Tag: cabinet ministers

  • ಕೇಂದ್ರ ಸಚಿವರಾಗಿ ಮೊದಲ ಕಡತಕ್ಕೆ ಹೆಚ್‌ಡಿಕೆ ಸಹಿ!

    ಕೇಂದ್ರ ಸಚಿವರಾಗಿ ಮೊದಲ ಕಡತಕ್ಕೆ ಹೆಚ್‌ಡಿಕೆ ಸಹಿ!

    ನವದೆಹಲಿ: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರು ಬುಧವಾರ ಮೊದಲ ಕಡತಕ್ಕೆ ಸಹಿ ಹಾಕಿದ್ದಾರೆ.

    ಉದ್ಯೋಗ ಭವನದ ಉಕ್ಕು ಸಚಿವಾಲಯದ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ ನಂತರ, ಕರ್ನಾಟಕದ ದೇವದಾರಿ ಕಬ್ಬಿಣ ಅದಿರು ಗಣಿಗಾರಿಕೆ ಯೋಜನೆ ಸಂಬಂಧಿಸಿದ ಕಡಿತಕ್ಕೆ ಹೆಚ್‌ಡಿಕೆ ಸಹಿ ಹಾಕಿದ್ದಾರೆ. ನಂತರ ಕೇಂದ್ರದ ಹಣಕಾಸು ಇಲಾಖೆ ಅನುಮೋದನೆಗೆ ಕಳುಹಿಸಲಾಗಿದೆ.

    ಬಳ್ಳಾರಿ ಜಿಲ್ಲೆಯಲ್ಲಿ ಉದ್ದೇಶಿತ ಗಣಿಗಾರಿಕೆ ಯೋಜನೆ ಇದಾಗಿದ್ದು, ಕುದುರೆಮುಖ ಕಬ್ಬಿಣ ಅದಿರು ಕಂಪನಿ (KIOCL Limited) ಈ ಯೋಜನೆಯನ್ನು ನಿರ್ವಹಿಸಲಿದೆ. ಹಲವು ದಿನಗಳಿಂದ ಈ ಕಡರ ಬಾಕಿ ಉಳಿದಿತ್ತು ಎಂದು ಹೇಳಲಾಗಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ಭಾರತ್ ಮಾತಾ ಕೀ ಜೈ, ಜೈ ಶ್ರೀರಾಮ್ ಅನ್ನೋದೇ ತಪ್ಪು: ಆರ್.ಅಶೋಕ್

    ಮಂಗಳವಾರವಷ್ಟೇ ಕೇಂದ್ರ ಸಚಿವರಾಗಿ ಹೆಚ್.ಡಿ ಕುಮಾರಸ್ವಾಮಿ ಅಧಿಕಾರ ವಹಿಸಿಕೊಂಡಿದ್ದರು. ಇದನ್ನೂ ಓದಿ: ಪ್ರಸಿದ್ಧರು, ಸೆಲೆಬ್ರಿಟಿಗಳೆಂದು ಬಿಡುವ ಪ್ರಶ್ನೆ ಇಲ್ಲ: ದರ್ಶನ್ ಕೇಸ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ 

  • ಅಧಿಕಾರ ಸ್ವೀಕರಿಸಿದ ರಾಜ್ಯದ ನಾಲ್ವರು ಕೇಂದ್ರ ಸಚಿವರು

    ಅಧಿಕಾರ ಸ್ವೀಕರಿಸಿದ ರಾಜ್ಯದ ನಾಲ್ವರು ಕೇಂದ್ರ ಸಚಿವರು

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಸಂಪುಟದಲ್ಲಿ (Modi Cabinet) ಕೇಂದ್ರ ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ್ದ ಸಂಪುಟ ದರ್ಜೆ ಸಚಿವರಾದ ಪ್ರಲ್ಹಾದ್ ಜೋಶಿ, ಹೆಚ್.ಡಿ ಕುಮಾರಸ್ವಾಮಿ, ರಾಜ್ಯಖಾತೆ ಸಚಿವರಾದ ಶೋಭಾ ಕರಂದ್ಲಾಜೆ ಮತ್ತು ವಿ.ಸೋಮಣ್ಣ ಖಾತೆ ಹಂಚಿಕೆ ಬಳಿಕ ತಮ್ಮ ಕಚೇರಿಗಳಲ್ಲಿ ಅಧಿಕಾರ ಸ್ವೀಕರಿಸಿದರು.

    ಹೆಚ್.ಡಿ ಕುಮಾರಸ್ವಾಮಿ (HD Kumaraswamy)ಅವರು ಉದ್ಯೋಗ ಭವನದಲ್ಲಿರುವ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವಾಲಯದಲ್ಲಿ ಅಧಿಕಾರ ಸ್ವೀಕರಿಸಿದರು. ಪೂಜೆ ಸಲ್ಲಿಸಿ ಬಳಿಕ ಕಡತಕ್ಕೆ ಸಹಿ ಹಾಕುವ ಮೂಲಕ ಹೆಚ್‌ಡಿಕೆ ಅಧಿಕಾರ ಸ್ವೀಕರಿಸಿದರು. ಆಹಾರ ಮತ್ತು ನಾಗರಿಕ ಸರಬರಾಜು ಖಾತೆ, ನವೀಕರಿಸಬಹುದಾದ ಇಂಧನ ಖಾತೆ ಸಚಿವರಾಗಿ ಕೃಷಿ ಮತ್ತು ಊರ್ಜಾ ಭವನದಲ್ಲಿ ಪ್ರಲ್ಹಾದ್ ಜೋಶಿ (Pralhad Joshi) ಅಧಿಕಾರ ಸ್ವೀಕರಿಸಿದರು. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣ – ನಟ ದರ್ಶನ್ ಸೇರಿ 13 ಆರೋಪಿಗಳು 6 ದಿನ ಪೊಲೀಸ್ ಕಸ್ಟಡಿಗೆ

    ವಿ. ಸೋಮಣ್ಣ (V Somanna) ರೈಲ್ವೆ ಹಾಗೂ ಜಲಶಕ್ತಿ ಭವನದಲ್ಲಿ ಜಲಶಕ್ತಿ ರಾಜ್ಯಖಾತೆಯನ್ನು ವಹಿಸಿಕೊಂಡರು. ಶೋಭಾ ಕರಂದ್ಲಾಜೆ (Shobha Karandlaje) ಅವರು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ರಾಜ್ಯಖಾತೆ ಮತ್ತು ಕಾರ್ಮಿಕ ಇಲಾಖೆ ರಾಜ್ಯಖಾತೆ ಸಚಿವರಾಗಿ ಅಧಿಕಾರ ಸ್ವೀಕರಿಸಿದರು. ಇದನ್ನೂ ಓದಿ: ಬಿಜೆಪಿಯ ಮೋಹನ್ ಚರಣ್ ಮಾಝಿ ಒಡಿಶಾದ ನೂತನ ಸಿಎಂ

