Tag: Caste Census Report

  • ಕಾಂಗ್ರೆಸ್ ಕಳ್ಳರು ದಲಿತರನ್ನು ತುಳಿದಿದ್ದಾರೆಯೇ ಹೊರತು ಉದ್ಧಾರ ಮಾಡಿಲ್ಲ: ಅಶೋಕ್

    ಕಾಂಗ್ರೆಸ್ ಕಳ್ಳರು ದಲಿತರನ್ನು ತುಳಿದಿದ್ದಾರೆಯೇ ಹೊರತು ಉದ್ಧಾರ ಮಾಡಿಲ್ಲ: ಅಶೋಕ್

    – ಜಾತಿ ಗಣತಿ ವೈಜ್ಞಾನಿಕವಾಗಿ ಆಗಿಲ್ಲ ಎಂದು ವಿಪಕ್ಷ ನಾಯಕ ಕಿಡಿ
    – ಡಿಕೆಶಿ ಸಿಎಂ ಆಗಲೂ ಕಮಿಷನ್ ಸಂಗ್ರಹಣೆ

    ಬೆಂಗಳೂರು: ಕಾಂಗ್ರೆಸ್‌ನವರು ಹಲವಾರು ವರ್ಷಗಳ ಕಾಲ ದಲಿತರನ್ನು ತುಳಿದುಕೊಂಡೇ ಬಂದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok)  ವಾಗ್ದಾಳಿ ನಡೆಸಿದರು.

    ವಿಧಾನಸೌಧದ ಡಾ.ಬಿ.ಆರ್.ಅಂಬೇಡ್ಕರ್ (Dr. B R Ambedkar) ಪ್ರತಿಮೆ ಬಳಿ `ಭೀಮ ಹೆಜ್ಜೆ 100ರ ಸಂಭ್ರಮ’ ಕಾರ್ಯಕ್ರಮದ ಉದ್ಘಾಟನೆಯಲ್ಲಿ ಅವರು ಪಾಲ್ಗೊಂಡು ಮಾತನಾಡಿದರು. ದಲಿತರ ಬಗ್ಗೆ ಮಾತಾಡುವಾಗಲೆಲ್ಲ ಅವರು ತುಳಿತಕ್ಕೆ ಒಳಗಾದವರು ಎಂದು ಹೇಳುತ್ತೇವೆ. ಆದರೆ ಈ ರೀತಿ ತುಳಿದವರು ಯಾರು ಎಂದು ಪ್ರಶ್ನೆ ಮಾಡಿದರೆ, ಕಾಂಗ್ರೆಸ್‌ನವರೇ ಎಂಬ ಉತ್ತರ ಸಿಗುತ್ತದೆ. ಇಷ್ಟು ವರ್ಷ ಶೋಷಿತರನ್ನು ಕಾಂಗ್ರೆಸ್‌ನವರೇ ತುಳಿದಿದ್ದಾರೆ. ಸ್ವಾತಂತ್ರ‍್ಯ ಬಂದು 75 ವರ್ಷ ಕಳೆದರೂ ಕಾಂಗ್ರೆಸ್‌ನ ಕಳ್ಳರು ದಲಿತರನ್ನು ಉದ್ಧಾರ ಮಾಡಲಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ‘ಅಯ್ಯನ ಮನೆ’ ಕಥೆ ಹೇಳಲು ಬಂದ ‘ದಿಯಾ’ ನಟಿ- ರಮೇಶ್ ಇಂದಿರಾ ಆ್ಯಕ್ಷನ್ ಕಟ್

    ಬಾಬಾ ಸಾಹೇಬ್ ಅಂಬೇಡ್ಕರ್‌ರ ಹೆಸರನ್ನು ಕಾಂಗ್ರೆಸ್‌ನವರು (Congress) ದುರುಪಯೋಗ ಮಾಡಿಕೊಂಡರು. ನರೇಂದ್ರ ಮೋದಿ ಪ್ರಧಾನಿಯಾದ ಬಳಿ ಅಂಬೇಡ್ಕರರ ಜೀವನದ ಪ್ರಮುಖ ಸ್ಥಳಗಳನ್ನು ಪಂಚತೀರ್ಥವೆಂದು ಯಾತ್ರಾ ಸ್ಥಳವಾಗಿಸಿದರು. ಕಾಂಗ್ರೆಸ್ ನಾಯಕರು ತಾವು ದಲಿತರ ಪರ ಎಂದು ಹೇಳುತ್ತಾರೆ. ಆದರೆ ದಲಿತರಿಗೆ ಮೋಸ ಮಾಡುತ್ತಾರೆ ಎಂದು ದೂರಿದರು.

    ವಕ್ಫ್ ಮಂಡಳಿ ಲಕ್ಷಾಂತರ ದಲಿತರ ಆಸ್ತಿಗಳನ್ನು ಲೂಟಿ ಮಾಡಿದೆ. ವಕ್ಫ್‌ನಿಂದಾಗಿ ಭೂ ಕಬಳಿಕೆ ಬಗ್ಗೆ ನಾನು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾಗ, ದೂರು ಹೇಳಿಕೊಳ್ಳಲು ಬರುತ್ತಿದ್ದವರಲ್ಲಿ ದಲಿತರೇ ಹೆಚ್ಚಿನ ಸಂಖ್ಯೆಯಲ್ಲಿರುತ್ತಿದ್ದರು. ಸಂಸತ್ತಿನಲ್ಲಿ ವಕ್ಫ್ ತಿದ್ದುಪಡಿ ಮಸೂದೆಗೆ ವಿರುದ್ಧವಾಗಿ ಕಾಂಗ್ರೆಸ್ ನಿಂತುಕೊಳ್ಳುತ್ತದೆ ಎಂಬುದರಲ್ಲೇ ಅವರಿಗೆ ದಲಿತರ ಮೇಲಿರುವ ಕಾಳಜಿ ಅರ್ಥವಾಗುತ್ತದೆ. ಸಂವಿಧಾನ ಉಳಿಯಬೇಕು. ಕಾಂಗ್ರೆಸ್‌ನ ಪೊಳ್ಳು ಭರವಸೆಗಳು ಹೋಗಬೇಕು ಎಂದರು. ಇದನ್ನೂ ಓದಿ: ಹಾಲಿನ ದರ ಹೆಚ್ಚಾದ ಬೆನ್ನಲ್ಲೇ ಹಾಲುಗಳ್ಳರ ಕಾಟ ಹೆಚ್ಚಳ

    ಜಾತಿ ಗಣತಿ ವೈಜ್ಞಾನಿಕವಲ್ಲ
    ಜಾತಿ ಗಣತಿ ವರದಿ (Caste Census Report) ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿಯಲ್ಲಿ ಸಮೀಕ್ಷೆ ಮಾಡಿದ್ದವರು ಎಲ್ಲರ ಮನೆಗೆ ಹೋಗಿಲ್ಲ. ಈ ವರದಿಯು ವೈಜ್ಞಾನಿಕವಾಗಿ ಆಗಿಲ್ಲ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿ ಮಾಡಿಸಿರುವ ವರದಿ. ಇದರಲ್ಲಿ ರಾಜಕೀಯ ಇರುವುದರಿಂದ ಇದನ್ನು ಯಾರೂ ಒಪ್ಪಲ್ಲ. ನಾನು ಕೂಡ ಜಾತಿ ಗಣತಿ ಆಗಬೇಕು ಎನ್ನುತ್ತೇನೆ. ಆದರೆ ಯಾರಿಗೋ ಅನುಕೂಲ ಮಾಡಿಕೊಡಲು, ಜಾತಿ-ಜಾತಿಗಳ ನಡುವೆ ವಿಷ ಬೀಜ ಬಿತ್ತಲು ಈ ವರದಿ ರೂಪಿಸಲಾಗಿದೆ. ಕಾಂಗ್ರೆಸ್‌ಗೆ ಇದೇ ಬೇಕಾಗಿದೆ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಸಿನಿಮಾ ಸೋತ್ರೂ ಶ್ರೀವಲ್ಲಿಗೆ ಬೇಡಿಕೆ- ಶಾಹಿದ್ ಕಪೂರ್‌ಗೆ ರಶ್ಮಿಕಾ ಜೋಡಿ

