ಮಡಿಕೇರಿ: ಕಾವೇರಿ ನದಿಯಲ್ಲಿ(Cauvery River) ಸ್ನಾನಕ್ಕೆಂದು ತೆರಳಿದ್ದ 8 ಜನ ಯುವಕರ ಪೈಕಿ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ಮಡಿಕೇರಿ(Madikeri) ತಾಲೂಕಿನ ನಾಪೊಕ್ಲು(Napoklu) ಸಮೀಪದ ಎಮ್ಮೆಮಾಡುವಿನ ಕೂರುಳಿಯಲ್ಲಿ ನಡೆದಿದೆ.
ಮಂಡ್ಯ: ಕಾವೇರಿ ನದಿಯಲ್ಲಿ (Cauvery River) ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೈಸೂರಿನ ವಿಕ್ರಾಂತ್ ಕಾರ್ಖಾನೆ ನೌಕರ ಸಾವನ್ನಪ್ಪಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದ ಬಳಿ ನಡೆದಿದೆ.
ಮೈಸೂರು (Mysuru) ಜಿಲ್ಲೆಯ ಹುಣಸೂರು ಮೂಲದ ಮಹೇಶ್ (35) ಮೃತ ದುರ್ದೈವಿ. ಶ್ರೀರಂಗಪಟ್ಟಣದ ತರೀಪುರ ಗ್ರಾಮದಲ್ಲಿ ಸ್ನೇಹಿತನ ಮನೆಯ ಗೃಹ ಪ್ರವೇಶಕ್ಕೆಂದು ಮಹೇಶ್ ಸ್ನೇಹಿತರ ಜೊತೆ ಬಂದಿದ್ದರು. ಇದನ್ನೂ ಓದಿ: ಕಲಬುರಗಿ| ತಡರಾತ್ರಿ ಭೀಕರ ರಸ್ತೆ ಅಪಘಾತಕ್ಕೆ ಐವರು ದುರ್ಮರಣ
ಮಡಿಕೇರಿ: ಜೀವನದಿ ಕಾವೇರಿ (CauveryRiver)… ಕೊಡಗು, ಮೈಸೂರು, ಮಂಡ್ಯ ಸೇರಿದಂತೆ ತಮಿಳುನಾಡಿನ ಬಹಳಷ್ಟು ಜಿಲ್ಲೆಗಳಿಗೆ ಅಕ್ಷರಶಃ ಜೀವನದಿಯಾಗಿದೆ. ಆದರೆ ಈ ಬಾರಿ ಅವಧಿಗೆ ಮೊದಲೇ ಕಾವೇರಿ ನದಿ ಬತ್ತಲಾರಂಭಿಸಿದೆ. ಜೀವನದಿಯ ಒಡಲು ಬರಿದಾಗುತ್ತಿದೆ. ಹಾಗಾಗಿ ದುಬಾರೆ ಪ್ರವಾಸಿ ತಾಣದಲ್ಲಿ ಮಿಷಿನ್ ಬೋಟ್‌ಗಳು ಹಾಗೂ ರಿವರ್ ರಾಫ್ಟಿಂಗ್ ಬೋಟ್‌ಗಳು (River Rafting Boat) ದಡ ಸೇರಿದ್ದು, ಲಾಕ್‌ಡೌನ್‌ನಂತೆ ಪ್ರವಾಸಿ ತಾಣಗಳು ಬಣಗುಡುತ್ತಿವೆ.
ಕೊಡಗು ಜಿಲ್ಲೆಗೆ ಆಗಮಿಸುವ ದೇಶ ವಿದೇಶಗಳ ಪ್ರವಾಸಿಗರ ಪಾಲಿನ ಹಾಟ್ ಸ್ಪಾಟ್ ಎಂದೇ ಜನಜನಿತವಾಗಿರುವ ಕುಶಾಲನಗರ ತಾಲ್ಲೂಕಿನ ದುಬಾರೆ ಕಾವೇರಿ ತೀರ ರಣ ಬಿಸಿಲಿಗೆ ದಿನೇ ದಿನೇ ಒಣಗಿ ಬಣಗುಟ್ಟುತ್ತಿದೆ. ದುಬಾರೆ ಸಾಕಾನೆ ಶಿಬಿರದಲ್ಲಿರುವ ಸಾಕಾನೆಗಳಿಗೆ ನಿತ್ಯವೂ ಮಾಡಿಸುವ ಸ್ನಾನ ಹಾಗೂ ಅವುಗಳ ದಾಹ ನೀಗಿಸುವ ಪಾನಕ್ಕೆ ನೀರಿನ ಬರ ಎದುರಾಗುವ ಎಲ್ಲಾ ಲಕ್ಷಣಗಳು ಗೋಚರವಾಗುತ್ತಿವೆ. ಇದನ್ನೂ ಓದಿ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಎ.ಆರ್.ರೆಹಮಾನ್
ಇನ್ನು ಹತ್ತು ದಿನಗಳಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಬಾರದಿದ್ದರೆ ಜೀವನದಿ ಕಾವೇರಿಯಲ್ಲಿ ಹರಿಯುವ ನೀರು ಸಂಪೂರ್ಣ ಸ್ಥಗಿತವಾದರೂ ಅಚ್ಚರಿಪಡಬೇಕಿಲ್ಲ. ಈ ನಡುವೆ ಕಾವೇರಿಯಲ್ಲಿ ನೀರು ಕಡಿಮೆಯಾಗಿರುವುದರಿಂದ ಮೋಟಾರ್ ಬೋಟ್ ಓಡಿಸಲಾಗುತ್ತಿಲ್ಲ. ಈ ಕಾರಣದಿಂದಾಗಿ ಅರಣ್ಯ ಇಲಾಖೆ ಬೋಟ್ ಸಂಚಾರ ನಿಲ್ಲಿಸಿದೆ. ಜೊತೆಗೆ ಖಾಸಗಿ ರಿವರ್ ರಾಫ್ಟಿಂಗ್ ಬೋಟ್‌ಗಳು ಕೂಡ ನೀರಿಲ್ಲದೇ ಸಂಚಾರ ನಿಲ್ಲಿಸಿವೆ. ಈ ಕಾರಣದಿಂದಾಗಿ ಪ್ರವಾಸಿಗರು ಅನಿವಾರ್ಯವಾಗಿ ಅಪಾಯಕಾರಿ ನದಿಯನ್ನ ದಾಟಿಯೇ ದುಬಾರೆಗೆ ತೆರಳುತ್ತಿದ್ದಾರೆ. ಇದನ್ನೂ ಓದಿ: Explainer | ಯಾರಿದು ಹೌತಿ ಉಗ್ರರು? ಅಮೆರಿಕ ದಾಳಿ ನಡೆಸಿದ್ದು ಯಾಕೆ? ವಿಶ್ವಕ್ಕೆ ಸಮಸ್ಯೆ ಏನು?
ಇನ್ನೂ ದುಬಾರೆ ಸಾಕಾನೆ ಶಿಬಿರಕ್ಕೆ ಅಗಮಿಸುವ ಬೆರಳೆಣಿಕೆಯ ಪ್ರವಾಸಿಗರು ತಮ್ಮ ವೃದ್ಧ ತಂದೆ ತಾಯಿ, ಪುಟ್ಟ ಪುಟ್ಟ ಮಕ್ಕಳು ಎಲ್ಲರನ್ನ ಕರೆದುಕೊಂಡು ಆನೆ ಶಿಬಿರ ನೋಡಲು ನದಿ ದಾಟುವ ಪ್ರಯತ್ನ ಮಾಡುತ್ತಿದ್ದಾರೆ. ಈ ಮಧ್ಯೆ ನದಿ ದಾಟುವ ಯತ್ನದಲ್ಲಿ ಹಲವು ಮಂದಿ ತಮ್ಮ ಬೆಲೆ ಬಾಳುವ ಮೊಬೈಲ್ಗಳನ್ನ ಕಳೆದುಕೊಂಡಿದ್ದಾರಂತೆ. ಕಾವೇರಿ ನದಿ ಅವಧಿಗೆ ಮೊದಲೇ ಬತ್ತುತ್ತಿರುವುದು ಹಲವರ ಅಚ್ಚರಿಗೆ ಕಾರಣವಾಗಿದೆ. ಇದರಿಂದ ಪ್ರವಾಸೋದ್ಯಮವನ್ನೆ ಅವಲಂಬಿಸಿಕೊಂಡು ಬದುಕು ನಡೆಸುತ್ತಿರುವ ವರ್ತಕರಿಗೆ ಹಾಗೂ ಅಂಗಡಿ. ಮುಗ್ಗಟ್ಟುಗಳಿಗೂ ಬಿಸಿ ತಟ್ಟಿದೆ. ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಮುಕ್ತನಾಗುತ್ತೇನೆ, ಕಾಯಿರಿ: ಪವರ್ ಶೇರ್ ಗೇಮ್‌ಗೆ ಡಿಕೆಶಿ ಚಾಲನೆ
ಮೈಸೂರು: ನೀರಿನಲ್ಲಿ ಮುಳುಗಿ ತಾತ (Grandfather) ಹಾಗೂ ಇಬ್ಬರು ಮೊಮ್ಮಕ್ಕಳು (Grandchildren) ಜಲಸಮಾಧಿಯಾದ ಘಟನೆ ಮೈಸೂರು (Mysuru) ಜಿಲ್ಲೆ ಟಿ.ನರಸಿಪುರ (T Narasipura) ತಾಲೂಕಿನಲ್ಲಿ ನಡೆದಿದೆ.
