Tag: by election

  • ಶಿಗ್ಗಾಂವಿ ಉಪಚುನಾವಣೆ – ಮೊದಲ ದಿನವೇ ನಾಲ್ಕು ನಾಮಪತ್ರ ಸಲ್ಲಿಕೆ

    ಶಿಗ್ಗಾಂವಿ ಉಪಚುನಾವಣೆ – ಮೊದಲ ದಿನವೇ ನಾಲ್ಕು ನಾಮಪತ್ರ ಸಲ್ಲಿಕೆ

    – ಅ.25 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ

    ಹಾವೇರಿ: ಶಿಗ್ಗಾಂವಿ (Shiggoan) ಕ್ಷೇತ್ರದ ಉಪಚುನಾವಣೆಗೆ ಮೊದಲ ದಿನವೇ ಮೂರು ಅಭ್ಯರ್ಥಿಗಳಿಂದ ನಾಲ್ಕು ನಾಮಪತ್ರಗಳು ಸಲ್ಲಿಕೆಯಾಗಿವೆ.

    ಹಿಂದೂಸ್ತಾನ ಜನತಾ ಪಕ್ಷದಿಂದ ತಳವಾರ ಶಿವಕುಮಾರ ಎರಡು, ಕರ್ನಾಟಕ ರಾಷ್ಟ್ರ ಸಮಿತಿಯಿಂದ ರವಿ ಕೃಷ್ಣಾರೆಡ್ಡಿ (Ravikrishna Reddy) ಹಾಗೂ ಸೋಸಿಯಾಲಿಸ್ಟ್ ಪಾರ್ಟಿ (ಇಂಡಿಯಾ)ಯಿಂದ ಖಾಜಾಮೋಹಿದ್ದಿನ್ ಗುಡಗೇರಿ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ. ಶಿಗ್ಗಾಂವಿ ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ಸವಣೂರ ಉಪ ವಿಭಾಗಾಧಿಕಾರಿ ಹಾಗೂ ಚುನಾವಣಾಧಿಕಾರಿ ಮಹ್ಮದ್ ಖಿಜರ್ ಅವರಿಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ತಹಶೀಲ್ದಾರ್ ಹಾಗೂ ಸಹಾಯಕ ಚುನಾವಣಾಧಿಕಾರಿ ಸಂತೋಷ್ ಹಿರೇಮಠ ಅವರು ಉಪಸ್ಥಿತರಿದ್ದರು. ಇದನ್ನೂ ಓದಿ: ವಿದ್ಯುತ್ ಶಾಕ್ ತಗುಲಿ ಮಗನ ದಾರುಣ ಸಾವು – ತಾಯಿಯ ಆಕ್ರಂದನ

    ಅ.25 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ. ಅ. 28 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ ಹಾಗೂ ಅ.30 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕವಾಗಿದೆ. ಇದನ್ನೂ ಓದಿ: ತಲಕಾವೇರಿಯಲ್ಲಿ ತೀಥೋದ್ಭವ ಬಳಿಕ ಹಾರಂಗಿ ಜಲಾಶಯಕ್ಕೆ ಎ ಮಂಜು, ಮಂಥರ್ ಗೌಡ ಬಾಗಿನ ಅರ್ಪಣೆ

  • ನಾವು ಗೆಲ್ಲಬೇಕು ಅಂದ್ರೆ ಸಿಪಿವೈ ಅವರಿಗೆ ಟಿಕೆಟ್ ಕೊಡಬೇಕು:  ಬೆಲ್ಲದ್ ಬ್ಯಾಟಿಂಗ್

    ನಾವು ಗೆಲ್ಲಬೇಕು ಅಂದ್ರೆ ಸಿಪಿವೈ ಅವರಿಗೆ ಟಿಕೆಟ್ ಕೊಡಬೇಕು: ಬೆಲ್ಲದ್ ಬ್ಯಾಟಿಂಗ್

    ಹುಬ್ಬಳ್ಳಿ: ನಾವು ಗೆಲ್ಲಬೇಕು ಅಂದ್ರೆ ಯೋಗೇಶ್ವರ್ ( C P Yogeshwar) ಅವರಿಗೆ ಟಿಕೆಟ್ ಕೊಡಬೇಕು. ಕರ್ನಾಟಕದಲ್ಲಿ ಮೂರು ಉಪಚುನಾವಣೆ ನಡೆಯಲಿದೆ. ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆದಿದೆ ಎಂದು ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ (Aravind Bellad) ಹೇಳಿದ್ದಾರೆ.

    ಈ ಬಗ್ಗೆ ಹುಬ್ಬಳ್ಳಿಯಲ್ಲಿ (Hubballi) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನರ ಮನಸ್ಸಿನಲ್ಲಿ ಯೋಗೇಶ್ವರ್ ಅಭ್ಯರ್ಥಿ ಆಗಬೇಕು ಅನ್ನೋ ಆಸೆ ಇದೆ. ಅವರೇ ಚನ್ನಪಟ್ಟಣ ಅಭ್ಯರ್ಥಿ ಆಗಬೇಕು. ಯೋಗೇಶ್ವರ್ ಎನ್‌ಡಿಎ ಅಭ್ಯರ್ಥಿ ಆಗಬೇಕು. ನಮ್ಮೆಲ್ಲರಿಗೂ ಯೋಗೇಶ್ವರ್ ಅವರನ್ನೇ ಅಭ್ಯರ್ಥಿ ಮಾಡಬೇಕು ಅನ್ನೋ ಒತ್ತಾಯ ಇದೆ. ನಾವೆಲ್ಲ ಕುಮಾರಸ್ವಾಮಿ ಅವರಿಗೆ ಮನವರಿಕೆ ಮಾಡುತ್ತೇವೆ. ಅಂತಿಮವಾಗಿ ಕುಮಾರಸ್ವಾಮಿ ತೀರ್ಮಾನ ಮಾಡುತ್ತಾರೆ. ಹಾಗೇ ನೋಡಿದರೆ ಕುಮಾರಸ್ವಾಮಿ ಅವರೇ ಯೋಗಿಶ್ವರ್ ಅವರನ್ನು ಕರೆದು ಟಿಕೇಟ್ ನೀಡಬೇಕು ಎಂದು ಹೇಳಿದರು. ಇದನ್ನೂ ಓದಿ: ಮುಡಾ ಕೇಸ್‌ನಲ್ಲಿ ಹಣಕಾಸು ವಹಿವಾಟು ನಡೆದಿಲ್ಲ, ಹಣಕಾಸಿನ ವಿಚಾರ ಎಲ್ಲೂ ತನಿಖೆಯಾಗಿಲ್ಲ: ಡಿ.ಕೆ.ಸುರೇಶ್