    ಗುತ್ತಿಗೆದಾರರು ಕಮಿಷನ್ ಆರೋಪ ಮಾಡಿದ್ದು, ಈ ಬಗ್ಗೆ ಕಾಂಗ್ರೆಸ್ ನಾಯಕರು ಸಭೆ ಮಾಡಿ ಚರ್ಚಿಸಲಿ. ಯಾವ ಖಾತೆಗಳಲ್ಲಿ ಎಷ್ಟು ಲೂಟಿ ನಡೆಯುತ್ತಿದೆ ಎಂದು ಹೇಳಿದ್ದಾರೆ. ಕಮಿಷನ್ ಕೊಡುವವರಿಗೆ ಬಿಲ್ ಪಾವತಿಯಾಗುತ್ತದೆ. ಅಬಕಾರಿ ಇಲಾಖೆಯಲ್ಲಿ ಸಚಿವರ ಮಗ ಲೂಟಿ ಮಾಡುತ್ತಿದ್ದಾರೆ. ಸಚಿವರ ಮೇಲೆ ಇಷ್ಟೆಲ್ಲಾ ಆರೋಪ ಬಂದರೂ ಸಿಎಂ ಸಮರ್ಥನೆ ಮಾಡಿಕೊಳ್ಳುತ್ತಾರೆ ಎಂದು ಕಿಡಿಕಾರಿದರು.

    ಭ್ರಷ್ಟಾಚಾರವೇ ನಮ್ಮ ಬಂಧು ಬಳಗ ಎಂದು ಕಾಂಗ್ರೆಸ್ ಘೋಷಣೆ ಮಾಡಿಕೊಳ್ಳಬೇಕು. ಸಿಎಂ ರಾಜೀನಾಮೆ ನೀಡದೇ ಇರಲು ಕಮಿಷನ್ ವಸೂಲಿ ಮಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್ (D K Shivakumar) ಸಿಎಂ ಆಗಲು ಕಮಿಷನ್ ಸಂಗ್ರಹಿಸುತ್ತಿದ್ದಾರೆ. ಸಚಿವರು ಕೂಡ ಸಿಎಂ ಆಗಲು ಕಮಿಷನ್ ಮಾಡುತ್ತಿದ್ದಾರೆ. ವಿಧಾನಸೌಧದ ಸಚಿವರ ಕಚೇರಿಗಳು ಕಲೆಕ್ಷನ್ ಸೆಂಟರ್ ಆಗಿದೆ. ಜೊತೆಗೆ ಜನರ ಮೇಲೆ 80 ಸಾವಿರ ಕೋಟಿ ರೂ. ತೆರಿಗೆ ಹಾಕಿದ್ದಾರೆ ಎಂದು ದೂರಿದರು. ಇದನ್ನೂ ಓದಿ: ಶಾಸಕ ಯತ್ನಾಳ್‌ ಕೊಲೆಗೆ ಸಂಚು? – ಅನ್ಯಕೋಮಿನ ಯುವಕನ ಸ್ಫೋಟಕ ಆಡಿಯೋ ವೈರಲ್‌

    ನಮ್ಮ ಬಾಂಧವ್ಯಕ್ಕೆ ಹುಳಿ ಹಿಂಡಲು ಸಾಧ್ಯವಿಲ್ಲ
    ಜೆಡಿಎಸ್‌ನ (JDS) ಹೋರಾಟಕ್ಕೆ ಬಿಜೆಪಿಯ ಸಂಪೂರ್ಣ ಬೆಂಬಲವಿದೆ. ಯಾವ ಹೋರಾಟ ಒಟ್ಟಿಗೆ ಮಾಡಬೇಕು, ಪ್ರತ್ಯೇಕ ಮಾಡಬೇಕೆಂದು ಹೆಚ್.ಡಿ.ಕುಮಾರಸ್ವಾಮಿ (H D Kumaraswamy) ಜೊತೆ ಚರ್ಚಿಸಲಾಗುವುದು. ನಮ್ಮ ಅವರ ನಡುವಿನ ಬಾಂಧವ್ಯಕ್ಕೆ ಯಾರೂ ಹುಳಿ ಹಿಂಡಲು ಸಾಧ್ಯವೇ ಇಲ್ಲ ಎಂದರು.

  • ಜಾತಿ ಜನಗಣತಿ ವರದಿ ಮಂಡನೆಯಾದ ಬಳಿಕ ಏನಿದೆ ಅಂತಾ ಗೊತ್ತಾಗಲಿದೆ: ಯದುವೀರ್

    ಜಾತಿ ಜನಗಣತಿ ವರದಿ ಮಂಡನೆಯಾದ ಬಳಿಕ ಏನಿದೆ ಅಂತಾ ಗೊತ್ತಾಗಲಿದೆ: ಯದುವೀರ್

    – ಮುಡಾ ಕೇಸ್ ಸಿಬಿಐಗೆ ವಹಿಸಿ ಅನ್ನೋ ಒತ್ತಾಯ ಮೊದಲಿನಿಂದಲೂ ಇದೆ ಎಂದ ಸಂಸದ

    ನವದೆಹಲಿ: ಜಾತಿ ಜನಗಣತಿ ವರದಿ (Caste Census Report) 9 ವರ್ಷಗಳ ಹಿಂದೆಯೇ ತಯಾರಿಸಲಾಗಿದೆ. ಮಂಡನೆಯಾದ ಬಳಿಕ ಏನಿದೆ ಅಂತ ಗೊತ್ತಾಗಲಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Wadiyar) ಹೇಳಿದ್ದಾರೆ.

    ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಲವು ವಿಚಾರಗಳ ಕುರಿತು ಪ್ರತಿಕ್ರಿಯೆ ನೀಡಿದರು. ಇದನ್ನೂ ಓದಿ: ಇಸ್ರೋ ಸಾಧನೆ – ಡಾಕಿಂಗ್‌ ಪ್ರಕ್ರಿಯೆ ಹೇಗೆ ನಡೆಯಿತು? ಪ್ರಯೋಜನ ಏನು?

    ಇನ್ನೂ ಮುಡಾ ಕೇಸ್ ಸಿಬಿಐಗೆ ವಹಿಸಬೇಕು ಅನ್ನೋ ನಮ್ಮ ಒತ್ತಾಯ ಮೊದಲಿನಿಂದಲೂ ಇದೆ. ಇಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ ಮಾಡಿದ್ದೇನೆ. ಮೈಸೂರಿನ ಪ್ರವಾಸೋಧ್ಯಮ ಅಭಿವೃದ್ಧಿ ಕುರಿತಂತೆ ಚರ್ಚೆ ಮಾಡಿದ್ದೇನೆ. ಮೈಸೂರಿನ ಹಳೆ ಡಿಸಿ ಕಚೇರಿಯನ್ನು ಮ್ಯೂಸಿಯಂ ಮಾಡಬೇಕು ಎಂಬ ಒತ್ತಾಯವಿದೆ. ಯೋಗ ಪರಂಪರೆಯನ್ನು ಸಾರಲು, ಸಂರಕ್ಷಣೆ ಮಾಡಲು ಮ್ಯೂಸಿಯಂ ಮಾಡಬೇಕು. ಈ ಬಗ್ಗೆ ಕೇಂದ್ರ ಸಚಿವರೊಂದಿಗೆ ಪ್ರಸ್ತಾಪ ಮಾಡಿದ್ದೇನೆ ಎಂದರು. ಇದನ್ನೂ ಓದಿ: ಹೆಚ್‌ಎಂಟಿ ಅಧೀನದಲ್ಲಿರುವ ಅರಣ್ಯ ಭೂಮಿ ಹಿಂಪಡೆಯುವ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚೆ – ಹೆಚ್‌.ಕೆ ಪಾಟೀಲ್

    ಅಂಬಾರಿ ಹೊತ್ತಿದ್ದ ಆನೆ ಅರ್ಜುನ ಕಾರ್ಯಾಚರಣೆಯಲ್ಲಿ ತೀರಿಹೋಗಿತ್ತು. ಅರ್ಜುನ ಆನೆಯ ಸ್ಮಾರಕ ನಿರ್ಮಾಣ ಮಾಡಬೇಕು ಎಂದು ಒತ್ತಾಯ ಕೇಳಿಬರುತ್ತಿದೆ. ಅರ್ಜುನನ ಪುತ್ಥಳಿ ಸ್ಥಾಪನೆ ಮಾಡಬೇಕು ಎಂಬ ಪ್ರಸ್ತಾಪ ಕೊಟ್ಟಿದ್ದೇವೆ. ಅಂಬಾರಿ ಸಾಗುವ ಮೈಸೂರಿನ ಸರ್ಕಲ್‌ನಲ್ಲಿ ಪುತ್ಥಳಿ ಮಾಡಬೇಕಿದೆ ಎಂದು ತಿಳಿಸಿದರು. ಇದನ್ನೂ ಓದಿ: 2ಕ್ಕಿಂತ ಹೆಚ್ಚು ಮಕ್ಕಳಿದ್ರೆ ಮಾತ್ರ ಸ್ಥಳೀಯ ಚುನಾವಣೆಯಲ್ಲಿ ಸ್ಫರ್ಧಿಸಲು ಅವಕಾಶ: ಚಂದ್ರಬಾಬು ನಾಯ್ಡು

    ಮುಂದುವರಿದು.. ಮೈಸೂರಿನ ಏರ್‌ಪೋರ್ಟ್ ವಿಚಾರವಾಗಿಯೂ ಸಚಿವರೊಂದಿಗೆ ಚರ್ಚಿಸುತ್ತೇನೆ. ಏರ್‌ಪೋರ್ಟ್ ವಿಸ್ತರಣೆಗೆ ಪ್ರಸ್ತಾವನೆ ಇದೆ. ಕೆಲವು ಅಡಚಣೆ ತೆರವುಗೊಳಿಸುವಂತೆ ಮನವಿ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಕರ್ನಾಟಕ ಜಂಗಲ್ ರಾಜ್ಯ ಆಗಿದೆ – ಬೀದರ್ ಗುಂಡಿನ ದಾಳಿಗೆ ಬೊಮ್ಮಾಯಿ ದಿಗ್ಭ್ರಮೆ

  • ಪ್ರದೀಪ್ ಈಶ್ವರ್‌ಗೆ ಸಂತೆಯಲ್ಲಿ ಒಳ್ಳೆ ಬಳೆ ಕೊಡಿಸ್ತೀನಿ – ಸಂಸದ ಸುಧಾಕರ್

    ಪ್ರದೀಪ್ ಈಶ್ವರ್‌ಗೆ ಸಂತೆಯಲ್ಲಿ ಒಳ್ಳೆ ಬಳೆ ಕೊಡಿಸ್ತೀನಿ – ಸಂಸದ ಸುಧಾಕರ್

    – ಜಾತಿಗಣತಿ ವರದಿ ಬಿಡುಗಡೆ ಆದರೆ ಸಿದ್ದರಾಮಯ್ಯ ಖಳನಾಯಕ ಆಗ್ತಾರೆ ಎಂದ ಸಂಸದ

    ಚಿಕ್ಕಬಳ್ಳಾಪುರ: ಶಾಸಕ‌ ಪ್ರದೀಪ್ ಈಶ್ವರ್ ವಿರುದ್ಧ ಚಿಕ್ಕಬಳ್ಳಾಪುರ ಸಂಸದ ಡಾ.ಕೆ ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ಸಾವರ್ವಜನಿಕರ ಕುಂದುಕೊರತೆಗಳನ್ನ ಆಲಿಸಿ ಮಾತನಾಡಿದ ಸಂಸದ ಸುಧಾಕರ್. ಶಾಸಕ ಪ್ರದೀಪ್ ಈಶ್ವರ್‌ಗೆ ಒಂದು ಡಜನ್ ಬಳೆ ಕೊಡಿಸ್ತಿನಿ ಹಾಕಿಕೊಳ್ಳೊಕೆ ಹೇಳಿ. ಬುಧವಾರ ಶನಿವಾರ ಚಿಕ್ಕಬಳ್ಳಾಪುರದಲ್ಲಿ ಸಂತೆ, ಸೋಮವಾರ ಪೆರೇಸಂದ್ರದಲ್ಲಿ ಸಂತೆ. ಸಂತೆಯಲ್ಲಿ ಒಳ್ಳೆ ಬಳೆ ಕೊಡಿಸ್ತಿನಿ ಹಾಕಿಕೊಳ್ಳೊಕೆ ಹೇಳಿ ಎಂದು ವಾಗ್ದಾಳಿ ನಡೆಸಿದರು.

    ಅಂದಹಾಗೆ ಚಿಕ್ಕಬಳ್ಳಾಪುರದಲ್ಲಿ ಆಡಳಿತ ವ್ಯವಸ್ಥೆ ಹಾಳಾಗಿದೆ. ಜನ ಸಾಮಾನ್ಯರು ಕೆಲಸ ಕಾರ್ಯಗಳಿಗೆ ಅಲೆದಾಡುತ್ತಿದ್ದಾರೆ. ಕ್ರಷರ್ ಟಿಪ್ಪರ್ ಗಳಿಗೆ ಕಡಿವಾಣ ಹಾಕಲು ಸಾಧ್ಯ ಆಗ್ತಿಲ್ಲವಂತೆ ಹಾಗಾಗಿ ಕೈಗೆ ಬಳೆ ತೊಟ್ಟುಕೊಳ್ಳಲಿ ಅಂತ ಟಾಂಗ್ ಕೊಟ್ಟಿದ್ದಾರೆ.

