Tag: by election

  • ಶಿರಾದಲ್ಲಿ 15 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇವೆ: ವಿಜಯೇಂದ್ರ

    ಶಿರಾದಲ್ಲಿ 15 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇವೆ: ವಿಜಯೇಂದ್ರ

    ಬೆಂಗಳೂರು: ಶಿರಾ ಕ್ಷೇತ್ರದಲ್ಲಿ 15 ಸಾವಿರ ಮತಗಳ ಅಂತರದಿಂದ ನಾವು ಗೆಲುವು ಸಾಧಿಸುತ್ತೇವೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿರಾ ಕ್ಷೇತ್ರದಲ್ಲಿ ಈಗ 17ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡರು ಸುಮಾರು 5,500 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಇನ್ನು ಕೇವಲ 6 ಸುತ್ತಿನ ಮತ ಎಣಿಕೆ ಬಾಕಿ ಇದೆ. ನಮಗೆ ವಿಶ್ವಾಸವಿದೆ, ಬಿಜೆಪಿ ಅಭ್ಯರ್ಥಿ ಸುಮಾರು 15 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ನೆಕ್ಟ್ ಟು ನೆಕ್ಟ್ ಫೈಟ್ ಹಂತ ಮುಗಿದಿದೆ, ಈಗ ಬಿಜೆಪಿ ಮುನ್ನಡೆಯಲ್ಲಿದೆ. 15 ಸಾವಿರ ಮತಗಳ ಅಂತರದಲ್ಲಿ ಬಿಜೆಪಿಯವರು ಗೆಲ್ಲುವುದು ಖಚಿತ ಎಂದರು.

    ಪಕ್ಷ ನೀಡಿದ ಜವಾಬ್ದಾರಿಯನ್ನು ನಿಭಾಯಿಸಿದ್ದೇವೆ. ಯಾರು ಯಾವ ಕ್ಷೇತ್ರದ ಜವಾಬ್ದಾರಿ ತೆಗೆದುಕೊಳ್ಳಬೇಕೆಂದು ರಾಜ್ಯಾಧ್ಯಕ್ಷರು ತಿಳಿಸುತ್ತಾರೆ. ಅದನ್ನು ನಾವು ನಿಭಾಯಿಸುತ್ತೇವೆ. ಆದರೆ ಎಲ್ಲ ಕ್ಷೇತ್ರಗಳಲ್ಲಿ ಗೆಲ್ಲುವುದೇ ಗುರಿಯಾಗಿದೆ. ಮುಂದಿನ ಚುನಾವಣೆಗಳಲ್ಲಿ ಸಹ ಗೆಲುವು ಸಾಧಿಸುತ್ತೇವೆ ಎಂದು ವಿಜಯೇಂದ್ರ ತಿಳಿಸಿದರು.

    ಆರ್‍ಆರ್ ನಗರ ಉಪ ಚುನಾವಣೆ ಕುರಿತು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷದವರು ಬೊಬ್ಬೆ ಹೊಡೆಯುತ್ತಿದ್ದರು. ಸಾಕಷ್ಟು ಪ್ರಚಾರವನ್ನು ಸಹ ಮಾಡಿದ್ದರು. ಆದರೆ ಕ್ಷೇತ್ರದ ಪತದಾರರು ಬಿಜೆಪಿಯನ್ನು ಎತ್ತಿ ಹಿಡಿದ್ದಾರೆ. ನಮ್ಮ ಅಭ್ಯರ್ಥಿ ಮುನಿರತ್ನ ಅವರು ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಹ್ಯಾಟ್ರಿಕ್ ಗೆಲುವು ದಾಖಲಿಸಿದ್ದಾರೆ. ಬಿಜೆಪಿ ನಾಯಕರು ಇದರಿಂದ ತುಂಬಾ ಸಂತಸಗೊಂಡಿದ್ದಾರೆ. ಅಲ್ಲದೆ ಬೆಂಗಳೂರಲ್ಲಿ ಬಿಜೆಪಿ ಶಕ್ತಿ ವೃದ್ಧಿಸಿದಂತಾಗಿದೆ ಎಂದು ತಿಳಿಸಿದರು.

  • ಉಪಚುನಾವಣೆ – ಹಲವು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ

    ಉಪಚುನಾವಣೆ – ಹಲವು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ

    ನವದೆಹಲಿ: ಕರ್ನಾಟಕದ ರಾಜರಾಜೇಶ್ವರಿ ನಗರ, ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಹಾರದಲ್ಲಿ ನಡೆಯುತ್ತಿರುವ ಚುನಾವಣೆಯಲ್ಲೂ ಬಿಜೆಪಿ ಮೈತ್ರಿಕೂಟ ಮುನ್ನಡೆಯಲ್ಲಿದೆ. ಇದರ ಜೊತೆಗೆ ದೇಶದ ಹಲವು ರಾಜ್ಯಗಳಲ್ಲಿ ನಡೆಯುತ್ತಿರುವ ಉಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆಯಲ್ಲಿದೆ.

    ಮಧ್ಯಪ್ರದೇಶದಲ್ಲಿ ಒಟ್ಟು 28 ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ. ಈ ಪೈಕಿ ಬಿಜೆಪಿ 19 ರಲ್ಲಿ ಮುನ್ನಡೆಯಲ್ಲಿದ್ದರೆ ಕಾಂಗ್ರೆಸ್‌ 8, ಬಿಎಸ್‌ಪಿ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.

    ಗುಜರಾತ್‌ನಲ್ಲಿ 8 ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ 8 ರಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ. ಉತ್ತರ ಪ್ರದೇಶದ 7 ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಯಲ್ಲಿ 5 ರಲ್ಲಿ ಬಿಜೆಪಿ ಮುನ್ನಡೆಯಲ್ಲಿದ್ದರೆ ಎರಡರಲ್ಲಿ ಎಸ್‌ಪಿ ಮುನ್ನಡೆಯಲ್ಲಿದೆ.

    ಮಣಿಪುರದಲ್ಲಿ 5 ಕ್ಷೇತ್ರಗಳ ಪೈಕಿ ಈಗಾಗಲೇ 1 ಕ್ಷೇತ್ರವನ್ನು ಬಿಜೆಪಿ ಗೆದ್ದುಕೊಂಡಿದ್ದು 3ರಲ್ಲಿ ಮುನ್ನಡೆಯಲ್ಲಿದೆ. ಒಬ್ಬರು ಪಕ್ಷೇತರ ಅಭ್ಯರ್ಥಿ ಮುನ್ನಡೆಯಲ್ಲಿದ್ದಾರೆ.

    ಚತ್ತೀಸ್‌ಗಢ, ಹರ್ಯಾಣದಲ್ಲಿ ಒಂದು ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು ಕಾಂಗ್ರೆಸ್‌ ಮುನ್ನಡೆಯಲ್ಲಿದೆ. ಜಾರ್ಖಂಡ್‌ನಲ್ಲಿ 1 ಕ್ಷೇತ್ರದಲ್ಲಿ ಬಿಜೆಪಿ, ಇನ್ನೊಂದು ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುನ್ನಡೆಯಲ್ಲಿದೆ. ತೆಲಂಗಾಣದ ಒಂದು ಕ್ಷೇತ್ರಕ್ಕೆ ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆಯಲ್ಲಿದ್ದಾರೆ.

