Tag: Captainship

  • ರೋಹಿತ್ ನಾಯಕತ್ವ ತೊರೆಯಬಹುದು: ಮಂಜ್ರೇಕರ್

    ರೋಹಿತ್ ನಾಯಕತ್ವ ತೊರೆಯಬಹುದು: ಮಂಜ್ರೇಕರ್

    ಮುಂಬೈ: ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದ  ನಾಯಕತ್ವವನ್ನು ತೊರೆಯಬಹುದು ಎಂದು ಎಂದು ಭಾರತ ತಂಡದ ಮಾಜಿ ಆಟಗಾರ ಸಂಜಯ್ ಮಂಜ್ರೇಕರ್ ಹೇಳಿದ್ದಾರೆ.

    ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ರೋಹಿತ್ ಈಗಾಗಲೇ ಮುಂಬೈಗೆ ಐದು ಪ್ರಶಸ್ತಿಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ ಅದನ್ನು ಮರೆಯುವಂತಿಲ್ಲ. ಅವರು ಕೂಡಾ ವಿರಾಟ್ ಕೊಹ್ಲಿಯಂತೆಯೇ ನಾಯಕತ್ವವನ್ನು ತೊರೆಯಬಹುದು. ಸ್ವಲ್ಪ ವಿಶ್ರಾಂತಿ ಪಡೆದು ಶುದ್ಧ ಬ್ಯಾಟರ್ ಆಗಿ ಆಡಬಹುದು. ತಂಡದ ನಾಯಕನಾಗಿ ಪೊಲಾರ್ಡ್‍ಗೆ ಜವಾಬ್ದಾರಿಯನ್ನು ವಹಿಸಬಹುದು ಎಂದು ನಾನು ಭಾವಿಸಿದ್ದೇನೆ ಎಂದರು. ಇದನ್ನೂ ಓದಿ: 74 ಎಸೆತಗಳಲ್ಲಿ 165 ರನ್‌ ಚಚ್ಚಿದ ಉತ್ತಪ್ಪ, ದುಬೆ – ಚೆನ್ನೈಗೆ 23 ರನ್‌ಗಳ ಜಯ

    ಐಪಿಎಲ್ 2022 ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ತಂಡವನ್ನು ಜಯದ ಲಯಕ್ಕೆ ಕೊಂಡಯ್ಯಲು ಹೆಣಗಾಡುತ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಐಪಿಎಲ್ 2022ರಲ್ಲಿ ಫಾಫ್ ಡು ಪ್ಲೆಸಿಸ್ ಚೆನ್ನೈ ಸೂಪರ್ ಕಿಂಗ್ಸ್ ನಾಯಕನಾಗಬೇಕಿತ್ತು: ರವಿಶಾಸ್ತ್ರಿ

    ಐಪಿಎಲ್ 2022 ರಲ್ಲಿ ರೋಹಿತ್ ಎಲ್ಲಾ ಇನ್ನಿಂಗ್ಸ್‌ಗಳಲ್ಲಿ ವಿಫಲರಾಗಿದ್ದಾರೆ. ಭಾರತಕ್ಕಾಗಿ ಆಡಿದಾಗ ಅವರ ಸ್ಟ್ರೈಕ್-ರೇಟ್ ಉತ್ತಮವಾಗಿರುತ್ತದೆ. ಅವರು ತಮ್ಮ ಬಗ್ಗೆ ಮಾತ್ರ ಯೋಚಿಸುತ್ತಾರೆ. ತಂಡದ ಬಗ್ಗೆ ಕಡಿಮೆ ಯೋಚಿಸುತ್ತಾರೆ ಎಂದು ವ್ಯಂಗ್ಯವಾಡಿದರು.

