ಬೆಂಗಳೂರು: ಸಚಿವ ಸಂಪುಟ ಸಭೆಯಲ್ಲಿ (Cabinet Meeting) ಇವತ್ತು ಸಿಎಂ ಆಪ್ತ ಸಚಿವ ಹೆಚ್.ಸಿ ಮಹದೇವಪ್ಪ (HC Mahadevappa) ರೋಷಾವೇಶ ಜೋರಾಗಿತ್ತು ಎನ್ನಲಾಗಿದೆ. ಇಬ್ಬರು ಸಿಎಂ ಆಪ್ತ ಸಚಿವರ ನಡುವೆ ಕಾವೇರಿದ ಚಕಮಕಿ ಆಗಿದ್ದು, ಸಿಎಂ (Siddaramaiah) ಇಬ್ಬರನ್ನ ಸಮಾಧಾನಪಡಿಸಿದ್ರು ಎಂದು ಮೂಲಗಳಿಂದ ಗೊತ್ತಾಗಿದೆ.p
ಗಂಗಾ ಕಲ್ಯಾಣ ಯೋಜನೆಗೆ ಸಂಬಂಧಿಸಿದ ವಿಷಯದಲ್ಲಿ ಜಟಾಪಟಿ ನಡೆದಿದ್ದು, ನಾನು ಎದ್ದು ಹೊರಟೇ ಬಿಡುತ್ತೇನೆ ಎಂದು ಹೆಚ್.ಸಿ ಮಹದೇವಪ್ಪ ಕೂಗಾಡಿದ್ದಾರೆ. ಎಸ್‌ಸಿಪಿ, ಟಿಎಸ್‌ಪಿ ಹಣ ಸರಿಯಾಗಿ ಬಳಕೆ ಆಗುತ್ತಿಲ್ಲ, ಹಂಚಿಕೆ ಆದ ಹಣವನ್ನ ಬೇರೆ ಕಡೆ ಬಳಕೆ ಮಾಡುತ್ತಿದ್ದೀರಿ. ಸಮುದಾಯಕ್ಕೆ ಅನ್ಯಾಯ ಆಗುತ್ತಿದೆ. ಈಗ ಹಣ ಕೊಡಿ ಅಂದ್ರೆ ಅಂತಾ ಜೋರು ದ್ಚನಿಯಲ್ಲಿ ಆಕ್ರೋಶ ಹೊರಹಾಕಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: 1,545 ಕೋಟಿ ನೆರೆ ಪರಿಹಾರ ಕೇಳಲು ಕೇಂದ್ರಕ್ಕೆ ಮನವಿ: ಕ್ಯಾಬಿನೆಟ್ ಸಭೆ ನಿರ್ಧಾರ
ಸ್ವತಃ ಸಿಎಂ ಅವರ ಬಳಿಯೂ ಕೂಗಾಡಿದ್ದಾರೆ ಎನ್ನಲಾಗಿದೆ. ಏಕಾಏಕಿ ಮಹದೇವಪ್ಪ ಆಕ್ರೋಶ ಕಂಡು ಸಂಪುಟ ಸಹೋದ್ಯೋಗಿಗಳು ಕಕ್ಕಾಬಿಕ್ಕಿ ಆಗಿದ್ದರು. ಆದಾದ ಬಳಿಕ ಸಿಎಂ ಸಿದ್ದರಾಮಯ್ಯ ಮಧ್ಯಪ್ರವೇಶ ಮಾಡಿ ನಾವು ಮೂವರು ಕುಳಿತು ಮಾತಾಡೋಣ. ವಿದ್ಯುತ್ ಶುಲ್ಕ ಹೆಚ್ಚಳದ ಬಗ್ಗೆ ತೀರ್ಮಾನ ಮಾಡೋಣ ಎಂದು ಹೇಳಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಉಡುಪಿ ಸೇರಿ ಹಲವೆಡೆ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಸರ್ಕಾರಿ ಜಾಗ ಮಂಜೂರು: ಕ್ಯಾಬಿನೆಟ್ ಅಸ್ತು
ಬೆಂಗಳೂರು: ನಗರದಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್‌ನಲ್ಲಿ (Cabinet) ಇಂದು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಬೆಂಗಳೂರಿಗೆ (Bengaluru) ಒಟ್ಟು 2,296 ಕೋಟಿ ಅನುದಾನಕ್ಕೆ ಒಪ್ಪಿಗೆ ಸಿಕ್ಕಿದೆ. ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಅನುದಾನ ಒದಗಿಸಲು ಕ್ಯಾಬಿನೆಟ್ ಒಪ್ಪಿಗೆ ನೀಡಿದೆ.
ಸಿಎಂ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದಲ್ಲಿಂದು ನಡೆದ ಸಚಿವ ಸಂಪುಟ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಅನುದಾನ ಬಿಡುಗಡೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿರುವ 5 ನಗರ ಪಾಲಿಕೆಗಳಲ್ಲಿನ ವಾರ್ಡ್‌ಗಳಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗಾಗಿ ಒಟ್ಟು 2,296 ಕೋಟಿ ಮಂಜೂರಿಗೆ ಅನುಮೋದನೆ ನೀಡಿದೆ. ಇದನ್ನೂ ಓದಿ: ಚಡ್ಡಿ ಹಾಕುತ್ತಿದ್ದಾಗ ಇದ್ದ RSS ಬಿಜೆಪಿ ಪುಡಾರಿಗಳು ಬಂದ ಮೇಲೆ ಬದಲಾವಣೆ ಆಗಿದೆ: ಬೇಳೂರು ಗೋಪಾಲಕೃಷ್ಣ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ 5 ಬೆಂಗಳೂರು ನಗರ ಪಾಲಿಕೆಗಳ ವ್ಯಾಪ್ತಿಯ ವಾರ್ಡ್ ಅಭಿವೃದ್ಧಿ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಅನುಮೋದನೆ ಸಿಕ್ಕಿದ್ದು, 1,055 ಕೋಟಿ ರೂ. ಮೊತ್ತದಲ್ಲಿ ಕಾಮಗಾರಿಗಳನ್ನ ಕೈಗೊಳ್ಳುವ ಕ್ರಿಯಾಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ.
