ತುಮಕೂರು: ಕನ್ನಡ ಬಿಗ್ ಬಾಸ್ ಸ್ಪರ್ಧಿ ತುಕಾಲಿ ಸಂತೋಷ್ (Tukali Santosh Car Accident) ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡಿದ್ದ ಆಟೋ ಚಾಲಕ ಮೃತಪಟ್ಟಿದ್ದಾರೆ.
ಕುಣಿಗಲ್ ತಾಲೂಕು ಕೋಡಿಹಳ್ಳಿಪಾಳ್ಯ ನಿವಾಸಿ ಜಗದೀಶ್ (44) ಮೃತ ದುರ್ದೈವಿ. ಅಪಘಾತದಲ್ಲಿ ಗಾಯಗೊಂಡಿದ್ದ ಜಗದೀಶ್ ಅವರನ್ನು ಕೂಡಲೇ ಕುಣಿಗಲ್ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಗ್ಗಿನ ಜಾವ ಕೊನೆಯುಸಿರೆಳೆದಿದ್ದಾರೆ.
ನಡೆದಿದ್ದೇನು..?:ಬುಧವಾರ ರಾತ್ರಿ ಶೂಟಿಂಗ್ ಮುಗಿಸಿಕೊಂಡು ತುಮಕೂರು ಕಡೆಯಿಂದ ಕುಣಿಗಲ್ ಮಾರ್ಗವಾಗಿ ಹೊಳೆನರಸೀಪುರ ಕಡೆ ತುಕಾಲಿ ಸಂತೋಷ್ ಅವರು ಪತ್ನಿ ಮಾನಸಾ ಜೊತೆ ಪ್ರಯಾಣಿಸುತ್ತಿದ್ದರು. ಅದೇ ವೇಳೆ ಕುಣಿಗಲ್‌ನಿಂದ ಕುರುಡಿಹಳ್ಳಿಗೆ ಆಟೋ ಬರುತ್ತಿತ್ತು. ಈ ಸಂದರ್ಭದಲ್ಲಿ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ತುಕಾಲಿ ಸಂತೋಷ್ ಅವರ ಕಾರು ಆಟೋಗೆ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ‘ಬಿಗ್ ಬಾಸ್’ ಸ್ಪರ್ಧಿ ತುಕಾಲಿ ಸಂತೋಷ್ ಕಾರು ಅಪಘಾತ
ಘಟನೆ ಸಂಬಂಧ ದೂರು ಪ್ರತಿದೂರು ದಾಖಲಿಸಲು ಎರಡೂ ಕಡೆಯವರು ಕುಣಿಗಲ್ ಗ್ರಾಮಾಂತರ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಆಟೋ ಡ್ರೈವರ್ ಕಾರ್‌ಗೆ ಡಿಕ್ಕಿ ಹೊಡೆದಿದ್ದಾರೆ ಅಂತಾ ತುಕಾಲಿ ಸಂತು ಆರೋಪಿಸುತ್ತಿದ್ದರು. ಈ ಬಗ್ಗೆ ಕುಣಿಗಲ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಹೈದರಾಬಾದ್: ತಡೆಗೋಡೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಭಾರತ್ ರಾಷ್ಟ್ರ ಸಮಿತಿಯ (BRS) ಶಾಸಕಿ ಜಿ ಲಾಸ್ಯ ನಂದಿತಾ (G Lasya Nanditha) (37) ದುರ್ಮರಣಕ್ಕೀಡಾಗಿದ್ದಾರೆ.
ಈ ಘಟನೆ ಇಂದು ಬೆಳಗ್ಗೆ 6.30ರ ಸುಮಾರಿಗೆ ಹೈದರಾಬಾದ್‌ನ (Hyderabad) ಹೊರವಲಯದಲ್ಲಿರುವ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಪಟಂಚೇರು ಎಂಬಲ್ಲಿ ಸಂಭವಿಸಿದೆ.
ನಂದಿತಾ ಅವರು ತಮ್ಮ ಎಸ್‌ಯುವಿ ಕಾರಿನಲ್ಲಿ ನಗರಕ್ಕೆ ವಾಪಸ್ಸಾಗುತ್ತಿದ್ದರು. ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಎಕ್ಸ್‌ಪ್ರೆಸ್‌ವೇಯ ಎಡಭಾಗದಲ್ಲಿರುವ ಲೋಹದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡು ಶಾಸಕಿ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ಕಾರು ಚಾಲಕನನ್ನು ಸಮೀಪದ ಪಟಂಚೇರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಮಹಾರಾಷ್ಟ್ರ ಮಾಜಿ ಸಿಎಂ ಮನೋಹರ್ ಜೋಶಿ ನಿಧನ
ನಂದಿತಾ ಅವರು ಫೆಬ್ರವರಿ 13 ರಂದು ಬಿಆರ್‌ಎಸ್ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಸಾರ್ವಜನಿಕ ರ‍್ಯಾಲಿಯಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದರು. ಈ ಸಂದರ್ಭದಲ್ಲಿ ಮರ್ರಿಗುಡ ಜಂಕ್ಷನ್‌ನಲ್ಲಿ ಇದೇ ರೀತಿಯ ರಸ್ತೆ ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಅವರು ಪಾರಾಗಿದ್ದರು.
