Tag: car accident

  • ಬಾಲಿವುಡ್‌ ನಟ ಸೋನು ಸೂದ್ ಪತ್ನಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ

    ಬಾಲಿವುಡ್‌ ನಟ ಸೋನು ಸೂದ್ ಪತ್ನಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ

    ಬಾಲಿವುಡ್ ನಟ ಸೋನು ಸೂದ್  (Sonu Sood) ಪತ್ನಿ ಸೋನಾಲಿ (Sonali Sood) ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿದೆ. ಮುಂಬೈ- ನಾಗಪುರ ಹೆದ್ದಾರಿಯಲ್ಲಿ ಮಾ.24ರ ರಾತ್ರಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಪ್ರಯಾಣ ಮಾಡುವಾಗ ಸೋನು ಸೂದ್ ಪತ್ನಿ ಜೊತೆ ಸಹೋದರಿ ಮತ್ತು ಸಹೋದರಿಯ ಮಗ ಇದ್ದರು. ಈ ಮೂವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಸೋನಾಲಿ ಸೂದ್ ಪ್ರಯಾಣಿಸುತ್ತಿದ್ದ ಕಾರು, ಟ್ರಕ್‌ಗೆ ಹೊಡೆದು ಅಪಘಾತ ಸಂಭವಿಸಿದೆ. ಸೋನು ಸೂದ್ ಪತ್ನಿ ಸೇರಿದಂತೆ ಇಬ್ಬರ ಸ್ಥಿತಿಯು ಗಂಭೀರವಾಗಿದೆ. ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ಕೇಳ್ತಿದ್ದಂತೆ ಸೋನು ಸೂದ್ ಆಗಮಿಸಿದ್ದಾರೆ. ಮುಂದಿನ 48ರಿಂದ 72 ಗಂಟೆಗಳ ಕಾಲ ಸೋನಾಲಿ ಮತ್ತು ಸಹೋದರಿಯ ಮಗನಿಗೆ ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುವುದು ಎಂದು ಆಸ್ಪತ್ರೆಯ ಮೂಲಗಳಿಂದ ವರದಿಯಾಗಿದೆ. ಸೋನಾಲಿ ಸಹೋದರಿಗೆ ಹೆಚ್ಚಿನ ಗಾಯಗಳಾಗಿಲ್ಲ. ಸಣ್ಣ ಪುಟ್ಟ ಗಾಯಗಳಾಗಿವೆ. ಅವರು ಚೇತರಿಸಿಕೊಳ್ತಿದ್ದಾರೆ. ಇದನ್ನೂ ಓದಿ:ರೀಲ್ಸ್ ಮಾಡಿದ ಜಾಗದಲ್ಲಿ ವಿನಯ್‌, ರಜತ್‌ರನ್ನು ಸ್ಥಳ ಮಹಜರಿಗೆ ಕರೆತಂದ ಪೊಲೀಸರು

    ಸೋನು ಸೂದ್ ಸಿನಿಮಾದಲ್ಲಿ ವಿಲನ್ ಆಗಿದ್ರೂ ಕೂಡ ರಿಯಲ್ ಲೈಫ್‌ನಲ್ಲಿ ಹೀರೋ ಆಗಿದ್ದಾರೆ. ಸಂಕಷ್ಟದಲ್ಲಿರುವ ಜನರಿಗೆ ಅವರು ಸಹಾಯ ಮಾಡುತ್ತಲೇ ಇರುತ್ತಾರೆ. ಇಂತಹ ನಟನ ಪತ್ನಿಗೆ ಈಗ ಕಾರು ಅಪಘಾತವಾಗಿರೋದು ಫ್ಯಾನ್ಸ್‌ಗೆ ಬೇಸರ ತರಿಸಿದೆ. ಆದಷ್ಟು ಬೇಗ ಅವರು ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

    ಇನ್ನೂ ಸೋನಾಲಿ ಜೊತೆ ಸೋನು ಸೂದ್ ಅವರು 1996ರಲ್ಲಿ ಮದುವೆಯಾದರು. ಈ ದಂಪತಿಗೆ ಇಬ್ಬರೂ ಗಂಡು ಮಕ್ಕಳಿದ್ದಾರೆ.

  • ವಿಜಯಪುರ| ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ – ಮೂವರು ಸಾವು

    ವಿಜಯಪುರ| ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ – ಮೂವರು ಸಾವು

    ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ವಿಜಯಪುರ (Vijayapura)ಜಿಲ್ಲೆಯ ಉಕ್ಕಲಿ (Ukkali) ಗ್ರಾಮದ ಹೆಗಡಿಹಾಳ ಕ್ರಾಸ್ ಬಳಿ ನಡೆದಿದೆ.

