Tag: Bypoll

  • ಉಪಚುನಾವಣೆ ಫಲಿತಾಂಶ ಪ್ರಕಟ – ಎಎಪಿ 2, ಬಿಜೆಪಿ, ಕಾಂಗ್ರೆಸ್, ಟಿಎಂಸಿ ತಲಾ ಒಂದೊಂದು ಕ್ಷೇತ್ರಗಳಲ್ಲಿ ಗೆಲುವು

    ಉಪಚುನಾವಣೆ ಫಲಿತಾಂಶ ಪ್ರಕಟ – ಎಎಪಿ 2, ಬಿಜೆಪಿ, ಕಾಂಗ್ರೆಸ್, ಟಿಎಂಸಿ ತಲಾ ಒಂದೊಂದು ಕ್ಷೇತ್ರಗಳಲ್ಲಿ ಗೆಲುವು

    – ಹಿಂದೂಗಳಿಂದಲೇ ಹೆಚ್ಚು ಮತ ಪಡೆದಿದ್ದೇವೆ: ಟಿಎಂಸಿ ಅಭ್ಯರ್ಥಿ ಆಲಿಫಾ ಅಹ್ಮದ್‌
    – ಉಪಚುನಾವಣೆ ಫಲಿತಾಂಶದ ಬೆನ್ನಲ್ಲೇ ಕಚ್ಛಾ ಬಾಂಬ್ ಸ್ಫೋಟ; 9ರ ಬಾಲಕಿ ಸಾವು

    ನವದೆಹಲಿ: ದೇಶದ 5 ರಾಜ್ಯಗಳಲ್ಲಿ ನಡೆದ ಉಪಚುನಾವಣೆಯಲ್ಲಿ (Bypoll) 2 ಆಪ್, ಬಿಜೆಪಿ, ಕಾಂಗ್ರೆಸ್, ಟಿಎಂಸಿ (TMC) ತಲಾ ಒಂದೊಂದು ಕ್ಷೇತ್ರಗಳಲ್ಲಿ ಗೆದ್ದುಕೊಂಡಿವೆ.

    ದೆಹಲಿಯ (Delhi) ಸೋಲಿನ ನಂತರ ತನ್ನ ರಾಜಕೀಯ ಭವಿಷ್ಯದ ಬಗ್ಗೆ ಅನಿಶ್ಚಿತತೆ ಎದುರಿಸುತ್ತಿದ್ದ ಎಎಪಿ ಪಂಜಾಬ್‌ನ ಲೂಧಿಯಾನ ಪಶ್ಚಿಮ ಮತ್ತು ಗುಜರಾತ್‌ನ ವಿಸಾವದರ್ ಕ್ಷೇತ್ರಗಳಲ್ಲಿ ಜಯಿಸಿದೆ. ಕಾಂಗ್ರೆಸ್ ನೇತೃತ್ವದ ಯುಡಿಎಫ್ (UDF) ಕೇರಳದ ವಯನಾಡು ಜಿಲ್ಲೆಯ ನಿಲಂಬೂರ್‌ನಲ್ಲಿ ನಿರ್ಣಾಯಕ ಗೆಲುವು ಸಾಧಿಸಿದ್ದರೆ, ಎಲ್ಲಾ 5 ಕಡೆ ಸ್ಪರ್ಧಿಸಿದ್ದರೂ ಬಿಜೆಪಿ ಗುಜರಾತ್‌ನ ಕಾಡಿಯಲ್ಲಿ ಮಾತ್ರ ಗೆಲುವು ದಾಖಲಿಸಿದೆ. ಇದನ್ನೂ ಓದಿ: Israel-Iran tensions: ರಷ್ಯಾ, ಅಮೆರಿಕದಿಂದ ತೈಲ ಆಮದು ಹೆಚ್ಚಿಸಿದ ಭಾರತ

    ಮುಂದಿನ ವರ್ಷ ವಿಧಾನಸಭೆ ಚುನಾವಣೆ ಎದುರಿಸಲಿರುವ ಪಶ್ಚಿಮ ಬಂಗಾಳದ (West Bengal) ಕಾಲಿಗಂಜ್ ಕ್ಷೇತ್ರ ಉಳಿಸಿಕೊಳ್ಳುವಲ್ಲಿ ತೃಣಮೂಲ ಕಾಂಗ್ರೆಸ್ ಸಫಲವಾಗಿದೆ. ಇದನ್ನೂ ಓದಿ: 16ನೇ ಜನಗಣತಿ – 2027ರಲ್ಲಿ ನಡೆಯಲಿರುವ ಈ ಗಣತಿಯಲ್ಲಿ ಹೊಸದೇನು?

    ಗುಜರಾತ್‌ನಲ್ಲಿ ಬಿಜೆಪಿ, ಎಎಪಿಗೆ ತಲಾ ಒಂದು ಕ್ಷೇತ್ರ
    ಗುಜರಾತ್‌ನ 2 ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಎಎಪಿ, ಬಿಜೆಪಿ ತಲಾ ಒಂದೊಂದು ಕ್ಷೇತ್ರ ಗೆದ್ದುಕೊಂಡಿವೆ. ವಿಸಾವದರ ಕ್ಷೇತ್ರದಿಂದ ಎಎಪಿ ನಾಯಕ ಗೋಪಾಲ್‌ ಇಟಾಲಿಯಾ ಗೆಲುವು ಸಾಧಿಸಿದ್ರೆ, ಕಾಡಿ ಕ್ಷೇತ್ರದಲ್ಲಿ ಬಿಜೆಪಿ ರಾಜೇಂದ್ರ ಛಾವಡ ಜಯ ಕಂಡಿದ್ದಾರೆ.

    ಇಟಾಲಿಯಾ ಅವರು ಎಎಪಿ ಗುಜರಾತ್ ಘಟಕದ ಮಾಜಿ ಅಧ್ಯಕ್ಷರಾಗಿದ್ದಾರೆ. ಇವರು, ಪ್ರತಿಸ್ಪರ್ಧಿ ಬಿಜೆಪಿಯ ಕಿರಿಟ್ ಪಟೇಲ್ ಎದುರು 17,554 ಮತಗಳ ಅಂತರದಿಂದ ಗೆದ್ದಿದ್ದಾರೆ. ಇಟಾಲಿಯಾ 75,942 ಮತಗಳನ್ನು ಹಾಗೂ ಪಟೇಲ್ ಅವರು 58,388 ಮತಗಳನ್ನು ಪಡೆದುಕೊಂಡಿದ್ದರು. 21 ಸುತ್ತುಗಳಲ್ಲಿ ಮತ ಎಣಿಕೆ ನಡೆದಿದೆ ಎಂದು ಚುನಾವಣಾ ಆಯೋಗ ಮಾಹಿತಿ ಹಂಚಿಕೊಂಡಿದೆ. ಇದನ್ನೂ ಓದಿ: ನೀನು ಚಪ್ಪಲಿ ಹೊಲಿಯಲು ಯೋಗ್ಯ: ನಿಂದಿಸಿದ್ದ ಮೂವರು ಇಂಡಿಗೋ ಅಧಿಕಾರಿಗಳ ವಿರುದ್ಧ ಅಟ್ರಾಸಿಟಿ ಕೇಸ್‌

    ಎಸ್‌ಸಿ ಮೀಸಲು ಕ್ಷೇತ್ರ ಕಾಡಿಯಲ್ಲಿ ಬಿಜೆಪಿಯ ಅಭ್ಯರ್ಥಿ ರಾಜೇಂದ್ರ ಛಾವಡ ಅವರು ಎದುರಾಳಿಯಾಗಿದ್ದ ಕಾಂಗ್ರೆಸ್‌ನ ರಮೇಶ್ ಛಾವಡ ಅವರ ವಿರುದ್ಧ 39,452 ಮತಗಳ ಅಂತರದಿಂದ ಭರ್ಜರಿ ಜಯಗಳಿಸಿದ್ದಾರೆ. 22 ಸುತ್ತುಗಳ ಮತ ಎಣಿಕೆಯಲ್ಲಿ ರಾಜೇಂದ್ರ ಅವರು 99,742 ಹಾಗೂ ಕಾಂಗ್ರೆಸ್‌ನ ಮಾಜಿ ಸಂಸದರಾಗಿದ್ದ ರಮೇಶ್ ಅವರು 60,290 ಮತಗಳನ್ನು ಪಡೆದಿದ್ದಾರೆ. ಜೂನ್ 19ರಂದು ನಡೆದ ಉಪಚುನಾವಣೆಯಲ್ಲಿ ಕಾಡಿ ಕ್ಷೇತ್ರದಲ್ಲಿ ಶೇ.57.90 ಹಾಗೂ ವಿಸಾವದಾರ ಕ್ಷೇತ್ರದಲ್ಲಿ ಶೇ 56.89 ಮತದಾನವಾಗಿತ್ತು.

    ಬಂಗಾಳದಲ್ಲಿ ಟಿಎಂಸಿ ಪ್ರಾಬಲ್ಯ
    ಪಶ್ಚಿಮ ಬಂಗಾಳ ಕಾಲಿಗಂಜ್‌ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದ್ದ ಉಪಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್‌ ಅಭ್ಯರ್ಥಿ ಆಲಿಫಾ ಅಹ್ಮದ್‌ ಗೆಲುವು ಸಾಧಿಸಿದ್ದಾರೆ. ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಆಶಿಶ್ ಫೋಷ್ ಅವರ ವಿರುದ್ಧ ಅಲಿಫಾ ಅವರು 50,049 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಅಲಿಫಾ ಅವರು ಒಟ್ಟು 1,02,759 ಮತಗಳನ್ನು ಪಡೆದಿದ್ದು, ಫೋಷ್ ಅವರು 52,710 ಮತಗಳನ್ನು ಪಡೆದಿದ್ದಾರೆ. ಇದನ್ನೂ ಓದಿ: ಮದ್ವೆಯಾದ ಒಂದೇ ತಿಂಗಳಿಗೆ ಪತಿ ಶವವಾಗಿ ಪತ್ತೆ – ಬ್ಯಾಂಕ್ ಉದ್ಯೋಗಿ ಜೊತೆಗಿನ ಅಫೇರ್ ಕಾರಣ; ರಹಸ್ಯ ಬಯಲು

    ಎಡಪಂಥೀಯ ಬೆಂಬಲಿಗ ಕಾಂಗ್ರೆಸ್‌ನ ಕಾಬಿಲ್ ಉದ್ದೀನ್ ಶೇಖ್ 28,348 ಮತಗಳನ್ನು ಪಡೆದಿದ್ದಾರೆ. ಗೆಲುವಿನ ಬಳಿಕ ಪ್ರತಿಕ್ರಿಯಿಸಿರುವ ಅಲಿಫಾ ಹಿಂದೂಗಳು ನಮಗೆ ಮತ ಹಾಕಿಲ್ಲ ಎನ್ನುವುದನ್ನು ನಾನು ಒಪ್ಪುವುದಿಲ್ಲ. ಹಿಂದೂಗಳಿದ್ದ ಪ್ರದೇಶದಲ್ಲಿಯೂ ಹೆಚ್ಚು ಮತಗಳನ್ನು ಪಡೆದಿದ್ದೇವೆ. ಯಾವುದೇ ಒಂದು ಸಮುದಾಯದ ಮತಗಳನ್ನು ಗುರಿಯಾಗಿಸಿಕೊಂಡಿರಲಿಲ್ಲ, ಎಲ್ಲರ ಬಳಿಯೂ ಮತಯಾಚಿಸಿದ್ದೇವೆ. ಬಂಗಾಳದಲ್ಲಿ ಕೋಮು ವಿಭಜನೆ ಮಾಡುವ ಉದ್ದೇಶವನ್ನು ನಮ್ಮ ಪಕ್ಷ ಹೊಂದಿಲ್ಲ ಎನ್ನುವುದನ್ನು ಫಲಿತಾಂಶ ಸಾಬೀತುಪಡಿಸಿದೆ ಎಂದಿದ್ದಾರೆ.

    ಈ ಮಧ್ಯೆ ಮತ ಎಣಿಕೆ ವೇಳೆ ಕಚ್ಚಾಬಾಂಬ್ ಸ್ಫೋಟಗೊಂಡು 9 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ್ದಾಳೆ. ಸಿಎಂ ಮಮತಾ ಬ್ಯಾನರ್ಜಿ ಕಠಿಣ ಕ್ರಮಕ್ಕೆ ಸೂಚಿಸಿದ್ದಾರೆ.

  • ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಕೊರೊನಾ

    ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಕೊರೊನಾ

    ದೆಹಲಿ: ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಸ್ಮೃತಿ ಇರಾನಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

    ಈ ಸಂಬಂಧ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಅವರು, ದೆಹಲಿಯ ರಾಜೇಂದ್ರ ನಗರದಲ್ಲಿ ನಡೆದ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗದೇ ಇದ್ದುದಕ್ಕೆ ನಾನು ಕ್ಷಮೆಯಾಚಿಸುತ್ತಿದ್ದೇನೆ. ನನ್ನ ಕೋವಿಡ್ 19 ಪರೀಕ್ಷಾ ವರದಿಯು ಪಾಸಿಟಿವ್ ಬಂದಿರುವುದರಿಂದ ನನಗೆ ಈ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ. ರಾಜೇಂದ್ರ ನಗರದ ಜನತೆಯಲ್ಲಿ ನಾನು ಬಿಜೆಪಿ ಅಭ್ಯರ್ಥಿ ರಾಜೇಶ್ ಭಾಟಿಯಾಗೆ ಮತ ನೀಡಿ ಎಂದು ಮನವಿ ಮಾಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ನೂಪುರ್ ಶರ್ಮಾ ಹೇಳಿಕೆ ಬಗ್ಗೆ ಮೋದಿ ತನ್ನ ಬಾಲ್ಯ ಸ್ನೇಹಿತ ಅಬ್ಬಾಸ್‍ನನ್ನು ಕೇಳಲಿ: ಓವೈಸಿ

    ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷದ (AAP) ಗೆಲುವಿನ ನಂತರ ಹಾಲಿ ಶಾಸಕ ರಾಘವ್ ಚಡ್ಡಾ ಪಂಜಾಬ್‌ನಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡರು. ಇದರಿಂದ ರಾಜೇಂದ್ರ ನಗರದ ಶಾಸಕ ಸ್ಥಾನ ಖಾಲಿಯಾಗಿದೆ. ಇದನ್ನೂ ಓದಿ: ಬಹುಮತ ಕಳೆದುಕೊಂಡ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

    ಸದ್ಯ ದೆಹಲಿಯ ರಾಜೇಂದ್ರ ನಗರದ ಶಾಸಕ ಸ್ಥಾನದ ಉಪಚುನಾವಣೆಗೆ ಜೂನ್ 23 ರಂದು ಮತದಾನ ನಡೆಯಲಿದೆ. ಬಿಜೆಪಿಯಿಂದ ಮಾಜಿ ಕೌನ್ಸಿಲರ್ ಭಾಟಿಯಾ, ಕಾಂಗ್ರೆಸ್ ಮಾಜಿ ಕೌನ್ಸಿಲರ್ ಪ್ರೇಮ್ ಲತಾ ಅವರನ್ನು ಕಣಕ್ಕಿಳಿಸಲಾಗಿದೆ. ಎಎಪಿಯನ್ನು ಎಂಸಿಡಿ ಉಸ್ತುವಾರಿ ದುರ್ಗೇಶ್ ಪಾಠಕ್ ಪ್ರತಿನಿಧಿಸಲಿದ್ದಾರೆ.

