Tag: canada

  • ಖಲಿಸ್ತಾನಿ ಬೆಂಬಲಿಗರಿಂದ ಇಂದಿರಾ ಗಾಂಧಿ ಹತ್ಯೆಯ ಸ್ತಬ್ಧಚಿತ್ರ ಮೆರವಣಿಗೆ

    ಖಲಿಸ್ತಾನಿ ಬೆಂಬಲಿಗರಿಂದ ಇಂದಿರಾ ಗಾಂಧಿ ಹತ್ಯೆಯ ಸ್ತಬ್ಧಚಿತ್ರ ಮೆರವಣಿಗೆ

    ಒಟ್ಟೋವಾ: ಖಲಿಸ್ತಾನಿ ಬೆಂಬಲಿಗರು (Khalistani Supporters) ಇಂದಿರಾ ಗಾಂಧಿ ಅವರ ಹತ್ಯೆಗೆ (Indira Gandhi’s assassination) ಸಂಬಂಧಿಸಿದ ಸ್ತಬ್ಧಚಿತ್ರವನ್ನು ಮೆರವಣಿಗೆ ಮಾಡಿರುವ ಘಟನೆ ಕೆನಡಾದಲ್ಲಿ ನಡೆದಿದೆ. ಈ ಸಂಬಂಧದ ವೀಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

    ಕೆನಡಾದ (Canada) ಬ್ರಾಂಪ್ಟನ್‌ ನಗರದಲ್ಲಿ ವಿವಾದಿತ ಸ್ತಬ್ಧಚಿತ್ರ ಮೆರವಣಿಗೆ ಮಾಡಲಾಯಿತು. 1984 ಅಕ್ಟೋಬರ್‌ 31 ರಂದು ಇಂದಿರಾ ಗಾಂಧಿ ಅವರನ್ನು ಹತ್ಯೆ ಮಾಡಲಾಗಿತ್ತು. ಪ್ರಧಾನಿಯ ಭದ್ರತಾ ಸಿಬ್ಬಂದಿಗಳೇ ಹತ್ಯೆ ಮಾಡಿದ್ದರು. ಆ ಸಂದರ್ಭವನ್ನು ಸ್ತಬ್ಧಚಿತ್ರದಲ್ಲಿ ಬಿಂಬಿಸಲಾಗಿತ್ತು. ಇದನ್ನೂ ಓದಿ: PublicTV Explainer: ಭಾರತೀಯ ವಿಜ್ಞಾನಿಗಳಿಂದ ‘ಏಲಿಯನ್‌ ಗ್ರಹ’ ಪತ್ತೆ – ಇಲ್ಲಿ ಅನ್ಯಗ್ರಹ ಜೀವಿಗಳು ಇವೆಯೇ?

    ಜೂ. 6 ರಂದು ‘ಆಪರೇಷನ್‌ ಬ್ಲೂ ಸ್ಟಾರ್‌’ ಆಚರಣೆಗೂ ಮೊದಲು ಜೂ.4 ರಂದು ಖಲಿಸ್ತಾನಿ ಬೆಂಬಲಿಗರು ಪರೇಡ್‌ ಆಯೋಜಿಸಿದ್ದರು. ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಕೊಲೆಗಾರರು ಹತ್ಯೆ ಮಾಡುತ್ತಿರುವ ಸಂದರ್ಭದ ಸ್ತಬ್ಧಚಿತ್ರ ನಿರ್ಮಿಸಲಾಗಿದೆ. ಕೊಲೆ ಮಾಡಿದವರು ಪ್ರಧಾನಿ ಭದ್ರತಾ ಸಿಬ್ಬಂದಿಯೇ ಆಗಿದ್ದರು. ಆ ಸ್ತಬ್ಧಚಿತ್ರದಲ್ಲಿ “ಶ್ರೀ ದರ್ಬಾರ್ ಸಾಹಿಬ್ ಮೇಲಿನ ದಾಳಿಗೆ ಪ್ರತೀಕಾರ” ಎಂದು ಹೇಳುವ ಫಲಕ ಅಳವಡಿಸಲಾಗಿದೆ.

    ಸ್ತಬ್ಧಚಿತ್ರ ಮೆರವಣಿಗೆಗೆ ಕೆನಡಾ ಹೈಕಮಿಷನರ್‌ ಖಂಡನೆ ವ್ಯಕ್ತಪಡಿಸಿದೆ. ಕೆನಡಾದ ಬ್ರಾಂಪ್ಟನ್ ನಗರದಲ್ಲಿ ದಿವಂಗತ ಭಾರತದ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಯ ಸಂಭ್ರಮಾಚರಣೆಯ ವರದಿಗಳನ್ನು ಭಾರತದಲ್ಲಿ ಕೆನಡಾದ ಹೈಕಮಿಷನರ್ ಕ್ಯಾಮರೂನ್ ಮ್ಯಾಕೆ ಖಂಡಿಸಿದ್ದಾರೆ. “ಕೆನಡಾದಲ್ಲಿ ದ್ವೇಷ ಅಥವಾ ಹಿಂಸಾಚಾರವನ್ನು ವೈಭವೀಕರಿಸುವುದಕ್ಕೆ ಅವಕಾಶ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ದಿಲ್ಲಿಯಿಂದ ಸ್ಯಾನ್‌ ಫ್ರಾನ್ಸಿಸ್ಕೋಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರಷ್ಯಾದಲ್ಲಿ ತುರ್ತು ಭೂಸ್ಪರ್ಶ

    “ಭಾರತದ ದಿವಂಗತ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಯನ್ನು ಕೆನಡಾದಲ್ಲಿ ಆಚರಿಸಿದ ಘಟನೆಯ ವರದಿಗಳಿಂದ ನಾನು ದಿಗ್ಭ್ರಮೆಗೊಂಡಿದ್ದೇನೆ. ಕೆನಡಾದಲ್ಲಿ ದ್ವೇಷಕ್ಕೆ ಅಥವಾ ಹಿಂಸೆಯ ವೈಭವೀಕರಣಕ್ಕೆ ಸ್ಥಳವಿಲ್ಲ. ಈ ಚಟುವಟಿಕೆಗಳನ್ನು ನಾನು ಖಡಾಖಂಡಿತವಾಗಿ ಖಂಡಿಸುತ್ತೇನೆ ಎಂದು ಕ್ಯಾಮರೂನ್ ಮ್ಯಾಕೆ ಟ್ವೀಟ್ ಮಾಡಿದ್ದಾರೆ.