ಚೌಡಯ್ಯ (70), ಭರತ್ (13), ಧನುಷ್ (10) ಮೃತ ದುರ್ದೈವಿಗಳು. ಮೃತರು ಟಿ.ನರಸೀಪುರ ಪಟ್ಟಣದ ತಿರುಮಕೂಡಲಿನ ನಿವಾಸಿಗಳಾಗಿದ್ದು, ಕಾವೇರಿ ನದಿ ಬಳಿಗೆ ತೆರಳಿದ್ದ ವೇಳೆ ಘಟನೆ ಸಂಭವಿಸಿದೆ. ಇದನ್ನೂ ಓದಿ: ಜಮೀರ್ ಕಣ್ಣೀರು ಮತ್ತು 100 ಬಿರಿಯಾನಿ..!
ಇಬ್ಬರು ಮೊಮ್ಮಕ್ಕಳು ನೀರಿನಲ್ಲಿ ಮುಳುಗಿದ್ದ ಹಿನ್ನೆಲೆ ತಾತ ಮಕ್ಕಳ ರಕ್ಷಣೆಗೆಂದು ತಾವೂ ನೀರಿಗಿಳಿದಿದ್ದರು. ಈ ವೇಳೆ ಇಬ್ಬರು ಮೊಮ್ಮಕ್ಕಳನ್ನು ರಕ್ಷಿಸಲಾಗದೇ ಚೌಡಯ್ಯ ಕೂಡ ಸಾವನ್ನಪ್ಪಿದ್ದಾರೆ. ಮೂವರ ಮೃತದೇಹಗಳನ್ನು ಟಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಟಿ.ನರಸೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಇನ್ಮುಂದೆ ಕಸಕ್ಕೂ ಶುಲ್ಕ – ತಿಂಗಳಿಗೆ ವಸತಿ, ವಾಣಿಜ್ಯ ಕಟ್ಟಡಗಳಿಗೆ ಎಷ್ಟು?
ಮಡಿಕೇರಿ: ಮಳೆಗಾಲದಲ್ಲಿ ತುಂಬಿ ಹರಿಯುತ್ತಿದ್ದ ಜೀವನದಿ ಕಾವೇರಿಯಲ್ಲಿ (Cauvery River) ಮಾರ್ಚ್ ಆರಂಭದಲ್ಲೇ ನೀರಿನ ಹರಿವಿನ ಪ್ರಮಾಣ ಬಹುತೇಕ ಕ್ಷೀಣಿಸುತ್ತಿದೆ. ಹೀಗೆ ಮುಂದುವರಿದರೆ ಮುಂದಿನ ಒಂದು ವಾರದಲ್ಲಿ ಕುಶಾಲನಗರ ಸೇರಿದಂತೆ ಸುತ್ತಮುತ್ತ ವ್ಯಾಪ್ತಿಯ ನಾಗರಿಕರಿಗೆ ಕುಡಿಯುವ ನೀರಿಗೆ (Drinking Water) ಹಾಹಾಕಾರ ಉಂಟಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಕೊಡಗಿನಲ್ಲಿ ಹುಟ್ಟಿ ನಾಡಿನ ಉದ್ದಗಲಕ್ಕೂ ಹರಿದು ರೈತರ ಪಾಲಿಗೆ ವರದಾನವಾಗಿರುವ ಕಾವೇರಿ ನದಿಯ ಒಡಲು ಇದೀಗ ಕೊಡಗಿನಲ್ಲಿಯೇ ಬರಿದಾಗುತ್ತಿದೆ. ವರ್ಷದ 4 ತಿಂಗಳು ತುಂಬಿ ಹರಿಯುವ ಕಾವೇರಿಯಲ್ಲಿ ಇದೀಗ ನೀರಿನ ಹರಿವಿನ ಕೊರತೆ ಎದ್ದು ಕಾಣುತ್ತಿದೆ. ಈ ಬಾರಿ ನಿರಂತರವಾಗಿ ಮಳೆ ಸುರಿದರೂ ಕಾವೇರಿ ನದಿ ಜಲಮೂಲಗಳು ಅಲ್ಲಲ್ಲಿ ಬತ್ತಿಹೋಗಿರುವ ದೃಶ್ಯ ಗೋಚರಿಸುತ್ತಿವೆ. ಕಳೆದ ಕೆಲ ದಿನಗಳಿಂದ ಮೂಲ ಕಾವೇರಿಯಿಂದ ಕುಶಾಲನಗರದವರೆಗೆ ಕೃಷಿಕರು ಮತ್ತು ವಾಣಿಜ್ಯ ಚಟುವಟಿಕೆಗಳಿಗೆ ಅವಶ್ಯವಿರುವ ನೀರಿಗಾಗಿ ಸಾವಿರಾರು ಸಂಖ್ಯೆಯಲ್ಲಿ ಮೋಟಾರ್ ಪಂಪ್ಗಳನ್ನು ಅಳವಡಿಸಿದ್ದಾರೆ. ಇದರಿಂದ ನದಿಯಲ್ಲಿ ನೀರಿನ ಹರಿವು ಅಲ್ಲಲ್ಲಿ ಬತ್ತಿ ಹೋಗುತ್ತಿದೆ. ನದಿ ತಟದಲ್ಲಿರುವ ಕೃಷಿಕರು ವಾಣಿಜ್ಯ ಬೆಳೆ ಸೇರಿದಂತೆ ವಾಣಿಜ್ಯ ಕಟ್ಟಡಗಳಿಗೆ ನೀರು ಪಂಪ್ ಮಾಡುತ್ತಿರುವುದರಿಂದ ನೀರಿನ ಕೊರತೆ ಉಂಟಾಗಿದೆ ಎನ್ನುವುದು ಸ್ಥಳೀಯರ ಅಭಿಪ್ರಾಯ.
