Tag: cabinet

  • 1,545 ಕೋಟಿ ನೆರೆ ಪರಿಹಾರ ಕೇಳಲು ಕೇಂದ್ರಕ್ಕೆ ಮನವಿ: ಕ್ಯಾಬಿನೆಟ್ ಸಭೆ ನಿರ್ಧಾರ

    1,545 ಕೋಟಿ ನೆರೆ ಪರಿಹಾರ ಕೇಳಲು ಕೇಂದ್ರಕ್ಕೆ ಮನವಿ: ಕ್ಯಾಬಿನೆಟ್ ಸಭೆ ನಿರ್ಧಾರ

    ಬೆಂಗಳೂರು: ಮುಂಗಾರು ಮಳೆ ಹಾನಿಗೆ ಸಂಬಂಧಿಸಿದಂತೆ ಪರಿಹಾರ ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲು ಕ್ಯಾಬಿನೆಟ್ (Cabinet) ತೀರ್ಮಾನಿಸಿದೆ.

    ಮೂಲಭೂತ ಸೌಕರ್ಯಗಳ ಹಾನಿಗೆ ಎನ್‌ಡಿಆರ್‌ಎಫ್ ಅಡಿ 1,545 ಕೋಟಿ ರೂ. ಆರ್ಥಿಕ ಸಹಾಯ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಸರ್ಕಾರ ವರದಿ ಸಿದ್ಧಪಡಿಸಿದೆ. ಆದರೆ ಬೆಳೆ ನಷ್ಟದ ಬಗ್ಗೆ ಪ್ರತ್ಯೇಕವಾಗಿ ಮನವಿ ಸಲ್ಲಿಸಿ ಪರಿಹಾರ ಕೇಳುತ್ತಿದ್ದೇವೆ ಅಂತಾ ಕಾನೂನು ಸಚಿವ ಹೆಚ್.ಕೆ.ಪಾಟೀಲ್ (H K Patil) ಸ್ಪಷ್ಟಪಡಿಸಿದ್ದಾರೆ.

    ಇನ್ನು ಒಳ ಮೀಸಲಾತಿ ವಿಚಾರವಾಗಿ ಶೀಘ್ರದಲ್ಲೇ ಮಸೂದೆಗೆ ಕ್ರಮ ವಹಿಸುತ್ತೇವೆ. ಮುಂದಿನ ಕ್ಯಾಬಿನೆಟ್‌ನಲ್ಲಿ ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ.

  • ನಾವು ಮಾತಾಡಿದಷ್ಟು ಪಕ್ಷಕ್ಕೆ ಡ್ಯಾಮೇಜ್, ಸೈಲೆಂಟ್ ಆಗಿ ಇರದಿದ್ರೆ ವಿಪಕ್ಷಗಳಿಗೆ ಆಹಾರ ಆಗ್ತೀವಿ: ರಾಮಲಿಂಗಾ ರೆಡ್ಡಿ

    ನಾವು ಮಾತಾಡಿದಷ್ಟು ಪಕ್ಷಕ್ಕೆ ಡ್ಯಾಮೇಜ್, ಸೈಲೆಂಟ್ ಆಗಿ ಇರದಿದ್ರೆ ವಿಪಕ್ಷಗಳಿಗೆ ಆಹಾರ ಆಗ್ತೀವಿ: ರಾಮಲಿಂಗಾ ರೆಡ್ಡಿ

    ರಾಮನಗರ: ಸಂಪುಟ ವಿಸ್ತರಣೆ, ಸಿಎಂ ಬದಲಾವಣೆ ವಿಚಾರ ಯಾವುದನ್ನೂ ನಾನು ಮಾತನಾಡಲ್ಲ. ನಾವು ಮಾತನಾಡಿದಷ್ಟು ಪಕ್ಷಕ್ಕೆ ಡ್ಯಾಮೇಜ್ ಆಗುತ್ತದೆ ಎಂದು ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಹೇಳಿದ್ದಾರೆ.

    ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯಲ್ಲಿ ಹಿರಿಯ ಸಚಿವರಿಗೆ ಕೋಕ್ ಕೊಡುವ ವಿಚಾರ ಕುರಿತು ರಾಮನಗರದಲ್ಲಿ (Ramanagara) ಮಾತನಾಡಿದ ಅವರು, ಯಾರು ಏನು ಮಾತನಾಡಿದ್ದಾರೋ ಗೊತ್ತಿಲ್ಲ. ಎಲ್ಲರಿಗೂ ಸೇರಿ ಹೇಳ್ತೀನಿ, ಮಾತನಾಡಿದಷ್ಟು ಪಕ್ಷಕ್ಕೆ ಹಾನಿ. ಸಾಧ್ಯವಾದಷ್ಟು ಎಲ್ಲರೂ ಸೈಲೆಂಟ್ ಆಗಿ ಇರಿ. ಬಿಜೆಪಿಯಲ್ಲಿರುವಷ್ಟು (BJP) ಬಣ ನಮ್ಮಲ್ಲಿ ಇಲ್ಲ. ನಮ್ಮಲ್ಲಿ ಏನೇ ಇದ್ದರೂ ನಾಲ್ಕು ಗೋಡೆ ಮಧ್ಯೆ ಚರ್ಚೆ ಮಾಡಬೇಕು. ಮಾಧ್ಯಮಗಳ ಮುಂದೆ ಮಾತನಾಡಿದ್ರೆ ವಿಪಕ್ಷಗಳಿಗೆ ಆಹಾರ ಆಗುತ್ತೇವೆ. ಇದನ್ನ ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದು ಕಾಂಗ್ರೆಸ್ (Congress) ನಾಯಕರಿಗೆ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಸ್ವಾಮೀಜಿಯಾಗಿ ಕೀಳುಮಟ್ಟದ ಹೇಳಿಕೆ ನೀಡೋದು ಸರಿಯಲ್ಲ, ಗಂಭೀರವಾಗಿರಬೇಕು – ಕನ್ನೇರಿ ಶ್ರೀಗಳಿಗೆ ಸುಪ್ರೀಂ ತರಾಟೆ

