Tag: cabinet

  • ಕರ್ನಾಟಕದ 24 ಸಚಿವರು ಪ್ರಮಾಣವಚನ ಸ್ವೀಕಾರ

    ಕರ್ನಾಟಕದ 24 ಸಚಿವರು ಪ್ರಮಾಣವಚನ ಸ್ವೀಕಾರ

    ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನ (Karnataka Congress) ಸಿದ್ದರಾಮಯ್ಯ (Siddaramaiah) ಸರ್ಕಾರ ಅಧಿಕಾರಕ್ಕೆ ಬಂದು ವಾರ ಕಳೆದಿದ್ದು, ಶನಿವಾರ ಸಂಪುಟದ (Cabinet) 24 ನೂತನ ಸಚಿವರು (Ministers ಪ್ರಮಾಣವಚನ ಸ್ವೀಕರಿಸಿದ್ದಾರೆ.

    ಶನಿವಾರ ಬೆಳಗ್ಗೆ 11:45ರ ವೇಳೆಗೆ ರಾಜಭವನದ ಗಾಜಿನ ಮನೆಯಲ್ಲಿ 24 ಸಚಿವರಿಗೆ ರಾಜ್ಯದ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಘೋಷಿಸಿದ್ದಾರೆ.

    ನೂತನ ಸಚಿವರು:
    ಶಿವಾನಂದ ಪಾಟೀಲ್ – ಲಿಂಗಾಯತ (ಬಸವನಬಾಗೇವಾಡಿ), ಎನ್‌ಎಸ್ ಮಲ್ಲಿಕಾರ್ಜುನ್- ಲಿಂಗಾಯತ (ದಾವಣಗೆರೆ ಉತ್ತರ), ಹೆಚ್.ಕೆ.ಪಾಟೀಲ್ – ರೆಡ್ಡಿ ಲಿಂಗಾಯತ (ಗದಗ), ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ – ಒಕ್ಕಲಿಗ (ಬ್ಯಾಟರಾಯನಪುರ), ಚಲುವರಾಯ ಸ್ವಾಮಿ – ಒಕ್ಕಲಿಗ (ನಾಗಮಂಗಲ), ಕೆ. ವೆಂಕಟೇಶ್ – ಒಕ್ಕಲಿಗ (ಪಿರಿಯಾಪಟ್ಟಣ), ಎಚ್‌ಸಿ ಮಹದೇವಪ್ಪ – ಎಸ್‌ಸಿ – ಬಲಗೈ (ಟಿ.ನರಸೀಪುರ), ಈಶ್ವರ್ ಖಂಡ್ರೆ – ಲಿಂಗಾಯತ (ಭಾಲ್ಕಿ), ಕೆ.ಎನ್ ರಾಜಣ್ಣ- ಎಸ್‌ಟಿ (ಮಧುಗಿರಿ), ಶರಣ ಬಸಪ್ಪ ದರ್ಶನಾಪೂರ್, ಆರ್. ಬಿ ತಿಮ್ಮಾಪೂರ್, ಶಿವರಾಜ್ ತಂಗಡಗಿ, ಶರಣ ಪ್ರಕಾಶ್ ಪಾಟೀಲ್- ಲಿಂಗಾಯತ (ಸೇಡಂ), ಮಂಕಾಳ ವೈದ್ಯ – ಮೊಗವೀರ ( ಭಟ್ಕಳ), ಲಕ್ಷ್ಮಿ ಹೆಬ್ಬಾಳ್ಕರ್ – ಲಿಂಗಾಯತ (ಬೆಳಗಾವಿ ಗ್ರಾ.), ರಹೀಂ ಖಾನ್ – ಮುಸ್ಲಿಂ (ಬೀದರ್ ಉತ್ತರ), ಎಂ.ಸಿ ಸುಧಾಕರ್ – ಒಕ್ಕಲಿಗ (ಚಿಂತಾಮಣಿ), ಡಿ ಸುಧಾಕರ್, ಸಂತೋಷ್ ಲಾಡ್ – ಮರಾಠ (ಕಲಘಟಗಿ), ಬೋಸರಾಜು – ಕ್ಷತ್ರೀಯ (ಮಾಜಿ ಎಂಎಲ್‌ಸಿ), ಬೈರತಿ ಸುರೇಶ್ – ಕುರುಬ (ಹೆಬ್ಬಾಳ), ಮಧು ಬಂಗಾರಪ್ಪ – ಈಡಿಗ (ಸೊರಬ) ಹಾಗೂ ಬಿ. ನಾಗೇಂದ್ರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದನ್ನೂ ಓದಿ: ಅಂತಿಮಗೊಂಡ ಸಚಿವರ ಪಟ್ಟಿ – ಯಾವ ಜಿಲ್ಲೆಗೆ ಎಷ್ಟು ಮಂತ್ರಿಗಿರಿ?

    ಸಂಪುಟದ ಎಲ್ಲ 34 ಸ್ಥಾನಗಳು ಭರ್ತಿಯಾಗಿದ್ದು, ಸಂಪುಟದಲ್ಲಿ 22 ಜಿಲ್ಲೆಗಳಿಗೆ ಮಂತ್ರಿ ಭಾಗ್ಯ ದೊರಕಿದೆ. 9 ಜಿಲ್ಲೆಗಳಿಗೆ ಸಂಪುಟದಲ್ಲಿ ಯಾವುದೇ ಸ್ಥಾನ ನೀಡಲಾಗಿಲ್ಲ. ಚಾಮರಾಜನಗರ, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಕೋಲಾರ, ವಿಜಯನಗರ, ಹಾವೇರಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ 22 ಜಿಲ್ಲೆಗಳಿಗೆ ಮಂತ್ರಿ ಸ್ಥಾನಗಳು ದೊರೆತಿವೆ. ಇದನ್ನೂ ಓದಿ: ಸಿದ್ದು ಸಂಪುಟದಲ್ಲಿ ಹಲವರಿಗೆ ಸಚಿವ ಸ್ಥಾನ ಮಿಸ್

  • ಅಂತಿಮಗೊಂಡ ಸಚಿವರ ಪಟ್ಟಿ – ಯಾವ ಜಿಲ್ಲೆಗೆ ಎಷ್ಟು ಮಂತ್ರಿಗಿರಿ?

    ಅಂತಿಮಗೊಂಡ ಸಚಿವರ ಪಟ್ಟಿ – ಯಾವ ಜಿಲ್ಲೆಗೆ ಎಷ್ಟು ಮಂತ್ರಿಗಿರಿ?

