Tag: calf

  • ಪ್ರಧಾನಿ ಮನೆಗೆ ಹೊಸ ಅತಿಥಿ ಆಗಮನ – ಕರುವನ್ನು ಎತ್ತಿ ಮುದ್ದಾಡಿದ ಮೋದಿ

    ಪ್ರಧಾನಿ ಮನೆಗೆ ಹೊಸ ಅತಿಥಿ ಆಗಮನ – ಕರುವನ್ನು ಎತ್ತಿ ಮುದ್ದಾಡಿದ ಮೋದಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಕರು (Calf) ಜೊತೆ ಮೋದಿ ಕಳೆದ ಕ್ಷಣಗಳ ವೀಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

    ಪ್ರಧಾನಿ ಮೋದಿ ಅವರ ಲೋಕ ಕಲ್ಯಾಣ್ ಮಾರ್ಗ್ ನಿವಾಸಕ್ಕೆ ಹೊಸ ಅತಿಥಿ ‘ದೀಪಜ್ಯೋತಿ’ (Deepjyoti) ಹೆಸರಿನ ಕರು ಆಗಮಿಸಿದೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಪ್ರಧಾನಿ, ನಿವಾಸದಲ್ಲಿ ಗೋಮಾತೆ ಕರುವಿಗೆ ಜನ್ಮ ನೀಡಿದ್ದಾಳೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ ಗಣೇಶನನ್ನು ಕಾಂಗ್ರೆಸ್‌ ಸರ್ಕಾರ ಪೊಲೀಸ್‌ ವ್ಯಾನ್ ಕಂಬಿ ಹಿಂದೆ ಹಾಕಿದೆ:‌ ಮೋದಿ ವಾಗ್ದಾಳಿ

    ತಮ್ಮ ನಿವಾಸದಲ್ಲಿ ಕರುವಿನ ಜೊತೆ ಕಾಲ ಕಳೆಯುತ್ತಿರುವ ವೀಡಿಯೋವನ್ನೂ ಹಂಚಿಕೊಂಡಿದ್ದಾರೆ. ಪ್ರೀತಿಯ ತಾಯಿ ಹಸು ಹೊಸ ಕರುವಿಗೆ ಜನ್ಮ ನೀಡಿದೆ. ಅದರ ಹಣೆಯ ಮೇಲೆ ಬೆಳಕಿನ ಗುರುತು ಇದೆ. ಆದ್ದರಿಂದ, ನಾನು ಅದಕ್ಕೆ ‘ದೀಪಜ್ಯೋತಿ’ ಎಂದು ಹೆಸರಿಸಿದ್ದೇನೆ ಎಂದು ಪ್ರಧಾನಿ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

    ಪ್ರಧಾನ ಮಂತ್ರಿಯು ತಮ್ಮ ನಿವಾಸಕ್ಕೆ ಕರುವನ್ನು ಹೊತ್ತುಕೊಂಡು ಹೋಗುತ್ತಿರುವುದು, ಪೂಜೆ ವೇಳೆ ಕರುವಿಗೆ ಹೂವಿನ ಹಾರ ಹಾಕುವುದು, ಅದನ್ನು ಎತ್ತಿ ಮುದ್ದಾಡುತ್ತಿರುವುದು, ತೋಟಕ್ಕೆ ತೆಗೆದುಕೊಂಡು ಹೋಗುತ್ತಿರುವ ದೃಶ್ಯದ ಫೋಟೊಗಳನ್ನು ಸಹ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿಯೇ ಸಾಕ್ಷಾತ್ ವಿಶ್ವನಾಥ, ಅದನ್ನು ಮಸೀದಿ ಎನ್ನುವುದು ವಿಷಾದನೀಯ: ಯೋಗಿ ಆದಿತ್ಯನಾಥ್

  • ಗೃಹ ಸಚಿವರ ಜನ್ಮದಿನಕ್ಕೆ ನಾಟಿ ಹಸುವಿನ ಉಡುಗೊರೆ

    ಗೃಹ ಸಚಿವರ ಜನ್ಮದಿನಕ್ಕೆ ನಾಟಿ ಹಸುವಿನ ಉಡುಗೊರೆ

    ತುಮಕೂರು: ಗೃಹ ಸಚಿವ ಜಿ.ಪರಮೇಶ್ವರ್ (G.Parameshwar) ಅವರ ಹುಟ್ಟುಹಬ್ಬಕ್ಕೆ (Birthday) ಅಭಿಮಾನಿಗಳೊಬ್ಬರು ನಾಟಿ ಹಸುವಿನ  ಕರುವನ್ನು (Calf) ಉಡುಗೊರೆ (Gift) ನೀಡಿ ಗಮನ ಸೆಳೆದಿದ್ದಾರೆ.