    ಸಿದ್ದರಾಮಯ್ಯ ಖಳನಾಯಕ ಆಗ್ತಾರೆ:
    ಜಾತಿ ಜನಗಣತಿ ಬಿಡುಗಡೆ ಮಾಡಿದ್ರೆ ಸಿಎಂ ಸಿದ್ದರಾಮಯ್ಯ ಇತಿಹಾಸದಲ್ಲಿ ಖಳ ನಾಯಕ ಆಗ್ತಾರೆ. ಯಾರೊ ರಾಜಕೀಯ ನಾಯಕರ ಆಣತಿಯಂತೆ ಜಾತಿ ಲೆಕ್ಕಾಚಾರ ಬರೆಸಲಾಗಿದೆ. ರಾಜ್ಯದಲ್ಲಿ ಯಾರ ಮನೆಗೆ ಹೋಗಿ ಸರ್ವೆ ಮಾಡಲಾಗಿದೆ ಹೇಳಿ? ನನ್ನ ಮನೆಗೆ ಬಂದು ಗಣತಿ ಮಾಡಿಲ್ಲ. ಕೆಳಜಾತಿ ಮೇಲ್ಜಾತಿ ಮಧ್ಯೆ ಘರ್ಷಣೆ ಮಾಡಿಸುವ ಹುನ್ನಾರದಿಂದ ಜಾತಿ ಜನಗಣತಿ ಬಿಡುಗಡೆ ಮಾಡ್ತಿದ್ದಾರೆ. ಕಾಂಗ್ರೆಸ್‌ನ ಮೂವರು ಮಂತ್ರಿಗಳು ಸಹ ಜಾತಿ ಜನಗಣತಿ ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ದೆಹಲಿಯ ಕಾಂಗ್ರೆಸ್‌ನಲ್ಲೂ ಒಮ್ಮತವಿಲ್ಲ. ಮತ್ತೆ ಹೇಗೆ? ಜಾತಿ ಜನಗಣತಿ ವರದಿ ಬಿಡುಗಡೆ ಮಾಡ್ತಾರೆ ಎಂದು ಪ್ರಶ್ನೆ ಮಾಡಿದರು.

    ಕೋವಿಡ್ ಹಗರಣ ಪ್ರಕರಣ: ಸರ್ಕಾರದ ವಿರುದ್ಧ ಸುಧಾಕರ್ ವಾಗ್ದಾಳಿ:
    ಕೊವಿಡ್ ಹಗರಣದ ವರದಿ ಪರಿಶೀಲನೆಗೆ 7 ಜನ ಸಚಿವರ ತಂಡ ನೇಮಕ ವಿಚಾರಕ್ಕೆ ಚಿಕ್ಕಬಳ್ಳಾಪುರದಲ್ಲಿ ಸಂಸದ ಡಾ.ಕೆ.ಸುಧಾಕರ್ ಪ್ರತಿಕ್ರಿಯಿಸಿದ್ದಾರೆ. 7 ಜನ ಸಚಿವರು ಒಂದೊಂದು ಪೇಜ್ ಅನ್ನು ಅಧ್ಯಯನ ಮಾಡಲಿ. ಇವರು ಮಾಡೋ ಘನಂಧಾರಿ ಕೆಲಸದಿಂದ ಹಿರಿಯ ಅಧಿಕಾರಿಗಳು ಬೇಸರ ಪಟ್ಟುಕೊಂಡಿದ್ದಾರೆ. ಅಂದು ಕೋವಿಡ್ ನಿಯಂತ್ರಣದಲ್ಲಿ ರಾಜ್ಯದ ಎಲ್ಲಾ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ರು. ಪರೋಕ್ಷವಾಗಿ ಅಧಿಕಾರಿಗಳ ಕೈ ಕಟ್ಟಿ ಹಾಕೊ ಕೆಲಸ ಮಾಡಲಾಗ್ತಿದೆ ಎಂದು ಟೀಕೆ ಮಾಡಿದ್ದಾರೆ.

  • ಕ್ಯಾಬಿನೆಟ್‍ಗೂ ಮುನ್ನವೇ ವೀರಶೈವ ಮುಖಂಡರ ಸಭೆ: ಶಾಮನೂರು ಶಿವಶಂಕರಪ್ಪ

    ಕ್ಯಾಬಿನೆಟ್‍ಗೂ ಮುನ್ನವೇ ವೀರಶೈವ ಮುಖಂಡರ ಸಭೆ: ಶಾಮನೂರು ಶಿವಶಂಕರಪ್ಪ

    ದಾವಣಗೆರೆ: ಕ್ಯಾಬಿನೆಟ್‍ಗೂ ಮುನ್ನವೇ ಬೆಂಗಳೂರಿನಲ್ಲಿ ವೀರಶೈವ ಲಿಂಗಾಯತ ಮಹಾಸಭಾ (Veerashaiva Lingayat Mahasabha) ಮುಖಂಡರ ಸಭೆ ನಡೆಯಲಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ (Shamanuru Shivashankarappa) ತಿಳಿಸಿದ್ದಾರೆ.

    ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಜಾತಿ ಜನಗಣತಿ ವರದಿ (Caste Census Report) ಸರ್ಕಾರ ಬಿಡುಗಡೆ ವಿಚಾರವಾಗಿ ಮಾತನಾಡಿದರು. ಈ ವೇಳೆ ಕ್ಯಾಬಿನೆಟ್ ಸಭೆಗೂ ಮುನ್ನವೇ ವೀರಶೈವ ಲಿಂಗಾಯತ ಮುಖಂಡರ ಸಭೆ ನಡೆಯಲಿದೆ. ಅ.22ರ ಮಂಗಳವಾರ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸುದೀಪ್ ಸರ್‌ನ ನೋಡೋಕೆ ಆಗುತ್ತಿಲ್ಲ: ಲಹರಿ ವೇಲು

    ಇದರಲ್ಲಿ ಬಿಜೆಪಿ ಅಥವಾ ಕಾಂಗ್ರೆಸ್ ಎಂಬ ವಿಚಾರ ಬರುವುದಿಲ್ಲ. ಲಿಂಗಾಯತ ಸಮಾಜದ ಎಲ್ಲಾ ಮುಖಂಡರು ಸೇರಿ ಸಭೆ ಮಾಡುತ್ತಿದ್ದೇವೆ. ಈ ಸಭೆ ನಡೆದೇ ನಡೆಯುತ್ತದೆ. ಇದು ನಮ್ಮ ಸಮಾಜದ ಪ್ರಶ್ನೆಯೇ ಹೊರತು ಪಕ್ಷದ ಪ್ರಶ್ನೆಯಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಗೆಲ್ಲುವ ಅಭ್ಯರ್ಥಿ ಸಿಪಿವೈ – ಬೆಲ್ಲದ್ ಬ್ಯಾಟಿಂಗ್

  • ಜಾತಿ ಜನಗಣತಿ ವರದಿ ಜಾರಿ ಮಾಡಲೇಬೇಕು: ಬಿ.ಕೆ.ಹರಿಪ್ರಸಾದ್ ಒತ್ತಾಯ

    ಜಾತಿ ಜನಗಣತಿ ವರದಿ ಜಾರಿ ಮಾಡಲೇಬೇಕು: ಬಿ.ಕೆ.ಹರಿಪ್ರಸಾದ್ ಒತ್ತಾಯ

    ಬೆಂಗಳೂರು: ಜಾತಿ ಜನಗಣತಿ ವರದಿ (Caste Census Report) ಜಾರಿ ಮಾಡಲೆಬೇಕು ಎಂದು ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ (B.K.Hariprasad) ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶುಕ್ರವಾರ ಸಿಎಂ ಸಿದ್ದರಾಮಯ್ಯ (Siddaramaiah) ಅವರನ್ನು ಭೇಟಿಯಾಗಿದ್ದೆ. ಅ.7ರಂದು ಹಿಂದುಳಿದ ವರ್ಗಗಳ ಹಾಲಿ ಹಾಗೂ ಮಾಜಿ ಶಾಸಕರು ಭೇಟಿಯಾಗಿ ಜಾತಿಗಣತಿ ವರದಿ ಜಾರಿಗೆ ಒತ್ತಾಯಿಸಿದ್ದೆವು. ಆಗ 18ರಂದು ಕ್ಯಾಬಿನೆಟ್‌ಗೆ ತರುತ್ತೇವೆ ಎಂದು ಸಿಎಂ ಹೇಳಿದ್ದರು. ವರದಿ ಸಂಬಂಧ ಏನು ಕ್ರಮ ಕೈಗೊಂಡಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.

