Tag: byelection

  • ನಂಜನಗೂಡು ಪಂಚಮಹಾರಥೋತ್ಸವದ ವೇಳೆ ಅವಘಡ- ರಸ್ತೆಯಲ್ಲಿ ಹೂತು ಹೋದ ರಥದ ಚಕ್ರ

    ನಂಜನಗೂಡು ಪಂಚಮಹಾರಥೋತ್ಸವದ ವೇಳೆ ಅವಘಡ- ರಸ್ತೆಯಲ್ಲಿ ಹೂತು ಹೋದ ರಥದ ಚಕ್ರ

    – ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು

    ಮೈಸೂರು: ಮೈಸೂರು: ಬಳ್ಳಾರಿ ಕೊಟ್ಟೂರೇಶ್ವರ ರಥ ಮಗುಚಿ ಬಿದ್ದ ಪ್ರಕರಣ ಮಾಸುವ ಮುನ್ನವೇ ನಂಜನಗೂಡು ಪಂಚ ಮಹಾರಥೋತ್ಸವದ ವೇಳೆ ಅವಘಡ ಸಂಭವಿಸಿದೆ.

    ನಂಜನಗೂಡಿನ ಅಂಗಡಿ ಬೀದಿಯಲ್ಲಿ ಸಾಗುತ್ತಿದ್ದ ವೇಳೆ ರಥದ ಚಕ್ರ ಹೂತು ಹೋಗಿದೆ. ಶ್ರೀಕಂಠೇಶ್ವರಸ್ವಾಮಿಯ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದ ಗೌತಮ ರಥದ ಮುಂಭಾಗದಲ್ಲಿರುವ ಎಡಬದಿಯ ಚಕ್ರ ರಸ್ತೆಯಲ್ಲಿ ಹೂತು ಹೋದ ಪರಿಣಾಮ ಗೌತಮ ರಥ ಮುಂದೆ ಚಲಿಸದೆ ನಿಂತಿದೆ. 1 ಕ್ರೇನ್ ಹಾಗೂ 2 ಜೆಸಿಬಿಗಳಿಂದ ರಥದ ಚಕ್ರವನ್ನು ಮೇಲೆತ್ತಲು ಹರಸಾಹಸ ಪಡ್ತಿದ್ದಾರೆ. ಘಟನಾ ಸ್ಥಳದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.

    ಅಲ್ಲದೆ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. 42 ವರ್ಷದ ಜಗದೀಶ್ ಮೃತ ದುರ್ದೈವಿ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ತಾಳಶಾಸನ ಗ್ರಾಮದ ನಿವಾಸಿ. ತಮ್ಮ ಕುಟುಂಬ, ಪರಿವಾರದೊಂದಿಗೆ ಜಗದೀಶ್ ಜಾತ್ರೆಗೆ ಆಗಮಿಸಿದ್ದರು. ಭಕ್ತರಿಗೆ ಅನ್ನದಾನ ಮಾಡಲು ರಾತ್ರಿ ಅಡುಗೆ ತಯಾರು ಮಾಡಲಾಗುತ್ತಿತ್ತು. ಆಗ ಬಲ್ಬ್ ಬದಲಿಸುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಜಗದೀಶ್ ಸ್ಥಳದಲ್ಲೇ ಅಸುನೀಗಿದ್ದಾರೆ. ಜಾತ್ರೆಗೆ ಅಡ್ಡಿ ಆಗದಂತೆ ಪೊಲೀಸರು ಶವವನ್ನು ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದಾರೆ. ನಂಜನಗೂಡು ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    ಇಂದು ಬೆಳಗ್ಗೆ 5.20ರಿಂದ 6.20ರ ಮಖಾ ನಕ್ಷತ್ರದ ಮೀನ ಲಗ್ನದಲ್ಲಿ ಲಕ್ಷಾಂತರ ಭಕ್ತಾಧಿಗಳ ಸಮ್ಮುಖದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯ್ತು. ಗೌತಮ, ಪಾರ್ವತಿದೇವಿ, ಗಣಪತಿ, ಸುಬ್ರಹ್ಮಣ್ಯೇಶ್ವರ, ಚಂಡಿಕೇಶ್ವರ ದೇವರುಗಳ ಉತ್ಸವ ಮೂರ್ತಿಗಳ ಮೆರವಣಿಗೆ ನಡೆಯಿತು. 89 ಅಡಿ ಎತ್ತರದ ಅಲಂಕೃತ ಗೌತಮ ರಥ ಶ್ರೀಕಂಠೇಶ್ವರ ಜಾತ್ರೆಯ ಕೇಂದ್ರ ಬಿಂದು. 100 ಟನ್ ತೂಕದ ರಥ ಎಳೆಯಲು 240 ಅಡಿ ಉದ್ದದ ಹಗ್ಗ ಬಳಕೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ರಥೋತ್ಸವದಲ್ಲಿ ಭಾಗವಹಿಸುವ 112 ಸಿಬ್ಬಂದಿಗೆ ಮುಜರಾಯಿ ಇಲಾಖೆಯಿಂದ ವಿಮಾ ಸೌಲಭ್ಯ ಕಲ್ಪಿಸಲಾಗಿದೆ.

