Tag: Bydarahalli

  • ಬುದ್ಧಿವಾದ ಹೇಳಿದ್ದಕ್ಕೆ ಚಾಕು ಇರಿದು ತಂದೆಯನ್ನೇ ಕೊಲೆಗೈದ ಮಗ

    ಬುದ್ಧಿವಾದ ಹೇಳಿದ್ದಕ್ಕೆ ಚಾಕು ಇರಿದು ತಂದೆಯನ್ನೇ ಕೊಲೆಗೈದ ಮಗ

    ಬೆಂಗಳೂರು: ಬುದ್ಧಿವಾದ ಹೇಳಿದ್ದಕ್ಕೆ ತಂದೆಯನ್ನೇ ಕೊಲೈಗೈದಿರುವ ಘಟನೆ ಬೆಂಗಳೂರಿನ (Bengaluru) ಬ್ಯಾಡರಹಳ್ಳಿಯ (Byadarahalli) ತಿಗಳರಪಾಳ್ಯದ ಕೆರೆಯ ಮುನೇಶ್ವರ ದೇವಸ್ಥಾನದ ಬಳಿ ನಡೆದಿದೆ.

    ಮೃತ ತಂದೆಯನ್ನು ಮಾಜಿ ಸೈನಿಕ ಚನ್ನಬಸಪ್ಪ (61) ಎಂದು ಗುರುತಿಸಲಾಗಿದ್ದು, ನಿವೃತ್ತಿ ಬಳಿಕ ನೈಸ್ ರಸ್ತೆಯಲ್ಲಿ ಸೆಕ್ಯೂರಿಟಿ ಆಫೀಸರ್ ಆಗಿ ಕೆಲಸ ಮಾಡುತ್ತಿದ್ದರು. ಆರೋಪಿಯನ್ನು ಅಮಿತ್ (21) ಎಂದು ತಿಳಿಯಲಾಗಿದೆ. ಯಾವುದೇ ಕೆಲಸಕ್ಕೆ ಹೋಗದೇ ಎಣ್ಣೆ, ಮಾದಕ ವಸ್ತುವಿನ ದಾಸನಾಗಿದ್ದ ಅಮಿತ್‌ಗೆ ತಂದೆ ಬುದ್ಧಿವಾದ ಹೇಳುತ್ತಿದ್ದರು. ಇದೇ ವಿಚಾರವಾಗಿಯೂ ಪ್ರತಿ ದಿನ ಅಪ್ಪ ಮಗನ ನಡುವೆ ಗಲಾಟೆ ನಡೆಯುತ್ತಿತ್ತು ಎಂದು ನೆರೆಹೊರೆಯವರು ತಿಳಿಸಿದ್ದಾರೆ.ಇದನ್ನೂ ಓದಿ: ಲ್ಯಾಂಡಿಂಗ್‌ ವೇಳೆ ರನ್‌ ವೇಯಲ್ಲಿ ಪಲ್ಟಿಯಾಗಿ ಹೊತ್ತಿ ಉರಿದ ವಿಮಾನ!

    ಸೋಮವಾರ ಸಂಜೆ ಇದೇ ವಿಚಾರಕ್ಕೆ ಗಲಾಟೆ ಶುರುವಾಗಿದೆ. ಈ ವೇಳೆ ಚನ್ನಬಸವಯ್ಯ ಮಗನಿಗೆ ಬೈದಿದ್ದಾರೆ. ಒಳ್ಳೆಯ ಬಟ್ಟೆ ಹಾಕಿಕೊಂಡು ಕೆಲಸಕ್ಕೆ ಹೋಗು ಎಂದು ತಿಳಿ ಹೇಳಿದ್ದಾರೆ. ಇದರಿಂದ ಕೋಪಗೊಂಡು ಎದೆಗೆ ಚಾಕುವಿನಿಂದ ಇರಿದಿದ್ದು, ತೀವ್ರ ರಕ್ತಸ್ರಾವದಿಂದ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

    ಇನ್ನೂ ಕೊಲೆ ಮಾಡಿ, ಎಣ್ಣೆ ಮತ್ತಲ್ಲಿ ಮನೆಯಲ್ಲಿ ಮಲಗಿದ್ದ ಆರೋಪಿ ಅಮಿತ್ ಮೇಲೆ ನೀರು ಹಾಕಿ ಎಬ್ಬಿಸಿ ಬ್ಯಾಡರಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಇದನ್ನೂ ಓದಿ: ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

  • Bengaluru| ಮೊಬೈಲ್ ಗೀಳಿಗೆ 13ರ ಬಾಲಕ ಆತ್ಮಹತ್ಯೆ!

