Tag: cabinet

  • ಕೇಂದ್ರ ಕ್ಯಾಬಿನೆಟ್ ಪುನರ್‌ರಚನೆ – ಅರ್ಜುನ್ ಮೇಘವಾಲ್‍ಗೆ ಕಾನೂನು, ರಿಜಿಜುಗೆ ಭೂ ವಿಜ್ಞಾನ

    ಕೇಂದ್ರ ಕ್ಯಾಬಿನೆಟ್ ಪುನರ್‌ರಚನೆ – ಅರ್ಜುನ್ ಮೇಘವಾಲ್‍ಗೆ ಕಾನೂನು, ರಿಜಿಜುಗೆ ಭೂ ವಿಜ್ಞಾನ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಸಂಪುಟ ಪುನರ್‌ರಚನೆಯಾಗಿದ್ದು (Cabinet) ಸಚಿವರಾದ ರಿಜಿಜು (Kiren Rijiju) ಮತ್ತು ಅರ್ಜುನ್ ರಾಮ್ ಮೇಘವಾಲ್ ಅವರ ಖಾತೆ ಬದಲಾವಣೆಯಾಗಿದೆ.

    ಕಾನೂನು ಸಚಿವರಾಗಿದ್ದ ಕಿರಣ್ ರಿಜಿಜುಗೆ ಭೂ ವಿಜ್ಞಾನ ಸಚಿವಾಲಯದ ಖಾತೆಯನ್ನು ನೀಡಲಾಗಿದೆ. ಸಂಸದೀಯ ವ್ಯವಹಾರ ಮತ್ತು ಸಂಸ್ಕೃತಿ ಖಾತೆಯ ರಾಜ್ಯ ಸಚಿವರಾಗಿದ್ದ ಅರ್ಜುನ್ ರಾಮ್ ಮೇಘವಾಲ್ (Arjun Ram Meghwal) ಅವರಿಗೆ ಕಾನೂನು ಸಚಿವ (Law Minister) ಸ್ಥಾನ ನೀಡಲಾಗಿದೆ. ಇದನ್ನೂ ಓದಿ: ಗಾಂಧಿ ಕುಟುಂಬದವರ ಆದೇಶಕ್ಕೆ ನಾವು ತಲೆ ಬಾಗಲೇಬೇಕು: ಡಿಕೆಶಿ

    ರಿಜಿಜು 2021ರ ಜು.8 ರಂದು ಕಾನೂನು ಮತ್ತು ನ್ಯಾಯ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದಕ್ಕೂ ಮೊದಲು, ಅವರು ಮೇ 2019 ರಿಂದ ಜು. 2021 ರವರೆಗೆ ಯುವ ಸಬಲೀಕರಣ ಮತ್ತು ಕ್ರೀಡೆಗಳ ರಾಜ್ಯ (ಸ್ವತಂತ್ರ ಖಾತೆ)ಯನ್ನು ನೋಡಿಕೊಳ್ಳುತ್ತಿದ್ದರು.

    ಈ ವಾರ ನ್ಯಾಯಾಧೀಶರ ನೇಮಕಾತಿ ನಡೆಸುವ ಕೊಲಿಜಿಯಂ ವ್ಯವಸ್ಥೆಯ ಬಗ್ಗೆ ರಿಜಿಜು ನೀಡಿದ್ದ ಹೇಳಿಕೆಗಳ ವಿರುದ್ಧ ಬಾಂಬೆ ವಕೀಲರ ಸಂಘ (ಬಿಎಲ್‍ಎ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಈ ಹೇಳಿಕೆ ಮತ್ತು ನಡವಳಿಕೆಯಿಂದಾಗಿ ಕೇಂದ್ರ ಸಚಿವರಿಗೆ ಸಂವಿಧಾನ ಮೇಲೆ ನಂಬಿಕೆ ಇಲ್ಲ ಎಂಬುದನ್ನು ತೋರಿಸುತ್ತದೆ ಎಂದು ಬಿಎಲ್‍ಎ ಆರೋಪಿಸಿತ್ತು. ಅಷ್ಟೇ ಅಲ್ಲದೇ ಬಿಎಲ್‍ಎ ರಿಜಿಜು ಅವರು ಕಾನೂನು ಖಾತೆಯನ್ನು ನಿರ್ವಹಿಸದಂತೆ ಆದೇಶ ನೀಡಬೇಕೆಂದು ಮನವಿ ಮಾಡಿತ್ತು.

    ನ್ಯಾಯಮೂರ್ತಿಗಳ ನೇಮಕದಲ್ಲಿ ಪಾರದರ್ಶಕತೆ ಮತ್ತು ಸಾರ್ವಜನಿಕ ಉತ್ತರದಾಯಿತ್ವವನ್ನು ಕಾಪಾಡಲು ಕೇಂದ್ರ ಸರ್ಕಾರದ ಪ್ರತಿನಿಧಿಗೂ ಕೊಲಿಜಿಯಂನಲ್ಲಿ ಅವಕಾಶ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾ. ಡಿ.ವೈ. ಚಂದ್ರಚೂಡ್ ಅವರಿಗೆ ಈ ಹಿಂದೆ ರಿಜಿಜು ಪತ್ರ ಬರೆದಿದ್ದರು. ಇದನ್ನೂ ಓದಿ: ಡಿಕೆಶಿಗೆ ಡಿಸಿಎಂ ಸ್ಥಾನ ನೀಡಿರುವುದು ನನಗೆ ಸಂಪೂರ್ಣ ಸಂತೋಷವಿಲ್ಲ: ಡಿ.ಕೆ ಸುರೇಶ್

  • ಶೀಘ್ರವೇ ಸಂಪುಟ ವಿಸ್ತರಣೆ – ಈಶ್ವರಪ್ಪ, ರಮೇಶ್ ಜಾರಕಿಹೊಳಿ ಸಚಿವ ಸ್ಥಾನದ ಬಗ್ಗೆ ಸಿಎಂ ಸ್ಪಷ್ಟನೆ

    ಶೀಘ್ರವೇ ಸಂಪುಟ ವಿಸ್ತರಣೆ – ಈಶ್ವರಪ್ಪ, ರಮೇಶ್ ಜಾರಕಿಹೊಳಿ ಸಚಿವ ಸ್ಥಾನದ ಬಗ್ಗೆ ಸಿಎಂ ಸ್ಪಷ್ಟನೆ

    ಚಿತ್ರದುರ್ಗ: ಶೀಘ್ರವೇ ಸಚಿವ ಸಂಪುಟ (Cabinet) ವಿಸ್ತರಣೆಯಾಗಲಿದ್ದು, ಕೆ.ಎಸ್ ಈಶ್ವರಪ್ಪ (KS Eshwarappa) ಹಾಗೂ ರಮೇಶ್ ಜಾರಕಿಹೊಳಿಗೆ (Ramesh Jarkiholi) ಸಚಿವ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್ ತೀರ್ಮಾನಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