    ಭದ್ರತೆಗಾಗಿ ಜಿಲ್ಲಾ ಪೊಲೀಸರು ವಿಶೇಷ ಕ್ರಮ ವಹಿಸಿದ್ದು, ತಾತ್ಕಾಲಿಕವಾಗಿ 35 ಸಿಸಿ ಕ್ಯಾಮೆರಾ, 7 ಮೊಬೈಲ್ ವಾಚ್ ಟವರ್ ಅಳವಡಿಸಲಾಗಿದೆ.

  • ಈಶ್ವರಪ್ಪನಿಗೆ ಮೆದುಳಿಲ್ಲ, ಅವನಿಗೂ ಮನಸ್ಸಲ್ಲಿರೋದು ಬಿಜೆಪಿ ಸೋಲಲಿ ಅಂತ- ಏಕವಚನದಲ್ಲಿ ಸಿಎಂ ಲೇವಡಿ

    ಈಶ್ವರಪ್ಪನಿಗೆ ಮೆದುಳಿಲ್ಲ, ಅವನಿಗೂ ಮನಸ್ಸಲ್ಲಿರೋದು ಬಿಜೆಪಿ ಸೋಲಲಿ ಅಂತ- ಏಕವಚನದಲ್ಲಿ ಸಿಎಂ ಲೇವಡಿ

    ಚಾಮರಾಜನಗರ: ಈಶ್ವರಪ್ಪನಿಗೆ ಮೆದುಳಿಲ್ಲ. ಅವನಿಗೂ ಮನಸ್ಸಿನಲ್ಲಿರುವುದು ಬಿಜೆಪಿ ಸೋಲಲಿ ಅಂತ ಎಂದು ಪರಿಷತ್ ಪ್ರತಿಪಕ್ಷ ನಾಯಕ, ಬಿಜೆಪಿ ಮುಖಂಡ ಈಶ್ವರಪ್ಪ ವಿರುದ್ಧ ಏಕವಚನ ಪ್ರಯೋಗಿಸಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

    ಗುಂಡ್ಲುಪೇಟೆ ಉಪ ಚುನಾವಣೆ ಹಿನ್ನೆಲೆಯಲ್ಲಿ ಇಂದು ಚಿಕ್ಕಟ್ಟಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಸಿಎಂ ಭಾಗಿಯಾಗಿದ್ರು. ಈ ವೇಳೆ ಮಾತನಾಡಿದ ಅವರು, ಈಶ್ವರಪ್ಪನಿಗೆ ಮೆದುಳಿಲ್ಲ. ಅವನಿಗೂ ಮನಸ್ಸಿನಲ್ಲಿರುವುದು ಬಿಜೆಪಿ ಸೋಲಲಿ ಅಂತ. ಯಾಕಂದ್ರೆ ಯಡಿಯೂರಪ್ಪಗೂ ಅವನಿಗೂ ಅಗಿ ಬರಲ್ಲ ಯಡಿಯೂರಪ್ಪ, ಈಶ್ವರಪ್ಪರಿಂದಲೇ ಸುಳ್ಳು ಹುಟ್ಟಿತು ಅಂದ್ರು.

