Tag: campaigning

  • ಸಮಾಜ ಸೇವೆ ನಮ್ಮ ರಕ್ತದಲ್ಲಿಯೇ ಇದೆ: ಸೋನು ಸೂದ್

    ಸಮಾಜ ಸೇವೆ ನಮ್ಮ ರಕ್ತದಲ್ಲಿಯೇ ಇದೆ: ಸೋನು ಸೂದ್

    ಮುಂಬೈ: ಸಮಾಜ ಸೇವೆ ನಮ್ಮ ರಕ್ತದಲ್ಲಿಯೇ ಇದೆ. ನನ್ನ ಸಹೋದರಿ ಕಾಂಗ್ರೆಸ್‍ನಿಂದ ಟಿಕೆಟ್ ಪಡೆದು, ಸ್ಪರ್ಧೆ ಮಾಡಲಿದ್ದಾರೆ ಎಂದು ಬಾಲಿವುಡ್ ನಟ ಸೋನು ಸಹೋದರಿಯ ಕುರಿತಾಗಿ ಮೆಚ್ಚುಗೆಯ ಮಾತನಾಡಿದ್ದಾರೆ.


    ಸಮಾಜ ಸೇವೆ ನಮ್ಮ ರಕ್ತದಲ್ಲಿಯೇ ಇದೆ. ನನ್ನ ಸಹೋದರಿ ಕಾಂಗ್ರೆಸ್‍ನಿಂದ ಟಿಕೆಟ್ ಪಡೆದು ಸ್ಪರ್ಧೆ ಮಾಡಲಿದ್ದಾರೆ. ಮೋಗಾ ಜಿಲ್ಲೆಯ ಸಹೋದರಿ ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಸಕಷ್ಟು ಅದ್ಭುತ ಕೆಲಸ ಮಾಡಿದ್ದಾಳೆ ಎಂದು ಸಹೋದರಿಯ ಸಮಾಜ ಸೇವೆಯನ್ನು ಹಾಡಿ ಹೋಗಳಿದ್ದಾರೆ. ಇದನ್ನೂ ಓದಿ: 2047ರ ಮೊದಲು ನವ ಭಾರತವನ್ನು ನಿರ್ಮಿಸುವ ಗುರಿ ಹೊಂದಿದ್ದೇವೆ: ಮೋದಿ

    ತನ್ನ ಶಕ್ತಿಯನ್ನಯ ಮೀರಿ ಸಮಾಜ ಸೇವೆ ಮಾಡಿದ್ದಾರೆ. ಸಾವಿರಾರು ಮಂದಿಗೆ ಕೊರೊನಾ ಲಸಿಕೆ ಕೊಡಿಸಿದ್ದಾಳೆ. ಈಗ ತನ್ನ ಸಹೋದರಿಯನ್ನು ಜನರೇ ರಾಜಕೀಯಕ್ಕೆ ಬರುವಂತೆ ಕರೆಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಬಿಜೆಪಿ ತನ್ನ ಅನುಕೂಲಕ್ಕಾಗಿ ಹಿಂದುತ್ವವನ್ನು ಬಳಸಿಕೊಳ್ಳುತ್ತಿದೆ: ಉದ್ಧವ್ ಠಾಕ್ರೆ

    ನಮ್ಮ ತಾಯಿ ಶಿಕ್ಷಕಿಯಾಗಿದ್ದು, ಜೀವನದುದ್ದಕ್ಕೂ ಮಕ್ಕಳಿಗೆ ಶಿಕ್ಷಣ ನೀಡಿದ್ದಾರೆ. ತಂದೆ ಕೂಡ ಸಮಾಜ ಸೇವಕರಾಗಿದ್ದರು. ಮೊಗಾದಲ್ಲಿ ನಿರ್ಮಾಣಗೊಂಡಿರುವ ಅನೇಕ ಶಾಲೆಗಳು, ಕಾಲೇಜ್​​ಗಳು ಮತ್ತು ಧರ್ಮಶಾಲೆಗಳು ನಮ್ಮ ಜಮೀನಿನಲ್ಲೇ ಇವೆ ಎಂದು ತಿಳಿಸಿದ್ದಾರೆ.

    ಸೋನು ಸೂದ್ ಅವರ ಸಹೋದರಿ ಮಾಳವಿಕಾ ರಾಜಕೀಯಕ್ಕೆ ಪ್ರವೇಶ ಮಾಡಿದ್ದಾರೆ. ಈಗಾಗಲೇ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಸಮ್ಮಖದಲ್ಲೇ ಮಾಳವಿಕಾ ಕೈ ಪಾಳಯ ಸೇರಿದ್ದಾರೆ.