    ಅಧಿಕಾರ ಸ್ವೀಕಾರ ಬಳಿಕ ಮಾತನಾಡಿದ ಕೇಂದ್ರ ಸಚಿವ ವಿ. ಸೋಮಣ್ಣ, ಹೊಸ ಜವಾಬ್ದಾರಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಾಗೂ ನನ್ನ ಪಕ್ಷಕ್ಕೆ ಧನ್ಯವಾದಗಳು. ಕಳೆದ ಹತ್ತು ವರ್ಷದಲ್ಲಿ ಮೋದಿ ಅವರ ನಾಯಕತ್ವ, ದೂರದೃಷ್ಟಿ ಚಿಂತನೆ ವಿಶ್ವ ಭಾರತದತ್ತ ನೋಡುವಂತೆ ಮಾಡಿದೆ. ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿದ್ದಾರೆ. ಸರ್ಕಾರದ ಸೌಲಭ್ಯಗಳನ್ನು 140 ಕೋಟಿ ಜನರಿಗೆ ಮುಟ್ಟಿಸಬೇಕು. ಅಶ್ವಿನಿ ವೈಷ್ಣವ್ ಅವರ ನೇತೃತ್ವದಲ್ಲಿ ರೈಲ್ವೆ ಇಲಾಖೆ ಹತ್ತು ವರ್ಷದಲ್ಲಿ ಹಲವು ಕೊಡುಗೆ ನೀಡಿದೆ. ಅಶ್ವಿನಿ ವೈಷ್ಣವ್ ಜೊತೆಗೆ ಕೆಲಸ ಮಾಡಲು ಆನಂದವಾಗುತ್ತದೆ. ವಿಕಸಿತ್ ಭಾರತ್ ಯಶಸ್ಸಿನತ್ತ ಕೊಂಡೊಯ್ಯಲು ಪ್ರಯತ್ನಿಸುತ್ತೇವೆ ಎಂದರು. ಇದನ್ನೂ ಓದಿ: ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್‌ಡಿಕೆ ರಾಜೀನಾಮೆ ನೀಡ್ತಾರೆ, ಚನ್ನಪಟ್ಟಣ ಕ್ಷೇತ್ರ ಉಳಿಸಿಕೊಳ್ತಾರೆ: ಡಿ.ಕೆ‌.ಸುರೇಶ್

    ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿ, ಮಾನ್ಯ ಪ್ರಧಾನಿಗಳು ನನಗೆ ಈ ಖಾತೆ ನೀಡಿದ್ದಾರೆ. ನನಗೆ ಈ ಜವಾಬ್ದಾರಿ ನೀಡಿದ್ದಕ್ಕಾಗಿ ಮೋದಿ ಅವರಿಗೆ ಧನ್ಯವಾದಗಳು. ನಾನು ನಮ್ಮ ಕ್ಷೇತ್ರ, ರಾಜ್ಯ, ದೇಶದ ಜನತೆಗೆ ಧನ್ಯವಾದ ಹೇಳುತ್ತೇನೆ. ಪ್ರಧಾನಿ, ಮುಂದಿನ 125 ದಿನಗಳ ಕಾರ್ಯ ಹೇಗಿರಬೇಕು ಎಂಬುದಕ್ಕೆ ಮೊದಲೇ ಹೇಳಿದ್ದಾರೆ. ಪೀಯುಶ್ ಗೋಯಲ್ ಕೂಡ ಈ ಇಲಾಖೆಯಲ್ಲಿ ಕೆಲಸ ಮಾಡಿದ್ದಾರೆ. 80 ಕೋಟಿ ಜನರಿಗೆ ದೊಡ್ಡ ಪ್ರಮಾಣದಲ್ಲಿ ಆಹಾರ ಭದ್ರತಾ ಕಾರ್ಯಕ್ರಮ ಮಾಡಿದ್ದಾರೆ. ಇಂತಹ ಸ್ಕೀಮ್ ನಡೆಸುವ ಇಲಾಖೆಯಲ್ಲಿ ಮೋದಿಯವರು ನನಗೆ ಸ್ಥಾನ ನೀಡಿದ್ದಾರೆ. ನಂಬಿಕೆ ಇಟ್ಟು ನನಗೆ ಈ ಖಾತೆ ನೀಡಿದ್ದಕ್ಕೆ ಧನ್ಯವಾದಗಳು. ನಿಜಕ್ಕೂ ಪ್ರಧಾನಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು. ಇದನ್ನೂ ಓದಿ: ಭಾರತದಿಂದ ಕಳ್ಳತನವಾಗಿದ್ದ 500 ವರ್ಷಗಳ ಪುರಾತನ ವಿಗ್ರಹ ಮರಳಿಸಲು ಮುಂದಾದ ಆಕ್ಸ್‌ಫರ್ಡ್ ವಿವಿ

  • ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೋದಿ

    ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೋದಿ

    ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿಯವರು (Narendra Modi) ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ (Oath Taking) ಸ್ವೀಕರಿಸಿದ್ದಾರೆ.

