Tag: Campus

  • ಉದ್ಘಾಟನೆಗೆ ಸಜ್ಜಾಗಿರುವ ಧಾರವಾಡದ ಐಐಟಿಯಲ್ಲಿ ಕಳ್ಳತನ – ಐವರ ಬಂಧನ

    ಉದ್ಘಾಟನೆಗೆ ಸಜ್ಜಾಗಿರುವ ಧಾರವಾಡದ ಐಐಟಿಯಲ್ಲಿ ಕಳ್ಳತನ – ಐವರ ಬಂಧನ

    ಧಾರವಾಡ: ಉದ್ಘಾಟನೆಗೆ ಸಜ್ಜಾಗಿರುವ ಧಾರವಾಡ ಐಐಟಿ (Dharwad IIT) ಕೇಂದ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಕಳ್ಳತನವೊಂದು ನಡೆದಿದೆ.

    ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಸಮೀಪ ಇರುವ ಐಐಟಿ ಕಟ್ಟಡದ ಕಾಮಗಾರಿ ಈಗಾಗಲೇ ಮುಗಿಯುವ ಹಂತದಲ್ಲಿದೆ. ಯುವಜನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಹುಬ್ಬಳ್ಳಿಗೆ ಬಂದಾಗಲೇ ಇದರ ಉದ್ಘಾಟನೆಯಾಗಬೇಕಿತ್ತು. ಆದರೆ, ಕೆಲ ಕಾಮಗಾರಿ ಬಾಕಿ ಇದ್ದಿದ್ದರಿಂದ ಇದರ ಉದ್ಘಾಟನೆ ಇದೀಗ ಫೆಬ್ರವರಿ ತಿಂಗಳಿಗೆ ಮುಂದೂಡಲ್ಪಟ್ಟಿದೆ. ಈ ಕಟ್ಟಡದ ವಿವಿಧ ಸಾಮಗ್ರಿಗಳನ್ನು ಜ.15 ರಂದು ಕಳ್ಳರು ಕಳ್ಳತನ ಮಾಡಿದ್ದರು. ಇದನ್ನೂ ಓದಿ: ಹಿಂದಿನ ಸರ್ಕಾರದಿಂದ ನಿರ್ಲಕ್ಷ್ಯ, ನಾವು ಬಂಜಾರ ಸಮುದಾಯದವರಿಗೆ ಹಕ್ಕು ಕೊಟ್ಟಿದ್ದೇವೆ: ಮೋದಿ

    ಕಟ್ಟಡದ ಆವರಣದಲ್ಲಿಡಲಾಗಿದ್ದ ಪೈಪ್‍ಗಳು, ಕೇಬಲ್‍ಗಳು ಸೇರಿದಂತೆ ಒಟ್ಟು 2,10,405 ರೂ. ಮೌಲ್ಯದ ಕಟ್ಟಡ ಸಾಮಗ್ರಿಗಳನ್ನು ಕಳ್ಳರು ಹೊತ್ತೊಯ್ದಿದ್ದರು. ಈ ಸಂಬಂಧ ಅದೇ ದಿನ ಧಾರವಾಡ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಗ್ರಾಮೀಣ ಠಾಣೆ ಪೊಲೀಸರು, ಐದು ಜನ ಆರೋಪಿಗಳನ್ನು ಬಂಧಿಸಿ, ಸಾಮಗ್ರಿಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: 3 ಪತ್ನಿಯರ ಬಗ್ಗೆ ತಿಳಿದುಕೊಂಡ್ಲು ಅಂತಾ 4ನೇ ಪತ್ನಿಗೆ ತ್ರಿವಳಿ ತಲಾಖ್‌ ನೀಡಿದ ಪತಿ

    ಬಂಧಿತರನ್ನು ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಅಲ್ತಾಫ್ ಶೇಖಸನದಿ, ಮಹ್ಮದ್‍ಯಾಸೀನ್ ಖತೀಬ್, ಇಸ್ಮಾಯಿಲ್ ಗಿಡ್ನವರ ಹಾಗೂ ಹಾಶಂಪೀರ್ ಶೇಖಸನದಿ, ಇನಾಂಹೊಂಗಲದ ಇಮ್ರಾನ್ ರಸೂಲನವರ ಎಂದು ಗುರುತಿಸಲಾಗಿದೆ. ಸದ್ಯ ಈ ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕ್ಯಾಂಪಸ್‍ನಲ್ಲಿ ಗುಂಡಿನ ದಾಳಿ: ಮೂವರು ಬಲಿ, ಇಬ್ಬರಿಗೆ ಗಂಭೀರ ಗಾಯ