– ಕಾಂಗ್ರೆಸ್ ಕಟ್ಟಡ ನಿರ್ಮಾಣಕ್ಕೆ ಗುತ್ತಿಗೆ ಅವಧಿ ವಿಸ್ತರಿಸಲು ಒಪ್ಪಿಗೆ
ಬೆಂಗಳೂರು: ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣ (DySP Ganapathy Suicide Case) ಪ್ರಕರಣದ ತನಿಖಾ ವರದಿಗಳಲ್ಲಿ ನ್ಯಾ.ಕೆ.ಎನ್.ಕೇಶವ ನಾರಾಯಣ ಸಲ್ಲಿಸಿದ್ದ ವರದಿಯನ್ನು ಕ್ಯಾಬಿನೆಟ್ (Cabinet) ತಿರಸ್ಕರಿಸಿದ್ದು ನಿವೃತ್ತ ಐಪಿಎಸ್ ಅಧಿಕಾರಿ ಶ್ರೀವಾಸ್ತವ್ ಸಲ್ಲಿಸಿದ್ದ ವರದಿ ಪೂರ್ಣ ಒಪ್ಪಿಕೊಳ್ಳಲು ಸಚಿವ ಸಂಪುಟ ಸಮ್ಮತಿ ನೀಡಿದೆ.
ಇಂದು ನಡೆದ ಕ್ಯಾಬಿನೆಟ್‌ನಲ್ಲಿ ಕೈಗೊಂಡ ತೀರ್ಮಾನಗಳು
– 110 ಟ್ರಾಫಿಕ್ ಜಂಕ್ಷನ್ ಗೆ ಅಡಾಪ್ಟೀವ್ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ 56.45 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಕ್ಕೆ ಸಂಪುಟ ಒಪ್ಪಿಗೆ
– ತುಮಕೂರು ಜಿಲ್ಲೆ, ಕುಣಿಗಲ್ ತಾಲ್ಲೂಕು, ಕುಣಿಗಲ್ ಗ್ರಾಮದ ಸ.ನಂ. 110ರಲ್ಲಿ 9 ¾ ಗುಂಟೆ “ಸರ್ಕಾರಿಜನ ಬಿ-ಖರಾಬು ಜಮೀನನ್ನು ತಾಲ್ಲೂಕು ಕಾಂಗ್ರೆಸ್ ಸಮಿತಿ, ಕುಣಿಗಲ್ ತಾಲ್ಲೂಕು ಇವರಿಗೆ ಕಾಂಗ್ರೆಸ್ (Congress) ಕಛೇರಿ ಕಟ್ಟಡದ ನಿರ್ಮಾಣಕ್ಕಾಗಿ ಗುತ್ತಿಗೆ ಅವಧಿಯನ್ನು ವಿಸ್ತರಿಸಲು ಒಪ್ಪಿಗೆ. ಇದನ್ನೂ ಓದಿ: ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಕೇಸ್: ಕಂಪ್ಯೂಟರ್ ಫೈಲ್, ಫೋನ್ ಕಾಲ್ ಡಿಲೀಟ್
– ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ರೈಸಿಂಗ್ ಮೇನ್ ಸೇರಿ ರಾಜಕಾಲುವೆಯ ಬಳಿಯ Used Water Treatment Plant ಆವರಣದಲ್ಲಿರುವ ಸಂಸ್ಕರಿಸಿದ ನೀರಿನ ಪಂಪಿಂಗ್ ಸ್ಟೇಷನ್. ದೇವನಹಳ್ಳಿ ಬಳಿಯ ಐಟಿ ಪಾರ್ಕ್ ಕೈಗಾರಿಕಾ ಪ್ರದೇಶದಲ್ಲಿರುವ 40 MLD ಸಾಮರ್ಥ್ಯದ ತೃತೀಯ ಹಂತದ ಸಂಸ್ಕರಣಾ ಘಟಕದ 5 ವರ್ಷಗಳ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು 45.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಅನುಮೋದನೆ.
– ಬೆಂಗಳೂರು (Bengaluru) ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ಎಲೆಮಲ್ಲಪ್ಪ ಚೆಟ್ಟಿಯಲ್ಲಿರುವ 15 ದ.ಲ.ಲೀ ಸಾಮರ್ಥ್ಯದ ತ್ಯಾಜ್ಯ ನೀರು ಶುದ್ದೀಕರಣ ಘಟಕವನ್ನು ಮತ್ತು ಸಾದರಮಂಗಲದಲ್ಲಿ 5 ದ.ಲ.ಲೀ ಸಾಮರ್ಥ್ಯದ ISPS (Intermediate Sewage Pumping Station) ಮತ್ತು ಸುಮಾರು 3.5 ಕಿ.ಮೀಗಳ 450mm dia DI (Ductile Iron) ಪೈಪ್ ಲೈನ್ ನ 5 ವರ್ಷಗಳ ಸಮಗ್ರ ಕಾರ್ಯಚರಣೆ ಮತ್ತು ನಿರ್ವಹಣೆ (O&M)ಯನ್ನು ರೂ.19.07 ಕೋಟಿಗಳ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲು ಒಪ್ಪಿಗೆ.
– ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ 90 ದ.ಲ.ಲೀ ಸಾಮರ್ಥ್ಯದ ಬೆಳ್ಳಂದೂರು ತ್ಯಾಜ್ಯ ನೀರು ಶುದ್ದೀಕರಣ ಘಟಕದ 5 ವರ್ಷಗಳ ಸಮಗ್ರ ಕಾರ್ಯಾಚರಣೆ ಮತ್ತು ನಿರ್ವಹಣೆ (O&M)ಯನ್ನು 23.36 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.
– ಬೆಂಗಳೂರು ನೀರು ಸರಬರಾಜು ಮತ್ತು ಮಂಡಳಿ ವತಿಯಿಂದ ಒಳಚರಂಡಿ ಹೊರಮಾವುನಲ್ಲಿರುವ 20 MLD ಬಳಸಿದ ನೀರು ಸಂಸ್ಕರಣಾ ಘಟಕವನ್ನು (UWTP) 05 ವರ್ಷಗಳ ಅವಧಿಗೆ ಸಮಗ್ರ ಕಾರ್ಯಾಚರಣೆ ಮತ್ತು ನಿರ್ವಹಣೆ (O&M) ರೂ.15.00 ಕೋಟಿಗಳ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ.
– ತಾಯಿ-ಮಕ್ಕಳ ಆರೋಗ್ಯ, ತ್ರಿವಳಿ ತಜ್ಞರು (ಸ್ತ್ರೀರೋಗ ತಜ್ಞರು, ಅರವಳಿಕೆ ತಜ್ಞರು ಮತ್ತು ಮಕ್ಕಳ ತಜ್ಞರು) ಹಾಗೂ ಶುಶ್ರೂಷಕಾಧಿಕಾರಿಗಳ ಹುದ್ದೆಗಳನ್ನು ತರ್ಕಬದ್ಧಗೊಳಿಸಲು ನಿರ್ಧಾರ.
– ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ನಿರ್ವಹಣಾ 2ನೇ ಆವೃತ್ತಿ (UUCMS-V-2.0)ಯನ್ನು 40.29 ಕೋಟಿಗಳಲ್ಲಿ ಅಭಿವೃದ್ಧಿಪಡಿಸಿ ಅನುಷ್ಠಾನಗೊಳಿಸಲು ಅನುಮೋದನೆ.
– ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ, 2025-32″ಕ್ಕೆ ಅನುಮೋದನೆ.
– ಕಲಬುರಗಿ ಜಿಲ್ಲೆಯ ಸೇಡಂ ಪುರಸಭೆಯನ್ನ ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ತೀರ್ಮಾನ.
– ಚನ್ನರಾಯಪಟ್ಟಣ ಯೋಜನಾ ಪ್ರಾಧಿಕಾರವು ಅಮಾನಿಕೆರೆ ಗ್ರಾಮದ ಸ.ನಂ. 152/1, 2, 3, 4, 151/1 153/20 ವಿನ್ಯಾಸದಲ್ಲಿ ಕಾಯ್ದಿರಿಸಿದ 799 ಚ.ಮೀ. ವಿಸ್ತೀರ್ಣದ (ಸಿ.ಎ. ನಿವೇಶನದ) ಪೈಕಿ 210 ಚ.ಮೀ. ನಿವೇಶನವನ್ನು ಕಾಂಗ್ರೆಸ್ ಭವನ ಟ್ರಸ್ಟ್ (ರಿ), ಬೆಂಗಳೂರು ಇವರಿಗೆ ಮಂಜೂರು.
– ಬಾಗಲಕೋಟೆ ಜಿಲ್ಲೆಯ ಲೋಕಾಪುರ ಪಟ್ಟಣ ಪಂಚಾಯತಿಯ ಸಾರ್ವಜನಿಕ ಉದ್ದೇಶಕ್ಕಾಗಿ ಕಾಯ್ದಿರಿಸಿದ ಆಸ್ತಿ ನಂ.3741, ಕ್ಷೇತ್ರ-400.63 ಚ.ಮೀಟರ್ ನಿವೇಶನವನ್ನು
ಕಾಂಗ್ರೆಸ್ ಭವನ ಟ್ರಸ್ಟ್, ಬೆಂಗಳೂರು ಇವರಿಗೆ 30 ವರ್ಷಗಳವರೆಗೆ ಗುತ್ತಿಗೆ ಆಧಾರದ ಮೇಲೆ ನೀಡಲು ಒಪ್ಪಿಗೆ.
– Infrastructure Investment Trusts (InvITs) ಯೋಜನೆಗೆ ಕರ್ನಾಟಕ ವಿದ್ಯುತ್ ಪ್ರಸರಣ ಸ್ವತ್ತುಗಳಿಂದ ಸಂಪನ್ಮೂಲ ಕ್ರೋಢೀಕರಿಸಲು ಅನುಮೋದನೆ ನೀಡುವ ಅಂಶ ಮುಂದೂಡಿಕೆ.
