Tag: by election

  • ಮಸ್ಕಿ ಉಪಚುನಾವಣಾ ಕಣದಲ್ಲಿ ಕೋಟ್ಯಧೀಶ ಅಭ್ಯರ್ಥಿಗಳು

    ಮಸ್ಕಿ ಉಪಚುನಾವಣಾ ಕಣದಲ್ಲಿ ಕೋಟ್ಯಧೀಶ ಅಭ್ಯರ್ಥಿಗಳು

    ರಾಯಚೂರು: ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣದಲ್ಲಿ ಕೋಟ್ಯಧೀಶರಾಗಿರುವ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದಾರೆ. ಬಿಜೆಪಿಯ ಪ್ರತಾಪಗೌಡ ಪಾಟೀಲ್ ಹಾಗೂ ಕಾಂಗ್ರೆಸ್ ನ ಬಸನಗೌಡ ತುರವಿಹಾಳ ಇಬ್ಬರು ಕೋಟ್ಯಾಧೀಶರು.

    ಪ್ರತಾಪಗೌಡ ಪಾಟೀಲ್ ಒಟ್ಟು 5.92 ಕೋಟಿ ರೂಪಾಯಿ ಆಸ್ತಿ ಹೊಂದಿದ್ದಾರೆ. ಪ್ರತಾಪಗೌಡ ಹೆಸರಿನಲ್ಲಿ 30.33 ಎಕರೆ ಕೃಷಿ ಭೂಮಿ, ಪತ್ನಿ ಹೆಸರಿನಲ್ಲಿ 26 ಎಕರೆ ಜಮೀನು ಹೊಂದಿದ್ದಾರೆ. 33 ಲಕ್ಷ ಸಾಲ ಹೊಂದಿದ್ದಾರೆ. 8.45 ಲಕ್ಷ ನಗದು, ಬ್ಯಾಂಕ್ ಗಳಲ್ಲಿ 1.19 ಕೋಟಿ ರೂಪಾಯಿ ಎಫ್ ಡಿ ಇಟ್ಟಿದ್ದಾರೆ. ವಿವಿಧ ಕಂಪನಿಗಳಲ್ಲಿ 39.48 ಲಕ್ಷ ರೂಪಾಯಿ ಷೇರು ಹೊಂದಿದ್ದಾರೆ. 62.71 ಲಕ್ಷ ರೂಪಾಯಿ ಮೌಲ್ಯದ 3 ಕಾರುಗಳಿವೆ. ಪ್ರತಾಪಗೌಡ ಬಳಿ 275 ಗ್ರಾಂ, ಪತ್ನಿ 650 ಗ್ರಾಂ ಚಿನ್ನ ಹೊಂದಿದ್ದಾರೆ. ಒಟ್ಟು ಸ್ಥಿರಾಸ್ತಿ 3.22 ಕೋಟಿ ರೂಪಾಯಿ.

    ಇನ್ನೂ ಬಸನಗೌಡ ತುರ್ವಿಹಾಳ ಒಟ್ಟು 1.45 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಸ್ವಂತ ಹೆಸರಿನಲ್ಲಿ 19.13 ಎಕರೆ ಜಮೀನು, ಪತ್ನಿ ಹೆಸರಿನಲ್ಲಿ 5.34 ಎಕರೆ ಭೂಮಿ ಹೊಂದಿದ್ದಾರೆ. ಬಸನಗೌಡ 2 ಲಕ್ಷ ರೂಪಾಯಿ ತಮ್ಮ ಬಳಿ, ಮಕ್ಕಳ ಬ್ಯಾಂಕ್ ಖಾತೆಗಳಲ್ಲಿ ಒಂದು ಲಕ್ಷ ನಗದು ಹೊಂದಿದ್ದಾರೆ. 26 ಲಕ್ಷ ರೂಪಾಯಿ ಮೌಲ್ಯದ ಒಂದು ಕಾರು, 150 ಗ್ರಾಂ ಚಿನ್ನ ಹಾಗೂ ಒಂದು ಕೆಜಿ ಬೆಳ್ಳಿಯಿದೆ. ತುರ್ವಿಹಾಳದ ಯುಕೋ ಬ್ಯಾಂಕಿನಲ್ಲಿ 2.72 ಲಕ್ಷ ರೂಪಾಯಿ ಸಾಲ, 3.67 ಲಕ್ಷ ರೂಪಾಯಿ ಬೆಳೆ ಸಾಲ ಮಹೇಂದ್ರ ಫೈನಾನ್ಸ್ ನಲ್ಲಿ 7 ಲಕ್ಷ ರೂಪಾಯಿ ಸಾಲ ಸೇರಿ ಒಟ್ಟು 19.39 ಲಕ್ಷ ರೂಪಾಯಿ ಸಾಲ ಹೊಂದಿದ್ದಾರೆ.

    ನಿನ್ನೆ ಇಬ್ಬರು ಅಭ್ಯರ್ಥಿ ಸಾಂಕೇತಿಕವಾಗಿ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಉಮೇದುವಾರಿಕೆ ಸಲ್ಲಿಸುವಾಗ ನೀಡಿದ ಆಸ್ತಿ ವಿವರ ಪ್ರಕಾರ ಇಬ್ಬರೂ ಅಭ್ಯರ್ಥಿಗಳು ಕೋಟ್ಯಧಿಪತಿಗಳು ಆಗಿದ್ದಾರೆ.

  • ಹೊಸ ಟಾಸ್ಕ್ ತೆಗೆದುಕೊಂಡ ಡಿಕೆಶಿ?

    ಹೊಸ ಟಾಸ್ಕ್ ತೆಗೆದುಕೊಂಡ ಡಿಕೆಶಿ?

