Tag: car accident

  • ಬೈಕ್ ತಪ್ಪಿಸಲು ಹೋಗಿ ಇನ್ನೋವಾ ಕಾರು ಪಲ್ಟಿ: ಮಗು ಸೇರಿದಂತೆ ನಾಲ್ವರು ಸಾವು

    ಬೈಕ್ ತಪ್ಪಿಸಲು ಹೋಗಿ ಇನ್ನೋವಾ ಕಾರು ಪಲ್ಟಿ: ಮಗು ಸೇರಿದಂತೆ ನಾಲ್ವರು ಸಾವು

    ಚಿಕ್ಕಬಳ್ಳಾಪುರ: ಬೈಕ್ ತಪ್ಪಿಸಲು ಹೋಗಿ ಇನ್ನೋವಾ ಕಾರು ಪಲ್ಟಿ ಹೊಡೆದು ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಪಾಳ್ಯ ಗೇಟ್ ಬಳಿ ನಡೆದಿದೆ.

    ಯಲಹಂಕದ ಶಿವಕೋಟೆ ಗ್ರಾಮದ ಪಾರ್ವತಮ್ಮ (30), ನಾಗಮ್ಮ, ಪಲ್ಸರ್ ಬೈಕ್ ಸವಾರ ಶಶಿಕುಮಾರ್ (35) ಹಾಗೂ ಒಂದು ವರ್ಷದ ಮಗು ಮೃತ ದುರ್ದೈವಿಗಳು. ಇನ್ನೋವಾ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಶಿವಕೋಟೆ ಗ್ರಾಮದ ಪಾರ್ವತಮ್ಮ ಹಾಗೂ ಸಂಬಂಧಿಕರು ಬೀಗರ ಊಟಕ್ಕಾಗಿ ದೇವನಹಳ್ಳಿಯ ಪುಟ್ಟಪ್ಪನಗುಡಿ ಬೀದಿಗೆ ಹೋಗಿದ್ದರು. ಊಟ ಮುಗಿಸಿಕೊಂಡು ಮರಳುತ್ತಿರುವಾಗ ರಾಷ್ಟ್ರೀಯ ಹೆದ್ದಾರಿಯ ಕನ್ನಮಂಗಲಪಾಳ್ಯ ಗೇಟ್ ಬಳಿ ಪಲ್ಸರ್ ಬೈಕ್ ಏಕಾಏಕಿ ಅಡ್ಡ ಬಂದಿದೆ. ಬೈಕ್ ತಪ್ಪಿಸಲು ಮುಂದಾದ ಚಾಲಕ ನಿಯಂತ್ರಣ ತಪ್ಪಿದ ಇನ್ನೋವಾ ಕಾರು ರಸ್ತೆಯ ಪಕ್ಕದ ಡಿವೈಡರ್ ಬ್ಯಾರಿಕೇಡ್‍ಗೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದಿದೆ. ಪರಿಣಾಮ ಇನ್ನೋವಾ ಕಾರಿನಲ್ಲಿದ್ದ ಮೂವರು ಹಾಗೂ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆಗೆ ಬೈಕ್ ಸವಾರನ ಅಜಾಗರುಕತೆಯೇ ಕಾರಣ ಎನ್ನಲಾಗಿದೆ.

    ಘಟನಾ ಸ್ಥಳಕ್ಕೆ ಏರ್‍ಪೋರ್ಟ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನ ದೇವನಹಳ್ಳಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಕೆಐಎಎಲ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ.

  • ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದ ಕಾರು – 6 ಮಂದಿ ಬಚಾವ್

    ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದ ಕಾರು – 6 ಮಂದಿ ಬಚಾವ್

    – ಕಾರಿನ ಗಾಜು ಒಡೆದು ಗಾಯಾಳನ್ನು ಆಸ್ಪತ್ರೆಗೆ ಸೇರಿಸಿದ ಸ್ಥಳೀಯರು

    ಕಾರವಾರ: ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಆರೂ ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಬಾಳೆಗುಳಿ ಕ್ರಾಸ್ ಬಳಿ ಘಟನೆ ನಡೆದಿದೆ. ಗೋವಾದಿಂದ ಮುಂಡಗೋಡಿನ ಟಿಬೇಟಿಯನ್ ಕಾಲೋನಿಯ ಕಡೆಗೆ ಕಾರು ಹೋಗುತಿತ್ತು. ಚಾಲಕ ವೇಗವಾಗಿ ಚಾಲನೆ ಮಾಡಿಕೊಂಡು ಬರುತ್ತಿದ್ದಾಗ ದನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಬಳಿಕ ಮರಕ್ಕೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಜನರು ಪ್ರಾಣಾಪಾಯದಿಂದ ಪಾರಾಗಿದ್ದು, ಹೊರಗೆ ಬರಲು ಸಾಧ್ಯವಾಗದೇ ಚೀರಾಡುತ್ತಿದ್ದರು.

    ತಕ್ಷಣವೇ ಘಟನಾ ಸ್ಥಳಕ್ಕೆ ಆಗಮಿಸಿದ ಕೆಲ ಸ್ಥಳೀಯರು ಕಾರಿನ ಗಾಜು ಒಡೆದು, ಕಾರಿನಲ್ಲಿದ್ದ ಆರು ಜನರನ್ನು ಹೊರ ತೆಗೆದಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ.