    ಶನಿವಾರ ಚಿತ್ರದುರ್ಗಕ್ಕೆ (Chitradurga) ಭೇಟಿ ನೀಡಿದ್ದ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಇಲ್ಲಿನ ಸೀಬಾರ ಬಳಿಯ ಮೇದಾರ ಗುರುಪೀಠಕ್ಕೆ ಭೇಟಿ ನೀಡಿದರು. ನಂತರ ಮೇದಾರರ ಬುಡಕಟ್ಟು ಸಮಾವೇಶದಲ್ಲಿ ಪಾಲ್ಗೊಂಡು ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳ ಕೊಡುಗೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಸಚಿವ, ಶಾಸಕರೊಂದಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ಫೈಟರ್ ರವಿ

    ಇದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ ಅವರು, ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ಕೇಂದ್ರ ನಾಯಕರ ಜೊತೆ ಚರ್ಚಿಸಿ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸರ್ಕಾರದಲ್ಲಿ ತಲೆ ಹಿಡುಕನೊಬ್ಬ ಪೊಲೀಸ್ ಅಧಿಕಾರಿಗಳನ್ನೇ ವರ್ಗಾವಣೆ ಮಾಡುವಷ್ಟು ಪ್ರಭಾವಿಯೇ?: ದಿನೇಶ್ ಗುಂಡೂರಾವ್

    ಈಗಾಗಲೇ ಕೇಂದ್ರ ನಾಯಕರ ಜೊತೆ ವಿಸ್ತೃತ ಚರ್ಚೆ ಮಾಡಿದ್ದೇವೆ. ಶೀಘ್ರವೇ ಮತ್ತೊಂದು ಸಭೆ ಮಾಡಿ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ. ಇನ್ನೂ ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ ಹಾಗೂ ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್ ತೀರ್ಮಾನಿಸಲಿದೆ. ಎಲ್ಲಾ ವಿಚಾರವನ್ನು ಕೇಂದ್ರದ ನಾಯಕರಿಗೆ ತಿಳಿಸಿದ್ದೇನೆ. ಜಿಲ್ಲಾವಾರು, ಪ್ರಾದೇಶಿಕ ಹಾಗೂ ಸಾಮಾಜಿಕವಾಗಿ ಎಲ್ಲವೂ ಚರ್ಚೆಯಲ್ಲಿದೆ ಎಂದು ಮಾಹಿತಿ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್‌ ಸಿಗ್ನಲ್‌?

    ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್‌ ಸಿಗ್ನಲ್‌?

    ಬೆಳಗಾವಿ: ರಾಜ್ಯದಲ್ಲಿ ಚುನಾವಣೆಗೆ(Karnataka Election) ಇನ್ನು 6 ತಿಂಗಳು ಮಾತ್ರ ಇದ್ದರೂ ಮತ್ತೆ ಸಂಪುಟ(Cabinet) ಸರ್ಕಸ್ ಶುರುವಾಗಿದೆ. ಕೆಲವು ಸಚಿವಾಕಾಂಕ್ಷಿಗಳ ಒತ್ತಡ ಹಿನ್ನೆಲೆ ಸಿಎಂ ಬೊಮ್ಮಾಯಿ(CM Basvaraj Bommai), ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ಸೋಮವಾರ ರಾತ್ರಿ ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ(Amit Shah) ಅವರನ್ನು ಭೇಟಿಯಾಗಿದ್ದರು.

    ಎರಡೂವರೆ ಗಂಟೆಗಳ ಚರ್ಚೆಯಲ್ಲಿ ಸಚಿವ ಸಂಪುಟ ವಿಸ್ತರಣೆಯ ತುರ್ತು ಅಗತ್ಯದ ಬಗ್ಗೆ ಸಿಎಂ ಮನವರಿಕೆ ಮಾಡಿಕೊಟ್ಟಿದ್ದಾರೆ ಅಂತ ತಿಳಿದು ಬಂದಿದೆ. ಸಂಪುಟದ ಪ್ರಾಂತ್ಯವಾರು ಮತ್ತು ಜಾತಿವಾರು ಸಚಿವರ ಮಾಹಿತಿ ಪಡೆದ ಹೈಕಮಾಂಡ್, ವಿಸ್ತರಣೆ ಬಗ್ಗೆ ಮುಂದೆ ತಿಳಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಆರ್‌ಎಸ್‍ಎಸ್ ಭಾರತೀಯ ಸಂಸ್ಕೃತಿ, ಮೌಲ್ಯಗಳನ್ನು ಶ್ರೀಮಂತಗೊಳಿಸುತ್ತಿದೆ: ರವೀಂದ್ರ ಜಡೇಜಾ

     

    ಈ ಬೆನ್ನಲ್ಲೇ ಬೆಳಗ್ಗೆ ಈಶ್ವರಪ್ಪ(Eshwarappa) ಅವರಿಗೆ ಸಿಎಂ ಬೊಮ್ಮಾಯಿ ದೂರವಾಣಿ ಕರೆ ಮಾಡಿ ಸಂಪುಟ ಸೇರ್ಪಡೆಗೆ ಹೈಕಮಾಂಡ್ ಒಪ್ಪಿಕೊಂಡಿದೆ ಎಂದು ಮಾಹಿತಿ ಕೊಟ್ಟಿದ್ದಾರೆ ಅಂತ ತಿಳಿದು ಬಂದಿದೆ. ಆದರೆ ಈಶ್ವರಪ್ಪ ಪ್ರತಿಕ್ರಿಯೆಗೆ ನಿರಾಕರಿಸಿದ್ದಾರೆ.

    ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಕಾಂಗ್ರೆಸ್ ಎಂಎಲ್‍ಸಿ ಬಿ.ಕೆ.ಹರಿಪ್ರಸಾದ್ ಲೇವಡಿ ಮಾಡಿದ್ದಾರೆ. ಎಲ್ಲ ತಾಲೂಕುಗಳಲ್ಲಿ ಬಿಜೆಪಿ ಕಚೇರಿ ಓಪನ್ ಮಾಡಬೇಕಿದೆ. ಹಾಗಾಗಿ ದೆಹಲಿ ನಾಯಕರಿಗೆ ಕಪ್ಪ ಕಾಣಿಕೆ ಕೊಡಲು ಸಿಎಂ ದೆಹಲಿಗೆ ಹೋಗಿ ಬಂದಿದ್ದಾರೆ ಅಂತ ಆರೋಪಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೋಟ್ಯಧಿಪತಿಗಳು ಶಾಸಕರಾಗೋಕೆ ಆಗಿದ್ಯಾ, ಆದ್ರೆ ನಾನಾಗಿದ್ದೇನೆ- ರೇಣುಕಾಚಾರ್ಯ

