ಚಿಕ್ಕಬಳ್ಳಾಪುರ: ದ್ವಿಚಕ್ರ ವಾಹನ ಹಾಗೂ ಕ್ಯಾಂಟರ್ ನಡುವೆ ಡಿಕ್ಕಿ ಸಂಭವಿಸಿ, ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಮೇಷ್ಟ್ರು ಮನೆ ಕ್ರಾಸ್ ಬಳಿ ಸೋಮವಾರ ಬೆಳಗ್ಗೆ ಸಂಭವಿಸಿದೆ.
ಮರಳೇನಹಳ್ಳಿ ಗ್ರಾಮದ ಹನುಮಂತರಾಯಪ್ಪ(48) ಮೃತ ವ್ಯಕ್ತಿ. ಸೋಮವಾರ ಬೆಳಗ್ಗೆ ಮರಳೇನಹಳ್ಳಿಯಿಂದ ದೊಡ್ಡಬೆಳವಂಗಲ ಕಡೆಗೆ ತೆರಳುತ್ತಿದ್ದ ವೇಳೆ ಮೇಷ್ಟ್ರ ಮನೆ ಕ್ರಾಸ್ ಬಳಿ ಕ್ಯಾಂಟರ್ ಹಾಗೂ ಬೈಕ್ ಡಿಕ್ಕಿಯಾಗಿದೆ. ಈ ವೇಳೆ ಹನುಮಂತರಾಯಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ತುಂಬು ಗರ್ಭಿಣಿ ಮೇಲೆ ಗ್ಯಾಂಗ್ ರೇಪ್ – ಬೆಚ್ಚಿ ಬಿದ್ದ ಪಾಕ್

ಅಪಘಾತ ಮಾಡಿದ ಕ್ಯಾಂಟರ್ ವಾಹನ ಸ್ಥಳದಿಂದ ಪರಾರಿಯಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ನಾಗರಾಜ್, ಇನ್ಸ್‌ಪೆಕ್ಟರ್ ಸತೀಶ್ ತೆರಳಿ ಪರಿಶೀಲನೆ ನಡೆಸಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ: ಅನುಭವ ಮಂಟಪ ದಾಖಲೆಗಳನ್ನು ಪುರಾತತ್ವ ಇಲಾಖೆ ಪರಿಶೀಲಿಸಲಿದೆ: ಬೊಮ್ಮಾಯಿ





