    ಇನ್ನೂ ಆರ್‌ಎಸ್‌ಎಸ್ ಚಟುವಟಿಕೆ ನಿರ್ಬಂಧಕ್ಕೆ ಹೈಕೋರ್ಟ್ ತಡೆ ವಿಚಾರ ಕುರಿತು ಮಾತನಾಡಿ, ಸರ್ಕಾರದ ಸರ್ಕ್ಯುಲರ್ ಮೇಲೆ ಕೋರ್ಟ್ ಆದೇಶ ಮಾಡಿದೆ. ಮುಖ್ಯಮಂತ್ರಿಗಳು ಅಪೀಲ್ ಹಾಕುತ್ತೇವೆ ಅಂತ ಹೇಳಿದ್ದಾರೆ. ಇದು ಹೊಸದಾಗಿ ನಾವು ಮಾಡಿರುವ ಕಾನೂನು ಅಲ್ಲ. ಹಿಂದೆ ಜಗದೀಶ್ ಶೆಟ್ಟರ್ ಅವರ ಕಾಲದಲ್ಲಿ ಮಾಡಿದ್ದ ಆದೇಶ. ಶಾಲಾ, ಕಾಲೇಜು ಆವರಣದಲ್ಲಿ ಯಾವುದೇ ಕಾರ್ಯಕ್ರಮ ಮಾಡಬಾರದು ಅಂತ ಮಾಡಿದ್ದರು. ಇದು ಎಲ್ಲಾ ಪಕ್ಷಗಳು, ಎಲ್ಲಾ ಸಂಘಸಂಸ್ಥೆಗಳಿಗೂ ಅನ್ವಯ ಆಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಕಾರಿಲ್ಲ ಅಂದ್ರೆ ಹೆಣ್ಣು ಕೊಡಲ್ಲ ಅಂತ ಟನಲ್ ರಸ್ತೆ ಮಾಡೋಕೆ ಡಿಕೆಶಿ ಹೊರಟಿದ್ದಾರೆ: ತೇಜಸ್ವಿ ಸೂರ್ಯ ವಾಗ್ದಾಳಿ

  • ಗುಜರಾತ್‌ ಸಿಎಂ ಹೊರತು ಪಡಿಸಿ ಎಲ್ಲಾ 16 ಸಚಿವರ ರಾಜೀನಾಮೆ

    ಗುಜರಾತ್‌ ಸಿಎಂ ಹೊರತು ಪಡಿಸಿ ಎಲ್ಲಾ 16 ಸಚಿವರ ರಾಜೀನಾಮೆ

    ಗಾಂಧಿನಗರ: ಅಚ್ಚರಿಯ ಬೆಳವಣಿಗೆಯಲ್ಲಿ ಗುಜರಾತ್‌ (Gujarat) ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ (Bhupendra Patel) ಹೊರತುಪಡಿಸಿ ಎಲ್ಲಾ 16 ಸಚಿವರು ಗುರುವಾರ ರಾಜೀನಾಮೆ ಸಲ್ಲಿಸಿದ್ದಾರೆ.

    ಬಿಜೆಪಿ (BJP) ಪಕ್ಷವು ಎಲ್ಲಾ 16 ಸಚಿವರ ರಾಜೀನಾಮೆಗಳನ್ನು ತೆಗೆದುಕೊಂಡಿದೆ. ಮುಖ್ಯಮಂತ್ರಿ ಪಟೇಲ್ ಹೊರತುಪಡಿಸಿ ಎಲ್ಲಾ ಸಚಿವರು ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.

    ಶುಕ್ರವಾರ ಬೆಳಿಗ್ಗೆ 11:30 ಕ್ಕೆ ಭೂಪೇಂದ್ರ ಪಟೇಲ್ ಅವರ ಸಚಿವ ಸಂಪುಟ ಪುನರ್‌ಚನೆ ಕಾರ್ಯಕ್ರಮ ನಿಗದಿಯಾಗಿದೆ. ಈ ಕಾರ್ಯಕ್ರಮದ ಒಂದು ದಿನ ಮುಂಚಿತವಾಗಿ ಸಚಿವರಿಂದ ರಾಜೀನಾಮೆಗಳನ್ನು ತೆಗೆದುಕೊಳ್ಳಲಾಗಿದೆ.  ಇದನ್ನೂ ಓದಿ:  ಭಾರತದ ಆರ್ಥಿಕತೆಗೆ ರಷ್ಯಾದ ತೈಲ ಮುಖ್ಯ, ನಮ್ಮ ಸಂಬಂಧ ನಂಬಿಕೆ ಮೇಲೆ ಕಟ್ಟಿರುವ ಸೇತುವೆ: ರಷ್ಯಾ

    ರಾಜಧಾನಿ ಗಾಂಧಿನಗರದ ಮಹಾತ್ಮ ಮಂದಿರದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ರಾಜ್ಯಪಾಲ ಆಚಾರ್ಯ ದೇವವ್ರತ್‌ಜಿ ಅವರು ಸಂಪುಟದ ಸಚಿವರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ. ಗುಜರಾತ್‌ ಸಚಿವ ಸಂಪುಟದಲ್ಲಿ ಸಿಎಂ ಪಟೇಲ್ ಸೇರಿದಂತೆ 17 ಮಂದಿ ಸಚಿವರಿದ್ದರು. ಇವರಲ್ಲಿ ಎಂಟು ಮಂದಿ ಕ್ಯಾಬಿನೆಟ್ ದರ್ಜೆಯ ಮಂತ್ರಿಗಳಾಗಿದ್ದರೆ, ಇತರರು ರಾಜ್ಯ ಸಚಿವರಾಗಿದ್ದರು.  ಇದನ್ನೂ ಓದಿ:  ನಾಮಪತ್ರ ಸಲ್ಲಿಕೆಗೆ ನಾಳೆ ಡೆಡ್‌ಲೈನ್‌| ಇನ್ನೂ ಅಂತಿಮಗೊಳ್ಳದ ಸೀಟ್‌ ಹಂಚಿಕೆ – ಲಾಲೂಗೆ ರಾಹುಲ್‌ ಕರೆ

    ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಬುಡಕಟ್ಟು ಶಾಸಕರನ್ನು ಉಪಮುಖ್ಯಮಂತ್ರಿ ಹುದ್ದೆಗೆ ಪರಿಗಣಿಸಲು ಬಿಜೆಪಿ ಮುಂದಾಗಿದೆ. ಆಪ್‌ ಬುಡಕಟ್ಟು ಜನರನ್ನು ಸೆಳೆಯುತ್ತಿರುವ ಕಾರಣ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗುತ್ತಿದೆ.

    ಹೊಸ ಸಂಪುಟವು 23 ಸದಸ್ಯರನ್ನು ಹೊಂದುವ ಸಾಧ್ಯತೆಯಿದೆ. ಜಾತಿ ಮತ್ತು ಪ್ರಾದೇಶಿಕ ಸಮೀಕರಣಗಳನ್ನು ಮಾಡಿ ಹೊಸ ಸಂಪುಟ ರಚನೆಗೆ ಬಿಜೆಪಿ ಈಗ ಕೈಹಾಕಿದೆ. 182 ಸದಸ್ಯರ ವಿಧಾನಸಭೆಯನ್ನು ಹೊಂದಿರುವ ಗುಜರಾತ್‌ನಲ್ಲಿ ಗರಿಷ್ಠ 27 ಮಂತ್ರಿಗಳಿರಬಹುದು. ಹೊಸ ಸಂಪುಟದಲ್ಲಿ ಯುವ ಮತ್ತು ಮಹಿಳಾ ನಾಯಕಿಯರಿಗೆ ಹೆಚ್ಚಿನ ಪ್ರಾತಿನಿಧ್ಯ ದೊರೆಯುವ ಸಾಧ್ಯತೆಯಿದೆ.

  • ಸಚಿವ ಸಂಪುಟ ಪುನಾರಚನೆ ವಿಚಾರ ನನಗೆ ಗೊತ್ತಿಲ್ಲ: ಡಿಕೆಶಿ

    ಸಚಿವ ಸಂಪುಟ ಪುನಾರಚನೆ ವಿಚಾರ ನನಗೆ ಗೊತ್ತಿಲ್ಲ: ಡಿಕೆಶಿ

    ಬೆಂಗಳೂರು: ಸಚಿವ ಸಂಪುಟದಲ್ಲಿ (Cabinet) ಬದಲಾವಣೆ ವಿಚಾರವಾಗಿ ನನಗೆ ಯಾವುದೇ ಮಾಹಿತಿ ಇಲ್ಲ. ಇದು ಪಕ್ಷ ಹಾಗೂ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಹೇಳಿದರು.

    ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ನಾನು ಮಾತನಾಡುವುದಿಲ್ಲ. ನನ್ನ ಜೊತೆ ಈ ವಿಚಾರ ಚರ್ಚೆ ಮಾಡಿದರೆ ನಾನು ನನ್ನ ಸಲಹೆ ನೀಡುತ್ತೇನೆ. ಈ ವಿಚಾರವಾಗಿ ಅನಗತ್ಯ ಚರ್ಚೆ ಮಾಡಿ ಗೊಂದಲ ಸೃಷ್ಟಿಸಬೇಡಿ ಎಂದು ನಿಮ್ಮಲ್ಲಿ ಮನವಿ ಮಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಭಯೋತ್ಪಾದಕ ಗುಂಪು ಜೆಇಎಂ ಮಹಿಳಾ ವಿಭಾಗ ಆರಂಭ – ‘ಆಪರೇಷನ್‌ ಸಿಂಧೂರ’ದಲ್ಲಿ ಗಂಡನ ಕಳೆದುಕೊಂಡ ಮಹಿಳೆಗೆ ಚುಕ್ಕಾಣಿ

    ಮುಖ್ಯಮಂತ್ರಿಗಳು ಔತಣಕೂಟ ಆಯೋಜಿಸಿರುವ ಬಗ್ಗೆ ಕೇಳಿದಾಗ, ಇದರಲ್ಲಿ ತಪ್ಪೇನಿದೆ? ಒಟ್ಟಿಗೆ ಸೇರಿ ಊಟ ಮಾಡಿ, ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ಮಾಡುವುದು ಸಹಜ ಎಂದರು. ಇದನ್ನೂ ಓದಿ: ವೀರೇಂದ್ರ ಪಪ್ಪಿ ವಿರುದ್ಧದ ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಕೇಸ್ – ಚಳ್ಳಕೆರೆಯ ಹಲವೆಡೆ ಇಡಿ ದಾಳಿ

    ಬಿಗ್ ಬಾಸ್ ವಿಚಾರವಾಗಿ ಪ್ರತಿಕ್ರಿಯಿಸಿ, ಬುಧವಾರ ರಾತ್ರಿ ಡಿಸಿಗೆ ಕರೆ ಮಾಡಿ ಜಾಲಿವುಡ್ ಸ್ಟುಡಿಯೋದವರು ತಮ್ಮ ತಪ್ಪನ್ನು ಸರಿಪಡಿಸಿಕೊಳ್ಳಲು ಒಂದು ಅವಕಾಶ ಕಲ್ಪಿಸಿ ಎಂದು ಸೂಚಿಸಿದ್ದೇನೆ. ನಮ್ಮ ಉದ್ಯಮ ಬೆಳೆಯಬೇಕು. ಇದು ಹೆಚ್ಚಿನ ಮಾಲಿನ್ಯ ಉಂಟು ಮಾಡಲು ದೊಡ್ಡ ಕಾರ್ಖಾನೆಯಲ್ಲ. ಸಣ್ಣಪುಟ್ಟ ನಿಯಮ ಉಲ್ಲಂಘನೆಯಾಗಿದ್ದರೆ ಸರಿಪಡಿಸಿಕೊಳ್ಳಿ. ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಾವಳಿಯನ್ನು ಪಾಲನೆ ಮಾಡಿ ಎಂದು ಸ್ಟುಡಿಯೋದವರಿಗೂ ಹೇಳಿ ಕಳುಹಿಸಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಮೈಸೂರಲ್ಲಿ 10 ವರ್ಷದ ಬಾಲಕಿ ಮೇಲೆ ರೇಪ್ & ಮರ್ಡರ್; ಆರೋಪಿ ಗುರುತು ಪತ್ತೆ

