ್ ಉಪಚುನಾವಣೆ- ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು

    ಇದು ಸಾರ್ವತ್ರಿಕ ಚುನಾವಣೆಯಲ್ಲ, ಈ ಚುನಾವಣೆಯಲ್ಲಿ ಶ್ರೀನಿವಾಸ ಮಾನೆಯವರಿಗೆ ಆಶೀರ್ವಾದ ಮಾಡಬೇಕು. ಸಾರ್ವತ್ರಿಕ ಚುನಾವಣೆ 2023ರಲ್ಲಿ ನಡೆಯುತ್ತದೆ. ಶಾಸಕರಾಗಿದ್ದ ಉದಾಸಿಯವರು ಅಗಲಿದ ಮೇಲೆ ಅವರ ಜಾಗ ಭರ್ತಿ ಮಾಡಲು ಉಪಚುನಾವಣೆ ಬಂದಿದೆ. ಈ ಚುನಾವಣೆ ಬರಲಿ ಎಂದು ಯಾರು ಕೂಡ ಬಯಸಿರಲಿಲ್ಲ. ಉದಾಸಿಯವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಕಳೆದ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಕೇವಲ ಆರು ಸಾವಿರ ಮತಗಳಿಂದ ಸೋತರು. ಸೋತ ನಂತರವೂ ಶ್ರೀನಿವಾಸ ಮಾನೆ ನಿರಂತರವಾಗಿ ನಿಮ್ಮ ಜೊತೆಗಿದ್ದು, ತಮ್ಮ ಕೈಲಾದ ಸಹಾಯ ಮಾಡಿದ್ದಾರೆ ಎಂದರು.

    ಕ್ಷೇತ್ರದ ಶಾಸಕರಾಗಿದ್ದ ಉದಾಸಿಯವರು ಹಾಸಿಗೆ ಹಿಡಿದರು. ಅವರ ಮಗ ಸಂಸದರಾಗಿದ್ದರೂ ಕೂಡ ಈ ಕ್ಷೇತ್ರದ ಕಡೆಗೆ ತಲೆ ಹಾಕಲಿಲ್ಲ. ನಮ್ಮ ಅಭ್ಯರ್ಥಿ ಆಗಿರುವ ಮಾನೆ ಕೊರೊನಾ ಕಷ್ಟಕಾಲದಲ್ಲಿ ಜನರ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ. ಅದು ಅವರ ಕೆಲಸ ಆಗಿರಲಿಲ್ಲ ಆದರೂ ಜನರಿಗೆ ಸಹಾಯ ಮಾಡಿದ್ದಾರೆ ಎಂದು ಹಾಡಿ ಹೊಗಳಿದ್ದಾರೆ. ಇದನ್ನೂ ಓದಿ: ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ವಿರುದ್ಧ ಪ್ರಕರಣ ದಾಖಲು

  • ಹಾನಗಲ್ ಉಪಚುನಾವಣೆ- ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು

    ಹಾನಗಲ್ ಉಪಚುನಾವಣೆ- ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು

    ಹಾವೇರಿ: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧೆ ಬಯಸಿ ಉಮೇದುವಾರಿಕೆ ಸಲ್ಲಿಸಿರುವ ಅಭ್ಯರ್ಥಿಗಳ ನಾಮಪತ್ರ ಹಿಂಪಡೆಯಲು ಅಂತಿಮ ದಿನವಾಗಿದ್ದ ಬುಧವಾರ 4 ಜನ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದು, ಅಂತಿಮವಾಗಿ ಕಣದಲ್ಲಿ 13 ಅಭ್ಯರ್ಥಿಗಳು ಉಳಿದಿದ್ದಾರೆ.