ಇನ್ನೂ ಕುಶಾಲನಗರ ಮತ್ತು ಮುಳ್ಳುಸೋಗೆ ವ್ಯಾಪ್ತಿಯ ಪಟ್ಟಣಕ್ಕೆ ನಿತ್ಯ 35 ಲಕ್ಷ ಲೀಟರ್ ನೀರಿನ ಅಗತ್ಯವಿದ್ದು, ಜಲಮಂಡಳಿ ಮೂಲಕ ಕೇವಲ 28 ಲಕ್ಷ ಲೀಟರ್ ನೀರನ್ನು ಪೂರೈಸಲಾಗುತ್ತಿದೆ. ಒಂದೆಡೆ ಪಟ್ಟಣ ಪಂಚಾಯಿತಿಯಿಂದ ನೀರು ಸರಬರಾಜು ಮಾಡುತ್ತಿದ್ದು, ಮತ್ತೊಂದೆಡೆ ನೀರು ಪೋಲಾಗದಂತೆ ಪ್ರತಿಯೊಬ್ಬರೂ ಎಚ್ಚರವಹಿಸಬೇಕೆಂದು ಎಂದು ಅಧಿಕಾರಿಗಳು ಸೂಚನೆ ನೀಡುತ್ತಿರುವುದು ಸಾಮಾನ್ಯವಾಗಿದೆ. ಅಲ್ಲದೇ ಕಳೆದ 5-6 ವರ್ಷಗಳಲ್ಲಿ ಪ್ರವಾಹ ಬಂದು ಭೂಕುಸಿತವಾದ ಪರಿಣಾಮದಿಂದ ಸಾಕಷ್ಟು ಹೂಳು ಕಾವೇರಿ ನದಿಯ ಒಡಲು ಸೇರಿದೆ. ಹೀಗಾಗಿ, ನೀರಿನ ಶೇಖರಣೆ ಸಾಕಷ್ಟು ಕುಂಠಿತವಾಗಿದೆ ಎನ್ನುವುದು ಈ ಭಾಗದ ಜನರ ಅಭಿಪ್ರಾಯ.
ಬೆಂಗಳೂರು: ಗೋದಾವರಿ-ಕೃಷ್ಣ-ಕಾವೇರಿ ನೀರಾವರಿ ಯೋಜನೆಯಲ್ಲಿ ಕರ್ನಾಟಕಕ್ಕೆ 25 TMC ನೀರು ಕೊಡಬೇಕು ಅಂತ ಮಾಜಿ ಪ್ರಧಾನಿ ದೇವೇಗೌಡ ಪುನರುಚ್ಚಾರ ಮಾಡಿದ್ದಾರೆ.
ಸಂಸತ್ ಅಧಿವೇಶನದಲ್ಲಿ ಇದೇ ವಿಷಯ ಪ್ರಸ್ತಾಪ ಮಾಡಿದ್ದ ದೇವೇಗೌಡರು ಇಂದು ಸುದ್ದಿಗೋಷ್ಠಿ ನಡೆಸಿ ಕೇಂದ್ರ ಸರ್ಕಾರಕ್ಕೆ ಮತ್ತೆ ಮನವಿ ಮಾಡಿದ್ರು. ಗೋದಾವರಿ-ಕೃಷ್ಣ-ಕಾವೇರಿ ಯೋಜನೆ ವಿಚಾರವಾಗಿ ನೀರು ಹೆಚ್ಚಳ ಮಾಡುವಂತೆ ನಾನು ಪ್ರಧಾನಿಗಳು, ಕೇಂದ್ರ ನೀರಾವರಿ ಸಚಿವರಿಗೆ 2022 ಮತ್ತು 2024 ರಲ್ಲಿ ಪತ್ರ ಬರೆದಿದ್ದೆ. ಸದ್ಯ ನಮಗೆ 15.891 TMC ನೀರು ಹಂಚಿಕೆ ಮಾಡಲಾಗಿದೆ. ಆದರೆ, ಈ ಪ್ರಮಾಣವನ್ನು 25 TMC ಗೆ ಹೆಚ್ಚಳ ಮಾಡಬೇಕು ಅಂತ ಒತ್ತಾಯ ಮಾಡಿದ್ದಾರೆ.