    ನಾವು ಭಾರತೀಯ ಕ್ರಿಕೆಟ್‍ನಲ್ಲಿ ಕಾಣುವ ರೋಹಿತ್ ಅವರನ್ನು ಐಪಿಎಲ್‍ನಲ್ಲಿ ಕಾಣಲು ಸಾಧ್ಯವಾಗುತ್ತಿಲ್ಲ. ರೋಹಿತ್ ಐಪಿಎಲ್ 2022 ಕ್ಕೆ ನಂತರ ನಿವೃತ್ತಿ ಹೊಂದಬಹುದು ಎಂದು ನಾನು ಭಾವಿಸುತ್ತೇನೆ ಎಂದು ಅಭಿಪ್ರಾಯಪಟ್ಟಿದ್ದಾರೆ.

  • ಐಪಿಎಲ್ 2022ರಲ್ಲಿ ಫಾಫ್ ಡು ಪ್ಲೆಸಿಸ್ ಚೆನ್ನೈ ಸೂಪರ್ ಕಿಂಗ್ಸ್ ನಾಯಕನಾಗಬೇಕಿತ್ತು: ರವಿಶಾಸ್ತ್ರಿ

    ಐಪಿಎಲ್ 2022ರಲ್ಲಿ ಫಾಫ್ ಡು ಪ್ಲೆಸಿಸ್ ಚೆನ್ನೈ ಸೂಪರ್ ಕಿಂಗ್ಸ್ ನಾಯಕನಾಗಬೇಕಿತ್ತು: ರವಿಶಾಸ್ತ್ರಿ

    ಮುಂಬೈ: ಐಪಿಎಲ್ 2022ರಲ್ಲಿ ಫಾಫ್ ಡು ಪ್ಲೆಸಿಸ್ ಚೆನ್ನೈ ಸೂಪರ್ ಕಿಂಗ್ಸ್ ನಾಯಕನಾಗಬೇಕಿತ್ತು ಎಂದು ಭಾರತದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ.

    ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಸಿಎಸ್‍ಕೆ ಫಾಫ್ ಡು ಪ್ಲೆಸಿಸ್ ಅವರನ್ನು ಬಿಡಬಾರದಿತ್ತು. ರವೀಂದ್ರ ಜಡೇಜಾ ತಮ್ಮ ಫಾರ್ಮ್‍ನತ್ತ ಗಮನ ಹರಿಸಬೇಕಾಗಿದೆ. ಐಪಿಎಲ್ 2022ರ ಮೊದಲು ಧೋನಿ ಸಿಎಸ್‍ಕೆ ನಾಯಕತ್ವದಿಂದ ಕೆಳಗಿಳಿದಿದ್ದು, ಈ ಋತುವಿನಲ್ಲಿ ಇನ್ನೂ ತಮ್ಮ ಮೊದಲ ಗೆಲುವು ದಾಖಲಿಸದ ರವೀಂದ್ರ ಜಡೇಜಾಗೆ ನಾಯಕತ್ವವನ್ನು ಹಸ್ತಾಂತರಿಸಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಕಳೆದ ವರ್ಷ ಬೆಂಚ್ ಬಿಸಿ ಮಾಡಿದ ಆಟಗಾರರು ಈ ಬಾರಿ ಮ್ಯಾಚ್ ವಿನ್ನರ್ಸ್‌

    ಪ್ರಸ್ತುತ ಐಪಿಎಲ್ 2022ರಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಈಗಾಗಲೇ ತನ್ನ ಆರಂಭಿಕ ನಾಲ್ಕು ಪಂದ್ಯಗಳನ್ನು ಕಳೆದುಕೊಂಡಿದೆ. ಇದು ಫ್ರಾಂಚೈಸಿ ಇತಿಹಾಸದಲ್ಲಿ ಮೊದಲ ಬಾರಿಗೆ ಸಂಭವಿಸಿದೆ. ಚೆನ್ನೈ ಟೂರ್ನಿಯಲ್ಲಿ ನಾಲ್ಕು ಬಾರಿ ಟ್ರೋಫಿ ಎತ್ತಿ ಹಿಡಿದಿದೆ. ಆದರೆ ಈ ಋತುವಿನಲ್ಲಿ ಜಯದ ಲಯ ಕಂಡುಕೊಳ್ಳಲು ಹೆಣಗಾಡುತ್ತಿದೆ ಎಂದರು. ಇದನ್ನೂ ಓದಿ: ರಾಹುಲ್ ಗೋಲ್ಡನ್ ಡಕ್ – ನಿರಾಸೆಗೊಂಡ ಆಥಿಯಾ ಶೆಟ್ಟಿ

