Tag: by election

  • ಇನ್ನೆರಡು ದಿನಗಳಲ್ಲಿ ಉಪ ಚುನಾವಣೆ ಅಭ್ಯರ್ಥಿಗಳ ಹೆಸರು ಫೈನಲ್: ನಳಿನ್

    ಇನ್ನೆರಡು ದಿನಗಳಲ್ಲಿ ಉಪ ಚುನಾವಣೆ ಅಭ್ಯರ್ಥಿಗಳ ಹೆಸರು ಫೈನಲ್: ನಳಿನ್

    ಧಾರವಾಡ: ಉಪ ಚುನಾವಣೆ ಅಭ್ಯರ್ಥಿಗಳ ಹೆಸರನ್ನು ಕೋರ್ ಕಮಿಟಿಯಲ್ಲಿ ತೀರ್ಮಾನ ಮಾಡಿ ಕಳುಹಿಸಲಾಗಿದೆ. ಕೇಂದ್ರದ ನಾಯಕರು ಇನ್ನೆರಡು ದಿನಗಳಲ್ಲಿ ಹೆಸರುಗಳನ್ನು ಅಂತಿಮ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

    ನಗರದಲ್ಲಿ ಪಶ್ಚಿಮ ಪದವೀಧರ ವಿಧಾನ ಪರಿಷತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ನಾಮಪತ್ರ ಸಲ್ಲಿಕೆಗೆ ಆಗಮಿಸಿದ್ದ ವೇಳೆ ಮಾತನಾಡಿದ ಅವರು, ಉಪಚುನಾವಣೆಯ ಶಿರಾ, ಆರ್.ಆರ್. ನಗರ ಕ್ಷೇತ್ರಗಳಲ್ಲಿ ನಮಗೆ ಒಳ್ಳೆ ಸ್ಪಂದನೆ ಇದೆ. ಶಿರಾದಲ್ಲಿ ಕಾಂಗ್ರೆಸ್, ಜೆಡಿಎಸ್ ಮತದಾರರು ಬಿಜೆಪಿಯತ್ತ ಬರುತ್ತಿದ್ದಾರೆ. ಹೀಗಾಗಿ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.

    ಕೋರ್ ಕಮೀಟಿಯಲ್ಲಿ ಚರ್ಚಿಸಿ ಹೆಸರು ಫೈನಲ್ ಮಾಡಿ ಅಭ್ಯರ್ಥಿಗಳ ಹೆಸರುಗಳನ್ನು ಈಗಾಗಲೇ ಕೇಂದ್ರಕ್ಕೆ ಕಳುಹಿಸಿದ್ದೇವೆ. ಇನ್ನೆರಡು ದಿನಗಳಲ್ಲಿ ಹೈಕಮಾಂಡ್ ಅಭ್ಯರ್ಥಿಗಳ ಹೆಸರು ಫೈನಲ್ ಮಾಡಲಿದೆ ಎಂದು ತಿಳಿಸಿದರು.

    ವಿಧಾನ ಪರಿಷತ್ ಚುನಾವಣೆಗೆ ಸಹ ನಾವು ಪೂರ್ಣ ತಯಾರಿ ಮಾಡಿಕೊಂಡಿದ್ದೇವೆ. ಪದವೀಧರ, ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಮತದಾರರೇ ಇದ್ದಾರೆ ಎಂದು ಇದೇ ವೇಳೆ ತಿಳಿಸಿದರು.

  • ಯಾರನ್ನು ಯಾರು ಎಲ್ಲಿಗೆ ಕಳುಹಿಸಿದರು? – ಮತ್ತೆ ಸಿದ್ದರಾಮಯ್ಯನ ವಿರುದ್ಧ ಹೆಚ್‍ಡಿಕೆ ಕಿಡಿ

    ಯಾರನ್ನು ಯಾರು ಎಲ್ಲಿಗೆ ಕಳುಹಿಸಿದರು? – ಮತ್ತೆ ಸಿದ್ದರಾಮಯ್ಯನ ವಿರುದ್ಧ ಹೆಚ್‍ಡಿಕೆ ಕಿಡಿ

    ಬೆಂಗಳೂರು: ಉಪಚುನಾವಣೆ ರಂಗೇರುತ್ತಿದ್ದಂತೆ ರಾಜಕೀಯ ನಾಯಕರ ವಾಗ್ದಾಳಿ ಆರಂಭವಾಗಿದೆ. ಈಗ ಮಾಜಿ ಸಿಎಂ ಕುಮಾರಸ್ವಾಮಿಯವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮೇಲೆ ಟ್ವಿಟ್ಟರ್ ಮೂಲಕ ಕಿಡಿ ಕಾರಿದ್ದಾರೆ.

    ಇಂದು ಸಿದ್ದರಾಮಯ್ಯನ ವಿರುದ್ಧ ಗುಡುಗಿ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿಯವರು, ಅಧಿಕಾರದಲ್ಲಿದ್ದಾಗಲೇ ಮತ್ತೆ ಅಧಿಕಾರ ನೀಡದೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ಜನತೆ ಅರ್ಧಚಂದ್ರ ಪ್ರಯೋಗ ಮಾಡಿದರು. ಈಗ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೈ ಹಿಡಿಯುತ್ತಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಕೇವಲ ಭ್ರಮೆ ಎಂದು ಕುಟುಕಿದ್ದಾರೆ.

    ಜನ ಕಲ್ಯಾಣಕ್ಕೆ ದೂರದೃಷ್ಟಿಯ ಕಾರ್ಯಸಾಧ್ಯವಾದ ಯೋಜನೆಗಳನ್ನು ರೂಪಿಸುವಲ್ಲಿ ಎಡವಿದ್ದ ಸಿದ್ದರಾಮಯ್ಯ ಅಗ್ಗದ ಯೋಜನೆಗಳ ಮೂಲಕ ಜನರ ತುಟಿಗೆ ತುಪ್ಪ ಸವರುವ ಆಡಳಿತಕ್ಕೆ ಕಳೆದ ಬಾರಿ ತಕ್ಕ ಶಾಸ್ತಿ ಮಾಡಿದ್ದರು. ಇವರ ದುರಾಡಳಿತವನ್ನು ಜನತೆ ಇನ್ನೂ ಮರೆತಿಲ್ಲ. ಉಪಚುನಾವಣೆಯಲ್ಲೂ ಕಾಂಗ್ರೆಸ್ಸಿಗೆ ಪಾಠ ಕಲಿಸಲಿದ್ದಾರೆ ಎಂದು ಶಿರಾ ಉಪಚುನಾವಣೆಯ ವಿಚಾರವಾಗಿ ಟ್ವೀಟ್ ಮಾಡಿದ್ದಾರೆ.