    ಕೊರಟಗೆರೆ (Koratagere) ತಾಲೂಕಿನ ತೋವಿನಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಿರಿಜಮ್ಮ ರಾಮಕೃಷ್ಣ ದಂಪತಿ ಕರುವಿನ ಗಿಫ್ಟ್ ಕೊಟ್ಟಿದ್ದಾರೆ. ಕರು ಸ್ವೀಕರಿಸಿದ ಜಿ.ಪರಮೇಶ್ವರ್ ಪತ್ನಿ ಕನ್ನಿಕಾ, ಕರುವಿಗೆ ಹೂವಿನ ಹಾರ ಹಾಕಿ, ಧಾನ್ಯ ತಿನ್ನಿಸಿ, ಲಕ್ಷ್ಮಿ ಎಂದು ಸಂಬೋಧಿಸಿ ಮಂಗಳಾರತಿ ಬೆಳಗಿಸಿ ಪೂಜೆ ಮಾಡಿದ್ದಾರೆ. ಇದನ್ನೂ ಓದಿ: ಸೌಜನ್ಯ ಪ್ರಕರಣದ ರಹಸ್ಯಗಳನ್ನು ಬಿಚ್ಚಿಟ್ರೆ ನನ್ನನ್ನೂ ಸಾಯಿಸ್ಬೋದು: ವಸಂತ ಬಂಗೇರ

    ಪರಮೇಶ್ವರ್ ದಂಪತಿ ಗೋ ಪೂಜೆ ಮಾಡುವುದು ಇದೇ ಮೊದಲಲ್ಲ. ಕಳೆದ ಜನವರಿಯಲ್ಲಿ ಚಿಕ್ಕತೊಟ್ಟಲುಕೆರೆ ಮಠದಲ್ಲಿ ನಡೆದ ದನಗಳ ಜಾತ್ರೆಯಲ್ಲಿ ಗೋ ಪೂಜೆ ಮಾಡಿ ಗಮನ ಸೆಳೆದಿದ್ದರು. ರಾಜ್ಯ ಕಾಂಗ್ರೆಸ್ ಸರ್ಕಾರ ಗೋ ಹತ್ಯೆ ನಿಷೇಧ ಕಾನೂನು ರದ್ದು ಮಾಡಲು ಚಿಂತಿಸಿರುವ ಈ ವೇಳೆ ಪರಮೇಶ್ವರ್ ದಂಪತಿ ಗೋ ಪೂಜೆ ಮಾಡುವುದು ಚರ್ಚೆಗೆ ಕಾರಣವಾಗಿದೆ. ಇದನ್ನೂ ಓದಿ:ಸೊಂಟದ ನೋವು ಬಿಟ್ರೆ ಬೇರೆ ಏನೂ ಸಮಸ್ಯೆ ಆಗಿಲ್ಲ: ವೃಕ್ಷ ಮಾತೆಯ ಹೆಲ್ತ್ ಅಪ್ಡೇಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕರುವಿನ ಮೇಲೆ ಅತ್ಯಾಚಾರ- ವೃದ್ಧ ಪೊಲೀಸ್ ವಶಕ್ಕೆ

    ಕರುವಿನ ಮೇಲೆ ಅತ್ಯಾಚಾರ- ವೃದ್ಧ ಪೊಲೀಸ್ ವಶಕ್ಕೆ

    ಕೋಲಾರ: ಹಸುವಿನ ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ಯುವಕನೊಬ್ಬ ಪೊಲೀಸರ ವಶವಾದ ಘಟನೆ ಕೋಲಾರ (Kolar) ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಬಡಾವಣೆಯಲ್ಲಿ ನಡೆದಿದೆ.

    ಕರು ರಾಮರೆಡ್ಡಿ ಎಂಬವರಿಗೆ ಸೇರಿದ್ದಾಗಿದೆ. 50 ವರ್ಷದ ಶಫೀ ಉಲ್ಲಾ ಕರು (Rape On Calf) ವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ.

    ಶಫಿ ಈ ಹಿಂದೆಯೂ ಹಸುವಿನ ಮೇಲೆ ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದಿದ್ದನು. ಆ ಸಂದರ್ಭದಲ್ಲಿ ಗ್ರಾಮಸ್ಥರೇ ಬುದ್ಧಿ ಹೇಳಿ ಸುಮ್ಮನಾಗಿದ್ದರು. ಆದರೆ ಇದೀಗ ಆತ ಮತ್ತೆ ತನ್ನ ಹಳೆಯ ಚಾಳಿ ಮುಂದುವರಿಸಿದ್ದಾನೆ. ಇದನ್ನೂ ಓದಿ: ಫೇಸ್‍ಬುಕ್ ಸುಂದರಿಗಾಗಿ ಪತ್ನಿಗೆ ವಿಷವಿಟ್ಟ ಪತಿರಾಯ!

    ಅತ್ಯಾಚಾರಕ್ಕೆ ಒಳಗಾದ ಕರು ಅಸ್ವಸ್ಥಗೊಂಡಿದ್ದು, ಸ್ಥಳಕ್ಕೆ ಪಶು ವೈದ್ಯರು ಭೇಟಿ ನೀಡಿದ್ದಾರೆ. ಇತ್ತ ಬೇತಮಂಗಲ ಪೊಲೀಸರು ಅರೋಪಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಗೋಣಿ ಚೀಲಕ್ಕೆ ಹಾಕಿ ಸಾಗಿಸಲಾಗಿದ್ದ ಕರುಗಳಿಗೆ ಪೊಲೀಸ್ ಠಾಣೆಯಲ್ಲಿ ಹಾಲು ಕುಡಿಸಿ ಆರೈಕೆ

