Tag: byatarayanapura

  • ಪರಪ್ಪನ ಅಗ್ರಹಾರ ಜೈಲಿಗೆ ಇಮ್ರಾನ್ ಪಾಷಾ ಶಿಫ್ಟ್

    ಪರಪ್ಪನ ಅಗ್ರಹಾರ ಜೈಲಿಗೆ ಇಮ್ರಾನ್ ಪಾಷಾ ಶಿಫ್ಟ್

    ಬೆಂಗಳೂರು: ಕೊರೊನಾ ಲಾಕ್‍ಡೌನ್ ಉಲ್ಲಂಘಿಸಿ ಮೆರವಣಿಗೆ ನಡೆಸಿ ಬಂಧನವಾಗಿದ್ದ ಪಾದರಾಯನಪುರದ ಕಾರ್ಪೊರೇಟರ್ ಇಮ್ರಾನ್ ಪಾಷಾ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ.

    ಕೋವಿಡ್-19 ಹಿನ್ನೆಲೆ ಸರ್ಕಾರ ವಿಧಿಸಿದ್ದ ನಿಮಯ ಉಲ್ಲಂಘಿಸಿದ ಪ್ರಕರಣವನ್ನು 3ನೇ ಎಸಿಎಂಎಂ ಕೋರ್ಟ್ ವಿಚಾರಣೆ ನಡೆಸಿತ್ತು. ಈ ವೇಳೆ ವಾದ, ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು, ಇಮ್ರಾನ್ ಪಾಷಾ ಸೇರಿದಂತೆ 24 ಜನ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

    ಕೋರ್ಟ್ ಆದೇಶದ ಬಳಿಕ ಪೊಲೀಸರು ಇಮ್ರಾನ್ ಪಾಷಾ ಸೇರಿದಂತೆ 24 ಜನ ಆರೋಪಿಗಳನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು 28 ಆರೋಪಿಗಳನ್ನ ಬಂಧಿಸಲಾಗಿತ್ತು. ಆದರೆ ಒಬ್ಬನಿಗೆ ಕೊರೊನಾ ಪಾಸಿಟಿವ್ ಬಂದಿದೆ. ಉಳಿದ ಮೂವರ ರಿಪೋರ್ಟ್ ಬರಬೇಕಿದೆ. ಹೀಗಾಗಿ 24 ಆರೋಪಿಗಳನ್ನ ಮಾತ್ರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.

    ಆರೋಪಿಗಳನ್ನು ಅರೆಸ್ಟ್ ಮಾಡಿ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಇಂದು ಪೊಲೀಸ್ ಕಸ್ಟಡಿ ಮುಗಿದ ಹಿನ್ನೆಲೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರು ವಿಚಾರಣೆ ನಡೆಸಿದರು. ಬಳಿಕ ಇಮ್ರಾನ್ ಪಾಷಾ ಮತ್ತು ಬಂಟರ ಕೊರೊನಾ ರಿಪೋರ್ಟ್ ನೆಗೆಟಿವ್ ಬಂದಿದ್ದರಿಂದ ಕೋರ್ಟ್ ಆದೇಶದಂತೆ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ.

    ಏನಿದು ಪ್ರಕರಣ?:
    ಕೋವಿಡ್-19 ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಇಮ್ರಾನ್ ಪಾಷಾ ಜೂನ್ 7ರಂದು ಮಧ್ಯಾಹ್ನ ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಬಿಡುಗಡೆಯಾದ ಪಾಷಾರನ್ನು ಕಾರ್ಯಕರ್ತರು ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಪಾದರಾಯನಪುರದಲ್ಲಿರುವ ನಿವಾಸಕ್ಕೆ ಕರೆ ತಂದಿದ್ದರು.

