Tag: Campus Front

  • ಪಠ್ಯಕ್ರಮದಲ್ಲಿ RSS ಸಂಸ್ಥಾಪಕ ಹೆಡ್ಗೆವಾರ್ ಭಾಷಣ ಸೇರ್ಪಡೆ – ಶೀಘ್ರವೇ ಹಿಂತೆಗೆಯಲು ಕ್ಯಾಂಪಸ್ ಫ್ರಂಟ್ ಒತ್ತಾಯ

    ಪಠ್ಯಕ್ರಮದಲ್ಲಿ RSS ಸಂಸ್ಥಾಪಕ ಹೆಡ್ಗೆವಾರ್ ಭಾಷಣ ಸೇರ್ಪಡೆ – ಶೀಘ್ರವೇ ಹಿಂತೆಗೆಯಲು ಕ್ಯಾಂಪಸ್ ಫ್ರಂಟ್ ಒತ್ತಾಯ

    ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರ್‌ಎಸ್‍ಎಸ್) ಸಂಸ್ಥಾಪಕ ಕೇಶವ್ ಬಲಿರಾಮ್ ಹೆಡ್ಗೆವಾರ್ ಅವರ ಭಾಷಣವನ್ನು 2022-23ನೇ ಸಾಲಿನ ಹತ್ತನೆಯ ತರಗತಿಯ ಶೈಕ್ಷಣಿಕ ವರ್ಷದ ಕನ್ನಡ ಪಠ್ಯಕ್ರಮದಲ್ಲಿ ಸೇರ್ಪಡೆ ಮಾಡಲಾಗಿದೆ. ಇದು ಶಿಕ್ಷಣದ ಕೇಸರೀಕರಣದ ಮುಂದುವರಿದ ಭಾಗವಾಗಿದೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ತೀವ್ರವಾಗಿ ವಿರೋಧಿಸಿದೆ.

    ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯು ನಿಜವಾದ ಆದರ್ಶ ಪುರುಷ ಯಾರಾಗಬೇಕು? ಎಂಬ ತಲೆಬರಹದಲ್ಲಿ ಹೆಡ್ಗೆವಾರ್ ಭಾಷಣವನ್ನು ಹತ್ತನೇ ತರಗತಿಯ ಕನ್ನಡ ಗದ್ಯಪುಸ್ತಕದಲ್ಲಿ ಐದನೇ ಪಠ್ಯವಾಗಿ ಸೇರಿಸಿದೆ. ದೇಶಾದ್ಯಂತ ನರಮೇಧಗಳನ್ನು ನಡೆಸಿದ, ದೇಶದಲ್ಲಿ ಹಲವು ಬಾರಿ ನಿಷೇಧಿಸಲ್ಪಟ್ಟ ಭಯೋತ್ಪಾದನಾ ಸಂಘಟನೆಯಾದ ಆರ್‌ಎಸ್‍ಎಸ್ ಸಂಸ್ಥಾಪಕ ಹೆಡ್ಗೆವಾರ್ ಹೇಗೆ ಆದರ್ಶ ಪುರುಷನಾಗಲು ಸಾಧ್ಯ ಎಂದು ಕ್ಯಾಂಪಸ್ ಫ್ರಂಟ್ ರಾಜ್ಯ ಸರ್ಕಾರಕ್ಕೆ ಪ್ರಶ್ನಿಸಿದೆ. ಇದನ್ನೂ ಓದಿ: ಆರ್‌ಎಸ್‌ಎಸ್‌ ಸಂಸ್ಥಾಪಕ ಹೆಡ್ಗೆವಾರ್ ಭಾಷಣವನ್ನು ಓದಲಿದ್ದಾರೆ ವಿದ್ಯಾರ್ಥಿಗಳು

    ಕಾರಣವೇನು?
    ಹೆಗ್ಡೆವಾರ್ ಅವರ ಶಿಕ್ಷಣದ ನಂತರ ಬಂಗಾಳದಲ್ಲಿ ಅನುಶೀಲನ್ ಸಮಿತಿ(ಹಿಂದೂ ಕ್ರಾಂತಿಕಾರಿಗಳು) ಅದರ ಭಾಗವಾಗಿದ್ದರು. 1920ರ ದಶಕದಲ್ಲಿ ಕಾಂಗ್ರೆಸ್‍ಗೆ ಸೇರಿದರು. ಆದರೆ ಹಿಂದೂ ಮತ್ತು ಮುಸಲ್ಮಾನರ ನಡುವೆ ಐಕ್ಯತೆಯ ನೀತಿಯನ್ನು ಕಾಂಗ್ರೆಸ್ ಪಾಲಿಸುತ್ತಿದೆಯೆಂದು ಅದನ್ನು ತೊರೆದರು. ಖಿಲಾಫತ್ ಹೋರಾಟದಿಂದಾಗಿ ಮಹಾತ್ಮ ಗಾಂಧಿಯವರು ಆರಂಭಿಸಿದ ಅಸಹಕಾರ ಚಳುವಳಿಯನ್ನು ಹೆಡ್ಗೆವಾರ್ ಒಪ್ಪಲಿಲ್ಲ, ನಂತರ ಹಿಂದೂ ರಾಷ್ಟ್ರದ ಗುರಿಗಾಗಿ 1925ರಲ್ಲಿ ಆರ್‌ಎಸ್‌ಎಸ್‌ ಸ್ಥಾಪಿಸಿದರು.

    1929ರಲ್ಲಿ ಲಾಹೋರ್ ಅಧಿವೇಶನದಲ್ಲಿ ಕಾಂಗ್ರೆಸ್ ಪೂರ್ಣ ಸ್ವರಾಜ್ ಅಂಗೀಕರಿಸಿತು. ಕಾಂಗ್ರೆಸ್ ತ್ರಿವರ್ಣ ಧ್ವಜವನ್ನು ಹಾರಿಸಿದಾಗ ಅವರು ಭಗವಾಧ್ವಜವನ್ನು ಹಾರಿಸಲು ಆರ್‌ಎಸ್‍ಎಸ್ ಕಾರ್ಯಕರ್ತರನ್ನು ಒತ್ತಾಯಿಸಿದರು. ಸಂಘದ ಯಾವುದೇ ಜವಾಬ್ದಾರಿಯುತ ಕಾರ್ಯಕರ್ತರು 1930ರ ದಶಕದಲ್ಲಿ ನಡೆದ ಗಾಂಧೀಜಿಯವರ ದಂಡಿಯಾತ್ರೆ ಅಥವಾ ಉಪ್ಪಿನ ಸತ್ಯಾಗ್ರಹದಲ್ಲಿ ಭಾಗವಹಿಸಬಾರದು ಎಂದು ಸಿ.ಪಿ.ಭಿಷಿಕರ್ ಬರೆದ ಹೆಡ್ಗೆವಾರ್‌ ಅವರ ಅಧಿಕೃತ ಜೀವನ ಚರಿತ್ರೆಯಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಗನ್ ಹಿಡಿಯೋದು ನಮ್ಮ ಜನ್ಮಸಿದ್ಧ ಹಕ್ಕು, ಅದನ್ನ ಕೇಳೋಕೆ ಇವನ್ಯಾರು: ಸಿದ್ದು ವಿರುದ್ಧ ಬೋಪಯ್ಯ ಕಿಡಿ

    ಇಂತಹ ದೇಶದ್ರೋಹಿಯ ಭಾಷಣವನ್ನು ಪಠ್ಯಕ್ರಮದಲ್ಲಿ ಸೇರಿಸಿರುವುದು ಶಿಕ್ಷಣದಲ್ಲಿ ಹಿಂದುತ್ವ ಸಿದ್ಧಾಂತದ ಹೇರಿಕೆಯೆಂಬುದು ಸ್ಪಷ್ಟವಾಗಿದೆ. ಇದನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ತೀವ್ರವಾಗಿ ವಿರೋಧಿಸಿದೆ. ಈ ಹೆಡ್ಗೆವಾರ್ ಭಾಷಣವನ್ನು ಶೀಘ್ರವೇ ಪಠ್ಯಕ್ರಮದಿಂದ ಕೈ ಬಿಡಬೇಕೆಂದು ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಥಾವುಲ್ಲ ಪುಂಜಾಲಕಟ್ಟೆ ಒತ್ತಾಯಿಸಿದ್ದಾರೆ.

  • ವಿದ್ಯಾರ್ಥಿಗಳ ಸಮವಸ್ತ್ರದಲ್ಲೂ ಬೊಮ್ಮಾಯಿ ಸರ್ಕಾರದ ಹಗರಣ – ಶಿಕ್ಷಣ ಸಚಿವರು ರಾಜೀನಾಮೆಗೆ ಕ್ಯಾಂಪಸ್ ಫ್ರಂಟ್ ಪಟ್ಟು

    ವಿದ್ಯಾರ್ಥಿಗಳ ಸಮವಸ್ತ್ರದಲ್ಲೂ ಬೊಮ್ಮಾಯಿ ಸರ್ಕಾರದ ಹಗರಣ – ಶಿಕ್ಷಣ ಸಚಿವರು ರಾಜೀನಾಮೆಗೆ ಕ್ಯಾಂಪಸ್ ಫ್ರಂಟ್ ಪಟ್ಟು

    ಬೆಂಗಳೂರು: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ವಿತರಿಸುವ ಸಮವಸ್ತ್ರದಲ್ಲಿ ಬಹು ಕೋಟಿಯ ಹಗರಣ ಬೆಳಕಿಗೆ ಬಂದಿದ್ದು, ಇದು ಶಿಕ್ಷಣ ಸಚಿವರ ಕಮಿಷನ್ ದಂಧೆಯಾಗಿದೆ ಎಂದು ಕ್ಯಾಂಪಸ್ ಫ್ರಂಟ್ ಕರ್ನಾಟಕ ಆಗ್ರಹಿಸಿದೆ.

