Tag: by election

  • ಎಷ್ಟಾದ್ರೂ ಹಣ ಸುರಿದು ಚುನಾವಣೆ ಮಾಡೋದು ಹೆಚ್‌ಡಿಕೆ ಬಳಿ ಇರೋ ಅಸ್ತ್ರ: ಸಿಪಿವೈ

    ಎಷ್ಟಾದ್ರೂ ಹಣ ಸುರಿದು ಚುನಾವಣೆ ಮಾಡೋದು ಹೆಚ್‌ಡಿಕೆ ಬಳಿ ಇರೋ ಅಸ್ತ್ರ: ಸಿಪಿವೈ

    – ಕಣ್ಣೀರು ಹಾಕಿ ನಾಟಕ ಮಾಡಲು ನನಗೆ ಬರಲ್ಲ ಎಂದ ಯೋಗೇಶ್ವರ್‌

    ರಾಮನಗರ: ಕಣ್ಣೀರು ಹಾಕಲು ನನಗೆ ಬರಲ್ಲ. ನಾನು ಕಣ್ಣಿರು ಹಾಕಲ್ಲ. ನನಗೆ ನಾಟಕ ಮಾಡಲು ಬರಲ್ಲ ಎಂದು ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ (CP Yogeshwar) ಪರೋಕ್ಷವಾಗಿ ಹೆಚ್‌ಡಿಕೆಗೆ ಟಾಂಗ್ ಕೊಟ್ಟಿದ್ದಾರೆ.

    ಕೋಡಂಬಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಸಮನ್ವಯ ಸಭೆ ನಡೆಸಿ ಮಾತನಾಡಿದ ಅವರು, ಚನ್ನಪಟ್ಟಣ ತಾಲೂಕಿನಲ್ಲಿ ಇದು ನನ್ನ 10ನೇ ಚುನಾವಣೆ. ಈ ಉಪಚುನಾವಣೆ ಬರುತ್ತದೆ ಎಂದು ನಾನು ಅಂದುಕೊಂಡಿರಲಿಲ್ಲ. ಕುಮಾರಸ್ವಾಮಿ (HD Kumaraswamy) ರಾಜಕೀಯ ಮಹತ್ವಾಕಾಂಕ್ಷೆಯಿಂದ ಬೈ ಎಲೆಕ್ಷನ್ ಬಂತು. ಎಂಎಲ್‌ಎ ಆಗಿ ಅವರು ಒಮ್ಮೆಯೂ ಕ್ಷೇತ್ರಕ್ಕೆ ಬಂದಿಲ್ಲ. ಮೊನ್ನೆ 150 ಕೆರೆ ತುಂಬಿಸಿದ್ದೇವೆ ಎನ್ನುತ್ತಿದ್ದರು. ಅವರಿಗೆ ಚನ್ನಪಟ್ಟಣದಲ್ಲಿ (Channapatna) ಎಷ್ಟು ಕೆರೆ ಇದೆ ಅಂತ ಗೊತ್ತಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ತೇಜಸ್ವಿ ಸೂರ್ಯ ಈಗ ಐರನ್ ಮ್ಯಾನ್ – 70.3 ರೇಸ್‌ನಲ್ಲಿ ವಿಜೇತರಾದ ಪ್ರಥಮ ಜನಪ್ರತಿನಿಧಿ!

    ನಾನು, ಸುರೇಶ್ ಸೇರಿ ಒಂದು ಹೊಸ ಯೋಜನೆ ಬಗ್ಗೆ ಆಲೋಚನೆ ಮಾಡಿದ್ದೇವೆ. ಕೆಆರ್‌ಎಸ್‌ನಿಂದ ಮಾರ್ಕೋನಹಳ್ಳಿ ಡ್ಯಾಂಗೆ ನೀರು ತಂದು ಅದನ್ನು ಕಣ್ವ, ಇಗ್ಗಲೂರು ಡ್ಯಾಂಗೆ ತರಬಹುದು. ಕುಮಾರಸ್ವಾಮಿ ಎರಡು ಬಾರಿ ಗೆದ್ದರೂ ಒಂದು ಕೆರೆ ತುಂಬಿಸಲಿಲ್ಲ. ಶಿವಲಿಂಗೇಗೌಡರಿಗೆ ಅವರ ಎಲ್ಲಾ ಮರ್ಮಗಳು ಗೊತ್ತು. ಅವರ ಪ್ಲಾನ್‌ಗಳು ನಮ್ಮ ಬಹುತೇಕ ನಾಯಕರಿಗೆ ಗೊತ್ತು. ನನ್ನ ಮೇಲೆ ಅವರ ಮನೆಯವರು ಯಾಕೆ ಹೀಗೆ ಮುಗಿಬೀಳುತ್ತಿದ್ದಾರೋ ಗೊತ್ತಿಲ್ಲ. ನಾನೇನು ತಪ್ಪು ಮಾಡಿದ್ದೀನಿ? ನನ್ನ ಮೇಲೆ ಯಾಕೆ ಹೀಗೆ ಬೀಳ್ತಾರೆ? ಕುಮಾರಸ್ವಾಮಿ ಬಂದ್ರು, ಅವರ ಪತ್ನಿ ಬಂದ್ರು ಈಗ ಮಗ ಬಂದ್ರು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ವಕ್ಫ್‌ ಆಸ್ತಿ ವಿವಾದ | 1964-1974ರ ದಾಖಲೆ ಪರಿಶೀಲಿಸಿ ಕ್ರಮವಹಿಸಲು ಟಾಸ್ಕ್ ಫೋರ್ಸ್ ರಚನೆ

    ಮೊನ್ನೆ 500 ಬಸ್ ಮಾಡಿ ಜನ ಸೇರಿಸಿ ನಾಮಪತ್ರ ಸಲ್ಲಿಕೆ ಮಾಡಿದರು. ಕೇಂದ್ರದಲ್ಲಿ ಮಂತ್ರಿ ಆಗಿದ್ದಾರೆ. ಎಷ್ಟಾದ್ರೂ ಹಣ ತಂದು ಚುನಾವಣೆ ಮಾಡೋಕೆ ನಿಂತಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಕೇಳಿದೆ. ಈಗ ಚುನಾವಣಾ ಆಯೋಗ ಕೇಸ್ ಹಾಕಿ 96 ಬಸ್ ಸೀಜ್ ಮಾಡಿ ಕ್ರಮ ಕೈಗೊಳ್ಳುತ್ತಾರೆ ಎಂದರು. ಇದನ್ನೂ ಓದಿ: ಯೂಟ್ಯೂಬ್‌ನಲ್ಲಿ ಸಕ್ರಿಯವಾಗಿದ್ದ ಕೇರಳ ದಂಪತಿ ಮನೆಯಲ್ಲಿ ಶವವಾಗಿ ಪತ್ತೆ; ಕಾರಣ ನಿಗೂಢ

    ಯಥೇಚ್ಛವಾಗಿ ಹಣ ಸುರಿದು ಚುನಾವಣೆ ಮಾಡೋದು ಕುಮಾರಸ್ವಾಮಿಗೆ ಇರುವ ಒಂದೇ ಅಸ್ತ್ರ. ನನ್ನ ಬಳಿ ಅಷ್ಟು ಹಣ ಇಲ್ಲ, ಎರಡು ಬಾರಿ ಸೋತಿದ್ದೇನೆ. ಜನರೇ ನನ್ನ ಪರವಾಗಿ ಚುನಾವಣೆ ಮಾಡುತ್ತಾರೆ. ನನ್ನ ಎಲ್ಲರೂ ಪಕ್ಷಾಂತರಿ ಎನ್ನುತ್ತಾರೆ. ಯಾಕೆ ಕಾಂಗ್ರೆಸ್ ಬಿಟ್ಟು ಹೋಗಿದ್ರಿ ಎಂದು ಕೇಳುತ್ತಾರೆ. ಅವತ್ತು ನೀರಾವರಿ ಯೋಜನೆಗಾಗಿ ಪಕ್ಷ ಬಿಟ್ಟು ಹೋಗಿದ್ದೆ. ಕ್ಷೇತ್ರದ ಅಭಿವೃದ್ಧಿಗಾಗಿ ನಾನು ಪಕ್ಷಾಂತರ ಮಾಡಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಇಸ್ರೇಲ್‌ಗೆ ನಮ್ಮ ಶಕ್ತಿ ಏನೆಂದು ತೋರಿಸಬೇಕು: ಮತ್ತೆ ಯುದ್ಧದ ಎಚ್ಚರಿಕೆ ನೀಡಿದ ಇರಾನ್‌ ಸುಪ್ರೀಂ ಲೀಡರ್‌