    ನಾನು ಶಿಗ್ಗಾಂವಿ ಕ್ಷೇತ್ರ ಸುತ್ತಾಡಿದಾಗ ಮತ್ತೊಮ್ಮೆ ಬೊಮ್ಮಾಯಿ (Basavaraj Bommai) ಕುಟುಂಬಕ್ಕೆ ಅವಕಾಶ ಕೊಡಬೇಕು ಎಂಬ ಕೂಗು ಕೇಳಿಬರುತ್ತಿದೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಹೈಕಮಾಂಡ್ ತೀರ್ಮಾನಕ್ಕೆ ಬೊಮ್ಮಾಯಿ ಬದ್ಧವಾಗಿರಬೇಕು. ಹೈಕಮಾಂಡ್ ಕೂಡಾ ಎಲ್ಲ ಆಯಾಮಗಳಲ್ಲಿ ಸರ್ವೆ ಮಾಡಿದೆ. ಕೋರ್ ಕಮಿಟಿಯಿಂದ ಮೂರ್ನಾಲ್ಕು ಹೆಸರು ಹೋಗಿರುವ ಬಗ್ಗೆ ಮಾಹಿತಿ ಇದೆ. ಪಕ್ಷ ಅಂದ ಮೇಲೆ ಭಿನ್ನಾಭಿಪ್ರಾಯ ಸಹಜ. ಪಕ್ಷದಲ್ಲಿ ಭಿನ್ನಾಭಿಪ್ರಾಯ ಮರೆತು ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದರು. ಇದನ್ನೂ ಓದಿ: ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಬಿಂದಾಸ್ ಲೈಫ್ – ಪ್ರಕರಣ ಸಿಸಿಬಿಗೆ ವರ್ಗಾವಣೆ

  • ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಸಜ್ಜಾಗಿದೆ, ಮೂರೂ ಕ್ಷೇತ್ರ ಗೆಲ್ಲುತ್ತೇವೆ: ಡಿಕೆಶಿ

    ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಸಜ್ಜಾಗಿದೆ, ಮೂರೂ ಕ್ಷೇತ್ರ ಗೆಲ್ಲುತ್ತೇವೆ: ಡಿಕೆಶಿ

    ಬೆಂಗಳೂರು: ಚುನಾವಣಾ ಆಯೋಗ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ (BY Election) ದಿನಾಂಕ ಘೋಷಿಸಿದ್ದು, ಉಪಚುನಾವಣೆ ಸೇರಿದಂತೆ ಎಲ್ಲಾ ಚುನಾವಣೆಗೂ ಕಾಂಗ್ರೆಸ್ (Congress) ಪಕ್ಷ ಸಜ್ಜಾಗಿದೆ. ಮೂರು ಕ್ಷೇತ್ರಗಳಲ್ಲೂ ನಾವು ಗೆದ್ದೇ ಗೆಲ್ಲುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

    ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಅವರು, ಉಪಚುನಾವಣೆ ಘೋಷಣೆಯಾಗಿದ್ದು, ಆಯೋಗ ಚುನಾವಣಾ ದಿನಾಂಕ ಘೋಷಣೆ ಮಾಡಿರುವುದನ್ನು ನಾನು ಸ್ವಾಗತಿಸುತ್ತೇನೆ. ಈ ಕ್ಷೇತ್ರಗಳಲ್ಲಿ ಶಾಸಕ ಸ್ಥಾನ ಖಾಲಿಯಾದಾಗಿನಿಂದಲೇ ನಮ್ಮ ತಯಾರಿ ಆರಂಭವಾಗಿದೆ. ನಮ್ಮ ಕೆಲಸ ನಾವು ಮಾಡುತ್ತಿದ್ದೇವೆ ಎಂದರು. ಚನ್ನಪಟ್ಟಣ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಈ ಚುನಾವಣೆಗಳಲ್ಲಿ ನಾವೇ ಅಭ್ಯರ್ಥಿಗಳು ಎಂದು ಹೇಳಿದರು. ಇದನ್ನೂ ಓದಿ: ಅ.20ಕ್ಕೆ ಬಾಗಲಕೋಟೆಯಲ್ಲಿ ರಾಯಣ್ಣ ಚನ್ನಮ್ಮ ಬ್ರಿಗೇಡ್ ಸಭೆ: ಕೆಎಸ್ ಈಶ್ವರಪ್ಪ

    ಚನ್ನಪಟ್ಟಣದಲ್ಲಿ ಯೋಗೇಶ್ವರ್ ಬಂಡಾಯ ಎದ್ದಿರುವ ಬಗ್ಗೆ ಮಾತನಾಡಿ, ಈ ವಿಚಾರವಾಗಿ ನಾನು ಮಾಧ್ಯಮಗಳ ಮಾತನ್ನು ಕೇಳುವುದಿಲ್ಲ. ಅವರ ಪಕ್ಷಗಳಿಂದ ಅಭ್ಯರ್ಥಿ ಅಂತಿಮ ಆಯ್ಕೆಯಾಗಲಿ. ಅವರು ಕೈಗೊಳ್ಳುವ ನಿರ್ಧಾರದ ಬಗ್ಗೆ ಅಧಿಕೃತವಾಗಿ ಪ್ರಕಟಿಸಲಿ. ಆಗ ನಾನು ಅದನ್ನು ನಂಬುತ್ತೇನೆ ಎಂದರು.  ಇದನ್ನೂ ಓದಿ: ಇಸ್ರೇಲ್‌ ಜೊತೆ ಮೋದಿಗೆ ಉತ್ತಮ ಸಂಬಂಧವಿದೆ – ಕಾಂಗ್ರೆಸ್‌ನಿಂದ ಇವಿಎಂ-ಪೇಜರ್‌ ಅನುಮಾನ