    ಗೋಣಿ ಚೀಲಕ್ಕೆ ಹಾಕಿ ಸಾಗಿಸಲಾಗಿದ್ದ ಕರುಗಳಿಗೆ ಪೊಲೀಸ್ ಠಾಣೆಯಲ್ಲಿ ಹಾಲು ಕುಡಿಸಿ ಆರೈಕೆ

    ಚಿಕ್ಕಬಳ್ಳಾಪುರ: ಅಮಾನವೀಯವಾಗಿ ದುಷ್ಕರ್ಮಿಗಳಿಂದ ಸಾಗಿಸಲಾಗಿದ್ದ ಕರುಗಳನ್ನು ರಕ್ಷಿಸಲಾಗಿದ್ದು, ಅವುಗಳಿಗೆ ಪೊಲೀಸ್ ಠಾಣಾ ಸಿಬ್ಬಂದಿ ಹಾಲು ಕುಡಿಸಿ ಆರೈಕೆ ಮಾಡಿರುವ ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಪೊಲೀಸ್ ಸಿಬ್ಬಂದಿಯ ಕಾಳಜಿಗೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

    ಶನಿವಾರ ಗೋಣಿ ಚೀಲದಲ್ಲಿ ತುಂಬಿದ 2 ಕರುಗಳನ್ನು ದ್ವಿಚಕ್ರ ವಾಹನದಲ್ಲಿ ದುಷ್ಕರ್ಮಿಗಳು ಅಮಾನವೀಯವಾಗಿ ಸಾಗಿಸುತ್ತಿದ್ದರು. ಅವುಗಳನ್ನು ಬಜರಂಗದಳದ ಕಾರ್ಯಕರ್ತರು ರಕ್ಷಿಸಿದ್ದರು. ಅಕ್ರಮ ಸಾಗಾಟದಲ್ಲಿ ರಕ್ಷಿಸಲಾಗಿದ್ದ ಕರುಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಸಿಬ್ಬಂದಿ ಹಾಲು ಕುಡಿಸಿ, ಆರೈಕೆ ಮಾಡಿದ್ದಾರೆ. ಇದನ್ನೂ ಓದಿ: ಮುನಿರತ್ನ, ಬೈರತಿ, ಗೋಪಾಲಯ್ಯ, ನಾಗೇಶ್ ಜನೋಪಯೋಗಿ ಮಂತ್ರಿಗಳು: ಬೊಮ್ಮಾಯಿ

    ದೊಡ್ಡಬಳ್ಳಾಪುರದ ಭುವನೇಶ್ವರಿ ನಗರ 4ನೇ ಕ್ರಾಸ್ ಬಳಿ, ಗೌಡಹಳ್ಳಿ ಮೂಲಕ ಸುಮಾರು 5 ದಿನದ 2 ಕರುಗಳನ್ನು ಗೋಣಿ ಚೀಲದಲ್ಲಿ ತುಂಬಿಕೊಂಡು ದುಷ್ಕರ್ಮಿಗಳು ಸಾಗಿಸುತ್ತಿದ್ದರು. ಇದನ್ನು ಕಂಡು ಅನುಮಾನಗೊಂಡ ಬಜರಂಗದಳದ ಕಾರ್ಯಕರ್ತರು ಹಾಗೂ ಸ್ಥಳೀಯರು ಬೈಕ್ ಅನ್ನು ತಡೆದು, ಚೀಲವನ್ನು ಬಿಚ್ಚಿದಾಗ ಕರುಗಳನ್ನು ಅಮಾನವೀಯವಾಗಿ ತುಂಬಿರುವುದು ಪತ್ತೆಯಾಗಿತ್ತು. ಇದನ್ನೂ ಓದಿ: ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅಮಾಯಕರಲ್ಲ: ಸಿ.ಟಿ. ರವಿ

    ಈ ಬಗ್ಗೆ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಬಂದ ಪೊಲೀಸರು, ಆರೋಪಿಗಳು ಹಾಗೂ ಕರುಗಳನ್ನು ವಶಕ್ಕೆ ಪಡೆದು ಠಾಣೆಗೆ ಕೊಂಡೊಯ್ದಿದ್ದರು. ಇದೀಗ 6 ದಿನದ ಕರುಗಳಿಗೆ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿ ಬಾಟಲ್ ಮೂಲಕ ಹಾಲು ಕುಡಿಸಿ, ಆರೈಕೆ ಮಾಡುತ್ತಿದ್ದಾರೆ. ಇದರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ನಾಯಿಯ ಹಾಲು ಕುಡಿದ ಕರು

    ನಾಯಿಯ ಹಾಲು ಕುಡಿದ ಕರು

    ತುಮಕೂರು: ನಾಯಿಯ ಮೊಲೆ ಹಾಲು ಇದ್ದರೇನು ಎಂದು ಹೀಗಳೆಯುವವರ ಮಾತಿಗೆ ಉತ್ತರ ಎನ್ನುವಂತೆ ನಾಯಿಯೇ ಕರುವಿಗೆ ಹಾಲು ಕುಡಿಸುವ ಅಪರೂಪದ ಸನ್ನಿವೇಶ ನೋಡಿದ್ದೀರಾ?