    ಮೃತರನ್ನು ಉತ್ನಾಳ ಗ್ರಾಮದ ನಿವಾಸಿಗಳಾದ ಭೀರಪ್ಪ ಗೋಡೆಕರ್ (26), ಹಣಮಂತ ಕಡ್ಲಿಮಟ್ಟಿ (32) ಎಂದು ಗುರುತಿಸಲಾಗಿದೆ. ಇನ್ನೋರ್ವನ ಗುರುತು ಪತ್ತೆಯಾಗಿಲ್ಲ. ಗಂಭೀರವಾಗಿ ಗಾಯಗೊಂಡವ ಉಮೇಶ್ (30) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ರಾಜ್ಯದಲ್ಲಿ ವಿದ್ಯುತ್ ಕೊರತೆ ಇದ್ರೂ ರೈತರಿಗೆ 7 ಗಂಟೆ ವಿದ್ಯುತ್ ಪೂರೈಕೆ: ಕೆ.ಜೆ.ಜಾರ್ಜ್

    ಜಿಲ್ಲೆಯ ಉಕ್ಕಲಿ ಗ್ರಾಮದ ಹೆಗಡಿಹಾಳ ಕ್ರಾಸ್ ಬಳಿ ನಾಲ್ವರು ಸ್ವಿಫ್ಟ್ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ್ದು, ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಪಲ್ಟಿ ಹೊಡೆದು ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನೋರ್ವನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

    ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಕೇವಲ 1 ಪಂದ್ಯವಾಡಿ 869 ಕೋಟಿ ನಷ್ಟ – ಭಾರೀ ಸಂಕಷ್ಟದಲ್ಲಿ ಪಾಕ್‌ ಬೋರ್ಡ್‌

     

  • ವಿಜಯೇಂದ್ರ ಜೊತೆ ಬರುತ್ತಿದ್ದ ಸ್ನೇಹಿತರ ಕಾರಿಗೆ ಲಾರಿ ಡಿಕ್ಕಿ – ಚಾಲಕ ಪಾರು

    ವಿಜಯೇಂದ್ರ ಜೊತೆ ಬರುತ್ತಿದ್ದ ಸ್ನೇಹಿತರ ಕಾರಿಗೆ ಲಾರಿ ಡಿಕ್ಕಿ – ಚಾಲಕ ಪಾರು

    ಚಿಕ್ಕಮಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಅವರ ಸ್ನೇಹಿತರ ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಚಿಕ್ಕಮಗಳೂರು (Chikkamagaluru) ತಾಲೂಕಿನ ಲಿಕ್ಯಾ ಕ್ರಾಸ್ ಬಳಿ ನಡೆದಿದೆ. ಇದನ್ನೂ ಓದಿ: ಪಂದ್ಯಕ್ಕೆ ಮಳೆ ಅಡ್ಡಿ| ಆಸ್ಟ್ರೇಲಿಯಾ ಸೆಮಿಗೆ ಹೋದ್ರೂ ಅಫ್ಘಾನ್‌ಗೆ ಇನ್ನೂ ಇದೆ ಚಾನ್ಸ್‌!

    ಕಡೂರು ತಾಲೂಕಿನ ಬೀರೂರಿನ ಹರೀಶ್ ಅವರಿಗೆ ಸೇರಿದ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಚಿಕ್ಕಮಗಳೂರಿಗೆ ಆಗಮಿಸಿದ್ದ ವಿಜಯೇಂದ ಅವರನನ್ನು ಮಾತನಾಡಿಸಲು ಸ್ನೇಹಿತ ಹರೀಶ್ ಬಂದಿದ್ದರು. ಮಾತನಾಡಿಸಿ ವಾಪಸ್ ಬೀರೂರಿಗೆ ವಿಜಯೇಂದ್ರ ಕಾರಿನ ಹಿಂದೆ ಹೋಗುವಾಗ ಅಪಘಾತ ಸಂಭವಿಸಿದೆ.

    ಕಾರಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು, ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಯುರೋಪಿಯನ್ ಒಕ್ಕೂಟದ ಉನ್ನತ ನಿಯೋಗದ ಜೊತೆ ಹೆಚ್‌ಡಿಕೆ ಮಹತ್ವದ ಮಾತುಕತೆ- ಏನೇನು ಹೂಡಿಕೆ ಚರ್ಚೆಯಾಗಿದೆ?