    Bengaluru| ಮೊಬೈಲ್ ಗೀಳಿಗೆ 13ರ ಬಾಲಕ ಆತ್ಮಹತ್ಯೆ!

    ಬೆಂಗಳೂರು: ಮೊಬೈಲ್ (Mobile) ಗೀಳಿಗೆ 13 ವರ್ಷದ ಬಾಲಕನೋರ್ವ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ (Bengaluru) ಬ್ಯಾಡರಹಳ್ಳಿ (Byadarahalli) ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ನಡೆದಿದೆ.

    ಧ್ರುವ ಆತ್ಮಹತ್ಯೆಗೆ ಶರಣಾದ ಬಾಲಕ. ಈತ 9 ವರ್ಷದ ತಂಗಿಯ ಮುಂದೆಯೇ ಉಡದಾರದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವೇಳೆ ಅಣ್ಣ ಏನು ಮಾಡುತ್ತಿದ್ದಾನೆ ಎಂಬ ಅರಿವು ಇಲ್ಲದೆ ತಂಗಿ ಸುಮ್ಮನೆ ನೋಡುತ್ತಿದ್ದಳು. ಇದನ್ನೂ ಓದಿ: Ankola| ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ 1.15 ಕೋಟಿ ಹಣ ಪತ್ತೆ

    ಧ್ರುವ ಮನೆಯವರ ಮಾತು ಕೇಳದೆ ಹೆಚ್ಚಾಗಿ ಮೊಬೈಲ್ ಬಳಸುತ್ತಿದ್ದ ಎಂದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮಂಗಳವಾರ ಪೋಷಕರು ಕೆಲಸಕ್ಕೆ ತೆರಳಿದ್ದರು. ಶಾಲೆ ಮುಗಿಸಿ ಬಂದ ಅಣ್ಣ-ತಂಗಿ ಮಾತ್ರ ಮನೆಯಲ್ಲಿದ್ದರು. ಆಗ ಬಾಲಕ ಪ್ಯಾಂಟ್ ತೆಗೆದು ಸೊಂಟದ ಉಡದಾರ ಫ್ಯಾನ್‌ಗೆ ಕಟ್ಟಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸಂಜೆ 7 ಗಂಟೆಯ ಸುಮಾರಿಗೆ ಬಾಲಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆಗ ಉಡದಾರ ಕುತ್ತಿಗೆಗೆ ಬಿಗಿದು, ತುಂಡಾಗಿ ಬಾಲಕ ಕೆಳಗೆ ಬಿದ್ದಿದ್ದಾನೆ. ಅಣ್ಣ ಏನು ಮಾಡಿಕೊಳ್ಳುತ್ತಿದ್ದಾನೆ ಎಂಬ ಅರಿವು ಇಲ್ಲದೇ ತಂಗಿ ಸುಮ್ಮನೆ ನೋಡುತ್ತಿದ್ದಳು. ಬಾಲಕ ಕೆಳಗೆ ಬಿದ್ದ ಸಮಯಕ್ಕೆ ಕೆಲಸ ಮುಗಿಸಿ ತಾಯಿ ಬಂದಿದ್ದಾರೆ. ಘಟನೆ ನೋಡಿ ಆತಂಕಗೊಂಡ ತಾಯಿ ಅಕ್ಕಪಕ್ಕದವರ ಸಹಾಯ ಪಡೆದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಬಾಲಕನನ್ನು ಪರೀಕ್ಷಿಸಿದ ವೈದ್ಯರು ಆತ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: MUDA Scam| ಒಂದೇ ದಿನದಲ್ಲಿ ಒಬ್ಬನ ಹೆಸರಿಗೆ 31 ಸೈಟ್ ರಿಜಿಸ್ಟರ್ – ಇಡಿಯಿಂದ 160 ಸೈಟ್‌ ಜಪ್ತಿ

    ಬಾಲಕನ ತಂದೆ ಬಸವರಾಜ್ ಬೇಕರಿ ಕೆಲಸ ಮಾಡುತ್ತಿದ್ದು, ತಾಯಿ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಚಿಕ್ಕ ವಯಸ್ಸಿನಲ್ಲಿ ಆತ್ಮಹತ್ಯೆಗೆ ಮಾಡಿಕೊಳ್ಳಲು ಕಾರಣವೇನು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಾಲಕ ಅತಿ ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿದ್ದ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದ್ದು, ಇದೇ ವಿಷಯವಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮೈಸೂರು ಮಹಾರಾಣಿ ಕಾಲೇಜು ಕಟ್ಟಡ ಕುಸಿತ – ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕ ಸಾವು