Tag: Cabinet Extension

  • ಸಂಪುಟ ಸಂಕ್ರಮಣ – ಸಚಿವಕಾಂಕ್ಷಿಗಳಿಗೆ ಸಿಗಲಿದೆ ಸಿಹಿ

    ಸಂಪುಟ ಸಂಕ್ರಮಣ – ಸಚಿವಕಾಂಕ್ಷಿಗಳಿಗೆ ಸಿಗಲಿದೆ ಸಿಹಿ

    ಬೆಂಗಳೂರು: ಸಿಎಂ ಯಡಿಯೂರಪ್ಪ ದೆಹಲಿ ಪ್ರವಾಸದ ಬಳಿಕ ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಸಂಕ್ರಾಂತಿ ಹಿಂದಿನ ದಿನವೇ ಏಳು ಜನರು ರಾಜಾಹುಲಿ ಸಂಪುಟಕ್ಕೆ ಸೇರ್ಪಡೆ ಆಗಲಿದ್ದಾರೆ ಎಂದು ತಿಳಿದು ಬಂದಿದೆ.

    ದೆಹಲಿಯಿಂದ ಬಂದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಯಡಿಯೂರಪ್ಪ, ಇಂದಿನ ಭೇಟಿ ಸಂತಸ ತಂದಿದೆ. ಸಂಪುಟ ವಿಸ್ತರಣೆಗೆ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಬರಬೇಕು ಎಂಬುವುದು ನಮ್ಮ ಆಸೆ. ಆರೇಳು ಜನರು ಸಂಪುಟ ಸೇರಲಿದ್ದು, ಒಂದೆರಡು ದಿನಗಳಲ್ಲಿ ದಿನಾಂಕ ಮತ್ತು ಸಂಪುಟ ಸೇರುವವರ ಹೆಸರು ತಿಳಿಸಲಾಗುತ್ತೆ ಎಂದರು.

    ಸಂಪುಟ ವಿಸ್ತರಣೆಗೆ 3+4 ಸೂತ್ರ: ಮೂವರು ವಲಸಿಗರು ಮತ್ತು ನಾಲ್ವರು ಮೂಲ ನಾಯಕರಿಗೆ ಮಂತ್ರಿ ಸ್ಥಾನ ಸಿಗಲಿದೆ. ಇಂದು ಸಚಿವರ ಪಟ್ಟಿಗೆ ಹೈಕಮಾಂಡ್ ನಿಂದ ಒಪ್ಪಿಗೆ ಸಿಗುವ ಸಾಧ್ಯತೆಗಳಿವೆ. ವಲಸಿಗರ ಮೂರು ಸ್ಥಾನದಲ್ಲಿ ಶಾಸಕ ಮುನಿರತ್ನ, ಎಂಎಲ್‍ಸಿ ಗಳಾದ ಎಂಟಿಬಿ ನಾಗರಾಜ್ ಮತ್ತು ಆರ್.ಶಂಕರ್ ಗೆ ಸಚಿವ ಸ್ಥಾನ ಸಿಗೋದು ಬಹುತೇಕ ಖಚಿತವಾಗಿದೆ. ಇನ್ನುಳಿದ ನಾಲ್ಕು ಸ್ಥಾನಕ್ಕೆ ಮೂಲ ಬಿಜೆಪಿಗರ ನಡುವೆಯೇ ಸ್ಪರ್ಧೆ ಏರ್ಪಡಲಿದೆ.

    ಮೂಲ ಬಿಜೆಪಿಗರಲ್ಲಿ ಶಾಸಕ ಉಮೇಶ್ ಕತ್ತಿ, ಅರವಿಂದ್ ಲಿಂಬಾವಳಿ, ಎಂಎಲ್‍ಸಿ ಯೋಗೇಶ್ವರ್, ಶಾಸಕ ಹಾಲಪ್ಪ ಆಚಾರ್ ಮತ್ತು ಕಾರ್ಕಳ ಶಾಸಕ ಸುನಿಲ್ ಕುಮಾರ್ ಹೆಸರು ಸಚಿವರ ಪಟ್ಟಿ ರೇಸ್ ನಲ್ಲಿವೆ. ಪುನರ್ ರಚನೆ ಆಗಿದ್ದರೆ ಮತ್ತಷ್ಟು ಶಾಸಕರಿಗೆ ಸಚಿವ ಸ್ಥಾನ ಸಿಗುವ ಅವಕಾಶಗಳಿದ್ದವು. ಆದ್ರೆ ಹೈಕಮಾಂಡ್ ಸಂಪುಟ ವಿಸ್ತರಣೆಗೆ ಮಾತ್ರ ಹಸಿರು ನಿಶಾನೆ ನೀಡಿದೆ ಎಂದು ತಿಳಿದು ಬಂದಿದೆ.

  • ರಮೇಶ್ ಜಾರಕಿಹೊಳಿ ‘ಸಿಹಿ ಸುದ್ದಿ’ ಬಗ್ಗೆ ರೇಣುಕಾಚಾರ್ಯ ಮಾತು

    ರಮೇಶ್ ಜಾರಕಿಹೊಳಿ ‘ಸಿಹಿ ಸುದ್ದಿ’ ಬಗ್ಗೆ ರೇಣುಕಾಚಾರ್ಯ ಮಾತು

    ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ದೆಹಲಿಯಿಂದ ವಾಪಾಸಾಗುತ್ತಿದ್ದಂತೆ ಶಾಸಕರಾದ ರೇಣುಕಾಚಾರ್ಯ ಹಾಗೂ ಮಹೇಶ್ ಕುಮಟಳ್ಳಿ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

    ಭೇಟಿ ಬಳಿಕ ಮಾತನಾಡಿದ ಶಾಸಕ ರೇಣುಕಾಚಾರ್ಯ, ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಈಗಾಗಲೇ ದೆಹಲಿಯಲ್ಲಿ ಚರ್ಚೆ ಮಾಡಿ ಬಂದಿದ್ದಾರೆ. ಯಾಕೆ ವಿಳಂಬವಾಗುತ್ತಿದೆ ಎಂದು ಸಿಎಂ ಪ್ರಶ್ನಿಸುವಷ್ಟು ನಾನು ದೊಡ್ಡವನಲ್ಲ. ತಾಳ್ಮೆಯಿಂದ ಕಾಯುತ್ತೇನೆ, ಮನುಷ್ಯನಿಗೆ ತಾಳ್ಮೆ, ಸಂಯಮ ಬಹಳ ಮುಖ್ಯ. ಸಿಎಂ, ರಾಜ್ಯಾಧ್ಯಕ್ಷರ ನಿರ್ಧಾರಕ್ಕೆ ನಾನು ಬದ್ಧ ಎಂದು ತಿಳಿಸಿದರು.

    ರಮೇಶ್ ಜಾರಕಿಹೊಳಿಯವರನ್ನು ನೀರಾವರಿ ವಿಚಾರವಾಗಿ ಭೇಟಿ ಮಾಡಿದ್ದೆ. ಅವರು ನಮ್ಮ ಪಕ್ಷದ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿದ್ದರಲ್ಲಿ ತಪ್ಪೇನಿದೆ. ರಮೇಶ್ ಜಾರಕಿಹೊಳಿ ಸಂತೋಷ್ ಅವರನ್ನ ಭೇಟಿ ಮಾಡಿದ್ದರಲ್ಲಿ ತಪ್ಪಿಲ್ಲ. ನಾನೂ ದೆಹಲಿಗೆ ಹೋದರೆ ಭೇಟಿ ಮಾಡಿ ಬರುತ್ತೇನೆ ಎಂದರು.