    ಬಿಜೆಪಿಯ ಟಿಕೆಟ್ ಕೈ ತಪ್ಪಿದ್ದಕ್ಕೆ ಅಸಮಾಧಾನಗೊಂಡು ಪಕ್ಷೇತರ ಅಭ್ಯರ್ಥಿಯಾಗಿ ಸಿ.ಆರ್.ಬಳ್ಳಾರಿ ನಾಮಪತ್ರ ಸಲ್ಲಿಸಿದ್ದರು. ಮಂಗಳವಾರ ದಾವಣಗೆರೆಯಲ್ಲಿ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಿ.ಆರ್.ಬಳ್ಳಾರಿ ಅವರನ್ನು ಕರೆಸಿಕೊಂಡು ಚರ್ಚಿಸಿ ನಾಮಪತ್ರ ಮರಳಿ ಪಡೆಯುವಂತೆ ಮನವೊಲಿಸಿದ್ದರು. ಈ ಹಿನ್ನೆಲೆ ಸಿ.ಆರ್.ಬಳ್ಳಾರಿ ಪಂಚಮಸಾಲಿ ಸಮಾಜದ ಮುಖಂಡರೊಂದಿಗೆ ಚರ್ಚಿಸಿ, ಬೊಮ್ಮಾಯಿ ಅವರ ಮಾತಿಗೆ ಮನ್ನಣೆ ನೀಡಿ ಬುಧವಾರ ನಾಮಪತ್ರ ಹಿಂಪಡೆದಿದ್ದಾರೆ. ಈ ಮೂಲಕ ಕ್ಷೇತ್ರದಲ್ಲಿ ಬಿಜೆಪಿಗೆ ಎದುರಾಗಿದ್ದ ಬಂಡಾಯ ಶಮನಗೊಂಡಂತಾಗಿದೆ. ಇದನ್ನೂ ಓದಿ: ನಮ್ಮ‌ ಕ್ಷೇತ್ರದಲ್ಲಿ ನಾವು ಗಂಡಸರಲ್ವಾ…? ಹೊರಗಿನವರಿಗೆ ಟಿಕೆಟ್ ಕೊಟ್ರೆ ನಾವು ಕೆಲಸ ಮಾಡಲ್ಲ: ಮನೋಹರ್ ತಹಶೀಲ್ದಾರ್

    ಪಕ್ಷೇತರರಾಗಿ ಸ್ಪರ್ಧಿಸಿದ್ದ ಅಶೋಕ ಪಾಂಡಪ್ಪ ಹಣಜಿ, ಜಾಕೀರ್ ಹುಸೇನ್ ಮೌಲಾಲಿ ಅರಳಿಮರದ ಹಾಗೂ ಸಿಕಂದರ್ ಮೋದಿನಖಾನ ಮತ್ತಿಹಳ್ಳಿ ಅವರು ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ವಿರುದ್ಧ ಪ್ರಕರಣ ದಾಖಲು

    ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು:
    ನಿಯಾಜ್ ಶೇಖ್ (ಜೆಡಿಎಸ್), ಶಿವರಾಜ ಸಜ್ಜನರ್ (ಬಿಜೆಪಿ), ಶ್ರೀನಿವಾಸ ಮಾನೆ (ಕಾಂಗ್ರೆಸ್), ಉಡಚಪ್ಪ ಉದ್ದನಕಾಲ (ಕರ್ನಾಟಕ ರಾಷ್ಟ್ರ ಸಮಿತಿ), ಫಕ್ಕೀರಗೌಡ ಶಂಕರಗೌಡ ಗಾಜಿಗೌಡ್ರ (ರೈತ ಭಾರತ ಪಕ್ಷ), ತಳವಾರ ಶಿವಕುಮಾರ್ (ಲೋಕಶಕ್ತಿ ಪಕ್ಷ), ಉಮೇಶ್ ಕೃಷ್ಣಪ್ಪ ದೈವಜ್ಞ (ಪಕ್ಷೇತರ), ನಜೀರ ಅಹ್ಮದ್ ಸವಣೂರ (ಪಕ್ಷೇತರ), ಪರಶುರಾಮ ಹೊಂಗಲ (ಪಕ್ಷೇತರ), ಸಿದ್ದಪ್ಪ ಕಲ್ಲಪ್ಪ ಪೂಜಾರ (ಪಕ್ಷೇತರ), ಎಸ್.ಎಸ್.ದೊಡ್ಡಲಿಂಗಣ್ಣನವರ (ಪಕ್ಷೇತರ), ಸೋಮಶೇಖರ್ ಮಹದೇವಪ್ಪ ಕೋತಂಬರಿ (ಪಕ್ಷೇತರ), ಹೊನ್ನಪ್ಪ ಹನುಮಂತಪ್ಪ ಅಕ್ಕಿವಳ್ಳಿ(ಪಕ್ಷೇತರ) ಅವರು ಅಂತಿಮ ಕಣದಲ್ಲಿ ಉಳಿದಿದ್ದಾರೆ.

  • ಜೆಡಿಎಸ್ ಪಕ್ಷವನ್ನು ಟೀಕೆ ಮಾಡದಿದ್ದರೆ ಸಿದ್ದರಾಮಯ್ಯಗೆ ನಿದ್ದೆ ಬರಲ್ಲ: ಎಚ್‌ಡಿಕೆ ತಿರುಗೇಟು

    ಜೆಡಿಎಸ್ ಪಕ್ಷವನ್ನು ಟೀಕೆ ಮಾಡದಿದ್ದರೆ ಸಿದ್ದರಾಮಯ್ಯಗೆ ನಿದ್ದೆ ಬರಲ್ಲ: ಎಚ್‌ಡಿಕೆ ತಿರುಗೇಟು

    ಬೆಂಗಳೂರು: ಸಿದ್ದರಾಮಯ್ಯ ಅವರಿಗೆ ಜೆಡಿಎಸ್ ಪಕ್ಷವನ್ನು ಟೀಕೆ ಮಾಡದಿದ್ದರೆ ನಿದ್ದೆ ಬರಲ್ಲ ಅಂತ ಕಾಣುತ್ತದೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

    ಬುದ್ಧಿವಂತ ಮತದಾರರು ಜೆಡಿಎಸ್‌ ಪಕ್ಷಕ್ಕೆ ಮತ ಹಾಕಲ್ಲ, ಆ ಪಕ್ಷ ಸಿಂದಗಿಯಲ್ಲಿ ಮೂರನೇ ಸ್ಥಾನಕ್ಕೆ ಹೋಗುತ್ತದೆ ಎಂದು ಹೇಳಿಕೆ ನೀಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

    ಈ ಬಗ್ಗೆ ಭಾನುವಾರ ಟ್ವೀಟ್ ಮಾಡಿರುವ ಅವರು ದಿವಂಗತ ಎಂಸಿ ಮನಗೂಳಿ ಅವರ ಅನುಕಂಪದ ಅಲೆಯಲ್ಲಿ ಅವರು ತೇಲುತ್ತಿದ್ದಾರೆಂದು ಹೇಳಿದ್ದಾರೆ. ಹೆಚ್ಡಿಕೆ ಅವರ ಟ್ವೀಟ್ ʼನ ಪೂರ್ಣ ಪಾಠ ಇಲ್ಲಿದೆ.

    ಎಚ್‌ಡಿಕೆ ಹೇಳಿದ್ದೇನು?
    ಸಿದ್ದರಾಮಯ್ಯ ಅವರಿಗೆ ಜೆಡಿಎಸ್ ಪಕ್ಷವನ್ನು ಟೀಕೆ ಮಾಡದಿದ್ದರೆ ನಿದ್ದೆ ಬರಲ್ಲ ಅಂತ ಕಾಣತ್ತೆ. ಸಿಂದಗಿ ಕ್ಷೇತ್ರದಲ್ಲಿ ಅವರ ಪಕ್ಷ 3ನೇ ಸ್ಥಾನದಲ್ಲಿತ್ತು. ಇಲ್ಲಿ ಕಾಂಗ್ರೆಸ್ 2ನೇ ಸ್ಥಾನಕ್ಕೆ ಬಂದ ಇತಿಹಾಸವೇ ಇಲ್ಲ. ಈಗ ನೋಡಿದರೇ ರಾಜಕೀಯ ಬದುಕು ಕೊಟ್ಟ ಪಕ್ಷವನ್ನೆ ನಿಂದಿಸುತ್ತಿದ್ದಾರೆ.

    ಈಗ ಎಂಸಿ ಮನಗೂಳಿ ನಿಧನದ ಅನುಕಂಪದಲ್ಲಿ ತೇಲುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ಪಕ್ಷದಲ್ಲಿ ಇದ್ದ ಅವರ ಪುತ್ರನನ್ನು ಹೈಜಾಕ್ ಮಾಡಿ, ಜನರಿಗೆ ತಮ್ಮ ʼಸಿದ್ದಕಲೆʼ ದರ್ಶನ ಆಗುತ್ತಿದ್ದಂತೆಯೇ ಈಗ ಅನುಕಂಪ ಗಿಟ್ಟಿಸುವ ನಾಟಕ ಮಾಡುತ್ತಿದ್ದಾರೆ.