    ಕಾರಿನಲ್ಲಿದ್ದ ಆರು ಜನರಿಗೂ ಚಿಕ್ಕಪುಟ್ಟ ಗಾಯಗಳಾಗಿದ್ದು, ಎಲ್ಲರನ್ನೂ ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಕಾರು ಅಪಘಾತದಿಂದ ಸಂಸದ ರಮೇಶ್ ಜಿಗಜಿಣಗಿ ಪುತ್ರ ಪಾರು

    ಕಾರು ಅಪಘಾತದಿಂದ ಸಂಸದ ರಮೇಶ್ ಜಿಗಜಿಣಗಿ ಪುತ್ರ ಪಾರು

    ಕಾರವಾರ: ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ರಮೇಶ್ ಜಿಗಜಿಣಗಿ ಅವರ ಪುತ್ರ ಭಾರೀ ಅಪಘಾತದಿಂದ ಪಾರಾಗಿದ್ದಾರೆ.

    ಆನಂದ್ ರಮೇಶ್ ಜಿಗಜಿಣಗಿ ಅವರು ಕಾರಿನಲ್ಲಿ ಇಂದು ಉಡುಪಿಯಿಂದ ವಿಜಯಪುರಕ್ಕೆ ತೆರಳುತ್ತಿದ್ದರು. ಅಂಕೋಲದಿಂದ ಯಲ್ಲಾಪುರ ರಾಷ್ಟ್ರೀಯ ಹೆದ್ದಾರಿ 63 ರ ಮಾರ್ಗವಾಗಿ ಹೋಗುತ್ತಿದ್ದಾಗ ಹಿಂದೆ ಬಂದ ಲಾರಿ ಚಾಲಕ ಕಾರಿಗೆ ಗುದ್ದಿದ್ದಾನೆ. ಅದೃಷ್ಟವಶಾತ್ ಆನಂದ್ ಜಿಗಜಿಣಗಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಕಾರಿನ ಬಲಗಡೆಯ ಭಾಗ ಜಖಂಗೊಂಡಿದೆ. ಈ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ನನ್ನ ಪತಿ ಕಾಫಿಯನ್ನೇ ಕುಡಿಯಲ್ಲ, ಇನ್ನು ಡ್ರಿಂಕ್ಸ್ ಹೇಗೆ ಮಾಡ್ತಾರೆ: ಸಿ.ಟಿ.ರವಿ ಪತ್ನಿ

    ನನ್ನ ಪತಿ ಕಾಫಿಯನ್ನೇ ಕುಡಿಯಲ್ಲ, ಇನ್ನು ಡ್ರಿಂಕ್ಸ್ ಹೇಗೆ ಮಾಡ್ತಾರೆ: ಸಿ.ಟಿ.ರವಿ ಪತ್ನಿ

    ಚಿಕ್ಕಮಗಳೂರು: ಶಾಸಕ ಸಿ.ಟಿ.ರವಿ ಕಾರು ಡಿಕ್ಕಿ ಪ್ರಕರಣ ಸಂಬಂಧ, ಅಪಘಾತದಿಂದ ದುರ್ಮರಣ ಹೊಂದಿರುವ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ಬಯಸುತ್ತೇನೆ. ಆದ್ರೆ ನನ್ನ ಪತಿ ಕಾಫಿಯನ್ನೇ ಕುಡಿಯಲ್ಲ. ಹೀಗಾಗಿ ಮದ್ಯಪಾನ ಹೇಗೆ ಮಾಡ್ತಾರೆ ಎಂದು ಸಿ.ಟಿ ರವಿ ಅವರ ಪತ್ನಿ ಪಲ್ಲವಿ ಹೇಳಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ತನ್ನ ಪತಿ ಮದ್ಯ ಸೇವಿಸಿದ್ದಾರೆ ಎನ್ನುವುದು ಶುದ್ಧ ಸುಳ್ಳು. ಮಾಧ್ಯಮದಲ್ಲಿ ಈ ಬಗ್ಗೆ ನೋಡಿ ನನಗೆ ಬೇಸರವಾಗಿ, ಶಾಕ್ ಆಯ್ತು. ಅವರು ನೀರು ಕುಡಿಯೋದು ಬಿಟ್ಟು, ಬೇರೆ ಏನು ಕುಡಿದಿರೋದು ನನಗೆ ಗೊತ್ತಿಲ್ಲ. ಬೆಳಗ್ಗೆ 6.30ಕ್ಕೆ ವಿಮಾನ ಇತ್ತು. ಹಾಗಾಗಿ ಕಾರಿನಲ್ಲಿ ರಾತ್ರಿ 12 ಗಂಟೆಗೆ ಮನೆಯಿಂದ ಹೊರಟ್ಟಿದ್ದರು. ನನ್ನ ಪತಿ ಕಾರು ಡ್ರೈವ್ ಮಾಡುವುದನ್ನು ಬಿಟ್ಟು 15 ವರ್ಷ ಆಗಿದೆ. ಬಹುಷ: ಅವರಿಗೆ ಡ್ರೈವಿಂಗ್ ಮರೆತೇ ಹೋಗಿದೆ. ಕಾರನ್ನು ಡ್ರೈವರ್ ಓಡಿಸುತ್ತಿದ್ದರು ಎಂದು ಪಲ್ಲವಿ ಅವರು ತಿಳಿಸಿದ್ದಾರೆ.  ಇದನ್ನೂ ಓದಿ: ಅಪಘಾತದ ಬಗ್ಗೆ ಶಾಸಕ ಸಿ.ಟಿ ರವಿ ಸ್ಪಷ್ಟನೆ