    ಕೆಲವು ಸಚಿವರನ್ನು ಕೈ ಬಿಡಬೇಕೆಂಬ ವಿಚಾರದ ಕುರಿತು ಮಾತನಾಡಿದ ಅವರು, ಸಿಎಂ ಮತ್ತು ಅಧ್ಯಕ್ಷರಿಗೆ ಈ ಬಗ್ಗೆ ಹೇಳಿದ್ದೇನೆ. ಅಲ್ಲದೆ ನಾವು ಶಾಸಕರು ರೆಸಾರ್ಟ್ ನಲ್ಲಿ ಸಭೆ ಮಾಡಿಲ್ಲ. ಸಿಎಂ ಮತ್ತು ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿದ್ದೇವೆ. ನಮ್ಮ ಅಭಿಪ್ರಾಯಗಳನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸಿದ್ದೇವೆ ಎಂದರು.

    ರಮೇಶ್ ಜಾರಕಿಹೊಳಿ ಮತ್ತೊಂದು ಪವರ್ ಸೆಂಟರ್ ಅಲ್ಲ. ಯಾಕೆ ಮಾಧ್ಯಮಗಳು ಅವರನ್ನು ಮತ್ತೊಂದು ಪವರ್ ಸೆಂಟರ್ ಎನ್ನುತ್ತೀರಿ. ವಿನಾಕಾರಣ ಪವರ್ ಸೆಂಟರ್ ಎನ್ನುವುದು ಸರಿಯಲ್ಲ. ಶಾಸಕರ್ಯಾರೂ ಸಚಿವಗಿರಿಗಾಗಿ ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಪ್ರತ್ಯೇಕ ಸಭೆ ನಡೆಸಿಲ್ಲ. ರೆಸಾರ್ಟ್ ಗೆ ಹೋಗಿ ಸಭೆ ನಡೆಸಿಲ್ಲ, ಪಕ್ಷದ ಚೌಕಟ್ಟು ಮೀರಿ ವರ್ತಿಸಿಲ್ಲ. ನಾನು ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಸೇರಿದ್ದಕ್ಕೆ ಸಚಿವರು ಬಹಿರಂಗ ವಾಗಿ ಆಕ್ಷೇಪ ವ್ಯಕ್ತಪಡಿಸಲಿ. ಆಗ ನಾನು ಸಹ ನನ್ನ ಸ್ಟೈಲ್ ನಲ್ಲೇ ಉತ್ತರ ಕೊಡುತ್ತೇನೆ ಎಂದು ಹೇಳಿದರು.

    ಸಚಿವ ಸ್ಥಾನ ಉಳಿಸಿಕೊಳ್ಳಲು ಕೆಲ ಸಚಿವರು ಪ್ರತ್ಯೇಕ ಸಭೆ ನಡೆಸಿರುವ ವಿಚಾರದ ಕುರಿತು ಮಾತನಾಡಿದ ಅವರು, ಪಕ್ಷದಲ್ಲಿ ಇರುವ ಎಲ್ಲ ಸಚಿವರು ನನ್ನ ಸ್ನೇಹಿತರು. ನಾನು ಪಕ್ಷದ ಅಧ್ಯಕ್ಷರನ್ನು ಭೇಟಿ ಮಾಡಿದ್ದೇನೆ. ಯಾರ ಬಗ್ಗೆಯೂ ನನಗೆ ದ್ವೇಷ ಇಲ್ಲ ಆದರೆ ಅಧ್ಯಕ್ಷರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು ಹೌದು ಎಂದಿದ್ದಾರೆ. ಈ ಮೂಲಕ ಪ್ರತ್ಯೇಕ ಸಭೆ ನಡೆಸಿದ್ದ ಸಚಿವರ ವಿರುದ್ಧ ರಾಜ್ಯಾಧ್ಯಕ್ಷರಿಗೆ ದೂರು ನೀಡಿದ್ದನ್ನು ಪರೋಕ್ಷವಾಗಿ ರೇಣುಕಾಚಾರ್ಯ ಸಮರ್ಥಿಸಿಕೊಂಡಿದ್ದಾರೆ.

    ನಾನು ಯಾರ ಹೆಸರನ್ನೂ ಹೇಳಲ್ಲ, ಹೆಸರು ಹೇಳಿದರೆ ಅವರು ದೊಡ್ಡವರಾಗುತ್ತಾರೆ. ಅವರ ಹೆಸರು ಹೇಳಿ ನನ್ನ ವರ್ಚಸ್ಸು ಯಾಕೆ ಕಳೆದುಕೊಳ್ಳಲಿ ಎಂದು ಪ್ರತ್ಯೇಕ ಸಭೆ ನಡೆಸಿದ ಸಚಿವರ ಹೆಸರು ಹೇಳದೇ ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ.

    ಶಾಸಕ ಮಹೇಶ್ ಕುಮಟಳ್ಳಿ ಮಾತನಾಡಿ, ನಾನು ಪ್ರತಿ ದಿನ ಊಟ, ತಿಂಡಿ ಜಾರಕಿಹೊಳಿಯವರ ಮನೆಯಲ್ಲೇ ಮಾಡುತ್ತೇನೆ. ಇಂದಿನ ಭೇಟಿಯಲ್ಲಿ ಯಾವುದೇ ವಿಶೇಷತೆ ಇಲ್ಲ. ಅಥಣಿ ಕ್ಷೇತ್ರದ ನೀರಾವರಿ ವಿಚಾರಕ್ಕೆ ಇಂದು ಬಂದಿದ್ದೆ. ಸಚಿವ ಸ್ಥಾನಕ್ಕೆ ಯಾವುದೇ ಲಾಬಿ ಇಲ್ಲ. ಅವರ ಇಲಾಖೆಯ ಕೆಲಸಕ್ಕೆ ದೆಹಲಿಗೆ ಹೋಗಿದ್ದರು ಅಷ್ಟೇ. ನನಗೆ ಪಕ್ಷದವರು ಕೊಡುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ. ಹುದ್ದೆಗಿಂತಲೂ ಪಕ್ಷ ಸಂಘಟನೆ ಮಹತ್ವವಾದದ್ದು. ಈಗ ನನಗೆ ಸ್ಲಂ ಬೋರ್ಡ್ ಕೊಟ್ಟಿದ್ದಾರೆ, ನಾನು ಸಂತೋಷವಾಗಿದ್ದೇನೆ ಎಂದರು.

    ಆಸೆ, ಆಕಾಂಕ್ಷೆಗಳು ಬೇರೆ, ಜಾರಕಿಹೊಳಿಯವರು ಅವರ ಜೊತೆಗಿದ್ದವರಿಗೆ ನ್ಯಾಯ ಸಿಗಬೇಕು ಎಂದು ಮನವಿ ಮಾಡಿದ್ದಾರೆ. ನಮಗೆ ಅನ್ಯಾಯ ಎನ್ನುವಂತದಕ್ಕಿಂತ ಬಿಜೆಪಿ ವರಿಷ್ಠರು ಕೊಡುವ ಜವಾಬ್ದಾರಿಯನ್ನು ಹುಮ್ಮಸ್ಸಿನಿಂದ ನಿರ್ವಹಿಸುತ್ತೇನೆ. ಪಕ್ಷ ಸಂಘಟನೆಯಿಂದ ಹಿಡಿದು ಯಾವುದೇ ಕೆಲಸ ಕೊಟ್ಟರೂ ಮಾಡುತ್ತೇನೆ ಎಂದು ತಿಳಿಸಿದರು.

