ಮಂಡ್ಯ: ಮುಂಗಾರು ಮಳೆ ಬಳಿಕ ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಮಳೆಯೂ ಚುರುಕುಗೊಂಡಿದೆ. ಈ ಹಿನ್ನೆಲೆ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂನ (KRS Dam) ಒಳಹರಿವಿನ ಪ್ರಮಾಣ ಹೆಚ್ಚಾಗಿದೆ.
ಕೆಆರ್‌ಎಸ್ ಡ್ಯಾಂ ಸಂಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿರುವ ಹಿನ್ನೆಲೆ ಯಾವುದೇ ಕ್ಷಣದಲ್ಲಾದರು ಡ್ಯಾಂನಿಂದ 40 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡುವ ಸಾಧ್ಯತೆ ಇದೆ. ಹೀಗಾಗಿ ಕಾವೇರಿ ನೀರಾವರಿ ನಿಗಮ ಕಾವೇರಿ ನದಿ (Cauvery River) ಪಾತ್ರದ ಜನರಿಗೆ ಎಚ್ಚರಿಕೆಯನ್ನು ನೀಡಿದೆ. ಇದನ್ನೂ ಓದಿ: ಯಾವುದೇ ಕ್ಷಣದಲ್ಲಿ ಹೇಮಾವತಿ ಡ್ಯಾಂನಿಂದ ನೀರು ಹೊರಕ್ಕೆ – ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ
ಸದ್ಯ ಕೆಆರ್‌ಎಸ್ ಡ್ಯಾಂನ ಒಳಹರಿವಿನ ಪ್ರಮಾಣ 20,797 ಕ್ಯೂಸೆಕ್ ಇದ್ದು, 25 ಸಾವಿರ ಕ್ಯೂಸೆಕ್‌ನ್ನು ಸದ್ಯ ನದಿಗೆ ಬಿಡಲಾಗುತ್ತಿದೆ. 124.80 ಗರಿಷ್ಟ ಮಟ್ಟದ ಕೆಆರ್‌ಎಸ್ ಸಂಪೂರ್ಣ ಭರ್ತಿಯಾಗಿದ್ದು, ಡ್ಯಾಂನಲ್ಲಿ ಗರಿಷ್ಠ ಸಾಮರ್ಥ್ಯವಾದ 49.452 ಟಿಎಂಸಿಯಷ್ಟು ನೀರು ಭರ್ತಿಯಾಗಿದೆ. ಇದನ್ನೂ ಓದಿ: ಏಷ್ಯಾಕಪ್ ವಿವಾದದ ಬೆನ್ನಲ್ಲೇ ನವೆಂಬರ್‌ನಲ್ಲಿ ಪಾಕ್ ವಿರುದ್ಧ ಆಡಲಿದೆ ಭಾರತ
