    ಸರ್ಕಾರದಲ್ಲಿ ನಾನು ಶಾಸಕನಾಗಿ ಸೇರಿಕೊಂಡ ನಂತರ ದಿನಗಳಲ್ಲಿ ಡಿಕೆ ಶಿವಕುಮಾರ್ ಅವರು ನೀರಾವರಿ ಸಚಿವರಾಗಿದ್ದಾರೆ. ನಾನು ಡಿಕೆ ಸುರೇಶ್ ಸೇರಿಕೊಂಡು ನೀರಾವರಿ ಯೋಜನೆಗೆ ಹೆಚ್ಚು ಒತ್ತು ಕೊಡುತ್ತೇವೆ. ನಾನು ಎರಡು ಬಾರಿ ಸೋತು ಸುಣ್ಣ ಆಗಿದ್ದೇನೆ. ಹಾಗಾಗಿ ನೀವು ಈ ಬಾರಿ ನನಗೆ ಆಶೀರ್ವಾದ ಮಾಡಬೇಕು. ನನ್ನ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರೆಲ್ಲರೂ ಒಟ್ಟಾಗಿ ಚುನಾವಣೆ ಎದುರಿಸಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಜಾತಿಗಣತಿ ವರದಿ ಆಧಾರದ ಮೇಲೆ ಹಳ್ಳಿಕಾರ್ ಸಮುದಾಯಕ್ಕೆ ನ್ಯಾಯ ಒದಗಿಸುತ್ತೇವೆ: ಸಿದ್ದರಾಮಯ್ಯ

  • ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳ ಗೆಲುವು ನಿಶ್ಚಿತ- ಬೈರತಿ ಬಸವರಾಜ್

    ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳ ಗೆಲುವು ನಿಶ್ಚಿತ- ಬೈರತಿ ಬಸವರಾಜ್

    ಹುಬ್ಬಳ್ಳಿ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳ ಗೆಲುವು ನಿಶ್ಚಿತ. ರಾಜ್ಯದಲ್ಲಿ ಸರ್ಕಾರದ ನಡೆ ವಿರುದ್ಧ ರಾಜ್ಯದ ಜನ ನಿರಾಶರಾಗಿದ್ದಾರೆ, ಹೀಗಾಗಿ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವುದು ನಿಶ್ಚಿತ ಎಂದು ಮಾಜಿ ಸಚಿವ ಬೈರತಿ ಬಸವರಾಜ್ ( Byrati Basavaraj) ಹೇಳಿದರು.

    ಈ ಬಗ್ಗೆ ಹುಬ್ಬಳ್ಳಿಯಲ್ಲಿ (Hubballi) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯ (BJP) ಎಂಟು ಜನ ಶಾಸಕರು ಕಾಂಗ್ರೆಸ್‌ಗೆ ಹೋಗುತ್ತಾರೆ ಎಂಬ ಎಸ್.ಟಿ.ಸೋಮಶೇಖರ್ ಹೇಳಿಕೆಗೆ ತಿರುಗೇಟು ನೀಡಿ, ಸುಮ್ಮನೇ ಈ ರೀತಿ ಸುಳ್ಳು ಹೇಳಿಕೆ ನೀಡೋದು ಸರಿಯಲ್ಲ. ಅವರು ನಮ್ಮ ಪಕ್ಷದಿಂದ ಒಂದು ಕಾಲು ಹೊರಗಿಟ್ಟು ಈ ರೀತಿ ಮಾತನಾಡುತ್ತಿದ್ದಾರೆ. ಯಾವ್ಯಾವ ಶಾಸಕರು ಹೋಗುತ್ತಾರೆ ಅವರ ಹೆಸರು ಹೇಳಬೇಕಲ್ವಾ. ಎಸ್.ಟಿ.ಸೋಮಶೇಖರ್ ಅದನ್ನ ಸ್ಪಷ್ಟಪಡಿಸಲಿ, ನಮ್ಮ ಮೇಲೆ ಅಂತಹ ಅಭಿಪ್ರಾಯಗಳು ಇದ್ದರೆ ನಾವು ಯಾಕೆ ನಾಮಪತ್ರ ಸಲ್ಲಿಸುವುದಕ್ಕೆ ಬರುತ್ತಿದ್ದೆವು ಎಂದರು. ಇದನ್ನೂ ಓದಿ: ಸಂಡೂರು ಉಪಚುನಾವಣೆ: ಬಂಗಾರು ಹನುಮಂತು ನಾಮಪತ್ರ ಸಲ್ಲಿಕೆ

    ಬಿಜೆಪಿ ಕುಟುಂಬ ರಾಜಕಾರಣ ವಿಚಾರವಾಗಿ ಮಾತನಾಡಿ, ನಮ್ಮಲ್ಲಿ ಯಾವುದೇ ಕುಟುಂಬ ರಾಜಕಾರಣ ಪ್ರಶ್ನೆಯೇ ಇಲ್ಲ. ಬೊಮ್ಮಾಯಿಯವರು ಅವರ ಮಗನಿಗೆ ಟಿಕೆಟ್ ಬೇಡ ಎಂದಿದ್ದರು. ರಾಷ್ಟ್ರೀಯ ನಾಯಕರೇ ನಿರ್ಧಾರ ಮಾಡಿದಾಗ ಬೇಡ ಎನ್ನಲು ಸಾಧ್ಯವಿಲ್ಲ. ಹಿರಿಯ ನಾಯಕರ ನಿರ್ಧಾರವನ್ನ ತಿರಸ್ಕಾರ ಮಾಡುವುದು ಸಮಂಜಸವಲ್ಲ. ಈ ನಿಟ್ಟಿನಲ್ಲಿ ಪಕ್ಷದ ಹಿರಿಯ ನಾಯಕರ ನಿರ್ಧಾರದ ಮೇಲೆ ಭರತ್ ಬೊಮ್ಮಾಯಿ ಕಣಕ್ಕಿಳಿದಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಬೇಲೇಕೇರಿ ಅದಿರು ನಾಪತ್ತೆ ಕೇಸ್‌ – ನಾಳೆ ಕಾಂಗ್ರೆಸ್‌ ಶಾಸಕ ಸತೀಶ್ ಸೈಲ್‌ಗೆ ಶಿಕ್ಷೆಯ ಪ್ರಮಾಣ ಪ್ರಕಟ

  • ಚನ್ನಪಟ್ಟಣ ಉಪಕಣ; ದೋಸ್ತಿಗಳಲ್ಲಿ ಮೂಡದ ಒಮ್ಮತ – ಮುಂದಿನ ಆಯ್ಕೆ ಮುಕ್ತವಾಗಿರಿಸಿದ ಮಾಜಿ ಮಂತ್ರಿ

    ಚನ್ನಪಟ್ಟಣ ಉಪಕಣ; ದೋಸ್ತಿಗಳಲ್ಲಿ ಮೂಡದ ಒಮ್ಮತ – ಮುಂದಿನ ಆಯ್ಕೆ ಮುಕ್ತವಾಗಿರಿಸಿದ ಮಾಜಿ ಮಂತ್ರಿ

    ಬೆಂಗಳೂರು: ಚನ್ನಪಟ್ಟಣ ಉಪಸಮರದ (Channapatna BY Election) ಕಾವು ಜೋರಾಗಿದೆ. ಟಿಕೆಟ್ ಯಾವ ಪಕ್ಷದ ಪಾಲಾಗಬೇಕು ಎಂಬ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮತ್ತು ಕುಮಾರಸ್ವಾಮಿಯಲ್ಲಿ ಒಮ್ಮತ ಮೂಡದ ಕಾರಣ ನಿರೀಕ್ಷಿತ ಎನ್ನುವಂತಹ ಬೆಳವಣಿಗೆಗಳು ನಡೀತಿವೆ. ಬಿಜೆಪಿ-ಜೆಡಿಎಸ್ ಹಗ್ಗಜಗ್ಗಾಟದಲ್ಲಿ ಯೋಗೇಶ್ವರ್ (CP Yogeshwara) ಪಕ್ಷೇತರರಾಗಿ ಸ್ಪರ್ಧೆ ಮಾಡೋದಾಗಿ ಘೋಷಿಸಿದ್ದಾರೆ.

    ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸೋಮವಾರ ಹುಬ್ಬಳ್ಳಿಗೆ ತೆರಳಿ ಸಭಾಪತಿಗಳಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಆದ್ರೆ, ಬಿಜೆಪಿಯನ್ನು ತೊರೆದಿಲ್ಲ. ಬಿಜೆಪಿ ಟಿಕೆಟ್‌ಗಾಗಿಯೇ (BJP Ticket) ಕೊನೆ ಕ್ಷಣದ ಪ್ರಯತ್ನ ನಡೆಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿಯನ್ನು ಫೋನ್ ಮೂಲಕ ಸಂಪರ್ಕಿಸಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಬಿಜೆಪಿಯಿಂದ ಟಿಕೆಟ್ ಕೊಡಿ ಎಂದು ಈಗಲೂ ಕೇಳ್ತಿದ್ದೇನೆ. ಕಾಂಗ್ರೆಸ್‌ಗೆ ಹೋಗಿ ಅಲ್ಲಿಂದ ಸ್ಪರ್ಧೆ ಮಾಡೋ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ. ನಾಳೆವರೆಗೂ ಕಾಯ್ತೇನೆ ಎಂದು ಯೋಗೇಶ್ವರ್ ಹೇಳಿದ್ದಾರೆ. ಇದನ್ನೂ ಓದಿ: By Election | ಚನ್ನಪಟ್ಟಣದಲ್ಲಿ ಡಿ.ಕೆ ಸುರೇಶ್ ಸ್ಪರ್ಧೆಗೆ ಒತ್ತಡ ಇದೆ – ಡಿ.ಕೆ ಶಿವಕುಮಾರ್

    ಕುಮಾರಸ್ವಾಮಿ ಹೇಳಿದಂತೆ ನಾನು ಕಾಂಗ್ರೆಸ್ಸಿನ ಯಾರನ್ನು ಸಂಪರ್ಕ ಮಾಡಿಲ್ಲ. ಆದ್ರೆ ಮಂಗಳವಾರ ಏನಾಗುತ್ತೆ ಗೊತ್ತಿಲ್ಲ ಅಂತಾನೂ ಯೋಗೇಶ್ವರ್ ಹೇಳಿಕೆ ನೀಡಿದ್ದಾರೆ. ಈ ಮೂಲಕ ಎಲ್ಲಾ ಆಯ್ಕೆಗಳನ್ನು ಮಕ್ತವಾಗಿರಿಸಿಕೊಂಡಿದ್ದಾರೆ. ಅತ್ತ, ಸಿಎಂ, ಡಿಸಿಎಂ ಸೇರಿ ಕಾಂಗ್ರೆಸ್‌ನ ಹಲವು ನಾಯಕರು ಕೂಡ ಯೋಗೇಶ್ವರ್ ಜೊತೆ ಮಾತಾಡಿಲ್ಲ ಎಂದಿದ್ದಾರೆ. ಡಿಕೆ ಶಿವಕುಮಾರ್ ಅವ್ರಂತೂ, ಸಿಪಿವೈ ರಾಜೀನಾಮೆ ವಿಚಾರ ಗೊತ್ತೇ ಇಲ್ಲ ಎಂಬಂತೆ ವರ್ತಿಸಿದ್ದಾರೆ. ಆದರೆ, ಯಾವುದಕ್ಕೂ ಇರಲಿ ಪಕ್ಷ ಸೇರ್ಪಡೆಗೆ ವೇದಿಕೆ ಸಿದ್ದಪಡಿಸಿ ಎಂದು ಕೆಪಿಸಿಸಿ ಕಚೇರಿ ಸಿಬ್ಬಂದಿಗೆ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಆದ್ರೆ, ಯೋಗೇಶ್ವರ್ ದುಡುಕಲ್ಲ ಎಂಬ ವಿಶ್ವಾಸವನ್ನು ಅಶೋಕ್ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪೊಲೀಸರು ಮುಕ್ತ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ: ಸಿಎಂ

    ಯೋಗೇಶ್ವರ್ ರೆಬೆಲ್ ನಡೆಗೆ ಕಾರಣವೇನು?
    * ಯೋಗೇಶ್ವರ್ ವಿಚಾರದಲ್ಲಿ ಆರಂಭದಲ್ಲಿ ಹೆಚ್‌ಡಿಕೆ ಅಂತರ
    * ಜೆಡಿಎಸ್ ಚಿನ್ಹೆಯಿಂದ ಯೋಗೇಶ್ವರ್ ಸ್ಪರ್ಧಿಸಬೇಕು ಎಂಬ ಷರತ್ತು
    * ಜೆಡಿಎಸ್‌ ಚಿನ್ಹೆಯಿಂದ ಚನ್ನಪಟ್ಟಣದಲ್ಲಿ ಸ್ಪರ್ಧಿಸಲು ಜೆಡಿಎಸ್ ಘಟಕದಿಂದ ವಿರೋಧ
    * ಜೆಡಿಎಸ್ ಚಿನ್ಹೆಯಡಿ ಸ್ಪರ್ಧಿಸಲು ಯೋಗೇಶ್ವರ್ ಹಿಂದೇಟು
    * ಎನ್‌ಡಿಎ ಟಿಕೆಟ್ ಖಚಿತವಾಗದ ಕಾರಣ ರೆಬೆಲ್ ಆದ ಯೋಗೇಶ್ವರ್

    ಯೋಗೇಶ್ವರ್ ನಡೆ ದೋಸ್ತಿಗಳಿಗೆ ತಲೆ ಬಿಸಿ ತಂದಿದೆ. ಟಿಕೆಟ್ ಗೊಂದಲಕ್ಕೆ ರಾಜ್ಯ ಬಿಜೆಪಿಯ ಕೆಲ ನಾಯಕರು ಕಾರಣ ಎಂದು ಕೇಂದ್ರ ಮಂತ್ರಿ ಕುಮಾರಸ್ವಾಮಿ ಕಳೆದ ರಾತ್ರಿಯೇ ಅಸಮಾಧಾನ ವ್ಯಕ್ತಪಡಿಸಿದ್ರು. ಯೋಗೇಶ್ವರ್ ಸ್ಪರ್ಧೆ ವಿಚಾರವಾಗಿ ರಾಜ್ಯ ಬಿಜೆಪಿ ನಾಯಕರಲ್ಲೂ ಭಿನ್ನ ಅಭಿಪ್ರಾಯಗಳು ಇರೋದು ಗೋಚರವಾಗಿತ್ತು. ಕೆಲವರು ಯೋಗೇಶ್ವರ್‌ಗೆ ಟಿಕೆಟ್ ಸಿಗ್ಬೇಕು ಎಂದು ಆಗ್ರಹಿಸಿದ್ರೆ, ಬಿಎಸ್ ಯಡಿಯೂರಪ್ಪ ಸೇರಿ ಇನ್ನೂ ಕೆಲವರು ಇದು ಜೆಡಿಎಸ್ ಕ್ಷೇತ್ರ ಎಂಬರ್ಥದ ಹೇಳಿಕೆ ನೀಡಿದ್ರು. ಇದು ಯೋಗೇಶ್ವರ್ ಅಸಮಾಧಾನಕ್ಕೂ ಕಾರಣವಾಗಿತ್ತು. ಇದನ್ನು ಅಶೋಕ್ ಆಕ್ಷೇಪಿಸಿದ್ರು. ಅಂತಿಮವಾಗಿ ಯೋಗೇಶ್ವರ್ ರೆಬೆಲ್ ಹಾದಿ ತುಳಿದಿರೋದ್ರಿಂದ ಜೆಡಿಎಸ್ ನಡೆ ಕುತೂಹಲ ಕೆರಳಿಸಿದೆ.

  • ಬಿಜೆಪಿ ಪರಿಷತ್ ಸದಸ್ಯತ್ವಕ್ಕೆ ಸಿಪಿವೈ ರಾಜೀನಾಮೆ

    ಬಿಜೆಪಿ ಪರಿಷತ್ ಸದಸ್ಯತ್ವಕ್ಕೆ ಸಿಪಿವೈ ರಾಜೀನಾಮೆ

    ಹುಬ್ಬಳ್ಳಿ/ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ (Channapatna By Election) ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿರುವ ಸಿ.ಪಿ ಯೋಗೇಶ್ವರ್ ಅವರಿಂದು ಬಿಜೆಪಿ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

    ಸಂಜೆ ನಾಲ್ಕು ಗಂಟೆ ಸುಮಾರಿಗೆ ಹುಬ್ಬಳ್ಳಿಗೆ (Hubballi) ತೆರಳಿದ ಯೋಗೇಶ್ವರ್, ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಗೆ ಯೋಗೇಶ್ವರ್‌ ಗುಡ್‌ಬೈ – ಕಾಂಗ್ರೆಸ್‌ನಿಂದ ಕೊನೆ ಕ್ಷಣದ ಕಸರತ್ತು ಆರಂಭ

    ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿಯಲು ಸಿಪಿವೈ ನಿರ್ಧರಿಸಿದ್ದರು. ಕೊನೇ ಕ್ಷಣದವರೆಗೂ ಟಿಕೆಟ್ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಸಿಪಿವೈಗೆ ಬಿಜೆಪಿ ಕಡೆಯಿಂದ ಯಾವುದೇ ಶುಭ ಸುದ್ದಿ ಸಿಗದ ಕಾರಣ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ನಿರ್ಧರಿಸಿದ್ದಾರೆ. ಹಾಗಾಗಿ ವಿಧಾನ ಪರಿಷತ್ ಸದಸ್ಯತ್ವಕ್ಕೆ (MLC) ರಾಜೀನಾಮೆ ನೀಡಿದ್ದಾರೆ.

    ಈ ನಡುವೆ ಫುಲ್ ಅಲರ್ಟ್ ಆಗಿರುವ ಕಾಂಗ್ರೆಸ್, ಯೋಗೇಶ್ವರ್ ಅವರನ್ನು ಪಕ್ಷಕ್ಕೆ ಕರೆತರುವ ಪ್ರಯತ್ನ ನಡೆಸಿದೆ ಎಂದು ಹೇಳಲಾಗುತ್ತಿದೆ. ಯೋಗೇಶ್ವರ್ ಅವರು ಕಾಂಗ್ರೆಸ್ ಸೇರ್ಪಡೆಯಾದರೆ, ಕಾಂಗ್ರೆಸ್‌ನಿಂದಲೇ ಚನ್ನಪಟ್ಟಣ ಅಖಾಡಕ್ಕೆ ಇಳಿಯುವ ಬಗ್ಗೆಯೂ ಮಾತುಕತೆ ನಡೆಯುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಹಾಸನಾಂಬ ಉತ್ಸವಕ್ಕೆ ಕ್ಷಣಗಣನೆ – ಜಿಲ್ಲಾ ಖಜಾನೆಯಿಂದ ದೇವಾಲಯಕ್ಕೆ ಒಡವೆಗಳ ರವಾನೆ

    ರಾಜೀನಾಮೆ ನೀಡುವುದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಸಿ.ಪಿ ಯೋಗೇಶ್ವರ್, ಜೆಡಿಎಸ್ ಚಿನ್ಹೆಯಿಂದ ಸ್ಪರ್ಧೆ ಕುರಿತು ನೀಡಿದ್ದ ಆಫರ್ ಅನ್ನು ನಾನು ತಿರಸ್ಕರಿಸಿದ್ದೇನೆ. ನಾನು ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆ ಇದೆ. ಇನ್ನೂ ಎರಡು ದಿನ ಕಾದು ನೋಡುವ ತಂತ್ರವನ್ನು ಉಪಯೋಗಿಸುತ್ತೇನೆ. ನಾನು ಈ ಕ್ಷಣಕ್ಕೂ ಬಿಜೆಪಿಯಿಂದ ಸ್ಪರ್ಧೆ ಮಾಡಬೇಕು ಎಂದುಕೊಂಡಿದ್ದೇನೆ. ಇಂದು (ಅ.21) ಬೆಳಗ್ಗೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಾರೆ ಎಂದು ನಮ್ಮ ಜಿಲ್ಲಾಧ್ಯಕ್ಷರು ಎಂದು ಹೇಳಿದ್ದರು. ಹಾಗಂದ್ಮೇಲೆ ಇನ್ನೇನಿದೆ, ಆಯ್ತು ಒಳ್ಳೇದಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ಹೇಳಿದ್ದರು.

  • ಉಪಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಹೈಕಮಾಂಡ್ ನಿರ್ಣಯವೇ ಅಂತಿಮ: ಸಚಿವ ಲಾಡ್

    ಉಪಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಹೈಕಮಾಂಡ್ ನಿರ್ಣಯವೇ ಅಂತಿಮ: ಸಚಿವ ಲಾಡ್

    ಧಾರವಾಡ: ಶಿಗ್ಗಾಂವಿ, ಸಂಡೂರು (Sandur) ಹಾಗೂ ಚನ್ನಪಟ್ಟಣ ಉಪಚುನಾವಣೆಯ ಟಿಕೆಟ್ ಹಂಚಿಕೆಯಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.

    ಧಾರವಾಡದಲ್ಲಿ 9Dharawada) ಮಾತನಾಡಿದ ಅವರು, ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಗೊಂದಲ ಇಲ್ಲ. ಭಾನುವಾರ ಸಿಎಂ ಅವರು ಸಭೆ ಕರೆದು ಸಚಿವರು ಹಾಗೂ ಡಿಸಿಎಂ ಜೊತೆ ಚರ್ಚೆ ಮಾಡಿದ್ದಾರೆ. ನಾವೆಲ್ಲ ನಮ್ಮ ಅಭಿಪ್ರಾಯ ಮಂಡನೆ ಮಾಡಿದ್ದೇವೆ. ಇವತ್ತು ಅಥವಾ ನಾಳೆ ಹೈಕಮಾಂಡ್‌ನಿಂದ ಅಂತಿಮ ತೀರ್ಮಾನ ಬರಲಿದೆ. ಶಿಗ್ಗಾಂವಿ ಟಿಕೆಟ್ ಹಂಚಿಕೆಯಲ್ಲೂ ನಾವು ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಕೊನೆಯದಾಗಿ ಹೈಕಮಾಂಡ್‌ನಿಂದ ಏನು ತೀರ್ಮಾನ ಬರುತ್ತದೋ ಅದುವೇ ಅಂತಿಮ ಎಂದರು. ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಯೋಗೇಶ್ವರ್‌ ಕಣಕ್ಕ

    ಸಿ.ಪಿ.ಯೋಗೇಶ್ವರ್ ( C P Yogeshwar) ಅವರನ್ನು ಕಾಂಗ್ರೆಸ್‌ಗೆ ಕರೆತರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಆ ಭಾಗದಲ್ಲಿ ನನಗೆ ಜಾಸ್ತಿ ಮಾಹಿತಿ ಇಲ್ಲ. ನಮ್ಮ ಅಧ್ಯಕ್ಷರಿಗೆ ಹಾಗೂ ಸಿಎಂಗೆ ಅಲ್ಲಿ ಹೆಚ್ಚಿನ ಜವಾಬ್ದಾರಿ ಇದೆ. ಹೈಕಮಾಂಡ್ ಜೊತೆ ಮಾತನಾಡಿ ಅವರೇ ಅಂತಿಮ ತೀರ್ಮಾನ ಮಾಡುತ್ತಾರೆ. ಅದರ ಬಗ್ಗೆ ನನಗೆ ಹೆಚ್ಚಿಗೆ ಮಾಹಿತಿ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ಮಾಸ್‌ ರೇಪಿಸ್ಟ್‌ ಎಂದ ರಾಹುಲ್‌ಗೆ ರಿಲೀಫ್‌ – ಅರ್ಜಿ ವಜಾ, 25 ಸಾವಿರ ದಂಡ

    ಈ ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ. ಚನ್ನಪಟ್ಟಣದಲ್ಲಿ( Channapatna) ಪಾರ್ಲಿಮೆಂಟ್ ಚುನಾವಣೆಯಲ್ಲಿ ನಾವೇ ಲೀಡ್ ಆಗಿದ್ದೇವೆ. ಶಿಗ್ಗಾಂವಿಯಲ್ಲೂ ಲೀಡ್ ಆಗಿದ್ದೇವೆ. ಸಂಡೂರಿನಲ್ಲೂ ಸಹ ಎರಡು ಬಾರಿ ಲೀಡ್ ಆಗಿದ್ದೇವೆ. ಹೀಗಾಗಿ ಮೂರಕ್ಕೆ ಮೂರೂ ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ ಎಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಜಮ್ಮು-ಕಾಶ್ಮೀರದ ಉಗ್ರದಾಳಿಯ ಹೊಣೆ ಹೊತ್ತ ಪಾಕ್ ಟಿಆರ್‌ಎಫ್ ಸಂಘಟನೆ

  • ಸಂಡೂರು ಬಿಜೆಪಿಯಲ್ಲಿ ಬಂಡಾಯದ ಹೊಗೆ – ಸಂಧಾನಕ್ಕೂ ಬಗ್ಗದ ಟಿಕೆಟ್ ವಂಚಿತ ದಿವಾಕರ್

    ಸಂಡೂರು ಬಿಜೆಪಿಯಲ್ಲಿ ಬಂಡಾಯದ ಹೊಗೆ – ಸಂಧಾನಕ್ಕೂ ಬಗ್ಗದ ಟಿಕೆಟ್ ವಂಚಿತ ದಿವಾಕರ್

    – ಶಿಗ್ಗಾಂವಿಯಲ್ಲಿ ಯಾರಿಗೆ ಕಾಂಗ್ರೆಸ್ ಟಿಕೆಟ್?