    ನಿರಂತರ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಚೆಲ್ಲಾಟವಾಡುತ್ತಿರುವ ಶಿಕ್ಷಣ ಸಚಿವರಾದ ಬಿ.ಸಿ ನಾಗೇಶ್ ರಾಜೀನಾಮೆ ನೀಡಬೇಕೆಂದು ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯ ಸಮಿತಿಯು ಒತ್ತಾಯಿಸುತ್ತಿದೆ. ಇದನ್ನೂ ಓದಿ: ಲಂಚವನ್ನು ಪಡೆದಿಲ್ಲ ಎಂದು ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲಿ: ಈಶ್ವರಪ್ಪಗೆ ಹಿಂದೂ ಮಹಾಸಭಾ ಸವಾಲು

    high court (1)

    ಆರ್‌ಟಿಇ ಕಾಯ್ದೆಯಡಿ ಬರುವ ವಿದ್ಯಾರ್ಥಿಗಳಿಗೆ 2019ರ ಕರ್ನಾಟಕ ಉಚ್ಛ ನ್ಯಾಯಾಲಯದ ಆದೇಶದಲ್ಲಿ ಸರ್ಕಾರವು ಹೊಲಿದ ಸಮವಸ್ತ್ರ ನೀಡಬೇಕೆಂದು ಹೇಳಿದೆ. ಈ ಹಿಂದೆ ಖಾಸಗಿ ಸಂಸ್ಥೆಗಳ ಮೂಲಕ ಸರ್ಕಾರ ನೀಡಿದ್ದ ಟೆಂಡರ್ ಪ್ರಕಾರ ಕೇವಲ 230 ರೂ.ಗೆ ಹೊಲಿದ ಎರಡು ಜೊತೆ ಸಮವಸ್ತ್ರ ಜೊತೆಗೆ ಶೂ, ಸಾಕ್ಸ್‌ ಹಾಗೂ ಟೈ ಕೂಡ ಎಸ್‍ಡಿಎಂಸಿ ಮುಖಾಂತರ ವಿತರಣೆ ಮಾಡಲಾಗಿತ್ತು. ಇದರಿಂದ ಸ್ಥಳೀಯ ವ್ಯಾಪಾರಿಗಳಿಗೆ ಉದ್ಯೋಗವಾಗುತ್ತಿದ್ದು ಆದರೆ ಇದೀಗ ಸರ್ಕಾರವು ಎಸ್‍ಡಿಎಂಸಿಯನ್ನು ಕಡೆಗಣಿಸಿ, ಕೇವಲ ಕಮಿಷನ್ ವ್ಯಾವೋಹದಿಂದ ಮಹಾರಾಷ್ಟ್ರ ಮೂಲದ ಕಂಪನಿಗೆ ಟೆಂಡರ್ ನೀಡಿ 250 ರೂ. ಗಳಂತೆ ಹೊಲಿಯದ ಬಟ್ಟೆಯನ್ನು ನೀಡಲು ಮುಂದಾಗಿದೆ. ಈ ಮುಖಾಂತರ ಬಹು ಕೋಟಿಯ ಹಗರಣ ನಡೆದಿದೆ ಎಂದು ಆರೋಪಿಸಿದೆ. ಇದನ್ನೂ ಓದಿ: ಪಂಚರಾಜ್ಯಗಳ ಚುನಾವಣೆ ಸೋಲಿನ ಬಳಿಕ ಎಚ್ಚೆತ್ತ ಕಾಂಗ್ರೆಸ್ – ಗುಜರಾತ್ ಎಲೆಕ್ಷನ್ ಮೇಲೆ ಕಣ್ಣು

    ಶಿಕ್ಷಣ ಸಚಿವರು ಈ ಹಗರಣದ ಹಿಂದೆ ಕಮಿಷನ್ ದಂಧೆ ನಡೆಸುತ್ತಿದ್ದು ಉಚ್ಛ ನ್ಯಾಯಾಲಯದ ತೀರ್ಪನ್ನು ಕೂಡ ಪರಿಗಣಿಸದೆ ನ್ಯಾಯಾಲಯದ ನಿಂದನೆ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳ ಸಮವಸ್ತ್ರದಲ್ಲೂ ಕಮಿಷನ್ ದಂಧೆ ನಡೆಸಿ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಚೆಲ್ಲಾಟವಾಡುತ್ತಿರುವ ಶಿಕ್ಷಣ ಸಚಿವರು ಶೀಘ್ರ ರಾಜೀನಾಮೆ ನೀಡಬೇಕೆಂದು ಕ್ಯಾಂಪಸ್ ಫ್ರಂಟ್ ರಾಜ್ಯಾಧ್ಯಕ್ಷ ಅಥಾವುಲ್ಲ ಪುಂಜಾಲಕಟ್ಟೆ ಆಗ್ರಹಿಸಿದ್ದಾರೆ.

