Tag: by election

  • ಶಿರಾ, ಆರ್‍ಆರ್ ನಗರದಲ್ಲಿ ಗೆಲುವು ಸಾಧಿಸಿರುವುದು ಅತ್ಯಂತ ವಿಶೇಷ: ಮೋದಿ

    ಶಿರಾ, ಆರ್‍ಆರ್ ನಗರದಲ್ಲಿ ಗೆಲುವು ಸಾಧಿಸಿರುವುದು ಅತ್ಯಂತ ವಿಶೇಷ: ಮೋದಿ

    – ಕನ್ನಡದಲ್ಲಿಯೇ ಜನತೆಗೆ ಧನ್ಯವಾದ ಅರ್ಪಣೆ

    ನವದೆಹಲಿ: ತುಮಕೂರಿನ ಶಿರಾ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ್ದು, ಪ್ರಧಾನಿ ಮೋದಿ ಕೂಡ ಕನ್ನಡದಲ್ಲಿಯೇ ಟ್ವೀಟ್ ಮಾಡಿ ಜನತೆಗೆ ಧನ್ಯವಾದವನ್ನು ಸಮರ್ಪಿಸಿದ್ದಾರೆ.

    ಟ್ವಿಟ್‍ನಲ್ಲಿ ಪ್ರಧಾನಿ ಹೇಳಿದ್ದೇನು..?
    ಕರ್ನಾಟಕದ ಶಿರಾ ಮತ್ತು ರಾಜರಾಜೇಶ್ವರಿನಗರದಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ಅತ್ಯಂತ ವಿಶೇಷವಾದದ್ದು. ಕೇಂದ್ರ ಹಾಗೂ ಬಿಎಸ್‍ವೈ ಜೀ ಅವರ ನೇತೃತ್ವದ ರಾಜ್ಯ ಸರ್ಕಾರದ ಸುಧಾರಣಾ ಕಾರ್ಯಸೂಚಿಗಳ ಮೇಲೆ ಜನರು ಹೊಂದಿರುವ ಸ್ಥಿರ ವಿಶ್ವಾಸವನ್ನು ಇದು ಪುನ:ದೃಢೀಕರಿಸುತ್ತದೆ. ಅಲ್ಲದೆ ನಮ್ಮ ಕಾರ್ಯಕರ್ತರ ಶ್ರಮ ಹಾಗೂ ಜನರ ಬೆಂಬಲಕ್ಕೆ ನನ್ನ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

    ಈ ಹಿಂದೆ ಗೃಹ ಸಚಿವ ಅಮಿತ್ ಶಾ ಕೂಡ ಕನ್ನಡದಲ್ಲಿಯೇ ಧನ್ಯವಾದ ತಿಳಿಸಿದ್ದರು. ಬಿಜೆಪಿಗೆ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕಕ್ಕೆ ಧನ್ಯವಾದಗಳು. ಉಪಚುನಾವಣೆಯಲ್ಲಿನ ಅಭೂತಪೂರ್ವ ಗೆಲುವಿಗಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಪಕ್ಷದ ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಡಿ ರಾಜ್ಯವು ಅಭಿವೃದ್ಧಿ ಸಾಧಿಸಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜರಾಜೇಶ್ವರಿ ನಗರದಲ್ಲಿ ಕುಸುಮಾಗೆ ಸೋಲು – ಕಾಂಗ್ರೆಸ್ ಹಿನ್ನಡೆಗೆ ಕಾರಣ ಏನು? 

    ಆರ್‍ಆರ್ ನಗರದಲ್ಲಿ ಕಾಂಗ್ರೆಸ್ಸಿನಿಂದ ಬಿಜೆಪಿ ಸೇರ್ಪಡೆಯಾಗಿ ಚುನಾವಣಾ ಕಣದಲ್ಲಿದ್ದ ಮುನಿರತ್ನ 1,25,990 ಮತ ಪಡೆಯುವ ಮೂಲಕ ಹ್ಯಾಟ್ರಿಕ್ ಗೆಲುವು ದಾಖಲಿಸಿದ್ದಾರೆ. ಸಮೀಪದ ಪ್ರತಿ ಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹೆಚ್. 67,877 ಮತ ಪಡೆದಿದ್ದಾರೆ. ಶಿರಾ ಕ್ಷೇತ್ರದಲ್ಲಿ ಬಿಜೆಪಿಯ ರಾಜೇಶ್ ಗೌಡ 76,564 ಮತ ಪಡೆದು ಐತಿಹಾಸಿಕ ದಾಖಲೆ ಬರೆದಿದ್ದಾರೆ. ಇದನ್ನೂ ಓದಿ: ಆರ್‌ಆರ್‌ನಗರ ಕುರುಕ್ಷೇತ್ರ ಗೆದ್ದ ಮುನಿರತ್ನ – ಗೆಲುವಿಗೆ ಕಾರಣವಾಗಿದ್ದು ಏನು?

  • ಶಿರಾ ಗೆಲುವಿನ ಬಳಿಕ ಬಸವ ಕಲ್ಯಾಣದತ್ತ ವಿಜಯೇಂದ್ರ ಪಯಣ

    ಶಿರಾ ಗೆಲುವಿನ ಬಳಿಕ ಬಸವ ಕಲ್ಯಾಣದತ್ತ ವಿಜಯೇಂದ್ರ ಪಯಣ

    ಬೆಂಗಳೂರು: ಶಿರಾ ಉಪ ಚುನಾವಣೆಯ ಗೆಲುವಿನ ಬಳಿಕ ಬಿಜೆಪಿ ಉಪಾಧ್ಯಕ್ಷ, ಸಿಎಂ ಬಿಎಸ್‍ವೈ ಪುತ್ರ ಬಿ.ವೈ.ವಿಜಯೇಂದ್ರ ಬಸವ ಕಲ್ಯಾಣದತ್ತ ಪ್ರಯಾಣ ಬೆಳೆಸಲಿದ್ದಾರೆ.