    Live Tv

  • ಬೆಲೆ ಏರಿಕೆ ಮಾಡಿದ್ರೂ ಸಿಂದಗಿಯಲ್ಲಿ ಬಿಜೆಪಿಗೆ ಮುನ್ನಡೆ: ಜಿ.ಪರಮೇಶ್ವರ್

    ಬೆಲೆ ಏರಿಕೆ ಮಾಡಿದ್ರೂ ಸಿಂದಗಿಯಲ್ಲಿ ಬಿಜೆಪಿಗೆ ಮುನ್ನಡೆ: ಜಿ.ಪರಮೇಶ್ವರ್

    ತುಮಕೂರು: ಬೆಲೆ ಏರಿಕೆ ಸಂದರ್ಭದಲ್ಲೂ ಬಿಜೆಪಿಗೆ 30 ಸಾವಿರ ಲೀಡ್ ಸಿಕ್ಕಿರುವುದು ಆಶ್ಚರ್ಯ ತಂದಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಹೇಳಿದರು.

    ಉಪ ಚುನಾವಣೆ ಫಲಿತಾಂಶ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಂದಗಿಯಲ್ಲಿ ನಮ್ಮ ಪಕ್ಷ ಅಷ್ಟೊಂದು ಮತ ಸೆಳೆಯಲಿಕ್ಕೆ ಆಗಿಲ್ಲ. ಅದಕ್ಕೆ ಕಾರಣ ಏನು ಎನ್ನುವುದನ್ನು ಪರಿಶೀಲಿಸುತ್ತೇವೆ. ಹಾನಗಲ್ ಸಿಎಂ ತವರು ಜಿಲ್ಲೆಯಾದರೂ ನಾವು ಗೆದ್ದಿರುವುದು ಸಂತಸ ತಂದಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸಿಂದಗಿಯಲ್ಲಿ ಲಿಂಗಾಯತರು ಮತ ಹಾಕಿಲ್ಲ, ರಾಷ್ಟ್ರೀಯ ಪಕ್ಷಗಳು ಹಣದ ಹೊಳೆ ಹರಿಸಿ ಗೆದ್ದಿವೆ: ಹೆಚ್‍ಡಿಡಿ ಆರೋಪ

    ಜನ ಇವತ್ತು ಶ್ರೀನಿವಾಸ್ ಮಾನೆ ಅವರ ಕೈ ಹಿಡಿದಿದ್ದಾರೆ. ಅವರು ಕ್ಷೇತ್ರದಲ್ಲೇ ಅಭಿವೃದ್ಧಿ ಕೆಲಸ ಮಾಡಿಕೊಂಡಿದ್ದರು, ಜನರ ಸಂಪರ್ಕದಲ್ಲಿದ್ದರು. ಹೀಗಾಗಿ ಜನ ಕೈ ಹಿಡಿದಿದ್ದಾರೆ ಎಂದರು.

    ಎರಡು ಕ್ಷೇತ್ರದಲ್ಲಿ ಜೆಡಿಎಸ್‌ ನೆಲೆ ಇಲ್ಲದಂತಾಗಿದೆ. ಸಿಂದಗಿಯಲ್ಲಿ ಜೆಡಿಎಸ್ ಪ್ರಾಬಲ್ಯ ಇತ್ತು, ಈಗ ನೆಲೆ ಕಳೆದುಕೊಂಡಿದೆ. ಪೆಟ್ರೋಲ್, ಡಿಸೇಲ್, ಅಡುಗೆ ಅನಿಲದಂತಹ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದರೂ ಸಿಂದಗಿಯಲ್ಲಿ ಇನ್ನೂ ಅವರಿಗೆ ಮತ ಹಾಕಿ ಗೆಲ್ಲಿಸಿರುವುದು ನನಗೆ ಆಶ್ಚರ್ಯ ತಂದಿದೆ. ಇವತ್ತಿನ ಫಲಿತಾಂಶ ನೋಡಿದರೆ, ಅಗತ್ಯ ವಸ್ತು ಬೆಲೆ ಏರಿಕೆಗೆ ಅರ್ಥ ಇಲ್ಲ ಎನಿಸುತ್ತಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಹೆಚ್ಚು ಕೆಲಸ ಮಾಡಬೇಕು ಎನ್ನುವ ಸಂದೇಶ ಕೊಟ್ಟಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಅಪ್ಪು ಜೊತೆಗಿನ ಲಾಸ್ಟ್ ಸೆಲ್ಫಿ ಶೇರ್ ಮಾಡಿದ ರಾಘಣ್ಣ

    ಹಾನಗಲ್‌ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಹಿನ್ನೆಡೆಯಾಗಿದೆ‌. ಈ ಫಲಿತಾಂಶ ದಿಕ್ಸೂಚಿಯಲ್ಲ, ನಾವು ಇನ್ನೂ ಹೆಚ್ಚು ಕೆಲಸ ಮಾಡಬೇಕು. ಇನ್ನೂ ಪರಿಣಾಮಕಾರಿಯಾಗಿ ಕಾಂಗ್ರೆಸ್ ಮುಖಂಡರು ಕೆಲಸ ಮಾಡಬೇಕು. ಒಂದು ಸೀಟ್ ಗೆದ್ದರೆ ಸಾಲದು ಇನ್ನೂ ಗೆಲ್ಲಬೇಕಿತ್ತು. ಹಾಗಾಗಿ ಇನ್ನೂ ಹೆಚ್ಚಿನ ರೀತಿಯಲ್ಲಿ ಸಂಘಟನೆ ಮಾಡಬೇಕು ಎಂದು ಕರೆ ನೀಡಿದರು.

    sindagi

    ಚುನಾವಣೆ ಫಲಿತಾಂಶದಿಂದ ನೆಲೆ ಕಳೆದುಕೊಳ್ಳುತ್ತಿದ್ದೇವೆ ಎಂಬ ಸಂದೇಶ ಜೆಡಿಎಸ್‌ಗೆ ಹೋಗಿದೆ. ಇದೇ ರೀತಿ ಮುಂದುವರಿದರೆ ಜೆಡಿಎಸ್ ಸಿಂಗಲ್ ಡಿಜಿಟ್ ತಲುಪುತ್ತೆ. ನಾವು ಮುಂದಿನ ದಿನಗಳಲ್ಲಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದರು.

  • ಜೆಡಿಎಸ್‌ ಬಗ್ಗೆ ಕಾಂಗ್ರೆಸ್ ನಡೆಸಿದ ಅಪಪ್ರಚಾರಕ್ಕೆ ಫಲಿತಾಂಶವೇ ಉತ್ತರ ನೀಡಿದೆ: ಹೆಚ್‌ಡಿಕೆ

    ಜೆಡಿಎಸ್‌ ಬಗ್ಗೆ ಕಾಂಗ್ರೆಸ್ ನಡೆಸಿದ ಅಪಪ್ರಚಾರಕ್ಕೆ ಫಲಿತಾಂಶವೇ ಉತ್ತರ ನೀಡಿದೆ: ಹೆಚ್‌ಡಿಕೆ

    ಬೆಂಗಳೂರು: ಜೆಡಿಎಸ್‌ ಪಕ್ಷವು ಬಿಜೆಪಿ ಬಿ ಟೀಮ್‌ ಎಂದು ಕಾಂಗ್ರೆಸ್‌ ಪಕ್ಷದ ನಾಯಕರು ನಡೆಸಿದ ದುರುದ್ದೇಶಪೂರಿತ ಅಪಪ್ರಚಾರಕ್ಕೆ ಉಪ ಚುನಾವಣೆ ಫಲಿತಾಂಶವೇ ಉತ್ತರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ಅವರು ಹೇಳಿದರು.