  • ಹೆಣ್ಣುಮಕ್ಕಳಿಗೆ ಋತುಚಕ್ರ ರಜೆಗೆ ಕ್ಯಾಬಿನೆಟ್ ಒಪ್ಪಿಗೆ – ತಿಂಗಳಲ್ಲಿ 1 ದಿನ ವೇತನ ಸಹಿತ ರಜೆ

    ಹೆಣ್ಣುಮಕ್ಕಳಿಗೆ ಋತುಚಕ್ರ ರಜೆಗೆ ಕ್ಯಾಬಿನೆಟ್ ಒಪ್ಪಿಗೆ – ತಿಂಗಳಲ್ಲಿ 1 ದಿನ ವೇತನ ಸಹಿತ ರಜೆ

    ಬೆಂಗಳೂರು: ಗ್ಯಾರಂಟಿ ಮೂಲಕ ಹೆಣ್ಣುಮಕ್ಕಳ ಮನಸು ಗೆದ್ದಿದ್ದ ಕಾಂಗ್ರೆಸ್ ಸರ್ಕಾರ (Congress Government)  ಹೆಣ್ಣುಮಕ್ಕಳಿಗೆ ಮತ್ತೊಂದು ಗಿಫ್ಟ್ ಕೊಟ್ಟಿದೆ. ಋತುಚಕ್ರದ ಸಮಯದಲ್ಲಿ ಒಂದು ದಿನ ರಜೆ (Menstrual Leave) ಕೊಡುವ ಮಹತ್ವದ ತೀರ್ಮಾನಕ್ಕೆ ಇಂದಿನ ಕ್ಯಾಬಿನೆಟ್ ಒಪ್ಪಿದೆ.

    ಕಾರ್ಮಿಕ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಋತು ಚಕ್ರ ರಜೆ ನೀತಿ 2025 (Menstrual Leave Policy, 2025)ಗೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ರಾಜ್ಯ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್, MNC, ಐಟಿ ಮತ್ತು ಇತರೆ ಖಾಸಗಿ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಸಂಬಳ ಸಹಿತ ಋತು ಚಕ್ರ ರಜೆ ನೀಡಲಾಗುತ್ತದೆ. ವರ್ಷಕ್ಕೆ 12 ದಿನ ರಜೆ ನೀಡುವುದಾಗಿದ್ದು, ಯಾವ ದಿನ ರಜೆ ಪಡೆಬೇಕು ಅಂತ ಹೆಣ್ಣುಮಕ್ಕಳು ತೀರ್ಮಾನ ಮಾಡಲಿದ್ದಾರೆ.  ಇದನ್ನೂ ಓದಿ:  ಸಂಪುಟ ಪುನರ್‌ಚನೆ ವದಂತಿ ಬೆನ್ನಲ್ಲೇ ಮೂವರು ಸಚಿವರಿಂದ ಬ್ರೇಕ್‌ಫಾಸ್ಟ್‌ ಮೀಟಿಂಗ್‌

     

    ಕ್ಯಾಬಿನೆಟ್ ಸಭೆಯ ಬಳಿಕ ಮಾತನಾಡಿದ ಸಚಿವ ಸಂತೋಷ ಲಾಡ್, ಹೆಣ್ಣು ಮಕ್ಕಳಿಗೆ ಋತು ಚಕ್ರ ರಜೆ ನೀಡಲು ಕ್ಯಾಬಿನೆಟ್ ನಲ್ಲಿ ಒಪ್ಪಿಗೆ ಆಗಿದೆ. ವರ್ಷದಲ್ಲಿ 12 ದಿನ ರಜೆ ಸಂಬಳ ಸಹಿತ ಕೊಡಲಾಗುತ್ತದೆ. ತಿಂಗಳಲ್ಲಿ ಋತುಚಕ್ರವಾದಾಗ ಯಾವ ದಿನ ಬೇಕಾದರೂ  ಒಂದು ದಿನ ರಜೆ ತೆಗೆದುಕೊಳ್ಳಬಹುದು. ಕಾನೂನು ಇಲಾಖೆ ಜೊತೆ ಚರ್ಚೆ ಸೇರಿ ಅನೇಕ ಚರ್ಚೆಗಳು ಆಗಿದೆ. ಯಾವತ್ತು ರಜೆ ಬೇಕು ಅಂತ ಹೆಣ್ಣುಮಕ್ಕಳು ತೀರ್ಮಾನ ಮಾಡಿಕೊಳ್ಳಬೇಕು. ಹೆಣ್ಣು ಮಕ್ಕಳ ಪರ ಸರ್ಕಾರ ಈ ಮಹತ್ವದ ನಿರ್ಧಾರ ಮಾಡಿದೆ. ಕ್ಯಾಬಿನೆಟ್ ನಲ್ಲಿ ಒಪ್ಪಿಗೆಯಾಗಿದ್ದು, ಆದಷ್ಟೂ ಬೇಗ ಬಿಲ್ ತಂದು ದೊಡ್ಡ ಕಾರ್ಯಕ್ರಮ ಮಾಡಿ ಅನುಷ್ಠಾನ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ:  ಒಂದು ಬಾರಿ ನೋಟಿಸ್ ಕೊಟ್ಟ ಮೇಲೆ ಅದು ಸರಿ ಆಗೋವರೆಗೂ ಬೀಗ ತೆಗೆಯೋದು ಸರಿಯಲ್ಲ: ರಾಮಲಿಂಗಾರೆಡ್ಡಿ

    ಈಗಾಗಲೇ ಬಿಹಾರ ಮತ್ತು ಕೇರಳದಲ್ಲಿ ಉದ್ಯೋಗಸ್ಥ ಮಹಿಳೆಯರಿಗೆ ಋತು ಚಕ್ರ ರಜೆ ನೀಡಲಾಗುತ್ತದೆ.
  • ಸಂಪುಟ ವಿಸ್ತರಣೆ ವೇಳೆ ನನಗೆ ಸಚಿವ ಸ್ಥಾನ ಸಿಗಲಿದೆ: ನಾರಾಯಣಸ್ವಾಮಿ