  • ಚನ್ನಪಟ್ಟಣದಲ್ಲಿ ಟಿಕೆಟ್ ಕಗ್ಗಂಟು – ಟಿಕೆಟ್‌ಗಾಗಿ ದೆಹಲಿಗೆ ಸಿಪಿವೈ ಯಾತ್ರೆ

    ಚನ್ನಪಟ್ಟಣದಲ್ಲಿ ಟಿಕೆಟ್ ಕಗ್ಗಂಟು – ಟಿಕೆಟ್‌ಗಾಗಿ ದೆಹಲಿಗೆ ಸಿಪಿವೈ ಯಾತ್ರೆ

    ರಾಮನಗರ: ಚನ್ನಪಟ್ಟಣ ಉಪಚುನಾವಣೆ (Channapatna By Election) ಕಣ ರಂಗೇರಿದ್ದು, ಮೈತ್ರಿ ಪಕ್ಷದಲ್ಲಿ ಟಿಕೆಟ್ ಕಗ್ಗಂಟು ಮುಂದುವರೆದಿದೆ. ಈಗಾಗಲೇ ಕ್ಷೇತ್ರದಲ್ಲಿ ದಳಪತಿಗಳು ಅಲರ್ಟ್‌ ಆಗಿದ್ದು, ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಸ್ಪರ್ಧೆಗಿಳಿಸಲು ಜೆಡಿಎಸ್ ನಾಯಕರು ಸಿದ್ಧತೆ ಆರಂಭಿಸಿದ್ದಾರೆ.

    ಭಾನುವಾರ ಚನ್ನಪಟ್ಟಣ ಕ್ಷೇತ್ರದಲ್ಲಿ ಪ್ರವಾಸ ಮಾಡಿದ್ದ ಕೇಂದ್ರದ ಬೃಹತ್‌ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅಭ್ಯರ್ಥಿ ಆಯ್ಕೆ ಬಗ್ಗೆ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದರು. ಇದನ್ನೂ ಓದಿ: ಪೋಕ್ಸೋ ಕೇಸ್ – ಮುರುಘಾ ಶ್ರೀಗೆ ಜಾಮೀನು ಮಂಜೂರು

    ಈ ವೇಳೆ ನಿಖಿಲ್ ಸ್ಪರ್ಧೆಗೆ ಸಾಕಷ್ಟು ಒತ್ತಡ ಕೇಳಿಬಂದಿದೆ. ಈಗ ಮಾಜಿ ಸಚಿವ ಸಿಪಿವೈಗೆ ಟಿಕೆಟ್‌ ಕೈ ತಪ್ಪುವ ಆತಂಕ ಹೆಚ್ಚಾಗಿದ್ದು, ಮೈತ್ರಿ ಟಿಕೆಟ್ ಗಿಟ್ಟಿಸಿಕೊಳ್ಳಲು ದೆಹಲಿ ದಂಡಯಾತ್ರೆ ಮಾಡಿದ್ದಾರೆ.

    ಇಂದು ದೆಹಲಿಗೆ ತೆರಳಿರುವ ಮಾಜಿ ಸಚಿವ ಸಿಪಿ ಯೋಗೆಶ್ವರ್ ( CP Yogeshwar) ಬಿಜೆಪಿ ಹೈಕಮಾಂಡ್ ನಾಯಕರ ಜೊತೆ ಟಿಕೆಟ್ ವಿಚಾರವಾಗಿ ಚರ್ಚೆ ನಡೆಸಲಿದ್ದಾರೆ. ಮೈತ್ರಿ ಟಿಕೆಟ್ ಕೈತಪ್ಪಿದರೆ ಮುಂದಿನ ನಡೆಯ ಬಗ್ಗೆಯೂ ಹೈಕಮಾಂಡ್ ನಾಯಕರಿಗೆ ಮನವರಿಕೆ ಮಾಡಿಕೊಡುವ ಸಾಧ್ಯತೆಯಿದೆ.

    ಎರಡ್ಮೂರು ದಿನಗಳಲ್ಲಿ ಬೆಂಬಲಿಗರು, ಆಪ್ತರ ಬೃಹತ್ ಸಮಾವೇಶ ನಡೆಸಲು ಸಿಪಿವೈ ತಯಾರಿ ನಡೆಸುತ್ತಿದ್ದು ಎಲ್ಲದಕ್ಕೂ ರೆಡಿ ಇರಿ ಎಂದು ಬೆಂಬಲಿಗರಿಗೆ ಸಂದೇಶ ರವಾನಿಸಿದ್ದಾರೆ. ಜೆಡಿಎಸ್ ಹಾಗೂ ಬಿಜೆಪಿ ನಡುವಿನ ಈ ಟಿಕೆಟ್ ಕಗ್ಗಂಟನ್ನು ಹೈಕಮಾಂಡ್ ನಾಯಕರು ಹೇಗೆ ಬಿಡಿಸುತ್ತಾರೆ ಎನ್ನುವುದೇ ಸದ್ಯದ ಕುತೂಹಲ.

     

  • ಕಾಂಗ್ರೆಸ್‌ನವರಿಂದಲೇ ಪಕ್ಷಕ್ಕೆ ಸೋಲು: ಈಶ್ವರ್ ಖಂಡ್ರೆ

    ಕಾಂಗ್ರೆಸ್‌ನವರಿಂದಲೇ ಪಕ್ಷಕ್ಕೆ ಸೋಲು: ಈಶ್ವರ್ ಖಂಡ್ರೆ

    ಹಾವೇರಿ: ಕಾಂಗ್ರೆಸ್‌ನವರಿಂದಲೇ (Congress) ಪಕ್ಷಕ್ಕೆ ಸೋಲಾಗುತ್ತಿದೆ. ಕಾಂಗ್ರೆಸ್‌ಗೆ ದ್ರೋಹ ಮಾಡಲು ಹೋಗಬೇಡಿ. ಮುಂದೆ ಪಕ್ಷದಲ್ಲಿ ಎಲ್ಲರಿಗೂ ಸ್ಥಾನಮಾನ ಸಿಗಲಿದೆ ಎಂದು ಸಚಿವ ಈಶ್ವರ್ ಖಂಡ್ರೆ (Eshwar Khandre) ಹೇಳಿದ್ದಾರೆ.

    ಹಾವೇರಿ (Haveri) ಬೂತ್ ಸಮಿತಿ ಸದಸ್ಯರ ಸಮಾವೇಶದಲ್ಲಿ ಮಾತನಾಡಿದ ಅವರು, ಯಾವುದೇ ಕ್ಷಣದಲ್ಲಿ ಉಪಚುನಾವಣೆ (By-Election) ಘೋಷಣೆ ಆಗಬಹುದು. ಶಿಗ್ಗಾವಿ, ಸಂಡೂರು, ಚನ್ನಪಟ್ಟಣ ಮೂರು ಕಡೆ ಸಿದ್ಧತೆ ನಡೆದಿದೆ. ಹೆದರಿಸಿ ಬೆದರಿಸಿ ಇಡಿ, ಸಿಬಿಐ ಮೂಲಕ ಬಿಜೆಪಿಯವರು ಕಾಂಗ್ರೆಸ್ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರ ನೇತೃತ್ವದಲ್ಲಿ ಉತ್ತಮ ಆಡಳಿತ ನೀಡುತ್ತಿದ್ದೇವೆ. 16 ತಿಂಗಳಲ್ಲಿ ಕೊಟ್ಟ ಭರವಸೆ ಈಡೇರಿಸಿದ್ದೇವೆ. ಹೊಟ್ಟೆಕಿಚ್ಚಿನಿಂದ ಸರ್ಕಾರ ಬುಡಮೇಲು ಮಾಡಲು ಪ್ರಯತ್ನ ನಡೆಸಿದ್ದಾರೆ. ಯಾವುದೇ ಶಕ್ತಿ ಬಂದರೂ ಐದು ವರ್ಷ ಏನು ಮಾಡಲು ಸಾಧ್ಯವಿಲ್ಲ. ಕಾಂಗ್ರೆಸ್ ಅಲುಗಾಡಿಸಲು ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ಮಹಿಳಾ ಪಿಎಸ್‍ಐ ಮೇಲೆ ಹಲ್ಲೆಗೈದು ಪರಾರಿಯಾಗಲು ಯತ್ನ – ಕೊಲೆ ಆರೋಪಿಗೆ ಗುಂಡೇಟು

    ಸುಳ್ಳು ಆರೋಪ ಮಾಡಿ, ಸುಳ್ಳೇ ಸತ್ಯ ಮಾಡಲು ಹೊರಟಿದ್ದಾರೆ. ಮೋದಿ, ಅಮಿತ್ ಶಾ ಸಂಚು ಮಾಡಿ ಸಿದ್ದರಾಮಯ್ಯ ಸರ್ಕಾರ ಬುಡಮೇಲು ಮಾಡಲು ಮುಡಾ ಹಗರಣದ ಆರೋಪ ಮಾಡಿದ್ದಾರೆ. ಬಿಜೆಪಿಯವರು ಹೆಣಗಳ ರಾಶಿಗಳ ಮೇಲೆ ರಾಜಕೀಯವನ್ನು ಮಾಡಿದವರು. ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಮಾಡೋರು ಬಿಜೆಪಿಯವರು. ರಾಹುಲ್ ಗಾಂಧಿ ಪ್ರಧಾನಿ ಆಗುತ್ತಾರೆ ಎಂದು ಮೋದಿಯವರಿಗೆ ಭಯ ಶುರುವಾಗಿದೆ. ಅಭ್ಯರ್ಥಿ ಯಾರೇ ಆಗಿರಲಿ, ಹೈಕಮಾಂಡ್ ಹೇಳಿದಂತೆ ಈ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಚುನಾವಣೆಯಲ್ಲಿ ಕೆಲಸ ಮಾಡಿ ಎಂದು ತಿಳಿಸಿದರು. ಇದನ್ನೂ ಓದಿ: ಪೇಜರ್‌ ಬ್ಲಾಸ್ಟ್‌ ಕೇಸ್‌ನಲ್ಲಿ ಟ್ಟಿಸ್ಟ್‌ – ಘಟನೆ ಹಿಂದೆ ಭಾರತೀಯ ಮೂಲದ ಉದ್ಯಮಿಯ ಕೈವಾಡ ಇರೋದು ನಿಜವೇ?

  • ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯದಲ್ಲಿ ಸದ್ಯಕ್ಕೆ ಉಪಚುನಾವಣೆ ಇಲ್ಲ

    ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯದಲ್ಲಿ ಸದ್ಯಕ್ಕೆ ಉಪಚುನಾವಣೆ ಇಲ್ಲ

    ನವದೆಹಲಿ: ಸದ್ಯ ಕರ್ನಾಟಕ (Karnataka) ಸೇರಿದಂತೆ ಯಾವುದೇ ರಾಜ್ಯದಲ್ಲಿ ಉಪ ಚುನಾವಣೆ (By Election) ಮಾಡದೇ ಇರಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ.

    ಇಂದು ಜಮ್ಮು ಕಾಶ್ಮೀರ (Jammu Kashmir) ಮತ್ತು ಹರ್ಯಾಣ (Haryana) ರಾಜ್ಯಗಳ ಚುನಾವಣೆ ದಿನಾಂಕವನ್ನು ಮುಖ್ಯ ಆಯುಕ್ತ ರಾಜೀವ್ ಕುಮಾರ್ ಚುನಾವಣಾ ದಿನಾಂಕ ಪ್ರಕಟಿಸಿದರು. ಈ ವೇಳೆ ಯಾವುದೇ ವಿಧಾನಸಭೆ ಮತ್ತು ಲೋಕಸಭೆಗೆ ಉಪಚುನಾವಣೆ ನಡೆಸುವುದಿಲ್ಲ ಎಂದು ಹೇಳಿದರು.

    46 ವಿಧಾನ ಸಭೆ ಮತ್ತು ಲೋಕಸಭೆಯ 1 ಕ್ಷೇತ್ರಕ್ಕೆ ಉಪಚುನಾವಣೆ ನಡೆಯಬೇಕಿದೆ. ಕೆಲವು ರಾಜ್ಯಗಳಲ್ಲಿ ಹವಾಮಾನ ಸರಿ ಇಲ್ಲ. ಅಸ್ಸಾಂ, ಬಿಹಾರ, ಕೇರಳ ಸೇರಿದಂತೆ ಕೆಲವು ಕಡೆ ಪ್ರವಾಹವಿರುವುದರಿಂದ ಆ ರಾಜ್ಯಗಳಲ್ಲಿ ಚುನಾವಣಾ ಮಾಡಲು ಸಾಧ್ಯವಿಲ್ಲ. ಪರಿಸ್ಥಿತಿ ಸುಧಾರಿಸಿದ ಬಳಿಕ ಚುನಾವಣೆ ಮಾಡುತ್ತೇವೆ ಎಂದು ತಿಳಿಸಿದರು.  ಇದನ್ನೂ ಓದಿ: Assembly elections 2024: ಜಮ್ಮು-ಕಾಶ್ಮೀರದಲ್ಲಿ 3 ಹಂತ, ಹರಿಯಾಣದಲ್ಲಿ ಅ.1ಕ್ಕೆ ಮತದಾನ

    ಒಂದು ಕ್ಷೇತ್ರ ತೆರವಾದ 6 ತಿಂಗಳ ಒಳಗಡೆ ಚುನಾವಣೆ ನಡೆಸಬೇಕಾಗುತ್ತದೆ. ಹೀಗಾಗಿ ಮುಂದಿನ ಡಿಸೆಂಬರ್‌ ಒಳಗಡೆ ಉಪಚುನಾವಣೆ ನಡೆಯಲಿದೆ.

    ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಬೇಕಿದೆ. 2008, 2013, 2018 ಹಾಗೂ 2023ರ ನಾಲ್ಕು ವಿಧಾನಸಭಾ ಚುನಾವಣೆಗಳಲ್ಲಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿ ಕ್ಷೇತ್ರದಿಂದ ಸ್ಪರ್ಧಿಸಿ ಸತತವಾಗಿ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

    ಚನ್ನಪಟ್ಟಣದಿಂದ ಜೆಡಿಎಸ್ ಶಾಸಕರಾಗಿದ್ದ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭೆಯಿಂದ ಗೆದ್ದು ಕೇಂದ್ರದಲ್ಲಿ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆಯ ಸಚಿವರಾಗಿದ್ದಾರೆ.

    ಸಂಡೂರು ಕಾಂಗ್ರೆಸ್ ಶಾಸಕರಾಗಿದ್ದ ಈ ತುಕಾರಾಂ ಅವರು ಬಳ್ಳಾರಿಯಿಂದ ಗೆದ್ದಿದ್ದರಿಂದ ಸಂಡೂರು ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.

  • ಚನ್ನಪಟ್ಟಣ ಉಪಚುನಾವಣೆ – ಟಿಕೆಟ್‌ ಗೊಂದಲಕ್ಕೆ ಇಂದು ಬಿಜೆಪಿ ತೆರೆ?

    ಚನ್ನಪಟ್ಟಣ ಉಪಚುನಾವಣೆ – ಟಿಕೆಟ್‌ ಗೊಂದಲಕ್ಕೆ ಇಂದು ಬಿಜೆಪಿ ತೆರೆ?

    ರಾಮನಗರ: ಚನ್ನಪಟ್ಟಣ ಉಪಚುನಾವಣೆಯ (Channapatna By Election) ಟಿಕೆಟ್‌ ಗೊಂದಲಕ್ಕೆ ಇಂದು ಬಿಜೆಪಿ ಹೈಕಮಾಂಡ್‌ (BJP High Command) ತೆರೆ ಎಳೆಯುವ ಸಾಧ್ಯತೆಯಿದೆ.

    ದೆಹಲಿಯಲ್ಲಿ ಚನ್ನಪಟ್ಟಣ ಉಪಚುನಾವಣೆ ಮೈತ್ರಿ ಅಭ್ಯರ್ಥಿ ಆಯ್ಕೆ ಸಂಬಂಧ ಇಂದು ಸಭೆ ನಡೆಯಲಿದೆ. ಅಧ್ಯಕ್ಷ ಜಿ.ಪಿ.ನಡ್ಡಾ (JP Nadda) ನೇತೃತ್ವದಲ್ಲಿ ನಡೆಯುವ ಸಭೆ ಮಾಜಿ ಸಚಿವ ಸಿಪಿ ಯೋಗೇಶ್ವರ್‌ (CP yogeshwar) ಅವರಿಗೆ ಬಿಜೆಪಿ ಹೈಕಮಾಂಡ್‌ ಬುಲಾವ್‌ ನೀಡಿದೆ. ಇದನ್ನೂ ಓದಿ: ತುಂಗಭದ್ರಾ ಡ್ಯಾಂ ವಾರ್ಷಿಕ ನಿರ್ವಹಣಾ ಗುತ್ತಿಗೆಗೆ ಎಷ್ಟು ಕೋಟಿ ಹಣ ಸಂದಾಯವಾಗಿದೆ? – ಜನಾರ್ದನ ರೆಡ್ಡಿ ಪ್ರಶ್ನೆ

    ಉಪಚುನಾವಣೆಯಲ್ಲಿ ಟಿಕೆಟ್ ಸಿಗದಿದ್ದರೆ ಸ್ವತಂತ್ರ ಸ್ಪರ್ಧೆ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ಸಮಾವೇಶ ನಡೆಸಲು ಸಿಪಿವೈ ಮುಂದಾಗಿದ್ದರು. ಸಿಪಿವೈ ಬಂಡಾಯಕ್ಕೂ ಮುನ್ನ ಎಚ್ಚೆತ್ತ ಬಿಜೆಪಿ ಹೈಕಮಾಂಡ್‌ ದೆಹಲಿಗೆ ಬರುವಂತೆ ಸೂಚನೆ ನೀಡಿದೆ.

    ಸಿಪಿವೈಗೆ ಟಿಕೆಟ್ ನೀಡಿ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಠಕ್ಕರ್ ಕೊಡಲು ಬಿಜೆಪಿ ಹೈಕಮಾಂಡ್ ತಂತ್ರಗಾರಿಕೆ ನಡೆಸಿದೆ ಎನ್ನಲಾಗಿದೆ. ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ಕೆಲ ಷರತ್ತುಗಳ ಮೇಲೆ ಸಿಪಿವೈಗೆ ಟಿಕೆಟ್‌ ಸಿಗುವ ಸಾಧ್ಯತೆಯಿದೆ. ಉಪಚುನಾವಣೆಯಲ್ಲಿ ಸಿಪಿವೈ,  ವಿಧಾನಸಭಾ ಚುನಾವಣೆಯಲ್ಲಿ ನಿಖಿಲ್‌ಗೆ (Nikhil Kumaraswamy) ಅವಕಾಶ ಸಿಗಬಹುದು ಎನ್ನಲಾಗುತ್ತಿದೆ.

     

  • ಚನ್ನಪಟ್ಟಣ ಮೈತ್ರಿ ಕಗ್ಗಂಟು- ಟಿಕೆಟ್ ಸಿಗದಿದ್ದರೆ ಪಕ್ಷೇತರ ಸ್ಪರ್ಧೆ ಸುಳಿವು ನೀಡಿದ ಸಿಪಿವೈ

    ಚನ್ನಪಟ್ಟಣ ಮೈತ್ರಿ ಕಗ್ಗಂಟು- ಟಿಕೆಟ್ ಸಿಗದಿದ್ದರೆ ಪಕ್ಷೇತರ ಸ್ಪರ್ಧೆ ಸುಳಿವು ನೀಡಿದ ಸಿಪಿವೈ

    ರಾಮನಗರ: ಚನ್ನಪಟ್ಟಣ (Channapatna) ಚುನಾವಣಾ ಅಖಾಡ ರಂಗೇರಿದ್ದು, ಮೈತ್ರಿ ಪಕ್ಷದಲ್ಲೀಗ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದೆ. ಉಪಚುನಾವಣೆಯ (By Election) ಟಿಕೆಟ್ ಬಿಜೆಪಿಗೋ ಅಥವಾ ಜೆಡಿಎಸ್‌ಗೋ ಎನ್ನುವ ಗೊಂದಲ ಸೃಷ್ಠಿಯಾಗಿದ್ದು, ಇದರ ನಡುವೆಯೇ ಮೈತ್ರಿ ನಾಯಕರಿಗೆ ಸೆಡ್ಡು ಹೊಡೆಯಲು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ (CP Yogeshwar) ಮುಂದಾಗಿದ್ದಾರೆ.
    ಮೈತ್ರಿ ಅಭ್ಯರ್ಥಿಯಾಗಿ ತನಗೇ ಟಿಕೆಟ್ ನೀಡುವಂತೆ ಪಟ್ಟು ಹಿಡಿದಿರೋ ಸಿಪಿವೈ, ಟಿಕೆಟ್ ನೀಡದಿದ್ದರೆ ಪಕ್ಷೇತರವಾಗಿ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ. ಈಗಾಗಲೇ ಟಿಕೆಟ್‌ಗಾಗಿ ಕೇಂದ್ರ ಸಚಿವ ಹೆಚ್‌ಡಿಕೆ (HD Kumaraswamy) ಹಾಗೂ ಬಿಜೆಪಿ ವರಿಷ್ಠರ ಬಳಿ ಮನವಿ ಮಾಡಿರೋ ಸಿಪಿವೈ ಸ್ಪರ್ಧೆಗೆ ಅವಕಾಶ ಕೋರಿದ್ದಾರೆ. ಆದರೆ ಸಿಪಿವೈಗೆ ಟಿಕೆಟ್ ಕೊಡಲು ಕೇಂದ್ರ ಸಚಿವ ಹೆಚ್‌ಡಿಕೆ ಹಿಂದೇಟು ಹಾಕುತ್ತಿದ್ದು, ಪುತ್ರನ ನಿಲ್ಲಿಸಿ ಗೆಲ್ಲಿಸುವ ಲೆಕ್ಕಾಚಾರ ಮಾಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಕ್ಷೇತ್ರದಲ್ಲಿ ಜೆಡಿಎಸ್ (JDS) ಅಸ್ತಿತ್ವ ಉಳಿಸಿಕೊಳ್ಳುವ ತಂತ್ರಗಾರಿಕೆ ನಡೆಸಿದ್ದಾರೆ ಎಂಬ ಚರ್ಚೆ ಜೆಡಿಎಸ್ ವಲಯದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: NEET-UG ಕೌನ್ಸೆಲಿಂಗ್ ಮುಂದೂಡಿಕೆ
    ಇನ್ನೂ ಕುಮಾರಸ್ವಾಮಿ ಅವರ ಈ ತಂತ್ರ ಅರಿತ ಸಿಪಿ ಯೋಗೇಶ್ವರ್, ಪಕ್ಷದ ವರಿಷ್ಠರು ಘೋಷಿಸುವ ಮುನ್ನವೇ ನಾನೇ ಮೈತ್ರಿ ಅಭ್ಯರ್ಥಿ ಎಂದು ಹೇಳಿಕೊಂಡಿದ್ದಾರೆ. ಹೆಚ್‌ಡಿಕೆಯನ್ನು ಇಕ್ಕಟ್ಟಿಗೆ ಸಿಲುಕಿಸಿ ಟಿಕೆಟ್ ಪಡೆಯುವ ಜಾಣ ನಡೆ ಅನುಸರಿಸಿದ್ದಾರೆ. ಇಷ್ಟಾದರೂ ಟಿಕೆಟ್ ಸಿಗದಿದ್ದರೆ ಪಕ್ಷೇತರವಾಗಿ ಸ್ಪರ್ಧೆಗೆ ಸಿಪಿವೈ ತಯಾರಿ ನಡೆಸಿದ್ದು, ಸೋಮವಾರದಿಂದ ಕ್ಷೇತ್ರದ ಕಾರ್ಯಕರ್ತರು, ಮುಖಂಡರ ಭೇಟಿ ಮಾಡಿ ಅಭಿಪ್ರಾಯ ಸಂಗ್ರಹಿಸಲು ಪ್ಲಾನ್ ಮಾಡಿದ್ದಾರೆ. ಇದನ್ನೂ ಓದಿ: ಕಾಲ್ತುಳಿತಕ್ಕೆ ಕಾರಣರಾದವರನ್ನು ಸುಮ್ಮನೆ ಬಿಡಬಾರದು: ಬೋಲೇನಾಥ ಬಾಬಾ
  • Karnataka By Elections – ಅಭ್ಯರ್ಥಿ ಆಯ್ಕೆಗೆ ಮೂರು ತಂಡ ರಚಿಸಿದ ಬಿಜೆಪಿ

    Karnataka By Elections – ಅಭ್ಯರ್ಥಿ ಆಯ್ಕೆಗೆ ಮೂರು ತಂಡ ರಚಿಸಿದ ಬಿಜೆಪಿ

    ಬೆಂಗಳೂರು: ಕರ್ನಾಟಕದ (Karnataka) ಮೂರು ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯ (By-Election) ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿಯಿಂದ (BJP) ತಂಡ ರಚನೆ ಮಾಡಿದೆ.