    ಪಬ್ಲಿಕ್ ಟಿವಿಯ ಬಿಗ್ ಬುಲೆಟಿನ್ ನಲ್ಲಿ ಮಾತನಾಡಿದ ವಿಜಯೇಂದ್ರ, ಪಕ್ಷದ ರಾಜ್ಯಾಧ್ಯಕ್ಷರು ನಳಿನ್ ಕುಮಾರ್ ಕಟೀಲ್ ಆದೇಶದ ಮೇರೆಗೆ ನವೆಂಬರ್ 13ರಂದು ಬಸವ ಕಲ್ಯಾಣಕ್ಕೆ ತೆರಳುತ್ತಿದ್ದೇನೆ. ಅಲ್ಲಿಯ ಮುಖಂಡರು ಮತ್ತು ಕಾರ್ಯಕರ್ತರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದೇನೆ ಎಂದು ಹೇಳುವ ಮೂಲಕ ಮುಂದಿನ ಗುರಿ ಬಸವ ಕಲ್ಯಾಣ ಅನ್ನೋದನ್ನ ರಿವೀಲ್ ಮಾಡಿದರು.

    ಶಿರಾದಲ್ಲಿ ಎಲ್ಲರನ್ನ ಒಗ್ಗೂಡಿಸಿಕೊಂಡು ಚುನಾವಣೆಯನ್ನ ಎದುರಿಸಿದ್ದೇವೆ. ಶಿರಾದಲ್ಲಿ ಕಮಲ ಅರಳಿರೋದಕ್ಕೆ ತುಂಬಾನೇ ಸಂತೋಷವಾಗಿದೆ. ಶಿರಾ ಗೆಲವು ಬಿಜೆಪಿ ಜಾತಿ ರಾಜಕಾರಣ ಮಾಡಲ್ಲ ಎಂಬುದನ್ನ ಮತ್ತೊಮ್ಮೆ ಸಾಬೀತು ಮಾಡಿದೆ. ಶಿರಾ ಕ್ಷೇತ್ರದ ಎಲ್ಲ ಸಮುದಾಯ ಜನರು ಬಿಜೆಪಿಯ ಕೈ ಹಿಡಿದು ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿದ್ದಾರೆ. ಶಿರಾದ ಯುವ ಜನತೆ ಮತ್ತು ಮಹಿಳೆಯರು ನೀಡಿದ ಬೆಂಬಲದಿಂದ ಬಿಜೆಪಿ ಇಷ್ಟು ದೊಡ್ಡ ಅಂತರದಿಂದ ಗೆಲುವು ದಾಖಲಿಸಲು ಸಾಧ್ಯವಾಗಿದೆ ಎಂದು ತಿಳಿಸಿದರು.

    ಬಸವ ಕಲ್ಯಾಣದ ಕಾಂಗ್ರೆಸ್ ಶಾಸಕರಾಗಿದ್ದ ಬಿ.ನಾರಾಯಣ್ ರಾವ್ ಸೆಪ್ಟೆಂಬರ್ ನಲ್ಲಿ ಕೊರೊನಾದಿಂದ ನಿಧನ ಹೊಂದಿದ್ದರು. ಹೀಗಾಗಿ ಬಸವಕಲ್ಯಾಣಕ್ಕೆ ಉಪ ಚುನಾವಣೆ ನಡೆಯಲಿದೆ. ಇತ್ತು ಕಾಂಗ್ರೆಸ್ ನಿಂದ ಬಿಜೆಪಿ ಸೇರಿದ್ದ ಪ್ರತಾಪ್ ಗೌಡ ಪಾಟೀಲ್ ರಾಜೀನಾಮೆಯಿಂದ ತೆರವಾಗಿರುವ ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೂ ಉಪ ಚುನಾವಣೆ ದಿನಾಂಕ ಶೀಘ್ರದಲ್ಲಿಯೇ ಘೋಷಣೆ ಆಗುವ ಸಾಧ್ಯತೆಗಳಿವೆ.

  • ಕರ್ನಾಟಕಕ್ಕೆ ಧನ್ಯವಾದಗಳು – ಕನ್ನಡದಲ್ಲಿಯೇ ಅಮಿತ್ ಶಾ ಟ್ವೀಟ್

    ಕರ್ನಾಟಕಕ್ಕೆ ಧನ್ಯವಾದಗಳು – ಕನ್ನಡದಲ್ಲಿಯೇ ಅಮಿತ್ ಶಾ ಟ್ವೀಟ್

    ನವದೆಹಲಿ: ಉಪ ಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನ ಗೆಲ್ಲಿಸಿದ ಕರ್ನಾಟಕದ ಮತದಾರರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡದಲ್ಲಿಯೇ ಟ್ವೀಟ್ ಮೂಲಕ ಧನ್ಯವಾದ ತಿಳಿಸಿದ್ದಾರೆ.

    ಅಮಿತ್ ಶಾ ಟ್ವೀಟ್: ಬಿಜೆಪಿಗೆ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕಕ್ಕೆ ಧನ್ಯವಾದಗಳು. ಉಪಚುನಾವಣೆಯಲ್ಲಿನ ಅಭೂತಪೂರ್ವ ಗೆಲುವಿಗಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಪಕ್ಷದ ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಡಿ ರಾಜ್ಯವು ಅಭಿವೃದ್ಧಿ ಸಾಧಿಸಲಿದೆ ಎಂದು ತಿಳಿಸಿದ್ದಾರೆ.

    ಕಾಂಗ್ರೆಸ್ ನಿಂದ ಬಿಜೆಪಿ ಸೇರ್ಪಡೆಯಾಗಿ ಚುನಾವಣೆ ಕಣದಲ್ಲಿದ್ದ ಮುನಿರತ್ನ 1,25,990 ಮತ ಪಡೆಯುವ ಮೂಲಕ ಹ್ಯಾಟ್ರಿಕ್ ಗೆಲುವು ದಾಖಲಿಸಿದ್ದಾರೆ. ಸಮೀಪದ ಪ್ರತಿ ಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹೆಚ್. 67,877 ಮತ ಪಡೆದಿದ್ದಾರೆ. ಇನ್ನು ಶಿರಾ ಕ್ಷೇತ್ರದಲ್ಲಿ ಬಿಜೆಪಿಯ ರಾಜೇಶ್ ಗೌಡ 76,564 ಮತ ಪಡೆದು ಐತಿಹಾಸಿಕ ದಾಖಲೆ ಬರೆದಿದ್ದಾರೆ.

  • ಮೋದಿ, ಯಡಿಯೂರಪ್ಪನವರ ಶಿಸ್ತು ಬದ್ಧ ಆಡಳಿತಕ್ಕೆ ಜನರ ಸ್ಪಂದನೆ: ಎಸ್‍ಎಂ ಕೃಷ್ಣ

    ಮೋದಿ, ಯಡಿಯೂರಪ್ಪನವರ ಶಿಸ್ತು ಬದ್ಧ ಆಡಳಿತಕ್ಕೆ ಜನರ ಸ್ಪಂದನೆ: ಎಸ್‍ಎಂ ಕೃಷ್ಣ

    ಬೆಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದಕ್ಕೆ ಬಿಜೆಪಿ ಪಕ್ಷದ ಹಿರಿಯ ಮುಖಂಡ ಎಸ್.ಎಂ ಕೃಷ್ಣ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

    ಉಪಚುನಾವಣೆ ವಿಚಾರವಾಗಿ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಎಸ್‍ಎಂ ಕೃಷ್ಣ, ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಗೆಲುವು ಸಾಧಿಸಿರುವ ರಾಜೇಶ್‍ಗೌಡ ಮತ್ತು ಮುನಿರತ್ನ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಯಡಿಯೂರಪ್ಪನವರ ಶಿಸ್ತು ಬದ್ಧ ಆಡಳಿತಕ್ಕೆ ಜನರ ಸ್ಪಂದನೆ ನೀಡಿದ್ದಾರೆ ಎಂದಿದ್ದಾರೆ.

    ಇಂದು ಶಿರಾ ಮತ್ತು ಆರ್‍ಆರ್ ನಗರದ ಉಪಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಆರ್.ಆರ್. ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು 57,936 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಶಿರಾ ಕ್ಷೇತ್ರದಲ್ಲೂ ಕೂಡ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಗೆದ್ದು ಬೀಗಿ ಇತಿಹಾಸ ಸೃಷ್ಟಿಸಿದ್ದಾರೆ.

  • ಆರ್‌ಆರ್‌ ನಗರದಲ್ಲಿ ಠೇವಣಿ ಕಳೆದುಕೊಂಡ ಜೆಡಿಎಸ್

    ಆರ್‌ಆರ್‌ ನಗರದಲ್ಲಿ ಠೇವಣಿ ಕಳೆದುಕೊಂಡ ಜೆಡಿಎಸ್

    – ಕಳೆದ ಬಾರಿ 60 ಸಾವಿರ ಮತ ಪಡೆದಿದ್ದ ಅಭ್ಯರ್ಥಿ

    ಬೆಂಗಳೂರು: ರಾಜರಾಜೇಶ್ವರಿ ಉಪ ಚುನಾವಣೆಯಲ್ಲಿ ಜೆಡಿಎಸ್ ಈ ಬಾರಿ ಹೀನಾಯವಾಗಿ ಸೋಲನುಭವಿಸಿದ್ದು, ಠೇವಣಿಯನ್ನು ಕಳೆದುಕೊಂಡಿದೆ.

    ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಗೆಲುವಿನ ನಗೆ ಬೀರಿದ್ದು, ಕಾಂಗ್ರೆಸ್‍ನ ಕುಸುಮಾ ಎರಡನೇ ಸ್ಥಾನದಲ್ಲಿದ್ದಾರೆ. ಆದರೆ ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ 10,251 ಮತಗಗಳನ್ನು ಪಡೆಯುವ ಮೂಲಕ ಠೇವಣಿ ಕಳೆದುಕೊಂಡಿದ್ದಾರೆ. ಕಳೆದ ಬಾರಿ ಜೆಡಿಎಸ್ 60 ಸಾವಿರ ಮತಗಳನ್ನು ಪಡೆದಿತ್ತು. ಆದರೆ ಈ   ಬಾರಿ ಇದರ ಅರ್ಧದಷ್ಟು ಮತಗಳನ್ನು ಸಹ ಜೆಡಿಎಸ್ ಅಭ್ಯರ್ಥಿ ಪಡೆದಿಲ್ಲ. ಒಟ್ಟು 57,936 ಮತಗಳ ಅಂತರದಿಂದ ಮುನಿರತ್ನ ಈ ಚುನಾವಣೆಯನ್ನು ಗೆದ್ದಿದ್ದಾರೆ.

    ಚಲಾವಣೆಯಾದ ಒಟ್ಟು ಮತಗಳ ಪೈಕಿ 6ನೇ 1 ಭಾಗದಷ್ಟು ಮತಗಳನ್ನು ಪಡೆದರೆ ಠೇವಣಿ ಉಳಿಸಿಕೊಂಡಂತೆ. ಈ ಬಾರಿ ಒಟ್ಟು 2,09,828 ಮತಗಳು ಚಲಾವಣೆಯಗಿದ್ದು, ಇದರ ಒಂದು ಭಾಗ ಎಂದರೆ 34,971 ಮತಗಳನ್ನು ಜೆಡಿಎಸ್ ಅಭ್ಯರ್ಥಿ ಪಡೆಯಬೇಕಿತ್ತು. ಆದರೆ 24ನೇ ಸುತ್ತಿಗೆ ಜೆಡಿಎಸ್ ಪಡೆದ ಮತ ಕೇವಲ 10,197. ಹೀಗಾಗಿ ಜೆಡಿಎಸ್ ಅಭ್ಯರ್ಥಿ ಠೇವಣಿ ಕಳೆದುಕೊಂಡು ಹೀನಾಯವಾಗಿ ಸೋಲನುಭವಿಸಿದಂತಾಗಿದೆ.

     

  • ಆರ್.ಆರ್.ನಗರ ಸೋಲಿಗೆ ಕಾರಣ ತಿಳಿಸಿದ ಸಿದ್ದರಾಮಯ್ಯ

    ಆರ್.ಆರ್.ನಗರ ಸೋಲಿಗೆ ಕಾರಣ ತಿಳಿಸಿದ ಸಿದ್ದರಾಮಯ್ಯ

    ಬೆಂಗಳೂರು: ಅಭ್ಯರ್ಥಿಯ ಆಯ್ಕೆಯ ವಿಳಂಬವಾಗಿದ್ದರಿಂದ ಆರ್.ಆರ್.ನಗರದ ಸೋಲಿಗೆ ಕಾರಣ ಇರಬಹುದು ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಎರಡೂ ಸೋಲುಗಳು ಕುರಿತು ಸಾಲು ಸಾಲು ಟ್ವೀಟ್ ಮೂಲಕ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿದ್ದಾರೆ.

    ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದ ಸೋಲನ್ನು ನಾವು ವಿನೀತರಾಗಿ ಒಪ್ಪಿಕೊಂಡಿದ್ದೇವೆ. ಆದರೆ ಇದು ಪ್ರಜಾಪ್ರಭುತ್ವದ ಸೋಲು. ಅಕ್ರಮ ಗಳಿಕೆಯ ಹಣ ಮತ್ತು ಆಡಳಿತ ಯಂತ್ರದ ದುರುಪಯೋಗಕ್ಕೆ ಸಿಕ್ಕಿರುವ ಗೆಲುವು ಎನ್ನುವುದು ವಿಷಾದದ ಸಂಗತಿ. ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಅಧಿಕಾರರೂಢ ಪಕ್ಷದ ಅಭ್ಯರ್ಥಿಗಳು ಗೆಲ್ಲುತ್ತಾರೆ. ಆಡಳಿತ ಪಕ್ಷದ ಶಾಸಕರಿದ್ದರೆ ತಮ್ಮ ಕ್ಷೇತ್ರಕ್ಕೆ ಅನುಕೂಲವಾಗುತ್ತದೆ ಎಂಬ ಅಭಿಪ್ರಾಯ ಜನರಲ್ಲಿರುತ್ತದೆ. ಇದೇ ಫಲಿತಾಂಶ ಸಾಮಾನ್ಯ ಚುನಾವಣೆಯಲ್ಲಿ ನಿರೀಕ್ಷಿಸಲಾಗದು. ಇದನ್ನೂ ಓದಿ: ಮತದಾರರ ತೀರ್ಪಿಗೆ ತಲೆ ಬಾಗುತ್ತೇವೆ, ಕಾರ್ಯಕರ್ತರು ಧೃತಿಗೆಡಬಾರದು: ಡಿ.ಕೆ.ಸುರೇಶ್

    ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವನ್ನು ಸ್ವೀಕರಿಸಲೇಬೇಕು. ನಾವೂ ಒಪ್ಪಿಕೊಂಡಿದ್ದೇವೆ. ಇದರಿಂದ ಪಕ್ಷದ ಕಾರ್ಯಕರ್ತರು ಕಂಗೆಡಬೇಕಾಗಿಲ್ಲ. ಇದರಿಂದ ಯಾವ ಪಕ್ಷವೂ ಬಲಶಾಲಿಯಾಗುವುದಿಲ್ಲ, ಯಾವ ಪಕ್ಷವೂ ಬಲಹೀನವಾಗುವುದಿಲ್ಲ. ಇದು ಸಮಗ್ರ ರಾಜ್ಯದ ಜನಾಭಿಪ್ರಾಯ ಅಲ್ಲ, ಇದು ಎರಡು ಸ್ಥಾನಗಳಿಗೆ ನಡೆದ ಚುನಾವಣೆ ಮಾತ್ರ. ನಾನು ಮುಖ್ಯಮಂತ್ರಿಯಾಗಿದ್ದಾಗ ಜನರಿಗೆ ಒಳ್ಳೆಯದಾಗಲಿ, ನಮ್ಮ ಶಾಸಕನೂ ರಾಜಕೀಯವಾಗಿ ಜನಪ್ರಿಯನಾಗಲಿ ಎಂದು ಆರ್.ಆರ್.ನಗರಕ್ಕೆ ಸುಮಾರು ರೂ.2000 ಕೋಟಿ ಕಾಮಗಾರಿಯನ್ನು ಮಂಜೂರು ಮಾಡಿದ್ದೆ. ಅದರ ಫಲ ನಮ್ಮ ಪಕ್ಷಕ್ಕೆ ಸಿಗಲಿಲ್ಲ, ಅವರಿಗೆ ಸಿಕ್ಕಿದೆ. ಇದನ್ನೂ ಓದಿ: ಚುನಾವಣೆ ಗೆಲುವಿಗೆ ಬಂಡೆ ಅಡ್ಡಿಬರಲೇ ಇಲ್ಲ- ಡಿಕೆಶಿ ಕುಟುಕಿದ ಕೋಟ

    ಮುನಿರತ್ನ ಅವರು ಪಕ್ಷಾಂತರ ಮಾಡಿದ ದಿನದಿಂದ ಚುನಾವಣಾ ತಯಾರಿ ಪ್ರಾರಂಭಿಸಿದ್ದರು. ನಾವು ನಮ್ಮ ಅಭ್ಯರ್ಥಿಯ ಆಯ್ಕೆಯನ್ನು ಸ್ವಲ್ಪ ತಡವಾಗಿ ಮಾಡಿದೆವು, ಇದರಿಂದಾಗಿ ಪ್ರಚಾರ ವಿಳಂಬವಾಗಿ ಪ್ರಾರಂಭಿಸಬೇಕಾಯಿತು. ಸೋಲಿಗೆ ಇದೂ ಒಂದು ಕಾರಣ ಇರಬಹುದು ಎಂದಿದ್ದಾರೆ. ಇದನ್ನೂ ಓದಿ: ಇದು ಬಿಎಸ್‍ವೈ ಸರ್ಕಾರದ ಜನಪರ ಕಾರ್ಯಗಳಿಗೆ ಜನ ನೀಡಿದ ಬೆಂಬಲ – ಸುಧಾಕರ್ ಬಣ್ಣನೆ

    ಶಿರಾದಲ್ಲಿ ಟಿ.ಬಿ.ಜಯಚಂದ್ರ ಜನತೆಯ ಬದುಕು ಉಳಿಸುವ ನದಿನೀರು ಹರಿಸಿದ್ದರು. ಬಿಜೆಪಿಯವರು ಬಂದು ಅಕ್ರಮವಾಗಿ ಸಂಪಾದಿಸಿದ್ದ ಹಣದ ಹೊಳೆ ಹರಿಸಿದ್ದರು. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾದ ಬೆಳವಣಿಗೆ. ಜನರ ಸೇವೆ ಮಾಡಿದವರನ್ನು ಜನ ಪ್ರಾಮಾಣಿಕವಾಗಿ ಗುರುತಿಸಿ ಹರಸಬೇಕು ಎಂದು ಬೇಸರದ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಲೀಡರ್, ವರ್ಕರ್ ಪ್ರಾಬ್ಲಂ ಇಲ್ಲ, ವಿ ಹ್ಯಾವ್ ಫೇಲ್ : ಡಿಕೆಶಿ

    ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಹೀನಾಯವಾಗಿ ಸೋತಿರುವುದರಿಂದ ಆ ಪಕ್ಷದ ಮತಗಳು ಬಿಜೆಪಿ ಬುಟ್ಟಿಗೆ ಬಿದ್ದು ಅವರ ಗೆಲುವಿಗೆ ನೆರವಾಯಿತು. ಮುಖ್ಯವಾಗಿ ಶಿರಾದಲ್ಲಿ ಜೆಡಿಎಸ್ ತನ್ನ ಮತಗಳನ್ನಾದರೂ ಉಳಿಸಿಕೊಂಡಿದ್ದರೆ ಖಂಡಿತ ಬಿಜೆಪಿ ಇಷ್ಟು ಸುಲಭದಲ್ಲಿ ಗೆಲ್ಲುತ್ತಿರಲಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಆರ್‌ಆರ್‌ನಗರ ಕುರುಕ್ಷೇತ್ರ ಗೆದ್ದ ಮುನಿರತ್ನ – ಗೆಲುವಿಗೆ ಕಾರಣವಾಗಿದ್ದು ಏನು?

  • ಲೀಡರ್, ವರ್ಕರ್ ಪ್ರಾಬ್ಲಂ ಇಲ್ಲ, ವಿ ಹ್ಯಾವ್ ಫೇಲ್ : ಡಿಕೆಶಿ

    ಲೀಡರ್, ವರ್ಕರ್ ಪ್ರಾಬ್ಲಂ ಇಲ್ಲ, ವಿ ಹ್ಯಾವ್ ಫೇಲ್ : ಡಿಕೆಶಿ

    – ಹಣ ಹಂಚಿಕೆ ಬಗ್ಗೆ ಈಗ ಹೇಳಲ್ಲ
    – ಸೋಲು ಗೆಲುವಿನ ಬುನಾದಿ

    ಬೆಂಗಳೂರು: ಉಪ ಚುನಾವಣೆ ಫಲಿತಾಂಶದ ಬಳಿಕ ಸುದ್ದಿಗೋಷ್ಠಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮತದಾರರು ನೀಡಿರುವ ತೀರ್ಪನ್ನು ನಾವು ಗೌರವಿಸುತ್ತೇವೆ. ಚುನಾವನೆಯಲ್ಲಿ ಏನಾಯ್ತು? ಸೋಲು ಆಗಿದ್ದೇಕೆ ಎಂಬುದಕ್ಕೆ ಉತ್ತರ ಕೊಂಡುಕೊಳ್ಳುತ್ತೇನೆ. ಅಧ್ಯಕ್ಷನಾಗಿ ಚುನಾವಣೆ ಎದುರಿಸಿದ್ದರಿಂದ ವೈಯಕ್ತಿಕವಾಗಿ ಬೇಸರವಾಗಿದೆ ಎಂದರು.

    ಉಪ ಚುನಾವಣೆಯಲ್ಲಿ ಮತದಾರರು ನೀಡಿರುವ ತೀರ್ಪನ್ನು ಗೌರವಯುತವಾಗಿ ಒಪ್ಪುತ್ತೇವೆ. ಫಲಿತಾಂಶ ಯಾಕೆ ಹೀಗಾಯ್ತು? ಏನಾಯ್ತು ಎಂಬುದನ್ನ ಮುಂದಿನ ದಿನಗಳಲ್ಲಿ ನಾವು ಪಕ್ಷದೊಳಗೆ ಚರ್ಚೆ ನಡೆಸಿ ಉತ್ತರ ಹುಡುಕಿಕೊಂಡು ಸರಿ ಮಾಡಿಕೊಳ್ಳುತ್ತೇವೆ. ಚುನಾವಣೆಯಲ್ಲಿ ಸೋತಿದ್ದೇವೆ ಎಂದು ಯಾರೂ ಧೃತಿಗೆಡಬೇಕಿಲ್ಲ. ಬೈ ಎಲೆಕ್ಷನ್ ಗಳಲ್ಲಿ ಅಧಿಕಾರದಲ್ಲಿದ್ದ ಆಡಳಿತ ಪಕ್ಷಕ್ಕೆ ಶೇ.30ರಷ್ಟು ಅನುಕೂಲ ಆಗುತ್ತೆ ಅನ್ನೋದು ನಮಗೆ ಗೊತ್ತಿದೆ. ಬಳ್ಳಾರಿ, ನಂಜನಗೂಡು ಮತ್ತು ಗುಂಡ್ಲುಪೇಟೆ ಉಪ ಚುನಾವಣೆಯ ಅನುಭವ ನಮಗಿದೆ. ಹಾಗಾಗಿ ಕಾರ್ಯಕರ್ತರು ಮತ್ತು ನಮ್ಮ ಮತದಾರರು ಬೇಸರ ಆಗೋದ ಬೇಡ ಎಂದು ಹೇಳಿದರು. ಇದನ್ನೂ ಓದಿ: ಇದು ಬಿಎಸ್‍ವೈ ಸರ್ಕಾರದ ಜನಪರ ಕಾರ್ಯಗಳಿಗೆ ಜನ ನೀಡಿದ ಬೆಂಬಲ – ಸುಧಾಕರ್ ಬಣ್ಣನೆ