    ಗೀತಾ ಮಹದೇವ ಪ್ರಸಾದ್ ಅವರನ್ನ ಒತ್ತಾಯ ಮಾಡಿ ಚುನಾವಣೆಗೆ ನಿಲ್ಲಿಸಿದವರು ನಾವು. ಆ ದುಖಃದಲ್ಲೂ ಗೀತಾ ಮಹದೇವ ಪ್ರಸಾದ್ ಚುನಾವಣಾ ಪ್ರಚಾರ ಮಾಡ್ತಿದ್ದಾರೆ ಅಂದ್ರು.

  • ಉಪಚುನಾವಣಾ ಕಣದಲ್ಲಿ ಕುರುಡು ಕಾಂಚಾಣದ ಕೇಕೆ- ಇಂದು ಅಗ್ರ ನಾಯಕರ ಅಬ್ಬರದ ಪ್ರಚಾರ

    ಉಪಚುನಾವಣಾ ಕಣದಲ್ಲಿ ಕುರುಡು ಕಾಂಚಾಣದ ಕೇಕೆ- ಇಂದು ಅಗ್ರ ನಾಯಕರ ಅಬ್ಬರದ ಪ್ರಚಾರ

    ಮೈಸೂರು: ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕುರುಡು ಕಾಂಚಾಣದ ಸದ್ದು ಜೋರಾಗಿದೆ. ಜೊತೆಗೆ ಚುನಾವಣಾ ನೀತಿ ಸಂಹಿತೆಗೆ ಬೆಲೆಯೇ ಇಲ್ಲದಂತಾಗಿದೆ. ಇನ್ನು, ಇವತ್ತು ಅಖಾಡದಲ್ಲಿ ಎರಡೂ ಪಕ್ಷಗಳ ನಾಯಕರು ಭರ್ಜರಿ ಕ್ಯಾಂಪೇನ್ ನಡೆಸಲಿದ್ದಾರೆ.

    ಬಿಜೆಪಿ ಮತ್ತು ಕಾಂಗ್ರೆಸ್‍ಗೆ ಪ್ರತಿಷ್ಠೆಯ ಕಣವಾಗಿರೋ ನಂಜನಗೂಡು, ಗುಂಡ್ಲುಪೇಟೆಯಲ್ಲಿ ಒಂದು ಕಡೆ ಹಣದ ಹೊಳೆ ಹರೀತಿದ್ರೆ, ಮತ್ತೊಂದು ಕಡೆ ನೀತಿ ಸಂಹಿತೆಗೆ ಲವಲೇಷವೂ ಬೆಲೆಯಿಲ್ಲದಂತಾಗಿದೆ. ಹೀಗಾಗಿ ಚುನಾವಣಾ ಆಯೋಗದಲ್ಲಿ ದಿನದಿಂದ ದಿನಕ್ಕೆ ದೂರು ದಾಖಲಾತಿ ಹೆಚ್ಚಾಗುತ್ತಿವೆ.