    ಚನ್ನಪಟ್ಟಣ (Channapatna) ಕ್ಷೇತ್ರಕ್ಕೆ ಡಾ.ಸಿ.ಎನ್‌.ಅಶ್ವತ್‌ನಾರಾಯಣ, ಸಂಡೂರಿಗೆ (Sanduru) ಸಿ ಟಿ ರವಿ, ಶಿಗ್ಗಾವಿಗೆ (Shiggaon) ಆರ್ ಅಶೋಕ್ ನೇತೃತ್ವದ ತಂಡವನ್ನು ರಚನೆ ಮಾಡಲಾಗಿದೆ.

    ಕ್ಷೇತ್ರಗಳಿಗೆ ತೆರಳಿ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಕ್ಕೆ ಸೂಚನೆ ನೀಡಲಾಗಿದೆ. ವರದಿಗಳು ಪೂರ್ಣಗೊಂಡ ಬಳಿಕ ಹೈಕಮಾಂಡ್‌ಗೆ ಕಳಿಸಲು ಬಿಜೆಪಿ ನಿರ್ಧಾರ ಮಾಡಿದೆ.  ಇದನ್ನೂ ಓದಿ: ಟಿ20 ವಿಶ್ವಕಪ್‌ ಪ್ರಶಸ್ತಿಯನ್ನು ದೇಶಕ್ಕೆ ಅರ್ಪಿಸಿದ ರೋಹಿತ್‌ – ವೇದಿಕೆಯಲ್ಲಿ ಕೊಹ್ಲಿ ಭಾವುಕ!

    ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.  2008, 2013, 2018 ಹಾಗೂ 2023ರ ನಾಲ್ಕು ವಿಧಾನಸಭಾ ಚುನಾವಣೆಗಳಲ್ಲಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿ ಕ್ಷೇತ್ರದಿಂದ ಸ್ಪರ್ಧಿಸಿ ಸತತವಾಗಿ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.  ಇದನ್ನೂ ಓದಿ: UK General Elections 2024: ಸೋಲಿನತ್ತ ರಿಷಿ ಸುನಕ್‌ ಪಕ್ಷ, ಭರ್ಜರಿ ಜಯದತ್ತ ಲೇಬರ್‌ ಪಾರ್ಟಿ

    ಚನ್ನಪಟ್ಟಣದಿಂದ ಜೆಡಿಎಸ್ ಶಾಸಕರಾಗಿದ್ದ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭೆಯಿಂದ ಗೆದ್ದು ಕೇಂದ್ರದಲ್ಲಿ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆಯ ಸಚಿವರಾಗಿದ್ದಾರೆ.

    ಸಂಡೂರು ಕಾಂಗ್ರೆಸ್ ಶಾಸಕರಾಗಿದ್ದ ಈ ತುಕಾರಾಂ ಅವರು ಬಳ್ಳಾರಿಯಿಂದ ಗೆದ್ದಿದ್ದರಿಂದ ಸಂಡೂರು ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.

     

  • ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಆಯ್ಕೆಗೆ ದೆಹಲಿಯಲ್ಲಿ ಕಸರತ್ತು

    ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಆಯ್ಕೆಗೆ ದೆಹಲಿಯಲ್ಲಿ ಕಸರತ್ತು

    ನವದೆಹಲಿ: ಚನ್ನಪಟ್ಟಣ (Channapatna) ವಿಧಾನಸಭೆ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ (New Delhi) ಮಹತ್ವದ ಚರ್ಚೆ ನಡೆದಿದೆ. ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಭೇಟಿಯಾಗಿ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ. ಅಲ್ಲದೇ ದೆಹಲಿಯಲ್ಲೇ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಜೊತೆಗೂ ಮಾತುಕತೆ ನಡೆಸಿದ್ದಾರೆ.

    ಈ ನಡುವೆ ಟಿಕೆಟ್ ಆಕಾಂಕ್ಷಿ, ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ (CP Yogeshwar) ದೆಹಲಿಯಲ್ಲಿ ಬೀಡು ಬಿಟ್ಟಿದ್ದು ಬಿಜೆಪಿ ಹಿರಿಯ ನಾಯಕರನ್ನು ಮತ್ತು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ. ಉಪ ಚುನಾವಣೆಯಲ್ಲಿ ಟಿಕೆಟ್‌ಗಾಗಿ ಅವರು ಲಾಬಿ ನಡೆಸುತ್ತಿದ್ದಾರೆ ಎಂದು ಆಪ್ತ ಮೂಲಗಳು ಹೇಳಿವೆ. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಕೇಸ್ – ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್

    ಕೇಂದ್ರ ನಾಯಕರ ಭೇಟಿ ಬಳಿಕ ಮಾತನಾಡಿದ ಬಿ.ವೈ ವಿಜಯೇಂದ್ರ, ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಲ್ಲುವ ಧೈರ್ಯ ಡಿ.ಕೆ ಶಿವಕುಮಾರ್ ಮಾಡುವುದಿಲ್ಲ. ಲೋಕಸಭೆ ಚುನಾವಣೆಯಲ್ಲೂ ಚನ್ನಪಟ್ಟಣದಲ್ಲಿ ಬಿಜೆಪಿಗೆ ಲೀಡ್ ಬಂದಿದೆ. ಅವರದೇ ಪಕ್ಷದಲ್ಲಿ ಅವರನ್ನು ಸದೆಬಡಿಯುವ ಪ್ರಯತ್ನ ನಡೆಯುತ್ತಿದೆ. ಈ ಹಂತದಲ್ಲಿ ರಿಸ್ಕ್ ತೆಗೆದುಕೊಳ್ಳುವುದಿಲ್ಲ. ಅಭ್ಯರ್ಥಿ ಆಯ್ಕೆ ಬಗ್ಗೆ ಅಮಿತ್ ಶಾ ಮತ್ತು ಕುಮಾರಸ್ವಾಮಿ ಜೊತೆಗೆ ಚರ್ಚಿಸಿದ್ದೇನೆ. ಒಮ್ಮತದ ಅಭ್ಯರ್ಥಿಯನ್ನು ಹಾಕಲಿದ್ದೇವೆ ಎಂದರು. ಇದನ್ನೂ ಓದಿ: ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಹೆಸರು ಕೈಬಿಟ್ಟ ವಿಚಾರ ನಾನು ಗಂಭೀರವಾಗಿ ಪರಿಗಣಿಸಲ್ಲ: ಹೆಚ್‌ಡಿಕೆ