    72 ಸಚಿವರೊಂದಿಗೆ ಇಂದು ಮೋದಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಈ ಮೂಲಕ ಜವಾಹರಲಾಲ್ ನೆಹರೂ ಬಳಿಕ ಮೂರನೇ ಬಾರಿಗೆ ಮೋದಿ ಪ್ರಧಾನಿ ಹುದ್ದೆಯನ್ನು ಅಲಂಕರಿಸಿದ್ದಾರೆ. 72 ಸಚಿವರ ಪೈಕಿ 32 ಕ್ಯಾಬಿನೆಟ್ ಸಚಿವರು, 5 ಸ್ವತಂತ್ರ ಮತ್ತು 36 ರಾಜ್ಯ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದನ್ನೂ ಓದಿ: ಮೋದಿ ಸಂಪುಟಕ್ಕೆ ಜೆಪಿ ನಡ್ಡಾ?

    73ರ ಹರೆಯದ ಮೋದಿ ಅವರು ಎನ್‌ಡಿಎ ಮೈತ್ರಿಕೂಟದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಧಾನಿ ಮೋದಿಗೆ ಪ್ರಮಾಣ ವಚನ ಬೋಧಿಸಿದರು. ಪ್ರಧಾನಿ ಮೋದಿ ನಂತರ ರಾಜನಾಥ್ ಸಿಂಗ್ ಮತ್ತು ಅಮಿತ್ ಶಾ ಪ್ರಮಾಣ ವಚನ ಸ್ವೀಕರಿಸಿದರು. ಇದನ್ನೂ ಓದಿ: ನವೀನ್‌ ಪಟ್ನಾಯಕ್‌ ಆಪ್ತ ವಿ.ಕೆ.ಪಾಂಡಿಯನ್‌ ಸಕ್ರಿಯ ರಾಜಕಾರಣಕ್ಕೆ ವಿದಾಯ

    ಇವರ ಬಳಿಕ ನಿತಿನ್ ಗಡ್ಕರಿ, ಜೆಪಿ ನಡ್ಡಾ, ಶಿವರಾಜ್ ಸಿಂಗ್ ಚೌಹಾಣ್ ಮತ್ತು ನಿರ್ಮಲಾ ಸೀತಾರಾಮನ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದನ್ನೂ ಓದಿ: ಮತ್ತೆ ಪ್ರಧಾನಿಯಾಗಿ ಮೋದಿ ಪದಗ್ರಹಣ – ಪುರಿ ಬೀಚ್‌ನಲ್ಲಿ ಮರಳು ಕಲಾಕೃತಿ ರಚಿಸಿ ಶುಭಕೋರಿದ ಕಲಾವಿದ

  • ಐವರು ಟಾಪ್ ನಾಯಕರು ಕಾಂಗ್ರೆಸ್‌ಗೆ ಗುಡ್‌ಬೈ – ಕಮಲಕ್ಕೆ ಹಾಯ್

    ಐವರು ಟಾಪ್ ನಾಯಕರು ಕಾಂಗ್ರೆಸ್‌ಗೆ ಗುಡ್‌ಬೈ – ಕಮಲಕ್ಕೆ ಹಾಯ್

    ಚಂಡೀಗಢ: ಪಂಚರಾಜ್ಯ ಚುನಾವಣೆಯಲ್ಲಿ ತೀವ್ರ ಮುಖಭಂಗಕ್ಕೀಡಾದ ಕಾಂಗ್ರೆಸ್ ತನ್ನ ಒಳಜಗಳಗಳಿಂದಾಗಿ ಪ್ರಮುಖ ನಾಯಕರನ್ನು ಕಳೆದುಕೊಳ್ಳುತ್ತಿದೆ. ಇಂದೂ ಸಹ ಪಂಜಾಬ್‌ನಲ್ಲಿಯೂ ಐವರು ಪ್ರಮುಖ ನಾಯಕರು ಸಾಮೂಹಿಕವಾಗಿ ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿದ್ದು, ಬಿಜೆಪಿ ಸೇರಲು ಮುಂದಾಗಿರುವುದು ಪಕ್ಷದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.