    2022ರ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಮೋಗಾದಿಂದ ಸ್ಪರ್ಧೆ ಮಾಡಲಿದ್ದಾರೆ. ಈಗ ತನ್ನ ಸಹೋದರಿ ಪರ ಸೋನು ಸೂದ್ ನಿಂತಿದ್ದಾರೆ.

  • ಗೋವಾ ಚುನಾವಣೆ- ಜಗದೀಶ್ ಶೆಟ್ಟರ್ ಪ್ರಚಾರ, ಮತಯಾಚನೆ

    ಗೋವಾ ಚುನಾವಣೆ- ಜಗದೀಶ್ ಶೆಟ್ಟರ್ ಪ್ರಚಾರ, ಮತಯಾಚನೆ

    ಪಣಜಿ: ಗೋವಾ ರಾಜ್ಯದ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅಬ್ಬರದ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಗೋವಾದ ಪ್ರಮುಖ ವಿಧಾನಸಭಾ ಕ್ಷೇತ್ರ ವಾಸ್ಕೋದಲ್ಲಿ ಬಿಜೆಪಿ ಅಭ್ಯರ್ಥಿ ಕೃಷ್ಣಾ ಸಾಲ್ಕರ್ ಪರವಾಗಿ ಅವರು ಮತಯಾಚನೆ ಮಾಡಿದರು.

    ಕರ್ನಾಟಕ ರಾಜ್ಯಕ್ಕೆ ಹೊಂದಿಕೊಂಡಿರುವ ಗೋವಾ ರಾಜ್ಯದಲ್ಲಿ ಕನ್ನಡಿಗ ಮತದಾರರ ಸಂಖ್ಯೆ ಹೆಚ್ಚಿದೆ. ಕನ್ನಡಿಗರ ಮತ ಸೆಳೆಯಲು ಬಿಜೆಪಿ ರಾಜ್ಯ ಪ್ರಭಾವಿ ರಾಜಕಾರಣಿಗಳನ್ನು ಗೋವಾ ರಾಜ್ಯದ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿದೆ. ಇದನ್ನೂ ಓದಿ: ಕೋವಿನ್ ಖಾಸಗಿ ಮಾಹಿತಿ ಸೋರಿಕೆ ಆಗಿಲ್ಲ: ಕೇಂದ್ರ

    ಗೋವಾ ರಾಜ್ಯದ ಅಭಿವೃದ್ಧಿ, ಗೋವಾ ಕನ್ನಡಿಗರ ರಕ್ಷಣೆ ಹಾಗೂ ಸರ್ಕಾರದ ಸವಲತ್ತುಗಳನ್ನು ಒದಗಿಸುವಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಯಶಸ್ವಿಯಾಗಿದೆ. ಮುಂದೆಯೂ ಗೋವಾ ಕನ್ನಡಿಗರ ಅಭಿವೃದ್ಧಿಗೆ ಪಕ್ಷ ಬದ್ಧವಾಗಿದ್ದು, ಬಿಜಿಪಿ ಪಕ್ಷದ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಶೆಟ್ಟರ್ ಮತದಾರರ ಮನವೊಲಿಸುತ್ತಿದ್ದಾರೆ. ಮತದಾರರು ಶೆಟ್ಟರ್ ಪ್ರಚಾರದಲ್ಲಿ ಉತ್ತಮ ಸ್ಪಂದನೆ ತೋರುತ್ತಿದ್ದಾರೆ. ಇದನ್ನೂ ಓದಿ: ಜಾತಿ, ಧರ್ಮ, ದೇಶ ಗಡಿ ದಾಟಿದ ಪ್ರೇಮ ಕಥೆ

    ಈ ಸಂದರ್ಭದಲ್ಲಿ ವಾಸ್ಕೋ ವಿಧಾನಸಭಾ ಕ್ಷೇತ್ರ ಬಿಜೆಪಿ ಮಂಡಳ ಅಧ್ಯಕ್ಷ ದೀಪಕ್ ನಾಯ್ಕ್, ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಾಕಾಯಿ ಉಪಸ್ಥಿತರಿದ್ದರು.

  • ಚಿಕ್ಕಬಳ್ಳಾಪುರದಲ್ಲಿ ತೆಲುಗು ಹಾಸ್ಯ ನಟ ಬ್ರಹ್ಮಾನಂದಂ ಪ್ರಚಾರ

    ಚಿಕ್ಕಬಳ್ಳಾಪುರದಲ್ಲಿ ತೆಲುಗು ಹಾಸ್ಯ ನಟ ಬ್ರಹ್ಮಾನಂದಂ ಪ್ರಚಾರ

    ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಪರ ಪ್ರಚಾರಕ್ಕಾಗಿ ಚಂದನವನದ ನಟ ನಟಿಯರು ಕಳೆದ ಒಂದು ವಾರದಿಂದ ಕ್ಷೇತ್ರದಲ್ಲಿ ಬೀಡುಬಿಟ್ಟಿದ್ದಾರೆ. ಸ್ಯಾಂಡಲ್‍ವುಡ್ ನಟ ನಟಿಯರ ಜೊತೆಗೆ ಟಾಲಿವುಡ್‍ನ ಖ್ಯಾತ ಹಾಸ್ಯ ನಟ ಬ್ರಹ್ಮಾನಂದಂ ಸಹ ಸಾಥ್ ನೀಡಲಿದ್ದು, ಕ್ಷೇತ್ರದಲ್ಲಿ ಸುಧಾಕರ್ ಪರ ಶನಿವಾರ ಮತಯಾಚನೆ ಮಾಡಲಿದ್ದಾರೆ.