  • ಮುಸ್ಲಿಂ ಮಹಿಳೆಯರನ್ನು ಅಮಾನವೀಯಗೊಳಿಸಲು ಸಂಘಟಿತ ಸಂಚು: ಕ್ಯಾಂಪಸ್‌ ಫ್ರಂಟ್‌ ಆರೋಪ

    ಮುಸ್ಲಿಂ ಮಹಿಳೆಯರನ್ನು ಅಮಾನವೀಯಗೊಳಿಸಲು ಸಂಘಟಿತ ಸಂಚು: ಕ್ಯಾಂಪಸ್‌ ಫ್ರಂಟ್‌ ಆರೋಪ

    ಬೆಂಗಳೂರು: ಮುಸ್ಲಿಂ ಮಹಿಳೆಯರನ್ನು ಅಮಾನವೀಯಗೊಳಿಸಲು ಬಲಪಂಥೀಯ ಹಿಂದುತ್ವ ಗುಂಪುಗಳು ವ್ಯವಸ್ಥಿತವಾಗಿ ರಾಷ್ಟ್ರವ್ಯಾಪಿ ಪಿತೂರಿ ನಡೆಸುತ್ತಿರುವುದನ್ನು ನಾವು ಕಾಣುತ್ತಿದ್ದೇವೆ. ವಿವಿಧ ರಾಜ್ಯಗಳಲ್ಲಿ ಅವರ ವಿರುದ್ಧ ಕೆಲವು ದಾಳಿಗಳು ನಡೆದಿವೆ. ಅದಕ್ಕೆ ಸಂಬಂಧಿಸಿದ ವ್ಯಕ್ತಿಗಳು ಮತ್ತು ಸರ್ಕಾರ, ಪೊಲೀಸರ ಪ್ರತಿಕ್ರಿಯೆಯು ಅನುಮಾನವನ್ನು ಇನ್ನಷ್ಟು ಬಲಪಡಿಸುತ್ತಿದೆ ಎಂದು ಕ್ಯಾಂಪಸ್‌ ಫ್ರಂಟ್‌ ಸದಸ್ಯರು ಗಂಭೀರ ಆರೋಪ ಮಾಡಿದ್ದಾರೆ.

    ಈ ಸಂಬಂಧ ಸುದ್ದಿಗೋಷ್ಠಿ ನಡೆಸಿದ ಸದಸ್ಯರು, ಮುಸ್ಲಿಂ ಮಹಿಳಾ ಹೋರಾಟಗಾರ್ತಿಯರನ್ನು ಆನ್‌ಲೈನ್ ವೇದಿಕೆಗಳಲ್ಲಿ ಹರಾಜು ಹಾಕುವುದು, ಕರ್ನಾಟಕ ಮತ್ತು ಕೇರಳದಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ಮೂಲಭೂತ ಹಕ್ಕುಗಳನ್ನು ನಿರಾಕರಿಸುವುದು ದೊಡ್ಡ ಪಿತೂರಿಯ ಭಾಗವಾಗಿದೆ. ಆನ್‌ಲೈನ್ ಹರಾಜಿನ ಸಂಚುಕೋರರು ಕರ್ನಾಟಕ, ಮಹಾರಾಷ್ಟ್ರ, ದೆಹಲಿ, ಮಧ್ಯಪ್ರದೇಶ ಮತ್ತು ಉತ್ತರಾಖಂಡಕ್ಕೆ ಸೇರಿದವರು. ಇದು ಈ ಗಂಭೀರ ಅಪರಾಧದ ಹಿಂದಿನ ಸಂಘಟಿತ ಜಾಲವನ್ನು ಸಾಬೀತುಪಡಿಸುತ್ತದೆ. ಮಹಾರಾಷ್ಟ್ರ ಪೊಲೀಸರು, ಪಿತೂರಿಯಲ್ಲಿ ಭಾಗಿಯಾಗಿದ್ದ ಕೆಲವರನ್ನು ಬಂಧಿಸುವವರೆಗೂ ಈ ಗಂಭೀರ ಅಪರಾಧದ ವಿರುದ್ಧ ಪೊಲೀಸರು ನಿಷ್ಕ್ರಿಯರಾಗಿದ್ದರು. ಬಂಧಿತರೆಲ್ಲರೂ ರಾಜ್ಯಗಳನ್ನು ಮೀರಿ ಹಿಂದುತ್ವ ಸಂಪರ್ಕ ಹೊಂದಿದ್ದಾರೆ ಎಂದು ದೂರಿದ್ದಾರೆ. ಇದನ್ನೂ ಓದಿ: ಹಿಜಬ್ ವಿವಾದದಲ್ಲಿ ಕಾಂಗ್ರೆಸ್ ಕೈವಾಡ- ಬಿಜೆಪಿ ಆರೋಪ