    ಮೂರು ದಿನಗಳ ಕಾಲ ದೆಹಲಿಯಲ್ಲಿ ವಾಸ್ತವ್ಯ ಹೂಡಿದ್ದ ಜಾರಕಿಹೊಳಿ ಇಂದು ಬೆಂಗಳೂರಿಗೆ ಮರಳಿದ್ದು, ಬೆಂಗಳೂರಿನ ನಿವಾಸಕ್ಕೆ ಆಗಮಿಸಿದ್ದಾರೆ.

  • ಶೀಘ್ರದಲ್ಲೇ ಎಲ್ಲರಿಗೂ ಸಿಹಿ ಸುದ್ದಿ ಸಿಗುತ್ತೆ- ಸಂಪುಟ ವಿಸ್ತರಣೆ ಕುರಿತು ರಮೇಶ್ ಜಾರಕಿಹೊಳಿ ಮಾತು

    ಶೀಘ್ರದಲ್ಲೇ ಎಲ್ಲರಿಗೂ ಸಿಹಿ ಸುದ್ದಿ ಸಿಗುತ್ತೆ- ಸಂಪುಟ ವಿಸ್ತರಣೆ ಕುರಿತು ರಮೇಶ್ ಜಾರಕಿಹೊಳಿ ಮಾತು

    – ದೇಹಲಿಯಿಂದ ಮರಳಿದ ಬಳಿಕ ಮೊದಲ ಪ್ರತಿಕ್ರಿಯೆ

    ಬೆಂಗಳೂರು: ಶೀಘ್ರದಲ್ಲೇ ಎಲ್ಲರಿಗೂ ಸಿಹಿ ಸುದ್ದಿ ಬರಲಿದೆ. ಸಿಹಿ ಸುದ್ದಿ ಬರುವ ಆಶಾ ಭಾವನೆ ನನಗಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

    ದೆಹಲಿಯಲ್ಲಿ ಬಿಜೆಪಿ ವರಿಷ್ಠರ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿರುವ ಅವರು, ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ವರಿಷ್ಠರನ್ನು ಭೇಟಿ ಮಾಡಿದ್ದು ನಿಜ. ವರಿಷ್ಠರೆದುರು ಯಾವುದೇ ಷರತ್ತು ಹಾಕಿಲ್ಲ, ಗಡುವು ಕೊಟ್ಟಿಲ್ಲ. ಸರ್ಕಾರ ರಚನೆಗೆ ನೆರವಾದವರಿಗೆ ಅನ್ಯಾಯ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದೇನೆ. ವರಿಷ್ಠರ ಮುಂದೆ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಪರ ಸಚಿವ ರಮೇಶ್ ಜಾರಕಿಹೊಳಿ ಬ್ಯಾಟಿಂಗ್ ಮಾಡಿರುವುದಾಗಿ ಸಹ ಒಪ್ಪಿಕೊಂಡಿದ್ದಾರೆ.

    ಸಿ.ಪಿ.ಯೋಗೇಶ್ವರ್ ಸರ್ಕಾರ ರಚನೆಗೆ ಸಹಕಾರ ಕೊಟ್ಟಿದ್ದಾರೆ. ಯೋಗೇಶ್ವರ್ ಗೆ ಸಚಿವ ಸ್ಥಾನ ಕೊಡುವಂತೆ ಮಾತಾಡಿದ್ದೇನೆ. ಯೋಗೇಶ್ವರ್ ಪರ ಮಾತಾಡೋದು ನನ್ನ ಧರ್ಮ. ಸರ್ಕಾರ ರಚನೆಗೆ ನೆರವಾದವರಿಗೆ ಸಚಿವ ಸ್ಥಾನ ಕೊಡುವಂತೆ ಮಾತಾಡಿದ್ದೇನೆ. ಸರ್ಕಾರ ರಚನೆಗೆ ತ್ಯಾಗ ಮಾಡಿದವರಿಗೆ ಸಚಿವ ಸ್ಥಾನ ಕೊಡುವಂತೆ ದೆಹಲಿ ವರಿಷ್ಠರಿಗೆ ಮನವಿ ಮಾಡಿದ್ದೇನೆ. ಸಂಪುಟ ವಿಸ್ತರಣೆ ಯಾವಾಗ ಮಾಡುತ್ತಾರೋ ಗೊತ್ತಿಲ್ಲ. ಸಿಎಂ ಸಹ ದೆಹಲಿಗೆ ಹೋಗಿ ಮಾತುಕತೆ ನಡೆಸಿ ಬಂದಿದ್ದಾರೆ. ತ್ಯಾಗ ಮಾಡಿದ ಎಲ್ಲರಿಗೂ ಸಚಿವ ಸ್ಥಾನ ಸಿಗುವ ಆಶಾ ಭಾವನೆ ಇದೆ ಎಂದು ತಿಳಿಸಿದರು.

    ಯೋಗೇಶ್ವರ್ ಗೆ ಸಚಿವ ಸ್ಥಾನ ಬೇಡ ಎಂದು ಕೆಲವರು ಅಭಿಪ್ರಾಯ ಹಂಚಿಕೊಂಡಿದ್ದಾರೆ. ರೇಣುಕಾಚಾರ್ಯ, ರಾಜುಗೌಡ ಬೇಡ ಎಂದು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಆದರೆ ಯೋಗೇಶ್ವರ್ ಪರ ಮಾತನಾಡೋದು ನನ್ನ ಕರ್ತವ್ಯ. ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡಿ ಎಂದು ಮಾತನಾಡಿದ್ದೇನೆ. ಮಾಡೋದು, ಬಿಡೋದು ವರಿಷ್ಠರಿಗೆ ಬಿಟ್ಟಿದ್ದು ಎಂದು ತಿಳಿಸಿದರು.

    ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರಿಗೆ ಸಚಿವ ಸ್ಥಾನ ನೀಡುವ ಕುರಿತು ಮಾತನಾಡಿದ ರಮೇಶ್ ಜಾರಕಿಹೊಳಿ, ರಾಜಕೀಯದಲ್ಲಿ ಆಶಾ ಭಾವನೆ ಇರಬೇಕು. ವಿಶ್ವನಾಥ್ ಅವರಿಗೂ ಸಚಿವ ಸ್ಥಾನ ಸಿಗುವ ಆಶಾ ಭಾವನೆ ಇದೆ. ಸರ್ಕಾರ ರಚನೆಗೆ ನೆರವಾದವರೆಲ್ಲರಿಗೂ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ. ಅದೇ ರೀತಿ ವಿಶ್ವನಾಥ್ ಅವರಿಗೂ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ. ಮುಖ್ಯಮಂತ್ರಿಗಳು ಹಾಗೂ ವರಿಷ್ಠರ ಮೇಲೆ ನಂಬಿಕೆ ಇದೆ ಎಂದರು.

    ದೆಹಲಿಯಿಂದ ವಾಪಾಸಾದ ಬಳಿಕ ರಮೇಶ್ ಜಾರಕಿಹೊಳಿ ಸಿಎಂ ಯಡಿಯೂರಪ್ಪ ಅವರ ಬಳಿ ಫೋನ್ ಮೂಲಕ ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ದೆಹಲಿಯಲ್ಲಿ ಕೇಂದ್ರದ ವಿವಿಧ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದ ಬಗ್ಗೆ ವಿವರಿಸಿದ್ದಾರೆ ಎನ್ನಲಾಗಿದೆ.

  • ಈ ವಾರ ಬಿಎಸ್‍ವೈ ಸಂಪುಟ ಸರ್ಜರಿ ಸಾಧ್ಯತೆ – ಹಾಲಿ ಮೂವರು ಸಚಿವರಿಗೆ ಕೊಕ್?

    ಈ ವಾರ ಬಿಎಸ್‍ವೈ ಸಂಪುಟ ಸರ್ಜರಿ ಸಾಧ್ಯತೆ – ಹಾಲಿ ಮೂವರು ಸಚಿವರಿಗೆ ಕೊಕ್?

    – ಯೋಗೇಶ್ವರ್ ವಿರುದ್ಧ ರೇಣುಕಾಚಾರ್ಯ ಸಿಟ್ಟು

    ಬೆಂಗಳೂರು: ಇಂದು ಬಿಹಾರ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಹೀಗಾಗಿ ಸಂಪುಟ ಸರ್ಜರಿ ವಿಚಾರವಾಗಿ ಚರ್ಚೆ ಮಾಡಲು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ರೆ ಬುಧವಾರವೇ ದೆಹಲಿಗೆ ಹಾರಲು ಸಿಎಂ ಯಡಿಯೂರಪ್ಪ ರೆಡಿ ಆಗಿದ್ದಾರೆ. ಸಿಎಂ ದೆಹಲಿಗೆ ತೆರಳುವ ಮುನ್ನ ಬುಧವಾರ ಸಂಪುಟ ಸಭೆ ಕರೆದಿದ್ದು, ಕೆಲವರ ಪಾಲಿಗೆ ಅದೇ ಕೊನೆಯ ಕ್ಯಾಬಿನೆಟ್ ಸಭೆ ಆಗುವ ಸಾಧ್ಯತೆಗಳಿವೆ.

    ಕ್ರಿಯಾಶೀಲರಲ್ಲದ ಕೆಲ ಸಚಿವರನ್ನು ಸಂಪುಟದಿಂದ ಕೈಬಿಡಲು ಸಿಎಂ ಪ್ಲಾನ್ ಮಾಡ್ಕೊಂಡಿದ್ದಾರೆ ಎನ್ನಲಾಗಿದೆ. ಈ ಬೆನ್ನಲ್ಲೇ ಸಂಪುಟ ಲಾಬಿ ಜೋರಾಗಿದೆ. ಸಚಿವ ಸ್ಥಾನ ಪಡೆದೇ ತೀರಬೇಕೆಂದು ಪ್ರಯತ್ನ ನಡೆಸುತ್ತಿರುವ ಎಂಎಲ್‍ಸಿ ಎಂಟಿಬಿ ನಾಗರಾಜ್ ಮತ್ತು ವಿಶ್ವನಾಥ್‍ಗೆ ಮಿತ್ರಮಂಡಳಿ ಸದಸ್ಯ, ಸಚಿವ ಎಸ್‍ಟಿ ಸೋಮಶೇಖರ್ ಬಿಗ್ ಶಾಕ್ ನೀಡಿದ್ದಾರೆ.

    ಎಂಟಿಬಿ ಹಾಗೂ ವಿಶ್ವನಾಥ್‍ಗೆ ಸಚಿವ ಸ್ಥಾನ ನೀಡಬೇಕೆಂಬ ಬಗ್ಗೆ ಚರ್ಚೆಯೇ ಆಗಿಲ್ಲ. ಇದಕ್ಕಾಗಿ ನಾವು ಪ್ರತ್ಯೇಕವಾಗಿ ಸಿಎಂ ಭೇಟಿ ಆಗುವ ಅಗತ್ಯವೂ ಇಲ್ಲ ಎಂದು ಸಚಿವ ಎಸ್.ಟಿ.ಸೋಮಶೇಖರ್ ಬಾಂಬ್ ಸಿಡಿಸಿದ್ದಾರೆ. ಅತ್ತ ಮಂತ್ರಿಗಿರಿ ಮೇಲೆ ಟವೆಲ್ ಹಾಕುತ್ತಿರುವ ಶಾಸಕ ರೇಣುಕಾಚಾರ್ಯ, ಬಿಜೆಪಿ ಸರ್ಕಾರ ಬರಲು ಕಾರಣರಾದವರಿಗೆ ಮಾತ್ರ ಮಂತ್ರಿಗಿರಿ ನೀಡಬೇಕು. ಜನರಿಂದ ಆಯ್ಕೆಯಾದವರನ್ನು ಮಾತ್ರ ಮಂತ್ರಿ ಮಾಡಬೇಕು. ಸೋತವರಿಗೆ ಸಚಿವ ಸ್ಥಾನ ನೀಡಬಾರ್ದು ಎಂದಿದ್ದಾರೆ. ಈ ಮೂಲಕ ಪರೋಕ್ಷವಾಗಿ ಯೋಗೇಶ್ವರ್ ಗೆ ಮಂತ್ರಿ ಸ್ಥಾನ ನೀಡಬಾರದು ಎಂಬ ವಾದ ಮಂಡಿಸಿದ್ದಾರೆ.

    ಬ್ಯಾಂಡ್ ಬಾರಿಸಿ ತಮಟೆ ಹೊಡೆದು ಬಾಯಿ ಬಡ್ಕೊಂಡ್ರೆ ಸಚಿವ ಸ್ಥಾನ ಸಿಗಲ್ಲ. ಹಾದಿ ರಂಪ ಮಾಡೋದು ನನಗಿಷ್ಟವಿಲ್ಲ. ಆದ್ರೆ ರಾಜಕೀಯವಾಗಿ ಯಾರೂ ಸನ್ಯಾಸಿಗಳಲ್ಲ ಎಂದು ರೇಣುಕಾಚಾರ್ಯ ಹೇಳಿದ್ದಾರೆ. ಈ ಮಧ್ಯೆ ಗೆಲುವಿಗೆ ಸಹಕರಿಸಿದ ಸಚಿವ ಸೋಮಣ್ಣರನ್ನು ಭೇಟಿಯಾದ ಆರ್.ಆರ್.ನಗರ ಶಾಸಕ ಮುನಿರತ್ನ ಧನ್ಯವಾದ ಹೇಳಿದ್ದಾರೆ.

  • ಕೊರೊನಾ ಸಂಕಷ್ಟದ ನಡುವೆ ಬಿಜೆಪಿ ನಾಯಕರಿಂದ ಸ್ಥಾನಮಾನಕ್ಕೆ ಲಾಬಿ

    ಕೊರೊನಾ ಸಂಕಷ್ಟದ ನಡುವೆ ಬಿಜೆಪಿ ನಾಯಕರಿಂದ ಸ್ಥಾನಮಾನಕ್ಕೆ ಲಾಬಿ

    ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆ ದೇಶದ್ಯಾಂತ ಲಾಕ್‍ಡೌನ್ ಮಾಡಲಾಗಿತ್ತು. ಲಾಕ್‍ಡೌನ್ ನಿಂದಾಗಿ ರಾಜ್ಯದಲ್ಲಿ ಅಲ್ಲ ಇಡೀ ದೇಶದ ರಾಜಕೀಯ ವಿದ್ಯಮಾನಗಳು ಸ್ತಬ್ಧವಾಗಿದ್ದವು. ಆದರೆ ಲಾಕ್‍ಡೌನ್ ಅನ್‍ಲಾಕ್ ಆಗ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಪುನಾರಂಭಗೊಂಡಿದೆ. ಸ್ಥಾನಮಾನದ ಲೆಕ್ಕಾಚಾರದಲ್ಲಿರುವ ಆಡಳಿತ ಪಕ್ಷದ ನಾಯಕರು ದೆಹಲಿ ದಂಡಯಾತ್ರೆ ಶುರು ಮಾಡಿದ್ದು ಹೈಕಮಾಂಡ್ ನಾಯಕರ ಮನ ಗೆಲಲ್ಲು ಪ್ರಯತ್ನ ಆರಂಭಿಸಿದ್ದಾರೆ.