    ಕ್ಯಾಂಪಸ್‍ನಲ್ಲಿ ಗುಂಡಿನ ದಾಳಿ: ಮೂವರು ಬಲಿ, ಇಬ್ಬರಿಗೆ ಗಂಭೀರ ಗಾಯ

    ಮನಿಲಾ: ಫಿಲಿಪೈನ್ಸ್‌ನ ರಾಜಧಾನಿ ಮನಿಲಾದ ವಿಶ್ವವಿದ್ಯಾಲಯ ಕ್ಯಾಂಪಸ್‍ನಲ್ಲಿ ಭಾನುವಾರ ಮಧ್ಯಾಹ್ನ ನಡೆದ ಗುಂಡಿನ ದಾಳಿಗೆ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.

    ಕ್ವಿಜಾನ್ ಸಿಟಿ ಪೊಲೀಸ್ ಜಿಲ್ಲಾ ನಿರ್ದೇಶಕ ರೆಮುಸ್ ಮದೀನಾ ಈ ಕುರಿತು ಮಾಹಿತಿ ನೀಡಿದ್ದು, ಕ್ವಿಜಾನ್ ನಗರದ ಅಟೆನಿಯೊ ಡಿ ಮನಿಲಾ ವಿಶ್ವವಿದ್ಯಾಲಯದ ಗೇಟ್ ಬಳಿ ಬೆಳಗ್ಗೆ ಗುಂಡಿನ ದಾಳಿ ನಡೆದಿದೆ. ಈ ವೇಳೆ ಹಂತಕ ಗೇಟ್ ಬಳಿಯಿದ್ದ ವಾಚ್‍ಮ್ಯಾನ್‍ನನ್ನು ಕೊಂದು ಒಳಗೆ ಬಂದಿದ್ದಾನೆ. ವಿಶ್ವವಿದ್ಯಾಲಯದಲ್ಲಿದ್ದವರ ಮೇಲೆ ದಾಳಿ ಮಾಡಿದ್ದಾನೆ. ವಿಷಯ ತಿಳಿದ ತಕ್ಷಣ ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿಯೇ ಇರುತ್ತೆ: ರಾಜನಾಥ್ ಸಿಂಗ್ 

    ಪ್ರಸ್ತುತ ಶೂಟರ್ ಕಾರನ್ನು ವಶಪಡಿಸಿಕೊಂಡಿದ್ದು, ಆತ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ. ಆದರೆ ಪೊಲೀಸರು ಅವನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ ಸಂತ್ರಸ್ತರಿಗೆ ಸಹಾಯ ಮಾಡಲು ರಾಷ್ಟ್ರೀಯ ತನಿಖಾ ಏಜೆಂಟರನ್ನು ಸಹ ಕ್ಷೇತ್ರಕ್ಕೆ ಕಳುಹಿಸಲಾಗಿದೆ ಎಂದಿದ್ದಾರೆ.

    ವಿಶ್ವವಿದ್ಯಾಲಯದ ಮುಖ್ಯಸ್ಥರು ಘಟನೆ ಕುರಿತು ಪ್ರತಿಕ್ರಿಯೆ ಕೊಟ್ಟಿದ್ದು, ಸುಪ್ರಿಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಅಲೆಕ್ಸಾಂಡರ್ ಗೆಸ್ಮುಂಡೊ ಅವರು ಭಾನುವಾರ ಮಧ್ಯಾಹ್ನ ಕಾನೂನು ಶಾಲೆಯ ಪದವಿ ಸಮಾರಂಭಕ್ಕೆ ಹಾಜರಾಗಬೇಕಿತ್ತು. ಆದರೆ ಗುಂಡಿನ ದಾಳಿ ನಡೆದ ಪರಿಣಾಮ ಕಾರ್ಯಕ್ರಮ ರದ್ದಾಯಿತು. ಪ್ರಸ್ತುತ ನಮ್ಮ ಕ್ಯಾಂಪಸ್ ಲಾಕ್‍ಡೌನ್‍ನಲ್ಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಯಕ್ಷಗಾನದ ಭಾಗವತಿಕೆ ಮೂಲಕ ರಾಷ್ಟ್ರಪತಿಗೆ ಸ್ವಾಗತ ಕೋರಿದ ಬಾಲೆ