    ನಾಗಾಲ್ಯಾಂಡ್‌ನ 2 ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ. ಒಡಿಶಾದ ಎರಡು ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ.

    ಬಿಹಾರದ ವಾಲ್ಮಿಖಿ ನಗರಕ್ಕೆ ನಡೆಯುತ್ತಿರುವ ಲೋಕಸಭಾ ಉಪಚುನಾವಣೆಯಲ್ಲಿ ಜೆಡಿಯು ಮುನ್ನಡೆಯಲ್ಲಿದೆ.

  • ಬಿಬಿಎಂಪಿ ಚುನಾವಣೆಗೆ ಇದು ಮುನ್ನುಡಿ, ಬಿಜೆಪಿ ಗೆಲ್ಲಲಿದೆ – ಅಶೋಕ್

    ಬಿಬಿಎಂಪಿ ಚುನಾವಣೆಗೆ ಇದು ಮುನ್ನುಡಿ, ಬಿಜೆಪಿ ಗೆಲ್ಲಲಿದೆ – ಅಶೋಕ್

    – ಕಾಂಗ್ರೆಸ್‍ನದ್ದು ಮನೆಯೊಂದು ಮೂರು ಬಾಗಿಲು

    ಬೆಂಗಳೂರು: ಕಾಂಗ್ರೆಸ್‍ನದ್ದು ಮನೆಯೊಂದು ಮೂರು ಬಾಗಿಲು ಪರಿಸ್ಥಿತಿಯಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಲೇವಡಿ ಮಾಡಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನಿನ್ನೆ ಸಹ ಗೆದ್ದೇ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ. ನಮಗೆ ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಮೂರು ಪಕ್ಷದವರು ಮತ ಹಾಕಿದ್ದಾರೆ ಎಂದು ಹೇಳಿದ್ದಾರೆ. ಮೂರೂ ಪಕ್ಷದವರು ಮತ ಹಾಕಿದರೆ ಗೆಲ್ಲುವುದಿಲ್ಲ, ಯಾವುದಾದರೂ ಒಂದು ಪಕ್ಷಕ್ಕೆ ಮತ ಹಾಕಿದರೆ ಮಾತ್ರ ಗೆಲ್ಲುತ್ತಾರೆ. ಮನೆಯೊಂದು ಮೂರು ಬಾಗಿಲು ಸ್ಥಿತಿ ಅವರದ್ದಾಗಿದೆ ಎಂದು ಹರಿಹಾಯ್ದಿದ್ದಾರೆ.

    ಮುನಿರತ್ನ ಅವರು ಬಹುದೊಡ್ಡ ಅಂತರದಿಂದ ಗೆಲ್ಲಲಿದ್ದಾರೆ. ಇದೊಂದು ವಿರೋಚಿತ ಗೆಲುವು ಆಗಲಿದೆ. ಡಿ.ಕೆ.ಶಿವಕುಮಾರ್ ಅವರು ಆರ್.ಆರ್.ನಗರ ಉಪಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದ್ದರು. ನಾನು ಸಹ ಅವರ ವಿರುದ್ಧ ಕ್ಷೇತ್ರವನ್ನು ಸವಾಲಾಗಿ ಸ್ವೀಕರಿಸಿದ್ದೆ. ಇದೀಗ ಬಹುದೊಡ್ಡ ಅಂತರದಲ್ಲಿ ನಾವು ಗೆಲುವು ಸಾಧಿಸುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದರು.

    ಸುಮಾರು 12 ದಿನ ಕ್ಷೇತ್ರದಲ್ಲಿ ಮೊಕ್ಕಾಂ ಹೂಡಿ ಚುನಾವಣೆ ಕೆಲಸ ಮಾಡಿದ್ದೇವೆ. ಇದೀಗ ಭರ್ಜರಿ ಗೆಲುವು ದಾಖಲಿಸುತ್ತಿದ್ದೇವೆ. ಆರ್‍ಆರ್ ನಗರ ಕ್ಷೇತ್ರದ ಉಸ್ತುವಾರಿಯನ್ನು ಸಿಎಂ ನನಗೆ ನೀಡಿದ್ದರು. ನಾನು ಎರಡು ಬಾರಿ ಶಾಸಕನಾಗಿದ್ದರಿಂದ ಆರ್‍ಆರ್ ನಗರದ ಜನರ ನಾಡಿಮಿಡಿತ ಗೊತ್ತಿತ್ತು. 35 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇವೆ ಎಂದು ಮೊದಲಿಂದಲೂ ಹೇಳಿದ್ದೆ. ಈಗಿನ ಟ್ರೆಂಡ್ ನೋಡಿದರೆ 35 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲುತ್ತೇವೆ. ಈ ಚುನಾವಣೆ ಮಹಾನಗರಪಾಲಿಕೆ ಚುನಾವಣೆಗೆ ಮುನ್ನುಡಿಯಾಗಲಿದೆ. ಮಹಾನಗರ ಪಾಲಿಕೆ ಚುನಾವಣೆಯನ್ನ ಬಿಜೆಪಿಯೇ ಗೆಲ್ಲಲಿದೆ ಎಂದು ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.

    ಆರ್‍ಆರ್ ನಗರ ಚುನಾವಣೆ ಗೆಲ್ಲುತ್ತಿರುವುದು ಖುಷಿ ತಂದಿದೆ. ಶಿರಾದಲ್ಲೂ ಸಹ ನಾವೇ ಮುಂದೇ ಇದ್ದೇವೆ. ಇಡೀ ಆರ್‍ಆರ್ ನಗರದ ಮತದಾರರಿಗೆ, ನಮ್ಮ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮುನಿರತ್ನ ಅವರು ಮಾಡಿರುವ ಓಳ್ಳೆಯ ಕೆಲಸಗಳು, ಅಭಿವೃದ್ಧಿ ನಮಗೆ ಪ್ಲಸ್ ಪಾಯಿಂಟ್ ಆಗಿದೆ. ಬೆಂಗಳೂರಿನ ಜನ ಬಿಜೆಪಿ ಜೊತೆ ಇದ್ದಾರೆ ಅನ್ನೋದಕ್ಕೆ ಇದೇ ನಿದರ್ಶನ. ಎರಡೂ ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಯಡಿಯೂರಪ್ಪ ಸರ್ಕಾರ ಇರಬೇಕು ಎಂದು ಜನ ಬಯಸುತ್ತಿದ್ದಾರೆ.

    ನಾಯಕತ್ವ ಬದಲಾವಣೆ ಕುರಿತು ಸಿದ್ದರಾಮಯ್ಯನವರ ಹೇಳಿಕೆಗೆ ತಿರುಗೇಟು ನೀಡಿದ ಆರ್.ಆಶೋಕ್, ನಾಯಕತ್ವ ಬದಲಾಗುತ್ತೆ. ಆದರೆ ಯಡಿಯೂರಪ್ಪನವರದಲ್ಲ, ಸಿದ್ದರಾಮಯ್ಯನವರದು. ಎರಡೂ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಸೋಲಿನ ಅಂಚಿಗೆ ಬಂದಿದ್ದಾರೆ. ಹೀಗಾಗಿ ಸಿದ್ದರಾಮಯ್ಯನವರ ನಾಯಕತ್ವ ವೇ ಪ್ರಶ್ನೆ ಯಾಗಿದೆ. ಅವರು ಯಡಿಯೂರಪ್ಪನವರಿಗೆ ಸವಾಲು ಹಾಕಿದ್ದರು. ಈಗ ಯಾರನ್ನು ತೆಗೆಯುತ್ತಾರೆ ಎಂದು ರಾಜ್ಯದ ಜನ ಸ್ಪಷ್ಟ ಸಂದೇಶ ಕೊಟ್ಟಿದ್ದಾರೆ. ಈಗ ಕಾಂಗ್ರೆಸ್ ಪಕ್ಷ ಸೋಲನುಭವಿಸುತ್ತಿದೆ. ಯಾರನ್ನ ನಾಯಕತ್ವದಿಂದ ತೆಗೆಯುತ್ತಾರೋ ಗೊತ್ತಾಗುತ್ತೆ ಎಂದು ತಿರುಗೇಟು ನೀಡಿದರು.