    ಉಪ ಚುನಾವಣೆ ಫಲಿತಾಂಶದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷವು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಸ್ಪರ್ಧೆ ಮಾಡಿತ್ತು ಎಂದು ಹೇಳಿದ್ದ ಕಾಂಗ್ರೆಸ್‌ ಪಕ್ಷಕ್ಕೆ ಸಿಂದಗಿ ಮತ್ತು ಹಾನಗಲ್‌ ಕ್ಷೇತ್ರಗಳಲ್ಲಿ ಸಿಕ್ಕಿರುವ ಮತಗಳೇ ಉತ್ತರ ನೀಡಿವೆ ಎಂದು ಕುಟುಕಿದರು. ಇದನ್ನೂ ಓದಿ: ಸಿಂದಗಿ ಉಪ ಚುನಾವಣೆ; ಜಯದ ನಗೆ ಬೀರಿದ ಬಿಜೆಪಿ

    ಸ್ಥಳೀಯ ಕಾರ್ಯಕರ್ತರ ಒತ್ತಾಸೆಯ ಮೇರೆಗೆ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್‌ ಅಭ್ಯರ್ಥಿಯನ್ನು ನಿಲ್ಲಿಸಲಾಯಿತು. ಕಾಂಗ್ರೆಸ್-ಬಿಜೆಪಿ ಪಕ್ಷಗಳು ಹೇಳಿರುವಂತೆ ನಾನು ಉಪ ಚುನಾವಣೆ ಫಲಿತಾಂಶಕ್ಕೆ ಮಹತ್ವ ನೀಡುವುದಿಲ್ಲ. ನಮ್ಮ ಗುರಿ ಏನಿದ್ದರೂ 2023ರ ಚುನಾವಣೆ ಮೇಲೆ ಕೇಂದ್ರೀಕೃತವಾಗಿದೆ ಎಂದು ಹೆಚ್‌ಡಿಕೆ ತಿಳಿಸಿದರು.

    ಸಿಂದಗಿ ವಿಧಾನಸಭೆ ಕ್ಷೇತ್ರಕ್ಕೆ ನಮ್ಮ ಪಕ್ಷ ಸಾಕಷ್ಟು ಕೊಡುಗೆ ನೀಡಿದೆ. ಪ್ರಚಾರದ ವೇಳೆ ನಾನು ಐವತ್ತಕ್ಕೂ ಹೆಚ್ಚು ಹಳ್ಳಿಗಳಿಗೆ ಭೇಟಿ ನೀಡಿದ್ದೆ. ಜನರ ಸ್ಪಂದನೆ ಉತ್ತಮವಾಗಿತ್ತು. ದೇವೇಗೌಡರು ಮುಖ್ಯಮಂತ್ರಿ ಮತ್ತು ಪ್ರಧಾನಿಯಾಗಿ ನೀಡಿದ್ದ ನೀರಾವರಿ ಯೋಜನೆಗಳ ಬಗ್ಗೆ, ನಾನು ಮುಖ್ಯಮಂತ್ರಿ ಆಗಿದ್ದಾಗ ನೀಡಿದ ಕಾರ್ಯಕ್ರಮಗಳು ಹಾಗೂ ಸಾಲ ಮನ್ನಾ ಬಗ್ಗೆ ಪ್ರತಿ ಹಳ್ಳಿಯಲ್ಲೂ ಜನ ಮಾತನಾಡಿದ್ದರು. ಸ್ವತಃ ಜನರೇ ನನ್ನ ಬಳಿಗೆ ಬಂದು ಈ ಬಗ್ಗೆ ಮಾತನಾಡುತ್ತಿದ್ದರು. ಆದರೂ ಈ ರೀತಿಯ ಫಲಿತಾಂಶ ಬಂದಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಹಾನಗಲ್‌ನಲ್ಲಿ ಕಾಂಗ್ರೆಸ್‌ಗೆ ಗೆಲುವು – ತವರು ಜಿಲ್ಲೆಯಲ್ಲೇ ಸಿಎಂಗೆ ಮುಖಭಂಗ

    ಮನಗೂಳಿ ಮಗನ ಹೈಜಾಕ್
    ಮಾಜಿ ಸಚಿವ ಎಂ.ಸಿ.ಮನಗೂಳಿ ಮರಣದ ನಂತರ ಅವರ ಪುತ್ರ ಅಶೋಕ್‌ ಮನಗೂಳಿ ಅವರನ್ನು ಕಾಂಗ್ರೆಸ್‌ ಹೈಜಾಕ್‌ ಮಾಡಿತು. ಜತೆಗೆ, ನಮ್ಮ ಸಂಘಟನೆಯನ್ನೂ ದುರ್ಬಲ ಮಾಡಲಾಗಿತ್ತು. ಇದು ನನ್ನ ಗಮನದಲ್ಲಿತ್ತು. ಮತಗಟ್ಟೆಗಳಲ್ಲಿ ಕಾರ್ಯಕರ್ತರನ್ನು ಗುರುತಿಸುವುದೇ ದೊಡ್ಡ ಸವಾಲಾಗಿತ್ತು. ಈ ಕಾರಣಕ್ಕೆ ನಮಗೆ ಹಿನ್ನಡೆ ಉಂಟಾಯಿತು. ಆದರೂ ಈ ಫಲಿತಾಂಶದಿಂದ ನಾನು ಅಧೀರನೂ ಆಗಿಲ್ಲ, ನನಗೆ ಆತಂಕವೂ ಇಲ್ಲ ಎಂದು ಪ್ರತಿಕ್ರಿಯಿಸಿದರು.

    ಹಾನಗಲ್‌ನಲ್ಲಿ ನಮಗೆ ನೆಲೆ ಇರಲಿಲ್ಲ. ಆದರೆ, ಸಿಂದಗಿಯಲ್ಲಿ ನಮ್ಮವರೇ ಶಾಸಕರಿದ್ದರು. ಯಾವ ಚುನಾವಣೆಯಲ್ಲೂ ಕಾಂಗ್ರೆಸ್‌ ಎರಡನೇ ಸ್ಥಾನಕ್ಕೆ ಬಂದಿರಲಿಲ್ಲ. ಯಾವಾಗಲೂ ಇಲ್ಲಿ ಜೆಡಿಎಸ್-ಬಿಜೆಪಿ ನಡುವೆ ಸ್ಪರ್ಧೆ ಇರುತ್ತಿತ್ತು ಎಂದು ನೆನಪಿಸಿಕೊಂಡರು. ಇದನ್ನೂ ಓದಿ: ಜನ ರಾಜ್ಯದಲ್ಲಿ ಬದಲಾವಣೆ ಬಯಸುತ್ತಿದ್ದಾರೆ: ಡಿಕೆ ಶಿವಕುಮಾರ್

    ಸಾಮಾನ್ಯವಾಗಿ ಎಲ್ಲರಿಗೂ ತಿಳಿದಂತೆ ಉಪ ಚುನಾವಣೆಗಳು ನಡೆಯುವ ಬಗೆಯೇ ಬೇರೆ, ಸಾರ್ವತ್ರಿಕ ಚುನಾವಣೆಗಳು ನಡೆಯುವ ರೀತಿಯೇ ಬೇರೆ ಎಂದ ಅವರು, ನಮ್ಮ ಪಕ್ಷ 2023ನೇ ವಿಧಾನಸಭೆ ಚುನಾವಣೆ ಮೇಲೆ ಪೂರ್ಣ ಗಮನ ಕೇಂದ್ರೀಕರಿಸಿದೆ. ಅದಕ್ಕೆ ಬಿಡದಿಯಲ್ಲಿ ಸಂಘಟನಾ ಕಾರ್ಯಗಾರವನ್ನೂ ನಡೆಸಲಾಯಿತು. ಈಗ ಪಕ್ಷದ ಸಂಘಟನೆಯತ್ತಲೇ ನಾವು ಗಮನ ಇರಿಸಿದ್ದೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