    ಈ ವೇಳೆ ಬೈಕ್‍ಗಳಲ್ಲಿ ಕುಳಿತವರು ಹಲ್ಮೆಟ್ ಇಲ್ಲದೇ ಸಂಚಾರ ನಿಯಮವನ್ನು ಉಲ್ಲಂಘಿಸಿದ್ದರು. ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಬೇಕು ಎಂದಿದ್ದರೂ ಗುಂಪಾಗಿ ಮೆರವಣಿಗೆ ಮಾಡಿ ಕೋವಿಡ್ ಮಾರ್ಗಸೂಚಿಯನ್ನು ಉಲ್ಲಂಘನೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ರಾಜಕೀಯ ಮೆರವಣಿಗೆ ನಡೆಸಬಾರದು ಎಂದು ಸೂಚಿಸಿದ್ದರೂ ಭಾರೀ ಸಂಖ್ಯೆಯಲ್ಲಿ ಮೆರವಣಿಗೆ ನಡೆಸಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ್ದಕ್ಕೆ ಪೊಲೀಸರು ಇಮ್ರಾನ್ ಪಾಷಾರನ್ನು ಬಂಧಿಸಿದ್ದರು.

    ಹಾಟ್ ಸ್ಪಾಟ್ ಆಗಿದ್ದ ಪ್ರದೇಶದಲ್ಲಿ ಮೆರವಣಿಗೆ ನಡೆಸುತ್ತಿದ್ದರೂ ಪೊಲೀಸರು ಯಾವುದೇ ಕ್ರಮಕೈಗೊಳ್ಳದಕ್ಕೆ ಭಾರೀ ಟೀಕೆ ವ್ಯಕ್ತವಾಗಿತ್ತು. ತೆರೆದ ಕಾರಿನಲ್ಲಿ ಹೂ ಮಳೆಯೊಂದಿಗೆ ಕ್ಷೇತ್ರಕ್ಕೆ ಬರುತ್ತಿದ್ದ ಇಮ್ರಾನ್ ಪಾಷಾರನ್ನು ನಡೆಸಿಕೊಂಡೇ ಠಾಣೆಗೆ ಕರೆಸಿಕೊಂಡು ಹೋಗಿ ಬಂಧಿಸಿದ್ದರು. ಈ ವೇಳೆ ಲಘು ಲಾಠಿ ಚಾರ್ಜ್ ಮಾಡಿ ಪೊಲೀಸರು ಗುಂಪನ್ನು ಚದುರಿಸಿದ್ದರು.

  • ಕಂಠಪೂರ್ತಿ ಕುಡಿದಿದ್ದ ರೌಡಿಶೀಟರ್‌ನನ್ನ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

    ಕಂಠಪೂರ್ತಿ ಕುಡಿದಿದ್ದ ರೌಡಿಶೀಟರ್‌ನನ್ನ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

    ಬೆಂಗಳೂರು: ಕೊರೊನಾ ಲಾಕ್‍ಡೌನ್‍ನಿಂದಾಗಿ ಮದ್ಯ ಸಿಗದೆ ಸೈಲೆಂಟ್ ಆಗಿದ್ದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈಗ ವೈಲೆಂಟ್ ಆಗಿದೆ. ಮದ್ಯ ಮಾರಟಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಿದಾಗಿನಿಂತ ನಿತ್ಯವೂ ಒಂದಿಲ್ಲೊಂದು ಹಲ್ಲೆ, ಕೊಲೆ ಪ್ರಕರಣಗಳು ನಡೆಯುತ್ತಲೇ ಇವೆ.

    ಕೆಲ ದುಷ್ಕರ್ಮಿಗಳು ನಿನ್ನೆ ರಾತ್ರಿ ಕಂಠಪೂರ್ತಿ ಕುಡಿದಿದ್ದ ಓರ್ವ ರೌಡಿಶೀಟರ್‌ನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆಗೈದಿದ್ದಾರೆ. ಬ್ಯಾಟರಾಯನಪುರದ ಅಶೋಕ್ ಅಲಿಯಾಸ್ ದಡಿಯಾ ಕೊಲೆಯಾದ ರೌಡಿಶೀಟರ್. ಬ್ಯಾಟರಾಯನಪುರದ ಭಾರತೀನಗರದಲ್ಲಿ ಘಟನೆ ನಡೆದಿದೆ.