    ಕೋಟ್ಯಧಿಪತಿಗಳು ಶಾಸಕರಾಗೋಕೆ ಆಗಿದ್ಯಾ, ಆದ್ರೆ ನಾನಾಗಿದ್ದೇನೆ- ರೇಣುಕಾಚಾರ್ಯ

    ಬೆಳಗಾವಿ: ಕೆಲವರು ಲಕ್ಷಾಧಿಪತಿಗಳು, ಕೋಟ್ಯಧಿಪತಿಗಳು ಇದ್ದಾರೆ. ಅವರೆಲ್ಲರೂ ಶಾಸಕರಾಗೋಕೆ ಸಾಧ್ಯವಾಗಿದ್ಯಾ? ಆದ್ರೆ ನಾನೊಬ್ಬ ಸಾಮಾನ್ಯನಾಗಿ ಶಾಸಕನಾಗಿದ್ದೇನೆ (MLA) ಎಂದು ಬಿಜೆಪಿ (BJP) ಶಾಸಕ ರೇಣುಕಾಚಾರ್ಯ (MP Renukacharya) ಹೇಳಿದ್ದಾರೆ.

    ಬೆಳಗಾವಿಯಲ್ಲಿಂದು (Belagavi) ರಾಜ್ಯ ಸಚಿವ ಸಂಪುಟ (Cabinet Ministers) ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ `ಸಿಎಂ ದೆಹಲಿಯಿಂದ ಬಂದು ಏನಾದರೂ ಸಿಹಿ ಸುದ್ದಿ ನೀಡ್ತಾರಾ’ ಅನ್ನೋ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನನಗೆ ವರ್ಷದ 365 ದಿನವೂ ಸಿಹಿ ಸುದ್ದಿನೇ, ಕಹಿ ಅನ್ನೋದೇ ಗೊತ್ತಿಲ್ಲ ಎಂದು ಬೀಗಿದ್ದಾರೆ. ಇದನ್ನೂ ಓದಿ: ವೈಕುಂಠ ಏಕಾದಶಿ, ಸಂಕ್ರಾಂತಿಗೂ ಕೊರೊನಾ ಕರಿನೆರಳು – ದೇವಾಲಯಗಳಿಗೆ ಟಫ್ ರೂಲ್ಸ್?

    ಈಗಾಗಲೇ 2009 ರಿಂದ 2012ರ ವರೆಗೆ ಸಚಿವನಾಗಿ ಕೆಲಸ ಮಾಡಿದ ಅನುಭವ ನನಗಿದೆ. ನಾನಿಲ್ಲಿ ಸಂತೋಷದಿಂದಲೇ ಇದ್ದೇನೆ. ನಾನು ಯಾವತ್ತೂ ಸಂತೋಷ ಜೀವಿ. ಕೆಲವರು ಲಕ್ಷಾಧಿಪತಿ, ಕೋಟ್ಯಧಿಪತಿಗಳಿದ್ದರೂ ಶಾಸಕರಾಗೋಕೆ ಆಗಿಲ್ಲ. ಆದ್ರೆ ನನ್ನಂತಹ ಒಬ್ಬ ಸಾಮಾನ್ಯ ಮನುಷ್ಯನನ್ನ ಶಾಸಕನಾಗಿ ಆಯ್ಕೆ ಮಾಡಿದ್ದಾರೆ. ನನಗೆ ಅದಕ್ಕಿಂತ ದೊಡ್ಡ ಸ್ಥಾನ ಯಾವುದೂ ಇಲ್ಲ, ಜನಾದೇಶ ಬಹಳ ಮುಖ್ಯ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಡುರಾತ್ರಿಯಲ್ಲಿ ಎಲಿಮಿನೇಷನ್: ಬಿಗ್ ಬಾಸ್ ಮನೆಯಿಂದ ಆರ್ಯವರ್ಧನ್ ಔಟ್

    ಜನಾದೇಶ ಮತ್ತೊಮ್ಮೆ ಸಿಗುವ ಆತ್ಮವಿಶ್ವಾಸ ಇದೆ. ಹೊನ್ನಾಳಿ ಕ್ಷೇತ್ರದ ಜನ ಆಯ್ಕೆ ಮಾಡಿದ ಮೇಲೆ ಮಾಧ್ಯಮಗಳು ನನ್ನನ್ನು ರಾಜ್ಯಕ್ಕೆ ಪರಿಚಯಿಸಿವೆ. ಆದ್ರೆ ಸಚಿವ ಸ್ಥಾನಕ್ಕೆ ಅವಕಾಶಗಳು ವಂಚಿತರಾಗಿದ್ದೇವೆ ಎಂದು ಸುಮ್ಮನಾಗಿರ್ತೀವಿ ಅಷ್ಟೇ. ಎಲ್ಲಾ ಸಾಮರ್ಥ್ಯ, ಅರ್ಹತೆ, ಅನುಭವ ನನಗಿದೆ. ರೇಣುಕಾಚಾರ್ಯ ಬೇಡ ಅಂತಾ ಇರಬಹುದೇನೋ ಗೊತ್ತಿಲ್ಲ ಎಂದು ಪರೋಕ್ಷವಾಗಿ ಸಿಎಂಗೆ ತಿವಿದಿದ್ದಾರೆ.

    ನನಗೆ ಸರ್ಕಾರ ಮತ್ತು ಸಂಘಟನೆ ಎಲ್ಲ ರೀತಿಯ ಸ್ಥಾನಮಾನ ಗೌರವ ಕೊಟ್ಟಿದೆ. ಹೊನ್ನಾಳಿ ಕ್ಷೇತ್ರದಲ್ಲಿ ಟಿಕೆಟ್ ನೀಡಿದ್ದು ಸಾಮರ್ಥ್ಯ ನೋಡಿಯೇ. ನನ್ನ ಹೋರಾಟದ ಫಲದಿಂದ ನಾನು ಶಾಸಕನಾಗಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪಂಚಮಸಾಲಿ ಮೀಸಲಾತಿ – ಇನ್ನೂ ಸ್ಪಷ್ಟ ನಿಲುವು ಪ್ರಕಟಿಸದ ಕಾಂಗ್ರೆಸ್

    ಪಂಚಮಸಾಲಿ ಮೀಸಲಾತಿ – ಇನ್ನೂ ಸ್ಪಷ್ಟ ನಿಲುವು ಪ್ರಕಟಿಸದ ಕಾಂಗ್ರೆಸ್

    ಬೆಳಗಾವಿ: ಪಂಚಮಸಾಲಿ ಮೀಸಲಾತಿ ಹೋರಾಟ(Panchamasali Reservation) ವಿಚಾರದಲ್ಲಿ ಕಾಂಗ್ರೆಸ್(Congress) ಸ್ಪಷ್ಟ ನಿಲುವು ಪ್ರಕಟಿಸಿಲ್ಲ. ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಮಣಿದು ಸರ್ಕಾರ ಒಪ್ಪಿಗೆ ಸೂಚಿಸಿದರೆ ಮುಂದೇನು ಮಾಡಬೇಕು ಎಂದು ಚಿಂತನೆ ನಡೆಸುತ್ತಿದೆ.