ಬಿಆರ್‌ಎಸ್‌ನ ಮಾಜಿ ಶಾಸಕ ದಿವಂಗತ ಜಿ ಸಾಯಣ್ಣ ಅವರ ಪುತ್ರಿಯಾಗಿರುವ ನಂದಿತಾ ಅವರು ಕಳೆದ ನವೆಂಬರ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಿಕಂದರಾಬಾದ್ ಕಂಟೋನ್ಮೆಂಟ್ ಕ್ಷೇತ್ರದಿಂದ ಜಿ ವೆನ್ನೆಲ ಅವರನ್ನು ಸೋಲಿಸುವ ಮೂಲಕ ಅಧಿಕಾರದ ಗದ್ದುಗೆ ಏರಿದ್ದರು.
ಜೈಪುರ: ಭೀಕರ ರಸ್ತೆ ಅಪಘಾತದಲ್ಲಿ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ವಿದೇಶಾಂಗ ಸಚಿವ ಜಸ್ವಂತ್ ಸಿಂಗ್ (Former Foreign Minister Jaswant Singh) ಅವರ ಸೊಸೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ರಾಜಸ್ಥಾನದ ಅಲ್ವಾರ್‌ನ (Alwar Rajasthan) ನೌಗಾಂವ್ ಬಳಿಯ ಖುಷ್ಪುರಿ ಗ್ರಾಮದ ಬಳಿ ದೆಹಲಿ-ಜೈಪುರ ಎಕ್ಸ್‌ಪ್ರೆಸ್‌ವೇಯಲ್ಲಿ ಇಂದು ಸಂಜೆ ಈ ರಸ್ತೆ ಅಪಘಾತ ಸಂಭವಿಸಿದೆ. ಮನ್ವೇಂದ್ರ ಅವರು ತಮ್ಮ ಕುಟುಂಬದೊಂದಿಗೆ ದೆಹಲಿಯಿಂದ ಜೈಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಮೋರಿ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಘಟನೆಯಲ್ಲಿ ಪತ್ನಿ ಚಿತ್ರಾ ಸಿಂಗ್ (Chitra Singh) ಸ್ಥಳದಲ್ಲೇ ಸಾವನ್ನಪ್ಪಿದರೆ, ಕೈ ನಾಯಕ ಮನ್ವೇಂದ್ರ ಸಿಂಗ್ (Congress leader Manvendra Singh) ಹಾಗೂ ಅವರ ಮಗ ಹಮೀರ್ ಸಿಂಗ್ ಗಾಯಗೊಂಡಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಸಿಕ್ಕಿದ ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಗಾಯಾಳುಗಳನ್ನು ಅಲ್ವಾರ್‌ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಕಾಲೇಜಿಗೆ ಹೋಗುವಂತೆ ಬೈದಿದ್ದಕ್ಕೆ ಬಾವಿಗೆ ಜಿಗಿದ ತಂಗಿ- ರಕ್ಷಿಸಲು ಹೋದ ಅಣ್ಣನೂ ಸಾವು
ತಂದೆ-ಮಗ ಇಬ್ಬರಿಗೂ ಪಕ್ಕೆಲುಬುಗಳಿಗೆ ಗಾಯಗಳಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಸದ್ಯ ಗಾಯಾಳುಗಳ ಸ್ಥಿತಿ ಅಪಾಯದಿಂದ ಪಾರಾಗಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಅಲ್ವಾರ್‌ನ ಸೋಲಂಕಿ ಆಸ್ಪತ್ರೆಯ ವೈದ್ಯ ವೈದ್ಯ ದೇವವ್ರತ್ ಶರ್ಮಾ ಮಾತನಾಡಿ, ಮಾಜಿ ಸಂಸದ ಮನ್ವೇಂದ್ರ ಸಿಂಗ್ ಅವರ ಪಕ್ಕೆಲುಬಿಗೆ ಗಾಯವಾಗಿದೆ. ಅದರಲ್ಲಿ ಮೂಳೆ ಮುರಿತದಿಂದಾಗಿ ಅವರ ಶ್ವಾಸಕೋಶಕ್ಕೂ ಹಾನಿಯಾಗಿದೆ. ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.
ತುಮಕೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಪ್ರಯಾಣಿಸುತ್ತಿದ್ದ ಕಾರು ಅಪಘಾತ (Car Accident) ಸಂಭವಿಸಿದ ಘಟನೆ ನಡೆದಿದೆ.
ತುಮಕೂರಿನ (Tumakuru) ನಂದಿಹಳ್ಳಿಯ ಹೆದ್ದಾರಿಯಲ್ಲಿ ಬುಧವಾರ ರಾತ್ರಿ 12 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಲಾರಿಗೆ ಕಾರು ಹಿಂಭಾಗದಿಂದ ಗುದ್ದಿದೆ, ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ.
ಕಾರಿನಲ್ಲಿ ಸಚಿವರು ಸೇರಿ ಮೂವರು ಪ್ರಯಾಣಿಸುತ್ತಿದ್ದು, ಎಲ್ಲರೂ ಬಚಾವ್ ಆಗಿದ್ದಾರೆ. ಶಿವಮೊಗ್ಗದಿಂದ ಬೆಂಗಳೂರಿಗೆ (Shivamogga- Bellary) ಹೋಗುವಾವ ಮಾರ್ಗ ಮಧ್ಯೆ ಈ ದುರಂತ ಸಂಭವಿಸಿದ್ದು ಬದಲಿ ವಾಹನ ವ್ಯವಸ್ಥೆ ಮಾಡಿಕೊಂಡು ಸಚಿವರು ಬೆಂಗಳೂರಿಗೆ ತೆರಳಿದ್ದಾರೆ.
ಮುಂಬೈ: ಮದ್ಯಪಾನ ಮಾಡಿ ಕಾರು ಚಲಾಯಿಸಿ (Drunk and Drive) ಬೈಕ್ ಹಾಗೂ ಆಟೋಗೆ ಡಿಕ್ಕಿ ಹೊಡೆಸಿದ ಪರಿಣಾಮ ಸ್ಥಳದಲ್ಲೇ ಮೂವರು ಸಾವಿಗೀಡಾದ ಘಟನೆ ಥಾಣೆಯ ಉಲ್ಲಾಸ್‍ನಗರದಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರನ್ನು ಸುಬುದ್ದೀನ್ ಜಾನಾ, ಅಂಜಲಿ ಜಾನಾ ಮತ್ತು ಶಂಭುರಾಜ್ ಚವ್ಹಾಣ್ ಎಂದು ಗುರುತಿಸಲಾಗಿದೆ. ಮೃತರು ಆಟೋ ಹಾಗೂ ಬೈಕ್‌ನಲ್ಲಿದ್ದರು. ಅಪಘಾತದಲ್ಲಿ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮದ್ಯಪಾನ ಮಾಡಿ ಕಾರನ್ನು ವೇಗವಾಗಿ ಚಲಾಯಿಸಿದ ಪರಿಣಾಮ ಈ ಅಪಘಾತ (Car Accident) ಸಂಭವಿಸಿದೆ ಎಂದು ಪೊಲೀಸರು (Police) ತಿಳಿಸಿದ್ದಾರೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಭಾರೀ ಮಳೆಗೆ ಓರ್ವ ಬಲಿ – ರೈಲ್ವೇ ನಿಲ್ದಾಣದಲ್ಲಿ ಸಿಲುಕಿದ 500ಕ್ಕೂ ಹೆಚ್ಚು ಪ್ರಯಾಣಿಕರು
ಅಪಘಾತದ ಬಳಿಕ ಕಾರಿನ ಚಾಲಕ ನಾಗೇಶ್ ರಮಣಿ ಸ್ಥಳದಿಂದ ಪರಾರಿಯಾಗಿದ್ದ. ಬಳಿಕ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಚಾಲಕನ ವಿರುದ್ಧ ಐಪಿಸಿ ಸೆಕ್ಷನ್ ಹಾಗೂ ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ.
ಭೋಪಾಲ್: ಮಧ್ಯಪ್ರದೇಶದ (Madhya Pradesh) ಕೇಂದ್ರ ಸಚಿವ ಪ್ರಹ್ಲಾದ್ ಪಟೇಲ್ (Central Minister Pralhad Patel) ಅವರಿದ್ದ ಕಾರು ಅಪಘಾತಕ್ಕೀಡಗಿದ್ದು, ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಘಟನೆಯಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.
ಈ ಘಟನೆ ಇಂದು (ಮಂಗಳವಾರ) ನಡೆದಿದೆ. ಸಚಿವರು ನವೆಂಬರ್ 17ರಂದು ನಡೆಯಲಿರುವ ಚುನಾವಣೆಯ ಅಭ್ಯರ್ಥಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಚಿಂದ್ವಾರದಿಂದ ನರಸಿಂಗ್‍ಪುರ ಕಡೆ ಪ್ರಚಾರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.
ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ನಿರಂಜನ್ ಚಂದ್ರವನ್‍ಶಿ ಎಂದು ಗುರುತಿಸಲಾಗಿದೆ. ನಿರಂಜನ್ ಮಕ್ಕಳಾದ ನಿಖಿಲ್ ನಿರಂಜನ್ (7) ಮತ್ತು ಸಂಸ್ಕರ್ ನಿರಂಜನ್ (10) ಗಾಯಗೊಂಡಿದ್ದಾರೆ. ವೃತ್ತಿಯಲ್ಲಿ ಶಿಕ್ಷಕರಾಗಿರುವ ನಿರಂಜನ್ ತಮ್ಮ ಮಕ್ಕಳೊಂದಿಗೆ ಬೈಕ್‍ನಲ್ಲಿ ಮನೆಗೆ ಮರಳುತ್ತಿದ್ದರು. ಇದನ್ನೂ ಓದಿ: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಮನಸ್ಸೋ ಇಚ್ಛೆ 58 ಬಾರಿ ಇರಿದು ಕೊಂದ್ರು
#WATCH | Union Minister and BJP candidate from Narsinghpur, Prahlad Patel's convoy meets with a road accident in Amarwara of Chhindwara district in Madhya Pradesh. The minister was travelling from Chhindwara to Narsinghpur. pic.twitter.com/k9vQvQWxda
ಘಟನೆಯಲ್ಲಿ ನಿರಂಜನ್ ಎಂಬವರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಇವರೆಲ್ಲರೂ ನಾಗ್ಪುರ ನಿವಾಸಿಗಳು. ಗಾಯಾಳುಗಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸುಧೀರ್ ಜೈನ್ ತಿಳಿಸಿದ್ದಾರೆ.
ಗಾಯಾಳುಗಳಲ್ಲಿ ಓರ್ವನ ತಲೆಗೆ ಏನು ಬಿದ್ದಿದೆ. ಇದರಲ್ಲಿ 10 ವóದ ಬಾಲಕನ ಸ್ಥಿತಿ ಗಂಭೀರವಾಗಿದೆ. ಜತಿನ್‍ಗೆ ಕೂಡ ಗಾಯಗಳಾಗಿವೆ. ಮೂವರು ಗಾಯಾಳುಗಳನ್ನು ಕೂಡ ನಾಗ್ಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಇದರಲ್ಲಿ 33 ವರ್ಷದ ನಿರಂಜನ್ ಚಂದ್ರವಂಶಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಸಿವಿಲ್ ಸರ್ಜನ್ ಡಾ ಎಂಕೆ ಸೋನಿಯಾ ಹೇಳಿದ್ದಾರೆ.
ಅಪಘಾತದ (Car Accident) ಬಳಿಕ ನಟ ನಾಗಭೂಷಣ್ (Nagabhushan) ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ವಿಚಾರವಾಗಿ ನಿನ್ನೆ ಸುದ್ಧಿಗೋಷ್ಠಿ ಆಯೋಜಿಸಿದ್ದು ಘಟನೆ ಬಗ್ಗೆ ವಿವರಿಸಿದರು. ಆ ಕುಟುಂಬಕ್ಕೆ ಆದ ನೋವು ಎನ್ನುವುದು ನನಗೆ ಅರಿವಿದೆ. ಅವರ ಕುಟುಂಬದ ಹತ್ತಿರದವರ ಜೊತೆ ಮಾತನಾಡಿದ್ದೇವೆ. ಆ ಕುಟುಂಬಕ್ಕೆ ಏನು ಸಹಾಯ ಬೇಕಿದ್ದರೂ ಮಾಡುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು.
ನಾಗಭೂಷಣ್ ಜೊತೆ ಅವರ ಪರ ವಕೀಲರಾದ ದಿಲೀಪ್ ಪತ್ರಿಕಾಗೋಷ್ಠಿಯಲ್ಲಿದ್ದರು. ನಾಗಭೂಷಣ್ ಮಾತನಾಡಿ, ಹಿಟ್ ಅಂಡ್ ರನ್ ಅಂತ ಹೇಳಬೇಡಿ, ಅಪಘಾತ ಬಳಿಕ ನಾನೇ ಅವರನ್ನು ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದ್ದು ಎಂದು ಭಾವುಕರಾದರು. ಘಟನೆ ನಡೆದು ಅನೇಕ ದಿನಗಳ ಬಳಿಕ ನಿಮ್ಮ ಮುಂದೆ ಬಂದಿದ್ದೀನಿ, ನನಗೆ ಆ ಘಟನೆ ಅರಗಿಸಿಕೊಳ್ಳಲು ಇನ್ನೂ ಸಮಯ ಬೇಕು. ಹಾಗಾಗಿ ನಾನು ತಡವಾಗಿ ಮಾತನಾಡುತ್ತಿದ್ದೀನಿ ಎಂದು ಹೇಳಿದರು.
‘ಕೋಣನಕುಂಟೆ ಕ್ರಾಸ್ ಬಳಿ ಘಟನೆ ನಡೆದಿದ್ದು, ಅವರು ನನ್ನ ಕಾರಿಗೆ ದಿಢೀರ್ ಅಂತ ಅಡ್ಡ ಬಂದರು ಅಪಘಾತವಾಯಿತು ಬಳಿಕ ನಾನೆ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿದೆ. ಆಸ್ಪತ್ರೆಗೆ ಹೋಗುವಾಗ ಪೋಲಿಸರಿಗೆ ನಾನೆ ಫೋನ್ ಮಾಡಿ ಘಟನೆ ಬಗ್ಗೆ ವಿವರಿಸಿದೆ’ ಎಂದು ಹೇಳಿದರು. ಪೊಲೀಸರು ಗಾಯಾಳುಗಳ ಸಂಬಂಧಿಗಳ ಮುಂದೆಯೇ ಆಲ್ಕೋಹಾಲ್ ಪರೀಕ್ಷೆ ಹಾಗೂ ರಕ್ತ ಪರೀಕ್ಷೆ ಮಾಡಿಸಿದರು ನಂತರ ನಾನು ಆಸ್ಪತ್ರೆಯಿಂದ ಪೊಲೀಸ್ ಸ್ಟೇಷನ್‌ಗೆ ಹೋದೆ ಬೆಳಗ್ಗೆ ಸ್ಟೇಷನ್ ಬೇಲ್ ಮೂಲಕ ಹೊರಬಂದೆ’ ಎಂದು ಘಟನೆ ವಿವರಿಸಿದರು.
ದುರಂತ ಎಂದರೆ ನಾಗಭೂಷಣ್ ತಂದೆ ಕೂಡ ಹಿಟ್ ಅಂಡ್ ರನ್ ಪ್ರಕರಣಲ್ಲಿಯೇ ನಿಧನಹೊಂದಿದ್ದು. ತಂದೆಯ ಸಾವನ್ನು ನೆನಪಿಸಿಕೊಂಡ ನಾಗಭೂಷಣ್ ‘ಕಳೆದುಕೊಂಡ ನೋವು ಏನು ಅಂತ ನನಗೆ ಗೊತ್ತಿದೆ. ನನ್ನ ತಂದೆ ಕೂಡ ಅಪಘಾತದಲ್ಲಿಯೇ ನಿಧನರಾಗಿದ್ದು. ಅವರನ್ನು ಸಾಯಿಸಿದ್ದು ಯಾರು ಅಂತ ಇವತ್ತಿಗೂ ನಮಗೆ ಗೊತ್ತಿಲ್ಲ. ಆದರೀಗ ನಾನು ಅವರ ನೋವಿನಲ್ಲಿ ಭಾಗಿಯಾಗಿದ್ದೀನಿ’ ಎಂದು ಭಾವುಕರಾದರು.
ಅವರ ಕುಟುಂಬದ ಜೊತೆ ಸಂಪರ್ಕದಲ್ಲಿದ್ದೇವೆ. ನನ್ನ ಕೈಯಲ್ಲಿ ಏನು ಸಹಾಯ ಮಾಡಲು ಸಾಧ್ಯವಾಗುತ್ತೊ ನಾನು ಖಂಡಿತ ಮಾಡುತ್ತೇನೆ. ಈ ಸಮಯದಲ್ಲಿ ನಾನು ಇನ್ನೇನು ಮಾಡಲು ಸಾಧ್ಯ ಎಂದು ನಾಗಭೂಷಣ್ ಭಾವುಕರಾದರು. ಇದೇ ಸಮಯದಲ್ಲಿ ಅಪಘಾತ ಮಾಡಿದರೆ ದಯವಿಟ್ಟು ಯಾರು ಓಡಿ ಹೋಗಬೇಡಿ ಎಂದು ಮನವಿಮಾಡಿದರು. ಇದರಿಂದ ಹೊರಬರಲು ನನಗೆ ಸಮಯ ಬೇಕು . ನಂತರ ಮತ್ತೆ ನಿಮಗೆ ಸಿಗುತ್ತೇನೆ ಎಂದರು
ಕುಮಾರಸ್ವಾಮಿ ಲೇಔಟ್ ವ್ಯಾಪ್ತಿಯಲ್ಲಿ ನಡೆದ ನಟ ನಾಗಭೂಷಣ್ (Nagbhushan) ಕಾರು ಅಪಘಾತವನ್ನು ಹಿಟ್ ಅಂಡ್ ರನ್ ಕೇಸು ಎಂದು ಹಲವರು ಆರೋಪ ಮಾಡುತ್ತಿದ್ದರು. ಇದಕ್ಕೆ ಸಂಬಂಧಿಸಿಂದತೆ ನಟ ನಾಗಭೂಷಣ್ ಪ್ರತಿಕ್ರಿಯೆ ನೀಡಿದ್ದಾರೆ. ಅಪಘಾತವಾದ ನಂತರ ನಾನು ಎಲ್ಲಿಗೂ ಓಡಿ ಹೋಗಿಲ್ಲ. ನನ್ನ ಕಾರು ಅಲ್ಲಿಯೇ ಇತ್ತು. ನಾನು ಗಾಯಾಳುವನ್ನು ಆಸ್ಪತ್ರೆಗೆ ಸೇರಿಸುವ ಪ್ರಯತ್ನ ಮಾಡಿದೆ. ಪೊಲೀಸರ ತನಿಖೆಗೂ ನಾನು ಹೋಗಿರುವೆ. ದಯವಿಟ್ಟು ಹಿಟ್ ಅಂಡ್ ರನ್ ಕೇಸು ಎಂದು ಕರೆಯಬೇಡಿ’ ಎಂದರು.
ನನ್ನ ಕಾರು (Car accident) ಕೂಡ ಸ್ಪೀಡ್ ಆಗಿ ಇರಲಿಲ್ಲ. ವೇಗವಾಗಿ ಓಡಿಸುವುದಕ್ಕೂ ಆ ರಸ್ತೆಯಲ್ಲಿ ಆಗುವುದಿಲ್ಲ. ಸಡನ್ನಾಗಿ ಆ ದಂಪತಿ ಫುಟ್ ಪಾತ್ ನಿಂದ ರಸ್ತೆಗೆ ಇಳಿದರು. ಹಾಗಾಗಿ ಅಪಘಾತವಾಯಿತು. ಆ ಕುಟುಂಬಕ್ಕೆ ಆದ ನೋವು ನನಗೆ ಅರಿವಿದೆ. ಅವರ ಕುಟುಂಬವನ್ನು ಸಂಪರ್ಕಿಸಿದ್ದೇವೆ. ಮುಂದಿನ ದಿನಗಳಲ್ಲಿ ಅವರನ್ನು ಮಾತನಾಡಿಸುವ ಪ್ರಯತ್ನ ಮಾಡುವೆ ಎನ್ನುವುದು ನಾಗಭೂಷಣ್ ಮಾತು.
ಇಂಥದ್ದೇ ಅಪಘಾತದಲ್ಲಿ ನಾಗಭೂಷಣ್ ತಂದೆ ಬಲಿ
ನಾಗಭೂಷಣ್ ಅವರ ತಂದೆ ಇಂಥದ್ದೇ ಅಪಘಾತದಲ್ಲಿ ನಿಧನರಾಗಿದ್ದು, ಈವರೆಗೂ ಆ ಅಪಘಾತ ಮಾಡಿದವರು ಯಾರು ಎನ್ನುವುದು ಗೊತ್ತಿಲ್ಲವಂತೆ. ‘ಗೌರಿ ಹಬ್ಬದ ದಿನದಂದು ನನ್ನ ತಂದೆಯು ಇಂಥದ್ದೇ ಕಾರು ಅಪಘಾತದಲ್ಲಿ ನಿಧನರಾದರು. ಅದನ್ನು ಮಾಡಿದ್ದು ಯಾರು ಎನ್ನುವುದು ಈವರೆಗೂ ನಮಗೆ ಗೊತ್ತಿಲ್ಲ. ಅಪಘಾತ ಮಾಡಿದ ನಂತರ ಯಾರೂ ಓಡಿ ಹೋಗಬೇಡಿ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ. ನನ್ನ ತಂದೆಯ ಘಟನೆಯಿಂದ ನಾನು ಕಲಿತದ್ದು ಇದನ್ನೆ’ ಅಂದರು.
ಘಟನೆಯ ಬಗ್ಗೆ ಹೆಚ್ಚಿನ ವಿವರ ಹೇಳಿದರೆ ತಪ್ಪಾಗುತ್ತದೆ. ಯಾಕೆಂದರೆ ಅದು ತನಿಖಾ ಹಂತದಲ್ಲಿ ಇದೆ. ಪೊಲೀಸನವರು ಯಾವಾಗ ಕರೆದರೂ ನಾನು ಹೋಗುವೆ. ತನಿಖಾಧಿಕಾರಿಗಳಿಗೆ ಸಹಕರಿಸುವೆ. ಈಗಾಗಲೇ ವಿಚಾರಣೆಗೆ ಹೋಗಿಯೂ ಬಂದಿರುವುದಾಗಿ ನಾಗಭೂಷಣ್ ತಿಳಿಸಿದರು. ಇನ್ನೂ ಆ ಘಟನೆಯ ನೋವಿನಿಂದ ಆಚೆ ಬರುವುದಕ್ಕೆ ಸಾಧ್ಯವಾಗಿಲ್ಲ ಎಂದರು ನಟ.
ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಹಲವು ದಿನಗಳ ನಂತರ ಮಾಧ್ಯಮಗಳ ಮುಂದೆ ಮುಖಾಮುಖಿಯಾಗಿದ್ದಾರೆ ನಟ ನಾಗಭೂಷಣ್. ಘಟನೆ ನಡೆದ ನಂತರ ಮಾನಸಿಕವಾಗಿ ತುಂಬಾ ನೊಂದುಕೊಂಡಿದ್ದೆ. ಹಾಗಾಗಿ ನನ್ನ ಪ್ರತಿಕ್ರಿಯೆಯನ್ನು ನೀಡಲು ಆಗಲಿಲ್ಲ ಎಂದ ಅವರು, ಆ ನೋವಿನಿಂದ ಹೊರ ಬರುವುದಕ್ಕೂ ಇನ್ನೂ ನನಗೆ ತುಂಬಾ ಸಮಯ ಬೇಕು. ಅದು ಹಿಟ್ ಅಂಡ್ ರನ್ ಕೇಸ್ ಅಲ್ಲ, ನಾನು ಅಲ್ಲಿಯೇ ಇದ್ದೆ. ಕಾನೂನು ಪ್ರಕ್ರಿಯೆಗೆ ಸಹಕರಿಸಿದ್ದೇನೆ ಎಂದಿದ್ದಾರೆ.
ನಾಗಭೂಷಣ್ ಅವರ ತಂದೆ ಇಂಥದ್ದೇ ಅಪಘಾತದಲ್ಲಿ ನಿಧನರಾಗಿದ್ದು, ಈವರೆಗೂ ಆ ಅಪಘಾತ ಮಾಡಿದವರು ಯಾರು ಎನ್ನುವುದು ಗೊತ್ತಿಲ್ಲ. ‘ಗೌರಿ ಹಬ್ಬದ ದಿನದಂದು ನನ್ನ ತಂದೆಯು ಇಂಥದ್ದೇ ಕಾರು ಅಪಘಾತದಲ್ಲಿ ನಿಧನರಾದರು. ಅದನ್ನು ಮಾಡಿದ್ದು ಯಾರು ಎನ್ನುವುದು ಈವರೆಗೂ ನಮಗೆ ಗೊತ್ತಿಲ್ಲ. ಅಪಘಾತ ಮಾಡಿದ ನಂತರ ಯಾರೂ ಓಡಿ ಹೋಗಬೇಡಿ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ. ನನ್ನ ತಂದೆಯ ಘಟನೆಯಿಂದ ನಾನು ಕಲಿತದ್ದು ಇದನ್ನೆ’ ಅಂದರು.
ಏನಿದು ಪ್ರಕರಣ?
ಅಕ್ಟೋಬರ್ 30ರಂದು ರಾತ್ರಿ 9 ಗಂಟೆಯ ಹೊತ್ತಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಾರು ಅಪಘಾತದಲ್ಲಿ (Car accident) ಪ್ರೇಮಾ ಎನ್ನುವ ಮಹಿಳೆ ಸಾವನ್ನಪ್ಪಿ, ಅವರ ಪತಿ ಗಂಭೀರವಾಗಿ ಗಾಯಗೊಂಡಿದ್ದರು. ಪತಿ ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ನಾಗಭೂಷಣ್ (Nagbhushan) ಈ ಅಪಘಾತಕ್ಕೆ ಕಾರಣವಾಗಿದ್ದು, ನಟನನ್ನು ಕುಮಾರಸ್ವಾಮಿ ಪೋಲಿಸರು ಬಂಧಿಸಿ ನಂತರ ಸ್ಟೇಶನ್ ಬೇಲ್ ಮೇಲೆ ಬಿಡುಗಡೆ ಮಾಡಿದ್ದಾರೆ. ಈ ಘಟನೆಯ ಕುರಿತು ಸ್ವತ ನಾಗಭೂಷಣ್ ಕೂಡ ಪೊಲೀಸರ ಮುಂದೆ ಹೇಳಿಕೆಯನ್ನು ದಾಖಲಿಸಿದ್ದರು.
ರಾತ್ರಿ ಸ್ನೇಹಿತರನ್ನು ಭೇಟಿ ಮಾಡಲು ಆರ್.ಆರ್ ನಗರಕ್ಕೆ ಹೋಗಿರುವುದಾಗಿ, ಅಲ್ಲಿಂದ ಜೆಪಿ ನಗರದಲ್ಲಿರುವ ತಮ್ಮ ಮನೆಗೆ ವಾಪಸ್ಸಾಗುವಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ನಾಗಭೂಷಣ್ ತಿಳಿಸಿದ್ದರು. ತಾವೇ ಸ್ವತಃ ಕಾರು ಚಾಲನೆ ಮಾಡಿಕೊಂಡು ಹೋಗುತ್ತಿರುವಾಗ ಅಪಾರ್ಟಮೆಂಟ್ ಹತ್ತಿರ ಒಬ್ಬ ಮಹಿಳೆ ಮತ್ತು ಒಬ್ಬರು ವ್ಯಕ್ತಿ ಫುಟ್ ಪಾತ್ ಮೇಲಿಂದ ರಸ್ತೆಗೆ ಕೆಳಗೆ ಇಳಿದು ರಸ್ತೆಗೆ ಬಂದರು. ಅವರು ಬಂದಿದ್ದನ್ನು ನೋಡಿ ನನಗೆ ಗಾಬರಿಯಾಗಿ ರಸ್ತೆಗೆ ಬಂದಿದ್ದವರಿಗೆ ಡಿಕ್ಕಿ ಮಾಡಿ, ನಂತರ ಫುಟ್ ಪಾತ್ ಮೇಲೆ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಮಾಡಿದೆನು ಎಂದು ಅವರು ಹೇಳಿಕೆಯನ್ನು ನೀಡಿದ್ದರು.
ಈ ಘಟನೆಯಾದಾಗ ಮಹಿಳೆಗೆ ತಲೆಗೆ ಮತ್ತು ಮುಖಕ್ಕೆ ಜಾಸ್ತಿ ಏಟಾಗಿತ್ತು. ಅವರು ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ. ಗಂಡಸಿಗೆ ಕಾಲುಗಳಿಗೆ ಮತ್ತು ಹೊಟ್ಟೆ ಹಾಗೂ ತಲೆಗೆ ಗಾಯವಾಗಿತ್ತು. ನನ್ನ ಕಾರು ಸ್ಟಾರ್ಟ್ ಆಗದೇ ಇರುವ ಕಾರಣಕ್ಕಾಗಿ ಆಟೋದಲ್ಲಿ ಅವರನ್ನು ಸ್ವತಃ ನಾನೇ ಆಸ್ಪತ್ರೆಗೆ ಕರೆದುಕೊಂಡು ಹೋದೆ. ಆಸ್ಪತ್ರೆಯ ವೈದ್ಯರು ಮಾರ್ಗಮಧ್ಯದಲ್ಲೇ ಮಹಿಳೆಯು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು. ಘಟನೆಯನ್ನು ತಿಳಿದು ಸಂಚಾರಿ ಪೊಲೀಸರು ಆಸ್ಪತ್ರೆಗೆ ಬಂದರು. ನಾನು ಕೂಡ ಅವರೊಂದಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆಗೆ ತೆರಳಿ ಮಾಹಿತಿ ನೀಡಿದೆ ಎಂದು ತಮ್ಮ ಹೇಳಿಕೆಯನ್ನು ನಾಗಭೂಷಣ್ ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೊಂದೇ ತನಿಖೆ ನಡೆಯುತ್ತಿದೆ.
ಸ್ಯಾಂಡಲ್ ವುಡ್ ನಟ ನಾಗಭೂಷಣ್ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಮತ್ತೊಂದು ವರದಿ ಸಿಕ್ಕಿದ್ದು, ಆ ವರದಿ ಇದೀಗ ಬಯಲಾಗಿದೆ. ಅಪಘಾತದ ಬಗ್ಗೆ ತಿಳಿಯುವುದಕ್ಕಾಗಿ ನಾಗಭೂಷಣ್ ಚಾಲನೆ ಮಾಡುತ್ತಿದ್ದ ಕಾರಿನ ಐಎಂವಿ ಟೆಸ್ಟ್ ಮಾಡಲು ಆರ್.ಟಿ.ಐ ಅಧಿಕಾರಿಗಳಿಗೆ (R.T.O. Report) ಪೊಲೀಸರು ಸೂಚಿಸಿದ್ದರು. ಅಧಿಕಾರಿಗಳು ಐಎಂವಿ ಟೆಸ್ಟ್ ಮಾಡಿದ್ದು, ತಮ್ಮ ವರದಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ನಾಗಭೂಷಣ್ ಕಾರು ಅಪಘಾತ ಅತಿಯಾದ ವೇಗದಿಂದ ಆಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅಪಘಾತದ ವೇಳೆ ಗಂಟೆಗೆ 50 ರಿಂದ 60 ಕಿಲೋ ಮೀಟರ್ ವೇಗದಲ್ಲಿ ಕಾರು ಚಲಿಸುತ್ತಿತ್ತು ಎಂದು ವರದಿ ಮಾಡಿದ್ದಾರೆ. ಕಾರಿನ ಟಯರ್ ಸ್ಪೀಟ್, ಮೀಟರ್ ಪರಿಶೀಲನೆ ಮಾಡಿ ಇಂಥದ್ದೊಂದು ವರದಿಯನ್ನು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪೊಲೀಸರಿಗೆ ನೀಡಲಾಗಿದೆ. ಇದನ್ನೂ ಓದಿ: ಮಂತ್ರಿಯೊಂದಿಗೆ ನನ್ನ ಪತ್ನಿಗೆ ಅಫೇರ್ ಇತ್ತು- ಶಾಕಿಂಗ್ ಹೇಳಿಕೆ ಕೊಟ್ಟ ಸಂಜಯ್ ದತ್
ಏನಿದು ಪ್ರಕರಣ?
ಅಕ್ಟೋಬರ್ 30ರಂದು ರಾತ್ರಿ 9 ಗಂಟೆಯ ಹೊತ್ತಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಾರು ಅಪಘಾತದಲ್ಲಿ (Car accident) ಪ್ರೇಮಾ ಎನ್ನುವ ಮಹಿಳೆ ಸಾವನ್ನಪ್ಪಿ, ಅವರ ಪತಿ ಗಂಭೀರವಾಗಿ ಗಾಯಗೊಂಡಿದ್ದರು. ಪತಿ ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ನಾಗಭೂಷಣ್ (Nagbhushan) ಈ ಅಪಘಾತಕ್ಕೆ ಕಾರಣವಾಗಿದ್ದು, ನಟನನ್ನು ಕುಮಾರಸ್ವಾಮಿ ಪೋಲಿಸರು ಬಂಧಿಸಿ ನಂತರ ಸ್ಟೇಶನ್ ಬೇಲ್ ಮೇಲೆ ಬಿಡುಗಡೆ ಮಾಡಿದ್ದಾರೆ. ಈ ಘಟನೆಯ ಕುರಿತು ಸ್ವತ ನಾಗಭೂಷಣ್ ಕೂಡ ಪೊಲೀಸರ ಮುಂದೆ ಹೇಳಿಕೆಯನ್ನು ದಾಖಲಿಸಿದ್ದರು.
ರಾತ್ರಿ ಸ್ನೇಹಿತರನ್ನು ಭೇಟಿ ಮಾಡಲು ಆರ್.ಆರ್ ನಗರಕ್ಕೆ ಹೋಗಿರುವುದಾಗಿ, ಅಲ್ಲಿಂದ ಜೆಪಿ ನಗರದಲ್ಲಿರುವ ತಮ್ಮ ಮನೆಗೆ ವಾಪಸ್ಸಾಗುವಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ನಾಗಭೂಷಣ್ ತಿಳಿಸಿದ್ದರು. ತಾವೇ ಸ್ವತಃ ಕಾರು ಚಾಲನೆ ಮಾಡಿಕೊಂಡು ಹೋಗುತ್ತಿರುವಾಗ ಅಪಾರ್ಟಮೆಂಟ್ ಹತ್ತಿರ ಒಬ್ಬ ಮಹಿಳೆ ಮತ್ತು ಒಬ್ಬರು ವ್ಯಕ್ತಿ ಫುಟ್ ಪಾತ್ ಮೇಲಿಂದ ರಸ್ತೆಗೆ ಕೆಳಗೆ ಇಳಿದು ರಸ್ತೆಗೆ ಬಂದರು. ಅವರು ಬಂದಿದ್ದನ್ನು ನೋಡಿ ನನಗೆ ಗಾಬರಿಯಾಗಿ ರಸ್ತೆಗೆ ಬಂದಿದ್ದವರಿಗೆ ಡಿಕ್ಕಿ ಮಾಡಿ, ನಂತರ ಫುಟ್ ಪಾತ್ ಮೇಲೆ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಮಾಡಿದೆನು ಎಂದು ಅವರು ಹೇಳಿಕೆಯನ್ನು ನೀಡಿದ್ದರು.
ಈ ಘಟನೆಯಾದಾಗ ಮಹಿಳೆಗೆ ತಲೆಗೆ ಮತ್ತು ಮುಖಕ್ಕೆ ಜಾಸ್ತಿ ಏಟಾಗಿತ್ತು. ಅವರು ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ. ಗಂಡಸಿಗೆ ಕಾಲುಗಳಿಗೆ ಮತ್ತು ಹೊಟ್ಟೆ ಹಾಗೂ ತಲೆಗೆ ಗಾಯವಾಗಿತ್ತು. ನನ್ನ ಕಾರು ಸ್ಟಾರ್ಟ್ ಆಗದೇ ಇರುವ ಕಾರಣಕ್ಕಾಗಿ ಆಟೋದಲ್ಲಿ ಅವರನ್ನು ಸ್ವತಃ ನಾನೇ ಆಸ್ಪತ್ರೆಗೆ ಕರೆದುಕೊಂಡು ಹೋದೆ. ಆಸ್ಪತ್ರೆಯ ವೈದ್ಯರು ಮಾರ್ಗಮಧ್ಯದಲ್ಲೇ ಮಹಿಳೆಯು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು. ಘಟನೆಯನ್ನು ತಿಳಿದು ಸಂಚಾರಿ ಪೊಲೀಸರು ಆಸ್ಪತ್ರೆಗೆ ಬಂದರು. ನಾನು ಕೂಡ ಅವರೊಂದಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆಗೆ ತೆರಳಿ ಮಾಹಿತಿ ನೀಡಿದೆ ಎಂದು ತಮ್ಮ ಹೇಳಿಕೆಯನ್ನು ನಾಗಭೂಷಣ್ ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೊಂದೇ ತನಿಖೆ ನಡೆಯುತ್ತಿದೆ.