Tag: california

  • ಅಮೆರಿಕ ಪೊಲೀಸರ ಗುಂಡೇಟಿಗೆ ಭಾರತೀಯ ಟೆಕ್ಕಿ ಬಲಿ

    ಅಮೆರಿಕ ಪೊಲೀಸರ ಗುಂಡೇಟಿಗೆ ಭಾರತೀಯ ಟೆಕ್ಕಿ ಬಲಿ

    ವಾಷಿಂಗ್ಟನ್‌: ಅಮೆರಿಕ ಪೊಲೀಸರು ಭಾರತೀಯ ಮೂಲದ ಟೆಕ್ಕಿಯೋರ್ವನನ್ನು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಕ್ಯಾಲಿಫೋರ್ನಿಯಾದ (California) ಸಾಂತಾ ಕ್ಲಾರಾದಲ್ಲಿ (Santa Clara) ನಡೆದಿದೆ.

    ಮೃತ ಭಾರತೀಯ ಮೂಲದ ಟೆಕ್ಕಿಯನ್ನು ತೆಲಂಗಾಣದ ಮೆಹಬೂಬ್‌ನಗರದ ಮೊಹಮ್ಮದ್ ನಿಜಾಮುದ್ದೀನ್ ಎಂದು ಗುರುತಿಸಲಾಗಿದೆ. 2016ರ ಬಳಿಕ ತಮ್ಮ ಉನ್ನತ ಶಿಕ್ಷಣಕ್ಕಾಗಿ ಯುಎಸ್‌ಗೆ ತೆರಳಿದ್ದರು. ಫ್ಲೋರಿಡಾ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಡಿಗ್ರಿ ಮುಗಿಸಿ, ಬಳಿಕ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದರು.ಇದನ್ನೂ ಓದಿ: iPhone 17 ಖರೀದಿಗೆ ನೂಕುನುಗ್ಗಲು – ಆ್ಯಪಲ್‌ ಸ್ಟೋರ್‌ ಮುಂದೆ ಹೊಡೆದಾಡಿಕೊಂಡ ಗ್ರಾಹಕರು

    ಸಾಂತಾ ಕ್ಲಾರಾ ಪೊಲೀಸರ ಮಾಹಿತಿ ಪ್ರಕಾರ, ಸೆ.3ರಂದು ಬೆಳಗ್ಗೆ 6:30ರ ಸುಮಾರಿಗೆ 911 ಸಂಖ್ಯೆಗೆ ಕರೆಯೊಂದು ಬಂದಿತ್ತು. ಸಾಂತಾ ಕ್ಲಾರಾದ ನಿವಾಸವೊಂದರಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಹತ್ಯೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿದರು. ಈ ವೇಳೆ ಮೃತ ನಿಜಾಮುದ್ದೀನ್ ಚಾಕು ಹಿಡಿದು ಆತನ ರೂಮ್‌ಮೇಟ್‌ಗೆ ಬೆದರಿಕೆ ಹಾಕುತ್ತಿದ್ದ. ಇದನ್ನು ಗಮನಿಸಿದ ಪೊಲೀಸರು ಗುಂಡಿನ ದಾಳಿ ನಡೆಸಿದರು. ಕೂಡಲೇ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಇನ್ನೂ ಮೃತನ ರೂಮ್‌ಮೇಟ್‌ಗೆ ಚಿಕ್ಕಪುಟ್ಟ ಗಾಯಗಳಾಗಿವೆ. ಸದ್ಯ ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

    ನಿಜಾಮುದ್ದೀನ್ ಸಾವನ್ನಪ್ಪಿದ ಎರಡು ವಾರಗಳ ಬಳಿಕ ಆತನ ಕುಟುಂಬಸ್ಥರಿಗೆ ಮಾಹಿತಿ ತಿಳಿದಿದ್ದು, ನಾನು ನನ್ನ ಮಗನಿಗೆ ಕರೆ ಮಾಡಿದೆ. ಆದರೆ ಮೊಬೈಲ್ ಸ್ವಿಚ್ಢ್ ಆಫ್ ಬಂತು. ಬಳಿಕ ಆತನ ಸ್ನೇಹಿತ ನಿಜಾಮುದ್ದೀನ್ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾನೆ ಎಂದು ಮೃತನ ಪೋಷಕರು ಅಳಲು ತೋಡಿಕೊಂಡಿದ್ದಾರೆ.

    ಈ ಕುರಿತು ನಿಜಾಮುದ್ದೀನ್ ಸ್ನೇಹಿತರು ಮಾಹಿತಿ ನೀಡಿದ್ದು, ನಿಜಾಮುದ್ದೀನ್‌ಗೆ ಆತನ ಕಂಪನಿಯಲ್ಲಿ ಕಿರುಕುಳ ನೀಡುತ್ತಿದ್ದರು. ಅಲ್ಲದೇ ಕಳೆದ 6 ತಿಂಗಳ ಹಿಂದೆಯೇ ನಿಜಾಮುದ್ದೀನ್‌ ಅನ್ನು ಕೆಲಸದಿಂದ ತೆಗೆದಿದ್ದರು. ಜೊತೆಗೆ ಆತನ ಓರ್ವ ರೂಮ್‌ಮೇಟ್‌ ಕೂಡ ತುಂಬಾ ಪೀಡಿಸುತ್ತಿದ್ದ ಎಂದು ಹೇಳಿಕೊಂಡಿದ್ದಾರೆ.

    ಸದ್ಯ ನಿಜಾಮುದ್ದೀನ್ ಮೃತದೇಹವನ್ನು ಭಾರತಕ್ಕೆ ತರಲು ಸಹಾಯ ಕೋರಿ ಸಾಮಾಜಿಕ ಕಾರ್ಯಕರ್ತ ಮತ್ತು ಮಜ್ಲಿಸ್ ಬಚಾವೋ ತೆಹ್ರೀಕ್ ಮುಖ್ಯಸ್ಥರು ಅಮ್ಜೇದ್ ಉಲ್ಲಾ ಖಾನ್ ಅವರು ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರಿಗೆ ಪತ್ರ ಬರೆದಿದ್ದಾರೆ.ಇದನ್ನೂ ಓದಿ: 15 ತಿಂಗಳ ಗೃಹಲಕ್ಷ್ಮಿ ಹಣ ಕೂಡಿಟ್ಟು ಸಿಎಂ ಭಾವಚಿತ್ರದ ಬಾಗಿಲು ಕೆತ್ತಿಸಿದ ಮಹಿಳೆ

  • ಇಲ್ಲಿ ಮೂತ್ರ ವಿಸರ್ಜಿಸ್ಬೇಡ ಎಂದಿದ್ದೆ ತಪ್ಪಾಯ್ತಾ? – ಅಮೆರಿಕದಲ್ಲಿ ಹರಿಯಾಣದ ಯುವಕನ ಗುಂಡಿಕ್ಕಿ ಹತ್ಯೆ

    ಇಲ್ಲಿ ಮೂತ್ರ ವಿಸರ್ಜಿಸ್ಬೇಡ ಎಂದಿದ್ದೆ ತಪ್ಪಾಯ್ತಾ? – ಅಮೆರಿಕದಲ್ಲಿ ಹರಿಯಾಣದ ಯುವಕನ ಗುಂಡಿಕ್ಕಿ ಹತ್ಯೆ

    ವಾಷಿಂಗ್ಟನ್: ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜಿಸದಂತೆ ಹೇಳಿದ್ದಕ್ಕೆ ಹರಿಯಾಣದ (Haryana) ಯುವಕನನ್ನು ಗುಂಡಿಕ್ಕಿ ಕೊಲೆ ಮಾಡಿದ ಘಟನೆ ಅಮೆರಿಕದ (America) ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ.

    ಹರಿಯಾಣದ ಜಿಂದ್ ಜಿಲ್ಲೆಯ ಬರಾಹ್ ಕಲಾ ಗ್ರಾಮದ ಕಪಿಲ್ (26) ಹತ್ಯೆಯಾದ ಯುವಕ. ಕಪಿಲ್ ಮೂರು ವರ್ಷದ ಹಿಂದೆಯೇ ಕೆಲಸದ ನಿಮಿತ್ತ ಅಮೆರಿಕಕ್ಕೆ ತೆರಳಿದ್ದರು. ಇದನ್ನೂ ಓದಿ: ಹರಿಯಾಣ | ಎಸಿ ಸ್ಫೋಟ – ಒಂದೇ ಕುಟುಂಬದ ಮೂವರ ದುರ್ಮರಣ, ಮತ್ತೊಬ್ಬನ ಸ್ಥಿತಿ ಗಂಭೀರ

     ಕಪಿಲ್ ಕೆಲಸ ಮಾಡುತ್ತಿದ್ದ ಸ್ಟೋರ್‌ನ ಹೊರಗಡೆ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡುತ್ತಿದ್ದ. ಇದನ್ನು ಗಮನಿಸಿದ ಕಪಿಲ್ ಆತನ ಬಳಿ, ಸಾರ್ವಜನಿಕ ಸ್ಥಳವಾದ ಇಲ್ಲಿ ಮೂತ್ರ ವಿಸರ್ಜಿಸಬೇಡ ಎಂದಿದ್ದರು. ಈ ವೇಳೆ ಕೋಪಗೊಂಡ ವ್ಯಕ್ತಿ ಕಪಿಲ್‌ನ ಮೇಲೆ ಗುಂಡಿನ ದಾಳಿ ನಡೆಸಿದ್ದ. ಇದನ್ನೂ ಓದಿ: ಬೈಕ್‌ ಅಪಘಾತ – ರಸ್ತೆಗೆ ಬಿದ್ದ ಯುವತಿ ಮೇಲೆ ಹರಿದ ಬಸ್‌; 15 ದಿನದಲ್ಲಿ ಹಸೆಮಣೆ ಏರಬೇಕಾಗಿದ್ದವಳ ದುರಂತ ಅಂತ್ಯ

    ತಕ್ಷಣವೇ ಅಲ್ಲಿದ್ದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ, ಕಪಿಲ್‌ನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕಪಿಲ್ ಮೃತಪಟ್ಟಿದ್ದಾರೆ.

     ಕುಟುಂಬಕ್ಕೆ ಆಧಾರವಾಗಿದ್ದ ಮಗನನ್ನು ಕಳೆದುಕೊಂಡ ತಂದೆ, ತಾಯಿ ಕಣ್ಣೀರಿಟ್ಟಿದ್ದಾರೆ. ಕಪಿಲ್ ಬಡ ಕುಟುಂಬದಲ್ಲಿ ಜನಿಸಿದ್ದ. ಕಪಿಲ್‌ನನ್ನು ಸಾಲ ಮಾಡಿ ಅಮೆರಿಕಕ್ಕೆ ಕಳುಹಿಸಿದರು. ಇದೀಗ ಮಗನ ಸಾವಿನ ಸುದ್ದಿ ಕುಟುಂಬಕ್ಕೆ ಬರ ಸಿಡಿಲು ಬಡಿದಂತಾಗಿದೆ.

  • ನಗುಮುಖದಲ್ಲಿ ಕ್ಯಾಪ್ಸುಲ್‌ನಿಂದ ಹೊರಬಂದು ಕೈಬೀಸಿದ ಶುಭಾಂಶು ಶುಕ್ಲಾ

    ನಗುಮುಖದಲ್ಲಿ ಕ್ಯಾಪ್ಸುಲ್‌ನಿಂದ ಹೊರಬಂದು ಕೈಬೀಸಿದ ಶುಭಾಂಶು ಶುಕ್ಲಾ

    ಕ್ಯಾಲಿಫೋರ್ನಿಯಾ: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು (ISS) ಯಶಸ್ವಿಯಾಗಿ ತಲುಪಿ ಇತಿಹಾಸ ಸೃಷ್ಟಿಸಿರುವ ಭಾರತೀಯ ಗಗನಯಾತ್ರಿ, ಐಎಎಫ್ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ (Shubanshu Shukla) ಸೇರಿ ನಾಲ್ವರು ಗಗನಯಾತ್ರಿಗಳು ಭೂಮಿಗೆ ವಾಪಸ್ ಆಗಿದ್ದಾರೆ. ನಗುಮುಖದಲ್ಲಿ ಕ್ಯಾಪ್ಸುಲ್‌ನಿಂದ ಹೊರಬಂದು ಶುಭಾಂಶು ಶುಕ್ಲಾ ಕೈಬೀಸಿದರು.

    ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 3ಕ್ಕೆ ಕ್ಯಾಲಿಫೋರ್ನಿಯಾ (California) ಕರಾವಳಿಯಲ್ಲಿ ಯಶಸ್ವಿಯಾಗಿ ಸ್ಪ್ಯಾಷ್‌ ಡೌನ್ ಮಾಡಲಾಯಿತು. ಬಳಿಕ ಕ್ಯಾಪ್ಸುಲ್‌ ಸುರಕ್ಷಿತವಾಗಿದೆಯೇ ಎಂದು ಪರಿಶೀಲಿಸಿದ ಬಳಿಕ ಕೆಳಗಡೆ ಇರುವ ಬಾಗಿಲು(ಹ್ಯಾಚ್) ತೆರೆಯಲಾಯಿತು. ಈ ಬಾಗಿಲಿನ ಮೂಲಕ ಯಾನಿಗಳನ್ನು ಸ್ಪೇಸ್ ಎಕ್ಸ್ ಸಿಬ್ಬಂದಿ ಹೊರಗೆ ನಿಧಾನವಾಗಿ ಎಳೆದು ಕೈಹಿಡಿದು ಕರೆದುಕೊಂಡು ಹೋದರು. ಈ ವೇಳೆ ಎರಡನೇಯದಾಗಿ ಹೊರಬಂದ ಶುಭಾಂಶು ಶುಕ್ಲಾ ನಗುಮುಖದಿಂದ ಕೈಬೀಸಿ ಸಂತೋಷ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಭುವಿಗೆ ಶುಭಾಂಶು ಶುಕ್ಲಾ – ಕ್ಯಾಲಿಫೋರ್ನಿಯಾ ಕಡಲ ತೀರದಲ್ಲಿ ಸ್ಪ್ಲ್ಯಾಷ್‌ ಡೌನ್

    ಕ್ಯಾಪ್ಸುಲ್‌ನಿಂದ ಹೊರಬಂದ ಬಳಿಕ ವೈದ್ಯಕೀಯ ತಪಾಸಣೆ ಮಾಡಿ ಕ್ವಾರಂಟೈನ್ ಮಾಡಲಾಗುತ್ತದೆ. ಸಾಮಾನ್ಯವಾಗಿ ಗಗನಯಾತ್ರಿಗಳಿಗೆ ಭೂಮಿಯ ಗುರುತ್ವಾಕರ್ಷಣೆಗೆ ಹೊಂದಿಕೊಳ್ಳಲು 7 ದಿನಗಳ ವಿಶ್ರಾಂತಿಯ ಅವಶ್ಯಕತೆಯಿರುತ್ತದೆ. ಇನ್ನೂ ಯಶಸ್ವಿ ಲ್ಯಾಂಡಿಂಗ್ ಬಳಿಕ ಶುಭಾಂಶು ಶುಕ್ಲಾ ಕುಟುಂಬಸ್ಥರು ಸಂಭ್ರಮಿಸಿದ್ದಾರೆ.

    ಪ್ರಕ್ರಿಯೆ ಹೇಗಿತ್ತು?
    ಸೋಮವಾರ (ಜು.14) ಭಾರತೀಯ ಕಾಲಮಾನ ಮಧ್ಯಾಹ್ನ 2:30ಕ್ಕೆ ಡ್ರ್ಯಾಗನ್‌ ಕ್ಯಾಪ್ಸುಲ್ ಪ್ರವೇಶಿಸಿ, ಸಂಜೆ 4:35ಕ್ಕೆ ಅನ್‌ಡಾಕಿಂಗ್ (ಬೇರ್ಪಡಿಸುವಿಕೆ) ಪ್ರಕ್ರಿಯೆ ಯಶಸ್ವಿಯಾಗಿತ್ತು. ಒಟ್ಟು 22.5 ಗಂಟೆಗಳ ಪ್ರಯಾಣ ಬಳಿಕ ಇಂದು ಮಧ್ಯಾಹ್ನ 3ಕ್ಕೆ ಪೆಸಿಫಿಕ್ ಮಹಾಸಾಗರದ ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ 4 ಪ್ಯಾರಾಚೂಟ್‌ಗಳು ಕ್ಯಾಪ್ಸುಲ್ ವೇಗವನ್ನು ತಗ್ಗಿಸಿತ್ತು. ಯಶಸ್ವಿ ಸ್ಪ್ಯಾಷ್‌ ಡೌನ್ ಬಳಿಕ ಸುರಕ್ಷಿತವಾಗಿ ಶುಭಾಂಶು ಶುಕ್ಲಾ ಹಾಗೂ ಇನ್ನುಳಿದ ಮೂವರು ಗಗನಯಾತ್ರಿಗಳು ಭೂಮಿಗೆ ಬಂದಿಳಿದಿದ್ದಾರೆ.