    ಹೌದು.. ಕರುವೊಂದು ನಾಯಿಯ ಕೆಚ್ಚಲಿಗೆ ಬಾಯಿಟ್ಟು ಹಾಲು ಕುಡಿದಿರುವ ಅಚ್ಚರಿಯ ಘಟನೆಯೊಂದು ತುಮಕೂರಿನಲ್ಲಿ ಕಂಡುಬಂದಿದೆ. ಇಲ್ಲಿನ ಕುಂದೂರಿನಲ್ಲಿ ಅಪರೂಪದ ಸನ್ನಿವೇಶ ಕಂಡುಬಂದಿದ್ದು ಗ್ರಾಮಸ್ಥರಲ್ಲೂ ಅಚ್ಚರಿ ಮೂಡಿಸಿದೆ. ಇದನ್ನೂ ಓದಿ: ಬಂಧಿತ ಐಎಎಸ್ ಅಧಿಕಾರಿ ಜೊತೆಗಿದ್ದ ಅಮಿತ್ ಶಾ ಫೋಟೊ ಶೇರ್ – ನಿರ್ದೇಶಕನ ವಿರುದ್ಧ ಪ್ರಕರಣ ದಾಖಲು

    DOG

    ಈ ನಾಯಿ ಹಾಗೂ ಕರು ಕುಂದೂರಿನ ಬಸವರಾಜ-ಗೀತಾ ದಂಪತಿಯ ಸಾಕು ಪ್ರಾಣಿಗಳು. ನಾಯಿಯ ಕೆಚ್ಚಲಿಗೆ ಕರು ಬಾಯಿಟ್ಟು ಹಾಲು ಕುಡಿಯುತ್ತಿದ್ದಂತೆ, ನಾಯಿ ಕರುವಿನ ಮೈ ಸವರಿ ತಾಯಿ ವಾತ್ಸಲ್ಯ ತೋರಿದೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಿಂದ ಮೆಚ್ಚುಗೆಯೂ ವ್ಯಕ್ತವಾಗುತ್ತಿದೆ.

  • ಮೂರು ಕಣ್ಣು, 4 ಮೂಗಿನ ರಂಧ್ರ ಹೊಂದಿರುವ ವಿಚಿತ್ರ ಕರು ಜನನ

    ಮೂರು ಕಣ್ಣು, 4 ಮೂಗಿನ ರಂಧ್ರ ಹೊಂದಿರುವ ವಿಚಿತ್ರ ಕರು ಜನನ

    ರಾಯ್ಪುರ: ಹಸುವೊಂದು ಮೂರು ಕಣ್ಣು ಮತ್ತು ನಾಲ್ಕು ಮೂಗಿನ ರಂಧ್ರ ಹೊಂದಿರುವ ವಿಚಿತ್ರ ಕರುವಿಗೆ ಜನ್ಮ ನೀಡಿರುವ ಘಟನೆ ಛತ್ತೀಸ್‌ಗಢದ ರಾಜನಂದಗಾಂವ್ ಜಿಲ್ಲೆಯಲ್ಲಿ ನಡೆದಿದೆ.

    ಸದ್ಯ ಮೂರು ಕಣ್ಣಿನ್ನು ಹೊಂದಿರುವ ಕರುವನ್ನು ನೋಡಲು ದೂರದ ಊರುಗಳಿಂದ ಜನ ಜಮಾಯಿಸುತ್ತಿದ್ದು, ಎಲ್ಲರೂ ಕರುವಿಗೆ ಹೂವಿನ ಮಾಲೆ ಹಾಕಿ, ಕಾಣಿಕೆ ರೂಪದಲ್ಲಿ ಹಣವನ್ನು ಅರ್ಪಿಸಿ ಮಹಾದೇವನ ರೂಪವೆಂದು ಪೂಜಿಸುತ್ತಿದ್ದಾರೆ. ಮತ್ತೊಂದೆಡೆ ಪಶು ವೈದ್ಯರು ಕರು ಸರಿಯಾಗಿ ಬೆಳವಣಿಗೆಯಾಗದ ಕಾರಣ ಹೀಗೆ ಜನಿಸಿದೆ ಎನ್ನುತ್ತಿದ್ದಾರೆ.  ಇದನ್ನೂ ಓದಿ: ದೇಶದಲ್ಲಿ ಒತ್ತಾಯದಿಂದ ಯಾರಿಗೂ Corona Vaccine ನೀಡಲ್ಲ: ಕೇಂದ್ರ ಸರ್ಕಾರ

    ಜನವರಿ 14 ರಂದು ಸಂಜೆ 7 ಗಂಟೆ ಸುಮಾರಿಗೆ ಹಸು ಕರುವಿಗೆ ಜನ್ಮ ನೀಡಿದ್ದು, ಅಂದು ಮಕರ ಸಂಕ್ರಾಂತಿ ಹಬ್ಬದವಾಗಿದ್ದರಿಂದ ಕರುವಿನ ಜನನದ ಮೇಲೆ ಎಲ್ಲರಿಗೂ ನಂಬಿಕೆ ಹೆಚ್ಚಾಗಿದೆ. 3 ಕಣ್ಣಿನ ಕರುವನ್ನು ನೋಡಲು ಜನ ಮುಗಿಬೀಳುತ್ತಿದ್ದು, ಗ್ರಾಮಸ್ಥರು ದೀಪ ಹಚ್ಚಿ, ತೆಂಗಿನಕಾಯಿ ಒಡೆದು ಕರು ಮಹಾದೇವನ ರೂಪ ತಾಳಿದೆ ಎಂದು ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.