    bjp - congress

    ಕಳೆದ ತಿಂಗಳು ಪಂಜಾಬ್‌ನ ಮಾಜಿ ಕಾಂಗ್ರೆಸ್ ಅಧ್ಯಕ್ಷ ಸುನಿಲ್ ಜಾಖರ್ ಅವರು ಬಿಜೆಪಿ ಸೇರಿದ ನಂತರ ಕಾಂಗ್ರೆಸ್‌ನಿಂದ ಸಾಮೂಹಿಕ ವಲಸೆ ಪ್ರಾರಂಭವಾಗಿದೆ. ಪಂಜಾಬ್ ಸಂಪುಟದ ಮಾಜಿ ಸಚಿವರಾದ ಗುರುಪ್ರೀತ್ ಸಿಂಗ್ ಕಂಗಾರ್, ಬಲ್ಬೀರ್ ಸಿಂಗ್ ಸಿಧು, ರಾಜ್ ಕುಮಾರ್ ವೆರ್ಕಾ, ಸುಂದರ್ ಶಾಮ್ ಅರೋರಾ ಮತ್ತು ಮಾಜಿ ಶಾಸಕ ಕೇವಲ್ ಸಿಂಗ್ ಧಿಲ್ಲೋನ್ ಅವರಿಂದು ಬಿಜೆಪಿ ಸೇರ್ಪಡೆಯಾಗಲು ಸಿದ್ಧರಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

    ವಿಧಾನಸಭೆಯತ್ತ ಕಾಂಗ್ರೆಸ್ ಕಣ್ಣು: ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ, ಮಣಿಪುರ ಪಂಚರಾಜ್ಯಗಳ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್ ಮುಂಬರುವ ವಿಧಾನಸಭೆ ಚುನಾವಣೆಗಳಲ್ಲಿ ಉತ್ತಮ ಸಾಧನೆ ಮಾಡಲು ಪ್ರಯತ್ನ ಆರಂಭಿಸಿದೆ. ಅದಕ್ಕಾಗಿಯೇ ಕಾರ್ಯಕರ್ತರ ಸೇವೆ ಗಮನಿಸಿ 50 ವರ್ಷದೊಳಗಿನ ಶೇ.50 ಮಂದಿಗೆ ಮುಂಬರುವ ವಿಧಾನಸಭೆಯಲ್ಲಿ ಟಿಕೆಟ್ ನೀಡಲು ನಿರ್ಧರಿಸಿದೆ. ಅಲ್ಲದೆ, ಜೆಡಿಎಸ್, ಬಿಜೆಪಿಗೆ ಸರಿಸಮನಾಗಿ ಪಕ್ಷಕ್ಕೆ ಯುವ ಸಮೂಹವನ್ನು ಸೆಳೆಯುವುದೂ ಇದರ ಉದ್ದೇಶವಾಗಿದೆ.

  • ಕ್ಯಾಬಿನೆಟ್ ಸಚಿವರ ವಿರುದ್ಧವೇ ರೇಣುಕಾಚಾರ್ಯ ವಾಗ್ದಾಳಿ

    ಕ್ಯಾಬಿನೆಟ್ ಸಚಿವರ ವಿರುದ್ಧವೇ ರೇಣುಕಾಚಾರ್ಯ ವಾಗ್ದಾಳಿ

    ದಾವಣಗೆರೆ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಪಕ್ಷದ ಎಲ್ಲಾ ಕಾರ್ಯಕರ್ತರ ಶ್ರಮವಿದೆ. ಆದರೆ ಇದೀಗ ಕೆಲ ಕ್ಯಾಬಿನೆಟ್ ಸಚಿವರು ದುರಹಂಕಾರದಿಂದ ವರ್ತಿಸುತ್ತಿದ್ದಾರೆ ಎಂದು ಹೊನ್ನಾಳಿ ಶಾಸಕ ರೇಣುಕಾಚಾರ್ಯ ತಮ್ಮದೇ ಪಕ್ಷದ ಸಚಿವರ ವಿರುದ್ಧ ವಾಗ್ದಳಿ ನಡೆಸಿದ್ದಾರೆ.