    ಉಡುಪಿ ಕಾಲೇಜಿನಲ್ಲಿ ಏಕಾಏಕಿ ಪ್ರಾಂಶುಪಾಲರು ಶಿರವಸ್ತ್ರ ತೆಗೆಯುವಂತೆ ಆದೇಶಿಸಿದ್ದು, ಕಾಲೇಜು ಆಡಳಿತ ಮಂಡಳಿಯ ಮುಖ್ಯಸ್ಥರು ಬಿಜೆಪಿ ಶಾಸಕರಾಗಿರುವುದರಿಂದ ಬಿಜೆಪಿಯ ಒತ್ತಡದಿಂದ ಈ ರೀತಿ ಮಾಡಲಾಗಿದೆ. ಈ ಘಟನೆಯ ಮೊದಲು ಮುಸ್ಲಿಂ ಹುಡುಗಿಯರು ದೀರ್ಘಕಾಲದವರೆಗೆ ಹಿಜಬ್ ಧಾರಣೆ ಯಾವುದೇ ಸಮಸ್ಯೆಯನ್ನು ಸೃಷ್ಟಿಸಲಿಲ್ಲ. ಹುಡುಗಿಯರು ಹಿಜಬ್ ಧರಿಸಿ ತರಗತಿಗಳಿಗೆ ಹಾಜರಾಗುವುದನ್ನು ವಿರೋಧಿಸಿ ಸಂಘಪರಿವಾರದಿಂದ ಪ್ರೇರಣೆಗೊಂಡ ಯುವಕರ ಗುಂಪು ಕೇಸರಿ ಶಾಲು ಧರಿಸಿ ಕಾಲೇಜಿಗೆ ಪ್ರವೇಶಿದ್ದನ್ನು ನಾವು ಕಂಡಿದ್ದೇವೆ. ಈಗ ಅದೇ ತಂತ್ರವನ್ನು ಬಲಪಂಥೀಯ ಹಿಂದುತ್ವವಾದಿಗಳು ಇತರ ಕಾಲೇಜುಗಳಿಗೆ ಪಸರಿಸುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

    ಇದು ಮುಸ್ಲಿಂ ಮಹಿಳೆಯರನ್ನು ಅಮಾನವೀಯವಾಗಿಸಲು ಮತ್ತು ಅವರ ಧಾರ್ಮಿಕ ಗುರುತನ್ನು ದೂಷಿಸುವ ಸಂಘಟಿತ ಮತ್ತು ವ್ಯವಸ್ಥಿತ ಪಿತೂರಿ ಎಂಬುದರಲ್ಲಿ ಎರಡು ಮಾತಿಲ್ಲ. ಸಾಂವಿಧಾನಿಕ ಮೂಲಭೂತ ಹಕ್ಕುಗಳನ್ನು ನಿರಾಕರಿಸುವಲ್ಲಿ ಕಾಲೇಜು ಪ್ರಾಂಶುಪಾಲರು ತೊಡಗಿಸಿಕೊಂಡಿರುವುದು ನಿರಾಶೆಯ ವಿಷಯವಾಗಿದೆ. ಅದು ದ್ವೇಷ ಪಸರಿಸುವವರಿಗೆ ಮಾತ್ರ ಒಳಿತಾಗಿರುವ ವಿಷಯವಾಗಿದೆ. ಈ ಸಮಸ್ಯೆಗಳ ನ್ಯಾಯಯುತ ತನಿಖೆಯಾಗಬೇಕು. ಈ ಷಡ್ಯಂತ್ರದ ಹಿಂದಿರುವ ವ್ಯಕ್ತಿಗಳನ್ನು ಬಂಧಿಸುವಂತೆ ನಾವು ಒತ್ತಾಯಿಸುತ್ತಿದ್ದೇವೆ. ತಮ್ಮ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಲು ಹೋರಾಡುತ್ತಿರುವ ವಿದ್ಯಾರ್ಥಿಗಳಿಗೆ ಒಗ್ಗಟ್ಟನ್ನು ವ್ಯಕ್ತಪಡಿಸಲು ನಾವು ಎಲ್ಲಾ ಪ್ರಬುದ್ಧ ನಾಗರಿಕರಲ್ಲಿ ಮನವಿ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿನೇ ಹಿಜಬ್ ಹಾಕಿದ್ದಾರೆ: ಸಿಎಂ ಇಬ್ರಾಹಿಂ

    ಕ್ಯಾಂಪಸ್‌ ಫ್ರಂಟ್‌ನ ರಾಷ್ಟ್ರೀಯ ಸಮಿತಿ ಸದಸ್ಯೆ ಕೆ.ಪಿ ಫಾತಿಮಾ ಶೆರಿನ್, ಕೇರಳ ರಾಜ್ಯ ಉಪಾಧ್ಯಕ್ಷೆ ಝೀಬಾ ಶಿರೀನ್, ಕರ್ನಾಟಕ ಸಮಿತಿ ಸದಸ್ಯರಾದ ಆಯಿಶಾ ಮುರ್ಷಿದಾ, ಫಾತಿಮಾ ಉಸ್ಮಾನ್, ಜಿಲ್ಲಾ ನಾಯಕಿ ಮುದಶ್ಶಿರ ಸುದ್ದಿಗೋಷ್ಠಿ ನಡೆಸಿದ್ದಾರೆ.