    ಅಪಘಾತದಿಂದ ಸ್ವಲ್ಪ ಎದೆಗೆ ಪೆಟ್ಟು ಬಿದ್ದಿದೆ ಎಂದು ಪತಿ ಹೇಳಿದ್ದರು. ಮೃತರ ಕುಟುಂಬಕ್ಕೆ ನಮ್ಮ ಕೈಯಲ್ಲಿ ಏನಾಗುತ್ತೋ ಆ ರೀತಿಯ ಸಹಾಯ ಮಾಡ್ತೇವೆ. ಅಪಘಾತದಿಂದ ನನಗೆ ಶಾಕ್ ಆಯ್ತು. ಎರಡು ಯುವಕರು ಜೀವ ಕಳೆದುಕೊಂಡಿದ್ದಾರೆ. ಅದು ನಿಜವಾಗಿಯೂ ಬೇಸರದ ವಿಷಯ. ಈ ಅಪಘಾತ ಆಕಸ್ಮಿಕ, ಈ ಅಪಘಾತದಿಂದ ನಮಗೆ ನೋವಾಗಿದೆ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳುತ್ತೇವೆ ಎಂದು ಸಂತಾಪ ಸೂಚಿಸಿದ್ದಾರೆ.

    https://www.youtube.com/watch?v=YPEOa75NnvQ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹಣ ಇದ್ದವರು ಕೇಸ್ ಮುಚ್ಚಿಹಾಕ್ತಾರೆ, ನಮ್ಮ ಮಕ್ಕಳ ಸಾವಿಗೆ ನ್ಯಾಯ ಕೊಡಿಸಿ- ಮೃತ ಶಶಿಕುಮಾರ್ ತಂದೆ ಕಣ್ಣೀರು

    ಹಣ ಇದ್ದವರು ಕೇಸ್ ಮುಚ್ಚಿಹಾಕ್ತಾರೆ, ನಮ್ಮ ಮಕ್ಕಳ ಸಾವಿಗೆ ನ್ಯಾಯ ಕೊಡಿಸಿ- ಮೃತ ಶಶಿಕುಮಾರ್ ತಂದೆ ಕಣ್ಣೀರು

    ರಾಮನಗರ: ಶಾಸಕ ಸಿಟಿ ರವಿ ಕಾರು ಅಪಘಾತ ಪ್ರಕರಣ ಸಂಬಂಧ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಮೃತ ಶಶಿಕುಮಾರ್ ಅವರ ತಂದೆ ಜಯರಾಮ್ ಅವರು ಶಾಸಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಭಾನುವಾರ ಪ್ರವಾಸ ಮುಗಿಸಿಕೊಂಡು ಸುನಿಲ್ ಹಾಗೂ ಶಶಿಕುಮಾರ್ ವಾಪಸ್ ಬರುವಾಗ ಈ ಘಟನೆ ನಡೆದಿದೆ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ನಮಗೆ ಅಪಘಾತದ ವಿಷಯ ತಿಳಿದಿದೆ. ತಾಯಿ ಬಳಿ ನನ್ನ ಮಗ ಫೋನ್‍ನಲ್ಲಿ ಮಾತನಾಡಿದ್ದ. ಬೆಂಗಳೂರು ಸಮೀಪದಲ್ಲೇ ಇದ್ದೇನೆ, ಮನೆಗೆ ಬೇಗ ಬರುತ್ತೇನೆ ಅಂದಿದ್ದ. ಆದ್ರೆ ಈ ರೀತಿ ಮನೆಗೆ ಹೆಣವಾಗಿ ಬರುತ್ತಾನೆ ಅಂತ ಅಂದುಕೊಂಡಿರಲಿಲ್ಲ. ಬಡವರು ಈ ರೀತಿ ಅಪಘಾತ ಮಾಡಿದ್ದರೆ ಬಿಡುತ್ತಿದ್ದರಾ? ಅವರು ರಾಜಕಾರಣಿ ಅಂತ ಸುಮ್ಮನೆ ಆರೋಪಿಗೆ ತಕ್ಕ ಶಿಕ್ಷೆ ನೀಡಿ, ನಮ್ಮ ಮಕ್ಕಳ ಸಾವಿಗೆ ನ್ಯಾಯ ಕೊಡಿಸಿ ಎಂದು ಮೃತ ಶಶಿಕುಮಾರ್ ತಂದೆ ಕಣ್ಣೀರಿಟ್ಟಿದ್ದಾರೆ.

    ನಾವು ಬಡವರು, ಬಹಳ ಕಷ್ಟ ಪಟ್ಟು ಮಕ್ಕಳನ್ನು ಸಾಕಿದ್ದೇವೆ. ಮೂತ್ರವಿಸರ್ಜನೆ ಮಾಡುತ್ತ ನಿಂತಿದ್ದ ಮಕ್ಕಳಿಗೆ ಕಾರು ಡಿಕ್ಕಿ ಹೊಡೆದು ಅವರನ್ನು ರಸ್ತೆಯಲ್ಲೇ ಬಿಟ್ಟು ಸಿ.ಟಿ ರವಿ ಹೋಗಿದ್ದಾನೆ. ಮಗನ ಮದುವೆ ಮಾಡಬೇಕು ಅಂತಿದ್ದೆ. ಎದೆ ಎತ್ತರಕ್ಕೆ ಬೆಳೆದಿದ್ದ ಮಗನನ್ನು ಕಳೆದುಕೊಂಡೆ. ನಮ್ಮ ಮಕ್ಕಳಿಗೆ ನ್ಯಾಯ ಕೊಡಿಸಿ. ನಮಗೂ ವಯಸಾಯ್ತು ಮಗ ನಮಗೆ ಆಧಾರವಾಗಿ ಇರುತ್ತಾನೆ ಅಂದುಕೊಂಡಿದ್ದೆ. ಈಗ ನಮಗೆ ಯಾರು ಗತಿ? ಯಾರು ನಮ್ಮನ್ನು ಸಾಕುತ್ತಾರೆ. ಮಕ್ಕಳೇ ನಮಗೆ ಆಸ್ತಿ, ಅವರನ್ನೇ ಕಳೆದುಕೊಂಡ ಮೇಲೆ ಏನು ಮಾಡಿದರು ಪ್ರಯೋಜನವಿಲ್ಲ ಎಂದು ರೋಧಿಸುತ್ತಿದ್ದಾರೆ.