    ಹಣದಿಂದಲೇ ಚುನಾವಣೆ ನಡೆದಿದೆ
    ಉಪ ಚುನಾವಣೆಗಳು ನಡೆಯುವುದು ಹಣಬಲದಿಂದಲೇ ಎನ್ನುವುದು ಎಲ್ಲರೂ ಬಲ್ಲ ಸಂಗತಿ. ಸಿಂದಗಿಯಲ್ಲಿ ಕೊನೆ ಆಟ ಎಂದಿದ್ದ ಸಚಿವರೊಬ್ಬರ ಹೇಳಿಕೆಯನ್ನು ಮಾಧ್ಯಮಗಳೇ ವರದಿ ಮಾಡಿವೆ. ಹಾನಗಲ್‌ ಮತ್ತು ಸಿಂದಗಿ ಕ್ಷೇತ್ರದಲ್ಲಿ ಹಣದ ಹೊಳೆ ಹರಿದಿದೆ ಎನ್ನುವುದನ್ನು ಎಲ್ಲ ಮಾಧ್ಯಮಗಳೂ ವರದಿ ಮಾಡಿವೆ. ಬಿಜೆಪಿ-ಕಾಂಗ್ರೆಸ್‌ ಎರಡೂ ಪಕ್ಷಗಳು ಅಧಿಕಾರದಲ್ಲಿದ್ದಾಗ ಇದೇ ಆಗಿದೆ. ಸಿದ್ದರಾಮಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ನಡೆದ ಗುಂಡ್ಲುಪೇಟೆ ಮತ್ತು ನಂಜನಗೂಡು ಉಪ ಚುನಾವಣೆಗಳ ಕಥೆ ಏನೂ ಎನ್ನುವುದು ತಿಳಿದ ವಿಷಯವೇ ಎಂದು ಮಾರ್ಮಿಕವಾಗಿ ನುಡಿದರು.‌

    ಉಪ ಚುನಾವಣೆ ಫಲಿತಾಂಶ ಮುಂದಿನ ಚುನಾವಣೆಗೆ ದಿಕ್ಸೂಚಿ ಅಲ್ಲ. ಹೀಗಾಗಿ ಇದರ ಬಗ್ಗೆ ನಾನು ತಲೆ ಕೆಡಿಸಿಕೊಳ್ಳಲಾರೆ ಎಂದು ಒತ್ತಿ ಹೇಳಿದರು.

    8ರಿಂದ ಜಿಲ್ಲಾವಾರು ಸಭೆ
    ಇದೇ ನವೆಂಬರ್‌ 8ರಿಂದ 16ರವರೆಗೆ ಪಕ್ಷದ ಕಚೇರಿಯಲ್ಲಿ ಪ್ರತಿ ಜಿಲ್ಲಾವಾರು ಸಭೆಗಳನ್ನು ಕರೆಯಲಾಗಿದೆ. ಪ್ರತಿದಿನ ನಾಲ್ಕು ಜಿಲ್ಲೆಗಳ ಮುಖಂಡರ ಜತೆ ಸಮಾಲೋಚನೆ ನಡೆಸಲಿದ್ದೇನೆ. ಪದಾಧಿಕಾರಿಗಳು ಹಾಗೂ ಸಂಭವನೀಯ ಅಭ್ಯರ್ಥಿಗಳು ಈ ಸಭೆಗಳಲ್ಲಿ ಭಾಗಿಯಾಗಲಿದ್ದಾರೆ. ತಳಮಟ್ಟದಿಂದ ಪಕ್ಷವನ್ನು ಕಟ್ಟುವುದು ಹಾಗೂ ವಿಷಯಾಧಾರಿತವಾಗಿ ಹೋರಾಟ ನಡೆಸುವುದು ನಮ್ಮ ಗುರಿ. ಈ ನಿಟ್ಟಿನಲ್ಲಿ ೨೦೨೩ಕ್ಕೆ ಪಕ್ಷವನ್ನು ಸಜ್ಜುಗೊಳಿಸುತ್ತಿದ್ದೇವೆ ಎಂದು ತಿಳಿಸಿದರು.

  • ಸಿಂದಗಿ ಉಪ ಚುನಾವಣೆ; ಜಯದ ನಗೆ ಬೀರಿದ ಬಿಜೆಪಿ

    ಸಿಂದಗಿ ಉಪ ಚುನಾವಣೆ; ಜಯದ ನಗೆ ಬೀರಿದ ಬಿಜೆಪಿ

    ವಿಜಯಪುರ: ಸಿಂದಗಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಭಾರೀ ಅಂತರದ ಗೆಲುವು ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ರಮೇಶ್‌ ಭೂಸನೂರ ಜಯದ ನಗೆ ಬೀರಿದ್ದಾರೆ.

    22 ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಬಿಜೆಪಿ 31,185 ಮತಗಳ ಅಂತರದಿಂದ ಜಯಗಳಿಸಿದೆ.

    ಬಿಜೆಪಿ ಒಟ್ಟು 93,865, ಕಾಂಗ್ರೆಸ್ 62,680 ಮತಗಳನ್ನು ಗಳಿಸಿದರೆ, ಜೆಡಿಎಸ್ 4,353 ಮತ ಗಳಿಸಲಷ್ಟೇ ಶಕ್ತವಾಗಿದೆ. ಜೆಡಿಎಸ್‌ ಶಾಸಕ ಎಂ.ಸಿ.ಮನಗೂಳಿ ಅವರ ನಿಧನದಿಂದ ತೆರವಾಗಿದ್ದ ಶಾಸಕ ಸ್ಥಾನಕ್ಕೆ ಉಪ ಚುನಾವಣೆ ನಿಗದಿಪಡಿಸಲಾಗಿತ್ತು. ಅಲ್ಪಸಂಖ್ಯಾತರ ಮತಗಳನ್ನು ಸೆಳೆಯುವ ಉದ್ದೇಶದಿಂದ ಮನಗೂಳಿ ಅವರ ಪುತ್ರನಿಗೆ ಟಿಕೆಟ್‌ ನೀಡದೇ ಜೆಡಿಎಸ್‌ ನಾಜಿಯಾ ಅಂಗಡಿ ಅವರಿಗೆ ಟಿಕೆಟ್‌ ನೀಡಿತ್ತು. ಇದನ್ನೂ ಓದಿ: ಹಾನಗಲ್‌ನಲ್ಲಿ ಕಾಂಗ್ರೆಸ್‌ಗೆ ಗೆಲುವು – ತವರು ಜಿಲ್ಲೆಯಲ್ಲೇ ಸಿಎಂಗೆ ಮುಖಭಂಗ

    ಸಿಂದಗಿ ಉಪ ಚುನಾವಣೆಯಲ್ಲಿ ಬಿಜೆಪಿ ಅಭರ್ಥಿ ಗೆಲುವು ಸಾಧಿಸಿರುವುದಕ್ಕೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಟ್ವೀಟ್‌ ಮಾಡಿ ಅಭಿನಂದನೆ ತಿಳಿಸಿದ್ದಾರೆ. ಇದನ್ನೂ ಓದಿ: ಪುನೀತ್ ಸಮಾಧಿಗೆ ಹಾಲು ತುಪ್ಪ ಕಾರ್ಯ ನೆರವೇರಿಸಿದ ಕುಟುಂಬಸ್ಥರು

     

    sindagi

    “ಸಿಂದಗಿ ಉಪ ಚುನಾವಣೆಯಲ್ಲಿ ಉತ್ತಮ ಅಂತರದಲ್ಲಿ ವಿಜಯ ಸಾಧಿಸಿದ ಪಕ್ಷದ ಅಭ್ಯರ್ಥಿ ರಮೇಶ್ ಭೂಸನೂರ್ ಅವರಿಗೆ ಅಭಿನಂದನೆಗಳು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳು, ರಾಜ್ಯ ಬಿಜೆಪಿ ಸರ್ಕಾರದ ಜನಪರ ಯೋಜನೆಗಳನ್ನು ಜನ ಮೆಚ್ಚಿದ್ದಾರೆ ಎನ್ನುವುದಕ್ಕೆ ಈ ಕ್ಷೇತ್ರದಲ್ಲಿ ಪಕ್ಷದ ಗೆಲುವು ಸಂಕೇತವಾಗಿದೆ” ಎಂದು ಪ್ರತಿಕ್ರಿಯಿಸಿದ್ದಾರೆ.

