Tag: Cannes

  • ಕಾನ್ಸ್ ಫೆಸ್ಟಿವೆಲ್ ವಿರುದ್ಧ ಗರಂ ಆದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ

    ಕಾನ್ಸ್ ಫೆಸ್ಟಿವೆಲ್ ವಿರುದ್ಧ ಗರಂ ಆದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ

    ಪ್ರತಿಷ್ಠಿತ ಕಾನ್ಸ್ (Cannes Festival) ಚಿತ್ರೋತ್ಸವದ ವಿರುದ್ಧ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ಗರಂ ಆಗಿದ್ದಾರೆ. ಕಾನ್ಸ್ ಅದೊಂದು ಹೆಮ್ಮೆಯ ಚಿತ್ರೋತ್ಸವ, ಅದರ ಬದಲು ಅದನ್ನು ಫ್ಯಾಶನ್ ಶೋ ಆಗಿ ಪರಿವರ್ತನೆ ಮಾಡಲಾಗುತ್ತಿದೆ ಎಂದು ವಿಷಾದ ವ್ಯಕ್ತ ಪಡಿಸಿದ್ದಾರೆ. ಕಾನ್ಸ್ ಚಿತ್ರೋತ್ಸವದ ಪ್ರತಿಷ್ಠೆಯನ್ನು ಉಳಿಸಬೇಕು ಎಂದೂ ಅವರು ಸಲಹೆ ನೀಡಿದ್ದಾರೆ.

    ನಟಿಯರ ವಿವಿಧ ರೀತಿಯ ಕಾಸ್ಟ್ಯೂಮ್ ಗಳಿಂದಾಗಿ ಕಾನ್ಸ್ ಸಾಕಷ್ಟು ಸುದ್ದಿ ಆಗುತ್ತದೆ. ಅದರ ಹೊರತಾಗಿ ಚಿತ್ರೋತ್ಸವದಲ್ಲಿ ಏನೆಲ್ಲ ನಡೆಯುತ್ತದೆ ಎನ್ನುವುದು ಜಗತ್ತಿಗೆ ಗೊತ್ತೇ ಆಗುವುದಿಲ್ಲ. ರೆಡ್ ಕಾರ್ಪೆಟ್ ನಲ್ಲಿ ನಡೆಯುವ ಫ್ಯಾಷನ್ ಶೋ ಮಾತ್ರ ಹೆಚ್ಚು ಸದ್ದು ಮಾಡುತ್ತದೆ. ಇದೇ ವಿವೇಕ್ ಅಗ್ನಿಹೋತ್ರಿ ಕೋಪಕ್ಕೆ ಕಾರಣವಾಗಿದೆ. ಒಳ್ಳೊಳ್ಳೆ ಚಿತ್ರಗಳ ಬಗ್ಗೆ ಯಾರೂ ಮಾತನಾಡುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ:ದಿ ಕೇರಳ ಸ್ಟೋರಿ: ಮುಸ್ಲಿಂ ಹುಡುಗಿಯ ಪಾತ್ರ ಮಾಡಿದ್ದ ನಟಿಗೆ ಕೊಲೆ ಬೆದರಿಕೆ

    ಈ ಬಾರಿಯ ಕಾನ್ಸ್ ನಲ್ಲಿ ಸಾಕಷ್ಟು ಸುದ್ದಿಯಾಗಿದ್ದು ಬಾಲಿವುಡ್ ನಟಿ ಐಶ್ವರ್ಯ ರೈ (Aishwarya Rai) ಅವರ ವಿಚಿತ್ರ ಕಾಸ್ಟ್ಯೂಮ್. ಕೇವಲ ಭಾರತದಲ್ಲಿ ಮಾತ್ರವಲ್ಲ, ಜಗತ್ತಿನ ನಾನಾ ದೇಶಗಳು ಕೂಡ ಅದಕ್ಕೆ ಮಹತ್ವ ನೀಡಿದ್ದವು. ಹೀಗಾಗಿ ಪರೋಕ್ಷವಾಗಿ ಐಶ್ವರ್ಯ ವಿರುದ್ಧವೂ ವಿವೇಕ್ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಅದನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

  • ಅಕ್ಷಯ್ ಕುಮಾರ್ ಗೆ ಕೊರೋನಾ:  ಕೇನ್ಸ್ ಚಿತ್ರೋತ್ಸವದಿಂದ ದೂರ

    ಅಕ್ಷಯ್ ಕುಮಾರ್ ಗೆ ಕೊರೋನಾ: ಕೇನ್ಸ್ ಚಿತ್ರೋತ್ಸವದಿಂದ ದೂರ

    ನಾಳೆಯಿಂದ ಪ್ರತಿಷ್ಠಿತ ಕೇನ್ಸ್ ಚಲನಚಿತ್ರೋತ್ಸವ ಪ್ರಾರಂಭವಾಗಲಿದ್ದು, ಅದರಲ್ಲಿ ಪಾಲ್ಗೊಳ್ಳಲು ಬಾಲಿವುಡ್ ನಿಂದ ಅನೇಕ ತಾರೆಯರು ವಿಮಾನ ಏರಿದ್ದಾರೆ. ಆದರೆ, ಅಕ್ಷಯ್ ಕುಮಾರ್ ಮಾತ್ರ ಕೇನ್ಸ್ ನಿಂದ ದೂರ ಉಳಿಯುವುದಾಗಿ ತಿಳಿಸಿದ್ದಾರೆ. ಎರಡನೇ ಬಾರಿಗೆ ಅಕ್ಷಯ್ ಕುಮಾರ್ ಅವರಿಗೆ ಕೊರೋನಾ ಪಾಸಿಟಿವ್ ಆಗಿದ್ದು, ಹಾಗಾಗಿ ತಾವು ಕೇನ್ಸ್ ನಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಅಕ್ಷಯ್ ಟ್ವಿಟ್ ಮಾಡಿದ್ದಾರೆ.  ಇದನ್ನೂ ಓದಿ: ದೊಡ್ಮನೆ ಕುಡಿ ಯುವರಾಜ್ ಎದುರು ವಿಲನ್ ಆಗಿ ಡಾಲಿ!

    ಕಳೆದ ವರ್ಷ ಏಪ್ರಿಲ್ ನಲ್ಲಿ ಅಕ್ಷಯ್ ಕುಮಾರ್ ಅವರಿಗೆ ಕೋವಿಡ್ ಪಾಸಿಟಿವ್ ಆಗಿತ್ತು. ಮನೆಯಲ್ಲೇ ಅವರು ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದರು. ಈಗ ಮತ್ತೆ ಅವರನ್ನು ಕೊರೋನಾ ಕಾಡಿದೆ. ನಿನ್ನೆಯಷ್ಟೇ ಅವರಿಗೆ ಕೋವಿಡ್ ಪಾಸಿಟಿವ್ ಧೃಡಪಟ್ಟಿದ್ದು, ಅದನ್ನು ಟ್ವಿಟ್ ಮೂಲಕ ಅಭಿಮಾನಿಗಳ ಜತೆ ಹಂಚಿಕೊಂಡಿದ್ದಾರೆ. ತಮ್ಮ ಸಂಪರ್ಕದಲ್ಲಿ ಇದ್ದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.

    ಟ್ವಟ್ ನಲ್ಲಿ ಬೇಸರ ವ್ಯಕ್ತ ಪಡಿಸಿರುವ ಅಕ್ಷಯ್ ಕುಮಾರ್, “ಕೇನ್ಸ್ ಚಿತ್ರೋತ್ಸವದಲ್ಲಿ ಭಾರತದ ಚಿತ್ರಗಳನ್ನು ನೋಡಲು ಉತ್ಸುಕನಾಗಿದ್ದೆ. ಹೆಮ್ಮೆಯಿಂದಲೇ ಈ ಬಾರಿಯ ಕೇನ್ಸ್ ನಲ್ಲಿ ಭಾಗಿಯಾಗಲು ಸಿದ್ಧತೆ ಮಾಡಿಕೊಂಡಿದ್ದೆ. ಆದರೆ, ಕೋವಿಡ್ ನಿಂದಾಗಿ ಅದೆಲ್ಲವೂ ನಿರಾಸೆ ಆಗಿದೆ. ನಿರಾಸೆಯಿಂದಲೇ ಈ ಸುದ್ದಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಬೇಕಾಗಿದೆ’ ಎಂದು ಅವರು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.  ಇದನ್ನೂ ಓದಿ:`ಫಿದಾ’ ಬ್ಯೂಟಿ ಸಾಯಿ ಪಲ್ಲವಿಗೆ ಕನ್ನಡ ಹೇಳಿಕೊಟ್ಟ ಶೀತಲ್ ಶೆಟ್ಟಿ

    ದೀಪಿಕಾ ಪಡುಕೋಣೆ, ಐಶ್ವರ್ಯ ರೈ, ಪೂಜಾ ಹೆಗ್ಡೆ, ಪ್ರಿಯಾಂಕಾ ಚೋಪ್ರಾ, ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಸೇರಿದಂತೆ ಹಲವು ತಾರೆಯರು ಈ ಕೇನ್ಸ್ ಚಿತ್ರೋತ್ಸವದಲ್ಲಿ ಭಾಗಿಯಾಗುತ್ತಿದ್ದು, ನಾಳೆಯಿಂದ ನಡೆಯುವ ಚಿತ್ರೋತ್ಸವದ ಹಲವು ಕಾರ್ಯಕ್ರಮಗಳಲ್ಲಿ ಭಾರತೀಯ ಸಿನಿಮಾ ರಂಗದ ಹಲವು ತಾರೆಯರು ಭಾಗಿಯಾಗಲಿದ್ದಾರೆ.

    ಸಿನಿ ತಾರೆಯರ ನೇತೃತ್ವವನ್ನು ಕೇಂದ್ರ ಸಚಿವ ಅನುರಾಗ್ ಠಾಕೂರ್ ವಹಿಸಲಿದ್ದು, ಈ ಬಾರಿ ಚಲನಚಿತ್ರೋತ್ಸವದಲ್ಲಿ ಕನ್ನಡ ಮೂಲದ ನಟಿ, ಬಾಲಿವುಡ್  ತಾರೆ ದೀಪಿಕಾ ಪಡುಕೋಣೆ ಅವರು ತೀರ್ಪುಗಾರರ ಸ್ಥಾನ ತುಂಬಿದ್ದಾರೆ. ಇಂಥದ್ದೊಂದ ಗೌರವಕ್ಕೆ ಪಾತ್ರವಾದ ಮೊದಲ ಕನ್ನಡ ಮೂಲದ ನಟಿ ಇವರಾಗಿದ್ದಾರೆ.