Tag: candidates

  • General Elections2024: ನೆಚ್ಚಿನ ಅಭ್ಯರ್ಥಿಗಳ ಮೇಲೆ ಲಕ್ಷ ಲಕ್ಷ ಬೆಟ್ಟಿಂಗ್‌ ಕಟ್ಟಿದ ವಕೀಲರು!

    General Elections2024: ನೆಚ್ಚಿನ ಅಭ್ಯರ್ಥಿಗಳ ಮೇಲೆ ಲಕ್ಷ ಲಕ್ಷ ಬೆಟ್ಟಿಂಗ್‌ ಕಟ್ಟಿದ ವಕೀಲರು!

    ಲಕ್ನೋ: ಇಷ್ಟು ದಿನ ಐಪಿಎಲ್‌ನಲ್ಲಿ ಮಾತ್ರ ಬೆಟ್ಟಿಂಗ್‌ ನಡೆಯುತ್ತಿತ್ತು. ಬ್ಯಾಟರ್‌, ಬೌಲರ್‌ಗಳು ಕಣಕ್ಕಿಳಿದರೆ, ಇತಿಂಷ್ಟು ರನ್‌ ಹೊಡೆಯುತ್ತಾರೆ, ವಿಕೆಟ್‌ ತೆಗೆಯುತ್ತಾರೆ, ಸಿಕ್ಸರ್‌ ಬೌಂಡರಿ ಸಿಡಿಸುತ್ತಾರೆ ಎಂದು ಬೆಟ್ಟಿಂಗ್‌ ನಡೆಯುತ್ತದೆ. ಆದ್ರೆ ಇಲ್ಲಿ ವಕೀಲರಿಬ್ಬರು (UP Lawyers) ಲೋಕಸಭಾ ಚುನಾವಣೆಯ (Lok Sabha Elections) ಅಖಾಡದಲ್ಲಿರುವ ತಮ್ಮ ನೆಚ್ಚಿನ ಅಭ್ಯರ್ಥಿಗಳ ಪರ ಲಕ್ಷ ಲಕ್ಷ ಹಣ ಬೆಟ್ಟಿಂಗ್‌ ಮಾಡಿ ಅಚ್ಚರಿ ಮೂಡಿಸಿದ್ದಾರೆ.

    ಹೌದು. ಮೇ 7ರಂದು 3ನೇ ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಚುನಾವಣೆಯಲ್ಲಿ ಉತ್ತರ ಪ್ರದೇಶದ ಬದೌನ್ ಕ್ಷೇತ್ರದಿಂದ ಸ್ಪರ್ಧಿಸಿರುವ ಇಬ್ಬರು‌ ನೆಚ್ಚಿನ ಅಭ್ಯರ್ಥಿಗಳ ಮೇಲೆ ವಕೀಲರಿಬ್ಬರು ತಲಾ 2 ಲಕ್ಷ ರೂ. ಬಾಜಿ (Betting) ಕಟ್ಟಿದ್ದಾರೆ. ಉತ್ತರ ಪ್ರದೇಶದ ಬದೌನ್ ಕ್ಷೇತ್ರದಲ್ಲಿ ವಕೀಲ ಸತ್ಯೇಂದ್ರ ಪಾಲ್ ಮತ್ತು ವಕೀಲ ದಿವಾಕರ್ ವರ್ಮಾ ಬೆಟ್ಟಿಂಗ್‌ದಾರರಾಗಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ವೀಡಿಯೋ ವಿಚಾರ ಗೊತ್ತಿದ್ದು ಮೈತ್ರಿ ಟಿಕೆಟ್, ಮೋದಿ ಪ್ರಚಾರ: ಸಿಎಂ ವಾಗ್ದಾಳಿ 

    ಸತ್ಯೇಂದ್ರ ಪಾಲ್ ಸಮಾಜವಾದಿ ಪಕ್ಷದ (Samajwadi Party) ಅಭ್ಯರ್ಥಿ ಆದಿತ್ಯ ಯಾದವ್‌ ಮೇಲೆ, ದಿವಾಕರ್ ವರ್ಮಾ ಅವರು ಬಿಜೆಪಿಯ ದಿಗ್ವಿಜಯ್ ಸಿಂಗ್ ಶಾಕ್ಯಾ ಅವರು ಲೀಡ್‌ನಲ್ಲಿ ಗೆಲ್ಲುತ್ತಾರೆ ಎಂದು ಬೆಟ್ಟಿಂಗ್‌ ಕಟ್ಟಿದ್ದಾರೆ. ಇದರಲ್ಲಿ ಸೋತವರು ಮತ್ತೊಬ್ಬ ವಕೀಲರಿಗೆ 2 ಲಕ್ಷ ರೂ. ನೀಡುವುದಾಗಿ ಬೆಟ್ಟಿಂಗ್‌ ಕಟ್ಟಿದ್ದಾರೆ. ಇದನ್ನೂ ಲೀಗಲ್‌ ಮಾಡಿದ್ದು, ನಾಲ್ವರು ಸಾಕ್ಷಿಗಳ ಸಹಿಯೊಂದಿಗೆ ಅಫಿಡವಿಟ್‌ ಸಹ ಮಾಡಿಸಿದ್ದಾರೆ.

    3ನೇ ಹಂತದ ಚುನಾವಣೆಯಲ್ಲಿ ಉತ್ತರ ಪ್ರದೇಶದ ಸಂಭಾಲ್, ಹತ್ರಾಸ್, ಆಗ್ರಾ, ಫತೇಪುರ್ ಸಿಕ್ರಿ, ಫಿರೋಜಾಬಾದ್, ಮೈನ್‌ಪುರಿ, ಇಟಾಹ್, ಬದೌನ್, ಬರೇಲಿ ಮತ್ತು ಅಯೋನ್ಲಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಆಡಳಿತಾರೂಢ ಬಿಜೆಪಿ ರಾಷ್ಟ್ರೀಯ ಲೋಕದಳದೊಂದಿಗೆ ಮೈತ್ರಿಯಾಗಿ ಕಣಕ್ಕಿಳಿದಿದ್ದರೆ, ಸಮಾಜವಾದಿ ಪಕ್ಷವು ಚುನಾವಣೆಗಾಗಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದೆ. ಬಹುಜನ ಸಮಾಜ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಿದೆ. ಇದನ್ನೂ ಓದಿ: ಸಂತೋಷ್ ಬಾಲರಾಜ್ ನಟನೆಯ ‘ಸತ್ಯಂ’ ಚಿತ್ರಕ್ಕೆ ಸೆನ್ಸಾರ್ ಮೆಚ್ಚುಗೆ!

  • ಲೋಕಸಭಾ ಎಲೆಕ್ಷನ್‍ಗೆ ಅಭ್ಯರ್ಥಿಗಳು ಈಗಾಗ್ಲೇ ರೆಡಿಯಾಗಿದ್ದು, ಸಮಾವೇಶದಲ್ಲಿ ಘೋಷಿಸ್ತೇನೆ: ರೆಡ್ಡಿ

    ಲೋಕಸಭಾ ಎಲೆಕ್ಷನ್‍ಗೆ ಅಭ್ಯರ್ಥಿಗಳು ಈಗಾಗ್ಲೇ ರೆಡಿಯಾಗಿದ್ದು, ಸಮಾವೇಶದಲ್ಲಿ ಘೋಷಿಸ್ತೇನೆ: ರೆಡ್ಡಿ

    ಕೊಪ್ಪಳ: ಲೋಕಸಭಾ ಚುನಾವಣೆಗೆ (Loksabha Election) ನಾನಾಗಲಿ, ನನ್ನ ಕುಟುಂಬದವರಾಗಲಿ ಸ್ಪರ್ಧೆ ಮಾಡುವುದಿಲ್ಲ. ಹೊಸ ಅಭ್ಯರ್ಥಿಗಳು ಈಗಾಗಲೇ ರೆಡಿ ಆಗಿದ್ದಾರೆ. ಅವರ ಹೆಸರುಗಳನ್ನು ಕೊಪ್ಪಳದ ಸಮಾವೇಶದಲ್ಲಿ ಘೋಷಣೆ ಮಾಡುತ್ತೇನೆ ಎಂದು ಶಾಸಕ ಜನಾರ್ದನ ರೆಡ್ಡಿ (Janardhan Reddy) ಹೇಳಿದ್ದಾರೆ.

    ಕೊಪ್ಪಳದ ಗಂಗಾವತಿ ತಾಲೂಕಿನ ಪಂಪಾಸರೋವರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಹಿನ್ನೆಲೆ ಜನವರಿ 11 ರಂದು ಕೊಪ್ಪಳದಲ್ಲಿ 6 ಜಿಲ್ಲೆಗಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 4 ರಿಂದ 6 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಹಾಕುತ್ತೇನೆ. ಅವರನ್ನು ಗೆಲ್ಲಿಸಲು ಹಗಲು ರಾತ್ರಿ ಕೆಲಸ ಮಾಡುತ್ತೇನೆ ಎಂದಿದ್ದಾರೆ.

    ಬೇರೆ ಪಕ್ಷಗಳ ಜೊತೆಗೆ ಹೊಂದಾಣಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ (Vidhanasabha Election) ಯಾರ ಜೊತೆಗೂ ಹೊಂದಾಣಿಕೆ ಮಾಡಿಕೊಂಡಿಲ್ಲ. ಹೀಗಾಗಿ ಕೆಆರ್ ಪಿಪಿ (KRPP) ತನ್ನ ಇತಿಮಿತಿಗಳಲ್ಲಿ ಲೋಕಸಭೆಗೆ ಸ್ಪರ್ಧೆ ಮಾಡುತ್ತದೆ. ಬೇರೆ ಪಕ್ಷಗಳ ಜೊತೆಗೆ ಹೋಗುವ ಪ್ರಶ್ನೆ ಉದ್ಭವಿಸುವುದಿಲ್ಲ. ಯಾರು ಏನೇ ಮಾಡಿದರೂ ನನ್ನ ನಿರ್ಧಾರ ದೃಢವಾಗಿದೆ. ಕೆಆರ್ ಪಿಪಿ ಸ್ವತಃ ಬಲದ ಮೇಲೆ ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ ಎಂದು ರೆಡ್ಡಿ ತಿಳಿಸಿದ್ದಾರೆ. ಇದನ್ನೂ ಓದಿ: ಲೋಕಸಭೆ ಚುನಾವಣೆ ಕಳೆಯುವ ವರೆಗೆ ಕಾಂಗ್ರೆಸ್ ನಾಯಕರಿಗಿಲ್ಲಾ‌ ನಿಗಮ ಮಂಡಳಿ ಭಾಗ್ಯ!?

    ಯಾವೊಂದು ಪಕ್ಷದ ಜೊತೆಗೆ ಸೇರುವ ಪ್ರಶ್ನೆ ಬರುವುದಿಲ್ಲ. ಸ್ವತಃ ಬಲದ ಮೇಲೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತೇನೆ. ಲೋಕಸಭಾ ಚುನಾವಣೆಗೆ ನಾನಾಗಲಿ ನನ್ನ ಕುಟುಂಬದವರಾಗಲಿ ಸ್ಪರ್ಧೆ ಮಾಡುವುದಿಲ್ಲ. ಹೊಸ ಅಭ್ಯರ್ಥಿಗಳು ಈಗಾಗಲೇ ರೆಡಿ ಆಗಿದ್ದಾರೆ. ಅವರ ಹೆಸರುಗಳನ್ನು ಕೊಪ್ಪಳದ ಸಮಾವೇಶದಲ್ಲಿ ಘೋಷಣೆ ಮಾಡುತ್ತೇನೆ. ಅಂದು ಕನಿಷ್ಟ ಎರಡು ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಕೆಲಸ ಮಾಡುತ್ತೇನೆ ಎಂದಿದ್ದಾರೆ.

    ಕಳೆದ ವರ್ಷ ಹನುಮಮಾಲಾ ಜಯಂತಿಗೆ ಪಾದಾರ್ಪಣೆ ಮಾಡಿದ್ದೆ. ಹನುಮಮಾಲಾ ಧರಿಸುವ ಮೂಲಕ ಚುನಾವಣೆಗೆ ಸ್ಪರ್ಧೆ ಮಾಡುವುದನ್ನು ತಿಳಿಸಿದ್ದೆ. ಈಗ ಒಂದು ವರ್ಷ ಕಳೆದಿದೆ. ಭಗವಂತನ ಕೃಪೆ ಇದೆ. ಹನುಮಂತನ ಪಾದ ಮುಟ್ಟಿ ಗಂಗಾವತಿ ಶಾಸಕನಾಗಲು ಬೇಡಿಕೊಂಡಿದ್ದೆ. ನನ್ನ ಮೊದಲನೇ ಬೇಡಿಕೆ ಶಾಸಕನಾಗುವುದು ಈಡೇರಿದೆ. ಕಿಷ್ಕಿಂದ ಕ್ಷೇತ್ರವನ್ನು ಅಭಿವೃದ್ಧಿ ಮಾಡಲು ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಜನಾರ್ದನ ರೆಡ್ಡಿ ತಿಳಿಸಿದ್ದಾರೆ.

  • ಭ್ರಷ್ಟಾಚಾರ ಮುಕ್ತ ಸರ್ಕಾರಕ್ಕಾಗಿ ಆಪ್‌ಗೆ ಮತ ಚಲಾಯಿಸಿ: ಕೇಜ್ರಿವಾಲ್ ಮನವಿ

    ಭ್ರಷ್ಟಾಚಾರ ಮುಕ್ತ ಸರ್ಕಾರಕ್ಕಾಗಿ ಆಪ್‌ಗೆ ಮತ ಚಲಾಯಿಸಿ: ಕೇಜ್ರಿವಾಲ್ ಮನವಿ

    ದೆಹಲಿ: ಭ್ರಷ್ಟಾಚಾರ ಮುಕ್ತ ಸರ್ಕಾರಕ್ಕಾಗಿ ಎಎಪಿಗೆ (AAP) ಮತ ಚಲಾಯಿಸಿ ಎಂದು ದೆಹಲಿ ಮಹಾನಗರ ಪಾಲಿಕೆ ಚುನಾವಣೆ (Delhi MCD Elections) ಹಿನ್ನೆಲೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಜನತೆಗೆ ಮನವಿ ಮಾಡಿಕೊಂಡಿದ್ದಾರೆ.

    ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿರುವ ಕೇಜ್ರಿವಾಲ್, ಇಂದು ದೆಹಲಿಯನ್ನು ಸ್ವಚ್ಛ ಮತ್ತು ಸುಂದರವಾಗಿಸಲು ಮತದಾನ ನಡೆಯುತ್ತಿದೆ, ಪಾಲಿಕೆಯಲ್ಲಿ ಭ್ರಷ್ಟಾಚಾರ ಮುಕ್ತ ಸರ್ಕಾರ ಮಾಡಲು ಮತದಾನ ನಡೆಯುತ್ತಿದೆ. ಪ್ರಾಮಾಣಿಕ ಮತ್ತು ದುಡಿಯುವ ಸರ್ಕಾರವನ್ನು ರಚಿಸಲು ಇಂದೇ ನಿಮ್ಮ ಮತ ಚಲಾಯಿಸಿ ಎಂದು ಜನತೆಯೊಂದಿಗೆ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಹಿಂದೂಗಳಿಗೆ ಅವಹೇಳನ ಮಾಡಿದ ಬದ್ರುದ್ದೀನ್ ಅಜ್ಮಲ್ ಕ್ಷಮೆ

    ದೆಹಲಿ ಮಹಾನಗರ ಪಾಲಿಕೆಯ 250 ವಾರ್ಡ್‍ಗಳಿಗೆ ಇಂದು ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಮತದಾನವು ಬೆಳಗ್ಗೆ 8ರಿಂದ ಸಂಜೆ 5.30ರವರೆಗೆ ಮತದಾನ ನಡೆಯಲಿದೆ. ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ, ಆಮ್ ಆದ್ಮಿ ಹಾಗೂ ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆಗೆ ಏರ್ಪಟ್ಟಿದೆ.

    ದೆಹಲಿಯಲ್ಲಿ ಒಟ್ಟು 1,45,05,358 ಮತದಾರರಿದ್ದಾರೆ. ಈ ಪೈಕಿ 78,93,418 ಪುರುಷರು, 66,10,879 ಮಹಿಳೆಯರು ಮತ್ತು 1,061 ತೃತೀಯಲಿಂಗಿಗಳಿದ್ದಾರೆ. ಚುನಾವಣಾ ಆಯೋಗ 13,638 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮತದಾರರ ಗುಣಮಟ್ಟದ ಅನುಭವಕ್ಕಾಗಿ 68 ಮಾದರಿ ಮತ್ತು 68 ಪಿಂಕ್ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 68 ಮಾದರಿ ಮತಗಟ್ಟೆಗಳಲ್ಲಿ ನಿಲ್ಲಲು ಸ್ಥಳ, ಲೌಂಜ್, ಮತದಾರರಿಗೆ ಸಹಿತಿಂಡಿ, ಟೋಪಿ ವಿತರಣೆ, ಸೆಲ್ಫಿ ಬೂತ್ ಮತ್ತು ಅಂಗವಿಕಲರು, ಹಿರಿಯ ನಾಗರಿಕರಿಗೆ ಸಹಾಯ ಮಾಡಲು ನಾಗರಿಕ ರಕ್ಷಣಾ ಸ್ವಯಂಸೇವಕರು ಸೇರಿದಂತೆ ಹಲವು ಸೌಲಭ್ಯಗಳನ್ನೂ ಒದಗಿಸಲಾಗಿದೆ. ಇದನ್ನೂ ಓದಿ: ಬೆತ್ತನಗೆರೆ ಶಂಕರನ ರಾಜಕೀಯ ಎಂಟ್ರಿಗೆ ಖಾಕಿ ಬ್ರೇಕ್!

    ರಾಜಧಾನಿಯಲ್ಲಿ ನಗರ ಸ್ಥಳೀಯ ಸಂಸ್ಥೆಯ ಚುಕ್ಕಾಣಿ ಹಿಡಿಯಲು ಈಗಾಗಲೇ ಘಾಟಾನುಘಟಿ ನಾಯಕರು ಪ್ರಚಾರ ನಡೆಸಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಡಿಸೆಂಬರ್ 7 ರಂದು ಮತ ಎಣಿಕೆ ನಡೆಯಲಿದೆ.

    Live Tv
    [brid partner=56869869 player=32851 video=960834 autoplay=true]

  • ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ – ಮತದಾರರ ಕೈಯಲ್ಲಿ 412 ಅಭ್ಯರ್ಥಿಗಳ ಭವಿಷ್ಯ

    ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ – ಮತದಾರರ ಕೈಯಲ್ಲಿ 412 ಅಭ್ಯರ್ಥಿಗಳ ಭವಿಷ್ಯ

    ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಮತದಾನ (Himachal Pradesh Assembly Election) ಇಂದು ಬೆಳಗ್ಗೆ 8 ಗಂಟೆಯಿಂದ ಆರಂಭವಾಗಿದೆ. 68 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

    ಒಟ್ಟು 55 ಲಕ್ಷ ಮತದಾರರು 68 ಕ್ಷೇತ್ರದ 412 ಅಭ್ಯರ್ಥಿಗಳ (Candidates) ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಆಡಳಿತಾರೂಢ ಬಿಜೆಪಿ (BJP), ಕಾಂಗ್ರೆಸ್ (Congress), ಎಎಪಿ (AAP) ಮತ್ತು ಇತರ ಪಕ್ಷಗಳ ಭವಿಷ್ಯ ಇಂದು ಮತಯಂತ್ರಗಳಲ್ಲಿ ಭದ್ರವಾಗಲಿದೆ. ಇಂದು ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಹಿಮಾಚಲ ಪ್ರದೇಶದಲ್ಲಿ ಬಿಜೆಪಿ, ಕಾಂಗ್ರೆಸ್, ಎಎಪಿ ಮಧ್ಯೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಚುನಾವಣಾ ಆಯೋಗದ ಪ್ರಕಾರ, ಒಟ್ಟು 55,92,828 ಮತದಾರರಲ್ಲಿ 27,37,845 ಮಹಿಳೆಯರು, 28,54,945 ಪುರುಷರು ಮತ್ತು 38 ತೃತೀಯಲಿಂಗಿಗಳು, 412 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ. ಈ ಬಾರಿ 24 ಮಹಿಳಾ ಅಭ್ಯರ್ಥಿಗಳಿಳು ಕಣದಲ್ಲಿದ್ದಾರೆ. ಇದನ್ನೂ ಓದಿ: ಮುರುಘಾಶ್ರೀ ವಿರುದ್ಧ ಪಿತೂರಿ ಕೇಸ್- ಮಠದ ಅಡುಗೆ ಸಹಾಯಕಿ ಅರೆಸ್ಟ್

    ಮತದಾನ ವೇಳೆ ಯಾವುದೇ ಅಹಿತಕರ ಘಟನೆ ನಡೆಯದೆ ಶಾಂತಿಯುತ ಮತದಾನ ನಡೆಸಲು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (CAPF) 67 ಕಂಪನಿಗಳು ಮತ್ತು 11,500 ಕ್ಕೂ ಹೆಚ್ಚು ರಾಜ್ಯ ಪೊಲೀಸ್ ಸಿಬ್ಬಂದಿ ಸೇರಿದಂತೆ ಸುಮಾರು 30,000 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸುಮಾರು 50 ಸಾವಿರ ಸರ್ಕಾರಿ ನೌಕರರು ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಬಿಜೆಪಿ, ಕಾಂಗ್ರೆಸ್ ಮತ್ತು ಎಎಪಿ ಎಲ್ಲಾ 68 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದರೆ, ಸಿಪಿಐಎಂ 11, ಸಿಪಿಐ 1, ಬಿಎಸ್‍ಪಿ 53 ಮತ್ತು ಆರ್‌ಡಿಪಿ 29 ರಲ್ಲಿ ಸ್ಪರ್ಧಿಸುತ್ತಿವೆ. ಇದನ್ನೂ ಓದಿ: ಮಕ್ಕಳನ್ನು ಕರೆದೊಯ್ಯುತ್ತಿದ್ದಾಗ ಆಟೋ ಪಲ್ಟಿ – ಜನರಿಂದ ತಪ್ಪಿಸಿಕೊಳ್ಳಲು ವಿದ್ಯುತ್ ಕಂಬ ಏರಿದ

    ಮತದಾನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ (Narendra Modi) ಹಿಮಾಚಲ ಪ್ರದೇಶದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ತೆರಳಿ ಮತಚಲಾಯಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಪ್ರಜಾಪ್ರಭುತ್ವ ಹಬ್ಬದಲ್ಲಿ ಜನರು ಉತ್ಸಾಹದಿಂದ ಭಾಗವಹಿಸಿ, ದಾಖಲೆ ಪ್ರಮಾಣದಲ್ಲಿ ಮತದಾನ ಮಾಡಿ. ಮೊದಲ ಬಾರಿ ಮತದಾನ ಮಾಡುತ್ತಿರುವ ಮತದಾರರಿಗೆ ಟ್ವೀಟ್ ಮಾಡಿ ಶುಭ ಹಾರೈಸಿದ್ದಾರೆ. ಮೋದಿ 2 ದಿನಗಳ 4 ದಕ್ಷಿಣ ರಾಜ್ಯಗಳ ಪ್ರವಾಸದಲ್ಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • UP ಎಲೆಕ್ಷನ್: ಕಾಂಗ್ರೆಸ್ 4ನೇ ಪಟ್ಟಿ ಪ್ರಕಟ 24 ಮಹಿಳೆಯರಿಗೆ ಅವಕಾಶ

    UP ಎಲೆಕ್ಷನ್: ಕಾಂಗ್ರೆಸ್ 4ನೇ ಪಟ್ಟಿ ಪ್ರಕಟ 24 ಮಹಿಳೆಯರಿಗೆ ಅವಕಾಶ

    ಲಕ್ನೋ: ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಕಾಂಗ್ರೆಸ್ ಪ್ರಕಟಿಸಿದೆ. 61 ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿದ್ದು, 24 ಮಹಿಳೆಯರಿಗೆ ಸ್ಪರ್ಧಿಸಲು ಅವಕಾಶ ನೀಡಲಾಗಿದೆ.

    ಕಾಂಗ್ರೆಸ್ ಒಟ್ಟು ಅಭ್ಯರ್ಥಿಗಳ ಪೈಕಿ ಶೇಕಡ 40 ಮಹಿಳಾ ಅಭ್ಯರ್ಥಿಗಳಿಗೆ ಸ್ಪರ್ಧಿಸಲು ಅವಕಾಶ ನೀಡುವುದಾಗಿ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಈ ಹಿಂದೆ ಹೇಳಿದ್ದರು.ಕಾಂಗ್ರೆಸ್ ರಾಯ್ ಬರೇಲಿ, ಅಮೇಠಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿರುವ ಅಭ್ಯರ್ಥಿಗಳ ಹೆಸರು ಪ್ರಕಟ ಮಾಡಿದೆ.

    ಮೊದಲ ಪಟ್ಟಿಯಲ್ಲಿ ಪ್ರಕಟಿಸಲಾದ 125 ಅಭ್ಯರ್ಥಿಗಳ ಪೈಕಿ 50 ಮಹಿಳಾ ಅಭ್ಯರ್ಥಿಗಳಿದ್ದರು.  ಎರಡನೇ ಪಟ್ಟಿಯಲ್ಲಿನ 41 ಅಭ್ಯರ್ಥಿಗಳಲ್ಲಿ 16 ಜನ ಮಹಿಳೆಯರು ಹಾಗೂ 89 ಅಭ್ಯರ್ಥಿಗಳ ಮೂರನೇ ಪಟ್ಟಿಯಲ್ಲಿ 37 ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ. ಮೊದಲ ಪಟ್ಟಿಯಲ್ಲಿ 2017ರ ಉನ್ನಾವೊ ಸಂತ್ರಸ್ತೆಯ ತಾಯಿ ಆಶಾ ದೇವಿ ಅವರಿಗೆ ಟಿಕೆಟ್ ನೀಡಲಾಗಿದೆ. ಇದನ್ನೂ ಓದಿ: ನನ್ನ ಹೆಸರು ಸಲ್ಮಾನ್ ಖಾನ್’ ಎಂದು ಹಾಲಿವುಡ್ ನಟನಿಗೆ ಪರಿಚಯ ಮಾಡಿಕೊಂಡ ಸಲ್ಲು

    ಆಶಾ ಕಾರ್ಯಕರ್ತರ ಗೌರವಧನ ಹೆಚ್ಚಿಸಲು ನಡೆದ ಹೋರಾಟದ ನೇತೃತ್ವ ವಹಿಸಿದ್ದ ಪೂನಂ ಪಾಂಡೆ ಅವರಿಗೆ ಷಹಜಹಾನ್‍ಪುರದಿಂದ ಟಿಕೆಟ್ ಘೋಷಿಸಲಾಗಿದೆ. ಸಂಘ ಸಂಸ್ಥೆಗಳಿಂದ ಹಿಡಿದು ಪತ್ರಕರ್ತರ ವರೆಗೂ, ಹೋರಾಟ ನಡೆಸುತ್ತಿರುವ ಮಹಿಳೆಯರನ್ನು ಆಯ್ಕೆ ಮಾಡಲಾಗಿದೆ ಪ್ರಿಯಾಂಕಾ ಹೇಳಿದ್ದಾರೆ. ಇದನ್ನೂ ಓದಿ:  ಎಲಾನ್ ಮಸ್ಕ್ ಅವರ ಬಿಗ್ ಆಫರ್ ತಿರಸ್ಕರಿಸಿದ ಯುವಕ

    ಉತ್ತರ ಪ್ರದೇಶದಲ್ಲಿ ಫೆಬ್ರುವರಿ 10ರಿಂದ ಮಾರ್ಚ್ 7ರ ವರೆಗೆ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10ರಂದು ಫಲಿತಾಂಶ ಪ್ರಕಟವಾಗಲಿದೆ.

     

  • ಆಣೆ ಪ್ರಮಾಣ ಎಷ್ಟರ ಮಟ್ಟಿಗೆ ಸರಿ ಆ ಬಗ್ಗೆ ಗೊತ್ತಿಲ್ಲ : ಸತೀಶ್ ಜಾರಕಿಹೊಳಿ

    ಆಣೆ ಪ್ರಮಾಣ ಎಷ್ಟರ ಮಟ್ಟಿಗೆ ಸರಿ ಆ ಬಗ್ಗೆ ಗೊತ್ತಿಲ್ಲ : ಸತೀಶ್ ಜಾರಕಿಹೊಳಿ

    ಬೆಳಗಾವಿ: ಕಾಂಗ್ರೆಸ್ ಅಭ್ಯರ್ಥಿಗಳ ಆಣೆ ಪ್ರಮಾಣ ಎಷ್ಟರ ಮಟ್ಟಿಗೆ ಸರಿ, ಆ ಬಗ್ಗೆ ನನಗೆ ಗೊತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

    ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಫೆಬ್ರವರಿ 14 ರಂದು ಗೋವಾ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಣೆ ಪ್ರಮಾಣ ಎಷ್ಟರ ಮಟ್ಟಿಗೆ ಸರಿ ಆ ಬಗ್ಗೆ ನನಗೆ ಗೊತ್ತಿಲ್ಲ.  ಯಾವ ರೀತಿ ಆಣೆ ಪ್ರಮಾಣ ಮಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ನಿಷ್ಠೆಯಿಂದ ಇರಬೇಕು ಅಂತಾ ಹೇಳಿರಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರು ನಗರಕ್ಕೆ ಸಿಎಂ ಸೇರಿ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಪ್ರಕಟ – ಯಾರಿಗೆ ಯಾವ ಜಿಲ್ಲೆ?

    ನಾಳೆ, ನಾಡಿದ್ದು ಎರಡು ದಿನ ಗೋವಾದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವೆ. ಕಳೆದ ಬಾರಿ ನಮ್ಮದೇ ಸರ್ಕಾರ ರಚನೆ ಮಾಡುವ ಅವಕಾಶ ಇದ್ದರೂ ಕಳೆದುಕೊಂಡಿದ್ದೇವೆ. ಈ ಬಾರಿ ಗಮನದಲ್ಲಿಟುಕೊಂಡು ಹೇಳಿರಬಹುದು. ಯಾರು ಪಕ್ಷಕ್ಕೆ ಹಾನಿ ಮಾಡಬಾರದು ಅಂತಾ ಹೇಳಿರಬೇಕು ಅದರಲ್ಲಿ ಏನೂ ತಪ್ಪಿಲ್ಲ. ಗೋವಾಗೆ ಈಗಾಗಲೇ ನಮ್ಮ ಸದಸ್ಯರು ತೆರಳಿದ್ದಾರೆ. ಅಲ್ಲಿನ ಗ್ರೌಂಡ್ ರಿಯಾಲಿಟಿ ರಿಪೋರ್ಟ್ ಕೊಟ್ಟ ಮೇಲೆ ಚರ್ಚೆ ಮಾಡುತ್ತೇವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

  • ಗೋವಾ ಚುನಾವಣೆ- ಜಗದೀಶ್ ಶೆಟ್ಟರ್ ಪ್ರಚಾರ, ಮತಯಾಚನೆ

    ಗೋವಾ ಚುನಾವಣೆ- ಜಗದೀಶ್ ಶೆಟ್ಟರ್ ಪ್ರಚಾರ, ಮತಯಾಚನೆ

    ಪಣಜಿ: ಗೋವಾ ರಾಜ್ಯದ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅಬ್ಬರದ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಗೋವಾದ ಪ್ರಮುಖ ವಿಧಾನಸಭಾ ಕ್ಷೇತ್ರ ವಾಸ್ಕೋದಲ್ಲಿ ಬಿಜೆಪಿ ಅಭ್ಯರ್ಥಿ ಕೃಷ್ಣಾ ಸಾಲ್ಕರ್ ಪರವಾಗಿ ಅವರು ಮತಯಾಚನೆ ಮಾಡಿದರು.

    ಕರ್ನಾಟಕ ರಾಜ್ಯಕ್ಕೆ ಹೊಂದಿಕೊಂಡಿರುವ ಗೋವಾ ರಾಜ್ಯದಲ್ಲಿ ಕನ್ನಡಿಗ ಮತದಾರರ ಸಂಖ್ಯೆ ಹೆಚ್ಚಿದೆ. ಕನ್ನಡಿಗರ ಮತ ಸೆಳೆಯಲು ಬಿಜೆಪಿ ರಾಜ್ಯ ಪ್ರಭಾವಿ ರಾಜಕಾರಣಿಗಳನ್ನು ಗೋವಾ ರಾಜ್ಯದ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿದೆ. ಇದನ್ನೂ ಓದಿ: ಕೋವಿನ್ ಖಾಸಗಿ ಮಾಹಿತಿ ಸೋರಿಕೆ ಆಗಿಲ್ಲ: ಕೇಂದ್ರ

    ಗೋವಾ ರಾಜ್ಯದ ಅಭಿವೃದ್ಧಿ, ಗೋವಾ ಕನ್ನಡಿಗರ ರಕ್ಷಣೆ ಹಾಗೂ ಸರ್ಕಾರದ ಸವಲತ್ತುಗಳನ್ನು ಒದಗಿಸುವಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಯಶಸ್ವಿಯಾಗಿದೆ. ಮುಂದೆಯೂ ಗೋವಾ ಕನ್ನಡಿಗರ ಅಭಿವೃದ್ಧಿಗೆ ಪಕ್ಷ ಬದ್ಧವಾಗಿದ್ದು, ಬಿಜಿಪಿ ಪಕ್ಷದ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಶೆಟ್ಟರ್ ಮತದಾರರ ಮನವೊಲಿಸುತ್ತಿದ್ದಾರೆ. ಮತದಾರರು ಶೆಟ್ಟರ್ ಪ್ರಚಾರದಲ್ಲಿ ಉತ್ತಮ ಸ್ಪಂದನೆ ತೋರುತ್ತಿದ್ದಾರೆ. ಇದನ್ನೂ ಓದಿ: ಜಾತಿ, ಧರ್ಮ, ದೇಶ ಗಡಿ ದಾಟಿದ ಪ್ರೇಮ ಕಥೆ

    ಈ ಸಂದರ್ಭದಲ್ಲಿ ವಾಸ್ಕೋ ವಿಧಾನಸಭಾ ಕ್ಷೇತ್ರ ಬಿಜೆಪಿ ಮಂಡಳ ಅಧ್ಯಕ್ಷ ದೀಪಕ್ ನಾಯ್ಕ್, ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಾಕಾಯಿ ಉಪಸ್ಥಿತರಿದ್ದರು.

  • ವಿಧಾನ ಪರಿಷತ್ ಚುನಾವಣೆ, ಅಭ್ಯರ್ಥಿಗಳ ಆಯ್ಕೆಯಲ್ಲಿ ಬಿಕ್ಕಟ್ಟು – ಕಾಂಗ್ರೆಸ್‍ನಿಂದ ಟಿಕೆಟ್ ಘೋಷಣೆ ವಿಳಂಬ

    ವಿಧಾನ ಪರಿಷತ್ ಚುನಾವಣೆ, ಅಭ್ಯರ್ಥಿಗಳ ಆಯ್ಕೆಯಲ್ಲಿ ಬಿಕ್ಕಟ್ಟು – ಕಾಂಗ್ರೆಸ್‍ನಿಂದ ಟಿಕೆಟ್ ಘೋಷಣೆ ವಿಳಂಬ

    ನವದೆಹಲಿ: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‍ಗೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ ಇಕ್ಕಟ್ಟಿನಲ್ಲಿ ಸಿಲುಕಿದೆ. ಕೆಲವು ಜಿಲ್ಲೆಗಳಲ್ಲಿನ ಗೊಂದಲದ ಹಿನ್ನಲೆ ಅಭ್ಯರ್ಥಿ ಘೋಷಣೆ ವಿಳಂಬವಾಗುತ್ತಿದೆ.

    ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಳೆದ ಶುಕ್ರವಾರ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲ ಮತ್ತು ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಭೇಟಿಯಾಗಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಚರ್ಚಿಸಿದ್ದರು. ಇದನ್ನೂ ಓದಿ: ಬೊಮ್ಮಾಯಿ ನಿಮ್ಮ ಹನಿಮೂನ್ ಕಾಲ ಮುಗಿದಿದೆ: ಸಿದ್ದರಾಮಯ್ಯ

     

    ಕೋಲಾರ, ಬಳ್ಳಾರಿ, ಮೈಸೂರು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಗೊಂದಲವಾದ ಹಿನ್ನಲೆ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗುತ್ತಿಲ್ಲ. ಒಂದೇ ಹಂತದಲ್ಲಿ ಪಟ್ಟಿ ಬಿಡುಗಡೆ ಲೆಕ್ಕಚಾರದಲ್ಲಿರುವ ಕಾಂಗ್ರೆಸ್ ಪಟ್ಟಿ ಬಿಡುಗಡೆ ಮಾಡದೇ ತಡೆ ಹಿಡಿದಿದೆ. ಈ ಸಂಬಂಧ ಭಾನುವಾರ ರಾತ್ರಿ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರನ್ನು ರಣದೀಪ್ ಸುರ್ಜೆವಾಲ ಭೇಟಿಯಾಗಿ ಚರ್ಚಿಸಿದ್ದಾರೆ. ಇದನ್ನೂ ಓದಿ: ಡಾ.ಅಭಿನವ ಅನ್ನದಾನೇಶ್ವರ ಮಹಾಸ್ವಾಮೀಜಿ ಲಿಂಗೈಕ್ಯ

    ನಾಳೆ ನಾಮಪತ್ರಕ್ಕೆ ಕೊನೆಯ ದಿನಾಂಕವಾಗಿರುವ ಹಿನ್ನೆಲೆ ಇಂದು ಸಂಜೆಯ ವೇಳೆಗೆ ಪಟ್ಟಿ ಬಿಡುಗಡೆಯಾಗಬಹುದು ಎನ್ನಲಾಗಿದೆ. ಮೂಲಗಳ ಪ್ರಕಾರ ಬೆಂಗಳೂರು ಗ್ರಾಮಾಂತರದಿಂದ ಎಸ್.ರವಿ, ಶಿವಮೊಗ್ಗದಿಂದ ಪ್ರಸನ್ನ ಕುಮಾರ್, ಚಿಕ್ಕಮಗಳೂರುನಿಂದ ಗಾಯಿತ್ರಿ ಶಾಂತೇಗೌಡ, ತುಮಕೂರುನಿಂದ ರಾಜೇಂದ್ರ, ಚಿತ್ರದುರ್ಗ ದಾವಣಗೆರೆಯಿಂದ ಸೋಮಶೇಖರ್, ಮಂಡ್ಯದಿಂದ ದಿನೇಶ್ ಗೂಳಿ ಗೌಡ, ಕೊಡಗುನಿಂದ ಮಂಥರ್ ಗೌಡ, ಹಾಸನದಿಂದ ಶಂಕರ್, ಕೊಪ್ಪಳ – ರಾಯಚೂರಿನಿಂದ ಶರಣೇಗೌಡ ಬಯ್ಯಾಪುರ, ಧಾರವಾಡದಿಂದ (ದ್ವಿ ಸದಸ್ಯ ಸ್ಥಾನ) ಸಲೀಂ ಅಹಮ್ಮದ್, ಬೆಳಗಾವಿಯಿಂದ (ದ್ವಿ ಸದಸ್ಯ ಸ್ಥಾನ)ಚನ್ನರಾಜು, ಗದಗನಿಂದ ಆರ್.ಎಸ್ ಪಾಟೀಲ್, ಉತ್ತರ ಕನ್ನಡದಿಂದ ಭೀಮಣ್ಣ ನಾಯಕ ಹೆಸರು ಬಹುತೇಕ ಖಚಿತವಾಗಿದೆ.

  • ನಾಳೆ ನೀಟ್ ಪರೀಕ್ಷೆ- ಕನಿಷ್ಠ ಒಂದು ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಅವಕಾಶ

    ನಾಳೆ ನೀಟ್ ಪರೀಕ್ಷೆ- ಕನಿಷ್ಠ ಒಂದು ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಅವಕಾಶ

    – ಕೊರೊನಾ ಸೋಂಕಿತರು ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿ

    ನವದೆಹಲಿ: ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಆಯುಷ್ ಕೋರ್ಸ್‍ಗಳಿಗೆ ನಾಳೆ ದೇಶಾದ್ಯಂತ ನೀಟ್ ಎಕ್ಸಾಂ ನಡೆಯಲಿದೆ. ಆದರೆ ಕನಿಷ್ಠ ಒಂದು ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತಿದೆ.

    ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ. ದೇಶದ 201 ಹಾಗೂ ರಾಜ್ಯದ 9 ನಗರಗಳಲ್ಲಿ ನೀಟ್ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಕಡ್ಡಾಯವಾಗಿ ಒಂದು ಡೋಸ್ ಲಸಿಕೆಯನ್ನ ಪಡೆದಿರಬೇಕು. ಕೊರೊನಾ ಸೋಂಕಿತರೂ ಪರೀಕ್ಷೆ ಬರೆಯಬಹುದಾಗಿದ್ದು, ಪ್ರತ್ಯೇಕ ಕೊಠಡಿ ವ್ಯವಸ್ಥೆ ಇರಲಿದೆ. ಇದನ್ನೂ ಓದಿ: ರಾಜ್ಯದಲ್ಲಿಂದು 801 ಹೊಸ ಕೊರೊನಾ ಕೇಸ್- 1,142 ಡಿಸ್ಚಾರ್ಜ್, 15 ಸಾವು

    ಪರೀಕ್ಷಾ ಕೇಂದ್ರದಲ್ಲಿ ಬೆಳಗ್ಗೆ 11 ಗಂಟೆಯಿಂದ ದಾಖಲೆಗಳ ಪರಿಶೀಲನೆ ಆರಂಭವಾಗಲಿದೆ. ಪರೀಕ್ಷೆ ಕೊಠಡಿಯಲ್ಲೇ ಪೆನ್ ಕೊಡಲಾಗುತ್ತದೆ. ವಾಚ್, ಫುಲ್ ಸ್ಲೀವ್ ಡ್ರೆಸ್, ಶೂ, ಬ್ಯಾಗ್, ಪರ್ಸ್ ನಿಷೇಧಿಸಲಾಗಿದೆ. ಈ ಬಾರಿ ನೀಟ್ ಪರೀಕ್ಷೆಗೆ ರಾಜ್ಯದಲ್ಲಿ 16 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

  • ಇನ್ನೆರಡು ದಿನಗಳಲ್ಲಿ ಉಪ ಚುನಾವಣೆ ಅಭ್ಯರ್ಥಿಗಳ ಹೆಸರು ಫೈನಲ್: ನಳಿನ್

    ಇನ್ನೆರಡು ದಿನಗಳಲ್ಲಿ ಉಪ ಚುನಾವಣೆ ಅಭ್ಯರ್ಥಿಗಳ ಹೆಸರು ಫೈನಲ್: ನಳಿನ್

    ಧಾರವಾಡ: ಉಪ ಚುನಾವಣೆ ಅಭ್ಯರ್ಥಿಗಳ ಹೆಸರನ್ನು ಕೋರ್ ಕಮಿಟಿಯಲ್ಲಿ ತೀರ್ಮಾನ ಮಾಡಿ ಕಳುಹಿಸಲಾಗಿದೆ. ಕೇಂದ್ರದ ನಾಯಕರು ಇನ್ನೆರಡು ದಿನಗಳಲ್ಲಿ ಹೆಸರುಗಳನ್ನು ಅಂತಿಮ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

    ನಗರದಲ್ಲಿ ಪಶ್ಚಿಮ ಪದವೀಧರ ವಿಧಾನ ಪರಿಷತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ನಾಮಪತ್ರ ಸಲ್ಲಿಕೆಗೆ ಆಗಮಿಸಿದ್ದ ವೇಳೆ ಮಾತನಾಡಿದ ಅವರು, ಉಪಚುನಾವಣೆಯ ಶಿರಾ, ಆರ್.ಆರ್. ನಗರ ಕ್ಷೇತ್ರಗಳಲ್ಲಿ ನಮಗೆ ಒಳ್ಳೆ ಸ್ಪಂದನೆ ಇದೆ. ಶಿರಾದಲ್ಲಿ ಕಾಂಗ್ರೆಸ್, ಜೆಡಿಎಸ್ ಮತದಾರರು ಬಿಜೆಪಿಯತ್ತ ಬರುತ್ತಿದ್ದಾರೆ. ಹೀಗಾಗಿ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.

    ಕೋರ್ ಕಮೀಟಿಯಲ್ಲಿ ಚರ್ಚಿಸಿ ಹೆಸರು ಫೈನಲ್ ಮಾಡಿ ಅಭ್ಯರ್ಥಿಗಳ ಹೆಸರುಗಳನ್ನು ಈಗಾಗಲೇ ಕೇಂದ್ರಕ್ಕೆ ಕಳುಹಿಸಿದ್ದೇವೆ. ಇನ್ನೆರಡು ದಿನಗಳಲ್ಲಿ ಹೈಕಮಾಂಡ್ ಅಭ್ಯರ್ಥಿಗಳ ಹೆಸರು ಫೈನಲ್ ಮಾಡಲಿದೆ ಎಂದು ತಿಳಿಸಿದರು.

    ವಿಧಾನ ಪರಿಷತ್ ಚುನಾವಣೆಗೆ ಸಹ ನಾವು ಪೂರ್ಣ ತಯಾರಿ ಮಾಡಿಕೊಂಡಿದ್ದೇವೆ. ಪದವೀಧರ, ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಮತದಾರರೇ ಇದ್ದಾರೆ ಎಂದು ಇದೇ ವೇಳೆ ತಿಳಿಸಿದರು.