  • ಹಾನಗಲ್‌ನಲ್ಲಿ ಕಾಂಗ್ರೆಸ್‌ಗೆ ಗೆಲುವು – ತವರು ಜಿಲ್ಲೆಯಲ್ಲೇ ಸಿಎಂಗೆ ಮುಖಭಂಗ

    ಹಾನಗಲ್‌ನಲ್ಲಿ ಕಾಂಗ್ರೆಸ್‌ಗೆ ಗೆಲುವು – ತವರು ಜಿಲ್ಲೆಯಲ್ಲೇ ಸಿಎಂಗೆ ಮುಖಭಂಗ

    ಹಾವೇರಿ: ತವರು ಜಿಲ್ಲೆಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಮುಖಭಂಗವಾಗಿದೆ. ಹಾನಗಲ್‌ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ವಿಜಯಗಳಿಸಿದೆ.

    13ನೇ ಸುತ್ತು ಮುಕ್ತಾಯಕ್ಕೆ ಕಾಂಗ್ರೆಸ್‌ನ ಶ್ರೀನಿವಾಸ ಮಾನೆ 59,985 ಮತಗಳನ್ನು ಪಡೆದರೆ ಬಿಜೆಪಿಯ ಶಿವರಾಜ್ ಸಜ್ಜನರ 52,922 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್‌ನ ನಿಯಾಜ್ ಶೇಖ್ 629 ಮತಗಳನ್ನು ಗಳಿಸಿದ್ದಾರೆ. ಫಲಿತಾಂಶ ಅಧಿಕೃತವಾಗಿ ಪ್ರಕಟವಾಗಬೇಕಿದೆ. ಇದನ್ನೂ ಓದಿ: ಹಾನಗಲ್‌ ಉಪ ಚುನಾವಣೆ: ಕಾಂಗ್ರೆಸ್‌ ಕಾರ್ಯಕರ್ತರಿಂದ ಸಂಭ್ರಮಾಚರಣೆ

    7063 ಮತಗಳ ಮುನ್ನಡೆಯನ್ನು ಪಡೆದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಸಂಭ್ರಮಾಚರಣೆಯನ್ನು ತೊಡಗಿದ್ದಾರೆ. ಕಾಂಗ್ರೆಸ್‌ಗೆ ಮುನ್ನಡೆ ಸಿಗುತ್ತಿದ್ದಂತೆ ಮತ ಎಣಿಕೆ ಕೇಂದ್ರದಲ್ಲಿದ್ದ ಬಿಜೆಪಿ ಕಾರ್ಯಕರ್ತರು ಸ್ಥಳದಿಂದ ತೆರಳಿದರು. ಇದನ್ನೂ ಓದಿ: ಮೊದಲೇ ಪೈಪೋಟಿ ನಿರೀಕ್ಷಿಸಿದ್ದೆವು, ಫಲಿತಾಂಶಕ್ಕೆ ಸಮಯವಿದೆ: ಬೊಮ್ಮಾಯಿ

    ಬಿಜೆಪಿಯ ಶಾಸಕ ಸಿಎಂ ಉದಾಸಿ ಅವರ ಅಕಾಲಿಕ ನಿಧನದಿಂಧ ತೆರವಾದ ಕ್ಷೇತ್ರಕ್ಕೆ ಕಳೆದ ಶನಿವಾರ ಮತದಾನ ನಡೆದಿತ್ತು. ಈಗ ಬಿಜೆಪಿ ತೆಕ್ಕೆಯಲ್ಲಿದ್ದ ಕ್ಷೇತ್ರವನ್ನು ಕಾಂಗ್ರೆಸ್‌ ಪಡೆದುಕೊಂಡಿದೆ.

    ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀನಿವಾಸ ಮಾನೆ, ಹಾನಗಲ್‌ನಲ್ಲಿ ಜನಬಲ ಗೆದ್ದಿದೆ. ಹಣ ಬಲ ಸೋತಿದೆ. ಮತ ಹಾಕಿದ ಜನರಿಗೆ ಸಾಷ್ಟಾಂಗ ನಮಸ್ಕಾರ ಸಲ್ಲಿಸುವೆ. ನಮ್ಮ ನಾಯಕರ ಪರಿಶ್ರಮ ಹಾಕಿದ್ದಾರೆ. ಸರ್ಕಾರದ ತಂತ್ರ ಮಣಿಸಿದ್ದಾರೆ. ಜನರು ಸರ್ಕಾರದ ಜನವಿರೋಧಿ ನೀತಿ. ದುರಾಡಳಿತ ತಿರಸ್ಕಾರ ಮಾಡಿದ್ದಾರೆ. ಇನ್ನಾದರೂ ಜನರ ಕಲ್ಯಾಣ ಮಾಡಲಿ. ಆಡಳಿಯ ಯಂತ್ರ ಸಂಪೂರ್ಣ ಹದಗೆಟ್ಟಿದೆ ಎಂದು ವಾಗ್ದಳಿ ನಡೆಸಿದರು.

  • ಹಾನಗಲ್‌ ಉಪ ಚುನಾವಣೆ: ಕಾಂಗ್ರೆಸ್‌ ಕಾರ್ಯಕರ್ತರಿಂದ ಸಂಭ್ರಮಾಚರಣೆ

    ಹಾನಗಲ್‌ ಉಪ ಚುನಾವಣೆ: ಕಾಂಗ್ರೆಸ್‌ ಕಾರ್ಯಕರ್ತರಿಂದ ಸಂಭ್ರಮಾಚರಣೆ

    ಹಾವೇರಿ: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ 4,719 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಸ್ಥಳದಿಂದ ಹೊರನಡೆದಿದ್ದಾರೆ.

    9 ನೇ ಸುತ್ತಿನ ಮತ ಎಣಿಕೆ ಕಾರ್ಯ ಮುಗಿದಿದೆ. ಕಾಂಗ್ರೆಸ್ ಅಭ್ಯರ್ಥಿ 40785, ಬಿಜೆಪಿ ಅಭ್ಯರ್ಥಿ 36066, ಜೆಡಿಎಸ್ ಅಭ್ಯರ್ಥಿ 432 ಮತಗಳನ್ನು ಗಳಿಸಿದ್ದಾರೆ. ಇದನ್ನೂ ಓದಿ: ಮೊದಲೇ ಪೈಪೋಟಿ ನಿರೀಕ್ಷಿಸಿದ್ದೆವು, ಫಲಿತಾಂಶಕ್ಕೆ ಸಮಯವಿದೆ: ಬೊಮ್ಮಾಯಿ

    ಹಾವೇರಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್ ಬಳಿ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿದ್ದಾರೆ. ಸ್ಥಳದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಸಂಭ್ರಮಾಚರಣೆ ಮಾಡದಂತೆ ಪೊಲೀಸರು ತಿಳಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರನ್ನು ಎಣಿಕಾ ಕೇಂದ್ರದಿಂದ ಪೊಲೀಸರು ಕಳುಹಿಸುತ್ತಿದ್ದಾರೆ. ಆದರೆ ಪೊಲೀಸರ ಮನವಿಗೂ ಜಗ್ಗದ ಕಾಂಗ್ರೆಸ್ ಕಾರ್ಯಕರ್ತರು ಸ್ಥಳದಲ್ಲೇ ಜಮಾಯಿಸಿದ್ದಾರೆ.