  • ಬಂಟ್ವಾಳ| ಚಾಲಕಿ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಕಾರು – ವೃದ್ಧೆ ಸಾವು

    ಬಂಟ್ವಾಳ| ಚಾಲಕಿ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಕಾರು – ವೃದ್ಧೆ ಸಾವು

    ಮಂಗಳೂರು: ಚಾಲಕಿಯ ನಿಯಂತ್ರಣ ಕಳೆದುಕೊಂಡ ಕಾರು ಅಂಗಡಿಗೆ ನುಗ್ಗಿ, ಅಂಗಡಿ ಮುಂದೆ ಕುಳಿತ್ತಿದ್ದ 91 ವರ್ಷದ ವೃದ್ಧೆ ಸಾವನ್ನಪ್ಪಿರುವ ಘಟನೆ ಬಂಟ್ವಾಳದ ಚೆನ್ನೈತ್ತೋಡಿ ಗ್ರಾಮದ ಪಾಲೆದಮರ ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಮತ್ತೋರ್ವ ವ್ಯಕ್ತಿ ಗಾಯಗೊಂಡಿದ್ದಾರೆ.

    ಅಪಘಾತದ ಭೀಕರ ದೃಶ್ಯ ಅಂಗಡಿ ಮುಂದೆ ಅಳವಡಿಸಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬಂಟ್ವಾಳದ ವಾಮದಪದವು ನಿವಾಸಿ 91 ವರ್ಷದ ಸುಮತಿ ಸಾವನ್ನಪ್ಪಿದ ದುರ್ದೈವಿ. ಮತ್ತೋರ್ವ ಗ್ರಾಹಕ ಸ್ಥಳೀಯ ನಿವಾಸಿ ಲೂಯಿಸ್ ಡಿಕೋಸ್ತಾ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಶೋಭಾ ಎಂಬವರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಅಂಗಡಿಗೆ ನುಗ್ಗಿ ಬಂದಿದೆ. ಈ ವೇಳೆ ಅಂಗಡಿಗೆ ಬಂದಿದ್ದ ಗ್ರಾಹಕ ಲೂಯಿಸ್ ಡಿಕೋಸ್ತಾರಿಗೆ ಕಾರು ಡಿಕ್ಕಿ ಹೊಡೆದು, ಬಳಿಕ ಅಲ್ಲೇ ಕೂತಿದ್ದ ವೃದ್ಧೆ ಸುಮತಿಗೆ ಡಿಕ್ಕಿಯಾಗಿದೆ.

    ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವೃದ್ಧೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಸಿನಿಮೀಯ ಶೈಲಿಯಲ್ಲಿ ಮೂವರು ಪಾದಚಾರಿಗಳ ಮೇಲೆ ಹರಿದ ಕಾರು – ಓರ್ವ ಸಾವು

    ಸಿನಿಮೀಯ ಶೈಲಿಯಲ್ಲಿ ಮೂವರು ಪಾದಚಾರಿಗಳ ಮೇಲೆ ಹರಿದ ಕಾರು – ಓರ್ವ ಸಾವು

    ಮಂಗಳೂರು: ಸಿನಿಮೀಯ ಶೈಲಿಯಲ್ಲಿ ಮೂವರು ಪಾದಚಾರಿಗಳ ಮೇಲೆ ಕಾರು ಹರಿದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ಮಂಗಳೂರಿನ (Mangaluru) ಹೊರವಲಯದ ಕುಳಾಯಿ (Kulai) ಎಂಬಲ್ಲಿ ನಡೆದಿದೆ.

    ಮೃತನನ್ನು ರಾಯಚೂರು (Raichuru) ಜಿಲ್ಲೆಯ ಸಿಂಧನೂರಿನ ದೀಪುಗೌಡ (50) ಎಂದು ಗುರುತಿಸಲಾಗಿದ್ದು, ಗಾಯಗೊಂಡಿರುವ ಕೊಪ್ಪಳದ ಕರಟಗಿಯ ಪ್ರದೀಪ್ ಕೊಲ್ಕಾರ್, ಮಂಗಳೂರಿನ ಕೋಡಿಕೆರೆ ನಿವಾಸಿ ನಾಗರಾಜ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಇದನ್ನೂ ಓದಿ: Champions Trophy: ಟಿವಿಯಲ್ಲಿ ಭಾರತ-ಪಾಕಿಸ್ತಾನ ಹೈವೋಲ್ಟೇಜ್‌ ಪಂದ್ಯ ವೀಕ್ಷಿಸಿದ ಹೆಚ್‌ಡಿಕೆ