    ಬೆಂಗಳೂರು: ಎರಡು ವಿಧಾನಸಭಾ ಮತ್ತು ಒಂದು ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿದೆ. ಕಾಂಗ್ರೆಸ್ ಎರಡು ಕ್ಷೇತ್ರಗಳ ಅಭ್ಯರ್ಥಿಯ ಹೆಸರು ಅಂತಿಮಗೊಳಿಸಿ ಬಿ ಫಾರಂ ಸಹ ನೀಡಿದೆ. ಬೆಳಗಾವಿ ಕ್ಷೇತ್ರಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿರುವ ಸತೀಶ್ ಜಾರಕಿಹೊಳಿ ಅವರನ್ನ ಕಣಕ್ಕಿಳಿಸಲು ರಾಜ್ಯ ಕಾಂಗ್ರೆಸ್ ಸಿದ್ಧತೆ ನಡೆಸಿಕೊಂಡಿದ್ದು, ಅಂತಿಮ ಘೋಷಣೆ ಬಾಕಿ ಇದೆ. ಈ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ವತಃ ಹೊಸ ಸವಾಲು ಸ್ವೀಕರಿಸಿದ್ದು, ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿ ಅವರನ್ನ ಗೆಲ್ಲಿಸಿಕೊಂಡು ಬರುವ ಟಾಸ್ಕ್ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

    ಯಾಕೆ ಈ ಹೊಸ ಟಾಸ್ಕ್?:
    ಮಾಜಿ ಸಚಿವರ ಸಿಡಿ ಕೇಸ್ ನಲ್ಲಿ ಡಿ.ಕೆ.ಶಿವಕುಮಾರ್ ಹೆಸರು ಕೇಳಿ ಬಂದಿದೆ. ಈ ಸಂಬಂಧ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಟ್ವೀಟ್ ವಾರ್ ನಡೆದಿತ್ತು. ಇದೇ ವಿಷಯ ವಿಧಾನಸೌಧದಲ್ಲಿಯೂ ಪ್ರಸ್ತಾಪ ಆಗಿತ್ತು. ಈ ಗೊಂದಲವನ್ನ ನಿವಾರಿಸಿಕೊಳ್ಳಲು ಡಿ.ಕೆ.ಶಿವಕುಮಾರ್ ಮುಂದಾದಂತೆ ಕಾಣಿಸುತ್ತಿದೆ. ಮುಯ್ಯಿಗೆ ಮುಯ್ಯಿ ಲೆಕ್ಕಾಚಾರವೆಲ್ಲ ಮುಗಿತು. ಇನ್ನೇನಿದ್ದರೂ ಪಾರ್ಟಿ ಕಮಿಟ್‍ಮೆಂಟ್. ರಮೇಶ್ ಜಾರಕಿಹೊಳಿ ಪ್ರಕರಣದಿಂದಾದ ಗೊಂದಲವನ್ನು ಸತೀಶ್ ಜಾರಕಿಹೊಳಿ ಗೆಲುವಿನ ಮೂಲಕ ನಿವಾರಿಸಿಕೊಳ್ಳಲು ಡಿ.ಕೆ.ಶಿವಕುಮಾರ್ ಮುಂದಾಗಿದ್ದಾರೆ ಅನ್ನೋ ಮಾತುಗಳು ಕಾಂಗ್ರೆಸ್ ಪಡಸಾಲೆಯಲ್ಲಿ ಕೇಳಿ ಬರುತ್ತಿವೆ. ಇದನ್ನೂ ಓದಿ: ಮಾಸ್ಟರ್‌ ಮೈಂಡ್‌, ರಿಂಗ್‌ಮಾಸ್ಟರ್‌ ಒಂದೇ ಫ್ರೇಮ್‌ನಲ್ಲಿ – ಡಿಕೆಶಿಗೆ ಬಿಜೆಪಿ ಡಿಚ್ಚಿ

    ಸತೀಶ್ ಜಾರಕಿಹೊಳಿ ಅವರನ್ನ ಗೆಲ್ಲಿಸಿಕೊಂಡು ಬರುವ ಮೂಲಕ ಸಿಡಿ ಸಿಡಿತದಲ್ಲಿ ಆದ ಮುಜುಗರವನ್ನ ಬೆಳಗಾವಿಯ ಉಪ ಚುನಾವಣಾ ಅಖಾಡದಲ್ಲಿ ಸರಿ ಪಡಿಸಿಕೊಳ್ಳುವುದು ಡಿಕೆಶಿ ಲೆಕ್ಕಾಚಾರ ಎನ್ನಲಾಗುತ್ತಿದೆ. ಇತ್ತ ಬಿಜೆಪಿ ಸಹ ಬೆಳಗಾವಿ ಕ್ಷೇತ್ರದ ಅಭ್ಯರ್ಥಿಯ ಹೆಸರನ್ನ ಅಂತಿಮಗೊಳಿಸಿಲ್ಲ. ಇದನ್ನೂ ಓದಿ: ಡಿಕೆಶಿಗೆ ಡಿಚ್ಚಿ ಕೊಟ್ಟ ಬಿಜೆಪಿಗೆ ಕಾಂಗ್ರೆಸ್ ಗುದ್ದು

  • ಹೈ ಕಮಾಂಡ್ ಟಿಕೆಟ್ ನೀಡಿದರೆ ಸ್ಪರ್ಧಿಸಲು ಸಿದ್ಧ: ಶ್ರದ್ಧಾ ಶೆಟ್ಟರ್

    ಹೈ ಕಮಾಂಡ್ ಟಿಕೆಟ್ ನೀಡಿದರೆ ಸ್ಪರ್ಧಿಸಲು ಸಿದ್ಧ: ಶ್ರದ್ಧಾ ಶೆಟ್ಟರ್

    ಬೆಳಗಾವಿ: ಪಕ್ಷ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧರಿದ್ದೇವೆ, ಹೈಕಮಾಂಡ್ ಟಿಕೆಟ್ ನೀಡಿದರೆ ನಮ್ಮ ಕುಟುಂಬದವರು ಚುನಾವಣೆಗೆ ಸ್ಪರ್ಧಿಸಲು ಸಿದ್ಧ ಎಂದು ದಿ.ಸುರೇಶ್ ಅಂಗಡಿ ಪುತ್ರಿ, ಜಗದೀಶ್ ಶೆಟ್ಟರ್ ಸೊಸೆ, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಟಿಕೆಟ್ ಆಕಾಂಕ್ಷಿಯೂ ಆಗಿರುವ ಶ್ರದ್ಧಾ ಶೆಟ್ಟರ್ ಹೇಳಿದ್ದಾರೆ.

    ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಲೋಕಭಾ ಉಪಚುನಾವಣೆಗೆ ಸ್ಪರ್ಧಿಸಲು ಮಾನಸಿಕವಾಗಿ ಸಿದ್ಧರಿದ್ದೇವೆ. ಕೋರ್ ಕಮಿಟಿ ಸಭೆಯಲ್ಲೂ ಕುಟುಂಬಕ್ಕೆ ಟಿಕೆಟ್ ನೀಡುವ ಬಗ್ಗೆ ಚರ್ಚೆಯಾಗಿದೆ. ಬೇರೆ ಅಭ್ಯರ್ಥಿಗಳ ಬಗ್ಗೆಯೂ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಯಾಗಿದೆ. ಹೈಕಮಾಂಡ್ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕು. ಹೈಕಮಾಂಡ್ ನಿರ್ಧಾರವೇ ಅಂತಿಮ. ಚುನಾವಣೆಗೆ ಸ್ಪರ್ಧಿಸಬೇಕೆಂದು ಅಭಿಮಾನಿಗಳ ಒತ್ತಾಯ ಇದ್ದು, ಹೈಕಮಾಂಡ್‍ಗೂ ಇದನ್ನು ತಿಳಿಸಿದ್ದೇವೆ. ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ತಿಳಿಸಿದರು.

    ಇನ್ನೆರಡು ದಿನಗಳಲ್ಲಿ ಈ ಬಗ್ಗೆ ತಿಳಿಯಲಿದೆ. ನಾನು ದೆಹಲಿಗೆ ಹೋಗಿರಲಿಲ್ಲ, ಬೆಂಗಳೂರಿನಲ್ಲಿದ್ದೆ. ಹೈಕಮಾಂಡ್ ಅಥವಾ ಪಕ್ಷದ ವರಿಷ್ಠರು ಇನ್ನೂ ಈ ಬಗ್ಗೆ ನಿರ್ಧಾರ ಕೈಗೊಂಡಿಲ್ಲ, ಟಿಕೆಟ್ ಬಗ್ಗೆ ಏನೂ ಚರ್ಚೆ ಆಗಿಲ್ಲ. ಕುಟುಂಬಕ್ಕೆ ಅವಕಾಶ ಕೊಟ್ಟರೆ ಸ್ಪರ್ಧೆ ಮಾಡುತ್ತೇವೆ ಎಂದು ತಿಳಿಸಿದ್ದೇವೆ. ಪಕ್ಷ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧರಿದ್ದೇವೆ. ನಮ್ಮ ತಂದೆ ಜನರ ಜೊತೆ ಒಳ್ಳೆಯ ಸಂಪರ್ಕ ಹೊಂದಿದ್ದರು. ಅಭಿಮಾನಿಗಳು ಕರೆದ ಸಮಾರಂಭಗಳಿಗೆ ಹೋಗುತ್ತಿದ್ದೇನೆ. ಮುಂದೆಯೂ ಅಭಿಮಾನಿಗಳ ಜೊತೆ ಸಂಪರ್ಕ ಬೆಳೆಸಿಕೊಂಡು ಹೋಗುತ್ತೇವೆ. ತಂದೆಯವರ ಜೊತೆಗಿದ್ದ ಎಲ್ಲರ ಜೊತೆಗೂ ನಾವು ಇರುತ್ತೇವೆ ಎಂದರು.

  • ಲೋಕಸಭೆ ಚುನಾವಣೆಗೂ ಮುನ್ನ ಬೆಳಗಾವಿ ಕಾಂಗ್ರೆಸ್‍ನಲ್ಲಿ ಭಿನ್ನಮತ ಸ್ಫೋಟ

    ಲೋಕಸಭೆ ಚುನಾವಣೆಗೂ ಮುನ್ನ ಬೆಳಗಾವಿ ಕಾಂಗ್ರೆಸ್‍ನಲ್ಲಿ ಭಿನ್ನಮತ ಸ್ಫೋಟ

    ಬೆಳಗಾವಿ: ಲೋಕಸಭೆ ಉಪ ಚುನಾವಣೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ರಾಜ್ಯ ಕಾಂಗ್ರೆಸ್ ನಾಯಕರು ಬೆಳಗಾವಿ ಕದನಕ್ಕೆ ಕಾಂಗ್ರೆಸ್ ನಿಂದ ಯಮಕನಮರಡಿ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾದ್ಯಕ್ಷರಾದ ಸತೀಶ್ ಜಾರಕಿಹೊಳಿ ಟಿಕೆಟ್ ನೀಡಿ ಲೋಕಸಭೆಗೆ ಕಳುಹಿಸುವ ತಯಾರಿಯಲ್ಲಿದ್ದಾರೆ. ಆದರೆ ಸ್ವಕ್ಷೇತ್ರ ಯಮಕನಮರಡಿಯಲ್ಲಿ ಸತೀಶ್ ಜಾರಕಿಹೊಳಿಯವರಿಗೆ ಟಿಕೆಟ್ ನೀಡದಂತೆ ಕಾರ್ಯಕರ್ತರು ಪಕ್ಷದ ವಿರುದ್ಧವೇ ಪ್ರತಿಭಟನೆ ನಡೆಸಿ ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.

    ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೋಟುರ ಗ್ರಾಮದಲ್ಲಿ ಯಮಕನಮರಡಿ ಮತ ಕ್ಷೇತ್ರದ ಯುವ ಘಟಕದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಸತೀಶ್ ಜಾರಕಿಹೊಳಿಯವರು ಯಮಕನಮರಡಿ ಶಾಸಕರಾಗಿಯೇ ಮುಂದುವರಿಯುವಂತೆ ಕಾಂಗ್ರೆಸ್ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ. ಟಿಕೆಟ್ ನೀಡದಂತೆ ಹೈಕಮಾಂಡ್ ಮನವಿ ಮಾಡಿದ್ದಾರೆ.

    ಮುಂದಿನ ಸಿಎಂ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರನ್ನ ಸೈಡ್ ಲೈನ್ ಮಾಡುವ ಹುನ್ನಾರ ನಡೆದಿದೆ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆದ ಪರಿಸ್ಥಿತಿ ಸತೀಶ್ ಜಾರಕಿಹೊಳಿ ಅವರಿಗೆ ಬರಬಹುದು. ರಾಜ್ಯ ನಾಯಕರ ಹುನ್ನಾರದಿಂದ ದಲಿತ ನಾಯಕ ಸತೀಶ್ ಜಾರಕಿಹೊಳಿ ಅವರನ್ನ ಸೈಡ್ ಲೈನ್ ಮಾಡುವ ವ್ಯವಸ್ಥೆ ನಡೆದಿದೆ ಎಂದು ಯುವ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು ಆರೋಪಿಸಿದ್ದಾರೆ.

  • ಉಪ ಚುನಾವಣೆಗಿಲ್ಲ ಕೊರೊನಾ ರೂಲ್ಸ್: ಸಿಎಂ ಬಿಎಸ್‍ವೈ

    ಉಪ ಚುನಾವಣೆಗಿಲ್ಲ ಕೊರೊನಾ ರೂಲ್ಸ್: ಸಿಎಂ ಬಿಎಸ್‍ವೈ

    – ರಾಜಕೀಯ ರ‍್ಯಾಲಿಗಳಿಗಿಲ್ಲ ಅಡ್ಡಿ

    ತುಮಕೂರು: ಕೊರೊನಾ ಟಫ್ ರೂಲ್ಸ್ ಹಾಗೂ ಜನ ಸಂಖ್ಯೆ ಮಿತಿ ಉಪಚುನಾವಣೆಗೆ ಅಪ್ಲೈ ಆಗೋದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

    ತಿಪಟೂರಿನಲ್ಲಿ ಮಾತನಾಡಿದ ಸಿಎಂ, ನಾಲ್ಕು ಗೋಡೆಗಳ ಮಧ್ಯೆ ನಡೆಯುವ ಕಾರ್ಯಕ್ರಮಕ್ಕೆ ಮಿತಿ ಷರತ್ತು ಹಾಕಿದ್ದೇವೆ. ಸಾರ್ವಜನಿಕ ಸಭೆಗಳಿಗೆ ಯಾವುದೇ ನಿಬಂಧನೆ ಹಾಕಿಲ್ಲ ಅಂತರ ಕಾಯ್ದುಕೊಂಡು, ಮಾಸ್ಕ್ ಹಾಕಿಕೊಂಡು ಎಚ್ಚರಿಕೆಯಿಂದ ಕಾರ್ಯಕ್ರಮ ಮಾಡಬಹುದು ಎಂದು ಸ್ಪಷ್ಟಪಡಿಸಿದ್ದಾರೆ.

    ಶಾಲಾ-ಕಾಲೇಜು ಬಂದ್ ಮಾಡುವ ಯೋಚನೆ ಇಲ್ಲ. ಒಂದು ವಾರ ತಡೆದು ಜನ ಸುಧಾರಿಸದೇ ಇದ್ದರೆ ಅಥವಾ ಕೋವಿಡ್ ಸಂಖ್ಯೆ ಜಾಸ್ತಿ ಆಗ್ತಿದ್ರೆ ಪರಿಸ್ಥಿತಿ ನೋಡಿ ತೀರ್ಮಾನ ತೆಗೆದುಕೊಳ್ಳುವುದಾಗಿ ಸಿಎಂ ಹೇಳಿದ್ದಾರೆ.

    ಇದೇ ವೇಳೆ ಕೊರೊನಾ ಹಣ ದುರುಪಯೋಗವಾಗಿದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ಖರ್ಚಿನ ವಿವರ ವಿಧಾನಮಂಡಲದಲ್ಲಿ ಕೊಟ್ಟಿದ್ದೇವೆ. ದುರುಪಯೋಗ ಆಗಿದೆ ಅಂತ ಹೇಳೋದು ಸುಲಭ. ಸಾಕ್ಷ್ಯಾಧಾರ ಇಲ್ಲದೆ ಈ ಆರೋಪ ಮಾಡೋದು ವಿರೋಧ ಪಕ್ಷದ ನಾಯಕರಿಗೆ ಶೋಭೆಯಲ್ಲ ಎಂದು ಗರಂ ಆದರು.

  • ಉಪಚುನಾವಣೆ ಮತ ಪ್ರಚಾರ – ಮಸ್ಕಿಯಲ್ಲಿ ಬಿಜೆಪಿ ಬೃಹತ್ ಸಮಾವೇಶ

    ಉಪಚುನಾವಣೆ ಮತ ಪ್ರಚಾರ – ಮಸ್ಕಿಯಲ್ಲಿ ಬಿಜೆಪಿ ಬೃಹತ್ ಸಮಾವೇಶ

    – ಸಿಂಧನೂರಿನಲ್ಲಿ ವಾಸ್ತವ್ಯ ಹೂಡಲಿರುವ ಸಿಎಂ

    ರಾಯಚೂರು: ಮಸ್ಕಿಯಲ್ಲಿ ಉಪಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾಗವಹಿಸಲಿರುವ ಬಿಜೆಪಿ ಬೃಹತ್ ಬಹಿರಂಗ ಸಮಾವೇಶಕ್ಕೆ ಅಂತಿಮ ಸಿದ್ಧತೆಗಳು ಭರದಿಂದ ಸಾಗಿವೆ. ಸಮಾವೇಶಕ್ಕೆ ಬೃಹತ್ ವೇದಿಕೆ ಸಜ್ಜಾಗಿದ್ದು ಪಕ್ಷದ ನಾಯಕರುಗಳ ದಂಡೇ ಮಸ್ಕಿಗೆ ಆಗಮಿಸಲಿದೆ.