    ಇದರ ಬೆನ್ನಲ್ಲೇ ನಂಜನಗೂಡಿನ ಮತದಾರರಿಗೆ ಮೈಸೂರಿನ ಬೊಂಬೂ ಬಜಾರ್‍ನಲ್ಲಿರುವ ರಾಮಯ್ಯ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಮುಖಂಡರು ಹಣ ಹಂಚುತ್ತಿದ್ದಾರೆ ಅಂತ ಬಿಜೆಪಿ ನಾಯಕರು ಮುತ್ತಿಗೆ ಹಾಕಿದ್ರು. ಇದಾದ ತಕ್ಷಣ ಬಿಜೆಪಿ ಕಾರ್ಯಕರ್ತರು ಸ್ಥಳದಲ್ಲಿಯೇ ಪ್ರತಿಭಟಿಸಿದರು.

    ವಿಷಯ ತಿಳಿದು ಪ್ರತಿಭಟನಾ ಸ್ಥಳಕ್ಕೆ ಮೈಸೂರು ನಗರ ಪೊಲೀಸ್ ಆಯುಕ್ತ ಸುಬ್ರಹ್ಮಣ್ಯೇಶ್ವರ ರಾವ್, ಡಿಸಿಪಿ ಎಚ್‍ಟಿ ಶೇಖರ್ ಆಗಮಿಸಿದರು. ಪೊಲೀಸರು ತಡವಾಗಿ ಸ್ಥಳಕ್ಕೆ ಆಗಮಿಸಿದರು ಅಂತ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ರು. ಈ ವೇಳೆ ಮಾತಿನ ಚಕಮಕಿ ನಡೆಯಿತು. ಬಳಿಕ ಕಲ್ಯಾಣ ಮಂಟಪದಲ್ಲಿ ನಿಲ್ಲಿಸಲಾಗಿದ್ದ ಹದಿನೈದಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದ್ರು.

    ಈಶ್ವರಪ್ಪ ಮೇಲೆ ಬಿತ್ತು ಕೇಸ್: ಗುಂಡ್ಲುಪೇಟೆಯ ಚಿಕ್ಕಾಟಿಯಲ್ಲಿ ಮಾರ್ಚ್ 30ರಂದು “ಕಾಂಗ್ರೆಸ್‍ನವರು ಹಣ ಕೊಟ್ರೆ ತಗೊಂಡು ಬಿಜೆಪಿಗೆ ಮತ ಹಾಕಿ” ಅಂತ ಭಾಷಣ ಮಾಡಿದ್ದ ಈಶ್ವರಪ್ಪ ಅವರ ಸಿಡಿ ಆಧರಿಸಿ ದೂರು ದಾಖಲಿಸಲಾಗಿದೆ.

    ಅಗ್ರ ನಾಯಕರಿಂದ ಅಬ್ಬರದ ಪ್ರಚಾರ: ಇಂದು ಭಾನುವಾರ ಆಗಿರೋ ಕಾರಣ ಕ್ಯಾಂಪೇನ್ ಮತ್ತಷ್ಟು ಅಬ್ಬರದಿಂದ ನಡೆಯಲಿದೆ. ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್‍ನ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಪ್ರಚಾರ ನಡೆಸಲಿದ್ದಾರೆ. ಬಿಜೆಪಿಯಿಂದ ಕೇಂದ್ರ ಸಚಿವ ಸದಾನಂದಗೌಡ, ಸಿಟಿ ರವಿ, ಮಾಳವಿಕ ಅವಿನಾಶ್ ಕೂಡ ಪ್ರಚಾರ ನಡೆಸಲಿದ್ದಾರೆ. ಇತ್ತ ಮೈಸೂರಿನ ನಂಜಗೂಡಿನಲ್ಲಿ ಸಿಎಂ ಸಿದ್ದರಾಮಯ್ಯ 3 ಗಂಟೆಯ ನಂತರ ಪ್ರಚಾರಕ್ಕೆ ಇಳಿಯುವ ಸಾಧ್ಯತೆಯಿದೆ. ಬಿಜೆಪಿಯಿಂದ ಕೇಂದ್ರ ಸಚಿವ ಅನಂತ್ ಕುಮಾರ್, ಬಿಜೆಪಿ ರಾಜಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪ್ರಚಾರ ನಡೆಸಲಿದ್ದಾರೆ.