  • ಪಠ್ಯಪುಸ್ತಕದಲ್ಲಿ ಪ್ರವಾದಿ, ಇಸ್ಲಾಂ ಅವಹೇಳನ – ಪ್ರೊ.ಬಿ.ಆರ್.ರಾಮಚಂದ್ರಯ್ಯರನ್ನು ಕೆಲಸದಿಂದ ವಜಾಗೊಳಿಸಿಲು ಆಗ್ರಹ

    ಪಠ್ಯಪುಸ್ತಕದಲ್ಲಿ ಪ್ರವಾದಿ, ಇಸ್ಲಾಂ ಅವಹೇಳನ – ಪ್ರೊ.ಬಿ.ಆರ್.ರಾಮಚಂದ್ರಯ್ಯರನ್ನು ಕೆಲಸದಿಂದ ವಜಾಗೊಳಿಸಿಲು ಆಗ್ರಹ

    ತುಮಕೂರು: ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳಿಗೆ ಅನ್ವಯಗೊಂಡ ಬಿಎಡ್ ಮೂರನೇ ಸೆಮಿಸ್ಟರ್ ಮೌಲ್ಯಾಧಾರಿತ ಶಿಕ್ಷಣದ ಹೆಸರಿನಲ್ಲಿರುವ ಪಠ್ಯಪುಸ್ತಕದಲ್ಲಿ ಇಸ್ಲಾಂ ಧರ್ಮ ಮತ್ತು ಮುಸ್ಲಿಮರ ಪ್ರವಾದಿ ಮುಹಮ್ಮದ್(ಸ) ಅವರ ಕುರಿತು ಪೂರ್ವಗ್ರಹಪೀಡಿತ, ಅವಹೇಳನಾಕಾರಿ ಅಂಶಗಳನ್ನು ಬರೆದ ಪ್ರೊ.ಬಿ.ಆರ್.ರಾಮಚಂದ್ರಯ್ಯ ವಿರುದ್ಧ ತುಮಕೂರಿನ ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ಪ್ರಕರಣ ದಾಖಲಿಸಿದೆ.

    ತುಮಕೂರಿನ ಕಾಲೇಜೊಂದರ ಸಹಾಯಕ ಪ್ರಾಧ್ಯಾಪಕ ಬಿ.ಆರ್.ರಾಮಚಂದ್ರಯ್ಯ ಎಂಬವರು ಬರೆದಿರುವ ಮೈಸೂರಿನ ವಿಸ್ಮಯ ಪ್ರಕಾಶನ ಪ್ರಕಟಿಸಿರುವ ‘ಮೌಲ್ಯ ದರ್ಶನ ದಿ ಎಸ್ಸೆನ್ಸ್ ಆಫ್ ವ್ಯಾಲ್ಯೂ ಎಜುಕೇಶನ್’ ಎಂಬ ಆಂಗ್ಲ ಕೃತಿಯಲ್ಲಿ ಇಸ್ಲಾಂ, ಮುಸ್ಲಿಮರನ್ನು ಮತ್ತು ಪ್ರವಾದಿ ಮುಹಮ್ಮದ್(ಸ) ಅವರನ್ನು ನಿಂದಿಸಲಾಗಿದೆ. ಈ ಕೃತಿಯನ್ನು ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳು ಕೂಡ ಬಿಎಡ್ ಮೂರನೇ ಸೆಮಿಸ್ಟರ್ ಪಠ್ಯಪುಸ್ತಕವಾಗಿ ಆಯ್ಕೆ ಮಾಡಿಕೊಂಡಿದೆ. ಇದನ್ನೂ ಓದಿ:  ಅಲ್ಪಸಂಖ್ಯಾತರ ಬಗ್ಗೆ ಬಿಜೆಪಿ ದ್ವಂದ್ವ ನೀತಿ: ಹೆಚ್‍ಡಿಕೆ ತರಾಟೆ

    ಉದ್ದೇಶಪೂರ್ವಕರಾಗಿ ಕೋಮುಭಾವನೆಯನ್ನು ಕೆರಳಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿದ ಲೇಖಕ ಹಾಗೂ ವಿಸ್ಮಯ ಪಬ್ಲಿಕೇಶನ್ ವಿರುದ್ಧ ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳು ನೀಡಿದ ದೂರಿನನ್ವಯ ಇದೀಗ ತುಮಕೂರಿನ ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗೆ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಚಲಾವಣೆಯಲ್ಲಿರುವ ಬಿಎಡ್ ಮೂರನೇ ಸೆಮಿಸ್ಟರ್ ಮೌಲ್ಯ ಶಿಕ್ಷಣ ಎಂಬ ಪುಸ್ತಕವನ್ನು ತಕ್ಷಣ ಸ್ಥಗಿತಗೊಳಿಸಿ, ಸಂಪೂರ್ಣವಾಗಿ ನಾಶಗೊಳಿಸಬೇಕು.