    ಶ್ರೀಮಂತರು, ರಾಜಕಾರಣಿಗಳು ತಮ್ಮ ಬಲದಿಂದ ನಮ್ಮಂತ ಬಡವರಿಗೆ ಸಹಾಯ ಮಾಡಲು ಬರುವವರನ್ನು ಕೊಂದುಬಿಡುತ್ತಾರೆ. ಬಂದವರಿಗೆ ಬೆಲೆಯಿಲ್ಲ, ನನ್ನ ಮಗ ನನಗೆ ಬೇಕು. ನಮಗೆ ನ್ಯಾಯ ಕೊಡಿಸಿ. ಬಡವರ ಮಕ್ಕಳು ಅಂತ ಈ ಪ್ರಕರಣವನ್ನು ಮುಚ್ಚಿಹಾಕಬೇಡಿ. ಹಣ ಇರುವವರು ತಮ್ಮ ತಪ್ಪಿಗೆ ಯಾರನ್ನೋ ಆರೋಪಿ ಮಾಡಿ ಕೇಸ್ ಮುಚ್ಚಿಹಾಕುತ್ತಾರೆ. ಆಗ ನಾವು ಏನು ಮಾಡೋಕು ಅಗಲ್ಲ. ನಮ್ಮ ನೋವು ಕೇಳೋರು ಯಾರು ಎಂದು ಅಳಲನ್ನು ತೋಡಿಕೊಂಡಿದ್ದಾರೆ.

    ಈಗಾಗಲೇ ಅಪಘಾತದಲ್ಲಿ ಮೃತಪಟ್ಟ ಸುನಿಲ್ ಹಾಗೂ ಶಶಿಕುಮಾರ್ ಅವರ ಮೃತದೇಹವನ್ನು ಅವರ ಸ್ವಗ್ರಾಮದತ್ತ ರವಾನಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

    https://www.youtube.com/watch?v=CG4X-v7Ije4

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಟ ದರ್ಶನ್ ಗೆ ಚಿಕಿತ್ಸೆ ಮುಂದುವರಿಕೆ- ಆಸ್ಪತ್ರೆ ಆವರಣದಲ್ಲಿ ಪೊಲೀಸ್ ಭದ್ರತೆ

    ನಟ ದರ್ಶನ್ ಗೆ ಚಿಕಿತ್ಸೆ ಮುಂದುವರಿಕೆ- ಆಸ್ಪತ್ರೆ ಆವರಣದಲ್ಲಿ ಪೊಲೀಸ್ ಭದ್ರತೆ

    ಮೈಸೂರು: ಕಾರ್ ಅಪಘಾತಕ್ಕೀಡಾಗಿ ಗಾಯಗೊಂಡಿರುವ ನಟ ದರ್ಶನ್ ಅವರಿಗೆ ನಗರದ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ದರ್ಶನ್ ಜೊತೆಗೆ ನಟ ದೇವರಾಜ್, ಪ್ರಜ್ವಲ್ ಹಾಗೂ ಅಂತೋನಿ ಅವರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ನಾಲ್ವರನ್ನು ಸ್ಪೇಷಲ್ ವಾರ್ಡ್‍ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ದರ್ಶನ್, ದೇವರಾಜ್, ಅಂತೋನಿಯವರಿಗೆ ಸೋಮವಾರ ಶಸ್ತ್ರ ಚಿಕಿತ್ಸೆ ನಡೆದಿದೆ. ಇಂದು ಸಂಜೆಯೊಳಗೆ ನಟ ದೇವರಾಜ್, ಪುತ್ರ ಪ್ರಜ್ವಲ್ ದೇವರಾಜ್ ಡಿಸ್ಚಾರ್ಜ್ ಆಗಲಿದ್ದಾರೆ. ಆದ್ರೆ ದರ್ಶನ್ ಅವರು ಇನ್ನೂ ಒಂದು ದಿನ ಆಸ್ಪತ್ರೆಯಲ್ಲೇ ಉಳಿಯಲಿದ್ದಾರೆ ಎಂಬುದಾಗಿ ಆಸ್ಪತ್ರೆಯ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ವೈದ್ಯರಿಂದ ದರ್ಶನ್, ದೇವರಾಜ್ X-RAY ಬಿಡುಗಡೆ: ಎಲ್ಲೆಲ್ಲಿ ಗಾಯವಾಗಿದೆ?