    ಯಾರನ್ನು ಯಾರು ಎಲ್ಲಿಗೆ ಕಳುಹಿಸಿದರು? ಸ್ವಾರ್ಥ ರಾಜಕಾರಣಕ್ಕಾಗಿ ಮೂಲ ಕಾಂಗ್ರೆಸ್ಸಿಗರ ಮೇಲೆ ಯಾರು ಸವಾರಿ ಮಾಡುತ್ತಿದ್ದಾರೆ? ಎಂಬುದನ್ನು ತಿಳಿಯದಷ್ಟು ಜನ ಪೆದ್ದರಲ್ಲ. ನಮ್ಮ ಮೂವರು ಶಾಸಕರು ಪಕ್ಷದಿಂದ ಹೊರಹೋಗಲು ನಡೆದ ಸಂಚಿನಲ್ಲಿ ಹಣ ಅಧಿಕಾರದ ಆಮಿಷ ಮಾತ್ರವಲ್ಲ. ಕೆಲವರ ‘ಕೈ’ವಾಡ ಕೂಡ ಕಾರಣ ಇದೇ ಎಂದು ಪರೋಕ್ಷವಾಗಿ ಕುಮಾರಸ್ವಾಮಿ ಸಿದ್ದರಾಮಯ್ಯಯವರನ್ನು ಕುಟುಕಿದ್ದಾರೆ.

    ಕಾಂಗ್ರೆಸ್ ಪಕ್ಷದ ಹತ್ತಾರು ಮಂದಿ ಪೈಕಿ ‘ಎದೆ ಸೀಳಿದರೆ ಸಿದ್ದು ಕಾಣುತ್ತಾರೆ’ ಎಂಬ ಅನುಯಾಯಿಗಳು ಬಿಜೆಪಿಗೆ ಹಾರಲು ಮಸಲತ್ತು ನಡೆಸಿದವರು ಯಾರೆಂಬುದು ‘ಸಿದ್ಧವನ’ದಲ್ಲಿ ಕುಳಿತಿದ್ದ ‘ರಾಮ’ನಿಗೂ ಗೊತ್ತಿತ್ತು. ಮೈತ್ರಿ ಸರ್ಕಾರ ತೆಗೆಯಲು ಅಳಲೇಕಾಯಿ ಪಂಡಿತನಂತೆ ಔಷಧ ಅರೆದ ವ್ಯಕ್ತಿಗೆ ನಮ್ಮ ಮೂವರು ಶಾಸಕರು ಕದ್ದು ಓಡಿ ಹೋದರೋ? ನಾವೇ ಕತ್ತು ಹಿಡಿದು ನೂಕಿದವೋ ಎಂದು ಗೊತ್ತಿಲ್ಲದ ಜಾಣ ಪೆದ್ದನಾಗಿದ್ದು ವಿಪರ್ಯಾಸ ಎಂದು ಟ್ವೀಟ್ ಮಾಡಿದ್ದಾರೆ.

  • ನಮ್ಮದು ಅರ್ಜುನನ ರೀತಿ ಗುರಿ: ಆರ್.ಅಶೋಕ್

    ನಮ್ಮದು ಅರ್ಜುನನ ರೀತಿ ಗುರಿ: ಆರ್.ಅಶೋಕ್

    ಬೆಂಗಳೂರು: ನಮ್ಮದು ಅರ್ಜುನನ ರೀತಿಯ ಗುರಿ. ಆರ್.ಆರ್.ನಗರದಲ್ಲಿ ಪಕ್ಷವನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ.

    ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಆರ್.ಆರ್.ನಗರ ಕ್ಷೇತ್ರದಲ್ಲಿ ಟಿಕೆಟ್ ಯಾರಿಗೆ ನೀಡಬೇಕು ಎಂಬುದನ್ನ ಪಕ್ಷ ತೀರ್ಮಾನ ಮಾಡುತ್ತದೆ. ಪಕ್ಷದ ಪರವಾಗಿ ಕ್ಷೇತ್ರದಲ್ಲಿ ಚುನಾವಣೆ ಕೆಲಸ ನಾವು ಮಾಡುತ್ತೇವೆ. ಚುನಾವಣೆ ಮುಗಿಯುವರೆಗೂ ಆರ್.ಆರ್.ನಗರದ ಬಿಜೆಪಿ ಅಭ್ಯರ್ಥಿಯನ್ನ ಗೆಲ್ಲಿಸುವುದು ನಮ್ಮ ಧ್ಯೇಯ, ಕರ್ತವ್ಯ ಮತ್ತು ಗುರಿ ಎಂದು ತಿಳಿಸಿದರು.

    ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ. ಸಿಬಿಐ ಸ್ವತಂತ್ರ ತನಿಖಾ ಸಂಸ್ಥೆಯಾಗಿದ್ದು, 2017-18ರಲ್ಲಿ ಡಿಕೆ ಶಿವಕುಮಾರ್ ವಿರುದ್ಧ ದಾಖಲಾದ ಪ್ರಕರಣಗಳು ತನಿಖೆ ಮುಂದುವರಿದಿದೆ. ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೆಸರು ಬಳಸಿಕೊಂಡು ಗೆಲ್ಲುವ ಪರಿಸ್ಥಿತಿ ಬಿಜೆಪಿಗೆ ಬಂದಿಲ್ಲ ಸಿಬಿಐ ದಾಳಿಯಲ್ಲಿ ಯಾವುದೇ ರಾಜಕೀಯವಿಲ್ಲ. ಈ ಹಿಂದೆ ಮಾಜಿ ಸಚಿವ ಜನಾರ್ದನ ರೆಡ್ಡಿಯವರ ಮನೆ ಮೇಲೆ ದಾಳಿ ನಡೆದಾಗ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇತ್ತು. ಆ ದಾಳಿ ಕಾಂಗ್ರೆಸ್ ಮಾಡಿಸಿತ್ತು ಎಂದು ಅವರು ಒಪ್ಪಿಕೊಳ್ಳುತ್ತಾರಾ ಎಂದು ಪ್ರಶ್ನಿಸಿದರು.