ಸಂಸತ್‌ನಲ್ಲಿ ಈ ಬಗ್ಗೆ ನಾನು ಮಾತಾಡಿದ್ದೇನೆ. ಕುಮಾರಸ್ವಾಮಿ, ಪ್ರಹ್ಲಾದ್ ಜೋಷಿ ಅವರು ಪ್ರಧಾನಿ ಮೋದಿ ಅವರ ಬಳಿ ಮಾತಾಡ್ತಾರೆ. ಮೋದಿ ಅವರು ನಮಗೆ ಹತ್ತಿರ ಇರೋದ್ರಿಂದ ಈ ಯೋಜನೆ ಅನುಷ್ಠಾನಕ್ಕೆ ಪ್ರಯತ್ನ ಮಾಡ್ತೀನಿ. ನೀರಾವರಿ ವಿಚಾರವಾಗಿ ನಮ್ಮಲ್ಲಿ ಯಾವುದೇ ರಾಜಕೀಯ ಇಲ್ಲ. ಸಿದ್ದರಾಮಯ್ಯ, ಡಿಕೆಶಿವಕುಮಾರ್, ಕಾಂಗ್ರೆಸ್ ಸಂಸದರು ಎಲ್ಲರ ಜೊತೆ ನಾನು ನೀರಾವರಿ ವಿಚಾರವಾಗಿ ಮಾತಾಡೋಕೆ ಸಿದ್ಧ. ನಮಗೆ ಸಮಸ್ಯೆ ಪರಿಹಾರ ಆಗಬೇಕು. ಇದಕ್ಕೆ ನನ್ನ ಹೋರಾಟ ಮುಂದುವರೆಸುತ್ತೇನೆ ಅಂತ ತಿಳಿಸಿದ್ದಾರೆ.
ನಾನು ಇನ್ನು ನಾಕಾರು ವರ್ಷ ಬದುಕಿರುತ್ತೇನೆ. ಅಷ್ಟರಲ್ಲಿ ಈ ನೀರಾವರಿ ಸಮಸ್ಯೆಗೆ ಪರಿಹಾರ ಕಂಡುಕೊಡುವ ಪ್ರಯತ್ನ ಮಾಡ್ತೀನಿ. ನೀರಾವರಿ ವಿಚಾರದಲ್ಲಿ ರಾಜಕೀಯ ಮಾಡೊಲ್ಲ. ರಾಜ್ಯ ಸರ್ಕಾರದ ಜೊತೆಗೆ ಕೆಲಸ ಮಾಡ್ತೀನಿ. ಹಿಂದೊಮ್ಮೆ ಸಿದ್ದರಾಮಯ್ಯ ಜೊತೆ ಸಂಬಂಧ ಸರಿಯಿಲ್ಲದ ವೇಳೆ ಸಿದ್ದರಾಮಯ್ಯ ಅವರೇ ನಮ್ಮ ಮನೆಗೆ ಬಂದಿದ್ದರು. ನೀರಾವರಿ ವಿಷಯ ಆದ ಹಿನ್ನೆಲೆ ನಾನು ಅವರ ಜೊತೆ ಸಹಕಾರ ಕೊಟ್ಡಿದ್ದೆ ಅನ್ನೋ ಮೂಲಕ ನೀರಾವರಿ ವಿಷಯದಲ್ಲಿ ರಾಜಕೀಯ ಮಾಡೊಲ್ಲ ಅಂತ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ರಾಜ್ಯಕ್ಕೆ 25 TMC ನೀರು ತರುವ ಪ್ರಯತ್ನವನ್ನು ಮಾಡ್ತೀನಿ ಅಂತ ಭರವಸೆ ನೀಡಿದ್ದಾರೆ.