    ಎಸ್‍ಸಿ-ಎಸ್‍ಟಿ ಮೀಸಲು(SC- ST Reservation) ಅಸ್ತ್ರದ ಜೊತೆಗೆ ಸರ್ಕಾರದ ವಿರುದ್ಧ ಮತ್ತೊಂದು ಅಸ್ತ್ರ ಬಳಕೆಗೆ ಕೈ ಪಾಳಯದ ಪ್ಲಾನ್ ಮಾಡಿಕೊಳ್ಳುತ್ತಿದೆ ಎನ್ನುವ ಮಾತು ಕೇಳಿ ಬರುತ್ತಿದೆ. ಇದನ್ನೂ ಓದಿ: ಬೊಮ್ಮಾಯಿ ಸರ್ಕಾರಕ್ಕೆ ಪಂಚಮಸಾಲಿ ಸವಾಲು – ಬೇಡಿಕೆ ಏನು? ವಸ್ತುಸ್ಥಿತಿ ಏನಿದೆ? ಯಾವ ಜಿಲ್ಲೆಗಳಲ್ಲಿಎಷ್ಟಿದೆ ಪ್ರಭಾವ?

     
    ಒಂದು ವೇಳೆ ಪಂಚಮಸಾಲಿ ಕೈ ತಪ್ಪಿದರೆ, ಒಳ ಮೀಸಲಾತಿ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ. ಸದಾಶಿವ ಆಯೋಗದ ದಾಳ ಉರುಳಿಸಲು ಸದ್ದಿಲ್ಲದೆ ಸಿದ್ಧಮಾಡಿಕೊಳ್ಳುತ್ತಿದೆ. ಆ ಮೂಲಕ ದಲಿತಾಸ್ತ್ರದ ಮೂಲಕ ಬಿಜೆಪಿ ಸರ್ಕಾರವನ್ನು ಕಟ್ಟಿ ಹಾಕುವುದು ಕೈ ಪಾಳಯದ ಲೆಕ್ಕಾಚಾರ ಎನ್ನಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಬೊಮ್ಮಾಯಿ ಸರ್ಕಾರಕ್ಕೆ ಪಂಚಮಸಾಲಿ ಸವಾಲು – ಬೇಡಿಕೆ ಏನು? ವಸ್ತುಸ್ಥಿತಿ ಏನಿದೆ? ಯಾವ ಜಿಲ್ಲೆಗಳಲ್ಲಿಎಷ್ಟಿದೆ ಪ್ರಭಾವ?

    ಬೊಮ್ಮಾಯಿ ಸರ್ಕಾರಕ್ಕೆ ಪಂಚಮಸಾಲಿ ಸವಾಲು – ಬೇಡಿಕೆ ಏನು? ವಸ್ತುಸ್ಥಿತಿ ಏನಿದೆ? ಯಾವ ಜಿಲ್ಲೆಗಳಲ್ಲಿಎಷ್ಟಿದೆ ಪ್ರಭಾವ?

    ಬೆಳಗಾವಿ: ಎಸ್‍ಸಿ-ಎಸ್‍ಟಿ ಮೀಸಲಾತಿ ಹೆಚ್ಚಿಸಿದ ರಾಜ್ಯ ಸರ್ಕಾರಕ್ಕೆ ಈಗ ಪಂಚಮಸಾಲಿ(Panchamasali ) ಸಮುದಾಯದ 2ಎ ಮೀಸಲಾತಿ(Reservation) ಬೇಡಿಕೆ ಬಿಸಿತುಪ್ಪವಾಗಿ ಪರಿಣಮಿಸಿದೆ. ಇಷ್ಟು ದಿನ ಪದೇ ಪದೇ ಡೆಡ್‍ಲೈನ್ ನೀಡುತ್ತಿದ್ದ ಪಂಚಮಸಾಲಿ ಸಮುದಾಯ ಈಗ ಮೀಸಲಾತಿಗಾಗಿ ಮಾಡು ಇಲ್ಲವೇ ಮಡಿ ಹೋರಾಟ ಆರಂಭಿಸಿದೆ.

    ಇಂದು ಬೆಳಗಾವಿಯಲ್ಲಿ(Belagavi) ಬೃಹತ್‌ ಪಂಚಮಸಾಲಿ ಸಮಾವೇಶ ನಡೆಯಲಿದೆ. ಸಮುದಾಯಕ್ಕೆ 2ಎ ಮೀಸಲಾತಿ ನೀಡಿದರೆ ಸರ್ಕಾರಕ್ಕೆ ಸನ್ಮಾನ. ಇಲ್ಲದಿದ್ದರೆ ಅಪಮಾನ ಮಾಡುವುದು ಖಚಿತ. ಶಕ್ತಿ ಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಸಮುದಾಯದ ನಾಯಕರು ಗುಡುಗಿದ್ದಾರೆ.

    ಕ್ಯಾಬಿನೆಟ್‌ ಸಭೆ
    ಪಂಚಮಸಾಲಿ ಮೀಸಲಾತಿ ಹೋರಾಟ ಸಂಬಂಧ ಎಲ್ಲರ ಚಿತ್ತ ಸರ್ಕಾರದ ತೀರ್ಮಾನದತ್ತ ಇದೆ. ಇಂದು ಬೆಳಗಾವಿಯ ಸುವರ್ಣಸೌಧದಲ್ಲಿ ಸಿಎಂ ನೇತೃತ್ವದಲ್ಲಿ ಮಹತ್ವದ ಸಂಪುಟ ಸಭೆ(Cabinet) ನಡೆಯಲಿದೆ. ಮೀಸಲಾತಿ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳುತ್ತಾರಾ ಅಥವಾ ಮೀಸಲಾತಿ ಬಿಕ್ಕಟ್ಟಿಗೆ ಪರಿಹಾರ ಸೂತ್ರ ಸಿದ್ಧಪಡಿಸಲು ಸಂಪುಟ ಸಭೆ ವೇದಿಕೆಯಾಗುತ್ತಾ ನೋಡಬೇಕಿದೆ. ಇದನ್ನೂ ಓದಿ: ಅಯೋಧ್ಯೆ ಮಾದರಿಯಲ್ಲಿ ರಾಮದೇವರ ಬೆಟ್ಟ ಅಭಿವೃದ್ಧಿ – ಸಿಎಂಗೆ ಅಶ್ವಥ್ ನಾರಾಯಣ ಪತ್ರ