    ಆರ್‍ಎಸ್‍ಎಸ್ ಐವತ್ತು ಕೋಟಿ ಚುನಾವಣೆಗೆ ಖರ್ಚು ಮಾಡುತ್ತಿದೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಮಾಜಿ ಮುಖ್ಯಮಂತ್ರಿಗಳಾಗಿ ಈ ರೀತಿ ಹೇಳಿಕೆ ನೀಡೋದು ಅವರಿಗೆ ಶೋಭೆ ತರಲ್ಲ. ಆರ್‍ಎಸ್‍ಎಸ್ ಒಂದು ರಾಷ್ಟ್ರೀಯ ಸೇವಾ ಸಂಸ್ಥೆ. ರಾಜಕಾರಣಕ್ಕೂ ಮತ್ತು ಆರ್‍ಎಸ್‍ಎಸ್ ಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು.

  • ಶಿರಾ ಉಪಚುನಾವಣೆ- ಅಮ್ಮಾಜಮ್ಮಗೆ ಜೆಡಿಎಸ್ ಟಿಕೆಟ್

    ಶಿರಾ ಉಪಚುನಾವಣೆ- ಅಮ್ಮಾಜಮ್ಮಗೆ ಜೆಡಿಎಸ್ ಟಿಕೆಟ್

    ಬೆಂಗಳೂರು: ಶಿರಾ ಉಪಚುನಾವಣೆ ಕ್ಷೇತ್ರ ರಂಗೇರುತ್ತಿದ್ದು, ಜೆಡಿಎಸ್ ಪಕ್ಷ ತನ್ನ ಅಭ್ಯರ್ಥಿಯನ್ನು ಫೈನಲ್ ಮಾಡಿ ದಿವಂಗತ ಮಾಜಿ ಶಾಸಕ ಸತ್ಯನಾರಾಯಣ್ ಅವರ ಪತ್ನಿ ಅಮ್ಮಾಜಮ್ಮ ಅವರಿಗೆ ಟಿಕೆಟ್ ಘೋಷಿಸಿದೆ.

    ನವೆಂಬರ್ 3 ರಂದು ತುಮಕೂರಿನ ಶಿರಾ ಉಪಚುನಾವಣೆ ನಡೆಯಲಿದ್ದು, ಜೆಡಿಎಸ್ ವರಿಷ್ಠ ಎಚ್.ಡಿ.ದೇವೆಗೌಡ ಅವರು ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದಾರೆ. ಜೆಡಿಎಸ್ ಶಾಸಕ ಬಿ ಸತ್ಯನಾರಾಯಣ ಅವರ ನಿಧನದಿಂದಾಗಿ ಶಿರಾ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ. ಈಗಾಗಲೇ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಯನ್ನ ಈಗಾಗಲೇ ಫೈನಲ್ ಮಾಡಿದೆ.

    ದಿವಂಗತ ಮಾಜಿ ಶಾಸಕ ಸತ್ಯನಾರಾಯಣ್ ಅವರ ಪತ್ನಿ ಅಮ್ಮಾಜಮ್ಮ ಅವರಿಗೆ ಜೆಡಿಎಸ್ ಟಿಕೆಟ್ ನೀಡುವ ಮೂಲಕ ಗೆಲುವಿನ ಲೆಕ್ಕಾಚಾರವನ್ನು ಮಾಡಿದೆ. ಈ ಮೊದಲು ಸತ್ಯನಾರಾಯಣ್ ಅವರ ಮಗ ಸತ್ಯ ಪ್ರಕಾಶ್‍ಗೆ ಟಿಕೆಟ್ ನೀಡುತ್ತಾರೆ ಎನ್ನಲಾಗಿತ್ತು.

    ಕಳೆದ ಚುನಾವಣೆಯಲ್ಲಿ ಗೆಲುವು ಪಡೆದಿದ್ದ ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಭಾರೀ ಪೈಪೋಟಿ ನಡೆದಿದ್ದರೇ, ಬಿಜೆಪಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿತ್ತು. ಇತ್ತ ಶಿರಾ ಕ್ಷೇತ್ರದೊಂದಿಗೆ ಆರ್.ಆರ್ ನಗರ ಉಪಚುನಾವಣೆಯೂ ನ.3 ರಂದು ನಡೆಯಲಿದ್ದು, ಜೆಡಿಎಸ್ ಪಕ್ಷ ಇನ್ನಷ್ಟೇ ಅಭ್ಯರ್ಥಿಯನ್ನು ಘೋಷಣೆ ಮಾಡಬೇಕಿದೆ.

  • ಕುಮಾರಸ್ವಾಮಿ ಶಿರಾಕ್ಕೆ ಬಂದು ವಿಷ ಕೊಡಿಯೆಂದು ಅಳ್ತಾ ಇದ್ನಪ್ಪ: ಸಿದ್ದರಾಮಯ್ಯ ವ್ಯಂಗ್ಯ

    ಕುಮಾರಸ್ವಾಮಿ ಶಿರಾಕ್ಕೆ ಬಂದು ವಿಷ ಕೊಡಿಯೆಂದು ಅಳ್ತಾ ಇದ್ನಪ್ಪ: ಸಿದ್ದರಾಮಯ್ಯ ವ್ಯಂಗ್ಯ

    – ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಸಿ ಎಚ್ಚರಿಕೆಯ ಘಂಟೆ ಭಾರಿಸ್ಬೇಕು
    – ಜೆಡಿಎಸ್ ನನ್ನ ಪ್ರಕಾರ ಪಕ್ಷವೇ ಅಲ್ಲ

    ಬೆಂಗಳೂರು: ಎರಡು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾದ ಬಳಿಕ ರಾಜ್ಯದಲ್ಲಿ ರಾಜಕೀಯ ಗರಿಗೆದರಿದೆ. ಜೊತೆಗೆ ಬೈ ಎಲೆಕ್ಷನ್ ಜಯಗಳಿಸಲು ಮೂರು ಪಕ್ಷಗಳು ತಮ್ಮದೇ ಆದ ಪ್ಲಾನ್ ಮಾಡಿಕೊಂಡು ಕಣಕ್ಕಿಳಿಯುತ್ತಿವೆ.

    ಉಪಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಪಕ್ಷದ ನಾಯಕರು ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಿದರು. ಜೊತೆಗೆ ಈ ಸಭೆಯಲ್ಲಿ ಶಿರಾ ಕ್ಷೇತ್ರದ ನೂರಾರು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್‍ಗೆ ಸೇರ್ಪಡೆಯಾದರು. ಈ ವೇಳೆ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಡಳಿತ ಪಕ್ಷ ಮತ್ತು ಜೆಡಿಎಸ್ ಪಕ್ಷದ ಮೇಲೆ ಕಿಡಿಕಾರಿದರು.