  • ಗುಂಡ್ಲುಪೇಟೆ ಉಪಚುನಾವಣೆ: ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ನಡುವೆ ಕಲ್ಲು ತೂರಾಟ

    ಗುಂಡ್ಲುಪೇಟೆ ಉಪಚುನಾವಣೆ: ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ನಡುವೆ ಕಲ್ಲು ತೂರಾಟ

    ಚಾಮರಾಜನಗರ: ಗುಂಡ್ಲುಪೇಟೆ ಉಪಚುನಾವಣಾ ಕಣ ಅಕ್ಷರಶಃ ರಣರಂಗವಾಗಿದೆ. ಒಂದು ಕಡೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದರೆ, ಮತ್ತೊಂದು ಕಡೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಕಲ್ಲು ತೂರಾಟ ನಡೆಯಿತು. ಇದನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿಯನ್ನು ಹತೋಟಿಗೆ ತರಲು ಹರಸಾಹಸ ನಡೆಸಿದರು.

    ಗುಂಡ್ಲುಪೇಟೆ ಉಪಚುನಾವಣಾ ಕಣ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಇಂದು ಎರಡು ಪಕ್ಷದ ಅಭ್ಯರ್ಥಿಗಳು ಉಪಚುನಾವಣೆಯ ನಾಮಪತ್ರ ಸಲ್ಲಿಸಿದ್ರು. ಇದಕ್ಕೂ ಮುನ್ನ ಎರಡು ಪಕ್ಷದ ಅಭ್ಯರ್ಥಿಗಳು ಪಕ್ಷ ಮುಖಂಡರು ಹಾಗೂ ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ಗುಂಡ್ಲುಪೇಟೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ್ರು. ಬಿಜೆಪಿ ಅಭ್ಯರ್ಥಿ ನಿರಂಜನ್ ಕುಮಾರ್ ರಾಜ್ಯಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಮೆರವಣಿಗೆ ನಡೆಸಿದ್ರೆ, ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಹದೇವ ಪ್ರಸಾದ್ ಅವರು ಸಚಿವ ಯು.ಟಿ.ಖಾದರ್ ಜೊತೆಗೂಡಿ ಭರ್ಜರಿ ರೋಡ್ ಶೋ ಮಾಡಿದ್ರು. ಈ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿಯ ಸಾವಿರಾರು ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ 766 ರಲ್ಲಿರುವ ತಾಲೂಕು ಕಚೇರಿ ಆವರಣದ ಮುಂದೆ ಜಮಾವಣೆಗೊಂಡರು.

    ಈ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಏರ್ಪಟ್ಟಿತು. ಇದಾದ ಬಳಿಕ ಎರಡು ಪಕ್ಷಗಳ ಕಾರ್ಯಕರ್ತರು ನಡುವೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು. ಈ ಹಂತದಲ್ಲಿ ಪರಿಸ್ಥಿತಿಯನ್ನು ತಿಳಿಗೊಳಿಸಲು ಪೊಲೀಸರು ಪ್ರಯತ್ನಿಸಿದರು. ಈ ವೇಳೆ ಪೊಲೀಸ್ ರ ಮಾತು ಕೇಳದೆ ಕಾರ್ಯಕರ್ತರು ಕಲ್ಲು ತೂರಾಟ ಮಾಡಲು ಮುಂದಾದರು. ಪರಿಸ್ಥಿತಿ ಉದ್ವಿಗ್ನ ಸ್ಥಿತಿಗೆ ತಲುಪಿದ ಕಾರಣ ಪೊಲೀಸರು ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ರು. ಕಲ್ಲು ತೂರಾಟ ಹಾಗೂ ಲಾಠಿ ಚಾರ್ಚ್ ವೇಳೆ ಎರಡು ಪಕ್ಷದ ಕಾರ್ಯಕರ್ತರಿಗೆ ಹಾಗೂ ಪೊಲೀಸರಿಗೆ ಸಣ್ಣ ಪುಟ್ಟಗಾಯಗಳಾಗಿದ್ದು, ಗಾಯಳುಗಳನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