    ಪ್ರತಿಭಟನೆ ಮಾಡುತ್ತಿರುವ ಪಂಚಮಸಾಲಿಗಳಿಗೆ ಯಾವ ಭರವಸೆ ನೀಡುತ್ತದೆ ಎನ್ನುವುದರ ಬಗ್ಗೆ ಹೆಚ್ಚಿದ ಕುತೂಹಲ ಮೂಡಿಸಿದೆ. ಸರಕಾರದ ಬಳಿ ಎರಡು ಪ್ರಮುಖ ಪರಿಹಾರ ಸೂತ್ರವಿದೆ. ಹಿಂದುಳಿದ ವರ್ಗಗಳ ಆಯೋಗದ ವರದಿ ಬರುವವರೆಗೆ ಕಾಯಬೇಕು. ಇಲ್ಲವೇ ಪ್ರಸ್ತುತ ಮೀಸಲಾತಿ ಪ್ರಮಾಣದ ಏರಿಕೆಗೆ ತಿರ್ಮಾನ ಮಾಡಿ 2ಎಗೆ ಶಿಫಾರಸ್ಸು ಮಾಡಬೇಕು. ಯಾಕಂದರೆ ಇನ್ನೂ 12 ಜಿಲ್ಲೆಗಳಲ್ಲಿ ಹಿಂದುಳಿದ ವರ್ಗಗಳ ಆಯೋಗದಿಂದ ಅಧ್ಯಯನ ಬಾಕಿಯಿದೆ. ಸರ್ಕಾರದ ನಿರ್ಧಾರ ಏನು ಎನ್ನುವುದೇ ಸದ್ಯದ ಕುತೂಹಲ.

    ಪಂಚಮಸಾಲಿಗಳ ಬೇಡಿಕೆ ಏನು?
    ಸದ್ಯ ಪ್ರವರ್ಗ 3ಬಿಯಲ್ಲಿರುವ ಪಂಚಮಸಾಲಿ ಸಮುದಾಯ ಶೇ.5 ಮೀಸಲಾತಿ ಇದೆ. ಪ್ರವರ್ಗ 2ಎಗೆ ಸೇರ್ಪಡೆ ಆದರೆ ಶೇ.15 ಮೀಸಲಾತಿ ಅನುಕೂಲ ಸಿಗಲಿದೆ. ಜನಸಂಖ್ಯೆ ಹೆಚ್ಚಳ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿ ಆಧರಿಸಿ ಮೀಸಲಾತಿಗೆ ಒತ್ತಾಯ ಮಾಡುತ್ತಿದೆ.

    ವಸ್ತುಸ್ಥಿತಿ ಏನಿದೆ?
    ಪಂಚಮಸಾಲಿ ಸಮುದಾಯದ 2ಎ ಸೇರ್ಪಡೆ ಬೇಡಿಕೆ ಬಗ್ಗೆ ಪರಾಮರ್ಶೆ ಸಂಬಂಧ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ಸರ್ಕಾರ ವರದಿ ಕೇಳಿದೆ. ಆಯೋಗದ ವರದಿ ಪೂರ್ತಿ ಆಗಲು ಇನ್ನೂ ಕನಿಷ್ಠ 2 ತಿಂಗಳು ಬೇಕಿದೆ. ಸದ್ಯಕ್ಕೆ ಸರ್ಕಾರ ಆಯೋಗದಿಂದ ಮಧ್ಯಂತರ ವರದಿ ಕೇಳಿದೆ.

     

    ಪ್ರಭಾವ ಎಷ್ಟಿದೆ?
    ಒಂಥರಾ ಅತ್ತ ದರಿ ಇತ್ತ ಪುಲಿ ಸ್ಥಿತಿಯಲ್ಲಿ ಸರ್ಕಾರವಿದೆ. ಯಾಕೆಂದರೆ ಪಂಚಮಸಾಲಿ ಲಿಂಗಾಯತ ಅತ್ಯಂತ ಪ್ರಬಲ ಸಮುದಾಯ. ಈ ಸಮುದಾಯಕ್ಕೆ ಮೀಸಲಾತಿ ಕೊಡದೇ ಹೋದರೆ ಎದುರಾಗುವ ಸಂಕಷ್ಟದ ಬಗ್ಗೆಯೂ ಸರ್ಕಾರಕ್ಕೆ ಅರಿವಿದೆ. ಒಂದು ವೇಳೆ ಮತ್ತೆ ಕಣ್ಣೊರೆಸುವ ತಂತ್ರ ಮಾಡಿದರೆ ಚುನಾವಣಾ ನಷ್ಟದ ಭೀತಿ ಎದುರಾಗುವ ಆತಂಕವಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪಂಚಮಸಾಲಿ ಪ್ರಾಬಲ್ಯವೇ ಇದೆ.

    ಅಂದಾಜು 70 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಇರುವ ಪಂಚಮಸಾಲಿ ಸಮುದಾಯ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಾಬಲ್ಯ ಹೊಂದಿದೆ. 50ಕ್ಕೂ ಹೆಚ್ಚು ಮತ ಕ್ಷೇತ್ರಗಳಲ್ಲಿ ವರ್ಚಸ್ಸು ಹೊಂದಿದ್ದು 11 ಜಿಲ್ಲೆಗಳ ಬಹಳಷ್ಟು ಕ್ಷೇತ್ರಗಳಲ್ಲಿ ಪಂಚಮಸಾಲಿ ಮತ ನಿರ್ಣಾಯಕವಾಗಿದೆ.

    ಎಲ್ಲಿ ಪ್ರಾಬಲ್ಯ?
    ಬಾಗಲಕೋಟೆ, ಧಾರವಾಡ, ಬೆಳಗಾವಿ, ಹಾವೇರಿ, ಗದಗ, ವಿಜಯಪುರ, ಶಿವಮೊಗ್ಗ, ದಾವಣಗೆರೆ, ಕೊಪ್ಪಳ, ಬೀದರ್, ಕಲಬುರಗಿ.

  • ಇನ್ಮುಂದೆ ಖಾಸಗಿ ಜಾಗದಲ್ಲಿ ಶ್ರೀಗಂಧ ಬೆಳೆದು ರೈತರೇ ಮಾರಾಟ ಮಾಡಬಹುದು

    ಇನ್ಮುಂದೆ ಖಾಸಗಿ ಜಾಗದಲ್ಲಿ ಶ್ರೀಗಂಧ ಬೆಳೆದು ರೈತರೇ ಮಾರಾಟ ಮಾಡಬಹುದು

    ಬೆಂಗಳೂರು: ಇನ್ನು ಮುಂದೆ ರೈತರು ಖಾಸಗಿ ಜಮೀನಿನಲ್ಲಿ ಶ್ರೀಗಂಧ(Sandalwood) ಬೆಳೆದು ಮುಕ್ತ ಮಾರುಕಟ್ಟೆಯಲ್ಲಿ(Open Market) ಮಾರಾಟ ಮಾಡಬಹುದು.

    ರೈತರು(Farmers) ತಮ್ಮ ಹೊಲ ಗದ್ದೆಗಳಲ್ಲಿ ಶ್ರೀಗಂಧ ಬೆಳೆಯುವುದನ್ನು ಉತ್ತೇಜಿಸುವ ಜೊತೆಗೆ ಮಾರಾಟಕ್ಕೆ ಸರಳ ವ್ಯವಸ್ಥೆ ಕಲ್ಪಿಸಲು ಈ ಹಿಂದೆ ರಾಜ್ಯ ಅರಣ್ಯ ಇಲಾಖೆ ಪ್ರಸ್ತಾಪಿಸಿದ ‘ಶ್ರೀಗಂಧ ನೀತಿ’ಯನ್ನು ಜಾರಿಮಾಡಲು ಕ್ಯಾಬಿನೆಟ್‌(Cabinet) ಅನುಮೋದನೆ ನೀಡಿದೆ.  ಇದನ್ನೂ ಓದಿ: BMTC ಬಸ್ ಗುದ್ದಿ ಗಾಯಗೊಂಡಿದ್ದ ಯೋಧ ಸಾವು

    2001ರಿಂದ ರಾಜ್ಯದಲ್ಲಿ ರೈತರು ಶ್ರೀಗಂಧ ಬೆಳೆಯಲು ಅನುಮತಿ ನೀಡಲಾಗಿದ್ದರೂ ಅವುಗಳ ಪೋಷಣೆ, ಸಂರಕ್ಷಣೆ, ಕಟಾವು ಮಾಡುವುದು ಮತ್ತು ಸೂಕ್ತ ಮಾರುಕಟ್ಟೆ ಸೌಲಭ್ಯಗಳನ್ನು ಅರಣ್ಯ ಇಲಾಖೆ ಕಲ್ಪಿಸಿರಲಿಲ್ಲ. ಸರ್ಕಾರದ ಈ ನಿರ್ಧಾರ ಶ್ರೀಗಂಧ ಬೆಳೆಯುವ ರೈತರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಸಮಸ್ಯೆ ಅರಿತ ಸರ್ಕಾರ ಮಾರಾಟಕ್ಕೂ ಅವಕಾಶ ನೀಡಿದೆ.

    ಕ್ಯಾಬಿನೆಟ್‌ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸುಧಾಕರ್‌, ನಮಗೆ ಶ್ರೀಗಂಧದ ಕೊರತೆಯಿದೆ. ನಮ್ಮ ಸರ್ಕಾರಿ ಸಂಸ್ಥೆಗೂ ಮತ್ತು ಖಾಸಗಿ ಸಂಸ್ಥೆಗೂ ಶ್ರೀಗಂಧ ಅಗತ್ಯವಿದೆ. ಈ ಹಿಂದೆ ಮಾರಾಟಕ್ಕೆ ಕೆಲವು ನಿರ್ಬಂಧವಿತ್ತು. ಈಗ ಆ ನಿರ್ಬಂಧಗಳನ್ನು ತೆಗೆದು ಹೊಸ ಶ್ರೀಗಂಧ ನೀತಿ 2022 ಜಾರಿ ಮಾಡಲು ಸಂಪುಟ ಅನುಮೋದನೆ ನೀಡಿದೆ ಎಂದು ತಿಳಿಸಿದರು.

    10 ವರ್ಷ ಬೆಳೆದ ಶ್ರೀಗಂಧಕ್ಕೆ ಸೂಕ್ತ ಬೆಲೆ ಲಭ್ಯವಾಗದೇ ರೈತರಿಗೆ ಸಮಸ್ಯೆಯಾಗಿತ್ತು. ಈ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಲು ಶ್ರೀಗಂಧ ನೀತಿ ಜಾರಿ ತರಲು ಅರಣ್ಯ ಇಲಾಖೆ ಕರಡು ನೀತಿ ಸಿದ್ಧಪಡಿಸಿ ಅನುಮತಿ ಪಡೆಯಲು ಸರ್ಕಾರಕ್ಕೆ ಸಲ್ಲಿಸಿತ್ತು.

    Live Tv
    [brid partner=56869869 player=32851 video=960834 autoplay=true]

  • ಬ್ರಿಟನ್ ಪ್ರಧಾನಿಯಾದ ಗಂಟೆಗಳೊಳಗೆ ಸುನಾಕ್ ಹೊಸ ಕ್ಯಾಬಿನೆಟ್‌ಗೆ ಸಿದ್ಧತೆ

    ಬ್ರಿಟನ್ ಪ್ರಧಾನಿಯಾದ ಗಂಟೆಗಳೊಳಗೆ ಸುನಾಕ್ ಹೊಸ ಕ್ಯಾಬಿನೆಟ್‌ಗೆ ಸಿದ್ಧತೆ

    ಲಂಡನ್: ಬ್ರಿಟನ್‌ಗೆ (Britain) ನೂತನ ಪ್ರಧಾನಿಯಾಗಿರುವ (PM) ಭಾರತ ಮೂಲದ ರಿಷಿ ಸುನಾಕ್ (Rishi Sunak) ಅವರು ಇಂದು 3ನೇ ಕಿಂಗ್ ಚಾರ್ಲ್ಸ್ ಅವರನ್ನು ಬೇಟಿಯಾದ ಗಂಟೆಯೊಳಗೆ ತಮ್ಮ ಜವಾಬ್ದಾರಿಯನ್ನು ತಕ್ಷಣವೇ ಪ್ರಾರಂಭಿಸುವುದಾಗಿ ಭರವಸೆ ನೀಡಿದ್ದಾರೆ. ಅದರಂತೆಯೇ ಸುನಾಕ್ ತಮ್ಮ ಹೊಸ ಕ್ಯಾಬಿನೆಟ್ (Cabinet) ಅನ್ನು ರಚಿಸಲು ಪೂರ್ವಭಾವಿಯಾಗಿ ಈ ಹಿಂದಿನ ಪ್ರಧಾನಿ ಲಿಜ್ ಟ್ರಸ್ (Liz Truss)  ಅವರ ಮಂತ್ರಿಗಳ ತಂಡವನ್ನು ಕೆಳಗಿಳಿಯುವಂತೆ ಕೇಳಿಕೊಂಡಿದ್ದಾರೆ.

    ಇಂದು ಸಂಜೆಯ ವೇಳೆಗೆ 2 ನಿರ್ಣಾಯಕ ನೇಮಕಾತಿಗಳನ್ನು ಮಾಡಲಾಗಿದೆ. ಉಪ ಪ್ರಧಾನಿಯಾಗಿ ಡೊಮಿನಿಕ್ ರಾಬ್ ಹಾಗೂ ಹಣಕಾಸು ಮಂತ್ರಿಯಾಗಿ ಜೆರೆಮಿ ಹಂಟ್ ಅವರನ್ನು ನೇಮಿಸಲಾಗಿದೆ. ಅಲ್ಲದೇ ಲಿಜ್ ಟ್ರಸ್ ಸಂಪುಟದಲ್ಲಿ ಗೃಹ ಕಾರ್ಯದರ್ಶಿಯಾಗಿ ನಂತರ ರಾಜೀನಾಮೆ ನೀಡಿದ್ದ ಭಾರತ ಮೂಲದ ಸುಯೆಲ್ಲಾ ಬ್ರೇವರ್‌ಮನ್ (Suella Braverman) ಕೂಡ ಮತ್ತೆ ರಿಷಿ ಸುನಾಕ್ ಕ್ಯಾಬಿನೆಟ್ ಸೇರಲಿದ್ದಾರೆ. ಇದನ್ನೂ ಓದಿ: ಕರ್ನಾಟಕದ ಅಳಿಯ ರಿಷಿ ಸುನಾಕ್‌ ಬ್ರಿಟನ್‌ ರಾಜ 3ನೇ ಚಾರ್ಲ್ಸ್‌ಗಿಂತಲೂ ಶ್ರೀಮಂತ

    ಈವರೆಗೆ ನಾಲ್ವರು ಸಚಿವರನ್ನು ತಮ್ಮ ಸ್ಥಾನದಿಂದ ಕೆಳಗಿಳಿಯುವಂತೆ ಸೂಚಿಸಲಾಗಿದೆ. ಅವರಲ್ಲಿ ವ್ಯಾಪಾರದ ಕಾರ್ಯದರ್ಶಿ ಜಾಕೋಬ್ ರೀಸ್ ಮೊಗ್, ನ್ಯಾಯ ಕಾರ್ಯದರ್ಶಿ ಬ್ರಾಂಡನ್ ಲೂಯಿಸ್, ಪಿಂಚಣಿ ಕಾರ್ಯದರ್ಶಿ ಕ್ಲೋಯ್ ಸ್ಮಿತ್ ಹಾಗೂ ಅಭಿವೃದ್ಧಿ ಸಚಿವ ವಿಕಿ ಫೋರ್ಡ್ ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಬ್ರಿಟನ್ ಪ್ರಧಾನಿಯಾಗಿ ಪಟ್ಟ ಅಲಂಕರಿಸಿದ ರಿಷಿ ಸುನಾಕ್ ತಮ್ಮ ಮೊದಲ ಭಾಷಣದಲ್ಲಿ ದೇಶದ ಆರ್ಥಿಕ ಸ್ಥಿರತೆ ಮತ್ತು ಸಾಮರ್ಥ್ಯವನ್ನು ಬಲಪಡಿಸುವುದಾಗಿ ಭರವಸೆ ನೀಡಿದರು. ಈ ಹಿಂದೆ ರಾಜಕೀಯವಾಗಿ ನಡೆದಿದ್ದ ತಪ್ಪುಗಳನ್ನು ಸರಿಪಡಿಸುವುದು ಹಾಗೂ ಜನರ ನಂಬಿಕೆಯನ್ನು ಕಾಪಾಡಿಕೊಳ್ಳುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: 3ನೇ ಕಿಂಗ್ ಚಾರ್ಲ್ಸ್‌ರಿಂದ ಬ್ರಿಟನ್ ಪ್ರಧಾನಿಯಾಗಿ ರಿಷಿ ಸುನಾಕ್ ನೇಮಕ

    Live Tv
    [brid partner=56869869 player=32851 video=960834 autoplay=true]

  • ಈ ಬಾರಿ ಸಂಪುಟ ವಿಸ್ತರಣೆಯೋ, ಪುನರ್‌ ರಚನೆಯೋ ಕಾದು ನೋಡಿ: ಬೊಮ್ಮಾಯಿ

    ಈ ಬಾರಿ ಸಂಪುಟ ವಿಸ್ತರಣೆಯೋ, ಪುನರ್‌ ರಚನೆಯೋ ಕಾದು ನೋಡಿ: ಬೊಮ್ಮಾಯಿ

    ಚಿತ್ರದುರ್ಗ: ಈ ಬಾರಿ ಸಂಪುಟ ವಿಸ್ತರಣೆಯಾಗಲಿದೆಯೋ, ಪುನರ್‌ ರಚನೆಯೋ ಕಾದು ನೋಡಿ ಎಂದು ಹೊಸದುರ್ಗ ಹೆಲಿಪ್ಯಾಡ್‍ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

    ಚಿತ್ರದುರ್ಗ (Chitradurga) ಜಿಲ್ಲೆಯ ಹೊಸದುರ್ಗ ಪಟ್ಟಣದ ತಾಲೂಕು ಕ್ರೀಡಾಂಗಣದ ಹೆಲಿಪ್ಯಾಡ್‍ನಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕೀಯ ಸನ್ನಿವೇಶದಿಂದ ಚಿತ್ರದುರ್ಗದ ಸ್ಥಳೀಯ ಶಾಸಕರಿಗೆ ಸಚಿವ ಸ್ಥಾನಕ್ಕೆ ಆದ್ಯತೆ ಸಿಕ್ಕಿಲ್ಲ. ಈ ಬಾರಿ ಅವಕಾಶ ಸಿಗಲಿದೆ. ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ದೆಹಲಿಗೆ (NewDelhi) ತೆರಳುತ್ತೇನೆ. ಹಾಗೆಯೇ ಕಳಂಕಿತ ಶಾಸಕರು ಎನಿಸಿರುವ ರಮೇಶ್ ಜಾರಕಿಹೊಳಿ (Ramesh Jarkiholi) ಹಾಗೂ ಕೆ.ಎಸ್. ಈಶ್ವರಪ್ಪಗೆ (KS Eshwarappa) ಸಚಿವ ಸ್ಥಾನ ನೀಡುವ ಬಗ್ಗೆ ಅಂತಿಮವಾಗಿ ಹೈಕಮಾಂಡ್ ತೀರ್ಮಾನಿಸಲಿದೆ ಎಂದು ಮಾಹಿತಿ ನೀಡಿದರು.

    ರಾಜ್ಯದ ಪ್ರಥಮ ರಾಷ್ಟ್ರೀಯ ನೀರಾವರಿ ಯೋಜನೆ: ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಪ್ರಾಮುಖ್ಯ ಯೋಜನೆಯಾಗಿ ಪಿಐಬಿ (ಸಾರ್ವಜನಿಕ ಬಂಡವಾಳ ಹೂಡಿಕೆ ಮಂಡಳಿ)ಯಲ್ಲಿ ಅನುಮೋದನೆ ನೀಡಲಾಗಿದೆ. ಕೇಂದ್ರ ಸಚಿವ ಸಂಪುಟದಿಂದ ಅನುಮೋದನೆ ಬಾಕಿ ಇದೆ. ಭದ್ರಾ ಮೇಲ್ದಂಡೆ ಯೋಜನೆ ರಾಜ್ಯದ ಪ್ರಥಮ ರಾಷ್ಟ್ರೀಯ ನೀರಾವರಿ ಯೋಜನೆಯಾಗಲಿದೆ ಎಂದು ಹೇಳಿದರು.

    ಕೇಂದ್ರ ಜಲಸಂಪನ್ಮೂಲ ಸಚಿವರು ಯೋಜನೆ ಕುರಿತು ಕಾರ್ಯೋನ್ಮುಖರಾಗಿದ್ದಾರೆ. ವೈಯಕ್ತಿಕವಾಗಿ ಕೇಂದ್ರ ಜಲ ಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ. ಇದರಿಂದಾಗಿ ಯೋಜನೆಗೆ ಬಹಳ ದೊಡ್ಡ ಪ್ರಮಾಣದಲ್ಲಿ ಹಣಕಾಸಿನ ನೆರವು ಲಭಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಚಿತ್ರದುರ್ಗ ಭಾಗದ ಜನರ ಬಹುದಿನದ ಬೇಡಿಕೆ ತುಮಕೂರು- ದಾವಣಗೆರೆ ನೇರ ರೈಲು ಮಾರ್ಗದ ಯೋಜನೆಯ ಅನುಷ್ಠಾನಕ್ಕೆ ಕೆಲವು ಭಾಗದಲ್ಲಿ ಭೂಸ್ವಾಧೀನ ಪ್ರಕ್ರಿಯೆಯ ಬಾಕಿಯಿದೆ. ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವಾಗಿ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಆದಷ್ಟು ಬೇಗ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ಭೂ ಸ್ವಾಧೀನಕ್ಕೆ ಅಗತ್ಯ ಇರುವ 100 ಕೋಟಿ ರೂಪಾಯಿಗಳನ್ನು ನೀಡಲು ಸರ್ಕಾರ ಸಿದ್ಧವಿದೆ ಎಂದರು. ಇದನ್ನೂ ಓದಿ: ಜನಪ್ರತಿನಿಧಿಗಳೇ ಬದುಕಿದ್ದೀರಾ? ಅಧಿಕಾರಿಗಳೇ ಇತ್ತ ಗಮನಿಸಿ – ಫ್ಲೆಕ್ಸ್‌ಗೆ ಚಪ್ಪಲಿ ಹಾರ ಹಾಕಿ ಆಕ್ರೋಶ

    ಕೃಷಿ ಸಚಿವ ಬಿ.ಸಿ.ಪಾಟೀಲ್, ಕರ್ನಾಟಕ ರಾಜ್ಯ ಸಾರಿಗೆ ನಿಗಮದ ಅಧ್ಯಕ್ಷರಾದ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ, ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್, ಚಿತ್ರದುರ್ಗ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್ ಸೇರಿದಂತೆ ಇತರರಿದ್ದರು. ಇದನ್ನೂ ಓದಿ: ರಾಷ್ಟ್ರಧ್ವಜ ಹಿಡಿದು ರಾಹುಲ್ ಗಾಂಧಿ 100 ಮೀ. ಓಟ – ಬ್ಯಾಂಡ್ ಬಾರಿಸುತ್ತ ನಡೆದ ಡಿಕೆಶಿ

    Live Tv
    [brid partner=56869869 player=32851 video=960834 autoplay=true]

  • ನಷ್ಟ ಸರಿದೂಗಿಸಲು ತೈಲ ಕಂಪನಿಗಳಿಗೆ 22 ಸಾವಿರ ಕೋಟಿ ರೂ. ಅನುದಾನ

    ನಷ್ಟ ಸರಿದೂಗಿಸಲು ತೈಲ ಕಂಪನಿಗಳಿಗೆ 22 ಸಾವಿರ ಕೋಟಿ ರೂ. ಅನುದಾನ

    ನವದೆಹಲಿ: ಮೂರು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ( State-run Oil Firms) ಕೇಂದ್ರ ಸರ್ಕಾರ 22 ಸಾವಿರ ಕೋಟಿ ರೂ. ಅನುದಾನ ಪ್ರಕಟಿಸಿದೆ.

    ಕಳೆದ ಎರಡು ವರ್ಷಗಳಿಂದ ಗೃಹ ಬಳಕೆಯ ಎಲ್‌ಪಿಜಿ(LPG) ಬೆಲೆ ಭಾರೀ ಏರಿಕೆಯಾಗಿದ್ದರೂ ಕಡಿಮೆ ದರದಲ್ಲಿ ವಿತರಣೆ ಮಾಡಿದ ಹಿನ್ನೆಲೆಯಲ್ಲಿ ಆಗಿರುವ ನಷ್ಟವನ್ನು ಸರಿದೂಗಿಸಲು ಈ ಅನುದಾನ ಬಿಡುಗಡೆಗೆ ಒಪ್ಪಿಗೆ ನೀಡಿದೆ. ಇದನ್ನೂ ಓದಿ: ಮುಸ್ಲಿಂ ಪತಿ 2ನೇ ಮದುವೆಯಾಗುವಂತಿಲ್ಲ – ಕುರಾನ್ ಉಲ್ಲೇಖಿಸಿ ಹೈಕೋರ್ಟ್ ತೀರ್ಪು

    ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್‌ ಸಭೆ ಇಂಡಿಯನ್‌ ಆಯಿಲ್‌ ಕಾರ್ಪೋರೇಷನ್‌(IOC), ಭಾರತ್‌ ಪೆಟ್ರೋಲಿಯಂ ಲಿಮಿಟೆಡ್‌(BPCL) ಮತ್ತು ಹಿಂದೂಸ್ತಾನ್‌ ಪೆಟ್ರೋಲಿಯಂ ಲಿಮಿಟೆಡ್‌(HPCL) ಕಂಪನಿಗಳಿಗೆ ಈ ಅನುದಾನ ನೀಡುವ ನಿರ್ಧಾರ ಕೈಗೊಂಡಿದೆ.

    ಜೂನ್‌ 2020 ರಿಂದ ಜೂನ್‌ 2022ರ ಅವಧಿಯಲ್ಲಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಎಲ್‌ಪಿಜಿ ಬೆಲೆ ಶೇ.300 ರಷ್ಟು ಹೆಚ್ಚಳ ಕಂಡಿದೆ.

    Live Tv
    [brid partner=56869869 player=32851 video=960834 autoplay=true]