    ಕುಳಾಯಿಯ ಶಂಕರ ಭವನ ಹೋಟೆಲ್‌ನಿಂದ ಹೊರಬಂದು 66ನೇ ರಾಷ್ಟ್ರೀಯ ಹೆದ್ದಾರಿಯನ್ನು ದಾಟುತ್ತಿದ್ದರು. ಈ ವೇಳೆ ಉಡುಪಿ ಕಡೆಯಿಂದ ಬಂದ ಕೆಎ-19-ಎಎ-0746 ನಂಬರ್‌ನ ಪಿಕಪ್ ವಾಹನ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಮುಂದೆ ತಳ್ಳಲ್ಪಟ್ಟು, ರಸ್ತೆ ದಾಟುತ್ತಿದ್ದ ಮೂವರು ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಪಕ್ಕಕ್ಕೆ ಬಿದ್ದಿದ್ದು, ಇನ್ನೋರ್ವನನ್ನು ಎಳೆದುಕೊಂಡು ಹೋಗಿದೆ.

    ಕೂಡಲೇ ಮೂವರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಮಾರ್ಗ ಮಧ್ಯೆ ಓರ್ವ ಸಾವನ್ನಪ್ಪಿದ್ದಾನೆ. ಇನ್ನುಳಿದ ಇಬ್ಬರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಮಂಗಳೂರು ಸಂಚಾರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ರಾಜಣ್ಣ ಮಾತಾಡಿದ್ದು ತಪ್ಪು – ಹಿರಿಯರು ತಪ್ಪು ಹಾದಿಯಲ್ಲಿ ಹೋದ್ರೆ ನಾವು ದಾರಿ ತಪ್ತೀವಿ: ಶಿವಗಂಗಾ ಬಸವರಾಜ್

     

  • ಕಾರು-ಇನ್ನೋವಾ ನಡುವೆ ಭೀಕರ ಅಪಘಾತ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

    ಕಾರು-ಇನ್ನೋವಾ ನಡುವೆ ಭೀಕರ ಅಪಘಾತ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

    ಮಂಗಳೂರು: ಕಾರು ಹಾಗೂ ಇನ್ನೋವಾ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ.

    ಬಂಟ್ವಾಳದ ಕಾವಲ್ ಕಟ್ಟೆ ಬಳಿ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಏಕಾಏಕಿ ಎಡದಿಂದ ಬಲಗಡೆಗೆ ಕಾರು ತಿರುವು ಪಡೆಯಲು ಮುಂದಾಗಿದೆ. ಈ ವೇಳೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.

    ಡಿಕ್ಕಿಯ ರಭಸಕ್ಕೆ ಕಾರು ಪಲ್ಟಿಯಾಗಿದೆ. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

  • ವಿಸಿ ನಾಲೆಗೆ ಕಾರು ಬಿದ್ದು ದುರಂತ: ಮೃತರ ಸಂಖ್ಯೆ 3ಕ್ಕೆ ಏರಿಕೆ

    ವಿಸಿ ನಾಲೆಗೆ ಕಾರು ಬಿದ್ದು ದುರಂತ: ಮೃತರ ಸಂಖ್ಯೆ 3ಕ್ಕೆ ಏರಿಕೆ

    ಮಂಡ್ಯ: ಸೋಮವಾರ ವಿಸಿ ನಾಲೆಗೆ ಕಾರು ಬಿದ್ದ ಪ್ರಕರಣದಲ್ಲಿ ಸಾವಿನ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಸಕಾರು ನಾಲೆಗೆ ಬಿದ್ದಾಗಿನಿಂದ ಪೀರ್‌ಖಾನ್ ನಾಪತ್ತೆಯಾಗಿದ್ದರು. ಇದೀಗ ನಾಪತ್ತೆಯಾಗಿದ್ದ ಪೀರ್‌ಖಾನ್ ಶವ ತಿಬ್ಬನಹಳ್ಳಿ ಬಳಿಯ ವಿಸಿ ನಾಲೆಯಲ್ಲಿ (VC Canal) ಪತ್ತೆಯಾಗಿದೆ.