    ಬುದ್ಧಿವಂತ ಮತದಾರರು ಜೆಡಿಎಸ್ ಪಕ್ಷಕ್ಕೆ ಮತ ಹಾಕಲ್ಲ ಎಂದು ʼಸಿದ್ಧಹಸ್ತರುʼ ಫರ್ಮಾನು ಹೊರಡಿಸಿದ್ದಾರೆ. ಜನರು ಇವರ ಜೇಬಿನಲ್ಲಿ ಇದ್ದಾರಾ? ಇದು ಸಿಂದಗಿ ಜನರಿಗೆ ಅಪಮಾನ ಮಾಡುವ ಅಹಂಕಾರದ ಹೇಳಿಕೆ. ಅವರೇ ತಕ್ಕ ಉತ್ತರ ನೀಡಲಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಜೊತೆ ಲಸಿಕೆ ಅಭಿಯಾನಕ್ಕೆ ಕೇಂದ್ರ ಸಚಿವರ ಮೆಚ್ಚುಗೆ

  • ಯಡಿಯೂರಪ್ಪ, ವಿಜಯೇಂದ್ರ ಆಪ್ತರೇ ಟಾರ್ಗೆಟ್- ಐಟಿ ದಾಳಿ ಬಗ್ಗೆ ಸಿದ್ದರಾಮಯ್ಯ ಅನುಮಾನ

    ಯಡಿಯೂರಪ್ಪ, ವಿಜಯೇಂದ್ರ ಆಪ್ತರೇ ಟಾರ್ಗೆಟ್- ಐಟಿ ದಾಳಿ ಬಗ್ಗೆ ಸಿದ್ದರಾಮಯ್ಯ ಅನುಮಾನ

    – ಬೆಂಬಲಿಗರ ಘೋಷಣೆಗೆ ಫುಲ್ ಖುಷ್ ಆದ ಸಿದ್ದರಾಮಯ್ಯ
    – ಅಲ್ಪಸಂಖ್ಯಾತರ ಮತಗಳನ್ನು ವಿಂಗಡಿಸುವುದೇ ಜೆಡಿಎಸ್ ಉದ್ದೇಶ

    ಮೈಸೂರು: ಮಾಜಿ ಸಿಎಂ ಯಡಿಯೂರಪ್ಪ, ವಿಜಯೇಂದ್ರ ಆಪ್ತರೇ ಐಟಿ ದಾಳಿಗೆ ಟಾರ್ಗೆಟ್ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಐಟಿ ದಾಳಿ ಬಗ್ಗೆ ಅನುಮಾನ ವ್ಯಕ್ತಪಡಿಸಿದರು.

    ಮುಂದಿನ ಮುಖ್ಯಮಂತ್ರಿ ಕೂಗು ಮೈಸೂರಿನಲ್ಲಿ ಮತ್ತೆ ಮೊಳಗಿದೆ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಬೆಂಬಲಿಗರು, ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಜೈ ಎಂದು ಘೋಷಣೆ ಕೂಗಿದ್ದು, ಇದಕ್ಕೆ ಸಿದ್ದರಾಮಯ್ಯ ಅವರು ಫುಲ್ ಖುಷಿಯಿಂದ ಕೈ ಎತ್ತಿ ಬೀಸಿದರು. ಇದನ್ನೂ ಓದಿ:  ಬಾಯಿಗೆ ಬಂದಂತೆ ಮಾತನಾಡಲು ಜನರು ನಮ್ಮನ್ನು ಆಯ್ಕೆ ಮಾಡಿಲ್ಲ: ಹಾಲಪ್ಪ

    ಈ ವೇಳೆ ಸಿದ್ದರಾಮಯ್ಯ ಅವರು ಉಪಚುನಾವಣೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಎರಡೂ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಉಪಚುನಾವಣೆ ಫಲಿತಾಂಶ ಭವಿಷ್ಯದ ಚುನಾವಣೆ ದಿಕ್ಸೂಚಿ ಅಂತ ಹೇಳುವುದಿಲ್ಲ. ಹಾಗೇ ಹೇಳುವುದಕ್ಕೂ ಸಾಧ್ಯವಿಲ್ಲ. ಆದರೆ ಈ ಫಲಿತಾಂಶದಿಂದ ಸರ್ಕಾರದ ಮೇಲೆ ಜನರ ಅಭಿಪ್ರಾಯ ಏನು ಎಂಬುದು ಗೊತ್ತಾಗುತ್ತೆ. ಜನ ಕೇಂದ್ರ ಹಾಗೂ ರಾಜ್ಯ ಎರಡೂ ಸರ್ಕಾರಗಳಿಂದ ಬೇಸತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಅನ್ನು ಎರಡೂ ಕ್ಷೇತ್ರಗಳಲ್ಲಿ ಗೆಲ್ಲಿಸುತ್ತಾರೆ. ಜೆಡಿಎಸ್ ಅವರು ಒಳ್ಳೆಯ ಉದ್ದೇಶದಿಂದಂತೂ ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಟ್ಟಿಲ್ಲ. ಅಲ್ಪಸಂಖ್ಯಾತರ ಮತಗಳನ್ನು ವಿಂಗಡಿಸುವುದೇ ಅವರ ಉದ್ದೇಶ. ಆದರೆ ಜನ ಬುದ್ಧಿವಂತರಿದ್ದಾರೆ. ಇಂತಹ ತಂತ್ರಗಳು ಜನರಿಗೆ ಅರ್ಥವಾಗುತ್ತವೆ ಎಂದು ಜೆಡಿಎಸ್ ನನ್ನು ಟೀಕಿಸಿದರು.