  • ತ್ರಿಕೋನ ಫೈಟಲ್ಲಿ ಯಾರ ಮುಡಿಗೆ ‘ಶಿರಾ’ ಕಿರೀಟ?- ನಾಳೆ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ

    ತ್ರಿಕೋನ ಫೈಟಲ್ಲಿ ಯಾರ ಮುಡಿಗೆ ‘ಶಿರಾ’ ಕಿರೀಟ?- ನಾಳೆ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ

    ತುಮಕೂರು: ಶಿರಾ ಉಪಚುನಾವಣೆಯ ಜಿದ್ದಾಜಿದ್ದಿನ ಅಖಾಡದ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಇತ್ತ ಅಭ್ಯರ್ಥಿಗಳ ಎದೆಯಲ್ಲಿ ಢವಢವ ಶುರುವಾಗಿದೆ. ಮೂರೂ ಪಕ್ಷಗಳ ಅಭ್ಯರ್ಥಿಗಳ ನಡುವೆ ತ್ರಿಕೋನ ಸ್ಪರ್ಧೆ ಇರೋಂದ್ರಿಂದ ಇಂದಿನ ಮತ ಎಣಿಕೆ ಇನ್ನಷ್ಟು ಮತ್ತಷ್ಟು ಕುತೂಹಲ ಕೆರಳಿಸಿದೆ.

    ಕಾಂಗ್ರೆಸ್, ಜೆಡಿಎಸ್‍ಗೆ ಮತ್ತೆ ಅಸ್ತಿತ್ವ ಉಳಿಸಿಕೊಳ್ಳುವ ತವಕವಿದ್ದರೆ, ಬಿಜೆಪಿಗೆ ಖಾತೆ ತೆರೆಯುವ ತವಕ. ಶಿರಾ ಅಖಾಡದಲ್ಲಿ ಸೋಲು ಗೆಲುವಿನ ಲೆಕ್ಕಾಚಾರ. ಭಾರೀ ಕುತೂಹಲ ಮೂಡಿಸಿರೋ ಶಿರಾ ಉಪಚುನಾವಣೆ ಫಲಿತಾಂಶ ಇವತ್ತು ಪ್ರಕಟಗೊಳ್ಳಲಿದೆ. ನವೆಂಬರ್ 3ರಂದು ಮತದಾರರು ಬರೆದ ಭವಿಷ್ಯ ಇಂದು ಬಹಿರಂಗವಾಗಲಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಈ ಮೂರೂ ಪಕ್ಷದ ಅಭ್ಯರ್ಥಿಗಳ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದ್ದು ವಿಜಯದ ಕಿರೀಟ ಯಾರ ತಲೆಯೇರಲಿದೆ ಅನ್ನೋದು ಮಧ್ಯಾಹ್ನದೊಳಗೆ ತಿಳಿಯಲಿದೆ.

    ತುಮಕೂರು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಬೆಳಗ್ಗೆ 8 ಗಂಟೆಯಿಂದ ಮತಎಣಿಕೆ ಕಾರ್ಯ ಆರಂಭವಾಗಲಿದೆ. ಶಿರಾ ಉಪಚುನಾವನೆಯ ಕಣದಲ್ಲಿ ಒಟ್ಟು ಅಭ್ಯರ್ಥಿಗಳು 15 ಅದೃಷ್ಟ ಪರೀಕ್ಷೆ ನಡೆಸಿದ್ದು, ಕ್ಷೇತ್ರದಲ್ಲಿ 2,15,694 ಮತದಾರರಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಶೇ.84 ಅಂದರೇ 1,77,645 ಮತದಾರರು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. 4,821 ಅಂಚೆ ಮತಗಳು ಚಲಾವಣೆಯಾಗಿದೆ.

    ಇಂದು 24 ಸುತ್ತುಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಒಟ್ಟು 14 ಟೇಬಲ್‍ಗಳಲ್ಲಿ ಮತ ಎಣಿಕೆ ನಡೆಯಲಿದೆ. 330 ಮತಗಟ್ಟೆಗಳ ರಿಸಲ್ಟ್ ಹೊರಬೀಳಲಿದೆ. ಕೋವಿಡ್ ಹಿನ್ನಲೆಯಲ್ಲಿ ಭಾರೀ ಮುಂಜಾಗೃತೆ ವಹಿಸಿದ್ದು ಸಾಮಾಜಿಕ ಅಂತರ, ಸ್ಯಾನಿಟೈಸಿಂಗ್, ಥರ್ಮಲ್ ಸ್ಕಾನಿಂಗ್ ನಡೆಯಲಿದೆ.

    ಚುನಾವಣಾ ಮತ ಎಣಿಕೆಗೆ ಹಿನ್ನೆಲೆ ಬೆಳಗ್ಗೆ 6 ಗಂಟೆಯಿಂದ ನಾಳೆ ಬೆಳಗ್ಗೆ 6ರವರೆಗೂ ಮತ ಎಣಿಕಾ ಕೇಂದ್ರದ ಸುತ್ತ 5 ಕಿ.ಮೀ ವ್ಯಾಪ್ತಿ ಹಾಗೂ ಶಿರಾ ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇನ್ನು ಕ್ಷೇತ್ರದಲ್ಲಿ ಮತ ಎಣಿಕೆ ಕೇಂದ್ರದ ಸುತ್ತ 3 ಸುತ್ತಿನ ಭದ್ರತೆ. ಮತ ಎಣಿಕೆ ಕೇಂದ್ರದ ಸುತ್ತ ಸೆಂಟ್ರಲ್ ಆರ್ಮಡ್ ಫೋರ್ಸ್ ಕಾರ್ಯನಿರ್ವಹಣೆ. 2 ಕೆಎಸ್‍ಆರ್‍ಪಿ, 3 ಡಿವೈಎಸ್ಪಿ, ಸಿಪಿಐ, ಪಿಎಸ್‍ಐ ಸೇರಿ 200ಕ್ಕೂ ಹೆಚ್ಚು ಸಿಬ್ಬಂದಿಯ ನಿಯೋಜನೆ ಮಾಡಲಾಗಿದೆ.

    ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ, ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಹಾಗೂ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ನಡುವೆ ತ್ರಿಕೋನ ಸ್ಪರ್ಧೆ ಇತ್ತು. ಈ ಹಿನ್ನಲೆಯಲ್ಲಿ ಒಂದೊಂದು ಸುತ್ತಿನಲ್ಲೂ ಒಬ್ಬೊಬ್ಬರು ಮುನ್ನಡೆ ಕಾಯ್ದುಕೊಂಡು ಫಲಿತಾಂಶದಲ್ಲಿ ಕುತೂಹಲ ಹುಟ್ಟುವ ಸಾಧ್ಯತೆ ಇದೆ. 6 ಜಿ.ಪಂ ಕ್ಷೇತ್ರ ಹಾಗೂ ನಗರ ಪ್ರದೇಶ ಸೇರಿ 7 ಕಡೆಗಳಲ್ಲಿ ಯಾರಿಗೆ ಎಷ್ಟು ಮತ ಬೀಳಲಿದೆ ಎಂಬುದು ಕುತೂಹಲ ಕೆರಳಿಸಿದೆ.

    ಈ ನಡುವೆ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಗೆಲುವು ನಮ್ಮದೇ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

  • ಬೈಎಲೆಕ್ಷನ್ ಕದನ ಕುತೂಹಲಕ್ಕೆ ಇಂದು ತೆರೆ- ಆರ್.ಆರ್ ನಗರದಲ್ಲಿ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ

    ಬೈಎಲೆಕ್ಷನ್ ಕದನ ಕುತೂಹಲಕ್ಕೆ ಇಂದು ತೆರೆ- ಆರ್.ಆರ್ ನಗರದಲ್ಲಿ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ

    ಬೆಂಗಳೂರು: ರಾಜರಾಜೇಶ್ವರಿ ನಗರ ಉಪ ಚುನಾವಣೆ ಮತಎಣಿಕೆಗೆ ಸಿದ್ಧತೆ ಮುಕ್ತಾಯವಾಗಿದೆ. ಬಿಬಿಎಂಪಿ, ಪೊಲೀಸ್ ಇಲಾಖೆಯ ಭದ್ರತೆಯಲ್ಲಿ ಮತಎಣಿಕೆ ನಡೆಯಲಿದ್ದು, ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಪ್ರತಿಷ್ಠೆಯ ಅಖಾಡ, ಘಟಾನುಘಟಿಗಳೇ ಕಣಕ್ಕಿಳಿದು ಸವಾಲಿಗೆ ಸವಾಲೆಸೆದು ರಂಗೇರಿದ್ದ ರಣಕಣ ರಾಜರಾಜೇಶ್ವರಿ ನಗರ ಉಪಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ. ರಾಜರಾಜೇಶ್ವರಿ ಯಾರಿಗೆ ಒಲಿಯಲಿದ್ದಾಳೆ ಅನ್ನೋದು ಮಧ್ಯಾಹ್ನದ ವೇಳೆಗೆ ಕ್ಲೀಯರ್ ಪಿಕ್ಚರ್ ಸಿಗಲಿದೆ.

    ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿರುವ ಕ್ಷೇತ್ರದಲ್ಲಿ ಗೆಲುವಿನ ಕುದುರೆ ಏರುವವರು ಯಾರು ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಈಗಾಗಲೇ ರಾಜರಾಜೇಶ್ವರಿ ನಗರ ಉಪಚುನಾವಣೆಯ ಮತಎಣಿಕೆಗೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ. ಬಿಜೆಪಿಯ ಮುನಿರತ್ನ, ಕಾಂಗ್ರೆಸ್ಸಿನ ಕುಸುಮಾ ಹಾಗೂ ಜೆಡಿಎಸ್‍ನ ಕೃಷ್ಣಮೂರ್ತಿ ಸೇರಿದಂತೆ 16 ಹುರಿಯಾಳುಗಳ ಭವಿಷ್ಯ ಮಧ್ಯಾಹ್ನದೊಳಗೆ ಪ್ರಕಟವಾಗಲಿದೆ.

    ಹಲಗೆವಡೇರಹಳ್ಳಿಯ ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯಲ್ಲಿ ಮತಎಣಿಕೆ ನಡೆಯಲಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೂ ಇಡೀ ಕ್ಷೇತ್ರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮದ್ಯ ಮಾರಾಟಕ್ಕೂ ನಿರ್ಬಂಧ ಹಾಕಲಾಗಿದೆ. ಪೊಲೀಸರ ಹದ್ದಿನ ಕಣ್ಣಿನಲ್ಲಿ ಮತ ಎಣಿಕೆ ನಡೆಯಲಿದೆ.

     ಆರ್.ಆರ್.ನಗರ ಮತ ಎಣಿಕೆಗೆ ಕ್ಷಣಗಣನೆ: 
    ಮುನಿರತ್ನ, ಕುಸುಮಾ, ಕೃಷ್ಣಮೂರ್ತಿ ಸೇರಿ ಒಟ್ಟು 16 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 2,09,828 ಮತ ಚಲಾವಣೆ, ಒಟ್ಟು ಶೇ.45.48ರಷ್ಟು ಮತದಾನವಾಗಿದೆ. 412 ಅಂಚೆ ಹಾಗೂ 04 ಇಟಿಪಿಬಿಎಸ್ ಮತ ಚಲಾವಣೆ ಆಗಿದೆ. ಮೊದಲು ಬೆಳಗ್ಗೆ 8 ಗಂಟೆಗೆ ಅಂಚೆ ಮತ ಎಣಿಕೆ ಹಾಗೂ ಇಟಿಪಿಬಿಎಸ್ ಮತಎಣಿಕೆ ಆರಂಭವಾಗಲಿದೆ. ಅಂಚೆ ಮತ ಎಣಿಕೆ ಬಳಿಕ ಇವಿಎಂ ಮತಎಣಿಕೆ ಶುರುವಾಗಲಿದೆ. ಆರ್.ಆರ್.ನಗರದಲ್ಲಿ ಒಟ್ಟು 25 ಸುತ್ತುಗಳಲ್ಲಿ ಮತಎಣಿಕೆ ನಡೆಯಲಿದೆ. ಒಟ್ಟು 678 ಮತಗಟ್ಟೆಗಳಿದ್ದು ಪ್ರತಿ ಸುತ್ತಿನಲ್ಲಿ 28 ಟೇಬಲ್‍ಗಳಲ್ಲಿ ಮತಎಣಿಕೆ ನಡೆಯಲಿದ್ದು, ಒಂದು ಕೊಠಡಿಯಲ್ಲಿ 7 ಎಣಿಕಾ ಟೇಬಲ್‍ಗಳಂತೆ ಒಟ್ಟು 4 ಕೊಠಡಿಯಲ್ಲಿ 28 ಎಣಿಕಾ ಟೇಬಲ್ ವ್ಯವಸ್ಥೆ ಮಾಡಲಾಗಿದೆ.

    ಪ್ರತಿ ಟೇಬಲ್‍ಗೆ ಮೂವರು ಅಧಿಕಾರಿ, ಸಿಬ್ಬಂದಿಯ ನೇಮಕ ಮಾಡಲಾಗಿದೆ. ಮತಎಣಿಕೆ ಕಾರ್ಯಕ್ಕೆ 250 ಸಿಬ್ಬಂದಿ ನೇಮಕ ಮಾಡಲಾಗಿದ್ದು, ಸಿಬ್ಬಂದಿಗೆ 2 ಹಂತದ ತರಬೇತಿ ನೀಡಲಾಗಿದೆ. ಗುರುತಿನ ಚೀಟಿ ಹೊಂದಿರುವವರಿಗಷ್ಟೇ ಪ್ರವೇಶಕ್ಕೆ ಅವಕಾಶ. ಚುನಾವಣೆ ಸಿಬ್ಬಂದಿಗೆ ಮೊಬೈಲ್ ನಿಷೇಧ ಮಾಡಲಾಗಿದ್ದು, ಎಲ್ಲರಿಗೂ ಮಾಸ್ಕ್, ಸ್ಯಾನಿಟೈಸ್ ಕಡ್ಡಾಯ ಎಂದು ಚುನಾವಣಾಧಿಕಾರಿ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.