    ಮೊನ್ನೆ ಯಾಕೋ ಕುಮಾರಸ್ವಾಮಿ ಶಿರಾಗೆ ಬಂದು ಅಳ್ತಾ ಇದ್ನಪ್ಪ. ವಿಷ ಕೊಡಿ ಮತ್ತೊಂದು ಕೊಡಿ ಅಂತಿದ್ದ. ಇದೇನು ಹೊಸತಲ್ಲ ದೇವೇಗೌಡರ ಕಾಲದಿಂದಲೂ ಹೀಗೆ ನಡೆದುಕೊಂಡು ಬಂದಿದೆ. ಕಮಾರಸ್ವಾಮಿ ಅದನ್ನು ಮುಂದುವರಿಸಿದ್ದಾರೆ ಅಷ್ಟೇ. ನನ್ನ ಪ್ರಕಾರ ಜೆಡಿಎಸ್ ಒಂದು ಪಕ್ಷವೇ ಅಲ್ಲ. ರಾಜಕೀಯದಲ್ಲಿ ಜನ ಸೇವೆ ಮಾಡಬೇಕು. ಅದನ್ನು ಬಿಟ್ಟು ವಿಷ ಕೊಡಿ ಎಂಬುದು ರಾಜಕಾರಣನಾ? ಜನರೇ ಆಶೀರ್ವಾದ ಮಾಡಬೇಕು. ನಾವೇ ಕೇಳಿಕೊಳ್ಳಬಾರದು ಎಂದು ಹೆಚ್‍ಡಿಕೆಗೆ ಸಿದ್ದು ಟಾಂಗ್ ನೀಡಿದರು.

    ಇದೇ ವೇಳೆ ಆಡಳಿತ ಪಕ್ಷದ ಮೇಲೆ ಆಕ್ರೋಶ ವ್ಯಕ್ತಪಡಿಸಿದ ಸಿದ್ದರಾಮಯ್ಯ, ಸರ್ಕಾರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಣ ಇಲ್ಲ. ಒಂದೂ ರೂಪಾಯಿ ಸಹಾ ಅಭಿವೃದ್ಧಿಗೆ ನೀಡುತ್ತಿಲ್ಲ. ಜನ ಸರ್ಕಾರಕ್ಕೆ ಎಚ್ಚರಿಕೆಯ ಘಂಟೆ ಹೊಡಿಬೇಕು. ಹಾಗೆ ಘಂಟೆ ಹೊಡಿಬೇಕಾದರೆ ಜನ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕು. ಈ ಹಿಂದೆ ನಮ್ಮ ಶಾಸಕರನ್ನ 20-25 ಕೋಟಿ ಕೊಟ್ಟು ಖರೀದಿ ಮಾಡಿ ಸರ್ಕಾರ ರಚನೆ ಮಾಡಿದರು ಎಂದು ದೂರಿದರು.

    ಇದು 10% ಕಮಿಷನ್ ಸರ್ಕಾರ. ನಾನು ಹೆಸರು ಹೇಳಲ್ಲ ಇದೇ ಸರ್ಕಾರದ ಒಬ್ಬ ಸಚಿವ ಹೇಳುತ್ತಾನೆ ಸರ್ ಗುತ್ತಿಗೆ ಕಾಮಗಾರಿ ಸ್ಯಾಂಕ್ಷನ್ ಆಗಬೇಕು ಅಂದ್ರೆ 10% ಕಮಿಷನ್ ಕೊಡಲೇಬೇಕು. ನಮ್ಮ ಕ್ಷೇತ್ರದ ಗುತ್ತಿಗೆದಾರ ಒಬ್ಬ 10 ಲಕ್ಷ ಕೊಟ್ಟು ಕೆಲಸ ಮಾಡಿಕೊಂಡು ಬಂದಿದ್ದಾನೆ ಎಂದು ಸಚಿವನೇ ಹೇಳುತ್ತಾನೆ. ಸಚಿವನಿಗೆ ಹೀಗಾದ್ರೆ ಶಾಸಕರ ಪರಿಸ್ಥಿತಿ ಏನು? ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ಕಳೆದ ಒಂದು ವರ್ಷದಲ್ಲಿ ವಿಪರೀತ ಸಾಲ ಮಾಡಿದ್ದಾರೆ. ಹೀಗಾಗಿ ರಾಜ್ಯ ಮತ್ತು ದೇಶಕ್ಕೆ ಕಾಂಗ್ರೆಸ್ ಅನಿವಾರ್ಯ ಎಂದು ಸಿದ್ದರಾಮಯ್ಯ ತಿಳಿಸಿದರು.

    ಜೆಡಿಎಸ್ ಅವರು ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ ಕ್ಷೇತ್ರದಲ್ಲಿ ಎಚ್ಚರಿಕೆಯಿಂದ ಇರಬೇಕು. ಆ ಗಿರಾಕಿಗಳು ಯಾವಾಗ ಬೇಕಿದ್ದರೂ ಮೈತ್ರಿ ಮಾಡಿಕೊಳ್ಳುತ್ತಾರೆ. ನಮ್ಮಲ್ಲಿ ಸಣ್ಣಪುಟ್ಟ ವ್ಯತ್ಯಾಸಗಳು ಇದ್ದವು. ಈ ಹಿಂದೆ ತುಮಕೂರಿನಲ್ಲಿ ಜಯಚಂದ್ರ, ಪರಮೇಶ್ವರ್ ಮತ್ತು ರಾಜಣ್ಣ ನಡುವೆ ಸಣ್ಣಪುಟ್ಟ ವ್ಯತ್ಯಾಸಗಳು ಇತ್ತು. ಇದೆಲ್ಲ ಬಗೆಹರಿಸಿಕೊಂಡು ಈಗ ಒಂದಾಗಿ ಚುನಾವಣೆ ಮಾಡುತ್ತಿದ್ದಾರೆ. ಹಾಗಾಗಿ ಈ ಬಾರಿ ಜಯಚಂದ್ರನನ್ನು ಗೆಲ್ಲಿಸಿ ಕಳಿಸಬೇಕು ಎಂದು ಜನರಲ್ಲಿ ಮನವಿ ಮಾಡಿದರು.

    ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ಒಂದೂವರೆ ವರ್ಷದಿಂದ ಶಾಸಕನಿಲ್ಲ. ಸಮ್ಮಿಶ್ರ ಸರ್ಕಾರ ಬೀಳಿಸಲು ಮುನಿರತ್ನ ಸಹ ಕಾರಣ. ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲೂ ಮುಖಂಡರು ಉತ್ಸಾಹ ತೋರುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆ. ಜೆಡಿಎಸ್ ನವರು ಯಾವತ್ತು ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬರಲ್ಲ. ಅವರು ಬೇರೆಯವರ ಹೆಗಲ ಮೇಲೆ ಕುಳಿತು ಆಡಳಿತ ನಡೆಸುವವರು ಎಂದು ಸಿದ್ದರಾಮಯ್ಯ ಗುಡುಗಿದರು.

    ಕಳೆದ ಬಾರಿ ಟಿಬಿ ಜಯಚಂದ್ರ ಒಳ್ಳೆಯ ಕೆಲಸ ಮಾಡಿದ್ದ ಆದರೂ ನೀವು ಆತನನ್ನು ಸೋಲಿದ್ರಿ. ನಾನು ಕೂಡ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತೆ. ಜೆಡಿಎಸ್‍ನವರು ಭಾವನಾತ್ಮಕವಾಗಿ ವೋಟ್ ಕೇಳುತ್ತಾರೆ. ಈ ಬಾರಿಯ ಚುನಾವಣೆಯಲ್ಲಿ ನಮಗೂ ಬಿಜೆಪಿಗೂ ನೇರಾ ಪೈಪೋಟಿ. ಜೆಡಿಎಸ್ ಈ ಬಾರಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದು ವ್ಯಂಗ್ಯವಾಡಿದರು.

  • ಯಾರು ಪಕ್ಷಕ್ಕೆ ದುಡಿಯುತ್ತಾರೋ ಅವರಿಗೆ ಸೂಕ್ತ ಸ್ಥಾನಮಾನ: ಡಿಕೆಶಿ

    ಯಾರು ಪಕ್ಷಕ್ಕೆ ದುಡಿಯುತ್ತಾರೋ ಅವರಿಗೆ ಸೂಕ್ತ ಸ್ಥಾನಮಾನ: ಡಿಕೆಶಿ

    – ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆಗೆ

    ಬೆಂಗಳೂರು: ಇಡೀ ರಾಜ್ಯ ಉಪಚುನಾವಣೆ ಫಲಿತಾಂಶ ನೋಡುತ್ತಿದೆ. ಯಾರು ಪಕ್ಷಕ್ಕೆ ದುಡಿಯುತ್ತಾರೋ ಅವರಿಗೆ ಸೂಕ್ತ ಸ್ಥಾನಮಾನ ನೀಡಲಾಗುತ್ತದೆ. ನಮ್ಮ ಪಕ್ಷದ ಸಿದ್ಧಾಂತ ಒಪ್ಪಿಕೊಂಡು ಬಂದರೆ ಅವರನ್ನ ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

    ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ನೂರು ಜನ ಮುಖಂಡರು ಪಕ್ಷ ಸೇರ್ಪಡೆ ಆಗಿದ್ದಾರೆ. ಇವರ ಹಿಂದೆ ಸಾವಿರಾರು ಜನ ಪಕ್ಷ ಸೇರ್ಪಡೆ ಆಗುತ್ತಾರೆ. ಇವರ ಸೇರ್ಪಡೆ ಪಕ್ಷದ ಶಕ್ತಿ ಮತ್ತಷ್ಟು ಜಾಸ್ತಿ ಮಾಡಿದೆ. ಅಲ್ಲದೇ ನಮ್ಮಲ್ಲಿ ಹೊಸಬರು ಹಳಬರು ಅಂತ ನೋಡಲ್ಲ, ಕಾಂಗ್ರೆಸ್ ಅಷ್ಟೇ ಮುಖ್ಯ. ಎಲ್ಲರನ್ನೂ ಸಂಘಟನೆಗೆ ಬಳಸಿಕೊಳ್ಳುತ್ತೇವೆ. ಇಡೀ ರಾಜ್ಯ ಉಪಚುನಾವಣೆ ಫಲಿತಾಂಶ ನೋಡುತ್ತಿದೆ. ಯಾರು ಪಕ್ಷಕ್ಕೆ ದುಡಿಯುತ್ತಾರೋ ಅವರಿಗೆ ಸೂಕ್ತ ಸ್ಥಾನಮಾನ. ಸ್ಥಳೀಯ ಸಂಸ್ಥೆಗಳಲ್ಲಿ ಸೂಕ್ತ ಅವಕಾಶ. ನಮ್ಮ ಪಕ್ಷದ ಸಿದ್ಧಾಂತ ಒಪ್ಪಿಕೊಂಡು ಬಂದರೆ ಅವರನ್ನ ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದರು.

    ದೆಹಲಿಗೆ ಇಂದು ಅಭ್ಯರ್ಥಿ ಪಟ್ಟಿಯನ್ನು ಶಿಫಾರಸು ಮಾಡುತ್ತೇವೆ. ನಾವು ಟಿಕೆಟ್ ಕೊಡಲ್ಲ. ಹೈಕಮಾಂಡ್ ಟಿಕೆಟ್ ಪ್ರಕಟಿಸುತ್ತದೆ. ಶಿರಾ, ರಾಜರಾಜೇಶ್ವರಿ ನಗರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಟಿಕೆಟ್ ಅಂತಿಮ ಆಗುತ್ತದೆ. ಶಿರಾ ಕ್ಷೇತ್ರದಲ್ಲಿ ಈ ಹಿಂದೆ ಜಯಚಂದ್ರ 10 ಸಾವಿರ ಮತಗಳ ಅಂತರದಲ್ಲಿ ಸೋತಿದ್ದರು. ಇಡೀ ಜಿಲ್ಲೆಯ ನಾಯಕರು ಒಂದಾಗಿದ್ದಾರೆ. ರಾಜ್ಯ ಸರ್ಕಾರದ ಕಾರ್ಯಕ್ರಮ ಮತ್ತು ಆಗುತ್ತಿರುವ ಬೆಳವಣಿಗೆ ನೋಡಿದ್ದೇವೆ. ಮುಂದೆ ಕಾಂಗ್ರೆಸ್ ಮಾತ್ರ ಅನಿವಾರ್ಯ ಅಂತ ಶಿರಾ ತಾಲೂಕಿನ ಹಲವು ಮುಖಂಡರು ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಾರೆ ಎಂದು ತಿಳಿಸಿದರು.

    ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆಗಳ ವಿರುದ್ಧ 2 ಕೋಟಿ ಸಹಿ ಸಂಗ್ರಹ ಮಾಡುವ ಯೋಜನೆ ಹಮ್ಮಿಕೊಂಡಿದ್ದೇವೆ. ಪ್ರತಿ ಪಂಚಾಯತ್ ಮಟ್ಟದಲ್ಲಿ ಸಹಿ ಸಂಗ್ರಹ ಮಾಡಬೇಕು. ಪ್ರತಿ ಪಂಚಾಯತಿಯಲ್ಲಿ 1 ಸಾವಿರ ಜನರ ಸಹಿ ಮಾಡಿಸಬೇಕು. ಅಕ್ಟೋಬರ್ 31ರೊಳಗೆ ಸಹಿ ಸಂಗ್ರಹ ಮಾಡಿಸಿ ಕೆಪಿಸಿಸಿಗೆ ಕಳುಹಿಸಿಕೊಡಬೇಕು.

    ಉತ್ತರ ಪ್ರದೇಶದ ಅತ್ಯಾಚಾರ ಪ್ರಕರಣದ ವಿರುದ್ಧ ದೇಶದ ಜನರು ಪ್ರತಿಭಟನೆ ನಡೆಸಿದ್ದಾರೆ. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿಯನ್ನು ನಡೆಸಿಕೊಂಡ ರೀತಿ ಎಲ್ಲರಿಗೂ ಗೊತ್ತಿದೆ. ನಿರ್ಭಯಾ ಪ್ರಕರಣದಲ್ಲಿ ಪ್ರಧಾನಿಯೇ ಮುಂದೆ ನಿಂತು ಕರೆಯಿಸಿಕೊಂಡಿದ್ದರು. ಈ ಪ್ರಕರಣದಲ್ಲಿ ಅವರ ತಂದೆ ತಾಯಿಗೂ ನೋಡಲು ಅವಕಾಶ ನೀಡಿಲ್ಲ. ಇದರಿಂದ ನಮ್ಮ ದೇಶಕ್ಕೆ ಕಳಂಕ ಬಂದಿದೆ. ಇದರ ವಿರುದ್ಧ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

  • ಸರ್ಕಾರದ ಆಂತರಿಕ ಹುಳುಕುಗಳು ಈಗ ಹೊರಗೆ ಬರುತ್ತಿದೆ: ಡಿಕೆಶಿ

    ಸರ್ಕಾರದ ಆಂತರಿಕ ಹುಳುಕುಗಳು ಈಗ ಹೊರಗೆ ಬರುತ್ತಿದೆ: ಡಿಕೆಶಿ

    ಹುಬ್ಬಳ್ಳಿ: ಸರ್ಕಾರದ ಆಂತರಿಕ ಹುಳುಕುಗಳು ಈಗ ಹೊರಗೆ ಬರುತ್ತಿವೆ. ಸರ್ಕಾರ ಇರುತ್ತೋ, ಇಲ್ಲವೋ ಅಂತಾ ಅವರ ಸಚಿವರೆ ಬಹಿರಂಗವಾಗಿ ಹೇಳುತ್ತಿದ್ದಾರೆ. ಮುಂದೆ ಕಾದು ನೋಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

    ನಗರದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಸದಸ್ಯತ್ವ ಅಭಿಯಾನ ಸಮಾರಂಭ ಉದ್ಘಾಟಿಸಿದ ಬಳಿಕ ಮಾತನಾಡಿದ ಡಿಕೆಶಿ, ಸಚಿವ ಆನಂದ್ ಸಿಂಗ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು. ಸರ್ಕಾರದ ಒಂದೊಂದೇ ಹುಳುಕುಗಳು ಈಗ ಹೊರಬರುತ್ತಿವೆ. ಹುಳುಕು ಹೊರ ಬರುತ್ತಿದ್ದಂತೆಯೇ ಏನಾಗುತ್ತದೆಯೋ ಕಾದು ನೋಡಬೇಕು ಎಂದರು.

    ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಮಾತನಾಡಿದ ಅವರು, ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಕಮಿಟಿ ಮಾಡಿದ್ದೇವೆ. ಅವರ ವರದಿ ಮೇಲೆ ನಾಳೆ ಫೈನಲ್ ಮಾಡುತ್ತೇವೆ. ಈಗಾಗಲೇ ಬಹಳಷ್ಟು ಜನ ಆರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ಸಭೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಹೇಳಿದರು.

    ಡ್ರಗ್ಸ್ ಪ್ರಕರಣದಲ್ಲಿ ಸರ್ಕಾರಕ್ಕೆ ಒತ್ತಡ ಇದೆ ಅಂತ ಈಗಾಗಲೇ ಗೊತ್ತಾಗಿದೆ. ಆದ್ದರಿಂದಲೇ ಅಧಿಕಾರಿಗಳ ಎತ್ತಂಗಡಿ ಮಾಡಿದ್ದಾರೆ. ಆದರೆ ಅಧಿಕಾರಿಗಳ ವರ್ಗಾವಣೆ ಬಗ್ಗೆ ನಾನೇನು ಮಾತನಾಡುವುದಿಲ್ಲ ಎಂದರು.

  • ಯಡಿಯೂರಪ್ಪನವ್ರು ಯಾವತ್ತೂ ಅಳುಮುಂಜಿಯಂತೆ ಅಳಲ್ಲ – ಹೆಚ್‍ಡಿಕೆಗೆ ಪ್ರತಾಪ್ ಸಿಂಹ ತಿರುಗೇಟು

    ಯಡಿಯೂರಪ್ಪನವ್ರು ಯಾವತ್ತೂ ಅಳುಮುಂಜಿಯಂತೆ ಅಳಲ್ಲ – ಹೆಚ್‍ಡಿಕೆಗೆ ಪ್ರತಾಪ್ ಸಿಂಹ ತಿರುಗೇಟು

    ತುಮಕೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಯಾವತ್ತೂ ಅಳುಮುಂಜಿಯಂತೆ ಅಳಲ್ಲ ಎಂದು ಸಂಸದ ಪ್ರತಾಪ್ ಸಿಂಹ್ ಅವರು ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ.

    ಶಿರಾದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಂಸದರು, ಯಡಿಯೂರಪ್ಪನವರಿಗೆ 78 ವರ್ಷ ಅವರ ಮುಖದಲ್ಲಿ ಸಾತ್ವಿಕ ಸಿಟ್ಟು ಕಾಣುತ್ತೆ. ಯಡಿಯೂರಪ್ಪನವರು ಯಾವತ್ತೂ ಅಳುಮುಂಜಿ ತರ ಅಳಲ್ಲ. ಕುಮಾರಣ್ಣ ಸಭೆ ಸಮಾರಂಭದಲ್ಲಿ ಅಪ್ಪ, ಮಕ್ಕಳು, ಸೊಸೆಯಂದಿರು ಹಾಗೂ ಮೊಮ್ಮಕ್ಕಳು ಸಾಲಾಗಿ ಬಂದು ಅಳೋರು ಎಂದು ಲೇವಡಿ ಮಾಡಿದ್ದಾರೆ.