    ರಾಮಚಂದ್ರಯ್ಯ ಅವರನ್ನು ಪ್ರೊಫೆಸರ್ ಹುದ್ದೆಯಿಂದ ತಕ್ಷಣ ವಜಾಗೊಳಿಸಬೇಕು. ವಿಸ್ಮಯ ಪಬ್ಲಿಕೇಶನ್ ವಿರುದ್ಧ ಕಠಿಣ ಕಾನೂನು ಕ್ರಮ ತಗೆದುಕೊಂಡು ಪರವಾನಿಗೆ ರದ್ದುಗೊಳಿಸಬೇಕೆಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ಆಗ್ರಹಿಸುತ್ತಿದೆ. ಇದನ್ನೂ ಓದಿ:  ಮಹಿಳೆಯರ ಆತ್ಮರಕ್ಷಣೆಗಾಗಿ ವಿಶೇಷ ತರಬೇತಿ: ಬಸವರಾಜ ಬೊಮ್ಮಾಯಿ

  • ದ.ಕ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜಿಗಾಗಿ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳಿಂದ ಧರಣಿ

    ದ.ಕ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜಿಗಾಗಿ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳಿಂದ ಧರಣಿ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್ ಸ್ಥಾಪಿಸಬೇಕೆಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ನಡೆಸುತ್ತಿರುವ ಜನಾಂದೊಲನದ ಭಾಗವಾಗಿ ಗುರುವಾರ ಮಂಗಳೂರಿನ ಮಿನಿ ವಿಧಾನಸೌಧ ಮುಂಭಾಗದಲ್ಲಿ ವಿದ್ಯಾರ್ಥಿಗಳು ಧರಣಿಯನ್ನು ನಡೆಸಿದರು.

    ಮುಸ್ಲಿಂ ಒಕ್ಕೂಟ ದಕ್ಷಿಣ ಕನ್ನಡ ಜಿಲ್ಲೆಯ ಅಧ್ಯಕ್ಷರಾದ ಅಶ್ರಫ್ ಮೇಯರ್, ಸರ್ಕಾರಿ ಮೆಡಿಕಲ್ ಕಾಲೇಜಿಗಾಗಿ ಹೋರಾಟ ಕೇವಲ ಕ್ಯಾಂಪಸ್ ಫ್ರಂಟ್ ನ ಹೋರಾಟವಲ್ಲ. ಇದು ಜಿಲ್ಲೆಯ ಜನತೆಯ ಹೋರಾಟವಾಗಿದೆ. ಇದು ಸಂಸದರು, ಶಾಸಕರ ನಿರ್ಲಕ್ಷ್ಯವಾಗಿದ್ದು, ಪ್ರತಿಯೊಂದು ಸಂಘಟನೆಯ ನಾಯಕರು ಈ ಹೋರಾಟಕ್ಕೆ ಕೈಜೋಡಿಸಬೇಕಾಗಿದೆ ಎಂದು ಹೇಳಿದರು.

    ಕ್ಯಾಂಪಸ್ ಫ್ರಂಟ್ ರಾಜ್ಯ ಕೋಶಾಧಿಕಾರಿಯಾದ ಸವಾದ್ ಕಲ್ಲರ್ಪೆ ಮಾತನಾಡಿ, 8 ಶಾಸಕರು, 7 ವಿಧಾನ ಪರಿಷತ್ತು ಸದಸ್ಯರು, 1 ಲೋಕಸಭಾ ಸದಸ್ಯ, 2 ರಾಜ್ಯ ಸಚಿವರು, 1 ಕೇಂದ್ರ ಸಚಿವೆ ಜಿಲ್ಲೆಯ ಇಷ್ಟು ಜನರು ಜವಾಬ್ದಾರಿಯುತ ಸ್ಥಾನದಲ್ಲಿದ್ದರೂ ಮೆಡಿಕಲ್ ಕಾಲೇಜು ಇಷ್ಟರವರೆಗೆ ಜಿಲ್ಲೆಗೆ ಸ್ಥಾಪಿಸಲು ಸಾಧ್ಯವಾಗಿಲ್ಲ ಎಂದಾದರೆ ಜಿಲ್ಲೆಯ ಜನತೆಗೆ ಮಾಡುವ ಘೋರ ಅನ್ಯಾಯವಾಗಿದೆ ಎಂದು ಆಕ್ರೋಶ ಹೊರಹಾಕಿದರು.