  • Gangwar: ಗುಂಡಿನ ದಾಳಿಗೆ ಪಂಜಾಬ್‌ ಮೂಲದ ಗ್ಯಾಂಗ್‌ಸ್ಟರ್‌ ಬಲಿ

    Gangwar: ಗುಂಡಿನ ದಾಳಿಗೆ ಪಂಜಾಬ್‌ ಮೂಲದ ಗ್ಯಾಂಗ್‌ಸ್ಟರ್‌ ಬಲಿ

    ಒಟ್ಟಾವ: ಮದುವೆ ಸಮಾರಂಭದಲ್ಲಿ ಅಪರಿಚಿತರು ನಡೆಸಿದ ಗುಂಡಿನ ದಾಳಿಗೆ ಪಂಜಾಬ್‌ ಮೂಲದ ಗ್ಯಾಂಗ್‌ಸ್ಟರ್‌ (Punjab Origin Gangster) ಬಲಿಯಾಗಿರುವ ಘಟನೆ ಕೆನಡಾದ (Canada) ವ್ಯಾಂಕೋವರ್‌ ನಗರದಲ್ಲಿ ನಡೆದಿದೆ.

    ತಡರಾತ್ರಿ ಸುಮಾರು 1:30ರ ವೇಳೆಗೆ ಗುಂಡಿನ ದಾಳಿ (Shotout) ನಡೆದಿದ್ದು, 28 ವರ್ಷದ ಅಮರ್‌ ಪ್ರೀತ್‌ (ಚುಕ್ಕಿ) ಬಲಿಯಾಗಿದ್ದಾನೆ. ಗ್ಯಾಂಗ್‌ಸ್ಟರ್‌ಗಳಾಗಿದ್ದ ಅಮರ್‌ ಪ್ರೀತ್‌ ಸಹೋದರರಾದ ಸಮ್ರಾ ಮತ್ತು ರವೀಂದರ್‌ ಇಬ್ಬರೂ ಮದುವೆ ಅತಿಥಿಗಳಾಗಿ ಬಂದಿದ್ದರು. ಇದೇ ಸಮಾರಂಭಕ್ಕೆ ಕೆಲವು ಅಪರಿಚಿತ ವ್ಯಕ್ತಿಗಳೂ ಸೇರಿದಂತೆ 60 ಮಂದಿ ಹಾಜರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 5, 6 ವರ್ಷದ ಬಾಲಕಿಯರ ಮೇಲೆ ಸಂಬಂಧಿಕನಿಂದಲೇ ರೇಪ್‌ – ಆರೋಪಿ ಎಸ್ಕೇಪ್‌

    CRIME 2

    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದು ಉದ್ದೇಶಿತ ಗ್ಯಾಂಗ್‌ ವಾರ್‌ ಆಗಿದೆ. ಆರೋಪಿಗಳ ಬಗ್ಗೆ ಸುಳಿವು ಸಿಕ್ಕಲ್ಲಿ ಸಹಾಯವಾಣಿ ಮೊ.ಸಂ. 6047172500ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಪೊಲೀಸರಿಂದ ತಪ್ಪಿಸಿಕೊಳ್ಳಲು ಚಿನ್ನದ ಸರ ನುಂಗಿದ- ಗಂಟಲಲ್ಲಿ ಸಿಲುಕಿ ಆಸ್ಪತ್ರೆಯಲ್ಲಿ ನರಳಾಡಿದ! 

    2022ರ ಆಗಸ್ಟ್‌ನಲ್ಲಿ ಕೆನಡಾ ಪೊಲೀಸರು ಗ್ಯಾಂಗ್‌ಸ್ಟರ್‌ಗಳೊಂದಿಗೆ ಸಂಪರ್ಕದಲ್ಲಿದ್ದ 11 ವ್ಯಕ್ತಿಗಳ ಬಗ್ಗೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದರು. ಅವರಲ್ಲಿ ಅಮರ್‌ ಪ್ರೀತ್‌ ಮತ್ತು ಸಹೋದರ ರವೀಂದರ್‌ ಸೇರಿ 9 ಮಂದಿ ಪಂಜಾಬ್‌ ಮೂಲದವರು ಎಂದು ತಿಳಿಸಿದ್ದರು.

  • ತನಗಾಗಿ ಕೆನಡಾದಿಂದ ಭಾರತಕ್ಕೆ ಬಂದಿದ್ದ ಪ್ರೇಯಸಿಯನ್ನೇ ಕೊಂದ ಬಾಯ್‌ಫ್ರೆಂಡ್‌

    ತನಗಾಗಿ ಕೆನಡಾದಿಂದ ಭಾರತಕ್ಕೆ ಬಂದಿದ್ದ ಪ್ರೇಯಸಿಯನ್ನೇ ಕೊಂದ ಬಾಯ್‌ಫ್ರೆಂಡ್‌

    – ಲವ್ವರ್‌ ತಲೆಗೆ ಗುಂಡು ಹಾರಿಸಿ ಹತ್ಯೆ ಮಾಡಿ ಹೊಲದಲ್ಲಿ ಹೂತಿಟ್ಟ

    ಚಂಡೀಗಢ: ಪ್ರಿಯಕರನನ್ನು ಮದುವೆಯಾಗಲು ಕೆನಡಾದಿಂದ (Canada) ಭಾರತಕ್ಕೆ (India) ಬಂದಿದ್ದ ಯುವತಿಯ ಮೃತದೇಹ ಹರಿಯಾಣದ (Haryana) ಹೊಲವೊಂದರಲ್ಲಿ ಪತ್ತೆಯಾಗಿದೆ. ಕಳೆದ ವರ್ಷ ಜೂನ್‌ನಲ್ಲಿ ನೀಲಂ (23) ಎಂಬಾಕೆಯನ್ನು ಆಕೆಯ ಪ್ರಿಯಕರನೇ ಗುಂಡಿಟ್ಟು ಕೊಂದಿದ್ದು, ನಂತರ ಮೃತದೇಹವನ್ನು ತನ್ನ ಹೊಲದಲ್ಲಿ ಹೂತು ಹಾಕಿದ್ದಾನೆ.

    ಸುನಿಲ್ ತನಗಾಗಿ ಬಂದ ಪ್ರಿಯತಮೆಗೆ ಗುಂಡಿಟ್ಟು ಕೊಂದು ಹೂತುಹಾಕಿದ್ದಾರೆ. ಆಕೆಯ ಅಸ್ಥಿಪಂಜರದ ಅವಶೇಷಗಳು ಮಂಗಳವಾರ ಭಿವಾನಿಯಲ್ಲಿ ಪೊಲೀಸರಿಗೆ ಪತ್ತೆಯಾಗಿವೆ. ಇದನ್ನೂ ಓದಿ: ಪತಿಯನ್ನು ಕೊಂದು ಪೀಸ್ ಪೀಸ್ ಮಾಡಿ ಸೂಟ್‍ಕೇಸ್‍ನಲ್ಲಿ ತುಂಬಿದ ಪತ್ನಿ

    ಯುವತಿ ನೀಲಂಳನ್ನು ಅಪಹರಿಸಿ ಕೊಂದಿರುವುದಾಗಿ ಸುನೀಲ್ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ತನ್ನ ಅಪರಾಧವನ್ನು ಮರೆಮಾಚಲು ಆಕೆಯ ತಲೆಗೆ ಎರಡು ಬಾರಿ ಗುಂಡು ಹಾರಿಸಿ ನಂತರ ಶವವನ್ನು ತನ್ನ ಹೊಲದಲ್ಲಿ ಹೂತು ಹಾಕಿದ್ದಾನೆ ಎಂದು ಪೊಲೀಸ್ ಅಧಿಕಾರಿ ರವೀಂದ್ರ ಹೇಳಿದ್ದಾರೆ.

    ಕಳೆದ ಜೂನ್‌ನಲ್ಲಿ ನೀಲಂ ಸಹೋದರಿ ರೋಶನಿ ಪೊಲೀಸರಿಗೆ ದೂರು ನೀಡಿದ್ದರು. ನೀಲಂ, ಇಂಟರ್ನ್ಯಾಷನಲ್ ಇಂಗ್ಲಿಷ್‌ ಲ್ಯಾಂಗ್ವೇಜ್ ಟೆಸ್ಟಿಂಗ್ ಸಿಸ್ಟಮ್ (ಐಇಎಲ್ಟಿಎಸ್) ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಳು. ಕೆಲಸಕ್ಕಾಗಿ ಕೆನಡಾಕ್ಕೆ ಹೋಗಿದ್ದಳು. ಕಳೆದ ವರ್ಷ ಜನವರಿಯಲ್ಲಿ ಸುನಿಲ್ ಆಕೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿ ಭಾರತಕ್ಕೆ ವಾಪಸ್ ಕರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕಲ್ಯಾಣಿಯಲ್ಲಿ ಮುಳುಗಿ ಐವರು ಸಾವು

    ಕಸ್ಟಡಿಯಲ್ಲಿದ್ದ ಸುನಿಲ್‌ ವಿಚಾರಣೆಯ ಆಧಾರದ ಮೇಲೆ ಅಧಿಕಾರಿಗಳು ನೀಲಂ ಅಸ್ಥಿಪಂಜರದ ಅವಶೇಷಗಳನ್ನು ಆತನ ಜಮೀನಿನಲ್ಲಿ 10 ಅಡಿ ಆಳದ ಗುಂಡಿಯಿಂದ ಹೊರತೆಗೆದರು. ಮೃತದೇಹವನ್ನು ಸೋನಿಪತ್ ಸಿವಿಲ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ.

  • ಕೆನಡಾದಿಂದ ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನ – ಭಾರತೀಯರು ಸೇರಿ 8 ಮಂದಿ ಸಾವು

    ಕೆನಡಾದಿಂದ ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನ – ಭಾರತೀಯರು ಸೇರಿ 8 ಮಂದಿ ಸಾವು

    ವಾಷಿಂಗ್ಟನ್: ಕೆನಡಾದಿಂದ (Canada) ಅಮೆರಿಕಕ್ಕೆ (US) ಅಕ್ರಮವಾಗಿ ದಾಟಲು ಯತ್ನಿಸಿದ್ದ ಇಬ್ಬರು ಮಕ್ಕಳು ಸೇರಿದಂತೆ 8 ಜನರ ಶವಗಳನ್ನು ಕೆನಡಾ ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಮೃತರೆಲ್ಲರೂ ಸೇಂಟ್ ಲಾರೆನ್ಸ್ ನದಿಯ ಮೂಲಕ ದೋಣಿ ಮೂಲಕ ಕೆನಡಾದಿಂದ ಅಮೆರಿಕ ಪ್ರವೇಶಿಸಲು ಯತ್ನಿಸುತ್ತಿದ್ದರು. ಇವರಲ್ಲಿ ಭಾರತೀಯರು (Indian) ಸೇರಿದ್ದಾರೆ.

    ಮೃತರಲ್ಲಿ ಓರ್ವ ಮಹಿಳೆಯನ್ನು ಭಾರತ ಮೂಲದವರು ಹಾಗೂ ಮತ್ತೋರ್ವನನ್ನು ಕೆನಡಾ ಮೂಲದವರು ಎಂದು ಗುರುತಿಸಲಾಗಿದೆ. ಇವರೆಲ್ಲರೂ ಕೆನಡಾದಿಂದ ಅಕ್ರಮವಾಗಿ ಅಮೆರಿಕಾಕ್ಕೆ ದಾಟಲು ಪ್ರಯತ್ನಿಸುತ್ತಿದ್ದರು. ಆದರೆ ಕೆನಡಾ- ಅಮೆರಿಕಾ ಗಡಿಯ ಬಳಿಯ ಜವುಗು ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇದನ್ನೂ ಓದಿ: ಮಾಡಾಳ್‍ನ ಮೈಂಟೇನ್ ಮಾಡೋದೇ ‘ಲೋಕಾ’ಗೆ ಸವಾಲು- ರಾತ್ರಿಪೂರ್ತಿ ಕಣ್ಣೀರಿಡ್ತಿರೋ ಭ್ರಷ್ಟ ಮಾಡಾಳ್

    ಘಟನೆಗೆ ಸಂಬಂಧಿಸಿ ಕೆನಡಾ ಅಧಿಕಾರಿಗಳು ಮಾತನಾಡಿ, ಈ ಪ್ರದೇಶದಲ್ಲಿ ವೈಮಾನಿಕ ಶೋಧ ನಡೆಸಿದಾಗ ಮೊದಲ ಶವ ಪತ್ತೆಯಾಗಿದೆ. ನಾಪತ್ತೆ ಆದವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಸಾವಿಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ದೇವಸ್ಥಾನದ ಹುಂಡಿಗೆ ಹಾಕಲು ತೆಗೆದುಕೊಂಡು ಹೋಗುತ್ತಿದ್ದ 2.50 ಸಾವಿರ ಹಣ ಸೀಜ್

    .

  • ವಿದೇಶದಲ್ಲಿ ಮುಂದುವರೆದ ಜನಾಂಗೀಯ ದ್ವೇಷ: ಕೆನಾಡದಲ್ಲಿ ಸಿಖ್ ವಿದ್ಯಾರ್ಥಿ ಮೇಲೆ ಹಲ್ಲೆ

    ವಿದೇಶದಲ್ಲಿ ಮುಂದುವರೆದ ಜನಾಂಗೀಯ ದ್ವೇಷ: ಕೆನಾಡದಲ್ಲಿ ಸಿಖ್ ವಿದ್ಯಾರ್ಥಿ ಮೇಲೆ ಹಲ್ಲೆ

    ಒಟ್ಟಾವ: ವಿದೇಶಗಳಲ್ಲಿ ಜನಾಂಗೀಯ ದ್ವೇಷ (Racial hatred) ಮರುಕಳಿಸಿದ್ದು, ಕೆನಡಾದ (Canada) ಬ್ರಿಟಿಷ್ ಕೊಲಂಬಿಯಾದಲ್ಲಿ (British Columbia) ಭಾರತದ (India) ಸಿಖ್ (Sikh) ವಿದ್ಯಾರ್ಥಿಯ ಮೇಲೆ (Student) ಅಪರಿಚಿತ ವ್ಯಕ್ತಿಗಳ ಗುಂಪು ಶುಕ್ರವಾರ ಹಲ್ಲೆ ನಡೆಸಿದೆ.

    ಗಗನ್‍ದೀಪ್ ಸಿಂಗ್ (21) ಹಲ್ಲೆಗೊಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ರಾತ್ರಿ ಅಂಗಡಿಯೊಂದಕ್ಕೆ ತೆರಳಿದ್ದ ಗಗನ್‍ದೀಪ್ ಸಿಂಗ್ ರಾತ್ರಿ 10.30ರ ವೇಳೆಗೆ ಬಸ್‍ನಲ್ಲಿ ಬರುತ್ತಿದ್ದ. ಈ ಸಂದರ್ಭದಲ್ಲಿ 10 ರಿಂದ 15 ಜನರ ಗುಂಪು ಆತನ ಮೇಲೆ ಹಲ್ಲೆ ನಡೆಸಿದೆ ಎಂದು ಕೌನ್ಸಿಲರ್ ಮೋಹಿನಿ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ಚಾಕಲೇಟ್ ಆಮಿಷವೊಡ್ಡಿ 4ರ ಬಾಲಕಿ ಮೇಲೆ ಅತ್ಯಾಚಾರ

    ಆತನನ್ನು ಹಿಂಬಾಲಿಸಿ ಧರಿಸದ್ದ ಪೇಟವನ್ನು ಕಿತ್ತೆಸೆದಿದ್ದಾರೆ. ಆತನ ಕಾಲು, ಕೈ ಹಾಗೂ ಪಕ್ಕೆಲುಬುಗಳಿಗೆ ಒದ್ದು, ತಲೆಕೂದಲನ್ನು ಹಿಡಿದೆಳೆದು ರಸ್ತೆ ಬದಿಗೆ ತಳ್ಳಿದ್ದಾರೆ ಎಂದು ಕೌನ್ಸಿಲರ್ ತಿಳಿಸಿದ್ದಾರೆ.

    ನಂತರ ಆತನ ಸ್ನೇಹಿತರು ಸ್ಥಳಕ್ಕೆ ಬಂದು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಭಾರತೀಯರು ಎಂಬ ಒಂದೇ ಕಾರಣದಿಂದ ಹಲ್ಲೆ ನಡೆದಿದೆ ಎಂದು ಕೌನ್ಸಿಲರ್ (Councillor) ಆರೋಪಿಸಿದ್ದಾರೆ.

    ಕೆಲೋವ್ನಾದ ಆರ್‌ಸಿಎಂಪಿ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಹಾಗೂ ತಮ್ಮ ವ್ಯಾಪ್ತಿಯಲ್ಲಿ ಅಪರಾಧ ನಡೆದಿದ್ದಕ್ಕೆ ವಕ್ತಾರ ಕಾನ್ಸ್‌ಟೇಬಲ್‌ ಮೈಕ್ ಡೆಲ್ಲಾ ಪೋಲೆರಾ ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: HDK `ಪಂಚರತ್ನ’ಯಾತ್ರೆ ಪಂಚರ್ ಆಗಿದೆ, ಕಾಂಗ್ರೆಸ್ಸಿಗೆ ಹೀನಾಯ ಸ್ಥಿತಿ ಬಂದಿದೆ – ಕಟೀಲ್ ಲೇವಡಿ

  • ಜೋರಾಗಿ ಸಂಗೀತವನ್ನು ಹಾಕದಂತೆ ಕೇಳಿದ್ದಕ್ಕೆ ಕೆನಡಾ ನಿವಾಸಿಯ ಕೊಲೆ

    ಜೋರಾಗಿ ಸಂಗೀತವನ್ನು ಹಾಕದಂತೆ ಕೇಳಿದ್ದಕ್ಕೆ ಕೆನಡಾ ನಿವಾಸಿಯ ಕೊಲೆ

    ಚಂಡೀಗಢ: ಕೆನಡಾ (Canada) ನಿವಾಸಿಯೊಬ್ಬ ಜೋರಾಗಿ ಸಂಗೀತವನ್ನು (Music) ಹಾಕದಂತೆ ಕೇಳಿದ್ದಕ್ಕೆ ಗುಂಪೊಂದು ಹತ್ಯೆಗೈದ ಘಟನೆ ಪಂಜಾಬ್‍ನ (Pubjab) ರೂಪನಗರ ಜಿಲ್ಲೆಯ ಆನಂದ್‍ಪುರ ಸಾಹಿಬ್ ಪ್ರದೇಶದಲ್ಲಿ ನಡೆದಿದೆ.

    ಪ್ರದೀಪ್ ಸಿಂಗ್ (24) ಮೃತ ವ್ಯಕ್ತಿ. ಆದರೆ ಪ್ರದೀಪ್ ಸಿಂಗ್ ಕೆನಡಾದ ಪ್ರಜೆಯಾಗಿದ್ದು ಅಲ್ಲೇ ವಾಸಿಸುತ್ತಿದ್ದ. ಈ ವರ್ಷದ ಫೆಬ್ರವರಿಯಲ್ಲಿ ಪ್ರದೀಪ್ ಸಿಂಗ್ ಭಾರತಕ್ಕೆ ಬಂದಿದ್ದ. ಪ್ರದೀಪ್ ಸಿಂಗ್ ಪೋಷಕರಿಗೆ ಒಬ್ಬನೇ ಪುತ್ರನಾಗಿದ್ದು, ಈತ ತನ್ನ ಸ್ವಂತ ಊರಿಗೆ ಬಂದಿದ್ದ.