    ಟಾಲಿವುಡ್ ಹಾಗೂ ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ಹಾಸ್ಯ ನಟ ಬ್ರಹ್ಮಾನಂದಂ ಅವರ ನಟನೆಗೆ ಅಭಿಮಾನಿಗಳು ನಕ್ಕು ನಕ್ಕು ಸುಸ್ತಾಗುತ್ತಾರೆ. ಬ್ರಹ್ಮಾನಂದಂ ಅವರ ಹಾಸ್ಯ ನಟನೆಗೆ ಮನಸೋಲದವರೇ ಇಲ್ಲ. ಇಂತಹ ಖ್ಯಾತ ನಟ ಹಾಸ್ಯ ಕಲಾವಿದ ಬ್ರಹ್ಮಾನಂದಂ ನಾಳೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

    ಬ್ರಹ್ಮಾನಂದಂ ಅವರು ಶನಿವಾರ ಬೆಳಗ್ಗೆ 9 ಗಂಟೆಗೆ ಸುಧಾಕರ್ ಸ್ವಗ್ರಾಮ ಪೇರೇಸಂದ್ರ ಕ್ರಾಸ್‍ನಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಬಳಿಕ 9 ಗಂಟೆ 45 ನಿಮಿಷಕ್ಕೆ ಕಮ್ಮಗುಟ್ಟಹಳ್ಳಿ ಕ್ರಾಸ್, 10 ಗಂಟೆ 30 ನಿಮಿಷಕ್ಕೆ ಮಂಡಿಕಲ್ ಗ್ರಾಮ ಸೇರಿದಂತೆ 11 ಗಂಟೆಗೆ ಚಿಕ್ಕಪೈಲಗುರ್ಕಿಯ ಸುಧಾಕರ್ ಅವರ ಮನೆ ದೇವರು ಚನ್ನಕೇಶವಸ್ವಾಮಿ ದೇವಾಲಯದ ಬಳಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

    ಸ್ಯಾಂಡಲ್‍ವುಡ್ ನಟಿ-ನಟಿಯರಾದ ಹರಿಪ್ರಿಯಾ, ಹರ್ಷಿಕಾ ಪೂಣಚ್ಚ, ನಟರಾದ ದಿಗಂತ್ ಹಾಗೂ ಭುವನ್ ಅವರು ಕಳೆದ ಒಂದು ವಾರದಿಂದ ಸುಧಾಕರ್ ಅವರ ಪರ ಪ್ರಚಾರ ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರ ನಗರದಲ್ಲಿ ಮನೆ ಮೆನೆಗೆ ತೆರಳಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ಈಗ ಸ್ಯಾಂಡಲ್‍ವುಡ್ ನಟ-ನಟಿಯರಿಗೆ ಬ್ರಹ್ಮಾನಂದಂ ಸಹ ಸಾಥ್ ನೀಡುತ್ತಿದ್ದಾರೆ.

    ಈ ಹಿಂದಿನ ಚುನಾವಣೆಗಳಲ್ಲೂ ಸುಧಾಕರ್ ಅವರ ಪರವಾಗಿ ಟಾಲಿವುಡ್‍ನ ನಟ ಮೆಗಾಸ್ಟಾರ್ ಚಿರಂಜೀವಿ, ಬಹುಭಾಷಾ ತಾರೆಗಳಾದ ರಮ್ಯಕೃಷ್ಣ, ಖುಷ್ಬೂ ಸೇರಿದಂತೆ ಅನೇಕರು ಪ್ರಚಾರ ನಡೆಸಿದ್ದರು. ಈ ಮೂಲಕ ಕ್ಷೇತ್ರದಲ್ಲಿ ತೆಲುಗು ಭಾಷಿಕ ಮತದಾರರ ಮನಸೆಳೆದಿದ್ದರು. ಹೀಗಾಗಿ ಈ ಬಾರಿಯೂ ತೆಲುಗು ಭಾಷಿಕ ಮತದಾರರ ಮನಸೆಳೆಯುವುದಕ್ಕೆ ಸುಧಾಕರ್ ಅವರು ಮುಂದಾಗಿದ್ದಾರೆ.