    ಇಂದು ಸಂಜೆ 4:10ಕ್ಕೆ ಜಿಲ್ಲೆಯ ಸಿಂಧನೂರಿನ ಸರ್ಕ್ಯೂಟ್ ಹೌಸ್ ಹೆಲಿಪ್ಯಾಡ್‍ಗೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿರುವ ಬಿಎಸ್‍ವೈ, ರಸ್ತೆಯ ಮೂಲಕ ಮಸ್ಕಿಗೆ ತೆರಳಲಿದ್ದಾರೆ. ಸಂಜೆ 4:50ಕ್ಕೆ ಜಿಲ್ಲಾ ಬಿಜೆಪಿಯಿಂದ ಆಯೋಜಿಸಿರುವ ಬಹಿರಂಗ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಬಳಿಕ ಸಿಂಧನೂರಿನಲ್ಲಿ ರಾತ್ರಿ ವಾಸ್ತವ್ಯ ಹೂಡಿ ಮಾರ್ಚ್ 21 ರ ಬೆಳಗ್ಗೆ 9:30ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ. ಬೃಹತ್ ಬಹಿರಂಗ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿ ಪರ ಯಡಿಯೂರಪ್ಪ ಮತಯಾಚಿಸಲಿದ್ದಾರೆ.

    ಸಮಾವೇಶಕ್ಕೆ ಸಕಲ ಸಿದ್ಧತೆಗಳು ನಡೆದಿದ್ದು ಕಾರ್ಯಕ್ರಮದಲ್ಲಿ ಸಿಎಂ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಡಿಸಿಎಂ ಗೋವಿಂದ ಕಾರಜೋಳ, ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಶ್ರೀರಾಮುಲು, ಕೆ.ಎಸ್.‌ಈಶ್ವರಪ್ಪ, ಮಸ್ಕಿ ಉಪಚುನಾವಣೆ ಉಸ್ತುವಾರಿ ಬಿ.ವೈ.ವಿಜಯೇಂದ್ರ, ರವಿಕುಮಾರ್ ಸೇರಿ ಇನ್ನೂ ಹಲವಾರು ಬಿಜೆಪಿ ಮುಖಂಡರು ಭಾಗವಹಿಸಲಿದ್ದಾರೆ.

    ಮಸ್ಕಿ ಪಟ್ಟಣದ ಪೊಲೀಸ್ ಠಾಣೆ ಬಳಿಯ ಮೈದಾನದಲ್ಲಿ ಬೃಹತ್ ವೇದಿಕೆ ಸಜ್ಜಾಗಿದೆ. ಇದೇ ವೇದಿಕೆಯಲ್ಲಿ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ತಮ್ಮ ನೂರಾರು ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಬಹಿರಂಗ ಸಮಾವೇಶದಲ್ಲಿ 30 ಸಾವಿರ ಜನ ಸೇರುವ ನಿರೀಕ್ಷೆಯಿದೆ. ಕೋವಿಡ್ ನಿಯಮ ಪಾಲನೆ ಮಾಡಿ ಸಮಾವೇಶ ಮಾಡಲು ಸಿದ್ಧತೆ ಮಾಡಿಕೊಂಡಿರುವುದಾಗಿ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ತಿಳಿಸಿದ್ದಾರೆ.

  • ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    – ಕಗ್ಗಂಟಾದ ಬೆಳಗಾವಿ ಅಖಾಡ?

    ಬೆಂಗಳೂರು: ಎರಡು ವಿಧಾನಸಭಾ ಕ್ಷೇತ್ರ ಮತ್ತು ಒಂದು ಲೋಕಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನ ಪ್ರಕಟಿಸಿದೆ. ಸಿಂದಗಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ದಿನಾಂಕ ನಿಗದಿಗೂ ಮುನ್ನ ಅಭ್ಯರ್ಥಿಯ ಹೆಸರನ್ನ ಕಾಂಗ್ರೆಸ್ ಪ್ರಕಟಿಸಿದೆ.

    ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ?
    * ಬಸವಕಲ್ಯಾಣ- ಶ್ರೀಮತಿ ಮಲ್ಲಮ್ಮ (ದಿ.ನಾರಾಯಾಣ್ ರಾವ್ ಪತ್ನಿ)
    * ಮಸ್ಕಿ – ಬಸನಗೌಡ ತುರುವಿಹಾಳ
    * ಸಿಂದಗಿ – ಅಶೋಕ್ ಮನಗೂಳಿ (ದಿ.ಎಂ.ಸಿ.ಮನಗೂಳಿ ಪುತ್ರ)

    ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಹೆಸರನ್ನ ಕಾಂಗ್ರೆಸ್ ಅಂತಿಮಗೊಳಿಸಿಲ್ಲ. ಶುಕ್ರವಾರ ಸಂಜೆಯೊಳಗೆ ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಅಭ್ಯರ್ಥಿ ಹೆಸರು ಪ್ರಕಟವಾಗುವ ಸಾಧ್ಯತೆಗಳಿವೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿರುವ ಸತೀಶ್ ಜಾರಕಿಹೊಳಿ ಅವರ ಹೆಸರು ಕಾಂಗ್ರೆಸ್ ಪಾಳಯದಲ್ಲಿ ಕೇಳಿ ಬರುತ್ತಿದೆ.