    ಕತ್ತಲಾದ ಹಿನ್ನೆಲೆ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆಯನ್ನು ಮಂಗಳವಾರಕ್ಕೆ ಮುಂದೂಡಿದ್ದರು. ಶೋಧ ಕಾರ್ಯ ನಿಲ್ಲಿಸಿದರು ಸಹ ಕುಟುಂಬಸ್ಥರು, ಸ್ನೇಹಿತರು ಸೇರಿ ತಡರಾತ್ರಿವರೆಗೂ ಫೀರ್ ಖಾನ್ ಮತ್ತು ಅಸ್ಲಂಪಾಷಾಗಾಗಿ ಹುಡುಕಾಟ ನಡೆಸಿದರು. ನಾಲೆಯಲ್ಲಿ ನೀರು ಸ್ಥಗಿತ ಹಿನ್ನೆಲೆ ಮಂಗಳವಾರ ಕಾರ್ಯಾಚರಣೆ ಮುಂದುವರಿಸಿದ್ದರು. ಈ ವೇಳೆ ನಾಲೆಯಲ್ಲಿ ಫೀರ್ ಖಾನ್ ಶವ ಪತ್ತೆಯಾಗಿದೆ.ಇದನ್ನೂ ಓದಿ: ಕೊಟ್ಟೂರು ಗುರುಬಸವೇಶ್ವರ ರಥದೊಳಗಿನ ಸ್ಟೇರಿಂಗ್ ಕಟ್ – ತಪ್ಪಿದ ಭಾರೀ ಅನಾಹುತ

    ಈ ಪ್ರಕರಣದಲ್ಲಿ ಬದುಕುಳಿದ ನಯಾಜ್‌ಗೆ ಮಂಡ್ಯ ಮಿಮ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕುತ್ತಿಗೆಗೆ ತೀವ್ರ ಪೆಟ್ಟಾಗಿರುವುದರಿಂದ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ವೈದ್ಯರು ನಯಾಜ್‌ನನ್ನು 48 ಗಂಟೆಗಳ ತೀವ್ರ ನಿಗಾ ಘಟಕದಲ್ಲಿಟ್ಟಿದ್ದಾರೆ.

    ಮಂಡ್ಯದ ವಿಸಿ ನಾಲೆಯಲ್ಲಿ ದುರಂತಗಳ ಸರಮಾಲೆಯಾಗಿದೆ. ಅವಘಡ ಸಂದರ್ಭ ಮಾತ್ರ ಅರ್ಧಂಬರ್ಧ ಕೆಲಸ ಮಾಡುವ ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಜನರು ಆಕ್ರೋಶ ಹೊರಹಾಕಿದರು.

    ಹುಲಿಕೆರೆ- ಶಿವಳ್ಳಿ ಮಾರ್ಗದ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಾದ ಪರಿಸ್ಥಿತಿ ಉಂಟಾಗಿದೆ. ಈ ಹಿಂದೆ ಇದೇ ನಾಲೆಗೆ ಕಾರು ಬಿದ್ದು ಚಾಲಕ ಲೋಕೇಶ್ ಸಾವನ್ನಪ್ಪಿದ್ದರು. ನಂತರ ಜಿಲ್ಲಾಡಳಿತ 500 ಮೀಟರ್‌ನಷ್ಟು ದೂರ ಮಾತ್ರ ಬ್ಯಾರಿಕೇಡ್ ಅಳವಡಿಕೆ ಮಾಡಿತ್ತು. ಉಳಿದ ನಾಲ್ಕು ಕಿಲೋ ಮೀಟರ್ ಬ್ಯಾರಿಕೇಡ್ ಅಳವಡಿಸಿದ್ದರೆ ಈ ಅಪಘಾತ ನಡೆಯುತ್ತಿರಲಿಲ್ಲ. ತಕ್ಷಣ ತಡೆಗೋಡೆ ನಿರ್ಮಿಸುವಂತೆ ಸಾರ್ವಜನಿಕರು ಜಿಲ್ಲಾಡಳಿತಕ್ಕೆ ಒತ್ತಾಯಿಸಿದರು.ಇದನ್ನೂ ಓದಿ: ‘ಪುಷ್ಪ 2’ ವಿವಾದದ ಬಳಿಕ ಎಚ್ಚೆತ್ತ ಅಲ್ಲು ಅರ್ಜುನ್