    ಬಳ್ಳಾರಿ/ಹಾವೇರಿ: ಗಣಿನಾಡು ಬಳ್ಳಾರಿಯ (Ballari) ಸಂಡೂರು ವಿಧಾನ ಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಆಗಿದೆ. ಈಗಾಗಲೇ ತನ್ನ ಅಭ್ಯರ್ಥಿಯನ್ನ ಘೋಷಣೆ ಮಾಡಿರುವ ಬಿಜೆಪಿ (BJP) ಅಧಿಕೃತವಾಗಿ ಪ್ರಚಾರ ಮಾಡಲು ಶುರುಮಾಡಿದೆ. ಅಭ್ಯರ್ಥಿ ಬಂಗಾರು ಹನುಮಂತು ಜೊತೆ ಜನಾರ್ದನ ರೆಡ್ಡಿ ಪ್ರಚಾರದ ಕಣಕ್ಕಿಳಿದ್ದಿದ್ದಾರೆ. ಈ ಮಧ್ಯೆ ಬಿಜೆಪಿ ಪಕ್ಷಕ್ಕೆ ಬಂಡಾಯದ ಬಿಸಿ ತಟ್ಟುವಂತೆ ಕಾಣುತ್ತಿದೆ.

    ಸಂಡೂರಿನಲ್ಲಿ (Sandur) ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಆಕಾಂಕ್ಷಿಯಾಗಿದ್ದ ಕೆಎಸ್ ದಿವಾಕರ್‌ಗೆ (K S Divakar) ಕೊನೆಗಳಿಗೆಯಲ್ಲಿ ಟಿಕೆಟ್ ಕೈ ತಪ್ಪಿದೆ. ಕೆಆರ್‌ಪಿಪಿ ಪಕ್ಷ ಸೇರಿ ಚುನಾವಣೆಗೆ ನಿಂತು 31,000 ಮತಗಳನ್ನ ಪಡೆದು ಪರಭಾವಗೊಂಡಿದ್ದರು. ಚುನಾವಣೆಯಲ್ಲಿ ಸೋತರೂ ಸಂಡೂರು ಕ್ಷೇತ್ರದಲ್ಲಿ ದಿವಾಕರ್ ಸಕ್ರಿಯವಾಗಿದ್ದರು. ಇದನ್ನೂ ಓದಿ: ಭಾರೀ ಮಳೆ; ಬೆಂಗಳೂರಿನ ಶಾಲೆಗಳಿಗೆ ಇಂದು ರಜೆ ಘೋಷಣೆ

    ಜನಾರ್ದನ ರೆಡ್ಡಿ ಬಿಜೆಪಿ ಪಕ್ಷ ಸೇರಿದ ಬಳಿಕ ಕೆಎಸ್ ದಿವಾಕರ್ ಕೂಡ ಬಿಜೆಪಿಗೆ ಸೇರಿದರು. ಬಳಿಕ ಸಂಡೂರಲ್ಲಿ ತಾನೆ ಮುಂದಿನ ಅಭ್ಯರ್ಥಿ ಎಂದು ಸ್ವಯಂ ಘೋಷಣೆ ಕೂಡ ಮಾಡಿಕೊಂಡಿದ್ದರು. ಈ ಬಾರಿಯು ಕೊನೆ ಗಳಿಗೆಯಲ್ಲಿ ಟಿಕೆಟ್ ಕೈತಪ್ಪಿ ದಿವಾಕರ್ ಅಸಮಾಧಾನಗೊಂಡಿದ್ದಾರೆ. ಜನಾರ್ದನ ರೆಡ್ಡಿ ಮನೆಯಲ್ಲಿ ಸಂಧಾನ ಸಭೆ ಮಾಡಿದರೂ ದಿವಾಕರ್ ಅಸಮಾಧಾನಗೊಂಡಿದ್ದಾರೆ. ನನ್ನ ವಿಚಾರದಲ್ಲಿ ಡಬಲ್ ಗೇಮ್ ಮಾಡಿದರು ಎಂದು ಆಕ್ರೋಶ ಹೊರಹಾಕಿದ್ದಾರೆ.

    ಶಿಗ್ಗಾಂವಿ (Shiggoan) ಕ್ಷೇತ್ರದಲ್ಲಿ ತಮ್ಮ ಪುತ್ರ ಭರತ್‌ರನ್ನು ಕಣಕ್ಕಿಳಿಸಿ ಕಾಂಗ್ರೆಸ್‌ಗೆ ಸಂಸದ ಬೊಮ್ಮಾಯಿ ತೊಡೆ ತಟ್ಟಿದ್ದಾರೆ. ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡಿದ ಬಳಿಕ ಸ್ವಲ್ಪ ವಿಚಲಿತವಾಗಿರುವ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಗೆ ಪೇಚಾಡುವಂತಾಗಿದೆ. ಸಮರ್ಥ ಹಾಗೂ ಒಮ್ಮತದ ಅಭ್ಯರ್ಥಿ ಆಯ್ಕೆ ಆಡಳಿತಾರೂಢ ಕಾಂಗ್ರೆಸ್‌ಗೆ ಸವಾಲಾಗಿದೆ. ಕಾಂಗ್ರೆಸ್ ಟಿಕೆಟ್ ಪಡೆಯಲು ಲಿಂಗಾಯತ ಹಾಗೂ ಮುಸ್ಲಿಂ ಸಮಾಜದ ಟಿಕೆಟ್ ಆಕಾಂಕ್ಷಿಗಳ ನಡುವೆ ಬಹುದೊಡ್ಡ ಪೈಪೋಟಿ ನಡೆದಿದೆ. ಸಿಎಂ ಸಿದ್ದರಾಮಯ್ಯ ( CM Siddaramaiah) ಹಾಗೂ ಡಿಕೆಶಿ ಭೇಟಿಯಾಗಿ ಟಿಕೆಟ್‌ಗಾಗಿ ಆಕಾಂಕ್ಷಿಗಳು ಮುಗಿಬಿದ್ದಿದ್ದಾರೆ. ಆದರೆ ಅಭ್ಯರ್ಥಿ ಆಯ್ಕೆ ಮಾತ್ರ ಇನ್ನೂ ಫೈನಲ್ ಆಗಿಲ್ಲ. ಇದನ್ನೂ ಓದಿ: ಚನ್ನಪಟ್ಟಣಕ್ಕೆ ಡಿಕೆ ಸುರೇಶ್, ಸಂಡೂರಿಗೆ ಅನ್ನಪೂರ್ಣ – ಶೀಘ್ರವೇ ಅಧಿಕೃತ ಪ್ರಕಟಣೆ ಸಾಧ್ಯತೆ

    ಬಿಜೆಪಿ ಲಿಂಗಾಯತರಿಗೆ ಮತ್ತೆ ಮಣೆ ಹಾಕಿ ಭರತ್ ಬೊಮ್ಮಾಯಿಯನ್ನು (Bharath Bommai) ಕಣಕ್ಕಿಳಿಸಿದೆ. ಹೀಗಾಗಿ ಲಿಂಗಾಯತರಿಗೇ ಆದ್ಯತೆ ನೀಡಿ ಎಂಬ ಆಗ್ರಹ ಕಾಂಗ್ರೆಸ್‌ನಲ್ಲಿ ಕೇಳಿ ಬಂದಿದೆ. ಮಾಜಿ ಶಾಸಕ ಅಜ್ಜಂಫೀರ್ ಖಾದ್ರಿ ಹಾಗೂ ಯಾಸೀರ್ ಖಾನ್ ಪಠಾಣ್ ಟಿಕೆಟ್‌ಗಾಗಿ ಭಾರಿ ಲಾಬಿ ನಡೆಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿರುವ ವಿನೋದ್ ಅಸೂಟಿ ಅವರನ್ನು ಕಣಕ್ಕಿಳಿಸುವ ಬಗ್ಗೆಯೂ ಚರ್ಚೆ ನಡೆದಿದೆ. ಇಂದು ಸಂಜೆ ಅಥವಾ ಮಂಗಳವಾರ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಆಗುವ ಸಾಧ್ಯತೆ ಇದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮುಂದಿನ 3 ಗಂಟೆ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ – 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

  • ಉಪ ಚುನಾವಣೆ | ಚನ್ನಪಟ್ಟಣಕ್ಕೆ ಸಚಿವ ಚೆಲುವರಾಯಸ್ವಾಮಿ ಉಸ್ತುವಾರಿ

    ಉಪ ಚುನಾವಣೆ | ಚನ್ನಪಟ್ಟಣಕ್ಕೆ ಸಚಿವ ಚೆಲುವರಾಯಸ್ವಾಮಿ ಉಸ್ತುವಾರಿ

    – ಸಂಡೂರಿಗೆ ಜಮೀರ್‌, ಶಿಗ್ಗಾಂವಿಗೆ ಈಶ್ವರ್‌ ಖಂಡ್ರೆ ಉಸ್ತುವಾರಿ

    ಬೆಂಗಳೂರು: ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ (Channapatna) ಮೂರು ಕ್ಷೇತ್ರಗಳನ್ನು ಗೆಲ್ಲಲು ತಯಾರಿ ಮಾಡಿಕೊಳ್ಳುವ ಬಗ್ಗೆ ಚರ್ಚೆಯಾಗಿದ್ದು, ಮೂರು ಕ್ಷೇತ್ರಗಳಿಗೆ ಉಸ್ತುವಾರಿ ನೇಮಕ ಮಾಡಲಾಗಿದೆ ಎಂದು ಸಚಿವ ಚೆಲುವರಾಯ ಸ್ವಾಮಿ (Cheluvarayaswamy) ಹೇಳಿದ್ದಾರೆ.

    ಕರ್ನಾಟಕದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ ಕ್ಷೇತ್ರಗಳ ಉಪಚುನಾವಣೆ, ಜಾತಿ ಜನಗಣತಿ, ಮೀಸಲಾತಿ ವಿಚಾರ ಸೇರಿ ಹಲವು ವಿಷಯಗಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು. ಕಾವೇರಿ ನಿವಾಸದಲ್ಲಿ ಸಭೆ ನಡೆಸಲಾಗುತ್ತಿದೆ. ಸಭೆಗೆ ಸಚಿವರಾದ ಡಿ.ಕೆ.ಶಿವಕುಮಾರ್, ಬೈರತಿ ಸುರೇಶ್, ಪ್ರೀಯಾಂಕ್ ಖರ್ಗೆ, ಜಮೀರ್ ಅಹಮದ್, ಶರಣ ಬಸಪ್ಪ ದರ್ಶನಾಪುರ, ಶಿವಾನಂದ ಪಾಟೀಲ್, ಎಂ.ಸಿ ಸುಧಾಕರ್, ದಿನೇಶ್ ಗುಂಡೂರಾವ್, ಎಸ್.ಎಸ್ ಮಲ್ಲಿಕಾರ್ಜುನ್, ಚಲುವರಾಯಸ್ವಾಮಿ, ರಾಮಲಿಂಗಾ ರೆಡ್ಡಿ ಸೇರಿ ಹಲವರು ಪಾಲ್ಗೊಂಡಿದ್ದರು.

    ಸಭೆಯ ಬಳಿಕ ಸಚಿವ ಚೆಲುವರಾಯಸ್ವಾಮಿ ಮಾತನಾಡಿ, ಬೈ ಎಲೆಕ್ಷನ್ ಬಗ್ಗೆ ಚರ್ಚಿಸಲಾಗಿದೆ. 3 ಕ್ಷೇತ್ರಗಳನ್ನ ಗೆಲ್ಲಲು ತಯಾರಿ ಮಾಡಿಕೊಳ್ಳುವ ಬಗ್ಗೆ ಚರ್ಚೆಯಾಗಿದೆ. ಚನ್ನಪಟ್ಟಣ ನನಗೆ ಉಸ್ತುವಾರಿ ನೀಡಿದ್ದಾರೆ. ಇನ್ನುಳಿದಂತೆ ಸಂಡೂರು ಕ್ಷೇತ್ರದ ಉಸ್ತುವಾರಿ ಸಚಿವ ಜಮೀರ್‌ಗೆ ಹಾಗೂ ಶಿಗ್ಗಾಂವಿ ಕ್ಷೇತ್ರದ ಉಸ್ತುವಾರಿಯನ್ನು ಸಚಿವ ಈಶ್ವರ್ ಖಂಡ್ರೆಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

    ನಮ್ಮ ಅಭ್ಯರ್ಥಿಗಳ ಪಟ್ಟಿ ಮಂಗಳವಾರ ದೆಹಲಿಗೆ ಕಳಿಸಿಕೊಡಲಾಗುತ್ತೆ. ಮಂಗಳವಾರ (ಅ.21) ಸಂಜೆ ಅಭ್ಯರ್ಥಿಗಳ ಹೆಸರು ಫೈನಲ್‌ ಆಗಬಹುದು. ಸಂಡೂರು ವಿಧಾನಸಭಾ ಕ್ಷೇತ್ರದಿಂದ ತುಕಾರಾಮ್ ಕುಟುಂಬಕ್ಕೆ ಕೊಡುವುದರ ಬಗ್ಗೆ ಅಂತಿಮವಾಗಿದೆ. ಚನ್ನಪಟ್ಟಣ ಹಾಗೂ ಶಿಗ್ಗಾಂವಿ ಕ್ಷೇತ್ರದ ಬಗ್ಗೆ ಚರ್ಚಿಸಿ ದೆಹಲಿಗೆ ಪಟ್ಟಿ ಕಳಿಸಲಾಗುತ್ತೆ. ಚನ್ನಪಟ್ಟಣ ಅಭ್ಯರ್ಥಿ ಯಾರು ಅನ್ನೋದರ ಬಗ್ಗೆ ನಿಮಗೂ ಗೋತ್ತು ನಮಗೂ ಗೋತ್ತು ಹೈಕಮಾಂಡ್‌ ಅಂತಿಮ ತೀರ್ಮಾನ ಮಾಡಲಿದೆ ಎಂದು ಹೇಳಿದ್ದರೆ.

  • ಚನ್ನಪಟ್ಟಣದಲ್ಲಿ ಗೆಲ್ಲುವ ಅಭ್ಯರ್ಥಿ ಸಿಪಿವೈ – ಬೆಲ್ಲದ್ ಬ್ಯಾಟಿಂಗ್

    ಚನ್ನಪಟ್ಟಣದಲ್ಲಿ ಗೆಲ್ಲುವ ಅಭ್ಯರ್ಥಿ ಸಿಪಿವೈ – ಬೆಲ್ಲದ್ ಬ್ಯಾಟಿಂಗ್

    – ಸಿಪಿವೈಗೆ ಚನ್ನಪಟ್ಟಣದಲ್ಲಿ ಗೆಲುವಿನ ವಾತಾವರಣವಿದೆ

    ಹುಬ್ಬಳ್ಳಿ: ಚುನಾವಣೆ ಸ್ಪರ್ಧೆ ಮುಖ್ಯವಲ್ಲ. ಗೆಲುವು ಮುಖ್ಯ. ಸಿ.ಪಿ ಯೋಗೇಶ್ವರ್ (C P Yogeshwar) ಚನ್ನಪಟ್ಟಣದಲ್ಲಿ ಗೆಲ್ಲುವ ಅಭ್ಯರ್ಥಿ. ಚನ್ನಪಟ್ಟಣದಲ್ಲಿ ಅವರಿಗೆ ಗೆಲುವಿನ ವಾತಾವರಣವಿದೆ ಅವರೇ ಎನ್‌ಡಿಎ ಅಭ್ಯರ್ಥಿಯಾಗಬೇಕು ಎನ್ನುವ ಮೂಲಕ ಸಿಪಿವೈ ಪರ ವಿಧಾನಸಭಾ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್ ಮತ್ತೆ ಬ್ಯಾಟಿಂಗ್ ಮಾಡಿದ್ದಾರೆ.