    ರೈತ ಹೆಮಂತ್ ಚಂದೇಲ್ ಅವರು ಕೃಷಿ ಕೆಲಸದ ಜೊತೆಗೆ ಹಸು ಸಾಕಣೆಯಲ್ಲಿ ತೊಡಗಿಸಿಕೊಂಡಿದ್ದು, ಜರ್ಸಿ ಹಸುವನ್ನು ಸಾಕಿದ್ದಾರೆ. ಸಂಕ್ರಾತಿ ಹಬ್ಬದಂದು ಹಸು ಕರುವಿಗೆ ಜನ್ಮ ನೀಡಿದ್ದು, ಎರಡು ಕಣ್ಣುಗಳ ಮಧ್ಯೆ ಹಸುವಿನ ಹಣೆಯ ಮೇಲೆ ಮತ್ತೊಂದು ಕಣ್ಣಿದೆ. ವಿಶೇಷವೆಂದರೆ ಈ ಹಸು ಎರಡು ಮೂಗಿನ ರಂಧ್ರಗಳ ಬದಲಿಗೆ 4 ರಂಧ್ರಗಳನ್ನು ಹೊಂದಿದೆ ಹಾಗೂ ಅದರ ಬಾಲ ಜಡೆಯ ಮಾದರಿ ಇದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಪಕ್ಷದಿಂದ ಸಚಿವನ ಉಚ್ಛಾಟಿಸಿದ ಬಿಜೆಪಿ – ಮತ್ತೆ ‘ಕೈ’ ಹಿಡೀತಾರಾ ಹರಕ್ ಸಿಂಗ್ ರಾವತ್?

  • ಸಕ್ಕರೆಬೈಲು ಆನೆ ಬಿಡಾರದ ಮರಿ ಆನೆಗೆ ಅಪ್ಪು ಹೆಸರು ನಾಮಕರಣ

    ಸಕ್ಕರೆಬೈಲು ಆನೆ ಬಿಡಾರದ ಮರಿ ಆನೆಗೆ ಅಪ್ಪು ಹೆಸರು ನಾಮಕರಣ

    ಶಿವಮೊಗ್ಗ: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಕಾಲಿಕ ನಿಧನ ಕುಟುಂಸ್ಥರು ಸೇರಿದಂತೆ ಅಭಿಮಾನಿಗಳ ಮನಸ್ಸಿನಲ್ಲಿ ನೋವು ತರಿಸಿದೆ. ರಾಜ್ಯದ ಹಲವು ಕಡೆಗಳಲ್ಲಿ ಅಪ್ಪು ಮೇಲಿನ ಅಭಿಮಾನದಿಂದ ಅಭಿಮಾನಿಗಳು ತಮ್ಮ ಗ್ರಾಮದ ರಸ್ತೆಗೆ, ವೃತ್ತಕ್ಕೆ ಪುನೀತ್ ರಾಜ್‍ಕುಮಾರ್ ಹೆಸರು ನಾಮಕರಣ ಮಾಡುತ್ತಿದ್ದಾರೆ. ಅದೇ ರೀತಿ ಶಿವಮೊಗ್ಗದ ಸಕ್ಕರೆಬೈಲು ಆನೆ ಬಿಡಾರದ ಮರಿಯಾನೆಗೆ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಎಂಬ ಹೆಸರು ನಾಮಕರಣ ಮಾಡಲಾಗಿದೆ.

    ಕಳೆದ ಎರಡು ತಿಂಗಳ ಹಿಂದೆಯಷ್ಟೇ, ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಶಿವಮೊಗ್ಗದ ಸಕ್ಕರೆಬೈಲು ಆನೆ ಬಿಡಾರಕ್ಕೆ ಭೇಟಿ ನೀಡಿದ್ದರು. ವನ್ಯಜೀವಿ ರಕ್ಷಣೆಗೋಸ್ಕರ ಮತ್ತು ಅರಣ್ಯ ಸಂರಕ್ಷಣೆ ಕುರಿತ ಸಾಕ್ಷ್ಯ ಚಿತ್ರ ಚಿತ್ರೀಕರಣಕ್ಕಾಗಿ ಆಗಮಿಸಿದ್ದರು. ಈ ವೇಳೆ ಬಿಡಾರದಲ್ಲಿದ್ದ ಮರಿಯಾನೆಗೆ ಅಪ್ಪಿ ಮುದ್ದಾಡಿದ್ದರು. ಈ ಮರಿ ಗಜಕ್ಕೆ ಪವರ್ ಸ್ಟಾರ್ ಹೆಸರು ಇಡಬೇಕು ಎಂಬುದು ಮಾವುತರು, ಕಾವಾಡಿಗಳು, ಪ್ರವಾಸಿಗರ ಆಸೆಯಾಗಿದೆ. ಹೀಗಾಗಿಯೇ ಅರಣ್ಯಾಧಿಕಾರಿಗಳು ಸಕ್ಕರೆಬೈಲು ಆನೆ ಬಿಡಾರದ ಮರಿಯಾನೆಗೆ ಪುನೀತ್ ರಾಜ್‍ಕುಮಾರ್ ಹೆಸರು ನಾಮಕರಣ ಮಾಡಿದ್ದಾರೆ.