    ಸಂಪುಟ ವಿಸ್ತರಣೆ ವೇಳೆ ನನಗೆ ಸಚಿವ ಸ್ಥಾನ ಸಿಗಲಿದೆ: ನಾರಾಯಣಸ್ವಾಮಿ

    ಬೆಂಗಳೂರು: ಈ ಬಾರಿ ಸಚಿವ ಸಂಪುಟ ವಿಸ್ತರಣೆ ಆದಾಗ ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ ಎಂದು ಬಂಗಾರಪೇಟೆ ಕಾಂಗ್ರೆಸ್ ಶಾಸಕ ನಾರಾಯಣಸ್ವಾಮಿ (Naryanaswamy) ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ವಿಧಾನಸೌಧದಲ್ಲಿ ಮಾತನಾಡಿದ ಅವರು, ನವೆಂಬರ್‌ಗೆ ಸಂಪುಟ ವಿಸ್ತರಣೆ ಆಗಬಹುದು. ಬಿಹಾರ ಚುನಾವಣೆ (Bihar Election) ಆದ ಮೇಲೆ ವಿಸ್ತರಣೆ ಆಗಬಹುದು. 2.5 ವರ್ಷ ಆದ ಮೇಲೆ ಮಂತ್ರಿ ಕೊಡ್ತೀವಿ ಅಂತ ಯಾರಿಗೆ ಹೈಕಮಾಂಡ್ ಮಾತು ಕೊಟ್ಟಿದ್ದರೋ ಅವರಿಗೆ ಸಚಿವ ಸ್ಥಾನ ಕೊಡಬೇಕು. ದಲಿತ ಬಲಗೈ ಸಮುದಾಯ ಕರ್ನಾಟಕದಲ್ಲಿ ಜಾಸ್ತಿ ಜನ ಇದ್ದಾರೆ. ಚನ್ನಯ್ಯ ನಂತರ ಕೋಲಾರ ಸೇರಿ ಮೂರು ಜಿಲ್ಲೆಗಳಲ್ಲಿ ಬಲಗೈ ಸಮುದಾಯಕ್ಕೆ ಅನೇಕ ವರ್ಷಗಳಿಂದ ಮಂತ್ರಿ ಸ್ಥಾನ ಕೊಟ್ಟಿಲ್ಲ.ಹೈಕಮಾಂಡ್ ಮೇಲೆ ವಿಶ್ವಾಸ ನನಗೆ ಇದೆ. ಈ ಬಾರಿ ಮಂತ್ರಿ ಸ್ಥಾನ ಸಿಗುವ ವಿಶ್ವಾಸ ಇದೆ ಎಂದರು. ಇದನ್ನೂ ಓದಿ:  ರಾವಲ್ಪಿಂಡಿ ಚಿಕನ್ ಟಿಕ್ಕಾ ಮಸಾಲದಿಂದ ಬಾಲಕೋಟ್ ತಿರಮಿಸು ವರೆಗೆ – ಊಟದ ಮೆನು ಮೂಲಕ ಪಾಕ್‌ಗೆ ಭಾರತೀಯ ವಾಯುಸೇನೆ ವ್ಯಂಗ್ಯ

     

    ನಮ್ಮ ಜಿಲ್ಲೆಯಲ್ಲಿ ನಾನು ಸೀನಿಯರ್. ಹೆಚ್ಚು ಬಾರಿ ಗೆದ್ದಿರುವುದರಿಂದ ಪಕ್ಷ ಈ ಬಾರಿ ನನ್ನನ್ನು ಮಂತ್ರಿ ಮಾಡಬೇಕು ಎಂದು ಮನವಿ ಮಾಡುತ್ತೇನೆ. ರೂಪಕಲಾ ಅವರಿಗೆ ಸಚಿವ ಸ್ಥಾನ ಕೊಡುವುದು ಹೈಕಮಾಂಡ್‌ಗೆ ಬಿಟ್ಟಿದ್ದು. ನಾನು ಹಿರಿಯ ನನಗೆ ಸಚಿವ ಸ್ಥಾನ ಸಿಗೋ ವಿಶ್ವಾಸ ಇದೆ ಎಂದರು.

  • ಯಾವುದೇ ಕ್ಷಣದಲ್ಲಿ ಸಚಿವ ಸಂಪುಟ ವಿಸ್ತರಣೆ, ಸಿದ್ದರಾಮಯ್ಯ 5 ವರ್ಷ ಸಿಎಂ: ಜಮೀರ್‌ ಅಹ್ಮದ್‌

    ಯಾವುದೇ ಕ್ಷಣದಲ್ಲಿ ಸಚಿವ ಸಂಪುಟ ವಿಸ್ತರಣೆ, ಸಿದ್ದರಾಮಯ್ಯ 5 ವರ್ಷ ಸಿಎಂ: ಜಮೀರ್‌ ಅಹ್ಮದ್‌

    ಬಳ್ಳಾರಿ: ಯಾವ ಕ್ಷಣದಲ್ಲಾದರೂ ಸಚಿವ ಸಂಪುಟ ವಿಸ್ತರಣೆಯಾಗಬಹುದು ಎಂದು ವಕ್ಫ್‌ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್‌ (Zameer Ahmad) ಹೇಳಿದ್ದಾರೆ.

    ಕೆಡಿಪಿ ಸಭೆಗೆ ಆಗಮಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ಕೈಯಲ್ಲಿ ಯಾವುದೇ ನಿರ್ಧಾರ ಇಲ್ಲ. ಎಲ್ಲವನ್ನೂ ಹೈಕಮಾಂಡ್ ನೋಡಿಕೊಳ್ಳಲಿದೆ. ನಾಗೇಂದ್ರ ಮತ್ತೇ ಸಚಿವರಾಗ್ತಾರೆ. 10 ದಿನದಲ್ಲಿ ನಾಗೇಂದ್ರ ಅವರಿಗೆ ಸಚಿವಗಿರಿ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ರಾಜ್ಯದಲ್ಲಿ ಸಿಎಂ ಬದಲಾವಣೆ ಆಗುತ್ತಾರಾ ಎಂಬ ಪ್ರಶ್ನೆಗೆ, ಸದ್ಯಕ್ಕೆ ಸಿಎಂ ಸ್ಥಾನ ಖಾಲಿಯಿಲ್ಲ. ಐದು ವರ್ಷ ಸಿದ್ದರಾಮಯ್ಯ ಮುಂದುವರೆಯುತ್ತಾರೆ ಎಂದು ಪ್ರಶ್ನಿಸಿದರು.