    ಸುಪ್ರೀಂ ಕೋರ್ಟ್ ವಕ್ತಾರ ಬ್ರಿಯಾನ್ ಹೊಸಾಕಾ ಈ ಕುರಿತು ಮಾತನಾಡಿದ್ದು, ವಿಶ್ವವಿದ್ಯಾಲಯದಲ್ಲಿ ಗುಂಡಿನ ದಾಳಿ ನಡೆಯುವ ಸಂದರ್ಭದಲ್ಲಿ ಗೆಸ್ಮುಂಡೊ ಅವರು ವಿಶ್ವವಿದ್ಯಾಲಯಕ್ಕೆ ಹೋಗುತ್ತಿದ್ದರು. ಆದರೆ ವಿಷಯ ತಿಳಿದ ತಕ್ಷಣ ಹಿಂತಿರುಗಲು ಸಲಹೆ ನೀಡಲಾಯಿತು ಎಂದು ವಿವರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • JNU ಕ್ಯಾಂಪಸ್‍ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

    JNU ಕ್ಯಾಂಪಸ್‍ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

    ನವದೆಹಲಿ: ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿರುವ ಘಟನೆ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‍ಯು) ಕ್ಯಾಂಪಸ್‍ನ ಅರಣ್ಯ ಪ್ರದೇಶದಲ್ಲಿ ನಡೆದಿದೆ.

    CRIME 2

    ಘಟನೆ ಕುರಿತಂತೆ ಶುಕ್ರವಾರ ಸಂಜೆ 6.30ರ ಸುಮಾರಿಗೆ ದೆಹಲಿ ಪೊಲೀಸರಿಗೆ ಮಾಹಿತಿ ದೊರೆತಿದ್ದು, ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶವ ಕೊಳೆತಿದ್ದು, ಕೆಲ ದಿನಗಳ ಹಿಂದೆಯೇ ವ್ಯಕ್ತಿ ಮೃತಪಟ್ಟಿದ್ದಾರೆ. ಅಲ್ಲದೇ ವ್ಯಕ್ತಿಗೆ ಸುಮಾರು 40-45 ವರ್ಷ ವಯಸ್ಸಾಗಿರಬಹುದು. ಸದ್ಯ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 5 ವರ್ಷದ ಬಾಲಕಿಯ ಮಾದರಿಯನ್ನು ಮಂಕಿಪಾಕ್ಸ್ ಪರೀಕ್ಷೆಗೆ ಕಳುಹಿಸಿದ ವೈದ್ಯರು

    crime

    ಇದೀಗ ಪತ್ತೆಯಾಗಿರುವ ಶವ ವಿದ್ಯಾರ್ಥಿಯದ್ದೋ, ಅಧ್ಯಾಪಕರದ್ದೋ ಅಥವಾ ಹೊರಗಿನವರದ್ದೋ ಎಂದು ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕಾರಿನಲ್ಲೇ ಅಪ್ರಾಪ್ತೆಯ ಮೇಲೆ ಗ್ಯಾಂಗ್‍ರೇಪ್ – ಓರ್ವ ಅರೆಸ್ಟ್, ಆರೋಪಿಗಳ ಪೈಕಿ ಮೂವರು ಅಪ್ರಾಪ್ತರು

  • ಗ್ಯಾಂಗ್‍ರೇಪ್ ಕೇಸ್ ಬೆನ್ನಲ್ಲೇ ಮೈಸೂರು ವಿವಿಯಿಂದ ವಿವಾದಾತ್ಮಕ ಆದೇಶ

    ಗ್ಯಾಂಗ್‍ರೇಪ್ ಕೇಸ್ ಬೆನ್ನಲ್ಲೇ ಮೈಸೂರು ವಿವಿಯಿಂದ ವಿವಾದಾತ್ಮಕ ಆದೇಶ

    ಮೈಸೂರು: ಗ್ಯಾಂಗ್ ರೇಪ್ ಪ್ರಕರಣದ ಬೆನ್ನಲ್ಲೇ ಮೈಸೂರು ವಿವಿ ಹೊರಡಿಸಿರುವ ಆದೇಶ ವಿವಾದಕ್ಕೀಡಾಗಿದೆ.