    ನಿರಂಜನ್ ಸಿಂಗ್ ಹಾಗೂ ಇತರರು ವಾಹನದಲ್ಲಿ ತಿರುಗಾಡುತ್ತಿದ್ದರು. ಈ ವೇಳೆ ಆರೋಪಿಗಳು ದೊಡ್ಡದಾಗಿ ಹಾಡು ಹಾಕಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಪ್ರದೀಪ್ ಹಾಡಿನ ಸೌಂಡ್‍ನ್ನು ಕಡಿಮೆ ಮಾಡಲು ತಿಳೀಸಿದ್ದಾನೆ. ಈ ಹಿನ್ನೆಲೆಯಲ್ಲಿ ಪ್ರದೀಪ್ ಮೇಲೆ ಆ ಗುಂಪು ಹಲ್ಲೆ ನಡೆಸಿದೆ.

    ಘಟನೆ ವೇಳೆ ತೀವ್ರ ಗಾಯಗೊಂಡಿದ್ದ ಪ್ರದೀಪ್‍ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆತ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಫಾಸ್ಟ್ ಟ್ಯಾಗ್‌ನಲ್ಲಿ ಹಣವಿಲ್ಲದೇ ಟೋಲ್ ಬಳಿಯೇ ನಿಂತ‌ ಇವಿ ಬಸ್‌ಗಳು

    ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವದಂತಿಗಳಿಗೆ ಯಾವುದೇ ಕಿವಿಗೊಡಬೇಡಿಮ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಿಧಾನಸೌಧದಲ್ಲಿನ ಎಣ್ಣೆ ಬಾಟ್ಲಿ ಹಿಂದಿನ ಕಥೆ ರಿವೀಲ್

  • ಕೆನಡಾ ಪೌರತ್ವ ಬದಲಾಯಿಸಲು ಬಾಲಿವುಡ್ ನಟ ಅಕ್ಷಯ್ ಕುಮಾರ್ ತೀರ್ಮಾನ

    ಕೆನಡಾ ಪೌರತ್ವ ಬದಲಾಯಿಸಲು ಬಾಲಿವುಡ್ ನಟ ಅಕ್ಷಯ್ ಕುಮಾರ್ ತೀರ್ಮಾನ

    ಲವು ವರ್ಷಗಳಿಂದ ಭಾರತದಲ್ಲಿ ನೆಲೆಯೂರಿರುವ ಮತ್ತು ಭಾರತದವರೇ ಆಗಿರುವ  ಬಾಲಿವುಡ್ ನಟ ಅಕ್ಷಯ್ ಕುಮಾರ್ (Akshay Kumar), ಈವರೆಗೂ ಭಾರತದ (India) ಪೌರತ್ವ (Citizenship) ಹೊಂದಿರಲಿಲ್ಲ. ಹಾಗಾಗಿ ಪೌರತ್ವದ ವಿಷಯದಲ್ಲಿ ಪದೇ ಪದೇ ಟೀಕೆಗೆ ಒಳಗಾಗುತ್ತಿದ್ದರು. ದೇಶದ ಪರವಾಗಿ ಅಕ್ಷಯ್ ಕುಮಾರ್ ಮಾತನಾಡಿದಾಗೆಲ್ಲ ಪೌರತ್ವವನ್ನು ಪ್ರಶ್ನೆ ಮಾಡಲಾಗುತ್ತಿತ್ತು. ಇದರಿಂದ ಪಾರಾಗುವುದಕ್ಕಾಗಿಯೇ ಅವರು ಕೆನಡಾಗೆ ಅರ್ಜಿ ಸಲ್ಲಿಸಿದ್ದಾರಂತೆ.

    ಭಾರತದ ಪೌರತ್ವ ಪಡೆಯುವುದಕ್ಕಾಗಿ ಅವರು ಕೆನಡಾದ  (Canada)ಪಾಸ್ ಪೋರ್ಟ್ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದಾರೆ. ಈ ವಿಷಯವನ್ನು ಸ್ವತಃ ಅವರೇ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ರಾಷ್ಟ್ರೀಯ ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿರುವ ಅಕ್ಷಯ್, ‘ನನಗೆ ಭಾರತವೇ ಎಲ್ಲ. ಅದು ಎಲ್ಲವನ್ನೂ ನನಗೆ ಕೊಟ್ಟಿದೆ. ನಾನು ಇಲ್ಲಿಯವನು ಎಂದು ಹೇಳಿಕೊಳ್ಳಲು ಹೆಮ್ಮೆ ಅನಿಸುತ್ತದೆ. ಹಾಗಾಗಿ ನಾನು ಕೆನಡಾ ಪಾಸ್ ಪೋರ್ಟ್ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ.

    ಪೌರತ್ವದ ವಿಷಯದಲ್ಲಿ ಬೇಸರವನ್ನು ವ್ಯಕ್ತ ಪಡಿಸಿರುವ ಅವರು, ‘ನಾನು ಭಾರತದಿಂದ ಎಲ್ಲವನ್ನೂ ಪಡೆದುಕೊಂಡಿದ್ದೇನೆ. ಪಡೆದದ್ದೆಲ್ಲವನ್ನೂ ಭಾರತಕ್ಕೆ ಕೊಡಲಿದ್ದೇನೆ. ಆದರೆ, ಜನರನ್ನು ಕೆಲವರು ಹಾದಿ ತಪ್ಪಿಸುತ್ತಿದ್ದಾರೆ. ಹಾಗಾಗಿ ಅವರು ನನ್ನ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಇದರಿಂದ ನಿಜಕ್ಕೂ ನನಗೆ ಬೇಸರವಾಗಿದೆ’ ಎಂದು ಅವರು ಮಾತನಾಡಿದ್ದಾರೆ. ಇದನ್ನೂ ಓದಿ:ಹೊಂಬಾಳೆ ಫಿಲ್ಮ್ ಯುವ ಚಿತ್ರಕ್ಕೆ ರುಕ್ಮಿಣಿ ವಸಂತ್ ನಾಯಕಿನಾ? ಸ್ಪಷ್ಟನೆ ನೀಡಿದ ನಟಿ