    ಐಪಿಎಲ್ 2022ರ ಮೆಗಾ ಹರಾಜಿನಲ್ಲಿ ರೂ. 7 ಕೋಟಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಖರೀದಿಸಿದ ಫಾಫ್ ಡು ಪ್ಲೆಸಿಸ್ ಅವರು ತಮ್ಮ ಸಂಪೂರ್ಣ ಐಪಿಎಲ್ ವೃತ್ತಿಜೀವನವನ್ನು ಸಿಎಸ್‍ಕೆಯೊಂದಿಗೆ ಕಳೆದಿದ್ದರು. ಅವರು ಈ ಹಿಂದೆ ಚೆನ್ನೈನ 2021 ರ ಐಪಿಎಲ್ ವಿಜಯೋತ್ಸವದಲ್ಲಿ 59 ಎಸೆತಗಳಲ್ಲಿ 86 ರನ್ ಗಳಿಸಿ ಪ್ರಮುಖ ಪಾತ್ರ ವಹಿಸಿದ್ದರು. ಕೆಕೆಆರ್ ವಿರುದ್ಧದ ಫೈನಲ್‍ನಲ್ಲಿ ಪ್ಲೇಯರ್ ಆಫ್ ದಿ ಮ್ಯಾಚ್ ಸಹ ಅವರು ತಮ್ಮ ಮುಡಿಗೇರಿಸಿಕೊಂಡಿದ್ದರು.

    ರವೀಂದ್ರ ಜಡೇಜಾ ಅವರ ಮೇಲೆ ಯಾವುದೇ ನಾಯಕತ್ವದ ಒತ್ತಡವನ್ನು ಹೇರದೆ ಆಟಗಾರನಾಗಿಯೇ ಆಡಿಸಬೇಕಿತ್ತು ಎಂದು ಅಭಿಪ್ರಾಯಪಟ್ಟರು.

  • ಅಂತ್ಯವಾಯಿತು ಟೀಂ ಇಂಡಿಯಾದಲ್ಲಿ ಕೊಹ್ಲಿ, ಶಾಸ್ತ್ರಿ ಯುಗ

    ಅಂತ್ಯವಾಯಿತು ಟೀಂ ಇಂಡಿಯಾದಲ್ಲಿ ಕೊಹ್ಲಿ, ಶಾಸ್ತ್ರಿ ಯುಗ

    ಮುಂಬೈ: ಟೀಂ ಇಂಡಿಯಾದಲ್ಲಿ ನಾಯಕ ವಿರಾಟ್ ಕೊಹ್ಲಿ ಮತ್ತು ಕೋಚ್ ರವಿಶಾಸ್ತ್ರಿ ನಡುವಿನ ಉತ್ತಮವಾದ ಕಾಂಬಿನೇಷನ್ ಇಂದಿಗೆ ಅಂತ್ಯವಾಗಿದೆ.