    ಬೆಂಗಳೂರು: ಸಿದ್ದರಾಮಯ್ಯ (Siddaramaiah) ಸರ್ಕಾರದ ಸಚಿವರ (Ministers) ಪಟ್ಟಿ ಅಂತಿಮಗೊಂಡಿದ್ದು, ಸಂಪುಟದ ಎಲ್ಲ 34 ಸ್ಥಾನಗಳು ಭರ್ತಿಯಾಗಿವೆ. ಶನಿವಾರ ಬೆಳಗ್ಗೆ 11:45ಕ್ಕೆ ನೂತನ ಮಂತ್ರಿಗಳು ರಾಜಭವನದ (Raj Bhavan) ಗಾಜಿನ ಮನೆಯಲ್ಲಿ ಪ್ರಮಾಣವಚನ (Oath) ಸ್ವೀಕರಿಸಲಿದ್ದಾರೆ. ಸಂಪುಟದಲ್ಲಿ 22 ಜಿಲ್ಲೆಗಳಿಗೆ ಮಂತ್ರಿ ಭಾಗ್ಯ ದೊರೆತಿದೆ.

    ಅಲ್ಲದೆ 9 ಜಿಲ್ಲೆಗಳಿಗೆ ಸಂಪುಟದಲ್ಲಿ ಸ್ಥಾನ ನೀಡಲಾಗಿಲ್ಲ. ಚಾಮರಾಜನಗರ, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಕೋಲಾರ, ವಿಜಯನಗರ, ಹಾವೇರಿ ಜಿಲ್ಲೆಗಳಿಗೆ ಮಂತ್ರಿ ಸ್ಥಾನ ಕೈತಪ್ಪಿದೆ. ಈ ಮೂಲಕ 22 ಜಿಲ್ಲೆಗಳಿಗೆ ಮಂತ್ರಿಭಾಗ್ಯ ದೊರೆತಂತಾಗಿದೆ. ಯಾವೆಲ್ಲ ಜಿಲ್ಲೆಗೆ ಎಷ್ಟು ಮಂತ್ರಿ ಸ್ಥಾನ ನೀಡಲಾಗಿದೆ ಎಂಬ ಪಟ್ಟಿಯನ್ನು ಕೆಳಗೆ ನೀಡಲಾಗಿದೆ. ಇದನ್ನೂ ಓದಿ: ಸಿದ್ದು ಸಂಪುಟದಲ್ಲಿ ಹಲವರಿಗೆ ಸಚಿವ ಸ್ಥಾನ ಮಿಸ್

    ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ:
    ಹೈದ್ರಾಬಾದ್ ಕರ್ನಾಟಕ – 8
    ಬೀದರ್ – 02
    ಕಲಬುರಗಿ – 02
    ರಾಯಚೂರು – 01
    ಕೊಪ್ಪಳ 01
    ಯಾದಗಿರಿ 01
    ಬಳ್ಳಾರಿ 01

    ಕಿತ್ತೂರು ಕರ್ನಾಟಕ – 7
    ಗದಗ – 01
    ಧಾರವಾಡ – 01
    ವಿಜಯಪುರ -02
    ಬಾಗಲಕೋಟೆ -01
    ಬೆಳಗಾವಿ 02

    ಹಳೆ ಮೈಸೂರು – 9
    ಮೈಸೂರು (ಸಿಎಂ ಸೇರಿ) -03
    ಮಂಡ್ಯ – 01
    ರಾಮನಗರ – 01
    ತುಮಕೂರು – 02
    ಚಿಕ್ಕಬಳ್ಳಾಪುರ – 01
    ಬೆಂಗಳೂರು ಗ್ರಾಮಾಂತರ – 01

    ಮಧ್ಯ ಮತ್ತು ಮಲೆನಾಡು ಕರ್ನಾಟಕ – 3
    ದಾವಣಗೆರೆ – 01
    ಚಿತ್ರದುರ್ಗ – 01
    ಶಿವಮೊಗ್ಗ – 01

    ಕರಾವಳಿ ಕರ್ನಾಟಕ – 1
    ಉತ್ತರ ಕನ್ನಡ – 01

    ಬೆಂಗಳೂರು – 6
    ಬ್ಯಾಟರಾಯನಪುರ – 1
    ಚಾಮರಾಜಪೇಟೆ -1
    ಸರ್ವಜ್ಞ ನಗರ – 1
    ಬಿಟಿಎಂ ಲೇಔಟ್ – 1
    ಹೆಬ್ಬಾಳ – 1
    ಗಾಂಧಿನಗರ – 1

  • ಶಾಸಕರಲ್ಲ, ಎಂಎಲ್‌ಸಿಯೂ ಆಗದೇ ಇದ್ರೂ ಮಂತ್ರಿ ಸ್ಥಾನ ಪಡೆದ ಬೋಸರಾಜು

    ಶಾಸಕರಲ್ಲ, ಎಂಎಲ್‌ಸಿಯೂ ಆಗದೇ ಇದ್ರೂ ಮಂತ್ರಿ ಸ್ಥಾನ ಪಡೆದ ಬೋಸರಾಜು

    ರಾಯಚೂರು: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗದೇ ಇದ್ದರೂ ರಾಯಚೂರಿನ (Raichuru) ಎನ್.ಎಸ್.ಬೋಸರಾಜುಗೆ (NS Boseraju) ಸಚಿವ ಸ್ಥಾನ ಒಲಿದು ಬಂದಿದೆ. ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕು ಅನ್ನೋ ಕೂಗು ಜೋರಾಗಿದ್ದಕ್ಕೆ ರಾಯಚೂರು ನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಎನ್.ಎಸ್.ಬೋಸರಾಜುಗೆ ಟಿಕೆಟ್ ಕೈ ತಪ್ಪಿತ್ತು. ಆದರೆ ಹೈಕಮಾಂಡ್ (Congress High Command) ಜೊತೆ ಉತ್ತಮ ಸಂಬಂಧ ಹೊಂದಿರುವ ಬೋಸರಾಜು ಸಚಿವ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

    ಪಕ್ಷ ವಿರೋಧಿ ಚಟುವಟಿಕೆ ಆರೋಪ ಹೊರಿಸಿ ಬೋಸರಾಜು ವಿರುದ್ದ ಶಿಸ್ತು ಕ್ರಮ ಜರುಗಿಸುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ (Mallikarjun Kharge) ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ, ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಸಂತಕುಮಾರ್, ಕೆಪಿಸಿಸಿ ಕಾರ್ಯದರ್ಶಿ ಅಸ್ಲಂಪಾಶಾ ಪತ್ರ ಬರೆದ ಬೆನ್ನಲ್ಲೇ ಬೋಸರಾಜು ಮಂತ್ರಿಗಿರಿ ಗಿಟ್ಟಿಸಿಕೊಂಡಿದ್ದಾರೆ.