    ಶಿರಾ ಜನ ಹಾಲು ಕೊಡ್ತಿರೋ ವಿಷ ಕೊಡ್ತಿರೋ ಅಂತ ಕುಮಾರಸ್ವಾಮಿ ಕೇಳ್ತಿದ್ದಾರೆ. ಶಿರಾ ಜನರು ಅವರಿಗೆ ಕೊರೊನಾ ಸಂದರ್ಭದಲ್ಲಿ ಕಷಾಯ ಕೊಟ್ಟು ಕಳುಹಿಸಿ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಮುಖ್ಯಮಂತ್ರಿಯಾಗಲು ಕೇಂದ್ರದಿಂದ ಮೋದಿಯವರೇ ಆಫರ್ ನೀಡಿದ್ರು: ಹೆಚ್‍ಡಿಕೆ

    ಹೆಚ್‍ಡಿಕೆ ಹೇಳಿದ್ದೇನು?
    ಸೆಪ್ಟೆಂಬರ್ 30ರಂದು ತುಮಕೂರಿನ ಶಿರಾದಲ್ಲಿ ನಡೆದಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಭಾಷಣ ಮಾಡಿದ್ದ ಹೆಚ್‍ಡಿಕೆ, ಕಾಂಗ್ರೆಸ್ಸಿನವರ ಸಹವಾಸ ಮಾಡಿದಕ್ಕೆ ಜನ ನನ್ನ ಒಪ್ಪಿಕೊಂಡಿಲ್ಲ. ಅಷ್ಟೇ ಯಾಕೆ ನನ್ನ ಕಾರ್ಯಕರ್ತರೇ ಒಪ್ಪಿಕೊಂಡಿಲ್ಲ. ಶಿರಾ ಜನರು ನನಗೆ ವಿಷ ಕೊಡುತ್ತಿರೋ ಅಥವಾ ಹಾಲು ಕೊಡುತ್ತಿರೋ ನಿಮಗೆ ಬಿಟ್ಟಿದ್ದು. ಇಲ್ಲಿಂದ ಹೊಸ ರಾಜಕೀಯ ಆರಂಭವಾಗಬೇಕು. ಸರ್ಕಾದಲ್ಲಿ ದುಡ್ಡಿಗೆ ತೊಂದರೆ ಇಲ್ಲ. ರಾಜ್ಯ ಸಂಪದ್ಭರಿತವಾಗಿದೆ ಎಂದು ಕುಮಾರಸ್ವಾಮಿಯವರು ತಿಳಿಸಿದ್ದರು.

  • ಉಪ ಚುನಾವಣೆ- ಮುನಿರತ್ನ ಬೆನ್ನಿಗೆ ನಿಂತ ಬಿಎಸ್‍ವೈ

    ಉಪ ಚುನಾವಣೆ- ಮುನಿರತ್ನ ಬೆನ್ನಿಗೆ ನಿಂತ ಬಿಎಸ್‍ವೈ

    ಬೆಂಗಳೂರು: ಬಿಜೆಪಿಯಲ್ಲಿ ಉಪಚುನಾವಣೆ ಕಾವು ಜೋರಾಗಿದ್ದು, ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಮಾಜಿ ಶಾಸಕ ಮುನಿರತ್ನಗೆ ಟಿಕೆಟ್ ನೀಡಲೇಬೇಕೆಂದು ಇಂದು ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

    ಬಿಜೆಪಿ ಕೋರ್ ಕಮಿಟಿ ಸಬೆಯಲ್ಲಿ ಮಾತನಾಡಿರುವ ಅವರು, ಸರ್ಕಾರ ರಚಿಸಲು ನಾವು ಮುನಿರತ್ನ ಬೆಂಬಲ ಪಡೆದಿದ್ದೇವೆ. ಹೀಗಾಗಿ ಅವರಿಗೆ ಕೊಟ್ಟ ಮಾತಿನಂತೆ ಟಿಕೆಟ್ ನೀಡಲೇಬೇಕು. ಬೇರೆ ದಾರಿ ಇಲ್ಲ ಎಂದು ಸಿಎಂ ಸ್ಪಷ್ಟವಾಗಿ ಹೇಳಿದ್ದಾರೆ.

    ತುಳಸಿ ಮುನಿರಾಜು ಗೌಡ ಅವರಿಗೆ ನಿಗಮ ಮಂಡಳಿ ಕೊಟ್ಟರೂ ಬೇಡ ಎನ್ನುತ್ತಿದ್ದಾರೆ. ಇದಕ್ಕೆ ಏನು ಮಾಡುವುದೋ ತಿಳಿಯದಾಗಿದೆ ಎಂದು ಸಿಎಂ ಹೇಳಿದ್ದಾರೆ. ಈ ವೇಳೆ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಚುನಾವಣಾ ಸಮಿತಿಗೆ ಇಬ್ಬರ ಹೆಸರೂ ಕಳುಹಿಸೋಣ. ಅಲ್ಲಿಯೇ ತೀರ್ಮಾನ ಆಗಲಿ ಎಂದರು. ಹೀಗಾಗಿ ಇಬ್ಬರ ಹೆಸರನ್ನು ದೆಹಲಿಗೆ ಕಳುಹಿಸಲು ಕೋರ್ ಕಮಿಟಿ ಸಭೆ ತೀರ್ಮಾನಿಸಿತು. ಮೂಲಗಳ ಪ್ರಕಾರ ಮುನಿರತ್ನ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಿದೆ.