    ಶಾಸ್ತ್ರಿ 2014ರಲ್ಲಿ ಭಾರತ ಕ್ರಿಕೆಟ್ ತಂಡಕ್ಕೆ ಡೈರೆಕ್ಟರ್ ಆಗಿ ಆಯ್ಕೆಗೊಂಡರು. 2016ರ ಬಳಿಕ ಒಂದು ವರ್ಷಗಳ ಕಾಲ ಕನ್ನಡಿಗ ಅನಿಲ್ ಕುಂಬ್ಳೆ ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸಿದರು. ನಂತರ 2017ರಲ್ಲಿ ರವಿಶಾಸ್ತ್ರಿ ಮುಖ್ಯ ಕೋಚ್ ಆಗಿ ಟೀಂ ಇಂಡಿಯಾಗೆ ನೇಮಕಗೊಂಡರು. ರವಿಶಾಸ್ತ್ರಿ ಸಾರಥ್ಯದಲ್ಲಿ ಮುನ್ನಡೆದ ಭಾರತ ತಂಡ ಚಾಂಪಿಯನ್ ಟ್ರೋಫಿ, ಆಸ್ಟ್ರೇಲಿಯಾ ಸರಣಿ, ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಸಹಿತ ಹಲವು ಮಹತ್ವದ ಪಂದ್ಯಗಳಲ್ಲಿ ಭಾರತ ಉತ್ತಮ ಪ್ರದರ್ಶನ ನೀಡಿದೆ. ಈ ಬಾರಿ ಟಿ20 ವಿಶ್ವಕಪ್ ಗೆಲ್ಲುವ ಮೂಲಕ ಕೋಚ್ ಸ್ಥಾನದಿಂದ ಕೆಳಗಿಳಿಯುವ ಹುಮ್ಮಸ್ಸಿನಲ್ಲಿದ್ದರು. ಆದರೆ ಟೀಂ ಇಂಡಿಯಾ ಸೋಲಿನಿಂದ ಈ ಅವಕಾಶ ಕೈತಪ್ಪಿತು. ಇದನ್ನೂ ಓದಿ: ಐಪಿಎಲ್‍ನ ನೂತನ ತಂಡ ಅಹಮದಾಬಾದ್‍ನ ಕೋಚ್ ಆಗಲಿದ್ದಾರೆ ರವಿಶಾಸ್ತ್ರಿ?

    ಟಿ20 ವಿಶ್ವಕಪ್ ಮುಗಿದ ಕೂಡಲೇ ಭಾರತ ಟಿ20 ತಂಡದ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ಗುಡ್‍ಬೈ ಹೇಳುದಾಗಿ ವಿಶ್ವಕಪ್ ಆರಂಭಕ್ಕೂ ಮೊದಲೇ ಹೇಳಿಕೊಂಡಿದ್ದರು. ಅದರಂತೆ ಟಿ20 ವಿಶ್ವಕಪ್‍ನ ಕಡೆಯ ಪಂದ್ಯ ನಮೀಬಿಯ ವಿರುದ್ಧ ನಾಯಕನಾಗಿ ಕಡೆಯ ಪಂದ್ಯವನ್ನು ಕೊಹ್ಲಿ ಆಡಿದರು. ವಿರಾಟ್ ಕೊಹ್ಲಿ ಟಿ20 ತಂಡದ ನಾಯಕನಾಗಿ 50 ಪಂದ್ಯವಾಡಿದ್ದು ಅದರಲ್ಲಿ 30 ಪಂದ್ಯಗಳಲ್ಲಿ ಜಯ, 16 ಸೋಲು, 2 ಪಂದ್ಯ ಟೈ ಮತ್ತು 2 ಪಂದ್ಯ ರದ್ದು ಗೊಂಡಿದೆ. ಈ ಮೂಲಕ ಟೀಂ ಇಂಡಿಯಾದಲ್ಲಿ ಮಹೇಂದ್ರ ಸಿಂಗ್ ಧೋನಿ ಬಳಿಕ ಯಶಸ್ಸಿಯಾಗಿ ಮುನ್ನಡೆಸಿದ ಗೆಲುವಿನ ರೆಕಾರ್ಡ್ ಕೊಹ್ಲಿ ಹೆಸರಿನಲ್ಲಿದೆ. ಇದನ್ನೂ ಓದಿ: ಪಂದ್ಯಕ್ಕೂ ಮೊದಲು ಅಬುಧಾಬಿ ಪಿಚ್‌ ಕ್ಯೂರೇಟರ್‌ ನಿಗೂಢ ಸಾವು