– ಕೊಡಗು ಜಿಲ್ಲೆ, ವಿರಾಜಪೇಟೆಯಲ್ಲಿ ಪ್ರಸ್ತುತ ಇರುವ 60 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಮೊದಲನೇ ಹಂತದಲ್ಲಿ 250 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ರೂ.95.60 ಕೋಟಿಗಳ ಅಂದಾಜು ಮೊತ್ತದಲ್ಲಿ ಮೇಲ್ದರ್ಜೆಗೇರಿಸಲು ಒಪ್ಪಿಗೆ
– ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಿರ್ಮಿಸಲು ಮಂಜೂರಾಗಿರುವ 50 ಹಾಸಿಗೆಗಳ ತೀವ್ರ ನಿಗಾ ಆರೈಕೆ ಘಟಕವನ್ನು (CCB) ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕು ಆಸ್ಪತ್ರೆಗೆ ಸ್ಥಳಾಂತರಿಸಿ, ಅಂದಾಜು ಮೊತ್ತ ರೂ.23.75 ಕೋಟಿಗಳಲ್ಲಿ (ಕಟ್ಟಡ + ವೈದ್ಯಕೀಯ ಉಪಕರಣ) ನಿರ್ಮಿಸಲು ಅನುಮೋದನೆ.
– ಕೇಂದ್ರ ಸರ್ಕಾರದ 15ನೇ ಹಣಕಾಸು ಆಯೋಗದ ಯೋಜನೆಯಡಿ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯ ವಿಸ್ತರಣೆ ಹಾಗೂ ಆಧುನೀಕರಣದ ರೂ.329.00 ಕೋಟಿಗಳ ಪರಿಷ್ಕೃತ ಕ್ರಿಯಾ ಯೋಜನೆಗೆ ಆಡಳಿತಾತ್ಮಕ ತೀರ್ಮಾನ
– ನವದೆಹಲಿಯ ಚಾಣಕ್ಯಪುರಿಯ ಸರ್ದಾರ್ ಪಟೇಲ್ ಮಾರ್ಗದಲ್ಲಿರುವ ಕರ್ನಾಟಕ ಭವನ-2 (ಶರಾವತಿ) ಕಟ್ಟಡದ ನವೀಕರಣ ಮತ್ತು ಅಭಿವೃದ್ಧಿ ಕಾಮಗಾರಿಯನ್ನು 16.30 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.
ಬೆಂಗಳೂರು: ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ಕಿಚ್ಚು ಜೋರಾಗಿ ಏರುಧ್ವನಿಯಲ್ಲಿ ಮಾತುಕತೆ ಆಗಿದೆ ಎನ್ನಲಾಗಿದೆ. ಜಾತಿ ಮುಂದೂಡಿಕೆಗೆ ಸಚಿವರಿಂದ ಒತ್ತಡ ಹೆಚ್ಚಾಗಿದ್ದು, ಹೊಸದಾಗಿ 331 ಜಾತಿಗಳ ಸೇರ್ಪಡೆಗೂ ಆಕ್ಷೇಪ ವ್ಯಕ್ತವಾಗಿದೆ. ಡಿಸಿಎಂ ಡಿಕೆಶಿ ಸೇರಿದಂತೆ ಹಲವು ಸಚಿವರು ಆಕ್ಷೇಪ ವ್ಯಕ್ತಪಡಿಸಿ, ಜಾತಿಗಣತಿ (Caste Census) ಮುಂದೂಡಿಕೆಗೆ ಒತ್ತಡ ಹಾಕಿದ್ದಾರೆ. ಈಗ ಜಾತಿಗಣತಿ ನಡೆದರೆ ಸರ್ಕಾರಕ್ಕೆ ತೊಂದರೆ, ಡ್ಯಾಮೇಜ್ ಆಗುತ್ತೆ, ಮುಂದೂಡೋಣ ಎಂದು ಡಿಕೆಶಿ ಪ್ರಸ್ತಾಪಿಸಿದ್ದಾರೆ.
ಇದೇ ವೇಳೆ ಸಿಎಂ ಸಿದ್ದರಾಮಯ್ಯ (Siddaramaiah) ಕೂಡ ಜಾತಿಗಣತಿ ಬಗ್ಗೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದ್ದು, ಜಾತಿ ಗಣತಿ ನಡೆದರೂ, ನಡೆಯದಿದ್ದರೂ ನನ್ನ ಮೇಲ್ವರ್ಗದ ವಿರೋಧಿ ಅಂತಾರೆ, ಪಟ್ಟ ಕಟ್ಟಿದ್ದಾರೆ, ಅಹಿಂದ ಪರ ಅಂತಾರೆ ಎಂದು ಅಸಮಾಧಾನ ಹೊರಹಾಕಿದರು ಎನ್ನಲಾಗಿದೆ. ಹಾಗಾಗಿ ಸಚಿವರು ವಿಶೇಷ ಸಭೆ ನಡೆಸಿ ವರದಿ ಕೊಡಿ ಎಂದು ಸಿಎಂ ಸೂಚಿಸಿ ಚರ್ಚೆ ಮುಗಿಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಆಳಂದ ಫೈಲ್ಸ್ ಕೇಸ್ ತನಿಖೆಗೆ ಎಸ್‌ಐಟಿ ರಚನೆಗೆ ಕ್ಯಾಬಿನೆಟ್ ಒಲವು
– ಎಂಬಿ ಪಾಟೀಲ್ ಆಕ್ರೋಶಕ್ಕೆ ದಂಗಾದ ಸಚಿವರು
– ಜಾತಿ ಗಣತಿಗೆ ಲಿಂಗಾಯತರಿಂದ ಭಾರೀ ವಿರೋಧ
ಬೆಂಗಳೂರು: “ಲಿಂಗಾಯತರನ್ನು (Lingayat) ತುಂಡು ತುಂಡು ಮಾಡ್ತಾ ಇದ್ದೀರಿ? ಈ ರೀತಿ ಸಮೀಕ್ಷೆ ಮಾಡಲು ಹೇಳಿದವರು ಯಾರು? ಕುಲಶಾಸ್ತ್ರೀಯ ಅಧ್ಯಯನ ಯಾರು ಮಾಡೋದು?” – ಇದು ಸಚಿವ ಎಂಬಿ ಪಾಟೀಲ್ (MB Patil) ಆಕ್ರೋಶ ವ್ಯಕ್ತಪಡಿಸಿದ ಪರಿ.