    ಶಿರಾ ಅಭ್ಯರ್ಥಿಯಾಗಲು ಪಕ್ಷದಲ್ಲಿ ಪೈಪೋಟಿ ಹೆಚ್ಚಿದ್ದು, ಮೂವರ ಹೆಸರನ್ನು ಹೈಕಮಾಂಡ್‍ಗೆ ಕಳಿಸಲು ನಿರ್ಧರಿಸಲಾಗಿದೆ. ಇನ್ನು ಆರು ಕ್ಷೇತ್ರಗಳ ಚುನಾವಣೆಗೆ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಆರ್‍ಆರ್ ನಗರ ಕ್ಷೇತ್ರದ ಚುನಾವಣಾ ಉಸ್ತುವಾರಿಗಳಾಗಿ ಸಚಿವರಾದ ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜು, ಆರ್.ಅಶೋಕ್, ಎಸ್.ಆರ್.ವಿಶ್ವನಾಥ್, ಅರವಿಂದ ಲಿಂಬಾವಳಿಯವರನ್ನು ಕೋರ್ ಕಮಿಟಿ ಸಭೆ ನಿರ್ಧರಿಸಿದೆ. ಶಿರಾ ಕ್ಷೇತ್ರಕ್ಕೆ ಡಿಸಿಎಂಗಳಾದ ಗೋವಿಂದ ಕಾರಜೋಳ, ಅಶ್ವಥ್ ನಾರಾಯಣ, ಎಂಎಲ್‍ಸಿ ರವಿ ಕುಮಾರ್, ಸಂಸದ ಪಿ.ಸಿ.ಮೋಹನ್, ಶಾಸಕಿ ಪೂರ್ಣಿಮಾ ಶ್ರೀನಿವಾಸ್‍ಗೆ ಉಸ್ತುವಾರಿ ನೀಡಲಾಗಿದೆ.

  • ಮೈತ್ರಿ ಧರ್ಮ ಒಪ್ಪದ ಕಾಂಗ್ರೆಸ್ ಜೊತೆ ಎಂದೂ ಹೋಗಲ್ಲ: ಎಚ್‍ಡಿಕೆ

    ಮೈತ್ರಿ ಧರ್ಮ ಒಪ್ಪದ ಕಾಂಗ್ರೆಸ್ ಜೊತೆ ಎಂದೂ ಹೋಗಲ್ಲ: ಎಚ್‍ಡಿಕೆ

    ಬೆಂಗಳೂರು: ಕಾಂಗ್ರೆಸ್ ಮೈತ್ರಿಗೆ ಯೋಗ್ಯವಲ್ಲ. ಮೈತ್ರಿ ಧರ್ಮ ಒಪ್ಪದ ಪಕ್ಷದ ಜೊತೆ ಎಂದೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ರಾಜ್ಯದಲ್ಲಿ ಮೈತ್ರಿ ಎಂದರೆ ಕಾಂಗ್ರೆಸ್-ಜೆಡಿಎಸ್ ಎಂಬ ಭಾವನೆಯೂ ಬೇಡ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

    ಉಪಚುನಾವಣೆ ನಡೆಯುತ್ತಿರುವ ಹಿನ್ನೆಲೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಪಕ್ಷಗಳು ಅಭ್ಯರ್ಥಿ ಆಯ್ಕೆಯಲ್ಲಿ ತೊಡಗಿವೆ. ಇದೇ ವೇಳೆ ಮೈತ್ರಿ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದೆ. ಹೀಗಾಗಿ ಟ್ವೀಟ್ ಮಾಡುವ ಮೂಲಕ ಕುಮಾರಸ್ವಾಮಿ ಅವರು ಮೈತ್ರಿ ಕುರಿತು ಸ್ಪಷ್ಟಪಡಿಸಿದ್ದಾರೆ.

    ಸರಣಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಜೆಡಿಎಸ್ ಜೊತೆ ಮೈತ್ರಿ ಇಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿರುವ ಪತ್ರಿಕೆ, ವಾಹಿನಿಗಳ ವರದಿಯನ್ನು ಗಮನಿಸಿದೆ. ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾವವನ್ನು ಜೆಡಿಎಸ್‍ನಿಂದ ಮುಂದಿಟ್ಟಿರುವುದಾದರೂ ಯಾರು? 2018ರ ಫಲಿತಾಂಶದ ಬಳಿಕ ದೇವೇಗೌಡರ ಮನೆ ಬಾಗಿಲಿಗೆ ಕಾಂಗ್ರೆಸ್ ಬಂದಂತೆ ನಾವ್ಯಾರೂ ಕಾಂಗ್ರೆಸ್ ಬಾಗಿಲಿಗೆ ಹೋಗಿಲ್ಲ ಎಂದು ಹರಿಹಾಯ್ದಿದ್ದಾರೆ.

    ಎರಡನೇ ಟ್ವೀಟ್‍ನಲ್ಲಿ, ಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ. ರಾಜ್ಯದಲ್ಲಿ ನನ್ನ ನೇತೃತ್ವದ ಮೈತ್ರಿ ಸರ್ಕಾರ ಕೆಡವಿದ, ರಾಜಸ್ಥಾನದಲ್ಲಿ ಬೆಂಬಲ ನೀಡಿದ್ದ ಬಿಎಸ್‍ಪಿ ಶಾಸಕರನ್ನೇ ಸೆಳೆದ, ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ದಿನವೂ ಅಲುಗಾಡಿಸುತ್ತಿರುವ ಅದರ ವರ್ತನೆಯು ಮೈತ್ರಿಗೆ ತಾನು ಯೋಗ್ಯವಲ್ಲ ಎಂಬುದರ ಸಂದೇಶ. ಅಷ್ಟಕ್ಕೂ ಕಾಂಗ್ರೆಸ್ ಮಿತ್ರ ಪಕ್ಷಗಳು ಬೇರೆಯೇ ಇವೆ ಎಂದು ಕಿಡಿಕಾರಿದ್ದಾರೆ.

    ಮೈತ್ರಿ ಧರ್ಮವನ್ನೂ ಧರ್ಮವೆಂದು ಒಪ್ಪದ ಕಾಂಗ್ರೆಸ್ ಜೊತೆ ಎಂದೂ ಮೈತ್ರಿ ಇಲ್ಲ. ಮೈತ್ರಿ ವಿಷಯವಾಗಿ ಕಾಂಗ್ರೆಸ್ ಎದುರು ಜೆಡಿಎಸ್‍ನ ಅವಕಾಶವನ್ನು ಯಾರೂ ಮುಂದಿಡುವುದೂ ಬೇಡ. ರಾಜ್ಯದಲ್ಲಿ ಮೈತ್ರಿ ಎಂದರೆ ಕಾಂಗ್ರೆಸ್-ಜೆಡಿಎಸ್ ಎಂಬ ಭಾವನೆಯೂ ಬೇಡ. ಹಾಗೇ, ಜೆಡಿಎಸ್, ದೇವೇಗೌಡರ ಹೆಸರು ಬಳಸಿ ಆ ಪಕ್ಷದ ‘ನಾಯಕ’ರು ಲಾಭ ಮಾಡಿಕೊಳ್ಳುವುದೂ ಬೇಡ ಎಂದು ಹೇಳಿದ್ದಾರೆ.