    ಆನೆ ಬಿಡಾರದ ನೇತ್ರ ಆನೆ ಜನ್ಮವಿತ್ತ ಗಂಡು ಮರಿಯಾನೆ ಇದಾಗಿದ್ದು, ನೇತ್ರ ಎಂಬ ಹೆಣ್ಣಾನೆ ಮತ್ತು ಅದರ ಮರಿಯಾನೆಯನ್ನು ಕ್ರಾಲ್‍ನಲ್ಲಿ ಕಂಡಿದ್ದ ಪುನೀತ್ ತಾಯಿ ಮಗುವಿನ ಬಗ್ಗೆ ಮಾವುತರಿಂದ, ವನ್ಯಜೀವಿ ವೈದ್ಯರಿಂದ ಮಾಹಿತಿ ಪಡೆದಿದ್ದರು. ಈ ವೇಳೆ ಕೆಲ ಸಮಯ ಈ ಗಜ ರಾಜಕುಮಾರನ ಬಳಿ ಆಟವಾಡಿ, ಮುದ್ದಾಡಿದ್ದರು.

    ವೀನಿಂಗ್ ಎಂದರೆ, ಮರಿಯಾನೆಗಳಿಗೆ ಹುಟ್ಟಿದ ಕೂಡಲೇ ನಾಮಕರಣ ಮಾಡುವುದಿಲ್ಲ. ಬದಲಾಗಿ ಮರಿಯಾನೆಯನ್ನು ಅದರ ತಾಯಿಯಾನೆಯಿಂದ ಬೇರ್ಪಡಿಸುವ ಪ್ರಕ್ರಿಯೆ ನಡೆಸಿ, ಅದನ್ನು ಪ್ರತ್ಯೇಕವಾಗಿ ಇರಿಸಿದ ಬಳಿಕ ಮರಿಯಾನೆಗೆ ನಾಮಕರಣ ಮಾಡಲಾಗುತ್ತದೆ. ಈ ಪ್ರಕ್ರಿಯೆಯನ್ನ ವೀನಿಂಗ್ ಎಂದು ಕರೆಯುತ್ತಾರೆ. ಇದನ್ನೂ ಓದಿ:  ಪತ್ನಿಗಾಗಿ ಅಪ್ಪು ಹೇಳುತ್ತಿದ್ದ ಹಾಡು ಯಾವುದು ಗೊತ್ತಾ?

    ಇದೀಗ ಸಕ್ಕರೆಬೈಲು ಆನೆ ಬಿಡಾರದಲ್ಲಿ ನೇತ್ರ ಮತ್ತು ಮರಿಯಾನೆಯನ್ನು ಒತ್ತಾಯಪೂರ್ವಕವಾಗಿ ಬೇರ್ಪಡಿಸುವ ವೀನಿಂಗ್ ಕಾರ್ಯವನ್ನು ಇಂದು ಅರಣ್ಯ ಇಲಾಖೆ ಮಾಡಿದ್ದು, ತಾಯಿಯಿಂದ ಬೇರ್ಪಡುವ ಮರಿಯಾನೆಗೆ ಪುನೀತ್ ರಾಜ್ ಕುಮಾರ್ ಎಂದು ಹೆಸರಿಡಲಾಗಿದೆ. ಈ ಮೂಲಕ ಅರಣ್ಯ ಇಲಾಖೆ ಅಧಿಕಾರಿಗಳು, ಅಕಾಲಿಕವಾಗಿ ನಮ್ಮನ್ನೆಲ್ಲಾ ಅಗಲಿದ ಪವರ್ ಸ್ಟಾರ್‍ಗೆ ಗೌರವ ಸೂಚಿಸಿದೆ. ಇದನ್ನೂ ಓದಿ: ಡೆಸರ್ಟ್ ಸಫಾರಿ ಬಳಿಕ ಬಿಕಿನಿಯಲ್ಲಿ ಜಾನ್ವಿ, ಖುಷಿ ಕಪೂರ್ ಮೋಜು, ಮಸ್ತಿ

    ಸಾಮಾನ್ಯವಾಗಿ ಸಕ್ಕರೆಬೈಲು ಆನೆ ಬಿಡಾರದಲ್ಲಿ ಜನಿಸುವ ಮರಿಯಾನೆಗಳಿಗೆ, ನೆಚ್ಚಿನ ಅರಣ್ಯಾಧಿಕಾರಿಗಳದ್ದೋ, ಅಥವಾ ದೇವರ ಹೆಸರು ಇಡುವುದು ಸಾಮಾನ್ಯ. ಆದರೆ ಇದೇ ಪ್ರಥಮವಾಗಿ ನಟನೊಬ್ಬರ ಅದರಲ್ಲೂ, ಎಲ್ಲರಿಗೂ ಪ್ರೀತಿ ಪಾತ್ರರಾಗಿರುವ ಪವರ್ ಸ್ಟಾರ್ ಪುನೀತ್ ಹೆಸರು ನಾಮಕರಣ ಮಾಡಲಾಗಿದ್ದು, ಇನ್ಮುಂದೆ ಬಿಡಾರಕ್ಕೆ ಬರುವ ಪ್ರವಾಸಿಗರು, ಈ ಗಜನಿಗೆ ಪುನೀತ್ ಅಥವಾ ಅಪ್ಪು ಎಂದು ಕೂಗಿ ಕರೆಯಬಹುದಾಗಿದೆ.

  • 2 ತಲೆ, 3 ಕಣ್ಣು ಇರುವ ಕರು ಜನನ – ಪೂಜಿಸಿದ ಗ್ರಾಮಸ್ಥರು

    2 ತಲೆ, 3 ಕಣ್ಣು ಇರುವ ಕರು ಜನನ – ಪೂಜಿಸಿದ ಗ್ರಾಮಸ್ಥರು

    ಭುವನೇಶ್ವರ: 2 ತಲೆ, ಮೂರು ಕಣ್ಣು ಇರುವ ಕರುವೊಂದು ಜನನವಾಗಿದೆ. ನವರಾತ್ರಿ ಸದಂರ್ಭದಲ್ಲಿಯೇ ಇಂಥಹ ವಿಚಿತ್ರ ಕರುವೊಂದು ಜನಿಸಿದ್ದರಿಂದ ದುರ್ಗಾದೇವಿಯ ಅವತಾರ ಎಂದು ಜನರು ಪೂಜೆ ಮಾಡಿರುವ ಘಟನೆ ಒರಿಸ್ಸಾದ ನಬ್ರಂಗ್​ಪುರದಲ್ಲಿ ನಡೆದಿದೆ.

    ನಬ್ರಂಗ್‍ಪುರದ ಧನಿರಾಂ ಅವರ ಕೊಟ್ಟಿಗೆಯಲ್ಲಿರುವ ಹಸುವಿಗೆ ಈ ಅಪರೂಪವಾದ, ವಿಶೇಷವಾದ ಕರು ಜನಿಸಿದೆ. ಈ ಕರುಗೆ ಎರಡು ತಲೆ, ಮೂರು ಕಣ್ಣುಗಳಿವೆ. ಹೀಗೆ ವಿಶೇಷವಾಗಿ ಜನಿಸಿದ ಈ ಕರುವನ್ನು ನೋಡಿದ ಹಸುವಿನ ಮಾಲೀಕ ಕೂಡ ಅಚ್ಚರಿ ಪಟ್ಟಿದ್ದಾರೆ. ಬಳಿಕ ಈ ವಿಷಯವನ್ನು ಊರಿನವರಿಗೆ ತಿಳಿಸಿದ್ದಾರೆ. ಕರು ಆರೋಗ್ಯದಿಂದಿದ್ದು, ದುರ್ಗಾ ಮಾತೆಯ ಪ್ರತಿರೂಪ ಎಂದು ಪೂಜೆ ಮಾಡಿದ್ದಾರೆ. ಇದನ್ನೂ ಓದಿ:  ಬೆಂಗ್ಳೂರಿನ ಕಮಲಾನಗರದಲ್ಲಿ ಕಟ್ಟಡ ಕುಸಿಯೋ ಭೀತಿ!

    ಎರಡು ವರ್ಷಗಳ ಹಿಂದೆ ಧನಿರಾಂ ಈ ಹಸುವನ್ನು ಖರೀದಿಸಿದ್ದರು. ಈ ಹಸು ಇತ್ತೀಚೆಗೆ ಗರ್ಭ ಧರಿಸಿತ್ತು. ನವರಾತ್ರಿಯ ದಿನವೇ ಹಸು ಹೆಣ್ಣು ಕರುವಿಗೆ ಜನ್ಮ ನೀಡಿದ್ದು, ಹೀಗೆ ವಿಶೇಷವಾಗಿರುವ ಈ ಕರು ಎಲ್ಲರ ಗಮನ ಸೆಳೆಯುತ್ತಿದೆ. ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಬಹುಮಹಡಿ ಕಟ್ಟಡ ಕುಸಿತ- ತಪ್ಪಿದ ಭಾರೀ ಅನಾಹುತ

    ಮುಕ್ಕಣ್ಣನಂತಿರುವ ಈ ಕರುವಿಗೆ ಎರಡು ತಲೆಗಳಿರುವುದರಿಂದ ಹಾಲು ಕುಡಿಯಲು ಕಷ್ಟವಾಗುತ್ತಿದೆ. ಹಸುವಿನ ಕೆಚ್ಚಲಿನಿಂದ ಕರುವಿಗೆ ಹಾಲು ಕುಡಿಯುವುದು ಕಷ್ಟವಾದ್ದರಿಂದ ಹೊರಗಿನಿಂದ ಪ್ಯಾಕೆಟ್ ಹಾಲನ್ನು ಖರೀದಿಸಿ ನೀಡಲಾಗುತ್ತಿದೆ. ಈ ಕರುವಿನ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

  • 100 ಕರುಗಳನ್ನು ಸಾಗಿಸ್ತಿದ್ದ ವಾಹನ ಪಲ್ಟಿ – 50 ಕರುಗಳು ಸಾವು, 50 ಕರುಗಳ ರಕ್ಷಣೆ

    100 ಕರುಗಳನ್ನು ಸಾಗಿಸ್ತಿದ್ದ ವಾಹನ ಪಲ್ಟಿ – 50 ಕರುಗಳು ಸಾವು, 50 ಕರುಗಳ ರಕ್ಷಣೆ

    ಹಾಸನ: ಬಾಯಿ, ಕಾಲಿಗೆ ಹಗ್ಗ ಕಟ್ಟಿ ಪುಟ್ಟ ಗೂಡ್ಸ್ ವಾಹನದಲ್ಲಿ 100 ಕರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಅಪಘಾತವಾಗಿ 50 ಮೂಕ ಪ್ರಾಣಿಗಳು ಬಲಿಯಾಗಿರುವ ಘಟನೆ ಜಿಲ್ಲೆಯ ಬೇಲೂರು ತಾಲೂಕಿನ, ದ್ಯಾವಪ್ಪನಹಳ್ಳಿ ಗ್ರಾಮದ ಬಳಿ ರಾತ್ರಿ ನಡೆದಿದೆ.