    ವಿಜಯೋತ್ಸವ, ಪಟಾಕಿ ಹಚ್ಚಂಗಿಲ್ಲ:
    ಮತ ಎಣಿಕೆ ಕಾರ್ಯ ಪೊಲೀಸ್ ಭದ್ರತೆಯಲ್ಲಿ ನಡೆಯಲಿದೆ. ಗೆದ್ದ ಅಭ್ಯರ್ಥಿಗಳ ಪರವಾಗಿ ಮತ ಎಣಿಕೆ ಕೇಂದ್ರದ ಬಳಿ ಸಂಭ್ರಮಾಚರಣೆಗೆ ಮತ್ತು ಪಟಾಕಿ ಸಿಡಿಸಲು ಅವಕಾಶವಿಲ್ಲ. ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನುರೀತ್ಯ ಕ್ರಮದ ಎಚ್ಚರಿಕೆ ನೀಡಲಾಗಿದೆ. ಇನ್ನು ಎಣಿಕೆ ಕೇಂದ್ರದ ಮುಂಭಾಗದಲ್ಲಿನ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಮತಎಣಿಕೆ ಕೇಂದ್ರ ಮತ್ತು ಆರ್.ಆರ್.ನಗರ ಕ್ಷೇತ್ರದಲ್ಲಿ ಪೊಲೀಸ್ ಸರ್ಪಗಾವಲು ಹಾಕಿದ್ದಾರೆ.

    ಒಟ್ಟಿನಲ್ಲಿ ಹೈವೋಲ್ಟೇಜ್ ಕ್ಷೇತ್ರದ ಮತ ಎಣಿಕೆಗೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದೆ. ಮಧ್ಯಾಹ್ನ 1 ಗಂಟೆ ಒಳಗೆ ವಿಜಯಲಕ್ಷ್ಮಿ ಯಾರಿಗೆ ಒಲಿಯುತ್ತಾಳೆ ಎಂಬುದು ಕುತೂಹಲ ಮೂಡಿಸಿದೆ.

  • ಧೈರ್ಯವಾಗಿ ಮತ ಎಣಿಕೆಯಲ್ಲಿ ಪಾಲ್ಗೊಳ್ಳಲು ಜಯಚಂದ್ರ ಕರೆ

    ಧೈರ್ಯವಾಗಿ ಮತ ಎಣಿಕೆಯಲ್ಲಿ ಪಾಲ್ಗೊಳ್ಳಲು ಜಯಚಂದ್ರ ಕರೆ

    ಬೆಂಗಳೂರು: ಕೊರೊನಾ ಸೋಂಕು ತಗುಲಿದ ಹಿನ್ನೆಲೆ ಶಿರಾ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ತಮ್ಮ ಕಾರ್ಯಕರ್ತರಿಗೆ ವೀಡಿಯೋ ಸಂದೇಶ ರವಾನಿಸಿದ್ದಾರೆ. ನಾಳೆ ನಡೆಯುವ ಮತ ಎಣಿಕೆ ಕಾರ್ಯದಲ್ಲಿ ಎಲ್ಲರೂ ಧೈರ್ಯವಾಗಿ ಭಾಗಿಯಾಗಿ ಎಂದು ಹೇಳಿದ್ದಾರೆ.

    ಇಂದು ಅನಿರೀಕ್ಷಿತ ಘಟನೆ ನಡೆದಿದ್ದು, ಪತ್ನಿ ನಿರ್ಮಲಾರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಹಾಗಾಗಿ ನಾನು ಸಹ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ಬಂದು ಪರೀಕ್ಷೆಗೆ ಒಳಗಾದಾಗ ನನ್ನ ಕೊರೊನಾ ವರದಿ ಸಹ ಪಾಸಿಟಿವ್ ಬಂದಿದೆ. ಕೊರೊನಾ ಸೋಂಕು ದೃಢಪಟ್ಟಿದ್ದರಿಂದ ಮತ ಎಣಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲ್ಲ. ನಿಮ್ಮೆಲ್ಲರ ಪರಿಶ್ರಮದಿಂದಾಗಿ ಚುನಾವಣೆ ನಡೆದಿದೆ. ಮತ ಎಣಿಕೆ ವೇಳೆ ನಾನು ಗೈರಾಗುತ್ತಿದ್ದೇನೆ. ದಯಮಾಡಿ ಎಲ್ಲರೂ ಎದೆಗುಂದದೆ ಧೈರ್ಯದಿಂದ ಮತ ಎಣಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಿ ಎಂದು ಟಿ.ಬಿ.ಜಯಚಂದ್ರ ಕೇಳಿ ಕೊಂಡಿದ್ದಾರೆ.

    ನಮ್ಮ ಕಾರ್ಯಕರ್ತರು ಮತ್ತು ಪಕ್ಷದ ಮುಖಂಡರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತೆ ಎಂಬ ವಿಶ್ವಾಸವಿದೆ. ಕಾರ್ಯಕರ್ತರು ಯಾವುದಕ್ಕೂ ಯೋಚನೆ ಮಾಡಬೇಡಿ. ಆದಷ್ಟು ಬೇಗ ಗುಣಮುಖನಾಗಿ ಆಸ್ಪತ್ರೆಯಿಂದ ಬರುತ್ತೇನೆ. ಬಂದ ವೇಳೆ ನಿಮ್ಮೆಲ್ಲರನ್ನ ಭೇಟಿಯಾಗಿ ಕೃತಜ್ಞತೆಯನ್ನು ಹೇಳುತ್ತೇನೆ. ನಾಳೆಯ ನನ್ನ ಗೈರು ಹಾಜರಿಗೆ ಯಾರು ಬೇಸರ ತಿಳಿದುಕೊಳ್ಳ ಬೇಡಿ. ಎಲ್ಲರೂ ಅತ್ಯಂತ ಸಂತೋಷದಿಂದ ಚುನಾವಣೆ ಮತ ಎಣಿಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಿ. ಕಾರಣ ಜಯ ನಮ್ಮದು, ಜಯ ನಮಗೆ ಕಟ್ಟಿಟ್ಟ ಬುತ್ತಿ ಎಂದು ಜಯಚಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಶಿರಾ ಉಪಚುನಾವಣೆಯ ಜಿದ್ದಾಜಿದ್ದಿನ ಅಖಾಡದ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಇತ್ತ ಅಭ್ಯರ್ಥಿಗಳ ಎದೆಯಲ್ಲಿ ಢವಢವ ಶುರುವಾಗಿದೆ. ಮೂರೂ ಪಕ್ಷಗಳ ಅಭ್ಯರ್ಥಿಗಳ ನಡುವೆ ತ್ರಿಕೋನ ಸ್ಪರ್ಧೆ ಇರೋಂದರಿಂದ ನಾಳೆಯ ಮತ ಎಣಿಕೆ ಇನ್ನಷ್ಟು ಮತ್ತಷ್ಟು ಕುತೂಹಲ ಕೆರಳಿಸಿದೆ.