    ಅನ್‍ಲಾಕ್ ಬಳಿಕ ನಾಲ್ಕನೇ ಬಾರಿಗೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೋಳಿ ದೆಹಲಿ ದಂಡಯಾತ್ರೆ ಮಾಡುತ್ತಿದ್ದಾರೆ. ಸರ್ಕಾರ ರಚನೆ ವೇಳೆ ಕೊಟ್ಡ ಮಾತಿನಂತೆ ನನ್ನ ಡಿಸಿಎಂ ಮಾಡಿ ಎಂದು ಪಟ್ಟು ಹಿಡಿದಿದ್ದಾರಂತೆ. ಸೋಮವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿಯಾಗಿ ಜಾರಕಿಹೋಳಿ ಮನವಿ ಮಾಡಿದ್ದಾರೆ. ಇದೇ ವೇಳೆ ಜೊತೆಗಿದ್ದ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ತಮ್ಮ ಪಕ್ಷದ ಸೇವೆ ಆಧರಿಸಿ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದಾರೆ. ಜೆ.ಪಿ ನಡ್ಡಾ ಜೊತೆಗೆ ರಾಜ್ಯದ ಕೇಂದ್ರ ಸಚಿವರನ್ನು ಉಭಯ ನಾಯಕರನ್ನು ಭೇಟಿ ಮಾಡಿದ್ದು ಇಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ ಭೇಟಿ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

    ರಮೇಶ್ ಜಾರಕಿಹೋಳಿ, ಸಿ.ಪಿ ಯೋಗೇಶ್ವರ್ ಬೆನ್ನಲ್ಲೇ ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಕೂಡಾ ದೆಹಲಿಗೆ ಆಗಮಿಸಿದ್ದಾರೆ. ಇಂದು ಅವರು ಕೂಡಾ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿದ್ದಾರೆ. ಶೀಘ್ರದಲ್ಲಿ ಸಂಪುಟ ವಿಸ್ತರಣೆ ಅಥಾವ ಪುನಾರಚನೆಯಾಗುವ ಸಾಧ್ಯತೆಗಳಿದ್ದು, ತಮ್ಮನ್ನ ಸಚಿವ ಸ್ಥಾನದಲ್ಲಿ ಮುಂದುವರಿಸುವ ಬಗ್ಗೆ ಚರ್ಚೆ ಮಾಡಲಿದ್ದಾರೆ ಎನ್ನಲಾಗಿದೆ.

    ಕಳೆದ ಎರಡು ವಾರಗಳ ಹಿಂದಷ್ಟೇ ಡಿಸಿಎಂ ಲಕ್ಷಣ್ ಸವದಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಶಶಿಕಲಾ ಜೊಲ್ಲೆ ದೆಹಲಿ ಭೇಟಿ ನೀಡಿ ಹೈಕಮಾಂಡ್ ಭೇಟಿಯಾಗಿದ್ದರು. ಕೊರೊನಾ ಕೆಲಸಗಳ ಒತ್ತಡದಲ್ಲಿರುವ ಕಾರಣ ಗೃಹ ಸಚಿವ ಅಮಿತ್ ಶಾ ಯಾವ ನಾಯಕರು ಈವರೆಗೂ ಸಮಯ ನೀಡಿಲ್ಲ. ಹೀಗಾಗಿ ಅಮಿತ್ ಶಾ ನಂತರದ ನಾಯಕರ ಭೇಟಿ ಮಾಡಿ ಮನವೊಲಿಸುವ ಕಾರ್ಯ ಭರ್ಜರಿಯಾಗಿ ನಡೆಯುತ್ತಿದೆ.

    ಕೊರೊನಾ ಸಂಕಷ್ಟದ ನಡುವೆ ಆಡಳಿತ ಪಕ್ಷದ ನಾಯಕರ ಪೈಕಿ ಹಲವರು ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದರೇ ಇನ್ನು ಕೆಲವರು ಇರೋ ಸಚಿವ ಸ್ಥಾನದಲ್ಲಿ ಮುಂದುವರಿಸಲು ಮನವಿ ಮಾಡುತ್ತಿದ್ದಾರೆ. ರಮೇಶ್ ಜಾರಕಿಹೋಳಿ ಮಾತ್ರ ಇನ್ನು ಹೆಚ್ಚಿನ ಸ್ಥಾನಮಾನ ನಿರೀಕ್ಷೆಯಲ್ಲಿದ್ದು ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಕಾದು ನೋಡಬೇಕಿದೆ

  • ‘ಸಿಎಂ ಸವದಿ’ ಪೋಸ್ಟ್ ಗೆ ಡಿಸಿಎಂ ಸವದಿ ಸ್ಪಷ್ಟನೆ

    ‘ಸಿಎಂ ಸವದಿ’ ಪೋಸ್ಟ್ ಗೆ ಡಿಸಿಎಂ ಸವದಿ ಸ್ಪಷ್ಟನೆ

    ಬೆಂಗಳೂರು: ಕರ್ನಾಟಕದ ಮುಂದಿನ ಸಿಎಂ ಸವದಿ ಎಂಬ ಸಾಮಾಜಿಕ ಜಾಲತಾಣದ ಪೋಸ್ಟ್ ಗಳ ಕುರಿತಂತೆ ಡಿಸಿಎಂ ಲಕ್ಷ್ಮಣ ಸವದಿ ಅವರು ಸ್ಪಷ್ಟನೆ ನೀಡಿದ್ದು, ನಾನು ಮುಖ್ಯಮಂತ್ರಿ ಸ್ಪರ್ಧಿ ಅಲ್ಲ. ವರಿಷ್ಠರ ನಿರ್ಧಾರಕ್ಕೆ ಬದ್ಧ ಎಂದು ಹೇಳಿದ್ದಾರೆ.

    ರಾಜ್ಯ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ನಡೆದ ಕಾರ್ಯಕ್ರಮಕ್ಕೆ ಡಿಸಿಎಂ ಲಕ್ಷ್ಮಣ ಸವದಿ ಅವರು ಗೈರಾಗಿ ದೆಹಲಿಗೆ ಭೇಟಿ ನೀಡಿದ್ದರು. ಇದರ ಬೆನ್ನಲ್ಲೇ ಕರ್ನಾಟಕದ ಮುಂದಿನ ಸಿಎಂ ಸವದಿ ಎಂಬ ಪೋಸ್ಟ್ ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಅಭಿಮಾನಿಗಳು ಭಾರೀ ಚರ್ಚೆಗೆ ಕಾರಣರಾಗಿದ್ದರು. ಸದ್ಯ ಈ ಕುರಿತಂತೆ ಲಕ್ಷ್ಮಣ ಸವದಿ ಅವರು ಸಾಮಾಜಿಕ ಜಾಲತಾಣದಲ್ಲಿ ಸರಣಿ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.

    ಪೋಸ್ಟ್‌ನಲ್ಲೇನಿದೆ?
    ‘ನನ್ನ ದೆಹಲಿ ಭೇಟಿಯ ಬಗ್ಗೆ ಅನಗತ್ಯವಾದ ಪ್ರಚಾರ ಬೇಡ. ದೆಹಲಿಯಲ್ಲಿ ವರಿಷ್ಠರೊಂದಿಗಿನ ಭೇಟಿ ಪೂರ್ವ ನಿರ್ಧಾರಿತವಾಗಿದ್ದ ಕಾರ್ಯಕ್ರಮ ಅದರ ಬಗ್ಗೆ ಕಲ್ಪಿತ ವರದಿ ದಯವಿಟ್ಟು ಬೇಡ. ನನ್ನ ಕ್ಷೇತ್ರದ ಹಿತೈಷಿಗಳೇ ಸಾಮಾಜಿಕ ಜಾಲತಾಣಗಳಲ್ಲಿ ದಯವಿಟ್ಟು ಆಧಾರ ರಹಿತ ಪೋಸ್ಟ್‍ಗಳನ್ನು ಮಾಡದಿರಿ’ ಎಂದು ಮನವಿ ಮಾಡಿದ್ದಾರೆ.