    ಈ ಬಗ್ಗೆ ಹುಬ್ಬಳ್ಳಿಯಲ್ಲಿ (Hubballi) ಮಾತನಾಡಿದ ಅವರು, ಯೋಗೇಶ್ವರ್ ಮೇಲೆ ಜನರ ಪ್ರೀತಿ, ಅನುಕಂಪವಿದೆ. ಕುಮಾರಸ್ವಾಮಿ ಅವರು ಅತ್ಯಂತ ಪ್ರಬುದ್ಧ ರಾಜಕಾರಣಿ. ಅವರು ಅತ್ಯುತ್ತಮ ನಿರ್ಧಾರ ತೆಗೆದುಕೊಳ್ಳುತ್ತಾರೆ. ಕುಮಾರಸ್ವಾಮಿ ಬಳಿಕ ಅಲ್ಲಿ ಎನ್‌ಡಿಎಯಿಂದ ಹೊಸ ಅಭ್ಯರ್ಥಿ ಆಗಬೇಕು. ಈ ಹಿಂದೆ ಕುಮಾರಸ್ವಾಮಿ ಮತ್ತು ಡಾ. ಮಂಜುನಾಥ್ ಚುನಾವಣೆಯಲ್ಲಿ ಯೋಗೇಶ್ವರ್ ಒಳ್ಳೆಯ ಕಾರ್ಯ ಮಾಡಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಸಿಪಿವೈಗೆ ಟಿಕೇಟ್ ನೀಡುವ ಭರವಸೆ ಇದೆ ಎಂದರು. ಇದನ್ನೂ ಓದಿ: ಸುದೀಪ್ ಸರ್‌ನ ನೋಡೋಕೆ ಆಗುತ್ತಿಲ್ಲ: ಲಹರಿ ವೇಲು

    ಮುಡಾ ವಿಚಾರವಾಗಿ ಸಿಎಂ ಕುಣಿಕೆ ಗಟ್ಟಿಯಾಗುತ್ತಿದೆ ಇನ್ನೂ ಕೆಲವೇ ದಿನದಲ್ಲಿ ಸಿಎಂ ರಾಜಿನಾಮೆ ನೀಡುತ್ತಾರೆ. ಜಿ ಪರಮೇಶ್ವರ್ (G Parameshwar) ಅವರು ಸಿಎಂ ಅವರನ್ನು ಮೆಚ್ಚಿಸುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಪರವಾಗಿ ಮಾತನಾಡಿ ಅವರ ಅನುಗ್ರಹದಿಂದ ಸಿಎಂ ಆಗುವ ಆಸೆಯಲ್ಲಿದ್ದಾರೆ. ಈಗಾಗಲೇ ಪರಮೇಶ್ವರ್ ಸಿಎಂ ಸೀಟ್‌ಗೆ ಟೆವಲ್ ಹಾಕಿದ್ದಾರೆ. ಡಿಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಎಂಬಿ ಪಾಟೀಲ್, ಪರಮೇಶ್ವರ್, ಸತೀಶ್ ಜಾರಕಿಹೊಳಿ ಸಿಎಂ ರೇಸ್‌ನಲ್ಲಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಚನ್ನಪಟ್ಟಣ ಜೆಡಿಎಸ್‌ ಕ್ಷೇತ್ರ.. ಅವರಿಗೆ ಯಾರು ಬೇಕೋ ಹೆಸರು ಘೋಷಣೆ ಮಾಡ್ತಾರೆ: ಬಿಎಸ್‌ವೈ

    ಭರತ್ ಬೊಮ್ಮಾಯಿ (Bharath Bommai) ಅವರಿಗೆ ಟಿಕೇಟ್ ನೀಡಿದ್ದು ಕುಟುಂಬ ರಾಜಕೀಯ ಅಲ್ಲಾ. ಸ್ಥಳೀಯ ಕಾರ್ಯಕರ್ತರೇ ಭರತ್ ಅವರನ್ನಾ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಾರೆ. ರಾಜಾಭವನ ದಾಸ ಶಿಗ್ಗಾಂವಿಯಲ್ಲಿ ಪ್ರವಾಸ ಮಾಡಿ ಎಲ್ಲರ ಅಭಿಪ್ರಾಯ ಪಡೆದೇ ಭರತ್ ಹೆಸರು ಅಂತಿಮಗೊಳಿಸಿದ್ದಾರೆ. ಉಪಚುನಾವಣೆಯಲ್ಲಿ ಗೆಲುವು ಅವಶ್ಯಕತೆ ಇದೆ. ಹೀಗಾಗಿ ಜನರ ಅಭಿಪ್ರಾಯದಿಂದ ಅಭ್ಯರ್ಥಿ ಆಯ್ಕೆ ಅಂತಿಮವಾಗಿದೆ. ಆದರೆ ಕಾಂಗ್ರೆಸ್‌ನಲ್ಲಿ ತಮ್ಮ ಕುಟುಂಬದಲ್ಲೆ ನಾಮಿನೇಟ್ ಮಾಡುತ್ತಾರೆ. ಅದು ಕುಟುಂಬ ರಾಜಕೀಯ. ನಮ್ಮ ಪಕ್ಷದಲ್ಲಿ ಜನರ ಅಭಿಪ್ರಾಯ ಪಡೆಯತ್ತಾರೆ. ನಮ್ಮದು ಪ್ರಜಾಪ್ರಭುತ್ವ ಪಕ್ಷ ಎಂದು ತಿಳಿಸಿದರು. ಇದನ್ನೂ ಓದಿ: ಮಂಗಳೂರಲ್ಲಿ ರೈಲು ಹಳಿ ತಪ್ಪಿಸಲು ಸಂಚು? – ಹಳಿಗಳ ಮೇಲೆ ಕಲ್ಲುಗಳನ್ನಿಟ್ಟು ದುಷ್ಕರ್ಮಿಗಳು ಪರಾರಿ

    ಹುಬ್ಬಳ್ಳಿ ಗಲಭೆ ಕೇಸ್‌ಗಳಲ್ಲಿ ವಿವಿಧ ನ್ಯಾಯಾಲಯದಲ್ಲಿ 17 ಬಾರಿ ಜಾಮೀನು ಅರ್ಜಿ ವಜಾ ಆಗಿತ್ತು. ಸಾಕಷ್ಟು ಬಾರಿ ಸುಪ್ರೀಂ ಕೋರ್ಟ್ನಲ್ಲಿ ಸಹ ಜಾಮೀನು ಅರ್ಜಿ ವಜಾ ಆಗಿತ್ತು. ಗಲಭೆಯಲ್ಲಿ ರಾಷ್ಟ್ರೀಯ ಭದ್ರತಾ ವಿಚಾರ ಸಹ ಕೇಳಿ ಬಂದಿತ್ತು. ಹೀಗಾಗಿ ಇದರಲ್ಲಿ ಎನ್‌ಐಎ ಪ್ರವೇಶ ಆಗಿತ್ತು. ಇಂತಹ ಕೇಸ್‌ಗಳನ್ನು ಸರ್ಕಾರ ವಾಪಸ್ ಪಡೆದು ಗಂಭೀರ ತಪ್ಪು ಮಾಡುತ್ತಿದೆ ಎಂದು ಹರಿಯಾಯ್ದರು. ಇದನ್ನೂ ಓದಿ: ಕಲಬುರಗಿ ಜೈಲಿನೊಳಗೆ ಗುಟ್ಕಾ, ಬೀಡಿ, ಪಾನ್ ಮಸಾಲಾ ಸಾಗಣೆ ಯತ್ನ

  • ಸಂಡೂರು ಉಪಚುನಾವಣೆ| ಬಿಜೆಪಿ ಟೆಕೆಟ್‌ ಪಡೆದ ಬಂಗಾರು ಹನುಮಂತು ಯಾರು?

    ಸಂಡೂರು ಉಪಚುನಾವಣೆ| ಬಿಜೆಪಿ ಟೆಕೆಟ್‌ ಪಡೆದ ಬಂಗಾರು ಹನುಮಂತು ಯಾರು?

