Tag: Candidate List

  • Bihar Elections | 57 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಜೆಡಿಯು

    Bihar Elections | 57 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಜೆಡಿಯು

    – ಎನ್‌ಡಿಎಯಲ್ಲಿ ಮುಂದುವರಿದ ಮುನಿಸು, ಉಪೇಂದ್ರ ಕುಶ್ವಾಹ ಜೊತೆಗೆ ಅಮಿತ್ ಶಾ ಸಭೆ
    – 3 ದಿನಗಳಲ್ಲಿ 33.97 ಕೋಟಿ ರೂ. ವಶಪಡಿಸಿಕೊಂಡ ಆಯೋಗ

    ಪಾಟ್ನಾ: ಸೀಟು ಹಂಚಿಕೆ ಕುರಿತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆಯೇ, ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಅವರ ಜೆಡಿಯು (JDU) ಪಕ್ಷ ಇಂದು ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು (Candidate List) ಬಿಡುಗಡೆ ಮಾಡಿದೆ.

    ಮೊದಲ ಪಟ್ಟಿಯಲ್ಲಿ ಸಚಿವರಾದ ಶ್ರವಣ್ ಕುಮಾರ್, ವಿಜಯ್ ಕುಮಾರ್ ಚೌಧರಿ ಮತ್ತು ಮಹೇಶ್ವರ್ ಹಜಾರಿ ಸೇರಿದಂತೆ 57 ಅಭ್ಯರ್ಥಿಗಳ ಹೆಸರುಗಳು ಸೇರಿವೆ. ಜೆಡಿಯು ಟಿಕೆಟ್‌ನಲ್ಲಿ ಈಗಾಗಲೇ ನಾಮಪತ್ರ ಸಲ್ಲಿಸಿರುವ ಅನಂತ್ ಸಿಂಗ್ ಕೂಡ ಸೇರಿದ್ದಾರೆ. ಇದನ್ನೂ ಓದಿ: ಹಿಂದಿ ಹೋರ್ಡಿಂಗ್ಸ್‌, ಸಿನಿಮಾ, ಹಾಡುಗಳು ನಿಷೇಧಿಸುವ ಮಸೂದೆ ಇಂದು ಮಂಡನೆ? – ತಮಿಳುನಾಡು ಸರ್ಕಾರ ಸಿದ್ಧತೆ

    ಜೆಡಿಯುನ ಮೊದಲ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ ಎಂದು ಜನತಾದಳ ಯುನೈಟೆಡ್‌ನ ಕಾರ್ಯಕಾರಿ ಅಧ್ಯಕ್ಷ ಮತ್ತು ರಾಜ್ಯಸಭಾ ಸಂಸದ ಸಂಜಯ್ ಕುಮಾರ್ ಝಾ ಹೇಳಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಚುನಾವಣಾ ಪ್ರಚಾರವು ಅ.16ರಂದು ಪ್ರಾರಂಭವಾಗಲಿದೆ. ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ನಿರ್ಣಯಿಸಿದ ನಂತರ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ. ನಮ್ಮ ಎರಡನೇ ಪಟ್ಟಿಯೂ ಒಂದು ಅಥವಾ ಎರಡು ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು ಸಂಜಯ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಆಯುರ್ವೇದ ಚಿಕಿತ್ಸೆಗೆ ಕೇರಳಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ಹೃದಯಸ್ತಂಭನದಿಂದ ನಿಧನ

    ಜೆಡಿಯು ಒಳಗಿನ ಉದ್ವಿಗ್ನತೆಯ ಪ್ರಶ್ನೆಗೆ ಉತ್ತರಿಸಿದ ಅವರು, ಜೆಡಿಯು ಒಳಗೆ ಯಾವುದೇ ಆಂತರಿಕ ಸಮಸ್ಯೆಗಳಿಲ್ಲ ಎಂದು ಹೇಳಿದರು. ಪಕ್ಷದೊಳಗೆ ತೆಗೆದುಕೊಳ್ಳುವ ಎಲ್ಲಾ ನಿರ್ಧಾರಗಳನ್ನು ನಿತೀಶ್ ಕುಮಾರ್ ಅವರ ಒಪ್ಪಿಗೆಯೊಂದಿಗೆ ತೆಗೆದುಕೊಳ್ಳಲಾಗುತ್ತದೆ. ಅವರು ಪ್ರಜಾಸತ್ತಾತ್ಮಕ ನಾಯಕ, ಸರ್ವಾಧಿಕಾರಿ ನಾಯಕನಲ್ಲ. ಮುಖ್ಯಮಂತ್ರಿ ನಿತೀಶ್ ಕುಮಾರ್ ಬಿಹಾರ ಮತ್ತು ಜೆಡಿಯು ಎರಡರ ಉಸ್ತುವಾರಿ ವಹಿಸಿಕೊಂಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಬೀದರ್ | 45 ಲಕ್ಷ ಮೌಲ್ಯದ ಮಾದಕ ವಸ್ತು ಸೀಜ್ – ಇಬ್ಬರು ಅರೆಸ್ಟ್

    ಬಿಜೆಪಿ ಜೆಡಿಯು ಎರಡು ಪಕ್ಷಗಳು ಮೊದಲ ಪಟ್ಟಿ ಬಿಡುಗಡೆ ನಡುವೆಯೂ ಎನ್‌ಡಿಎಯಲ್ಲಿ ಸೀಟು ಹಂಚಿಕೆಯಲ್ಲಿ ಗೊಂದಲ ಮುಂದುವರಿದಿದೆ. ಸೀಟು ಹಂಚಿಕೆ ಬಗ್ಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿರುವ ರಾಷ್ಟ್ರೀಯ ಲೋಕ ಮೋರ್ಚಾ ಮುಖ್ಯಸ್ಥ ಉಪೇಂದ್ರ ಕುಶ್ವಾಹ ಅವರ ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ ನಡೆಸಿದ್ದು, ಸಂಧಾನ ಮುಂದುವರಿದಿದೆ. ಇಂಡಿಯಾ ಒಕ್ಕೂಟದಲ್ಲಿ ಗೊಂದಲ ಮುಂದುವರಿದಿದ್ದು, ಕೆಲವು ನಿರ್ದಿಷ್ಟ ಸ್ಥಾನಗಳಿಗೆ ಆರ್‌ಜೆಡಿ ಮತ್ತು ಕಾಂಗ್ರೆಸ್ ನಡುವೆ ಒಮ್ಮತ ಮೂಡಿಲ್ಲ. ಇದನ್ನೂ ಓದಿ: Karnataka | ಈ ವರ್ಷದಿಂದ 33% ಅಂಕ ಪಡೆದರೆ SSLC ಪಾಸ್

    ಈ ನಡುವೆ ಚುನಾವಣೆಯ ಸಮಯದಲ್ಲಿ ಹಣದ ದುರುಪಯೋಗ ಮತ್ತು ಮತದಾರರ ಮೇಲೆ ಪ್ರಭಾವ ಬೀರುವ ಪ್ರಯತ್ನಗಳನ್ನು ತಡೆಯಲು ಚುನಾವಣಾ ಆಯೋಗವು ಮಹತ್ವದ ಕ್ರಮಗಳನ್ನು ತೆಗೆದುಕೊಂಡಿದೆ. ಆಯೋಗವು ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಖರ್ಚು ವೀಕ್ಷಕರನ್ನು ನಿಯೋಜಿಸಿದ್ದು, ಅಭ್ಯರ್ಥಿಗಳ ಚುನಾವಣಾ ವೆಚ್ಚವನ್ನು ಸೂಕ್ಷ್ಮವಾಗಿ ಗಮನಿಸಲಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಅನುಮತಿ

    ಇನ್ನು ಮೂರು ದಿನಗಳಲ್ಲಿ 33.97 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಫ್ಲೈಯಿಂಗ್ ಸ್ಕ್ವಾಡ್‌ಗಳು, ಕಣ್ಗಾವಲು ತಂಡಗಳು, ವೀಡಿಯೊ ಕಣ್ಗಾವಲು ತಂಡಗಳು ದಿನದ 24 ಗಂಟೆಗಳ ಕಾಲ ಜಾಗರೂಕರಾಗಿರುತ್ತವೆ ಮತ್ತು ಮತದಾರರನ್ನು ಆಕರ್ಷಿಸಲು ಹಣದ ಬಲ ಅಥವಾ ಇತರ ಪ್ರಚೋದನೆಗಳ ಯಾವುದೇ ಶಂಕಿತ ಪ್ರಕರಣಗಳ ಮೇಲೆ ಕಣ್ಣಿಡುತ್ತವೆ. ಇದರೊಂದಿಗೆ, ಚುನಾವಣೆ ಘೋಷಣೆಯಾದಾಗಿನಿಂದ, ವಿವಿಧ ಜಾರಿ ಸಂಸ್ಥೆಗಳು ಒಟ್ಟು 33.97 ಕೋಟಿ ರೂ. ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಉಚಿತ ವಸ್ತುಗಳನ್ನು ವಶಪಡಿಸಿಕೊಂಡಿವೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಇದನ್ನೂ ಓದಿ: ಬಿಹಾರ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ – ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್

  • ರಾಜ್ಯದ 4 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಟಿಕೆಟ್ ಘೋಷಣೆ ಬಾಕಿ

    ರಾಜ್ಯದ 4 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಟಿಕೆಟ್ ಘೋಷಣೆ ಬಾಕಿ

    ಬೆಂಗಳೂರು: 2024ರ ಲೋಕಸಭೆ ಚುನಾವಣೆ (Lok Sabha Election) ಎದುರಿಸಲು ಕರ್ನಾಟಕದಲ್ಲಿ ಕಾಂಗ್ರೆಸ್ (Congress) ಬಹುತೇಕ ಸಜ್ಜಾಗಿದೆ. ಈಗಾಗಲೇ ಕಾಂಗ್ರೆಸ್ 24 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಕರ್ನಾಟಕದ 28 ಕ್ಷೇತ್ರಗಳಲ್ಲಿ ಇನ್ನು ಕೇವಲ 4 ಕ್ಷೇತ್ರಗಳಲ್ಲಿ ಮಾತ್ರ ಟಿಕೆಟ್ ಘೋಷಣೆ ಬಾಕಿ ಉಳಿಸಿಕೊಂಡಿದೆ.

    ರಾಜ್ಯದ ಬಳ್ಳಾರಿ, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಪ್ರಕಟಿಸಿಲ್ಲ. ಈ 4 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಿಸಿದರೆ ಕಾಂಗ್ರೆಸ್ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿದಂತಾಗುತ್ತದೆ.

    ಬಳ್ಳಾರಿ, ಕೋಲಾರ, ಚಾಮರಾಜನಗರ 3 ಕ್ಷೇತ್ರದಲ್ಲಿ ಸಚಿವರ ಸ್ಪರ್ಧೆಗೆ ತಂತ್ರಗಾರಿಕೆ ರೂಪಿಸಿತ್ತು. ಆದರೆ ಮೂವರು ಸಚಿವರು ತಮ್ಮ ಸಂಬಂಧಿಕರಿಗೆ ಟಿಕೆಟ್ ಬೇಡಿಕೆ ಇಟ್ಟಿದ್ದರು. ತಮ್ಮ ಕುಟುಂಬಕ್ಕೆ ಟಿಕೆಟ್ ನೀಡಲು ಬಳ್ಳಾರಿಯ ಸಚಿವ ನಾಗೇಂದ್ರ, ಕೋಲಾರದಲ್ಲಿ ಸಚಿವ ಮುನಿಯಪ್ಪ, ಚಾಮರಾಜನಗರದಲ್ಲಿ ಹೆಚ್.ಸಿ.ಮಹದೇವಪ್ಪ ಪುತ್ರ ಸುನಿಲ್ ಬೋಸ್‌ಗೆ ಟಿಕೆಟ್ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ನಿಮ್ಮ ಸಮಸ್ಯೆಯನ್ನು ನೀವೇ ಬಗೆಹರಿಸಿಕೊಳ್ಳದೆ ಟಿಕೆಟ್‌ಗೆ ಡಿಮ್ಯಾಂಡ್ ಮಾಡಿದರೆ ಒಪ್ಪಲ್ಲ ಎಂದು 3 ಕ್ಷೇತ್ರದ 3 ಸಚಿವರ ವಿರುದ್ಧ ಹೈಕಮಾಂಡ್ ಗರಂ ಆಗಿದೆ ಎನ್ನಲಾಗಿದೆ.

    ಇನ್ನು ಚಿಕ್ಕಬಳ್ಳಾಪುರದಿಂದ ಅಭ್ಯರ್ಥಿಯಾಗಲು ರಕ್ಷಾ ರಾಮಯ್ಯ ಹಾಗೂ ಶಿವಶಂಕರ ರೆಡ್ಡಿ ನಡುವೆ ಪೈಪೋಟಿ ಇದ್ದು, ಇದರಿಂದಾಗಿಯೇ ಟಿಕೆಟ್ ಅಂತಿಮಗೊಳಿಸುವುದು ವಿಳಂಬವಾಗುತ್ತಿದೆ ಎಂದು ಕಾಂಗ್ರೆಸ್ ಉನ್ನತ ಮೂಲಗಳು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿವೆ.

    ಇಂದು ಕಾಂಗ್ರೆಸ್ ಒಟ್ಟು 57 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 17 ಕರ್ನಾಟಕದ ಲೋಕಸಭಾ ಕ್ಷೇತ್ರಗಳು. ಆರಂಭದ ಪಟ್ಟಿಯಲ್ಲಿಯೇ ಕಾಂಗ್ರೆಸ್ ಹೈಕಮಾಂಡ್ 7 ಕ್ಷೇತ್ರಗಳ ಅಭ್ಯರ್ಥಿಯನ್ನು ಪ್ರಕಟಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಕರ್ನಾಟಕದ ಒಟ್ಟು 24 ಅಭ್ಯರ್ಥಿಗಳನ್ನು ಘೋಷಿಸಿದಂತಾಗಿದೆ.

  • ಮಾ.22ರ ಬಳಿಕ ಬಿಜೆಪಿ ಅಂತಿಮ ಪಟ್ಟಿ; 5 ಕ್ಷೇತ್ರದಲ್ಲಿ ಎರಡು ಕಗ್ಗಂಟು – ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ಡೌಟು

    ಮಾ.22ರ ಬಳಿಕ ಬಿಜೆಪಿ ಅಂತಿಮ ಪಟ್ಟಿ; 5 ಕ್ಷೇತ್ರದಲ್ಲಿ ಎರಡು ಕಗ್ಗಂಟು – ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ಡೌಟು

    ನವದೆಹಲಿ: ಬಿಜೆಪಿ-ಜೆಡಿಎಸ್ ಮೈತ್ರಿಯ ಭಾಗವಾಗಿ ಮಂಡ್ಯ, ಹಾಸನದ ಜೊತೆಗೆ ಕೋಲಾರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಬಿಜೆಪಿ (BJP) ಹೈಕಮಾಂಡ್ ನಿರ್ಧರಿಸಿದೆ. ಮಂಗಳವಾರ ತಡರಾತ್ರಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ರಾಜ್ಯ ನಾಯಕರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ತಿಳಿಸಿದ್ದಾರೆ.

    ಬಾಕಿ ಉಳಿದ ಐದು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧ ಹೈಕಮಾಂಡ್ ನಾಯಕರು ರಾಜ್ಯ ನಾಯಕರ ಜೊತೆಗೆ ಸಭೆ ನಡೆಸಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಭಾಗಿಯಾಗಿದ್ದರು. ಇದನ್ನೂ ಓದಿ: ಟೈಂ ಪಾಸ್ ಮಾಡಲು ಕಷ್ಟ, ಅದಕ್ಕೆ ಲೋಕಸಭೆಗೆ ಸ್ಪರ್ಧೆ – ಡಾ.ಕೆ.ಸುಧಾಕರ್ ಸ್ಪರ್ಧೆ ಬಗ್ಗೆ ಎಸ್‌.ಅರ್.ವಿಶ್ವನಾಥ್ ಹೇಳಿದ್ದೇನು?

    ಉತ್ತರ ಕನ್ನಡ, ಬೆಳಗಾವಿ, ಚಿತ್ರದುರ್ಗ, ಚಿಕ್ಕಬಳ್ಳಾಪುರ ಮತ್ತು ರಾಯಚೂರು ಕ್ಷೇತ್ರಗಳಿಗೆ ಟಿಕೆಟ್ ನೀಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಬೆಳಗಾವಿ ಕ್ಷೇತ್ರದಿಂದ ಜಗದೀಶ್ ಶೆಟ್ಟರ್‌ಗೆ (Jagdish Shettar) ಟಿಕೆಟ್ ನೀಡುವ ಬಗ್ಗೆ ಅಂತಿಮ ಚರ್ಚೆಯಾಗಿದೆ. ಚಿಕ್ಕಬಳ್ಳಾಪುರಕ್ಕೆ ಅಲೋಕ್ ವಿಶ್ವನಾಥ್ ಮತ್ತು ಡಾ.ಕೆ ಸುಧಾಕರ್ ಬಗ್ಗೆ ಚರ್ಚೆಯಾಗಿದೆ. ಉತ್ತರ ಕನ್ನಡಕ್ಕೆ ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆಯನ್ನು (Anantkumar Hegde) ಬದಲಿಸಿ ವಿಶ್ವೇಶ್ವರ ಹೆಗಡೆ ಕಾಗೇರಿ, ಚಕ್ರವರ್ತಿ ಸೂಲಿಬೆಲೆ ಸೇರಿ ಇತರೆ ಹೆಸರುಗಳ ಬಗ್ಗೆ ಚರ್ಚೆಯಾಗಿದೆ. ಇದನ್ನೂ ಓದಿ: ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ಡಿಎಂಕೆ ದೂರು

    ಚಿತ್ರದುರ್ಗ ಮತ್ತು ರಾಯಚೂರು ಮೀಸಲು ಕ್ಷೇತ್ರಗಳಿಗೆ ಅಭ್ಯರ್ಥಿ ಆಯ್ಕೆ ಮತ್ತೆ ಮುಂದೂಡಿಕೆಯಾಗಿದೆ. ಚಿತ್ರದುರ್ಗದಲ್ಲಿ ಸಚಿವ ನಾರಯಣಸ್ವಾಮಿ ಸ್ಪರ್ಧೆಗೆ ನಿರಾಕರಿಸಿದರು. ಈಗ ಅವರು ಸ್ಪರ್ಧೆಗೆ ಬಯಸಿದ್ದು, ಸ್ಥಳೀಯ ಮಟ್ಟದಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಇನ್ನು ರಾಯಚೂರಿನಲ್ಲೂ ಬಿ.ವಿ ನಾಯಕ್ ಮತ್ತು ಹಾಲಿ ಸಂಸದ ರಾಜ ಅಮರೇಷ್ ನಾಯಕ್ ನಡುವೆ ಪೈಪೋಟಿ ಏರ್ಪಟ್ಟಿದೆ. ಈ ಹಿನ್ನೆಲೆ ಮತ್ತೊಮ್ಮೆ ಎರಡು ಕ್ಷೇತ್ರಗಳಿಂದ ಸರ್ವೆ ವರದಿ ತರಿಸಿಕೊಳ್ಳಲು ನಿರ್ಧರಿಸಿದೆ. ಮಾರ್ಚ್ 22ರಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಅಂತಿಮ ತಿರ್ಮಾನವಾಗಲಿದೆ. ಇದನ್ನೂ ಓದಿ: ಯುರೋಪಿನಲ್ಲಿ ಐವರ ಸಾವಿಗೆ ಕಾರಣವಾಯ್ತು ಗಿಳಿ ಜ್ವರ- ಏನಿದು ಫೀವರ್‌, ಲಕ್ಷಣಗಳೇನು..?

    ಸಭೆ ಬಳಿಕ ಮಾತನಾಡಿದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra), ರಾಷ್ಟ್ರೀಯ ಅಧ್ಯಕ್ಷರ ನೇತೃತ್ವದಲ್ಲಿ ನಿನ್ನೆ ಸಭೆ ನಡೆದಿದೆ. 30 ನಿಮಿಷಗಳ ಕಾಲ ಬಾಕಿ ಉಳಿದಿರುವ ಕ್ಷೇತ್ರದ ಅಭ್ಯರ್ಥಿಗಳ ಬಗ್ಗೆ ಚರ್ಚೆ ಆಗಿದೆ. ಎಲ್ಲವೂ ಕೂಡ ಒಂದು ಹಂತಕ್ಕೆ ಬಂದಿದೆ. ಅಂತಿಮವಾಗಿ ಮಾ.22ಕ್ಕೆ ಮೋದಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಅಂತಿಮವಾಗಿ ಘೋಷಣೆಯಾಗಲಿದೆ ಎಂದರು. ಇದನ್ನೂ ಓದಿ: ಸಂಜೆ ನೆರೆ ಮನೆಗೆ ನುಗ್ಗಿ ಇಬ್ಬರು ಮಕ್ಕಳ ಹತ್ಯೆ – ರಾತ್ರಿ ಯುಪಿ ಪೊಲೀಸರ ಎನ್‌ಕೌಂಟರ್‌ಗೆ ಪಾತಕಿ ಬಲಿ

    ಬಿಜೆಪಿ ಆಂತರಿಕ ಅಸಮಾಧಾನದ ಬಗ್ಗೆ ಮಾತನಾಡಿದ ಅವರು, ಯಾವುದೇ ಕ್ಷೇತ್ರದಲ್ಲಿ ಒಮ್ಮತದ ನಿರ್ಧಾರ ಆಗಲ್ಲ. ಆಕಾಂಕ್ಷಿಗಳ ಪಟ್ಟಿ ಬಹಳ ದೊಡ್ಡದಿದೆ. ನಿನ್ನೆ ಸಭೆಯಲ್ಲಿ ಆಗಿರುವ ಎಲ್ಲಾ ವಿಚಾರ ಬಹಿರಂಗಪಡಿಸೋಕೆ ಆಗಲ್ಲ. ಏನೇ ಚರ್ಚೆ ಆದರೂ ಸಹ ಪ್ರಧಾನಿ ನೇತೃತ್ವದ ಸಭೆಯಲ್ಲಿ ಎಲ್ಲವೂ ಫೈನಲ್ ಆಗುತ್ತದೆ. ಈಗಾಗಲೇ ಘೋಷಣೆ ಆಗಿರುವ ಅಭ್ಯರ್ಥಿಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಈಶ್ವರಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ. ಒಂದು ಅವಧಿಗೆ ನನ್ನನ್ನು ನೇಮಕ ಮಾಡಿದ್ದಾರೆ ಎಂದು ಭಾವಿಸುತ್ತೇನೆ. ಮಂಗಳವಾರ ಬಂಡಾಯದ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಏ.19, 26ರ ಚುನಾವಣಾ ದಿನಾಂಕ ಬದಲಾಯಿಸುವಂತೆ ಆಯೋಗಕ್ಕೆ ಮುಸ್ಲಿಂ ಸಂಘಟನೆಗಳಿಂದ ಮನವಿ

  • 13 ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ ಮಾಡಿದ ಜೆಡಿಎಸ್

    13 ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ ಮಾಡಿದ ಜೆಡಿಎಸ್

    ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ (Assembly Election) ಇನ್ನು ಕಲವೇ ದಿನಗಳು ಬಾಕಿಯಿದ್ದು, ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯ ದಿನವಾಗಿದೆ. ಇದೇ ದಿನ ಜೆಡಿಎಸ್ (JDS) 4ನೇ ಪಟ್ಟಿ ಬಿಡುಗಡೆ ಮಾಡಿದ್ದು, 13 ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.

    ಜೆಡಿಎಸ್ 4ನೇ ಪಟ್ಟಿ:
    ಗೋಕಾಕ್ – ಚನ್ನಬಸಪ್ಪ ಬಾಳಪ್ಪ ಗಿದ್ದಣ್ಣನವರ
    ಕಿತ್ತೂರು – ಅಶ್ವಿನಿ ಸಿಂಗಯ್ಯ ಪೂಜೆರಾ
    ಯಾದಗಿರಿ – ಎಬಿ ಮಾಲಕರೆಡ್ಡಿ
    ಭಾಲ್ಕಿ – ರೌಫ್ ಪಟೇಲ್
    ಶಿಗ್ಗಾಂವಿ – ಶಶಿಧರ್ ಚನ್ನಬಸಪ್ಪ ಯಲಿಗಾರ
    ಮೊಳಕಾಲ್ಮೂರು – ಮಹಾದೇವಪ್ಪ ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ ಮೊದಲೇ ಸಿಎಂ ಅಭ್ಯರ್ಥಿ ಘೋಷಣೆ ಮಾಡೋ ಸಂಸ್ಕೃತಿ ಇಲ್ಲ: ಸೋಮಣ್ಣಗೆ ಸಿದ್ದು ತಿರುಗೇಟು

    ಪುಲಕೇಶಿನಗರ – ಅನುರಾಧ
    ಶಿವಾಜಿನಗರ – ಅಬ್ದುಲ್ ಜಫರ್ ಅಲಿ
    ಶಾಂತಿನಗರ – ಮಂಜುನಾಥ್ ಗೌಡ
    ಬೆಳ್ತಂಗಡಿ – ಅಶ್ರಫ್ ಅಲಿ ಕುಂಞ
    ಮಂಗಳೂರು ನಗರ ಉತ್ತರ – ಮೊಹೀನುದ್ದಿನ್ ಬಾವ
    ಮಂಗಳೂರು – ಅಲ್ತಾಪ್ ಕುಂಪಾಲ
    ಬಂಟ್ವಾಳ – ಪ್ರಕಾಶ ರಫಾಯಲ್ ಗೋಮ್ಸ್ ಇದನ್ನೂ ಓದಿ: ದಿಢೀರ್‌ ಬೆಳವಣಿಗೆ – ಕನಕಪುರದಿಂದ ಡಿಕೆ ಸುರೇಶ್‌ ನಾಮಪತ್ರ ಸಲ್ಲಿಕೆ

  • ಗುರುವಾರದೊಳಗೆ ಜೆಡಿಎಸ್ 2ನೇ ಪಟ್ಟಿ: ಹೆಚ್‌ಡಿ ಕುಮಾರಸ್ವಾಮಿ

    ಗುರುವಾರದೊಳಗೆ ಜೆಡಿಎಸ್ 2ನೇ ಪಟ್ಟಿ: ಹೆಚ್‌ಡಿ ಕುಮಾರಸ್ವಾಮಿ

    – ಪಟ್ಟಿಯಲ್ಲಿ ಹಾಸನ ಅಭ್ಯರ್ಥಿ ಹೆಸರು ಇರಲಿದೆ

    ಬೆಂಗಳೂರು: ಜೆಡಿಎಸ್ (JDS) ಅಭ್ಯರ್ಥಿಗಳ 2ನೇ ಪಟ್ಟಿ ಬುಧವಾರ ಅಥವಾ ಗುರುವಾರ ಬಿಡುಗಡೆ ಆಗಬಹುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ತಿಳಿಸಿದರು.

    ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಇಂದು ಮಂಗಳವಾರ ಆಗಿರುವುದರಿಂದ ಪಟ್ಟಿ ಬಿಡುಗಡೆ ಆಗಿಲ್ಲ. ದೇವೇಗೌಡರು ಬುಧವಾರ ಸಂಜೆ ದೆಹಲಿಯಿಂದ ವಾಪಸ್ ಆಗುತ್ತಾರೆ. ನಂತರ ಪಟ್ಟಿ ಹೊರಬರಲಿದೆ ಎಂದರು.

    ನನಗಿಂತ ನಿಮಗೆ ಹಾಸನ (Hassana) ಟಿಕೆಟ್ ಘೋಷಣೆ ಬಗ್ಗೆ ಕುತೂಹಲವಿದೆ ಎಂದು ಮಾಧ್ಯಮಗಳಿಗೆ ಹೇಳಿದ ಅವರು, ಹಾಸನವನ್ನು ಸೇರಿಸಿ ಪಟ್ಟಿ ಬಿಡುಗಡೆ ಮಾಡುತ್ತೇವೆ. ಅದನ್ನು ಬಿಟ್ಟು ಮಾಡಿದರೆ ಇನ್ನೊಂದು ಕಥೆ ಹುಟ್ಟಿಕೊಳ್ಳುತ್ತದೆ. ಆದ್ದರಿಂದ ಆ ಪಟ್ಟಿಯಲ್ಲಿ ಹಾಸನದ್ದೂ ಒಳಗೊಂಡಂತೆ ತೀರ್ಮಾನ ಮಾಡುತ್ತೇವೆ ಎಂದು ಅವರು ತಿಳಿಸಿದರು.

    ಮೊದಲ ಪಟ್ಟಿ ಬಿಡುಗಡೆಯಾದಾಗಲೂ ಯಾವುದೇ ಸಮಸ್ಯೆ ಇರಲಿಲ್ಲ. 2ನೇ ಪಟ್ಟಿ ವೇಳೆ ಹಾಸನದ್ದು ಹೆಚ್ಚು ಪ್ರಚಾರವಾಗಿದೆ. ಹಾಸನ ವಿಚಾರದಿಂದ ಜನತಾದಳಕ್ಕೂ ಹೆಚ್ಚು ಪ್ರಚಾರವಾಗಿದೆ. ಇದರಿದ ರಾಜ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ಶೇ.2-3 ರಷ್ಟು ಮತ ಪ್ರಮಾಣ ಹೆಚ್ಚಾಗಲಿದೆ. ನಮ್ಮ ಗುರಿ ಮುಟ್ಟೋದಕ್ಕೆ ನಾವು ಯಾವುದೇ ದುಡುಕಿನ ತೀರ್ಮಾನ ಮಾಡಲ್ಲ. ಕಾರ್ಯಕರ್ತರ ಅಪೇಕ್ಷೆ, ಗೆಲ್ಲುವ ಮಾನದಂಡದಲ್ಲೇ ಟಿಕೆಟ್ ಕೊಡುತ್ತೇವೆ ಎಂದು ಅವರು ಉತ್ತರ ನೀಡಿದರು.

    ಕಾಂಗ್ರೆಸ್ ಪಟ್ಟಿ ರಿಲೀಸ್ ಆಗದ ಹಿನ್ನೆಲೆ ಜೆಡಿಎಸ್ ಪಟ್ಟಿ ವಿಳಂಬ ಆಗುತ್ತಿದೆಯಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಅದರ ಬಗ್ಗೆ ನಾನು ಚಿಂತೆ ಮಾಡಿಲ್ಲ. ನಾವು ನಮ್ಮದೇ ರೀತಿಯಲ್ಲಿ ಅಭ್ಯರ್ಥಿಗಳನ್ನು ತೀರ್ಮಾನ ಮಾಡುತ್ತೇವೆ ಎಂದರು. ಇದನ್ನೂ ಓದಿ: ಮೀಸಲಾತಿ ತೆಗೆದವರಿಗೆ ಶಾಪ ತಟ್ಟಲಿದೆ: ಹೆಚ್‌ಡಿ ರೇವಣ್ಣ

    ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಂದರ್ಶನ ಒಂದರಲ್ಲಿ ನೀಡಿರುವ ಹೇಳಿಕೆ ಕುರಿತು ಮಾತನಾಡಿದ ಹೆಚ್‌ಡಿಕೆ, ಅದು ಅವರ ಪಕ್ಷಕ್ಕೆ ಸೇರಿದ ವಿಚಾರ. ಅವರ ಆಂತರಿಕ ವಿಚಾರಗಳ ಬಗ್ಗೆ ನಾನೇಕೆ ಪ್ರತಿಕ್ರಿಯೆ ನೀಡಲಿ? ಚುನಾವಣೆಯಲ್ಲಿ ಜನ ಯಾವ ಪಕ್ಷಕ್ಕೆ ಎಷ್ಟು ಸ್ಥಾನ ಕೊಡ್ತಾರೋ ಅದು ಮುಖ್ಯ. ಎಷ್ಟು ಸ್ಥಾನ ಬಂತು ಎನ್ನುವುದರ ಮೇಲೆ ಎಲ್ಲಾ ನಿರ್ಧಾರ ಆಗುತ್ತದೆ. ಮಗು ಹುಟ್ಟೋಕು ಮುನ್ನ ಕುಲಾವಿ ಹೊಲಿಸಿದರೆ ಆಗುತ್ತಾ? ಮುಗು ಹುಟ್ಟಿದರೆ ಕುಲಾವಿ ಹೊಲಿಸಬಹುದು. ಅದಕ್ಕೂ ಮುನ್ನ ಕುಲಾವಿ ಹಾಕ್ಕೋತ್ತೀನಿ ಅಂದ್ರೆ ಯಾಕೆ ಬೇಡ ಎನ್ನಲಿ ಎಂದರು.

    ಜೆಡಿಎಸ್ ಕುರಿತು ಅನಗತ್ಯ ಹೇಳಿಕೆ ನೀಡಿರುವ ಸಚಿವ ಡಾ.ಕೆ. ಸುಧಾಕರ್ ಹೇಳಿಕೆ ವಿಚಾರದ ಬಗ್ಗೆ ಕಿಡಿಕಾರಿದ ಮಾಜಿ ಮುಖ್ಯಮಂತ್ರಿ, ಹೆಚ್ಚು ಕಡಿಮೆ ಆಗಿ ಅವರು ರಾಜಿನಾಮೆ ಕೊಡಬೇಕಾದ ಸಂದರ್ಭ ಬಂದುಬಿಟ್ಟಾಯಿತು. ಆಮೇಲೆ ಶಾಸಕನಾಗೋಕೆ ಆಗಲ್ವಲ್ಲಾ? ಅವರು ಮಾಡಿದ ಅನಾಚಾರ ಜನರಿಗೆ ಗೊತ್ತಿದೆ. ರೆಫ್ರಿಜರೇಟರ್, ಸ್ಟವ್ ಎಲ್ಲಾ ಹಂಚುತ್ತಿದ್ದಾರೆ. ಇಷ್ಟೆಲ್ಲಾ ಕೊಡ್ತಾ ಇದ್ದಾರೆ ಅಂದರೆ, ಇವರು ಇನ್ನೆಷ್ಟು ಶ್ರೀಮಂತರು ಅಂತ ಜನರು ಮನೇಲಿ ಕೂರಿಸಿಬಿಟ್ಟರೆ ಕಷ್ಟ. ಎಚ್ಚರಿಕೆಯಿಂದ ಇದ್ದರೆ ಉತ್ತಮ ಎಂದು ಟಾಂಗ್ ಕೊಟ್ಟರು. ಇದನ್ನೂ ಓದಿ: ಚುನಾವಣಾ ಕಣಕ್ಕಿಳಿಯಲು ಪಿಎಸ್‍ಐ ಹಗರಣದ ಕಿಂಗ್‍ಪಿನ್ ಆರ್‌ಡಿ ಪಾಟೀಲ್ ಸಜ್ಜು

  • ಟಿಕೆಟ್ ನೀಡುವಂತೆ ಯಾರನ್ನೂ ಕೇಳುವ ಅಗತ್ಯವೇ ಇಲ್ಲ: ಕಾಂಗ್ರೆಸ್ ಶಾಸಕ

    ಟಿಕೆಟ್ ನೀಡುವಂತೆ ಯಾರನ್ನೂ ಕೇಳುವ ಅಗತ್ಯವೇ ಇಲ್ಲ: ಕಾಂಗ್ರೆಸ್ ಶಾಸಕ

    – ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೂ ಮುನ್ನವೇ ನಾಮಪತ್ರ ಸಲ್ಲಿಕೆ

    ಚಂಡೀಗಢ: ಪಕ್ಷವು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಮೇಲೆಯೇ ನಾಮಪತ್ರ ಸಲ್ಲಿಸಬೇಕು. ಆದರೆ ಹರ್ಯಾಣದ ಕಾಂಗ್ರೆಸ್ ಶಾಸಕರೊಬ್ಬರು ಪಟ್ಟಿ ಬಿಡುಗಡೆಗೂ ಮುನ್ನವೇ ನಾಮಪತ್ರ ಸಲ್ಲಿಸಿ ‘ಕೈ’ ನಾಯಕರಲ್ಲಿ ಅಚ್ಚರಿ ಮೂಡಿಸಿದ್ದಾರೆ.

    ಹರ್ಯಾಣ ವಿಧಾನಸಭಾ ಚುನಾವಣೆ ಘೋಷಣೆ ಆಗಿದ್ದು, ಅಕ್ಟೋಬರ್ 21ರಂದು ಮತದಾನ ನಡೆಯಲಿದೆ. ಈವರೆಗೂ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ಆದರೆ ಮೆಹಮ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ದಂಗಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಶಾಸಕರ ಈ ನಡೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

    ನಾಮಪತ್ರ ಸಲ್ಲಿಕೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆನಂದ್ ಸಿಂಗ್ ದಂಗಿ, ಟಿಕೆಟ್ ನೀಡುವಂತೆ ಯಾರನ್ನೂ ಕೇಳುವ ಅಗತ್ಯವಿಲ್ಲ. ನನ್ನ ಟಿಕೆಟ್ ಅಂತಿಮವಾಗಿದೆ. ಬೇರೆಯವರು ಬಯಸಿದರೆ ಇನ್ನೊಂದು ಟಿಕೆಟ್ ಪಡೆಯಬಹುದು ಎಂದು ನಗೆ ಚಟಾಕಿ ಹಾರಿಸಿದರು.

    ಆನಂದ್ ಸಿಂಗ್ ದಂಗಿ 1991, 2005, 2009 ಮತ್ತು 2014ರಲ್ಲಿ ಮೆಹಮ್ ವಿಧಾನಸಭಾ ಸ್ಥಾನದಿಂದ ಶಾಸಕರಾಗಿದ್ದಾರೆ. ಮೆಹಮ್ ಕ್ಷೇತ್ರದಲ್ಲಿ ಆನಂದ್ ಸಿಂಗ್ ದಂದಿ ಪ್ರಾಬಲ್ಯವಿದೆ. ಹಗರಣ ಒಂದಲ್ಲಿ ಸಿಲುಕಿದ್ದ ದಂಗಿ ಅವರು 2014ರ ವಿಧಾನಸಭಾ ಚುನಾವಣೆಯಲ್ಲಿ ಚೌತಲಾ ಕುಟುಂಬದ ವಿರುದ್ಧ ಸ್ಪರ್ಧಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅಲೆಯ ಹೊರತಾಗಿಯೂ, ಅವರು ಗೆಲುವು ಸಾಧಿಸಿದ್ದರು.

    ಹರ್ಯಾಣದ ಮಾಜಿ ಸಿಎಂ ಭೂಪೇಂದ್ರ ಸಿಂಗ್ ಹೂಡಾ ಅವರ ಪತ್ನಿ ಆಶಾ ಹೂಡಾ ಮೆಹಮ್ ಕ್ಷೇತ್ರದ ಟಿಕೆಟ್ ಪಡೆಯಲು ಲಾಬಿ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವಿಚಾರ ತಿಳಿದ ದಂಗಿ ಅವರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೂ ಮುನ್ನವೇ ನಾಮಪತ್ರ ಸಲ್ಲಿಸಿ ಬಿಗ್ ಶಾಕ್ ನೀಡಿದ್ದಾರೆ.

  • ರಾಜ್ಯ ಚುನಾವಣೆಗೆ ಮಾಸ್ಟರ್ ಪ್ಲ್ಯಾನ್ – ರಾಮನ ಮೊರೆಹೋದ ಬಿಜೆಪಿ ಹೈಕಮಾಂಡ್!

    ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ರಾಮನವಮಿ ದಿನ ಮಾರ್ಚ್ 25ಕ್ಕೆ ಬಿಡುಗಡೆ ಮಾಡಲು ಮುಂದಾಗಿದೆ.

    ಮೊದಲ ಪಟ್ಟಿಯಲ್ಲಿ 110 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಹೈಕಮಾಂಡ್ ಬಿಡುಗಡೆ ಮಾಡಲಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

    ಈ ಪಟ್ಟಿಯಲ್ಲಿ ಹಾಲಿ ಶಾಸಕರಾಗಿರುವ ಬಹುತೇಕ ಮಂದಿಗೆ ಟಿಕೆಟ್ ಖಚಿತ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭಿಸಿದೆ. ಅಲ್ಲದೇ ಕಳೆದ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಪರಾಭವಗೊಂಡಿರುವ ಅಭ್ಯರ್ಥಿಗಳಿಗೂ ಮಣೆ ಹಾಕುವ ಸಾಧ್ಯತೆಗಳಿದ್ದು, ಪ್ರಮುಖವಾಗಿ 500 ರಿಂದ 2 ಸಾವಿರ ಮತಗಳ ಅಂತರದಲ್ಲಿ ಪರಾಭವಗೊಂಡ ಅಭ್ಯರ್ಥಿಗಳ ಆಯ್ಕೆಗೆ ಹೆಚ್ಚಿನ ಒಲವು ನೀಡಲಾಗಿದೆ.

    ಅಭ್ಯರ್ಥಿಗಳ ಆಯ್ಕೆಯಲ್ಲಿ ಪ್ರಮುಖವಾಗಿ ಕ್ಷೇತ್ರದ ವಿಸ್ತಾರಕರ ವರದಿ ಮತ್ತು ಅಮಿತ್ ಶಾ ಅವರ ಟೀಂ ನೀಡಿರುವ ವರದಿ ಆಧಾರಿಸಿ ಟಿಕೆಟ್ ಅಂತಿಮ ಮಾಡಲಾಗುತ್ತಿದ್ದು, ಕ್ಷೇತ್ರದವರಲ್ಲದಿದ್ದರೂ ಗೆಲ್ಲುವ ಸಾಮರ್ಥ್ಯವಿದ್ದರೆ ಟಿಕೆಟ್ ನೀಡಲು ಪರಿಗಣನೆ ಮಾಡಲಾಗುತ್ತಿದೆ ಎನ್ನಲಾಗಿದೆ. ಇನ್ನುಳಿದಂತೆ ಅಭ್ಯರ್ಥಿಗಳ ಆಯ್ಕೆಯಲ್ಲಿ ಜಾತಿ ಸಮೀಕರಣ ಪ್ರಮುಖ ಅಂಶವಾಗಿದ್ದು, ಕ್ಷೇತ್ರದಲ್ಲಿ ಪಕ್ಷದ ಕಾರ್ಯಚಟುವಟಿಕೆ ಮತ್ತು ವರ್ಚಸ್ಸು ಆಧರಿಸಿ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತಿದೆ. ವಿಶೇಷವಾಗಿ ಐದು ಮಂದಿಗಿಂತ ಹೆಚ್ಚು ಟಿಕೆಟ್ ಆಕಾಂಕ್ಷಿಗಳು ಇರುವ ಕ್ಷೇತ್ರಗಳ ಹೆಸರು ಮೊದಲ ಪಟ್ಟಿಯಿಂದ ಕೈಬಿಡಲಾಗಿದೆ.

    ಮಾರ್ಚ್ 10 ರಿಂದ 19 ರವರೆಗೆ ಅಮಿತ್ ಶಾ ತಂಡದ ಸದಸ್ಯರು 224 ಕ್ಷೇತ್ರಗಳ ಪ್ರವಾಸ ನಡೆಸಲಿದ್ದು, ಮಾರ್ಚ್ 20 ರಂದು ಈ ವರದಿ ಸಲ್ಲಿಕೆಯಾಗಲಿದೆ. ಈ ವರದಿಯಲ್ಲಿ ಅಂಶಗಳನ್ನು ಆಧಾರಿಸಿ ರಾಜ್ಯ ಆರ್ ಎಸ್‍ಎಸ್ ನಾಯಕರ ಜೊತೆ ಚರ್ಚಿಸಿ ಅಮಿತ್ ಶಾ ಅಂತಿಮವಾಗಿ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ರಾಮನವಮಿ ದಿನ ಟಿಕೆಟ್ ಘೋಷಣೆ ಮಾಡಿ ಹಿಂದೂ ಅಜೆಂಡಾವನ್ನು ಸಾರಲು ಬಿಜೆಪಿ ನಾಯಕರು ಮಾರ್ಚ್ 25 ರಂದೇ ಮೊದಲ ಪಟ್ಟಿ ಬಿಡುಗಡೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.