    ‘ಕ್ಷೇತ್ರದ ಜನತೆ ಪೋಸ್ಟ್ ಗಳನ್ನು ಹಾಕಿದ್ದಾರೆ ಎನ್ನುತ್ತಾ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡದಿರುವಂತೆ ಜವಾಬ್ದಾರಿಯುತ ಮಾಧ್ಯಮಗಳಲ್ಲಿ ಮನವಿ ಮಾಡುತ್ತಿದ್ದೇನೆ. ಕೋವಿಡ್ ಸಮಸ್ಯೆಯನ್ನು ಎದುರಿಸಿ ಒಂದು ವರ್ಷ ಉತ್ತಮ ಆಡಳಿತ ನೀಡಿರುವ ನಾವೆಲ್ಲರೂ ಪಕ್ಷಕ್ಕೆ ನಿಷ್ಠರು ಹಾಗೂ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರು’ ಎಂದು ಮತ್ತೊಂದು ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

    ರಾಜಕೀಯ ವಿಪ್ಲವಗಳ ಬಗ್ಗೆ ಮಾಧ್ಯಮಗಳು ಅಪ್ರಬುದ್ಧ ವಿಶ್ಲೇಷಣೆಯಲ್ಲಿ ತೊಡಗುವುದು ಸಾಮಾಜಿಕ ಸ್ವಾಸ್ಥ್ಯಕ್ಕೆ ಹಾನಿಕರ. ನಮ್ಮ ಲಕ್ಷ್ಯ ಆರೋಗ್ಯ ಕ್ರಾಂತಿಯ ಕಡೆಗೆ ಇರಬೇಕಾದ ಹೊತ್ತಿದು. ಸ್ವಾಸ್ಥ್ಯವನ್ನು ಕಾಪಾಡಿಕೊಂಡು, ಬಹುಬೇಗ ಒದಗಿರುವ ಮಹಾಮಾರಿಯ ಸಂಕಟದಿಂದ ಹೊರಬರಬೇಕಾಗಿರುವ ಸಮಯ. ಮಾಧ್ಯಮ ಮಿತ್ರರ ಆದ್ಯತೆಯು ಅದೇ ಆಗಿರಲಿ ಎಂಬ ಆಶಯ ಎಂದು ತಿಳಿಸಿದ್ದಾರೆ.

    ಸರ್ಕಾರ ವರ್ಷಾಚರಣೆ ಕಾರ್ಯಕ್ರಮಕ್ಕೆ ಗೈರಾಗಿರುವ ಬಗ್ಗೆಯೂ ಸಮರ್ಥನೆ ನೀಡಿದ್ದಾರೆ. ಆದರೆ ಸರ್ಕಾರಕ್ಕೆ ವರ್ಷ ತುಂಬಿದ ಹೊತ್ತಲ್ಲೇ ಕಾರ್ಯಕ್ರಮ ಪೂರ್ವ ನಿರ್ಧರಿತವೇ ಎಂಬ ಅನುಮಾನ ಮೂಡಿದೆ. ವಿಧಾನಸಭಾ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಿಂದ ಸ್ಫರ್ಧಿಸಿ ಸೋಲುಂಡಿದ್ದ ಲಕ್ಷ್ಮಣ ಸವದಿ ಅವರಿಗೆ ಅಚ್ಚರಿ ಎಂಬಂತೆ ಬಿಎಸ್‍ವೈ ನೇತೃತ್ವದ ಸರ್ಕಾರದಲ್ಲಿ ಡಿಸಿಎಂ ಸ್ಥಾನ ನೀಡಲಾಗಿತ್ತು. ಸವದಿ ಅವರಿಗೆ ಡಿಸಿಎಂ ಪೋಸ್ಟ್ ಹಾಗೂ ಸಚಿವ ಸ್ಥಾನ ಲಭಿಸುವುದರ ಹಿಂದೆ ಹೈಕಮಾಂಡ್ ಕೃಪೆ ಇತ್ತು ಎನ್ನಲಾಗಿದೆ.

  • ಸಚಿವ ಸ್ಥಾನ ಕಳೆದುಕೊಳ್ಳುವ ಭೀತಿ- ದಿಢೀರ್ ದೆಹಲಿಗೆ ದೌಡಾಯಿಸಿದ ಸಚಿವೆ ಶಶಿಕಲಾ ಜೊಲ್ಲೆ

    ಸಚಿವ ಸ್ಥಾನ ಕಳೆದುಕೊಳ್ಳುವ ಭೀತಿ- ದಿಢೀರ್ ದೆಹಲಿಗೆ ದೌಡಾಯಿಸಿದ ಸಚಿವೆ ಶಶಿಕಲಾ ಜೊಲ್ಲೆ

    ಬೆಂಗಳೂರು: ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಚುರುಕಾಗಿದೆ. ಇದರ ನಡುವೆಯೇ ನಿಗಮ ಮಂಡಳಿಗಳ ನೇಮಕ ಮಾಡಿ ಆದೇಶ ನೀಡಿದ್ದ ಸಿಎಂ ಪರೋಕ್ಷವಾಗಿ ಸಚಿವ ಸಂಪುಟ ಪುನಾರಚನೆಗೆ ಸೂಚನೆ ನೀಡಿದ್ದಾರೆ ಎನ್ನಲಾಗಿತ್ತು. ಇದರ ನಡುವೆಯೇ ಸಚಿನ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ದೆಹಲಿಗೆ ಭೇಟಿ ನೀಡಿದ್ದಾರೆ.

    ನಿನ್ನೆ ರಾತ್ರಿಯೇ ದೆಹಲಿಗೆ ಭೇಟಿ ನೀಡಿರುವ ಸಚಿವೆ ಶಶಿಕಲಾ ಜೊಲ್ಲೆ ಅವರು, ಇಂದು ಹೈಕಮಾಂಡ್ ಭೇಟಿ ಮಾಡುವ ಪ್ರಯತ್ನ ಮಾಡಲಿದ್ದಾರೆ ಎನ್ನಲಾಗಿದೆ. ಈ ವೇಳೆ ಸಂಪುಟದಲ್ಲಿ ಮುಂದುವರಿಸಲು ಹೈಕಮಾಂಡ್‍ಗೆ ಮನವಿ ಮಾಡುವ ಸಾಧ್ಯತೆ ಇದೆ. ಆದರೆ ಈವರೆಗೂ ಹೈಕಮಾಂಡ್ ಸಚಿವರ ಭೇಟಿಗೆ ಯಾವುದೇ ಸಮಯ ನೀಡಿಲ್ಲ ಎಂಬ ಮಾಹಿತಿ ಲಭಿಸಿದ್ದು, ಸಂಜೆ ವೇಳೆಗೆ ಭೇಟಿಗೆ ಅವಕಾಶ ಸಿಗುವ ಸಾಧ್ಯತೆ ಇದೆ. ಸಚಿವ ಸ್ಥಾನಕ್ಕೆ ಭಾರೀ ಪೈಪೋಟಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಶಿಕಲಾ ಜೊಲ್ಲೆ ಅವರನ್ನು ಅನಿವಾರ್ಯವಾಗಿ ಸಂಪುಟದಿಂದ ಕೈಬಿಡಲಾಗುತ್ತಿದೆ ಎನ್ನಲಾಗಿದೆ.

