Tag: campaign

  • ಚಂಬಾ ಗಡ್ಡಿ ಸಾಂಪ್ರದಾಯಿಕ ಉಡುಗೆ ತೊಟ್ಟು ಮತಯಾಚಿಸಿದ ಕಂಗನಾ

    ಚಂಬಾ ಗಡ್ಡಿ ಸಾಂಪ್ರದಾಯಿಕ ಉಡುಗೆ ತೊಟ್ಟು ಮತಯಾಚಿಸಿದ ಕಂಗನಾ

    ಲೋಕಸಭಾ ಅಖಾಡದಲ್ಲಿರುವ ಕಂಗನಾ ರಣಾವತ್, ಬಿರುಸಿನ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಮತದಾರರನ್ನು ಸೆಳೆಯಲು, ಅವರದ್ದೇ ಆದ ರೀತಿಯಲ್ಲಿ ತಂತ್ರಗಳನ್ನು ರೂಪಿಸಿದ್ದಾರೆ. ಮಂಡಿ ಕ್ಷೇತ್ರದ ಭರ್ಮೌರ್ ಗೆ ಭೇಟಿ ನೀಡಿರುವ ಕಂಗನಾ, ಅಲ್ಲಿನ ಪುರಾತನ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಜೊತೆಗೆ ಚಂಬಾ ಗಡ್ಡಿ (Chamba Gaddi) ಸಮುದಾಯದ ಸಾಂಪ್ರದಾಯಿಕ ಉಡುಪನ್ನು ಧರಿಸಿ, ಮತಯಾಚನೆ ಮಾಡಿದ್ದಾರೆ.

    ಸದಾ ವಿವಾದಕ್ಕೆ ಸಿಲುಕಿಕೊಳ್ಳುವ ಕಂಗನಾ, ರಾಜಕೀಯ ಕ್ಷೇತ್ರದಲ್ಲೂ ಅದನ್ನು ಮುಂದುವರೆಸಿಸಿದ್ದಾರೆ. ಅವರ ಆಹಾರದ ವಿಚಾರ ಈ ರಾಜಕೀಯ ವಲಯದಲ್ಲಿ ಭಾರೀ ಸುದ್ದಿಯಾಗಿದೆ.  ಕಂಗನಾ ರಣಾವತ್ (Kangana Ranaut) ಅವರಿಗೆ ಗೋಮಾಂಸ (Beef) ಅಂದರೆ ಇಷ್ಟ. ಅವರೇ ಅದನ್ನು ಹೇಳಿಕೊಂಡಿದ್ದರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು ಕಾಂಗ್ರೆಸ್ ನಾಯಕ ವಿಜಯ್ ವಾಡೆತ್ತಿವಾರ್ (Vijay Vadettiwar). ಈ ಮಾತು ಪರ ವಿರೋಧಕ್ಕೆ ಕಾರಣವಾಗಿತ್ತು. ಕಂಗನಾ ಮೇಲೆಯೂ ಹಲವರು ಮುಗಿಬಿದ್ದಿದ್ದರು.

    ಮಾತು ವಿವಾದದ ಸ್ವರೂಪ ಪಡೆಯುತ್ತಿದ್ದಂತೆಯೇ ಕಂಗನಾ ಆ ಮಾತಿಗೆ ತಿರುಗೇಟು ನೀಡಿದ್ದಾರೆ. ನಾನು ಗೋಮಾಂಸ ಅಥವಾ ಇತರ ಯಾವುದೇ ರೀತಿಯ ಮಾಂಸವನ್ನು ಸೇವಿಸುವುದಿಲ್ಲ. ನನ್ನ ಬಗ್ಗೆ ಸಂಪೂರ್ಣವಾಗಿ ಆಧಾರರಹಿತ ವದಂತಿಗಳನ್ನು ಹರಡುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ನಾನು ಯೋಗ ಮತ್ತು ಆಯುರ್ವೇದವನ್ನು ಪ್ರತಿಪಾದಿಸುತ್ತಿದ್ದೇನೆ ಮತ್ತು ಪ್ರಚಾರ ಮಾಡುತ್ತಿದ್ದೇನೆ ಎಂದಿದ್ದಾರೆ.

     

    ವಿರೋಧಿಗಳ ಬಗ್ಗೆಯೂ ಕಟುವಾಗಿಯೇ ಮಾತನಾಡಿರುವ ಕಂಗನಾ, ಇಂತಹ ತಂತ್ರಗಳು ನನ್ನ ಇಮೇಜ್ ಹಾಳುಮಾಡಲು ಕೆಲಸ ಮಾಡುವುದಿಲ್ಲ. ನನ್ನ ಜನರು ನನ್ನ ಬಗ್ಗೆ ತಿಳಿದಿದ್ದಾರೆ ಮತ್ತು ನಾನು ಹೆಮ್ಮೆಯ ಹಿಂದೂ ಎಂದು ಅವರಿಗೆ ತಿಳಿದಿದೆ. ಯಾವುದೇ ಪ್ರಯತ್ನ ಅವರನ್ನು ದಾರಿ ತಪ್ಪಿಸುವುದಿಲ್ಲ ಜೈ ಶ್ರೀ ರಾಮ್ ಎಂದು ಬರೆದುಕೊಂಡಿದ್ದಾರೆ ನಟಿ, ಮಂಡಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಂಗನಾ.

  • ಪಕ್ಷದ ಪರವಲ್ಲ, ವ್ಯಕ್ತಿ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ: ನಟ ದರ್ಶನ್

    ಪಕ್ಷದ ಪರವಲ್ಲ, ವ್ಯಕ್ತಿ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ: ನಟ ದರ್ಶನ್

    ನಾನು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ನಾನು ಯಾವುದೇ ಪಕ್ಷದ ಪರವಾಗಿ ಪ್ರಚಾರ (Campaign) ಮಾಡುವುದಿಲ್ಲ. ವ್ಯಕ್ತಿಯ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು (Star Chandru) ಅವರಿಗೆ ಮತ ಹಾಕಿ ಎಂದು ನಟ ದರ್ಶನ್ (Darshan) ಹೇಳಿದರು. ಬೆಳಗ್ಗೆಯಿಂದ ಮಂಡ್ಯ ಕ್ಷೇತ್ರದಲ್ಲಿ ರೋಡ್ ಶೋ ಮತ್ತು ಮತಯಾಚನೆ ಮಾಡುತ್ತಿದ್ದಾರೆ ದರ್ಶನ್.

    ಹಲಗೂರಿನಲ್ಲಿ ಮಾತನಾಡಿದ ದರ್ಶನ್, ನಾನು ಯಾವುದೇ ಪಕ್ಷದ ಪರವಾಗಿ ಬರಲ್ಲ. ನಾನು ಬರೋದು ವ್ಯಕ್ತಿ ಪರವಾಗಿ. ಐದು ವರ್ಷದ ಹಿಂದೆ ನರೇಂದ್ರಸ್ವಾಮಿ ಸಹಾಯ ಮರೆಯಲ್ಲ. ಮೊದಲೇ ಶಾಸಕ ಉದಯ್ ಹೇಳಿದ್ರು ಸುಮಮ್ಮನಿಗೆ ಟಿಕೆಟ್ ಆಗಲಿಲ್ಲ. ಆದ್ರೆ ನಮಗೆ ಮಾಡಿ ಅಂದಿದ್ರು. ಮೊದಲು ಅವರು ಕೇಳಿದ ಕಾರಣ ನಾನು ಪ್ರಚಾರಕ್ಕೆ ಬಂದಿದ್ದೇನೆ. ಸ್ಟಾರ್ ಚಂದ್ರು ಅವರಿಗೆ ಎಲ್ಲರೂ ಮತ ಹಾಕಿ ಎಂದಿದ್ದಾರೆ.

     

    ಹಲಗೂರು ಗ್ರಾಮಕ್ಕೆ ದರ್ಶನ್ ಬರುತ್ತಿದ್ದಂತೆಯೇ ಅಭಿಮಾನಿಗಳಿಂದ ಜೈಕಾರ ಕೇಳಿ ಬಂತು. ಡಿ ಬಾಸ್ ಡಿ ಬಾಸ್ ಘೋಷಣೆ ಮೊಳಗಿಸಿ ಸಂಭ್ರಮಿಸಿದ್ದಾರೆ ಅಭಿಮಾನಿಗಳು. ಬೃಹತ್ ಗುಲಾಬಿ ಹೂವಿನ ಹಾರ ಸಮರ್ಪಣೆ ಕೂಡ ಮಾಡಿದ್ದಾರೆ. ಕ್ರೇನ್ ಮೂಲಕ ಬೃಹತ್ ಹಾರ ಹಾಕಿ ನೆಚ್ಚಿನ ನಟನಿಗೆ ಸ್ವಾಗತ ನೀಡಿದ್ದಾರೆ.

  • ಗೆಲುವಿಗಾಗಿ ಪ್ರಚಾರದ ಅಖಾಡಕ್ಕೆ ಧುಮುಕಿದ ಹೆಚ್‌ಡಿಕೆ – ಒಕ್ಕಲಿಗ, ಲಿಂಗಾಯತ ವೋಟ್‌ಬ್ಯಾಂಕ್ ಕಬ್ಜಕ್ಕೆ ಕ್ಯಾಂಪೇನ್

    ಗೆಲುವಿಗಾಗಿ ಪ್ರಚಾರದ ಅಖಾಡಕ್ಕೆ ಧುಮುಕಿದ ಹೆಚ್‌ಡಿಕೆ – ಒಕ್ಕಲಿಗ, ಲಿಂಗಾಯತ ವೋಟ್‌ಬ್ಯಾಂಕ್ ಕಬ್ಜಕ್ಕೆ ಕ್ಯಾಂಪೇನ್

    ಮಂಡ್ಯ: ಸಕ್ಕರೆ ನಾಡು ಮಂಡ್ಯ (Mandya) ಲೋಕಸಭಾ ಅಖಾಡದಲ್ಲಿ ಗೆಲುವು ಸಾಧಿಸಲು ಮೈತ್ರಿ ಅಭ್ಯರ್ಥಿ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಇಂದಿನಿಂದ ಅಖಾಡಕ್ಕೆ ಧುಮುಕುತ್ತಿದ್ದಾರೆ. ಇಂದಿನಿಂದ ಮಂಡ್ಯದಲ್ಲಿ ಪ್ರಚಾರ ಸಭೆಗಳನ್ನು ಮಾಡುವ ಮೂಲಕ ಮತ ಬೇಟೆಗೆ ಹೆಚ್‌ಡಿಕೆ ಮುಂದಾಗಿದ್ದಾರೆ.

    ಇಷ್ಟು ದಿನ ರಣರಣ ಬಿಸಿಲಿನ ನಡುವೆಯೂ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಉರುಫ್ ಸ್ಟಾರ್ ಚಂದ್ರು (Star Chandru) ಸಚಿವರು ಹಾಗೂ ಶಾಸಕರ ಜೊತೆಗೂಡಿ ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಳ್ಳಿಗಳಲ್ಲಿ ಭರ್ಜರಿ ಕ್ಯಾಂಪೇನ್ ಮಾಡಿದ್ದರು. ಈ ನಡುವೆ ಇಷ್ಟು ದಿನಗಳ ಕಾಲ ಸೈಲೆಂಟ್ ಆಗಿಯೇ ಇದ್ದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಚ್‌ಡಿ ಕುಮಾರಸ್ವಾಮಿ ಇಂದಿನಿಂದ ಮಂಡ್ಯ ಅಖಾಡದಲ್ಲಿ ಮತ ಶಿಕಾರಿಗೆ ಧುಮುಕಿದ್ದಾರೆ. ಇಂದು ಮಂಡ್ಯ ಲೋಕಸಭಾ ಕ್ಷೇತ್ರದ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕುಮಾರಸ್ವಾಮಿ ಬಿಜೆಪಿ-ಜೆಡಿಎಸ್ ನಾಯಕರೊಂದಿಗೆ ಸಮಾವೇಶ ನಡೆಸಲಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ಗೆ ಸೇರ್ಪಡೆ ಆಗ್ತಾರಾ ಕರಡಿ ಸಂಗಣ್ಣ?- ಲಕ್ಷ್ಮಣ ಸವದಿ ಭೇಟಿ ಬೆನ್ನಲ್ಲೇ ಕುತೂಹಲ

    ಮಳವಳ್ಳಿಯ ಕನಕ ಕ್ರೀಡಾಂಗಣದಲ್ಲಿ ನಡೆಯುವ ಮೈತ್ರಿ ಚುನಾವಣಾ ಸಮಾವೇಶದಲ್ಲಿ ಒಕ್ಕಲಿಗ ಮತಗಳನ್ನು ಕುಮಾರಸ್ವಾಮಿ ಸೆಳೆದರೆ, ಲಿಂಗಾಯತ ಮತಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಕುರುಬ ಸಮುದಾಯದ ಮತಗಳನ್ನು ಹೆಚ್.ವಿಶ್ವನಾಥ್ ಸೆಳೆಯಲಿದ್ದಾರೆ. ಇಲ್ಲದೇ ದಲಿತ ಸಮುದಾಯ ಮತಗಳಿಗಾಗಿ ಮಾಜಿ ಶಾಸಕ ಅನ್ನದಾನಿ ಸೇರಿದಂತೆ ಇತರ ದಲಿತ ಮುಖಂಡರು ಕುಮಾರಸ್ವಾಮಿ ಪರ ಮತಯಾಚನೆ ಮಾಡಲಿದ್ದಾರೆ. ಇದನ್ನೂ ಓದಿ: ಎಲ್ಲರೂ ಪಶ್ಚಾತ್ತಾಪ ಪಡುತ್ತಾರೆ- ಚುನಾವಣಾ ಬಾಂಡ್ ಸಮರ್ಥಿಸಿಕೊಂಡ ಪ್ರಧಾನಿ ಮೋದಿ

    ಇಷ್ಟು ದಿನ ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಬಿರುಸಿನ ಪ್ರಚಾರ ಮಾಡುತ್ತಿದ್ದರು. ಇದೀಗ ಸಕ್ಕರೆ ನಾಡಿಗೆ ಕುಮಾರಸ್ವಾಮಿ ಎಂಟ್ರಿ ಕೊಟ್ಟಿದ್ದು, ಅಬ್ಬರದ ಸಮಾವೇಶಗಳನ್ನು ನಡೆಸಲಿದ್ದಾರೆ. ಮತದಾರ ಪ್ರಭು ಯಾರ ಕಡೆ ಒಲವು ತೋರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: Lok sabha Elections 2024- ಅಸ್ಸಾಂನ ಈ ಕುಟುಂಬದಲ್ಲಿದ್ದಾರೆ 350 ಮಂದಿ ಮತದಾರರು!

  • ರಾಜ್ಯದ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣೆ ಪ್ರಚಾರಕ್ಕೆ ಪವರ್ ಸ್ಟಾರ್ ಎಂಟ್ರಿ

    ರಾಜ್ಯದ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣೆ ಪ್ರಚಾರಕ್ಕೆ ಪವರ್ ಸ್ಟಾರ್ ಎಂಟ್ರಿ

    ಲೋಕಸಭಾ (Lok Sabha) ಚುನಾವಣೆ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಸ್ಟಾರ್ ಪ್ರಚಾರಕರ್ತರು (Campaign) ತಮ್ಮ ಪಕ್ಷ ಮತ್ತು ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರವನ್ನು ಮಾಡುತ್ತಿದ್ದಾರೆ. ಈ ನಡುವೆ ತೆಲುಗಿನ ಖ್ಯಾತ ನಟ, ರಾಜಕಾರಣಿ ಪವರ್ ಸ್ಟಾರ್ ಪವನ್ ಕಲ್ಯಾಣ್ (Pawan Kalyan) ಬಳ್ಳಾರಿಗೆ ಬರಲಿದ್ದಾರೆ. ಗಡಿನಾಡಿನಲ್ಲಿ ಅವರು ಪವರ್ ಪ್ರಚಾರ ಮಾಡಲಿದ್ದಾರೆ.

    ಆಂಧ್ರದ ಗಡಿ ಭಾಗದ ಕ್ಷೇತ್ರಗಳ ಮತದಾರರನ್ನು ಸೆಳೆಯುವುದಕ್ಕಾಗಿ ಬಿಜೆಪಿ ಪಕ್ಷ ಪವನ್ ಕಲ್ಯಾಣ್ ಅವರನ್ನು ಬಳಸಿಕೊಳ್ಳುತ್ತಿದೆ. ಕರ್ನಾಟಕ ರಾಜ್ಯದ ಬಿಜೆಪಿ ಅಭ್ಯರ್ಥಿಗಳ ಪರ ಪವನ್ ಪ್ರಚಾರ ಮಾಡಲಿದ್ದಾರೆ. ಏಪ್ರಿಲ್ 17ರಂದು ಅವರು ಕರ್ನಾಟಕದ ಗಡಿ ಭಾಗದ ಜನರ ಮುಂದೆ ಇರಲಿದ್ದಾರೆ.

     

    ಏಪ್ರಿಲ್ 17ರಂದು ರಾಯಚೂರು, ಬಳ್ಳಾರಿ(Bellary), ಚಿಕ್ಕಬಳ್ಳಾಪುರ ಬಳಿಕೆ ಬೆಂಗಳೂರಿನಲ್ಲಿ ರೋಡ್ ಷೋ ಆಯೋಜನೆ ಆಗಿದ್ದು, ಬಳ್ಳಾರಿಯ ರಾಯಲ್ ವೃತ್ತದಿಂದ ಎಪಿಎಂಸಿ ವೃತ್ತದವರೆಗೂ ಶ್ರೀರಾಮುಲು ಪರ ಬಳ್ಳಾರಿಯಲ್ಲಿ ಪವನ್ ಮತಯಾಚನೆ ಮಾಡಲಿದ್ದಾರೆ.

  • ಚುನಾವಣಾ ಬಹಿರಂಗ ಪ್ರಚಾರಕ್ಕೆ ತೆರೆ – ಇನ್ನೇನಿದ್ದರೂ ಮನೆಮನೆ ಪ್ರಚಾರ

    ಚುನಾವಣಾ ಬಹಿರಂಗ ಪ್ರಚಾರಕ್ಕೆ ತೆರೆ – ಇನ್ನೇನಿದ್ದರೂ ಮನೆಮನೆ ಪ್ರಚಾರ

    ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿರುವ, ಮುಂದಿನ ಲೋಕಸಭೆ ಚುನಾವಣೆ (Lok Sabha Election) ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿರುವ ಜಿದ್ದಾಜಿದ್ದಿನ ಅಖಾಡ ಕರ್ನಾಟಕ ವಿಧಾನಸಭೆ ಚುನಾವಣೆಯ (Karnataka Assembly Election) ಮೊದಲ ಅಂಕಕ್ಕೆ ಇಂದು ತೆರೆ ಬಿದ್ದಿದೆ.

    ಬುಧವಾರ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಆರು ಗಂಟೆಗೆ ಬಹಿರಂಗ ಪ್ರಚಾರಕ್ಕೆ (Campaign) ತೆರೆ ಬಿದ್ದಿದೆ. ಸ್ಥಳೀಯರಲ್ಲದ ನಾಯಕರು ಕ್ಷೇತ್ರಗಳನ್ನು ತೊರೆದರೆ ರಾಷ್ಟ್ರೀಯ ಮುಖಂಡರು ರಾಜ್ಯವನ್ನು ತೊರೆದಿದ್ದಾರೆ. ಇನ್ನು ಏನೇ ಇದ್ದರೂ ಮನೆ ಮನೆ ಪ್ರಚಾರದ ಆಟವಷ್ಟೇ ಬಾಕಿ ಉಳಿದಿದೆ. ಇದನ್ನೂ ಓದಿ: ಕೊಡಗು-ಕೇರಳ ಗಡಿಯಲ್ಲಿ ನಕ್ಸಲ್ ನಿಗ್ರಹ ಪಡೆಯ ಪೊಲೀಸರು ಕೂಂಬಿಂಗ್

    ಚುನಾವಣಾ ಅಧಿಸೂಚನೆ ಹೊರಬಿದ್ದ ಮೇ 13ರಿಂದ ಇವತ್ತು ಸಂಜೆ 6 ಗಂಟೆಯವರೆಗೆ ಮತದಾರನ ಓಲೈಕೆಗಾಗಿ ಕೇಂದ್ರ, ರಾಜ್ಯ ನಾಯಕರು ಇನ್ನಿಲ್ಲದ ಕಸರತ್ತು ನಡೆಸಿದರು. ಇದನ್ನೂ ಓದಿ: ರಾಜಸ್ಥಾನದಲ್ಲಿ ಬೃಹತ್ ಲಿಥಿಯಂ ನಿಕ್ಷೇಪ ಪತ್ತೆ – ಇದಕ್ಕಿದೆ ಭಾರತದ 80% ಬೇಡಿಕೆ ಪೂರೈಸುವ ಸಾಮರ್ಥ್ಯ

    ರಾಜ್ಯದಲ್ಲಿ ಮದ್ಯ ಮಾರಾಟ ಬಂದ್ ಆಗಿದ್ದು, ಮುಂದಿನ ಮೂರು ದಿನ ಮದ್ಯ ಸಿಗುವುದಿಲ್ಲ. ಸುಗಮ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ದತೆಗಳನ್ನು ನಡೆಸಿದೆ. ಮಂಗಳವಾರ ಚುನಾವಣಾ ಸಿಬ್ಬಂದಿ ಮತಯಂತ್ರಗಳೊಂದಿಗೆ ನಿಗದಿತ ಮತಗಟ್ಟೆಗಳಿಗೆ ಎಂಟ್ರಿ ಕೊಡಲಿದ್ದಾರೆ.

  • ಕಿಚ್ಚನಿಗೆ ಬೆದರಿಕೆ ಪತ್ರ: ಸುದೀಪ್ ನೀಡಿದ ಅಚ್ಚರಿಕೆ ಪ್ರತಿಕ್ರಿಯೆ

    ಕಿಚ್ಚನಿಗೆ ಬೆದರಿಕೆ ಪತ್ರ: ಸುದೀಪ್ ನೀಡಿದ ಅಚ್ಚರಿಕೆ ಪ್ರತಿಕ್ರಿಯೆ

    ಟ ಸುದೀಪ್ (Sudeep) ಅವರಿಗೆ ಬೆದರಿಕೆ ಪತ್ರ ಬಂದು ಒಂದು ತಿಂಗಳು ಕಳೆದಿದೆ. ಅವರು ದೂರು ದಾಖಲಿಸಿ 25 ದಿನಕ್ಕೂ ಹೆಚ್ಚು ದಿನಗಳು ಉರುಳಿವೆ. ಪತ್ರ ಬರೆದವರ ಬೆನ್ನತ್ತಿರುವ ಸಿಸಿಬಿಗೆ ಈವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ. ಆದರೂ, ತಮ್ಮ ಪ್ರಯತ್ನವನ್ನು ಅವರು ನಿಲ್ಲಿಸಿಲ್ಲ. ಈ ಕುರಿತು ಇದೇ ಮೊದಲ ಬಾರಿಗೆ ಕಿಚ್ಚು ಸುದೀಪ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಚುನಾವಣಾ ಪ್ರಚಾರಕ್ಕೆ ಹೊರಡುತ್ತಿರುವ ಸಂದರ್ಭದಲ್ಲಿ ಬೆದರಿಕೆ ಪತ್ರದ ಬಗ್ಗೆ ಮಾತನಾಡಿದ್ದಾರೆ.

    ಬೆದರಿಕೆಯ ಪತ್ರದ (Threat letter) ಬಗ್ಗೆ ಮಾತನಾಡಿದ ಸುದೀಪ್, ‘ನಂಗೆ ತುಂಬಾ ಲವ್ ಲೇಟರ್ ಗಳು ಬರ್ತಾ ಇರ್ತಾವೆ. ಅದಕ್ಕೆಲ್ಲಾ ತಲೆಕೆಡಿಸಿಕೊಳ್ಳೋಕೆ ಆಗಲ್ಲ’ ಎಂದು ಚುಟುಕಾಗಿ ಉತ್ತರಿಸಿದ್ದಾರೆ. ಈ ಮೂಲಕ ಪತ್ರ ಬರೆದವರ ಬಗ್ಗೆ ಕೇರ್ ಮಾಡುವುದಿಲ್ಲ ಎಂದು ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ. ‘ಆ ವಿಚಾರದಲ್ಲಿ ತನಿಖೆ ನಡೆಯುತ್ತಿದೆ. ನನ್ನ ಪಾಡಿಗೆ ನಾನು ಇವತ್ತಿನಿಂದ ಪ್ರಚಾರಕ್ಕೆ ಹೋಗ್ತಾ ಇದೀನಿ’ ಎಂದಿದ್ದಾರೆ.

    ಇಂದಿನಿಂದ ಸುದೀಪ್ ಬಿಜೆಪಿ (BJP) ಅಭ್ಯರ್ಥಿಗಳ ಪರವಾಗಿ ಮತಯಾಚನೆ (Campaign) ಮಾಡುತ್ತಿದ್ದಾರೆ.  ಬೆಂಗಳೂರಿನಿಂದ ಹೊರಡುವ ಇವರ ಪಯಣ ಮೊದಲು ಮೊಳಕಾಲ್ಮೂರು (Molakalmuru) ಕ್ಷೇತ್ರದಿಂದ ಪ್ರಚಾರ ಆರಂಭಿಸಲಿದೆ. ಬೆಳಗ್ಗೆ 10.15ಕ್ಕೆ ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್. ತಿಪ್ಪೇಸ್ವಾಮಿ ಪರವಾಗಿ ಕಿಚ್ಚ ಮತಯಾಚನೆ ಮಾಡಲಿದ್ದಾರೆ. ಇದನ್ನೂ ಓದಿ: ವಿಜಯ್‌ ವರ್ಮಾ ಜೊತೆ KGF ನಟಿ ತಮನ್ನಾ ಡಿನ್ನರ್‌ ಡೇಟ್‌

    ಮೊಳಕಾಲ್ಮೂರು ಕ್ಷೇತ್ರದಿಂದ ನೇರವಾಗಿ ಜಗಳೂರು ಕ್ಷೇತ್ರದತ್ತ ಹೆಲಿಕಾಪ್ಟರ್ ನಲ್ಲೇ ಪ್ರಯಾಣ ಮುಂದುವರೆಸುವ ಸುದೀಪ್ 12.30ಕ್ಕೆ ಜಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ರಾಮಚಂದ್ರ ಅವರ ಪರವಾಗಿ ರೋಡ್ ಶೋ ನಡೆಸಲಿದ್ದಾರೆ. ಒಂದು ಗಂಟೆಗೂ ಅಧಿಕ ಕಾಲ ಅವರು ರೋಡ್ ಶೋ ಮಾಡಲಿದ್ದಾರೆ.

    ಜಗಳೂರು (Jagaluru) ರೋಡ್ ಶೋ ಮುಗಿಸಿಕೊಂಡು ಊಟದ ನಂತರ ಸುದೀಪ್, ಮಾಯಕೊಂಡ (Mayakonda) ಕ್ಷೇತ್ರದತ್ತ ಪ್ರಯಾಣ ಬೆಳೆಸಲಿದ್ದಾರೆ. ಮಧ್ಯಾಹ್ನ 3.10ಕ್ಕೆ ಮಾಯಕೊಂಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ನಾಯ್ಕ ಪರವಾಗಿ ಸುದೀಪ್ ಮತಯಾಚನೆ ಮಾಡಲಿದ್ದಾರೆ. ಅಲ್ಲದೇ, ಸರಕಾರಿ ಕಾಲೇಜು ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲೂ ಅವರು ಭಾಗಿಯಾಗಲಿದ್ದಾರೆ.

    ಮಾಯಕೊಂಡದಿಂದ ಸುದೀಪ್ ದಾವಣಗೆರೆಗೆ (Davangere) ತೆರಳಲಿದ್ದು, ದಾವಣಗೆರೆಯ ಸೌತ್ ಮತ್ತು ನಾರ್ತ್ ಕ್ಷೇತ್ರಗಳ ಅಭ್ಯರ್ಥಿಗಳಾದ ಲೊಕ್ಕಿಕೆರೆ ನಾಗರಾಜ ಹಾಗೂ ಬಿ.ಜಿ. ಅಜಯ್ ಕುಮಾರ್ ಪರವಾಗಿ ಸಂಜೆ 4.20ಕ್ಕೆ ರೋಡ್ ಶೋ ಮೂಲಕ ಮತಯಾಚನೆ ಮಾಡಲಿದ್ದಾರೆ. ಅಲ್ಲಿಂದ ನೇರವಾಗಿ ಸಂಡೂರಿಗೆ ತೆರಳಿ ಸಂಡೂರು (Sandur) ಬಿಜೆಪಿ ಅಭ್ಯರ್ಥಿ ಶಿಲ್ಪಾ ನಾಗೇಂದ್ರ ಪರವಾಗಿ ಸಂಜೆ 6.10ಕ್ಕೆ ರೋಡ್ ಶೋ ಮೂಲಕ ಮತಯಾಚನೆ ಮಾಡಲಿದ್ದಾರೆ.

  • ನಾಳೆ ಸುದೀಪ್ ಎಲ್ಲೆಲ್ಲಿ ಸಿಗ್ತಾರೆ? ಪ್ರಚಾರದ ರೂಟ್ ಮ್ಯಾಪ್ ರಿಲೀಸ್

    ನಾಳೆ ಸುದೀಪ್ ಎಲ್ಲೆಲ್ಲಿ ಸಿಗ್ತಾರೆ? ಪ್ರಚಾರದ ರೂಟ್ ಮ್ಯಾಪ್ ರಿಲೀಸ್

    ಳೆದ ವಾರವಷ್ಟೇ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ಪ್ರಚಾರಕ್ಕಾಗಿ ಶಿಗ್ಗಾಂವಿಗೆ ತೆರಳಿದ್ದ ನಟ ಕಿಚ್ಚ ಸುದೀಪ್ (Sudeep) ನಾಳೆ ಹಲವು ಊರುಗಳಲ್ಲಿ ಬಿಜೆಪಿ (BJP) ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲಿದ್ದಾರೆ. ಬೊಮ್ಮಾಯಿ ಮಾಮ ಸೂಚಿಸಿದ ಊರುಗಳಿಗೆ ಹೋಗಿ ಪ್ರಚಾರ ಮಾಡುತ್ತೇನೆ ಎಂದಿದ್ದ ಕಿಚ್ಚ ಕೊಟ್ಟ ಮಾತಿನಂತೆ ನಾಳೆಯಿಂದ ಭರ್ಜರಿ ಪ್ರಚಾರ (campaign) ಮಾಡಲಿದ್ದಾರೆ. ಕಿಚ್ಚನಿಗಾಗಿಯೇ ಹೆಲಿಕಾಪ್ಟರ್ ಸಿದ್ಧಗೊಂಡಿದೆ.

    ನಾಳೆ ಸುದೀಪ್ ಯಾವೆಲ್ಲ ಊರಿಗೆ ಹೋಗಬೇಕು ಮತ್ತು ಯಾರ ಪರವಾಗಿ ಪ್ರಚಾರ ಮಾಡಬೇಕು ಎನ್ನುವುದರ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಬೆಂಗಳೂರಿನಿಂದ ಹೊರಡುವ ಕಿಚ್ಚ, ನಾಳೆಯೇ ಐದು ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ ಮಾಡಲಿದ್ದಾರೆ. ಬೆಂಗಳೂರಿನಿಂದ ಹೊರಡುವ ಇವರ ಪಯಣ ಮೊದಲು ಮೊಳಕಾಲ್ಮೂರು ಕ್ಷೇತ್ರದಿಂದ ಪ್ರಚಾರ ಆರಂಭಿಸಲಿದೆ. ಬೆಳಗ್ಗೆ 10.15ಕ್ಕೆ ಮೊಳಕಾಲ್ಮೂರು (Molakalmuru) ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್. ತಿಪ್ಪೇಸ್ವಾಮಿ ಪರವಾಗಿ ಕಿಚ್ಚ ಮತಯಾಚನೆ ಮಾಡಲಿದ್ದಾರೆ.

    ಮೊಳಕಾಲ್ಮೂರು ಕ್ಷೇತ್ರದಿಂದ ನೇರವಾಗಿ ಜಗಳೂರು (Jagaluru) ಕ್ಷೇತ್ರದತ್ತ ಹೆಲಿಕಾಪ್ಟರ್ ನಲ್ಲೇ ಪ್ರಯಾಣ ಮುಂದುವರೆಸುವ ಸುದೀಪ್ 12.30ಕ್ಕೆ ಜಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ರಾಮಚಂದ್ರ ಅವರ ಪರವಾಗಿ ರೋಡ್ ಶೋ ನಡೆಸಲಿದ್ದಾರೆ. ಒಂದು ಗಂಟೆಗೂ ಅಧಿಕ ಕಾಲ ಅವರು ರೋಡ್ ಶೋ ಮಾಡಲಿದ್ದಾರೆ. ಇದನ್ನೂ ಓದಿ:ವಿಜಯ್‌ ವರ್ಮಾ ಜೊತೆ KGF ನಟಿ ತಮನ್ನಾ ಡಿನ್ನರ್‌ ಡೇಟ್‌

    ಜಗಳೂರು ರೋಡ್ ಶೋ ಮುಗಿಸಿಕೊಂಡು ಊಟದ ನಂತರ ಸುದೀಪ್, ಮಾಯಕೊಂಡ (Mayakonda) ಕ್ಷೇತ್ರದತ್ತ ಪ್ರಯಾಣ ಬೆಳೆಸಲಿದ್ದಾರೆ. ಮಧ್ಯಾಹ್ನ 3.10ಕ್ಕೆ ಮಾಯಕೊಂಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ನಾಯ್ಕ ಪರವಾಗಿ ಸುದೀಪ್ ಮತಯಾಚನೆ ಮಾಡಲಿದ್ದಾರೆ. ಅಲ್ಲದೇ, ಸರಕಾರಿ ಕಾಲೇಜು ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲೂ ಅವರು ಭಾಗಿಯಾಗಲಿದ್ದಾರೆ.

    ಮಾಯಕೊಂಡದಿಂದ ಸುದೀಪ್ ದಾವಣಗೆರೆಗೆ (Davangere) ತೆರಳಲಿದ್ದು, ದಾವಣಗೆರೆಯ ಸೌತ್ ಮತ್ತು ನಾರ್ತ್ ಕ್ಷೇತ್ರಗಳ ಅಭ್ಯರ್ಥಿಗಳಾದ ಲೊಕ್ಕಿಕೆರೆ ನಾಗರಾಜ ಹಾಗೂ ಬಿ.ಜಿ. ಅಜಯ್ ಕುಮಾರ್ ಪರವಾಗಿ ಸಂಜೆ 4.20ಕ್ಕೆ ರೋಡ್ ಶೋ ಮೂಲಕ ಮತಯಾಚನೆ ಮಾಡಲಿದ್ದಾರೆ. ಅಲ್ಲಿಂದ ನೇರವಾಗಿ ಸಂಡೂರಿಗೆ ತೆರಳಿ ಸಂಡೂರು (Sandur) ಬಿಜೆಪಿ ಅಭ್ಯರ್ಥಿ ಶಿಲ್ಪಾ ನಾಗೇಂದ್ರ ಪರವಾಗಿ ಸಂಜೆ 6.10ಕ್ಕೆ ರೋಡ್ ಶೋ ಮೂಲಕ ಮತಯಾಚನೆ ಮಾಡಲಿದ್ದಾರೆ.

  • 9 ದಿನದ ಬ್ರೇಕ್ ಬಳಿಕ ಜೋಡೋ ಯಾತ್ರೆ ಪುನರಾರಂಭ

    9 ದಿನದ ಬ್ರೇಕ್ ಬಳಿಕ ಜೋಡೋ ಯಾತ್ರೆ ಪುನರಾರಂಭ

    ಲಕ್ನೋ: ಕಾಂಗ್ರೆಸ್‌ನ (Congress) ಭಾರತ್ ಜೋಡೋ ಯಾತ್ರೆ (Bharat Jodo Yatra) ಉತ್ತರ ಪ್ರದೇಶದಲ್ಲಿ 9 ದಿನಗಳ ಚಳಿಗಾಲದ ವಿರಾಮ ಪಡೆದು ಇಂದು ಮತ್ತೆ ಪುನರಾರಂಭವಾಗುತ್ತಿದೆ.

    ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲಿ ನಡೆಯುತ್ತಿರುವ ಜೋಡೋ ಯಾತ್ರೆ 110 ದಿಗಳಿಗಿಂತಲೂ ಹೆಚ್ಚು ಕಳೆದಿದ್ದು, ಸುಮಾರು 2,000 ಕಿ.ಮೀ ಕ್ರಮಿಸಿದೆ. ದಕ್ಷಿಣದ ರಾಜ್ಯದಿಂದ ಪ್ರಾರಂಭವಾದ ಪಾದಯಾತ್ರೆ ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಹೊರಟು ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ ಹಾಗೂ ಹರಿಯಾಣದಲ್ಲಿ ಸಂಚರಿಸಿದೆ.

    ಯಾತ್ರೆ ಜಮ್ಮು ಕಾಶ್ಮೀರದಲ್ಲಿ ಅಂತ್ಯಗೊಳ್ಳಲಿದೆ. ಇದು ಭಾರತದ ಇತಿಹಾಸದಲ್ಲೇ ಯಾವುದೇ ಭಾರತೀಯ ರಾಜಕಾರಣಿ ನಡೆಸಿರುವ ಅತಿ ಉದ್ದದ ಮೆರವಣಿಗೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ. ಜನವರಿ 26 ರಂದು ಯಾತ್ರೆ ಶ್ರೀನಗರ ತಲುಪಲಿದ್ದು, ಅಲ್ಲಿ ಕೊನೆಗೊಳ್ಳಲಿದೆ.

    ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಯನ್ನು ಕೊನೆಗೊಳಿಸಿದ ಬಳಿಕ ಪಕ್ಷದ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಗುರಿಯನ್ನು ರಾಹುಲ್ ಗಾಂಧಿ ಹೊಂದಿದ್ದಾರೆ. ದೇಶಾದ್ಯಂತ ಯಾತ್ರೆಯ ಸಂದೇಶವನ್ನು ಹರಡುವ ಉದ್ದೇಶದಿಂದ ‘ಹಾಥ್ ಸೆ ಹಾಥ್ ಜೋಡೋ’ (Haath Se Haath Jodo) ಅಭಿಯಾನವನ್ನು (Campaign) ಪ್ರಾರಂಭಿಸಲು ಕಾಂಗ್ರೆಸ್ ಯೋಜಿಸಿದೆ. ಇದನ್ನೂ ಓದಿ: ಸಿದ್ಧೇಶ್ವರ ಶ್ರೀ ಲಿಂಗೈಕ್ಯ – ಕನ್ನಡದಲ್ಲೇ ಟ್ವೀಟ್‌ ಮಾಡಿ ಪ್ರಧಾನಿ ಮೋದಿ ಸಂತಾಪ

    ಮೂಲಗಳ ಪ್ರಕಾರ ರಾಹುಲ್ ಸಹೋದರಿ, ಎಐಸಿಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ದೇಶಾದ್ಯಂತ ‘ಹಾಥ್ ಸೆ ಹಾಥ್ ಜೋಡೋ’ ಅಭಿಯಾನವನ್ನು ಮುನ್ನಡೆಸುವ ಜವಾಬ್ದಾರಿಯನ್ನು ವಹಿಸಲಾಗಿದೆ. ಮುಖ್ಯವಾಗಿ ಮಹಿಳೆಯರನ್ನು ಕೇಂದ್ರೀಕರಿಸುವುದು ಇದರ ಉದ್ದೇಶವಾಗಿದೆ.

    ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮಾತನಾಡಿ, ಭಾರತ್ ಜೋಡೋ ಯಾತ್ರೆಯ ಬಳಿಕ ಕಾಂಗ್ರೆಸ್ 2 ತಿಂಗಳ `ಹಾಥ್ ಸೆ ಹಾಥ್’ ಜೋಡೋ ಅಭಿಯಾನ ಆರಂಭಿಸಲಿದೆ ಎಂದು ತಿಳಿಸಿದ್ದಾರೆ.

    ಮಹಿಳೆಯರಿಗೆ ಸಂಬಂಧಿಸಿದ ಇತರ ಸಮಸ್ಯೆಗಳು ಕೂಡ ಅಭಿಯಾನದಲ್ಲಿ ಪ್ರಮುಖ ವಿಷಯವಾಗಿರಲಿದೆ. ದೇಶದ ಜನಸಂಖ್ಯೆಯ ಸರಿಸುಮಾರು ಅರ್ಧದಷ್ಟು ಭಾಗವನ್ನು ಒಳಗೊಂಡಿರುವ ಮಹಿಳಾ ಮತದಾರರನ್ನು ಓಲೈಸುವ ಗುರಿಯನ್ನು ಪಕ್ಷ ಹೊಂದಿದೆ ಎನ್ನಲಾಗಿದೆ. ಇದನ್ನೂ ಓದಿ: ವಿಜಯಪುರ: ಸಿದ್ಧೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಸೈನಿಕ ಶಾಲೆಯತ್ತ ಭಕ್ತಸಾಗರ

    Live Tv
    [brid partner=56869869 player=32851 video=960834 autoplay=true]

  • ಹೆಣ್ಣುಮಕ್ಕಳಿಗೆ ಶಿಕ್ಷಣ ಕೊಡಿ ಎಂದು ಹೆಸರು ಉಲ್ಟಾ ಹಾಕಿದ ರಶ್ಮಿಕಾ ಮಂದಣ್ಣ

    ಹೆಣ್ಣುಮಕ್ಕಳಿಗೆ ಶಿಕ್ಷಣ ಕೊಡಿ ಎಂದು ಹೆಸರು ಉಲ್ಟಾ ಹಾಕಿದ ರಶ್ಮಿಕಾ ಮಂದಣ್ಣ

    ನ್ಯಾಷಿನಲ್ ಕ್ರಶ್ ರಶ್ಮಿಕಾ ಮಂದಣ್ಣ ಇನ್ಸ್ಟಾಗ್ರಾಮ್ ಪೇಜ್ ನೋಡಿದವರು ಅಚ್ಚರಿ ಮತ್ತು ಕುತೂಹಲದಿಂದ ಆ ಪೋಸ್ಟ್ ಅನ್ನು ನೋಡಿದ್ದರು. ರಶ್ಮಿಕಾ ತಮ್ಮ ಹೆಸರನ್ನು ಉಲ್ಟಾ ಬರೆಯುವುದರ ಮೂಲಕ ಎಲ್ಲರಲ್ಲೂ ಪ್ರಶ್ನೆ ಮೂಡಿಸಿದ್ದರು. ಈ ರೀತಿ ಪೋಸ್ಟ್ ಮಾಡಲು ಕಾರಣ ಏನಿರಬಹುದು ಎನ್ನುವ ಚರ್ಚೆ ಕೂಡ ನಡೆಯಿತು. ಒಪ್ಪಿಕೊಂಡ ಸಿನಿಮಾಗಳು ದಬ್ಬಾಕಿಕೊಂಡವು ಅಂತ ಹಾಗೆ ಮಾಡಿದ್ರಾ ಎನ್ನುವ ಪ್ರಶ್ನೆ ಕೂಡ ಮೂಡಿತ್ತು. ಇನ್ನೂ ಕೆಲವರು ಟ್ರೋಲ್‍ ಗೆ ವ್ಯಂಗ್ಯ ಮಾಡಲು ಆ ರೀತಿ ಮಾಡಿದ್ರಾ ಎಂದು ಹೇಳಲಾಗಿತ್ತು.

    ಆದರೆ, ರಶ್ಮಿಕಾ ತಮ್ಮ ಹೆಸರನ್ನು ಉಲ್ಟಾ ನೇತು ಹಾಕಿದ್ದಕ್ಕೆ ಕಾರಣ ಬೇರೆ ಇದೆ. ಅವರು ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿ ಎಂದು ಹೇಳುವ ಅಭಿಯಾನವನ್ನು ಆರಂಭಿಸಿದ್ದು. ಅಕ್ಷರ ಬಾರದ ಹೆಣ್ಣುಮಕ್ಕಳಿಗೆ ಅಕ್ಷರಗಳು ಉಲ್ಟಾ ಕಾಣುತ್ತವೆ ಎಂದು ಹೇಳುವುದಕ್ಕಾಗಿ ಅವರು ತಮ್ಮ ಹೆಸರನ್ನು ಉಲ್ಟಾ ಬರೆದಿದ್ದರು. ಈ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ರಶ್ಮಿಕಾ ಬಗ್ಗೆ ಟ್ರೋಲ್ ಮಾಡುತ್ತಿದ್ದವರೂ ಈಗ ಮೆಚ್ಚಿಕೊಂಡಿದ್ದಾರೆ.

    ಹೌದು, ಓದು ಬಾರದ ಹೆಣ್ಣು ಮಕ್ಕಳ ಪರ ರಶ್ಮಿಕಾ ಅಭಿಯಾನ ಶುರು ಮಾಡಿದ್ದಾರೆ. ಪ್ರತಿ ಹೆಣ್ಣು ಮಗುವಿಗೂ ಶಿಕ್ಷಣ ಕೊಡಿ ಎಂದು ಸಾರುತ್ತಾರೆ. ಈ ಮೂಲಕ ಜನಜಾಗೃತಿ ಮೂಡಿಸುತ್ತಿದ್ದಾರೆ. ರಶ್ಮಿಕಾ ಅವರ ಈ ಅಭಿಯಾನಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇಂತಹ ಕೆಲಸಗಳಿಗಾಗಿ ನಾವು ನಿಮ್ಮನ್ನು ಮೆಚ್ಚಿಕೊಳ್ಳುತ್ತೇವೆ ಎಂದು ವಿರೋಧಿಗಳು ಕೂಡ ಕಾಮೆಂಟ್ ಮಾಡಿದ್ದಾರೆ.

    ಇತ್ತೀಚಿನ ದಿನಗಳಲ್ಲಿ ರಶ್ಮಿಕಾ ಸಲ್ಲದ ಕಾರಣಕ್ಕಾಗಿ ಟ್ರೋಲ್ ಆಗುತ್ತಿದ್ದರು. ಕಳೆದೊಂದು ತಿಂಗಳಿನಿಂದ ಸಿನಿಮಾ ರಂಗದಿಂದ ಬ್ಯಾನ್ ಮಾಡಿ ಅನ್ನುವ ಒತ್ತಾಯವೂ ಕೇಳಿ ಬಂತು. ಯಾವುದಕ್ಕೂ ತಲೆ ಕೆಡಿಸಿಕೊಳ್ಳದೇ ತಮ್ಮ ಪಾಡಿಗೆ ತಾವು ಕೆಲಸ ಮಾಡುತ್ತಿದ್ದರು ರಶ್ಮಿಕಾ. ಇದೀಗ ಹೆಣ್ಣು ಮಕ್ಕಳ ಶಿಕ್ಷಣ ಅಭಿಯಾನದ ಮೂಲಕ ಎಲ್ಲರ ಮೆಚ್ಚಿಗೆಗೂ ಪಾತ್ರರಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಚುನಾವಣಾ ಪ್ರಚಾರಕ್ಕಾಗಿ ಸಿದ್ದರಾಮಯ್ಯಗೆ ಸಿದ್ಧವಾಯ್ತು ಹೈಫೈ ಪ್ರಚಾರದ ಬಸ್

    ಚುನಾವಣಾ ಪ್ರಚಾರಕ್ಕಾಗಿ ಸಿದ್ದರಾಮಯ್ಯಗೆ ಸಿದ್ಧವಾಯ್ತು ಹೈಫೈ ಪ್ರಚಾರದ ಬಸ್

    ಬೆಂಗಳೂರು: 2023ರ ಚುನಾವಣೆ (Election) ಗೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಸಿದ್ಧರಾಗುತ್ತಿದ್ದಾರೆ. ಒಂದು ಕಡೆ ಕ್ಷೇತ್ರದ ಸಿದ್ಧತೆ, ಮತ್ತೊಂದು ಕಡೆ ಚುನಾವಣಾ ಪ್ರಚಾರಕ್ಕೆ ಸಿದ್ಧತೆ ಶುರು ಮಾಡಿದ್ದಾರೆ.

    ಇವತ್ತು ಕ್ಷೇತ್ರದ ಅಖಾಡ ತಿಳಿಯಲು ಕೋಲಾರಕ್ಕೆ ಪ್ರಯಾಣ ಮಾಡಿದ್ದಾರೆ. ವಿಶೇಷ ಅಂದರೆ ಕಾರ್ ನಲ್ಲಿ ತೆರಳದೆ ವಿಶೇಷ ಬಸ್ (Bus) ನಲ್ಲಿ ಸಿದ್ದರಾಮಯ್ಯ ಆ್ಯಂಡ್ ಟೀಂ ಕೋಲಾರಕ್ಕೆ ತೆರಳಿದೆ. ಈ ವಿಶೇಷ ಬಸ್ ಸಿದ್ದರಾಮಯ್ಯಗಾಗಿಯೇ ಸಿದ್ಧವಾಗಿದೆ. ಹೌದು ಈ ಬಸನ್ನ 2023ರ ಚುನಾವಣೆ ವೇಳೆ ಸಿದ್ದರಾಮಯ್ಯ ಪ್ರಚಾರ ಮಾಡಲು ತೆರಳಲು ವಿಶೇಷವಾಗಿ ಸಿದ್ಧಪಡಿಸಲಾಗಿದೆ. ಇದೇ ಬಸ್ ನಲ್ಲಿ ಸಿದ್ದರಾಮಯ್ಯ 224 ಕ್ಷೇತ್ರಗಳಲ್ಲಿ ಸಂಚಾರ ಮಾಡ್ತಾರೆ.

    ಅತ್ಯಾಧುನಿಕ ತಂತ್ರಜ್ಞಾನದ ಜೊತೆ ಹೈಫೈ ವ್ಯವಸ್ಥೆ ಇರೋ ಈ ಬಸ್ ಹತ್ತು ಹಲವು ವಿಶೇಷತೆಗಳನ್ನು ಒಳಗೊಂಡಿದೆ. ಈ ಬಸ್ ನ ವಿಶೇಷತೆಗಳೇನು? ಈ ಬಸ್ ನಲ್ಲಿ ಏನೆಲ್ಲ ಇದೆ ಅಂತ ನಾವು ನಿಮಗೆ ಹೇಳ್ತೀವಿ ಬನ್ನಿ. ಇದನ್ನೂ ಓದಿ: ಸತೀಶ್ ಜಾರಕಿಹೊಳಿ ಬಗ್ಗೆ ಮಾತಾಡಿದ್ರೆ ನುಗ್ಗಿ ಹೊಡಿತೀವಿ- ಯತ್ನಾಳ್‌ಗೆ ಬೆಂಬಲಿಗರು ಎಚ್ಚರಿಕೆ

    ಸಿದ್ದರಾಮಯ್ಯ ಬಸ್ ನ ವಿಶೇಷತೆಗಳು!: ಈ ವಿಶೇಷ ಬಸ್ ಡ್ರೈವರ್ ಹೊರತುಪಡಿಸಿ 6 ಜನ ಕೂತು ಪಯಣ ಮಾಡಲು ವಿಶೇಷ ಸೀಟ್ ವ್ಯವಸ್ಥೆ ಇದೆ. ಎಲ್ಲಾ ಫುಶಿಂಗ್ ಸೀಟುಗಳೇ ಆಗಿವೆ. ಇಡೀ ಬಸ್ ಗೆ ಸಂಪೂರ್ಣ ಎಸಿಯಿಂದ ಮಾಡಲ್ಪಟ್ಟಿದೆ. ಇಡೀ ಬಸ್‍ಗೆ ವಿಶೇ ಲೈಟಿಂಗ್ ವ್ಯವಸ್ಥೆ ಮಾಡಲಾಗಿದೆ.

    ಬಸ್ ವಿಂಡೋಗಳನ್ನ ಗಾಜಿನಲ್ಲಿ ಮಾಡಲಾಗಿದ್ದು, ಬಸ್‍ನಲ್ಲಿ ಕುಳಿತು ಜನರನ್ನ ನೋಡುವ ವ್ಯವಸ್ಥೆ ಇದೆ. ಬಸ್ಸಿನ ಒಳಗೆ ನಿಂತು ಭಾಷಣ ಮಾಡಲು ವಿಶೇಷ ತಂತ್ರಜ್ಞಾನದ ಲಿಫ್ಟ್ ಪೋಡಿಯಂ ವ್ಯವಸ್ಥೆ ಮಾಡಲಾಗಿದೆ. ಪ್ರಚಾರದ ವೇಳೆ ಆಯಾಸವಾದ್ರೆ ವಿಶ್ರಾಂತಿ ತೆಗೆದುಕೊಳ್ಳಲು ಬೆಡ್ ವ್ಯವಸ್ಥೆ. ಪ್ರತ್ಯೇಕ ಬಾತ್ ರೂಂ ವ್ಯವಸ್ಥೆ ಮಾಡಲಾಗಿದೆ.

    ಪ್ರಚಾರ ಸಮಯದಲ್ಲಿ ಟಿವಿ ವೀಕ್ಷಣೆಗೆ 3 LED TV ಗಳ ಅಳವಡಿಕೆ ಮಾಡಲಾಗಿದೆ. ಹ್ಯಾಂಡ್ ವಾಶ್ ಗೆ ಸಿಂಕ್ ವ್ಯವಸ್ಥೆ, ಮೊಬೈಲ್ ಚಾರ್ಜಿಂಗ್ ವ್ಯವಸ್ಥೆ ಇದೆ. ಇನ್ನು ಇಡೀ ಬಸ್ ಗೆ ವೈಫೈ ಕನೆಕ್ಷನ್ ವ್ಯವಸ್ಥೆ ಇದೆ. ನೀರು, ತಿಂಡಿ ಇಡಲು ವಿಶೇಷವಾಗಿ ಚಿಕ್ಕ ಫ್ರಿಜ್ ವ್ಯವಸ್ಥೆ ಕೂಡಾ ಈ ಬಸ್ ನಲ್ಲಿ ಇದೆ. ಸಿದ್ದರಾಮಯ್ಯರ ಆಪ್ತರು ಸಿದ್ದರಾಮಯ್ಯಗಾಗಿಯೇ ಈ ವಿಶೇಷ ಬಸ್ ಸಿದ್ದ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]