  • ಮಂಡ್ಯ | ವಿಸಿ ನಾಲೆಗೆ ಕಾರು ಪಲ್ಟಿ – ಓರ್ವ ಸಾವು, ಇಬ್ಬರು ನಾಪತ್ತೆ

    ಮಂಡ್ಯ | ವಿಸಿ ನಾಲೆಗೆ ಕಾರು ಪಲ್ಟಿ – ಓರ್ವ ಸಾವು, ಇಬ್ಬರು ನಾಪತ್ತೆ

    – ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಗೆ ಸ್ಥಳೀಯರಿಂದ ತರಾಟೆ

    ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ (VC Canal) ಕಾರು ಬಿದ್ದು ಇಬ್ಬರು ಸಾವನ್ನಪ್ಪಿರುವ ಘಟನೆ ಮಂಡ್ಯ (Mandya) ತಾಲೂಕಿನ ತಿಬ್ಬನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಕಾರು ಮಾಲೀಕ ಫಯಾಜ್ ಅಲಿಯಾಸ್‌ ಬ್ಯಾಟರಿ ಸಾವನ್ನಪ್ಪಿದ್ದು, ಅಸ್ಲಂ ಪಾಷ, ಪೀರ್ ಖಾನ್ ನಾಪತ್ತೆಯಾಗಿದ್ದಾರೆ. ಕಾರಿನಲ್ಲಿದ್ದ ನಯಾಜ್ ಎಂಬಾತನನ್ನ ರಕ್ಷಣೆ ಮಾಡಲಾಗಿದೆ. ಕಾರಿನಲ್ಲಿದ್ದ ನಾಲ್ವರು ಮಂಡ್ಯದ ಹಾಲಹಳ್ಳಿ ಸ್ಲಂನ ನಿವಾಸಿಗಳು ಎಂದು ಹೇಳಲಾಗಿದೆ. ಇದನ್ನೂ ಓದಿ: ಜನರು ಅವರನ್ನು ಘೋಷಣೆ ಕೂಗಲು ಕಳುಹಿಸಿದ್ದರೆ ಕೂಗಲು ಬಿಡಿ – ವಿಪಕ್ಷಗಳ ವಿರುದ್ಧ ಸ್ಪೀಕರ್ ಗರಂ

    ಶಿವಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳೀಯರ ಸಹಾಯದಿಂದ ಪೊಲೀಸರು ಕಾರನ್ನು ಮೇಲೆತ್ತಿದ್ದಾರೆ. ನಾಲೆಗೆ ತಡೆಗೋಡೆ ಇಲ್ಲದ ಕಾರಣ ದುರಂತರ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಘಟನೆ ಕುರಿತು ʻಪಬ್ಲಿಕ್ ಟಿವಿʼಗೆ ಮಾಹಿತಿ ನೀಡಿರುವ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಕಾರಿನಲ್ಲಿ ಇದ್ದವರು ಮಂಡ್ಯದ ಹಾಲಹಳ್ಳಿ ಸ್ಲಂನವರು.‌ ಓರ್ವ ಸಾವನ್ನಪ್ಪಿದ್ದಾನೆ. ಮತ್ತೋರ್ವನನ್ನ ರಕ್ಷಣೆ ಮಾಡಲಾಗಿದೆ. ಉಳಿದ ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರೈಲು ನಿಲ್ಲೋದಕ್ಕೂ ಮುನ್ನ ಇಳಿಯಲು ಹೋಗಿ ಅವಘಡ – ಹಳಿಗೆ ಸಿಲುಕಿ 2 ಕಾಲು ಕಟ್, ಯುವಕ ಸಾವು

    ಓವರ್‌ಟೇಕ್ ಮಾಡುವ ವೇಳೆ ಈ ಘಟನೆ ಜರುಗಿದೆ. ಸದ್ಯ ಅಗ್ನಿಶಾಮಕದಳದೊಂದಿಗೆ ಕಾರ್ಯಾಚರಣೆ ನಡೆಯುತ್ತಿದೆ. ನೀರು ಹೆಚ್ಚಿರುವ ಕಾರಣ ಕಾರ್ಯಾಚರಣೆ ಕಷ್ಟವಾಗುತ್ತಿದೆ. ನೀರನ್ನು ನಿಲ್ಲಿಸಲು ನೀರಾವರಿ ಇಂಜಿನಿಯರ್‌ಗೆ ತಿಳಿಸಿದ್ದೇವೆ. ಕೆಲವೊಂದು ಕಡೆ ತಡೆಗೋಡೆ ಇದೆ, ಕೆಲವು ಕಡೆ ಈಗ ನಿರ್ಮಾಣವಾಗುತ್ತಿದೆ. ಇನ್ನೂ ಕೆಲವೆಡೆ ತಡೆಗೋಡೆ ನಿರ್ಮಾಣವಾಗಿಲ್ಲ ಎಂದು ತಿಳಿಸಿದ್ದಾರೆ.

    ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಗೆ ತರಾಟೆ
    ದುರಂತದ ಸ್ಥಳಕ್ಕೆ ಬಂದ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಗೆ ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಎಲ್ಲವೂ ನಿಮ್ಮಿಂದಲೇ, ನೀವೇ ದುರಂತಕ್ಕೆ ಕಾರಣ ಅಂತ ಎಂಜಿನಿಯರ್‌ ಜಗದೀಶ್‌ಗೆ ಸ್ಥಳೀಯರು ಕ್ಲಾಸ್ ತೆಗೆದುಕೊಂಡಿದ್ದಾರೆ. ಅಲ್ಲದೇ ತಡೆಗೋಡೆ ನಿರ್ಮಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.

  • ಆಸ್ಪತ್ರೆಯಿಂದ ಲಕ್ಷ್ಮಿ ಹೆಬ್ಬಾಳ್ಕರ್‌ ಡಿಸ್ಚಾರ್ಜ್‌ – ಸಚಿವೆ ಭಾವುಕ

    ಆಸ್ಪತ್ರೆಯಿಂದ ಲಕ್ಷ್ಮಿ ಹೆಬ್ಬಾಳ್ಕರ್‌ ಡಿಸ್ಚಾರ್ಜ್‌ – ಸಚಿವೆ ಭಾವುಕ

    – ಬದುಕಿನ ಕೊನೇ ಹಂತ ನೋಡಿ ಬದುಕಿ ಬಂದಿದ್ದೇನೆ ಎಂದ ಸಚಿವೆ

    ಬೆಳಗಾವಿ: ಕಾರು ಅಪಘಾತಕ್ಕೀಡಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebbalkar) ಅವರಿಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಕಳೆದ 13 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಹೆಬ್ಬಾಳ್ಕರ್‌ ಗುಣಮುಖರಾಗಿ ಹೊರಬಂದಿದ್ದಾರೆ.

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಇದೊಂದು ಆಗಬಾರದ ದುರ್ಘಟನೆ. ಇವತ್ತು ಬದುಕಿನ ಕೊನೆಯ ಹಂತವನ್ನ ನೋಡಿ ಹೋರಾಟ ಮಾಡಿ ಬದುಕಿ ಬಂದಿದ್ದೇನೆ. ಇದಕ್ಕೆಲ್ಲ ಹಿರಿಯರ ಆಶೀರ್ವಾದ, ತಂದೆ ತಾಯಿ ಆಶೀರ್ವಾದ ಕಾರಣ. ಬಹಳಷ್ಟು ಜನರಿಗೆ ಧನ್ಯವಾದ ಹೇಳ್ತೀನಿ. ಏಕೆಂದರೆ ರಾಜ್ಯದ ಮಠಾಧೀಶರು, ಪೂಜ್ಯರು ಶೀಘ್ರ ಗುಣಮುಖರಾಗಿ ಅಂತಾ ಆಶೀರ್ವಾದ ಮಾಡಿದರು. ಇದು ನನಗೆ ಬಹಳಷ್ಟು ಶಕ್ತಿ, ಧೈರ್ಯ ತಂದುಕೊಟ್ಟಿತು ಎಂದರು.

    ಅಲ್ಲದೇ ರಾಜ್ಯದ ಸಿಎಂ, ಡಿಸಿಎಂ, ಹಾಲಿ ಮತ್ತು ಮಾಜಿ ಶಾಸಕರು, ಸಚಿವರು ಬಂದು ನನ್ನ ಅರೋಗ್ಯ ವಿಚಾರಿಸಿದ್ರು, ಶೀಘ್ರ ಚೇತರಿಕೆಯಾಗುವಂತೆ ಹಾರೈಸಿದ್ರು. ಸುರ್ಜೇವಾಲಾ ಅವರು ಆರೋಗ್ಯ ವಿಚಾರಿಸಿ ಧೈರ್ಯ ಹೇಳಿದ್ರು. ಅವರೆಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ಮುಖ್ಯವಾಗಿ ಡಾ.ರವಿ ಪಾಟೀಲ್ ಅವರ ವೈದ್ಯರ ತಂಡಕ್ಕೆ ಧನ್ಯವಾದ ಹೇಳ್ತೀನಿ. ಇದರೊಂದಿಗೆ ಕ್ಷೇತ್ರದ ಎಲ್ಲ ಮತದಾರರು, ನನಗಾಗಿ ಪೂಜೆ ಸಲ್ಲಿಸಿದ ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ. ಆ ಕ್ಷಣ ಪುನರ್ಜನ್ಮ ಅನಿಸುತ್ತೆ ಎಂದು ಭಾವುಕರಾದರು.

    ನನಗೆ ಜವಾಬ್ದಾರಿ ಬಹಳ ಇದೆ, ಮಾರ್ಚ್ ನಲ್ಲಿ ಬಜೆಟ್ ಮಂಡನೆ ಮಾಡಬೇಕು. ವಿಡಿಯೋ ಕಾನ್ಫರೆನ್ಸ್‌ ಮೂಲಕ ಕೆಲಸ ಮಾಡ್ತಿದ್ದೇನೆ. ವೈದ್ಯರು ಇನ್ನೂ ಮೂರು ವಾರಗಳ ಕಾಲ ರೆಸ್ಟ್ ಹೇಳಿದ್ದಾರೆ ಎಂದು ತಿಳಿಸಿದರು.

    ಇದೇ ವೇಳೆ ಛಲವಾದಿ ನಾರಾಯಣಸ್ವಾಮಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಕಲ್ಲು ಹೃದಯ ಅಥವಾ ಹೃದಯ ಇಲ್ಲದ ಜನ ಅಂತಲೇ ಹೇಳಬಹುದು. ಅವರ ಆರೋಪಕ್ಕೆ ನಾನು ಉತ್ತರ ಕೊಡಲ್ಲ. ಅವರ ಬುದ್ಧಿ ಹುಡಕಬೇಕಾಗುತ್ತೆ ಎಂದು ಛಲವಾದಿ ನಾರಾಯಣಸ್ವಾಮಿಗೆ ತಿರುಗೇಟು ನೀಡಿದರು.

    ಸಂಕ್ರಾಂತಿ ಹಬ್ಬದಂದು ಹಟ್ಟಿಹೊಳಿ ವೀರಭದ್ರೇಶ್ವರ ದೇವಸ್ಥಾನ ಹಾಗೂ ಮಲಪ್ರಭಾ ನದಿ ದಂಡೆಯಲ್ಲಿ ಪುಣ್ಯ ಸ್ಥಾನಕ್ಕೆ ಹೋಬೇಕಿತ್ತು. ಹಾಗಾಗಿ ಪ್ಲ್ಯಾನ್‌ ಮಾಡಿ ಹೊರಟಿದ್ದೆವು. ತುರ್ತಾಗಿ ಹೊರಟ ಕಾರಣ ಎಸ್ಕಾರ್ಟ್ ಹೇಳಲಿಲ್ಲ ಎಂದು ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದರು.

    ಹೆಬ್ಬಾಳ್ಕರ್‌ ಅವರಿಗೆ ಏನಾಗಿತ್ತು?
    ಇದೇ ತಿಂಗಳ ಜ.14ರಂದು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು. ಸಚಿವೆ ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

  • ಮರಕ್ಕೆ ಕಾರು ಡಿಕ್ಕಿ – ಸ್ಥಳದಲ್ಲೇ ಮೂವರು ಸಾವು

    ಮರಕ್ಕೆ ಕಾರು ಡಿಕ್ಕಿ – ಸ್ಥಳದಲ್ಲೇ ಮೂವರು ಸಾವು

    ವಿಜಯಪುರ: ಮರಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ವಿಜಯಪುರ (Vijayapura) ಜಿಲ್ಲೆಯ ಕನ್ನಾಳ ಕ್ರಾಸ್ (Kannal Cross) ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.

    ಮೃತರನ್ನು ಅಭಿಷೇಕ್ ಸಾವಂತ್ (23), ವಿಜಯಕುಮಾರ್ ಔರಂಗಾಬಾದ್ (24) ರಾಜು ಬಿರಾದಾರ (23) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಕಠಿಣ ಕಾನೂನು ಜಾರಿ: ಪರಮೇಶ್ವರ್

    ಕಾರಿನಲ್ಲಿ ಐವರು ಸೊಲ್ಲಾಪುರಕ್ಕೆ ಹೋಗಿದ್ದರು. ತಡರಾತ್ರಿ ವಾಪಸ್ ಬರುವಾಗ ಈ ಅವಘಡ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

    ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತರ ಶವಗಳನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಗಾಯಾಳುಗಳು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಮತ್ತೆ ಕೋಟಿ ಒಡೆಯನಾದ ಮಾದಪ್ಪ – 30 ದಿನಗಳಲ್ಲಿ 2.29 ಕೋಟಿ ಕಾಣಿಕೆ ಸಂಗ್ರಹ