ಹಾವೇರಿ: ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆ ದಂಗಲ್ ಸಲುವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರ ಪಟ್ಟಣದ ಹಳ್ಳೂರ ಓಣಿಯಲ್ಲಿರುವ ಅತ್ತೆ ಮನೆ ತೆರಳಿ ಮತಯಾಚಿಸಿದ್ದಾರೆ.
ಸಿಎಂ ಆದ ಬಳಿಕ ಪ್ರಥಮ ಬಾರಿಗೆ ಅತ್ತೆ ಮನೆಗೆ ಬೊಮ್ಮಾಯಿ ಬರುತ್ತಿದ್ದಂತೆ, ಮನೆ ಅಳಿಯನಿಗೆ ಆರತಿ ಮಾಡಿ, ಹೂಗುಚ್ಛ ನೀಡಿ ಬೀಗರು ಸ್ವಾಗತಿಸಿದರು. ಬಳಿಕ ಬೀಗರ ಮನೆಯಲ್ಲಿ ಮಂಡಕ್ಕಿ, ಮಿರ್ಚಿ ಮತ್ತು ಚಹಾ ಸೇವಿಸಿದರು. ನಂತರ ನಮ್ಮ ಅಭ್ಯರ್ಥಿ ಶಿವರಾಜ ಸಜ್ಜನರಗೆ ಮತ ನೀಡಿ ಎಂದು ಬೊಮ್ಮಾಯಿ ಕೇಳಿಕೊಂಡರು. ಇದನ್ನೂ ಓದಿ: ಪ್ರೇಮ ವೈಫಲ್ಯ – ವೀಡಿಯೋ ಮಾಡಿಟ್ಟು ಜಿಮ್ ಟ್ರೈನರ್ ಆತ್ಮಹತ್ಯೆ
ಈ ಮೊದಲು ಬೊಮ್ಮಾಯಿ ಹಾನಗಲ್ ತಾಲೂಕಿನ ಶೀಗಿಹಳ್ಳಿ ಗ್ರಾಮದ ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ವೇಳೆ ಯುವತಿಯೊಬ್ಬಳು ಸಿಎಂ ಕೈಕುಲುಕಿ ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದಳು. ಬಳಿಕ ಸಿಎಂ ಕಾಲಿಗೆ ಎರಗಿ ನಮಸ್ಕರಿಸಿದಳು. ನಂತರ ಶಾಲಾ ಬಾಲಕಿ ಮತ್ತು ಮಹಿಳೆಯರೊಂದಿಗೂ ಸಿಎಂ ಸೆಲ್ಫಿಗೆ ಪೋಸ್ ನೀಡಿದರು. ಇದನ್ನೂ ಓದಿ: ಟಿಪ್ಪರ್ ಡಿಕ್ಕಿ – ಬೈಕಲ್ಲಿ ಹೋಗ್ತಿದ್ದ ತಾಯಿ, ಮಗು ಸಾವು
ಹುಬ್ಬಳ್ಳಿ: ಮಹಾರಾಷ್ಟ್ರ, ಮಧ್ಯಪ್ರದೇಶದಲ್ಲಿ ಕೊರೊನಾ ಹೊಸ ತಳಿ ಬಂದಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಮೂರನೇ ಅಲೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಲವು ದೇಶಗಳಲ್ಲಿ ಈಗಾಗಲೇ 3ನೇ ಅಲೆ ಕುರಿತು ಮಾತುಗಳು ಕೇಳಿಬರುತ್ತಿದೆ. ರಷ್ಯಾ, ಇಂಗ್ಲೆಂಡ್ ರೀತಿಯಲ್ಲಿ ದೇಶದ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ ಕೊರೊನಾ ಹೊಸ ತಳಿ ಬಂದಿದೆ ಎಂಬ ವರದಿ ಬಂದಿದೆ. ಹೀಗಾಗಿ ನಮ್ಮ ತಜ್ಞರ ಮತ್ತು ತಾಂತ್ರಿಕ ಸಿಬ್ಬಂದಿ ಜೊತೆ ಮಾತನಾಡಿದ್ದೇನೆ. ಹೊಸ ತಳಿಯ ಲಕ್ಷಣಗಳ ಬಗ್ಗೆ ಮಾಹಿತಿ ಸಿಕ್ಕ ತಕ್ಷಣ ನಮ್ಮ ಗಮನಕ್ಕೆ ತರಲು ಸೂಚಿಸಿದ್ದೇನೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲೂ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಮೊದಲ ಡೋಸ್ ವ್ಯಾಕ್ಸಿನ್ ಪಡೆದವರು ಎರಡನೇ ಡೋಸ್ ಕಡ್ಡಾಯ ಪಡೆದುಕೊಳ್ಳಬೇಕು ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಅವಶ್ಯಕತೆ ಬಿದ್ದರೆ ಮುಂದಿನ ದಿನಗಳಲ್ಲಿ ಪಠ್ಯ ಕಡಿತ: ಬಿ.ಸಿ.ನಾಗೇಶ್
ಶಾಲೆ ಆರಂಭ ಕುರಿತು ಮಾತನಾಡಿದ ಅವರು, ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಜಾಸ್ತಿ ಇರುತ್ತೆ. 4 ತಿಂಗಳಿನಿಂದಲೂ ಶಾಲೆಗಳು ಆರಂಭವಾಗಿದ್ದರೂ, ಈವರೆಗೆ ಮಕ್ಕಳಲ್ಲಿ ಅಂತಹ ಆತಂಕ ಕಂಡುಬಂದಿಲ್ಲ. ಮಕ್ಕಳಲ್ಲಿ ಗಂಭೀರ ಸಮಸ್ಯೆಗಳು ಕಾಣಿಸಿಕೊಂಡಿಲ್ಲ. ವಿದ್ಯಾರ್ಥಿಗಳ ಕಲಿಕೆ ಈಗಾಗಲೇ ನಿಂತುಹೋಗಿದೆ. ಹೀಗಾಗಿ ಸರ್ಕಾರದ್ದು, ಅತ್ಯಂತ ಜವಾಬ್ದಾರಿ ನಡೆ ಇದೆ. ಶಾಲೆಗಳಲ್ಲಿ 1 ಪ್ರತಿಶತಕ್ಕಿಂತ ಹೆಚ್ಚು ಪ್ರಕರಣಗಳು ಕಂಡುಬಂದರೆ ಅಂತಹ ಶಾಲೆಗಳನ್ನು ಬಂದ್ ಮಾಡಲಾಗುತ್ತದೆ. ಹಲವು ಮಾರ್ಗಸೂಚಿಗಳನ್ನು ಇಟ್ಟುಕೊಂಡು ಇದೀಗ ಶಾಲೆಗಳನ್ನು ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.
ಉಪಚುನಾವಣೆ ಹಿನ್ನೆಲೆ ವಿಧಾನಸೌಧ ಖಾಲಿ ವಿಚಾರವಾಗಿ ಮಾತನಾಡಿದ ಅವರು, ಇಂತಹ ಆರೋಪಗಳು ಸತ್ಯಕ್ಕೆ ದೂರವಾಗಿದೆ. ರಾಜ್ಯದಲ್ಲಿ ಎಲ್ಲ ಯೋಜನೆಯ ಕಾಮಗಾರಿಗಳು ಅನುಷ್ಠಾನಗೊಳ್ಳುತ್ತಿವೆ. ನಾನು ಎಲ್ಲೇ ಇದ್ದರೂ ಸಭೆಗಳನ್ನು ಮಾಡುತ್ತಿದ್ದೇನೆ. ಕಳೆದ ಎಂಟು ದಿನಗಳಿಂದ ಈ ಭಾಗದಲ್ಲಿದ್ದೇವೆ. ಇಲ್ಲಿ ಬಂದರೂ ಸಹ ಹಲವು ಜಿಲ್ಲೆಗಳಲ್ಲಿ ಆರೋಗ್ಯ ವಿಚಾರವಾಗಿ ಪರಿಶೀಲನೆ ಮಾಡುತ್ತಿದ್ದೇವೆ. ಉಪಚುನಾವಣೆ ಇದೇ ಮೊದಲಲ್ಲ. ಎಲ್ಲ ಸರ್ಕಾರಗಳು ಅಧಿಕಾರದಲ್ಲಿದ್ದಾಗಲೂ, ಉಪಚುನಾವಣೆ ಎದುರಿಸಿದ್ದಾರೆ. ಎಲ್ಲರೂ ಇದನ್ನೇ ಮಾಡಿದ್ದಾರೆ. ಉಪಚುನಾವಣೆಯಲ್ಲಿ ನಾಲ್ಕೈದು ಸಚಿವರುಗಳು ಬಂದು ಪ್ರಚಾರ ಕೈಗೊಳ್ಳುವುದು ವಿಶೇಷವೂ ಅಲ್ಲ, ಹೊಸದೂ ಅಲ್ಲ ಎಂದಿದ್ದಾರೆ. ಇದನ್ನೂ ಓದಿ:ತಂದೆ ಹಿಂದೂ, ತಾಯಿ ಮುಸ್ಲಿಂ, ನಾನು ಜಾತ್ಯತೀತ ಕುಟುಂಬಕ್ಕೆ ಸೇರಿದ್ದೇನೆ: ಸಮೀರ್ ವಾಂಖೆಡೆ ತೀಕ್ಷ್ಣ ಪ್ರತಿಕ್ರಿಯೆ
ಹಾನಗಲ್ ಉಪಚುನಾವಣೆ ವಿಚಾರವಾಗಿ ಮಾತನಾಡಿದ ಅವರು, ಸಿಎಂ ಬೊಮ್ಮಾಯಿ ಈಗಾಗಲೇ ಇದು ನನ್ನ ಪ್ರತಿಷ್ಠೆಯಲ್ಲ, ಹಾನಗಲ್ ಜನರ ಅಭಿವೃದ್ದಿಯ ಪ್ರತಿಷ್ಠೆ ಎಂದಿದ್ದಾರೆ. ನಾನೂ ಕೂಡ ಸಿಎಂ ಮಾತಿಗೆ ಬದ್ಧನಾಗಿದ್ದೇನೆ. ಅದು ಅಲ್ಲದೇ ಕ್ಷೇತ್ರದ ಜನರಿಗೂ ಹೇಳಿದ್ದೇನೆ. ಈ ಕ್ಷೇತ್ರ ಅಭಿವೃದ್ಧಿಯಾಗಬೇಕಾದರೆ ಬಿಜೆಪಿ ಅಭ್ಯರ್ಥಿ ಸರ್ಕಾರದ ಪರ ಇರುತ್ತಾರೆ. ಅವರನ್ನೇ ಗೆಲ್ಲಿಸಬೇಕು. ಒಂದು ಸೀಟು ಗೆದ್ದರೆ ಅಥವಾ ಸೋತರೆ ಸರ್ಕಾರಕ್ಕೇನೂ ಅಪಾಯವಿಲ್ಲ. ಆದರೂ ಕೂಡ ಯಾವುದೇ ಚುನಾವಣೆಯಲ್ಲಿ ಗೆದ್ದಾಗ ನೈತಿಕಸ್ಪೂರ್ತಿ ಹಾಗೂ ಧೈರ್ಯ ಹೆಚ್ಚಾಗುತ್ತೆ. ಬೊಮ್ಮಾಯಿ ಅವರು ಮೊದಲ ಬಾರಿಗೆ ಸಿಎಂ ಆದ ಬಳಿಕ ತಮ್ಮ ಕ್ಷೇತ್ರದಲ್ಲಿ ತೊಡಗಿಕೊಂಡಿರುವುದು ಸಹಜವಾಗಿ ಎಲ್ಲರಿಗೂ ಕುತೂಹಲ ಹೆಚ್ಚಾಗಿರುತ್ತೆ ಎಂದು ಹೇಳಿದ್ದಾರೆ.
ಮೈಸೂರು: ಸಿದ್ದರಾಮಯ್ಯ ಮಾತಾನಾಡುವುದನ್ನು ನೋಡಿದರೆ ಅಸಹ್ಯವಾಗುತ್ತದೆ. ಇವರನ್ನು ಒಂದು ತಿಂಗಳು ತಾಲಿಬಾನಿಗೆ ಕಳಿಸಬೇಕು ಎಂದು ಮಾಜಿ ಸಚಿವ ವಿ. ಶ್ರೀನಿವಾಸಪ್ರಸಾದ್ ಕಿಡಿಕಾರಿದ್ದಾರೆ.
ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಂಜನಗೂಡಿನ ಉಪಚುನಾವಣೆ ನನ್ನ ಸದಾ ಚುಚ್ಚುತ್ತಿರುತ್ತದೆ. ಹಾನಗಲ್, ಸಿಂದಗಿ ಉಪ ಚುನಾವಣೆಯಲ್ಲಿ ಹಣದ ಹೊಳೆ ಹರಿಯುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸುತ್ತಿದ್ದಾರೆ. ಆದರೆ ನಂಜನಗೂಡು ಉಪಚುನಾವಣೆ ವೇಳೆ ಸಿದ್ದರಾಮಯ್ಯ ಎಷ್ಟು ಅಧಿಕಾರ ದುರುಪಯೋಗ ಮಾಡಿಕೊಂಡರು. ಆಗ ನನ್ನ ಬಳಿ ಹಣ ಇರಲಿಲ್ಲ. ಪೊಲೀಸರ ಎದುರೇ ಕಾಂಗ್ರೆಸ್‍ನವರು ಅವತ್ತು ಹಣ ಹಂಚಿದರು. ಆ ಚುನಾವಣೆಯಲ್ಲಿ ಕಾಂಗ್ರೆಸ್‍ನವರು ನನಗೆ ತುಂಬಾ ನೋವು ಕೊಟ್ಟರು. ಇಂತಹವರು ಈಗ ಉಪ ಚುನಾವಣೆಯಲ್ಲಿ ಹಣದ ಹೊಳೆ ಹರಿಯುತ್ತಿದೆ ಎಂದು ಆರೋಪಿಸುತ್ತಾರೆ. ಅವರಿಗೆ ನಾಚಿಕೆ ಆಗಬೇಕು ಎಂದಿದ್ದಾರೆ. ಇದನ್ನೂ ಓದಿ: ಯುಪಿ ಜನತೆಗೆ 10 ಲಕ್ಷ ರೂ.ವರೆಗೂ ಉಚಿತ ಚಿಕಿತ್ಸೆ – ಪ್ರಿಯಾಂಕಾ ಗಾಂಧಿ ಭರವಸೆ
ಸಿದ್ದರಾಮಯ್ಯ ಎರಡು ಕಡೆ ಚುನಾವಣೆಗೆ ನಿಲ್ಲದೇ ಇದ್ದಿದ್ದರೆ ಕಾಟೂರು ತೋಟದ ಮನೆ ಸೇರಿ ಕೊಳ್ಳಬೇಕಿತ್ತು. ಇದನ್ನೆಲ್ಲಾ ಮರೆತು ಸಿದ್ದರಾಮಯ್ಯ ಇವತ್ತು ಬಾಯಿಗೆ ಬಂದ ರೀತಿ ಮಾತಾಡುವುದನ್ನು ಕಲಿತಿದ್ದಾರೆ. ಸಿದ್ದರಾಮಯ್ಯ ಮಾತಾಡುವುದನ್ನು ನೋಡಿದರೆ ಅಸಹ್ಯವಾಗುತ್ತದೆ. ಇವರನ್ನು ಒಂದು ತಿಂಗಳು ತಾಲಿಬಾನಿಗೆ ಕಳಿಸಬೇಕು. ಪ್ರಧಾನಿ ಬಗ್ಗೆ ಬಾಯಿಗೆ ಬಂದಂತೆ ಮಾತಾಡುವುದನ್ನು ಮೊದಲು ನಿಲ್ಲಿಸಲಿ. ಲೋಕಸಭಾ ಚುನಾವಣೆಯಲ್ಲಿ ಏನೇನಾಯ್ತು ಗೊತ್ತಿಲ್ವಾ? ಒಂದು ಸೀಟ್ ಗೆದ್ದು ಉಳಿದ ಕಡೆ ನೆಗೆದು ಬಿದ್ದು ಹೋದ್ರಿ. ಇದೆಲ್ಲಾ ಮರೆತು ಹೋಯ್ತಾ ಸಿದ್ದರಾಮಯ್ಯ ಅವರೇ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಜೆಡಿಎಸ್ ಸೋಲಿಸಿ ಬಿಜೆಪಿ ಗೆಲ್ಲಿಸೋದೇ ಸಿದ್ದು & ಟೀಂನ ಉದ್ದೇಶ: ಹೆಚ್‍ಡಿಕೆ ಕಿಡಿ
ಇನ್ನೂ ಜೆಡಿಎಸ್ ಪಾರ್ಟಿಯಲ್ಲ. ಅದೊಂದು ಕಂಪನಿಯಷ್ಟೇ ಬೆಂಕಿ ಹಾಕಿದ ಕಡೆ ಕೈ ಕಾಯಿಸಿಕೊಳ್ಳಿ ಅಷ್ಟೇ. ಯಾರಿಗೂ ಬಹುಮತ ಬಾರದೇ ಇದ್ದರೆ ಸಾಕು ಎನ್ನುವುದೇ ನಿಮ್ಮ ಲೆಕ್ಕಾಚಾರ. ನಿಮ್ಮ ಇತಿಮಿತಿ ಎಲ್ಲರಿಗೂ ಗೊತ್ತಿದೆ ಎಂದಿದ್ದಾರೆ.
– ನಾನು ಕುಮಾರಸ್ವಾಮಿಗಾಗಿ ಬಸ್ ಡ್ರೈವರ್ ಆಗಿದ್ದೆ – ಕುಮಾರಸ್ವಾಮಿ ಲಾಭ ಇಲ್ಲದೇ ಯಾವುದೇ ಕೆಲಸ ಮಾಡಲ್ಲ – ಎಚ್‌ಡಿಕೆ ಹಣಕ್ಕಾಗಿ ಅಲ್ಪಸಂಖ್ಯಾತರನ್ನು ಬಲಿ ಕೊಡುತ್ತಾರೆ
ವಿಜಯಪುರ: ಉಪಚುನಾವಣೆ ಅಖಾಡದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಿರುವಾಗ ಪಕ್ಷದ ನಾಯಕರೆಲ್ಲ ಒಬ್ಬರ ವಿರುದ್ಧ ಇನ್ನೊಬ್ಬರು ಆರೋಪವನ್ನು ಮಾಡುತ್ತಿದ್ದಾರೆ. ಇಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಸಿಂದಗಿ ಪಟ್ಟಣದಲ್ಲಿ ಶಾಸಕ ಜಮೀರ್ ಅಹ್ಮದ್ ಕಿಡಿಕಾರಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೂಟ್‌ಕೇಸ್ ತಗೊಂಡು ಅಭ್ಯರ್ಥಿ ಹಾಕಿದ್ದಾರೆ. ಬಸವಕಲ್ಯಾಣದಲ್ಲಿ ಹತ್ತು ಕೋಟಿ ತಗೊಂಡು ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿದ್ದರು. ಜೆಡಿಎಸ್ ಸೂಟ್‌ಕೇಸ್ ರಾಜಕಾರಣ ಮಾಡುತ್ತಿದೆ. ಉಪ ಚುನಾವಣೆಯಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿ ಹಾಕುತ್ತಿದೆ. 