    ಐಟಿ ದಾಳಿಯಲ್ಲಿ ರಾಜಕೀಯ ಇದೆ ಎಂಬುದು ನನ್ನ ಅನುಮಾನ. ಮಾಜಿ ಸಿಎಂ ಯಡಿಯೂರಪ್ಪ, ವಿಜಯೇಂದ್ರ ಆಪ್ತರನ್ನೇ ಆಯ್ಕೆ ಮಾಡಿಕೊಂಡು ದಾಳಿ ಮಾಡಿರುವುದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ನನಗಂತು ಇದರಲ್ಲಿ ರಾಜಕೀಯ ವಾಸನೆ ಬರುತ್ತಿದೆ ಎಂದು ಅನುಮಾನಿಸಿದರು. ಇದನ್ನೂ ಓದಿ:  ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ವಿರುದ್ಧ ಪ್ರಕರಣ ದಾಖಲು

    ನಾನು ರಾಷ್ಟ್ರ ರಾಜಕಾರಣಕ್ಕೆ ಹೋಗುವುದು ಊಹಾಪೋಹ. ಸೋನಿಯಾಗಾಂಧಿ ಅವರು ನನ್ನನ್ನು ಕರೆದಿಲ್ಲ. ಆ ಬಗ್ಗೆ ಚರ್ಚೆಯೂ ಆಗಿಲ್ಲ. ಸುಮ್ಮನೆ ಊಹಾಪೋಹದ ಚರ್ಚೆಗಳು ಬೇಡ. ನಾನು ಎಂದೂ ಆ ಯೋಚನೆ ಮಾಡಿಯೂ ಇಲ್ಲ. ಆ ಬಗ್ಗೆ ಚರ್ಚೆ ಬೇಡ, ನಾನು ರಾಜ್ಯ ರಾಜಕಾರಣದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

  • ಉಪ ಚುನಾವಣೆ ಗೆಲ್ಲುವ ವಿಶ್ವಾಸ ಇದೆ: ದೇವೇಗೌಡ

    ಉಪ ಚುನಾವಣೆ ಗೆಲ್ಲುವ ವಿಶ್ವಾಸ ಇದೆ: ದೇವೇಗೌಡ

    – ನನ್ನ ಮಾತಿಗೆ ಗೌರವ ಸಿಗುತ್ತೆ ಅನ್ನೋ ವಿಶ್ವಾಸ ನನಗೆ ಇದೆ

    ಬೆಂಗಳೂರು: ಉಪ ಚುನಾವಣೆ ಗೆಲ್ಲುವ ವಿಶ್ವಾಸ ಇದೆ. ನನ್ನ ಮಾತಿಗೆ ಗೌರವ ಸಿಗುತ್ತದೆ ಅನ್ನೋ ವಿಶ್ವಾಸ ನನಗೆ ಇದೆ. ಎರಡು ಕ್ಷೇತ್ರದಲ್ಲಿ ಗೆಲ್ಲೋ ವಿಶ್ವಾಸವನ್ನು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ವ್ಯಕ್ತಪಡಿಸಿದ್ದಾರೆ.

    ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉಪಚುನಾವಣೆ ಕುರಿತಾಗಿ ಮಾತನಾಡಿದ್ದಾರೆ. ಎರಡು ಕಡೆ ಮುಸ್ಲಿಂ ಅಭ್ಯರ್ಥಿ ಹಾಕಿದ್ದೇವೆ. ಬಸವಕಲ್ಯಾಣದಲ್ಲೂ ನಾವು ಮುಸ್ಲಿಂ ಅಭ್ಯರ್ಥಿ ಹಾಕಿದ್ದೇವೆ. ನಾರಾಯಣರಾವ್ ನನ್ನ ಶಿಷ್ಯನೇ ಆಗಿದ್ದಾನೆ. ಆದರೆ ನಾನು ಯಾರನ್ನು ಜಾತಿ ಮೇಲೆ ಬೆಳೆಸಲಿಲ್ಲ. ಅವತ್ತು ಕೂಬಾ ಅನ್ನೋರನ್ನ ಚುನಾವಣೆ ನಿಲ್ಲಲು ಹೇಳಿದ್ದೆವು. ಆದರೆ ಅವರು ಒಪ್ಪಲಿಲ್ಲ. ಹೀಗಾಗಿ ಅನಿವಾರ್ಯವಾಗಿ ಮುಸ್ಲಿಂ ಅಭ್ಯರ್ಥಿ ಹಾಕಿದ್ದು ಯಾವುದೇ ಜಾತಿ ಆಧಾರದಲ್ಲಿ ಹಾಕಿಲ್ಲ ಎಂದು ಹೇಳಿದ್ದಾರೆ. ನಾನು RSS ಬಗ್ಗೆ ಹೊಗಳಿದ್ದೇನೆ ಎನ್ನುವುದು ಸುಳ್ಳು: ಹೆಚ್.ಡಿ ದೇವೇಗೌಡ

