Tag: caste abuse

  • ಉಪೇಂದ್ರರನ್ನ 5 ವರ್ಷ ಬ್ಯಾನ್ ಮಾಡಿ : ಫಿಲ್ಮ್ ಚೇಂಬರ್ ಗೆ ಮನವಿ

    ಉಪೇಂದ್ರರನ್ನ 5 ವರ್ಷ ಬ್ಯಾನ್ ಮಾಡಿ : ಫಿಲ್ಮ್ ಚೇಂಬರ್ ಗೆ ಮನವಿ

    ಜಾತಿ ನಿಂದನೆ (caste abuse) ಆರೋಪ ಎದುರಿಸುತ್ತಿರುವ ನಟ ಉಪೇಂದ್ರ (Upendra) ಅವರನ್ನು ಸಿನಿಮಾ ರಂಗದಿಂದ 5 ವರ್ಷ ಬ್ಯಾನ್ ಮಾಡಬೇಕು ಎಂದು ಕರ್ನಾಟಕ ರಣಧೀರ ಪಡೆಯ ಕಾರ್ಯಕರ್ತರು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ (film chamber) ಮಂಡಳಿಗೆ ದೂರು ನೀಡಿದ್ದಾರೆ. ಭೈರಪ್ಪ ಹರೀಶ್ ಕುಮಾರ್ ನೇತೃತ್ವದಲ್ಲಿ ವಾಣಿಜ್ಯ ಮಂಡಳಿಗೆ ಆಗಮಿಸಿದ್ದ ಕಾರ್ಯಕರ್ತರು ಉಪೇಂದ್ರ ಅವರನ್ನು ಬ್ಯಾನ್ (ban) ಮಾಡುವಂತೆ ಮನವಿ ಮಾಡಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಭೈರಪ್ಪ ಹರೀಶ್ ಕುಮಾರ್, ‘ದಲಿತಕೇರಿ, ಊರಲ್ಲಿ ಯಾರು ಯಾರು ಇರಬೇಕು ಅಂತಾ ಹೇಳಬೇಕು. ಇವರೆಲ್ಲ ಸಿನಿಮಾಗಳಲ್ಲಿ ಮಾತ್ರ ನಾಯಕರು. ನಿಜವಾದ ನಾಯಕ ಓಡಿ ಹೋಗೋದಲ್ಲ. ಸ್ಟೇ ತರೋದು, ಓಡಿ ಹೋಗೋದಲ್ಲ. ಜಾತಿ, ಕೇರಿಗಳ ಬಗ್ಗೆ ಮಾತನಾಡುವವರನ್ನು ಬ್ಯಾನ್ ಮಾಡಬೇಕು’ ಎಂದು ಮಾತನಾಡಿದರು.

    ದೂರು ಸ್ವೀಕರಿಸಿದ ಹಿರಿಯ ನಟ ಹಾಗೂ ಕರ್ನಾಟಕ ಫಿಲ್ಮ್ ಚೇಂಬರ್ ಗೌರವ ಕಾರ್ಯದರ್ಶಿ ಸುಂದರ್ ರಾಜ್, ‘ನಟ ಉಪೇಂದ್ರ ಅವರು ಬೇಕಂತ ಮಾತನಾಡಿದ್ದು ಅಂತಾ ಅನಿಸತ್ತಾ ಇಲ್ಲ. ಸಮಾಜಮುಖಿಯಾಗಿ ಯೋಚನೆ ಮಾಡಬೇಕು. ಫಿಲ್ಮ್ ಚೇಂಬರ್ ಗೆ ಬ್ಯಾನ್ ಮಾಡೋ ಹಕ್ಕಿಲ್ಲ. ನಾವು ಸಂಧಾನ ಮಾಡ್ತೇವೆ, ಸಂಹಾರ ಮಾಡಲ್ಲ. ಕಾರ್ಯದರ್ಶಿಯಾಗಿ ಬ್ಯಾನ್ ಮಾಡಬೇಕೆಂಬ ಮನವಿ ಸ್ವೀಕರಿಸಿದ್ದೇನೆ. ಬ್ಯಾನ್ ಮಾಡಲು ಕೋರ್ಟ್ ಅನುಮತಿ ಕೊಡಲ್ಲ. ಉಪೇಂದ್ರ ಅವರನ್ನು ಕರೆಸಿ ಮಾತನಾಡುತ್ತೇವೆ’ ಎಂದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಟ ಉಪೇಂದ್ರಗೆ ಬಿಗ್ ರಿಲೀಫ್: ಮಧ್ಯಂತರ ತಡೆ ನೀಡಿದ ಹೈಕೋರ್ಟ್

    ನಟ ಉಪೇಂದ್ರಗೆ ಬಿಗ್ ರಿಲೀಫ್: ಮಧ್ಯಂತರ ತಡೆ ನೀಡಿದ ಹೈಕೋರ್ಟ್

    ಮ್ಮ ಮೇಲೆ ದಾಖಲಾಗಿರುವ ಎಫ್.ಐ.ಆರ್ ರದ್ದುಗೊಳಿಸುವಂತೆ ನಟ ಉಪೇಂದ್ರ (Upendra) ಹೈಕೋರ್ಟ್ ಮೆಟ್ಟಿಲು ಏರಿದ್ದರು. ಈಗಾಗಲೇ ತಾವು ಆಡಿದ ಮಾತಿನ ಬಗ್ಗೆ ಕ್ಷಮೆ ಕೇಳಿದ್ದೇನೆ. ಜೊತೆಗೆ ಆ ವಿಡಿಯೋವನ್ನು ಸೋಷಿಯಲ್ ಮೀಡಿಯಾದಿಂದಲೇ ಡಿಲಿಟ್ ಮಾಡಿದ್ದೇನೆ. ಯಾರ ಮನಸ್ಸಿಗೂ ನೋವು ಮಾಡುವ ಉದ್ದೇಶದಿಂದ ಆಡಿದ ಮಾತು ಅದಾಗಿರಲಿಲ್ಲವೆಂದು ಎಂದು ಮನವಿ ಮಾಡಿಕೊಂಡಿದ್ದರು. ಈ ಅರ್ಜಿಗೆ ಸಂಬಂಧಿಸಿದ್ದಂತೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

    ಉಪೇಂದ್ರ ಸಲ್ಲಿಸಿದ್ದ ಮನವಿಯನ್ನು ಏಕಸದಸ್ಯ ಪೀಠವು ವಿಚಾರಣೆಯನ್ನು ಕೈಗೆತ್ತಿಕೊಂಡಿತ್ತು. ಉಪೇಂದ್ರ ಪರ ವಕೀಲ ಉದಯ್ ಹೊಳ್ಳ ವಾದ ಮಂಡಿಸಿ, ‘ಆ ಪದವನ್ನು ದುರುದ್ದೇಶದಿಂದ ಬಳಸಿದ್ದಲ್ಲ, ಉಪೇಂದ್ರ ಅವರು ಜನಪ್ರಿಯ ವ್ಯಕ್ತಿಯ ಜೊತೆ ಜವಾಬ್ದಾರಿಯುತ ವ್ಯಕ್ತಿಯು ಆಗಿದ್ದಾರೆ. ಅವರಿಗೆ ಎಲ್ಲರ ಬಗ್ಗೆಯೂ ಗೌರವವಿದೆ ಎಂದು ಮನವರಿಕೆ ಮಾಡಿಕೊಟ್ಟರು. ಉಪೇಂದ್ರ ಪರ ವಕೀಲರ ವಾದ ಆಲಿಸಿದ ನ್ಯಾಯಮೂರ್ತಿಗಳು ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಗೆ ಸಂಬಂಧಿಸಿದಂತೆ ಮಾತ್ರ ಮಧ್ಯಂತರ ತಡೆಯಾಜ್ಞೆ (Interim stay) ನೀಡಿದೆ.  ಇದನ್ನೂ ಓದಿ:Kiccha 46: ಸುದೀಪ್‌ ಸಿನಿಮಾದಲ್ಲಿ ಸಂಯುಕ್ತಾ ಹೊರನಾಡ್