2005ರಲ್ಲಿ ನನ್ನ ಸೋಲಿಸಲು ಕೈ ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿರಲಿಲ್ಲ. ದೇವೇಗೌಡರ ಋಣ ನನ್ನ ಮೇಲಿದೆ. ದೇವೇಗೌಡರಿಂದ ಶಾಸಕನಾಗಿದ್ದೇನೆಯೇ ವಿನಃ ಕುಮಾರಸ್ವಾಮಿಯಿಂದ ಅಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: 14 ವರ್ಷದ ಬಳಿಕ ಬೆಂಕಿಪೊಟ್ಟಣದ ಬೆಲೆ ಏರಿಕೆ
ನಾನು ಬಸ್ ಮಾಲೀಕನಾಗಿದ್ದೆ. ಕುಮಾರಸ್ವಾಮಿಯನ್ನು ಸಾಕಿದ್ದೇ ನಾನು. ನನ್ನ ತಾತನ ಜಮಾನದಿಂದ ಬಸ್ ಇದೆ. ನಿಮ್ಮ ಹಾಗೆ ನಾನು ಬಿಬಿಎಂಪಿಯಲ್ಲಿ ಸ್ಕೂಟರ್ ಇಟ್ಟುಕೊಂಡು ಕಸಗುಡಿಸುತ್ತಿರಲಿಲ್ಲ. ಕುಮಾರಸ್ವಾಮಿ ಬಗ್ಗೆ ಬಿಚ್ಚಿ ಹೇಳಬೇಕಾಗುತ್ತದೆ. ನಾನು ಸುಮ್ನೆ ಕೂರೋ ಮಗ ಅಲ್ಲಾ. ನನ್ನ ತಂಟೆಗೆ ಬಂದರೆ ಎಲ್ಲಾ ಬಿಚ್ಚಿಡಬೇಕಾಗುತ್ತದೆ. ನಮ್ಮ ನಾಯಕ ಸಿದ್ದರಾಮಯ್ಯ ಹುಲಿ ಇದ್ದಂಗೆ, ಕುಮಾರಸ್ವಾಮಿ ಬ್ರದರ್ ಬ್ರದರ್ ಅಂತ ಕತ್ತು ಕೊಯ್ಯುತ್ತಾನೆ. ನಾನು ಎಲ್ಲಾ ಚರ್ಚೆಗೆ ಸಿದ್ಧ, ಬೇಕಾದರೆ ಕುಮಾರಸ್ವಾಮಿ ಚರ್ಚೆಗೆ ಬರಲಿ ಎಂದು ಎಚ್.ಡಿ ಕುಮಾರಸ್ವಾಮಿಗೆ ಸವಾಲು ಹಾಕಿದ್ದಾರೆ. ಇದನ್ನೂ ಓದಿ: ಮಕ್ಕಳ ಜೊತೆ ಶಿಲ್ಪಾ ಶೆಟ್ಟಿ ಸುತ್ತಾಟ- ರಾಜ್ ಕುಂದ್ರಾ ಮಿಸ್ಸಿಂಗ್
2004ರಲ್ಲಿ ಕುಮಾರಸ್ವಾಮಿ ಅದಾಯ ನಿಲ್ ಇತ್ತು. 2008 ರಲ್ಲಿ 360 ಕೋಟಿ ರೂಪಾಯಿ ಆದಾಯ ಕುಮಾರಸ್ವಾಮಿ ತೋರಿಸಿದ್ದಾರೆ. ಇಷ್ಟೊಂದು ಆದಾಯ ಕುಮಾರಸ್ವಾಮಿ ಅವರಿಗೆ ಎಲ್ಲಿಂದ ಬಂತು? ನಾನು ಮನೆ ಕಟ್ಟಿರೋದು ಕೂಡಾ ಅವರಿಗೆ ಸಹಿಸಲು ಆಗಲಿಲ್ಲ. ನಾನು ಕುಮಾರಸ್ವಾಮಿಗಾಗಿ ಬಸ್ ಡ್ರೈವರ್ ಆಗಿದ್ದೆ. ಕುಮಾರಸ್ವಾಮಿ ಯಾರು ಬೆಳೆಯೋದನ್ನು ಸಹಿಸಲ್ಲ. ಅಲ್ಪಸಂಖ್ಯಾತರು ಮಾತ್ರವಲ್ಲ, ಒಕ್ಕಲಿಗರು ಕೂಡಾ ಬೆಳೆಯೋದನ್ನು ಸಹಿಸಲ್ಲ. ಜೆಡಿಎಸ್, ಬಿಜೆಪಿ ಜೊತೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆ. ಕುಮಾರಸ್ವಾಮಿ ಲಾಭ ಇಲ್ಲದೇ ಯಾವುದೇ ಕೆಲಸ ಮಾಡಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ. ಇದನ್ನೂ ಓದಿ: ಠಾಣೆ ಮೆಟ್ಟಿಲೇರಿದ ಕಸ ಫೈಟ್ – ಪ್ರೊಡ್ಯೂಸರ್ ಪುತ್ರ, ಪತ್ನಿ ವಿರುದ್ಧ FIR
ಅಲ್ಪಸಂಖ್ಯಾತ ನಾಯಕರನ್ನು ಮುಗಿಸಿದ್ದು ಸಿದ್ದರಾಮಯ್ಯ ಅಲ್ಲ, ಕುಮಾರಸ್ವಾಮಿ. ಹಣಕ್ಕಾಗಿ ಅಲ್ಪಸಂಖ್ಯಾತರನ್ನು ಬಲಿ ಕೊಡುತ್ತಾರೆ. ಆರ್‌ಎಸ್‍ಎಸ್ ವಿರುದ್ಧ ಕುಮಾರಸ್ವಾಮಿ ಟೀಕೆ ಮಾಡುತ್ತಿರುವುದು
ಮುಸ್ಲಿಂ ಮತಕ್ಕಾಗಿ ವಿನಃ ಬೇರೆ ಉದ್ದೇಶ ಅಲ್ಲ. ನನ್ನ ಹಣೆಬರಹ ಬರೆದಿದ್ದು ದೇವರೇ ವಿನಃ ಕುಮಾರಸ್ವಾಮಿ ಅಲ್ಲ. ದೇವೇಗೌಡರು ಇನ್ನೂರರಷ್ಟು ಜ್ಯಾತ್ಯತೀತ ವ್ಯಕ್ತಿಯಾಗಿದ್ದಾರೆ. ಆದರೆ ಕುಮಾರಸ್ವಾಮಿ ಇಲ್ಲ ಕುಮಾರಸ್ವಾಮಿ ಆರ್‌ಎಸ್‍ಎಸ್‍ಚಡ್ಡಿ ಹಾಕಿರಬಹುದು ಎಂದು ಎಚ್‍ಡಿಕೆ ವಿರುದ್ಧವಾಗಿ ಕಿಡಿಕಾರಿದ್ದಾರೆ.