    ಹೊನ್ನಾಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಒಳ್ಳೆಯ ಆಡಳಿತ ಮಾಡುತ್ತಿದ್ದಾರೆ. ಆದರೆ ಕ್ಯಾಬಿನೆಟ್‍ನಲ್ಲಿರುವ ಕೆಲವು ಸಚಿವರ ವರ್ತನೆ ಸರಿಯಿಲ್ಲ. ಸಚಿವ ಸಂಪುಟದಲ್ಲಿರುವ ಕೆಲ ಸಚಿವರ ದುರಹಂಕಾದಿಂದ ವರ್ತಿಸುತ್ತಿದ್ದು, ಅವರ ವರ್ತನೆಗಳು ಸರ್ವಾಧಿಕಾರಿಯಂತೆ ಕಂಡುಬರುತ್ತಿದೆ. ಬೇರೆ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಅವರಿಗೆ ಕಳಕಳಿ ಇಲ್ಲ. ಅವರು ಅವರ ಕ್ಷೇತ್ರಕ್ಕೆ ಮತ್ತು ವಿಧಾನಸೌಧದ ಮೂರನೇ ಕೊಠಡಿಗೆ ಸೀಮಿತವಾಗಿದ್ದಾರೆ. ಜನರು ಅಧಿಕಾರ ಕೊಟ್ಟದ್ದು ಜನರ ಸೇವೆಗೆ, ಲಾಭದಾಯಕ ಹುದ್ದೆ ಪಡೆಯೋದಕ್ಕೆ ಅಲ್ಲ ಎಂದು ಗುಡುಗಿದ್ದಾರೆ.

    ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ನಾನು ರೆಸಾರ್ಟ್ ನಲ್ಲಿ ಕೆಲ ಶಾಸಕರೊಂದಿಗೆ ಮಾತುಕತೆ ಮಾಡಿದ್ದೇನೆ. ಆದರೆ ಇದೀಗ ಕೆಲವು ಸಚಿವರ ದುರಹಂಕಾರ ನನಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಈ ಬಗ್ಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ನಾನು ಮಾತನಾಡ್ತೇನೆ. ಬಿಜೆಪಿ ಒಳ್ಳೆಯ ಆಡಳಿತ ನೀಡಲಿ ಎನ್ನವುದು ಜನರ ಬಯಕೆ ಆಗಿದೆ. ಅದರಂತೆ ರಾಜ್ಯದಲ್ಲಿ ಸಿಎಂ ಉತ್ತಮ ಆಡಳಿತ ನಡೆಸುತ್ತಿದ್ದಾರೆ. ಆದರೆ ಕ್ಯಾಬಿನೆಟ್ ನಲ್ಲಿ ಕೆಲವು ಸಚಿವರಿಂದ ಸರ್ಕಾರಕ್ಕೆ ಕೇಡು ಬರುತ್ತಿದೆ. ನಿನ್ನೆ ಬಿಜೆಪಿ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಬೇಕಿತ್ತು ಕಾರಣಾಂತರಗಳಿಂದ ಆಗಿಲ್ಲ ಎಂದರು.

    ಕೆಲ ಕ್ಯಾಬಿನೆಟ್ ಸಚಿವರಿಗೆ ಬಿಜೆಪಿ ಶಾಸಕರು ಯಾರು ಅಂತ ಸರಿಯಾಗಿ ಹೆಸರು ಗೊತ್ತಿಲ್ಲ. ಕೆಲದಿನಗಳ ಹಿಂದೆ ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿ ಸಚಿವರ ವರ್ತನೆ ಬಗ್ಗೆ ಮಾತನಾಡಿದ್ದೆ. ಅವರು ಕ್ರಮಕ್ಕೆ ಮುಂದಾಗುತ್ತಾರೆ ಎನ್ನುವ ಭರವಸೆ ಇದೆ. ದುರಹಂಕಾರಿ ಸಚಿವರಿಗೆ ನಾನು ವಿನಂತಿ ಮಾಡಲ್ಲ, ಅವರು ತಿಳಿದುಕೊಳ್ಳಬೇಕು ಈ ಸರ್ಕಾರ ಬರುವುದಕ್ಕೆ ಒಬ್ಬಿಬ್ಬರ ಪಾತ್ರ ಅಲ್ಲ, ಪ್ರತಿಯೊಬ್ಬರ ಶ್ರಮ ಇದೆ ಎನ್ನುವುದನ್ನು ಮೊದಲು ಅರ್ಥಮಾಡಿಕೊಳ್ಳಲಿ. ಯಡಿಯೂರಪ್ಪ ಅವರ ವರ್ಚಸ್ಸು, ಮೋದಿ ಅವರ ವರ್ಚಸ್ಸು ಮತ್ತು ಬಿಜೆಪಿ ಕಾರ್ಯಕರ್ತರ ಶ್ರಮದಿಂದ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದರು.

  • ಎಚ್‍ಡಿಕೆ ಪೂರ್ಣಾವಧಿ ಸಿಎಂ ಆಗಿ ಮುಂದುವರಿಯುವ ಬಗ್ಗೆ ಚರ್ಚೆ ನಡೆದಿಲ್ಲ: ಸಿದ್ದರಾಮಯ್ಯ

    ಎಚ್‍ಡಿಕೆ ಪೂರ್ಣಾವಧಿ ಸಿಎಂ ಆಗಿ ಮುಂದುವರಿಯುವ ಬಗ್ಗೆ ಚರ್ಚೆ ನಡೆದಿಲ್ಲ: ಸಿದ್ದರಾಮಯ್ಯ

    ನವದೆಹಲಿ: ಹೆಚ್ ಡಿ ಕುಮಾರಸ್ವಾಮಿಯವರು ಪೂರ್ಣಾವಧಿ ಸಿಎಂ ಆಗಿ ಮುಂದುವರಿಯುವ ಬಗ್ಗೆ ಇನ್ನೂ ಚರ್ಚೆಯಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪಷ್ಟಪಡಿಸಿದ್ದಾರೆ.

    ರಾಜ್ಯ ಸಚಿವ ಸಂಪುಟ ರಚನೆ ಕುರಿತಾದ ರಾಹುಲ್ ಗಾಂಧಿ ಜೊತೆಗಿನ ಸಭೆ ರದ್ದಾಗಿದೆ. ರಾಹುಲ್ ಗಾಂಧಿಯವರು ವಿದೇಶ ಪ್ರವಾಸಕ್ಕೆ ತೆರಳಲಿದ್ದಾರೆ. ಹಾಗಾಗಿ ಒಂದು ವಾರದ ಮಟ್ಟಿಗೆ ಸಭೆ ಮುಂದೂಡಿಕೆಯಾಗಿದೆ. ಮುಂದಿನವಾರ ಮತ್ತೆ ರಾಹುಲ್ ಗಾಂಧಿ ಜೊತೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು.

    ಸಚಿವ ಸ್ಥಾನ ಹಂಚಿಕೆ ಬಗ್ಗೆ ಯಾವುದೇ ಗೊಂದಲ ಇಲ್ಲ. ಖಾತೆ ಹಂಚಿಕೆ ಬಗ್ಗೆ ಚರ್ಚೆಯಾಗಬೇಕಿದೆ. ಸಿಎಂ ಕುಮಾರಸ್ವಾಮಿ ಮತ್ತು ಡಿಸಿಎಂ ಪರಮೇಶ್ವರ್ ಚರ್ಚಿಸುತ್ತಾರೆ. ಅಗತ್ಯ ಬಿದ್ದರೆ ನಾನು ಕೂಡ ಕುಮಾರಸ್ವಾಮಿ ಜೊತೆ ಚರ್ಚಿಸುತ್ತೇನೆ. ಹೊಸಬರಿಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡುವ ಬಗ್ಗೆ ಒತ್ತಡ ಇದೆ. ಹೈಕಮಾಂಡ್ ಜೊತೆ ಚರ್ಚಿಸಿ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

    ಮೇ 25 ರಂದು ವಿಶ್ವಾಸಮತ ಸಾಬೀತು ಪಡಿಸಿದ ನಂತರ ದೆಹಲಿಗೆ ಬರುವಂತೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೂಚಿಸಿದ್ದರು.

  • ಯಾವ್ದೂ ಬೇಡ ಅಂದ್ರೆ ರಾಜಕೀಯ ನಿವೃತ್ತಿಯಾಗ್ತೀನಿ: ರಾಮಲಿಂಗಾ ರೆಡ್ಡಿ

    ಯಾವ್ದೂ ಬೇಡ ಅಂದ್ರೆ ರಾಜಕೀಯ ನಿವೃತ್ತಿಯಾಗ್ತೀನಿ: ರಾಮಲಿಂಗಾ ರೆಡ್ಡಿ

    ಬೆಂಗಳೂರು: ನನ್ನನ್ನು ಸಚಿವ ಸ್ಥಾನದಿಂದ ತೆಗೆದರೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ರಾಮಲಿಂಗಾರೆಡ್ಡಿ, 4 ವರ್ಷ ಪೂರೈಸಿದ ಸಚಿವರನ್ನ ಸಚಿವ ಸಂಪುಟದಿಂದ ಕೈಬಿಡುವ ನಿರ್ಧಾರಕ್ಕೆ ರಾಮಲಿಂಗಾ ರೆಡ್ಡಿ ವಿರೋಧ ವ್ಯಕ್ತಪಡಿಸಿದ್ರು. ನನ್ನ ಮೇಲೆ ಕಳಂಕ ಇಲ್ಲ. ಯಾವುದು ಬೇಡ ಅಂದ್ರೆ ರಾಜಕೀಯ ನಿವೃತ್ತಿ ಆಗ್ತೇನೆ ಅಂದ್ರು.

    ಪಕ್ಷದ ಕೆಲಸದ ಜೊತೆಗೆ ನಾವು ಸಚಿವರಾಗಿ ಕೆಲಸ ಮಾಡಿದ್ರೆ ಪಕ್ಷಕ್ಕೆ ಬಲ ಬರುತ್ತೆ. ನೀವು ಸಚಿವರಾಗಿ ಕೆಲಸ ಮಾಡಿದ್ದು ಸಾಕು ಅಂದ್ರೆ ಏನ್ ಮಾಡೊಕೆ ಆಗುತ್ತೆ. ಯಾವುದೂ ಬೇಡ ನೀವು ಹಿರಿಯರು ಅಂದ್ರೆ ರಾಜಕೀಯ ನಿವೃತ್ತಿ ಆಗ್ತೇನೆ ಅಂತ ಹೇಳಿದ್ರು.

    ಕಾಂಗ್ರೆಸ್ ಹೈಕಮಾಂಡ್ ಗೆ ಸಾವಿರ ಕೋಟಿ ಕಪ್ಪ ಕೊಟ್ಟಿರುವ ವಿಚಾರ ಒಂದೆಡೆ ಆದ್ರೆ, ಇದೀಗ ಕಾಂಗ್ರೆಸ್ ನಲ್ಲಿ ಭಾರೀ ಬದಲಾವಣೆ ತರಲು ಸಮನ್ವಯ ಸಮಿತಿ ಸಜ್ಜಾಗಿದೆ. ಭಾನುವಾರದಂದು ನಡೆಯಲಿರುವ 20 ಜನ ಸದಸ್ಯರಿರುವ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆಯಲ್ಲಿ ಹಿರಿಯ ಸಚಿವರಿಗೆ ಗೇಟ್ ಪಾಸ್ ನೀಡಲು ಮಹತ್ವದ ಚರ್ಚೆ ನಡೆಯಲಿದೆ.