    ಗಾಯಾಳುಗಳನ್ನು ನೋಡಲು ಅಭಿಮಾನಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆ ಆವರಣದಲ್ಲಿ ಪೊಲೀಸ್ ಭದ್ರತೆ ಮುಂದುವರಿದಿದೆ. ಸಿ.ಆರ್.ಪಿ.ಎಫ್ ತುಕಡಿ ಪೊಲೀಸ್ ಸಿಬ್ಬಂದಿಯನ್ನು ಕೂಡ ನಿಯೋಜಿಸಲಾಗಿದೆ. ಇದನ್ನೂ ಓದಿ: ದರ್ಶನ್ ಸೇಫ್ ಆಗಿದ್ದು, ಯಾರಾದ್ರು ರೂಮರ್ಸ್ ಹಬ್ಬಿಸಿದ್ರೆ ನಂಬಬೇಡಿ: ಸೃಜನ್ ಲೋಕೇಶ್

    ಘಟನೆಯೇನು?:
    ಶನಿವಾರ ನಟರಾದ ದರ್ಶನ್, ಸೃಜನ್ ಲೋಕೇಶ್ ಹಾಗೂ ದೇವರಾಜ್ ಕುಟುಂಬ ಮೈಸೂರು ಮೃಗಾಲಯಕ್ಕೆ ತೆರಳಿ ಪ್ರಾಣಿಗಳನ್ನು ದತ್ತು ತೆಗೆದುಕೊಂಡಿದ್ದರು. ಆ ಬಳಿಕ ಮೈಸೂರಿನಲ್ಲೇ ಉಳಿದುಕೊಂಡು ಸೋಮವಾರ ಮುಂಜಾನೆ ಅಲ್ಲಿಂದ ಹೊರಟಿದ್ದರು. ಹೀಗೆ ಕಾರ್ ನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಮೈಸೂರು ಹೊರವಲಯದ ಹಿನಕಲ್ ಬಳಿ ಕಾರ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ದರ್ಶನ್ ಅವರ ಬಲಗೈನ ಮೂಳೆ ಮುರಿದಿದ್ದು, ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಬಲಗೈಗೆ ರಾಡ್ ಅಳವಡಿಸಲಾಗಿದ್ದು, 24 ಹೊಲಿಗೆ ಹಾಕಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದರು.  ಇದನ್ನೂ ಓದಿ: ಬಲಗೈಗೆ ರಾಡ್ ಅಳವಡಿಸಿ 24 ಹೊಲಿಗೆ- ಯಜಮಾನನ ಶಸ್ತ್ರಚಿಕಿತ್ಸೆ ಯಶಸ್ವಿ

    ದರ್ಶನ್ ಮನವಿಯೇನು?:
    ದರ್ಶನ್ ಆಸ್ಪತ್ರೆ ಸೇರುತ್ತಿದ್ದಂತೆಯೇ ಇತ್ತ ಅಭಿಮಾನಿಗಳು ಆಸ್ಪತ್ರೆಯತ್ತ ದೌಡಾಯಿಸುತ್ತಿದ್ದರು, ಹೀಗಾಗಿ ದರ್ಶನ್ ಅವರು ಆಸ್ಪತ್ರೆಯಿಂದಲೇ ವಾಯ್ಸ್ ರೆಕಾರ್ಡ್ ಮಾಡಿ ಅದನ್ನು ವಾಟ್ಸಪ್ ನಲ್ಲಿ ಕಳುಹಿಸುವ ಮೂಲಕ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ದರ್ಶನ್ ಅಪಘಾತವಾಗಿದ್ದ ಕಾರ್ ಮಿಸ್ಸಿಂಗ್ ಸ್ಟೋರಿಯ ಇನ್‍ಸೈಡ್ ಸ್ಟೋರಿ ಇಲ್ಲಿದೆ

    `ಎಲ್ಲರಿಗೂ ನಮಸ್ಕಾರಪ್ಪ.. ನನ್ನ ಅನ್ನದಾತರು, ಅಭಿಮಾನಿಗಳಲ್ಲಿ ನನ್ನದೊಂದು ರಿಕ್ವೆಸ್ಟ್.. ದಯವಿಟ್ಟು ನನಗೆ ಏನೂ ಆಗಿಲ್ಲ. ಆರಾಮಾಗಿರಿ.. ಇನ್ನು ಒಂದು ದಿನ ಆಸ್ಪತ್ರೆಯಲ್ಲಿದ್ದು, ನಾಳೆ ಬರುತ್ತೇನೆ. ಆ ಬಳಿಕ ಎಲ್ಲರಿಗೂ ಸಿಗುತ್ತೇನೆ. ಹೀಗಾಗಿ ದಯವಿಟ್ಟು ಯಾರೂ ಆಸ್ಪತ್ರೆಯತ್ತ ಬರಬೇಡಿ. ಇದೊಂದು ನನ್ನ ಮನವಿ ಅಂತಾನೇ ತಿಳಿದುಕೊಳ್ಳಿ. ಯಾಕಂದ್ರೆ ಬೇರೆ ರೋಗಿಗಳು ಆಸ್ಪತ್ರೆಯಲ್ಲಿದ್ದಾರೆ. ಹೀಗಾಗಿ ಅವರಿಗೆ ತೊಂದರೆಯಾಗುತ್ತದೆ ಎಂಬುದು ನನ್ನ ಭಾವನೆ. ಒಟ್ಟಿನಲ್ಲಿ ಎಲ್ಲರೂ ಆರಾಮಾಗಿರಿ. ನಿಮ್ಮ ದರ್ಶನ್ ಗೆ ಏನೂ ಆಗಿಲ್ಲ.. ಧನ್ಯವಾದ..’ ಅಂತ ತಿಳಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದಯವಿಟ್ಟು ನೈಟ್ ಜರ್ನಿ ವೇಳೆ ಸ್ವಲ್ಪ ಹುಷಾರಾಗಿರಿ ಎಂದು ಹೇಳಿ ನಂದಮೂರಿ ನಿಧನಕ್ಕೆ ಹ್ಯಾಟ್ರಿಕ್ ಹೀರೋ ಸಂತಾಪ

    ದಯವಿಟ್ಟು ನೈಟ್ ಜರ್ನಿ ವೇಳೆ ಸ್ವಲ್ಪ ಹುಷಾರಾಗಿರಿ ಎಂದು ಹೇಳಿ ನಂದಮೂರಿ ನಿಧನಕ್ಕೆ ಹ್ಯಾಟ್ರಿಕ್ ಹೀರೋ ಸಂತಾಪ

    ಬೆಂಗಳೂರು: ದಯವಿಟ್ಟು ನೈಟ್ ಜರ್ನಿ ವೇಳೆ ಸ್ವಲ್ಪ ಹುಷಾರಾಗಿರಿ ಎಂದು ಹೇಳುತ್ತಾ ನಟ ನಂದಮೂರಿ ಹರಿಕೃಷ್ಣ ನಿಧನಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸಂತಾಪ ಸೂಚಿಸಿದ್ದಾರೆ.