     

    ಒಂದು ವರ್ಷದ ನಂತರ ಜಿಲ್ಲೆಗೆ ಆಗಮಿಸಿದ್ದಕ್ಕೆ  ಕೇಳಿದ ಪ್ರಶ್ನೆಗೆ,  ಬಳ್ಳಾರಿಯ ಯಾವ ಕೆಲಸಗಳು ಬಾಕಿ ಉಳಿದಿಲ್ಲ. ಎಲ್ಲಾ ಕೆಲಸ ಕೆಲಸ ಕಾರ್ಯಗಳು ನಡೆಯುತ್ತಿವೆ. ನಾಗೇಂದ್ರ ಮೂಲಕ ಸಮಸ್ಯೆಗಳು ನನಗೆ ಮಾಹಿತಿ ಬರುತ್ತಿವೆ. ಇನ್ನು ಮುಂದೆ ಬಳ್ಳಾರಿಗೆ ಬರುತ್ತೇನೆ ಎಂದು ಹೇಳಿದರು.

    ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ನಾಲ್ಕು ಸ್ಥಳಗಳನ್ನು ಗುರುತಿಸಲಾಗಿದೆ. ಬಳ್ಳಾರಿ ಶಾಸಕರೊಂದಿಗೆ ಸೇರಿ ಸ್ಥಳ ಪರಿಶೀಲನೆ ಮಾಡುತ್ತೇವೆ. ಇಂದು ಜಾಗ ಅಂತಿಮವಾಗಲಿದ್ದು, ಅದ್ಧೂರಿಯಾಗಿ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ತಿಳಿಸಿದರು.

  • ಕ್ಯಾಬಿನೆಟ್‌ನಲ್ಲಿ ಗೆರಿಲ್ಲಾ ಮಾದರಿ ಪೊಲಿಟಿಕಲ್ ಆಟ್ಯಾಕ್ – ಸಿಎಂ ಸೇರಿ ಹಲವರಿಗೆ ಶಾಕ್ ಕೊಟ್ಟ ಸಚಿವರ ಗುಂಪು

    ಕ್ಯಾಬಿನೆಟ್‌ನಲ್ಲಿ ಗೆರಿಲ್ಲಾ ಮಾದರಿ ಪೊಲಿಟಿಕಲ್ ಆಟ್ಯಾಕ್ – ಸಿಎಂ ಸೇರಿ ಹಲವರಿಗೆ ಶಾಕ್ ಕೊಟ್ಟ ಸಚಿವರ ಗುಂಪು

    ಬೆಂಗಳೂರು: ಗುರುವಾರ (ಸೆ.18) ಕ್ಯಾಬಿನೆಟ್‌ನಲ್ಲಿ (Cabinet) ಗೆರಿಲ್ಲಾ ಮಾದರಿಯ ಪೊಲಿಟಿಕಲ್ ಆಟ್ಯಾಕ್ ನಡೆದಿದೆ! ಯೋಜಿತವಾಗಿ ಪ್ಲ್ಯಾನ್ ಮಾಡಿ ಗುಟ್ಟಾಗಿ ಇಟ್ಟಿದ್ದ ಸಚಿವರ ಒಂದು ಗುಂಪು, ಇದ್ದಕ್ಕಿದ್ದಂತೆ ಜಾತಿಗಣತಿ (Caste Census) ಪ್ರಸ್ತಾಪಿಸಿದ್ರು ಎನ್ನಲಾಗಿದೆ.

    ಕ್ಯಾಬಿನೆಟ್ ಅಂತ್ಯದಲ್ಲಿ ಜಾತಿಗಣತಿ ವಿಚಾರ ಪ್ರಸ್ತಾಪಿಸಿ ಆಟ್ಯಾಕ್ ಮಾಡಲು ಪ್ಲ್ಯಾನ್ ಮಾಡಿದ್ದ ಸಚಿವರ ಗುಂಪು, ಈ ಮೊದಲೇ ಯೋಜಿತವಾಗಿ ಆಪರೇಷನ್ ರೆಡಿ ಮಾಡಿದ್ದರಂತೆ. ಸಿಎಂ ಸಿದ್ದರಾಮಯ್ಯ (Siddaramaiah) ಸೇರಿದಂತೆ ಜಾತಿಗಣತಿ ಪರ ಇರುವ ಸಚಿವರಿಗೆ ಈ ವಿಚಾರ ಗೊತ್ತಾಗದಂತೆ ಪ್ಲ್ಯಾನ್ ಗುಟ್ಟಾಗಿ ಇಟ್ಟಿದ್ದರಂತೆ. ಕ್ಯಾಬಿನೆಟ್ ಮುಗೀತು ಹೊರಡೋಣ್ವಾ ಎಂದಾಗ ಜಾತಿ ಗಣತಿ ವಿಷಯ ಪ್ರಸ್ತಾಪಿಸಿದ್ದಾರೆ. ಜಾತಿಗಣತಿ ಮಾತಾಡೋದು ಇದೆ ಎಂದು ಸಚಿವರಿಂದ ಕೂಗು ವ್ಯಕ್ತವಾಯ್ತು ಎನ್ನಲಾಗಿದೆ. ಇದನ್ನೂ ಓದಿ: ಕ್ಯಾಬಿನೆಟ್‌ ಸಭೆಯಲ್ಲಿ ಜಾತಿ ಜಟಾಪಟಿ – ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ

    ಸಚಿವರ ನಡೆಗೆ ಸಿಎಂ ಹಾಗೂ ಜಾತಿಗಳ ಪರ ಇದ್ದ ಸಚಿವರಿಗೆ ಶಾಕ್ ಆಗಿದೆ ಎನ್ನಲಾಗಿದೆ. ಆದಾದ ಬಳಿಕ ಸುಮಾರು 40 ನಿಮಿಷಗಳ ಕಾಲ ಜಾತಿಗಣತಿ ಜಟಾಪಟಿ ನಡೆದಿದೆ ಎನ್ನಲಾಗಿದೆ. ಇದನ್ನೂ ಓದಿ: ಪರಿಸರ ಅಭಿವೃದ್ಧಿ ಸಂರಕ್ಷಣೆಗೆ ಮಾಧ್ಯಮಗಳು ಹೆಚ್ಚು ಒತ್ತು ನೀಡಬೇಕು: ಸಿದ್ದರಾಮಯ್ಯ

  • UKP 3ನೇ ಹಂತ| ಮುಳುಗಡೆ ಸಂತ್ರಸ್ತರಿಗೆ 40 ಲಕ್ಷ ಪರಿಹಾರ – ಯಾರಿಗೆ ಎಷ್ಟು ಸಿಗುತ್ತೆ?