    ಒಟ್ಟಿನಲ್ಲಿ ಶಾಂತಿಯುತವಾಗಿ ನಡೆಯಬೇಕಿದ್ದ ನಾಮಪತ್ರ ಸಲ್ಲಿಕೆ ಕಾರ್ಯ, ಅಕ್ಷರಶಃ ರಣ ರಂಗವಾಗಿದ್ದು ಸುಳ್ಳಲ್ಲ. ದಿನದಿಂದ ದಿನಕ್ಕೆ ಚುನಾವಣಾ ಕಣ ರಂಗೇರುತ್ತಿದ್ದು, ಮುಂದಿನ ದಿಗಳಲ್ಲಿ ಎರಡು ಪಕ್ಷಗಳ ಚುನಾವಣಾ ಕುಸ್ತಿ ಯಾವ ಹಂತಕ್ಕೆ ತಲುಪುತ್ತದೆ ಎಂಬುದನ್ನು ಕಾದು ನೋಡಬೇಕಿದೆ

  • ರಂಗೇರಿದೆ ಉಪ ಚುನಾವಣಾ ಸಮರ – ಪ್ರಮುಖರಿಂದ ಇಂದೇ ನಾಮಪತ್ರ

    ರಂಗೇರಿದೆ ಉಪ ಚುನಾವಣಾ ಸಮರ – ಪ್ರಮುಖರಿಂದ ಇಂದೇ ನಾಮಪತ್ರ

    – ಬಲಪ್ರದರ್ಶನಕ್ಕೆ ಸಾಕ್ಷಿಯಾಗಲಿದೆ ನಂಜನಗೂಡು, ಗುಂಡ್ಲುಪೇಟೆ

    ಮೈಸೂರು: ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣಾ ರಂಗೇರಿದೆ. ನಾಳೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ನಾಳೆ ಮಂಗಳವಾರ ಆದ ಕಾರಣ ಬಹುತೇಕ ಅಭ್ಯರ್ಥಿಗಳು ಇಂದೇ ನಾಮಪತ್ರ ಸಲ್ಲಿಸಲಿದ್ದಾರೆ.

    ನಂಜನಗೂಡಿನಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್, ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವಮೂರ್ತಿ ಹಾಗೂ ಗುಂಡ್ಲುಪೇಟೆ ಮತಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಗೀತಾ ಮಹದೇವಪ್ರಸಾದ್, ಬಿಜೆಪಿಯಿಂದ ನಿರಂಜನ್ ಕುಮಾರ್ ತಮ್ಮ ನಾಯಕರು ಹಾಗೂ ಬೆಂಬಲಿಗರ ಜೊತೆಗೆ ಮೆರವಣಿಗೆಯಲ್ಲಿ ತೆರಳಿ ತಮ್ಮ ಉಮೇದುವಾರಿಕೆ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಸುವ ವೇಳೆ ಎಲ್ಲಾ ಅಭ್ಯರ್ಥಿಗಳು ತಮ್ಮ ಬಲ ಪ್ರದರ್ಶನ ಮಾಡಲಿದ್ದಾರೆ.

    ನಾಮಪತ್ರ ಹಿಂಪಡೆಯಲು ಮಾರ್ಚ್ 24 ಕೊನೆಯ ದಿನವಾಗಿದ್ದು, ಏಪ್ರಿಲ್ 9ರಂದು ಚುನಾವಣೆ ನಡೆಯಲಿದೆ. ಏಪ್ರಿಲ್ 13ರಂದು ಉಪಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.