ಇಂದು ಸಂಜೆ ಸಿದ್ದರಾಮಯ್ಯ ನೇತೃತ್ವದಲ್ಲಿ ಕ್ಯಾಬಿನೆಟ್ ಸಭೆ ನಡೆಯಿತು. ಈ ವೇಳೆ ಲಿಂಗಾಯತ ಶಾಸಕರು ಜಾತಿ ಜನಗಣತಿಗೆ ಭಾರೀ ವಿರೋಧ ವ್ಯಕ್ತಪಡಿಸಿದರು.
ಸಚಿವ ಎಂಬಿ ಪಾಟೀಲ್ ಅಂತೂ ಎದ್ದು ನಿಂತು ಟೇಬಲ್ ಕುಟ್ಟಿ ಕೂಗಾಡಿದ್ದಾರೆ. ನಮ್ಮ ಸಮಾಜವನ್ನು ತುಂಡು ತುಂಡು ಮಾಡ್ತಾ ಇದ್ದೀರಿ? ತುಂಡು ಮಾಡಲು ಅಧಿಕಾರ ಕೊಟ್ಟವರು ಯಾರು ಎಂದು ಪ್ರಶ್ನಿಸಿ ಪೇಪರ್‌ಗಳನ್ನು ಎಸೆದು ಹಾಕಿದ್ದಾರೆ. ಎಂಬಿಪಿ ಆಕ್ರೋಶಕ್ಕೆ ಸಭೆಯಲ್ಲಿದ್ದ ಸಚಿವರು, ಅಧಿಕಾರಿಗಳು ದಂಗಾಗಿ ಹೋಗಿದ್ದಾರೆ.
ಇಲ್ಲಿಯವರೆಗೆ ಕ್ಯಾಬಿನೆಟ್ ಸಭೆ ಸಾಮಾನ್ಯ ಸಭೆಯಾಗಿ ನಡೆಯುತ್ತಿತ್ತು. ಆದರೆ ಇಂದಿನ ಸಭೆ ವಿಧಾನಸಭೆಯಲ್ಲಿ ಹೇಗೆ ವಿರೋಧ ಪಕ್ಷಗಳು ಮತ್ತು ಪ್ರತಿ ಪಕ್ಷಗಳ ಸದಸ್ಯರು ಕಿತ್ತಾಡುತ್ತಾರೋ ಅದೇ ರೀತಿಯಾಗಿ ಸಚಿವರು ಕಿತ್ತಾಡಿದ್ದಾರೆ ಎಂದು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.
ಈಶ್ವರ್ ಖಂಡ್ರೆ ಅವರು ಯಾವ ಆಧಾರದ ಮೇಲೆ ಹೊಸ ಜಾತಿಗಳನ್ನು ಸೃಷ್ಟಿ ಮಾಡಿದ್ದೀರಿ ಎಂದು ಆಕ್ರೋಶ ಹೊರಹಾಕಿದರೆ ನಮ್ಮ ಜಾತಿ ಬಗ್ಗೆ ನಿಮಗೆ ಏನು ಗೊತ್ತು ಎಂದು ಎಸ್‌ಎಸ್ ಮಲ್ಲಿಕಾರ್ಜುನ ಸಿಟ್ಟು ಹೊರ ಹಾಕಿದರು. ಸಚಿವರ ಮಾತಿಗೆ ಧ್ವನಿಗೂಡಿಸಿದ ಹೆಚ್‌ಕೆ ಪಾಟೀಲ್ ಈ ಜಾತಿಗಳನ್ನು ಯಾವುದೇ ಕಾರಣಕ್ಕೂ ಒಪ್ಪುವಂತದ್ದಲ್ಲ ಎಂದು ಗರಂ ಆಗಿಯೇ ಮಾತನಾಡಿದರು.
ಕ್ಯಾಬಿನೆಟ್‌ನಲ್ಲಿ ವರದಿ ಸ್ವೀಕಾರ ಮಾಡಿ ಯಾವುದೇ ಚರ್ಚೆ ನಡೆಸದೇ ಎಲ್ಲ ಸಚಿವರಿಗೂ ವರದಿ ಪ್ರತಿ ನೀಡಲು ಸೂಚಿಸಲಾಗಿದೆ. ಅಲ್ಲದೆ ಆ.16ರಂದು ವಿಶೇಷ ಸಂಪುಟ ಸಭೆ ಕರೆದಿದ್ದು, ಆ ಸಭೆಯಲ್ಲಿ ಮೀಸಲಾತಿ ಸಂಬಂಧ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ.