    ನನ್ನ ಮನಸ್ಸಿಗೆ ತುಂಬ ನೋವಾಗುತ್ತಿದೆ. ನನ್ನ ದೊಡ್ಡ ಮಗಳು ಮದುವೆಗೆ ಕರಿಯಬೇಕಾದರೆ ಎಷ್ಟು ಖುಷಿಯಿಂದ ಮಾತನಾಡಿದ್ದರು. ಹೈದರಾಬಾದ್ ಕಾರ್ಯಕ್ರಮದಲ್ಲಿ ನಾನು ಅವರನ್ನು ಭೇಟಿ ಕೂಡ ಮಾಡಿದೆ. ಅದೇ ರೋಡಲ್ಲಿ ಈ ಹಿಂದೆಯೂ ಕೂಡ ಅಪಘಾತ ಆಗಿತ್ತು. ಇದರ ಮೂಲಕ ನಾನು ಅವರ ಫ್ಯಾಮಿಲಿಗೆ ಕೇಳೋದ್ ಒಂದೇ ದಯವಿಟ್ಟು ನೈಟ್ ಜರ್ನಿ ಬೇಡ, ಸ್ವಲ್ಪ ಹುಷಾರಾಗಿರಿ ಎಂದು ಹೇಳುತ್ತಾ ಶಿವರಾಜ್‍ಕುಮಾರ್ ಸಂತಾಪ ಸೂಚಿಸಿದರು. ಇದನ್ನು ಓದಿ: ತೆಲಂಗಾಣದ ನಲ್ಗೊಂಡ ಬಳಿ ಅಪಘಾತ – ಜ್ಯೂನಿಯರ್ NTR ತಂದೆ ನಂದಮೂರಿ ಹರಿಕೃಷ್ಣ ದುರ್ಮರಣ

    ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ, ನಟ ದಿವಂಗತ ನಂದಮೂರಿ ತಾರಕ ರಾಮಾರಾವ್ ಹಿರಿಯ ಪುತ್ರ ನಟ ನಂದಮೂರಿ ಹರಿಕೃಷ್ಣ ಅವರು ಚಲಿಸುತ್ತಿದ್ದ ಕಾರು ಇಂದು ತೆಲಂಗಾಣದ ನಲ್ಗೊಂಡ ಜಿಲ್ಲೆಯ ಅನ್ನೇಪರ್ತಿ ಬಳಿ ಅಪಘಾತಕ್ಕೀಡಾಗಿತ್ತು. ಅಪಘಾತದಲ್ಲಿ ಹರಿಕೃಷ್ಣ ಅವರಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಅವರನ್ನು ಕಾಮಿನೇನಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಇದನ್ನು ಓದಿ: ಎನ್‍ಟಿಆರ್ ಕುಟುಂಬಕ್ಕೆ ನಲ್ಗೊಂಡ ಮಾರ್ಗ ಶಾಪವೇ?

    ಹರಿಕೃಷ್ಣ ಅವರು ಅಭಿಮಾನಿಯ ಪುತ್ರನ ಮದುವೆಗೆ ತೆರಳುತ್ತಿದ್ದರು. ಬೆಳಗ್ಗೆ 4.30ರ ಸುಮಾರಿನಲ್ಲಿ ಹೈದರಾಬಾದ್ ನಿಂದ ಆಂಧ್ರಪ್ರದೇಶದ ನೆಲ್ಲೂರಿಗೆ ತಾವೇ ಕಾರು ಚಾಲನೆ ಮಾಡಿಕೊಂಡು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಹರಿಕೃಷ್ಣ ಅವರು ಬಾಲನಟನಾಗಿ ಹಾಗೂ ನಟನಾಗಿ 13 ಚಿತ್ರಗಳಲ್ಲಿ ನಟಿಸಿದ್ದು, ಶ್ರಾವಣಮಾಸಂ ಅವರ ಕೊನೆಯ ಚಿತ್ರವಾಗಿತ್ತು. ಇದನ್ನು ಓದಿ: ಡ್ರೈವರಿಂದ ಸ್ಟಾರ್ ವರೆಗೂ ಎಲ್ಲರನ್ನೂ ಒಂದೇ ರೀತಿಯಾಗಿ ನೋಡ್ತಿದ್ರು: ಹರಿಕೃಷ್ಣ ಬಗ್ಗೆ ರವಿಶಂಕರ್ ಮಾತು