  • ಉಪ ಚುನಾವಣೆಗೆ ಕೊನೆಗೂ ಮುಹೂರ್ತ- ಎರಡ್ಮೂರು ದಿನಗಳಲ್ಲಿ ದಿನಾಂಕ ಘೋಷಣೆ

    ಉಪ ಚುನಾವಣೆಗೆ ಕೊನೆಗೂ ಮುಹೂರ್ತ- ಎರಡ್ಮೂರು ದಿನಗಳಲ್ಲಿ ದಿನಾಂಕ ಘೋಷಣೆ

    ಬೆಂಗಳೂರು: ನಂಜನಗೂಡು, ಗುಂಡ್ಲುಪೇಟೆ ಕ್ಷೇತ್ರಗಳಿಗೆ ಏಪ್ರಿಲ್ 2 ನೇ ವಾರದಲ್ಲಿ ಉಪಚುನಾವಣೆ ನಡೆಯುವ ಸಾಧ್ಯತೆಯಿದೆ ಅಂತಾ ಚುನಾವಣಾ ಆಯೋಗದ ಮೂಲಗಳಿಂದ ಮಾಹಿತಿ ಸಿಕ್ಕಿದೆ.

    ಶ್ರೀನಿವಾಸ್ ಪ್ರಸಾದ್ ರಾಜೀನಾಮೆಯಿಂದ ತೆರವಾಗಿರುವ ನಂಜನಗೂಡು ಕ್ಷೇತ್ರ ಮತ್ತು ಸಚಿವ ಮಹದೇವಪ್ರಸಾದ್ ನಿಧನದಿಂದ ತೆರವಾಗಿರುವ ಗುಂಡ್ಲುಪೇಟೆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಬೇಕಿದೆ. ಈ ಮೂಲಕ ಡೈರಿ ವಾರ್ ಜೊತೆಗೆ ಎಲೆಕ್ಷನ್ ವಾರ್‍ಗೆ ಸಿಎಂ ಸಿದ್ದರಾಮಯ್ಯ ಮತ್ತು ಬಿಎಸ್‍ವೈ ರೆಡಿಯಾಗಲಿದ್ದಾರೆ.

    ಈ ಎರಡೂ ಕ್ಷೇತ್ರಗಳಲ್ಲಿ ಉಪಚುನಾವಣಾ ಕದನಕ್ಕೆ ಮುಂದಿನ ಎರಡು ಮೂರು ದಿನಗಳಲ್ಲಿ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆಗಳಿವೆ.

  • ಮಂಡ್ಯ ಸ್ಥಳೀಯ ಉಪಚುನಾವಣೆ: ಠೇವಣಿ ಕಳೆದುಕೊಂಡ ಕಾಂಗ್ರೆಸ್, ಬಿಜೆಪಿ

    ಮಂಡ್ಯ ಸ್ಥಳೀಯ ಉಪಚುನಾವಣೆ: ಠೇವಣಿ ಕಳೆದುಕೊಂಡ ಕಾಂಗ್ರೆಸ್, ಬಿಜೆಪಿ

    -ಕಾಂಗ್ರೆಸ್‍ಗೆ 5 ಮತ, ಬಿಜೆಪಿಗೆ 3 ಮತ

    ಮಂಡ್ಯ: ಜಿಲ್ಲೆಯ ನಾಗಮಂಗಲದ ಪಟ್ಟಣ ಪಂಚಾಯಿತಿಯ 13 ನೇ ವಾರ್ಡ್‍ಗೆ ನಡೆದ ಉಪಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಠೇವಣಿ ಕಳೆದುಕೊಂಡು ಮುಜುಗರ ಅನುಭವಿಸಿವೆ. ಜೆಡಿಎಸ್ ಮಾತ್ರ ಅಭ್ಯರ್ಥಿಯನ್ನು ಕಣಕ್ಕಳಿಸದೇ ಬುದ್ಧಿವಂತಿಕೆ ಪ್ರದರ್ಶಿಸಿದೆ.