    ಒಂದು ಕಡೆ ಹೈಕೋರ್ಟ್ (High Court) ಮಧ್ಯಂತರ ಆದೇಶ ನೀಡಿದ್ದರೆ ಮತ್ತೊಂದು ಕಡೆ ಸಾಮಾಜಿಕ ಜಾಲತಾಣದಲ್ಲಿ ನಟ ಉಪೇಂದ್ರ ಜಾತಿನಿಂದನೆಯ (Caste abuse) ಅವಹೇಳನಕಾರಿ ಪದವನ್ನು ಬಳಸಿದ್ದಾರೆ ಎಂಬ ವಿಚಾರ ವಿಪರೀತ ಚರ್ಚೆಗೆ ಕಾರಣವಾಗಿದೆ. ಅವರು ಆಡಿದ ಮಾತುಗಳ ವಿಚಾರವಾಗಿ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ನಟ ಉಪೇಂದ್ರ ಮೇಲೆ ಅಟ್ರಾಸಿಟಿ ಕೇಸ್ ದಾಖಲಿಸಿ ಅವರನ್ನು ಗಡಿಪಾರು ಮಾಡುವಂತೆ ಕೋಲಾರದಲ್ಲಿ ಆಗ್ರಹಿಸಲಾಗಿದೆ. ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಉಪೇಂದ್ರ ವಿರುದ್ಧ ಮಾಲೂರು ಪೊಲೀಸ್ ಠಾಣೆಗೆ ದೂರು ನೀಡಿದೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ ಸದಸ್ಯ ಎಸ್.ಎಂ.ವೆಂಕಟೇಶ್ ಹಾಗೂ ವಿಜಿ ನೇತೃತ್ವದಲ್ಲಿ ದೂರು ಸಲ್ಲಿಸಿದ್ದಾರೆ.

    ಬೆಂಗಳೂರಿನಲ್ಲಿ ಮೂರು ದೂರು ಹಾಗೂ ಕೋಲಾರದಲ್ಲಿ ಒಂದು ದೂರ ದಾಖಲಾದ ಬೆನ್ನಲ್ಲೇ ಮಂಡ್ಯದಲ್ಲೂ ಉಪೇಂದ್ರ ವಿರುದ್ದ ದೂರು ಸಲ್ಲಿಕೆಯಾಗಿದೆ. ಪರಿಶಿಷ್ಟ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲೂ ದೂರು ದಾಖಲಿಸಿದ್ದಾರೆ. ಮದ್ದೂರು ತಾಲೂಕು ದಲಿತ ಸಂಘಟನೆಗಳ ಒಕ್ಕೂಟದಿಂದ ಈ ದೂರು ಸಲ್ಲಿಕೆಯಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಂಡ್ಯ, ಕೋಲಾರದಲ್ಲೂ ನಟ ಉಪೇಂದ್ರ ವಿರುದ್ಧ ದೂರು

    ಮಂಡ್ಯ, ಕೋಲಾರದಲ್ಲೂ ನಟ ಉಪೇಂದ್ರ ವಿರುದ್ಧ ದೂರು

    ಸಾಮಾಜಿಕ ಜಾಲತಾಣದಲ್ಲಿ ನಟ ಉಪೇಂದ್ರ (Upendra) ಜಾತಿನಿಂದನೆಯ (Caste Abuse) ಅವಹೇಳನಕಾರಿ ಪದವನ್ನು ಬಳಸಿದ್ದಾರೆ ಎಂಬ ವಿಚಾರ ವಿಪರೀತ ಚರ್ಚೆಗೆ ಕಾರಣವಾಗಿದೆ. ಅವರು ಆಡಿದ ಮಾತುಗಳ ವಿಚಾರವಾಗಿ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ನಟ ಉಪೇಂದ್ರ ಮೇಲೆ ಅಟ್ರಾಸಿಟಿ ಕೇಸ್ ದಾಖಲಿಸಿ ಅವರನ್ನು ಗಡಿಪಾರು ಮಾಡುವಂತೆ ಕೋಲಾರದಲ್ಲಿ (Kolar) ಆಗ್ರಹಿಸಲಾಗಿದೆ. ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಉಪೇಂದ್ರ ವಿರುದ್ಧ ಮಾಲೂರು ಪೊಲೀಸ್ ಠಾಣೆಗೆ ದೂರು (Complaint) ನೀಡಿದೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ ಸದಸ್ಯ ಎಸ್.ಎಂ.ವೆಂಕಟೇಶ್ ಹಾಗೂ ವಿಜಿ ನೇತೃತ್ವದಲ್ಲಿ ದೂರು ಸಲ್ಲಿಸಿದ್ದಾರೆ.

    ಬೆಂಗಳೂರಿನಲ್ಲಿ ಮೂರು ದೂರು ಹಾಗೂ ಕೋಲಾರದಲ್ಲಿ ಒಂದು ದೂರ ದಾಖಲಾದ ಬೆನ್ನಲ್ಲೇ ಮಂಡ್ಯದಲ್ಲೂ (Mandya) ಉಪೇಂದ್ರ ವಿರುದ್ದ ದೂರು ಸಲ್ಲಿಕೆಯಾಗಿದೆ. ಪರಿಶಿಷ್ಟ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲೂ ದೂರು ದಾಖಲಿಸಿದ್ದಾರೆ. ಮದ್ದೂರು ತಾಲೂಕು ದಲಿತ ಸಂಘಟನೆಗಳ ಒಕ್ಕೂಟದಿಂದ ಈ ದೂರು ಸಲ್ಲಿಕೆಯಾಗಿದೆ.

    ಒಂದು ಕಡೆ ತಮ್ಮ ವಿರುದ್ಧ ದೂರು ದಾಖಲಾಗುತ್ತಿದ್ದರೆ ಮತ್ತೊಂದು ಕಡೆ  ತಮ್ಮ ಮೇಲೆ ದಾಖಲಾಗಿರುವ ಎಫ್.ಐ.ಆರ್ ಅನ್ನು ರದ್ದುಗೊಳಿಸುವಂತೆ ನಟ ಉಪೇಂದ್ರ ಹೈಕೋರ್ಟ್ (High Court) ಮೆಟ್ಟಿಲು ಏರಿದ್ದಾರೆ. ಈಗಾಗಲೇ ತಾವು ಆಡಿದ ಮಾತಿನ ಬಗ್ಗೆ ಕ್ಷಮೆ ಕೇಳಿದ್ದೇನೆ. ಜೊತೆಗೆ ಆ ವಿಡಿಯೋವನ್ನು ಸೋಷಿಯಲ್ ಮೀಡಿಯಾದಿಂದಲೇ ಡಿಲಿಟ್ ಮಾಡಿದ್ದೇನೆ. ಯಾರ ಮನಸ್ಸಿಗೂ ನೋವು ಮಾಡುವ ಉದ್ದೇಶದಿಂದ ಆಡಿದ ಮಾತು ಅದಾಗಿರಲಿಲ್ಲವೆಂದು ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

    ಒಂದು ಕಡೆ ಎಫ್.ಐ.ಆರ್ ರದ್ದು ಕೋರಿ ಉಪೇಂದ್ರ ಅರ್ಜಿ ಸಲ್ಲಿಸಿದ್ದರೆ, ಮತ್ತೊಂದು ಕಡೆ ರಾಜ್ಯ ನಾನಾ ಕಡೆಗಳಲ್ಲೂ ಇವರ ವಿರುದ್ಧ ದೂರು ನೀಡಲಾಗುತ್ತಿದೆ. ಬೆಂಗಳೂರಿನಲ್ಲಿ ಎರಡು ಕಡೆ ಎಫ್.ಐ.ಆರ್ ದಾಖಲಾಗಿದ್ದರೆ ಮಂಡ್ಯ ಮತ್ತು ಕೋಲಾರದಲ್ಲೂ ಪೊಲೀಸ್ ಠಾಣೆಗೆ ಉಪೇಂದ್ರ ವಿರುದ್ಧ ದೂರು ದಾಖಲಾಗಿದೆ. ಅಲ್ಲಲ್ಲಿ ಪ್ರತಿಭಟನೆಗಳು ಕೂಡ ನಡೆಯುತ್ತಿವೆ. ಇದನ್ನೂ ಓದಿ:Kiccha 46: ಸುದೀಪ್‌ ಸಿನಿಮಾದಲ್ಲಿ ಸಂಯುಕ್ತಾ ಹೊರನಾಡ್

    ಬೆಂಗಳೂರಿನ ಚೆನ್ನಮ್ಮನ ಅಚ್ಚುಕಟ್ಟು ಪ್ರದೇಶ ಪೊಲೀಸರು ನಟ ಉಪೇಂದ್ರ ಅವರಿಗೆ ನೋಟಿಸ್ ಕೊಡುತ್ತಿದ್ದಂತೆ ಫೋನ್ ಸ್ವಿಚ್ ಆಪ್ ಮಾಡಿಕೊಂಡು ಉಪೇಂದ್ರ ಎಸ್ಕೇಪ್  ಆಗಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಬೇರೆಯವರ ಕಡೆಯಿಂದ ಉಪೇಂದ್ರ ಅವರನ್ನು ಪೊಲೀಸರು ಸಂಪರ್ಕ ಮಾಡುತ್ತಿದ್ದಾರಂತೆ.

    ಉಪೇಂದ್ರ ಅವರಿಗೆ ಸೇರಿದ ಎರಡು ಮನೆ ಹಾಗೂ ಅವರ ವಾಟ್ಸಪ್ ಗೆ ನೋಟಿಸ್ ಕಳಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಅಲ್ಲದೇ, ಹಲಸೂರು ಗೇಟ್ ಠಾಣೆಯಲ್ಲಿ ದಾಖಲಾಗಿರೋ ಎಫ್ ಐ ಆರ್ ಅನ್ನು ಕೂಡ ಎಸಿಪಿ ವಿವಿಪುರಂಗೆ ವರ್ಗಾವಣೆ ಮಾಡಲಿದ್ದಾರೆ ಅಂತ ಹಲಸೂರುಗೇಟ್ ಪೊಲೀಸರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಸುರಕ್ಷತೆಯ ವಾತಾವರಣವಿದೆ, ಗನ್ ಮ್ಯಾನ್ ನೀಡಿ: ಜೆಡಿಎಸ್ ಸದಸ್ಯನ ಮನವಿ

    ಅಸುರಕ್ಷತೆಯ ವಾತಾವರಣವಿದೆ, ಗನ್ ಮ್ಯಾನ್ ನೀಡಿ: ಜೆಡಿಎಸ್ ಸದಸ್ಯನ ಮನವಿ

    ಚಿಕ್ಕಮಗಳೂರು: ರಾಜ್ಯದಲ್ಲಿನ ಕೋಮು ಸಂಘರ್ಷ ಹಾಗೂ ಜಾತಿ ದ್ವೇಷದ ಹೆಸರಿನಲ್ಲಿ ನಡೆಯುತ್ತಿರುವ ಅಹಿತಕರ ಘಟನೆಯಿಂದ ನಗರಸಭೆ ಸದಸ್ಯರು ಆತಂಕಗೊಂಡು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಗನ್ ಮ್ಯಾನ್ ಕೇಳಿದ್ದಾರೆ.

    ನಗರಸಭೆಯ 8ನೇ ವಾರ್ಡಿನ ಜೆಡಿಎಸ್ ಸದಸ್ಯ ಎ.ಸಿ.ಕುಮಾರ್ ಗನ್ ಮ್ಯಾನ್ ಕೋರಿ ಎಸ್‌ಪಿ ಅಕ್ಷಯ್‍ಗೆ ಪತ್ರ ಬರೆದಿದ್ದಾರೆ. ನಗರಸಭೆಯಲ್ಲಿ ಈ ಹಿಂದೆ ಹಾಗೂ ಈಗ ನಡೆಯುತ್ತಿರುವ ಕಾನೂನುಬಾಹಿರ ಕಾಮಗಾರಿಗಳು, ಟೆಂಡರ್‌ಗಳು, ಅಕ್ರಮ ನೇಮಕಾತಿ, ಕಾನೂನು ಬಾಹಿರವಾಗಿ ಇಟ್ಟಿರುವ ಖಾತೆಗಳು, ಕಾನೂನು ಉಲ್ಲಂಘಿಸಿ ನಿರ್ಮಿಸುತ್ತಿರುವ ಅನಧಿಕೃತ ಕಟ್ಟಡಗಳು, ಸರ್ಕಾರಿ ಆಸ್ತಿ ಒತ್ತುವರಿಗಳ ಬಗ್ಗೆ ಮಾಹಿತಿ ಹಕ್ಕಿನಡಿ ದಾಖಲೆಗಳನ್ನು ಪಡೆದು ಅಕ್ರಮ ಹಾಗೂ ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ಧ್ವನಿ ಎತ್ತುತ್ತಿದ್ದೇನೆ. ನಗರದ ಜನತೆಗೂ ಕೂಡ ನಗರಸಭೆಯಲ್ಲಿನ ಭ್ರಷ್ಟಾಚಾರದ ಮಾಹಿತಿಯನ್ನು ತಿಳಿಸುತ್ತಿದ್ದೇನೆ. ಇದನ್ನೂ ಓದಿ: ಕಳ್ಳ-ಪೊಲೀಸ್ ಆಟವಾಡುತ್ತಾ ನೆರೆ ಮನೆಯ ಬಾಲಕನನ್ನು ಕೊಂದ ಬಿಜೆಪಿ ಮುಖಂಡನ ಮಗ

    ಹಾಗಾಗಿ, ನನ್ನ ಮೇಲೆ ಜಾತಿ ನಿಂದನೆ ಕಾಯ್ದೆಯಡಿ ಸುಳ್ಳು ದೂರು ದಾಖಲಿಸಿದ್ದು, ನಗರಸಭೆ ಪೌರಾಯುಕ್ತರು ಹಾಗೂ ಅಧ್ಯಕ್ಷರು ಸಿಬ್ಬಂದಿಗಳನ್ನು ಪ್ರಚೋದಿಸಿ ನನ್ನ ವಿರುದ್ಧ ದೂರು ತೆಗೆದುಕೊಂಡಿದ್ದಾರೆ. ನಾನು ಮಾಹಿತಿ ನೀಡಿರುವ ಅಕ್ರಮ ಕಟ್ಟಡಗಳ ಮಾಲೀಕರು ನನ್ನ ವಿರುದ್ಧ ದೂರು ನೀಡುವಂತೆ ಎತ್ತಿಕಟ್ಟಿದ್ದಾರೆ. ನನ್ನ ವಾಸದ ಮನೆಯನ್ನು ಕೂಡ ಅಕ್ರಮವಾಗಿ ಕಟ್ಟಿದ್ದೀರಿ ಎಂದು ಗುರು ಅರ್ಜಿಯನ್ನು ಪಡೆದುಕೊಂಡು ನನ್ನ ವಾಸದ ಮನೆಗೆ ನೋಟಿಸ್ ನೀಡಿದ್ದಾರೆ.

    ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆ ಹಾಗೂ ನಗರದಲ್ಲಿ ನಡೆಯುತ್ತಿರುವ ನನ್ನ ವಿರುದ್ಧದ ಪಿತೂರಿಯಿಂದ ಅಸುರಕ್ಷತೆಯ ವಾತಾವರಣ ನಿರ್ಮಾಣವಾಗಿದೆ. ನನಗೆ ನೀವು ಗನ್ ಮ್ಯಾನ್ ನೀಡಿ ಕಾನೂನುಬದ್ಧ ರಕ್ಷಣೆ ನೀಡಬೇಕೆಂದು ಎಸ್‍ಪಿಗೆ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:  ಭಾವನಾತ್ಮಕ ವಿಷಯ ಕೆದಕಿ ಕೆಲ ಪಕ್ಷಗಳು ರಾಜಕೀಯ ಲಾಭ ಪಡೆಯಲು ಹೊರಟಿವೆ: ಹೆಚ್‍ಡಿಕೆ 

    Live Tv
    [brid partner=56869869 player=32851 video=960834 autoplay=true]

  • ದಲಿತ ಯುವತಿಯ ಮೇಲೆ ಗ್ಯಾಂಗ್ ರೇಪ್ – ಡಿಎಂಕೆ ಯುವ ನಾಯಕ ಅರೆಸ್ಟ್

    ದಲಿತ ಯುವತಿಯ ಮೇಲೆ ಗ್ಯಾಂಗ್ ರೇಪ್ – ಡಿಎಂಕೆ ಯುವ ನಾಯಕ ಅರೆಸ್ಟ್

    ಚೆನ್ನೈ: ದಲಿತ ಯುವತಿಯೊಬ್ಬಳ ಮೇಲೆ ಎಂಟು ದುಷ್ಕರ್ಮಿಗಳು ಅತ್ಯಾಚಾರಗೈದಿರುವ ಹೃದಯ ವಿದ್ರಾವಕ ಘಟನೆ ತಮಿಳುನಾಡಿನ ವಿರುಧುನಗರ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

    22 ವರ್ಷದ ದಲಿತ ಯುವತಿಯನ್ನು ಬೆದರಿಸಿ, ಆರು ತಿಂಗಳಿಂದ ಅತ್ಯಾಚಾರ ಎಸಗಲಾಗಿದೆ. ಇಬ್ಬರು ಡಿಎಂಕೆ ಕಾರ್ಯಕರ್ತರು ಸೇರಿ ಎಂಟು ಆರೋಪಿಗಳನ್ನು ಬಂಧಿಸಲಾಗಿದೆ. ನಾಲ್ಕು ಬಾಲಕರು ಕೂಡ ಈ ದುಷ್ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಎಟಿಎಂಗೆ ಹಣ ಹಾಕು ಅಂತ ಕೊಟ್ಟರೆ, ಹಣದೊಂದಿಗೆ ಎಸ್ಕೇಪ್ ಆದ ಭೂಪ

    STOP RAPE

    ಸ್ಥಳೀಯ ಡಿಎಂಕೆ ಯುವ ಘಟಕದ ಪದಾಧಿಕಾರಿ ಹರಿಹರನ್ ಪ್ರಕರಣದ ಮುಖ್ಯ ಆರೋಪಿ. ಯುವತಿ ವಾಸವಾಗಿದ್ದ ಮನೆಯ ಹತ್ತಿರದಲ್ಲಿಯೇ ಹರಿಹರನ್‌ನ ಮಳಿಗೆ ಇದ್ದು, ಮೊದಲಿಗೆ ಆಕೆಗೆ ಪ್ರೇಮ ಸಂಬಂಧದ ಆಮಿಷವೊಡ್ಡಿದ್ದಾನೆ. ನಂತರರದಲ್ಲಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದು, ಅದನ್ನು ವೀಡಿಯೋ ಮಾಡಿ ತನ್ನ ಸ್ನೇಹಿತರ ಮೊಬೈಲ್‍ಗೆ ಹರಿಬಿಟ್ಟಿದ್ದಾನೆ. ನಂತರದಲ್ಲಿ ಆರೋಪಿ ಮತ್ತು ಅವನ ಸ್ನೇಹಿತರು ಸಂತ್ರಸ್ತೆಗೆ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಸಿ 6 ತಿಂಗಳು ಕಾಲ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಇದನ್ನೂ ಓದಿ: ಜಮೀನು ವಿವಾದ – ಕಾರ್ಮಿಕನ ಕಾಲಿನ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆ

    ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇರೆಗೆ ಆರೋಪಿಗಳ ವಿರುದ್ಧ ಅತ್ಯಾಚಾರ, ಜಾತಿ ನಿಂದನೆ ಸೇರಿದಂತೆ ಹಲವು ಪ್ರಕರಣಗಳನ್ನು ದಾಖಲಿಸಲಾಗಿದೆ. ಸದ್ಯ ಎಂಟೂ ಆರೋಪಿಗಳು ಪೊಲೀಸರ ವಶದಲ್ಲಿದ್ದಾರೆ.

  • ಅಂಬೇಡ್ಕರ್ ಭಾವಚಿತ್ರವಿರುವ ಫ್ಲೆಕ್ಸ್ ಹರಿದು ಅಪಮಾನ

    ಅಂಬೇಡ್ಕರ್ ಭಾವಚಿತ್ರವಿರುವ ಫ್ಲೆಕ್ಸ್ ಹರಿದು ಅಪಮಾನ

    ಹಾಸನ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವಿರುವ ಫ್ಲೆಕ್ಸ್‌ನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಕುಡುಕುಂದಿ ಗುಡ್ಡದಕೊಪ್ಪಲು ಗ್ರಾಮದಲ್ಲಿ ನಡೆದಿದೆ.

    ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ವತಿಯಿಂದ ಅಂಬೇಡ್ಕರ್ ಅವರ 131ನೇ ಜಯಂತಿ ಪ್ರಯುಕ್ತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಹಿನ್ನೆಲೆ ಹಲವೆಡೆ ಅಂಬೇಡ್ಕರ್ ಫ್ಲೆಕ್ಸ್ ಹಾಕಲಾಗಿತ್ತು. ಆದರೆ ಕೆಲವು ಕಿಡಿಗೇಡಿಗಳು ಫ್ಲೆಕ್ಸ್ ಹರಿದು ಹಾಕಿದ್ದಾರೆ. ಇದನ್ನೂ ಓದಿ: 3 ವರ್ಷಗಳ ಬಳಿಕ ಟಿಎಂಸಿ ಪಕ್ಷಕ್ಕೆ ಬಿಜೆಪಿ ಎಂಪಿ ವಾಪಸ್

    ಈ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಕಾರ್ಯಕ್ರಮ ಆಯೋಜಕರು ಆರೋಪಿಸಿದ್ದಾರೆ. ಘಟನೆ ಕುರಿತು ಗಂಡಸಿ ಪೊಲೀಸ್ ಠಾಣೆ ಎದುರು ಜಮಾಯಿಸಿರುವ ಹೋರಾಟಗಾರರು, ಫ್ಲೆಕ್ಸ್ ಹರಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕುತುಬ್ ಮಿನಾರ್ ವಿವಾದ – ಸದ್ಯಕ್ಕಿಲ್ಲ ಉತ್ಖನನ

  • ಜಾತಿ ನಿಂದನೆಗೈದು ಅಪ್ರಾಪ್ತನನ್ನು ಬೆಂಕಿಗೆ ತಳ್ಳಿದ ವಿದ್ಯಾರ್ಥಿಗಳು!

    ಜಾತಿ ನಿಂದನೆಗೈದು ಅಪ್ರಾಪ್ತನನ್ನು ಬೆಂಕಿಗೆ ತಳ್ಳಿದ ವಿದ್ಯಾರ್ಥಿಗಳು!

    ಚೆನ್ನೈ: ಬಾಲಕನೊಬ್ಬನ ಮೇಲೆ ಮೂವರು ವಿದ್ಯಾರ್ಥಿಗಳು ಜಾತಿ ನಿಂದನೆಗೈದು ಬೆಂಕಿಗೆ ತಳ್ಳಿ ಗಾಯಗೊಳಿಸಿದ ಘಟನೆ ವಿಲುಪುರಂ ಜಿಲ್ಲೆಯ ತಿಂಡಿವನಂ ಪಟ್ಟಣದ ಕಟ್ಟುಚಿವಿರಿ ಸರ್ಕಾರಿ ಶಾಲೆಯಲ್ಲಿ ನಡೆದಿದೆ.

    ಸೋಮವಾರ ಸಂಜೆ 4.30ರ ಸುಮಾರಿಗೆ ಬಾಲಕ ತನ್ನ ಅಜ್ಜಿಯನ್ನು ಭೇಟಿ ಮಾಡಲು ಮನೆಯಿಂದ ಹೊರಟಿದ್ದನು. ಈ ವೇಳೆ ದಾಳಿಕೋರರು ಅವನಿಗೆ ಜಾತಿ ನಿಂದನೆಗೈದು ಮನ ಬಂದತೆ ಥಳಿಸಿ ಬೆಂಕಿಗೆ ತಳ್ಳಿದ್ದಾರೆ. ಹೀಗಾಗಿ ಬಾಲಕನ ಬೆನ್ನು, ಎದೆ, ಭುಜದ ಮೇಲೆ ಸುಟ್ಟ ಗಾಯಗಳಾಗಿದ್ದು, ಮನೆಗೆ ಹಿಂದಿರುಗಿದಾಗ ಆತನ ಪೋಷಕರು ಆಘಾತಕ್ಕೊಳಗಾಗಿದ್ದರು. ಏನಾಯಿತು ಎಂದು ಕೇಳಿದಾಗ, ಬೆಂಕಿ ಹೊತ್ತಿಕೊಂಡಿದ್ದ ಪೊದೆಗೆ ಜಾರಿ ಬಿದ್ದೆ ಎಂದು ಬಾಲಕ ಪೋಷಕರ ಮುಂದೆ ಸುಳ್ಳು ಹೇಳಿದ್ದಾನೆ. ಇದನ್ನೂ ಓದಿ: ಚಂಡಮಾರುತ ಎಫೆಕ್ಟ್- ಸಮುದ್ರದಲ್ಲಿ ತೇಲಿ ಬಂತು ಚಿನ್ನದ ರಥ!

    ಬಾಲಕನು ಈ ಹಿಂದೆ ತನ್ನ ಶಾಲೆಯಲ್ಲಿ ಒಂದೆರಡು ಮೇಲ್ಜಾತಿಯ ವಿದ್ಯಾರ್ಥಿಗಳು ತನ್ನನ್ನು ಬೆದರಿಸುತ್ತಿದ್ದಾರೆ. ಜಾತಿ ನಿಂದನೆಗೈಯುತ್ತಿದ್ದಾರೆ ಎಂದು ಆರೋಪಿಸಿದ್ದನು. ಆ ದಿನ ಅವನು ರಸ್ತೆಯಲ್ಲಿ ಒಬ್ಬಂಟಿಯಾಗಿ ನಡೆದುಕೊಂಡು ಹೋಗುತ್ತಿರುವುದನ್ನು ನೋಡಿದ ಹುಡುಗರು ಅವನನ್ನು ಪೊದೆಯ ಬೆಂಕಿಗೆ ತಳ್ಳಿದ್ದಾರೆ. ಈ ವೇಳೆ ಬಾಲಕನು ಹತ್ತಿರದ ಟ್ಯಾಂಕ್‍ಗೆ ಹಾರಿ ಬದುಕುಳಿದಿದ್ದಾನೆ. ಇದನ್ನೂ ಓದಿ: ಕೋವಿಡ್ ವಾರಿಯರ್ ಆಗಿ ಕೆಲಸ ಮಾಡಿದ್ದ ಆಟೋ ಚಾಲಕನ ಮೇಲೆ ರೇಪ್ ಆರೋಪ

    ಬಾಲಕನನ್ನು ಚಿಕಿತ್ಸೆಗಾಗಿ ತಿಂಡಿವನಂ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬಾಲಕನ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಸಂತ್ರಸ್ತನ ಹೇಳಿಕೆಯನ್ನು ತೆಗೆದುಕೊಂಡ ನಂತರ ತಮಿಳುನಾಡಿನ ಪೊಲೀಸರು ಬಾಲಾಪರಾಧಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

  • ಶ್ರೀರಾಮನ ಹೆಸರಿನಲ್ಲಿ ಅಶಾಂತಿ ಸೃಷ್ಟಿ ಮಾಡಬೇಡಿ: ಹೆಚ್.ಡಿ ಕುಮಾರಸ್ವಾಮಿ

    ಶ್ರೀರಾಮನ ಹೆಸರಿನಲ್ಲಿ ಅಶಾಂತಿ ಸೃಷ್ಟಿ ಮಾಡಬೇಡಿ: ಹೆಚ್.ಡಿ ಕುಮಾರಸ್ವಾಮಿ

    ಬೆಂಗಳೂರು: ಶ್ರೀರಾಮನ ಹೆಸರು ಇಟ್ಟುಕೊಂಡು ಶಾಂತಿ ಹಾಳು ಮಾಡುವ ಕೆಲಸ ಮಾಡುತ್ತಿದ್ದೀರಿ. ಅಂತಹ ಕೃತ್ಯಗಳನ್ನು ಎಸಗಲು ರಾವಣನ ಹೆಸರಿಟ್ಟುಕೊಳ್ಳಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಕೆಲ ಸಂಘಟನೆಗಳ ಮೇಲೆ ವಾಗ್ದಾಳಿ ನಡೆಸಿದರು.

    ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಬಾಬು ಜಗಜೀವನ್ ರಾಮ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಕೆಲವರು ರಾಮಸೇನೆ, ಆ ಸೇನೆ ಈ ಸೇನೆ ಅಂತ ಹೆಸರು ಇಟ್ಟಕೊಂಡಿದ್ದಾರೆ. ರಾಮನ ಹೆಸರಿಟ್ಟುಕೊಂಡು ಹಿಂಸೆಯನ್ನು ಪ್ರಚೋದಿಸುತ್ತಿದ್ದಾರೆ. ಅಂತಹವರು ರಾವಣನ ಸೇನೆ ಎಂದು ಹೆಸರಿಟ್ಟುಕೊಂಡರೆ ಉತ್ತಮ. ಇವರು ರಾಮನ ಹೆಸರಿಗೆ ಯಾಕೆ ಕಳಂಕ ತರುತ್ತಿದ್ದಾರೆ. ದಯಮಾಡಿ ಮರ್ಯಾದಾ ಪುರುಷೋತ್ತಮನ ಹೆಸರಿಗೆ ಕಳಂಕ ತರಬೇಡಿ ಎಂದು ಕಿಡಿಕಾರಿದರು. ಇದನ್ನೂ ಓದಿ: ರಂಜಾನ್ ಸಮಯದಲ್ಲಿ ಮಧುಮೇಹ ನಿರ್ವಹಣೆ ಹೇಗೆ?

    ಪದೇ ಪದೇ ಬಿಜೆಪಿ ಸಹ ಸಂಸ್ಥೆಗಳು ಈ ರೀತಿ ಸಾಮರಸ್ಯ ಹಾಳು ಮಾಡುತ್ತಿದೆ. ನಿಜಕ್ಕೂ ನಮ್ಮ ಸಂಸ್ಕೃತಿಗೆ ಅಗೌರವ ತೋರಿಸುತ್ತಿದ್ದಾರೆ. ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ನಂತರವೂ ಈ ವಿಚಾರವನ್ನು ಲಘುವಾಗಿ ಪರಿಗಣಿಸಲಾಗುತ್ತಿದೆ. ದಿನಕ್ಕೆ ಒಂದು ವಿಚಾರ ಪ್ರಾರಂಭ ಮಾಡುತ್ತಿದ್ದಾರೆ. ನಿಜವಾಗಿಯೂ ಅವರು ರಾಮಭಕ್ತರೇ ಆಗಿದ್ದರೆ, ದಿನನಿತ್ಯದಲ್ಲಿ ನಮ್ಮ ಪರಂಪರಾಗತ ಸಂಪ್ರದಾಯ ಆಚರಣೆಗೆ ಒತ್ತು ಕೊಟ್ಟರೆ ಹಿಂದೂ ಧರ್ಮ ಕಾಪಾಡಿದಂತಾಗುತ್ತದೆ ಆಗುತ್ತದೆ ಎಂದು ಹೇಳಿದರು.

    ತಮ್ಮ ಬಾಲ್ಯದ ದಿನಗಳನ್ನು ಮೆಲುಕು ಹಾಕಿದ ಅವರು, ಹೊಳೆನರಸೀಪುರದಲ್ಲಿ ದೀಪದ ಸ್ತಂಭ ಕೈಯಲ್ಲಿ ಇಟ್ಟುಕೊಂಡು ಪ್ರಮುಖ ಬೀದಿಗಳಲ್ಲಿ ಹೋಗುತ್ತಾ ಇದ್ದೇವು. ದೇವರ ಭಜನೆ ಮಾಡುತ್ತಿದ್ದೇವೆ. ಬೆಳಗ್ಗೆ ದೇವಸ್ಥಾನದಲ್ಲಿ ಸುಪ್ರಭಾತ ಕೇಳಿಸುತ್ತಿತ್ತು. ಘಂಟೆ ನಾದ ಮೊಳಗುತ್ತಿತ್ತು. ಆ ಗಂಟೆನಾದ ಕೇಳಿದರೆ ನಮ್ಮ ಮೈ ನವಿರೇಳುತ್ತಿತ್ತು. ಈ ಮಹಾನುಭಾವರಿಗೆ ಏನಾಗುತ್ತದೆ ಎಂದು ಗೊತ್ತಿಲ್ಲ ಎಂದು ಟಾಂಗ್ ನೀಡಿದರು.

    ಮತ್ತೊಂದು ಧರ್ಮ ಅಥವಾ ಜಾತಿಯನ್ನು ನಿಂದಿಸುವುದು ಅಥವಾ ಅವಹೇಳನ ಮಾಡುವುದು ಬೇಡ. ಅವರ ನಂಬಿಕೆಗಳಿಗೆ ನೋವುಂಟು ಮಾಡುವುದು ಬೇಡ ಎಂದ ಅವರು, ನನ್ನ ಪ್ರಕಾರ ಶಾಲೆಗಳಲ್ಲಿ ಭಗವದ್ಗೀತೆ ಓದಿಸಿದರೆ ಪ್ರಯೋಜನ ಇಲ್ಲ. ಆದರೆ ಅದನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಇದನ್ನು ಗಲಾಟೆಕೋರರು ಅರ್ಥ ಮಾಡಿಕೊಳ್ಳಬೇಕು ಪ್ರತಿಕ್ರಿಯೆ ಕೊಟ್ಟರು. ಇದನ್ನೂ ಓದಿ: ಕಷ್ಟದಲ್ಲಿರುವ ಜನರಿಗೆ ಸರ್ಕಾರದಿಂದ ಕರೆಂಟ್ ಶಾಕ್: ಪೃಥ್ವಿ ರೆಡ್ಡಿ

    ಮಕ್ಕಳಲ್ಲಿ ನಾವು ಉತ್ತಮ ಗುಣಗಳನ್ನು ಬೆಳೆಸಬೇಕು ನಿಜ. ಕೀರ್ತನೆ, ಭಜನೆ, ದೇವರ ನಾಮಗಳ ಮೂಲಕ ಮಕ್ಕಳನ್ನು ಬೇಗ ನಿದ್ದೆಯಿಂದ ಏಳಿಸಿ. ಆ ಮೂಲಕ ಅವರಲ್ಲಿ ಸಾತ್ವಿಕ ಗುಣಗಳನ್ನು ಬೆಳೆಸಬೇಕು ಎಂದು ಸೂಚಿಸಿದರು. ಆದರೆ ಭಾವನಾತ್ಮಕ ವಿಷಯಗಳನ್ನು ಇಟ್ಟುಕೊಂಡು ಅಶಾಂತಿ ಸೃಷ್ಟಿ ಮಾಡುತ್ತಿರುವ ಸಂಘಟನೆಗಳು ಇಂತಹ ವಿಷಯಗಳ ಬಗ್ಗೆ ಆಲೋಚನೆ ಮಾಡಬೇಕು. ಈಗ ಅವರೇ ನಮ್ಮ ಸಂಸ್ಕøತಿಗೆ ಅವಮಾನ ಮಾಡುತ್ತಿದ್ದಾರೆ ಎಂದು ದೂರಿದರು.

    ವಿಧಾನಸೌಧಕ್ಕೆ ನಮಸ್ಕಾರ ಮಾಡಿದರೆ ಸಾಕಾ? ಹಿಂದೆ ಟೆಂಟ್‍ನಲ್ಲಿ ನಮೋ ವೆಂಕಟೇಶ ಎನ್ನುವ ಭಕ್ತಿಗೀತೆ ಕೇಳಿಸುತ್ತಿದ್ದವು. ರಾತ್ರಿ ಸೆಕೆಂಡ್ ಶೋಗೆ ಮುನ್ನ ಈ ಗೀತೆಯನ್ನು ಹಾಕಲಾಗುತ್ತಿತ್ತು. ಆಗ ಶಬ್ದ ಮಾಲಿನ್ಯ ಇರಲಿಲ್ಲವೆ? ಇದೇನು ಸಂಸ್ಕøತಿನಾ, ದೇಶ ಕಟ್ಟುವ ರೀತಿ ಇದೇನಾ? ರಾಮನ ಹೆಸರಲ್ಲಿ ದೇಶ ಹಾಳು ಮಾಡಬೇಡಿ. ಇದೆಲ್ಲದರ ಹಿಂದೆ ರಾಜಕೀಯ ಅಜೆಂಡಾ ಇದೆ. ನರೇಂದ್ರ ಮೋದಿ ನೋಡಿದರೆ ಸಂಸತ್‍ಗೆ ನಮಸ್ಕಾರ ಮಾಡುತ್ತಾರೆ, ಸಂವಿಧಾನಕ್ಕೆ ಗೌರವ ನೀಡುತ್ತಾರೆ. ಇಲ್ಲಿಯೂ ವಿಧಾನಸೌಧದ ಮುಂಬಾಗದಲ್ಲಿ ಬೊಮ್ಮಾಯಿ ನಮಸ್ಕಾರ ಮಾಡಿದ್ದರು. ಇಂಥ ಕೆಲಸಗಳನ್ನು ಮಾಡಲಿಕ್ಕೆ ವಿಧಾನಸೌಧಕ್ಕೆ ಅಡ್ಡ ಬಿದ್ದಿರಾ ಬೊಮ್ಮಾಯಿಯವರೇ? ಎಂದು ಕುಮಾರಸ್ವಾಮಿ ಅವರು ಟೀಕಾ ಪ್ರಹಾರ ನಡೆಸಿದರು.

    ಜನರ ಬದುಕಿಗೆ ಬೆಂಕಿ ಇಡುವ ಕೆಲಸ ಮಾಡುತ್ತಿದೆ ಸರ್ಕಾರ. ಜನರ ಬವಣೆ ಕಡೆಗಣಿಸಿ ಚುನಾವಣೆ ಮಾಡುತ್ತಿರಾ ಮುಖ್ಯಮಂತ್ರಿಗಳೇ? ನೀವು ಮೌನಿ ಬಾಬಾ ಆಗಿದ್ದೀರ, ನಿಮ್ಮಿಂದ ಏನು ಮಾಡೋಕೆ ಆಗುವುದಿಲ್ಲ. ಈ ರಾಜ್ಯದಲ್ಲಿ ಸಿಎಂ ಇದಾರಾ ಅನ್ನುವುದೇ ಅನುಮಾನ. ಸರ್ಕಾರ ಇದೆಯಾ ಎನ್ನುವ ಸಂಶಯ ಬಂದಿದೆ. ಈ ಸರ್ಕಾರವನ್ನು ಯಾರೋ ನಡೆಸುತ್ತಿದ್ದಾರೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

    ರಾಜ್ಯದಲ್ಲಿ ಅಹಿತಕರ ಘಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಉದ್ಯಮಗಳು ಮತ್ತು ನವ ಉದ್ಯಮಗಳಿಗೆ ಆತಂಕ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ತೆಲಂಗಾಣದ ಸಚಿವ ಕೆ ಟಿ ಆರ್ ಅವರು ತಮ್ಮ ರಾಜ್ಯಕ್ಕೆ ಉದ್ಯಮಗಳು ಬರಲಿ ಎಂದು ಆಹ್ವಾನ ನೀಡಿದ್ದಾರೆ. ಅದಕ್ಕೆ ಸಚಿವ ಡಾ. ಅಶ್ವತ್ಥನಾರಾಯಣ ನೀಡಿರುವ ಹೇಳಿಕೆ ಸರಿಯಲ್ಲ ಎಂದು ಎಂದು ಅಭಿಪ್ರಾಯಪಟ್ಟರು. ಮೊದಲು ನೀವು ಮನೆ ನೆಟ್ಟಗೆ ಇಟ್ಟುಕೊಳ್ಳಿ. ನಿಮ್ಮ ನೀತಿಗಳು ಸರಿ ಇದ್ದರೆ ಬೇರೆಯವರು ಯಾಕೆ ಬರ್ತಾರೆ. ನಾವು ಕೂಡ ವಿದೇಶಗಳಿಗೆ ಬಂಡವಾಳ ಹೂಡಿಕೆಗೆ ಆಹ್ವಾನ ನೀಡುವುದು ಮಾಡುತ್ತೇವೆ. ರಾಜ್ಯದಲ್ಲಿ ಕೈಗಾರಿಕೆಗಳಿಗೆ ಪೂರಕ ವಾತಾವರಣ ಇದ್ದರೆ ಯಾರು ತಾನೇ ಹೊರಗೆ ಹೋಗುತ್ತಾರೆ ಎಂದು ಐಟಿಗೆ ಟಾಂಗ್ ನೀಡಿದರು.

    ರಾಜ್ಯದಲ್ಲಿ ನಡೆಯುತ್ತಿರುವ ಬೆಳೆವಣಿಗೆಗಳು ಎಲ್ಲರಿಗೂ ಗೊತ್ತಿದೆ. ಸರ್ಕಾರಕ್ಕೆ ಬೆನ್ನುಮೂಳೆ ಎನ್ನುವುದು ಇದೆಯಾ? ಯಾರನ್ನು ಮೆಚ್ಚಿಸಲು ರಾಜ್ಯ ಆಳುತ್ತಿದ್ದಿರಿ. ನೀವೆಲ್ಲ ಪ್ರಮಾಣ ವಚನ ಸ್ವೀಕಾರ ಮಾಡಿದ್ದೀರಿ. ಅದರ ಉದ್ದೇಶ ಸಚಿವರು ಮರೆತಿರಾ? ಹಲಾಲ್ ಮುಗೀತು, ಈಗ ಆಜಾನ್ ಶುರುವಾಗಿದೆ. ನಾನು ರಾಜ್ಯದ ಜನರಿಗೆ ಮನವಿ ಮಾಡ್ತೀನಿ, ಇಂಥವರನ್ನು ದೂರ ಇಡಿ. ಸಮಾಜಘಾತುಕರನ್ನು ದೂರ ಇಡಿ ಎಂದು ಮನವಿ ಮಾಡುವೆ ಎಂದು ಕರೆ ನೀಡಿದರು.

  • ದಲಿತ ಶಾಸಕಿಯಿಂದ ಪ್ರತಿಭಟನೆ- ಸೆಗಣಿ ಸಾರಿ ಸ್ಥಳ ಶುದ್ಧಿಗೊಳಿಸಿದ ಕಾಂಗ್ರೆಸ್

    ದಲಿತ ಶಾಸಕಿಯಿಂದ ಪ್ರತಿಭಟನೆ- ಸೆಗಣಿ ಸಾರಿ ಸ್ಥಳ ಶುದ್ಧಿಗೊಳಿಸಿದ ಕಾಂಗ್ರೆಸ್

    ತಿರುವನಂತಪುರಂ: ದಲಿತ ಶಾಸಕಿರೊಬ್ಬರು ಪಿಡಬ್ಲ್ಯುಡಿ ಕಚೇರಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ ಎಂದು ಅಲ್ಲಿನ ಯುವ ಕಾಂಗ್ರೆಸ್ ಕಾರ್ಯಕರ್ತರು ಕಚೇರಿಯನ್ನು ಸೆಗಣಿ ಸಾರುವ ಮೂಲಕ ಶುದ್ಧೀಕರಿಸಿರುವ ಘಟನೆ ಕೇರಳದಲ್ಲಿ ನಡೆದಿದೆ.

    ಈ ಘಟನೆ ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ನಡೆದಿದೆ. ನಾಟಿಕಾ ಕ್ಷೇತ್ರದ ಸಿಪಿಐ ಪಕ್ಷದ ದಲಿತ ಶಾಸಕಿ ಗೀತಾ ಗೋಪಿ ಅವರು ಪ್ರತಿಭಟನೆ ಮಾಡಿದ್ದಾರೆ. ಈ ಸ್ಥಳವನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ದನದ ಸೆಗಣಿಯ ಮೂಲಕ ಶುದ್ಧೀಕರಣ ಮಾಡಿದ್ದಾರೆ. ಈ ಮೂಲಕ ಜಾತಿ ತಾರತಮ್ಯ ಮೆರೆದಿದ್ದಾರೆ ಎಂದು ದೂರು ನೀಡಲಾಗಿದೆ.

    ಗೀತಾ ಗೋಪಿ ಅವರು ತಮ್ಮ ಕ್ಷೇತ್ರದಲ್ಲಿ ರಸ್ತೆಗಳು ಸರಿ ಇಲ್ಲ ತುಂಬ ಕಳಪೆ ಕಾಮಗಾರಿ ನಡೆದಿದೆ ಎಂದು ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಕಚೇರಿ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಸಂಬಂಧ ಪಟ್ಟ ಅಧಿಕಾರಿಗಳು ಬಂದು ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ನಂತರ ಗೀತಾ ಅವರು ಪ್ರತಿಭಟನೆ ನಿಲ್ಲಿಸಿದರು. ಈ ವೇಳೆ ಅವರು ದಲಿತ ಮಹಿಳೆ ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಅವರು ಕುಳಿತ ಜಾಗಕ್ಕೆ ಸೆಗಣಿ ಸಾರಿ ಸ್ವಚ್ಛ ಮಾಡುವ ಮೂಲಕ ಜಾತಿ ನಿಂದನೆ ಮಾಡಿದ್ದಾರೆ.

    ಗೀತಾ ಗೋಪಿ ಅವರ ವಿರುದ್ಧ ಪ್ರತಿಭಟನೆ ಮಾಡಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ಗೀತಾ ಗೋಪಿ ಅವರು ಜನರಿಗೆ ಮೋಸ ಮಾಡಲು ಈ ಪ್ರತಿಭಟನೆಯ ನಾಟಕ ಆಡುತ್ತಿದ್ದಾರೆ ಎಂದು ಆರೋಪ ಮಾಡಿದರು. ನಂತರ ಅವರು ಕುಳಿತು ಪ್ರತಿಭಟನೆ ಮಾಡಿದ ಸ್ಥಳವನ್ನು ನೀರು ಮತ್ತು ದನದ ಸಗಣಿ ಚುಮುಕಿಸಿ ಶುದ್ಧೀಕರಣ ಮಾಡಿದ್ದಾರೆ.

    ಈ ವಿಚಾರ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಗಮನಕ್ಕೆ ಗೀತಾ ಗೋಪಿ ಅವರು ತಂದಿದ್ದಾರೆ. ಯುವ ಕಾಂಗ್ರೆಸ್ ಕಾರ್ಯಕರ್ತರ ಈ ಕೃತ್ಯವನ್ನು ನಾವು ಒಪ್ಪುವುದಿಲ್ಲ ಎಂದು ಖಂಡಿಸಿದ್ದಾರೆ.

    ಶಾಸಕಿ ಗೀತಾ ಗೋಪಿ ಅವರು ಈ ವಿಚಾರವಾಗಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಎಸ್‍ಸಿ/ಎಸ್‍ಟಿ ಜಾತಿ ನಿಂದನೆ ಕಾಯ್ದೆಯ ಆಡಿಯಲ್ಲಿ ಚೆರ್ಪುರ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ.

  • ತಹಶೀಲ್ದಾರ್ ಸೇರಿ ನಾಲ್ಕು ಅಧಿಕಾರಿಗಳ ವಿರುದ್ಧ ಅಟ್ರಾಸಿಟಿ ಕೇಸ್

    ತಹಶೀಲ್ದಾರ್ ಸೇರಿ ನಾಲ್ಕು ಅಧಿಕಾರಿಗಳ ವಿರುದ್ಧ ಅಟ್ರಾಸಿಟಿ ಕೇಸ್

    ಗದಗ: ಜಾತಿ ಪ್ರಮಾಣಪತ್ರ ವಿಚಾರಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಸೇರಿದಂತೆ ಕಂದಾಯ ಇಲಾಖೆಯ ನಾಲ್ಕು ಜನ ಅಧಿಕಾರಿಗಳ ವಿರುದ್ಧ ಅಟ್ರಾಸಿಟಿ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ವಿರುದ್ಧದ ದೌರ್ಜನ್ಯ ತಡೆ) ಕಾಯ್ದೆಯ ಅಡಿ ಕೇಸ್ ದಾಖಲಾಗಿರುವ ಘಟನೆ ಲಕ್ಷ್ಮೇಶ್ವರದಲ್ಲಿ ನಡೆದಿದೆ.

    ತಹಶೀಲ್ದಾರ್ ಬ್ರಮರಾಂಭ ಗುಬ್ಬಿಶೆಟ್ಟಿ, ಕಂದಾಯ ಅಧಿಕಾರಿ ಎಸ್.ಎಸ್ ಪಾಟೀಲ್, ಗ್ರಾಮ ಲೆಕ್ಕಾಧಿಕಾರಿಗಳಾದ ಪ್ರವೀಣ್ ಭರಣಿ ಮತ್ತು ಹವಳದ ಎಂಬವರ ವಿರುದ್ಧ ಕೇಸ್ ದಾಖಲಾಗಿದೆ. ತಾಲೂಕಿನ ಬಾಲೆಹೊಸೂರ ಗ್ರಾಮದ ಗಂಟಿಚೋರ್ ಸಮುದಾಯದ ನಾಲ್ವರು ಈ ಜಾತಿ ನಿಂದನೆ ಕೇಸ್ ದಾಖಲಿಸಿದ್ದಾರೆ.

    ಗಂಟಿಚೋರ್ ಸಮುದಾಯವರಿಗೆ ಎಸ್‍ಸಿ ಜಾತಿ ಪ್ರಮಾಣಪತ್ರ ನೀಡುವಂತೆ ಕೇಳಿದ್ದಾರೆ. ಆದರೆ ಗಂಟಿಚೊರ್ ಸಮುದಾಯ ಪರಿಶಿಷ್ಟ ಜಾತಿಗೆ ಒಳಪಡಲ್ಲ, ಪ್ರವರ್ಗ-1 ರ ವ್ಯಾಪ್ತಿಗೆ ಬರುತ್ತದೆ ಎಂಬ ವಾದ-ಪ್ರತಿವಾದಗಳು ಅನೇಕ ವರ್ಷಗಳಿಂದ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಬಾಲೆಹೊಸೂರು ಗ್ರಾಮದ ಅನಂತಕುಮಾರ್ ಕಟ್ಟಿಮನಿ ಸೇರಿದಂತೆ ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲಾಗಿದೆ. ಕರ್ತವ್ಯಕ್ಕೆ ಅಡ್ಡಿ ಮಾಡಿದ್ದಾರೆ ಎಂದು ತಹಶೀಲ್ದಾರರು ಸಹ ಕೌಂಟರ್ ಕೇಸ್ ಮಾಡಿದ್ದಾರೆ.

    ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಎರಡು ಕಡೆಯಿಂದ ಪ್ರಕರಣ ದಾಖಲಾಗಿದೆ. ಕರ್ತವ್ಯ ಸ್ಥಗಿತಗೊಳಿಸಿ ಡಿಸಿ ಕಚೇರಿ ಎದುರು ಕಂದಾಯ ಹಾಗೂ ಗ್ರಾಮಲೆಕ್ಕಾಧಿಕಾರಿಗಳು ಪ್ರತಿಭಟನೆ ಮಾಡಿ ನಂತರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಎರಡು ಪ್ರಕರಣ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಡಿಸಿ ಎಂ.ಜಿ ಹಿರೇಮಠ ಭರವಸೆ ನೀಡಿದ್ದಾರೆ.