    ಶನಿವಾರ ಸಭೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಸವ ಕಲ್ಯಾಣ, ಮಸ್ಕಿ ವಿಧಾನಸಭೆ ಕ್ಷೇತ್ರ ಹಾಗೂ ಬೆಳಗಾವಿ ಲೋಕಸಭೆ ಕ್ಷೇತ್ರದ ಉಪಚುನಾವಣೆ ಸಂಬಂಧ ಶನಿವಾರ ಬೆಳಗ್ಗೆ 11 ಕ್ಕೆ ಪಕ್ಷದ ಹಿರಿಯ ಮುಖಂಡರ ಸಭೆ ಕರೆದಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಈ ಸಭೆ ನಡೆಯಲಿದೆ. ಎಐಸಿಸಿ ವೀಕ್ಷಕರೂ ಪಾಲ್ಗೊಳ್ಳಲಿರುವ ಈ ಸಭೆಗೆ ಆಯಾ ಕ್ಷೇತ್ರಗಳ ಚುನಾವಣೆ ಉಸ್ತುವಾರಿ ಹೊತ್ತಿರುವ ಮುಖಂಡರು, ಮಾಜಿ ಮಂತ್ರಿಗಳು, ಶಾಸಕರು, ಸಂಸದರನ್ನು ಆಹ್ವಾನಿಸಲಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

    ಮೂರು ಕ್ಷೇತ್ರಗಳ ಮತದಾನ ಮೇ 2 ರಂದು ನಡೆಯಲಿದೆ. ಮಾರ್ಚ್‌ 30 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದ್ದು, ಏಪ್ರಿಲ್‌ 4 ನಾಮಪತ್ರ ಹಿಂತೆಗೆತಕ್ಕೆ ಕೊನೆಯ ದಿನವಾಗಿದೆ.

    ಬೆಳಗಾವಿ ಲೋಕಸಭಾ ಸದಸ್ಯರಾಗಿದ್ದ ರೈಲ್ವೇ ಖಾತೆಯ ರಾಜ್ಯ ಸಚಿವ ಸುರೇಶ್‌ ಅಂಗಡಿ ಕೊರೊನಾದಿಂದ ಮೃತಪಟ್ಟಿದ್ದರಿಂದ ಕ್ಷೇತ್ರ ತೆರವಾಗಿತ್ತು. ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾರಾಯಣರಾವ್ ಅವರು ಕೋವಿಡ್‌ ಹಾಗೂ ಬಹುಅಂಗಾಂಗ ವೈಫಲ್ಯದಿಂದ 2020ರ ಸೆಪ್ಟೆಂಬರ್‌ 24 ರಂದು ನಿಧನರಾಗಿದ್ದರು.

    ಕಾಂಗ್ರೆಸ್‌ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಶಾಸಕ ಪ್ರತಾಪಗೌಡ ಪಾಟೀಲ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಆದರೆ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪರಾಜಿತ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಹೈಕೋರ್ಟ್‌ನಲ್ಲಿ ಪ್ರತಾಪಗೌಡ ಬಿಜೆಪಿಗೆ ಸೇರ್ಪಡೆಯಾಗುವ ಮೊದಲೇ ತಕರಾರು ಅರ್ಜಿ ಸಲ್ಲಿಸಿದ್ದರು.

    ಕಾಂಗ್ರೆಸ್‌ ಅಭ್ಯರ್ಥಿ ಪ್ರತಾಪಗೌಡ ಪಾಟೀಲ 218 ಮತಗಳ ಅಂತರದಿಂದ ಗೆದ್ದಿದ್ದಾರೆ. ಪ್ರತಾಪಗೌಡ ಪಾಟೀಲ ಅವರ ಪುತ್ರಿ ಅಮೆರಿಕದಲ್ಲಿದ್ದರೂ ಅವರ ಹೆಸರಿನಲ್ಲಿ ಮತ್ತು ಮರಣ ಹೊಂದಿದವರ ಹೆಸರಿನಲ್ಲಿ ಮತದಾನವಾಗಿವೆ. ಒಬ್ಬ ಮತದಾರನ ಹೆಸರಿನಲ್ಲಿ ಹಲವು ಮತಗಳನ್ನು ಹಾಕಲಾಗಿದೆ. ಈ ಫಲಿತಾಂಶ ರದ್ದುಪಡಿಸಬೇಕು ಎಂದು ಆರೋಪಿಸಿ ಬಿಜೆಪಿಯಿಂದ ಸ್ಪರ್ಧಿಸಿ ಪರಾಭವಗೊಂಡಿದ್ದ ಬಸನಗೌಡ ತುರ್ವಿಹಾಳ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಾಪಸ್‌ ಪಡೆದ ಹಿನ್ನೆಲೆಯಲ್ಲಿ ಈಗ ಉಪಚುನಾವಣಾ ದಿನಾಂಕ ಪ್ರಕಟವಾಗಿದೆ.

  • ಬಸವಕಲ್ಯಾಣ ಉಪ ಅಖಾಡಕ್ಕೆ ಅಭ್ಯರ್ಥಿಯನ್ನ ಕಣಕ್ಕಿಳಿಸಿದ ಹೆಚ್‍ಡಿಕೆ

    ಬಸವಕಲ್ಯಾಣ ಉಪ ಅಖಾಡಕ್ಕೆ ಅಭ್ಯರ್ಥಿಯನ್ನ ಕಣಕ್ಕಿಳಿಸಿದ ಹೆಚ್‍ಡಿಕೆ

    ಬೆಂಗಳೂರು: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯ ಹೆಸರನ್ನ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದರು. ಜೆಡಿಎಸ್ ನಿಂದ ಸೈಯದ್ ಉಸ್ರಾದ್ ಅಲಿ ಖಾದ್ರಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

    ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ಸೈಯದ್ ಉಸ್ರಾದ್ ಅಲಿ ಖಾದ್ರಿ ಅವರು ಬಸವಕಲ್ಯಾಣದ ಅಝರತ್ ಶಾ ಮದರಸದ ವಂಶಸ್ಥರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಕಳೆದ ಎರಡ್ಮೂರು ದಿನಗಳಿಂದ ಪದಾಧಿಕಾರಿಗಳ ಜೊತೆ ಚರ್ಚೆ ನಡೆಸಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಮಸ್ಕಿ ವಿಧಾನಸಭಾ ಕ್ಷೇತ್ರ ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಶೀಘ್ರದಲ್ಲಿಯೇ ಅಭ್ಯರ್ಥಿಗಳ ಹೆಸರನ್ನ ಘೋಷಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

    ನಮ್ಮ ರಾಷ್ಟ್ರೀಯ ಅಧ್ಯಕ್ಷರು ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಹಾಕುವ ತೀರ್ಮಾನ ಮಾಡಿದ್ದು, ಸೋಲು ಗೆಲುವು ಸಮಚಿತ್ತದಿಂದ ತೆಗೆದುಕೊಳ್ಳಬೇಕು. ಅತಿ ಹೆಚ್ಚು ಉಪ ಚುನಾವಣೆ ನಡೆಸಿರುವುದಲ್ಲಿ ಯಡಿಯೂರಪ್ಪ ಅವರನ್ನು ಬಿಟ್ರೆ ನಾನೇ ಇರಬೇಕು. ನನಗೂ ಅನುಭವ ಇದೆ. ನಾವು ಎರಡೂ ಕ್ಷೇತ್ರವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಆರ್ಥಿಕ ಕುತಂತ್ರದಿಂದ ಚುನಾವಣೆ ಗೆಲ್ಲಲು ಪ್ರಯತ್ನ ಮಾಡುತ್ತಾರೆ. ಎರಡು ಪಕ್ಷದವರು ಏನೇ ಆರ್ಥಿಕ ಕುತಂತ್ರ ಮಾಡಿದ್ರು ನಾವು ಗೆಲ್ಲುತ್ತೇವೆ ಎಂದು ಕುಮಾರಸ್ವಾಮಿ ಅವರು ವಿಶ್ವಾಸ ವ್ಯಕ್ತಪಡಿಸಿದರು.

  • ಬೆಳಗಾವಿ, ಮಸ್ಕಿ, ಬಸವಕಲ್ಯಾಣಕ್ಕೆ ಏ.17 ರಂದು ಉಪ ಚುನಾವಣೆ

    ಬೆಳಗಾವಿ, ಮಸ್ಕಿ, ಬಸವಕಲ್ಯಾಣಕ್ಕೆ ಏ.17 ರಂದು ಉಪ ಚುನಾವಣೆ

    ನವದೆಹಲಿ: ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್‌ 17 ರಂದು ಉಪಚುನಾವಣೆ ನಡೆಯಲಿದೆ.

    ಕೇಂದ್ರ ಚುನಾವಣಾ ಆಯೋಗ ಇಂದು ದಿನಾಂಕವನ್ನು ಪ್ರಕಟಿಸಿದೆ. ಮೂರು ಕ್ಷೇತ್ರಗಳ ಮತದಾನ ಮೇ 2 ರಂದು ನಡೆಯಲಿದೆ. ಮಾರ್ಚ್‌ 30 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದ್ದು, ಏಪ್ರಿಲ್‌ 4 ನಾಮಪತ್ರ ಹಿಂತೆಗೆತಕ್ಕೆ ಕೊನೆಯ ದಿನವಾಗಿದೆ.

    ಬೆಳಗಾವಿ ಲೋಕಸಭಾ ಸದಸ್ಯರಾಗಿದ್ದ ರೈಲ್ವೇ ಖಾತೆಯ ರಾಜ್ಯ ಸಚಿವ ಸುರೇಶ್‌ ಅಂಗಡಿ ಕೊರೊನಾದಿಂದ ಮೃತಪಟ್ಟಿದ್ದರಿಂದ ಕ್ಷೇತ್ರ ತೆರವಾಗಿತ್ತು.

    ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾರಾಯಣರಾವ್ ಅವರು ಕೋವಿಡ್‌ ಹಾಗೂ ಬಹುಅಂಗಾಂಗ ವೈಫಲ್ಯದಿಂದ 2020ರ ಸೆಪ್ಟೆಂಬರ್‌ 24 ರಂದು ನಿಧನರಾಗಿದ್ದರು.

    ಮಸ್ಕಿಗೆ ಯಾಕೆ?
    ಕಾಂಗ್ರೆಸ್‌ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಶಾಸಕ ಪ್ರತಾಪಗೌಡ ಪಾಟೀಲ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಆದರೆ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪರಾಜಿತ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಹೈಕೋರ್ಟ್‌ನಲ್ಲಿ  ಪ್ರತಾಪಗೌಡ ಬಿಜೆಪಿಗೆ ಸೇರ್ಪಡೆಯಾಗುವ ಮೊದಲೇ ತಕರಾರು ಅರ್ಜಿ ಸಲ್ಲಿಸಿದ್ದರು.

    ಕಾಂಗ್ರೆಸ್‌ ಅಭ್ಯರ್ಥಿ ಪ್ರತಾಪಗೌಡ ಪಾಟೀಲ 218 ಮತಗಳ ಅಂತರದಿಂದ ಗೆದ್ದಿದ್ದಾರೆ. ಪ್ರತಾಪಗೌಡ ಪಾಟೀಲ ಅವರ ಪುತ್ರಿ ಅಮೆರಿಕದಲ್ಲಿದ್ದರೂ ಅವರ ಹೆಸರಿನಲ್ಲಿ ಮತ್ತು ಮರಣ ಹೊಂದಿದವರ ಹೆಸರಿನಲ್ಲಿ ಮತದಾನವಾಗಿವೆ. ಒಬ್ಬ ಮತದಾರನ ಹೆಸರಿನಲ್ಲಿ ಹಲವು ಮತಗಳನ್ನು ಹಾಕಲಾಗಿದೆ. ಈ ಫಲಿತಾಂಶ ರದ್ದುಪಡಿಸಬೇಕು ಎಂದು ಆರೋಪಿಸಿ ಬಿಜೆಪಿಯಿಂದ ಸ್ಪರ್ಧಿಸಿ ಪರಾಭವಗೊಂಡಿದ್ದ ಬಸನಗೌಡ ತುರ್ವಿಹಾಳ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಾಪಸ್‌ ಪಡೆದ ಹಿನ್ನೆಲೆಯಲ್ಲಿ ಈಗ ಉಪಚುನಾವಣಾ ದಿನಾಂಕ ಪ್ರಕಟವಾಗಿದೆ.