    ಸಿಂದಗಿಯಲ್ಲಿ ಮೊದಲು ಜೆಡಿಎಸ್ ನಿಂದ ಟಿಕೆಟ್ ಕೊಟ್ಟವನು ನಾನೇ. ಅವಿಭಾಜ್ಯ ಬಿಜಾಪುರ ಆಗಿತ್ತು. ನಾನು ಬಿಜಾಪುರದಲ್ಲಿ ಮುಸ್ಲಿಂ ಅಭ್ಯರ್ಥಿಯನ್ನ ಗೆಲ್ಲಿಸಿದ್ದೇನೆ. ಕಾಂಗ್ರೆಸ್ ಅವರು ಒಬ್ಬೇ ಒಬ್ಬ ಮುಸ್ಲಿಂ ಅಭ್ಯರ್ಥಿಯನ್ನು ಈವರೆಗೂ ಗೆಲ್ಲಿಸಿಲ್ಲ. ನಾನು ಸಿಂದಗಿ ನೀರಾವರಿ ಯೋಜನೆ ಕೊಟ್ಟಿದ್ದೇನೆ. ಇದಕ್ಕಾಗಿ ನನ್ನ ಪ್ರತಿಮೆ ಅಲ್ಲಿ ಸ್ಥಾಪನೆ ಮಾಡಿದ್ದಾರೆ. ನಾನು ನೀರಾವರಿ ಯೋಜನೆ ಕೊಟ್ಟಿದ್ದಕ್ಕೆ ಪ್ರತಿಮೆ ಮಾಡಿಸಿದ್ದಾರೆ. ಮನುಗುಳಿ ಸತ್ತ ಮೇಲೆ ನನ್ನ ಅಭ್ಯರ್ಥಿಯನ್ನ ಕಾಂಗ್ರೆಸ್ ಅವರು ಕರೆದುಕೊಂಡು ಹೋಗಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ದೇವೇಗೌಡ ಕಿಡಿ ಕಾರಿದ್ದಾರೆ. ಕೆಜಿಎಫ್ 2 ಚಿತ್ರೀಕರಣದ ಫೋಟೋ ವೈರಲ್ 

    ವಿಜಯಪುರದಲ್ಲಿ ಕಾಂಗ್ರೆಸ್ ಎಷ್ಟು ಮುಸ್ಲಿಂ ನಾಯಕರನ್ನು ಗೆಲ್ಲಿಸಿದ್ದಾರೆ. ಇವರು ಅಲ್ಪಸಂಖ್ಯಾತರ ಬಗ್ಗೆ ಚರ್ಚೆ ಮಾಡುತ್ತಾರೆ. ಮನಗೂಳಿಗೆ ಮನೆ ಮಗನಂತೆ ಬೆಳೆಸಿಕೊಂಡು ಬಂದೆ. ಜೀವನದ ಕೊನೆ ಹಂತದಲ್ಲಿದ್ದ ಮನಗೂಳಿಗೆ ಮಂತ್ರಿ ಮಾಡು ಎಂದೆ. ಸಿಂದಗಿಗೆ ಆಲಮಟ್ಟಿಯಿಂದ ನೀರು ಕೊಟ್ಟ ಕಾರಣ ಪ್ರತಿಮೆ ಮಾಡಿಸಿದ್ದ. ಹೆಗಡೆ ಸಿಎಂ ಇದ್ದಾಗ, ಅಧಿವೇಶನದಲ್ಲಿ ಮನಗೂಳಿ ಮಾತನಾಡಿದ್ದರು. ನಿಮ್ಮಪ್ರತಿಮೆ ಮಾಡುತ್ತೇನೆ ಎಂದು ಮನಗೂಳಿ ಹೇಳಿದ್ದರು. ಸಿಎಂ ಹೆಗಡೆ ಅವರಿಂದಲೇ ಪ್ರತಿಮೆಗೆ ಶಂಕುಸ್ಥಾಪನೆ ಮಾಡಿದ್ದರು ಎಂದಿದ್ದಾರೆ. ಇದನ್ನೂ ಓದಿ:  ನಾಳೆ ನೇರಳೆ ಮಾರ್ಗದ ಮೆಟ್ರೋ ಸಂಚಾರ ಸ್ಥಗಿತ