    ನಮ್ಮ ಕ್ಷೇತ್ರ, ರಾಜ್ಯದ ಕಾರ್ಯಕರ್ತರು ಶಕ್ತಿ ಮೀರಿ ಅಭ್ಯರ್ಥಿ ಗೆಲ್ಲುವಿಗೆ ಶ್ರಮ ಪಟ್ಟಿದ್ದಾರೆ. ಮತದಾರ ಸಂಪೂರ್ಣ ಮತ ಹಾಕದಿರಬಹುದು. ಇಷ್ಟು ದೊಡ್ಡ ಮಟ್ಟದ ಅಂತರ ನಿರೀಕ್ಷೆ ಮಾಡಿರಲಿಲ್ಲ. ಮುಂದಿನ ದಿನಗಳನ್ನ ಗಮನದಲ್ಲಿಟ್ಟುಕೊಂಡು ಅಭ್ಯರ್ಥಿಯನ್ನ ಸೂಚಿಸಿದ್ದೇವೆ. ಕುಸುಮಾ ಅವರು ಸಹ ಒಳ್ಳೆಯ ಹೋರಾಟ ನಡೆಸಿದ್ದಾರೆ. ಶಿರಾ ಕ್ಷೇತ್ರದ ಮೇಲಿನ ನಿರೀಕ್ಷೆ ಹೆಚ್ಚು ಕಡಿಮೆ ಆಗಿದ್ದು, ಈ ಅಂತರದ ಗೆಲುವು ನಿರೀಕ್ಷೆ ಇರಲಿಲ್ಲ. ಮತ್ತೆ ಕ್ಷೇತ್ರದಲ್ಲಿ ನಮ್ಮ ಪಕ್ಷ ಕಟ್ಟುವ ಕೆಲಸ ಮಾಡಲಾಗುತ್ತದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು. ಇದನ್ನೂ ಓದಿ: ಚುನಾವಣೆ ಗೆಲುವಿಗೆ ಬಂಡೆ ಅಡ್ಡಿಬರಲೇ ಇಲ್ಲ- ಡಿಕೆಶಿ ಕುಟುಕಿದ ಕೋಟ

    ಸೋಲು ಗೆಲುವಿನ ಬುನಾದಿ: ನಾನು ಮೊದಲ ಚುನಾವಣೆಯಲ್ಲಿ ಸೋತಿದ್ದೇನೆ. ನಂತರ ಗೆಲುವು ದಾಖಲಿಸಿಕೊಂಡು ಬಂದಿದ್ದೇನೆ. ಸೋಲು ಗೆಲುವಿನ ಬುನಾದಿ ಅನ್ನೋ ತತ್ವದಲ್ಲಿ ನಂಬಿಕೆ ಇಟ್ಟುಕೊಂಡ ವ್ಯಕ್ತಿ. ಉಪ ಚುನಾವಣೆ ಮೂಲಕ ಆಡಳಿತ ಸರ್ಕಾರಕ್ಕೆ ಒಂದು ಸಂದೇಶ ಕೊಡುವ ಪ್ರಯತ್ನ ಆಗಿದೆ. ನಮ್ಮ ಸಿದ್ಧಾಂತಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರದ ವಿರುದ್ಧದ ಹೋರಾಟ ಮುಂದುವರಿಯಲಿದೆ ಎಂದರು. ಇದನ್ನೂ ಓದಿ: ಮತದಾರರ ತೀರ್ಪಿಗೆ ತಲೆ ಬಾಗುತ್ತೇವೆ, ಕಾರ್ಯಕರ್ತರು ಧೃತಿಗೆಡಬಾರದು: ಡಿ.ಕೆ.ಸುರೇಶ್

    ಇಷ್ಟು ದೊಡ್ಡ ಮಟ್ಟದ ಅಂತರ ನಿರೀಕ್ಷೆ ಮಾಡಿರಲಿಲ್ಲ. ಚುನಾವಣೆ ಸೋಲಿಗೆ ಲೀಡರ್, ವರ್ಕರ್ ಪ್ರಾಬ್ಲಂ ಅಲ್ಲ. ಹಣ ಹಂಚಿಕೆ ಬಗ್ಗೆ ಈಗ ಏನು ಹೇಳಲ್ಲ. ಸೋತಿದ್ದೇವೆ ಅನ್ನೋದನ್ನ ನಾವು ಒಪ್ಪಿಕೊಳ್ಳುತ್ತೇನೆ. ಗೆಲುವು ಸಿಗುವಷ್ಟು ಮತಗಳನ್ನ ಮತದಾರರ ನಮಗೆ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

    ಅಧ್ಯಕ್ಷನಾಗಿ ಸೋತಿದಕ್ಕೆ ವೈಯಕ್ತಿಕವಾಗಿ ಬೇಸರ ತಂದಿದೆ. ಆದ್ರೆ ಸಾಮೂಹಿಕ ನಾಯಕತ್ವದಲ್ಲಿ ನಂಬಿಕೆ ಹೊಂದಿದ್ದೇನೆ. ಅಧ್ಯಕ್ಷನಾಗಿರೋದರಿಂದ ಚುನಾವಣೆ ಸೋಲಿನ ಹೊಣೆಯನ್ನ ನಾನೇ ತೆಗೆದುಕೊಳ್ಳುತ್ತೇನೆ. ಯಾರ ಮೇಲೆಯೋ ಸೋಲಿನ ಶಾಲು ಹಾಕಲ್ಲ. ಚುನಾವಣೆಯಲ್ಲಿ ಬಿಜೆಪಿ ಗೆದ್ದಿದೆ. ಜನ ಯಾರನ್ನು ನೋಡಿ ಮತ ಹಾಕಿದ್ದಾರೆ ಎಂಬುವುದು ಗೊತ್ತಿಲ್ಲ. ಹಾಗಾಗಿ ಯಾರ ಬಗ್ಗೆಯೂ ವೈಯಕ್ತಿಕವಾಗಿ ಟೀಕೆ ಮಾಡಲ್ಲ. ಕಾಂಗ್ರೆಸ್ ಹೊಸಬರಿಗೆ ಅವಕಾಶ ನೀಡುತ್ತಿದೆ. ಮುಂದಿನ ಚುನಾವಣೆಗಳಿಗೂ ಹೊಸ ಮುಖಗಳಿಗೆ ಅವಕಾಶ ನೀಡುವ ಕುರಿತು ಚಿಂತನೆ ನಡೆಸುತ್ತೇವೆ. ಇಂದು ನಾವು ಆಯ್ಕೆ ಮಾಡಿದ್ದ ಅಭ್ಯರ್ಥಿ ಮುಂದಿನ ದಿನದಲ್ಲಿ ವಿಧಾನಸೌಧಕ್ಕೆ ಬರುತ್ತಾರೆ ಎಂದ ಭರವಸೆ ಹೊಂದಿದ್ದೇವೆ ಎಂದರು.

    ಬಿಹಾರ್ ಚುನಾವಣೆಯಲ್ಲಿ ಮಹಾಘಟಬಂಧನ್ ಗೆಲ್ಲುತ್ತೆ ಅಂತ ಮಾಧ್ಯಮಗಳಲ್ಲಿ ನೋಡಿದ್ದೇನೆ. ಹತ್ತಿರದ ನಂಬರ್ಸ್ ಸಿಕ್ಕಿದೆ. ಬಿಹಾರದ ಜನತೆಯ ತೀರ್ಪು ನೋಡಿದ್ರೆ ಉತ್ತರ ಭಾರತದಲ್ಲಿ ಎನ್‍ಡಿಎ ವಿರುದ್ಧದ ಆಡಳಿತ ಅಲೆ ಶುರುವಾಗಿದೆ ಅನ್ನೋದನ್ನು ಇದು ತೋರಿಸುತ್ತಿದೆ ಎಂದರು.

  • ಚುನಾವಣೆ ಗೆಲುವಿಗೆ ಬಂಡೆ ಅಡ್ಡಿಬರಲೇ ಇಲ್ಲ- ಡಿಕೆಶಿ ಕುಟುಕಿದ ಕೋಟ

    ಚುನಾವಣೆ ಗೆಲುವಿಗೆ ಬಂಡೆ ಅಡ್ಡಿಬರಲೇ ಇಲ್ಲ- ಡಿಕೆಶಿ ಕುಟುಕಿದ ಕೋಟ

    ಉಡುಪಿ: ರಾಜ್ಯದ ಎರಡು ಉಪಚುನಾವಣೆಗಳಲ್ಲೂ ಬಿಜೆಪಿಗೆ ಗೆಲುವಾಗಿದೆ. ರಾಜರಾಜೇಶ್ವರಿ ಕ್ಷೇತ್ರದಲ್ಲಿ ಮುನಿರತ್ನ ದಾಖಲೆ ಮತಗಳ ಅಂತರದಿಂದ ವಿಜಯಿಯಾಗಿದ್ದಾರೆ. ಶಿರಾದಲ್ಲಿ ಸಹ ಮೊದಲ ಬಾರಿಗೆ ಕಮಲ ಅರಳಿದೆ. ಈ ಬಗ್ಗೆ ಮುಜರಾಯಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಪ್ರತಿಕ್ರಿಯೆ ನೀಡಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ರಾಮನಗರದ ಶಕ್ತಿ ಕನಕಪುರದ ಬಂಡೆ ನಮಗೆ ತಡೆಯಾಗಿಲ್ಲ. ಬಿಜೆಪಿಯ ಗೆಲುವಿನ ಓಟಕ್ಕೆ ಬಂಡಿ ಅಡ್ಡಿಯಾಗಿಲ್ಲ. ಈ ಫಲಿತಾಂಶ ಬಿಜೆಪಿಗೆ ಜನರ ಆಶೀರ್ವಾದವನ್ನು ಗಟ್ಟಿಗೊಳಿಸಿದೆ. ಪಕ್ಷದ ರಾಜ್ಯಾಧ್ಯಕ್ಷರು ಮತ್ತು ಸಿಎಂ ಯಡಿಯೂರಪ್ಪ ಅವರ ವಿಶ್ವಾಸಕ್ಕೆ ಬಲ ಬಂದಿದೆ ಎಂದು ತಿಳಿಸಿದ್ದಾರೆ.

    ಜನ ಬಿಜೆಪಿ, ಯಡಿಯೂರಪ್ಪ, ಮೋದಿಯವರ ಕೆಲಸಕ್ಕೆ ಬೆಂಬಲವನ್ನು ಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿ ಮತ್ತಷ್ಟು ಶಕ್ತಿಯುತವಾಗಿ ಕೆಲಸ ಮಾಡುತ್ತದೆ. ಆಡಳಿತದಲ್ಲಿ ಬಡವರ ಪರ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳಲು ಈ ಫಲಿತಾಂಶ ಸಹಕಾರಿಯಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

  • ಮತದಾರರ ತೀರ್ಪಿಗೆ ತಲೆ ಬಾಗುತ್ತೇವೆ, ಕಾರ್ಯಕರ್ತರು ಧೃತಿಗೆಡಬಾರದು: ಡಿ.ಕೆ.ಸುರೇಶ್

    ಮತದಾರರ ತೀರ್ಪಿಗೆ ತಲೆ ಬಾಗುತ್ತೇವೆ, ಕಾರ್ಯಕರ್ತರು ಧೃತಿಗೆಡಬಾರದು: ಡಿ.ಕೆ.ಸುರೇಶ್

    ಬೆಂಗಳೂರು: ರಾಜರಾಜೇಶ್ವರಿ ನಗರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ಸೋಲನುಭವಿಸಿದ್ದಾರೆ. ಫಲಿತಾಂಶದ ಬೆನ್ನಲ್ಲೇ ಇದೀಗ ಸಂಸದ ಡಿ.ಕೆ.ಸುರೇಶ್ ಟ್ವೀಟ್ ಮಾಡಿ ಮತದಾರರಿಗೆ ಧನ್ಯವಾದ ತಿಳಿಸಿದ್ದು, ಪಕ್ಷದ ಕಾರ್ಯಕರ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಅವರು, ಮೊದಲಿಗೆ ಆರ್‍ಆರ್ ನಗರ ಉಪಚುನಾವಣೆ ಸಂದರ್ಭದಲ್ಲಿ ನಮ್ಮ ಪಕ್ಷವನ್ನು ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಬೆಂಬಲಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು. ಮತದಾರರ ತೀರ್ಪಿಗೆ ನಾವೆಲ್ಲ ತಲೆಬಾಗಲೇಬೇಕಿದೆ. ಈ ಫಲಿತಾಂಶದಿಂದ ಯಾವ ಕಾರ್ಯಕರ್ತರೂ ಧೃತಿಗೆಡುವ ಅವಶ್ಯಕತೆ ಇಲ್ಲ. ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸಿಕೊಳ್ಳೋಣ ಎಂದು ತಿಳಿಸಿದ್ದಾರೆ.

    ಮತ್ತೊಂದು ಟ್ವೀಟ್‍ನಲ್ಲಿ, ಈ ಫಲಿತಾಂಶವನ್ನು ಎಲ್ಲರೂ ಗಂಭೀರವಾಗಿ ಪರಿಗಣಿಸಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ದೊಡ್ಡ ಮಟ್ಟದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳೋಣ. ಪಕ್ಷ ಸಂಘಟನೆಯ ಎಲ್ಲ ಸಂದರ್ಭಗಳಲ್ಲೂ ನಾನು ನಿಮ್ಮ ಜೊತೆಗಿರುತ್ತೇನೆ. ಉಪಚುನಾವಣೆಗೆ ಸಹಕರಿಸಿದ ಪಕ್ಷದ ಎಲ್ಲ ನಾಯಕರು ಮತ್ತು ಕಾರ್ಯಕರ್ತರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಬರೆದಿದ್ದಾರೆ.

    ಮುನಿರತ್ನ ಗೆಲುವು

    ಆರ್.ಆರ್. ನಗರ ಮತ ಎಣಿಕೆ ಮುಕ್ತಾಯಗೊಂಡಿದ್ದು, ಮುನಿರತ್ನ ಅವರು 57,936 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ಕಳೆದ ಚುನಾವಣೆಗಿಂದ ಎರಡು ಪಟ್ಟು ಮತ ಪಡೆದು ಗೆಲುವು ಕಂಡಿದ್ದಾರೆ. ಸದ್ಯ ಚುನಾವಣೆ ಅಧಿಕಾರಿಯಿಂದ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.

    * ಬಿಜೆಪಿ ಪಡೆದ ಮತ-12,5734
    * ಕಾಂಗ್ರೆಸ್ ಪಡೆದ ಮತ -6,7798
    * ಜೆಡಿಎಸ್ ಪಡೆದ – 10,251
    * ಬಿಜೆಪಿ ಲೀಡ್- 57,936

  • ಈ ದಿನ ಕಾಂಗ್ರೆಸ್ ಆಡಳಿತದಲ್ಲಿ ಕೊಲೆಯಾದ ಕುಟ್ಟಪ್ಪರಿಗೆ ಗೆಲುವು ಅರ್ಪಣೆ – ಸಿಟಿ ರವಿ

    ಈ ದಿನ ಕಾಂಗ್ರೆಸ್ ಆಡಳಿತದಲ್ಲಿ ಕೊಲೆಯಾದ ಕುಟ್ಟಪ್ಪರಿಗೆ ಗೆಲುವು ಅರ್ಪಣೆ – ಸಿಟಿ ರವಿ

    ಬೆಂಗಳೂರು: ಕಾಂಗ್ರೆಸ್ ಆಡಳಿತದಲ್ಲಿ ಕೊಲೆಯಾದ ಹಿಂದೂ ಕಾರ್ಯಕರ್ತರಿಗೆ ಉಪಚುನಾವಣೆಯ ಗೆಲುವನ್ನು ಅರ್ಪಣೆ ಮಾಡುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿಯವರು ಟ್ವೀಟ್ ಮಾಡಿದ್ದಾರೆ.

    ಶಿರಾ ಮತ್ತು ಆರ್‍ಆರ್ ನಗರ ಉಪಚುನಾವಣೆಯ ಫಲಿತಾಂಶದಲ್ಲಿ ಎರಡೂ ಕ್ಷೇತ್ರದಲ್ಲೂ ಬಿಜೆಪಿ ಪಕ್ಷ ಜಯಭೇರಿ ಭಾರಿಸಿದೆ. ಈ ಗೆಲುವನ್ನು ಸಿಟಿ ರವಿಯವರು ಐದು ವರ್ಷದ ಹಿಂದೆ ಕೊಲೆಯಾದ ವಿಶ್ವ ಹಿಂದೂ ಪರಿಷತ್‍ನ (ವಿಪಿಹೆಚ್) ನಾಯಕ ಕುಟ್ಟಪ್ಪ ಮತ್ತು ಹಲವು ಹಿಂದೂ ಕಾರ್ಯಕರ್ತರಿಗೆ ಅರ್ಪಣೆ ಮಾಡುವುದಾಗಿ ತಿಳಿಸಿದ್ದಾರೆ.

    ಈ ವಿಚಾರವಾಗಿ ಟ್ವೀಟ್ ಮಾಡಿರುವ ಸಿಟಿ ರವಿಯವರು, ಐದು ವರ್ಷದ ಹಿಂದೆ ಇದೇ ದಿನದಲ್ಲಿ ಕಾಂಗ್ರೆಸ್ ಪ್ರಾಯೋಜಿತ ಟಿಪ್ಪು ಜಯಂತಿಯ ಆಚರಣೆ ವೇಳೆ ಇಸ್ಲಾಮಿಕ್ ಮೂಲವಾದಿಗಳಿಂದ ವಿಪಿಹೆಚ್ ನಾಯಕ ಕುಟ್ಟಪ್ಪ ಕೊಲ್ಲಲ್ಪಟ್ಟಿದ್ದರು. ಶಿರಾ ಹಾಗೂ ರಾಜರಾಜೇಶ್ವರಿ ನಗರದ ಉಪಚುನಾವಣೆಯ ಗೆಲುವನ್ನು ನಾವು ಕುಟ್ಟಪ್ಪ ಮತ್ತು ಕಾಂಗ್ರೆಸ್ ಆಡಳಿತದ ವೇಳೆ ಕೊಲೆಯಾದ ಹಲವಾರು ಹಿಂದೂ ಕಾರ್ಯಕರ್ತರಿಗೆ ಅರ್ಪಣೆ ಮಾಡುತ್ತಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

    ಇಂದು ಶಿರಾ ಮತ್ತು ಆರ್‍ಆರ್ ನಗರದ ಉಪಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಆರ್.ಆರ್. ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು 57,936 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಶಿರಾ ಕ್ಷೇತ್ರದಲ್ಲೂ ಕೂಡ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಗೆದ್ದು ಬೀಗಿ ಇತಿಹಾಸ ಸೃಷ್ಟಿಸಿದ್ದಾರೆ.

    ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಟಿಪ್ಪು ಜಯಂತಿಗೆ ರಾಜ್ಯಾದ್ಯಂತ ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿತ್ತು. ಇದರ ನಡುವೆಯೇ ಸಿದ್ದರಾಮಯ್ಯನವರು ಟಿಪ್ಪು ಜಯಂತಿಯನ್ನು ಆಚರಿಸಿದ್ದರು. ಈ ವೇಳೆ 2015ರ ನವೆಂಬರ್ 10ರಂದು ಮಡಿಕೇರಿಯಲ್ಲಿ ಟಿಪ್ಪು ಜಯಂತಿಯಂದು ನಡೆದ ಘರ್ಷಣೆಯ ವೇಳೆ ಕುಟ್ಟಪ್ಪ ಮೃತಪಟ್ಟಿದ್ದರು.