    ಬಳ್ಳಾರಿ: ಸಂಡೂರು ಉಪಚುನಾವಣೆಗೆ (Sandur By Election) ಟಿಕೆಟ್ ಘೋಷಣೆ ಘೋಷಣೆಯಾಗಿದ್ದು ರಾಜ್ಯ ಎಸ್‌ಟಿ ಮೋರ್ಚಾ ಅಧ್ಯಕ್ಷ ಬಂಗಾರು ಹನುಮಂತುಗೆ (Bangaru Hanumanthu) ಬಿಜೆಪಿ ಹೈಕಮಾಂಡ್ ಮಣೆ ಹಾಕಿದೆ.

    ಮೂಲತಃ ಹೊಸಪೇಟೆ ತಾಲೂಕಿನ ಮರಿಯಮ್ಮನ ಹಳ್ಳಿಯವರಾದ ಬಂಗಾರು ಹನುಮಂತು ತಂದೆ ಬಂಗಾರು ಸೋಮಣ್ಣ ಕೆಎಸ್‌ಆರ್‌ಟಿಸಿ ಚಾಲಕರಾಗಿ ನಿವೃತ್ತಿ ಹೊಂದಿದ್ದಾರೆ. ತಂದೆ ಸೋಮಣ್ಣ ಕೊನೆಯದಾಗಿ ಕೂಡ್ಲಿಗಿಯಲ್ಲಿ ಸೇವೆ ಮಾಡಿದ ಹಿನ್ನೆಲೆಯಲ್ಲಿ ಕೂಡ್ಲಿಗಿಯಲ್ಲಿ ಕುಟುಂಬ ನೆಲೆ ನಿಂತಿದೆ.

    ತಾಯಿ ಹುಲಿಗೆಮ್ಮ ಸದ್ಯ ಕೂಡ್ಲಿಗಿ ಪಟ್ಟಣ ಪಂಚಾಯತಿ ಸದಸ್ಯರಾಗಿದ್ದಾರೆ. ಬಂಗಾರು ಹನುಮಂತು ವಿದ್ಯಾರ್ಥಿ ಜೀವನ ಕೂಡ್ಲಿಗಿಯಲ್ಲಿ ಕಳೆದಿದ್ದಾರೆ. ಬಿಎ, ಬಿಎಡ್ ಓದಿರುವ ಬಂಗಾರು ವಿದ್ಯಾರ್ಥಿ ಜೀವನದಿಂದ ಹೋರಾಟದಲ್ಲಿ ಭಾಗಿಯಾಗುತ್ತಾ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ಇದನ್ನೂ ಓದಿ: ಶಿಗ್ಗಾವಿ ಉಪಚುನಾವಣೆ| ಭರತ್‌ ಬೊಮ್ಮಾಯಿಗೆ ಬಿಜೆಪಿ ಟಿಕೆಟ್‌ ನೀಡಿದ್ದು ಯಾಕೆ?

    2018ರಲ್ಲಿ ಸಂಡೂರು ಕ್ಷೇತ್ರದಲ್ಲಿ ಬಂಡಾಯ ಬಿಜೆಪಿ (BJP) ಅಭ್ಯರ್ಥಿ ಯಾಗಿ ಸ್ಪರ್ಧೆ ಮಾಡಿ ಸೋತಿದ್ದರು. 2023ರ ವಿಧಾನಸಭಾ ಚುನಾವಣೆ ವೇಳೆ ಕೂಡ್ಲಿಗಿ ಕ್ಷೇತ್ರಕ್ಕೆ ಪ್ರಯತ್ನ ಮಾಡಿದ್ದರೂ ಟಿಕೆಟ್ ಸಿಕ್ಕಿರಲಿಲ್ಲ.

    ಕಲ್ಲಿನ ಕ್ರಷರ್, ಗಣಿಗಾರಿಕೆ ವ್ಯವಹಾರ ಮಾಡುತ್ತಿದ್ದು, ಕೃಷಿ ಜಮೀನು ಹೊಂದಿದ್ದಾರೆ. ಪ್ರಹ್ಲಾದ್‌ ಜೋಷಿ ಜೊತೆಗೆ ಉತ್ತಮ ಒಡನಾಟ ಹೊಂದಿರುವ ಬಂಗಾರು ಹನುಮಂತು ವಿಜಯೇಂದ್ರ ಅಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ.

    2006 ರಿಂದ 2009 ರವರೆಗೆ ಕೂಡ್ಲಿಗಿ ಮಂಡಲ ಯುವ ಮೋರ್ಚಾ ಅಧ್ಯಕ್ಷ, 2017 ರಿಂದ 2019 ರವರೆಗೆ ಜಿಲ್ಲಾ ಕಾರ್ಯಕಾರಿ ಸದಸ್ಯ, 2020 ರಿಂದ 2022 ರವರೆಗೆ ಬಳ್ಳಾರಿ ಜಿಲ್ಲಾ ಎಸ್ಟಿ ಮೋರ್ಚಾ ಅಧ್ಯಕ್ಷರಾಗಿ ಬಿಜೆಪಿಯಲ್ಲಿ ಕೆಲಸ ಮಾಡಿದ್ದಾರೆ.

    ಬಂಗಾರು ಹನುಮಂತು ಅವರು ಜನಾರ್ದನ ರೆಡ್ಡಿ ಆಪ್ತರಾಗಿದ್ದಾರೆ. ಟಿಕೆಟ್‌ ರೇಸ್‌ನಲ್ಲಿ ಬಂಗಾರು ಹನುಮಂತು ಮತ್ತು ಕೆ ಎಸ್ ದಿವಾಕರ್ ಅವರ ಹೆಸರಿತ್ತು. ಕಳೆದ ಚುನಾವಣೆಯಲ್ಲಿ ಕೆಆರ್‌ಪಿಪಿ ಪಕ್ಷದಿಂದ ಸ್ಪರ್ಧಿಸಿ ದಿವಾಕರ್‌ ಪರಾಭವಗೊಂಡಿದ್ದರು.

     

  • ತುಕಾರಾಂ ಕುಟುಂಬಕ್ಕೆ ಟಿಕೆಟ್‌ ನೀಡಬೇಡಿ – ಬೆಂಗಳೂರು ಕಡೆಗೆ ಅತೃಪ್ತರ ಮುಖ

    ತುಕಾರಾಂ ಕುಟುಂಬಕ್ಕೆ ಟಿಕೆಟ್‌ ನೀಡಬೇಡಿ – ಬೆಂಗಳೂರು ಕಡೆಗೆ ಅತೃಪ್ತರ ಮುಖ

    ಬಳ್ಳಾರಿ: ಸಂಡೂರು ಉಪಚುನಾವಣೆ (Sandur By Election) ರಾಜಕೀಯ ಕೂಡ ಜೋರಾಗಿದೆ. ಸಂಸದ ತುಕಾರಾಂ (Tukaram) ಕುಟುಂಬಕ್ಕೆ ಟಿಕೆಟ್ ನೀಡೋದಕ್ಕೆ ಭಾರೀ ವಿರೋಧ ವ್ಯಕ್ತವಾಗ್ತಿದ್ದು, ಇದು ರಾಜ್ಯ ಕಾಂಗ್ರೆಸ್ ನಾಯಕರ ತಲೆಬಿಸಿಗೆ ಕಾರಣವಾಗಿದೆ.

    ಗುರುವಾರ ಸಂಡೂರಲ್ಲಿ ಸಭೆ ನಡೆಸಿದ್ದ ಅತೃಪ್ತರು ಬೆಂಗಳೂರು ಕಡೆ ಮುಖ ಮಾಡಿದ್ದಾರೆ. ಉಪಸಮರವನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿರುವ ಜನಾರ್ದನ ರೆಡ್ಡಿ (Janardhana Reddy) ಇಂದು ಸಂಡೂರಲ್ಲಿ ಹೊಸಮನೆಯ ಗೃಹಪ್ರವೇಶ ಮಾಡಿದ್ದಾರೆ. ಅಷ್ಟೇ ಅಲ್ಲದೇ ತುಕಾರಾಮ್ ಸಹೋದರಿ ಪುಷ್ಪಾವತಿ ನಾಗರಾಜ್ ಮನೆಗೆ ಭೇಟಿ ನೀಡಿ ಬೆಂಬಲ ಯಾಚಿಸಿದ್ದಾರೆ. ಇದನ್ನೂ ಓದಿ: ದರ್ಶನ್ ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮಿ

     

    ಈ ಸಂದರ್ಭದಲ್ಲಿ ನಾನು ಸಂಡೂರು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ರಾಮುಲು (Sriramulu) ಘೋಷಿಸಿದ್ದಾರೆ.