ಮಂಡ್ಯ: ಮಾಘ ಹುಣ್ಣಿಮೆ ಹಿನ್ನೆಲೆಯಲ್ಲಿ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣದ ನಿಮಿಷಾಂಭ ದೇವಾಲಯಕ್ಕೆ (Nimishamba Temple) ಅಪಾರ ಪ್ರಮಾಣದ ಭಕ್ತರ ದಂಡು ಹರಿದು ಬರುತ್ತಿದೆ. ಇಂದು ಕಾವೇರಿ ನದಿಯಲ್ಲಿ (Cauvery River) ಮಾಘ ಸ್ನಾನ ಮಾಡಿ ನಿಮಿಷಾಂಭ ದೇವಿ ದರ್ಶನ ಮಾಡಿದರೆ ಪುಣ್ಯ ಲಭಿಸುತ್ತದೆ ಎಂಬ ಪ್ರತೀತಿಯಿದೆ. ಹೀಗಾಗಿ ಮಧ್ಯರಾತ್ರಿಯಿಂದಲೇ ಕಾವೇರಿಯಲ್ಲಿ ಸಹಸ್ರಾರು ಭಕ್ತರು ಮಿಂದೇಳುತ್ತಿದ್ದಾರೆ.
ಮಂಡ್ಯ ಮಾತ್ರವಲ್ಲದೆ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ಭಕ್ತರ ಆಗಮಿಸುತ್ತಿದ್ದು, ಕಾವೇರಿ ನದಿಯಲ್ಲಿ ಪುಣ್ಯ ಸ್ನಾನ ಮಾಡಿ ನಿಮಿಷಾಂಭೆಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಮಧ್ಯರಾತ್ರಿ 12 ಗಂಟೆಯಿಂದಲೇ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯ ಆರಂಭವಾಗಿದ್ದು, ಪಂಚಾಮೃತ ಅಭಿಷೇಕ ಸೇರಿದಂತೆ ವಿವಿಧ ಅಭಿಷೇಕ ನೇರವೇರಿದೆ. ಇದನ್ನೂ ಓದಿ: ಭೀಮಾತೀರದ ನಟೋರಿಯಸ್ ಹಂತಕ ಬಾಗಪ್ಪ ಹತ್ಯೆ
ಮುಂಜಾನೆ 3 ಗಂಟೆಯಿಂದ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಿದ್ದು, ಇದೇ ಮೊದಲ ಬಾರಿಗೆ ನಿಮಿಷಾಂಭ ರಥೋತ್ಸವ ಜರುಗಿದೆ. ಕಾವೇರಿ ಸ್ನಾನಕ್ಕೆ ಆಗಮಿಸಲಿರುವ ಭಕ್ತರಿಗೆ ದಿನವಿಡೀ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸರ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: 2025ರಲ್ಲಿ ಹಜ್ ಯಾತ್ರೆಗೆ ಮಕ್ಕಳು ನಿಷೇಧ – ಕಾರಣ ಏನು ಗೊತ್ತಾ?
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ (Srirangapatna Cauvery River) ಪಾತ್ರದಲ್ಲಿ ಸಾರ್ವಜನಿಕರು ಅವೈಜ್ಞಾನಿಕವಾಗಿ ಅಸ್ತಿ ವಿಸರ್ಜನೆ ಮಾಡುತ್ತಿರುವುದರಿಂದ ನದಿ ಕಲುಷಿತವಾಗುತ್ತಿದ್ದು, ಇದನ್ನು ಸರಿಪಡಿಸಲು ಯೋಜನೆ ರೂಪಿಸಿ ವರದಿ ನೀಡುವಂತೆ ನ್ಯಾಯಾಲಯದ ನಿರ್ದೇಶನವಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಿಳಿಸಿದ್ದಾರೆ.
ಅವೈಜ್ಞಾನಿಕವಾಗಿ ಅಸ್ತಿ ಬಿಡುತ್ತಿರುವುದರಿಂದ ನದಿ ನೀರು ಕಲುಷಿತಗೊಳ್ಳುತ್ತಿದೆ. ಹೀಗಾಗಿ ವೈಜ್ಞಾನಿಕವಾಗಿ ವಿಸರ್ಜನೆ ಮಾಡುವ ಕುರಿತು ಅಧಿಕಾರಿಗಳ ಸಮಿತಿ ರಚಿಸಿದ್ದು, ನೈಸರ್ಗಿಕವಾಗಿ ವಿಘಟವಾಗುವ ರೀತಿ ಅಸ್ತಿ ವಿಸರ್ಜನೆಗೆ ಬೇಕಿರುವ ಯಂತ್ರಗಳ ಕುರಿತಂತೆ ತಾಂತ್ರಿಕ ತಜ್ಙರಿಂದ ವರದಿ ಪಡೆದು ಡಿ.ಪಿ.ಆರ್ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ವಿಮಾನ – ಹೆಲಿಕಾಪ್ಟರ್ ದುರಂತ; ಎಲ್ಲಾ 64 ಮಂದಿ ದುರ್ಮರಣ, 28 ಮೃತದೇಹ ಪತ್ತೆ
ಮಂಡ್ಯ: ಕಾವೇರಿ ನದಿಯಲ್ಲಿ (Cauvery Water) ಮುಳುಗಿ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ಘಟನೆ ಮಂಡ್ಯ (Mandya) ಜಿಲ್ಲೆ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಬಲಮುರಿಯಲ್ಲಿ ನಡೆದಿದೆ.