    ಗುರುವಾರ ತಡರಾತ್ರಿ ಕುಡಿದ ಮತ್ತಿನಲ್ಲಿದ್ದ ಅಶೋಕ್‍ನನ್ನು ಟಾರ್ಗೆಟ್ ಮಾಡಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ವೈಯಕ್ತಿಕ ಕಾರಣಗಳಿಗಾಗಿಯೇ ಈ ಕೊಲೆ ನಡೆದಿರಬಹುದು. ಗೆಳೆಯರಿಂದಲೇ ಹತ್ಯೆಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

    ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಬ್ಯಾಟರಾಯನಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಅವರು, ಆರೋಪಿಗಳಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ.

  • ಪ್ರಿಯತಮೆ ಮೇಲೆ ಸೀಮೆಎಣ್ಣೆ ಸುರಿದು ಕೊಲೆಗೆ ಯತ್ನಿಸಿದ ಪ್ರೇಮಿ!

    ಪ್ರಿಯತಮೆ ಮೇಲೆ ಸೀಮೆಎಣ್ಣೆ ಸುರಿದು ಕೊಲೆಗೆ ಯತ್ನಿಸಿದ ಪ್ರೇಮಿ!

    ಬೆಂಗಳೂರು: ಯುವಕನೊಬ್ಬ ತಾನು ಪ್ರೀತಿಸಿದಾಕೆಯ ಮೇಲೆಯೇ ಸೀಮೆ ಎಣ್ಣೆ ಸುರಿದು, ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದ್ದು, ಸದ್ಯ ಪೊಲೀಸರು ಆರೋಪಿ ಪ್ರಿಯತಮನನ್ನು ವಶಕ್ಕೆ ಪಡೆದಿದ್ದಾರೆ.

    ಜಮಾದ್ ಪಾಷಾ (22) ಬಂಧಿತ ಆರೋಪಿಯಾಗಿದ್ದು, ಈತ ನಾಯಂಡಹಳ್ಳಿ ನಿವಾಸಿಯಾಗಿದ್ದಾನೆ. ಜಮಾದ್ ಪಾಷಾ ಯುವತಿಗೆ ಪರಿಚಯಸ್ಥನಾಗಿದ್ದ. ಈತ ಯುವತಿಗೆ ಪ್ರೀತಿಸುವಂತೆ ಕಾಡುತ್ತಿದ್ದ. ಆದ್ರೆ ಪ್ರೀತಿಸಲು ಯುವತಿ ಒಲ್ಲೆ ಎಂದಿದ್ದಾಳೆ. ಇದರಿಂದ ಸಿಟ್ಟುಗೊಂಡ ಪಾಷಾ ಆಕೆಯ ಮನೆಗೆ ನುಗ್ಗಿ ಸೀಮೆ ಎಣ್ಣೆ ಸುರಿದು ಬೆಂಕಿಯಿಟ್ಟು ಹತ್ಯೆಗೈಯಲು ಯತ್ನಿಸಿದ್ದಾನೆ. ಈ ವೇಳೆ ಸ್ಥಳೀಯರು ಬಂದು ಯುವತಿಯನ್ನು ರಕ್ಷಿಸಿದ್ದಾರೆ.

    ಘಟನೆಯಿಂದ ಯುವತಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಮನೆಯಲ್ಲಿದ್ದ ವಸ್ತುಗಳು ಬೆಂಕಿಗೆ ಸುಟ್ಟು ಭಸ್ಮವಾಗಿವೆ. ಈ ಘಟನೆಯು ಮೂರು ದಿನಗಳ ಹಿಂದೆ ನಡೆದಿದೆ. ಈ ಬಗ್ಗೆ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.