    ಹೆಚ್.ಡಿ ಕುಮಾರಸ್ವಾಮಿ ಮಾತನಾಡಿ, ಚುನಾವಣೆಗೆ ಇನ್ನೂ ಸಾಕಷ್ಟು ಸಮಯ ಇದೆ. ಯಾರು ಸ್ಪರ್ಧಿಸಬೇಕು ಎನ್ನುವುದು ನಿರ್ಧಾರ ಮಾಡುತ್ತೇವೆ. ಬಿಜೆಪಿ -ಜೆಡಿಎಸ್ ಅನ್ನೋ ವಿಚಾರ ಅಲ್ಲಿ ಬರುವುದಿಲ್ಲ. ಮೈತ್ರಿ ಅಭ್ಯರ್ಥಿ ಸ್ಪರ್ಧೆ ಮಾಡಲಿದ್ದಾರೆ. ಇದರಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಮೊದಲ ಕೇಸ್‌ನಲ್ಲೇ ಪ್ರಜ್ವಲ್ ರೇವಣ್ಣಗೆ ಶಾಕ್ – ಹೊಳೆನರಸೀಪುರ ಪ್ರಕರಣದ ಜಾಮೀನು ಅರ್ಜಿ ವಜಾ

    ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ಮಾತನಾಡಿ, ಉಪ ಚುನಾವಣೆ ಹಿನ್ನೆಲೆ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿದ್ದೇನೆ. ಕೇಂದ್ರ ಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದೇನೆ. ಅಭ್ಯರ್ಥಿ ಬಗ್ಗೆ ತೀರ್ಮಾನ ಮಾಡಲು ಇನ್ನು ಕಾಲಾವಕಾಶ ಬೇಕು. ಅಲ್ಲಿವರೆಗೂ ಗೆಲುವಿಗೆ ನಾವು ತಯಾರಿ ಮಾಡಿಕೊಳ್ಳುತ್ತೇವೆ. ಸ್ಪರ್ಧೆ ಬಗ್ಗೆ ಬಹುಪಾಲು ನಿರ್ಣಯ ಕುಮಾರಸ್ವಾಮಿ ಮಾಡುತ್ತಾರೆ. ಅವರ ಆಶೀರ್ವಾದ ಇಲ್ಲದೆ ಏನು ಆಗಲ್ಲ ಎಂದರು. ಇದನ್ನೂ ಓದಿ: ಮೋದಿಯವರ ಸುಳ್ಳಾಟ ಬಯಲಿಗೆ ಎಳೆಯಲು ಒಳ್ಳೆಯ ಅವಕಾಶವಿದೆ: ಸಂತೋಷ್ ಲಾಡ್

    ನನಗೆ ಜೆಡಿಎಸ್ ಸಿಂಬಲ್ ಸ್ಪರ್ಧೆ ಮಾಡಿ ಎಂದು ಯಾರೂ ಕೇಳಿಲ್ಲ. ಎರಡೂ ಪಕ್ಷದ ನಾಯಕರು ಚರ್ಚೆ ಮಾಡಬೇಕು. ಪಕ್ಷದಿಂದ ಟಿಕೆಟ್ ಸಿಗದೆ ಇದ್ದರೂ ಎನ್‌ಡಿಎಗೆ ನನ್ನ ಬೆಂಬಲವಿದೆ. ವರಿಷ್ಠರು ಏನು ಹೇಳುತ್ತಾರೆ ಅದನ್ನು ಕೇಳುತ್ತೇನೆ. ನಿಖಿಲ್ ಸ್ಪರ್ಧೆ ಮಾಡೋದಾದರೆ ನನ್ನ ಸಂಪೂರ್ಣ ಬೆಂಬಲ ಇದೆ. ನಾನು ಯಾವುದೇ ಒಳಸಂಚು ಮಾಡುವುದಿಲ್ಲ. ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ನನ್ನ ಹನಿಟ್ರ್ಯಾಪ್ ನಡೆದಿಲ್ಲ: ಶಾಸಕ ಹರೀಶ್ ಗೌಡ ಸ್ಪಷ್ಟನೆ

    ಕಾಂಗ್ರೆಸ್‌ನಿಂದ ಡಿಕೆ ಶಿವಕುಮಾರ್ ಕುಟುಂಬದವರೇ ನಿಲ್ಲುತ್ತಾರೆ ಎಂಬುದು ನಮ್ಮ ಅಭಿಪ್ರಾಯ. ಅವರ ಕುಟುಂಬ ಸ್ಪರ್ಧಿಸಿದರೆ ದೊಡ್ಡ ಹೋರಾಟ ನಡೆಯಲಿದೆ. ಈ ನಡುವೆ ವಾರದಲ್ಲಿ ಎರಡು ದಿನ ಚನ್ನಪಟ್ಟಣದಲ್ಲಿ ಶಿವಕುಮಾರ್ ಠಿಕಾಣಿ ಹೂಡುತ್ತಿದ್ದಾರೆ. ಹಿಂದೆ ಚನ್ನಪಟ್ಟಣಕ್ಕೆ ತಿರುಗಿ ನೋಡದವರು ಮತ್ತೆ ಬಂದಿದ್ದಾರೆ. ಚನ್ನಪಟ್ಟಣದ ಮತದಾರರು, ನಾಯಕರು ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲೇ ಅಸಮಾಧಾನ ಇದೆ. ಅದನ್ನು ಬಿಟ್ಟು ಚನ್ನಪಟ್ಟಣಕ್ಕೆ ಬಂದು ಉಪಚುನಾವಣೆ ಗೆದ್ದು ರಾಜ್ಯ ಗೆಲ್ಲಬೇಕು ಎಂದುಕೊಂಡಿದ್ದಾರೆ. ಅದು ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ಉಸಿರಾಡುವ ಗಾಳಿಗೊಂದು ಟ್ಯಾಕ್ಸ್ ಹಾಕೋದು ಬಾಕಿ ಇದೆ: ಸಿ.ಟಿ ರವಿ ಕಿಡಿ