ಮೈಸೂರು ನಾಗನಹಳ್ಳಿ ಗ್ರಾಮದ ಎಸ್ ಶ್ರೇಯಸ್ ಮೃತ ವಿದ್ಯಾರ್ಥಿ. ಈತ ಪಾಲಹಳ್ಳಿ ಸಮೀಪದ ಖಾಸಗಿ ಕಾಲೇಜಿನಲ್ಲಿ ಪ್ರಥಮ ಬಿ.ಇ ಓದುತ್ತಿದ್ದ. ಮೂವರು ಸ್ನೇಹಿತರ ಜೊತೆಗೆ ಬಲಮುರಿಗೆ ಈಜಲೆಂದು ತೆರಳಿದ್ದ ವೇಳೆ ಘಟನೆ ನಡೆದಿದೆ. ಇದನ್ನೂ ಓದಿ: ಶಿವಣ್ಣಗೆ 6 ಆಪರೇಷನ್, 190 ಹೊಲಿಗೆ ಹಾಕಲಾಗಿದೆ: ಮಧು ಬಂಗಾರಪ್ಪ
– ಸ್ವಾಮೀಜಿ, ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚನೆ
– ತಲಕಾವೇರಿಯಲ್ಲಿ ಪೂಜೆ ಸಲ್ಲಿಸಿದ ಸಮಿತಿ ಸದಸ್ಯರು
ಮಡಿಕೇರಿ: ಕಾವೇರಿ ನದಿ (Cauvery River) ರಾಜ್ಯಕ್ಕೆ ಅಷ್ಟೇ ಅಲ್ಲ, ಪಕ್ಕದ ತಮಿಳುನಾಡು (TamilNadu), ಪುದುಚೇರಿಗೂ ಜೀವನದಿಯೇ ಆಗಿದೆ. ಉತ್ತರದಲ್ಲಿ ಗಂಗೆ ಎಷ್ಟು ಪವಿತ್ರಳೋ ದಕ್ಷಿಣದಲ್ಲಿ ಕಾವೇರಿ ನದಿಯೂ ಅಷ್ಟೇ ಪವಿತ್ರಳು ಎನ್ನುವ ಮಾತಿದೆ. ಈ ಕಾವೇರಿಯನ್ನು ಎರಡು ರಾಜ್ಯದ ಜನರು ಪೂಜ್ಯ ಭಾವನೆಯಿಂದ ನೋಡುತ್ತಾರೆ. ಆದ್ರೆ ನೀರಿನ ಸಮಸ್ಯೆ ಬಂದ್ರೆ ಸಾಕು ಎರಡು ರಾಜ್ಯದ ಜನರು ನೀರಿಗಾಗಿ ಹೋರಾಟ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ನಾನಾ ಭಾಗದ ಸ್ವಾಮೀಜಿಗಳು ನಿವೃತ್ತ ನ್ಯಾಯಾಧೀಶರು ಸೇರಿ ಪಕ್ಷ ಭೇದ ಮರೆತು ʻಕಾವೇರಿ ರಕ್ಷಣಾ ಸಮಿತಿʼಯೊಂದನ್ನ ರಚಿಸಿದ್ದಾರೆ. ಈ ಮೂಲಕ ಕಾವೇರಿ ನದಿ ನೀರಿನ ಸಮಸ್ಯೆಗೆ (Cauvery River water Dispute) ಶಾಶ್ವತ ಪರಿಹಾರ ಕಂಡುಕೊಳ್ಳಲು ರಾಜ್ಯದ ಸ್ವಾಮೀಜಿಗಳು ಮುಂದಾಗಿದ್ದಾರೆ.
ಹೌದು. ಕಾವೇರಿ ನದಿಯು ಕೊಡಗಿನಲ್ಲಿ ರಾಜ್ಯದ ನಾನಾ ಭಾಗಗಳಿಗೆ ಅನ್ನದಾತೆಯಾಗಿದ್ದಾಳೆ. ಅಲ್ಲದೇ ತಮಿಳುನಾಡಿನ ಜನರು ಕಾವೇರಿ ನದಿಯ ನೀರನ್ನೇ ಅವಲಂಬಿಸಿದ್ದಾರೆ. ಹೀಗಾಗಿ ಕಾವೇರಿ ನದಿಯನ್ನು ಎರಡೂ ರಾಜ್ಯದ ಜನರು ಪೂಜ್ಯ ಭಾವನೆಯಿಂದ ಕಾಣುತ್ತಾರೆ. ಆದ್ರೆ ಹಲವು ವರ್ಷಗಳಿಂದ ಕಾವೇರಿ ನದಿ ನೀರು ಹಂಚಿಕೆ ವಿಚಾರ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಜ್ವಲಂತ ಸಮಸ್ಯೆಯಾಗಿಯೇ ಉಳಿದಿದೆ. ಅದರಲ್ಲೂ ಮಳೆ ಅಭಾವ ಸಂದರ್ಭದಲ್ಲಿ ಎರಡು ರಾಜ್ಯದ ಜನರ ಕಷ್ಟ ಹೇಳತ್ತೀರದಾಗಿದೆ. ಇದನ್ನೂ ಓದಿ: ಪ್ಯಾನ್ ಇಂಡಿಯಾ ರೇಡ್ – 4 ರಾಜ್ಯಗಳಲ್ಲಿ ಬಿಷ್ಣೋಯ್ ಗ್ಯಾಂಗ್‌ನ 7 ಶೂಟರ್ಸ್ ಅರೆಸ್ಟ್
ಇದೆಲ್ಲ ಸಮಸ್ಯೆಗಳಿಗೆ ಮುಕ್ತಿ ನೀಡಬೇಕೆಂಬ ಉದ್ದೇಶದಿಂದ ಕಾವೇರಿ ನದಿ ಪಾತ್ರದ ಸ್ವಾಮೀಜಿಗಳು, ನಿವೃತ್ತ ನ್ಯಾಯಾಧೀಶರು, ವಿಧಾನಪರಿಷತ್ ಮಾಜಿ ಸದಸ್ಯರು ʻಕಾವೇರಿ ರಕ್ಷಣಾ ಸಮಿತಿʼ ರಚಿಸಿದ್ದಾರೆ. ಈ ಮೂಲಕ ಎರಡೂ ರಾಜ್ಯಗಳ ಸಮಸ್ಯೆಯನ್ನು ಹೇಗೆ ಬರಿಸುವುದು ಅನ್ನೋ ಬಗ್ಗೆ ಚಿಂತನ-ಮಂಥನ ನಡೆಸಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಎಲ್ಲರೂ ಒಟ್ಟಾಗಿ ಕಾವೇರಿ ನದಿ ಪಾತ್ರದ ಜನರು ತಲಕಾವೇರಿಯಲ್ಲಿ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ನಿಖಿಲ್ ಸ್ಪರ್ಧೆ ಮಾಡದೆ ಇದ್ದಿದ್ದರೆ ಕುಮಾರಸ್ವಾಮಿ ಮಗ ಹೆದರಿ ಓಡಿ ಹೋದ ಅಂತಿದ್ದರು: ಹೆಚ್.ಡಿ.ರೇವಣ್ಣ
ನಿರ್ಮಲಾನಂದನಾಥ ಸ್ವಾಮೀಜಿ, ಕಾವೇರಿ ನದಿ ಭಾಗದ ಎಲ್ಲಾ ಸ್ವಾಮೀಜಿಗಳು, ನಿವೃತ್ತ ಸಿಜೆಐ ಗೋಪಾಲ ಗೌಡ್ರು, ಹೈಕೋರ್ಟ್ ನಿವೃತ್ತ ನ್ಯಾಯಾಧೀಶರಾದ ನಾಗಮೋಹನ್ ದಾಸ್, ಕಾವೇರಿ ನ್ಯಾಯಾಧಿಕರಣ ವಾದ ಮಂಡಿಸಿರುವ ಹಿರಿಯ ವಕೀಲರು ಹಾಗೂ ನೀರಾವರಿ ತಜ್ಞರನ್ನು ಒಗ್ಗೂಡಿಸಿ ಚಿಂತನ-ಮಂಥನ ನಡೆಸಲಾಗುತ್ತದೆ. ಬಳಿಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಮನವಿ ಸಲ್ಲಿಸಿ ಶಾಶ್ವತ ಪರಿಹಾರ ಕಂಡುಕೊಳ್ಳಲು ಉದ್ದೇಶಿಸಲಾಗಿದೆ. ಅದಕ್ಕಾಗಿ ʻಕಾವೇರಿ ರಕ್ಷಣಾ ಸಮಿತಿʼಯನ್ನು ರಚಿಸಲಾಗಿದೆ. ಪಕ್ಷಾತೀತ, ಜಾತ್ಯತೀತ, ಧರ್ಮಾತೀತ ಹೊರತಾಗಿ ಎಲ್ಲರನ್ನೂ, ಸಾಮಾಜಿಕ ನ್ಯಾಯದಡಿ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತದೆ ಎಂದು ಕಾವೇರಿ ನದಿ ರಕ್ಷಣಾ ಸಮಿತಿ ಅದ್ಯಕ್ಷ ರಾಮು ತಿಳಿಸಿದ್ದಾರೆ.