    ಜೆಡಿಎಸ್ ಪಕ್ಷದಿಂದ ಅಮಾನತ್ತಾದ ಶಾಸಕ ಚಲುವರಾಯಸ್ವಾಮಿ ಸ್ವಕ್ಷೇತ್ರವಾದ ನಾಗಮಂಗಲ ಪಟ್ಟಣ ಪಂಚಾಯಿತಿ 13ನೇ ವಾರ್ಡ್‍ನ ಸದಸ್ಯರಾಗಿದ್ದ ಎನ್‍ಸಿ.ಕೇಶವ್ ಕಳೆದ ಮೂರು ತಿಂಗಳ ಹಿಂದೆ ಹೃದಯಾಘಾತದಿಂದ ಸಾವನ್ನಪ್ಪಿದ್ರು. ಈ ಹಿನ್ನೆಲೆಯಲ್ಲಿ 13 ನೇ ವಾರ್ಡ್‍ಗೆ ಫೆಬ್ರವರಿ 12 ರಂದು ಚುನಾವಣೆ ನಡೆದಿತ್ತು.

    13ನೇ ವಾರ್ಡ್‍ನ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಅಬ್ದುಲ್ ಅಜೀಜ್ ಸ್ಪರ್ಧಿಸಿದ್ರೆ, ಬಿಜೆಪಿಯಿಂದ ಶ್ರೀನಿವಾಸ್ ಎಂಬವರು ಸ್ಪರ್ಧಿಸಿದ್ದರು. ಆದರೆ ಸ್ಥಳೀಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಶಾಸಕ ಸುರೇಶ್‍ಗೌಡ ಪಕ್ಷದಿಂದ ನಿಲ್ಲಿಸಲಾಗಿದ್ದ ಅಭ್ಯರ್ಥಿಗೆ ಬದಲಾಗಿ ಗಿರೀಶ್ ಎಂಬವರನ್ನ ಬೆಂಬಲಿಸಿ ಚುನಾವಣೆಗೆ ನಿಲ್ಲಿಸಿದ್ದರು. ಚಲುವರಾಯಸ್ವಾಮಿ ವಿನಯ್ ಕುಮಾರ್ ಎಂಬ ಅಭ್ಯರ್ಥಿಯ ಪರ ವ್ಯಾಪಕ ಪ್ರಚಾರ ಮಾಡಿದ್ರು.

    ಭಾನುವಾರ ನಡೆದ ಚುನಾವಣೆಯಲ್ಲಿ ಒಟ್ಟು 615 ಮತಗಳ ಪೈಕಿ 547 ಮತಗಳು ಚಲಾವಣೆಯಾಗಿದ್ದವು. ಅದರಲ್ಲಿ ಸುರೇಶ್ ಗೌಡ ಬೆಂಬಲಿತ ಅಭ್ಯರ್ಥಿ ಗಿರೀಶ್ 304 ಮತ ಪಡೆದು ಗೆಲುವು ಸಾಧಿಸಿದ್ರೆ, ಚೆಲುವರಾಯಸ್ವಾಮಿ ಬೆಂಬಲಿತ ಅಭ್ಯರ್ಥಿ ವಿನಯ್ ಕುಮಾರ್ 235 ಮತ ಪಡೆದು ಸೋಲನ್ನಪ್ಪಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೇವಲ ಐದು ಮತ ಪಡೆದಿದ್ರೆ, ಬಿಜೆಪಿ ಅಭ್ಯರ್ಥಿ ಮೂರು ಮತ ಪಡೆದು ಠೇವಣಿ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವೊಂದು ಸ್ಥಳೀಯ ಸಂಸ್ಥೆಗೆ ನಡೆದ ಚುನಾವಣೆಯೊಂದರಲ್ಲಿ ಕೇವಲ ಐದು ಮತ ಪಡೆದು ನಗೆಪಾಟಲಿಗೀಡಾಗಿದೆ.