ಸಂಪುಟ ಸಭೆಯಲ್ಲಿ ಮಂಡನೆಯಾದ ನ್ಯಾ.ನಾಗಮೋಹನ್ ದಾಸ್ ಶಿಫಾರಸ್ಸಿನ ಪ್ರಕಾರ 5 ವರ್ಗಗಳನ್ನ ಗುರುತಿಸಿದ್ದು, ಪ್ರವರ್ಗ ಎ ವರ್ಗಕ್ಕೆ 1% ಮೀಸಲಾತಿ, ಪ್ರವರ್ಗ ಬಿ (ಎಡ)ಗೆ 6% ಮೀಸಲಾತಿ, ಪ್ರವರ್ಗ ಸಿ(ಬಲ)ಗೆ 5%, ಪ್ರವರ್ಗ ಡಿಗೆ 4%, ಪ್ರವರ್ಗ ಇಗೆ 1% ಮೀಸಲಾತಿಗೆ ಶಿಫಾರಸು ಮಾಡಲಾಗಿದೆ. ಆದರೆ ಈ ವಿಚಾರದಲ್ಲಿ ಸಂಪುಟದ ಎಸ್‌ಸಿ ಸಮುದಾಯದ ಸಚಿವರಲ್ಲೇ ಭಿನ್ನಾಭಿಪ್ರಾಯ ಇದೆ ಎನ್ನಲಾಗಿದ್ದು, ಸಿದ್ದರಾಮಯ್ಯ ಅಡಕತ್ತರಿಯಲ್ಲಿ ಸಿಲುಕಿದ್ದಾರೆ.ಇದನ್ನೂ ಓದಿ: ತಂಗಿಯ ಸೀಮಂತಕ್ಕೆ ಬಂದಿದ್ದ ಅಕ್ಕನಿಗೆ ಬಸ್ಸಿನಿಂದ ಇಳಿಯುವಾಗ ಕಾರು ಡಿಕ್ಕಿ – ರಕ್ತಸ್ರಾವದಿಂದ ಸಾವು
ಚಿಕ್ಕಬಳ್ಳಾಪುರ/ಬೆಂಗಳೂರು: ರಾಮನಗರ (Ramangara) ಜಿಲ್ಲೆಯನ್ನು ಬೆಂಗಳೂರು ದಕ್ಷಿಣ (Bengaluru South) ಜಿಲ್ಲೆ ಎಂದು ಮರು ನಾಮಕರಣ ಮಾಡಿದ್ದ ಸರ್ಕಾರ ಈಗ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ (Bengaluru North District) ಎಂಬುದಾಗಿ ಮರು ನಾಮಕರಣ ಮಾಡಿದೆ.
ಇಂದು ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ನಂದಿಗಿರಿಧಾಮದಲ್ಲಿ (Nandi Hills) ನಡೆದ ಕ್ಯಾಬಿನೆಟ್ ಸಭೆ (Cabinet Meeting) ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ‘ಬೆಂಗಳೂರು ಉತ್ತರ’ ಜಿಲ್ಲೆಯನ್ನಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ (Bagepalli) ಹೆಸರನ್ನು ಭಾಗ್ಯನಗರ (Bhagya Nagara) ಎಂದು ನಾಮಕರಣ ಮಾಡುವುದಕ್ಕೆ ಅನುಮೋದನೆ ನೀಡಿದೆ. ಇದನ್ನೂಓದಿ: ನೆಹರೂ ಕೈಯಿಂದ್ಲೇ RSS ಬ್ಯಾನ್ ಮಾಡೋಕೆ ಆಗ್ಲಿಲ್ಲ, ಪ್ರಿಯಾಂಕ್ ಖರ್ಗೆಯಿಂದ ಸಾಧ್ಯನಾ?: ಯತ್ನಾಳ್
ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ ಭಾಗವನ್ನು ರಿಯಲ್ ಎಸ್ಟೇಟ್ ಭಾಷೆಯಲ್ಲಿ ʼಬೆಂಗಳೂರು ಉತ್ತರʼ ಎಂದೇ ಕರೆಯಲಾಗುತ್ತದೆ.
1986ರಲ್ಲಿ ಬೆಂಗಳೂರು ನಗರ ಜಿಲ್ಲೆಯಿಂದ ಪ್ರತ್ಯೇಕಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ರಚಿಸಲಾಗಿತ್ತು. ಈ ವೇಳೆ ರಾಮನಗರ ಜಿಲ್ಲೆಯ ತಾತಾಲೂಕುಗಳು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಗೆ ಒಳಪಟ್ಟಿದ್ದವು. 2007ರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ವಿಭಜಿಸಿ ಹೊಸದಾಗಿ ರಾಮನಗರ ಜಿಲ್ಲೆ ರಚಿಸಲಾಗಿತ್ತು. ಇದನ್ನೂಓದಿ: ಬೇಕಾಬಿಟ್ಟಿ ಜನಗಣತಿ –ಪೌರ ಕಾರ್ಮಿಕರಿಂದ ಮನೆಗೆ ಸ್ಟಿಕ್ಕರ್!
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯ ಹೆಸರನ್ನು ‘ಭಾಗ್ಯನಗರ’ ಎಂದು ಬದಲಿಸುವಂತೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಿದ್ದರು.
