Tag: Cable Car

  • ಬೆಳಗಾವಿಯಲ್ಲಿ ಕೇಬಲ್ ಕಾರ್ ಯೋಜನೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್

    ಬೆಳಗಾವಿಯಲ್ಲಿ ಕೇಬಲ್ ಕಾರ್ ಯೋಜನೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್

    ಬೆಳಗಾವಿ: ಬೆಳಗಾವಿ (Belagavi) ಮಹಾನಗರದಲ್ಲಿ ಹೊಸತನ ಬಯಸುವ ಶಾಸಕ ಅಭಯ ಪಾಟೀಲ (Abhay Patil) ಈಗ ಬೆಳಗಾವಿಯ ಸೌಂದರ್ಯ ಹೆಚ್ಚಿಸಿ ಪಕ್ಕದ ರಾಜ್ಯಗಳ ಪ್ರವಾಸಿಗರನ್ನು ಆಕರ್ಷಿಸುವ ಕೇಬಲ್ ಕಾರ್ (Cable Car) ಯೋಜನೆಯ ಅನುಷ್ಠಾನಕ್ಕೆ ಕೇಂದ್ರದ ಅನುಮತಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

    ನವದೆಹಲಿಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ, ಬೆಳಗಾವಿ ದಕ್ಷಿಣ ಮತಕ್ಷೇತ್ರದ ಯಳ್ಳೂರು ಗ್ರಾಮದಿಂದ ರಾಜಹಂಸಗಡ ವರೆಗೆ ಕೇಬಲ್ ಕಾರ್ ಅಳವಡಿಸಲು 60 ಕೋಟಿ ರೂ.ಗಳ ಯೋಜನೆಗೆ ಮಂಜೂರಾತಿ ನೀಡುವಂತೆ ಮನವಿ ಮಾಡಿದ್ದರು. ಅದಕ್ಕೆ ತಕ್ಷಣವೇ ಸ್ಪಂದಿಸಿದ ಕೇಂದ್ರ ಸಚಿವರು, ಪರಿಶೀಲನೆ ಮಾಡಿ ತಕ್ಷಣ ವರದಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: BJP-JDS ಮೈತ್ರಿಗೆ ಜೆಡಿಎಸ್ ಹಾಲಿ, ಮಾಜಿ ಶಾಸಕರಿಂದ ಸಹಮತ

    ಡಿಸೆಂಬರ್ ಒಳಗಾಗಿ ವರದಿ ಪಡೆದು ಅಗತ್ಯ ಅನುದಾನ ಬಿಡುಗಡೆ ಮಾಡಿ ಜನವರಿ ತಿಂಗಳ ನಂತರ ಕೇಬಲ್ ಕಾರ್ ಯೋಜನೆಯ ಕಾಮಗಾರಿ ಆರಂಭಿಸಲಾಗುವುದು ಎಂದು ಕೇಂದ್ರ ಸಚಿವ ನಿತೀನ್ ಗಡ್ಕರಿ ಅವರು ಭರವಸೆ ನೀಡಿದ್ದಾರೆ ಎಂದು ಶಾಸಕ ಅಭಯ ಪಾಟೀಲ ತಿಳಿಸಿದ್ದಾರೆ. ಇದನ್ನೂ ಓದಿ: CWMA ನೀಡಿರುವ ಆದೇಶ ಪಾಲಿಸಲಾಗದ ಆಜ್ಞೆ: ಬೊಮ್ಮಾಯಿ

    ಈ ಯೋಜನೆಯ ಅನುಷ್ಠಾನದಿಂದ ಬೆಳಗಾವಿಯ ಮಹಾನಗರದ ಜನ ಎಂಜಾಯ್ ಮಾಡಲು ಯಳ್ಳೂರು ಪಿಕ್‌ನಿಕ್ ಪಾಯಿಂಟ್ ಆಗುವುದರ ಜೊತೆಗೆ ಪಕ್ಕದ ಮಹಾರಾಷ್ಟç ಮತ್ತು ಗೋವಾ ರಾಜ್ಯಗಳ ಪ್ರವಾಸಿಗರನ್ನು ಬೆಳಗಾವಿಯತ್ತ ಸೆಳೆಯಲು ಕೇಬಲ್ ಕಾರ್ ಪ್ರಮುಖ ಆಕರ್ಷಣೆಯಾಗಲಿದೆ. ಇದರಿಂದ ಬೆಳಗಾವಿಯ ಆರ್ಥಿಕ ವಹಿವಾಟು ಹೆಚ್ಚಳವಾಗಲಿದೆ ಎಂದು ಅಭಯ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣಗೆ ರಿಲೀಫ್‌ – ಕರ್ನಾಟಕ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಮಧ್ಯಂತರ ತಡೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೊಡಚಾದ್ರಿ ಸೇರಿದಂತೆ ದೇಶದ 18 ಕಡೆ ರೋಪ್‌ವೇ ನಿರ್ಮಿಸಲು ಕೇಂದ್ರ ಯೋಜನೆ

    ಕೊಡಚಾದ್ರಿ ಸೇರಿದಂತೆ ದೇಶದ 18 ಕಡೆ ರೋಪ್‌ವೇ ನಿರ್ಮಿಸಲು ಕೇಂದ್ರ ಯೋಜನೆ

    ನವದೆಹಲಿ: ಉಡುಪಿಯ (Udupi) ಕೊಡಚಾದ್ರಿ ಬೆಟ್ಟ (Kodachadri Hill) ಸೇರಿದಂತೆ ದೇಶಾದ್ಯಂತ ಸುಮಾರು 18 ಕಡೆಗಳಲ್ಲಿ ರೋಪ್‌ವೇ (Ropeway) ಯೋಜನೆಯನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

    ಕರ್ನಾಟಕದ ಕೊಡಚಾದ್ರಿ ಬೆಟ್ಟಕ್ಕೆ ಸುಮಾರು 7 ಕಿ.ಮೀ ಉದ್ದದ ರೋಪ್‌ವೇಯನ್ನು ನಿರ್ಮಿಸಲು ಕೇಂದ್ರ ಯೋಜಿಸಿದೆ. ಇದರೊಂದಿಗೆ ಜಮ್ಮು ಮತ್ತು ಕಾಶ್ಮೀರ, ಈಶಾನ್ಯ ರಾಜ್ಯಗಳಾದ ತ್ರಿಪುರಾ, ಅರುಣಾಚಲ ಪ್ರದೇಶ, ಮಣಿಪುರ, ತಮಿಳುನಾಡು, ಆಂಧ್ರಪ್ರದೇಶ, ತಮಿಳುನಾಡು, ಲೇಹ್, ಸೇರಿದಂತೆ ಒಟ್ಟು 18 ಕಡೆಗಳಲ್ಲಿ ರೋಪ್‌ವೇ ನಿರ್ಮಾಣದ ಯೋಜನೆ ಒಳಗೊಂಡಿದೆ.

    ಜಮ್ಮು ಮತ್ತು ಕಾಶ್ಮೀರದಲ್ಲಿ ಬೆಟ್ಟದ ಮೇಲಿರುವ ಪ್ರಾಚೀನ ಶಂಕರಾಚಾರ್ಯ ದೇವಾಲಯಕ್ಕೆ 1 ಕಿ.ಮೀ ಉದ್ದದ ರೋಪ್‌ವೇ, ಜಮ್ಮು ಪ್ರದೇಶದ ಮಾತಾ ವೈಷ್ಣೋ ದೇವಿ ದೇವಸ್ಥಾನದ ಬಳಿ ಶಿವಖೋರಿ ದೇವಸ್ಥಾನದವರೆಗೆ 2 ಕಿ.ಮೀ, ಪುಣೆಯ ರಾಜ್‌ಗಡ್ ಕೋಟೆಗೆ 1.4 ಕಿ.ಮೀ, ಆಂಧ್ರಪ್ರದೇಶದ ಶ್ರೀಶೈಲಂ ದೇವಸ್ಥಾನಕ್ಕೆ 2.3 ಕಿ.ಮೀ, ತೆಲಂಗಾಣದ ಈಗಳಪೆಂಟಾದಿಂದ ಕೃಷ್ಣಾ ನದಿಗೆ ಅಡ್ಡಲಾಗಿ, ಉತ್ತರ ಪ್ರದೇಶದ ಗಾಜಿಯಾಬಾದ್‌ನ ವೈಶಾಲಿ ಮೆಟ್ರೋ ನಿಲ್ದಾಣದಿಂದ ಮೋಹನ್ ನಗರ ಮೆಟ್ರೋ ನಿಲ್ದಾಣದವರೆಗೆ 10 ಕಿ.ಮೀ ಉದ್ದದ ರೋಪ್‌ವೇ ನಿರ್ಮಾಣದ ಬಗ್ಗೆಯೂ ಕೇಂದ್ರ ಮುಂದಾಗಿದೆ. ಇದನ್ನೂ ಓದಿ: ರಿಲಯನ್ಸ್ ಆಸ್ಪತ್ರೆಯನ್ನು ಸ್ಫೋಟಿಸುತ್ತೇನೆ- ಮುಖೇಶ್ ಅಂಬಾನಿ, ಕುಟುಂಬಸ್ಥರಿಗೆ ಜೀವ ಬೆದರಿಕೆ

    ರೋಪ್‌ವೇ ಯೋಜನೆ ಯಾಕೆ?
    ರೋಪ್‌ವೇ ಯೋಜನೆ ಕೇಬಲ್ ಕಾರ್‌ಗಳ (Cable Car) ಮೂಲಕ ಗಂಟೆಗೆ ಸುಮಾರು 6,000-8,000 ಪ್ರಯಾಣಿಕರನ್ನು ಸಾಗಿಸುವ ಸಾಮರ್ಥ್ಯ ಹೊಂದಿದೆ. ಇದು ಗುಡ್ಡಗಾಡು ಪ್ರದೇಶದಲ್ಲಿಯೂ ನೇರ ರೇಖೆಯಲ್ಲಿ ನಿರ್ಮಿಸಬಹುದಾಗಿದೆ. ಇವು ಗಂಟೆಗೆ 15-30 ಕಿ.ಮೀ ವೇಗದಲ್ಲಿ ಸಾಗಬಲ್ಲುದಾಗಿದ್ದು, ಮೂಲ ಹಾಗೂ ಗಮ್ಯಸ್ಥಾನವನ್ನು ಸಂಪರ್ಕಿಸುವ ದೂರ ರಸ್ತೆ ಮಾರ್ಗಗಳಿಗಿಂತ ಕಡಿಮೆಯಾಗುತ್ತದೆ. ರೋಪ್‌ವೇಗಳು ಪ್ರವಾಸೋದ್ಯಮಕ್ಕೆ, ಗುಡ್ಡಗಾಡು ಪ್ರದೇಶಗಳಲ್ಲಿ ಪ್ರಯಾಣಕ್ಕೆ ಉತ್ತಮವಾಗಿರುವುದು ಮಾತ್ರವಲ್ಲದೇ ಆಕರ್ಷಕ ಸಾರಿಗೆ ವಿಧಾನವೂ ಆಗಿದೆ. ಇದನ್ನೂ ಓದಿ: ಸೇನೆಯ ಚೀತಾ ಹೆಲಿಕಾಪ್ಟರ್ ಪತನ- ಪೈಲಟ್ ಹುತಾತ್ಮ

    Live Tv
    [brid partner=56869869 player=32851 video=960834 autoplay=true]