    ನಾಲ್ವರು ಗಗನಯಾತ್ರಿಗಳು ಭೂಮಿಗೆ ಮರಳುವ ಮುನ್ನ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಭಾವನಾತ್ಮಕ ಬೀಳ್ಕೊಡುಗೆ ಸಿಕ್ಕಿತು. ಶುಭಾಂಶು ಶುಕ್ಲಾ ಸಾರೇ ಜಹಾನ್ ಸೆ ಅಚ್ಚಾ ಎಂದು ಬಾಹ್ಯಾಕಾಶದಲ್ಲಿ ಭಾರತವನ್ನು ಭಾವನಾತ್ಮಕವಾಗಿ ಹೊಗಳಿದರು. ಈ ವೇಳೆ ರಾಕೇಶ್ ಶರ್ಮಾ 41 ವರ್ಷಗಳ ಹಿಂದೆ ಬಾಹ್ಯಾಕಾಶಕ್ಕೆ ಪ್ರಯಾಣಿಸಿದ ಸಮಯವನ್ನು ನೆನಪಿಸಿಕೊಂಡು, ಅಲ್ಲಿಂದ ಭಾರತ ಹೇಗೆ ಕಾಣುತ್ತದೆ ಎಂದು ವಿವರಿಸಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಭಾರತದ ಧ್ವಜ ಹಾರಿಸುವ ಮೂಲಕ ಭಾರತಕ್ಕೆ ಹೆಮ್ಮೆ ತಂದ ಶುಭಾಂಶು ಶುಕ್ಲಾ ಸ್ವಾಗತಿಸಲು ಭಾರತೀಯರು ಉತ್ಸುಕರಾಗಿದ್ದಾರೆ.

    ಜೂ.25ರಂದು ಆಕ್ಸಿಯಂ-4 ಮಿಷನ್ ಮೂಲಕ ಭಾರತದ ಶುಭಾಂಶು ಶುಕ್ಲಾ, ಅಮೆರಿಕ ಮಹಿಳಾ ಗಗನಯಾತ್ರಿ ಪೆಗ್ಗಿ ವಿಟ್ಸನ್, ಹಂಗೇರಿಯ ಟಿಬೋರ್ ಕಾಪು ಹಾಗೂ ಪೋಲೆಂಡ್ ಗಗನಯಾತ್ರಿ ಸ್ಲಾವೋಸ್ಜ್ ಉಜ್ನಾನ್‌ಸ್ಕಿ ನಾಲ್ವರು ಗಗನಯಾತ್ರಿಗಳು ಅಂತರಿಕ್ಷ ಯಾನಕ್ಕೆ ತೆರಳಿದ್ದರು. ಬಾಹ್ಯಾಕಾಶದಲ್ಲಿ 18 ದಿನಗಳ ಕಾಲ ಉಳಿದು ಹಲವಾರು ವೈಜ್ಞಾನಿಕ ಪ್ರಯೋಗಗಳನ್ನು ಮಾಡಿದ್ದರು.ಇದನ್ನೂ ಓದಿ: ಫೋಟೋ ತೆಗೆಯುವ ನೆಪದಲ್ಲಿ ಪತಿಯನ್ನ ಪತ್ನಿ ನದಿಗೆ ತಳ್ಳಿದ ಆರೋಪ ಕೇಸ್‌ – ಪರಸ್ಪರ ವಿಚ್ಛೇದನಕ್ಕೆ ಮುಂದಾದ ದಂಪತಿ

  • 6 ಜನರಿದ್ದ ವಿಮಾನ ಸಾಗರದಲ್ಲಿ ಪತನ

    6 ಜನರಿದ್ದ ವಿಮಾನ ಸಾಗರದಲ್ಲಿ ಪತನ

    ವಾಷಿಂಗ್ಟನ್: 6 ಜನರನ್ನು ಹೊತ್ತೊಯ್ಯುತ್ತಿದ್ದ ಸೆಸ್ನಾ 414 ವಿಮಾನ ಅಮೆರಿಕದ ದಕ್ಷಿಣ ಕ್ಯಾಲಿಫೋರ್ನಿಯಾದ (California) ಸ್ಯಾನ್ ಡಿಯಾಗೋ (San Diego) ಬಳಿಯ ಸಾಗರದಲ್ಲಿ ಪತನಗೊಂಡಿದೆ.

    ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ (Federal Aviation Administration) ಪ್ರಕಾರ, ಎರಡು ಇಂಜಿನ್ ಹೊಂದಿರುವ ಸೆಸ್ನಾ 414 (Cessna 414) ವಿಮಾನವು ಭಾನುವಾರ (ಮೇ 8) ಮಧ್ಯಾಹ್ನ 12:30ರ ಸುಮಾರಿಗೆ ಟೇಕ್ ಆಫ್ ಆಗಿತ್ತು. ಅದಾದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಯಿತು.ಇದನ್ನೂ ಓದಿ: ಕಬ್ಬನ್ ಪಾರ್ಕ್‌ಗೆ ಹೋಗ್ತೀರಾ – ಈ ರೂಲ್ಸ್ ತಿಳ್ಕೊಳ್ಳಿ

    ಈ ಕುರಿತು ಯುಎಸ್ ಕೋಸ್ಟ್ ಗಾರ್ಡ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಸ್ಯಾನ್ ಡಿಯಾಗೋ ಬಳಿಯ ಕರಾವಳಿ ತೀರದಿಂದ 8 ಕಿ.ಮೀ ದೂರದಲ್ಲಿ ವಿಮಾನ ಪತನಗೊಂಡಿದೆ. ಪಾಯಿಂಟ್ ಲೋಮಾ ಬಳಿಯ 61 ಮೀ. ಆಳದ ಪ್ರದೇಶದಲ್ಲಿ ಅವಶೇಷಗಳಿಗಾಗಿ ಹುಡುಕಾಟ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

    ಫ್ಲೈಟ್‌ಅವೇರ್ (Flight Aware) ವೆಬ್‌ಸೈಟ್‌ನಲ್ಲಿ ವಿಮಾನ ಟ್ರ‍್ಯಾಕಿಂಗ್ ಪರಿಶೀಲಿಸಿದಾಗ ಅದು ಫೀನಿಕ್ಸ್‌ಗೆ (Phoenix) ತೆರಳುತ್ತಿತ್ತು ಎಂದು ತೋರಿಸಿದೆ. ಇನ್ನೂ ಈ ಕುರಿತು ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿ ಅಪಘಾತದ ಬಗ್ಗೆ ತನಿಖೆ ನಡೆಸುತ್ತಿದೆ.ಇದನ್ನೂ ಓದಿ: Axiom-4 Mission – ಶುಭಾಂಶು ಶುಕ್ಲಾ ಬಾಹ್ಯಾಕಾಶ ಪ್ರಯಾಣ ಮುಂದೂಡಿಕೆ

  • ಟ್ರಂಪ್ ಮತ್ತೆ ತೆರೆಯಲು ಮುಂದಾಗಿರೋ ಅಲ್ಕಾಟ್ರಾಜ್ ಜೈಲು ಅದೆಷ್ಟು ಭಯಾನಕ ಗೊತ್ತಾ?

    ಟ್ರಂಪ್ ಮತ್ತೆ ತೆರೆಯಲು ಮುಂದಾಗಿರೋ ಅಲ್ಕಾಟ್ರಾಜ್ ಜೈಲು ಅದೆಷ್ಟು ಭಯಾನಕ ಗೊತ್ತಾ?

    ಮೆರಿಕದ ಸ್ಯಾನ್ ಫ್ರಾನ್ಸಿಸ್ಕೋ ಬಳಿಯ ದ್ವೀಪವೊಂದರಲ್ಲಿ 60 ವರ್ಷಗಳ (1963) ಹಿಂದೆ ಮುಚ್ಚಲ್ಪಟ್ಟ ಅಲ್ಕಾಟ್ರಾಜ್ ಜೈಲನ್ನು (Alcatraz Jail) ತೆರೆಯಲು ಅಮೆರಿಕ (United States) ಅಧ್ಯಕ್ಷ ಟ್ರಂಪ್‌ (Donald Trump) ಮತ್ತೆ ಮುಂದಾಗಿದ್ದಾರೆ. ಈ ಜೈಲನ್ನು ಮತ್ತೆ ತೆರೆಯುವುದು ಕಾನೂನು, ಸುವ್ಯವಸ್ಥೆ ಮತ್ತು ನ್ಯಾಯದ ಸಂಕೇತ ಎಂದು ಅವರು ಹೇಳಿಕೊಂಡಿದ್ದಾರೆ.