    ಕಾಂಗ್ರೆಸ್ ಅವರು ಬಿಜೆಪಿ ಗೆಲ್ಲಿಸೋ ಟಿಕೆಟ್ ಕೊಟ್ಟಿದ್ದೇನೆ ಅಂತಾರೆ. ನಾನೇ ಚುನಾವಣೆ ಪ್ರಚಾರಕ್ಕೆ ಹೋಗುತ್ತೇನೆ. ಮನೆ ಮನೆಗೆ ಹೋಗಿ ನಾನು ಮತ ಯಾಚನೆ ಮಾಡುತ್ತೇನೆ. ಕೊನೆ ಕಾಲದಲ್ಲಿ ನಿಮ್ಮ ಮನಗೆ ಬಂದಿದ್ದೇನೆ ಮತ ಹಾಕಿ ಅಂತ ಕೇಳುತ್ತೇನೆ. ನಾನು ಸುಮ್ಮನೆ ಕೂರೋದಿಲ್ಲ. ಮುಸ್ಲಿಂಮರಿಗೆ ನಾನು ಏನು ಮಾಡಿದ್ದೇನೆ ಅಂತ ಎಲ್ಲರಿಗೂ ಗೊತ್ತು. ನಾನೇ ಚುನಾವಣೆ ಪ್ರಚಾರಕ್ಕೆ ಹೋಗುತ್ತೇನೆ. ಕಾಂಗ್ರೆಸ್ ವಿರುದ್ಧ ದೇವೇಗೌಡ ಆಕ್ರೋಶ ಹೊರ ಹಾಕಿದ್ದಾರೆ. ಕಾಂಗ್ರೆಸ್ ಅಪ ಪ್ರಚಾರ ಮಾಡುತ್ತಿದೆ. ಪ್ರಾದೇಶಿಕ ಪಕ್ಷ ಅಂತ ಮುಗಿಸಲು ಹೋದರೆ ನಾವು ಅದರ ವಿರುದ್ಧ ಈಜುತ್ತೇವೆ. ಕಾಂಗ್ರೆಸ್ ಒಂದು ರಾಷ್ಟ್ರೀಯ ಪಕ್ಷ. ಅದರ ಪರಿಸ್ಥಿತಿ ಏನ್ ಆರುತ್ತಿದೆ ಅಂತ ನೋಡುತ್ತಿದ್ದೇವೆ ಎಂದು ವಿರುದ್ದ ಆಕ್ರೋಶ ಹೊರ ಹಾಕಿದ್ದಾರೆ. ಇದನ್ನೂ ಓದಿ: ಡಿಎಪಿ,ಪೊಟ್ಯಾಷ್‍ಗಾಗಿ ರಾಜ್ಯದಿಂದ ಕೇಂದ್ರಕ್ಕೆ ಬೊಮ್ಮಾಯಿ ಮನವಿ

    ಮನಗೂಳಿ ಕಾಲವಾದ ನಂತರ ಅವರ ಮಗನನ್ನು ಕಾಂಗ್ರೆಸ್ ಕರೆದುಕೊಂಡು ಹೋದರು. ನಿಮಗೆ ನಮ್ಮ ಅಭ್ಯರ್ಥಿಯೇ ಬೇಕಾ? ಬಿಜೆಪಿ ಅಭ್ಯರ್ಥಿ ಗಾಣಿಗ ಸಮುದಾಯ ಇದೆ. ನಮ್ಮ ಅಭ್ಯರ್ಥಿಯನ್ನು ಹೊತ್ತುಕೊಂಡು ಹೋದರೆ ನಾವು ಸುಮ್ಮನಿರಬೇಕಾ? ಹೀಗಾಗಿ ನಾವು ನಮ್ಮ ಅಭ್ಯರ್ಥಿ ಹಾಕಿದ್ದೇವೆ. ಬಿಜೆಪಿ ಗೆಲ್ಲಿಸಲು ಮುಸ್ಲಿಂ ಅಭ್ಯರ್ಥಿ ಹಾಕಿಲ್ಲ. ಮುಸ್ಲಿಂರನ್ನು ನೀವು ಗುತ್ತಿಗೆ ಪಡೆದಿಲ್ಲ. ನಾನು ಬೆಳಸಿದ್ದ ಮುಸ್ಲಿಂ ಮುಖಂಡ ಈಗ ಅವರ ಬಲಗೈ ಶಕ್ತಿ ಕೊಟ್ಟವರು. ಬಲಗೈ ಭಂಟ ಎನ್ನಲ್ಲ, ಜಮೀರ್ ವಿಷಯ ಪ್ರಸ್ತಾಪಿಸಿದ ಹೆಚ್ಡಿಡಿ. ರೋಷನ್ ಬೇಗ್, ಇಬ್ರಾಹಿಂ ಹೆಸರು ಪ್ರಸ್ತಾಪ ಮಾಡಿದ್ದಾರೆ.