    ತಾವು ಕೆನಡಾ ಪೌರತ್ವಕ್ಕೆ ಅರ್ಜಿ ಸಲ್ಲಿಸಿದ್ದರ ಕುರಿತು ಮಾತನಾಡಿರುವ ಅವರು, 1990ರ ದಶಕದಲ್ಲಿ ಇವರ ಬಹುತೇಕ ಚಿತ್ರಗಳು ಬಾಕ್ಸ್ ಆಫೀಸಿನಲ್ಲಿ ಮಕಾಡೆ ಮಲಗಿದವಂತೆ. ರಿಲೀಸ್ ಆದ ಅಷ್ಟೂ ಸಿನಿಮಾಗಳು ಸೋತವು. ಈ ಕಾರಣದಿಂದಾಗಿ ಅವರು ಕೆನಡಾ ಪೌರತ್ವಕ್ಕೆ ಅರ್ಜಿ ಸಲ್ಲಿಸಿದ್ದರಂತೆ. ದೇಶಭಕ್ತಿ ಸಾರುವಂತಹ ಸಾಕಷ್ಟು ಸಿನಿಮಾಗಳಲ್ಲಿ ಅಕ್ಷಯ್ ಕುಮಾರ್ ನಟಿಸಿದ್ದಾರೆ. ಇಂತಹ ಸಿನಿಮಾಗಳು ಬಂದಾಗೆಲ್ಲ ಇವರ ಪೌರತ್ವದ ಬಗ್ಗೆ ಪ್ರಶ್ನೆ ಮಾಡಲಾಗಿದೆ. ಹಾಗಾಗಿ ಅವರಿಗೆ ಸಹಜವಾಗಿಯೇ ಬೇಸರವಾಗಿದೆಯಂತೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಭಾರತವೇ ನನಗೆ ಸರ್ವಸ್ವ; ಸಂಪಾದಿಸಿದ್ದು, ಗಳಿಸಿದ್ದು ಇಲ್ಲಿಂದಲೇ…: ಅಕ್ಷಯ್ ಕುಮಾರ್ ಭಾವುಕ

    ಭಾರತವೇ ನನಗೆ ಸರ್ವಸ್ವ; ಸಂಪಾದಿಸಿದ್ದು, ಗಳಿಸಿದ್ದು ಇಲ್ಲಿಂದಲೇ…: ಅಕ್ಷಯ್ ಕುಮಾರ್ ಭಾವುಕ

    ನವದೆಹಲಿ: ಭಾರತವೇ ನನಗೆ ಸರ್ವಸ್ವ. ನಾನು ಏನನ್ನು ಸಂಪಾದಿಸಿದ್ದೀನೋ.. ಏನನ್ನು ಗಳಿಸಿದ್ದೇನೋ ಎಲ್ಲವೂ ಇಲ್ಲಿಂದಲೇ ಎಂದು ಬಾಲಿವುಡ್ (Bollywood) ನಟ ಅಕ್ಷಯ್ ಕುಮಾರ್ (Akshay Kumar) ಭಾವುಕರಾಗಿದ್ದಾರೆ.

    ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ ಅವರು, ಕೆನಡಾ ಪೌರತ್ವ (Canadian Citizenship) ಹೊಂದಿರುವ ಬಗ್ಗೆ ತಮ್ಮ ವಿರುದ್ಧ ಟೀಕೆಗಳು ಹೆಚ್ಚಾಗುತ್ತಿದ್ದಂತೆ ಅಕ್ಷಯ್ ಕುಮಾರ್ ಮೌನ ಮುರಿದು ಮಾತನಾಡಿದ್ದಾರೆ. ಇದನ್ನೂ ಓದಿ: ‘ಪೆಂಟಗನ್’ ಸಿನಿಮಾದ 3ನೇ ಕಥೆಯ ಲಿರಿಕಲ್ ವಿಡಿಯೋ ಸಾಂಗ್ ರಿಲೀಸ್

    ಸಂದರ್ಶನದಲ್ಲಿ ಅಕ್ಷಯ್ ಹೇಳಿದ್ದೇನು?: ಕೆನಡಾ ಪೌರತ್ವ ಏಕೆ ಪಡೆದೆ ಎಂಬುದರ ಕಾರಣ ತಿಳಿಯದೇ ಕೆಲವರು ಮಾತನಾಡುತ್ತಿರುವುದಕ್ಕೆ ಬೇಸರವಾಗುತ್ತಿದೆ. ಭಾರತವೇ ನನಗೆ ಸರ್ವಸ್ವ. ನಾನು ಏನನ್ನು ಸಂಪಾದಿಸಿದ್ದೇನೊ.. ಏನನ್ನು ಪಡೆದುಕೊಂಡಿದ್ದೇನೊ.. ಅದೆಲ್ಲವೂ ಇಲ್ಲಿಂದಲೇ… ಒಂದು ವಿಷಯದ ಬಗ್ಗೆ ಏನೂ ತಿಳಿದುಕೊಳ್ಳದೇ ನೋವಾಗುತ್ತದೆ.

    `90ರ ದಶಕದಲ್ಲಿ ನನ್ನ ಚಿತ್ರಗಳು ಬಾಕ್ಸಾಫೀಸ್‌ನಲ್ಲಿ ಸೋಲುತ್ತಿದ್ದವು. ಬೇರೆ ಕೆಲಸ ಹುಡುಕುವ ಸ್ಥಿತಿ ಬಂದಿತ್ತು. ಕೆನಡಾದಲ್ಲಿದ್ದ ನನ್ನ ಸ್ನೇಹಿತ ಬುಲಾವ್ ನೀಡಿದ್ದ. ಹಾಗಾಗಿ ಉದ್ಯೋಗಕ್ಕಾಗಿ ತೆರಳಿದ್ದೆ. ಆ ಸಂದರ್ಭ ನನ್ನ ಇನ್ನೂ ಎರಡು ಚಿತ್ರಗಳು ಬಿಡುಗಡೆ ಬಾಕಿ ಇತ್ತು. ಅದೃಷ್ಟವಶಾತ್ ಆ ಎರಡೂ ಚಿತ್ರಗಳು ಸೂಪರ್ ಹಿಟ್ ಆದವು. ಇದನ್ನೂ ಓದಿ: ನಿರೀಕ್ಷೆ ಹೆಚ್ಚಿಸಿದ ‘ಮಾರ್ಟಿನ್’ ಟೀಸರ್ : ಧ್ರುವ ಸರ್ಜಾ ಆ್ಯಕ್ಷನ್ ಭರ್ಜರಿ

    ಆಗ ನನ್ನ ಗೆಳೆಯ ಮತ್ತೆ ಭಾರತಕ್ಕೆ ಹೋಗಿ ಚಿತ್ರರಂಗದಲ್ಲಿ ಮುಂದುವರಿಯುವಂತೆ ಸೂಚಿಸಿದ. ಬಳಿಕ, ನನಗೆ ಮತ್ತಷ್ಟು ಚಿತ್ರಗಳು ಬಂದವು. ಕೈತುಂಬಾ ಕೆಲಸವೂ ಸಿಕ್ಕಿತು. ನಾನು ಕೆನಡಾ ಪಾಸ್‌ಪೋರ್ಟ್ ಹೊಂದಿದ್ದನ್ನೇ ಮರೆತಿದ್ದೆ. ಪಾಸ್‌ಪೋರ್ಟ್ ಅನ್ನು ಬದಲಾಯಿಸಬೇಕು ಎಂಬ ಯೋಚನೆಯೂ ನನಗೆ ಬಂದಿರಲಿಲ್ಲ. ಈಗ ನನ್ನ ಪಾಸ್‌ಪೋರ್ಟ್ ಅನ್ನು ಬದಲಾಯಿಸಲು ಅರ್ಜಿ ಸಲ್ಲಿಸಿದ್ದೇನೆ ಎಂದು ವಿವರಿಸಿದ್ದಾರೆ.

    ಇದೇ ವೇಳೆ ಹೆರಾ ಫೆರಿ, ನಮಸ್ತೆ ಲಂಡನ್, ಟಾಯ್ಲೆಟ್; ಏಕ್ ಪ್ರೇಮ್ ಕಥಾ, ಪ್ಯಾಡ್ ಮ್ಯಾನ್ ಮುಂತಾದ ಚಿತ್ರಗಳಿಂದ ಗಮನ ಸೆಳೆದಿರುವ ಅಕ್ಷಯ್, ತಮ್ಮ ವೃತ್ತಿ ಜೀವನದಲ್ಲಿ 15 ಫ್ಲಾಪ್ ಚಿತ್ರಗಳ ಬಗ್ಗೆ ಮಾತನಾಡಿದ್ದಾರೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕೆನಡಾದ ರಾಮಮಂದಿರದಲ್ಲಿ ಭಾರತ ವಿರೋಧಿ ಬರಹ- ಕ್ರಮ ತೆಗೆದುಕೊಳ್ಳಲು ಆಗ್ರಹ

    ಕೆನಡಾದ ರಾಮಮಂದಿರದಲ್ಲಿ ಭಾರತ ವಿರೋಧಿ ಬರಹ- ಕ್ರಮ ತೆಗೆದುಕೊಳ್ಳಲು ಆಗ್ರಹ

    ಒಟ್ಟಾವಾ: ಕೆನಡಾದ (Canada) ಮಿಸಿಸೌಗಾದಲ್ಲಿರುವ (Mississauga) ರಾಮಮಂದಿರವನ್ನು (Ram Mandir) ಭಾರತ (India) ಹಾಗೂ ಪ್ರಧಾನಿ ನರೇಂದ್ರ ಮೋದಿ (Narendra Modi) ವಿರೋಧಿ ಗೀಚುಬರಹಗಳಿಂದ ವಿರೂಪಗೊಳಿಸಲಾಗಿದೆ. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಇದೀಗ ಟೊರೊಂಟೊದಲ್ಲಿರುವ (Toronto) ಭಾರತದ ರಾಯಭಾರ ಕಚೇರಿ ಇದನ್ನು ಖಂಡಿಸಿ ತಕ್ಷಣವೇ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದೆ.

    ಮಿಸಿಸೌಗಾದಲ್ಲಿರುವ ರಾಮಮಂದಿರವನ್ನು ಭಾರತ ವಿರೋಧಿ ಗೀಚುಬರಹಗಳ ಮೂಲಕ ವಿರೂಪಗೊಳಿಸಿರುವುದನ್ನು ನಾವು ಬಲವಾಗಿ ಖಂಡಿಸುತ್ತೇವೆ. ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಮತ್ತು ದುಷ್ಕರ್ಮಿಗಳ ಮೇಲೆ ತ್ವರಿತ ಕ್ರಮ ಕೈಗೊಳ್ಳುವಂತೆ ನಾವು ಕೆನಡಾದ ಅಧಿಕಾರಿಗಳನ್ನು ವಿನಂತಿಸಿದ್ದೇವೆ ಎಂದು ಭಾರತದ ರಾಯಭಾರ ಕಚೇರಿ ಟ್ವೀಟ್ ಮಾಡಿದೆ. ಇದನ್ನೂ ಓದಿ: ಕಾರು ಬಾಂಬ್‌ ಸ್ಫೋಟ ಪ್ರಕರಣ – ಕರ್ನಾಟಕ, ತಮಿಳುನಾಡು, ಕೇರಳದ 60 ಸ್ಥಳಗಳಲ್ಲಿ NIA ದಾಳಿ

    ದುಷ್ಕರ್ಮಿಗಳು ಮಂದಿರದಲ್ಲಿ ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಬರೆದು, ಭಿಂದ್ರವಾಲಾ ಪರ ಘೋಷಣೆಯ ಬರಹಗಳನ್ನು ಬರೆದಿದ್ದಾರೆ. ಬ್ರಾಂಪ್ಟನ್‌ನ ಮೇಯರ್ ಪ್ಯಾಟ್ರಿಕ್ ಬ್ರೌನ್ ಇದನ್ನು ಅಪರಾಧ ಎಂದು ಕರೆದಿದ್ದು, ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

    ಕೆನಡಾದಲ್ಲಿನ ಹಿಂದೂ ದೇವಾಲಯಗಳಲ್ಲಿ ಭಾರತ ವಿರೋಧಿ ಘೋಷಣೆಗಳನ್ನು ಬರೆದು ವಿರೂಪಗೊಳಿಸಿರುವುದು ಇದು ಮೊದಲೇನಲ್ಲ. ಇದಕ್ಕೂ ಮೊದಲು ಜನವರಿಯಲ್ಲಿ ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯದ ಮೇಲೆ ಭಾರತ ವಿರೋಧಿ ಘೋಷಣೆಗಳನ್ನು ಬರೆಯಲಾಗಿತ್ತು. ಇದು ಭಾರತೀಯ ಸಮುದಾಯದಿಂದ ಆಕ್ರೋಶಕ್ಕೆ ಕಾರಣವಾಯಿತು. ಇದನ್ನೂ ಓದಿ: ಭಾರತೀಯ ಸೇನೆಯಲ್ಲಿ ಮುಸ್ಲಿಮರಿಗೆ ಶೇ.30 ಮೀಸಲಾತಿ ಕೊಡಿ: ಜೆಡಿಯು ನಾಯಕ ಒತ್ತಾಯ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕೆನಡಾ ವಾಯುನೆಲೆಯಲ್ಲಿ ಅಪರಿಚಿತ ವಸ್ತುವನ್ನು ಹೊಡೆದುರುಳಿಸಿದ US ಫೈಟರ್ ಜೆಟ್