    ಸಂಜೆ 6:30ರ ನಂತರ ಮಾನಸಗಂಗೋತ್ರಿ ಆವರಣ, ಕುಕ್ಕರಹಳ್ಳಿಕೆರೆ ಪ್ರದೇಶದಲ್ಲಿ ಹೆಣ್ಣು ಮಕ್ಕಳ ಪ್ರವೇಶಕ್ಕೆ ನಿರ್ಬಂಧ ಹೇರಿ ವಿವಿ ಕುಲಸಚಿವರು ಸುತ್ತೋಲೆ ಹೊರಡಿಸಿದ್ದಾರೆ.

    ಸಂಜೆ 6:30ರ ನಂತರ ಹೆಣ್ಣುಮಕ್ಕಳು ಒಂಟಿಯಾಗಿ ತಿರುಗಾಡುವುದನ್ನು, ಕೂರುವುದನ್ನು ನಿಷೇಧಿಸಲಾಗಿದೆ. ಸುರಕ್ಷತೆ, ಮುನ್ನೆಚ್ಚರಿಕೆ ದೃಷ್ಟಿಯಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ. ಇದನ್ನೂ ಓದಿ: ಮೈಸೂರು ಪ್ರಕರಣದ ಬಗ್ಗೆ ಸುಳಿವು ಸಿಕ್ಕಿದ್ದರೂ, ಈ ಪರಿಸ್ಥಿತಿಯಲ್ಲಿ ಹೇಳಲು ಸಾಧ್ಯವಿಲ್ಲ: ಪ್ರವೀಣ್ ಸೂದ್ 

    ಭದ್ರತಾ ಸಿಬ್ಬಂದಿ ಸಂಜೆ 6 ರಿಂದ 9ರವರೆಗೆ ಗಸ್ತು ತಿರುಗಲೂ ವ್ಯವಸ್ಥೆ ಮಾಡಲಾಗಿದೆ. ಪೊಲೀಸ್ ಇಲಾಖೆಯ ಮೌಖಿಕ ನಿರ್ದೇಶನದ ಮೇರೆಗೆ ಆದೇಶ ಹೊರಡಿಸಿದ್ದೇವೆ ಎಂದು ವಿವಿ ಹೇಳಿದೆ.

    ಈ ಬಗ್ಗೆ, ಪಬ್ಲಿಕ್ ಟಿವಿ ಜೊತೆ ಮಾತನಾಡಿದ ವಿವಿ ಕುಲಪತಿ ಪ್ರೊ. ಹೇಮಂತ್ ಕುಮಾರ್, ಒಂಟಿಯಾಗಿ ಹೆಣ್ಣುಮಕ್ಕಳು ತಿರುಗಬಾರದು ಅಂತ ಎಚ್ಚರಿಕೆ ವಹಿಸಿದ್ದೇವೆ. ಜೊತೆಗೆ, ಪೊಲೀಸ್ ಇಲಾಖೆಯಿಂದ ಮೌಖಿಕವಾಗಿ ಆದೇಶ ಬಂದಿದೆ. ಹಾಗಾಗಿ, ಕ್ರಮ ತೆಗೆದುಕೊಂಡಿದ್ದೇವೆ. ಆದೇಶವನ್ನು ಪುನರ್ ವಿಮರ್ಶೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಗ್ಯಾಂಗ್‍ರೇಪ್ ಪ್ರಕರಣದ ಸಂತ್ರಸ್ತೆ ತನಿಖೆಗೆ ಸ್ಪಂದಿಸುತ್ತಿಲ್ಲ: ಎಸ್‍ಟಿಎಸ್ ಆರೋಪ

  • ಮೆಡಿಕಲ್ ಕಾಲೇಜಿನ ಆವರಣದಲ್ಲಿ ಓಡಾಡಿದ ಗಜರಾಜ – ಅರಣ್ಯಾಧಿಕಾರಿಗಳಿಂದ ಆನೆಯ ರಕ್ಷಣೆ

    ಮೆಡಿಕಲ್ ಕಾಲೇಜಿನ ಆವರಣದಲ್ಲಿ ಓಡಾಡಿದ ಗಜರಾಜ – ಅರಣ್ಯಾಧಿಕಾರಿಗಳಿಂದ ಆನೆಯ ರಕ್ಷಣೆ

    ಕೋಲ್ಕತ್ತಾ: ಮೇಡಿಕಲ್ ಕಾಲೇಜಿನ ಆವರಣದಲ್ಲಿ ಓಡಾಡುತ್ತಿದ್ದ ಆನೆಯನ್ನು ಅರಣ್ಯಾಧಿಕಾರಿಗಳು ರಕ್ಷಣೆ ಮಾಡುತ್ತಿರುವ ವೀಡಿಯೋ ವೈರಲ್ ಆಗಿದೆ.