    ತುಮಕೂರು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಾಳೆ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಒಟ್ಟು 24 ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದ್ದು, ಪ್ರತಿ ಸುತ್ತಿನಲ್ಲಿ ತೀವ್ರ ಹಣಾಹಣಿಯಿಂದಾಗಿ ರೋಚಕತೆಯ ಘಟ್ಟ ತಲುಪುವ ಸಾಧ್ಯತೆ. ಈ ಬಾರಿ ಅಂಚೆ 4821 ಅಂಚೆ ಮತ ಸೇರಿ ಒಟ್ಟು ಶೇ.84 ರಷ್ಟು ಮತದಾನವಾಗಿದ್ದು. ಇವಿಎಂ ಮತಯಂತ್ರದಲ್ಲಿ 1 ಲಕ್ಷ 77 ಸಾವಿರದ 645 ಮತದಾರರು ಮತಚಲಾಯಿಸಿದ್ದಾರೆ.

     

    ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮುಂಜಾನೆ 7 ಗಂಟೆಗೆ ಸ್ರ್ಟಾಂಗ್ ರೂಂ ತೆರಯಲಿದ್ದು, 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಮತ ಎಣಿಕಾ ಕೇಂದ್ರದ ಸುತ್ತ ಮೂರು ಸುತ್ತಿನ ಭದ್ರತೆ ನಿಯೋಜಿಸಿದ್ದು, ಸೆಂಟ್ರಲ್ ಆರ್ಮಡ್ ಫೊರ್ಸ್ ಕಾರ್ಯನಿರ್ವಹಿಲಿದೆ. 2 ಕೆ.ಎಸ್.ಆರ್.ಪಿ, ಮೂರು ಡಿವೈಎಸ್ಪಿ, ಸಿಪಿಐ, ಪಿಎಸ್‍ಐ ಗಳು ಸೇರಿದಂತೆ ಒಟ್ಟು 200ಕ್ಕೂ ಹೆಚ್ಚು ಪೊಲೀಸರನ್ನ ಬಂದೋಬಸ್ತ್ ಗೆ ನಿಯೋಜಿಸಲಾಗಿದೆ.

    ಒಟ್ಟು 14 ಟೇಬಲ್ ಗಳಲ್ಲಿ 24 ಸುತ್ತು ಮತ ಎಣಿಕೆ ನಡೆಯಲಿದ್ದು, 330 ಮತಗಟ್ಟೆಗಳ ರಿಸಲ್ಟ್ ಹೊರಬೀಳಲಿದೆ. ಕೋವಿಡ್ ಹಿನ್ನಲೆಯಲ್ಲಿ ಭಾರೀ ಮುಂಜಾಗ್ರತೆವಹಿಸಿದ್ದು ಸಾಮಾಜಿಕ ಅಂತರ, ಸ್ಯಾನಿಟೈಸಿಂಗ್, ಥರ್ಮಲ್ ಸ್ಕಾನಿಂಗ್ ನಡೆಯಲಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ನಾಡಿದ್ದು ಬೆಳಗ್ಗೆ 6 ವರೆಗೂ ಮತ ಎಣಿಕಾ ಕೇಂದ್ರದ ಸುತ್ತಾ 5 ಕಿ.ಮೀ ವ್ಯಾಪ್ತಿ ಹಾಗೂ ಶಿರಾ ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

  • ಶಿರಾ ಉಪ ಚುನಾವಣೆ ಮತ ಎಣಿಕೆಗೆ ಸಕಲ ಸಿದ್ಧತೆ

    ಶಿರಾ ಉಪ ಚುನಾವಣೆ ಮತ ಎಣಿಕೆಗೆ ಸಕಲ ಸಿದ್ಧತೆ

    ತುಮಕೂರು: ಶಿರಾ ಉಪಚುನಾವಣೆಯ ಜಿದ್ದಾಜಿದ್ದಿನ ಅಖಾಡದ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಇತ್ತ ಅಭ್ಯರ್ಥಿಗಳ ಎದೆಯಲ್ಲಿ ಢವಢವ ಶುರುವಾಗಿದೆ. ಮೂರೂ ಪಕ್ಷಗಳ ಅಭ್ಯರ್ಥಿಗಳ ನಡುವೆ ತ್ರಿಕೋನ ಸ್ಪರ್ಧೆ ಇರೋಂದರಿಂದ ನಾಳೆಯ ಮತ ಎಣಿಕೆ ಇನ್ನಷ್ಟು ಮತ್ತಷ್ಟು ಕುತೂಹಲ ಕೆರಳಿಸಿದೆ.

    ತುಮಕೂರು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಾಳೆ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಒಟ್ಟು 24 ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದ್ದು, ಪ್ರತಿ ಸುತ್ತಿನಲ್ಲಿ ತೀವ್ರ ಹಣಾಹಣಿಯಿಂದಾಗಿ ರೋಚಕತೆಯ ಘಟ್ಟ ತಲುಪುವ ಸಾಧ್ಯತೆ. ಈ ಬಾರಿ ಅಂಚೆ 4821 ಅಂಚೆ ಮತ ಸೇರಿ ಒಟ್ಟು ಶೇ.84 ರಷ್ಟು ಮತದಾನವಾಗಿದ್ದು. ಇವಿಎಂ ಮತಯಂತ್ರದಲ್ಲಿ 1 ಲಕ್ಷ 77 ಸಾವಿರದ 645 ಮತದಾರರು ಮತಚಲಾಯಿಸಿದ್ದಾರೆ.

    ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮುಂಜಾನೆ 7 ಗಂಟೆಗೆ ಸ್ರ್ಟಾಂಗ್ ರೂಂ ತೆರಯಲಿದ್ದು, 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಮತ ಎಣಿಕಾ ಕೇಂದ್ರದ ಸುತ್ತ ಮೂರು ಸುತ್ತಿನ ಭದ್ರತೆ ನಿಯೋಜಿಸಿದ್ದು, ಸೆಂಟ್ರಲ್ ಆರ್ಮಡ್ ಫೊರ್ಸ್ ಕಾರ್ಯನಿರ್ವಹಿಲಿದೆ. 2 ಕೆ.ಎಸ್.ಆರ್.ಪಿ, ಮೂರು ಡಿವೈಎಸ್ಪಿ, ಸಿಪಿಐ, ಪಿಎಸ್‍ಐ ಗಳು ಸೇರಿದಂತೆ ಒಟ್ಟು 200ಕ್ಕೂ ಹೆಚ್ಚು ಪೊಲೀಸರನ್ನ ಬಂದೋಬಸ್ತ್ ಗೆ ನಿಯೋಜಿಸಲಾಗಿದೆ.

    ಒಟ್ಟು 14 ಟೇಬಲ್ ಗಳಲ್ಲಿ 24 ಸುತ್ತು ಮತ ಎಣಿಕೆ ನಡೆಯಲಿದ್ದು, 330 ಮತಗಟ್ಟೆಗಳ ರಿಸಲ್ಟ್ ಹೊರಬೀಳಲಿದೆ. ಕೋವಿಡ್ ಹಿನ್ನಲೆಯಲ್ಲಿ ಭಾರೀ ಮುಂಜಾಗ್ರತೆವಹಿಸಿದ್ದು ಸಾಮಾಜಿಕ ಅಂತರ, ಸ್ಯಾನಿಟೈಸಿಂಗ್, ಥರ್ಮಲ್ ಸ್ಕಾನಿಂಗ್ ನಡೆಯಲಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ನಾಡಿದ್ದು ಬೆಳಗ್ಗೆ 6 ವರೆಗೂ ಮತ ಎಣಿಕಾ ಕೇಂದ್ರದ ಸುತ್ತ 5 ಕಿ.ಮೀ ವ್ಯಾಪ್ತಿ ಹಾಗೂ ಶಿರಾ ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

  • ಒಂದು ವೋಟಿಗೆ 5 ಸಾವಿರ ಹಂಚಿದ ಮೇಲೆ ಚುನಾವಣೆ ಯಾಕೆ ಮಾಡ್ಬೇಕು: ರೇವಣ್ಣ

    ಒಂದು ವೋಟಿಗೆ 5 ಸಾವಿರ ಹಂಚಿದ ಮೇಲೆ ಚುನಾವಣೆ ಯಾಕೆ ಮಾಡ್ಬೇಕು: ರೇವಣ್ಣ

    – ಸರ್ಕಾರದ ಹಿಡಿತಕ್ಕೆ ಸಿಲುಕಿ ಚುನಾವಣಾ ಆಯೋಗ ನಲುಗುತ್ತಿದೆ

    ಹಾಸನ: ಒಂದು ವೋಟಿಗೆ ಐದು ಸಾವಿರ, ಮೂರು ಸಾವಿರ ಎಂದು ಹಂಚಿದ ಮೇಲೆ ಚುನಾವಣೆ ಯಾಕೆ ಮಾಡಬೇಕು ಎಂದು ಮಾಜಿ ಸಚಿವ ರೇವಣ್ಣ ಕಿಡಿಕಾರಿದ್ದಾರೆ.

    ಹಾಸನದಲ್ಲಿ ಶಿರಾ ಮತ್ತು ಆರ್.ಆರ್ ನಗರ ಉಪಚುನಾವಣೆ ಬಗ್ಗೆ ಮಾತನಾಡಿದ ಅವರು, ಸರ್ಕಾರದ ಹಿಡಿತಕ್ಕೆ ಸಿಲುಕಿ ಚುನಾವಣಾ ಆಯೋಗ ನಲುಗುತ್ತಿದೆ. ಶಿರಾ ಕ್ಷೇತ್ರದ ಒಂದು ಊರಿನಲ್ಲಿ ಬಿಜೆಪಿ ಅಭ್ಯರ್ಥಿಯನ್ನೇ ಊರೊಳಗಡೆ ಬಿಟ್ಟಿಲ್ಲ. ಆದರೂ ಆ ಊರಿನಲ್ಲಿ ಶೇ, 80ರಷ್ಟು ಮತಗಳು ಲೀಡ್ ಇದೆ ಅಂತಾ ಹೇಳುತ್ತಾರೆ. ಆಡಳಿತ ಯಂತ್ರವನ್ನು ಸರ್ಕಾರ ದುರುಪಯೋಗಪಡಿಸಿಕೊಂಡಿದೆ ಎಂದರು.

    ಚುನಾವಣೆಗೂ ಮೊದಲೇ 20 ಸಾವಿರ ಮತದಿಂದ ಗೆಲ್ಲುತ್ತೇವೆ ಎಂದು ಹೇಳುತ್ತಾರೆ. ಚುನಾವಣಾ ಆಯೋಗ ರಾಜ್ಯದಲ್ಲಿ ಒಂದು ಪಕ್ಷದ ಏಜೆಂಟ್ ಆಗಿ ಕೆಲಸ ಮಾಡುತ್ತಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಸಿಎಂ ಮತ್ತು ಸಿಎಂ ಮಗ ಇಬ್ಬರೂ ಎರಡು ಕ್ಷೇತ್ರದಲ್ಲಿ 25 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇವೆ ಅಂತಾ ಹೇಳುತ್ತಾರೆ. ಈ 25 ಸಾವಿರ ಮತ ಪಡೆಯೋಕೆ ಎಷ್ಟು ಹಣ ಖರ್ಚು ಮಾಡಿದ್ದಾರೆ ಅಂತಾ ಹೇಳಬೇಕು ಎಂದು ಅಗ್ರಹಿಸಿದರು.

    ಜೊತೆಗೆ ಬಿಜೆಪಿಯವರು ಗುಪ್ತಚರ ಇಲಾಖೆಯನ್ನು ಏನು ಚುನಾವಣೆ ಸಮೀಕ್ಷೆ ಮಾಡೋಕೆ ಬಿಟ್ಟಿದ್ದೀರಾ ಎಂದು ರೇವಣ್ಣ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

  • ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಬಿಎಸ್‍ವೈ

    ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಬಿಎಸ್‍ವೈ

    ಶಿವಮೊಗ್ಗ: ಶಿರಾ ಹಾಗೂ ಆರ್‍ಆರ್‍ನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಪ್ರಚಾರದ ವೇಳೆಯಲ್ಲಿಯೇ ಹೇಳಿದ್ದೆ, ಎರಡು ಕ್ಷೇತ್ರದಲ್ಲಿ ನಮ್ಮ ಪಕ್ಷ ಗೆಲುತ್ತದೆ ಎಂದು ಚುನಾವಣೋತ್ತರ ಸಮೀಕ್ಷೆ ಸಹ ಹೇಳಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

    ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಪ್ರಚಾರದ ವೇಳೆ ಕಾಂಗ್ರೆಸ್ ನವರು ನಮ್ಮ ಪಕ್ಷದ ಬಗ್ಗೆ ವಿನಾಃ ಕಾರಣ ಟೀಕೆ ಮಾಡುತ್ತಿದ್ದರು. ಶಿರಾದಲ್ಲಿ ಬಿಜೆಪಿ ಠೇವಣಿ ಉಳಿಸಿಕೊಳ್ಳದಿರುವ ಕ್ಷೇತ್ರ. ಆದರೆ ಈ ಬಾರಿ ಶಿರಾದಲ್ಲಿ ಬಿಜೆಪಿ ಅಭ್ಯರ್ಥಿ 25 ಸಾವಿರ ಅಂತರದಲ್ಲಿ ಗೆಲ್ಲುತ್ತಾರೆ ಎಂದರು.

    ಆರ್ ಆರ್ ನಗರದಲ್ಲಿ ಸಹ 40 ಸಾವಿರ ಅಂತರದಲ್ಲಿ ಗೆಲ್ಲುತ್ತೇವೆ. ಬಿಹಾರದಲ್ಲಿಯೂ ಸಹ ನಿತೀಶ್ ಕುಮಾರ್ ಸರಕಾರ ಬರುತ್ತೆ ಎಂಬ ವಿಶ್ವಾಸವಿದೆ ನೋಡೋಣ ಎಂದು ಸಿಎಂ ಬಿಎಸ್ ವೈ ತಿಳಿಸಿದರು.

  • ಬಸನಗೌಡ ತುರವಿಹಾಳ ಕಾಂಗ್ರೆಸ್‍ಗೆ ಸೇರ್ಪಡೆ- ರಂಗೇರಿದ ಮಸ್ಕಿ ಉಪಚುನಾವಣಾ ಕಣ

    ಬಸನಗೌಡ ತುರವಿಹಾಳ ಕಾಂಗ್ರೆಸ್‍ಗೆ ಸೇರ್ಪಡೆ- ರಂಗೇರಿದ ಮಸ್ಕಿ ಉಪಚುನಾವಣಾ ಕಣ

    – ಪ್ರತಾಪ್ ಗೌಡ ಪಾಟೀಲ್ ಭರ್ಜರಿ ಪ್ರಚಾರ

    ರಾಯಚೂರು: ಮಸ್ಕಿ ಉಪ ಚುನಾವಣೆ ಘೋಷಣೆಯಾಗುವುದಕ್ಕೂ ಮುನ್ನವೇ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಬಸನಗೌಡ ತುರವಿಹಾಳ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಅಘೋಷಿತ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.

    ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಪಕ್ಷಾಂತರದಿಂದ ತೆರವಾಗಿರುವ ರಾಯಚೂರಿನ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಈಗ ರಾಜಕೀಯ ಚುರುಕುಗೊಂಡಿದೆ. ಉಪ ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಕಾಂಗ್ರೆಸ್, ಬಿಜೆಪಿ ನಡುವೆ ತೀವ್ರ ಪೈಪೋಟಿಯ ವಾತಾವರಣ ನಿರ್ಮಾಣವಾಗಿದೆ.

    ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಪ್ರತಾಪ್ ಗೌಡ ಪಾಟೀಲ್ ವಿರುದ್ಧ ಕೇವಲ 213 ಮತಗಳ ಅಂತರದಿಂದ ಪರಾಭವಗೊಂಡಿದ್ದ ಬಸನಗೌಡ ತುರವಿಹಾಳ ಈಗ ಕಾಂಗ್ರೆಸ್ ಕೈ ಹಿಡಿದಿದ್ದಾರೆ. ಪ್ರತಾಪ್ ಗೌಡ ವಿರುದ್ಧ ಅಕ್ರಮ ಮತದಾನದ ಪ್ರಕರಣ ದಾಖಲಿಸಿದ್ದ ಬಸನಗೌಡರನ್ನು ಬಿಜೆಪಿ ತುಂಗಭದ್ರಾ ಕಾಡಾ ಅಧ್ಯಕ್ಷ ಸ್ಥಾನ ನೀಡಿ ಸಮಾಧಾನ ಪಡಿಸಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕರಣವನ್ನು ವಜಾಗೊಳಿಸಿದೆ. ಹೀಗಾಗಿ ಚುನಾವಣಾ ಕಣ ರಂಗೇರಿದೆ.

    ಬಿಜೆಪಿ ಟಿಕೆಟ್ ಬಹುತೇಕ ಪ್ರತಾಪ್ ಗೌಡ ಅವರಿಗೆ ಖಾಯಂ ಆಗಿರುವುದರಿಂದ ಬಸನಗೌಡ ತುರವಿಹಾಳ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಪಕ್ಷ ಸೇರ್ಪಡೆಯಾಗಿದ್ದಾರೆ. ರಾಯಚೂರು ಜಿಲ್ಲೆಯ ಕಾಂಗ್ರೆಸ್ ಶಾಸಕರು, ಮಾಜಿ ಶಾಸಕರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ನಾಯಕ್ ಸೇರಿ ಹಲವು ಮುಖಂಡರ ಉಪಸ್ಥಿತಿಯಲ್ಲಿ ಕಾಂಗ್ರೆಸ್ ಸೇರಿದ್ದಾರೆ. ಹೀಗಾಗಿ ಮಸ್ಕಿ ಉಪ ಚುನಾವಣೆಯಲ್ಲಿ ಕಳೆದ ಬಾರಿಯಂತೆ ಪ್ರತಾಪ್ ಗೌಡ ಪಾಟೀಲ್ ಹಾಗೂ ಬಸನಗೌಡ ನಡುವೆ ತುರುಸಿನ ಸ್ಪರ್ಧೆ ನಡೆಯುವ ಸಾಧ್ಯತೆಗಳಿವೆ. ಆದರೆ ಇಬ್ಬರು ಅಭ್ಯರ್ಥಿಗಳ ಪಕ್ಷಗಳು ಮಾತ್ರ ಬದಲಾಗಲಿವೆ.

    ತುಂಗಭದ್ರಾ ಕಾಡಾ ಅಧ್ಯಕ್ಷ ಸ್ಥಾನಕ್ಕೆ ಬಸನಗೌಡ ರಾಜೀನಾಮೆ ನೀಡಿದ ಪತ್ರ ಸಹ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ. ಇನ್ನೂ ಪ್ರತಾಪ್ ಗೌಡ ಪಾಟೀಲ್ ಭರ್ಜರಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ಕೋವಿಡ್ ನಿಯಮ ಉಲ್ಲಂಘಿಸಿ ನೂರಾರು ಕಾರ್ಯಕರ್ತರೊಂದಿಗೆ ಮಸ್ಕಿಯಲ್ಲಿ ಬೈಕ್ ರ್ಯಾಲಿ ಮಾಡಿದ್ದಾರೆ. ನೂರಾರು ಕಾರ್ಯಕರ್ತರನ್ನ ಸೇರಿ ಪಕ್ಷದ ಕಾರ್ಯಕ್ರಮವನ್ನು ಮಾಡಿದ್ದಾರೆ. ಆದರೆ ಪ್ರತಾಪ್ ಗೌಡ ವಿರುದ್ಧದ ಪ್ರಕರಣ ವಜಾಗೊಂಡಿರುವ ತೀರ್ಪಿನ ಪ್ರತಿ ಇನ್ನೂ ಕೈ ಸೇರಿಲ್ಲ. ತೀರ್ಪಿನ ಪ್ರತಿ ಸಿಕ್ಕ ನಂತರ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಲಾಗುವುದು ಅಂತ ಪ್ರತಾಪ್ ಗೌಡ ಹೇಳಿದ್ದಾರೆ.

    ಬಸವಕಲ್ಯಾಣ, ಬೆಳಗಾವಿ ಚುನಾವಣೆಯೊಂದಿಗೆ ಮಸ್ಕಿ ಉಪ ಚುನಾವಣೆ ನಡೆಯುವ ಸಾಧ್ಯತೆಯಿದೆ. ಡಿಸೆಂಬರ್ ಕೊನೆಯಲ್ಲಿ ಚುನಾವಣೆ ಬರಬಹುದು ನಾವು ಸಿದ್ಧತೆ ಮಾಡಿಕೊಂಡಿದ್ದೇವೆ ಅಂತ ಪ್ರತಾಪ್ ಗೌಡ ಪಾಟೀಲ್ ತಿಳಿಸಿದ್ದಾರೆ. ಚುನಾವಣೆ ಘೋಷಣೆಗೂ ಮುನ್ನವೇ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಸಂಚಲನ ಜೋರಾಗಿದೆ. ಕಾಂಗ್ರೆಸ್ ಬಿಜೆಪಿಗೂ ಮಸ್ಕಿ ಪ್ರತಿಷ್ಠೆಯ ಕಣವಾಗಿದೆ. ಕಾಂಗ್ರೆಸ್ ಟಿಕೆಟ್ ಬಸನಗೌಡಗೆ ಬಹುತೇಕ ಖಚಿತವಾಗಿರುವುದರಿಂದ ಭರ್ಜರಿ ಪೈಪೋಟಿ ನಿರೀಕ್ಷೆಯಿದೆ.