    ಇತ್ತ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಜೋರಾಗುತ್ತಿದಂತೆ ಸಂಪುಟ ಪುನಾರಚನೆಯ ಕೂಗು ಹೆಚ್ಚಾಗಿದ್ದು, ಆಪ್ತರಿಗೆ ಸಚಿವ ಸ್ಥಾನ ನೀಡುವ ಮೂಲಕ ವಿರೋಧಿ ಬಣಕ್ಕೆ ಸಿಎಂ ಟಾಂಗ್ ನೀಡಲಿದ್ದಾರೆ ಎನ್ನಲಾಗಿದೆ. ಉಳಿದಂತೆ ಸಂಪುಟ ಸಚಿವರಾಗಿರುವ ಡಿಸಿಎಂ ಲಕ್ಷ್ಮಣ ಸವದಿ, ಸಿ.ಸಿ. ಪಾಟೀಲ್, ಶಶಿಕಲಾ ಜೊಲ್ಲೆ ಹಾಗೂ ಪ್ರಭು ಚವ್ಹಾಣ್, ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಸಂಪುಟದಿಂದ ಕೊಕ್ ನೀಡಲಾಗುತ್ತದೆ ಎನ್ನಲಾಗಿದೆ. ಸದ್ಯ ಖಾಲಿ ಉಳಿದಿರುವ ಸಚಿವ ಸ್ಥಾನಗಳನ್ನು ಸೇರಿಸಿ ಹುಕ್ಕೇರಿ ಶಾಸಕ ಉಮೇಶ್ ಕತ್ತಿ, ಮೇಲ್ಮನೆ ಸದಸ್ಯರಾದ ಎಂಟಿಬಿ ನಾಗರಾಜ್, ಆರ್.ಶಂಕರ್, ಹೆಚ್.ವಿಶ್ವನಾಥ್, ಮಹಾದೇವಪುರ ಶಾಸಕ ಅರವಿಂದ ಲಿಂಬಾವಳಿ, ಚಿತ್ರದುರ್ಗ ಶಾಸಕ ತಿಪ್ಪಾರೆಡ್ಡಿ, ಸುಳ್ಯ ಶಾಸಕ ಅಂಗಾರ ಹಾಗೂ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ.

  • BIG EXCLUSIVE- ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ!

    BIG EXCLUSIVE- ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ!

    – ಸಿಎಂ ವಿರುದ್ಧ ಸಿಡಿದೆದ್ದ ತ್ರಿಮೂರ್ತಿಗಳು
    – 27 ಶಾಸಕರಿಂದ 2 ಬಾರಿ ರಹಸ್ಯ ಸಭೆ

    ಬೆಂಗಳೂರು: ರಾಜ್ಯ ಬಿಜೆಲಿಯಲ್ಲಿ ಭಿನ್ನಮತ ಭುಗಿಲೆದ್ದಿದ್ದು, ಮೂವರು ನಾಯಕರು ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಂಚು ರೂಪಿಸಿದ್ದಾರೆ ಅನ್ನೋ ಮಾಹಿತಿ ಪಬ್ಲಿಕ್ ಟಿವಿಗೆ ಮೂಲಗಳು ತಿಳಿಸಿವೆ.

    ಕಳೆದ ಕೆಲ ದಿನಗಳಿಂದ ಸಿಎಂ ಯಡಿಯೂರಪ್ಪನವರ ವಿರುದ್ಧ ರಹಸ್ಯ ಸಭೆಗಳು ನಡೆದಿರುವ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದ್ದು, ಬಿಜೆಪಿ ಸರ್ಕಾರ ಪತನವಾಗುತ್ತಾ ಲೆಕ್ಕಾಚಾರಗಳು ರಾಜ್ಯ ರಾಜಕೀಯದಲ್ಲಿ ಆರಂಭಗೊಂಡಿವೆ. ಕೊರೊನಾ ಮಧ್ಯೆ ರಾಜ್ಯ ರಾಜಕಾರಣದಲ್ಲಿ ಚಟುವಟಿಕೆಗಳು ಗರಿಗದರಿದ್ದು, ಉತ್ತರ ಕರ್ನಾಟಕ ಭಾಗದ ಕಮಲ ನಾಯಕರೇ ಸಿಎಂಗೆ ಮುಳುವಾಗ್ತಾರಾ ಅನ್ನೋ ಅನುಮಾನಗಳು ದಟ್ಟವಾಗ್ತಿವೆ.

    ಯಾರು ಆ ತ್ರಿಮೂರ್ತಿಗಳು?: ಉತ್ತರ ಕರ್ನಾಟಕ ಪ್ರಭಾವಿ ನಾಯಕರಾದ ಉಮೇಶ್ ಕತ್ತಿ, ಮುರಗೇಶ್ ನಿರಾಣಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ವಿರುದ್ಧ ವ್ಯೂಹ ರಚಿಸಿದ್ದಾರೆ. ಈ ಮೂವರ ನಾಯಕತ್ವದಲ್ಲಿ ಕಳೆದ 15 ದಿನದಲ್ಲಿ ಸುಮಾರು ಆರು ಬಾರಿ ಸಭೆ ನಡೆಸಿ, ಸಿಎಂ ವಿರುದ್ಧದ ಆಪರೇಷನ್ ವೇದಿಕೆಯನ್ನು ಸಿದ್ಧಗೊಳಿಸಿದ್ದಾರೆ ಎನ್ನಲಾಗಿದೆ.

    ಬಿಎಸ್‍ವೈ ಟಾರ್ಗೆಟ್ ಯಾಕೆ?: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಶಾಸಕರಾದ ಉಮೇಶ್ ಕತ್ತಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಈ ಇಬ್ಬರು ನಾಯಕರು ಬಹಿರಂಗವಾಗಿಯೇ ತಾವು ಸಚಿವ ಸ್ಥಾನದ ಆಕಾಂಕ್ಷಿಗಳು ಎಂದು ಹೇಳಿಕೊಂಡಿದ್ದುಂಟು. ಇನ್ನು ಬಿಜೆಪಿ ಹಿರಿಯ ನಾಯಕರಾಗಿರುವ ಉಮೇಶ್ ಕತ್ತಿ, ನಾನು ಸಿಎಂ ಅಭ್ಯರ್ಥಿ ಎಂದು ಹೇಳಿದ್ದರು. ಆದ್ರೆ ಇದುವರೆಗೂ ಸಚಿವ ಸ್ಥಾನ ಸಿಕ್ಕಿಲ್ಲ. ಇದೀಗ ಉಮೇಶ್ ಕತ್ತಿ ಮತ್ತು ಯತ್ನಾಳ್ ಇಬ್ಬರು ನಿರಾಣಿಯ ಬೆಂಬಲದೊಂದಿಗೆ ಬಂಡಾಯದ ಬಾವುಟ ಹಿಡಿಯಲು ಸಿದ್ಧರಾಗಲು ಸಭೆಯ ಮೇಲೆ ಸಭೆ ನಡೆಸುತ್ತಿರುವ ವಿಷಯ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಮೂವರು ನಾಯಕರು ತಮ್ಮದೇ ಆದ ಪ್ರತ್ಯೇಕ ಬಣ ರಚಿಸಿಕೊಂಡು ಮುಂದೆ ಏನಾಗಬಹುದು ಎಂಬುದರ ಬಗ್ಗೆ ಆಪ್ತರಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರಂತೆ. ಈ ನಡುವೆ ಜತೆಗೆ ಪರಮಾಪ್ತ ಶಾಸಕನ ಎರಡ್ಮೂರು ಕೆಲಸಗಳಿಗೆ ಬ್ರೇಕ್ ಬಿದ್ದಿತ್ತು. ಈ ಕಾರಣದಿಂದಾಗಿ ಯಡಿಯೂರಪ್ಪ ಆಪ್ತ ಬಣವೇ ಯಡಿಯೂರಪ್ಪ ವಿರುದ್ಧ ಕೂಟ ರಚಿಸಲು ಯತ್ನಿಸಲಾಗ್ತಿದೆ ಎಂದು ತಿಳಿದು ಬಂದಿದೆ.

