Tag: canel

  • ದಾವಣಗೆರೆಯಲ್ಲಿ ಕಾಲುವೆಗೆ ಉರುಳಿಬಿತ್ತು ಸ್ವಿಫ್ಟ್ ಕಾರು

    ದಾವಣಗೆರೆಯಲ್ಲಿ ಕಾಲುವೆಗೆ ಉರುಳಿಬಿತ್ತು ಸ್ವಿಫ್ಟ್ ಕಾರು

    ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರೊಂದು ರಸ್ತೆ ಬದಿಯ ಕಾಲುವೆಗೆ ಉರುಳಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.

    ದಾವಣಗೆರೆ ರಾಷ್ಟ್ರೀಯ ಹೆದ್ದಾರಿ ಪಕ್ಕದ ತುಂಗಭದ್ರಾ ನಾಲೆಯಲ್ಲಿ ಈ ಅವಘಡ ಸಂಭವಿಸಿದೆ. ಇಂದು ನಸುಕಿನ ಜಾವ ಶಿವಮೊಗ್ಗದಿಂದ ದಾವಣಗೆರೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದಿದೆ.

    ಘಟನೆಯಿಂದ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕ್ರೇನ್ ಮೂಲಕ ಕಾರು ಮೇಲೆತ್ತಲಾಗಿದೆ. ಸ್ಥಳಕ್ಕೆ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.