ವಿಜಯಪುರ: ಗೋಣಿ ಚೀಲದಲ್ಲಿ ಹಣ ತಂದು ಹಂಚಿದವರು ಕಾಂಗ್ರೆಸ್ ಹೊರತು ಬಿಜೆಪಿ ಅಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿಜಯಪುರ ಜಿಲ್ಲೆಯ ಸಿಂದಗಿ ಮತಕ್ಷೇತ್ರ ವಾಪ್ತಿಯ ಕನ್ನೊಳ್ಳಿ ಗ್ರಾಮ ರೋಡ್ ಶೋ ನಡೆಸಿ, ಬಳಿಕ ಭಾಷಣ ಮಾಡಿದ ಅವರು, ಸಿಂದಗಿ ಕ್ಷೇತ್ರದಲ್ಲಿ ವ್ಯಕ್ತವಾಗುತ್ತಿರುವ ಬೆಂಬಲ ನೋಡಿದರೆ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಗೆಲುವು ಖಚಿತ ಎಂದು ನುಡಿದರು. ಇದನ್ನೂ ಓದಿ: ಮಕ್ಕಳು ಜೊತೆ ಶಿಲ್ಪಾ ಶೆಟ್ಟಿ ಸುತ್ತಾಟ- ರಾಜ್ ಕುಂದ್ರಾ ಮಿಸ್ಸಿಂಗ್
ಇದೇ ವೇಳೆ ಬಿಜೆಪಿ ಗೋಣಿ ಚೀಲದಲ್ಲಿ ಹಣ ಹಂಚುತ್ತಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಹಣ ಹಂಚುವ ಕೆಲಸ ಮಾಡಿದ್ದು ಕಾಂಗ್ರೆಸ್. ಅವರು ಮಾಡಿದ್ದನ್ನು, ಅವರ ಅನುಭವವನ್ನು ಹೇಳುತ್ತಿದ್ದಾರೆ. ಕಾಂಗ್ರೆಸ್ ಸೋತ ಬಳಿಕ ಬಿಜೆಪಿ ಹಣ ಬಲದಿಂದ ಗೆದ್ದಿದೆ ಎಂದು ಆರೋಪಿಸುತ್ತಿದ್ದರು. ಆದರೆ ಈ ಬಾರಿ ಸಿಂದಗಿ ಹಾಗೂ ಹಾನಗಲ್ ನಲ್ಲಿ ಸೋಲೋಕು ಮುಂಚೆಯೇ ಆರೋಪಿಸಲು ಆರಂಭಿಸಿದ್ದಾರೆ. ಕಾಂಗ್ರೆಸ್ ನವರು ಸೋಲಿನ ಹತಾಶೆಯಲ್ಲಿ ಮಾತನಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
ನಂತರ ಕ್ಷೇತ್ರದ ರಸ್ತೆ, ನೀರು, ವಿದ್ಯುತ್ ಸೇರಿದಂತೆ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲಾಗುವುದು. ಜನರ ಆಶೀರ್ವಾದದಿಂದ ರಾಜಕೀಯದ ಚಿತ್ರಣವೇ ಬದಲಾಗಿದೆ. ಈ ಬಾರಿ ಬಿಜೆಪಿಗೆ ಮತ ನೀಡಿ. ಸೂರ್ಯ ಪೂರ್ವದಲ್ಲಿ ಹುಟ್ಟುವುದು ಎಷ್ಟು ಸತ್ಯವೋ ರಮೇಶ ಭೂಸನೂರ 25 ಸಾವಿರ ಮತಗಳಿಂದ ಗೆಲ್ಲುವುದು ಅಷ್ಟೇ ಸತ್ಯ ಎಂದರು. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಭಾರೀ ಮಳೆ – ಜನಜೀವನ ಅಸ್ತವ್ಯಸ್ತ
ಕಳೆದ ಬಾರಿ ದಿವಂಗತ ಎಂ ಸಿ ಮನಗೂಳಿ ಕಾಕಾ ಇದ್ದರು. ಅವರ ಮೇಲಿನ ಅನುಕಂಪದಿಂದ ನೀವೆಲ್ಲ ಅವರನ್ನು ಗೆಲ್ಲಿಸಿದ್ರಿ. ಈ ಬಾರಿ ಅವರು ಇಲ್ಲ, ಬಿಜೆಪಿಯನ್ನು ಗೆಲ್ಲಿಸಿ. ನಾನು ಸಿಎಂ ಆದ ಮೇಲೆ ಮೊದಲು ತೆಗೆದುಕೊಂಡ ನಿರ್ಧಾರ ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಒಂದು ಸಾವಿರ ಕೋಟಿ ಕೊಟ್ಟಿದ್ದೇನೆ. ನಾನು ಬಡವರ, ದೀನದಲಿತರ ಪರವಾಗಿದ್ದೇನೆ. ಸಂಧ್ಯಾಸುರಕ್ಷಾ ಯೋಜನೆ ಸೇರಿದಂತೆ ಹಲವು ಯೋಜನೆಗಳನ್ನು ಬಡವರು, ಎಲ್ಲಾ ವರ್ಗದ ಜನರಿಗೆ ಅವಕಾಶ ಕೊಟ್ಟಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಠಾಣೆ ಮೆಟ್ಟಿಲೇರಿದ ಕಸ ಫೈಟ್ – ಪ್ರೊಡ್ಯೂಸರ್ ಪುತ್ರ, ಪತ್ನಿ ವಿರುದ್ಧ ಎಫ್‍ಐಆರ್
ಇದೇ ವೇಳೆ ಸಿಎಂಗೆ ಜೊತೆ ಸಚಿವರಾದ ಗೋವಿಂದ ಕಾರಜೋಳ, ಸಿಸಿ ಪಾಟೀಲ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸಾಥ್ ನೀಡಿದರು.
ದಾವಣಗೆರೆ: ಸಿದ್ದರಾಮಯ್ಯ ಆರೋಪಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ಅವರು ಹರಿಹಾಯ್ದಿದ್ದಾರೆ.
ಈ ಬಾರಿ ಉಪ ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಬಹಳಷ್ಟು ಕಸರತ್ತು ನಡೆಸುತ್ತಿದ್ದು, ಮೂರು ಪಕ್ಷದ ನಾಯಕರುಗಳು ಪಕ್ಷದ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸದಸ್ಯತ್ವ ಬೇಕಾದ್ರೆ ಷರತ್ತು ಅನ್ವಯ
ಈ ಮಧ್ಯೆ ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಎಸ್‍ವೈ ಅವರು, ಹಾನಗಲ್, ಸಿಂದಗಿಯಲ್ಲಿ ದೊಡ್ಡ ಅಂತರದಲ್ಲಿ ನಾವು ಗೆಲ್ಲುತ್ತೇವೆ. ಸಿದ್ದರಾಮಯ್ಯ ಏನೇ ಆರೋಪ ಮಾಡಿದರೂ ಗೆಲ್ಲುವುದಿಲ್ಲ. ಅವರ ಆರೋಪಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಕೊನೆಯಲ್ಲಿ ಫಲಿತಾಂಶ ಬಿಜೆಪಿ ಪರವಾಗಿ ಬರುತ್ತದೆ ಎಂದು ಹೇಳಿದ್ದಾರೆ.
ನಮ್ಮೆಲ್ಲ ನಾಯಕರು ಎರಡು ಕ್ಷೇತ್ರದಲ್ಲಿ ಠಿಕಾಣಿ ಹೂಡಿದ್ದಾರೆ. ಎರಡು ಕ್ಷೇತ್ರದಲ್ಲಿ ದೊಡ್ಡ ಸಭೆ ನಡೆದಿದೆ. ಸಂಪೂರ್ಣವಾಗಿ ಜನ ಮೋದಿ ಅವರ ಪಕ್ಷಕ್ಕೆ ಬೆಂಬಲಿಸಲು ತೀರ್ಮಾನಿಸಿದ್ದಾರೆ. ಸಿದ್ದರಾಮಯ್ಯರ ಅಪಪ್ರಚಾರಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ವಿಪಕ್ಷ ಅಂದ ಮೇಲೆ ಅಪಪ್ರಚಾರ ನಡೆಸುವುದು ಸ್ವಾಭಾವಿಕ. ಆದರೆ ಸಿದ್ದರಾಮಯ್ಯ ಏನೇ ಮಾತಾನಾಡಿದರೂ, ಫಲಿತಾಂಶ ಬಂದ ಮೇಲೆ ಅವರಿಗೆ ಗೊತ್ತಾಗುತ್ತದೆ ಎಂದು ನುಡಿದಿದ್ದಾರೆ. ಇದನ್ನೂ ಓದಿ: ಠಾಣೆ ಮೆಟ್ಟಿಲೇರಿದ ಕಸ ಫೈಟ್ – ಪ್ರೊಡ್ಯೂಸರ್ ಪುತ್ರ, ಪತ್ನಿ ವಿರುದ್ಧ FIR
ಹಾವೇರಿ: ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮೂರು ಪಕ್ಷಗಳ ರಾಜಕೀಯ ನಾಯಕರು ವಾಕ್ಸಮರ ಮುಂದುವರಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಆರೋಪ ಮಾಡಿದ ಬೆನ್ನಲ್ಲೇ ಇದೀಗ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕೂಡ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಹೌದು. ಇಂದು ಹಾನಗಲ್ ನಲ್ಲಿ ಚುನಾವಣಾ ಪ್ರಚಾರದ ವೇಳೆ ಮಾಜಿ ಸಿಎಂ ಅವರು, ಹಾನಗಲ್‍ಗೆ ಗೋಣಿಚೀಲದಲ್ಲಿ ದುಡ್ಡು ತಂದಿದ್ದಾರೆ ಎಂದು ಆರೋಪಿಸಿದರು. ಬಿಜೆಪಿ ಮತ್ತು ಕಾಂಗ್ರೆಸ್ಸಿನವರು ಈ ಕ್ಷೇತ್ರಕ್ಕೆ ಏನು ಕೊಟ್ಟಿದ್ದಾರೆ..?. ಯಾವುದೋ ಒಂದೆರಡು ರಸ್ತೆಗಳನ್ನ ಮಾಡಿದ್ದು ಬಿಟ್ಟರೆ ಏನೂ ಮಾಡಿಲ್ಲ. ಇಷ್ಟು ಮಾಡಿದ್ರೆ ಜನರ ಸಂಕಷ್ಟಗಳು ನಿವಾರಣೆ ಆಗುವುದಿಲ್ಲ. ಇಲ್ಲಿ ಬಂದ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಅಭಿವೃದ್ಧಿ ಕೆಲಸದ ಬಗ್ಗೆ ಸವಾಲು ಹಾಕಿಕೊಂಡಿದ್ದಾರೆ ಎಂದರು. ಇದನ್ನೂ ಓದಿ: ಬಸ್ ಓಡಿಸಿಕೊಂಡಿದ್ದವನನ್ನು ಕರ್ಕೊಂಡು ಬಂದು ಶಾಸಕ ಮಾಡಿದೆ -ಜಮೀರ್ ವಿರುದ್ಧ ಹೆಚ್‍ಡಿಕೆ ವಾಗ್ದಾಳಿ
ನಿಮಗೆ ಮನುಷ್ಯತ್ವ ಮತ್ತು ತಾಯಿ ಹೃದಯ ಇದೆಯಾ..? ಈಗ ಹಾನಗಲ್‍ನಲ್ಲಿ ಚೀಲದಲ್ಲಿ ಹಣ ತಂದಿರುವ ಬಗ್ಗೆ ಚರ್ಚೆ ನಡೆಯುತ್ತಿದೆ. ಇದು ಯಾರ ದುಡ್ಡು, ಸಾರ್ವಜನಿಕರ ದುಡ್ಡು. ಭ್ರಷ್ಟಾಚಾರ ಬಗ್ಗೆ ಚರ್ಚೆ ಮಾಡಿದ್ರೆ ನಿಮಗೆ ಏನು ಲಾಭ..? ನಮ್ಮ ಪಕ್ಷದ ಅಭ್ಯರ್ಥಿ ಪರ ಕ್ಷೇತ್ರದಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ. ನಮ್ಮ ಅಭ್ಯರ್ಥಿ ಇಲ್ಲಿ ಏಕಾಂಗಿ ಆಗಿಲ್ಲ, ಈ ಕ್ಷೇತ್ರದಲ್ಲಿ ನಾವು ಮೂರು ತಿಂಗಳ ಹಿಂದೆಯೇ ಅಭ್ಯರ್ಥಿಯನ್ನ ಘೋಷಣೆ ಮಾಡಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್ಸಿನಲ್ಲಿ ಯಂಕ, ನಾಣಿ, ಸೀನ ಅನ್ನೋ ಎಂಪಿಗಳಿದ್ದಾರೆ ಅಷ್ಟೇ: ಬಿಎಸ್‍ವೈ
ಗ್ರಾಮೀಣ ಮಟ್ಟದಲ್ಲಿ ಅಭ್ಯರ್ಥಿ ಪಕ್ಷ ಸಂಘಟನೆ ಮಾಡಿದ್ದಾರೆ. ನನ್ನ ಉದ್ದೇಶ ಈ ಉಪಚುನಾವಣೆಯಲ್ಲಿ ಗೆಲ್ಲುವುದಲ್ಲ. ನಾನು ಮಶಿನ್ 123 ಗುರಿ ಇಟ್ಟುಕೊಂಡಿದ್ದೇನೆ. 2023 ರ ಚುನಾವಣೆಯಲ್ಲಿ ಗೆಲ್ತೀವಿ. ನಮ್ಮ ಪಕ್ಷದಲ್ಲಿ ನಾಯಕರ ಕೊರತೆಯಿದೆ. ಮತ್ತೊಂದು ದಿನ ಹಾನಗಲ್ ನಲ್ಲಿ ಪ್ರಚಾರ ಮಾಡ್ತೀನಿ. ಈ ಚುನಾವಣೆಯಿಂದ ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಹೋಗಬಹುದು. ನನ್ನ ಗುರಿ ಬೈ ಎಲೆಕ್ಸನ್ ಅಲ್ಲ, 2023. ಹಣದ ಚೀಲ ಹೇಗೆ ತರಬೇಕು ಎನ್ನುವ ಅನುಭವ ಎರಡು ಪಕ್ಷದವರಿಗೆ ಇರಬಹುದು ಎಂದು ವಾಗ್ದಾಳಿ ನಡೆಸಿದರು.