    2023ರ ಚುನಾವಣೆಗೆ ಮುಸ್ಲಿಂಮರ ಒಲೈಕೆಗೆ ನಾವು ಮುಸ್ಲಿಂರಿಗೆ ಟಿಕೆಟ್ ಕೊಟ್ಟಿಲ್ಲ. ಎರಡು ಕ್ಷೇತ್ರದ ಸನ್ನಿವೇಶ ನಾನು ಈಗಾಗಲೇ ಹೇಳಿದ್ದೇನೆ. ನಮ್ಮ ಅಭ್ಯರ್ಥಿಯನ್ನ ಕರೆದುಕೊಂಡು ಹೋಗಿದ್ದಾರೆ. ನಮ್ಮ ವಿರೋಧಿ ಪಕ್ಷದವರು ಬೇರೆ ಬೇರೆ ಅಭ್ಯರ್ಥಿ ಹಾಕಿದ್ದಾರೆ. ಹೀಗಾಗಿ ನಾವು ನಮ್ಮ ಅಭ್ಯರ್ಥಿ ಹಾಕಿದ್ದೇವೆ. ರಾಮನಗರ, ಮಂಡ್ಯ, ಹಾಸನದಲ್ಲಿ ಯಾಕೆ ಮುಸ್ಲಿಂ ಅಭ್ಯರ್ಥಿ ಹಾಕಿಲ್ಲ ಅನ್ನೋ ಸಿದ್ದರಾಮಯ್ಯ ಆರೋಪ ಮಾಡುತ್ತಾರೆ. ನಮಗೆ ಈ ಕ್ಷೇತ್ರದಲ್ಲಿ ಸರಿಯಾದ ಅಭ್ಯರ್ಥಿ ಸಿಗಲಿಲ್ಲ ಅದಕ್ಕೆ ಹಾಕಿಲ್ಲ. ಆದರೆ ಎಂಎಲ್ಸಿ ಮಾಡಿದ್ದೇವೆ. ಜಮೀರ್‍ಗೆ ಟಿಕೆಟ್ ಕೊಟ್ಟಿದ್ದೇವೆ, ಇಬ್ರಾಹಿಂ ಸ್ಥಾನ ಕೊಟ್ಟಿದ್ದೇವೆ. ನನ್ನ ಬಳಿ ಮಾತಾಡೋವಾಗ ಯೋಚನೆ ಮಾಡಿ ಮಾತಾಡಬೇಕು. ಇವತ್ತು ಕಾಂಗ್ರೆಸ್ ಸ್ಥಿತಿ ಎಲ್ಲಿಂದ ಎಲ್ಲಿಗೆ ಹೋಗುತ್ತಿದೆ ನೋಡಿ. ನೆಹರು ಕಾಲದ ಕಾಂಗ್ರೆಸ್ ಏನಾಗಿದೆ ನೋಡಿ. ನಾನು ಯಾರ ಬಗ್ಗೆಯೂ ಮಾತಾಡೊಲ್ಲ. ಯಾವ ಮುಸ್ಲಿಂ ನಾಯಕನ ಬಗ್ಗೆಯೂ ನಾನು ಮಾತಾಡಿಲ್ಲ. ಜಮೀರ್ ಬಗ್ಗೆಯೂ ಮಾತಾಡಿಲ್ಲ. ಬಿಜೆಪಿ ಗೆಲ್ಲಿಸೋಕೆ ನಾವು ಅಭ್ಯರ್ಥಿ ಹಾಕಿಲ್ಲ ಎಂದಿದ್ದಾರೆ.