    ವಿರಾಟ್ ಕೊಹ್ಲಿ 50 ಪಂದ್ಯಗಳಲ್ಲಿ ನಾಯನಾಗಿ ತಂಡವನ್ನು ಮುನ್ನಡೆಸಿ ನಾಯಕತ್ವಕ್ಕೆ ಗುಡ್‍ಬೈ ಹೇಳಿದರೆ, ಟಿ20 ವಿಶ್ವಕಪ್‍ನ ಕಡೆಯ ಪಂದ್ಯದ ಗೆಲುವಿನೊಂದಿಗೆ ಕೋಚ್ ರವಿಶಾಸ್ತ್ರಿ ತಂಡದಿಂದ ಬೇರ್ಪಟ್ಟಿದ್ದಾರೆ. ಈ ಇಬ್ಬರೂ ಕೂಡ ನಾಯಕ ಮತ್ತು ಕೋಚ್ ಆಗಿ ತಂಡವನ್ನು ಉತ್ತಮವಾಗಿ ಬೆಳೆಸಿದ್ದು ಇವರಿಬ್ಬರಲ್ಲಿ ಉತ್ತಮವಾದ ಕಾಂಬಿನೇಷನ್ ಮೂಡಿತ್ತು, ಇಂದಿಗೆ ಆ ಯುಗ ಅಂತ್ಯವಾಗಿದೆ. ಇದನ್ನೂ ಓದಿ: ಅಂತರಾಷ್ಟ್ರೀಯ ಕ್ರಿಕೆಟ್‍ಗೆ ಗುಡ್ ಬೈ ಹೇಳಲು ಮುಂದಾದ್ರಾ ಕ್ರಿಸ್ ಗೇಲ್?

  • ನಾಯಕನಾಗಿ ಗುರುವಿನ ದಾಖಲೆ ಮುರಿದ ವಿರಾಟ್ ಕೊಹ್ಲಿ

    ನಾಯಕನಾಗಿ ಗುರುವಿನ ದಾಖಲೆ ಮುರಿದ ವಿರಾಟ್ ಕೊಹ್ಲಿ

    ಸೌಂಥಾಂಪ್ಟನ್: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್‍ನಲ್ಲಿ ಕ್ಯಾಪ್ಟನ್‍ಶಿಪ್ ನಿರ್ವಹಿಸುವ ಮೂಲಕ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ತನಗೆ ನಾಯಕತ್ವದ ಪಾಠ ಹೇಳಿಕೊಟ್ಟ ಗುರುವಿನ ದಾಖಲೆ ಮುರಿದಿದ್ದಾರೆ.

    ವಿರಾಟ್ ಕೊಹ್ಲಿ ಡಬ್ಲ್ಯುಟಿಸಿ ಫೈನಲ್ ಪಂದ್ಯದಲ್ಲಿ ಟಾಸ್ ಆದ ಬೆನ್ನಲ್ಲೇ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ನಾಯಕತ್ವದ ದಾಖಲೆಯನ್ನು ಮುರಿದಿದ್ದಾರೆ. ಧೋನಿ ಇವರೆಗೆ ಒಟ್ಟು 60 ಟೆಸ್ಟ್ ಪಂದ್ಯಗಳಲ್ಲಿ ನಾಯಕತ್ವ ವಹಿಸಿದ್ದರೆ, ವಿರಾಟ್ ಕೊಹ್ಲಿ 61ನೇ ಪಂದ್ಯದಲ್ಲಿ ನಾಯಕತ್ವ ವಹಿಸುವ ಮೂಲಕ ತನ್ನ ನಾಯಕತ್ವದ ಗುರುವಿನ ದಾಖಲೆಯನ್ನು ಮುರಿದು ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಇದನ್ನೂ ಓದಿ: ದಾಖಲೆ ಬರೆದ ವಿರಾಟ್ ಕೊಹ್ಲಿ

    ಧೋನಿ ಒಟ್ಟು 60 ಟೆಸ್ಟ್ ಪಂದ್ಯಗಳಲ್ಲಿ ನಾಯಕತ್ವ ವಹಿಸಿ 27 ಪಂದ್ಯದಲ್ಲಿ ಜಯ, 18 ಪಂದ್ಯ ಸೋಲು ಮತ್ತು 15 ಪಂದ್ಯಗಳನ್ನು ಡ್ರಾ ಮಾಡಿಕೊಂಡಿದ್ದಾರೆ. ವಿರಾಟ್ ಒಟ್ಟು 61 ಪಂದ್ಯ 36 ಪಂದ್ಯ ಜಯ, 14 ಪಂದ್ಯ ಸೋಲು, 10 ಪಂದ್ಯ ಡ್ರಾ ಮಾಡಿಕೊಂಡಿದ್ದಾರೆ. 2014ರಲ್ಲಿ ಧೋನಿ ಟೆಸ್ಟ್ ಕ್ರಿಕೆಟ್‍ಗೆ ನಿವೃತ್ತಿ ನೀಡಿದ ಬಳಿಕ ಕೊಹ್ಲಿ ಭಾರತ ಟೆಸ್ಟ್ ತಂಡದ ನಾಯಕತ್ವದ ಚುಕ್ಕಾನಿ ಹಿಡಿದಿದ್ದರು. ಬಳಿಕ ತಂಡವನ್ನು ಟೆಸ್ಟ್ ಕ್ರಿಕೆಟ್‍ನಲ್ಲಿ ನಂ 1 ಸ್ಥಾನಕ್ಕೇರಿಸಿ, ಇದೀಗ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್‍ಗೆ ಏರಿಸಿದ ಕೀರ್ತಿ ವಿರಾಟ್‍ಗೆ ಸಲ್ಲುತ್ತದೆ. ಇದನ್ನೂ ಓದಿ: WTC ಫೈನಲ್ ಭಾರತ, ನ್ಯೂಜಿಲೆಂಡ್ ತಂಡದ ವೇಗಿಗಳ ಬಲಾಬಲ

    ಕೊಹ್ಲಿ ನಾಯಕತ್ವ ಮಾತ್ರವಲ್ಲದೆ ಡಬ್ಲ್ಯುಟಿಸಿ ಫೈನಲ್ ಪಂದ್ಯದಲ್ಲಿ ವೈಯಕ್ತಿಕವಾಗಿ ಟೆಸ್ಟ್ ಕ್ರಿಕೆಟ್‍ನಲ್ಲಿ ವೇಗವಾಗಿ 7500ಕ್ಕೂ ಅಧಿಕ ರನ್ ಸಿಡಿಸಿದ ಮೊದಲ ಭಾರತೀಯ ಆಟಗಾರ ಎಂಬ ಮೈಲಿಗಲ್ಲನ್ನು ನೆಟ್ಟಿದ್ದಾರೆ. ಈ ಮೊದಲು ಸಚಿನ್ ತೆಂಡೂಲ್ಕರ್ 144 ಟೆಸ್ಟ್ ಪಂದ್ಯಗಳಿಂದ 7500ರನ್ ಸಿಡಿಸಿದರೆ, ಬಳಿಕ ಸುನಿಲ್ ಗಾವಸ್ಕರ್ 154 ಟೆಸ್ಟ್ ಪಂದ್ಯಗಳಿಂದ 7500ರನ್ ಸಿಡಿಸಿದ್ದರು. ಇದೀಗ ಕೊಹ್ಲಿ 92 ಟೆಸ್ಟ್ ಪಂದ್ಯದಿಂದ 7500 ರನ್ ಸಿಡಿಸಿ ಮಿಂಚಿದ್ದಾರೆ.