    ಹಾಸನದಲ್ಲಿ 38 ಮಂಗಗಳ ಮಾರಣಹೋಮ ಮಾಸುವ ಮುನ್ನವೇ ಮತ್ತೊಂದು ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಪುಟ್ಟ ಗೂಡ್ಸ್ ವಾಹನದಲ್ಲಿ 100 ಕರುಗಳ ಸಾಗಿಸಲಾಗುತ್ತಿತ್ತು. ಗೋಹತ್ಯೆ ನಿಷೇಧ ಇರುವುದರಿಂದ ದುಷ್ಟರು ರಾತ್ರೋ ರಾತ್ರಿ ಗೋವುಗಳನ್ನು ಸಾಗಿಸುತ್ತಿದ್ದರು. ಬಾಯಿ, ಕಾಲಿಗೆ ಹಗ್ಗ ಕಟ್ಟಿ ಅಮಾನವೀಯವಾಗಿ ಮೂಕ ಪ್ರಾಣಿಗಳ ಸಾಗಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಸಿಎಂ ಅಲ್ಲ, ಕೈಗೆ ಸಿಗದ ದ್ರಾಕ್ಷಿ ಹುಳಿ ಅಂತಿದ್ದಾರೆ: ಶೋಭಾ ಕರಂದ್ಲಾಜೆ

    ಗೂಡ್ಸ್ ಆಟೋದಲ್ಲಿ ಉಸಿರುಗಟ್ಟಿ ಹಲವು ಕರುಗಳ ಸಾವನ್ನಪ್ಪಿದ್ದು, ಅಪಘಾತದ ಬಳಿಕ ಮತ್ತಷ್ಟು ಕರುಗಳು ಬಲಿಯಾಗಿವೆ. ಒಟ್ಟು 50ಕ್ಕೂ ಹೆಚ್ಚು ಕರುಗಳ ಸಾವನ್ನಪ್ಪಿದ್ದು, ಉಳಿದ 50 ಕರುಗಳನ್ನು ರಕ್ಷಣೆ ಮಾಡಲಾಗಿದೆ. ಶಾಸಕ ಕೆ.ಎಸ್.ಲಿಂಗೇಶ್ ಸ್ವತಃ ಸ್ಥಳಕ್ಕೆ ಹೋಗಿ ಕರುಗಳ ರಕ್ಷಣೆ ಮಾಡಿದ್ದಾರೆ. ಘಟನೆ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

    ಜುಲೈ 28 ರಂದು 38 ಮಂಗಗಳ ಮಾರಣಹೋಮ ನಡೆದಿತ್ತು. ಘಟನೆ ಬಗ್ಗೆ ಸ್ವಯಂ ಪ್ರೇರಿತ ದೂರು ದಾಖಲಿಸಿ, ಹೈಕೋರ್ಟ್ ತನಿಖೆ ನಡೆಸುತ್ತಿದೆ. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪೊಲೀಸರು ಹಾಗೂ ತಾಲೂಕು ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಿಂದ ಸ್ವತಃ ವಿಡಿಯೋ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ಬೇಲೂರು ಶಾಸಕ ಲಿಂಗೇಶ್ ಸಹ ಆಗ್ರಹಿಸಿದ್ದಾರೆ.

  • ಭಾರೀ ಮಳೆ- ಜಮೀನಿನ ಕೊಟ್ಟಿಗೆಯಲ್ಲಿ ಸಿಲುಕಿದ್ದ ಆಕಳು, ಕರು ರಕ್ಷಣೆ

    ಭಾರೀ ಮಳೆ- ಜಮೀನಿನ ಕೊಟ್ಟಿಗೆಯಲ್ಲಿ ಸಿಲುಕಿದ್ದ ಆಕಳು, ಕರು ರಕ್ಷಣೆ

    ಹಾವೇರಿ: ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ನಿರಂತರ ಮಳೆಯಿಂದಾಗಿ ಧರ್ಮಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಪ್ರವಾಹ ಉಂಟಾಗಿ ಜಮೀನಿನ ಕೊಟ್ಟಿಗೆಯಲ್ಲಿ ಸಿಲುಕಿದ್ದ ಒಂದು ಆಕಳು ಮತ್ತು ಕರುವನ್ನು ರಕ್ಷಣೆ ಮಾಡಿದ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಹಿರೂರು ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ರೈತ ಸಿರಾಜ್ ಹಳೆಕೋಟಿ ಅವರಿಗೆ ಸೇರಿದ ಆಕಳು ಮತ್ತು ಕರುವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ನೀರಿನಲ್ಲಿ ಬೋಟ್ ಮೂಲಕ ತೆರಳಿ ರಕ್ಷಣೆ ಮಾಡಿದ್ದಾರೆ. ನೀರಿನಿಂದ ಹೊರಬಂದ ತಕ್ಷಣ ಆಕಳು ಮತ್ತು ಕರು ಮನೆಯತ್ತ ಓಡಿದವು.

    ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಅಲ್ಲಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.