    ಶ್ರೀನಿವಾಸ್ ಮಾನೆ ಮುಖವಾಡ ಹಾಕಿಕೊಂಡ ಕಾರ್ಯಕರ್ತರು ಅಭ್ಯರ್ಥಿ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಜೈಕಾರ ಕೂಗಿದರು. ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಮತ ಎಣಿಕಾ ಕೇಂದ್ರದಿಂದ ಹೊರನಡೆದಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತವರು ಕ್ಷೇತ್ರದಲ್ಲೇ ಭಾರಿ ಮುಖಭಂಗ ಆಗುವ ಸಾಧ್ಯತೆ ಇದೆ. ಇದನ್ನೂ ಓದಿ: ಸಿಂದಗಿ ಉಪ ಚುನಾವಣೆ: 4,031 ಮತಗಳ ಅಂತರದಲ್ಲಿ ಬಿಜೆಪಿ ಮುನ್ನಡೆ

     

    ಅಕ್ಟೋಬರ್ 30 ರಂದು ನಡೆದ ಉಪ ಚುನಾವಣೆಯಲ್ಲಿ ಹಾನಗಲ್‍ನಲ್ಲಿ ಶೇಕಡಾ 83ರಷ್ಟು ಮತದಾನ ನಡೆದಿತ್ತು. ಹಾನಗಲ್‍ನಲ್ಲಿ ಬಿಜೆಪಿಯ ಶಿವರಾಜ್ ಸಜ್ಜನರ್ ಮತ್ತು ಕಾಂಗ್ರೆಸ್‍ನ ಶ್ರೀನಿವಾಸ ಮಾನೆ ನಡುವೆ ನೆಕ್ ಟು ನೆಕ್ ಫೈಟ್ ಕಂಡುಬಂದಿತ್ತು.

  • ಸಿಂದಗಿ ಉಪ ಚುನಾವಣೆ: 4,031 ಮತಗಳ ಅಂತರದಲ್ಲಿ ಬಿಜೆಪಿ ಮುನ್ನಡೆ

    ಸಿಂದಗಿ ಉಪ ಚುನಾವಣೆ: 4,031 ಮತಗಳ ಅಂತರದಲ್ಲಿ ಬಿಜೆಪಿ ಮುನ್ನಡೆ

    ವಿಜಯಪುರ: ತೀವ್ರ ಕುತೂಹಲ ಮೂಡಿಸಿರುವ ಸಿಂದಗಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು, 4,031 ಮತಗಳ ಅಂತರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

    ಎರಡನೇ ಸುತ್ತಿನ ಮತ ಎಣಿಕೆ ಕಾರ್ಯ ಮುಗಿದಿದೆ. ಬಿಜೆಪಿ ಅಭ್ಯರ್ಥಿ ರಮೇಶ್‌ ಭೂಸನೂರ 9,645, ಕಾಂಗ್ರೆಸ್‌ನ ಅಶೋಕ ಮನಗೂಳಿ 5,614 ಹಾಗೂ ಜೆಡಿಎಸ್‌ನ ಅಭ್ಯರ್ಥಿ ನಾಜಿಯಾ ಅಂಗಡಿ 282 ಮತಗಳನ್ನು ಪಡೆದುಕೊಂಡಿದ್ದಾರೆ. 16 ಟೇಬಲ್‌ನಲ್ಲಿ 22 ಸುತ್ತು ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಇದನ್ನೂ ಓದಿ: ಸಿಂದಗಿಯಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದ್ದಂತೆ ಅಭ್ಯರ್ಥಿ ರಮೇಶ್ ಭೂಸನೂರು ಹರ್ಷ

    ಮೊದಲನೇ ಸುತ್ತಿನಲ್ಲಿ ಬಿಜೆಪಿ 5,255, ಕಾಂಗ್ರೆಸ್‌ 2,054 ಹಾಗೂ ಜೆಡಿಎಸ್‌ 73 ಮತಗಳನ್ನು ಪಡೆದಿತ್ತು.

    ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಿದ್ದು, ಮಧ್ಯಾಹ್ನದ ಹೊತ್ತಿಗೆಲ್ಲಾ ಫಲಿತಾಂಶದ ಸ್ಪಷ್ಟ ಚಿತ್ರಣ ಸಿಗಲಿದೆ. ವಿಜಯಪುರದ ಸೈನಿಕ ಶಾಲೆಯಲ್ಲಿ ಮತ ಎಣಿಕೆ ನಡೆಯುತ್ತಿದೆ. ಇದನ್ನೂ ಓದಿ: ಸಿಎಂ ತವರು ಜಿಲ್ಲೆಯಲ್ಲಿ ಬಿಜೆಪಿಗೆ ಹಿನ್ನಡೆ – ಕಾಂಗ್ರೆಸ್‌ ಮುನ್ನಡೆ

    ಅಕ್ಟೋಬರ್ 30 ರಂದು ನಡೆದ ಉಪ ಚುನಾವಣೆಯಲ್ಲಿ ಸಿಂದಗಿಯಲ್ಲಿ ಶೇಕಡಾ 69.41ರಷ್ಟು ಮತದಾನ ನಡೆದಿತ್ತು. ಕಾಂಗ್ರೆಸ್‍ನ ಅಶೋಕ್ ಮನಗೂಳಿ, ಬಿಜೆಪಿಯ ರಮೇಶ್ ಭೂಸನೂರ, ಜೆಡಿಎಸ್‌ನ ನಾಜಿಯಾ ನಡುವೆ ತ್ರಿಕೋನ ಪೈಪೋಟಿ ಕಂಡುಬಂದಿತ್ತು.

  • ವೋಟು ಬೇಕಂದ್ರೆ ಹಣ ಕೊಡಿ- ತೆಲಂಗಾಣದಲ್ಲಿ ಮಹಿಳೆಯರಿಂದ ಬಹಿರಂಗ ಬೇಡಿಕೆ

    ವೋಟು ಬೇಕಂದ್ರೆ ಹಣ ಕೊಡಿ- ತೆಲಂಗಾಣದಲ್ಲಿ ಮಹಿಳೆಯರಿಂದ ಬಹಿರಂಗ ಬೇಡಿಕೆ

    ಹೈದರಾಬಾದ್: ನೋಟು ಕೊಟ್ಟರೆ ವೋಟು ಎಂದು ಮತದಾರರು ಹೇಳುವುದು ಸಾಮಾನ್ಯವಾಗಿಬಿಟ್ಟಿದೆ. ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘನೆ, ಕಠಿಣ ಕಾನೂನುಗಳಿಗೆ ಹೆದರಿ ತೆರೆಮರೆಯಲ್ಲಿ ಹಣ ನೀಡುವುದು ಮತ್ತು ಪಡೆಯುವುದು ನಡೆಯುತ್ತಿರುತ್ತದೆ. ಆದರೆ ತೆಲಂಗಾಣದಲ್ಲಿ ಬೀದಿಯಲ್ಲೇ ನಿಂತು ಮಹಿಳೆಯರು “ವೋಟು ಬೇಕಂದ್ರೆ ಹಣ ಕೊಡಿ” ಎಂದು ಬೀದಿಯಲ್ಲಿ ನಿಂತು ಜನಪ್ರತಿನಿಧಿಗಳಿಂದ ಬಹಿರಂಗ ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ.

