ಕಲಬುರಗಿ: ನನಗೆ ಟಿಕೆಟ್ ಮಿಸ್ ಆಗಿದ್ದರಿಂದ ಇಲ್ಲಿವರೆಗೆ ಬೆಂಬಲಿಗರು ಊಟ ಸಹ ಮಾಡಿಲ್ಲ. ಕಳೆದ ರಾತ್ರಿಯಿಂದ ಇಲ್ಲಿಯವರೆಗೆ ಬೆಂಬಲಿಗರು/ಅಭಿಮಾನಿಗಳು ಸ್ವಯಂಪ್ರೇರಿತವಾಗಿ ನೆರೆದಿದ್ದಾರೆ ಎಂದು ಜೇವರ್ಗಿ ಕ್ಷೇತ್ರ (Jevargi Constituency) ದ ಪ್ರಬಲ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ್ (Doddappa Gowda Patil Naribol) ಹೇಳಿದ್ದಾರೆ.
ಟಿಕೆಟ್ ಮಿಸ್ ಆಗಿರುವ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನೀವು ಮುನ್ನುಗ್ಗಿ ಗೌಡ್ರೆ. ನಾವು ನಿಮ್ ಜೊತೆ ಇದ್ದೀವಿ ಅಂತಾ ಭರವಸೆ ನೀಡಿದ್ದಾರೆ. 23 ವರ್ಷಗಳ ಕಾಲ ಜನಸಾಮಾನ್ಯರ ನ್ಯಾಯಾಕ್ಕಾಗಿ ನಮ್ಮ ಕುಟುಂಬ ಹೋರಾಡಿದೆ. ಯಾರಿಗೂ ಅಧಿಕಾರ ಶಾಶ್ವತವಲ್ಲ. ಕ್ಷೇತ್ರದ ಸೇವಕನಾಗಿ ಕೆಲಸ ಮಾಡುವ ಅವಕಾಶ ತಪ್ಪಿಸಲು ಕೆಲ ಕುತಂತ್ರಿಗಳು ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿಗೆ ಗುಡ್‍ಬೈ: 21 ವರ್ಷಗಳ ಕಾಲ ಜೇವರ್ಗಿ ಕ್ಷೇತ್ರದಲ್ಲಿ ಪಕ್ಷವನ್ನ ಕಟ್ಟಿ ಬೆಳೆಸಿದ್ದೇನೆ. ಕಾರ್ಯಕರ್ತರೊಡನೆ ಪಕ್ಷವನ್ನ ಬೇರುಮಟ್ಟದಿಂದ ಪಕ್ಷವನ್ನ ಕಟ್ಟಿದ್ದೇನೆ. ಕಾರ್ಯಕರ್ತರಿಗೆ ನೋವಾದಾಗ ನಾನು ಯಾಕೆ ಪಕ್ಷದಲ್ಲಿ ಇರಬೇಕು?. ಆದ್ದರಿಂದ ನಾನು ಬಿಜೆಪಿ (BJP) ಯ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ. ಜನರು ತೋರಿಸಿದ ಮಾರ್ಗದಲ್ಲಿ ನಾನು ಮುನ್ನುಗ್ಗುತ್ತೇನೆ ಎಂದು ಸಾವಿರಾರು ಜನರ ಸಮ್ಮುಖದಲ್ಲಿ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ್ ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ: ಚುನಾವಣಾ ರಾಜಕೀಯಕ್ಕೆ ಎಸ್.ಅಂಗಾರ ನಿವೃತ್ತಿ ಘೋಷಣೆ
ಒಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆಯೇ ಪಕ್ಷಕ್ಕೆ ಬಂಡಾಯದ ಬಿಸಿ ತಟ್ಟಿದೆ. ಜೇವರ್ಗಿ ಕ್ಷೇತ್ರದಲ್ಲೂ ಸಹ ಬಿಜೆಪಿ ಬಂಡಾಯದ ಬಾವುಟ ಹಾರುತ್ತಿದ್ದು, ಜೇವರ್ಗಿ ಕ್ಷೇತ್ರಕ್ಕೆ ಶಿವರಾಜ್ ಪಾಟೀಲ್ ರದ್ದೇವಾಡಗಿ ಹೆಸರು ಘೋಷಣೆ ಬೆನ್ನಲ್ಲೆ ಭಿನ್ನಮತ ಸ್ಫೋಟವಾಗಿದೆ.
– ಸಿಎಂ ಸಂಪುಟದ 21 ಸಚಿವರ ಕ್ಷೇತ್ರಗಳು ಚರ್ಚೆ ಇಲ್ಲದೇ ಕ್ಲಿಯರ್?
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Election 2023) ಅಧಿಸೂಚನೆ ಹೊರಬೀಳಲು ಇನ್ನು ಕೇವಲ ನಾಲ್ಕು ದಿನವಷ್ಟೇ ಬಾಕಿ ಇದೆ. ಈ ಹೊತ್ತಲ್ಲಿ ರಾಜಕೀಯ ಚಟುವಟಿಕೆಗಳು ಚುರುಕು ಪಡೆದಿದೆ. ರಾಜ್ಯದಲ್ಲಿ ಹತ್ತಾರು ಸಭೆ ಮೂಲಕ ರೆಡಿ ಮಾಡಿದ್ದ ಸಂಭಾವ್ಯರ ಪಟ್ಟಿಯನ್ನು ಮೋದಿ ನೇತೃತ್ವದಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆ ಪರಿಶೀಲಿಸಿ, ಒಂದು ಅಂತಿಮ ಪಟ್ಟಿಯನ್ನು ಓಕೆ ಮಾಡಿದೆ.
ಶನಿವಾರ ಮಧ್ಯಾಹ್ನದಿಂದ ಮಧ್ಯರಾತ್ರಿವರೆಗೂ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಸಿತ್ತು. ಬಳಿಕ ಇಂದು ರಾಜ್ಯ ಪ್ರವಾಸ ಮುಗಿಸಿ ದೆಹಲಿಗೆ ಹಿಂತಿರುಗಿದ ಮೋದಿ ಸಮ್ಮುಖದಲ್ಲಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಿತು. ಇಂದು ಮಧ್ಯರಾತ್ರಿ ಅಥವಾ ನಾಳೆ ಬೆಳಗ್ಗೆ ಬಿಜೆಪಿಯ (BJP) ಮೊದಲ ಪಟ್ಟಿ ಪ್ರಕಟವಾಗುವ ನಿರೀಕ್ಷೆ ಇದೆ. ಅಭ್ಯರ್ಥಿಗಳ ಆಯ್ಕೆಗೆ ಯಾವ ಮಾನದಂಡ ಬಳಸಲಾಗಿದೆ ಎನ್ನುವುದನ್ನು ರಹಸ್ಯವಾಗಿಯೇ ಇಡಲಾಗಿದೆ. ಇದನ್ನೂ ಓದಿ: ಮಾಜಿ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆ
ಬಹುತೇಕರ ಪ್ರಕಾರ, ಗುಜರಾತ್ ಮಾಡೆಲ್ ಅನುಸರಿಸಲಾಗಿದೆಯಂತೆ. ಗುಜರಾತ್ ಮಾದರಿ ಎಂಬ ಸುದ್ದಿಯೇ ಹಲವರ ನಿದ್ದೆಗೆಡಿಸಿದೆ. ಯಾಕಂದ್ರೆ ಗುಜರಾತ್‌ನಲ್ಲಿ 30ಕ್ಕೂ ಹೆಚ್ಚು ಹಾಲಿ ಶಾಸಕರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ಸದ್ಯ ರಾಜ್ಯ ಬಿಜೆಪಿಯ 24ಕ್ಕೂ ಹೆಚ್ಚು ಶಾಸಕರಿಗೆ ಬಿಜೆಪಿ ಟಿಕೆಟ್ ನಿರಾಕರಿಸಲಾಗುತ್ತದೆ ಎಂಬ ಸುದ್ದಿ ಹಬ್ಬಿದೆ. ಪಟ್ಟಿ ಪ್ರಕಟ ನಂತರ ಬಂಡಾಯ ಏಳದಂತೆ ಬಿಜೆಪಿ ಎಲ್ಲಾ ರೀತಿಯ ಕ್ರಮಗಳನ್ನು ಈಗಾಗಲೇ ಕೈಗೊಂಡಿದೆ ಎಂದು ಕೂಡ ಹೇಳಲಾಗುತ್ತಿದೆ.
85ಕ್ಕೂ ಹೆಚ್ಚು ಹಾಲಿ ಶಾಸಕರಿಗೆ ಟಿಕೆಟ್?
ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಅಂತಿಮವಾಗಿದ್ದು, 85ಕ್ಕೂ ಹೆಚ್ಚು ಹಾಲಿ ಶಾಸಕರ ಕ್ಷೇತ್ರಗಳು ಕ್ಲಿಯರ್ ಆಗಿವೆ ಎಂದು ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲದೇ ಸಿಎಂ ಸೇರಿ ಬೊಮ್ಮಾಯಿ ಸಂಪುಟದ 21 ಸಚಿವರ ಕ್ಷೇತ್ರಗಳು ಕೂಡ ಚರ್ಚೆ ಇಲ್ಲದೇ ಕ್ಲಿಯರ್ ಆಗಿವೆ ಎನ್ನಲಾಗಿದೆ. ಇದನ್ನೂ ಓದಿ: ‘ಕೈ’ ತಪ್ಪಿದ ಟಿಕೆಟ್: ಸ್ವತಂತ್ರ ಅಭ್ಯರ್ಥಿಯಾಗಿ ವೈಎಸ್‌ವಿ ದತ್ತ ಸ್ಪರ್ಧೆ
ಆದರೆ 5 ಸಚಿವರ ಕ್ಷೇತ್ರಗಳ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದೆ. ಸೋಮಣ್ಣ, ಹಾಲಪ್ಪ ಆಚಾರ್, ಆರಗ ಜ್ಞಾನೇಂದ್ರ, ಎಂ.ಟಿ.ಬಿ.ನಾಗರಾಜ್, ಅಂಗಾರ ಕ್ಷೇತ್ರಗಳ ಬಗ್ಗೆ ಇನ್ನೂ ಫೈನಲ್ ಆಗಿಲ್ಲ. ಹಾಗಾದ್ರೆ ಆ ಐವರು ಸಚಿವರ ಕ್ಷೇತ್ರಗಳು ಅವರಿಗೆ ಉಳಿದುಕೊಳ್ಳುತ್ತಾ ಅಥವಾ ಕೆಲವರಿಗೆ ಸಿಗುವುದಿಲ್ಲವಾ ಎಂಬ ಪ್ರಶ್ನೆ ಉದ್ಭವಿಸಿದೆ. ಇದನ್ನೂ ಓದಿ: ನೇಕಾರರ ನಾಡಲ್ಲಿ ಯಾರಿಗೆ ಟಿಕೆಟ್- ಎರಡೂ ಪಕ್ಷದಲ್ಲೂ ಎದ್ದಿದೆ ಅಸಮಾಧಾನದ ಬಿರುಗಾಳಿ
ಗೋವಿಂದ ಕಾರಜೋಳ, ಈಶ್ವರಪ್ಪ, ಸೋಮಣ್ಣ ಹಾಗೂ ಜಗದೀಶ್ ಶೆಟ್ಟರ್‌ಗೂ ಟಿಕೆಟ್ ಪಕ್ಕಾ ಎನ್ನಲಾಗಿದೆ. ವಯಸ್ಸಿನ ಕಾರಣ ಕೆಲವರಿಗಷ್ಟೇ ಅನ್ವಯವಾಗುತ್ತೆ ಎಂದು ಅಮಿತ್ ಶಾ ಅವರು ಸಂದೇಶ ರವಾನಿಸಿದ್ದಾರೆ. ಆ ಮೂಲಕ ಘಟಾನುಘಟಿಗಳನ್ನ ಬದಿಗೆ ಸರಿಸದಿರಲು ಹೈಕಮಾಂಡ್ ನಿರ್ಧಾರಿಸಿದೆ ಎಂದು ಹೇಳಲಾಗಿದೆ.
ಇನ್ನೂ ಸಭೆಯಲ್ಲಿ ಆಪ್ತರೆಲ್ಲರ ಪರವೂ ಯಡಿಯೂರಪ್ಪ (BJP) ಬ್ಯಾಟಿಂಗ್ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಸಭೆಯಲ್ಲಿ ಬಿಎಸ್‌ವೈ ಹೆಚ್ಚು ಮಾತನಾಡಿದ್ದಾರೆ. ಪುತ್ರನ ಶಿಕಾರಿಪುರ ಸ್ಪರ್ಧೆ ವಿಚಾರದ ಬಗ್ಗೆಯೂ ಪ್ರಸ್ತಾಪಿಸದೇ ಬಿಎಸ್‌ವೈ ಕುಳಿತಿದ್ದರು. ಈ ವೇಳೆ ಶಿಕಾರಿಪುರ ಕ್ಷೇತ್ರಕ್ಕೆ ವಿಜಯೇಂದ್ರ ಹೆಸರು ಪ್ರಸ್ತಾಪದ ಮಾಹಿತಿಯನ್ನು ಜೆ.ಪಿ.ನಡ್ಡಾ ಸಭೆ ಮುಂದಿಟ್ಟರು ಎಂದು ಮೂಲಗಳು ಹೇಳಿವೆ.
ನವದೆಹಲಿ: ಬಹು ನಿರೀಕ್ಷಿತ ಕಾಂಗ್ರೆಸ್ (Congress) ಅಭ್ಯರ್ಥಿಗಳ ಎರಡನೇ ಪಟ್ಟಿ ಗುರುವಾರ ಬಿಡುಗಡೆಯಾಗಲಿದೆ. ನಿನ್ನೆ ಸುದೀರ್ಘ ಸಭೆಗಳನ್ನು ನಡೆಸಿದ್ದ ಕಾಂಗ್ರೆಸ್ ಹೈಕಮಾಂಡ್ (Congress High Command) ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಲು ಒಪ್ಪಿಗೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.
ಎರಡನೇ ಪಟ್ಟಿಯಲ್ಲಿ ಸುಮಾರು ಐವತ್ತು ಅಭ್ಯರ್ಥಿಗಳ ಹೆಸರು ಪ್ರಕಟಗೊಳ್ಳಬಹುದು ಎಂದು ಕಾಂಗ್ರೆಸ್ ಉನ್ನತ ಮೂಲಗಳು ಹೇಳಿವೆ. ನಿನ್ನೆ ಸ್ಕೀನಿಂಗ್ ಸಭೆ ನಡೆಸಿದ್ದ ನಾಯಕರು ಚುನಾವಣಾ ಸಮಿತಿ ಮುಂದೆ ಹೊಸ ಪಟ್ಟಿಯನ್ನು ಪ್ರಸುತ್ತ ಪಡಿಸಿದರು. ಪಟ್ಟಿ ಪರಿಶೀಲಿಸಿ ಚರ್ಚೆ ನಡೆಸಿದ ಕೇಂದ್ರ ಚುನಾವಣಾ ಸಮಿತಿ ಸದಸ್ಯರು ಐವತ್ತಕ್ಕೂ ಹೆಚ್ಚು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದರು. ಇದನ್ನೂ ಓದಿ: ಅನಿರೀಕ್ಷಿತ ಬೆಳವಣಿಗೆಗಳಿಂದ ರಾಷ್ಟ್ರೀಯ ಪಕ್ಷಗಳು ವಿಲವಿಲ – ರೋಣ ಕ್ಷೇತ್ರದಲ್ಲಿ ಸಹೋದರರ ಸವಾಲ್
ಇನ್ನು ಬಾಕಿ ಕ್ಷೇತ್ರಗಳಿಗೆ ಇಂದು ಮಧ್ಯಾಹ್ನ 2:30 ಕ್ಕೆ ಮೂರನೇ ಬಾರಿಗೆ ಚುನಾವಣಾ ಸಮಿತಿ ಸಭೆ ನಡೆಸಲು ನಿರ್ಧರಿಸಿದ್ದಾರೆ. ನಿನ್ನೆಯ ಸಭೆ ಬಳಿಕ ಮಾತನಾಡಿದ ಉಸ್ತುವಾರಿ ರಣದೀಪ್ ಸುರ್ಜೆವಾಲ, ಕಾಂಗ್ರೆಸ್ ಚುನಾವಣೆ ಘೋಷಣೆಗೂ ಮುನ್ನ ಒಂದು ಪಟ್ಟಿ ಪ್ರಕಟಿಸಿತ್ತು. ಈಗ ಎರಡನೇ ಪಟ್ಟಿ ಪ್ರಕಟಿಸಲು ಸಿದ್ದವಾಗಿದೆ. ನಾಳೆ ಬೆಳಗ್ಗೆ ಹನ್ನೊಂದು ಗಂಟೆಯೊಳಗೆ ಪಟ್ಟಿ ಬಿಡುಗಡೆ ಮಾಡಲಿದ್ದೇವೆ ಎಂದು ಹೇಳಿದ್ದಾರೆ.
ಪಟ್ಟಿ ಬಿಡುಗಡೆಯಲ್ಲಿ ಗೊಂದಲ
ದೆಹಲಿಯಲ್ಲಿ ಟಿಕೆಟ್ ಗೊಂದಲ ಪರಿಹಾರ ಆದರೂ ಪಟ್ಟಿ ಬಿಡುಗಡೆ ಏಪ್ರಿಲ್ 10ರ ನಂತರವೇ ಮಾಡಲು ಬಹುತೇಕ ನಾಯಕರ ಒತ್ತಾಯ ಮಾಡ್ತಿದ್ದಾರೆ. ರಾಹುಲ್ ಗಾಂಧಿ ಕೋಲಾರದ ಸತ್ಯಮೇವ ಜಯತೆ ಮುಗಿಸಿ ಬಿಡುಗಡೆಗೆ ಸಲಹೆ ಕೊಟ್ಟಿದ್ದಾರೆ ಎನ್ನಲಾಗಿದೆ. ಈ ವಿಚಾರವಾಗಿ ರಾಜ್ಯ ಕಾಂಗ್ರೆಸ್ ನಾಯಕರ ನಡುವೆ ಭಿನ್ನಾಭಿಪ್ರಾಯ ಮೂಡಿದಂತೆ ಕಾಣುತ್ತಿದೆ. ಬಹುತೇಕ ಇಂದೇ ಒಂದಷ್ಟು ಹೆಸರುಗಳ ಪಟ್ಟಿ ಬಿಡುಗಡೆ ಖಚಿತ ಎನ್ನಲಾಗಿದೆ. ಆದರೆ ಹಿರಿಯ ಕಾಂಗ್ರೆಸ್ ನಾಯಕರ ಸಲಹೆ ಏಪ್ರಿಲ್ 10ರ ನಂತರವೇ ಪಟ್ಟಿ ಬಿಡುಗಡೆ ಆಗಲಿ ಎಂಬುದು ಎನ್ನಲಾಗುತ್ತಿದೆ. ತೀರ ವಿವಾದ ಇಲ್ಲದ ಅರ್ಧದಷ್ಟಾದರು ಕ್ಷೇತ್ರದ ಪಟ್ಟಿ ಬಿಡುಗಡೆ ಇಂದೇ ಆಗಲಿ ಅನ್ನೋದು ಕೆಲ ನಾಯಕರ ವಾದ. ಒಟ್ಟಾರೆ ಇಂದೇ ಪಟ್ಟಿ ಬಿಡುಗಡೆ ಆದರೆ ಬಾಕಿ ಇರುವ ಹೆಸರುಗಳಲ್ಲೂ ಶೇಕಡಾ 50ಕ್ಕಿಂತ ಕಡಿಮೆ ಪ್ರಮಾಣದಲ್ಲೇ ಹೆಸರುಗಳು ಪ್ರಕಟವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಏಪ್ರಿಲ್ 10ರ ನಂತರ ಪೂರ್ಣ ಪ್ರಮಾಣದ ಪಟ್ಟಿ ಬಿಡುಗಡೆ ಆಗುವ ಸಾಧ್ಯತೆ ಇದೆ.
ನವದೆಹಲಿ: ನಾಲ್ಕು ರಾಜ್ಯಗಳಲ್ಲಿ ಅಧಿಕಾರ ಗದ್ದುಗೆ ಹಿಡಿದ ಬಳಿಕ ಬಿಜೆಪಿ ಹೈಕಮಾಂಡ್‌ನ ಮುಂದಿನ ಟಾರ್ಗೆಟ್ ಗುಜರಾತ್ ಮತ್ತು ಕರ್ನಾಟಕ. ಈ ವರ್ಷದ ಅಂತ್ಯಕ್ಕೆ ಗುಜರಾತ್ ಚುನಾವಣೆ ಇದ್ದು, ಬಳಿಕ ಕರ್ನಾಟಕದ ಚುನಾವಣೆ ಬರಲಿದೆ. ಹಾಗಾಗಿ ಬಿಜೆಪಿ ಹೈಕಮಾಂಡ್ ರಾಜ್ಯದಲ್ಲಿ ಪಿಚ್ ಟೆಸ್ಟ್ ಮಾಡಲು ಈಗಾಗಲೇ ಅಗತ್ಯ ತಾಲೀಮು ಆರಂಭಿಸಿದೆ.
ರಾಜ್ಯ ಬಿಜೆಪಿಯಲ್ಲಿ ಸ್ವಂತ ಶಕ್ತಿಯಿಂದ ಗೆಲ್ಲುವ ಕುದುರೆಗಳೆಷ್ಟು? ಬಿಜೆಪಿ ಸಿಂಬಲ್‌ನಿಂದ ಗೆಲ್ಲುವವರು ಯಾರು? ಸಿಂಬಲ್ ಮತ್ತು ಸ್ವಂತ ಬಲ ಎರಡೂ ಸೇರಿ ಗೆಲ್ಲುವವರು ಎಷ್ಟು? ಎಂಬುದರ ಬಗ್ಗೆ ಗುಪ್ತ್ ಗುಪ್ತ್ ಸರ್ವೇ ಮಾಡಲು ಬಿಜೆಪಿ ಹೈಕಮಾಂಡ್ ಅಖಾಡಕ್ಕೆ ಇಳಿದಿದೆ ಎನ್ನಲಾಗಿದೆ. ಇದನ್ನೂ ಓದಿ: ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಎನ್ನುವ ಕಿಡಿಗೇಡಿಗಳನ್ನು ಮಟ್ಟ ಹಾಕಿ: ಹೆಚ್‌ಡಿಕೆ ಆಗ್ರಹ
ಏಪ್ರಿಲ್, ಮೇ, ಜೂನ್ ಮೂರು ತಿಂಗಳು ಮೂರು ಗುಪ್ತ್ ಸರ್ವೇ ನಡೆಸುವ ಬಗ್ಗೆ ಬಿಜೆಪಿ ಹೈಕಮಾಂಡ್ ಸುಳಿವು ನೀಡಿದೆ. ಜುಲೈ ಅಂತ್ಯದ ವೇಳೆಗೆ ಸಂಭವನೀಯ ಪಟ್ಟಿಯಲ್ಲಿ ಯಾರು ಮುಂದೆ, ಯಾರು ಹಿಂದೆ ಇರ್ತಾರೆ ಎಂಬ ಸ್ಪಷ್ಟತೆ ಸಿಗುವ ಸಾಧ್ಯತೆ ಇದೆ.
ವಿಧಾನಸಭೆ ಚುನಾವಣೆಗೆ 11 ತಿಂಗಳು ಬಾಕಿ ಇರುವ ಮೊದಲೇ ಬಿಜೆಪಿ ಹೈಕಮಾಂಡ್‌ನಿಂದ ತಂತ್ರ ರೂಪಿಸಲಾಗುತ್ತಿದ್ದು, ಈಗಾಗಲೇ ಆರ್‌ಎಸ್‌ಎಸ್ ಮುಖಂಡರಿಂದಲೂ ಒಂದು ವರದಿ ರವಾನೆ ಆಗಿದೆ ಎನ್ನಲಾಗಿದೆ. ಸ್ವಂತ ಶಕ್ತಿಯಿಂದ ಗೆಲ್ಲುವವರನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡೋದು ಬೇಡ ಎಂದು ಆರ್‌ಎಸ್‌ಎಸ್ ಸಲಹೆ ನೀಡಿದೆ ಅಂತ ಮೂಲಗಳು ಮಾಹಿತಿ ನೀಡಿವೆ. ಇದನ್ನೂ ಓದಿ: ಎಂಟು ಬಾರಿ ಬಿಜೆಪಿ ಶಾಸಕ ಸತೀಶ್ ಮಹಾನಾ ಈಗ ಯುಪಿ ಸ್ಪೀಕರ್
ಪಕ್ಷದ ಸಿಂಬಲ್‌ನಿಂದ ಗೆಲ್ಲುವ, ಗೆಲ್ಲುತ್ತಿರುವವರ ಆಯ್ಕೆ ವಿಚಾರದಲ್ಲಿ ಈ ಸಲ ಬದಲಾವಣೆ ಮಾಡಿದರೆ ಯಾವುದೇ ಸಮಸ್ಯೆ ಇಲ್ಲ. ಆದರೆ ಪಕ್ಷ, ಸ್ವಂತ ಬಲ ಎರಡೂ ಸೇರಿಸಿ ಗೆಲ್ಲುವವರಿಗೆ ಟಿಕೆಟ್ ನೀಡುವಾಗ ಎಚ್ಚರ ವಹಿಸುವಂತೆಯೂ ಸಂಘದಿಂದ ಸಲಹೆ ರವಾನೆಯಾಗಿದೆ. ಹಾಗಾಗಿ ಈ ಮೂರು ಅಂಶಗಳನ್ನೊಳಗೊಂಡ ಮೂರು ಸರ್ವೇಗಳ ಬಳಿಕವಷ್ಟೇ ಸಂಭವನೀಯ ಟಿಕೆಟ್ ಪಟ್ಟಿ ರೆಡಿ ಮಾಡಿ ಆ ಬಳಿಕ ಅಭ್ಯರ್ಥಿಗಳನ್ನ 6 ತಿಂಗಳ ಕಾಲ ವಾಚ್ ಮಾಡುವುದು ಬಿಜೆಪಿ ಪ್ಲ್ಯಾನ್ ಅಂತಾ ದೆಹಲಿ ಮೂಲಗಳ ಮಾಹಿತಿ.
ಗುವಾಹಟಿ: ಫೆಬ್ರವರಿಯಲ್ಲಿ ನಡೆಯಲಿರುವ ಮಣಿಪುರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಕ್ಷದಿಂದ ಟಿಕೆಟ್ ವಂಚಿತರಾದ ಜನಪ್ರತಿನಿಧಿಗಳ ಬೆಂಬಲಿಗರು ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಿಕೆಟ್ ವಂಚಿತರ ಬೆಂಬಲಿಗರು ಬಿಜೆಪಿ ವಿರುದ್ಧ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಧಾನಿ ಮೋದಿ ಹಾಗೂ ಸಿಎಂ ಬಿರೇನ್ ಸಿಂಗ್ ಅವರ ಪ್ರತಿಕೃತಿಗಳನ್ನು ಸುಟ್ಟುಹಾಕಿ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯದ ಹಲವೆಡೆ ಪಕ್ಷದ ಕಚೇರಿಗಳನ್ನು ಧ್ವಂಸಗೊಳಿಸಲಾಗಿದೆ. ಇಂಫಾಲದಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯ ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ. ಇದನ್ನೂ ಓದಿ: UP ಎಲೆಕ್ಷನ್: ಕಾಂಗ್ರೆಸ್ 4ನೇ ಪಟ್ಟಿ ಪ್ರಕಟ 24 ಮಹಿಳೆಯರಿಗೆ ಅವಕಾಶ
ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದ ಪಕ್ಷದ ಕೆಲವರು ಕಾರ್ಯಕರ್ತರು ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಎಷ್ಟು ಮಂದಿ ರಾಜೀನಾಮೆ ನೀಡಲಿದ್ದಾರೆ ಎಂಬ ಬಗ್ಗೆ ನಿಖರ ಮಾಹಿತಿ ಸಿಕ್ಕಿಲ್ಲ.
ಮಣಿಪುರ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 60 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಬಿಜೆಪಿ ಘೋಷಿಸಿದ್ದರಿಂದ ಬಿಜೆಪಿ ಸೇರಿದ್ದ 10 ಕಾಂಗ್ರೆಸ್‌ನ ಮಾಜಿ ನಾಯಕರಿಗೆ ಟಿಕೆಟ್ ನೀಡಲಾಗಿದೆ. ಅಭ್ಯರ್ಥಿಗಳ ಪಟ್ಟಿಯನ್ನೂ ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: 23 ಕಿಮೀ ಅನ್ನು ಕೇವಲ 15 ನಿಮಿಷಗಳಲ್ಲಿ ಕ್ರಮಿಸಿ ಜೀವ ಉಳಿಸಿದ ಆಂಬುಲೆನ್ಸ್
2017ರ ಚುನಾವಣೆಯಲ್ಲಿ ಬಿಜೆಪಿ 21 ಸ್ಥಾನಗಳನ್ನು ಗೆದ್ದು ಇತರೆ ಸ್ಥಳೀಯ ಪಕ್ಷಗಳು ಹಾಗೂ ಸ್ವತಂತ್ರ ಅಭ್ಯರ್ಥಿಗಳ ಸಹಕಾರದೊಂದಿಗೆ ಸರ್ಕಾರ ರಚಿಸಿತ್ತು. ಇವರ ಪೈಕಿ 19 ಶಾಸಕರಿಗೆ ಟಿಕೆಟ್ ನೀಡಲಾಗಿದ್ದು, ಮೂವರನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಮಣಿಪುರದಲ್ಲಿ ಬಿಜೆಪಿ ಮೂವರು ಮಹಿಳೆಯರು ಮತ್ತು ಒಬ್ಬ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.
ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಗೆ ಇಂದು ಬಿಜೆಪಿ ಮತ್ತು ಕಾಂಗ್ರೆಸ್ ತನ್ನ ಹುರಿಯಾಳುಗಳನ್ನು ಚುನಾವಣಾ ಅಖಾಡಕ್ಕೆ ಇಳಿಸಲಿದೆ. ಆಮ್ ಆದ್ಮಿ 70 ವಿಧಾನಸಭೆ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದ ಬಳಿಕ ಬಿಜೆಪಿ, ಕಾಂಗ್ರೆಸ್ ಇಂದು ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಗುರುವಾರ ಬಿಜೆಪಿ ಮತ್ತು ಕಾಂಗ್ರೆಸ್ ತನ್ನ ಪಕ್ಷದ ಕೇಂದ್ರ ಕಚೇರಿಗಳಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಸಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸುದೀರ್ಘ ಚರ್ಚೆ ಮಾಡಿವೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಸಿಎಂ ಅರವಿಂದ್ ಕೇಜ್ರಿವಾಲ್ ಸ್ಪರ್ಧಿಸುವ ನವದೆಹಲಿ ಕ್ಷೇತ್ರವನ್ನು ಹೊರತುಪಡಿಸಿ ಬಾಕಿ 69 ಕ್ಷೇತ್ರಗಳ ಬಗ್ಗೆ ಚರ್ಚೆ ನಡೆಸಿದ್ದು, ಬಹುತೇಕ ಹೊಸ ಮುಖಗಳಿಗೆ ಆದ್ಯತೆ ನೀಡಲಿದೆ ಎನ್ನಲಾಗಿದೆ. ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸುಭಾಶ್ ಚೋಪ್ರಾ ಚುನಾವಣೆಗೆ ಸ್ಪರ್ಧಿಸದೆ ಚುನಾವಣಾ ಉಸ್ತುವಾರಿ ವಹಿಸಿಕೊಳ್ಳಲು ಮುಂದಾಗಿದ್ದಾರೆ.
ಇತ್ತ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಅರವಿಂದ ಲವ್ಲಿ ಅವರನ್ನ ಕಣಕ್ಕೆ ಇಳಿಸುವ ಮಾತುಗಳು ಕೇಳಿ ಬಂದಿದ್ದು, ಹಿರಿಯ ನಾಯಕ ಅಜೇಯ್ ಮಕೇನ್ ಚುನಾವಣಾ ಕಣದಿಂದ ಈ ಬಾರಿ ಹಿಂದೆ ಸರಿದಿದ್ದಾರೆ ಎನ್ನಲಾಗುತ್ತಿದೆ. ಪುತ್ರಿ ಅನಾರೋಗ್ಯ ಹಿನ್ನೆಲೆ ಚುನಾವಣೆಗೆ ಸ್ವರ್ಧಿಸದಿರಲು ಅವರು ತಿರ್ಮಾನಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ. ಅಲ್ಲದೆ ಆರ್‌ಜೆಡಿ ಜೊತೆಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದು, ನಾಲ್ಕು ಸೀಟುಗಳನ್ನು ಬಿಟ್ಟುಕೊಡಲು ಕಾಂಗ್ರೆಸ್ ತಿರ್ಮಾನಿಸಿದೆ.
ಬಿಜೆಪಿ ಕೂಡ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ. ಕಳೆದ ಬಾರಿ ಅತಿ ಹೆಚ್ಚು ಮತಗಳನ್ನ ಪಡೆದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.