    ಸ್ಯಾನ್ ಫ್ರಾನ್ಸಿಸ್ಕೋ ನಗರದಿಂದ ಸುಮಾರು 2 ಕಿಲೋಮೀಟರ್ ದೂರದಲ್ಲಿರುವ ಅಲ್ಕಾಟ್ರಾಜ್ ಜೈಲನ್ನು ಆ ಕಾಲಘಟ್ಟದಲ್ಲಿ ಅತ್ಯಂತ ಕಠಿಣ ಜೈಲುಗಳಲ್ಲಿ ಒಂದಾಗಿತ್ತು ಎಂದು ಪರಿಗಣಿಸಲಾಗಿತ್ತು. ಈ ಜೈಲು ಮೂಲತಃ ಅಲ್ಕಾಟ್ರಾಜ್ ದ್ವೀಪದ ರಕ್ಷಣಾ ಕೋಟೆಯಾಗಿತ್ತು. ಅಂತರ್ಯುದ್ಧದ ಸಮಯದಲ್ಲಿ, ಇದನ್ನು ಮಿಲಿಟರಿ ಜೈಲಾಗಿ ಪರಿವರ್ತಿಸಲಾಯಿತು. ಇದು ಸುಮಾರು 22 ಎಕರೆ ವಿಸ್ತೀರ್ಣ ಹೊಂದಿದ್ದು, ಅಮೆರಿಕದ ಕುಖ್ಯಾತ ದರೋಡೆಕೋರ ಅಲ್ ಕಾಪೋನ್ ಸೇರಿದಂತೆ ಕೆಲವು ಕುಖ್ಯಾತ ಅಪರಾಧಿಗಳನ್ನು ಇಲ್ಲಿ ಇರಿಸಲಾಗಿತ್ತು.

    ಈ ಜೈಲು ಅದೆಷ್ಟು ಭದ್ರವಾಗಿತ್ತು ಎಂದರೆ, ವಿಶ್ವದ ಅಪಾಯಕಾರಿ ಕೈದಿಗಳು ಸಹ ಇಲ್ಲಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇರಲಿಲ್ಲ. ಯಾಕಂದ್ರೆ ಈ ಜೈಲಿನಲ್ಲಿದ್ದ ಕೈದಿಗಳಿಗೆ ಕೋಲು ಹಿಡಿದು ಕಾಯುವ ಪೊಲೀಸರು ಇರಲಿಲ್ಲ, ಬದಲಿಗೆ ಶಾರ್ಕ್ ಮೀನುಗಳೇ ಈ ಜೈಲಿನ ಕಾವಲು ಕಾಯುತ್ತಿದ್ದವು. ಇಂತಹ ಜೈಲು 3 ಬಾರಿ ಪ್ರವಾಹಕ್ಕೆ ತುತ್ತಾಗಿದ್ದರಿಂದ ಗೋಡೆಗಳೆಲ್ಲ ಹಾನಿಗೊಳಗಾಗಿತ್ತು. ಅಲ್ಲದೇ ನಿರ್ವಹಣಾ ವೆಚ್ಚ ಹೆಚ್ಚಾದ ಕಾರಣದಿಂದ 1963ರಲ್ಲಿ ಈ ಜೈಲನ್ನು ಬಂದ್‌ ಮಾಡಲಾಗಿತ್ತು.

    ಇದೀಗ ಎರಡನೇ ಬಾರಿಗೆ ಅಧ್ಯಕ್ಷ ಸ್ಥಾನ ವಹಿಸಿಕೊಂಡಿರುವ ಟ್ರಂಪ್‌ ಈ ಜೈಲನ್ನು ಮತ್ತೆ ತೆರೆಯಲು ಪ್ಲ್ಯಾನ್‌ ಮಾಡಿದ್ದಾರೆ. ಈಗ ಪ್ರವಾಸಿ ತಾಣವಾಗಿರುವ ಈ ಕೋಟೆಯನ್ನು ಮತ್ತೆ ಜೈಲನ್ನಾಗಿ ಮಾಡಿ, ಮತ್ತಷ್ಟು ವಿಸ್ತರಿಸಲು ಅವರು ಆದೇಶಿಸಿದ್ದಾರೆ. ಈ ಜೈಲನ್ನು ಅತ್ಯಂತ ಕ್ರೂರಿಗಳನ್ನು ಇರಿಸುವುದಾಕ್ಕಾಗಿ ಮತ್ತೆ ತೆರೆಯಲಾಗುತ್ತಿದೆ ಎಂದು ಟ್ರಂಪ್ ಹೇಳಿಕೊಂಡಿದ್ದಾರೆ.

    ಟ್ರಂಪ್‌ ಅಲ್ಕಾಟ್ರಾಜ್ ರೀ ಓಪನ್‌ ಬಗ್ಗೆ ಹೇಳಿದ್ದೇನು?
    ಅಲ್ಕಾಟ್ರಾಜ್ ಜೈಲಿನಲ್ಲಿ ಅತ್ಯಂತ ಕ್ರೂರಿಗಳನ್ನು ಇರಿಸಲಾಗುತ್ತದೆ. ಕೆಲಸಕ್ಕಾಗಿ ಹಾಗೂ ನಮ್ಮ ದೇಶಕ್ಕೆ ಅಕ್ರಮವಾಗಿ ಬಂದ ಅಪರಾಧಿಗಳ ವಿರುದ್ಧ ಕ್ರಮಕೈಗೊಳ್ಳಲು ನಮಗೆ ಅವಕಾಶವಿದೆ. ಗೂಂಡಾಗಳಿಗೆ ನಾವಿನ್ನು ಮುಂದೆ ಹೆದರುವುದಿಲ್ಲ. ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳುತ್ತೇವೆ ಎಂದು ಟ್ರಂಪ್‌ ಹೇಳಿಕೊಂಡಿದ್ದಾರೆ.

    ಬಹಳ ಸಮಯದಿಂದ, ಅಮೆರಿಕವು ಕ್ರೂರ, ಹಿಂಸಾತ್ಮಕ ಮತ್ತು ಪುನರಾವರ್ತಿತ ಅಪರಾಧಿಗಳಿಂದ ಬಳಲುತ್ತಿದೆ. ಅಂತಹ ಕ್ರಿಮಿನಲ್‌ಗಳು ಸಮಾಜದ ಕಸ, ಅವರು ಸಮಾಜಕ್ಕೆ ದುಃಖವನ್ನು ಹೊರತುಪಡಿಸಿ ಬೇರೆ ಏನನ್ನೂ ನೀಡುವುದಿಲ್ಲ. ಅದಕ್ಕಾಗಿ ಈ ಜೈಲು ಅಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

    ಅಲ್ಕಾಟ್ರಾಜ್ ಕೋಟೆ ಜೈಲಾಗಿದ್ದು ಹೇಗೆ?
    ಅಲ್ಕಾಟ್ರಾಜ್ ಜೈಲು ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೋ ಕರಾವಳಿಯಲ್ಲಿದೆ. ಒಂದು ಕಾಲದಲ್ಲಿ ಕೋಟೆಯಾಗಿದ್ದ ಇದನ್ನು 1912ರಲ್ಲಿ ಯುಎಸ್ ಸೈನ್ಯದ ಮಿಲಿಟರಿ ಜೈಲಾಗಿ ಪರಿವರ್ತಿಸಲಾಯಿತು.

    ಅಲ್ಕಾಟ್ರಾಜ್ ಯಾಕಿಷ್ಟು ಭದ್ರ ಗೊತ್ತಾ?
    ಮೂರು ಅಂತಸ್ತಿನ ಈ ಜೈಲು ಅಮೆರಿಕದಿಂದ ಬೌಗಳಿಕ ಪ್ರದೇಶದ ಸಂಪರ್ಕವಿಲ್ಲದೇ ಪ್ರತ್ಯೇಕವಾಗಿದೆ. ಸುತ್ತ ಸಮುದ್ರ ವ್ಯಾಪಿಸಿದ್ದು, ಭಾರೀ ಅಲೆಗಳು ಮತ್ತು ಶಾರ್ಕ್‌ ಮೀನುಗಳ ಹಾವಳಿಯಿಂದ ಈ ಜೈಲಿನಿಂದ ಕೈದಿಗಳು ತಪ್ಪಿಸಿಕೊಳ್ಳವುದು ಅಸಾಧ್ಯವಾಗಿತ್ತು. ಅಕಸ್ಮಾತ್‌ ತಪ್ಪಿಕೊಂಡ್ರೆ ಅಪರಾಧಿಗಳು ಶಾರ್ಕ್‌ಗಳಿಗೆ ಊಟವಾಗಬೇಕಿತ್ತು!

    ಈ ಜೈಲು ನಾಲ್ಕು ಸೆಲ್ ಬ್ಲಾಕ್‌ಗಳು, ವಾರ್ಡನ್ ಕಚೇರಿ, ಸಂದರ್ಶಕರ ಕೊಠಡಿ, ಗ್ರಂಥಾಲಯ ಮತ್ತು ಕ್ಷೌರಿಕರ ಕೊಠಡಿಯನ್ನು ಒಳಗೊಂಡಿತ್ತು. ಅತ್ಯಂತ ಅಪಾಯಕಾರಿ ಕೈದಿಗಳನ್ನು ಡಿ-ಬ್ಲಾಕ್‌ನಲ್ಲಿ ಇರಿಸಲಾಗುತ್ತಿತ್ತು. 1934ರಲ್ಲಿ ಜೈಲು ಕಟ್ಟಡವನ್ನು ನವೀಕರಿಸಿದಾಗ ಅದರ ಕಬ್ಬಿಣದ ಮೆಟ್ಟಿಲುಗಳು, ಗನ್‌ ಇಡಲು ಗ್ರಾನೈಟ್ ಬ್ಲಾಕ್‌ಗಳನ್ನು ನಿರ್ಮಿಸಲಾಗಿತ್ತು. ಈ ಜೈಲಿನಲ್ಲಿದ್ದ ರಾಬರ್ಟ್ ಫ್ರಾಂಕ್ಲಿನ್ ಎಂಬ ಅಪರಾಧಿ ಜೈಲು ಸಿಬ್ಬಂದಿಯನ್ನೇ ಹತ್ಯೆಗೈದಿದ್ದ.

    ಜೈಲಿನ ನಿವಹಣಾ ವೆಚ್ಚ ಹೆಚ್ಚಾಗಿದ್ದರಿಂದ ಈ ಜೈಲನ್ನು 1963ರಲ್ಲಿ ಮುಚ್ಚಲಾಯಿತು. ಬಳಿಕ ಯುಎಸ್ ಸರ್ಕಾರವು 1972ರಲ್ಲಿ ಈ ದ್ವೀಪವನ್ನು ರಾಷ್ಟ್ರೀಯ ಉದ್ಯಾನವನ ಅಭಿವೃದ್ಧಿ ಮಂಡಳಿಗೆ ಹಸ್ತಾಂತರಿಸಿತು. ಬಳಿಕ ಇದು ಗೋಲ್ಡನ್ ಗೇಟ್ ಎಂಬ ಹೆಸರಿನ ಪ್ರವಾಸಿ ಸ್ಥಳವಾಗಿ ಹೆಸರಾಯಿತು.

    36 ಕೈದಿಗಳಿಂದ ತಪ್ಪಿಸಿಕೊಳ್ಳೋಕೆ ಯತ್ನ!
    ಇಂತಹ ಭದ್ರ ಜೈಲಿಂದ 36 ಕೈದಿಗಳು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಅದರಲ್ಲಿ ಹೆಚ್ಚಿನ ಕೈದಿಗಳನ್ನು ಸೆರೆಹಿಡಿಯಲಾಗಿತ್ತು. ಅದರಲ್ಲಿ ಕೆಲವರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. 1962 ರಲ್ಲಿ ಫ್ರಾಂಕ್ ಮೋರಿಸ್ ಮತ್ತು ಆಂಗ್ಲಿನ್ ಸಹೋದರರು ಅಲ್ಲಿಂದ ತಪ್ಪಿಸಿಕೊಂಡಿದ್ದರು. ಆ ಇಬ್ಬರೂ ಏನಾದರೂ ಎಂಬುದು ಇಂದಿಗೂ ತಿಳಿದು ಬಂದಿಲ್ಲ.

  • ಮನೆಗೆ ಡಿಕ್ಕಿ ಹೊಡೆದು ಸಣ್ಣ ವಿಮಾನ ಪತನ – ಪೈಲಟ್‌ ಸಾವು

    ಮನೆಗೆ ಡಿಕ್ಕಿ ಹೊಡೆದು ಸಣ್ಣ ವಿಮಾನ ಪತನ – ಪೈಲಟ್‌ ಸಾವು

    ವಾಷಿಂಗ್ಟನ್‌: ಸಿಮಿ ಕಣಿವೆಯ ಬಳಿ ಸಣ್ಣ ವಿಮಾನವೊಂದು ಪತನಗೊಂಡಿದ್ದು, ಪೈಲಟ್‌ ಸಾವಿಗೀಡಾಗಿರುವ ಘಟನೆ ನಡೆದಿದೆ. ಅವಘಡದಲ್ಲಿ 2 ಮನೆಗಳಿಗೆ ಹಾನಿಯಾಗಿದೆ.

    ಲಾಸ್ ಏಂಜಲೀಸ್‌ನ ವಾಯುವ್ಯಕ್ಕೆ ಸುಮಾರು 80.47 ಕಿಲೋಮೀಟರ್ ದೂರದಲ್ಲಿರುವ ಸಿಮಿ ಕಣಿವೆಯ ವುಡ್ ರಾಂಚ್ ವಿಭಾಗದ ಒಂದು ಮನೆಯ ಛಾವಣಿಯಿಂದ ಹೊಗೆ ಬರುತ್ತಿರುವುದು ಕಂಡುಬಂದಿತ್ತು. ಅಲ್ಲಿ ಪರಿಶೀಲಿಸಿದಾಗ ವಿಮಾನ ಪತನಗೊಂಡಿರುವುದು ಗೊತ್ತಾಯಿತು. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ತೆರಳಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: 2ನೇ ಬಾರಿಗೆ ಆಸ್ಟ್ರೇಲಿಯಾ ಪ್ರಧಾನಿಯಾಗಿ ಅಲ್ಬನೀಸ್‌ ಆಯ್ಕೆ – ಮೋದಿ ವಿಶ್‌

    ಎರಡು ಮನೆಗಳಲ್ಲಿ ವಿಮಾನದ ಅವಶೇಷಗಳು ಬಿದ್ದಿವೆ. ನಿವಾಸಿಗಳು ಎರಡೂ ಮನೆಗಳ ಒಳಗೆ ಇದ್ದರು. ಆದರೆ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮನೆಯಲ್ಲಿದ್ದ ಜನರನ್ನು ಸ್ಥಳಾಂತರಿಸಲಾಗಿದೆ. ಎರಡೂ ಮನೆಗಳಿಗೆ ಹಾನಿಯಾಗಿದೆ. ವಿಮಾನ ಅಪಘಾತಕ್ಕೀಡಾಗುತ್ತಿದ್ದಂತೆ ಬೆಂಕಿ ಹೊತ್ತಿ ಉರಿದಿತ್ತು.

    ಸುಮಾರು 40 ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಮನೆ ದುರಸ್ತಿ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಇದನ್ನೂ ಓದಿ: ಚೆನ್ನೈಗೆ ಬಂದು ಶ್ರೀಲಂಕಾಗೆ ಹೋದ್ರಾ ಪಹಲ್ಗಾಮ್ ಉಗ್ರರು? – ಶ್ರೀಲಂಕಾ ಏರ್‌ಪೋರ್ಟಲ್ಲಿ ತಪಾಸಣೆ

  • ಕ್ಯಾಲಿಫೋರ್ನಿಯಾದ ಅತಿದೊಡ್ಡ ಹಿಂದೂ ದೇವಾಲಯ ವಿರೂಪ, ದ್ವೇಷದ ಬರಹ

    ಕ್ಯಾಲಿಫೋರ್ನಿಯಾದ ಅತಿದೊಡ್ಡ ಹಿಂದೂ ದೇವಾಲಯ ವಿರೂಪ, ದ್ವೇಷದ ಬರಹ

    ವಾಷಿಂಗ್ಟನ್‌: ದಕ್ಷಿಣ ಕ್ಯಾಲಿಫೋರ್ನಿಯಾದ ಅತಿದೊಡ್ಡ ಹಿಂದೂ ದೇವಾಲಯಗಳಲ್ಲಿ ಒಂದಾದ ಬಿಎಪಿಎಸ್‌ ಶ್ರೀ ಸ್ವಾಮಿನಾರಾಯಣ್‌ ಮಂದಿರವನ್ನು ವಿರೂಪಗೊಳಿಸಲಾಗಿದೆ.

    ಭಾರತ ವಿರೋಧಿ ಸಂದೇಶಗಳೊಂದಿಗೆ ದೇವಾಲಯವನ್ನು ಅಪವಿತ್ರಗೊಳಿಸಲಾಯಿತು. ಕಳೆದ ಕೆಲವು ತಿಂಗಳುಗಳಲ್ಲಿ ಯುಎಸ್‌ನಲ್ಲಿ ಇಂತಹ ಮತ್ತೊಂದು ಘಟನೆ ನಡೆದಿದೆ.

    ಕ್ಯಾಲಿಫೋರ್ನಿಯಾದ ಚಿನೋ ಹಿಲ್ಸ್‌ನಲ್ಲಿರುವ ದೇವಾಲಯವನ್ನು, ಹಿಂದೂ ಸಮುದಾಯದ ವಿರುದ್ಧ ದ್ವೇಷದ ಬರಹದೊಂದಿಗೆ ಅಪವಿತ್ರಗೊಳಿಸಲಾಗಿದೆ ಎಂದು ಬಿಎಪಿಎಸ್ ತಿಳಿಸಿವೆ. ಸಮುದಾಯವು ದ್ವೇಷವನ್ನು ಬೇರೂರಲು ಎಂದಿಗೂ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

    ಈ ಘಟನೆಯ ಬಗ್ಗೆ ಚಿನೋ ಹಿಲ್ಸ್ ಪೊಲೀಸ್ ಇಲಾಖೆ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೊದಲ್ಲಿ ನಡೆದ ಬಿಎಪಿಎಸ್ ಶ್ರೀ ಸ್ವಾಮಿನಾರಾಯಣ್‌ ಮಂದಿರವನ್ನು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಧ್ವಂಸಗೊಳಿಸಲಾಗಿತ್ತು. ದ್ವೇಷದ ಸಂದೇಶಗಳನ್ನು ದೇವಾಲಯದ ಚಿಹ್ನೆಯ ಮೇಲೆ ಬರೆಯಲಾಗಿದೆ.

    ಸ್ಯಾಕ್ರಮೆಂಟೊ ಘಟನೆಗೆ ಸುಮಾರು 10 ದಿನಗಳ ಮೊದಲು, ನ್ಯೂಯಾರ್ಕ್‌ನ ಮೆಲ್ವಿಲ್ಲೆಯಲ್ಲಿರುವ ಮತ್ತೊಂದು ಬಿಎಪಿಎಸ್ ಶ್ರೀ ಸ್ವಾಮಿನಾರಾಯಣ್ ಮಂದಿರವನ್ನು ದ್ವೇಷದ ಸಂದೇಶಗಳಿಂದ ವಿರೂಪಗೊಳಿಸಲಾಗಿತ್ತು.

    ನ್ಯೂಯಾರ್ಕ್‌ನ ಭಾರತದ ಕಾನ್ಸುಲೇಟ್ ಜನರಲ್ ಈ ಘಟನೆಯನ್ನು ಬಲವಾಗಿ ಖಂಡಿಸಿದ್ದಾರೆ. ಇದು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.

  • ಲಾಸ್‌ ಏಂಜಲೀಸ್‌ ಕಾಡ್ಗಿಚ್ಚು – ಆಸ್ತಿ ರಕ್ಷಿಸಿಕೊಳ್ಳಲು ಶ್ರೀಮಂತರಿಂದ ಗಂಟೆಗೆ 1.7 ಲಕ್ಷ ಪಾವತಿ

    ಲಾಸ್‌ ಏಂಜಲೀಸ್‌ ಕಾಡ್ಗಿಚ್ಚು – ಆಸ್ತಿ ರಕ್ಷಿಸಿಕೊಳ್ಳಲು ಶ್ರೀಮಂತರಿಂದ ಗಂಟೆಗೆ 1.7 ಲಕ್ಷ ಪಾವತಿ

    ಕ್ಯಾಲಿಫೋರ್ನಿಯಾ: ಲಾಸ್‌ ಏಂಜಲೀಸ್‌ನಲ್ಲಿ (Los Angeles) ಹೊತ್ತಿಕೊಂಡಿರುವ ಭೀಕರ ಕಾಡ್ಗಿಚ್ಚು ಇಡೀ ಅಮೆರಿಕ ದೇಶವನ್ನೇ ತಲ್ಲಣಗೊಳಿಸಿದೆ. ಅಪಾರ ಆರ್ಥಿಕ ನಷ್ಟ ಉಂಟುಮಾಡಿರುವ ಕಾಡ್ಗಿಚ್ಚು 24 ಮಂದಿಯನ್ನ ಬಲಿಪಡೆದಿದೆ. ಲಕ್ಷಾಂತರ ಮಂದಿಯನ್ನ ಸ್ಥಳಾಂತರಗೊಳಿಸಲಾಗಿದೆ. ಈ ನಡುವೆ ಮಿಲಿಯನೇರ್‌ಗಳು (Millionaires)  ತಮ್ಮ ಆಸ್ತಿ ರಕ್ಷಣೆ ಮಾಡಿಕೊಳ್ಳಲು ಗಂಟೆಗೆ ಲಕ್ಷ ಲಕ್ಷ ಹಣ ಪಾವತಿಸಲು ಮುಂದಾಗಿದ್ದಾರೆ.

    ಹೌದು. ಸರ್ಕಾರಿ ಅಗ್ನಿಶಾಮಕ ದಳಗಳು ಈಗಾಗಲೇ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿವೆ. ಅಮೆರಿಕಕ್ಕೆ ಕೆನಡಾ, ಮೆಕ್ಸಿಕೊ ಸೇರಿದಂತೆ ಅನೇಕ ನೆರೆಯ ರಾಷ್ಟ್ರಗಳು ನೆರವು ನೀಡಿವೆ. ಹೀಗಾಗಿ ಖಾಸಗಿ ಅಗ್ನಿಶಾಮಕ ಸಿಬ್ಬಂದಿ (Fire services) ಮೊರೆ ಹೋಗಿರುವ ಮಿಲಿಯನೇರ್‌ಗಳು ಗಂಟೆ ಲೆಕ್ಕದಲ್ಲಿ ಲಕ್ಷ ಲಕ್ಷ ಹಣ ಪಾವತಿಸುತ್ತಿದ್ದಾರೆ.

    ವರದಿಗಳ ಪ್ರಕಾರ, ಮಿತಿಮೀರಿ ವ್ಯಾಪಿಸುತ್ತಿರುವ ಅಗ್ನಿಜ್ವಾಲೆಯಿಂದ ಆಸ್ತಿ ರಕ್ಷಿಸಲು ಶ್ರೀಮಂತರು ಗಂಟೆಗೆ 1.7 ಲಕ್ಷ ರೂ. (2,000 ಡಾಲರ್‌) ಪಾವತಿಸುತ್ತಿದ್ದಾರೆ. ಬೆಂಕಿಯ ಜ್ವಾಲೆ ಸಮೀಪಿಸಿದಂತೆಲ್ಲಾ ಮನೆ ಮೇಲಿಂದ ಹಾಗೂ ತಮಗೆ ಸೇರಿದ ಆಸ್ತಿಯ ಮೇಲೆ ನೀರು ಹಾಯಿಸುವುದು ಸಿಬ್ಬಂದಿಯ ಕೆಲಸವಾಗಿದೆ. ಈ ಸೇವೆಗೆ ಮಿಲಿಯನೇರ್‌ಗಳಿಂದ ಬೇಡಿಕೆ ಹೆಚ್ಚಾಗಿದೆ. ಇದನ್ನೂ ಓದಿ: ಲಾಸ್‌ ಏಂಜಲೀಸ್‌ನಲ್ಲಿ ಕಾಡ್ಗಿಚ್ಚು – 57,000 ಕಟ್ಟಡ, 1.66 ಲಕ್ಷ ಮಂದಿಗೆ ಕಾದಿದೆ ಆಪತ್ತು

    ಉನ್ನತಮಟ್ಟದ ತನಿಖೆ:
    ಕಾಡ್ಗಿಚ್ಚಿಗೆ ಕಾರಣವೇನು ಎಂಬುದನ್ನು ತಿಳಿಯಲು ಎಫ್‌ಬಿಐ ಮತ್ತು ಸ್ಥಳೀಯ ಅಧಿಕಾರಿಗಳ ತಂಡಗಳು ಸೇರಿ ಉನ್ನತ ಮಟ್ಟದ ತನಿಖೆಗೆ ಮುಂದಾಗಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿಮಾಡಿವೆ. ಇದನ್ನೂ ಓದಿ: ಲಾಸ್‌ ಏಂಜಲೀಸ್‌ ಕಾಡ್ಗಿಚ್ಚು – ಸಾವಿನ ಸಂಖ್ಯೆ 24ಕ್ಕೆ ಏರಿಕೆ, ಟ್ರಂಪ್‌ ತೀವ್ರ ಅಸಮಾಧಾನ

    ಪ್ರಮುಖ ಬೆಳವಣಿಗೆಗಳು

    • ಕ್ಯಾಲಿಫೋರ್ನಿಯಾದ ಪಾಲಿಸೇಡ್ಸ್‌ ಪ್ರದೇಶವೊಂದರಲ್ಲೇ ಸುಟ್ಟು ಭಸ್ಮವಾದ ಭೂಪ್ರದೇಶದ ಪ್ರಮಾಣ 23,600 ಎಕ್ರೆಗೆ ಏರಿಕೆಯಾಗಿದೆ.
    • 12,000ಕ್ಕೂ ಹೆಚ್ಚು ಕಟ್ಟಡಗಳು ನಾಶವಾಗಿದೆ. ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದ್ದು, ಶ್ವಾನದಳದ ಮೂಲಕ ಶವಗಳ ಹುಟುಕಾಟ ಕಾರ್ಯನಡೆದಿದೆ. ಜ.7ರಂದು ಹೊತ್ತಿಕೊಂಡ ಕಾಡ್ಗಿಚ್ಚಿನಿಂದ ಈವರೆಗೆ ಅಂದಾಜು 150 ಶತಕೋಟಿ ಡಾಲರ್‌ನಷ್ಟು ಆರ್ಥಿಕ ನಷ್ಟ ಉಂಟಾಗಿದೆ.
    • ಬಿಸಿ ಗಾಳಿ, ಫೈರ್ನಾಡೋ (ಅಗ್ನಿ ಜ್ವಾಲೆ)ಗಳು ಮುಗಿಲೆತ್ತರಕ್ಕೆ ಚಿಮ್ಮುತ್ತಿದ್ದು, ವ್ಯಾಪ್ತಿಯನ್ನು ವಿಸ್ತರಿಸುತ್ತಲೇ ಇದೆ. ಅಮೆರಿಕದ ಇತಿಹಾಸದಲ್ಲೇ ಇದು ಕಂಡೂ ಕೇಳರಿಯದ ಕಾಡ್ಗಿಚ್ಚು ಎಂದು ಅಧಿಕಾರಿಗಳು ಬಣ್ಣಿಸಿದ್ದಾರೆ.
    • ಈಗಾಗಲೇ 1.53 ಲಕ್ಷ ಮಂದಿಯನ್ನು ಸ್ಥಳಾಂತರಿಸಲು ಆದೇಶ ನೀಡಲಾಗಿದೆ. ಅಲ್ಲದೇ ಇನ್ನೂ 57,000 ಕಟ್ಟಡಗಳು ಅಪಾಯದಲ್ಲಿವೆ. 1.66 ಲಕ್ಷ ಮಂದಿ ಸ್ಥಳಾಂತರಿಸುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ತಿಳಿದುಬಂದಿದೆ.
    • ಈ ಮಧ್ಯೆ ಕೆನಡಾ ಹಾಗೂ ಮೆಕ್ಸಿಕೋ ದೇಶಗಳು ಕ್ಯಾಲಿಫೋರ್ನಿಯಾದಲ್ಲಿ ಕಾಡ್ಗಿಚ್ಚು ನಂದಿಸಲು ನೆರವು ಚಾಚಿವೆ.

  • ಲಾಸ್‌ ಏಂಜಲೀಸ್‌ ಕಾಡ್ಗಿಚ್ಚು – ಸಾವಿನ ಸಂಖ್ಯೆ 24ಕ್ಕೆ ಏರಿಕೆ, ಟ್ರಂಪ್‌ ತೀವ್ರ ಅಸಮಾಧಾನ

    ಲಾಸ್‌ ಏಂಜಲೀಸ್‌ ಕಾಡ್ಗಿಚ್ಚು – ಸಾವಿನ ಸಂಖ್ಯೆ 24ಕ್ಕೆ ಏರಿಕೆ, ಟ್ರಂಪ್‌ ತೀವ್ರ ಅಸಮಾಧಾನ

    ವಾಷಿಂಗ್ಟನ್:‌ ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ಹೊತ್ತಿಕೊಂಡ ಕಾಡ್ಗಿಚ್ಚು (Los Angeles Wildfire) ತನ್ನ ಅಗ್ನಿ ನರ್ತನ ಮುಂದುವರಿಸಿದೆ. ಸದ್ಯ ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಸಾವಿರಾರು ಎಕರೆ ಭೂಪ್ರದೇಶ ಬೆಂಕಿಜ್ವಾಲೆಗೆ ಭಸ್ಮವಾಗಿದ್ದು, ಆರ್ಥಿಕ ನಷ್ಟವುಂಟುಮಾಡಿದೆ. ಈ ನಡುವೆ ಬೆಂಕಿ ನಂದಿಸುವಲ್ಲಿ ವಿಫಲವಾಗಿರುವ ಕ್ಯಾಲಿಫೋರ್ನಿಯಾ ಅಧಿಕಾರಿಗಳ ವಿರುದ್ಧ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

    ಲಾಸ್‌ ಏಂಜಲೀಸ್‌ನಲ್ಲಿ (Los Angeles) ಹರಡುತ್ತಿರುವ ಕಾಡ್ಗಿಚ್ಚು ಅಧಿಕಾರಿಗಳ ಅಸಮರ್ಥತೆ ತೋರಿಸುತ್ತದೆ. ಇದು ದೇಶದ ಇತಿಹಾಸದಲ್ಲೇ ಅತ್ಯಂತ ಭೀಕರ ದುರಂತಗಳಲ್ಲಿ ಒಂದಾಗಿದೆ ಎಂದು ಹೇಳಿದ್ದಾರೆ. ಈ ಬೆನ್ನಲ್ಲೇ ನಿರ್ಗಮಿತ ಅಧ್ಯಕ್ಷ ಜೋ ಬೈಡನ್‌ ಪಕ್ಷದ ಸದಸ್ಯರೊಬ್ಬರು, ಲಾಸ್‌ ಏಂಜಲೀಸ್‌ ನಗರವನ್ನು 2.0 ಪ್ಲ್ಯಾನ್‌ ಅಡಿ ಮರು ನಿರ್ಮಾಣ ಮಾಡಲಾಗುವುದು ಎಂದು ಪ್ರತಿಜ್ಞೆ ಮಾಡಿದ್ದಾರೆ.

    ಉನ್ನತಮಟ್ಟದ ತನಿಖೆ:
    ಕಾಡ್ಗಿಚ್ಚಿಗೆ ಕಾರಣವೇನು ಎಂಬುದನ್ನು ತಿಳಿಯಲು ಎಫ್‌ಬಿಐ ಮತ್ತು ಸ್ಥಳೀಯ ಅಧಿಕಾರಿಗಳ ತಂಡಗಳು ಸೇರಿ ಉನ್ನತ ಮಟ್ಟದ ತನಿಖೆಗೆ ಮುಂದಾಗಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿಮಾಡಿವೆ.

    ಪ್ರಮುಖ ಬೆಳವಣಿಗೆಗಳು:

    • ಕ್ಯಾಲಿಫೋರ್ನಿಯಾದ ಪಾಲಿಸೇಡ್ಸ್‌ ಪ್ರದೇಶವೊಂದರಲ್ಲೇ ಸುಟ್ಟು ಭಸ್ಮವಾದ ಭೂಪ್ರದೇಶದ ಪ್ರಮಾಣ 23,600 ಎಕ್ರೆಗೆ ಏರಿಕೆಯಾಗಿದೆ.
    • 12,000ಕ್ಕೂ ಹೆಚ್ಚು ಕಟ್ಟಡಗಳು ನಾಶವಾಗಿದೆ. ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದ್ದು, ಶ್ವಾನದಳದ ಮೂಲಕ ಶವಗಳ ಹುಟುಕಾಟ ಕಾರ್ಯನಡೆದಿದೆ. ಜ.7ರಂದು ಹೊತ್ತಿಕೊಂಡ ಕಾಡ್ಗಿಚ್ಚಿನಿಂದ ಈವರೆಗೆ ಅಂದಾಜು 150 ಶತಕೋಟಿ ಡಾಲರ್‌ನಷ್ಟು ಆರ್ಥಿಕ ನಷ್ಟ ಉಂಟಾಗಿದೆ.
    • ಬಿಸಿ ಗಾಳಿ, ಫೈರ್ನಾಡೋ (ಅಗ್ನಿ ಜ್ವಾಲೆ)ಗಳು ಮುಗಿಲೆತ್ತರಕ್ಕೆ ಚಿಮ್ಮುತ್ತಿದ್ದು, ವ್ಯಾಪ್ತಿಯನ್ನು ವಿಸ್ತರಿಸುತ್ತಲೇ ಇದೆ. ಅಮೆರಿಕದ ಇತಿಹಾಸದಲ್ಲೇ ಇದು ಕಂಡೂ ಕೇಳರಿಯದ ಕಾಡ್ಗಿಚ್ಚು ಎಂದು ಅಧಿಕಾರಿಗಳು ಬಣ್ಣಿಸಿದ್ದಾರೆ.
    • ಈಗಾಗಲೇ 1.53 ಲಕ್ಷ ಮಂದಿಯನ್ನು ಸ್ಥಳಾಂತರಿಸಲು ಆದೇಶ ನೀಡಲಾಗಿದೆ. ಅಲ್ಲದೇ ಇನ್ನೂ 57,000 ಕಟ್ಟಡಗಳು ಅಪಾಯದಲ್ಲಿವೆ. 1.66 ಲಕ್ಷ ಮಂದಿ ಸ್ಥಳಾಂತರಿಸುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ತಿಳಿದುಬಂದಿದೆ.
    • ಈ ಮಧ್ಯೆ ಕೆನಡಾ ಹಾಗೂ ಮೆಕ್ಸಿಕೋ ದೇಶಗಳು ಕ್ಯಾಲಿಫೋರ್ನಿಯಾದಲ್ಲಿ ಕಾಡ್ಗಿಚ್ಚು ನಂದಿಸಲು ನೆರವು ಚಾಚಿವೆ..

  • ಲಾಸ್‌ ಏಂಜಲೀಸ್‌ನಲ್ಲಿ ಕಾಡ್ಗಿಚ್ಚು – 57,000 ಕಟ್ಟಡ, 1.66 ಲಕ್ಷ ಮಂದಿಗೆ ಕಾದಿದೆ ಆಪತ್ತು

    ಲಾಸ್‌ ಏಂಜಲೀಸ್‌ನಲ್ಲಿ ಕಾಡ್ಗಿಚ್ಚು – 57,000 ಕಟ್ಟಡ, 1.66 ಲಕ್ಷ ಮಂದಿಗೆ ಕಾದಿದೆ ಆಪತ್ತು

    – ಸಾವಿನ ಸಂಖ್ಯೆ 13ಕ್ಕೆ ಏರಿಕೆ

    ವಾಷಿಂಗ್ಟನ್‌: ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ಹಬ್ಬಿರುವ ಕಾಡಿಚ್ಚು‌‌ (Los Angeles wildfire) ದಿನೇ ದಿನೇ ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಿದೆ. ಈವರೆಗೆ 13 ಜೀವಗಳು ಬಲಿಯಾಗಿದ್ದು, 12,000 ಕಟ್ಟಡಗಳು ಸುಟ್ಟು ಕರಕಲಾಗಿವೆ. ಅಗ್ನಿ ನರ್ತನ ಮುಂದುವರಿದಿರುವ ಕಾರಣ ಇನ್ನೂ 57,000 ಕಟ್ಟಡ (structures) ಸುಟ್ಟು ಭಸ್ಮವಾಗುವ, 1.66 ಲಕ್ಷ ಮಂದಿ ಸ್ಥಳಾಂತರವಾಗುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಹೌದು. ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಸತತ ಪ್ರಯತ್ನದಲ್ಲಿ ತೊಡಗಿದೆ. ಆದ್ರೆ ಮತ್ತೊಂದೆಡೆ 100 ಕಿಮೀ ವೇಗದಲ್ಲಿ ಬೀಸುತ್ತಿರುವ ಸಾಂಟಾ ಅನಾ ಚಂಡಮಾರುತ ಗಾಳಿಯು ಬೆಂಕಿ ಕೆನ್ನಾಲಿಗೆಯನ್ನು ಮತ್ತಷ್ಟು ಚಾಚಿಸುತ್ತಲೇ ಇದೆ. ಹೀಗಾಗಿ ಇನ್ನೂ ಸಾವಿರಾರು ಮನೆಗಳು ಹಾನಿಗೀಡಾಗುವ ಸಾಧ್ಯತೆಗಳಿವೆ. ಜೊತೆಗೆ ಇನ್ನೂ ಒಂದೂವರೆ ಲಕ್ಷಕ್ಕೂ ಅಧಿಕ ಮಂದಿಯನ್ನು ಸ್ಥಳಾಂತರಿಸಬೇಕಾಗಬಹುದು ಎಂದು ಮಾಹಿತಿ ನೀಡಿದ್ದಾರೆ.

    ಕಾಡ್ಗಿಚ್ಚು ಕದನ – ಪ್ರಮುಖ ಬೆಳವಣಿಗೆ

    • ಕ್ಯಾಲಿಫೋರ್ನಿಯಾದ ಪಾಲಿಸೇಡ್ಸ್‌ ಪ್ರದೇಶವೊಂದರಲ್ಲೇ 22,000ಕ್ಕೂ ಅಧಿಕ ಎಕರೆ ಭೂಪ್ರದೇಶ ಸುಟ್ಟು ಭಸ್ಮವಾಗಿದೆ. 426 ಮನೆಗಳೂ ಸೇರಿದಂತೆ 5,000ಕ್ಕೂ ಹೆಚ್ಚು ಕಟ್ಟಡಗಳು ನಾಶವಾಗಿದೆ. ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದ್ದು, ಶ್ವಾನದಳದ ಮೂಲಕ ಶವಗಳ ಹುಟುಕಾಟ ಕಾರ್ಯನಡೆದಿದೆ.
    • ಜ.7ರಂದು ಹೊತ್ತಿಕೊಂಡ ಕಾಡ್ಗಿಚ್ಚಿನಿಂದ ಈವರೆಗೆ 39,000 ಎಕರೆ ಭೂಪ್ರದೇಶ ಹಾನಿಯಾಗಿದೆ. ಅಂದಾಜು 150 ಶತಕೋಟಿ ಡಾಲರ್‌ನಷ್ಟು ಆರ್ಥಿಕ ನಷ್ಟ ಉಂಡಾಗಿದೆ.
    • ಬಿಸಿ ಗಾಳಿ, ಫೈರ್ನಾಡೋ (ಅಗ್ನಿ ಜ್ವಾಲೆ)ಗಳು ಮುಗಿಲೆತ್ತರಕ್ಕೆ ಚಿಮ್ಮುತ್ತಿದ್ದು, ವ್ಯಾಪ್ತಿಯನ್ನು ವಿಸ್ತರಿಸುತ್ತಲೇ ಇದೆ. ಅಮೆರಿಕದ ಇತಿಹಾಸದಲ್ಲೇ ಇದು ಕಂಡೂ ಕೇಳರಿಯದ ಕಾಡ್ಗಿಚ್ಚು ಎಂದು ಅಧಿಕಾರಿಗಳು ಬಣ್ಣಿಸಿದ್ದಾರೆ.
    • ಈಗಾಗಲೇ 1.53 ಲಕ್ಷ ಮಂದಿಯನ್ನು ಸ್ಥಳಾಂತರಿಸಲು ಆದೇಶ ನೀಡಲಾಗಿದೆ. ಅಲ್ಲದೇ ಇನ್ನೂ 57,000 ಕಟ್ಟಡಗಳು ಅಪಾಯದಲ್ಲಿವೆ. 1.66 ಲಕ್ಷ ಮಂದಿ ಸ್ಥಳಾಂತರಿಸುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ತಿಳಿದುಬಂದಿದೆ.
    • ಈ ಮಧ್ಯೆ ಕೆನಡಾ ಹಾಗೂ ಮೆಕ್ಸಿಕೋ ದೇಶಗಳು ಕ್ಯಾಲಿಫೋರ್ನಿಯಾದಲ್ಲಿ ಕಾಡ್ಗಿಚ್ಚು ನಂದಿಸಲು ನೆರವು ಚಾಚಿವೆ.