    ಕೆನಡಾ ವಾಯುನೆಲೆಯಲ್ಲಿ ಅಪರಿಚಿತ ವಸ್ತುವನ್ನು ಹೊಡೆದುರುಳಿಸಿದ US ಫೈಟರ್ ಜೆಟ್

    ವಾಷಿಂಗ್ಟನ್/ಒಟ್ಟಾವ: ಕೆನಡಾದ (Canada) ಯುಕಾನ್ (Yukon) ಪ್ರಾಂತ್ಯದ ವಾಯು ಪ್ರದೇಶದಲ್ಲಿ ಅಮೆರಿಕ (USA) ಹಾಗೂ ಕೆನಡಾ ದೇಶಗಳ ಜಂಟಿ ಕಾರ್ಯಾಚರಣೆಯಲ್ಲಿ ಅಮೆರಿಕದ ಫೈಟರ್ ಜೆಟ್ (Fighter Jet) ಅಪರಿಚಿತ ವಸ್ತುವನ್ನು ಹೊಡೆದುರುಳಿಸಿದೆ.

    ಇತ್ತೀಚೆಗೆ ಅಮೆರಿಕದ ದಕ್ಷಿಣ ಕೆರೊಲಿನಾ ಪ್ರಾಂತ್ಯದಲ್ಲಿ ಚೀನಾದ (China) ಬೇಹುಗಾರಿಕಾ ಬಲೂನ್ ಅನ್ನು ಹೊಡೆದುರುಳಿಸಿದ ನಂತರದ ಘಟನೆ ಇದಾಗಿದೆ. ಇದನ್ನೂ ಓದಿ: ವಿಧಾನಸಭೆ ಚುನಾವಣೆಯಲ್ಲಿ ಭಾಗಿ ಆಗ್ತೀನಿ: ವಿಭಿನ್ನ ಉತ್ತರ ಕೊಟ್ಟ ರಿಷಬ್ ಶೆಟ್ಟಿ

    ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ (Justin Trudeau) ಅವರ ಆದೇಶದ ಮೇರೆಗೆ ಕೆನಡಾ ಮತ್ತು ಅಮೆರಿಕದ ಯುದ್ಧವಿಮಾನಗಳು ಕ್ಷಿಪ್ರ ಕಾರ್ಯಾಚರಣೆಗೆ ಇಳಿದಿದ್ದವು. ಅಮೆರಿಕದ F-22 ಯುದ್ಧ ವಿಮಾನ ಈ ವಸ್ತುವನ್ನು ಹೊಡೆದುರುಳಿಸಿತು ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

    ಕಳೆದ ವಾರ ಅಮೆರಿಕದ ವಾಯುನೆಲೆಯಲ್ಲಿ ಕಾಣಿಸಿಕೊಂಡಿದ್ದ ಚೀನಾದ ಬೇಹುಗಾರಿಕಾ ಬಲೂನ್ ಅನ್ನು ಅಮೆರಿಕಾ ಕ್ಷಿಪಣಿಗಳು ಹೊಡೆದುರುಳಿಸಿದ್ದವು. ಇದೀಗ ಕೆನಡಾ ವಾಯು ನೆಲೆಯಲ್ಲಿ ಮತ್ತೊಂದು ವಸ್ತುವನ್ನು ಹೊಡೆದುರುಳಿಸಿದೆ.

    ಹೊಡೆದುರುಳಿಸಲಾಗಿರುವ ಚೀನಾದ ಬಲೂನ್ ಸೇರಿದಂತೆ ಅಪರಿಚಿತ ವಸ್ತುಗಳ ಅವಶೇಷಗಳನ್ನು ಅಮೆರಿಕ ಸೇನೆ ಪರಿಶೀಲನೆ ಮಾಡುತ್ತಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: 30 ವರ್ಷವಾದ್ರೂ ವಧು ಸಿಕ್ಕಿಲ್ಲ ಅಂತಾ `ಬ್ರಹ್ಮಚಾರಿಗಳ ನಡೆ ಮಾದಪ್ಪನ ಕಡೆ’

    ಈ ಆಕ್ರಮಣ ಕುರಿತು, ಕೆನಡಾದ ರಕ್ಷಣಾ ಮಂತ್ರಿ ಅವರು ಯುಎಸ್ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಅವರೊಂದಿಗೆ ಮಾತನಾಡಿದ್ದಾರೆ. ಬಳಿಕ `ನಾವು ಯಾವಾಗಲೂ ನಮ್ಮ ಸಾರ್ವಭೌಮತ್ವವನ್ನು ಒಟ್ಟಾಗಿ ರಕ್ಷಿಸುತ್ತೇವೆ ಎಂಬುದಾಗಿ ಪುನರುಚ್ಚರಿಸಿದ್ದಾರೆ’ ಎಂದು ಕೆನಡಾದ ರಕ್ಷಣಾ ಸಚಿವೆ ಅನಿತಾ ಆನಂದ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

    ಉತ್ತರ ವಾಯುನೆಲೆಯಲ್ಲಿ ಕೆನಡಾದೊಂದಿಗೆ ಕೆಲಸ ಮಾಡಲು ಉತ್ತರ ಅಮೆರಿಕಾದ ಏರೋಸ್ಪೇಸ್ ಡಿಫೆನ್ಸ್ ಕಮಾಂಡ್‌ಗೆ ಎಫ್-22 ಹಾಗೂ AIM 9X ಕ್ಷಿಪಣಿಗಳನ್ನು ಅಧಿಕೃತವಾಗಿ ಸೇರ್ಪಡೆಗೊಳಿಸಲಾಯಿತು. ಈ ವೇಳೆ F-22 ಫೈಟರ್ ಜೆಟ್ ಅಪರಿಚಿತ ವಸ್ತುವನ್ನು ಹೊಡೆದುರುಳಿದೆ ಎಂದು ಪೆಂಟಗನ್ ವಕ್ತಾರ ಪ್ಯಾಟ್ ರೈಡರ್ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k