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=2283Fb13–Y

  • ಮುಖಾಮುಖಿ ಡಿಕ್ಕಿ ಹೊಡೆದು ನೈಸ್ ರಸ್ತೆ ಮಧ್ಯದಲ್ಲಿಯೇ ಹೊತ್ತಿ ಉರಿದ ಕಾರುಗಳು

    ಮುಖಾಮುಖಿ ಡಿಕ್ಕಿ ಹೊಡೆದು ನೈಸ್ ರಸ್ತೆ ಮಧ್ಯದಲ್ಲಿಯೇ ಹೊತ್ತಿ ಉರಿದ ಕಾರುಗಳು

    ಬೆಂಗಳೂರು: ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ, ರಸ್ತೆ ಮಧ್ಯದಲ್ಲಿಯೇ ಹೊತ್ತಿ ಉರಿದ ಘಟನೆ ಬೆಂಗಳೂರು-ಮೈಸೂರು ನೈಸ್ ರಸ್ತೆಯ ಒಕ್ಕರಾ ಸೇತುವೆ ಬಳಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

    ನಡೆದದ್ದು ಏನು?
    ಸ್ವಿಫ್ಟ್ ಕಾರಿನ ಚಾಲಕ ಮದ್ಯ ಸೇವಿಸಿ ಚಾಲನೆ ಮಾಡುತ್ತಿದ್ದ. ಕಾರು ನೈಸ್ ರಸ್ತೆಯ ಒಕ್ಕರಾ ಸೇತುವೆ ಬಳಿ ಬರುತ್ತಿದ್ದಂತೆ ನಿಯಂತ್ರಣ ತಪ್ಪಿ ಹಳ್ಳಕ್ಕೆ ನುಗ್ಗಿತ್ತು. ಈ ಕಾರಿನ ಹಿಂದೆ ಬರುತ್ತಿದ್ದ ಮತ್ತೊಂದು ಕಾರಿನ ಚಾಲಕ ರಸ್ತೆ ಮಧ್ಯದಲ್ಲಿಯೇ ತನ್ನ ಕಾರು ನಿಲ್ಲಿಸಿ ಹಳ್ಳಕ್ಕೆ ಬಿದ್ದಿದ್ದ ವ್ಯಕ್ತಿಯನ್ನು ರಕ್ಷಿಸಲು ಮುಂದಾಗಿದ್ದ. ಆದರೆ ಎದುರಿಗೆ ಬಂದ ಶೆವರ್ಲೆಟ್ ಕಾರು ರಸ್ತೆ ಮಧ್ಯೆ ನಿಂತಿದ್ದ ಕಾರಿಗೆ ಬಲವಾಗಿ ಡಿಕ್ಕಿ ಹೊಡಿದ್ದರಿಂದ ಬೆಂಕಿ ಕಾಣಿಸಿಕೊಂಡು, ಹೊತ್ತಿ ಉರಿಯಲು ಆರಂಭಿಸಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

    ರಸ್ತೆ ಮಧ್ಯದಲ್ಲಿಯೇ ಕಾರು ಹೊತ್ತಿ ಉರಿಯುತ್ತಿದ್ದರಿಂದ ಅನೇಕರು ಘಟನಾ ಸ್ಥಳದಲ್ಲಿ ಸೇರಿದ್ದರು. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳವು ಬೆಂಕಿಯನ್ನು ನಂದಿಸಿತು. ಇತ್ತ ಜನರು ಮೊಬೈಲ್ ಟಾರ್ಚ್ ಹಿಡಿದು ಹಳ್ಳಕ್ಕೆ ಬಿದ್ದಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚಿದ್ದಾರೆ. ಕಾರಿಗೆ ಬೆಂಕಿ ಹತ್ತಿದ್ದರಿಂದ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತಗೊಂಡು ಪ್ರಯಾಣಿಕರು ಪರದಾಡುವಂತಾಯಿತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರೈನಾ ಸಂಚರಿಸುತ್ತಿದ್ದ ಕಾರಿನ ಟೈರ್ ಸ್ಫೋಟ – ಅದೃಷ್ಟವಶಾತ್ ರೈನಾ ಪಾರು

    ರೈನಾ ಸಂಚರಿಸುತ್ತಿದ್ದ ಕಾರಿನ ಟೈರ್ ಸ್ಫೋಟ – ಅದೃಷ್ಟವಶಾತ್ ರೈನಾ ಪಾರು

    ಕಾನ್ಪುರ್: ಟೀಂ ಇಂಡಿಯಾ ಕ್ರಿಕೆಟಿಗ ಸುರೇಶ್ ರೈನಾ ಸಂಚರಿಸುತ್ತಿದ್ದ ರೇಂಜ್ ರೋವರ್ ಕಾರಿನ ಟೈರ್ ಸಿಡಿದಿದ್ದು, ಅದೃಷ್ಟವಶಾತ್ ರೈನಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಸುರೇಶ್ ರೈನಾ ಅವರು ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಭಾಗವಹಿಸಲು ಘಾಜಿಯಾಬಾದ್ ನಿಂದ ಕಾನ್ಪುರ್‍ಗೆ ರೇಂಜ್ ರೋವರ್ ಕಾರಲ್ಲಿ ತೆರಳುತ್ತಿದ್ದರು. ಈ ವೇಳೆ ಇಟಾವಾ ಬಳಿ ರೈನಾ ಸಂಚರಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಘಟನೆ ನಡೆದ ಬಳಿಕ ಸ್ಥಳೀಯ ಪೊಲೀಸರು ರೈನಾಗೆ ಮತ್ತೊಂದು ವಾಹನದ ವ್ಯವಸ್ಥೆ ಮಾಡಿ ಕಳುಹಿಸಿದ್ದಾರೆ. ಘಟನೆಯಲ್ಲಿ ರೈನಾ ಅವರಿಗೆ ಯಾವುದೇ ತರಹದ ಗಾಯಗಳಾಗಿಲ್ಲ ಎಂದು ಡಿಎಸ್‍ಪಿ ರಾಜೇಶ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ.