    1999 ಹಾಗೂ 2004 ರಲ್ಲಿ ಮಾನ್ವಿ ಕ್ಷೇತ್ರದಲ್ಲಿ ಗೆದ್ದು ಶಾಸಕರಾಗಿದ್ದ ಇವರು 2014ರಲ್ಲಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಸದ್ಯ ಎಐಸಿಸಿ ಕಾರ್ಯದರ್ಶಿಯಾಗಿರುವ (AICC Secretary) ಬೋಸರಾಜು ತೆಲಂಗಾಣ ಉಸ್ತುವಾರಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. 1972 ರಿಂದ ಸಕ್ರಿಯ ರಾಜಕಾರಣದಲ್ಲಿರುವ ಬೋಸರಾಜು ಸುಮಾರು 50 ವರ್ಷಗಳ ರಾಜಕೀಯ ಅನುಭವ ಹೊಂದಿದ್ದಾರೆ. ಇದನ್ನೂ ಓದಿ: ಸಿದ್ದು ಸಂಪುಟದಲ್ಲಿ ಹಲವರಿಗೆ ಸಚಿವ ಸ್ಥಾನ ಮಿಸ್

     

    1972 ರಿಂದ 1976 ರವರೆಗೆ ರಾಯಚೂರು ಜಿಲ್ಲೆ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, 1976 ರಿಂದ 1980 ರವರೆಗೆ ರಾಯಚೂರು ತಾಲೂಕು ಕಾಂಗ್ರೆಸ್ ಕಮಿಟಿ ಅಧ್ಯಕ್ಷರಾಗಿ, 1980 ರಿಂದ 1991ರವರೆಗೆ ರಾಯಚೂರು ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ, 1991 ರಿಂದ 2002 ರಾಯಚೂರು ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ, 2009 ರಿಂದ 2017 ರವರೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ, 2017ರಿಂದ 2018 ರ ವರೆಗೆ ಕೆಪಿಸಿಸಿ ಉಪಾಧ್ಯಕ್ಷರಾಗಿ ಹಾಗೂ 2018 ರಿಂದ ಇಲ್ಲಿಯವರೆಗೆ ಎಐಸಿಸಿ ಕಾರ್ಯದರ್ಶಿಯಾಗಿ ಕಾಂಗ್ರೆಸ್ ಪಕ್ಷದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

    ಮಾಜಿ ಸಿಎಂ ಬಂಗಾರಪ್ಪ ಅವಧಿಯಲ್ಲಿ ತುಂಗಭದ್ರಾ ಕಾಡಾ ಅಧ್ಯಕ್ಷ, ವೀರಪ್ಪಮೋಯ್ಲಿ ಅವಧಿಯಲ್ಲಿ ತುಂಗಭದ್ರಾ ಕಾಡಾ ಅಧ್ಯಕ್ಷ, ಎಸ್.ಎಂ.ಕೃಷ್ಣಾ ಅವಧಿಯಲ್ಲಿ ಹೈದ್ರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಧರಂ ಸಿಂಗ್ ಅವಧಿಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಎನ್.ಎಸ್.ಬೋಸರಾಜು ಸೇವೆ ಸಲ್ಲಿಸಿದ್ದಾರೆ.

  • ಸಿದ್ದು ಸಂಪುಟದಲ್ಲಿ ಹಲವರಿಗೆ ಸಚಿವ ಸ್ಥಾನ ಮಿಸ್

    ಸಿದ್ದು ಸಂಪುಟದಲ್ಲಿ ಹಲವರಿಗೆ ಸಚಿವ ಸ್ಥಾನ ಮಿಸ್

    ಬೆಂಗಳೂರು: ಇಂದು ಕಾಂಗ್ರೆಸ್‌ನ (Congress) 24 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದು ಕೆಲ ಹಿರಿಯ ನಾಯಕರಿಗೆ ಸಚಿವ ಸ್ಥಾನ ತಪ್ಪಿದೆ.

    ಹಲವು ಹಿರಿಯ ನಾಯಕರು ಮಂತ್ರಿಗಿರಿಗೆ ಲಾಬಿ ನಡೆಸಿದ್ದರು. ಆದರೆ ಹೈಕಮಾಂಡ್‌ (High Command) ಯಾವುದೇ ಲಾಬಿಗೆ ಬಗ್ಗದೇ ತನ್ನದೇ ಮಾನದಂಡ ಬಳಸಿ ಮಂತ್ರಿ ಸ್ಥಾನಕ್ಕೆ ಶಾಸಕರನ್ನು ಆಯ್ಕೆ ಮಾಡಿದೆ.  ಇದನ್ನೂ ಓದಿ: ನಿಮ್ಮ ಜಿಲ್ಲೆಯಲ್ಲಿ ಯಾರಿಗೆ ಸಚಿವ ಸ್ಥಾನ? 24 ಮಂದಿಯ ಪಟ್ಟಿ ಇಲ್ಲಿದೆ

     

    ಬಂಜಾರ ಸಮಾಜದ ಏಕೈಕ ಶಾಸಕ ರುದ್ರಪ್ಪ ಲಮಾಣಿಗೂ ನಿರಾಸೆಯಾಗಿದೆ. ಎಂಎಲ್‍ಸಿ ಬಿ.ಕೆ ಹರಿಪ್ರಸಾದ್, ಬಸವರಾಜ ರಾಯರೆಡ್ಡಿಗೂ ಮಂತ್ರಿ ಸ್ಥಾನ ಸಿಕ್ಕಿಲ್ಲ. ಬಿಜೆಪಿಗೆ ರಾಜೀನಾಮೆ ನೀಡಿ ಸ್ಪರ್ಧಿಸಿ ಸೋತಿದ್ದ ಶೆಟ್ಟರ್‌ ಅವರಿಗೆ ಪರಿಷತ್‌ ಸ್ಥಾನ ನೀಡಿ ಮಂತ್ರಿ ಮಾಡಬಹುದು ಎಂದು ನಿರೀಕ್ಷೆ ಇತ್ತು. ಅದೇ ರೀತಿಯಾಗಿ ಅಥಣಿಯಿಂದ ಗೆದ್ದಿದ್ದ ಲಕ್ಷ್ಮಣ ಸವದಿ ಅವರಿಗೂ ಮಂತ್ರಿ ಸಿಗಲಿದೆ ಎಂಬ ನಿರೀಕ್ಷೆ ಇತ್ತು. ಆದರೆ ಕಾಂಗ್ರೆಸ್‌ ಹೈಕಮಾಂಡ್‌ ಇಬ್ಬರಿಗೂ ಮಂತ್ರಿ ಸ್ಥಾನ ನೀಡಿಲ್ಲ.

    ಸಿದ್ದರಾಮಯ್ಯ (Siddaramaiah) ಸಂಪುಟದ ಎಲ್ಲ 34 ಸ್ಥಾನಗಳು ಭರ್ತಿಯಾಗಿದ್ದು ಇಂದು 24 ಶಾಸಕರು ಬೆಳಗ್ಗೆ 11:45ಕ್ಕೆ ರಾಜಭವನದ ಗಾಜಿನಮನೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

    ಮಂತ್ರಿ ಸ್ಥಾನ ಯಾರಿಗಿಲ್ಲ?
    ಲಕ್ಷ್ಮಣ ಸವದಿ, ಜಗದೀಶ್‌ ಶೆಟ್ಟರ್, ರುದ್ರಪ್ಪ ಲಮಾಣಿ, ಬಿ.ಕೆ ಹರಿಪ್ರಸಾದ್, ಬಸವರಾಜ ರಾಯರೆಡ್ಡಿ, ವಿನಯ್ ಕುಲಕರ್ಣಿ, ತನ್ವೀರ್ ಸೇಠ್, ಶಾಮನೂರು ಶಿವಶಂಕರಪ್ಪ, ಆರ್.ವಿ ದೇಶಪಾಂಡೆ, ಹ್ಯಾರಿಸ್, ಶಿವಲಿಂಗೇಗೌಡ, ಅಜಯ್ ಸಿಂಗ್, ಟಿ.ಬಿ ಜಯಚಂದ್ರ, ಎಂ.ಕೃಷ್ಣಪ್ಪ, ವಿಜಯಾನಂದ ಕಾಶಪ್ಪನವರ್, ನರೇಂದ್ರಸ್ವಾಮಿ, ತುಕರಾಂ.

  • ನಿಮ್ಮ ಜಿಲ್ಲೆಯಲ್ಲಿ ಯಾರಿಗೆ ಸಚಿವ ಸ್ಥಾನ? – 24 ಮಂದಿ ಮಂತ್ರಿಗಳ ಪಟ್ಟಿ ರಿಲೀಸ್‌

    ನಿಮ್ಮ ಜಿಲ್ಲೆಯಲ್ಲಿ ಯಾರಿಗೆ ಸಚಿವ ಸ್ಥಾನ? – 24 ಮಂದಿ ಮಂತ್ರಿಗಳ ಪಟ್ಟಿ ರಿಲೀಸ್‌

    ನವದೆಹಲಿ: ಸಿದ್ದರಾಮಯ್ಯ ಸರ್ಕಾರ ಸಚಿವ ಸಂಪುಟ ವಿಸ್ತರಣೆ (Cabinet Expansion) ಕಸರತ್ತು ಅಂತ್ಯವಾಗಿದೆ. ಕಳೆದ 3 ದಿನಗಳಿಂದ ದೆಹಲಿಯಲ್ಲಿ ಠಿಕಾಣಿ ಹಾಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಹೈಕಮಾಂಡ್ ನಾಯಕರ ಜೊತೆಗೆ ಸರಣಿ ಸಭೆ ನಡೆಸಿ ಅಂತಿಮವಾಗಿ ಪಟ್ಟಿ ಸಿದ್ಧಪಡಿಸಿದ್ದಾರೆ.

    ಹಿರಿಯ ನಾಯಕರನ್ನು ಸಂಪುಟದಿಂದ ಕೈ ಬಿಡುವುದು, ಪರಿಷತ್ ಸದಸ್ಯರಿಗೆ ಸಚಿವ ಸ್ಥಾನ ನೀಡುವುದು ಸೇರಿ ಕೆಲವು ಸಮಸ್ಯೆಗಳ ಬಗ್ಗೆ ವೇಣುಗೋಪಾಲ್, ಸುರ್ಜೇವಾಲ ಜೊತೆ ಚರ್ಚಿಸಿ ತೀರ್ಮಾನ ಮಾಡಲಾಗಿದೆ. ಈ ನಿರ್ಣಯದಲ್ಲಿ ಎಐಸಿಸಿ ಅಧ್ಯಕ್ಷ ಖರ್ಗೆ (Mallikarjun Kharge) ಅವರ ಕೆಲವು ಸಲಹೆಗಳನ್ನು ಪರಿಗಣಿಸಲಾಗಿದೆ. ಮಹತ್ವದ ಸಭೆಗಳ ನಡುವೆ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಇಂದು ಪ್ರತ್ಯೇಕವಾಗಿ ಸೋನಿಯಾಗಾಂಧಿ (Sonia Gandhi) ಮತ್ತು ರಾಹುಲ್ ಗಾಂಧಿ (Rahul Gandhi) ಅವರನ್ನು ಭೇಟಿಯಾಗಿದೆ ಚರ್ಚೆ ನಡೆಸಿದರು.

    ಹೊಸ ಸರ್ಕಾರಕ್ಕೆ ಶುಭಾಶಯ ಕೋರಿದ ಸೋನಿಯಾಗಾಂಧಿ ಉತ್ತಮ ಆಡಳಿತ ನೀಡುವಂತೆ ಸೂಚಿಸಿದ್ದಾರೆ. ಒಟ್ಟಾರೆ ಎಲ್ಲ ಬೆಳವಣಿಗೆ ಬಳಿಕ 23 ಹೆಸರುಗಳನ್ನು ಅಂತಿಮಗೊಳಿಸಿದ್ದು ನಾಳೆ ಬೆಳಗ್ಗೆ 11:45 ಕ್ಕೆ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 23 ಜನರಿಗೆ ಈಗಾಗಲೇ ದೂರವಾಣಿ ಕರೆ ಮೂಲಕ ಮಾಹಿತಿ ಕೊಡಲಾಗಿದೆ.

    ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡುವವರು: ಶಿವಾನಂದ ಪಾಟೀಲ್ – ಲಿಂಗಾಯತ ( ಬಸವನಬಾಗೇವಾಡಿ), ಎಸ್‍ಎಸ್ ಮಲ್ಲಿಕಾರ್ಜುನ್- ಲಿಂಗಾಯತ (ದಾವಣಗೆರೆ ಉತ್ತರ), ಹೆಚ್.ಕೆ.ಪಾಟೀಲ್ – ರೆಡ್ಡಿ ಲಿಂಗಾಯತ (ಗದಗ), ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ – ಒಕ್ಕಲಿಗ (ಬ್ಯಾಟರಾಯನಪುರ), ಚಲುವರಾಯ ಸ್ವಾಮಿ -ಒಕ್ಕಲಿಗ (ನಾಗಮಂಗಲ), ಕೆ. ವೆಂಕಟೇಶ್- ಒಕ್ಕಲಿಗ (ಪಿರಿಯಾಪಟ್ಟಣ), ಎಚ್.ಸಿ ಮಹದೇವಪ್ಪ – ಎಸ್‍ಸಿ -ಬಲಗೈ (ಟಿ.ನರಸೀಪುರ), ಈಶ್ವರ್ ಖಂಡ್ರೆ – ಲಿಂಗಾಯತ (ಭಾಲ್ಕಿ), ಕೆ.ಎನ್ ರಾಜಣ್ಣ- ಎಸ್‍ಟಿ (ಮಧುಗಿರಿ), ಶರಣ ಬಸಪ್ಪ ದರ್ಶನಾಪೂರ್, ಆರ್. ಬಿ ತಿಮ್ಮಾಪೂರ್, ಶಿವರಾಜ್ ತಂಗಡಗಿ, ಶರಣ ಪ್ರಕಾಶ್ ಪಾಟೀಲ್- ಲಿಂಗಾಯತ (ಸೇಡಂ), ಮಂಕಾಳ ವೈದ್ಯ – ಮೊಗವೀರ ( ಭಟ್ಕಳ), ಲಕ್ಷ್ಮಿ ಹೆಬ್ಬಾಳ್ಕರ್- ಲಿಂಗಾಯತ (ಬೆಳಗಾವಿ ಗ್ರಾ.), ರಹೀಂ ಖಾನ್ – ಮುಸ್ಲಿಂ (ಬೀದರ್ ಉತ್ತರ), ಎಂ.ಸಿ ಸುಧಾಕರ್ – ಒಕ್ಕಲಿಗ (ಚಿಂತಾಮಣಿ), ಡಿ ಸುಧಾಕರ್, ಸಂತೋಷ್ ಲಾಡ್ -ಮರಾಠ (ಕಲಘಟಗಿ), ಬೋಸರಾಜು – ಕ್ಷತ್ರೀಯ (ಮಾಜಿ ಎಂಎಲ್‍ಸಿ), ಬೈರತಿ ಸುರೇಶ್ – ಕುರುಬ (ಹೆಬ್ಬಾಳ), ಮಧು ಬಂಗಾರಪ್ಪ- ಈಡಿಗ (ಸೊರಬ) ಹಾಗೂ ಬಿ. ನಾಗೇಂದ್ರ.

  • Karnataka Cabinet Expansion – ಪ್ರಮುಖ ಐದು ಖಾತೆಗಳಿಗೆ ಡಿಕೆ ಶಿವಕುಮಾರ್‌ ಪಟ್ಟು

    Karnataka Cabinet Expansion – ಪ್ರಮುಖ ಐದು ಖಾತೆಗಳಿಗೆ ಡಿಕೆ ಶಿವಕುಮಾರ್‌ ಪಟ್ಟು

    ಬೆಂಗಳೂರು: ದೆಹಲಿಯಲ್ಲಿ ಸಂಪುಟ ಕಸರತ್ತು (Karnataka Cabinet Expansion) ನಡೆಯುತ್ತಿದ್ದು ಪ್ರಮುಖ 5 ಖಾತೆಗಳಿಗೆ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಪಟ್ಟು ಹಿಡಿದಿರುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

    ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್‌ ಜೊತೆ ನಡೆದ ಸಭೆಯಲ್ಲಿ 5 ಖಾತೆಗಳು ನನಗೆ ಬೇಕೇ ಬೇಕು ಎಂದು ಡಿಕೆಶಿ ಹಠ ಹಿಡಿದಿದ್ದಾರೆ. ಇದನ್ನೂ ಓದಿ: ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

    ಬೆಂಗಳೂರು ಅಭಿವೃದ್ಧಿ, ಜಲಸಂಪನ್ಮೂಲ, ಇಂಧನ, ಗೃಹ, ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್ ಖಾತೆ ನೀಡುವಂತೆ ಡಿಕೆಶಿ ಬೇಡಿಕೆ ಇಟ್ಟಿದ್ದಾರೆ. ಬೆಂಗಳೂರು ಅಭಿವೃದ್ಧಿ ಹಾಗೂ ಜಲಸಂಪನ್ಮೂಲ ನನಗೆ ಬೇಕು ಡಿಕೆಶಿ ಹೇಳಿದ್ದರೆ ಬೆಂಬಲಿಗರಿಗಾಗಿ ಗೃಹ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಖಾತೆಯನ್ನು ಕೇಳಿದ್ದಾರೆ.  ಇದನ್ನೂ ಓದಿ: ಇವತ್ತೇ ಸಿದ್ದು ಸಂಪುಟಕ್ಕೆ ಕ್ಲೈಮ್ಯಾಕ್ಸ್ – 24 ಸಂಭವನೀಯ ಸಚಿವರು ಯಾರು?

    ಡಿಕೆ ಶಿವಕುಮಾರ್‌ ಸಿಎಂ ಪಟ್ಟ ಕೇಳಿದಾಗ ಹೈಕಮಾಂಡ್‌ (Congress High Command) ನಿರಾಕರಿಸಿ ಡಿಸಿಎಂ ಪಟ್ಟ ನೀಡಿತ್ತು. ಒಂದೇ ಡಿಸಿಎಂ ಇರಬೇಕು, ಬೇರೆ ಯಾರಿಗೆ ಡಿಸಿಎಂ ಕೊಡಬಾರದು ಎಂದು ಶಿವಕುಮಾರ್‌ ಬೇಡಿಕೆ ಇಟ್ಟಿದ್ದರು. ಈ ಬೇಡಿಕೆಯಂತೆ ಸಿದ್ದರಾಮಯ್ಯ (Siddaramaiah) ಸಂಪುಟದಲ್ಲಿ ಒಂದೇ ಡಿಸಿಎಂ ನೀಡಲಾಗಿದೆ. ಈಗ ಡಿಕೆ ಶಿವಕುಮಾರ್‌ ಹೊಸ ಬೇಡಿಕೆಯನ್ನು ಇರಿಸಿದ ಹಿನ್ನೆಲೆಯಲ್ಲಿ ಯಾರಿಗೆ ಈ ಖಾತೆಗಳನ್ನು ಹಂಚಿಕೆ ಮಾಡಬಹುದು ಎಂಬ ಕುತೂಹಲ ಹೆಚ್ಚಾಗಿದೆ.

  • ಇವತ್ತೇ ಸಿದ್ದು ಸಂಪುಟಕ್ಕೆ ಕ್ಲೈಮ್ಯಾಕ್ಸ್ – 24 ಸಂಭವನೀಯ ಸಚಿವರು ಯಾರು?

    ಇವತ್ತೇ ಸಿದ್ದು ಸಂಪುಟಕ್ಕೆ ಕ್ಲೈಮ್ಯಾಕ್ಸ್ – 24 ಸಂಭವನೀಯ ಸಚಿವರು ಯಾರು?

    ಬೆಂಗಳೂರು: ಪೂರ್ಣ ಪ್ರಮಾಣದ ಕ್ಯಾಬಿನೆಟ್ (Cabinet) ರಚನೆಗೆ ಕಾಂಗ್ರೆಸ್‌ ಹೈಕಮಾಂಡ್ (Congress High Command) ನಿರ್ಧಾರ ಮಾಡಿದ್ದು ಶನಿವಾರ 24 ಸಂಭಾವ್ಯ ಸಚಿವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.

    ಬೆಳಗ್ಗೆ 11:45ಕ್ಕೆ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು ರಾಜ್ಯಪಾಲರ ಕಚೇರಿಯಿಂದ ಸಿಎಂ ಕಚೇರಿ ಸಮಯ ಪಡೆದಿದೆ. ಮುಂದಿನ ಎರಡೂವರೆ ವರ್ಷ ಯಾವುದೇ ತಕರಾರುಗಳಿಲ್ಲದೇ ಸರ್ಕಾರ ನಡೆಸಲು ಕಾಂಗ್ರೆಸ್‌ ಪ್ಲ್ಯಾನ್‌ ಮಾಡಿಕೊಂಡಿದೆ.

     

    ಪ್ರಸ್ತುತ ಸಿಎಂ ಸಿದ್ದರಾಮಯ್ಯ (Siddaramaiah), ಡಿಸಿಎಂ ಶಿವಕುಮಾರ್‌ (DK Shivakumar) ಸೇರಿದಂತೆ 10 ಮಂದಿ ಸಂಪುಟದಲ್ಲಿದ್ದು 34 ಸದಸ್ಯ ಬಲದ ಸಂಪುಟದಲ್ಲಿ 24 ಸ್ಥಾನಗಳು ಖಾಲಿಯಿದೆ. ಗುರುವಾರ ಸುದೀರ್ಘ ಸಭೆ ಬಳಿಕ ಅಂತಿಮ ಪಟ್ಟಿಗೆ ಮುದ್ರೆ ಬಿದ್ದಿದೆ. ವೇಣುಗೋಪಾಲ್ ನೇತೃತ್ವದಲ್ಲಿ ಇಂದು ಸಭೆ ನಡೆಸಿ ಖಾತೆಯನ್ನು ಹಂಚಿಕೆ ಮಾಡಲಾಗುತ್ತದೆ. ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾಗಾಂಧಿ ಅವರನ್ನು ಭೇಟಿಯಾದ ಬಳಿಕ ಸಚಿವಕಾಂಕ್ಷಿಗಳಿಗೆ ಕರೆ ಹೋಗಲಿದೆ. ಇದನ್ನೂ ಓದಿ: ಮೋದಿಯನ್ನು ಜನ ಹುಚ್ಚು ಮೋದಿ ಅಂತಿದ್ದಾರೆ- ಮತ್ತೆ ನಾಲಗೆ ಹರಿಬಿಟ್ಟ ಕೈ ನಾಯಕ ಅಧೀರ್

     

    ಸಂಭವನೀಯ ಸಚಿವರು:
    ಈಶ್ವರ ಖಂಡ್ರೆ, ಲಕ್ಷ್ಮಿ ಹೆಬ್ಬಾಳ್ಕರ್‌, ಶಿವಾನಂದ ಪಾಟೀಲ್, ದರ್ಶನಾಪುರ, ಬಸವರಾಜ್ ರಾಯರೆಡ್ಡಿ, ಡಾ. ಮಹಾದೇವಪ್ಪ, ಪಿರಿಯಾಪಟ್ಟಣ ವೆಂಕಟೇಶ್, ಎಸ್.ಎಸ್. ಮಲ್ಲಿಕಾರ್ಜುನ, ಬೈರತಿ ಸುರೇಶ್, ಕೃಷ್ಣ ಬೈರೇಗೌಡ, ರಹೀಂ ಖಾನ್, ಅಜಯ್ ಸಿಂಗ್, ಪುಟ್ಟರಂಗ ಶೆಟ್ಟಿ, ನರೇಂದ್ರ ಸ್ವಾಮಿ, ಹಿರಿಯೂರು ಸುಧಾಕರ್, ಎಚ್.ಕೆ. ಪಾಟೀಲ್, ಚೆಲುವರಾಯಸ್ವಾಮಿ, ಸಂತೋಷ ಲಾಡ್, ಎಂ ಕೃಷ್ಣಪ್ಪ, ಮಧು ಬಂಗಾರಪ್ಪ, ಮಾಂಕಾಳ ವೈದ್ಯ, ಶಿವರಾಜ್ ತಂಗಡಗಿ, ಮಧುಗಿರಿ ರಾಜಣ್ಣ, ನಾಗೇಂದ್ರ.

  • ಮಂತ್ರಿಗಿರಿ ಲಾಬಿಗೆ ಲೋಕಸಭೆ ದಾಳ – ಶಾಸಕರಿಗೆ ಷರತ್ತು ವಿಧಿಸಿದ ಕಾಂಗ್ರೆಸ್‌

    ಮಂತ್ರಿಗಿರಿ ಲಾಬಿಗೆ ಲೋಕಸಭೆ ದಾಳ – ಶಾಸಕರಿಗೆ ಷರತ್ತು ವಿಧಿಸಿದ ಕಾಂಗ್ರೆಸ್‌

    ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ (Congress Government) ಸಂಪುಟ ವಿಸ್ತರಣೆಗೂ ಲೋಕಸಭಾ ಚುನಾವಣೆಗೂ (Lok Sabha Election) ಸಂಬಂಧ ಇದ್ಯಾ ಎಂಬ ಪ್ರಶ್ನೆ ಮೂಡಿದೆ. ಈಗ ಸಚಿವರಾದರೆ ಸಾಲದು ಲೋಕಸಭೆ ಚುನಾವಣೆಗೂ ಸಿದ್ದರಿರಬೇಕು ಎಂದು ಕನಿಷ್ಠ 10 ರಿಂದ 15 ಜನ ಸಚಿವರಿಗೆ ಈಗಲೇ ಬಿಗ್ ಟಾಸ್ಕ್ ಫಿಕ್ಸ್ ಮಾಡಿದ್ದಾರೆ ಎನ್ನಲಾಗುತ್ತಿದೆ.

    ಸಚಿವ ಸ್ಥಾನದ ಆಕಾಂಕ್ಷಿಗಳಾಗಿ ಹಲವು ಶಾಸಕರು ಹೈಕಮಾಂಡ್ (High Command) ಬೆನ್ನು ಬಿದ್ದಿದ್ದಾರೆ. ಹೀಗಾಗಿ ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬ ವಿಚಾರದಲ್ಲಿ ಹೈಕಮಾಂಡ್ ಲೋಕಸಭೆಯ ದಾಳ ಉರುಳಿಸಲು ಮುಂದಾಗಿದೆ. ಲೋಕಸಭೆ ಗೆಲುವಿನ ಲೆಕ್ಕಾಚಾರ ಹಾಕಿಯೇ ಈ ಬಾರಿ ಸಚಿವ ಸ್ಥಾನದ ಅವಕಾಶ ನೀಡಲಾಗುತ್ತದೆ ಎಂಬುದು ಕಾಂಗ್ರೆಸ್ ವಲಯದ ಮಾತು.


    2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 25+1, ಕಾಂಗ್ರೆಸ್‌ 1, ಜೆಡಿಎಸ್‌ 1 ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು. ಆದರೆ 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ಟಾರ್ಗೆಟ್‌ ಹಾಕಿಕೊಂಡಿದೆ. ಇದನ್ನೂ ಓದಿ: ನಮ್ಮ ಪೊಲೀಸರು ಯಾವತ್ತೂ ಕೇಸರೀಕರಣ ಮಾಡಿಲ್ಲ – ಸಿಎಂ, ಡಿಸಿಎಂ ವಿರುದ್ಧ ಬೊಮ್ಮಾಯಿ ಕಿಡಿ

    ಹೈಕಮಾಂಡ್‌ ಷರತ್ತು ಏನು?
    ಈಗ ಯಾವ ಜಾತಿ? ಯಾವ ಜಿಲ್ಲೆ ಎನ್ನುವುದು ಮುಖ್ಯ ಅಲ್ಲ. ಲೋಕಸಭೆ ಚುನಾವಣೆಯಲ್ಲಿ ಗೆಲ್ಲಿಸಿಕೊಡುವ ಸಾಮರ್ಥ್ಯ ಇರುವವರು ಎಷ್ಟು ಜನ ಎನ್ನುವುದೇ ಮಾನದಂಡ. ಅಗತ್ಯ ಬಿದ್ದರೆ ಅವರೇ ಅಖಾಡಕ್ಕಿಳಿದು ಗೆದ್ದು ತೋರಿಸಬೇಕು.

    ಸಚಿವ ಸ್ಥಾನ ಕೇಳುವವರು ಲೋಕಸಭಾ ಟಾಸ್ಕ್ ಪಡೆಯಲೇಬೇಕು. ಯಾವ ಜಿಲ್ಲೆಯಲ್ಲಿ ಯಾವ ಪ್ರಭಾವಿ ಶಾಸಕನಿಗೆ ಸಚಿವಸ್ಥಾನ ಕೊಟ್ಟರೆ ಲೋಕಸಭೆಗೆ ನೆರವಾಗಲಿದೆ? ಯಾರನ್ನ ಮಂತ್ರಿ ಮಾಡಿದರೆ ಲೋಕಸಭೆಗೆ ಅವರನ್ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಅನುಕೂಲವಾಗಲಿದೆ? ಈ ಲೆಕ್ಕಾಚಾರದ ಮೇಲೆ 10-15 ಮಂತ್ರಿಸ್ಥಾನ ನಿರ್ಧಾರವಾಗಲಿದೆ ಎಂಬ ವಿಚಾರ ಈಗ ಲಭ್ಯವಾಗಿದೆ.

  • ಸೋನಿಯಾ, ರಾಹುಲ್‍ರಿಂದ ರಾಜ್ಯ ನಾಯಕರಿಗೆ ಖಡಕ್ ಸಂದೇಶ

    ಸೋನಿಯಾ, ರಾಹುಲ್‍ರಿಂದ ರಾಜ್ಯ ನಾಯಕರಿಗೆ ಖಡಕ್ ಸಂದೇಶ

    ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election) ಕಳೆಯುವವರೆಗೆ ಗ್ಯಾರಂಟಿ ಘೋಷಣೆಯಲ್ಲಿ (Congress Guarantee) ಯಾವುದೇ ಬದಲಾವಣೆ ಇರಕೂಡದು ಎಂದು ಸೋನಿಯಾ ಗಾಂಧಿ (Sonia Gandhi), ರಾಹುಲ್‌ ಗಾಂಧಿ (Rahul Gandhi) ಕಾಂಗ್ರೆಸ್‌ ನಾಯಕರಿಗೆ ಖಡಕ್‌ ಸಂದೇಶ ರವಾನಿಸಿದ್ದಾರೆ.

    ಚುನಾವಣೆಯಲ್ಲಿ (Karnataka Election) 5 ಗ್ಯಾರಂಟಿ ಯೋಜನೆಗಳೇ ಕಾಂಗ್ರೆಸ್‌ ಕೈ ಹಿಡಿದ ಹಿನ್ನೆಲೆಯಲ್ಲಿ ಈ ಭರವಸೆಗಳನ್ನು ಜಾರಿ ಮಾಡಲು ಸರ್ಕಾರ ಮುಂದಾಗಿದೆ. ಮೊದಲ ಕ್ಯಾಬಿನೆಟ್‌ನಲ್ಲಿ (Cabinet Meeting) ಈ ಯೋಜನೆ ಜಾರಿಗೆ ತಾತ್ವಿಕ ಒಪ್ಪಿಗೆ ನೀಡಿದ್ದು ಮುಂದಿನ ಕ್ಯಾಬಿನೆಟ್‌ ಬಳಿಕ ಆದೇಶ ಜಾರಿ ಮಾಡಲಾಗುವುದು ಎಂದು ಸಿದ್ದರಾಮಯ್ಯ (CM Siddaramaiah) ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಪ್ರಮುಖ 6 ಖಾತೆಗಾಗಿ ಸಚಿವರ ಮಧ್ಯೆ ಪೈಪೋಟಿ

    ಸಂಪೂರ್ಣ 5 ವರ್ಷದ ಅವಧಿಗೆ ಈ ಘೋಷಣೆ ಮಾಡಲಾಗಿದ್ದು ಲೋಕಸಭಾ ಚುನಾವಣೆ ಕಳೆಯುವವರೆಗೆ ಗ್ಯಾರಂಟಿ ಘೋಷಣೆಯಲ್ಲಿ ಯಾವುದೇ ಬದಲಾವಣೆ ಇರಕೂಡದು ಮತ್ತು ಗೊಂದಲ ಆಗಬಾರದು ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸಂದೇಶ ರವಾನಿಸಿದೆ.

    ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಹೆಚ್ಚಿನ ಸ್ಥಾನದ ನಿರೀಕ್ಷೆಯಲ್ಲಿ ಕಾಂಗ್ರೆಸ್ ಪಾಳಯ ಇದೆ. ಈ ಕಾರಣಕ್ಕೆ ಗ್ಯಾರಂಟಿ ಯೋಜನೆ ಜಾರಿ ಸಂಬಂಧ ಯಾವುದೇ ಗೊಂದಲ ಆಗದೇ ಎಚ್ಚರಿಕೆಯಿಂದ ಜಾರಿ ಮಾಡಿ ಎಂಬ ಸಂದೇಶವನ್ನು ಹೈಕಮಾಂಡ್‌ ಕಳುಹಿಸಿದೆ.

  • ಪ್ರಮುಖ 6 ಖಾತೆಗಾಗಿ ಸಚಿವರ ಮಧ್ಯೆ ಪೈಪೋಟಿ

    ಪ್ರಮುಖ 6 ಖಾತೆಗಾಗಿ ಸಚಿವರ ಮಧ್ಯೆ ಪೈಪೋಟಿ

    ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಸಂಪುಟದಲ್ಲಿ ಪ್ರಮುಖ 6 ಖಾತೆಗಾಗಿ ಸಚಿವರ ಮಧ್ಯೆ ಭಾರೀ ಪೈಪೋಟಿ ನಡೆಯುತ್ತಿದೆ.

    ಉಪಮುಖ್ಯಮಂತ್ರಿಯಾಗಿರುವ ಡಿಕೆ ಶಿವಕುಮಾರ್‌ (DK Shivakumar) ಅವರು ಇಂಧನ, ಜಲಸಂಪನ್ಮೂಲ, ಬೆಂಗಳೂರು ಅಭಿವೃದ್ಧಿ ಖಾತೆಗೆ ಪಟ್ಟು ಹಿಡಿದಿದ್ದರೆ ಕೆಜೆ ಜಾರ್ಜ್, ರಾಮಲಿಂಗಾರೆಡ್ಡಿ ಅವರು ಬೆಂಗಳೂರು ಅಭಿವೃದ್ಧಿ ಮೇಲೆ ಕಣ್ಣಿಟ್ಟಿರುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಇದನ್ನೂ ಓದಿ: ಜುಲೈನಲ್ಲಿ ರಾಜ್ಯ ಬಜೆಟ್ ಮಂಡನೆ – ಸಿಎಂ ಸಿದ್ದರಾಮಯ್ಯ ಘೋಷಣೆ

     
    ಜಲಸಂಪನ್ಮೂಲ ಇಲಾಖೆ ಮೇಲೆ ಎಂ.ಬಿ.ಪಾಟೀಲ್‍ಗೆ ಆಸೆ ಪಟ್ಟರೆ ಲೋಕೋಪಯೋಗಿ ಅಥವಾ ಕಂದಾಯ ಇಲಾಖೆ ಮೇಲೆ ಪರಮೇಶ್ವರ್ ಕಣ್ಣು ಬಿದ್ದಿದೆ. ಸಚಿವರು ಈಗಾಗಲೇ ಖಾತೆ ನೀಡುವಂತೆ ಬೇಡಿಕೆ ಇರಿಸಿದ ಹಿನ್ನೆಲೆಯಲ್ಲಿ ಈಗಲೇ ಪ್ರಬಲ ಖಾತೆ ಹಂಚಿಕೆಯಾಗುತ್ತಾ ಅಥವಾ ಪೂರ್ಣ ಸಂಪುಟ ರಚನೆ ಬಳಿಕ ಖಾತೆ ಹಂಚಿಕೆಯಾಗುತ್ತಾ ಎಂಬ ಪ್ರಶ್ನೆ ಎದ್ದಿದೆ.

    ಶುಕ್ರವಾರ ರಾತ್ರಿ ದೆಹಲಿಯ ವೇಣುಗೋಪಾಲ್‌ ನಿವಾಸದಲ್ಲಿ ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದರ ಬಗ್ಗೆ ಗಂಭೀರ ಚರ್ಚೆ ನಡೆದಿದೆ. ಆರಂಭದಲ್ಲಿ 20ಕ್ಕೂ ಹೆಚ್ಚು ಶಾಸಕರಿಗೆ ಮಂತ್ರಿ ಸ್ಥಾನ ಸಿಗಬಹುದು ಎಂದು ನಿರೀಕ್ಷಿಸಲಾಗಿತ್ತು. ಸಿದ್ದರಾಮಯ್ಯ ಮತ್ತು ಡಿಕೆಶಿ ತಮ್ಮ ಆಪ್ತ ಶಾಸಕರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಪಟ್ಟು ಹಿಡಿದಿದ್ದರು. ಈ ಕಾರಣಕ್ಕೆ ಅಂತಿಮವಾಗಿ 8 ಮಂದಿ ಶಾಸಕರಿಗೆ ಮಾತ್ರ ಆರಂಭದಲ್ಲಿ ಸಚಿವ ಸ್ಥಾನ ನೀಡಲು ಹೈಕಮಾಂಡ್‌ ನಿರ್ಧರಿಸಿತು.