ಬೆಂಗಳೂರು: ರಾಜ್ಯದಲ್ಲಿ ಹಾನಗಲ್, ಸಿಂದಗಿ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಕಾವು ಹೆಚ್ಚಾಗಿದೆ. ಮೂರೂ ರಾಜಕೀಯ ಪಕ್ಷಗಳ ಘಟಾನುಘಟಿ ನಾಯಕರು ಪ್ರಚಾರ ಕಣದಲ್ಲಿ ಮತಯಾಚಿಸುತ್ತಿದ್ದಾರೆ ಜೊತೆಗೆ ಪಕ್ಷಗಳ ಮಧ್ಯೆ ಪ್ರತಿಷ್ಠೆ, ಪ್ರಭಾವ, ಹಣಬಲ, ವೈಯಕ್ತಿಕ ಟೀಕೆ-ನಿಂದನೆಗಳು ನಡೆಯುತ್ತಿದ್ದು, ಇದು ಕೌರವರ, ಪಾಂಡವರ ಕದನ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಹಾನಗಲ್, ಸಿಂದಗಿ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಕಾವು ಹೆಚ್ಚಾಗಿದೆ. ಮೂರೂ ರಾಜಕೀಯ ಪಕ್ಷಗಳ ಘಟಾನುಘಟಿ ನಾಯಕರು ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡುತ್ತಾ ಪ್ರಚಾರ ಕಣದಲ್ಲಿ ಮತಯಾಚಿಸುತ್ತಿದ್ದಾರೆ. ಈ ಉಪಚುನಾವಣೆಯಲ್ಲಿ ಯಾರೇ ಗೆದ್ರೂ ಅವರ ಅಧಿಕಾರಾವಧಿ ಒಂದೂವರೇ ವರ್ಷ ಮಾತ್ರ. ಆದರೆ ಹಾನಗಲ್, ಸಿಂದಗಿ ಆಡಳಿತ ಮತ್ತು ವಿಪಕ್ಷಗಳ ಪಾಲಿಗೆ ಪ್ರತಿಷ್ಠೆಯ ಕಣವಾಗಿದೆ. ಸಿಎಂ ಬೊಮ್ಮಾಯಿಗೆ ಇದು ಮೊದಲ ಬೈ ಎಲೆಕ್ಷನ್ ಟೆಸ್ಟ್ ಆದರೆ, ವಿಪಕ್ಷಗಳ ಪಾಲಿಗೆ ಆಡಳಿತ ವಿರೋಧಿ ಅಲೆ ಎಷ್ಟಿದೆ ಎನ್ನುವುದನ್ನು ಪರೀಕ್ಷಿಸಿಕೊಳ್ಳಲು ಒದಗಿ ಬಂದಿರುವ ವೇದಿಕೆಯಾಗಿದೆ. ಹೀಗಾಗಿ ಗೆಲ್ಲಲೇಬೇಕು ಎಂಬ ಭರದಲ್ಲಿ ಕಾಂಗ್ರೆಸ್-ಬಿಜೆಪಿ ಮಧ್ಯೆ ಮಾತಿನ ಜಟಾಪಟಿ ನಡಿಯುತ್ತಿದೆ. ರಾಜಕೀಯ ನಾಯಕರು ನಿತ್ಯ ಭಾಷಣಗಳ ಮೂಲಕ ಪರಸ್ಪರ ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ವಿರೋಧ ಪಕ್ಷದಲ್ಲಿ ಇದ್ದಾಗ ಕೆಲ ಡೈಲಾಗ್ ಫಿಕ್ಸ್: ಬೊಮ್ಮಾಯಿ
ಹಾನಗಲ್ ಕ್ಷೇತ್ರದ ವಿಚಾರವಾಗಿ ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ ಮಧ್ಯೆ ಅಭಿವೃದ್ಧಿ ವಿಚಾರವಾಗಿ ಸವಾಲ್-ಪ್ರತಿಸವಾಲ್ ನಡೆದಿದೆ. ಹಾನಗಲ್‍ಗೆ ಏನ್ ಕೊಟ್ಟಿದ್ದಾರೆ ಅಂತ ಲೆಕ್ಕ ಕೇಳಿದ್ರೆ ಸಿದ್ದರಾಮಯ್ಯ ಓಡಿ ಹೋಗುತ್ತಾರೆ ಎಂದು ಬೊಮ್ಮಾಯಿ ಆರೋಪಿಸಿದ್ದಾರೆ. ಇದಕ್ಕೆ ಸಿದ್ದರಾಮಯ್ಯ, ನಾನು ಸಿಎಂ ಆದಾಗ ಹಾವೇರಿ ಜಿಲ್ಲೆಗೆ 2,400 ಕೋಟಿ ಕೊಟ್ಟಿದ್ದೇನೆ. ಮಿಸ್ಟರ್ ಬೊಮ್ಮಾಯಿ ಎರಡೂವರೆ ವರ್ಷದಲ್ಲಿ ನೀವೇನು ಏನು ಮಾಡಿದ್ದೀರಿ ಅಂತ ಲೆಕ್ಕ ಹೇಳ್ತೀರಾ? ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬೊಮ್ಮಾಯಿ
ನಾವು 15 ಲಕ್ಷ ಮನೆ ಕಟ್ಟಿಕೊಟ್ಟಿದ್ದೇವೆ. ನೀವು ಒಂದೇ ಒಂದು ಮನೆ ಕಟ್ಟಿಸಿಕೊಡೋಕೆ ಆಗಿಲ್ಲ. ಈ ವಿಚಾರದಲ್ಲಿ ಬೊಮ್ಮಾಯಿ ಜೊತೆ ಬಹಿರಂಗ ಚರ್ಚೆಗೆ ರೆಡಿ ಎಂದು ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ. ಇದಕ್ಕೆ ಕಾಗದದಲ್ಲಿ ಹೇಳಿದ್ರೇ ಸಾಕೇ? ಅದಕ್ಕೆ ದುಡ್ಡು ಇಡಬೇಕಲ್ಲಾ? ಎಂದು ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಇದಕ್ಕೆ ಮತ್ತೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಬಸವರಾಜ ಬೊಮ್ಮಾಯಿ ಖಾಲಿ ಡಬ್ಬಾ. ರಾಜ್ಯವನ್ನು ನರಕ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ಬೆಂಗಳೂರು: ಸಿಂದಗಿ ಹಾಗೂ ಹಾನಗಲ್ ಉಪ ಚುನಾವಣೆಗೆ ಇನ್ನು 9 ದಿನ ಬಾಕಿ ಇರುವಂತೆಯೇ ಆರೋಪ-ಪ್ರತ್ಯಾರೋಪ ಜೋರಾಗಿದೆ. ನಿನ್ನೆ-ಮೊನ್ನೆಯೆಲ್ಲಾ ವೈಯಕ್ತಿಕ ನಿಂದನೆಯಲ್ಲಿ ತೊಡಗಿದ್ದ ಜನನಾಯಕರು ಇವತ್ತು ಇನ್ನೊಂದು ಮಜಲು ತಲುಪಿದ್ದಾರೆ.
ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ಸಿಗರು ಹಣ ಹಂಚಿಕೆಯ ಆರೋಪ ಹೊರಿಸಿದ್ದಾರೆ. ಸಿಂದಗಿ ಹಾಗೂ ಹಾಗನಲ್‍ನಲ್ಲಿ ಸೋಲೋ ಮುನ್ಸೂಚನೆ ಸಿಕ್ತಿದ್ದಂತೆಯೇ ಸಿಎಂ ದುಡ್ಡು ಹಂಚೋಕೆ ಹೇಳಿದ್ದಾರೆ. ಗೋಣಿಚೀಲದಲ್ಲಿ ತಂದು ಪ್ರತಿ ವೋಟ್‍ಗೆ 2 ಸಾವಿರ ಹಂಚ್ತಿದ್ದಾರೆ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಇದನ್ನೂ ಓದಿ: ಬಿಎಸ್‍ವೈ ಆಪ್ತನ ಮೇಲಿನ ಐಟಿ ದಾಳಿಗೆ ಬಿಗ್ ಟ್ವಿಸ್ಟ್ – 750 ಕೋಟಿಯಲ್ಲಿ 600 ಕೋಟಿ ಬೇನಾಮಿ
ಕೊಪ್ಪಳ: ದೇಶಕ್ಕೆ ತೊಂದರೆ ಆದಾಗ ಆರ್‌ಎಸ್‌ಎಸ್ ಸಂಘಟನೆ ಏನು ಅಂತ ತೋರಿಸುತ್ತದೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದ್ದಾರೆ.
ಜಿಲ್ಲೆಯ ಗಂಗಾವತಿ ತಾಲೂಕಿನ ಪಂಪಾ ಸರೋವರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸೈನಿಕರ ತರಹ ಆರ್‌ಎಸ್‌ಎಸ್ ಕೆಲಸ ಮಾಡುತ್ತಿದೆ. ಕುಮಾರಸ್ವಾಮಿ ನಾಲಿಗೆ ಇಲ್ಲದಂತೆ ಮಾತಾನಾಡುತ್ತಿದ್ದಾರೆ. ಅವರಿಗೆ ನಾನು ಉತ್ತರ ಕೊಡಲ್ಲ ಎಂದರು.
ಭಯೋತ್ಪಾದಕರಿಂದ, ದೇಶಕ್ಕೆ ಕುತ್ತು ಬಂದಾಗ ಆರ್‌ಎಸ್‌ಎಸ್ ಕೆಲಸ ಮಾಡುತ್ತದೆ. ಆರ್‌ಎಸ್‌ಎಸ್ ಅನ್ನೋದು Ready for selfless service ಇದ್ದಂತೆ ಎಂದು ಹೇಳುವ ಮಾತಿನ ಭರದಲ್ಲಿ ಸೇಲ್ಪ್‍ಲೆಸ್ ಅನ್ನುವ ಬದಲು helpless ಸರ್ವೀಸ್ ಎಂದ ಉಚ್ಚಾರಿಸಿದರು. ಇದನ್ನೂ ಓದಿ: ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ- ನಾಳೆ ತುಮಕೂರು ಬಂದ್
ಬಡವರಿಗೆ ಆರ್‌ಎಸ್‌ಎಸ್ ಅನೇಕ ಸಹಾಯ ಮಾಡಿದೆ. ಆರ್‌ಎಸ್‌ಎಸ್ ದೇಶ ಕಟ್ಟುವ ಕೆಲಸ ಮಾಡುತ್ತಿದೆ. ಹಿಂದೂ ಅನ್ನುವ ಪ್ರತಿ ವ್ಯಕ್ತಿಗೆ ಆರ್‌ಎಸ್‌ಎಸ್ ಗೊತ್ತು. ರಾಜಕಾರಣಕ್ಕಾಗಿ ಅವರೆಲ್ಲ ಟೀಕೆ ಮಾಡುತ್ತಿದ್ದಾರೆ. ಆರ್‌ಎಸ್‌ಎಸ್ ಟೀಕೆ ಮಾಡುವುದು ಶೋಭೆ ತರುವ ಕೆಲಸ ಅಲ್ಲ. ನಾನು ವೈಯಕ್ತಿಕ ವಿಚಾರ ಮಾತಾಡಲ್ಲ. ನಮ್ಮ ಪ್ರಧಾನ ಮಂತ್ರಿ ಬಗ್ಗೆನೂ ಮಾತಾಡೋದು ತಪ್ಪು ಎಂದು ಹೇಳಿದರು.
ಇದೇ ವೇಳೆ ಸಿಂಧಗಿ ಹಾನಗಲ್‍ನಲ್ಲಿ ನಾವು ಗೆಲ್ಲುತ್ತೇವೆ. ಆದರೆ ಎಷ್ಟು ಅಂತರದಲ್ಲಿ ಗೆಲ್ಲುತ್ತೇವೆ ಎನ್ನುವುದು ಮುಖ್ಯ. ಇಂದು ನಾನು ಸಿಂಧಗಿಗೆ ಹೋಗುತ್ತಿದ್ದೇನೆ ಈಗಾಗಲೇ ಬೊಮ್ಮಾಯಿ, ಯಡಿಯೂರಪ್ಪ ಇಬ್ಬರು ಪ್ರಚಾರ ಮಾಡುತ್ತಿದ್ದಾರೆ ಎಂದರು. ಇದನ್ನೂ ಓದಿ: ಪ್ರಿಯಾಂಕಾ ಗಾಂಧಿ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದ ಪೊಲೀಸರ ವಿರುದ್ಧ ಕ್ರಮ
ಎಸ್‍ಟಿ ಮೀಸಲಾತಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, 7.5 ಮೀಸಲಾತಿ ವಿಚಾರದಿಂದ ನಾವು ಹಿಂದೆ ಬರಲ್ಲ. ಸ್ವಲ್ಪ ಕಾನೂನು ತೊಡಕು ಇದೆ. ಇದು ಬಗೆಹರಿದ ತಕ್ಷಣ ಕ್ಲೀಯರ್ ಆಗುತ್ತದೆ ಎಂದು ನುಡಿದರು. ಇದನ್ನೂ ಓದಿ: ಅಲ್ಪಸಂಖ್ಯಾತರ ಬಗ್ಗೆ ಬಿಜೆಪಿ ದ್ವಂದ್ವ ನೀತಿ: ಹೆಚ್‍ಡಿಕೆ ತರಾಟೆ
ಬಿಜೆಪಿಯಲ್ಲಿ ಬಿಎಸ್‍ವೈ ಸೈಡ್ ಲೈನ್ ಆಗ್ತಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ, ಯಡಿಯೂರಪ್ಪ ಶಕ್ತಿ ಇದ್ದಂತೆ, ಅವರು ಸೈಡಲೈನ್ ಆಗಲ್ಲ. ಅದರಂತೆ ರಾಮಲುರನ್ನು ಸಹ ಸೈಡ್‍ಲೈನ್ ಮಾಡುವುದಕ್ಕೆ ಆಗಲ್ಲ. ನಾನು ಜನರ ಮಧ್ಯೆದಿಂದ ಬಂದಿರುವ ವ್ಯಕ್ತಿ ಯಾವುದೇ ಕಾರಣಕ್ಕೂ ಸೈಡಲೈನ್ ಮಾಡುವುದಕ್ಕೆ ಆಗಲ್ಲ ಎಂದು ಟೀಕಾಕಾರರಿಗೆ ನೇರವಾಗಿ ಉತ್ತರ ನೀಡಿದರು.