    UKP 3ನೇ ಹಂತ| ಮುಳುಗಡೆ ಸಂತ್ರಸ್ತರಿಗೆ 40 ಲಕ್ಷ ಪರಿಹಾರ – ಯಾರಿಗೆ ಎಷ್ಟು ಸಿಗುತ್ತೆ?

    ಬೆಂಗಳೂರು: ಕೃಷ್ಣ ಮೇಲ್ದಂಡೆ ಯೋಜನೆ (Upper Krishna Project) ಮೂರನೇ ಹಂತದಲ್ಲಿ ಬಾಗಲಕೋಟೆ (Bagalkote) ಜಿಲ್ಲೆಯ ಆಲಮಟ್ಟಿ ಡ್ಯಾಂ (Almatti Dam) ಎತ್ತರ ಹೆಚ್ಚಳ ಯೋಜನೆ ಸಂಬಂಧ ರೈತರಿಗೆ ಪರಿಹಾರ ನೀಡುವ ವಿಚಾರದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಇಂದು ಮಹತ್ವದ ತೀರ್ಮಾನ ಕೈಗೊಂಡಿದೆ. ಇದಕ್ಕಾಗಿಯೆ ವಿಶೇಷ ಸಚಿವ ಸಂಪುಟ ಸಭೆ ಇಂದು ನಡೆದಿದ್ದು ಸಭೆಯಲ್ಲಿ ರೈತರ ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗಿದೆ.

    ಮುಳಗಡೆ ವ್ಯಾಪ್ತಿಯಲ್ಲಿ ನೀರಾವರಿ ಜಮೀನಿಗೆ ಎಕರೆಗೆ 40 ಲಕ್ಷ ರೂ., ಒಣ ಭೂಮಿಗೆ ಎಕರೆಗೆ 30 ಲಕ್ಷ ರೂ. ನಿಗದಿ ಮಾಡಲಾಗಿದೆ. ಅದರಂತೆ ಕೆನಾಲ್ ಭಾಗದಲ್ಲಿ ನೀರಾವರಿ ಜಮೀನಿಗೆ ಎಕರೆಗೆ 30 ಲಕ್ಷ ರೂ. ಒಣ ಭೂಮಿಗೆ 25 ಲಕ್ಷ ರೂ. ದರ ನಿಗದಿ ಮಾಡಲಾಗಿದೆ.

    ಸಿಎಂ ಸಿದ್ದರಾಮಯ್ಯ ಮಾತನಾಡಿ, ಡ್ಯಾಂ ಎತ್ತರಿಸಲು 75 ಸಾವಿರ ಎಕರೆಗೂ ಹೆಚ್ಚು ಜಮೀನು ಮುಳುಗಡೆ ಆಗಲಿದೆ. 5 ಲಕ್ಷ ಹೆಕ್ಟೇರ್‌ಗೂ ಹೆಚ್ಚಿನ ಜಾಗಕ್ಕೆ ನೀರಾವರಿ ಸೌಲಭ್ಯ ಸಿಗಲಿದೆ. ಬರಡು ಭೂಮಿಗೆ ನೀರು ಕೊಟ್ಟಂತೆ ಆಗಲಿದೆ ಎಂದರು. ಇದನ್ನೂ ಓದಿ: ಎಸ್‌ಟಿಗೆ ಕುರುಬ ಮಹತ್ವದ ಸಭೆ ಕರೆದ ವಾಲ್ಮೀಕಿ ಸಮುದಾಯ


    ಡಿಸಿಎಂ ಡಿಕೆ ಶಿವಕುಮಾರ್‌ ಮಾತನಾಡಿ, ಇವತ್ತು ಐತಿಹಾಸಿಕ ತೀರ್ಮಾನಕ್ಕೆ ಬಂದಿದ್ದೇವೆ. ಸುಮಾರು ಹತ್ತು ಸುತ್ತಿನ ಸಭೆಗಳು ನಡೆಸಿದ್ದೇವೆ. ಪುನರ್ವಸತಿಗಾಗಿ ಹೊಸ ಪಾಲಿಸಿ, ಪರಿಹಾರ ಪ್ಯಾಕೇಜ್ ಪರ್ಯಾಯ ವ್ಯವಸ್ಥೆಗೆ ತೀರ್ಮಾನ. ಸೆಕ್ಷನ್ 51 ಅನ್ವಯ ಪ್ರಾಧಿಕಾರ ರಚನೆ ಮಾಡಿ ಹಾಲಿ, ನಿವೃತ್ತ ನ್ಯಾಯಾಧೀಶರ ನೇಮಕ ಮಾಡಲಾಗುವುದು ಎಂದು ತಿಳಿಸಿದರು

    ಕ್ಯಾಬಿನೆಟ್ ನಿರ್ಧಾರ ಏನು?
    519.6 ಮೀಟರ್‌ನಿಂದ 524.25 ಮೀಟರ್‌ಗೆ ಆಲಮಟ್ಟಿ ಡ್ಯಾಮ್ ಎತ್ತರಕ್ಕೆ ತೀರ್ಮಾನ.
    ಯೋಜನೆಗೆ ಅಂದಾಜು ಒಟ್ಟು 70 ಸಾವಿರ ಕೋಟಿ ರೂ. ಖರ್ಚು
    3 ವರ್ಷದಲ್ಲಿ ಭೂ ಸ್ವಾಧೀನ ಪ್ರಕ್ರಿಯೆ ಅಂತಿಮ
    ಒಟ್ಟು 5 ಲಕ್ಷ ಹೆಕ್ಟೇರ್ ಕೃಷಿ ಪ್ರದೇಶಕ್ಕೆ ನೀರಾವರಿ ಸೌಲಭ್ಯ
    ಒಟ್ಟು 1.33 ಲಕ್ಷ ಎಕರೆ ಜಮೀನು ಯೋಜನೆ ಆಗಲಿದ್ದು 75,532 ಎಕರೆ ಜಾಗ ಮುಳುಗಡೆಯಾಗಲಿದೆ.
    ನಾಲೆ ನಿರ್ಮಾಣಕ್ಕೆ ಬೇಕಾದ ಜಾಗ 51,837 ಎಕರೆ
    ಪುನರ್ವಸತಿಗಾಗಿ ಬೇಕಾಗಿರುವ ಜಾಗ 6,439 ಎಕರೆ
    ಈ ಯೋಜನೆಯಿಂದ ಸ್ಥಳಾಂತರ ಆಗಲಿವೆ 20 ಗ್ರಾಮಗಳು

  • ಕರ್ನಾಟಕದಲ್ಲಿ‌ ಬ್ಯಾಲೆಟ್ ಪೇಪರ್ ಎಲೆಕ್ಷನ್: ಕಾನೂನು ತರಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ

    ಕರ್ನಾಟಕದಲ್ಲಿ‌ ಬ್ಯಾಲೆಟ್ ಪೇಪರ್ ಎಲೆಕ್ಷನ್: ಕಾನೂನು ತರಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ

    ಬೆಂಗಳೂರು: ದೇಶದಲ್ಲಿ ಇವಿಎಂ (EVM)  ಚಾಲೆಂಜ್ ಮಾಡ್ತಿರುವ ಕಾಂಗ್ರೆಸ್ ರಾಜ್ಯದಲ್ಲಿ ಬ್ಯಾಲೆಟ್ ಪೇಪರ್ (Ballot Paper) ಮೊರೆ ಹೋಗ್ತಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ(Local Body Elections) ಬ್ಯಾಲೆಟ್ ಪೇಪರ್ ಬಳಕೆಗೆ ಅಗತ್ಯ ಕಾನೂನು ತರಲು ಕ್ಯಾಬಿನೆಟ್ (Cabinet) ಒಪ್ಪಿಗೆ ಸೂಚಿಸಿದೆ.

    ಅಲ್ಲದೆ ಸ್ಥಳಿಯ ಸಂಸ್ಥೆಗಳ ಚುನಾವಣೆಗೆ ಮತದಾರರ ಪಟ್ಟಿಯನ್ನು ತಯಾರಿಸಲು, ಪರಿಷ್ಕರಣೆ ಮಾಡಲು ಅಗತ್ಯ ಕಾನೂನು ಮಾಡಲು ನಿಯಮಾವಳಿ ರೂಪಿಸಲು ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡಲು ಸಂಪುಟ ಒಪ್ಪಿಗೆ ಸಿಕ್ಕಿದೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ಮಾಡಲು ಕಾಯ್ದೆಗೆ ತಿದ್ದುಪಡಿ ತರಬೇಕಿದ್ದು, ಸುಗ್ರೀವಾಜ್ಞೆ ಮೂಲಕ ಅಥವಾ ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ ಪಡೆಯಬೇಕಿದೆ. ಇಲ್ಲ ಸಚಿವ ಸಂಪುಟ ಶಿಫಾರಸ್ಸನ್ನ ಚುನಾವಣಾ ಆಯೋಗಕ್ಕೆ ಕಳುಹಿಸಬಹುದು. ಆಗ ಚುನಾವಣಾ ಆಯೋಗ ಒಪ್ಪಬಹುದು ಇಲ್ಲ. ಇಲ್ಲ ಬಿಡಬಹುದು. ಹಾಗಾಗಿ ಕಾಂಗ್ರೆಸ್ ಸರ್ಕಾರದ ಈ ಮಹತ್ವದ ನಿರ್ಧಾರ ಮುಂದಿನ ದಿನಗಳಲ್ಲಿ ರಾಜಕೀಯ ತಿರುವು ಪಡೆದುಕೊಳ್ಳುವ ಸಾಧ್ಯತೆ ಇದೆ. ಇದನ್ನೂ ಓದಿ: ʻಇವಿಎಂ ಹ್ಯಾಕ್‌ ಮಾಡಬಹುದುʼ ವಿಡಿಯೋ ಹರಿಬಿಟ್ಟವನ ವಿರುದ್ಧ ಎಫ್‌ಐಆರ್

    ಗ್ರಾಮ ಪಂಚಾಯತ್‌ ಚುನಾವಣೆಗಳನ್ನ ಬಿಟ್ಟು ಉಳಿದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಇವಿಎಂ ಬಳಕೆ ಮಾಡಲಾಗುತ್ತಿತ್ತು. ಆದರೆ ಬೀದರ್ ಜಿಲ್ಲೆಯಲ್ಲಿ ಮಾತ್ರ ಪ್ರಯೋಗಿಕವಾಗಿ ಗ್ರಾಮಪಂಚಾಯ್ತಿ ಚುನಾವಣೆಗೆ ಇವಿಎಂ ಬಳಕೆ ಮಾಡಲಾಗಿತ್ತು. ಈ ಹೊಸ ಕಾನೂನಿಗೆ ಒಪ್ಪಿಗೆ ಸಿಕ್ಕಿದ್ರೆ ಗ್ರೇಟರ್ ಬೆಂಗಳೂರು ಚುನಾವಣೆ ಸೇರಿದಂತೆ ಎಲ್ಲ ಮಹಾನಗರಪಾಲಿಕೆ, ನಗರಸಭೆ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆಗಳಿಗೂ ಬ್ಯಾಲೆಟ್ ಪೇಪರ್ ಮೂಲಕ ಮತದಾನ ಆಗಲಿದೆ.