    ಪಶ್ಚಿಮ ಬಂಗಾಳದ ಮಿಡ್ನಾಪುರದ ಮೆಡಿಕಲ್ ಕಾಲೇಜು ಮತ್ತು ಹಾಸ್ಟೆಲ್ ಆವರಣದಲ್ಲಿ ರಾತ್ರಿ ಕಾಡಾನೆ ಆವರಣದ ತುಂಬಾ ಓಡಾಡಿದೆ. ವಿದ್ಯಾರ್ಥಿಗಳು ಪೊಲೀಸರಿಗೆ ಮತ್ತು ಅರಣ್ಯ ಇಲಾಖೆಗೆ ಮಾಹಿತಿಯನ್ನೂ ನೀಡಿದ್ದರು. ಈ ವಿಚಾರ ತಿಳಿದ ಹಲವರು ಆನೆಯನ್ನು ನೋಡಲು ಸಾಕಷ್ಟು ಸಂಖ್ಯೆಯಲ್ಲಿ ಜನ ಕೂಡಾ ಕಾಲೇಜು ಆವರಣದಲ್ಲಿ ಜಮಾಯಿಸಿದ್ದರು. ಆನೆಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಸದ್ಯ ಈ ಕಾರ್ಯಾಚರಣೆಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

    ಆನೆಯನ್ನು ಕ್ರೇನ್ ಮೂಲಕ ಟ್ರಕ್‍ಗೆ ತರುವ ದೃಶ್ಯವಿದೆ. ಹೀಗೆ ಅತ್ಯಂತ ಸುರಕ್ಷಿತವಾಗಿ ಆನೆಯನ್ನು ಹಿಡಿದ ಅರಣ್ಯ ಸಿಬ್ಬಂದಿ ಆನೆಯನ್ನು ಅರಣ್ಯಕ್ಕೆ ಕರೆತಂದಿದ್ದಾರೆ. ಇಲ್ಲಿ ಆನೆಗೆ ಸೂಕ್ತ ಆರೈಕೆ ಮಾಡಿ ಬಳಿಕ ಕಾಡಿಗೆ ಬಿಡಲು ನಿರ್ಧರಿಸಲಾಗಿದೆ ಎಂದು ಬರೆದು ಕೊಂಡು ಅರಣ್ಯ ಇಲಾಖೆ ಸಿಬ್ಬಂದಿಯ ಕಾರ್ಯಾಚರಣೆಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಅರಣ್ಯ ಅಧಿಕಾರಿ ರಮೇಶ್ ಪಾಂಡೆ ಅವರು ಈ ವಿಡಿಯೋವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

    ನಗರ ಪ್ರದೇಶಗಳಲ್ಲಿ ಆನೆಗಳನ್ನು ರಕ್ಷಿಸುವುದು ನಿಜವಾಗಿಯೂ ಕಷ್ಟ ಮತ್ತು ಸವಾಲಿನ ಕೆಲಸ. ಪಶ್ಚಿಮ ಬಂಗಾಳದ ಮಿಡ್ನಾಪುರದ ಅರಣ್ಯ ಅಧಿಕಾರಿಗಳು ಉತ್ತಮ ಕೆಲಸ ಮಾಡಿದ್ದಾರೆ. ಆನೆಯನ್ನು ಮರಳಿ ಕಾಡಿಗೆ ಬಿಡುಗಡೆ ಮಾಡಿದ ನಂತರ ಅದರ ಮೇಲ್ವಿಚಾರಣೆ ನಡೆಸಲಾಗುತ್ತಿದೆ ಎಂದು ರಮೇಶ್ ಪಾಂಡೆ ಹೇಳಿದ್ದಾರೆ.

  • ಬೀದರ್ ವಿವಿಯಲ್ಲಿ ಯುವಕ-ಯುವತಿ ಒಟ್ಟಿಗೆ ತಿರುಗಾಡುವುದಕ್ಕೆ ಬ್ರೇಕ್!

    ಬೀದರ್ ವಿವಿಯಲ್ಲಿ ಯುವಕ-ಯುವತಿ ಒಟ್ಟಿಗೆ ತಿರುಗಾಡುವುದಕ್ಕೆ ಬ್ರೇಕ್!

    ಬೀದರ್: ಕ್ಯಾಂಪಸ್ ನಲ್ಲಿ ಯುವಕ-ಯುವತಿ ಕಾರಣವಿಲ್ಲದೇ ಒಟ್ಟಿಗೆ ತಿರುಗಾಡುವುದಕ್ಕೆ ಬೀದರ್ ವಿವಿ ಬ್ರೇಕ್ ಹಾಕಿದೆ.

    ಬೀದರ್ ಹೊರವಲಯದ ನಂದಿ ನಗರದಲ್ಲಿರುವ ಪಶು ವೈದ್ಯಕೀಯ, ಮೀನುಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯದ ಹಾಸ್ಟೆಲ್ ವಾರ್ಡನ್ ಜಗನ್ನಾಥ್ ಅವರು ಈ ಆದೇಶ ಹೊರಡಿಸಿದ್ದಾರೆ.

    ಯುವಕ-ಯುವತಿ ಒಟ್ಟಿಗೆ ಸುತ್ತಾಡುತ್ತಿದ್ದರೆ ಅದು ಜನರಿಗೆ ತಪ್ಪು ಸಂದೇಶ ನೀಡುತ್ತೆ. ಹೀಗಾಗಿ ಕಾಲೇಜ್ ಕ್ಯಾಂಪಸ್‍ನಲ್ಲಿ ಹಾಗೂ ಬೀದರ್ ನಗರದಲ್ಲಿ ಯುವಕ-ಯುವತಿ ಒಟ್ಟಿಗೆ ತಿರುಗಾಡಿದರೆ ಶಿಸ್ತು ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

    ಆದೇಶದಲ್ಲಿ ಏನಿದೆ?
    ನಮ್ಮ ವಿಶ್ವವಿದ್ಯಾಲಯದ ಹಲವು ವಿದ್ಯಾರ್ಥಿನಿಯರು ಸಂಜೆ ವೇಳೆ ಯುವಕರ ಜೊತೆ ನಂದಿನಿ ಗೇಟ್ ಬಳಿ, ಕಾಲೇಜ್ ಕ್ಯಾಂಪಸ್ ಹಾಗೂ ನಗರದ ಹೊರವಲಯದಲ್ಲಿ ತಿರುಗಾಡುತ್ತಿರುವ ವಿಷಯ ಮುಖ್ಯ ವಾರ್ಡನ್, ವಿಶ್ವವಿದ್ಯಾಲಯದ ಹಿರಿಯ ಅಧಿಕಾರಿಗಳು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶಕರ ಗಮನಕ್ಕೆ ಬಂದಿದೆ.

    ಕಾಲೇಜ್ ಕ್ಯಾಂಪಸ್ ಅಲ್ಲದೇ ನಗರದ ಹೊರವಲಯದಲ್ಲೂ ಯುವಕ- ಯುವತಿಯರು ಒಟ್ಟಿಗೆ ತಿರುಗಾಡುತ್ತಿದ್ದಾರೆ. ಈ ರೀತಿ ತಿರುಗಾಡುವುದರಿಂದ ಜನರಿಗೆ ತಪ್ಪು ಸಂದೇಶ ನೀಡುತ್ತದೆ. ಯಾವುದೇ ಕಾರಣ ಇಲ್ಲದೇ ಯುವಕ-ಯುವತಿಯರು ಒಟ್ಟಿಗೆ ತಿರುಗಾಡುತ್ತಿರುವುದು ಕಂಡು ಬಂದರೆ, ಅವರ ವಿರುದ್ಧ ಶಿಸ್ತು ಕ್ರಮವನ್ನು ಕೈಗೊಳ್ಳಲಾಗುತ್ತದೆ. ದಿಢೀರ್ ಆಗಿ ಭೇಟಿ ನೀಡಿ ಈ ರೀತಿಯ ಬೆಳವಣಿಗೆಯನ್ನು ತಡೆಯಲು ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಎಲ್ಲ ವಿದ್ಯಾರ್ಥಿಗಳು ಕ್ಯಾಂಪಸಿನಲ್ಲಿ ಶಿಸ್ತನ್ನು ಕಾಪಾಡಬೇಕು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv