ಮಂಡ್ಯ: ಮಳೆಯ (Rain) ನಿರೀಕ್ಷೆಯಲ್ಲಿದ್ದ ಹಳೆ ಮೈಸೂರು ಭಾಗದ ಜನರಿಗೆ ಮತ್ತೆ ನಿರಾಸೆ ಉಂಟಾಗಿದೆ. ಕಾವೇರಿ ಜಲಾನಯನ (Cauvery River) ಪ್ರದೇಶದಲ್ಲಿ ಮಳೆ ನಿಂತ ಹಿನ್ನೆಲೆ ಮೂರೇ ದಿನಕ್ಕೆ ಕೆಆರ್‍ಎಸ್ (KRS) ಡ್ಯಾಂಗೆ ಒಳಹರಿವು ತೀವ್ರ ಪ್ರಮಾಣದಲ್ಲಿ ಕಡಿಮೆಯಾಗಿದೆ. ಈ ಮೂಲಕ ಡ್ಯಾಂಗೆ ಹರಿದು ಬರುತ್ತಿದ್ದ ನೀರಿನ ಪ್ರಮಾಣ ಗಣನೀಯ ಇಳಿಕೆ ಕಂಡಿದೆ.
11,800 ಕ್ಯೂಸೆಕ್‍ನಿಂದ 4,046 ಕ್ಯೂಸೆಕ್‍ಗೆ ಒಳಹರಿವು ಇಳಿಕೆಯಾಗಿದ್ದು, ಇದರಿಂದ ಮತ್ತೆ ಮಂಡ್ಯ ಜಿಲ್ಲೆಯ ಅನ್ನದಾತರು ಸೇರಿದಂತೆ ಕಾವೇರಿ ನೀರು ಆಶ್ರಯಿಸಿದ ಜನರಿಗೆ ತೀವ್ರ ಆಘಾತ ಉಂಟಾಗಿದೆ. ಒಳಹರಿವು ಹೆಚ್ಚಳದಿಂದ ಕೆಆರ್‌ಎಸ್‌ಗೆ 3 ಟಿಎಂಸಿ ನೀರು ಹರಿದು ಬಂದಿತ್ತು. ಸದ್ಯ ಡ್ಯಾಂ 101.80 ಅಡಿ ಭರ್ತಿಯಾಗಿದೆ. ಇದನ್ನೂ ಓದಿ: ನಮ್ಮ ಮೆಟ್ರೋದಲ್ಲಿ ಯೂಟ್ಯೂಬರ್ ಹುಚ್ಚಾಟ – ಮೂರ್ಛೆ ಬಂದವನಂತೆ ಪ್ರ್ಯಾಂಕ್ ಮಾಡಿ ಪ್ರಯಾಣಿಕರಿಗೆ ಶಾಕ್
ಒಂದು ವೇಳೆ ಮಳೆ ಮುಂದುವರೆದರೆ ಬೆಳೆ ಜೊತೆಗೆ ಕುಡಿಯುವ ನೀರಿನ ಸಮಸ್ಯೆ ದೂರಾಗುವ ನಿರೀಕ್ಷೆ ಜನರಲ್ಲಿತ್ತು. ಆದರೆ ಮೂರೇ ದಿನಕ್ಕೆ ಮಳೆರಾಯ ಕೈಕೊಟ್ಟಿದ್ದಾನೆ. ಇಂದರಿಂದ ಕರ್ನಾಟಕ ಹಾಗೂ ತಮಿಳುನಾಡು ನಡುವಿನ ಕಾವೇರಿ ವಿವಾದ ಮುಂದುವರೆಯುವ ಸಾಧ್ಯತೆ ದಟ್ಟವಾಗಿ ಕಾಣುತ್ತಿದೆ.
ಮತ್ತೊಂದೆಡೆ ರಾಜ್ಯ ಸರ್ಕಾರ ಹಾಗೂ ಕಾವೇರಿ ಪ್ರಾಧಿಕಾರದ ವಿರುದ್ಧ ಮಂಡ್ಯದಲ್ಲಿ ಪ್ರತಿಭಟನೆಗಳು ಇಂದು ಸಹ ಮುಂದುವರಿದಿವೆ. 32ನೇ ದಿನಕ್ಕೆ ರೈತ ಹಿತರಕ್ಷಣಾ ಸಮಿತಿಯ ಸತ್ಯಾಗ್ರಹ ಕಾಲಿಟ್ಟಿದೆ. ಇಂದಿನ ಧರಣಿಯಲ್ಲಿ ಪತ್ರಕರ್ತರು ಭಾಗಿಯಾಗಿ ಸರ್ಕಾರದ ಮೇಲೆ ಒತ್ತಡ ಹಾಕಲಿದ್ದಾರೆ. ಕನ್ನಡ ಸೇನೆಯಿಂದಲೂ ಸಂಜಯ ಸರ್ಕಲ್‍ನಿಂದ ವಿಶ್ವೇಶ್ವರಯ್ಯ ಪ್ರತಿಮೆವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಅತ್ತ ಶ್ರೀರಂಗಪಟ್ಟಣದಲ್ಲೂ ಸಹ ಭೂಮಿ ತಾಯಿ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಇದನ್ನೂ ಓದಿ: ಜಂಬೂ ಸವಾರಿಗೆ ಬರಲಿದ ಗತವೈಭವ – ರಾಜ ಪೋಷಾಕಿನಲ್ಲಿ ಪೊಲೀಸರು
ಮಂಡ್ಯ: ಕಾವೇರಿ (Cauvery River) ಜಲಾನಯನ ಪ್ರದೇಶದಲ್ಲಿ ಮಳೆ (Rain) ಕಡಿಮೆಯಾದ ಪರಿಣಾಮ ಕೆಆರ್‌ಎಸ್ (KRS) ಡ್ಯಾಂಗೆ ಹರಿದು ಬರುತ್ತಿದ್ದ ನೀರಿನ ಒಳಹರಿವಿನ ಪ್ರಮಾಣ ಮತ್ತೆ ಕುಸಿತ ಕಂಡಿದೆ.
ಇಂದಿನ ಒಳಹರಿವು 5861 ಕ್ಯೂಸೆಕ್ ಆಗಿದ್ದು, ಮಂಗಳವಾರ 11,800 ಕ್ಯೂಸೆಕ್ ಮತ್ತು ಬುಧವಾರ 9,052 ಕ್ಯೂಸೆಕ್ ಒಳ ಹರಿವು ಇತ್ತು. ಕಳೆದ ಮೂರು ದಿನಗಳಿಂದ ಒಳಹರಿವಿನ ಪ್ರಮಾಣ ಹೆಚ್ಚಿದ್ದರಿಂದ ಡ್ಯಾಂ ನೀರಿನ ಮಟ್ಟ 100 ಅಡಿಗಳಷ್ಟು ಏರಿಕೆ ಕಂಡಿತ್ತು. ಅಷ್ಟರಲ್ಲೇ ಈಗ ಮತ್ತೆ ಒಳಹರಿವು ಕುಸಿದಿದೆ. ಇದನ್ನೂ ಓದಿ: ಕಾಂಗ್ರೆಸ್ ಅಂದ್ರೆ ಹಿಂದೂ ವಿರೋಧಿ ಅನ್ನೋದು ಸ್ಪಷ್ಟವಾಗಿದೆ: ಅಶ್ವಥ್ ನಾರಾಯಣ್
ಕೆಆರ್ಎಸ್ ಡ್ಯಾಂ ಇಂದಿನ ನೀರಿನ ಮಟ್ಟ
ಗರಿಷ್ಠ ಮಟ್ಟ – 124.80 ಅಡಿಗಳು
ಇಂದಿನ ಮಟ್ಟ – 100.82 ಅಡಿಗಳು
ಗರಿಷ್ಠ ಸಾಮಥ್ರ್ಯ – 49.452 ಟಿಎಂಸಿ
ಇಂದು ಸಂಗ್ರಹ ನೀರು – 23.460 ಟಿಎಂಸಿ
ಒಳ ಹರಿವು – 5861 ಕ್ಯೂಸೆಕ್
ಹೊರ ಹರಿವು – 1489 ಕ್ಯೂಸೆಕ್
ವಿಜಯಪುರ: ಕನ್ನಡ ಚಿತ್ರರಂಗದ ನಟ-ನಟಿಯರನ್ನ (Cinema Actress) ಆರತಿ ಎತ್ತಿ ಕಾವೇರಿ ಹೋರಾಟಕ್ಕೆ ಬನ್ನಿ ಅಂತಾ ಕರೆಯಬೇಕಾ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basanagouda Patil Yatnal) ವಾಗ್ದಾಳಿ ನಡೆಸಿದ್ದಾರೆ.
ಕನ್ನಡ ಚಿತ್ರರಂಗದ ನಟ ನಟಿಯರು ಕಾವೇರಿ ಹೋರಾಟದಲ್ಲಿ (Cauvery Protest) ಭಾಗಿಯಾಗುತ್ತಿಲ್ಲ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿ ನಗರದಲ್ಲಿ ಮಾತನಾಡಿದ ಅವರು, ಕನ್ನಡ ಚಿತ್ರರಂಗದ ನಟ, ನಟಿಯರು ಈಗಲಾದರೂ ಹೊರಬರಲಿ. ಚಿತ್ರರಂಗದ ಮೂಲಕ ಹಣ ಮಾಡಿಕೊಂಡಿದ್ದಾರಲ್ಲ ಈಗಲಾದರೂ ಹೊರಬರಲಿ, ಹೋರಾಟಕ್ಕೆ ಕೈಜೋಡಿಸಲಿ. ಇಲ್ಲದಿದ್ದರೆ ಯಾರು ಕಾವೇರಿ ಹೋರಾಟದಲ್ಲಿ ಭಾಗಿಯಾಗುವುದಿಲ್ಲವೋ ಅವರ ಚಿತ್ರಗಳನ್ನ ಜನರು ಬಹಿಷ್ಕರಿಸಬೇಕು ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ಕರ್ನಾಟಕಕ್ಕೆ ಅನ್ಯಾಯವಾದ್ರೆ ಸಹಿಸಲ್ಲ – ʻಕರ್ನಾಟಕ ಬಂದ್ʼಗೆ ತಮಿಳು ಸಂಘದಿಂದ ಬೆಂಬಲ
ನಾನೂ ಸಿನಿಮಾದಲ್ಲಿ ಸಿಎಂ ಪಾತ್ರ ಮಾಡಿದ್ದೆ: ಕಾವೇರಿ ಹೋರಾಟದಲ್ಲಿ ಭಾಗಿಯಾಗಬೇಕು ಅಂತ ಚಿತ್ರ ನಟ, ನಟಿಯರ ಮನೆಗೆ ಹೋಗಿ ಆರತಿ ಎತ್ತಿ ಕರೆಯಬೇಕಾ? ಕಾವೇರಿ ನದಿ ನೀರಿನ ವಿಚಾರದಲ್ಲಿ ಸ್ವಯಂ ಪ್ರೇರಿತವಾಗಿ ಹೋರಾಟದಲ್ಲಿ ಭಾಗಿಯಾಗಬೇಕು. ಇಲ್ಲಿಯ ನಟ-ನಟಿಯರ ಚಿತ್ರಗಳನ್ನ ಕನ್ನಡದವರೇ ವೀಕ್ಷಣೆ ಮಾಡೋದು. ಕಾವೇರಿ ತೀರದ ಭಾಗದವರೇ ಹೆಚ್ಚಿನವರು ಚಿತ್ರರಂಗದಲ್ಲಿದ್ದಾರೆ. ಉತ್ತರ ಕರ್ನಾಟಕ ಭಾಗದವರು ಯಾರೂ ಹೀರೋಗಳಿಲ್ಲ. ಉತ್ತರ ಕರ್ನಾಟಕ ಭಾಗದವರಿಗೆ ಕೇವಲ ಹಾಸ್ಯ ಪಾತ್ರಗಳನ್ನ ಮಾತ್ರ ಕೊಡುತ್ತಾರೆ. ನಾನು ಕೂಡ ಒಂದು ಸಿನಿಮಾದಲ್ಲಿ ಸಿಎಂ ಪಾತ್ರ ಮಾಡಿದ್ದೆ ಎಂದು ಯತ್ನಾಳ್ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಕಾವೇರಿ ಸಮಸ್ಯೆ ಬಗೆಹರಿಸಲು ಪ್ರಧಾನಿ ಮಧ್ಯಸ್ಥಿಕೆ ವಹಿಸುವಂತೆ ದೇವೇಗೌಡರಿಂದ ಪತ್ರ; ಸಿದ್ದರಾಮಯ್ಯ ಶ್ಲಾಘನೆ
ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಕೇಂದ್ರಕ್ಕೆ ಕೇಳಿ ತಮಿಳುನಾಡಿಗೆ ನೀರು ಬಿಟ್ರಾ? ತಮಿಳುನಾಡಿನ ಮುಖ್ಯಮಂತ್ರಿಯನ್ನ ಖುಷಿಪಡಿಸಲು ರಾತ್ರೋ ರಾತ್ರಿ ನೀರು ಬಿಟ್ಟಿದ್ದಾರೆ. ಈ ವಿಚಾರದಲ್ಲಿ ಕೇಂದ್ರ ಈಗ ಏಕೆ ಹಸ್ತಕ್ಷೇಪ ಮಾಡಬೇಕು? ಕಾಂಗ್ರೆಸ್ ಸರ್ಕಾರ ಅಧಿಕಾರ ಬಂದ್ಮೇಲೆ ಒಂದುಬಾರಿಯೂ ಸಂಸದರ ಸಭೆ ಮಾಡಿಲ್ಲ. ಕಾವೇರಿ ನದಿ ನೀರಿನ ವಿಚಾರ ಉಲ್ಬಣಗೊಂಡ ಬಳಿಕ ಕಾಟಾಚಾರಕ್ಕೆ ಸಭೆ ಮಾಡಿದ್ದಾರೆ ಎಂದು ದೂರಿದ್ದಾರೆ.
ಬೆಂಗಳೂರು: ಕಾವೇರಿ (Cauvery) ವಿಚಾರ ಚರ್ಚೆ ಮಾಡಲು ಸರ್ಕಾರ ಕೂಡಲೇ ವಿಶೇಷ ಅಧಿವೇಶನ ಕರೆಯಬೇಕು ಎಂದು ಮಾಜಿ ಸಚಿವ ಹೆಚ್‌ಡಿ ರೇವಣ್ಣ (HD Revanna) ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಶನಿವಾರ ಮಂಡ್ಯ ಬಂದ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮಂಡ್ಯ ಬಂದ್‌ಗೆ ನಮ್ಮ ಪಕ್ಷದ ಬೆಂಬಲ ಇದೆ. ರಾಜ್ಯದ ಜಲ ಮತ್ತು ನೆಲದ ವಿಷಯದಲ್ಲಿ ರಾಜಕೀಯ ಮಾಡಬಾರದು. ತಪ್ಪು ಯಾರದ್ದೇ ಇರಲಿ ಈಗ ಚರ್ಚೆ ಬೇಡ. ಏನು ಸರಿಪಡಿಸಬೇಕು ಎಂದು ಸರ್ಕಾರ ಯೋಚನೆ ಮಾಡಲಿ. ಕಾವೇರಿ ವಿಷಯಕ್ಕಾಗಿ ವಿಶೇಷ ಅಧಿವೇಶನ ಕರೆದು ಒಂದು ನಿರ್ಣಯ ಮಾಡಬೇಕು ಎಂದು ಒತ್ತಾಯ ಮಾಡಿದರು.
ಹೇಮಾವತಿ ವಿಚಾರವಾಗಿ ಸಲಹಾ ಸಮಿತಿ ಸಭೆ ಮಾಡಿ ಎಂದು ಅನೇಕ ದಿನಗಳಿಂದ ನಾನು ಹೇಳಿದ್ದೇನೆ. ಒಂದು ಕಡೆ ಬರ, ಮತ್ತೊಂದು ಕಡೆ ಕಾವೇರಿ ವಿಷಯ. ಇದಕ್ಕೆ ಪರಿಹಾರ ಕೊಡಬೇಕು ಅಂದರೆ ಚರ್ಚೆ ಆಗಬೇಕು. ಇದಕ್ಕಾಗಿ ವಿಶೇಷ ಅಧಿವೇಶನ ಕರೆದು ನಿರ್ಣಯ ಮಾಡಬೇಕು. ಅನೇಕ ಜನ ಹಿರಿಯ ಶಾಸಕರು ಇದ್ದಾರೆ. ಸರ್ಕಾರ ಅವರಿಂದ ಸಲಹೆ ಪಡೆಯಬೇಕು. ಬೆಂಗಳೂರಿನ ನಗರಕ್ಕೆ ಕುಡಿಯುವ ನೀರಿಲ್ಲ. ಈಗ ನೀರು ಬಿಟ್ಟು ಆಮೇಲೆ ವಾಪಸ್ ತರೋಕೆ ಆಗಲ್ಲ. ಸಿಎಂ ಕೂಡಲೇ ವಿಶೇಷ ಅಧಿವೇಶನ ಕರೆಯಬೇಕು. 2, 3, 4 ದಿನವೋ ವಿಶೇಷ ಅಧಿವೇಶನ ಮಾಡಬೇಕು ಎಂದು ಒತ್ತಾಯ ಮಾಡಿದರು. ಇದನ್ನೂ ಓದಿ: ಬಂಗಾರಪ್ಪ ಸಿಎಂ ಆಗಿದ್ದಾಗ ಚಿಟಿಕೆ ಹೊಡೆಯುವುದರಲ್ಲಿ ಕಾವೇರಿ ಸಮಸ್ಯೆಗೆ ಉತ್ತರ ಕೊಟ್ಟಿದ್ದರು: ಮಧು ಬಂಗಾರಪ್ಪ
ಕಾವೇರಿ ವಿಚಾರ ಸೇರಿದಂತೆ ನೀರಾವರಿಯ ಯಾವುದೇ ವಿಷಯಕ್ಕೆ ಜೆಡಿಎಸ್ ಬೆಂಬಲ ಇದೆ. ದೇವೇಗೌಡರು ನೀರಾವರಿ ಬಗ್ಗೆಯೇ ಹೋರಾಟ ಮಾಡಿದ್ದಾರೆ. ಕಾವೇರಿ ಬಗ್ಗೆಯೂ ಹೋರಾಟ ಮಾಡಿದ್ದಾರೆ. ನಮ್ಮ ಪಕ್ಷ ಕೂಡಾ ಬೆಂಬಲ ಕೊಡಲಿದೆ ಎಂದರು.
ಆದಿ ಚುಂಚನಗಿರಿ ಶ್ರೀಗಳಿಂದ ಪ್ರತಿಭಟನೆಗೆ ಬೆಂಬಲ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಿರ್ಮಲಾನಂದ ಶ್ರೀಗಳು ಇರಬಹುದು, ಬಾಲಗಂಗಾಧರನಾಥ ಶ್ರೀಗಳು ಇರಬಹುದು ರಾಜ್ಯದ ಹಿತ ಕಾಪಾಡೋದ್ರಲ್ಲಿ ಮುಂದೆ ಇದ್ದರು. ಆದಿಚುಂಚನಗಿರಿ ಶ್ರೀಗಳು ನೀರಿಗಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಶ್ರೀಗಳ ನಿರ್ಧಾರವನ್ನು ನಾವು ಸ್ವಾಗತ ಮಾಡುತ್ತೇವೆ ಎಂದರು. ಇದನ್ನೂ ಓದಿ: ಮಹಿಳಾ ಮೀಸಲಾತಿ ಅಂಗೀಕಾರ – ಇದು ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡೋ ದಿನ: ಪ್ರಹ್ಲಾದ್ ಜೋಶಿ
ಬೆಂಗಳೂರು: ತಮಿಳುನಾಡಿಗೆ (Tamil Nadu) ನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸು ಮಾಡಿರುವುದು ಸರ್ಕಾರಕ್ಕೆ ಇಕ್ಕಟ್ಟಿಗೆ ಸಿಲುಕಿಸಿದೆ. ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿನ ಕೊರತೆ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಬಿಡುವ ಪರಿಸ್ಥಿತಿ ಇಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರದ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್‌ಗೆ ಸಿಎಂ ಸಿದ್ದರಾಮಯ್ಯ (Siddaramaiah) ಪತ್ರ ಬರೆದು, ನೀರು ಹರಿಸುವುದು ಸಾಧ್ಯವಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.
ಕಾವೇರಿ ನೀರಿನ (Cauvery River) ಮೇಲೆ ಅವಲಂಬಿತರಾಗಿರುವ ರೈತರು, ಕುಡಿಯುವ ನೀರಿಗಾಗಿ ಅವಲಂಬಿತರಾಗಿರುವ ಜಾನುವಾರು ಹಾಗೂ ರಾಜ್ಯದ ಜನರ ಹಿತಾಸಕ್ತಿಯನ್ನು ಸಂಕಷ್ಟಕ್ಕೆ ದೂಡಿ ಕಾವೇರಿ ನೀರು ನಿಯಂತ್ರಣ ಸಮಿತಿಯ ತೀರ್ಪನ್ನು ಅನುಷ್ಠಾನ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಕಾವೇರಿ ನೀರು ನಿಯಂತ್ರಣ ಸಮಿತಿ ನಿರ್ಧರಿಸಿರುವಂತೆ 15 ದಿನಗಳ ಕಾಲ ಕೆಆರ್‌ಎಸ್ ಹಾಗೂ ಕಬಿನಿಯಿಂದ 5,000 ಕ್ಯೂಸೆಕ್ ನೀರನ್ನು ಬಿಳಿಗುಂಡ್ಲುವಿಗೆ ಹರಿಸುವುದು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿಗಳು, ಕರ್ನಾಟಕದ ಮನವಿಯನ್ನು ಪರಿಗಣಿಸಿ ಕಾವೇರಿ ನೀರು ನಿಯಂತ್ರಣ ಸಮಿತಿಯ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೋರಿದ್ದಾರೆ. ಬರಪೀಡಿತವಾಗಿರುವ ರಾಜ್ಯದ ಜನತೆ ಹಾಗೂ ಜಾನುವಾರುಗಳ ಹಿತಾಸಕ್ತಿಯನ್ನು ಕಾಪಾಡಲು ಮನವಿ ಮಾಡಿದ್ದಾರೆ.
ಕರ್ನಾಟಕ ರಾಜ್ಯ ಸಮಿತಿಯ ಹಿಂದಿನ ನಿರ್ದೇಶನವನ್ನು ಪಾಲಿಸಿದ್ದು, ಕಾವೇರಿ ಜಲಾನಯನ ಪ್ರದೇಶದಲ್ಲಿರುವ ಬಹುತೇಕ ತಾಲೂಕುಗಳು ಮುಂಗಾರು ವೈಫಲ್ಯದಿಂದ ತೀವ್ರ ಬರಕ್ಕೆ ತುತ್ತಾಗಿವೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಜಿ20 ಯಶಸ್ಸಿಗೆ ಭಾರತ, ಪ್ರಧಾನಿ ಮೋದಿ ಹೊಗಳಿದ ಪಾಕಿಸ್ತಾನ ಜನ
ಜೂನ್ ತಿಂಗಳಿನಿಂದ ಸೆಪ್ಟೆಂಬರ್ ಮಧ್ಯದವರೆಗೂ 92 ದಿನಗಳ ಕಾಲ 100 ಟಿಎಂಸಿ ನೀರನ್ನು ತಮಿಳುನಾಡು ಬಳಸಿಕೊಂಡಿದ್ದು, ಇದು ಹಿಂದೆ 1987-88, 2002-03, 2012-13, 2016-17 ಹಾಗೂ 2017-18 ರ ಬರಪರಿಸ್ಥಿತಿಯಲ್ಲಿ ಬಳಕೆಯಾದ ನೀರಿಗಿಂತಲೂ ಹೆಚ್ಚಾಗಿದೆ. ಕರ್ನಾಟಕದ ಜಲಾಶಯಗಳಲ್ಲಿ ಸಂಕಷ್ಟದ ಸ್ಥಿತಿಯಿದ್ದರೂ ತಮಿಳುನಾಡು ಭತ್ತವನ್ನು ವ್ಯಾಪಕವಾಗಿ ಬೆಳೆಯುತ್ತಿದೆ ಎಂದು ಪಾತ್ರದಲ್ಲಿ ಮುಖ್ಯಮಂತ್ರಿಗಳು ವಿವರಿಸಿದ್ದಾರೆ.
ಸೆಪ್ಟೆಂಬರ್ 12 ಹಾಗೂ 24 ರವರೆಗೆ ಐಎಂಡಿ ಹವಾಮಾನ ಮುನ್ಸೂಚನೆಯಂತೆ ಮಳೆಯಾಗುವ ಲಕ್ಷಣಗಳಿಲ್ಲ. ಮೆಟ್ಟೂರು ಜಲಾಶಯದಲ್ಲಿ ಸೆಪ್ಟೆಂಬರ್ 12 ರಂದು 24.233 ಟಿಎಂಸಿ ಸಂಗ್ರಹವಿದ್ದು (Live Storage) ಪ್ರಸ್ತುತ ಬಿಡುಗಡೆಯಾಗಿರುವ ನೀರನ್ನು ಪರಿಗಣಿಸಿದರೆ, ತಮಿಳುನಾಡಿನ ಅವಶ್ಯಕತೆಯನ್ನು ಪೂರೈಸಲು ಸಾಕಾಗುವಷ್ಟು ನೀರು ಲಭ್ಯವಿದೆ.
ಕರ್ನಾಟಕದ ಬೆಳೆಗಳ ರಕ್ಷಣೆಗೆ 70 ಟಿಎಂಸಿ, ಕುಡಿಯುವ ನೀರಿಗೆ 33 ಹಾಗೂ ಕೈಗಾರಿಕೆಗಳಿಗೆ 3 ಟಿಎಂಸಿ ನೀರು ಅಗತ್ಯವಿದೆ. ನಮ್ಮ ಸಂಗ್ರಹ 53 ಟಿಎಂಸಿ ಮಾತ್ರವಿದ್ದು, ನಮ್ಮ ಅವಶ್ಯಕತೆಗಳನ್ನು ಪೂರೈಸಿಕೊಳ್ಳಲು ಈ ಸಂಗ್ರಹ ಸಾಕಾಗುವುದಿಲ್ಲ ಎಂದು ಮುಖ್ಯಮಂತ್ರಿಗಳು ಪತ್ರದಲ್ಲಿ ವಿವರಿಸಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ ನಿಫಾ ವೈರಸ್ ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ – ಸಂಪರ್ಕ ಪಟ್ಟಿಯಲ್ಲಿ 706 ಜನ
ಬೆಂಗಳೂರು: ತಮಿಳುನಾಡಿಗೆ (Tamil Nadu) ಕಾವೇರಿ ಬಿಟ್ಟು ಕರ್ನಾಟಕದ (Karnataka) ಜನರು, ರೈತರ ಮೇಲೆ ರಾಜ್ಯ ಸರ್ಕಾರ ದಬ್ಬಾಳಿಕೆ ಮಾಡುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾವೇರಿ (Cauvery) ವಿಚಾರವಾಗಿ ನಡೆದ ಸರ್ವ ಪಕ್ಷ ಸಭೆಗೆ ಕುಮಾರಸ್ವಾಮಿ ಗೈರಾಗಿದ್ದರು. ಪೂರ್ವ ನಿಯೋಜಿತ ಕಾರ್ಯಕ್ರಮ ಇದ್ದುದರಿಂದ ನಾನು ಸಭೆಗೆ ಹಾಜರಾಗುತ್ತಿಲ್ಲ ಎಂದು ಸ್ಪಷ್ಟನೆ ನೀಡಿದರು. ಇದೇ ವೇಳೆ ಸರ್ಕಾರದ ನಡೆ ವಿರುದ್ಧ ವಾಗ್ದಾಳಿ ನಡೆಸಿದರು.
ಈ ಸರ್ಕಾರಕ್ಕೆ ರಾಜ್ಯದ ಜನರ ಹಿತ ಕಾಪಾಡಬೇಕು ಅನ್ನೋ ಕನಿಷ್ಠ ತಾಕತ್ತು ಇಲ್ಲ, ಧಮ್ಮು ಇಲ್ಲ. ಬಾಯಲ್ಲಿ ತಾಕತ್ತು ಧಮ್ಮಿನ ಬಗ್ಗೆ ಹೇಳ್ತಾರೆ. ರಾಜ್ಯದ ಜನರ ಬಗ್ಗೆ ಕನಿಷ್ಠ ಕಮಿಟ್‌ಮೆಂಟ್ ಇಲ್ಲ ಈ ಸರ್ಕಾರಕ್ಕೆ ಎಂದು ಕಿಡಿಕಾರಿದರು.
ಮುಂದಿನ ದಿನ ಕುಡಿಯೋಕೆ ನೀರು ಬೆಂಗಳೂರಿಗೆ ಎಲ್ಲಿಂದ ತಂದು ಕೊಡ್ತಾರೆ? ತಮಿಳುನಾಡಿನಲ್ಲಿ ಟ್ರಿಬ್ಯುನಲ್‌ನಲ್ಲಿ ಎಷ್ಟು ಎಕರೆ ಬೆಳೆ ಬೆಳೆಯಲು ಅನುಮತಿ ಕೊಟ್ಟಿದೆ? ಆದರೆ ಅವರು ಎಷ್ಟು ಹೆಚ್ಚುವರಿ ಮಾಡಿದ್ದಾರೆ? ನಮಗೆ ತಮಿಳುನಾಡಿನವರು ತೊಂದರೆ ಕೊಡ್ತಿದ್ದಾರೆ. ಇದನ್ನು ಟ್ರಿಬ್ಯುನಲ್ ಮುಂದೆ ಮನದಟ್ಟು ಮಾಡಿಕೊಡಬೇಕು ಎಂದರು. ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಸರ್ಕಾರ ಅವಕಾಶ ಕೊಡ್ತಿಲ್ಲ: ಅರವಿಂದ ಬೆಲ್ಲದ್
ನಾನು 2018 ರಲ್ಲಿ ಸಿಎಂ ಆಗಿದ್ದಾಗ ಬೋರ್ಡ್‌ಗೆ ವಿರೋಧ ಮಾಡಿದ್ದೆ. ಪ್ರೊಟೆಸ್ಟ್ ಮಾಡಿದ್ವಿ. ನಮ್ಮ ಪ್ರತಿಭಟನೆ ಧಿಕ್ಕರಿಸಿ ನಮ್ಮ ರಾಜ್ಯದ ಪ್ರತಿನಿಧಿ ನೇಮಕ ಮಾಡಿದ್ರು. ಬಳಿಕ ನಮ್ಮನ್ನು ಸೇರಿಸಿದ್ರು. ಇವತ್ತು ಸುಪ್ರೀಂಕೋರ್ಟ್ ಸಂಕಷ್ಟ ಪರಿಸ್ಥಿತಿಯಲ್ಲಿ ನೀರು ಹಂಚಿಕೆ ಮಾಡಿಕೊಳ್ಳಬೇಕು ಅಂತ ಇದೆ. ಇದರ ಬಗ್ಗೆ ತೀರ್ಮಾನ ಮಾಡದೇ ಕರ್ನಾಟಕದ ರೈತರು ಜನರ ಮೇಲೆ ದಬ್ಬಾಳಿಕೆ ಮಾಡ್ತಿದ್ದಾರೆ. ರಾಷ್ಟ್ರೀಯ ಪಕ್ಷವಾಗಿ ನೀವೇನು ಮಾಡ್ತಿದ್ದೀರಾ ಅಂತ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿಕಾರಿದರು.
ಇದೇ ವೇಳೆ ಮಾಜಿ ಸಿಎಂ ವೀರಪ್ಪ ಮೊಯ್ಲಿ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಕಾವೇರಿ ನೀರಿನ ಸಮಸ್ಯೆಗೆ ಮಣ್ಣಿನ ಮಕ್ಕಳು ಕಾರಣ ಅಂತ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಇವತ್ತು ಕಾವೇರಿ ಸ್ಥಿತಿಗೆ ವೀರಪ್ಪ ಮೊಯ್ಲಿ ಕಾರಣ ಅಂತ ವಾಗ್ದಾಳಿ ನಡೆಸಿದರು. ಸರ್ಕಾರದವರು ವೀರಪ್ಪ ಮೊಯ್ಲಿಯಿಂದಾನೇ ಸಲಹೆ ಪಡೆಯಲಿ ಅಂತ ಕಿಡಿಕಾರಿದರು. ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಬಿಡಲ್ಲ: ಸರ್ವಪಕ್ಷ ಸಭೆಯಲ್ಲಿ ಒಮ್ಮತದ ನಿರ್ಣಯ
ನವದೆಹಲಿ: ಪ್ರತಿ ದಿನ 24,000 ಕ್ಯೂಸೆಕ್ ಕಾವೇರಿ ನೀರು (Cauvery Water Dispute) ಬಿಡಲು ಕರ್ನಾಟಕಕ್ಕೆ (Karnataka) ನಿರ್ದೇಶನ ನೀಡುವಂತೆ ತಮಿಳುನಾಡು (Tamil Nadu) ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ (Supreme Court) ಮಧ್ಯಂತರ ಆದೇಶ ನೀಡಲು ನಿರಾಕರಿಸಿದೆ.
ತಮಿಳುನಾಡು ಪರ ಹಿರಿಯ ವಕೀಲರಾದ ಮುಕುಲ್ ರೋಹಟಗಿ ಮತ್ತು ಕರ್ನಾಟಕದ ಪರ ಶ್ಯಾಮ್ ದಿವಾನ್ ಅವರ ವಾದವನ್ನು ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಆಲಿಸಿತು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದ ಕರ್ನಾಟಕ ಬಿಡುಗಡೆ ಮಾಡಿದ ನೀರಿನ ಪ್ರಮಾಣದ ಬಗ್ಗೆ ವರದಿ ಕೇಳಿತು. ಇದನ್ನೂ ಓದಿ: ತಮಿಳುನಾಡಿಗೆ ಕೆಆರ್‌ಎಸ್ ನೀರು ಬಂದ್ – ಇಂದು ಸುಪ್ರೀಂ ಕೋರ್ಟ್‌ನಲ್ಲಿ ಕಾವೇರಿ ವಿಚಾರಣೆ
ಕೇಂದ್ರದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ, ಮುಂದಿನ ಹದಿನೈದು ದಿನಗಳ ಕಾಲ ನೀರು ಬಿಡಲು ನಿರ್ಧರಿಸಲು ಪ್ರಾಧಿಕಾರವು ಸೋಮವಾರ ಸಭೆ ನಡೆಸಲಿದೆ ಎಂದು ಹೇಳಿದರು.
ನೀರು ಬಿಡಲು ಕಾವೇರಿ ನಿರ್ವಹಣಾ ಪ್ರಾಧಿಕಾರ ನೀಡಿದ್ದ ಗಡುವು ಇಂದಿಗೆ ಮುಕ್ತಾಯವಾಗುತ್ತಿದೆ. ಈ ನಡುವೆ ಆದೇಶ ಸರಿಯಾಗಿ ಪಾಲನೆಯಾಗಿಲ್ಲ. ಕಡಿಮೆ ಮಳೆಯ ವರ್ಷವಾಗಿದ್ದರೂ, ಪ್ರಸ್ತುತ ನಾವು ಅತ್ಯಂತ ಭೀಕರ ಬರವನ್ನು ಅನುಭವಿಸುತ್ತಿದ್ದೇವೆ. ನೀರು ಬಿಡದಿದ್ದರೆ ಭಾರಿ ಅನಾಹುತವಾಗಲಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ಕರ್ನಾಟಕ ನೀರು ಬಿಡದಿದ್ದರೆ, ಅವರ ವಿರುದ್ಧ ನ್ಯಾಯಾಂಗ ನಿಂದನೆಯನ್ನು ಮುಂದುವರಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ತಮಿಳುನಾಡು ಸರ್ಕಾರ ಹೇಳಿತು.
ಕಾವೇರಿ ನಿರ್ವಹಣಾ ಪ್ರಾಧಿಕಾರದಲ್ಲಿ ತಜ್ಞರಿದ್ದಾರೆ, ನಾವು ತಜ್ಞರಲ್ಲ. ಹಾಗಾಗಿ ಯಾವುದನ್ನೂ ತನಿಖೆ ಮಾಡದೆ ತಕ್ಷಣ ಆದೇಶ ಹೊರಡಿಸುವುದು ಕಷ್ಟ ಎಂದು ಪ್ರಕರಣದ ವಿಚಾರಣೆಯನ್ನು ಮುಂದಿನ ಶುಕ್ರವಾರಕ್ಕೆ ಕೋರ್ಟ್ ಮುಂದೂಡಿತು. ಮಧ್ಯಂತರ ಅವಧಿಯಲ್ಲಿ ಕಾವೇರಿ ನಿರ್ವಹಣಾ ಪ್ರಾಧಿಕಾರದ ಸಭೆ ಕರೆಯುವಂತೆ ಸೂಚನೆ ನೀಡಿತು.
ಮಂಡ್ಯ: ಕೆಆರ್‍ಎಸ್‍ನಲ್ಲಿ (KRS) 10 ಟಿಎಂಸಿ ನೀರು ಖಾಲಿಯಾದ ಬಳಿಕ ರಾಜ್ಯ ಸರ್ಕಾರ ತಮಿಳುನಾಡಿಗೆ (Tamil Nadu) ನೀರು ಹರಿಸುವುದನ್ನು ಗುರುವಾರ ಸಂಜೆಯಿಂದ ಬಂದ್ ಮಾಡಿದೆ. ಈಗ ಜಲಾಶಯದಲ್ಲಿ 25 ಟಿಎಂಸಿಯಷ್ಟು ನೀರು ಮಾತ್ರ ಸಂಗ್ರಹವಾಗಿದೆ. ಮತ್ತೆ ಮಳೆಯಾಗದಿದ್ದರೆ ಡಿಸೆಂಬರ್ ವೇಳೆಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ.
ಮಳೆಯಾಗದೆ ಇದ್ದರೆ ಡಿಸೆಂಬರ್‌ನಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಆತಂಕವಿದೆ. ಇನ್ನೂ ಬೇಸಿಗೆಯಲ್ಲಂತೂ ಹನಿ ನೀರಿಗೂ ಪರದಾಡಬೇಕಾದ ಸ್ಥಿತಿ ಎದುರಾಗಲಿದೆ. ಡ್ಯಾಂನಿಂದ ನಾಲೆಗಳ ಮೂಲಕ ಕುಡಿಯುವ ಉದ್ದೇಶಕ್ಕಾಗಿ ನೀರು ಬಿಡುಗಡೆ ಮುಂದುವರೆಸಲಾಗಿದೆ. ಕಾವೇರಿ ನೀರಾವರಿ ನಿಗಮ 5,743 ಕ್ಯೂಸೆಕ್ ನೀರನ್ನು ಇದಕ್ಕಾಗಿ ಬಿಡುಗಡೆ ಮಾಡುತ್ತಿದೆ. ಇದನ್ನೂ ಓದಿ: ಸ್ನೇಹಿತರಿಂದಲೇ ಚಿನ್ನ ಕಳವು ಮಾಡಿಸಿ ನಾಟಕ – ಗಂಡನಿಗೆ ಬುದ್ಧಿ ಕಲಿಸಲು ಹೋಗಿ ಸಿಕ್ಕಿಬಿದ್ದ ಪತ್ನಿ
ಕೆಆರ್‍ಎಸ್ ಡ್ಯಾಂನ ಇಂದಿನ ನೀರಿನ ಮಟ್ಟ
ಗರಿಷ್ಠ ಮಟ್ಟ – 124.80 ಅಡಿಗಳು
ಇಂದಿನ ಮಟ್ಟ – 102.74 ಅಡಿಗಳು
ಗರಿಷ್ಠ ಸಾಂದ್ರತೆ – 49.452 ಟಿಎಂಸಿ
ಇಂದಿನ ಸಾಂದ್ರತೆ – 25.035 ಟಿಎಂಸಿ
ಒಳ ಹರಿವು – 3,276 ಕ್ಯೂಸೆಕ್
ಹೊರ ಹರಿವು – 5,743 ಕ್ಯೂಸೆಕ್
– ಪ್ರಧಾನಿ ಬಳಿ ಸರ್ವಪಕ್ಷ ನಿಯೋಗ – ಕೋರ್ಟ್‌ನಲ್ಲಿ ಸಮರ್ಥ ವಾದ ಮಂಡನೆ
ಬೆಂಗಳೂರು: ಮೇಕೆದಾಟು, ಕಾವೇರಿ, ಮಹಾದಾಯಿ, ಕೃಷ್ಣಾ ಸಮಸ್ಯೆಗಳ ಕುರಿತು ಪ್ರಧಾನ ಮಂತ್ರಿಗಳ ಬಳಿ ಸರ್ಕಾರಕ್ಕೆ ಸರ್ವಪಕ್ಷ ನಿಯೋಗ ತೆರಳೋಣ, ಇದಕ್ಕೆ ಎಲ್ಲರ ಸಹಕಾರ ಬಯಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಬುಧವಾರ ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯದ ಹಿತ ಕಾಪಾಡಲು ನಾವು ಎಂದಿಗೂ ಬದ್ಧರಾಗಿರುತ್ತೇವೆ. 5-6 ವರ್ಷಗಳಿಗೊಮ್ಮೆ ಮಳೆಯ ಕೊರತೆಯಿಂದಾಗಿ ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಂಕಷ್ಟ ಎದುರಾಗುತ್ತದೆ. ಈ ಕುರಿತು ಸಂಕಷ್ಟ ಹಂಚಿಕೆ ಸೂತ್ರ ನಿರ್ದಿಷ್ಟಪಡಿಸಿಲ್ಲ. ಈ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ವಕೀಲರು ಸಮರ್ಥವಾಗಿ ವಾದ ಮಂಡಿಸಬೇಕು. ಇದಕ್ಕೆ ಸರ್ಕಾರ ಎಲ್ಲ ಅಗತ್ಯ ಬೆಂಬಲ ನೀಡಲಿದೆ ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದರು.
ಮೇಕೆದಾಟು ಯೋಜನೆ – ತಮಿಳುನಾಡಿಗೆ ಅನುಕೂಲ:
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ಸಂಕಷ್ಟ ಹಂಚಿಕೆ ಸೂತ್ರದ ಕುರಿತು ತೀರ್ಮಾನ ಆಗಲೇ ಬೇಕು. ಇಂತಹ ಸಂಕಷ್ಟದ ಸಮಯದಲ್ಲಿ 67 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯದ ಮೇಕೆದಾಟು ಸಮತೋಲನಾ ಜಲಾಶಯ ನಿರ್ಮಿಸಿದರೆ, ಅವರಿಗೆ ನೀರು ಬಿಡಲು ಅನುಕೂಲವಾಗುತ್ತದೆ. ಈ ಯೋಜನೆಗೆ ತಮಿಳುನಾಡು ವಿನಾಕಾರಣ ವಿರೋಧಿಸುತ್ತಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಅಧಿಕಾರಿಗಳಿಂದ ಸಮರ್ಥ ವಾದ ಮಂಡನೆ:
ಕಾವೇರಿ ವಿವಾದ ಹಳೆಯದು. ಸರ್ವೋಚ್ಛ ನ್ಯಾಯಾಲಯ ನಮಗೆ ತೀರ್ಪು ಕೊಟ್ಟ ನಂತರ 2018 ರಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಾಗಿದೆ. ಕಾವೇರಿ ನೀರು ನಿಯಂತ್ರಣಾ ಸಮಿತಿ ಸ್ಥಾಪನೆಯಾಗಿದೆ. ಅನೇಕ ಸಭೆಗಳನ್ನು ಮಾಡಿದ್ದಾರೆ. ಕಾವೇರಿ ಪ್ರಾಧಿಕಾರ 22 ಸಭೆ ಹಾಗೂ ನಿಯಂತ್ರಣ ಸಮಿತಿ 84 ಸಭೆ ನಡೆಸಿದೆ. ಈ ಸಮಿತಿಗಳಾದ ಮೇಲೆ, ರಾಜ್ಯದಲ್ಲಿ ಸಂಕಷ್ಟದ ದಿನಗಳು ಎದುರಾಗಿದೆ. ಆಗ ನಾವು ನಿಯಂತ್ರಣ ಸಮಿತಿ, ಪ್ರಾಧಿಕಾರದಲ್ಲಿ ಚರ್ಚಿಸಿ, ಅದರ ತೀರ್ಮಾನದಂತೆ ನಡೆದುಕೊಂಡ ಅನೇಕ ನಿದರ್ಶನಗಳಿವೆ.
ಕಾವೇರಿ ನಿಯಂತ್ರಣ ಸಮಿತಿ ಮತ್ತು ಪ್ರಾಧಿಕಾರದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಅಧಿಕಾರಿಗಳು ಸಂಕಷ್ಟದ ಬಗ್ಗೆ ಪ್ರತಿಪಾದನೆ ಮಾಡಿದ್ದಾರೆ. ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಈ ವರ್ಷ ಮಳೆ ಕಡಿಮೆ ಆಯಿತು. ಜೂನ್ ಹಾಗೂ ಆಗಸ್ಟ್‌ನಲ್ಲಿ ಮಳೆ ಕೊರತೆಯಾಗಿದೆ. ಇಲ್ಲಿಯವರೆಗೆ ನೀರು ಬಿಡಬೇಕಾಗಿದ್ದಿದ್ದು 86.38 ಟಿಎಂಸಿ. ಆದರೆ 20ನೇ ತಾರೀಖಿನವರೆಗೆ ನೀರು ಬಿಟ್ಟಿರುವುದು 24 ಟಿಎಂಸಿ. ಅಂದರೆ ನಾವು ವಿರೋಧ ಮಾಡಿದ್ದೇವೆ. ವಾಸ್ತವವನ್ನು ಪ್ರಾಧಿಕಾರದ ಮುಂದೆ ಬಿಡಿಸಿಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಮಳೆ ಕೊರತೆಯಿಂದಾಗಿ ಬೆಳೆಗಳಿಗೆ ನೀರು ಬಿಟ್ಟಿಲ್ಲ. ಕುಡಿಯುವ ನೀರಿಗೆ ನೀರು ಬೇಕಾಗುತ್ತದೆ ಎಂದು ವಿವರಿಸಲಾಗಿದೆ.
ನಾವು ವಾದ ಮಾಡಿದ್ದರಿಂದಲೇ 15,000 ಕ್ಯೂಸೆಕ್ ನೀರಿನಿಂದ 10,000 ಕ್ಯೂಸೆಕ್ ನೀರಿಗೆ ಇಳಿಕೆ ಮಾಡಲಾಯಿತು. ಅದನ್ನೂ ಮರು ಪರಿಶೀಲನೆ ಮಾಡುವಂತೆ ಅರ್ಜಿ ಸಲ್ಲಿಸಿದ್ದೆವು. 15,000 ಕ್ಯುಸೆಕ್ ನೀರು ಕೊಡಲಾಗದು ಎಂದು ರಾಜ್ಯದ ಅಧಿಕಾರಿಗಳು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ವಾದ ಮಂಡಿಸುತ್ತಿರುವಾಗಲೇ ತಮಿಳುನಾಡಿದ ಅಧಿಕಾರಿಗಳು ಸಭಾತ್ಯಾಗ ಮಾಡಿದರು. ನಂತರ ಸುಪ್ರೀಂ ಕೋರ್ಟ್ನಲ್ಲಿ ಮನವಿ ಸಲ್ಲಿಸಿದ್ದಾರೆ. 25ರಂದು ಈ ಪ್ರಕರಣ ವಿಚಾರಣೆಗೆ ಬರಲಿದ್ದು, ಈ ವಿಷಯದಲ್ಲಿ ವಕೀಲರು ಸಮರ್ಥವಾಗಿ ವಾದ ಮಾಡುತ್ತಾರೆ ಎಂದು ವಿಶ್ವಾಸದಿಂದ ನುಡಿದರು.
ರಾಜಕೀಯ ಇಲ್ಲ:
ಕರ್ನಾಟಕದ ನೆಲ, ಜಲ, ಗಡಿ, ಭಾಷೆಗಳ ಬಗ್ಗೆ ಮೊದಲಿನಿಂದಲೂ ಎಲ್ಲ ರಾಜಕೀಯ ಪಕ್ಷಗಳೂ ಒಕ್ಕೊರಲಿನಿಂದ ಮಾತನಾಡಿವೆ. ಈ ವಿಷಯಗಳಲ್ಲಿ ರಾಜಕೀಯ ಮಾಡುವ ಪ್ರಯತ್ನವನ್ನು ಯಾರೂ ಮಾಡಿಲ್ಲ, ಮಾಡಲೂ ಬಾರದು. ಯಾಕೆಂದರೆ ನಾವೆಲ್ಲರೂ ರಾಜ್ಯದ 7 ಕೋಟಿ ಜನರ ಹಿತ ಕಾಪಾಡಬೇಕಾಗಿದೆ. ನಾವು ಆಡಳಿತ ಪಪಕ್ಷದವರಾಗಲಿ, ರಾಜ್ಯದ ಹಿತ ಕಾಪಾಡುವುದು ಎಲ್ಲರ ಜವಾಬ್ದಾರಿ. ಹಾಗಾಗಿಯೇ ರಾಜಕೀಯ ಮಾಡಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಇದನ್ನೂ ಓದಿ: 146 ಪ್ರಯತ್ನಗಳ ಪೈಕಿ 69 ಚಂದ್ರಯಾನಗಳು ಯಶಸ್ವಿ – ಸಾವಿರಾರು ಕೋಟಿ ಖರ್ಚು ಮಾಡುವ ಯೋಜನೆಯ ಪ್ರಮುಖ ಉದ್ದೇಶವೇನು?
ಸಭೆಯ ಪ್ರಾರಂಭದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನೀರಾವರಿ ವಿಷಯದಲ್ಲಿ ರಾಜ್ಯದ ಹಿತರಕ್ಷಣೆಯಲ್ಲಿ ಯಾವುದೇ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿ, ಸರ್ಕಾರದ ಕಾನೂನು ಹೋರಾಟ ಮುಂದುವರೆಯಲಿದ್ದು, ಈ ನಿಟ್ಟಿನಲ್ಲಿ ಎಲ್ಲ ಪಕ್ಷಗಳ ಮುಖಂಡರ ಸಹಕಾರ ಕೋರಿದರು.
ಕರ್ನಾಟಕ ಮತ್ತು ಕೇರಳದ ಕಾವೇರಿ ಕಣಿವೆಯ ಪ್ರದೇಶದಲ್ಲಿ ನೈಋತ್ಯ ಮಾನ್ಸೂನ್ ವೈಫಲ್ಯದಿಂದಾಗಿ 2023-24ರ ಜಲ ವರ್ಷವು ಸಂಕಷ್ಟದ ವರ್ಷವಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿಯು ತನ್ನ ಸಭೆಯಲ್ಲಿ ಜೂನ್ ವರೆಗಿನ ಮಳೆಯ ಕೊರತೆಯನ್ನು ಗಮನಿಸಿದೆ. ಆಗಸ್ಟ್ 10 ರಂದು 15,000 ಕ್ಯೂಸೆಕ್ ನೀರು ಬಿಡಲು ಸೂಚಿಸಿತು. ಇದನ್ನು ರಾಜ್ಯ ಬಲವಾಗಿ ವಿರೋಧಿಸಿದ್ದು, ನೀರಿನ ಪ್ರಮಾಣ 10,000 ಕ್ಯೂಸೆಕ್‌ಗೆ ಇಳಿಕೆ ಮಾಡಿದೆ. ಇದರಿಂದ ಅಸಮಾಧಾನಗೊಂಡ ತಮಿಳುನಾಡು ಸುಪ್ರೀಂ ಕೋರ್ಟ್‌ನಲ್ಲಿ ನೀರು ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದ್ದು, ಶುಕ್ರವಾರ ಮೂರು ನ್ಯಾಯಾಧೀಶರ ಪೀಠದ ಮುಂದೆ ವಿಚಾರಣೆಗೆ ಬರಲಿದೆ.
ಸಂಪೂರ್ಣ ಸಹಕಾರ – ಸರ್ವಪಕ್ಷಗಳ ಬೆಂಬಲ:
ಸಭೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಡಿವಿ ಸದಾನಂದ ಗೌಡ, ವೀರಪ್ಪ ಮೊಯಿಲಿ, ಜಗದೀಶ್ ಶೆಟ್ಟರ್, ಹೆಚ್‌ಡಿ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ಸಂಸದರಾದ ಸುಮಲತಾ, ಜಗ್ಗೇಶ್, ಡಾ. ಹನುಮಂತಯ್ಯ, ಮುನಿಸ್ವಾಮಿ, ಜಿಎಂ ಸಿದ್ದೇಶ್ವರ, ಜಿಸಿ ಚಂದ್ರಶೇಖರ್, ಶಾಸಕ ದರ್ಶನ್ ಪುಟ್ಟಣ್ಣಯ್ಯ ಮೊದಲಾದವರು ರಾಜ್ಯದ ಕಾನೂನು ಹೋರಾಟಕ್ಕೆ ಬೆಂಬಲ ಸೂಚಿಸಿದರು. ರೈತರ ಹಿತರಕ್ಷಣೆಗೆ ಸರ್ಕಾರದೊಂದಿಗೆ ಇರುವುದಾಗಿ ಬೆಂಬಲ ವ್ಯಕ್ತಪಡಿಸಿದರು. ಹಾಗೂ ಸಂಕಷ್ಟ ಹಂಚಿಕೆ ಸೂತ್ರವನ್ನು ಇನ್ನಷ್ಟು ನಿರ್ದಿಷ್ಟಪಡಿಸುವ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.
ಮಹಾದಾಯಿ ವಿವಾದ:
ಮಹಾದಾಯಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕಳಸಾ ಮತ್ತು ಬಂಡೂರಾ ಯೋಜನೆಗೆ ಅರಣ್ಯ ಮತ್ತು ಪರಿಸರ ಇಲಾಖೆಗಳ ತೀರುವಳಿ ಹಾಗೂ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ತೀರುವಳಿ ಪಡೆಯಲೂ ಸಹ ಅರ್ಜಿ ಸಲ್ಲಿಸಲಾಗಿದೆ. ಆದರೆ ಗೋವಾ ಸರ್ಕಾರ ಈ ಕುರಿತು ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದು, ಈ ಕುರಿತು ಹೆಚ್ಚಿನ ಗಮನ ಹರಿಸುವಂತೆ ಸಲಹೆ ನೀಡಿದರು.
ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ, ಹೆಚ್‌ಡಿ ಕುಮಾರಸ್ವಾಮಿ, ಜಗದೀಶ್ ಶೆಟ್ಟರ್, ಡಿವಿ ಸದಾನಂದಗೌಡ, ವೀರಪ್ಪ ಮೊಯಿಲಿ, ಸಚಿವರಾದ ಹೆಚ್‌ಕೆ ಪಾಟೀಲ, ಚಲುವರಾಯಸ್ವಾಮಿ, ಡಾ.ಜಿ ಪರಮೇಶ್ವರ್, ಕೆಜೆ ಜಾರ್ಜ್, ಕೃಷ್ಣ ಬೈರೇಗೌಡ, ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿಬಿ ಜಯಚಂದ್ರ, ಎಲ್ಲ ಪಕ್ಷಗಳ ಶಾಸಕರು ಸಂಸದರು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಹಿರಿಯ ವಕೀಲರಾದ ಮೋಹನ್ ಕಾತರಕಿ ಮತ್ತು ಇತರ ಕಾನೂನು ತಜ್ಞರು, ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ನವದೆಹಲಿ: ತಮಿಳುನಾಡಿಗೆ (Tamil Nadu) ನೀರು ಬಿಡಲು ಕರ್ನಾಟಕ ಸರ್ಕಾರಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (Cauvery Water Management Authority) ಸೂಚನೆ ನೀಡಿದೆ. ದಿನಕ್ಕೆ 10 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ತಿಳಿಸಿದೆ.
ದಿನಕ್ಕೆ 10 ಸಾವಿರ ಕ್ಯೂಸೆಕ್‌ನಂತೆ ಹದಿನೈದು ದಿನಗಳ ಕಾಲ ತಮಿಳುನಾಡಿಗೆ ನೀರು ಬಿಡಲು ಪ್ರಾಧಿಕಾರ ಹೇಳಿದೆ. ಆದರೆ ಪ್ರಾಧಿಕಾರದ ಆದೇಶಕ್ಕೆ ಕರ್ನಾಟಕ (Karnataka) ಒಪ್ಪಿಗೆ ಸೂಚಿಸಿಲ್ಲ. ಜಲಾಶಯಗಳಲ್ಲಿ ನೀರಿನ ಪ್ರಮಾಣ ಕಡಿಮೆ ಇದೆ. ಈ ಹಿನ್ನೆಲೆ ಆಗಸ್ಟ್ 22 ರ ವರೆಗೂ ನಿತ್ಯ 8,000 ಕ್ಯೂಸೆಕ್ ನೀರು ಬಿಡುವುದಾಗಿ ಕರ್ನಾಟಕ ತಿಳಿಸಿದೆ. ಇದನ್ನೂ ಓದಿ: ಚುನಾವಣೆ ಸಮಯದಲ್ಲಿ ಟಿಎಂಸಿ ರಕ್ತದೊಂದಿಗೆ ಆಟವಾಡಿದೆ: ಮೋದಿ ವಾಗ್ದಾಳಿ
ನಿತ್ಯ 15 ಸಾವಿರ ಕ್ಯೂಸೆಕ್ ನೀರಿಗಾಗಿ ತಮಿಳುನಾಡು ಬೇಡಿಕೆ ಇಟ್ಟಿತ್ತು. ನೀರು ಬಿಡದಿದ್ದರೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದಾಗಿ ಎಚ್ಚರಿಕೆ ನೀಡಿತ್ತು. ಈ ಹಿನ್ನೆಲೆ ಕನಿಷ್ಠ 10 ಸಾವಿರ ಕ್ಯೂಸೆಕ್ ನೀರು ಬಿಡಲು ಪ್ರಾಧಿಕಾರ ಸೂಚನೆ ನೀಡಿತ್ತು.
ನೀರಿನ ಅಭಾವ ಹಿನ್ನೆಲೆ ನಿತ್ಯ 8,000 ಕ್ಯೂಸೆಕ್ ಬಿಡುವುದಾಗಿ ಕರ್ನಾಟಕ ಹೇಳಿತ್ತು. ಹೀಗಾಗಿ ಕರ್ನಾಟಕದ ವಿರುದ್ಧ ತಮಿಳುನಾಡು ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ ಎನ್ನಲಾಗಿದೆ. ಇದನ್ನೂ ಓದಿ: ಇಳಕಲ್ ಸೀರೆಯಲ್ಲಿ ಅರಳಿತು ರಾಷ್ಟ್ರಧ್ವಜ, ಚಂದ್ರಯಾನ -3