    ಕ್ಯಾಂಪಸ್ ಫ್ರಂಟ್ ರಾಜ್ಯಧ್ಯಕ್ಷರಾದ ಅಥಾವುಲ್ಲಾ ಪುಂಜಾಲಕಟ್ಟೆ ಮಾತನಾಡಿ, ಖಾಸಗಿ ವೈದ್ಯಕೀಯ ಕಾಲೇಜುಗಳ ಅಟ್ಟಹಾಸವನ್ನು ನಿಲ್ಲಿಸಲು ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿ ಸಂಘಟನೆಯು ಮುಂಚೂಣಿಯಲ್ಲಿದ್ದು, ಈ ಧರಣಿಯು ಹೋರಾಟದ ಮೊದಲ ಹಂತವಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಜನತೆಯನ್ನು ಸೇರಿಸಿ ಬೃಹತ್ ಹೋರಾಟವನ್ನು ನಡೆಸಲಿದ್ದೇವೆ ಎಂದು ಎಚ್ಚರಿಸಿದರು.

    ಮಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಪಟ್ಟಾಭಿರಾಮ ಸೋಮಯಾಜಿ ಮಾತನಾಡಿ, ಶಿಕ್ಷಣ ಮತ್ತು ಆರೋಗ್ಯ ವೆಂಬುದು ಸಂವಿಧಾನ ನೀಡಿದ ಮೂಲಭೂತ ಹಕ್ಕಾಗಿದ್ದು, ಈ ಎರಡರಲ್ಲೂ ಖಾಸಗೀಕರಣ ಸಲ್ಲದು. ದ.ಕ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಅತ್ಯಾವಶ್ಯಕವಾಗಿದ್ದು, ಈ ಹೋರಾಟದ ಮುಂದುವರಿಕೆ ಅನಿವಾರ್ಯವಾಗಿದೆ. ಎಂದು ಹೇಳಿದರು.

    ಸಾಮಾಜಿಕ ಹೋರಾಟಗಾರರು ಹಾಗೂ ಬರಹಗಾರರಾದ ಇಸ್ಮತ್ ಫಜೀರ್ ಅವರು, ಇಂದು ಜಿಲ್ಲೆಯಲ್ಲಿ ವೈದ್ಯಕೀಯ ಸೀಟು ನೀಡುತ್ತಿರುವುದು ಶ್ರೀಮಂತಿಕೆಯ ಆಧಾರದಲ್ಲಿಯೇ ಹೊರತು ಅವರ ಸಾಮರ್ಥ್ಯದ ಆಧಾರದಲ್ಲಿ ಎಂಬುದು ವಿಷಾದನೀಯ. ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗುವ ಮುಖಾಂತರ ಜಿಲ್ಲೆಯ ಬಡ, ಮಧ್ಯಮ ವರ್ಗದ ವಿದ್ಯಾರ್ಥಿಗಳ ಪಾಲಿಗೆ ಆಶಾಕಿರಣವಾಗಬೇಕಾಗಿದೆ ಎಂದು ಹೇಳಿದರು.

    ಎಸ್.ಡಿ.ಪಿ.ಐ ದ.ಕ ಜಿಲ್ಲಾ ಕಾರ್ಯದರ್ಶಿ ಅನ್ವರ್ ಸಾದಾತ್ ಅವರು, ಜಿಲ್ಲೆಯಲ್ಲಿ ನಡೆಯುತ್ತಿರುವ ಮೆಡಿಕಲ್ ಮಾಫಿಯಾಗೆ ಕಡಿವಾಣ ಹಾಕಬೇಕಾದರೆ ದ.ಕ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಅವಶ್ಯಕ. ಲಕ್ಷ – ಕೋಟಿ ಫೀಸು ನೀಡಿ ವೈದ್ಯರಾದ ಜಿಲ್ಲೆಯ ಹಲವಾರು ಖಾಸಗಿ ವೈದ್ಯರುಗಳು ಇಂದು ಆರೋಗ್ಯ ಕ್ಷೇತ್ರವನ್ನು ವ್ಯಾಪಾರೀಕರಣ ಮಾಡದೆ ಮತ್ತೇನು ಮಾಡ್ಯಾರು? ಎಂದು ಹೇಳಿದರು. ಮಂಗಳೂರು ಜಿಲ್ಲಾಧ್ಯಕ್ಷರಾದ ಇನಾಯತ್ ಅಲಿ ಸ್ವಾಗತಿಸಿ ಕಾರ್ಯದರ್ಶಿ ಮುನೀರ್ ಬಜಾಲ್ ಧನ್ಯವಾದಗೈದರು.

    ಈ ಸಂದರ್ಭದಲ್ಲಿ ಕ್ಯಾಂಪಸ್ ಪ್ರಂಟ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸಿರಾಜ್ ಸುರತ್ಕಲ್, ಜಿಲ್ಲಾ ಮುಖಂಡರಾದ ಶರ್ಫುಧ್ಧೀನ್ ಬಜ್ಪೆ,ಅನ್ಸಾರ್ ಪುತ್ತೂರು, ಯಾಸೀನ್ ಬೆಳ್ತಂಗಡಿ, ಫಯಾಝ್ ವಿಟ್ಲ ಉಪಸ್ಥಿತರಿದ್ದರು.