    ಆಂಧ್ರದ ಗಡಿಭಾಗಕ್ಕೆ ಹೊಂದಿಕೊಂಡಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ಮೇಲೆ ತೆಲುಗು ಭಾಷೆಯ ಪ್ರಭಾವ ಹೆಚ್ಚಾಗಿದ್ದು, ಇಲ್ಲಿನ ಜನ ಈಗಲೂ ತೆಲುಗು ಭಾಷೆಯನ್ನು ಮಾತನಾಡುತ್ತಾರೆ. ಜೊತೆಗೆ ಟಾಲಿವುಡ್ ಸಿನಿಮಾಗಳನ್ನೇ ನೋಡುವುದರಿಂದ ಟಾಲಿವುಟ್ ನಾಯಕ, ನಟ-ನಟಿಯರನ್ನ ಇಷ್ಟಪಡುತ್ತಾರೆ. ಹೀಗಾಗಿ ಈ ಬಾರಿ ಯೂ ಸ್ಯಾಂಡಲ್‍ವುಡ್ ಸ್ಟಾರ್ಸ್ ಹಾಗೂ ಟಾಲಿವುಡ್ ಕಾಮಿಡಿ ಕಿಂಗ್ ಸುಧಾಕರ್ ಅವರ ಪರ ಪ್ರಚಾರಕ್ಕೆ ಮಾಡುತ್ತಿದ್ದಾರೆ.

  • ನೀವೇನ್ ಕೆಲಸ ಮಾಡಿದ್ದೀರಿ- ಬಿಜೆಪಿ ಪರ ಮತ ಕೇಳಲು ಹೋದ ಶಾಸಕನಿಗೆ ಜನ ತರಾಟೆ

    ನೀವೇನ್ ಕೆಲಸ ಮಾಡಿದ್ದೀರಿ- ಬಿಜೆಪಿ ಪರ ಮತ ಕೇಳಲು ಹೋದ ಶಾಸಕನಿಗೆ ಜನ ತರಾಟೆ

    ಕೊಪ್ಪಳ: ತಮ್ಮ ಪಕ್ಷದ ಅಭ್ಯರ್ಥಿ ಪರ ಮತ ಕೇಳಲು ಹೋದ ಶಾಸಕನನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿರುವ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ.

    ಗಂಗಾವತಿ ನಗರದ 8ನೇ ವಾರ್ಡ್ ನಲ್ಲಿ ಈ ಗಲಾಟೆ ನಡೆದಿದೆ. 8ನೇ ವಾರ್ಡ್ ನ ಬಿಜೆಪಿ ಅಭ್ಯರ್ಥಿ ಪಂಪಾಪತಿ ಪರ ಪ್ರಚಾರಕ್ಕೆ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಬಂದಿದ್ದರು. ಈ ವೇಳೆಯಲ್ಲಿ ಅಲ್ಲಿದ್ದ ಸಾರ್ವಜನಿಕರು ನಮಗೆ ಮೂಲಭೂತ ಸೌಕರ್ಯಗಳು ಸಿಗುತ್ತಿಲ್ಲ. ನೀವು ಏನು ಕೆಲಸ ಮಾಡುತ್ತೀರಿ ಎಂದು ಪ್ರಶ್ನೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ.

    ಅಷ್ಟೇ ಅಲ್ಲದೇ ಅಲ್ಲಿನ ಸಾರ್ವಜನಿಕರು ನಮ್ಮ ಏರಿಯಾಕ್ಕೆ ಪ್ರಚಾರಕ್ಕೆ ಬರಬೇಡಿ ಎಂದು ಶಾಸಕ ಪರಣ್ಣ ಮುನವಳ್ಳಿಯನ್ನು ಅಡ್ಡ ಹಾಕಿದ್ದಾರೆ. ಇದೇ ವೇಳೆ ಶಾಸಕ ಪರಣ್ಣ ಮುನವಳ್ಳಿ ಬೆಂಬಲಿಗರು ಹಾಗೂ ಸ್ಥಳೀಯರ ನಡುವೆ ಮಾತಿನ ಚಕಮಕಿ ಸಹ ನಡೆದಿದೆ. ಶಾಸಕರು ಎಷ್ಟೆ ಪ್ರಯತ್ನ ಮಾಡಿದ್ರೂ, ಜನರನ್ನು ನಿಯಂತ್ರಿಸಲು ಸಾಧ್ಯವಾಗಿಲ್ಲ. ಕೊನೆಗೆ ಶಾಸಕ ಪರಣ್ಣ ಅನಿವಾರ್ಯವಾಗಿ ಪ್ರಚಾರ ಮಾಡದೆ ಆ ವಾರ್ಡ್ ನಿಂದ ಕಾಲ್ಕಿತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv