Tag: car accident

  • ಕಾಂಗ್ರೆಸ್‌ ಅಭ್ಯರ್ಥಿ ಬಾಬುರಾವ್‌ ಚಿಂಚನಸೂರ್‌ ಕಾರು ಅಪಘಾತ – ಮಾಜಿ ಸಚಿವ ಆಸ್ಪತ್ರೆಗೆ ದಾಖಲು

    ಕಾಂಗ್ರೆಸ್‌ ಅಭ್ಯರ್ಥಿ ಬಾಬುರಾವ್‌ ಚಿಂಚನಸೂರ್‌ ಕಾರು ಅಪಘಾತ – ಮಾಜಿ ಸಚಿವ ಆಸ್ಪತ್ರೆಗೆ ದಾಖಲು

    ಯಾದಗಿರಿ: ಕಾಂಗ್ರೆಸ್ (Congress) ಅಭ್ಯರ್ಥಿ‌‌, ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ (Baburao Chinchansur) ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಕಲಬುರಗಿ ಆಕಾಶವಾಣಿ ಕೇಂದ್ರದ ಬಳಿ ನಡೆದಿದೆ.

    ಯಾದಗಿರಿ (Yadagiri) ಜಿಲ್ಲೆಯ ಗುರುಮಠಕಲ್‌ ವಿಧಾನಸಭಾ ಕ್ಷೇತ್ರದ‌ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ ಚಿಂಚನಸೂರ್‌. ಇವರು ಯಾದಗಿರಿಯಿಂದ ಕಲಬುರಗಿಗೆ ಹೋಗುವಾಗ ಅಪಘಾತ ಸಂಭವಿಸಿದೆ. ರಾತ್ರಿ 12:30 ರ ಸುಮಾರಿಗೆ ಈ ಘಟನೆ ನಡೆದಿದೆ. ಇದನ್ನೂ ಓದಿ: ಸವದಿ ಪಕ್ಷ ಬಿಟ್ಟು ಹೋಗಿದ್ದು ಪೀಡೆ ತೊಲಗಿದಂತಾಗಿದೆ: ರಮೇಶ್‌ ಜಾರಕಿಹೊಳಿ

    ರಸ್ತೆಯ ಮಧ್ಯೆ ಇರುವ ಗುಂಡಿಯಲ್ಲಿ ಕಾರು ಹಾದುಹೋದ ಕಾರಣ ನಿಯಂತ್ರಣ ತಪ್ಪಿ ಕಾರು ಬಿದ್ದಿದೆ. ಚಾಲಕ ನಿದ್ರೆಯ ಮಂಪರಿನಲ್ಲಿ ವಾಹನ ಚಲಾಯಿಸಿದ್ದಕ್ಕೆ ಹೀಗೆ ಆಗಿದೆ ಎನ್ನಲಾಗಿದೆ. ಕಾರು ಬಿದ್ದ ರಭಸಕ್ಕೆ ಚಿಂಚನಸೂರ್‌ ತಲೆ ಹಾಗೂ ಕಾಲಿಗೆ ಗಾಯಗಳಾಗಿವೆ.

    ಸ್ಥಳೀಯರ ಸಹಕಾರದಿಂದ ಚಿಂಚನಸೂರ್‌ ಅವರನ್ನು ಕಲಬುರಗಿ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಮತ್ತು ಗನ್‌ಮ್ಯಾನ್‌ಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಕಾರು-ಬಸ್ ನಡುವೆ ಡಿಕ್ಕಿ ; ಐವರ ಸಾವು

    ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗುರುಮಠಕಲ್‌ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಬಾಬುರಾವ್‌ ಚಿಂಚನಸೂರ್‌ ಕಣಕ್ಕಿಳಿದಿದ್ದಾರೆ. ಬಿಜೆಪಿಯಿಂದ ಯಾದಗಿರಿ ಚುನಾವಣಾ ಇತಿಹಾಸದಲ್ಲೇ ಮೊದಲ ಬಾರಿಗೆ ಮಹಿಳಾ ಅಭ್ಯರ್ಥಿಗೆ ಟಿಕೆಟ್‌ ನೀಡಲಾಗಿದೆ.

  • ಕಾರು ಅಪಘಾತದ ಬಳಿಕ ಮೊದಲ ಬಾರಿಗೆ ಪಂತ್‌ ಭೇಟಿಯಾದ ಯುವರಾಜ್‌ ಸಿಂಗ್‌

    ಕಾರು ಅಪಘಾತದ ಬಳಿಕ ಮೊದಲ ಬಾರಿಗೆ ಪಂತ್‌ ಭೇಟಿಯಾದ ಯುವರಾಜ್‌ ಸಿಂಗ್‌

    ಮುಂಬೈ: ಟೀಂ ಇಂಡಿಯಾ (Team India) ಸ್ಟಾರ್‌ ಕ್ರಿಕೆಟಿಗ ರಿಷಭ್‌ ಪಂತ್‌ (Rishabh Pant) ಭೀಕರ ಕಾರು ಅಪಘಾತದಲ್ಲಿ (Car Accident) ಗಾಯಗೊಂಡು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ‌ ವಿವಿಧ ರೀತಿಯ ಆರೋಗ್ಯ ತರಬೇತಿ ಪಡೆಯುವ ಮೂಲಕ ಚೇತರಿಸಿಕೊಳ್ಳುತ್ತಿದ್ದಾರೆ. ವರ್ಷಾಂತ್ಯದ ವೇಳೆಗೆ ಪಂತ್‌ ಸಂಪೂರ್ಣ ಗುಣಮುಖರಾಗಿ ಫಿಟ್‌ನೆಸ್ ಸಾಬೀತುಪಡಿಸಿದರೆ ಐಸಿಸಿ ಏಕದಿನ ವಿಶ್ವಕಪ್‌ಗೆ (ICC ODI WorldCup) ಭಾರತ ತಂಡದಲ್ಲಿ ಸ್ಥಾನ ಪಡೆದುಕೊಳ್ಳುವ ಸಾಧ್ಯತೆಗಳಿವೆ.

    ಈ ನಡುವೆ ಭಾರತ ಕ್ರಿಕೆಟ್‌ ತಂಡದ ಮಾಜಿ ಆಲ್‌ರೌಂಡರ್‌ ಯುವರಾಜ್‌ ಸಿಂಗ್‌‌ (Yuvraj Singh) ಕಾರು ಅಪಘಾತದ ಬಳಿಕ ಮೊದಲ ಬಾರಿಗೆ ಭೇಟಿಯಾಗಿದ್ದಾರೆ. ಪಂತ್‌ ಅವರನ್ನ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಅವರ ಜೊತೆಗಿನ ಫೋಟೋವನ್ನ ತಮ್ಮ ಜಾಲತಾಣದಲ್ಲೂ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಸ್ವಿಮ್ಮಿಂಗ್ ಪೂಲ್‌ನಲ್ಲಿ ವಾಕ್ ಮಾಡಿದ ಪಂತ್ – ಬೇಗ ಗುಣಮುಖರಾಗಿ ಅಂದ್ರು ಫ್ಯಾನ್ಸ್

    ಯುವರಾಜ್ ಸಿಂಗ್ ಅವರು ಫೋಟೋಗೆ ಶೀರ್ಷಿಕೆಯೊಂದನ್ನ ನೀಡಿದ್ದು, ʻಮಗುವಿನ ಹೆಜ್ಜೆ ಹಾಕುತ್ತಿದ್ದಾನೆ. ಈ ಚಾಂಪಿಯನ್ ಮತ್ತೆ ಪುಟಿದೇಳಲಿದ್ದಾನೆ. ಅವನು ಧನಾತ್ಮಕವಾಗಿದ್ದಾನೆ, ಮುಖದಲ್ಲಿ ನಗು ಮೂಡಿದೆ. ಈತ ಯಾವಾಗಲೂ ತಮಾಷೆ ಮಾಡುತ್ತಿರುತ್ತಾನೆ. ನಿಮಗೆ ಹೆಚ್ಚಿನ ಶಕ್ತಿ ಲಭಿಸಲಿʼ ಎಂದು ಬರೆದುಕೊಂಡಿದ್ದಾರೆ. ರಿಷಭ್‌ ಪಂತ್‌ ಇದರಿಂದ ಮತ್ತಷ್ಟು ಉತ್ಸಾಹಗೊಂಡಿದ್ದು, ಯುವಿಗೆ ಧನ್ಯವಾದ ಸಲ್ಲಿಸಿದ್ದಾರೆ. ಇದನ್ನೂ ಓದಿ: ಪೂಜಾರ ಸ್ಪಿನ್ ಬೌಲಿಂಗ್‌ಗೆ ಶಾಕ್ – ನಾನಿನ್ನು ಕೆಲಸ ಬಿಟ್ಟುಬಿಡಲಾ ಎಂದ ಅಶ್ವಿನ್

    Rishabh Pant 3

    ಯುವರಾಜ್ ಸಿಂಗ್ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿರುವಾಗಲೇ ಕ್ಯಾನ್ಸರ್‌ಗೆ ತುತ್ತಾಗಿ ವೃತ್ತಿಜೀವನದ ಅತ್ಯಮೂಲ್ಯ ಸಮಯ ಕಳೆದುಕೊಂಡರು. ಚಿಕಿತ್ಸೆ ಪಡೆದು ಗುಣಮುಖರಾದ ಬಳಿಕ ಶೀಘ್ರವೇ ಪುನರಾಗಮನ ಮಾಡಿ 2018ರವರೆಗೆ ಭಾರತ ತಂಡಕ್ಕಾಗಿ ಆಡಿದರು. 2016ರಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ತಂಡವು ಐಪಿಎಲ್ ಪ್ರಶಸ್ತಿ ಗೆದ್ದಾಗ ಯುವರಾಜ್‌ ಸಿಂಗ್‌ ಸಹ ತಂಡದಲ್ಲಿದ್ದರು.

    ಪಂತ್‌ಗೆ ಏನಾಗಿತ್ತು?
    2022ರ ಡಿಸೆಂಬರ್ 30ರಂದು ಟೀಂ ಇಂಡಿಯಾ ಆಟಗಾರ ರಿಷಭ್ ಪಂತ್ ಅವರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿತ್ತು. ದೆಹಲಿಯಿಂದ ಉತ್ತರಾಖಂಡದಲ್ಲಿರುವ ತಮ್ಮ ನಿವಾಸಕ್ಕೆ ತೆರಳುತ್ತಿದ್ದಾಗ ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು, ಪಂತ್ ಗಂಭೀರವಾಗಿ ಗಾಯಗೊಂಡಿದ್ದರು. ರಿಷಭ್ ಪಂತ್ ಅವರ ತಲೆ (ಹಣೆಯ ಭಾಗ), ಕಾಲಿಗೆ ಗಂಭೀರ ಪೆಟ್ಟಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿತ್ತು.

  • ಸರ್ಜಾಪುರ ಸುಲಿಗೆ ಪ್ರಕರಣದ ಮತ್ತೊಂದು ವೀಡಿಯೋ ಬಹಿರಂಗ – ಡಿಕ್ಕಿ ಹೊಡೆದು ಬಾನೆಟ್ ಏರಿದ ಕಿಡಿಗೇಡಿ

    ಸರ್ಜಾಪುರ ಸುಲಿಗೆ ಪ್ರಕರಣದ ಮತ್ತೊಂದು ವೀಡಿಯೋ ಬಹಿರಂಗ – ಡಿಕ್ಕಿ ಹೊಡೆದು ಬಾನೆಟ್ ಏರಿದ ಕಿಡಿಗೇಡಿ

    ಬೆಂಗಳೂರು: ಸಿಲಿಕಾನ್ ಸಿಟಿಯ ಸರ್ಜಾಪುರ ರಸ್ತೆ (Sarjapura Road) ಯಲ್ಲಿ ನಡೆದ ಘಟನೆಯ ಮತ್ತೊಂದು ವೀಡಿಯೋ ಬಹಿರಂಗಗೊಂಡಿದೆ. ಬೈಕ್ ಡಿಕ್ಕಿ (Bike Accident) ಹೊಡೆಸಿ ಸುಲಿಗೆಗೆ ಯತ್ನಿಸುವ ದೃಶ್ಯ ಕಾರಿನ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದೆ.

    ಇಂದು ಮುಂಜಾನೆ 3 ಗಂಟೆ ವೇಳೆಯಲ್ಲಿ ಯುವಕ ಮತ್ತು ಯುವತಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಎದುರುಗಡೆ ರಸ್ತೆಯಿಂದ ಬಂದ ಬೈಕ್ ಕಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಇಬ್ಬರು ಬೈಕ್ ಸವಾರರು ಕಾರಿನಿಂದ ಇಳಿಯುವಂತೆ, ಕಾರಿನಲ್ಲಿದ್ದವರಿಗೆ ಬೆದರಿಕೆ ಹಾಕಿದ್ದರು.

    ಇಬ್ಬರ ಜೊತೆಗೆ ಮತ್ತೆ ಮೂವರು ಸೇರಿ ಕಾರನ್ನು ಅಡ್ಡಗಟ್ಟಿದ್ರು. ಈ ವೇಳೆ ಹಿಂಬದಿಗೆ ವೇಗವಾಗಿ ಕಾರು ಚಲಾಯಿಸಿ ಯುವಕ- ಯುವತಿ ಎಸ್ಕೇಪ್ ಆದರು. ಘಟನೆಯ ಸಿಸಿಟಿವಿ (CCTV) ಸಮೇತ ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿ ದೂರು ನೀಡಲಾಗಿತ್ತು. ಇದನ್ನೂ ಓದಿ: ತಡವಾಗಿ ಮನೆಗೆ ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಪತಿ ಮುಖಕ್ಕೆ ಆ್ಯಸಿಡ್ ಎರಚಿದ ಪತ್ನಿ!

    ಇದಾದ ಬಳಿಕ ಘಟನೆಯ ಮಗದೊಂದು ಸ್ಫೋಟಕ ವೀಡಿಯೋ ರಿಲೀಸ್ ಆಗಿದೆ. 5 ಕಿ.ಮೀ ಚೇಸ್ ಮಾಡಿ ಕಾರಿನ ಬಾನೆಟ್ ಸುಲಿಗೆಕೋರ ಮೇಲೆ ಹತ್ತಿ ಕೂತಿದ್ದಾನೆ. ಅಲ್ಲದೆ ಕಾರಿನ ಡೋರ್ ತೆಗೆಯಲು ಮುಂದಾಗಿದ್ದಾನೆ. ಈ ವೇಳೆ ಯುವಕ ಕ್ಯಾರೆ ಅನ್ನದೇ ಕಾರನ್ನು ಚಲಾಯಿಸಿದ್ದಾನೆ. ಯುವಕ – ಯುವತಿಯಿದ್ದ ಕಾರಿನ ಮೇಲೆ ಎಗರಿ ಹತ್ತಿದ ಸುಲಿಗೆಕೋರನ ಬೆಚ್ಚಿಬೀಳಿಸುವ ವೀಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕಾರು ಡಿಕ್ಕಿಯಾಗಿ 30 ಕುರಿಗಳು ಸಾವು- ಮೂವರಿಗೆ ಗಾಯ

    ಕಾರು ಡಿಕ್ಕಿಯಾಗಿ 30 ಕುರಿಗಳು ಸಾವು- ಮೂವರಿಗೆ ಗಾಯ

    ರಾಯಚೂರು: ನಗರದ ಹೊರವಲಯದ ಲಿಂಗಸುಗೂರು ರಸ್ತೆ ಬೈಪಾಸ್ ನಲ್ಲಿ ರಸ್ತೆ ಪಕ್ಕ ನಿಲ್ಲಿಸಿದ್ದ ಕುರಿಗಳಿಗೆ ಕಾರು (Car Accident) ಡಿಕ್ಕಿಹೊಡೆದು 30 ಕುರಿಗಳು ಸಾವನ್ನಪ್ಪಿದ್ದು, 10 ಕುರಿ (Sheep) ಗಳಿಗೆ ಕಾಲು ಮುರಿದಿದೆ.

    ಕುರಿಗಳಿಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಯಾಪಲದಿನ್ನಿಯ ಜಗನ್ನಾಥ ಎಂಬವರಿಗೆ ಸೇರಿದ ಕುರಿಗಳು ಸಾವನ್ನಪ್ಪಿವೆ. ಯಾಪಲದಿನ್ನಿಯಿಂದ ಕಲ್ಲೂರಿಗೆ ಹೊರಟಿದ್ದ ಕುರಿಗಾಯಿಗಳು, ರಾತ್ರಿ ವೇಳೆ ರಸ್ತೆ ಪಕ್ಕದಲ್ಲಿ ಕುರಿಗಳನ್ನ ನಿಲ್ಲಿಸಿದ್ದರು. ಬೆಳಗ್ಗಿನ ಜಾವ ಅಪಘಾತ ಸಂಭವಿಸಿದ್ದು, 120 ಕುರಿಗಳಲ್ಲಿ 21 ಕುರಿಗಳು ಸಾವನ್ನಪ್ಪಿವೆ. ಇದನ್ನೂ ಓದಿ: ಆಸ್ಟ್ರೆಲಿಯಾದಲ್ಲಿ ಮತ್ತೆ ಖಲಿಸ್ತಾನಿಯರ ಅಟ್ಟಹಾಸ – ತ್ರಿವರ್ಣಧ್ವಜ ಹಿಡಿದ ಭಾರತೀಯರ ಮೇಲೆ ದಾಳಿ

    ಅಪಘಾತದಿಂದ ಸುಮಾರು ಮೂರೂವರೆ ಲಕ್ಷ ರೂಪಾಯಿ ಬೆಲೆ ಬಾಳುವ ಕುರಿಗಳು ಸಾವನ್ನಪ್ಪಿವೆ. ಕಾರಿನಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗೋವಾದಿಂದ ಹೈದರಾಬಾದ್‍ಗೆ ಹೊರಟಿದ್ದ ಕಾರು ಕುರಿಗಳಿಗೆ ಡಿಕ್ಕಿ ಹೊಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಅಪಘಾತ ನಡೆದಿದ್ದು, ರಾಯಚೂರು ಪಶ್ಚಿಮ ಪೊಲೀಸ್ ಠಾಣೆ (West Police Station Raichur) ಯಲ್ಲಿ ಪ್ರಕರಣ ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • `ಈ ಇಬ್ಬರು ವೀರರನ್ನು ಸ್ಮರಿಸಲೇಬೇಕು’ – ರಿಷಬ್‌ ಪಂತ್ ಮೊದಲ ರಿಯಾಕ್ಷನ್

    `ಈ ಇಬ್ಬರು ವೀರರನ್ನು ಸ್ಮರಿಸಲೇಬೇಕು’ – ರಿಷಬ್‌ ಪಂತ್ ಮೊದಲ ರಿಯಾಕ್ಷನ್

    ಮುಂಬೈ: ಭೀಕರ ಕಾರು ಅಪಘಾತದಿಂದ (Car Accident) ಗಂಭೀರ ಗಾಯಗೊಂಡಿದ್ದ ಟೀಂ ಇಂಡಿಯಾ (Team India) ಕ್ರಿಕೆಟಿಗ ರಿಷಬ್ ಪಂತ್‌ಗೆ (Rishabh Pant) ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.

    ಮಂಗಳವಾರ ಬೆಳಗ್ಗೆ ಶಸ್ತ್ರಚಿಕಿತ್ಸೆ ಯಶಸ್ವಿಯಾದ ಬಳಿಕ ಅಪಘಾತದ ನಂತರ ತಮಗೆ ಸಹಾಯ ಮಾಡಿದ ಇಬ್ಬರು ಯುವಕರನ್ನ ಸ್ಮರಿಸಿದ್ದಾರೆ. ರಜತ್ ಕುಮಾರ್ ಮತ್ತು ನಿಶು ಕುಮಾರ್ ಚಿತ್ರವನ್ನ ಟ್ವೀಟರ್‌ನಲ್ಲಿ ಹಂಚಿಕೊಂಡಿರುವ ಪಂತ್ ಭಾವುಕ ಸಂದೇಶ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ದೇವರೆಂದು ಕಾಲಿಗೆ ಬಿದ್ದ ಅಭಿಮಾನಿಯ ಆಸೆ ಪೂರೈಸಿದ ಕೊಹ್ಲಿ – ನೆಟ್ಟಿಗರಿಂದ ಭಾರೀ ಮೆಚ್ಚುಗೆ

    `ನನ್ನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ಎಲ್ಲರಿಗೂ ತಿಳಿಸಲು ಬಯಸುತ್ತೇನೆ. ನಾನೀಗ ಚೇತರಿಕೆಯ ಹಾದಿಯಲ್ಲಿದ್ದೇನೆ. ನಿಮ್ಮೆಲ್ಲರ ಹಾರೈಕೆಗಾಗಿ ನಾನು ಕೃತಜ್ಞನಾಗಿದ್ದೇನೆ. ನನ್ನ ಉತ್ಸಾಹ ಹೆಚ್ಚಿದೆ. ನಾನು ಪ್ರತಿದಿನ ಚೇತರಿಸಿಕೊಳ್ಳುತ್ತಿದ್ದೇನೆ. ಮುಂದಿನ ಸವಾಲುಗಳನ್ನು ಸ್ವೀಕರಿಸಲು ಸಿದ್ಧನಿದ್ದೇನೆ. ಈ ಕಷ್ಟದ ಸಮಯದಲ್ಲಿ ಸಿಕ್ಕ ನಿಮ್ಮ ಪ್ರೀತಿಯ ಮಾತುಗಳು, ಬೆಂಬಲಕ್ಕಾಗಿ ನಾನು ಕೃತಜ್ಞತೆ ಸಲ್ಲಿಸಲು ಬಯಸುತ್ತೇನೆ’ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಹ ಆಟಗಾರನ ಗೆಳತಿಯೊಂದಿಗೆ ಪಾಕ್ ನಾಯಕ ಚಾಟಿಂಗ್ – ಹನಿಟ್ರ್ಯಾಪ್‍ಗೆ ಸಿಲುಕಿದ್ರಾ ಬಾಬರ್ ಅಜಮ್?

    `ನಾನು ಎಲ್ಲರಿಗೂ ವೈಯಕ್ತಿಕವಾಗಿ ಧನ್ಯವಾದ ಹೇಳಲು ಸಾಧ್ಯವಾಗದೇ ಇರಬಹುದು. ಆದರೆ ನಾನು ಈ ಇಬ್ಬರು ವೀರರನ್ನು ಸ್ಮರಿಸಬೇಕು. ನನ್ನನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ಸೇರಿಸಿದವರು ಇವರು. ಇವರಿಗೆ ನಾನು ಶಾಶ್ವತವಾಗಿ ಕೃತಜ್ಞನಾಗಿರುತ್ತೇನೆ. ಅಲ್ಲದೇ ನನ್ನ ಅಭಿಮಾನಿಗಳು, ನನ್ನ ತಂಡ ಸಹಪಾಠಿಗಳು ಚಿಕಿತ್ಸೆ ನೀಡಿದ ವೈದ್ಯರು ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನಿಮ್ಮೆಲ್ಲರನ್ನೂ ನಾನು ಮತ್ತೆ ಮೈದಾನದಲ್ಲಿ ನೋಡಲು ಎದುರುನೋಡುತ್ತಿದ್ದೇನೆ ಎಂದು ಭಾವುಕ ನುಡಿಗಳನ್ನ ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.

    ರಿಷಬ್‌ಗೆ ಏನಾಗಿತ್ತು?
    2022ರ ಡಿಸೆಂಬರ್ 30ರಂದು ಟೀಂ ಇಂಡಿಯಾ ಆಟಗಾರ ರಿಷಭ್ ಪಂತ್ ಅವರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿತ್ತು. ಉತ್ತರಾಖಂಡದಲ್ಲಿರುವ ತಮ್ಮ ನಿವಾಸಕ್ಕೆ ತೆರಳುತ್ತಿದ್ದಾಗ ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು, ಪಂತ್ ಗಂಭೀರವಾಗಿ ಗಾಯಗೊಂಡಿದ್ದರು. ರಿಷಭ್ ಪಂತ್ ಅವರ ತಲೆ (ಹಣೆಯ ಭಾಗ), ಕಾಲಿಗೆ ಗಂಭೀರ ಪೆಟ್ಟಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿತ್ತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಇನ್ನೂ ಚಿಂತಾಜನಕ ಸ್ಥಿತಿಯಲ್ಲೇ ಹಾಲಿವುಡ್ ಖ್ಯಾತ ನಟ ಜೆರ್ಮಿ ರನ್ನರ್

    ಇನ್ನೂ ಚಿಂತಾಜನಕ ಸ್ಥಿತಿಯಲ್ಲೇ ಹಾಲಿವುಡ್ ಖ್ಯಾತ ನಟ ಜೆರ್ಮಿ ರನ್ನರ್

    ನಿನ್ನೆಯಷ್ಟೇ ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹಾಲಿವುಡ್ ನಟ, ಅವೇಂಜರ್ಸ್ ಖ್ಯಾತಿಯ ಜೆರ್ಮಿ ರನ್ನರ್ ಸ್ಥಿತಿ ಇನ್ನೂ ಚಿಂತಾಜನಕವಾಗಿದೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದರೂ, ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ ಎಂದು ಹೇಳಲಾಗುತ್ತಿದೆ. ಅವೇಂಜರ್ಸ್ ಸರಣಿಯಲ್ಲಿ ಹ್ಯಾಕ್ ಐ ಪಾತ್ರ ನಿರ್ವಹಿಸುತ್ತಿದ್ದ ಇವರು ದಟ್ಟ ಮಂಜು ಮಧ್ಯ ನಿನ್ನೆ ಕಾರು ಚಲಾಯಿಸುತ್ತಿರುವಾಗ ಅಪಘಾತಕ್ಕೀಡಾಗಿದ್ದರು. ಅಪಘಾತವಾದ ತಕ್ಷಣವೇ ಏರ್ ಲಿಫ್ಟ್ ಮೂಲಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಜೆರ್ಮಿ ವಾಸಿಸುತ್ತಿದ್ದ ನೆವಾಡಾದಲ್ಲಿ ಹಲವು ದಿನಗಳಿಂದ ಹಿಮಪಾತವಾಗುತ್ತಿದೆ. ಇಡೀ ಪ್ರದೇಶದ ಹಿಮದಿಂದ ಮುಚ್ಚಿದೆ. ಅಲ್ಲದೇ ವಿದ್ಯುತ್ ಕೂಡ ಕೈಕೊಟ್ಟಿದೆ. ಸಂಚಾರಕ್ಕೆ ಸಾಕಷ್ಟು ಅಡೆತಡೆಗಳು ಎದುರಾಗುತ್ತಿದೆ. ಈ ಸಂದರ್ಭದಲ್ಲಿ ಜೆರ್ಮಿ ಕಾರು ಚಲಾಯಿಸಿದ್ದಾರೆ. ದಟ್ಟ ಮಂಜು ಇದ್ದ ಕಾರಣಕ್ಕಾಗಿ ರಸ್ತೆ ಕಾಣದೇ ಅಪಘಾತ ಮಾಡಿಕೊಂಡಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ. ಇದನ್ನೂ ಓದಿ: ನಾನಿಲ್ಲಿ ಗೆದ್ದಿರುವಂಥದ್ದು ನಿಮ್ಮಿಂದ, ನೀವು ನನ್ನನ್ನು ಗೆಲ್ಲಿಸಿದ್ದೀರಿ: ರೂಪೇಶ್ ಶೆಟ್ಟಿ

    ತೀವ್ರ ಗಾಯಗೊಂಡಿದ್ದ ಅವರನ್ನು ರಸ್ತೆ ಸಂಚಾರಕ್ಕೆ ಅನುಕೂಲ ಇಲ್ಲದ ಕಾರಣದಿಂದಾಗಿ ಏರ್ ಲಿಫ್ಟ್ ಮಾಡಲಾಗಿದೆ. ಸ್ಥಿತಿ ಗಂಭೀರವಾಗಿರುವುದರಿಂದ ಸದ್ಯಕ್ಕೆ ಏನೂ ಹೇಳಲು ಸಾಧ್ಯವಿಲ್ಲ ಎಂದಿದ್ದಾರಂತೆ ವೈದ್ಯರು. ಹಾಲಿವುಡ್ ನಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ಇವರು, ಆಸ್ಕರ್ ಪ್ರಶಸ್ತಿ ವಿಜೇತ ‘ಹರ್ಟ್ ಲಾಕರ್’ ಸಿನಿಮಾದಲ್ಲೂ ನಟಿಸಿದ್ದಾರೆ. ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದರೂ, ಫೇಮಸ್ ಅಂತ ಆಗಿದ್ದು ಅವೇಂಜರ್ಸ್ ಸೀರಿಸ್ ಮೂಲಕ ಎನ್ನುವುದು ವಿಶೇಷ.

    Live Tv
    [brid partner=56869869 player=32851 video=960834 autoplay=true]

  • ರಿಷಭ್ ಪಂತ್ ತಾಯಿಗೆ ಕರೆ ಮಾಡಿ ಅಭಯ ನೀಡಿದ ಮೋದಿ

    ರಿಷಭ್ ಪಂತ್ ತಾಯಿಗೆ ಕರೆ ಮಾಡಿ ಅಭಯ ನೀಡಿದ ಮೋದಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತಮ್ಮ ತಾಯಿ ಹೀರಾಬೆನ್ ಕಳೆದುಕೊಂಡ ದುಃಖದಲ್ಲಿದ್ದರೂ ರಿಷಭ್ ಪಂತ್ (Rishabh Pant) ಅವರ ಆರೋಗ್ಯದ ಬಗ್ಗೆ ಕ್ಷಣ-ಕ್ಷಣದ ಮಾಹಿತಿ ಪಡೆಯುತ್ತಿದ್ದಾರೆ. ನಿನ್ನೆಯಷ್ಟೇ ಟ್ವೀಟ್ ಮೂಲಕ ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸಿದ್ದ ಮೋದಿ ಅವರಿಂದು ಪಂತ್ ಅವರ ಕುಟುಂಬಕ್ಕೆ ಕರೆ ಮಾಡಿ ಅಭಯ ನೀಡಿದ್ದಾರೆ.

    ಇಂದು ಬೆಳಗ್ಗೆ ಪಂತ್ ಅವರ ತಾಯಿಗೆ ಕರೆ ಮಾಡಿ, ರಿಷಭ್ ಅವರ ಆರೋಗ್ಯ ಸ್ಥಿತಿಗತಿಯ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ ರಿಷಭ್ ಅವರು ಶೀಘ್ರವೇ ಗುಣಮುಖರಾಗಿ ಬರಲಿದ್ದಾರೆ. ಅದಕ್ಕೆ ಅಗತ್ಯ ರೀತಿಯ ಎಲ್ಲ ಸಹಕಾರಗಳನ್ನು ನೀಡಲಾಗುವುದು ಎಂದು ಅಭಯ ನೀಡಿದ್ದಾರೆ. ಇದನ್ನೂ ಓದಿ: ಮ್ಯಾಂಚೆಸ್ಟರ್ ಯುನೈಟೆಡ್ ತಂಡಕ್ಕೆ ಗುಡ್ ಬೈ – ಸೌದಿ ಅರೇಬಿಯಾ ಪಾಲಾದ ರೊನಾಲ್ಡೊ

    `ಖ್ಯಾತ ಕ್ರಿಕೆಟಿಗ ಪಂತ್ ಅಪಘಾತಕ್ಕೀಡಾಗಿ ಆಸ್ಪತ್ರೆ ಸೇರಿರುವುದನ್ನು ಅರಿತು ಪಂತ್‌ಗೆ ಅಪಘಾತವಾಗಿರುವ ಸುದ್ದಿ ಕೇಳಿ ದುಃಖವಾಗಿದೆ. ಆದಷ್ಟು ಬೇಗ ಆರೋಗ್ಯ ಸುಧಾರಿಸಲಿ, ಚೇತರಿಕೆ ಕಾಣಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ನಿನ್ನೆಯಷ್ಟೇ ಟ್ವೀಟ್ ಮಾಡಿದ್ದರು. ಇದನ್ನೂ ಓದಿ: ತಾಯಿ ಮಡಿದ ನೋವಿನಲ್ಲೂ ಪಂತ್ ಆರೋಗ್ಯ ಚೇತರಿಕೆಗಾಗಿ ಹಾರೈಸಿದ ಮೋದಿ

    ಕ್ರಿಕೆಟ್ ನೋಡಬೇಡಿ: ರಿಷಭ್ ಪಂತ್ ಅವರನ್ನು ಅಪಘಾತ ಸ್ಥಳದಿಂದ ರಕ್ಷಿಸಿದ ಬಸ್ ಡ್ರೈವರ್ ಸುಶೀಲ್ ಕುಮಾರ್ ಘಟನೆಯ ಸನ್ನಿವೇಶವನ್ನು ಎಳೆ-ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಅಲ್ಲದೇ ಅವರನ್ನು ಗುರುತಿಸದಿದ್ದ ಮೇಲೆ ಕ್ರಿಕೆಟ್ ನೋಡಬೇಡಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಭಯೋತ್ಪಾದನೆಯಿಂದ ಭಾರತ ನೊಂದಷ್ಟು ಬೇರಾವ ದೇಶವೂ ನೊಂದಿಲ್ಲ: ಜೈಶಂಕರ್

    ರಿಷಭ್ ಪಂತ್ ಅವರನ್ನು ನೋಡಿದಾಗ ಮುಖವೆಲ್ಲಾ ರಕ್ತದ ಮಡುವಿನಲ್ಲಿತ್ತು. ಬಟ್ಟೆ ಚಿಂದಿಯಾಗಿ ಅವರ ಬೆನ್ನೆಲ್ಲಾ ತರಚಿದ ಗಾಯಗಳಾಗಿತ್ತು. ಅತೀವ ನೋವಿನಿಂದ ಬಳಲಿದ್ದ ಅವರು ಕುಂಟುತ್ತಿದ್ದರು, ಎಂದು ಸುಶೀಲ್ ಕುಮಾರ್ ಸಂದರ್ಶನದಲ್ಲಿ ಘಟನೆಯ ವಿವರಗಳನ್ನು ತೆರೆದಿಟ್ಟಿದ್ದಾರೆ. ನಾವು ಸಹಾಯಕ್ಕಾಗಿ ಕೂಗಿದರೂ ಯಾರೊಬ್ಬರೂ ಬರಲಿಲ್ಲ. ರಾಷ್ಟ್ರೀಯ ಹೈದಾರಿ ಸಹಾಯವಾಣಿಗೆ ಕರೆ ಮಾಡಿದೆವು. ಯಾವ ಅಧಿಕಾರಿಗಳಿಂದಲೂ ಸ್ಪಂದನೆ ಸಿಗಲಿಲ್ಲ. ಬಳಿಕ ನಾನು ಪೊಲೀಸ್‌ಗೆ ಮಾಹಿತಿ ನೀಡಿದೆ. ಬಸ್ ಕಂಡಕ್ಟರ್ ಅಂಬುಲೆನ್ಸ್ಗೆ ಕರೆ ಮಾಡಿದರು. ಅವರ ಸ್ಥಿತಿ ಬಗ್ಗೆ ನಾವು ಕೇಳುತ್ತಲೇ ಇದ್ದೆವು. ನೀರು ಕೂಡ ಕೊಟ್ಟೆವು. ಕೊಂಚ ಸುಧಾರಿಸಿದ ಬಳಿಕ ಅವರೇ `ನಾನು ರಿಷಭ್ ಪಂತ್’ ಎಂದು ಹೇಳಿಕೊಂಡಿರುವುದಾಗಿ ತಿಳಿಸಿದ್ದಾರೆ.

    ಪಂತ್ ಉತ್ತರಾಖಂಡದಿಂದ ದೆಹಲಿಗೆ ಹಿಂದಿರುಗುತ್ತಿದ್ದ ವೇಳೆ ರೂರ್ಕಿಯ ನರ್ಸನ್ ಗಡಿಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಕೆಲ ಕ್ಷಣಗಳಲ್ಲೇ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ಕೂಡಲೇ ಕಾರಿನಲ್ಲಿದ್ದ ಪಂತ್ ಗಾಜನ್ನು ಹೊಡೆದುಕೊಂಡು ಹೊರ ಬಂದು ಗ್ರೇಟ್ ಎಸ್ಕೇಪ್ ಆಗಿದ್ದರು. ಸದ್ಯ ರಿಷಭ್ ಆರೋಗ್ಯ ಸ್ಥಿರವಾಗಿದ್ದು, ಆತಂಕ ಪಡಬೇಕಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜೆಡಿಎಸ್ ಮುಖಂಡ ಕಲ್ಲಪ್ಪ ಮಗೆಣ್ಣವರ ಕಾರು ಅಪಘಾತ

    ಜೆಡಿಎಸ್ ಮುಖಂಡ ಕಲ್ಲಪ್ಪ ಮಗೆಣ್ಣವರ ಕಾರು ಅಪಘಾತ

    ಚಿಕ್ಕೋಡಿ(ಬೆಳಗಾವಿ): ಮಾಜಿ ಶಾಸಕ, ಜೆಡಿಎಸ್ (JDS) ಮುಖಂಡ ಕಲ್ಲಪ್ಪ ಮಗೆಣ್ಣವರ ಕಾರು ಅಪಘಾತ (Car Accident) ಕ್ಕೀಡಾಗಿದೆ.

    ವಿಜಯಪುರದಿಂದ ಚಿಕ್ಕೋಡಿ (Chikkodi) ತಾಲೂಕಿನ ಮಾಂಜರಿ ಗ್ರಾಮಕ್ಕೆ ಆಗಮಿಸುತ್ತಿರುವಾಗ ಬೆಳಗಾವಿಯ ಅಥಣಿ ಪಟ್ಟಣದ ಹೊರವಲಯದಲ್ಲಿ ಈ ದುರ್ಘಟನೆ ನಡೆದಿದೆ. ಇದನ್ನೂ ಓದಿ: ನಾವು ಕೂಗಾಡಿದ್ರೂ ಸಹಾಯಕ್ಕೆ ಯಾರೊಬ್ಬರೂ ಬರಲಿಲ್ಲ- ಪಂತ್ ರಕ್ಷಿಸಿದ ಬಸ್ ಡ್ರೈವರ್‌ ಬಿಚ್ಚಿಟ್ಟ ಸತ್ಯ

    ಮಾಂಜರಿ ಗ್ರಾಮ ಜೆಡಿಎಸ್ ಮುಖಂಡ ಕಲ್ಲಪ್ಪ ಮಗೆಣ್ಣವರ (Kallappa Magennavar) ಸ್ವಗ್ರಾಮವಾಗಿದೆ. ಅಥಣಿಯಿಂದ ವಿಜಯಪುರದತ್ತ ಸಾಗುತ್ತಿದ್ದ ಲಾರಿ (Lorry) ಟೈಯರ್ ಬ್ಲಾಸ್ಟ್ ಆಗಿ ಕಾರಿನ ಮೇಲೆ ಟೈಯರ್ ಬಿದ್ದ ಪರಿಣಾಮ ಮಗೆಣ್ಣವರ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿದೆ.

    ಕಾರಿನಲ್ಲಿದ್ದ ಮಗೆಣ್ಣವರ ಸೇರಿದಂತೆ ಇನ್ನುಳಿದ ಆರು ಜನರಿಗೆ ಸಣ್ಣಪುಟ್ಟ ಗಾಯಗಳು ಆಗಿವೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    Live Tv
    [brid partner=56869869 player=32851 video=960834 autoplay=true]

  • ನಾವು ಕೂಗಾಡಿದ್ರೂ ಸಹಾಯಕ್ಕೆ ಯಾರೊಬ್ಬರೂ ಬರಲಿಲ್ಲ- ಪಂತ್ ರಕ್ಷಿಸಿದ ಬಸ್ ಡ್ರೈವರ್‌ ಬಿಚ್ಚಿಟ್ಟ ಸತ್ಯ

    ನಾವು ಕೂಗಾಡಿದ್ರೂ ಸಹಾಯಕ್ಕೆ ಯಾರೊಬ್ಬರೂ ಬರಲಿಲ್ಲ- ಪಂತ್ ರಕ್ಷಿಸಿದ ಬಸ್ ಡ್ರೈವರ್‌ ಬಿಚ್ಚಿಟ್ಟ ಸತ್ಯ

    ಡೆಹ್ರಾಡೂನ್: ಅತ್ಯಂತ ಭೀಕರ ರಸ್ತೆ ಅಪಘಾತದಲ್ಲಿ (Road Accident) ಟೀಂ ಇಂಡಿಯಾ (Team India) ಸ್ಟಾರ್ ಆಟಗಾರ ರಿಷಭ್ ಪಂತ್ (Rishabh Pant) ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಪಂತ್ ಅವರ ರಕ್ಷಣೆಗೆ ಧಾವಿಸಿದ ಬಸ್ ಡ್ರೈವರ್‌ (Bus Driver) ಆ ಕ್ಷಣದ ರೋಚಕತೆಯನ್ನು ವಿವರಿಸಿದ್ದಾರೆ.

    ಗಂಭೀರವಾಗಿ ಗಾಯಗೊಂಡಿದ್ದ ಪಂತ್ ಅವರನ್ನು ಘಟನಾ ಸ್ಥಳದಲ್ಲಿದ್ದವರು ರಕ್ಷಿಸಿದ್ದಾರೆ. ಅದರಲ್ಲೂ ಪಂತ್‌ಗೆ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಬಸ್‌ನ ಡ್ರೈವರ್‌ ಸುಶೀಲ್ ಕುಮಾರ್ ( ಸಹಾಯಕ್ಕೆ ಮೊದಲಿಗರಾಗಿ ಧಾವಿಸಿದ್ದಾರೆ ಎಂಬುದು ಗೊತ್ತಾಗಿದೆ. ಬಳಿಕ ರಕ್ಷಣೆಗೆ ಧಾವಿಸಿದ ಬಸ್ ಡ್ರೈವರ್‌ ಸುಶೀಲ್ ಕುಮಾರ್ (Sushil Kumar) ಹಾಗೂ ಕಂಡಕ್ಟರ್ ಪರಮ್ ಜೀತ್‌ನನ್ನು (Paramjit) ಹರಿಯಾಣ ಸಾರಿಗೆ ಇಲಾಖೆ  ಉನ್ನತಾಧಿಕಾರಿಗಳು ಅಭಿನಂದಿಸಿದ್ದಾರೆ. ಸ್ಮರಣಿಕೆ ನೀಡಿ ಗೌರವಿಸಿದ್ದಾರೆ. ಇದನ್ನೂ ಓದಿ: ಭೀಕರ ಕಾರು ಅಪಘಾತ- ಟೀಂ ಇಂಡಿಯಾ ಆಟಗಾರ ರಿಷಭ್ ಪಂತ್ ಸ್ಥಿತಿ ಗಂಭೀರ

    ಅಪಘಾತಕ್ಕೀಡಾಗಿದ್ದ ವ್ಯಕ್ತಿ ಯಾರೆಂದು ತಿಳಿಯುವ ಮೊದಲೇ ಸಹಾಯಕ್ಕೆ ಧಾವಿಸಿದ್ದ ಸುಶೀಲ್ ಕುಮಾರ್ ಹೇಳಿರುವ ಪ್ರಕಾರ, ರಿಷಭ್ ಅವರ ಕಾರಲ್ಲಿದ್ದ ವಸ್ತುಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು. ಸುಶೀಲ್ ಕುಮಾರ್ ಅವೆಲ್ಲವನ್ನೂ ಸಂಗ್ರಹಿಸಿ ಪಂತ್‌ಗೆ ಹಿಂದಿರುಗಿಸಿದ್ದಾಗಿ ಹೇಳಿದ್ದಾರೆ. ಇದನ್ನೂ ಓದಿ: ತಾಯಿ ಮಡಿದ ನೋವಿನಲ್ಲೂ ಪಂತ್ ಆರೋಗ್ಯ ಚೇತರಿಕೆಗಾಗಿ ಹಾರೈಸಿದ ಮೋದಿ

    ಪ್ರಾಥಮಿಕ ವರದಿಯ ಪ್ರಕಾರ, ಸ್ಥಳೀಯರು ಪಂತ್ ಅವರ ಸಾಮಗ್ರಿಗಳನ್ನು ಲೂಟಿ ಮಾಡಿದ್ದರು ಎಂಬುದು ವಾಸ್ತವಕ್ಕೆ ದೂರದ ಸಂಗತಿಗಳು ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿತ್ತು. ಆದರೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸ್ ಅಧಿಕಾರಿಗಳು ಕೂಡ, ಯಾರೊಬ್ಬರೂ ಏನನ್ನೂ ಲೂಟಿ ಮಾಡಿಲ್ಲ ಎಂಬ ಸಂಗತಿಯನ್ನು ಖಾತ್ರಿ ಪಡಿಸಿದ್ದಾರೆ. ಇದನ್ನೂ ಓದಿ: ತಾಯಿಗೆ ಸರ್ಪ್ರೈಸ್‌ ಕೊಡಲು ತೆರಳ್ತಿದ್ದಾಗಲೇ ದುರಂತ – ಪಂತ್ ಅಭಿಮಾನಿಗಳ ಆಕ್ರಂದನ

    ಮೈ ಜುಮ್ಮೆನ್ನಿಸುವಂತಿತ್ತು ಆ ರೋಚಕ ಕ್ಷಣ?: ರಿಷಭ್ ಪಂತ್ ಅವರನ್ನು ನೋಡಿದಾಗ ಮುಖವೆಲ್ಲಾ ರಕ್ತದ ಮಡುವಿನಲ್ಲಿತ್ತು. ಬಟ್ಟೆ ಚಿಂದಿಯಾಗಿ ಅವರ ಬೆನ್ನೆಲ್ಲಾ ತರಚಿದ ಗಾಯಗಳಾಗಿತ್ತು. ಅತೀವ ನೋವಿನಿಂದ ಬಳಲಿದ್ದ ಅವರು ಕುಂಟುತ್ತಿದ್ದರು, ಎಂದು ಸುಶೀಲ್ ಕುಮಾರ್ ಸಂದರ್ಶನದಲ್ಲಿ ಘಟನೆಯ ವಿವರಗಳನ್ನು ತೆರೆದಿಟ್ಟಿದ್ದಾರೆ. ನಾವು ಸಹಾಯಕ್ಕಾಗಿ ಕೂಗಿದರೂ ಯಾರೊಬ್ಬರೂ ಬರಲಿಲ್ಲ. ರಾಷ್ಟ್ರೀಯ ಹೈದಾರಿ ಸಹಾಯವಾಣಿಗೆ ಕರೆ ಮಾಡಿದೆವು. ಯಾವ ಅಧಿಕಾರಿಗಳಿಂದಲೂ ಸ್ಪಂದನೆ ಸಿಗಲಿಲ್ಲ. ಬಳಿಕ ನಾನು ಪೊಲೀಸ್‌ಗೆ ಮಾಹಿತಿ ನೀಡಿದೆ. ಬಸ್ ಕಂಡಕ್ಟರ್ ಅಂಬುಲೆನ್ಸ್ಗೆ ಕರೆ ಮಾಡಿದರು. ಅವರ ಸ್ಥಿತಿ ಬಗ್ಗೆ ನಾವು ಕೇಳುತ್ತಲೇ ಇದ್ದೆವು. ನೀರು ಕೂಡ ಕೊಟ್ಟೆವು. ಕೊಂಚ ಸುಧಾರಿಸಿದ ಬಳಿಕ ಅವರೇ `ನಾನು ರಿಷಭ್ ಪಂತ್’ ಎಂದು ಹೇಳಿಕೊಂಡರು ಎಂದು ಆ ಕ್ಷಣದ ರೋಚಕತೆಯನ್ನು ವಿವರಿಸಿದ್ದಾರೆ.

    ನಾವು ರಕ್ಷಣೆಗೆ ಧಾವಿಸಿದಾಗ ರಿಷಭ್ ಪಂತ್ ನಮಗೆ ಅವರ ತಾಯಿಯ ನಂಬರ್ ಕೊಟ್ಟರು. ಆ ಸಂಖ್ಯೆಗೆ ಕರೆ ಮಾಡಿದಾಗ ಅದು ಸ್ವಿಚ್ ಆಫ್ ಬಂದಿತು. 15 ನಿಮಿಷಗಳ ನಂತರ ಅಂಬುಲೆನ್ಸ್ ಬಂದಿತ್ತು. ರಸ್ತೆಯಲ್ಲಿ ಬಿದ್ದಿದ್ದ ಅವರ ಹಣವನ್ನು ಒಗ್ಗೂಡಿಸಿಕೊಟ್ಟೆವು. ಕಾರಿನಲ್ಲಿ ಬೇರೆ ಯಾರಾದ್ರೂ ಇದ್ದಾರೆಯೇ ಎಂದೆಲ್ಲಾ ವಿಚಾರಿಸಿದೆವು. ಕಾರಲ್ಲಿ ಬೇರೆ ಯಾರೂ ಇರಲಿಲ್ಲ ಎಂದು ಅವರು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ತಾಯಿ ಮಡಿದ ನೋವಿನಲ್ಲೂ ಪಂತ್ ಆರೋಗ್ಯ ಚೇತರಿಕೆಗಾಗಿ ಹಾರೈಸಿದ ಮೋದಿ

    ತಾಯಿ ಮಡಿದ ನೋವಿನಲ್ಲೂ ಪಂತ್ ಆರೋಗ್ಯ ಚೇತರಿಕೆಗಾಗಿ ಹಾರೈಸಿದ ಮೋದಿ

    ನವದೆಹಲಿ: ತಾಯಿ ಹೀರಾಬೆನ್ ಮೋದಿ (Hiraben Modi) ವಿಧಿವಶರಾದ ನೋವಿನಲ್ಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi), ಕಾರು ಅಪಘಾತದಲ್ಲಿ (Car Accident) ಗಾಯಗೊಂಡು ಆಸ್ಪತ್ರೆ ಸೇರಿರುವ ಟೀಂ ಇಂಡಿಯಾದ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮ್ಯಾನ್‌ ರಿಷಭ್‌ ಪಂತ್ (Rishabh Pant) ಆರೋಗ್ಯ ಚೇತರಿಕೆಗಾಗಿ ಹಾರೈಸಿದ್ದಾರೆ.

    ಮೋದಿ ಅವರ ತಾಯಿ ಶತಾಯುಷಿ ಹೀರಾಬೆನ್ ವಯೋಸಹಜ ಕಾಯಿಲೆಯಿಂದ ಇಂದು ಮೃತಪಟ್ಟಿದ್ದರು. ಆ ಬಳಿಕ ತಾಯಿಯ ಅಂತಿಮ ವಿಧಿ-ವಿಧಾನಗಳಲ್ಲಿ ಪಾಲ್ಗೊಂಡ ಮೋದಿ ಆ ನೋವಿನ ನಡುವೆಯೇ ಖ್ಯಾತ ಕ್ರಿಕೆಟಿಗ ಪಂತ್ ಅಪಘಾತಕ್ಕೀಡಾಗಿ ಆಸ್ಪತ್ರೆ ಸೇರಿರುವುದನ್ನು ಅರಿತು ಪಂತ್‍ಗೆ ಅಪಘಾತವಾಗಿರುವ ಸುದ್ದಿ ಕೇಳಿ ದುಃಖವಾಗಿದೆ. ಆದಷ್ಟು ಬೇಗ ಆರೋಗ್ಯ ಸುಧಾರಿಸಲಿ, ಚೇತರಿಕೆ ಕಾಣಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಫುಟ್ಬಾಲ್ ಲೆಜೆಂಡ್ ಪೀಲೆ ಇನ್ನಿಲ್ಲ

    ಮೋದಿ ಪಂತ್‍ಗೆ ಹಾರೈಕೆ ಜೊತೆ ಆನಾರೋಗ್ಯದಿಂದ ಮೃತಪಟ್ಟ ಫುಟ್‍ಬಾಲ್ ದಿಗ್ಗಜ ಪೀಲೆ (Pele) ಸಾವಿಗೆ ಕಂಬನಿ ಮಿಡಿದಿದ್ದಾರೆ. ಪೀಲೆ ಒಬ್ಬ ವಿಶ್ವ ಫುಟ್‍ಬಾಲ್ ಸ್ಟಾರ್. ಅವರ ಸಾವು ತುಂಬಾ ನಷ್ಟವುಂಟುಮಾಡಿದೆ. ಅವರ ಆಟ, ಯಶಸ್ಸು ಮುಂದಿನ ಪೀಳಿಗೆಗೆ ಸ್ಫೂರ್ತಿದಾಯಕ ಎಂದು ಟ್ವೀಟ್ ಮಾಡಿದ್ದಾರೆ.

    ಪಂತ್ ಉತ್ತರಾಖಂಡದಿಂದ ದೆಹಲಿಗೆ ಹಿಂದಿರುಗುತ್ತಿದ್ದ ವೇಳೆ ಹಮ್ಮದ್‍ಪುರ ಝಾಲ್‍ನ ರೂರ್ಕಿಯ ನರ್ಸನ್ ಗಡಿಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು, ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಕಾರಿನಲ್ಲಿದ್ದ ಪಂತ್ ಗಾಜನ್ನು ಹೊಡೆದುಕೊಂಡು ಹೊರ ಬಂದು ಗ್ರೇಟ್ ಎಸ್ಕೇಪ್ ಆಗಿದ್ದರು. ನಿದ್ದೆ ಮಂಪರಿನಲ್ಲಿ ಅಪಘಾತ ನಡೆದಿರುವ ಸಾಧ್ಯತೆ ಕಂಡುಬರುತ್ತಿದ್ದು, ಸದ್ಯ ಡೆಹ್ರಾಡೂನ್ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಪಂತ್ ಹಣೆಗೆ ಸ್ಟಿಚ್ ಹಾಕಲಾಗಿದೆ, ಮೊಣಕಾಲು, ಪಾದ, ಬೆನ್ನಿಗೆ ಗಾಯ – ಭಯಪಡುವ ಅಗತ್ಯವಿಲ್ಲ: ಬಿಸಿಸಿಐ ವರದಿ

    ಪಂತ್ ಅಪಘಾತ ಸುದ್ದಿ ಕೇಳಿ ವಿಶ್ವ ಕ್ರಿಕೆಟ್ ದಿಗ್ಗಜರು ಸೇರಿದಂತೆ ಅಭಿಮಾನಿಗಳು ಆಘಾತಗೊಂಡಿದ್ದು, ಪಂತ್ ಆರೋಗ್ಯ ಸುಧಾರಿಸಲಿ ಆದಷ್ಟು ಬೇಗ ಮತ್ತೆ ಮೈದಾನದಲ್ಲಿ ಕಾಣುವಂತಾಗಲಿ ಎಂದು ದೇವರಲ್ಲಿ ಬೇಡಿಕೊಳ್ಳುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]