  • ಸೋಲು ಗೆಲುವು ಮುಖ್ಯ ಅಲ್ಲ, ಸಿಎಂ ಕೊಟ್ಟ ಮಾತಿನಂತೆ ನಡೆದುಕೊಳ್ತಾರೆ: ಎಂಟಿಬಿ

    ಸೋಲು ಗೆಲುವು ಮುಖ್ಯ ಅಲ್ಲ, ಸಿಎಂ ಕೊಟ್ಟ ಮಾತಿನಂತೆ ನಡೆದುಕೊಳ್ತಾರೆ: ಎಂಟಿಬಿ

    ಬೆಂಗಳೂರು: ಸಂಪುಟ ವಿಸ್ತರಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ 17 ಶಾಸಕರಲ್ಲಿ ಯಾರೆಲ್ಲ ಸಚಿವರಾಗುತ್ತಾರೆ ಎಂಬ ಪ್ರಶ್ನೆ ಎದುರಾಗಿದೆ.

    ಉಪಚುನಾವಣೆಯಲ್ಲಿ ಸೋತ ಎಂಟಿಬಿ ನಾಗರಾಜ್‍ಗೆ ಸಚಿವ ಸ್ಥಾನ ಸಿಗುತ್ತಾ ಎನ್ನುವುದು ಯಕ್ಷ ಪ್ರಶ್ನೆಯಾಗಿದ್ದು, ಇದಕ್ಕೆ ಮಾಜಿ ಸಚಿವ ಎಂಟಿಬಿ ನಾಗರಾಜು ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರು ಹೊರವಲಯ ಮಹಾದೇವಪುರದ ಗರುಡಾಚಾರ್ ಪಾಳ್ಯದಲ್ಲಿ ಮಾತನಾಡಿದ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೊದಲು ಸಿಎಂ ಯಡಿಯೂರಪ್ಪ ನಮ್ಮ ನಡುವೆ ಮಾತುಕತೆ ಚರ್ಚೆ ಎಲ್ಲ ನಡೆದು ಅಂತಿಮವಾಗಿ ನಾವು ರಾಜೀನಾಮೆ ನೀಡಿದ್ದೇನೆ ಎಂದರು.

    ನಾನು ಮಂತ್ರಿಯಾಗಿ ರಾಜೀನಾಮೆ ನೀಡಿದ್ದೇನೆ. ಸೋಲು ಗೆಲ್ಲುವ ಮುಖ್ಯವಲ್ಲ, 17 ಜನಕ್ಕೂ ಪ್ರಾಮುಖ್ಯತೆ ನೀಡಬೇಕು. ಯಡಿಯೂರಪ್ಪ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ ಎಂಬ ನಂಬಿಕೆ ಇದೆ. ಬಚ್ಚೇಗೌಡ ಹಾಗೂ ಶರತ್‍ರಿಂದ ನನಗೆ ಸೋಲಾಗಿದೆ. ಪಕ್ಷ ದ್ರೋಹ ಮಾಡಿದ ಅವರನ್ನು ಪಕ್ಷಕ್ಕೆ ಸೇರಿಸಕೊಳ್ಳಲ್ಲ ಅಂತ ಹೇಳಿ ಅದೇ ರೀತಿ ನಡೆದುಕೊಳ್ಳುತ್ತಿದ್ದಾರೆ. ಅದೇ ರೀತಿ ನಮಗೆ ಕೊಟ್ಟ ಭರವಸೆ ಈಡೇರಿಸುತ್ತಾರೆ ಎಂಬ ನಂಬಿಕೆ ಇದೆ ಎಂದು ತಿಳಿಸಿದರು.

  • ಬಂದವರ ತಾಳ್ಮೆ ಪರೀಕ್ಷೆ ಮಾಡಬೇಡಿ: ವಿ. ಶ್ರೀನಿವಾಸ ಪ್ರಸಾದ್

    ಬಂದವರ ತಾಳ್ಮೆ ಪರೀಕ್ಷೆ ಮಾಡಬೇಡಿ: ವಿ. ಶ್ರೀನಿವಾಸ ಪ್ರಸಾದ್

    ಮೈಸೂರು: ಬಂದವರ ತಾಳ್ಮೆ ಪರೀಕ್ಷೆ ಮಾಡಬೇಡಿ. ಬೇಗ ಸಚಿವ ಸಂಪುಟ ವಿಸ್ತರಣೆ ಮಾಡಿ ಒಳ್ಳೆಯ ಆಡಳಿತ ಕೊಡಿ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ಸಿಎಂ ಯಡಿಯೂರಪ್ಪಗೆ ಸಲಹೆ ನೀಡಿದ್ದಾರೆ.

    ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಬಿಟ್ಟು ಬಂದ ಶಾಸಕರು ಇನ್ನೆಷ್ಟು ದಿನ ಕಾಯುತ್ತಾರೆ? ಪಾಪ 17 ಜನರು ನಮ್ಮ ಪಕ್ಷಕ್ಕೆ ಬಂದು ಸರ್ಕಾರ ರಚನೆಗೆ ಕಾರಣ ಆಗಿದ್ದಾರೆ. ಅವರಿಗೆ ಸ್ಥಾನಮಾನ ಕೊಡೋದು ಪಕ್ಷದ ಜವಾಬ್ದಾರಿ ಎಂದರು.

    ಪಕ್ಷಾಂತರಿ ಶಾಸಕರ ಜೊತೆ ಮಾತನಾಡಿರೋದು ಸಿಎಂ. ಭರವಸೆ ಕೊಟ್ಟಿರೋದು ಸಿಎಂ ಅವರೇ. ಹಾಗಾಗಿ ಸಿಎಂ ಹೈಕಮಾಂಡ್ ಜೊತೆ ಮಾತನಾಡಲಿ. ಅವರು ಕೊಟ್ಟ ಭರವಸೆ ಬಗ್ಗೆ ಹೈಕಮಾಂಡ್‍ಗೆ ಮನವರಿಕೆ ಮಾಡಲಿ ಎಂದು ಹೇಳಿದರು. ಸಿಎಂ ಯಾರು ಯಾರಿಗೇ ಯಾವ ರೀತಿ ಮಾತು ಕೊಟ್ಟಿದ್ದಾರೆ ನನಗೆ ಗೊತ್ತಿಲ್ಲ. ವಿಶ್ವನಾಥ್ ಆಗಲಿ ಇನ್ನೊಬ್ಬರ ಬಗ್ಗೆ ನಾನು ಮಾತನಾಡೋಲ್ಲ. ಬಂದ ಎಲ್ಲರಿಗೂ ಯಡಿಯೂರಪ್ಪ ಕೊಟ್ಟ ಮಾತನ್ನ ಉಳಿಸಿಕೊಳ್ಳಲಿ ಎಂದ ಅವರು, ಸಂಪುಟ ವಿಸ್ತರಣೆ ತಡ ಆದರೆ ಏನೂ ಆಗೋಲ್ಲ. ಆ ಬಗ್ಗೆ ಇನ್ನೆನು ಹೇಳೋದಿಲ್ಲ ಎಂದು ತಿಳಿಸಿದರು.