  • ಉಪಚುನಾವಣೆಗೆ ಸಿದ್ಧವಾದ ಮಸ್ಕಿಗೆ ಸರ್ಕಾರದಿಂದ ಭರ್ಜರಿ ಗಿಫ್ಟ್

    ಉಪಚುನಾವಣೆಗೆ ಸಿದ್ಧವಾದ ಮಸ್ಕಿಗೆ ಸರ್ಕಾರದಿಂದ ಭರ್ಜರಿ ಗಿಫ್ಟ್

    ರಾಯಚೂರು: ಮಸ್ಕಿ ಬೈ ಎಲೆಕ್ಷನ್ ಹಿನ್ನೆಲೆ ಸರ್ಕಾರದಿಂದ ಕ್ಷೇತ್ರಕ್ಕೆ ಭರ್ಜರಿ ಗಿಫ್ಟ್ ಸಿಕ್ಕಿದೆ. ಮಸ್ಕಿ ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮಂಜೂರಾತಿ ಸಿಕ್ಕಿದ್ದು, ಒಟ್ಟು 17 ಕೆರೆಗಳಿಗೆ ನೀರು ತುಂಬಿಸುವ 457.18 ಕೋಟಿ ರೂಪಾಯಿಯ ಯೋಜನೆಗೆ ಆಡಳಿತಾತ್ಮಕ ಮಂಜೂರಾತಿ ಸಿಕ್ಕಿದೆ. ಮೊದಲ ಕಂತಾಗಿ ಆರ್ಥಿಕ ಇಲಾಖೆ 82.33 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ತಕ್ಷಣ ಟೆಂಡರ್ ಕರೆಯುವಂತೆಯೂ ಸೂಚನೆ ನೀಡಲಾಗಿದೆ.

    ಇತ್ತೀಚಿಗೆ ಕನಕ ಹಾಗು ಹೇಮರಡ್ಡಿ ಮಲ್ಲಮ್ಮ ಭವನಕ್ಕೆ 2.50 ಕೋಟಿ ರೂಪಾಯಿ ಮಂಜೂರಾತಿ ನೀಡಲಾಗಿತ್ತು. ನಿರ್ಮಾಣವಾಗಿರುವ ಕಟ್ಟಡಗಳು ವಿವಿಧ ಕಾಮಗಾರಿಗಳಿಗೆ ಈಗ ಒಂದೊಂದಾಗೆ ಚಾಲನೆ ನೀಡಲಾಗುತ್ತಿದೆ. ನಿನ್ನೆಯಷ್ಟೇ ಕ್ಷೇತ್ರದ ವಟಗಲ್ ನಲ್ಲಿ 1 ಕೋಟಿ ರೂಪಾಯಿ ವೆಚ್ಚದಲ್ಲಿ ಎರಡು ಇಂದಿರಾಗಾಂಧಿ ವಸತಿ ಶಾಲೆ ಆರಂಭಿಸಲಾಗಿದೆ. ಮಸ್ಕಿ ಬೈ ಎಲೆಕ್ಷನ್ ಇಷ್ಟರಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದ್ದು, ಚುನಾವಣೆ ಗೆಲ್ಲಲು ಬಿಜೆಪಿ ಕಾರ್ಯತಂತ್ರ ನಡೆಸಿದೆ.

    ಸರ್ಕಾರದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಮತ ಸೆಳೆಯುವ ತಂತ್ರಗಾರಿಕೆಯಂತೂ ನಡೆದಿದೆ. ಮಸ್ಕಿ ಬೈ ಎಲೆಕ್ಷನ್ ನಲ್ಲಿ ಪ್ರತಾಪಗೌಡ ಬಿಜೆಪಿ ಅಭ್ಯರ್ಥಿಯಾಗಲಿದ್ದು, ಚುನಾವಣಾ ಉಸ್ತುವಾರಿಯನ್ನ ಬಿ.ವೈ.ವಿಜಯೇಂದ್ರ, ಶ್ರೀರಾಮುಲು, ರವಿಕುಮಾರ್, ಡಾ.ಶಿವರಾಜ್ ಪಾಟೀಲ್, ರಾಜೂಗೌಡ, ನೇಮಿರಾಜ್ ನಾಯಕ್ ವಹಿಸಿಕೊಂಡಿದ್ದಾರೆ.

    ಒಂದೆಡೆ ಎನ್‍ಆರ್ ಬಿ ಸಿ 5 ಎ ಕಾಲುವೆಗಾಗಿ ಪಾಮನಕಲ್ಲೂರಿನಲ್ಲಿ ನಡೆಯುತ್ತಿರುವ ಹೋರಾಟ 80 ನೆಯ ದಿನಕ್ಕೆ ಕಾಲಿಟ್ಟಿದೆ. ರೈತರ ಹೋರಾಟದ ಮಧ್ಯೆಯೇ ಸಣ್ಣ ನೀರಾವರಿ ಇಲಾಖೆಯಿಂದ ಕೆರೆ ತುಂಬಿಸುವ ಯೋಜನೆಗೆ ಅನುಮೋದನೆ ನೀಡಲಾಗಿದೆ.