ಚಿಕ್ಕಬಳ್ಳಾಪುರ (Chikkaballpura) ಜಿಲ್ಲೆಯಲ್ಲಿರುವ ಬಾಗೇಪಲ್ಲಿಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡಿದೆ. ಪಲ್ಲಿ ಎಂದರೆ ತೆಲುಗು ಭಾಷೆಯಲ್ಲಿ ಹಳ್ಳಿ ಎಂದರ್ಥ. ಹೀಗಾಗಿ ಈ ಹೆಸರನ್ನು ಬದಲಿಸಬೇಕು ಎಂದು 2020ರಲ್ಲಿ ತಾಲೂಕಿನಲ್ಲಿ ಅಭಿಯಾನವೇ ಆರಂಭವಾಗಿತ್ತು.
ಬೆಂಗಳೂರು: ರಾಜ್ಯ ಸರ್ಕಾರದ 14ನೇ ಸಚಿವ ಸಂಪುಟ ಸಭೆ (Cabinet Meeting) ಇಂದು ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ನಡೆಯಲಿದೆ. ನಂದಿಬೆಟ್ಟದಲ್ಲಿ (Nandi Hills) ಸಚಿವ ಸಂಪುಟ ಸಭೆಗಾಗಿ ಅಂತಿಮ ಹಂತದ ಸಕಲ ಸಿದ್ಧತೆಗಳು ಭರದಿಂದ ಸಾಗಿವೆ.
ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಂಸಿ ಸುಧಾಕರ್ ಅಧಿಕಾರಿಗಳೊಂದಿಗೆ ಮಂಗಳವಾರ ಸಿದ್ಧತೆ ಪರಿಶೀಲನೆ ನಡೆಸಿದ್ದಾರೆ. ನಂದಿಗಿರಿಧಾಮ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸೇರಿದಂತೆ ಸಂಪುಟ ಸಹೋದ್ಯೋಗಿಗಳು ಬೆಳಗ್ಗೆ 11:40ಕ್ಕೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿಗ್ರಾಮಕ್ಕೆ ಆಗಮಿಸಿಲಿದ್ದಾರೆ. ಗ್ರಾಮದ ಶ್ರೀ ಭೋಗನಂದೀಶ್ವರಸ್ವಾಮಿ ದೇವಾಲಯಕ್ಕೆ ಭೇಟಿ ನೀಡಲಿದ್ದು, ದೇವರ ದರ್ಶನ ಪಡೆದ ನಂತರ ದೇವಾಲಯದ ವಸಂತ ಮಂಟಪ, ಪುಷ್ಕರಿಣಿಯಲ್ಲಿ ಸಚಿವ ಸಂಪುಟದ ಸಹೋದ್ಯೋಗಿಗಳ ಜೊತೆ ಫೋಟೋಶೂಟ್‌ನಲ್ಲಿ ಭಾಗಿಯಾಗಲಿದ್ದಾರೆ. ನಂತರ 11:50ಕ್ಕೆ ನಂದಿಬೆಟ್ಟಕ್ಕೆ ಬಸ್‌ನಲ್ಲಿ ಪ್ರಯಾಣ ಮಾಡಲಿದ್ದಾರೆ. ಇದನ್ನೂ ಓದಿ: ಚಾಮುಂಡಿ ತಾಯಿಗೆ ಶಿವಣ್ಣ ದಂಪತಿ ಪೂಜೆ
ಇನ್ನೂ ವಿಶೇಷ ಸಚಿವ ಸಂಪುಟ ಸಭೆ ಹಿನ್ನೆಲೆ ನಂದಿ ಗಿರಿಧಾಮದಲ್ಲಿರುವ ಕೆಎಸ್‌ಟಿಡಿಸಿ ಹೋಟೆಲ್‌ನ ಮಯೂರ ಸಭಾಂಗಣಕ್ಕೆ ಹೊಸ ಲುಕ್ ನೀಡಲಾಗಿದೆ. ಸಭಾಂಗಣವನ್ನು ನವೀಕರಿಸಿ ಸುಣ್ಣಬಣ್ಣ ಬಳಿದು ಹೊಸ ಹೊಸ ಚೇರ್ ಟೇಬಲ್‌ಗಳನ್ನು ಅಳವಡಿಸಲಾಗಿದೆ. ಲಕ್ಷಾಂತರ ರೂ. ಖರ್ಚು ಮಾಡಿ ಸಾಮಾನ್ಯ ಹಾಲನ್ನು ಹವಾನಿಯಂತ್ರಿತ ಸಭಾಂಗಣವನ್ನಾಗಿ ಪರಿವರ್ತಿಸಲಾಗಿದೆ. ಸಚಿವರ ವಾಸ್ತವ್ಯ ಹಾಗೂ ವಿಶ್ರಾಂತಿಗೆ ರೂಂಗಳನ್ನು 7 ಸ್ಟಾರ್ ರೂಂಗಳಾಗಿ ಆಧುನೀಕರಣಗೊಳಿಸಲಾಗಿದೆ. ಮತ್ತೊಂದೆಡೆ ಪೊಲೀಸರು ಭೋಗನಂದೀಶ್ವರ ದೇವಸ್ಥಾನ, ನಂದಿಗಿರಿಧಾಮದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದಾರೆ. ಇದನ್ನೂ ಓದಿ: ರೈಲ್ವೆ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು: ಸಿಎಂ ಆಗ್ರಹ
ಇನ್ನು ನಂದಿಬೆಟ್ಟದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು ಸೇರಿದಂತೆ ಬಯಲು ಸೀಮೆಯ ಜಿಲ್ಲೆಗಳಿಗೆ ಭರಪೂರ ಕೊಡುಗೆ ಘೋಷಣೆ ಮಾಡುವ ನೀರೀಕ್ಷೆಯಿದ್ದು, ಜನಪ್ರತಿನಿಧಿಗಳು, ಜನರ ಚಿತ್ತ ಸಂಪುಟ ಸಭೆಯತ್ತ ನೆಟ್ಟಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಮಾಸ್ ಲೀಡರ್ – ಬಿಆರ್ ಪಾಟೀಲ್ ಸ್ಪಷ್ಟನೆ
ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ (Nandi Hills) ನಡೆಯಬೇಕಿದ್ದ ವಿಶೇಷ ಸಚಿವ ಸಂಪುಟ ಸಭೆ (Cabinet Meeting) ಕೊನೆ ಕ್ಷಣದಲ್ಲಿ ರದ್ದಾಗಿದೆ.
ನಂದಿ ಬೆಟ್ಟದಲ್ಲಿ ನಡೆಯಬೇಕಿದ್ದ ಕ್ಯಾಬಿನೆಟ್ ಸಭೆಯನ್ನು ವಿಧಾನಸೌಧದ ಸಭಾಂಗಣದಲ್ಲೇ ನಡೆಸಲು ತೀರ್ಮಾನಿಸಲಾಗಿದೆ. ಸಿಎಂ ಸೂಚನೆಯ ಮೇರೆಗೆ ಕೊನೆಕ್ಷಣದಲ್ಲಿ ನಂದಿ ಬೆಟ್ಟದಲ್ಲಿ ನಡೆಯಬೇಕಿದ್ದ ವಿಶೇಷ ಸಚಿವ ಸಂಪುಟ ಸಭೆಯನ್ನ ರದ್ದು ಮಾಡಲಾಗಿದೆ ಎಂದು ತಿಳಿದುಬಂದಿದೆ.ಇದನ್ನೂ ಓದಿ: ನಾವಿರುವವರೆಗೂ ಎಸ್ಕಾಂಗಳ ಖಾಸಗೀಕರಣಕ್ಕೆ ಅವಕಾಶವಿಲ್ಲ: ಡಿ.ಕೆ ಶಿವಕುಮಾರ್
ವಿಶೇಷ ಸಚಿವ ಸಂಪುಟ ಸಭೆಗಾಗಿ ಕಳೆದ ಒಂದು ವಾರದಿಂದ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಸೇರಿದಂತೆ ಜಿಲ್ಲೆಯ ಅಧಿಕಾರಿಗಳು ಶ್ರಮವಹಿಸಿ ಸಾಕಷ್ಟು ಕೆಲಸ ಕಾರ್ಯಗಳನ್ನು ಕೈಗೊಂಡಿದ್ದರು.
ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಬಳ್ಳಾರಿ-ಚಿಕ್ಕಜಾಜೂರು (Ballary-Chikkajajur) ದ್ವಿಮುಖ ಮಾರ್ಗ ಯೋಜನೆಗೆ ಅನುಮೋದನೆ ನೀಡಲಾಯಿತು.
#Cabinet approves two multitracking projects across Indian Railways covering seven Districts in Jharkhand, Karnataka and Andhra Pradesh increasing the existing network by about 318 Kms
185 ಕಿ.ಮೀ ಉದ್ದದ ಈ ರೈಲು ಮಾರ್ಗವು ಕರ್ನಾಟಕದ ಬಳ್ಳಾರಿ, ಚಿತ್ರದುರ್ಗ ಜಿಲ್ಲೆ ಹಾಗೂ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಮೂಲಕ ಹಾದುಹೋಗಲಿದೆ. ಈ ಮಾರ್ಗದಲ್ಲಿ 19 ಸ್ಟೇಷನ್‌ಗಳು, 29 ಪ್ರಮುಖ ಸೇತುವೆಗಳು, 250 ಚಿಕ್ಕ ಸೇತುವೆಗಳು, 21 ರಸ್ತೆ ಮೇಲ್ಸೇತುವೆ ಮತ್ತು 85 ಕಿ.ಮೀ ರೈಲು ಮಾರ್ಗ ಇದೆ. ಇದಕ್ಕಾಗಿ ಸರ್ಕಾರ 3,342 ಮೀಸಲಿಟ್ಟಿದೆ.ಇದನ್ನೂ ಓದಿ: ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
ಈ ಯೋಜನೆಯಿಂದ ಕಲ್ಲಿದ್ದಲು, ಕಬ್ಬಿಣದ ಆಯಸ್ಕಾಂತ, ಕಬ್ಬಿಣದ ಒರೆ, ಕೋಕಿಂಗ್ ಕಲ್ಲಿದ್ದಲು, ಉಕ್ಕು, ಗೊಬ್ಬರ, ಆಹಾರ ಧಾನ್ಯಗಳು ಮತ್ತು ಇತರ ಉತ್ಪನ್ನಗಳ ಸಾಗಣೆಗೆ ಅನುಕೂಲವಾಗಲಿದೆ. ಇದು 470 ಗ್ರಾಮಗಳು ಮತ್ತು ಸುಮಾರು 15 ಲಕ್ಷ ಜನರಿಗೆ ಸುಧಾರಿತ ಸಂಪರ್ಕ ಕಲ್ಪಿಸಲಿದೆ.
#Cabinet approves the Ballari – Chikjajur Doubling (185 kms) project line which traverses through Ballari and Chitradurga districts of Karnataka and Anantapur district of Andhra Pradesh
This project will save 101 crore kg CO2 emissions annually, equivalent to planting 4 crore… pic.twitter.com/ukquSd79Jd