    VOTE

    ತೆಲಂಗಾಣದ ಹುಜೂರಾಬಾದ್‍ನ ವಿಧಾನಸಭಾ ಕ್ಷೇತ್ರದ ಹಲವು ಕಡೆಗಳಲ್ಲಿ ಮತದಾರರು, ವಿಶೇಷವಾಗಿ ಮಹಿಳೆಯರು ಶನಿವಾರ ನಡೆಯಲಿರುವ ಉಪಚುನಾವಣೆಗೆ ಮೊದಲೇ ತಮ್ಮ ಅಮೂಲ್ಯ ಮತಕ್ಕಾಗಿ ಹಣ ನೀಡುವಂತೆ ಬಹಿರಂಗವಾಗಿಯೇ ಕೇಳುತ್ತಿದ್ದಾರೆ. ಇದನ್ನೂ ಓದಿ: ತರಕಾರಿ ಹಾರ ಧರಿಸಿ ಅಸೆಂಬ್ಲಿಗೆ ಸೈಕಲ್‍ನಲ್ಲಿ ತೆರಳಿದ ಪಾಕ್ ಸಚಿವ – ಫೋಟೋ ವೈರಲ್

    ಮತಕ್ಕಾಗಿ ಎಲ್ಲಾ ಪಕ್ಷಗಳು ಇನ್ನಿಲ್ಲದ ಪ್ರಯತ್ನಗಳನ್ನು ನಡೆಸುತ್ತಿವೆ. ಇದೇ ಸಂದರ್ಭದಲ್ಲಿ ಮತದಾರರು “ಇದು ನಮ್ಮ ಹಕ್ಕು, ನೀವು ನಮಗೆ ಹಣ ನೀಡಬೇಕು” ಎಂದು ಕೇಳುತ್ತಿದ್ದಾರೆ.

    ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರೊಂದಿಗೆ ಭಿನ್ನಾಭಿಪ್ರಾಯ ಉಂಟಾಗಿರುವ ಕಾರಣ ಮಾಜಿ ಆರೋಗ್ಯ ಸಚಿವ ಇಯಾತಲ ರಾಜೇಂದ್ರ ಅವರು ರಾಜೀನಾಮೆ ಸಲ್ಲಿಸಿದ್ದರು. ಈ ಸ್ಥಾನಕ್ಕೆ ಉಪ ಚುನಾವಣೆ ಘೋಷಿಸಲಾಗಿದೆ. ಇದನ್ನೂ ಓದಿ: ಪುನೀತ್ ರಾಜ್‌ಕುಮಾರ್‌ಗೆ ಲಘು ಹೃದಯಾಘಾತ

    “ರಾಜಕಾರಣಿಗಳು ಬೇರೆ ಕಡೆ ಹಣ ಹಂಚುತ್ತಿದ್ದಾರೆ. ಆದರೆ ನಮಗೆ ನೀಡಿಲ್ಲ. ಕೆಲವರಿಗೆ ಹೇಳಿದಷ್ಟು ಪೂರ್ತಿ ಹಣ ನೀಡಿಲ್ಲ” ಎಂದು ಮಹಿಳೆಯರು ಪ್ರತಿಭಟನೆಯನ್ನೇ ನಡೆಸಿದ್ದಾರೆ.

    MONEY

    ಕೆಲವು ಪಕ್ಷಗಳು ಹಣವನ್ನು ಹಂಚುತ್ತಿವೆ ಎಂಬ ಸುದ್ದಿ ಹರಿದಾಡಿದೆ. ಪರಿಣಾಮವಾಗಿ ರಂಗಪುರ್, ಕತ್ರಪಲ್ಲಿ, ಪೆದ್ದಪಾಪಯ್ಯ ಪಲ್ಲೆ ಗ್ರಾಮಗಳ ಮತದಾರರು ಹಣ ಸಿಗುತ್ತದೆಂದು ಕ್ಯೂ ನಿಂತಿದ್ದಾರೆ. ಆದರೆ ಯಾವುದೇ ರೀತಿಯ ಹಣ ವಿತರಣೆ ಆಗದ ಕಾರಣ ಮತದಾರರು ಪಕ್ಷಗಳ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

    ರಾಜಕೀಯ ನಾಯಕರು ಕೆಲವರಿಗೆ ಹಣ ನೀಡಿದ್ದಾರೆ. ಆದರೆ ನಮಗೆ ನೀಡಿಲ್ಲ. ನಾವೂ ಕೂಡ ಮತದಾರರು ಎಂದು ಮಹಿಳೆಯೊಬ್ಬರು ಮಾತನಾಡಿರುವ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

  • ದೊಡ್ಡಣ್ಣನಾಗಿ ಸ್ಪರ್ಧೆ ಮಾಡದಂತೆ ಹೇಳುವುದು ನನ್ನ ಕರ್ತವ್ಯ: ಲಖನ್‍ಗೆ ರಮೇಶ್ ಟಾಂಗ್

    ದೊಡ್ಡಣ್ಣನಾಗಿ ಸ್ಪರ್ಧೆ ಮಾಡದಂತೆ ಹೇಳುವುದು ನನ್ನ ಕರ್ತವ್ಯ: ಲಖನ್‍ಗೆ ರಮೇಶ್ ಟಾಂಗ್

    ಬೆಳಗಾವಿ: ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡದಂತೆ ಕಾಂಗ್ರೆಸ್ ಮುಖಂಡ ಲಖನ್ ಜಾರಕಿಹೊಳಿ ಅವರಿಗೆ ಹೇಳಿದ್ದೇನೆ. ದೊಡ್ಡಣ್ಣನಾಗಿ ನನ್ನ ಕರ್ತವ್ಯ ಮಾಡಿದ್ದೇನೆ. ಇನ್ನು ಸ್ಪರ್ಧೆ ಮಾಡುವುದು, ಬಿಡುವುದು ಅವರಿಗೆ ಬಿಟ್ಟ ವಿಚಾರ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಟಾಂಗ್ ಕೊಟ್ಟಿದ್ದಾರೆ.

    ಗೋಕಾಕ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ. ಯಾವುದೇ ಕಾರಣಕ್ಕೂ ಸಹೋದರ ರಮೇಶ್ ಕುಮಾರ್ ಅವರನ್ನು ಭೇಟಿಯಾಗಲ್ಲ ಎಂಬ ಲಖನ್ ಜಾರಕಿಹೊಳಿ ಅವರ ಹೇಳಿಕೆಗೆ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಅನರ್ಹ ಶಾಸಕರು, ದೊಡ್ಡವನಾಗಿ ತಿಳುವಳಿಕೆ ಹೇಳಿದ್ದೇನೆ. ನಾಮಪತ್ರ ಸಲ್ಲಿಸಿದ ಬಳಿಕ ಸ್ಪರ್ಧೆಯನ್ನ ಎದುರಿಸಲೇ ಬೇಕು. ಅದು ಯಾರೇ ಆಗಿದ್ದರೂ ಸರಿ ಎಂದರು.

    ಸುಪ್ರೀಂಕೋರ್ಟ್ ಅನುಮತಿ ನೀಡಿದರೆ ನಾವು ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇವೆ. ಸೋಮವಾರ ಸ್ಪರ್ಧೆಯ ಬಗ್ಗೆ ಸ್ಪಷ್ಟನೆ ನೀಡುತ್ತೇವೆ. ತೀರ್ಪು ನಮ್ಮ ಪರವಾಗಿ ಬರುತ್ತದೆ ಎಂಬ ವಿಶ್ವಾಸವಿದೆ. ಉಪ ಚುನಾವಣೆ ಸಂಬಂಧ ಗುರುವಾರ ಕ್ಷೇತ್ರದ ಜನರು ಹಾಗೂ ಬೆಂಬಲಿಗರ ಜೊತೆಗೆ ಸಭೆ ನಡೆಸುತ್ತೇನೆ ಎಂದು ತಿಳಿಸಿದರು.

    ಮಾಜಿ ಸಚಿವ ಸತೀಶ್ ಜಾರಕಿಹೊಳಿ ಎಂದು ಮಾಧ್ಯಮಗಳು ಪ್ರಶ್ನೆ ಕೇಳಲು ಮುಂದಾಗುತ್ತಿದ್ದಂತೆ, ಈಗ ಎನೂ ಹೇಳುವುದಿಲ್ಲ. ಮುಂದೆ ಮಾತನಾಡುತ್ತೇನೆ ಎಂದು ಜಾರಿಕೊಂಡರು.