    ಇಟಾವಾದ ಫ್ರೆಂಡ್ಸ್ ಕಾಲೋನಿ ಬಳಿ ಅಪಘಾತ ನಡೆದಿದೆ. ಕಾರಿನ ಹಿಂಬದಿ ಟೈರ್ ಸ್ಫೋಟಗೊಂಡಿದೆ. ಆದರೆ ಕಾರಿನಲ್ಲಿ ಸ್ಟೆಪ್ನಿ ಇಲ್ಲದ ಕಾರಣ ರೈನಾಗೆ ಬದಲಿ ವ್ಯವಸ್ಥೆ ಕಲ್ಪಿಸಲಾಯಿತು ಎಂಬ ಮಾಹಿತಿ ಲಭ್ಯವಾಗಿದೆ.

    https://www.instagram.com/p/BY396ZuATWg/?taken-by=sureshraina3

    https://www.instagram.com/p/BYwqf1yAa9w/?taken-by=sureshraina3

  • ಫ್ಲೈಓವರ್‍ನಿಂದ ಬಿದ್ದ ಹೋಂಡಾ ಸಿಟಿ ಕಾರು- ಪರೀಕ್ಷೆಗೆ ಹೋಗ್ತಿದ್ದ 7 ವಿದ್ಯಾರ್ಥಿಗಳಲ್ಲಿ ಇಬ್ಬರ ಸಾವು

    ಫ್ಲೈಓವರ್‍ನಿಂದ ಬಿದ್ದ ಹೋಂಡಾ ಸಿಟಿ ಕಾರು- ಪರೀಕ್ಷೆಗೆ ಹೋಗ್ತಿದ್ದ 7 ವಿದ್ಯಾರ್ಥಿಗಳಲ್ಲಿ ಇಬ್ಬರ ಸಾವು

    ನವದೆಹಲಿ: ಫ್ಲೈಓವರ್ ನಿಂದ ಹೋಂಡಾ ಸಿಟಿ ಕಾರೊಂದು ಕೆಳಗೆ ಬಿದ್ದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಐವರು ಗಾಯಗೊಂಡಿರುವ ಘಟನೆ ಪಶ್ಚಿಮ ದೆಹಲಿಯ ಪಂಜಾಬಿ ಭಾಗ್ ಬಳಿ ನಡೆದಿದೆ.

    ಅಪಘಾತಕ್ಕೀಡಾದ ಕಾರಿನಲ್ಲಿದ್ದ 7 ಮಂದಿ ದೆಹಲಿ ಇನ್ಸ್ ಟಿಟ್ಯೂಟ್ ಆಫ್ ಪ್ರೊಫೆಷನಲ್ ಸ್ಟಡೀಸ್ ಅಂಡ್ ರಿಸರ್ಚ್‍ನ ವಿದ್ಯಾರ್ಥಿಗಳಾಗಿದ್ದು ಪರೀಕ್ಷೆ ಬರೆಯಲು ಹೋಗ್ತಿದ್ರು ಎಂದು ಪೊಲೀಸರು ಹೇಳಿದ್ದಾರೆ.

    ಅತೀ ವೇಗವಾಗಿ ಕಾರು ಚಾಲನೆ ಮಾಡಿದ್ದು, ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಕಾರು ಡಿವೈಡರ್‍ಗೆ ಡಿಕ್ಕಿ ಹೊಡೆದು ಗಾಳಿಯಲ್ಲಿ ಹಾರಿ ಫ್ಲೈಓವರ್ ಪಕ್ಕದಿಂದ ಕೆಳಗೆ ಬಿದ್ದಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇವರಲ್ಲಿ ಸಂಚಿತ್ ಎಂಬ ವಿದ್ಯಾರ್ಥಿ ಕಾರಿನ ಛಾವಣಿ ಮತ್ತು ಸೀಟಿನ ಮಧ್ಯೆ ಅಪ್ಪಚ್ಚಿಯಾಗಿದ್ದಾನೆ. ಇನ್ನು ಕಾರಿನಲ್ಲಿದ್ದ ಇಬ್ಬರು ಯುವತಿಯರಲ್ಲಿ ರಿತು ಎಂಬಾಕೆ ಸಾವನ್ನಪ್ಪಿದ್ದಾಳೆ.

    ಗಾಯಾಳುಗಳನ್ನ ಪ್ರಣವ್, ಗರಿಮಾ, ರಿಷಬ್, ರಜತ್ ಹಾಗೂ ರಾಜಾ ಎಂದು ಗುರುತಿಸಲಾಗಿದೆ. ರಜತ್ ಕಾರು ಚಾಲನೆ ಮಾಡುತ್ತಿದ್ದ ಎಂದು ಹೇಳಲಾಗಿದೆ. ಈ ಎಲ್ಲಾ ವಿದ್ಯಾರ್ಥಿಗಳು ಎರಡನೇ ಸೆಮಿಸ್ಟರ್ ಪರೀಕ್ಷೆ ಬರೆಯಲು ಹೋಗ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಘಟನಾ ಸ್ಥಳದಲ್ಲಿ ಹಾಲ್ ಟಿಕೆಟ್ ಹಾಗೂ ಪುಸ್ತಕಗಳು ಪತ್ತೆಯಾಗಿವೆ.

    ಸಂಪುರ್ಣ ನಜ್ಜುಗುಜ್ಜಾಗಿದ್ದ ಕಾರಿನಿಂದ ವಿದ್ಯಾರ್ಥಿಗಳನ್ನು ಹೊರಗೆಳೆಯಲು ಪೊಲೀಸರು ಹರಸಾಹಸಪಟ್ಟಿದ್ದಾರೆ. ಸದ್ಯ ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.