    ಕೆಲ ಸಮುದಾಯದ ಮುಖಂಡರು ವಿರೋಧ ಮಾಡಿದ್ದಾರೆ. ಈ ಸಂಬಂಧ ಭಾನುವಾರ ಎರಡು ಸಮುದಾಯಗಳ ಸಭೆ ಕರೆದಿದ್ದೇನೆ. ಈಗ ಉಪ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿದೆ. ಈ ಹಂತದಲ್ಲಿ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಭೂ ಸುಧಾರಣಾ ಕಾಯ್ದೆ, ಬ್ಯಾಂಕ್‌ಗಳ ರಾಷ್ಟ್ರೀಕರಣ ಸಂದರ್ಭದಲ್ಲೂ ತೀವ್ರ ವಿರೋಧ ವ್ಯಕ್ತವಾಗಿತ್ತು. ಆದರೂ ಕಾಂಗ್ರೆಸ್ ಪಕ್ಷ ಅದನ್ನು ಜಾರಿಗೆ ತಂದಿತ್ತು. ಪ್ರಜಾಪ್ರಭುತ್ವದಲ್ಲಿ ಒತ್ತಡ ಬರೋದು ಸಹಜ. ಜಾತಿಗಣತಿ ವರದಿಯನ್ನ ಜಾರಿಗೆ ತರಲೇಬೇಕು ಎಂದು ಅವರು ಹೇಳಿದ್ದಾರೆ.

    ಮುಡಾ ಕಚೇರಿ ಮೇಲೆ ಇ.ಡಿ ದಾಳಿ ವಿಚಾರವಾಗಿ, ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಇ.ಡಿ ಹಾಗೂ ಸಿಬಿಐ ದುರುಪಯೋಗವಾಗುತ್ತಿದೆ. ಇ.ಡಿ ಒಂದು ರೀತಿ ವಾಷಿಂಗ್ ಮಷಿನ್ ಇದ್ದಂತೆ.‌ ಕರೆದುಕೊಂಡು ಹೋಗಿ ರುಬ್ಬಿ ಬಾಯ್ಬಿಡಿಸಿ ಕಳಿಸುತ್ತಾರೆ. ಈಗ ಅಂತಹವರು ಯಾರೂ ಇಲ್ಲ. ಇ.ಡಿ ದಾಳಿ ಮಾಡಬೇಕಿರೋದು ಪ್ರಹ್ಲಾದ್ ಜೋಶಿಯವರ ಮನೆ ಮೇಲೆ. 2 ಕೋಟಿ ರೂ. ಆರೋಪ ಎದುರಾಗಿದೆ. ಹಿಂದೂ ನಾವೆಲ್ಲಾ ಒಂದು ಅನ್ನೋರು ಸ್ವಂತ ತಮ್ಮನಿಗೂ ನನಗೂ ಸಂಬಂಧವಿಲ್ಲ ಎನ್ನುತ್ತಾರೆ. ನೈತಿಕತೆ ಪಾಠ ಹೇಳುವ ಜೋಶಿ ವಿರುದ್ಧ ಇನ್ನೂ ಕುಮಾರಸ್ವಾಮಿ ಪಾರ್ಥೇನಿಯಂಗೆ ಹೋಲಿಸಿದ್ರು. ನಾನು ಇನ್ನೊಂದು ಹೆಜ್ಜೆ ಮುಂದೆ ಹೋಗಿ ಹೇಳ್ತೀನಿ ಜೋಶಿ ಪ್ಯಾರೆಸೈಟ್, ಅವರು ಹೋದ ಕಡೆ ಪಕ್ಷ ಬೆಳೆಯಲೇ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.

  • ಜಾತಿ ಜನಗಣತಿ ವರದಿ ಬಗ್ಗೆ ಸಿಎಂ, ಡಿಸಿಎಂ ಒಳ್ಳೆಯ ನಿರ್ಧಾರಕ್ಕೆ ಬರಲಿದ್ದಾರೆ: ಶ್ರೇಯಸ್ ಪಟೇಲ್

    ಜಾತಿ ಜನಗಣತಿ ವರದಿ ಬಗ್ಗೆ ಸಿಎಂ, ಡಿಸಿಎಂ ಒಳ್ಳೆಯ ನಿರ್ಧಾರಕ್ಕೆ ಬರಲಿದ್ದಾರೆ: ಶ್ರೇಯಸ್ ಪಟೇಲ್

    ಹಾಸನ: ಜಾತಿ ಜನಗಣತಿ ವರದಿ ಸಿಎಂ ಹಾಗೂ ಡಿಸಿಎಂ ಕೈಯಲ್ಲಿದೆ. ಅದರ ಜಾರಿಯ ಬಗ್ಗೆ ಇಬ್ಬರು ಒಳ್ಳೆಯ ನಿರ್ಧಾರಕ್ಕೆ ಬರಲಿದ್ದಾರೆ ಎಂದು ಸಂಸದ ಶ್ರೇಯಸ್ ಪಟೇಲ್ ಹೇಳಿದ್ದಾರೆ.

    ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಜನಗಣತಿಯ ವರದಿ ಜಾರಿ ಬಗ್ಗೆ ಸಿಎಂ, ಡಿಸಿಎಂ ಕೈಗೊಳ್ಳುವ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆ. ಈ ಬಗ್ಗೆ ಅಂತಿಮವಾಗಿ ಕ್ಯಾಬಿನೆಟ್‍ನಲ್ಲಿ ತೀರ್ಮಾನ ಮಾಡಲಾಗುತ್ತದೆ. ಕ್ಯಾಬಿನೆಟ್ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮಾಡುವ ತೀರ್ಮಾನವೇ ಅಂತಿಮ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಹಾಸನಕ್ಕೆ ರೈಲುಗಳಲ್ಲಿ ಮಾದಕ ವಸ್ತು ಸರಬರಾಜು – ಅಧಿಕಾರಿಗಳಿಗೆ ಶ್ರೇಯಸ್ ಪಟೇಲ್ ಕ್ಲಾಸ್

    ಕ್ಯಾಬಿನೆಟ್‍ನಲ್ಲಿ ಒಳ್ಳೆಯ ರೀತಿ ತೀರ್ಮಾನ ಆಗುತ್ತದೆ. ಅದರಲ್ಲಿ ಯಾವುದೇ ಸಂಶಯ ಬೇಡ. ಈ ವಿಚಾರದಲ್ಲಿ ನನ್ನ ವೈಯುಕ್ತಿಕ ತೀರ್ಮಾನ ಒಂದೇ, ರಾಜ್ಯ ಸರ್ಕಾರ, ಸಿಎಂ, ಡಿಸಿಎಂ ತೀರ್ಮಾನವೇ ಅಂತಿಮ. ಅದನ್ನು ಬಿಟ್ಟು ನಾವ್ಯಾರು ಮಾತನಾಡಬಾರದು ಎಂದಿದ್ದಾರೆ.

    ಸಚಿವ ಸತೀಶ್ ಜಾರಕಿಹೋಳಿ ಕಾಂಗ್ರೆಸ್ ನಾಯಕರ ಭೇಟಿ ವಿಚಾರಕ್ಕೆ ಸಂಬಂದಿಸಿದಂತೆ, ಈ ಬೆಳವಣಿಗೆಯನ್ನು ನಾನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಸಿಎಂ ಸೀಟ್ ಎಲ್ಲಿ ಖಾಲಿ ಇದೆ? ಮುಖ್ಯಮಂತ್ರಿಯಾಗಿ ಜನಮೆಚ್ಚಿದ ನಾಯಕ ಸಿದ್ದರಾಮಯ್ಯನವರು ಇದ್ದಾರೆ ಎಂದು ಸಿಎಂ ಪರ ಬ್ಯಾಟ್ ಬೀಸಿದ್ದಾರೆ. ಇದನ್ನೂ ಓದಿ: ಕಾಂತರಾಜು ಸಮಿತಿ ವರದಿಗೆ ಆಗ್ರಹ – ಅ.18ರ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ: ಸಿಎಂ

  • ಜಾತಿಗಣತಿ ವರದಿ ಬಂದ ಬಳಿಕ‌ವೇ ಅನುಷ್ಠಾನಕ್ಕೆ ತೀರ್ಮಾನ – ಶಿವರಾಜ್ ತಂಗಡಗಿ

    ಜಾತಿಗಣತಿ ವರದಿ ಬಂದ ಬಳಿಕ‌ವೇ ಅನುಷ್ಠಾನಕ್ಕೆ ತೀರ್ಮಾನ – ಶಿವರಾಜ್ ತಂಗಡಗಿ

    ಬೆಂಗಳೂರು: ಜಾತಿಗಣತಿ ವರದಿ ಬಂದ ಬಳಿಕ ಜಾರಿ ಮಾಡಬೇಕಾ? ಬೇಡವಾ ಅಂತ ಸಿಎಂ ಸಿದ್ದರಾಮಯ್ಯ (Siddaramaiah) ತೀರ್ಮಾನ ಮಾಡ್ತಾರೆ ಅಂತ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಸ್ಪಷ್ಟಪಡಿಸಿದ್ದಾರೆ.

    ಜಾತಿಗಣತಿ ವರದಿ ಜಾರಿ ವಿಚಾರ‌ವಾಗಿ ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಈಗಾಗಲೇ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರ ಅಧಿಕಾರ ಜನವರಿವರೆಗೆ ವಿಸ್ತರಣೆ ಮಾಡಲಾಗಿದೆ. ಅವರು ಮೊದಲು ಜಾತಿಗಣತಿ ವರದಿ (Caste Census Report) ಕೊಡಲಿ ಆಮೇಲೆ ಬಿಡುಗಡೆ ಮಾಡಬೇಕಾ, ಬೇಡ್ವಾ? ಅನ್ನೋದನ್ನ ಚರ್ಚೆ ಮಾಡ್ತೀವಿ. ನಾನು, ‌ಸಿಎಂ ಯಾರು ಕೂಡಾ ವರದಿ ನೋಡಿಲ್ಲ. ವರದಿ ಇಲ್ಲದೇ ಚರ್ಚೆ ಮಾಡೋದು ಸರಿಯಲ್ಲ ಅಂತ ಹೇಳಿದ್ದಾರೆ. ಇದನ್ನೂ ಓದಿ: Telangana Election 2023: ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ವೋಟ್‌ ಮಾಡಿದ ಸ್ಟಾರ್ಸ್‌

    ವರದಿ ಸ್ವೀಕಾರ ಮಾಡಬಾರದು ಅಂತ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸಹಿ ಹಾಕಿರೋ ವಿಚಾರಕ್ಕೆ ಪ್ರತಿಕ್ರಿಯಿಸಿ, ವರದಿ ನೋಡದೇ ಸ್ವೀಕಾರ ಮಾಡಬೇಕು-ಬೇಡ ಅನ್ನೋದು ಸರಿಯಲ್ಲ. ಗಣತಿ ಕುರಿತು ಸಾಕಷ್ಟು ವರದಿಗಳು ಬಂದಿವೆ. ಅಂತಿಮ ವರದಿ ಸರ್ಕಾರಕ್ಕೆ ಸಲ್ಲಿಕೆಯಾದ ಬಳಿಕ ಜಾರಿ ಮಾಡಬೇಕಾ ಅನ್ನೋದು ನಿರ್ಧಾರವಾಗುತ್ತದೆ. ನೂರಾರು ಕೋಟಿ ಹಣ ಖರ್ಚು ಮಾಡಿ ವರದಿ ಸ್ವಿಕಾರ ಮಾಡದೇ ಹೋದ್ರೆ ತಪ್ಪಾಗುತ್ತದೆ. ಅದಾದ ಬಳಿಕ ಸಾಧಕ-ಬಾಧಕ ನೋಡ್ತೀವಿ. ನನ್ನ ಬಳಿಯೂ ಒಕ್ಕಲಿಗ ಸಂಘದವರು ಬಂದಿದ್ದರು. ನೀವು ವರದಿ ನೋಡಿದ್ರಾ ಅಂತ ಕೇಳಿದೆ. ಅವರು ಇಲ್ಲ ಅಂತ ಹೇಳಿದ್ರು. ಆದ್ದರಿಂದ ವರದಿ ಬಿಡುಗಡೆಯಾದ ಬಳಿಕ ಮಾತನಾಡಿ ಅಂತ ನಾನೇ ಅವರಿಗೆ ಸಲಹೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

    ಇದೇ ವೇಳೆ ವರದಿ ವಿರೋಧಿಸಿ ಶಾಮನೂರು ಶಿವಶಂಕರಪ್ಪ ಸಹಿ ಸಂಗ್ರಹ ವಿಚಾರ ಕುರಿತು ಮಾತನಾಡಿ, ಶಾಮನೂರು ಅವರು ಸಹಿ ಸಂಗ್ರಹ ಮಾಡಲಿ. ಅವರು ಹಿರಿಯರು ಸಿಎಂ, ಹೈಕಮಾಂಡ್ ಅವರ ಬಳಿ ಮಾತಾಡ್ತಾರೆ. ಮೊದಲು ವರದಿ ಬರಲಿ. ಕ್ಯಾಬಿನೆಟ್ ನಲ್ಲಿ ಇಡ್ತೀವಿ. ಬಳಿಕ ಎಲ್ಲಿ ಮಂಡನೆ ಮಾಡ್ತೀವಿ ಅಂತ ಸಿಎಂ ನಿರ್ಧಾರ ಮಾಡ್ತಾರೆ ಸ್ಪಷ್ಟಪಡಿಸಿದರು. ಇದನ್ನೂ ಓದಿ: ಎಲ್ಲರೂ ಆರೋಗ್ಯವಾಗಿದ್ದಾರೆ, ಬೇಗ ಮನೆಗೆ ಕಳಿಸಿಕೊಡ್ತೀವಿ: ಕಾರ್ಮಿಕರ ಬಗ್ಗೆ ವೈದ್ಯರ ಮಾತು

  • ರಾಜ್ಯದಲ್ಲಿ ಜಾತಿಗಣತಿ ಸಂಘರ್ಷ – ಕಾಂತರಾಜು ವರದಿಗೆ ವೀರಶೈವರಿಂದಲೂ ತೀವ್ರ ವಿರೋಧ

    ರಾಜ್ಯದಲ್ಲಿ ಜಾತಿಗಣತಿ ಸಂಘರ್ಷ – ಕಾಂತರಾಜು ವರದಿಗೆ ವೀರಶೈವರಿಂದಲೂ ತೀವ್ರ ವಿರೋಧ

    ಬೆಂಗಳೂರು: ರಾಜ್ಯದಲ್ಲಿ ಜಾತಿಗಣತಿ (Caste Census) ಸಂಘರ್ಷ ತೀವ್ರಗೊಂಡಿದೆ. ನಿರೀಕ್ಷೆಯಂತೆಯೇ ವೀರಶೈವ ಸಮುದಾಯ (Veerashaiva Community) ಕೂಡ ಕಾಂತರಾಜು ವರದಿಯನ್ನೂ ತೀವ್ರವಾಗಿ ವಿರೋಧಿಸಿದೆ.

    ಬೆಂಗಳೂರಿನಲ್ಲಿ (Bengaluru) ಗುರುವಾರ ಸಭೆ ನಡೆಸಿದ ಅಖಿಲ ಭಾರತ ವೀರಶೈವ ಮಹಾಸಭಾ, ಜಾತಿಗಣತಿಯಲ್ಲಿನ ಲೋಪದೋಷ ಸರಿಪಡಿಸುವಂತೆ ಸರ್ಕಾರವನ್ನ ಆಗ್ರಹಿಸಿದೆ. ಮಹಾಸಭಾ ಅಧ್ಯಕ್ಷ, ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು, ಕಾಂತರಾಜು ಜಾತಿಗಣತಿ ವರದಿಯನ್ನ ಮನೆಯಲ್ಲೇ ಕೂತು ಬರೆದಿದ್ದಾರೆ ಎಂದು ಸ್ವಪಕ್ಷೀಯರ ವಿರುದ್ಧವೇ ಸಿಡಿಸಿದ್ದಾರೆ. ಇದನ್ನೂ ಓದಿ: ರಾಜ್ಯ ಸರ್ಕಾರ 10 ಸಾವಿರ ಕೋಟಿ ಬರ ಪರಿಹಾರ ಘೋಷಣೆ ಮಾಡದಿದ್ರೆ ಬಿಜೆಪಿಯಿಂದ ವಿಧಾನಸೌಧ ಮುತ್ತಿಗೆ: ಕೋಟ ಎಚ್ಚರಿಕೆ

    ನಾವು ಜಾತಿಗಣತಿಯ ವಿರೋಧಿಗಳಲ್ಲ, ಆದ್ರೆ ಯಾವುದೇ ವರದಿ ವೈಜ್ಞಾನಿಕವಾಗಿರಬೇಕು ಎಂಬುದಷ್ಟೇ ನಮ್ಮ ಒತ್ತಾಯ. ನಮ್ಮ ಸಮುದಾಯದ ಮನೆಗಳಿಗೆ ಹೋಗಿ ಯಾರೂ ಸಮೀಕ್ಷೆಯನ್ನೇ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಅನುದಾನ ತಾರತಮ್ಯ, ಆರ್‌ಆರ್‌ ನಗರದಲ್ಲಿ ಅರ್ಧಕ್ಕೆ ನಿಂತಿವೆ ಕಾಮಗಾರಿಗಳು – ಬಿಎಸ್‌ವೈಯಿಂದ 3 ದಿನ ಸತ್ಯಾಗ್ರಹದ ಎಚ್ಚರಿಕೆ

    ಮತ್ತೊಂದೆಡೆ ಕಾಂತರಾಜು ಆಯೋಗದ ವರದಿಯನ್ನ ಸರ್ಕಾರ ಸ್ವೀಕರಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಗೃಹಮಂತ್ರಿ ಮನವಿ ಮಾಡಿದ್ದಾರೆ. ಇನ್ನೂ ಕಾಂಗ್ರೆಸ್‌ನಲ್ಲಿ ಲಿಂಗಾಯತರಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಲಿಂಗಾಯತ ನಾಯಕರು ಕಾಂಗ್ರೆಸ್‌ನಲ್ಲಿ ಅಲೆಮಾರಿಗಳಾಗಿದ್ದಾರೆ: ಗೋವಿಂದ ಕಾರಜೋಳ

  • Exclusive ಸರ್ಕಾರದ ಅವಧಿ ಮುಗಿಯುತ್ತಾ ಬಂದರೂ ಇನ್ನೂ ಸಿದ್ಧವಾಗಿಲ್ಲ ಜಾತಿಗಣತಿ ವರದಿ!

    Exclusive ಸರ್ಕಾರದ ಅವಧಿ ಮುಗಿಯುತ್ತಾ ಬಂದರೂ ಇನ್ನೂ ಸಿದ್ಧವಾಗಿಲ್ಲ ಜಾತಿಗಣತಿ ವರದಿ!

    ಬೆಂಗಳೂರು: ವಿಧಾನಸಭಾ ಚುನಾವಣಾ ವೇಳೆ ಇಲ್ಲದ ತಲೆನೋವು ತಂದುಕೊಳ್ಳಲು ಸಿದ್ಧವಿಲ್ಲದ ಕಾರಣ ಜಾತಿಗಣತಿಯ ವರದಿಯ ಮಂಡನೆಗೆ ಸರ್ಕಾರ ಹಿಂದೇಟು ಹಾಕುತ್ತಿದೆ ಎನ್ನುವ ವಿಚಾರ ಈಗ ಬೆಳಕಿಗೆ ಬಂದಿದೆ.

    ಜಾತಿಗಣತಿ ಮುಕ್ತಾಯಗೊಂಡು ಎರಡು ವರ್ಷವಾದರೂ ಸರ್ಕಾರ ಮಂಡನೆ ಮಾಡುತ್ತಿಲ್ಲ. ಗಣತಿ ವರದಿಯ ಅಂಶಗಳು ಸರ್ಕಾರಕ್ಕೆ ಮುಳುವಾಗುವ ಸಾಧ್ಯತೆಯೇ ಹೆಚ್ಚು ಇರುವ ಕಾರಣ ವರದಿ ಮಂಡನೆಗೆ ಇತಿಶ್ರೀ ಹಾಡಲು ಸರ್ಕಾರ ನಿರ್ಧಾರ ಮಾಡಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

    ಜಾತಿಗಣತಿ ಪ್ರಕಾರ ರಾಜ್ಯದಲ್ಲಿ ಹಿಂದುಳಿದ ವರ್ಗವೇ ಪ್ರಬಲವಾಗಿರುವ ಮಾಹಿತಿ ಲಭ್ಯವಾಗಿದೆ. ಅಷ್ಟೇ ಅಲ್ಲದೇ ಮುಸ್ಲಿಂ ಸಮುದಾಯದ ಜನಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಒಂದು ವೇಳೆ ಮಂಡಿಸಿದರೆ ಮತವಿಭಜನೆ ಆಗುವ ಸಾಧ್ಯತೆ ಇರುವ ಕಾರಣ ಸಿಎಂ ಸಿದ್ದರಾಮಯ್ಯ ಆತಂಕದಲ್ಲಿದ್ದಾರೆ ಎನ್ನಲಾಗಿದೆ.

    ರಾಜ್ಯದಲ್ಲಿ ಲಿಂಗಾಯತರು ಪ್ರಾಬಲ್ಯ ಹೊಂದಿದ್ದು, ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಇಳಿಕೆಯಾಗಿದೆ. ಹೀಗಾಗಿ ವರದಿ ಮಂಡನೆಗೆ ಲಿಂಗಾಯಿತ ಕಾಂಗ್ರೆಸ್ ಶಾಸಕರು ಆಕ್ಷೇಪ ಎತ್ತಿದ್ದಾರೆ. ಒಂದು ವೇಳೆ ವರದಿ ಮಂಡಿಸಿದರೆ ಸೋಲಬಹುದು ಎನ್ನುವ ಭೀತಿಯಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ. ಗುಜರಾತ್ ನಲ್ಲಿ ಯಶಸ್ವಿಯಾದ ಸಾಫ್ಟ್ ಹಿಂದುತ್ವ ತಂತ್ರವನ್ನು ಕರ್ನಾಟಕದಲ್ಲಿ ಅನುಸರಿಸಲು ಕಾಂಗ್ರೆಸ್ ಮುಂದಾಗಿರುವ ಹಿನ್ನೆಲೆಯಲ್ಲಿ ಚುನಾವಣೆ ಸಮಯದಲ್ಲಿ ಅಪಾಯ ತೆಗೆದುಕೊಳ್ಳದೇ ಇರಲು ಈ ವರದಿ ಮಂಡನೆಯ ಗೋಜಿಗೆ ಹೋಗದೇ ಇರುವ ನಿರ್ಧಾರ ಮಾಡಿದೆ ಎನ್ನಲಾಗಿದೆ. 

    ಈ ವಿಚಾರದ ಬಗ್ಗೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕಾಂತರಾಜ್ ಅವರನ್ನು ಪಬ್ಲಿಕ್ ಟಿವಿ ಸಂಪರ್ಕಿಸಿದಾಗ, ಗಣತಿಯ ಕ್ರೋಢಿಕರಣದ ಕಾರ್ಯ ಪೂರ್ಣವಾಗಿಲ್ಲ. ಕ್ರೋಢಿಕರಣದ ಎಲ್ಲ ಲೆಕ್ಕಾಚಾರ ಪೂರ್ಣಗೊಳ್ಳಬೇಕಾದರೆ ಇನ್ನು ಎರಡು ತಿಂಗಳು ಬೇಕಾಗಬಹುದು ಎಂದು ಹೇಳಿದ್ದಾರೆ.

    ಇನ್ನು ಎರಡು ತಿಂಗಳು ಅಂದಾಗ ಮಾರ್ಚ್ ಅಥವಾ ಏಪ್ರಿಲ್ ನಲ್ಲಿ ಮಂಡಿಸಬೇಕಾಗುತ್ತದೆ. ಜಾತಿಗಣತಿ ಪೂರ್ಣಗೊಂಡು ಈಗಾಗಲೇ ಎರಡು ವರ್ಷ ಕಳೆದಿದ್ದು ಇನ್ನು ಲೆಕ್ಕಾಚಾರ ಪೂರ್ಣಗೊಂಡಿಲ್ಲ. ಹೀಗಿರುವಾಗ ಚುನಾವಣಾ ದಿನಾಂಕ ಹತ್ತಿರ ಬಂದಾಗ ವರದಿ ಮಂಡನೆಯಾಗುವುದು ಅನುಮಾನ. ಹೀಗಾಗಿ ಜಾತಿಗಣತಿ ಹೊಣೆಯನ್ನು ಮುಂಬರುವ ಸರ್ಕಾರದ ತಲೆಗೆ ಕಟ್ಟಲು ಪ್ಲಾನ್ ನಡೆದಿದೆ ಎನ್ನಲಾಗಿದೆ.

    2017ರ ಡಿಸೆಂಬರ್ ನಲ್ಲಿ  ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಸಮಾಜ ಕಲ್ಯಾಣ ಸಚಿವ ಎಚ್.ಆಜನೇಯ, ಜಾತಿ ಗಣತಿ ವರದಿಯನ್ನು ಬಿಡುಗಡೆ ಮಾಡಬೇಕೆ? ಬಿಡುಗಡೆ ಯಾವಾಗ ಮಾಡಬೇಕು ಎನ್ನುವುದನ್ನು ಸಿಎಂ ನಿರ್ಧಾರ ಮಾಡುತ್ತಾರೆ. ಚುನಾವಣೆಗೆ ಮುನ್ನವೇ ಬಿಡುಗಡೆ ಮಾಡಬೇಕಾ ಎನ್ನುವುದನ್ನು ಸಿಎಂ ವಿವೇಚನೆಗೆ ಬಿಡಲಾಗಿದೆ ಎಂದು ತಿಳಿಸಿದ್ದರು.

    ಈ ಹಿಂದೆ ಜಾತಿಗಣತಿಯ ಮಾಹಿತಿ ಮಾಧ್ಯಮಗಳಲ್ಲಿ ಸೋರಿಕೆಯಾಗಿತ್ತು. ಈ ಮಾಹಿತಿ ಪ್ರಕಾರ, ಎಸ್‍ಸಿ-ಎಸ್‍ಟಿ 1.45 ಕೋಟಿ, ಮುಸ್ಲಿಂ 70 ಲಕ್ಷ, ಲಿಂಗಾಯಿತ 65 ಲಕ್ಷ, ಒಕ್ಕಲಿಗ 60 ಲಕ್ಷ, ಕುರುಬ 45 ಲಕ್ಷ, ಬ್ರಾಹ್ಮಣ 14 ಲಕ್ಷ, ಕ್ರಿಶ್ಚಿಯನ್ 4.5 ಲಕ್ಷ ಜನ ಇದ್ದಾರೆ.

    ಏನಿದು ಜಾತಿ ಗಣತಿ?: ಸರ್ಕಾರದ ಯೋಜನೆಗಳು ಅರ್ಹವಾದ ಫಲಾನುಭವಿಗಳಿಗೆ ತಲುಪಲು ಮತ್ತು ಜನಸಂಖ್ಯೆ ಆಧಾರದ ಮೇಲೆ ನಿರ್ದಿಷ್ಟ ಸಮುದಾಯದವರಿಗೆ ಸೌಲಭ್ಯ ಕಲ್ಪಿಸಲು ಈ ಹಿಂದೆ ಸುಪ್ರೀಂ ಕೋರ್ಟ್ ಜಾತಿ ಗಣತಿ ನಡೆಸಬೇಕು ಎಂದು ಹೇಳಿತ್ತು.

    ಈ ಹಿನ್ನೆಲೆಯಲ್ಲಿ ಮೀಸಲಾತಿ ಮತ್ತು ಯೋಜನೆ ರೂಪಿಸಲು, ವೈಜ್ಞಾನಿಕ ಮಾನದಂಡ ಜಾರಿಗೊಳಿಸುವ ಸಲುವಾಗಿ 1931ರ ನಂತರ ದೇಶದಲ್ಲೇ ಮೊದಲ ಬಾರಿ ಕರ್ನಾಟಕ ಸರ್ಕಾರ 2015ರಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಹೆಸರಿನಲ್ಲಿ ಜಾತಿ ಗಣತಿ ನಡೆಸಿತ್ತು. ಈ ಸಂದರ್ಭದಲ್ಲಿ ಸುಮಾರು 55 ಪ್ರಶ್ನೆಗಳನ್ನು ಕೇಳಿ ಜನರ ಆರ್ಥಿಕ ಸ್ಥಿತಿಯನ್ನೂ ತಿಳಿದುಕೊಳ್ಳಲಾಗಿತ್ತು.

    ಈ ಸಮೀಕ್ಷೆ ಮುಗಿದ ಬಳಿಕ ಜಾತಿ ಆಧಾರದ ಮೇಲೆ ಮತ್ತು ಅವರ ಸಾಮಾಜಿಕ ಮತ್ತು ಆರ್ಥಿಕ ಪರಿಸ್ಥಿತಿ ಕುರಿತಂತೆ ವರದಿ ತಯಾರಿಸುವ ಕಾರ್ಯ ಆರಂಭವಾಗಿತ್ತು. ಆದರೆ ಇದೂವರೆಗೂ ಈ ವರದಿಯಲ್ಲಿ ಏನಿದೆ ಎನ್ನುವುದನ್ನು ಅಧಿಕೃತವಾಗಿ ತಿಳಿದುಬಂದಿಲ್ಲ. ಆದರೂ ಈ ವರದಿಯಲ್ಲಿರುವ ಮಾಹಿತಿಗಳು ಮಾಧ್ಯಮಗಳಿಗೆ ಸೋರಿಕೆಯಾಗಿತ್ತು.