ತಮಿಳು ನಟ ಧನುಷ್ (Dhanush) ಹಾಗೂ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ (Shivaraj Kumar)ನಟನೆಯ ಕ್ಯಾಪ್ಟನ್ ಮಿಲ್ಲರ್ (Captain Miller) ಸಿನಿಮಾ ಜನವರಿಯಲ್ಲಿ ರಿಲೀಸ್ ಆಗಿ ನೋಡುಗರ ಮೆಚ್ಚುಗೆಗೆ ಪಾತ್ರವಾಗಿತ್ತು. ಸಂಕ್ರಾಂತಿ ಹಬ್ಬಕ್ಕೆ ರಿಲೀಸ್ ಆದ ದೊಡ್ಡ ಸಿನಿಮಾಗಳಲ್ಲಿ ಈ ಸಿನಿಮಾ ಕೂಡ ಒಂದಾಗಿತ್ತು. ಬಾಕ್ಸ್ ಆಫೀಸಿನಲ್ಲೂ ಉತ್ತಮ ಗಳಿಕೆ ಮಾಡಿತ್ತು. ಇದೀಗ ಈ ಚಿತ್ರ ಒಟಿಟಿಗೆ (OTT) ಬರಲು ಸಿದ್ಧವಾಗಿದೆ.

ಫೆಬ್ರವರಿ 9ರಂದು ಒಟಿಟಿಯಲ್ಲಿ ಸ್ಟ್ರೀಮಿಂಗ್ ಆಗಲಿದ್ದು, ಹಿಂದಿ ಹೊರತಾಗಿ ಉಳಿದೆಲ್ಲ ಭಾಷೆಯಲ್ಲೂ ಈ ಸಿನಿಮಾವನ್ನು ನೋಡಬಹುದಾಗಿದೆ. ಹಿಂದಿ ವರ್ಷನ್ ಅನ್ನು ತಡವಾಗಿ ರಿಲೀಸ್ ಮಾಡಲಾಗುವುದು ಎಂದಿದ್ದಾರೆ ನಿರ್ಮಾಣ ಸಂಸ್ಥೆ. ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗಿತ್ತು.

ಮೊದಲು ಫಸ್ಟ್ ಲುಕ್ ಹಾಗೂ ಟೀಸರ್ ಮೂಲಕ ಬಹಳ ಸದ್ದು ಮಾಡಿತ್ತು ಕ್ಯಾಪ್ಟನ್ ಮಿಲ್ಲರ್ ಸಿನಿಮಾ. ರಜನಿಕಾಂತ್ ಜೈಲರ್ ನಲ್ಲಿ ನರಸಿಂಹ ಆಗಿ ದರ್ಶನ ಕೊಟ್ಟು ಕ್ರೇಜ್ ಕ್ರಿಯೇಟ್ ಮಾಡಿದ್ದ ಟಗರು ಶಿವನ ಹೊಸ ಅವತಾರ ನೋಡಿ ಶಿವಣ್ಣನ ಅಭಿಮಾನಿಗಳು ಫಿದಾ ಆಗಿದ್ದರು. ಇದು ಧನುಷ್ 49ನೇ ಚಿತ್ರ ಆಗಿದ್ದರಿಂದ ಸಹಜವಾಗಿ ನಿರೀಕ್ಷೆ ಹೆಚ್ಚಿತ್ತು.

ಈ ಚಿತ್ರವನ್ನು ಅರುಣ್ ಮಾಥೇಶ್ವರನ್ ನಿರ್ದೇಶಿಸಿದ್ದು, ಧನುಷ್ ಜೋಡಿಯಾಗಿ ಪ್ರಿಯಾಂಕಾ ಮೋಹನನ್ ನಟಿಸಿದ್ದಾರೆ. ಇದು ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ತೆರೆದುಕೊಳ್ಳುವ ಕಥೆಯಾಗಿತ್ತು.
ಈ ಸಿನಿಮಾದಲ್ಲಿ ಧನುಷ್ ಉದ್ದ ಕೂದಲು, ಗಡ್ಡ ಮೀಸೆ ಬಿಟ್ಟು ವಿಭಿನ್ನವಾಗಿ ಕಾಣಿಸಿದ್ದಾರೆ. ಹಾಗೇ ಶಿವರಾಜ್‌ಕುಮಾರ್ ಕೂಡ ಕುದುರೆ ಏರಿ ಬರುವ ಸನ್ನಿವೇಶ ಅವರ ಅಭಿಮಾನಿಗಳಿಗೆ ಥ್ರಿಲ್ ಹೆಚ್ಚಿಸಿತ್ತು.



















