ಬೆಂಗಳೂರು: ಕಾವೇರಿ ನೀರಿನ ಪೈಪ್‌ಲೈನ್ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಇಂದಿನಿಂದ 2 ದಿನಗಳ ಕಾಲ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಆಗಲಿದೆ.
ಬೆಂಗಳೂರು ನೀರಿನ ಸರಬರಾಜು ಮತ್ತು ಒಳಚರಂಡಿ ಮಂಡಳಿಯ (ಬಿಡಬ್ಲ್ಯೂಎಸ್‌ಎಸ್‌ಬಿ) ವತಿಯಿಂದ ನಗರದ ನಾಗರಬಾವಿ ಬಿಡಿಎ ಕಾಂಪ್ಲೆಕ್ಸ್ ಪ್ರದೇಶದ 600 ಮಿಮೀ ವ್ಯಾಸದ ಮುಖ್ಯ ಕಾವೇರಿ ನೀರಿನ ಪೈಪ್‌ಲೈನ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೆ.19 ರಿಂದ 20ರ ವರೆಗೆ ನಗರದ ಕೆಲವು ಭಾಗಗಳಲ್ಲಿ ಕಾವೇರಿ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವ್ಯತ್ಯಯ?
* ವಿಜಯನಗರ, ಬನವಾಸಿ ರಸ್ತೆ, ಕೋರಮಂಗಲ, ಗಾಂಧಿನಗರ ಸುತ್ತಮುತ್ತಲಿನ ಪ್ರದೇಶಗಳು
* ಬಿ.ಡಿ.ಎ. ಕಾಂಪ್ಲೆಕ್ಸ್ ಸುತ್ತಮುತ್ತ
* ಇತರ ಹತ್ತಿರದ ಬಡಾವಣೆಗಳು
ತುರ್ತು ಕಾರಣದಿಂದ ನಡೆಯುತ್ತಿರುವ ಕಾಮಗಾರಿಯಲ್ಲಿ ಸಾರ್ವಜನಿಕರು ಸಹಕಾರ ನೀಡುವಂತೆ ಹಾಗೂ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಬಿಡಬ್ಲ್ಯೂಎಸ್‌ಎಸ್‌ಬಿ ಮನವಿ ಮಾಡಿದೆ.
ಬೆಂಗಳೂರು: ಇಂದಿನಿಂದ ಮೂರು ದಿನಗಳ ಕಾಲೇ ಬೆಂಗಳೂರು (Bengaluru) ನಗರದಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಆಗಲಿದೆ.
ಜಲಮಂಡಳಿ (Water board) ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿದೆ. ಈ ಹಿನ್ನೆಲೆ ಕಾವೇರಿ ನೀರು ಸರಬರಾಜು ಯೋಜನೆಯ ವಿವಿಧ ಹಂತಗಳ ಜಲರೇಚಕ ಯಂತ್ರಾಗಾರಗಳನ್ನು ಇಂದಿನಿಂದ ಸೆಪ್ಟೆಂಬರ್ 17ರ ವರೆಗೆ ಸ್ಥಗಿತಗೊಳಿಸಲಾಗುತ್ತಿದೆ. ಹೀಗಾಗಿ ಇಂದಿನಿಂದ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ ರಾಮ್ ಪ್ರಸಾತ್ ಮನೋಹರ್ ಬೆಂಗಳೂರಿಗರಿಗೆ ಸಂದೇಶ ನೀಡಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್ | ಷಡ್ಯಂತ್ರ ಮಾಡಿದವ್ರನ್ನ ಮುಟ್ಟೋಕೆ ಎಸ್‍ಐಟಿಗೆ ಧೈರ್ಯ ಇಲ್ಲ: ಬೊಮ್ಮಾಯಿ
ಇನ್ನೂ ಮುಖ್ಯ ಕೊಳವೆ ಮಾರ್ಗಗಳ ಸುಲಲಿತ ಚಾಲನೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸುಸ್ಥಿತಿಯಲ್ಲಿಡುವ ಉದ್ದೇಶದಿಂದ ಜಲಮಂಡಳಿಯು ವಿವಿಧೆಡೆ ನಿಯಮಿತ ತುರ್ತು ನಿರ್ವಹಣೆಯ ಕಾಮಗಾರಿಗಳನ್ನು ಕೈಗೊಳ್ಳುತ್ತಿದ್ದು, ಜನ ಮೂರು ದಿನಗಳಿಗೆ ಆಗುವಷ್ಟು ನೀರನ್ನ ಸಂಗ್ರಹ ಮಾಡಿಕೊಳ್ಳಲು ಸಂದೇಶ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ಸುಳಿವು ನೀಡಿದ್ರಾ ಸಿಎಂ?
ಬೆಂಗಳೂರು: ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸೆ.15, 16 ಮತ್ತು 17 ರಂದು ಕಾವೇರಿ ನೀರು ಸರಬರಾಜನ್ನು (Cauvery Water Supply) ಸ್ಥಗಿತಗೊಳಿಸಲಾಗುತ್ತಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
ಕಾವೇರಿ ನೀರು ಸರಬರಾಜು ಯೋಜನೆಯ ವಿವಿಧ ಹಂತಗಳ ಜಲರೇಚಕ ಯಂತ್ರಾಗಾರಗಳನ್ನು ಸೆ.15, 16 ಮತ್ತು 17 ರಂದು ಸ್ಥಗಿತಗೊಳಿಸಲಾಗುತ್ತಿದೆ. ಈ ಜಲರೇಚಕ ಯಂತ್ರಗಾರಗಳ ಸ್ಥಗಿತತೆಯಿಂದ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆ ಮೂರು ದಿನಗಳಲ್ಲಿ ಸಂಚಾರಿ ಕಾವೇರಿಯ ಯೋಜನೆಯ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಸೇವೆಯನ್ನು ಸ್ಥಗಿತಗೊಳಿಸಿ, ಈ ಟ್ಯಾಂಕರ್‌ಗಳನ್ನು ತುರ್ತು ನೀರು ಸರಬರಾಜಿಗಾಗಿ ಬಳಸಿಕೊಳ್ಳಲಾಗುವುದು ಎಂದಿದ್ದಾರೆ. ಇದನ್ನೂ ಓದಿ: ಪಾಕ್ ವಿರುದ್ಧ ಟೀಂ ಇಂಡಿಯಾ ಗೆಲುವಿಗೆ ವಿಶ್ವ ಹಿಂದೂ ರಕ್ಷಾ ಪರಿಷತ್‌ನಿಂದ ಹೋಮ-ಹವನ
ಗ್ರೇಟರ್ ಬೆಂಗಳೂರು ನಗರದ ಜನತೆಗೆ ಯಾವುದೇ ಅಡೆತಡೆಯಿಲ್ಲದೇ ಕುಡಿಯುವ ನೀರನ್ನು ಸರಬರಾಜು ಮಾಡಲು, ಕಾವೇರಿ ನೀರು ಸರಬರಾಜು ಯೋಜನೆಯ ಜಲರೇಚಕ ಯಂತ್ರಗಾರಗಳು ಮತ್ತು ಮುಖ್ಯ ಕೊಳವೆ ಮಾರ್ಗಗಳ ಸುಲಲಿತ ಚಾಲನೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸುಸ್ಥಿತಿಯಲ್ಲಿಡುವ ಉದ್ದೇಶದಿಂದ ಜಲಮಂಡಳಿಯ ವಿವಿಧೆಡೆ ನಿಯಮಿತ ತುರ್ತು ನಿರ್ವಹಣೆಯ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅದೊಂದು ಹಾಡಿನಿಂದ ದಿಢೀರ್ ಫೇಮಸ್ ಆದ ಯುವತಿ – ಇನ್ಸ್ಟಾದಲ್ಲಿ 150 ಇದ್ದ ಫಾಲೋವರ್ಸ್ ಈಗ 40,000
ಕಾವೇರಿ 5ನೇ ಹಂತದ ಜಲರೇಚಕ ಯಂತ್ರಗಾರಗಳು (ಪಂಪಿಂಗ್ ಸ್ಟೇಷನ್) ಸೆ.15 ರ ನಸುಕಿನ ಜಾವ 1 ಗಂಟೆಯಿಂದ ಸೆ.17ರ ಮಧ್ಯಾಹ್ನ 1 ಗಂಟೆವರೆಗೆ ಒಟ್ಟು 60 ಗಂಟೆಗಳು. ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1, ಹಂತ-2, ಹಂತ-3, ಹಂತ-4 ರ 1ನೇ ಘಟ್ಟ ಮತ್ತು 2ನೇ ಘಟ್ಟಗಳ ಜಲರೇಚಕ ಯಂತ್ರಗಾರಗಳನ್ನು ಸೆ.16 ರ ಬೆಳಗ್ಗೆ 6ರಿಂದ ಸೆ.17ರ ಬೆಳಗ್ಗೆ 6ರವರೆಗೆ ಒಟ್ಟು 24 ಗಂಟೆಗಳ ಕಾಲ ಸ್ಥಗಿತಗೊಳಿಸಲಾಗುತ್ತಿದೆ ಎಂದಿದ್ದಾರೆ.
ಸಂಚಾರಿ ಕಾವೇರಿ ಯೋಜನೆ ಮೂರು ದಿನ ಸ್ಥಗಿತ:
ಸಂಚಾರಿ ಕಾವೇರಿಯ ಯೋಜನೆಯ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಸೇವೆಯನ್ನು ಸ್ಥಗಿತಗೊಳಿಸಿ, ಈ ಟ್ಯಾಂಕರ್‌ಗಳನ್ನು ತುರ್ತು ನೀರು ಸರಬರಾಜಿಗಾಗಿ ಬಳಸಿಕೊಳ್ಳಲಾಗುವುದು. ಸಂಚಾರಿ ಕಾವೇರಿ ಯೋಜನೆಯ ಸೇವೆಯಲ್ಲಿ ಈ ಮೂರು ದಿನಗಳ ಕಾಲ ವ್ಯತ್ಯಯವಾಗಲಿದೆ. ಕಾವೇರಿ ನೀರು ಸರಬರಾಜಾಗುವ ಪ್ರದೇಶಗಳ ನಾಗರಿಕರು ಮುಂಜಾಗ್ರತೆಯಾಗಿ ಅಗತ್ಯವಿರುವ ನೀರನ್ನು ಸಂಗ್ರಹ ಮಾಡಿಕೊಳ್ಳುವಂತೆ ತಿಳಿಸಿದ್ದಾರೆ.
ರಾಮನಗರ: ಬೆಂಗಳೂರು (Bengaluru) ಮಾದರಿಯಲ್ಲಿ ಸಂಗಮದ ಬಳಿ ಕಾವೇರಿ ನೀರನ್ನು (Cauvery Water) ಪಂಪ್ ಮಾಡಿ ಕ್ಷೇತ್ರದ 250ಕ್ಕೂ ಹೆಚ್ಚು ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರನ್ನು ತಲುಪಿಸುವ ಯೋಜನೆ ರೂಪಿಸಲಾಗುತ್ತಿದೆ. ಜೊತೆಗೆ ಕ್ಷೇತ್ರದ ಕೆರೆಗಳಿಗೂ ನೀರನ್ನು ತುಂಬಿಸುವ ಕೆಲಸಕ್ಕೆ ಚಾಲನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದರು.
ಕನಕಪುರದ (Kanakapura) ಕೋಡಿಹಳ್ಳಿ ಹೋಬಳಿಯಲ್ಲಿ ಸೋಮವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೀರಾವರಿ ಸಚಿವನಾದ ನಾನು ನನ್ನ ಕ್ಷೇತ್ರದ ಕೆರೆಗಳನ್ನು ತುಂಬಿಸುವ ಕೆಲಸ ಮಾಡುತ್ತಿದ್ದೇನೆ. ಶಿಂಷಾದಿಂದ ಸಾತನೂರು ಹೋಬಳಿಗೆ ನೀರು ತರಲಾಗುತ್ತಿದೆ. ಅರ್ಕಾವತಿಯಿಂದ ಕಸಬಾ ಹೋಬಳಿ ಕೆರೆಗಳನ್ನು ತುಂಬಿಸುವ ಕೆಲಸ ಮಾಡಲಾಗುತ್ತಿದೆ. ಹೊಸದುರ್ಗ ಭಾಗದ ಕೆರೆಗಳನ್ನು ಕಾವೇರಿ ನದಿ ನೀರಿನಿಂದ ತುಂಬಿಸಲಾಗುವುದು. ಈ ಅವಧಿಯಲ್ಲೇ ಮೆಡಿಕಲ್ ಕಾಲೇಜಿಗೆ ಮುಕ್ತಿ ನೀಡಲಾಗುವುದು. ಕ್ಷೇತ್ರದಲ್ಲಿ ಎರಡು ಮೆಡಿಕಲ್ ಕಾಲೇಜು ಇರಲಿದೆ. ಕನಕಪುರದಲ್ಲಿ ಇನ್ಫೋಸಿಸ್ ಸಹಾಯದಲ್ಲಿ ತಾಯಿ ಮಗು ಆಸ್ಪತ್ರೆ ತೆರೆಯಲಾಗಿದೆ. ಇಂತಹ ಸರ್ಕಾರಿ ಆಸ್ಪತ್ರೆ ಬೇರೆ ಎಲ್ಲಾದರೂ ಇದೆಯೇ? ನಾವು ಮಾಡುತ್ತಿರುವ ಕೆಲಸ ದೇಶಕ್ಕೆ ಮಾದರಿ. ನಾವು ಶುದ್ಧ ಕುಡಿಯುವ ನೀರಿನ ಘಟಕ, ಸೋಲಾರ್ ಪಾರ್ಕ್ ಮಾಡಿದೆವು. ನಂತರ ಈ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ. ನಮ್ಮ ಮೆಡಿಕಲ್ ಕಾಲೇಜನ್ನು ಯಡಿಯೂರಪ್ಪ ಅವರು ಚಿಕ್ಕಬಳ್ಳಾಪುರಕ್ಕೆ ಹಾಕಿಬಿಟ್ಟರು. ಇಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣವಾದರೆ ನೀವುಗಳು ಯಾರೂ ಬೆಂಗಳೂರಿಗೆ ಹೋಗಬೇಕಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: CBSE ಯಿಂದ ಸೇಫ್ಟಿ ಗೈಡ್‌ಲೈನ್ಸ್ - ಶೌಚಾಲಯ ಹೊರತುಪಡಿಸಿ ಶಾಲೆಯ ಉಳಿದೆಲ್ಲಕಡೆ ಆಡಿಯೋವಿಶುವಲ್ ಸಿಸಿಟಿವಿ ಕಡ್ಡಾಯ
ಆನೆಗಳ ಹಾವಳಿ ತಡೆಯಲು ಸುಮಾರು 50 ಕಿ.ಮೀ ಉದ್ದ ತಡೆಗೋಡೆ ನಿರ್ಮಾಣ ಮಾಡಲಾಗಿದೆ. ಮಿಕ್ಕ 50 ಕಿಮೀ ಅನ್ನು ಶೀಘ್ರವೇ ಪೂರ್ಣಗೊಳಿಸಿ ರೈತರ ಪರವಾಗಿ ಕೆಲಸ ಮಾಡುತ್ತೇವೆ. ನಮ್ಮ ಕ್ಷೇತ್ರದಲ್ಲಿ ಇಬ್ಬರು ರೈತರಂತೆ ಟ್ರಾನ್ಸ್ಫಾರ್ಮರ್ ನೀಡಿ ವಿದ್ಯುತ್ ಕ್ರಾಂತಿ ಮಾಡಿದ್ದೇವೆ. 25 ಸಾವಿರ ರೈತರಿಗೆ ಇದರಿಂದ ಉಪಯೋಗವಾಗಿದೆ. ಪಕ್ಕದ ಯಾವುದೇ ಕ್ಷೇತ್ರದಲ್ಲಿಯೂ ಈ ಸೌಲಭ್ಯವಿಲ್ಲ. ಹುಣಸನಹಳ್ಳಿ ಸೇರಿದಂತೆ ದೊಡ್ಡಾಲಹಳ್ಳಿಯಲ್ಲಿ ಸೋಲರ್ ವಿದ್ಯುತ್ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಹಗಲು ಹೊತ್ತಿನಲ್ಲಿಯೇ ರೈತರಿಗೆ ವಿದ್ಯುತ್ ನೀಡಲಾಗುವುದು. ಕ್ಷೇತ್ರದ 60-70 ಸಾವಿರ ಜನ ವಿದ್ಯಾಭ್ಯಾಸ, ಕೆಲಸದ ನಿಮಿತ್ತ ನಗರ ಪ್ರದೇಶ ಸೇರಿದ್ದಾರೆ. ನನ್ನನ್ನು ನಮ್ಮ ತಂದೆ ಬೆಂಗಳೂರು ಸೇರಿಸಿದ್ದರು. ಆದರೆ ನಮ್ಮ ಜನರು ಪಾನಿಪುರಿ, ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಊರಿಗೆ ಒಂದೆರಡು ಜನ ಉದ್ಧಾರವಾಗಿದ್ದಾರೆ. ಆದರೆ ಹೆಚ್ಚಿನ ಜನರಿಗೆ ಉತ್ತಮ ಜೀವನ ನೀಡಬೇಕು ಎಂದು ನಾನು ಪಣತೊಟ್ಟಿದ್ದೇನೆ. ಅದಕ್ಕೆ ಕೆಪಿಎಸ್ ಶಾಲೆಗಳನ್ನು ಪ್ರಾರಂಭ ಮಾಡಲಾಗುತ್ತಿದೆ. ಕೋಡಿಹಳ್ಳಿಯಲ್ಲಿ 10 ಎಕರೆ, ದೊಡ್ಡ ಆಲಹಳ್ಳಿಯಲ್ಲಿ ಶಾಲೆಗಾಗಿ ನಮ್ಮ ಸ್ವಂತ ಭೂಮಿಯನ್ನು ನೀಡಿದ್ದೇನೆ ಎಂದರು. ಇದನ್ನೂ ಓದಿ: ಸೋಪ್ ಬಾಕ್ಸ್‌ಲ್ಲಿ 14.69 ಕೋಟಿ ಮೌಲ್ಯದ ಕೊಕೇನ್ ಸ್ಮಗ್ಲಿಂಗ್ – ಇಬ್ಬರು ಮಹಿಳೆಯರು ಅರೆಸ್ಟ್
ಸುರೇಶ್ ವಿರುದ್ಧ ದೇವೇಗೌಡರು ಅವರ ಅಳಿಯನನ್ನು ಬಿಜೆಪಿಯಿಂದ ನಿಲ್ಲಿಸಿದರು. ಅನಂತರ ಕುಮಾರಸ್ವಾಮಿ ಮಗನ ವಿರುದ್ಧ ಸುರೇಶ್ ಅವರನ್ನು ನಿಲ್ಲಿಸಬೇಕು ಎಂದು ಒತ್ತಡ ತರಲಾಯಿತು. ಅನಂತರ ಬೆಳವಣಿಗೆಯಲ್ಲಿ ಯೋಗೇಶ್ವರ್ ಅವರು ಕಾಂಗ್ರೆಸ್ ಸೇರಿದರು. ಅವರು ಜನರ ಆಶೀರ್ವಾದಿಂದ 22 ಸಾವಿರ ಮತಗಳ ಅಂತರದಿಂದ ಗೆದ್ದರು. ಬೆಂಗಳೂರು ದಕ್ಷಿಣ ಜಿಲ್ಲೆಯಿಂದ 4 ಜನ ಶಾಸಕರು ವಿಧಾನಸಭೆಯಲ್ಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ನಮ್ಮ ಜನ ಮೋಸ ಮಾಡಿಲ್ಲ. ನಮಗೆ ಬೆಂಗಳೂರಿನಲ್ಲಿ ಮೋಸ ಆಗಿದೆ. ನಮ್ಮ ಗ್ರಾಮೀಣ ಭಾಗದಲ್ಲಿ ನಮಗೆ ಮೋಸ ಆಗಿಲ್ಲ. ಬೇರೆ ಕಡೆ ವಾಲಿರುವವರಿಗೆ ಬುದ್ಧಿ ಹೇಳಿ. ಚುನಾವಣೆ ಸಮಯದಲ್ಲಿ ಅನೇಕರು ಬಂದು ತಲೆ ಕೆಡಿಸುವ ಪ್ರಯತ್ನ ಮಾಡುತ್ತಾರೆ. ನೀವು ಯಾವುದಕ್ಕೂ ಮಣಿಯಬಾರದು. ನಿಮ್ಮ ಹೆಣ ಹಾಗೂ ಪಲ್ಲಕ್ಕಿ ಹೊರುವವನು ನಾನು. ನನ್ನ ಹೆಣ, ಪಲ್ಲಕ್ಕಿ ಹೊರುವವರು ನೀವು. ನಿಮ್ಮ ಹಾಗೂ ನಮ್ಮ ಸಂಬಂಧ ಭಕ್ತ ಹಾಗೂ ಭಗವಂತನ ನಡುವಿನ ಸಂಬಂಧ. ಚನ್ನಪಟ್ಟಣದಲ್ಲಿ ಒಂಬತ್ತು ಜಿಲ್ಲಾ ಪಂಚಾಯತಿಗಳಿಗೆ ತೆರಳಿ ಜನಸಂಪರ್ಕ ಸಭೆ ಮೂಲಕ ಜನರ ಬಳಿಗೆ ಹೋಗಿ ನೂತನ ಪ್ರಯೋಗ ಮಾಡಲಾಯಿತು. ಸುರೇಶ್ ಅವರನ್ನು ಸೋಲಿಸಲು ಅವರು ಹೇಗೆ ತಂತ್ರ ಮಾಡಿದರೋ ಅದೇ ರೀತಿ ನಾವು ಸಹ ತಂತ್ರ ನಡೆಸಲಾಯಿತು. ಅಲ್ಲಿನ ಜನರಿಂದ 22 ಸಾವಿರ ಅರ್ಜಿಗಳನ್ನು ಸ್ವೀಕಾರ ಮಾಡಲಾಯಿತು. ಸುಮಾರು 500 ಕೋಟಿಗೂ ಹೆಚ್ಚು ಅನುದಾನ ನೀಡಲಾಯಿತು. 5 ಸಾವಿರಕ್ಕೂ ಹೆಚ್ಚು ಮನೆಗಳನ್ನು ಮಂಜೂರು ಮಾಡಲಾಯಿತು. ನೂರಾರು ಎಕರೆ ಜಮೀನು ಗುರುತಿಸಿ ಬಡವರಿಗೆ ನಿವೇಶನ ಹಂಚಲಾಯಿತು ಎಂದು ಹೇಳಿದರು. ಇದನ್ನೂ ಓದಿ: ಆಪರೇಷನ್ ಸಿಂಧೂರ ವೇಳೆ ಭಾರತದ ಸೇನಾ ಶಕ್ತಿಯನ್ನ ಇಡೀ ವಿಶ್ವವೇ ನೋಡಿದೆ; ಸಂಸತ್ ಅಧಿವೇಶನಕ್ಕೂ ಮುನ್ನ ಮೋದಿ ಮಾತು
ಮಂಡ್ಯ: ಫೋಟೋ ತೆದುಕೊಳ್ಳಲು ಹೋಗಿ ಕಾವೇರಿ ನದಿಯಲ್ಲಿ (Cauvery Water) ವ್ಯಕ್ತಿಯೊಬ್ಬರು ಕೊಚ್ಚಿ ಹೋದ ಘಟನೆ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಸರ್ವಧರ್ಮ ಆಶ್ರಮದ ಬಳಿ ನಡೆದಿದೆ.
ಮೈಸೂರಿನಲ್ಲಿ ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಮಹೇಶ್ ( 36) ನದಿಯಲ್ಲಿ ಕೊಚ್ಚಿ ಹೋದ ವ್ಯಕ್ತಿ. ಭಾನುವಾರ ಸಂಜೆ ಮಹೇಶ್ ಸ್ನೇಹಿತರೊಂದಿಗೆ ಕೆಆರ್‌ಎಸ್ ಭಾಗಕ್ಕೆ ಪಿಕ್ನಿಕ್ ಬಂದಿದ್ದರು. ಇದನ್ನೂಓದಿ: ರಶ್ಮಿಕಾ ಹೇಳಿದ್ರೆ ಅದು ನಿಜ ಆಗೋಲ್ಲ –ನಿಧಿ ಸುಬ್ಬಯ್ಯ ಕೌಂಟರ್
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆ ಆರ್ಭಟ ಜೋರಾಗಿದೆ. ಕೆಆರ್‌ಎಸ್ ಡ್ಯಾಂ (KRS Dam) ಒಳಹರಿವಿನಲ್ಲಿ ಭಾರೀ ಏರಿಕೆಯಾಗಿದ್ದು, ಕಾವೇರಿ ನದಿಗೆ 29 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.
ಈಗಾಗಲೇ ಭರ್ತಿಯಂಚಿಗೆ ಕೆಆರ್‌ಎಸ್ ಜಲಾಶಯ ತಲುಪಿದೆ. ಮುಂಜಾಗ್ರತಾ ಕ್ರಮವಾಗಿ ಡ್ಯಾಂನಿಂದ ನೀರು ಬಿಡುಗಡೆ ಮಾಡಲಾಗಿದೆ. ಕಾವೇರಿ ನದಿಗೆ 29 ಸಾವಿರ ಕ್ಯೂಸೆಕ್ ನೀರು ಹರಿಬಿಡಲಾಗಿದೆ. ಒಳ ಹರಿವು ಹೆಚ್ಚಾದಂತೆ ಹೊರ ಹರಿವು ಹೆಚ್ಚಳಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಹೊಸ ದಾಖಲೆಗೆ ಸಿದ್ಧವಾಗ್ತಿದೆ ಕೆಆರ್‌ಎಸ್ – ಡ್ಯಾಂ ಸಂಪೂರ್ಣ ಭರ್ತಿಗೆ 5 ಅಡಿ ಬಾಕಿ
ಸದ್ಯ ಕೆಆರ್‌ಎಸ್ ಡ್ಯಾಂ 121 ಅಡಿ ಭರ್ತಿಯಾಗಿದೆ. 124.80 ಅಡಿ ಗರಿಷ್ಠ ಮಟ್ಟ ಹೊಂದಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚಾಗಿರುವ ಹಿನ್ನೆಲೆ ಗಂಟೆ ಗಂಟೆಗೂ ಡ್ಯಾಂನ ಒಳಹರಿವು ಹೆಚ್ಚಾಗುತ್ತಿದೆ. ಸದ್ಯ ಕೆಆರ್‌ಎಸ್‌ಗೆ 20,315 ಕ್ಯೂಸೆಕ್ ಒಳಹರಿವು ಬರ್ತಿದೆ.
ಸಂಜೆ ಅಥವಾ ನಾಳೆ ಬೆಳಗ್ಗೆ 50 ಕ್ಯೂಸೆಕ್‌ಗೆ ಏರಿಕೆ ಆಗುವ ಸಾದ್ಯತೆ ಇದೆ. ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಶ್ರೀರಂಗಪಟ್ಟಣ ವ್ಯಾಪ್ತಿಯ ಕಾವೇರಿ ನದಿ ಪಾತ್ರದ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಇದನ್ನೂ ಓದಿ: ಹೊಸ ದಾಖಲೆ ಬರೆದ ಕೆಆರ್‌ಎಸ್ ಡ್ಯಾಂ – 118.60 ಅಡಿ ನೀರು ಭರ್ತಿ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಜೂನ್ 19ರಂದು ಬೆಳಗ್ಗೆ 6 ರಿಂದ ಜೂನ್ 20ರ ಬೆಳಗ್ಗೆ 6 ಗಂಟೆವರೆಗೆ ನಗರದ ಬಹುತೇಕ ಭಾಗಗಳಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ (Cauvery Water Supply) ವ್ಯತ್ಯಯ ಉಂಟಾಗಲಿದೆ.
ಕಾವೇರಿ 5ನೇ ಹಂತದ ಕಾಮಗಾರಿ ಹಾಗೂ ವಿದ್ಯುತ್ ನಿರ್ವಹಣೆ ಕಾರಣದಿಂದಾಗಿ ಕಾವೇರಿ ನೀರು ಸರಬರಾಜು ಸ್ಥಗಿತ ಅನಿವಾರ್ಯವಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ತಿಳಿಸಿದ್ದು, ಮುಂಜಾಗ್ರತೆಯಾಗಿ ಕಾವೇರಿ ನೀರು ಸಂಗ್ರಹಿಸಿಕೊಳ್ಳುವಂತೆ ನಾಗರಿಕರಿಗೆ BWSSB ಮನವಿ ಮಾಡಿದೆ. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಸರ್ಕಾರದ ತನಿಖೆ ಮೇಲೆ ಯಾರಿಗೂ ನಂಬಿಕೆ ಇಲ್ಲ: ಅಶೋಕ್
ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುವ ಸಲುವಾಗಿ ಜೂನ್ 19ರ ಬೆಳಗ್ಗೆ 6 ರಿಂದ ಹಾಗೂ ಜೂ.20ರ ಬೆಳಗ್ಗೆ 6 ಗಂಟೆ ವರೆಗೆ ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1 ರಿಂದ ಹಂತ- 5ರ ವರೆಗಿನ ಎಲ್ಲಾ ಜಲರೇಚಕ ಯಂತ್ರಾಗಾರಗಳನ್ನು ಸ್ಥಗಿತಗೊಳಿಸಲಾಗುತ್ತಿದೆ. ಇದರಿಂದ ಬಿಬಿಎಂಪಿ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ. ಹೀಗಾಗಿ ಬೆಂಗಳೂರಿನ ನಾಗರಿಕರಿಗೆ, ವಾಣಿಜ್ಯ ಹಾಗೂ ಕೈಗಾರಿಕಾ ಪ್ರದೇಶಗಳಿಗೆ ಮುಂಜಾಗ್ರತೆಯಾಗಿ ಅಗತ್ಯವಿರುವ ನೀರನ್ನು ಸಂಗ್ರಹಣೆ ಮಾಡಿಕೊಳ್ಳುವಂತೆ ಜಲಮಂಡಳಿ ಸೂಚನೆ ನೀಡಿದೆ. ಇದನ್ನೂ ಓದಿ: ಮಲೆನಾಡಿನ ಮಳೆಗಾಲದ ಗೆಳೆಯರು!
ಮಂಡ್ಯ: ರಾಜಧಾನಿ ಬೆಂಗಳೂರಿನ (Bengaluru) ಜನರಿಗೆ ಕುಡಿಯುವ ನೀರಿನ (Drinking Water) ಸಮಸ್ಯೆ ತಪ್ಪಿಸಲು ರಾಜ್ಯ ಸರ್ಕಾರ ಸಾವಿರಾರು ಕೋಟಿ ವೆಚ್ಚದಲ್ಲಿ ಕಾವೇರಿ 6ನೇ ಹಂತದ ಯೋಜನೆ ಕೈಗೆತ್ತಿಕೊಳ್ಳಲು ಮುಂದಾಗಿದೆ.
ಅದೇನೊ ಸರಿ. ಆದ್ರೆ ಮಂಡ್ಯ ಜಿಲ್ಲೆ ಅಂದ್ರೆ ಸರ್ಕಾರಕ್ಕೆ ಅದ್ಯಾಕೆ ನಿರ್ಲಕ್ಷ್ಯವೊ ಗೊತ್ತಿಲ್ಲ. ಕೆಆರ್‌ಎಸ್ ಜಲಾಶಯ (KRS Dam) ಇದ್ರೂ ಮಂಡ್ಯದ ಅದೊಂದು ಬಡಾವಣೆಯ ನಿವಾಸಿಗಳಿಗೆ 2 ದಶಕಗಳಿಂದ ಕಾವೇರಿ ನೀರು ಕೊಡ್ತಿಲ್ಲ. ಇಷ್ಟುದಿನ ಅಧಿಕಾರಿಗಳಿಗೆ ಮನವಿ ಸಲ್ಲಿಸಿಕೊಂಡು, ಜನಪ್ರತಿನಿಧಿಗಳಿಗೆ ಕೈ ಮುಗಿದು ಸಮಸ್ಯೆ ಬೇಡಿಕೆ ಈಡೇರಿಕೆಗೆ ಮನವಿ ಮಾಡ್ತಿದ್ದ ಜನರು ಇದೀಗ ಪ್ರತಿಭಟನೆ ಹಾದಿ ತುಳಿದಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ಮುಂಡೆವನ್ನ ನಿಂಬೆಹಣ್ಣು ಹಿಂಡಿದ ಹಾಗೆ ಹಿಂಡಬಹುದು: ಸಿಎಂ ಇಬ್ರಾಹಿಂ
ಮಂಡ್ಯದಲ್ಲಿ (Mandya) ಕಳೆದ 2 ದಶಕದ ಹಿಂದೆ ಕರ್ನಾಟಕ ಹೌಸಿಂಗ್ ಬೋರ್ಡ್ ಬಡಾವಣೆ ನಿರ್ಮಾಣ ಮಾಡಿ ಅದಕ್ಕೆ ಮಹರಾಜನಗರ ಅಂತ ನಾಮಕರಣ ಮಾಡಿತ್ತು. ಎಲ್ಲಾ ಮೂಲಭೂತ ಸೌಕರ್ಯಗಳನ್ನ ನೀಡ್ತೀವಿ ಅಂತ ಲಕ್ಷ ಲಕ್ಷ ರೂಗಳಿಗೆ ನಿವೇಶನ ಮಾರಾಟ ಮಾಡಿದ್ರು. ಸದಸ್ಯ ಬಡಾವಣೆಯಲ್ಲಿ 300ಕ್ಕೂ ಹೆಚ್ಚು ಮನೆಗಳು ನಿರ್ಮಾಣಗೊಂಡಿದ್ದು, ಸಾವಿರಕ್ಕೂ ಹೆಚ್ಚು ಜನರು ವಾಸ ಮಾಡ್ತಿದ್ದಾರೆ. ಆದ್ರೆ ಈವರೆಗೂ ಇವರಿಗೆ ಕಾವೇರಿ ನೀರು ಸಿಗುತ್ತಿಲ್ಲ. ಇದರಿಂದಾಗಿ ಬೋರ್‌ವೆಲ್‌ಗಳನ್ನೇ ಅವಲಂಬಿಸಿದ್ದಾರೆ. ಆದ್ರೆ ಬೋರ್‌ವೆಲ್‌ಗಳಲ್ಲಿ ಕಲುಷಿತ ನೀರು ಬರ್ತಿರೋದ್ರಿಂದ ಆರೋಗ್ಯ ಸಮಸ್ಯೆಗಳು ಎದುರಾಗಿವೆ. ಇದನ್ನೂ ಓದಿ: ಅವೈಜ್ಞಾನಿಕ ನೀತಿಯಿಂದ ಅಬಕಾರಿ ಆದಾಯದ ಮೂಲಕ್ಕೆ ಸರ್ಕಾರ ಕೊಡಲಿ ಪೆಟ್ಟು ನೀಡಲು ಮುಂದಾಗಿದೆ – ಅಶೋಕ್
ಇನ್ನು 2019ರಲ್ಲಿ ಕರ್ನಾಟಕ ಗೃಹ ಮಂಡಳಿ ಬಡಾವಣೆಯ ನಿರ್ವಹಣೆಯನ್ನ ನಗರಸಭೆಗೆ ವಹಿಸಿದೆ. ಆದ್ರೂ ಈವರೆಗೆ ಕಾವೇರಿ ನೀರಿನ ವ್ಯವಸ್ಥೆ ಕಲ್ಪಿಸಿಲ್ಲ. ನೂರಾರು ಬಾರಿ ಮನವಿ ಮಾಡಿಕೊಂಡ್ರೂ ಸಮಸ್ಯೆ ಬಗೆಹರಿಯದಿದ್ದಕ್ಕೆ ಆಕ್ರೋಶಗೊಂಡ ನಿವಾಸಿಗಳು ಖಾಲಿ ಬಿಂದಿಗೆಯೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ್ರು. ಬೆಂಗಳೂರಿಗೆ ನೀರು ಕೊಡಲು ಆಸಕ್ತಿ ತೋರುವ ಸರ್ಕಾರ ನಮ್ಮನ್ನು ಸವತಿ ಮಕ್ಕಳಂತೆ ನೋಡ್ತಿದೆ. ಸರ್ಕಾರಕ್ಕೆ ಮಾನಮರ್ಯಾದೆ ಇದ್ಯಾ? ಕಲುಷಿತ ನೀರು ಕುಡಿದು ನಾವೆಲ್ಲಾ ಸಾಯಬೇಕಾ? ಕಿಡಿಕಾರಿದ್ರು. ಇದನ್ನೂ ಓದಿ: ಸೈನಿಕರ ಸುರಕ್ಷೆಗೆ ಉಡುಪಿ ಪೇಜಾವರ ಶ್ರೀ ಮಾರ್ಗದರ್ಶನದಲ್ಲಿ ಸುದರ್ಶನ ಯಾಗ
ಇನ್ನೂ ಮನವಿ ಪತ್ರ ಸ್ವೀಕರಿಸಲು ಬಂದ ಅಪರ ಜಿಲ್ಲಾಧಿಕಾರಿ ಶಿವಾನಂದಮೂರ್ತಿಗೆ ಫುಲ್ ಕ್ಲಾಸ್ ತೆಗೆದುಕೊಂಡ್ರು. ಶೀಘ್ರವೇ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಲ್ಲದೆ, ಅಲ್ಲಿಯವರೆಗೂ ಟ್ಯಾಂಕರ್‌ನಲ್ಲಿ ನೀರು ಪೂರೈಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ವಾಪಸ್ ಪಡೆದ್ರು. ಇನ್ನಾದ್ರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಸಮಸ್ಯೆಯನ್ನ ಶಾಶ್ವತವಾಗಿ ಪರಿಹರಿಸುತ್ತಾ ಕಾದುನೋಡಬೇಕಿದೆ.
– ನೆಲ, ಜಲ, ಭಾಷೆಯ ವಿಚಾರದಲ್ಲಿ ರಾಜಕೀಯ ಬದಿಗೊತ್ತಬೇಕು; ಕೇಂದ್ರ ಸಚಿವ
ಬೆಂಗಳೂರು: ಮೇಕೆದಾಟು ಯೋಜನೆಗೂ ಮೊದಲು ಡಿ.ಕೆ.ಶಿವಕುಮಾರ್(D K Shivakumar) ಅವರು ಮಾಡಬೇಕಾದ ಕೆಲಸ ಒಂದಿದೆ. ಅವರ ಮಿತ್ರಪಕ್ಷವೇ ಆಡಳಿತ ನಡೆಸುತ್ತಿರುವ ತಮಿಳುನಾಡಿನ ಒಪ್ಪಿಗೆ ಕೊಡಿಸಲಿ, ಆಮೇಲೆ ನಮ್ಮ ಬಗ್ಗೆ ಮಾತನಾಡಲಿ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ(H D Kumaraswamy) ಹೇಳಿದರು.
ಬೆಂಗಳೂರಿನ ಕುವೆಂಪು ಕಲಾಕ್ಷೇತ್ರದಲ್ಲಿ ಕಾವೇರಿ ನದಿ ರಕ್ಷಣಾ ಸಮಿತಿ ಹಮ್ಮಿಕೊಂಡಿದ್ದ ಕಾವೇರಿ ನದಿ ನೀರಿನ ಹಂಚಿಕೆ ಕುರಿತ ಕಾರ್ಯಗಾರ, ವಿಚಾರ ಸಂಕಿರಣದಲ್ಲಿ ಮಾತನಾಡಿದರು. ನಮ್ಮ ನೀರು ನಮ್ಮ ಹಕ್ಕು ಎಂದು ಹೇಳುತ್ತಾ ನಮ್ಮ ತೆರಿಗೆ ಹಣದಲ್ಲಿ ಅಣೆಕಟ್ಟುಗಳನ್ನು ಕಟ್ಟಿ ತಮಿಳುನಾಡಿಗೆ(TamilNadu) ನೀರು ಹರಿಸುತ್ತಾ ನಾವು ನೀರಗಂಟಿ ಕೆಲಸ ಮಾಡುತ್ತಿದ್ದೇವೆ ಎಂದು ಅತೀವ ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ರಾಜಕೀಯವಾಗಿ ಹಿನ್ನಡೆ ಆಗುತ್ತೆ ಅಂತ ವಕ್ಫ್ ಬಿಲ್‌ಗೆ ಕಾಂಗ್ರೆಸ್ ವಿರುದ್ಧ – ಜೋಶಿ ಕಿಡಿ
ಕಾವೇರಿ ವಿಷಯದಲ್ಲಿ ನಮಗೆ ಅನ್ಯಾಯ ಆಗಿದೆ. ರಾಜ್ಯ ಬಹಳಷ್ಟು ಹಿಂದಕ್ಕೆ ಹೋಗಿದೆ. ಯಾವಾಗಲೂ ನಮ್ಮ ರಾಜ್ಯಕಿಂತ ನೆರೆ ರಾಜ್ಯಕ್ಕೆ ಅನುಕೂಲ ಆಗುತ್ತಿದೆ. ಕನ್ನಡಿಗರಲ್ಲಿ ಒಗ್ಗಟ್ಟು ಇಲ್ಲ. ನೀರಿನ ವಿಷಯದಲ್ಲಿಯೂ ಅದೇ ಆಗುತ್ತಿದೆ. ಮೇಕೆದಾಟು ಯೋಜನೆ ಬಗ್ಗೆ ರಾಜ್ಯ ಕಾಂಗ್ರೆಸ್ ಸರ್ಕಾರ ದ್ವಿಮುಖ ನೀತಿ ಅನುಸರಿಸುತ್ತಿದೆ ಎಂದು ಟೀಕಿಸಿದರು.
ತಮಿಳುನಾಡಿನ ಡಿಎಂಕೆ ಜತೆ ನಮ್ಮ ಸಂಬಂಧ ರಾಜಕೀಯಕ್ಕೆ ಮಾತ್ರ ಸೀಮಿತ. ಡಿಎಂಕೆ ಜತೆ ಮೇಕೆದಾಟು ವಿಷಯ ಮಾತನಾಡುವುದಕ್ಕೆ ರಾಜಕೀಯ ಒಪ್ಪಂದ ಮಾಡಿಕೊಂಡಿಲ್ಲ ಎಂದು ಉಪ ಮುಖ್ಯಮಂತ್ರಿ ಹೇಳಿದ್ದಾರೆ. ಇಲ್ಲಿ ನೋಡಿದರೆ ಮೇಕೆದಾಟು ಪಾದಯಾತ್ರೆ ಮಾಡಿ ನಮ್ಮ ನೀರು ನಮ್ಮ ಹಕ್ಕು ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು. ಇದನ್ನೂ ಓದಿ: ಹಕ್ಕಿ ಜ್ವರ ಹರಡುತ್ತಿರುವ ಹಿನ್ನೆಲೆ ಎಲ್ಲಾ ಪೌಲ್ಟ್ರಿ ಫಾರಂಗಳ ಮೇಲೆ ಕಣ್ಣಿಡಲು ಕೇಂದ್ರ ಸೂಚನೆ
ನಮ್ಮಲ್ಲಿ ಒಗ್ಗಟ್ಟು ಬರದಿದ್ದರೆ ಕಾವೇರಿ ವಿಷಯದಲ್ಲಿ ನ್ಯಾಯ ಸಿಗಲು ಸಾಧ್ಯವಿಲ್ಲ. ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಜನ ದಟ್ಟಣೆಯಿಂದ ಮುಂದೆ ಇಡೀ ಕನ್ನಂಬಾಡಿ ಕಟ್ಟೆಯ ಎಲ್ಲಾ ನೀರನ್ನೂ ಕೊಟ್ಟರೂ ರಾಜಧಾನಿಗೆ ಕುಡಿಯುವ ನೀರು ಸಾಕಾಗದ ಪರಿಸ್ಥಿತಿ ಬರಬಹುದೇನೋ? ಮುಂದೆ ಈ ರೀತಿಯ ನೀರಿನ ಸಂಕಷ್ಟ ಬರುತ್ತದೆ ಎನ್ನುವ ದೂರದೃಷ್ಟಿಯಿಂದ ಮೇಕೆದಾಟು ಯೋಜನೆ ಕೈಗೆತ್ತಿಕೊಳ್ಳಲು ನಾವು ಮುಂದಾಗಿದ್ದೇವೆ. ಮಂಡ್ಯದಲ್ಲಿ ಗೆಲ್ಲಿಸಿದರೆ 5 ನಿಮಿಷದಲ್ಲಿ ಯೋಜನೆಗೆ ಕೇಂದ್ರದ ಅನುಮತಿ ಕೊಡಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದರು. ಈಗ ಕೊಡಿಸಲಿ ಎಂದು ಡಿ.ಕೆ.ಶಿವಕುಮಾರ್ ಹೇಳುತ್ತಿದ್ದಾರೆ. ಅದಕ್ಕಿಂತ ಮೊದಲು ಅವರು ಮಾಡಬೇಕಾದ ಕೆಲಸ ಒಂದಿದೆ, ಅವರ ಮಿತ್ರಪಕ್ಷವೇ ಆಡಳಿತ ನಡೆಸುತ್ತಿರುವ ತಮಿಳುನಾಡಿನ ಒಪ್ಪಿಗೆ ಕೊಡಿಸಲಿ, ಆಮೇಲೆ ನಮ್ಮ ಬಗ್ಗೆ ಮಾತನಾಡಲಿ ಎಂದು ಸವಾಲು ಹಾಕಿದರು.
ಸಂಸತ್‌ನಲ್ಲಿ ಕಾವೇರಿ ವಿಷಯ ಪ್ರಸ್ತಾಪ ಆದಾಗ ನಾನು ನೋಡುತ್ತಿದ್ದೇನೆ. ಆ ನದಿಯ ವಿಷಯ ಪ್ರಸ್ತಾಪವಾದರೆ ತಮಿಳುನಾಡಿನ ಎಲ್ಲಾ ಸಂಸದರು ರಾಜಕೀಯ ಭಿನ್ನಾಭಿಪ್ರಾಯ ಬದಿಗಿಟ್ಟು ಒಟ್ಟಾಗಿ ಬಿಡುತ್ತಾರೆ. ಆದರೆ, ನಮ್ಮಲ್ಲಿ ಏನಾಗುತ್ತಿದೆ? ಎಲ್ಲಕ್ಕೂ ರಾಜಕೀಯ ತರುತ್ತೇವೆ, ಜಾತಿ ತರುತ್ತೇವೆ. ಇದೇ ನಮಗೆ ಮುಳುವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಮಾಜಿ ಸಿಎಂಗಳು ಸಂಚರಿಸಿದ ಕಾರನ್ನ 2.10 ಲಕ್ಷಕ್ಕೆ ಖರೀದಿಸಿದ ಕಾಂಗ್ರೆಸ್ ನಾಯಕ
ಈಗ ಡಿಸಿಎಂ ಅವರು ಉಲ್ಟಾ ಹೊಡೆಯುತ್ತಿದ್ದಾರೆ. ಡಿಎಂಕೆ ಜತೆ ಕೇವಲ ರಾಜಕೀಯ ಒಪ್ಪಂದ ಮಾತ್ರ ಮಾಡಿಕೊಂಡಿದ್ದೇವೆ ಎಂದು ಹೇಳುತ್ತಿದ್ದಾರೆ. ನಮ್ಮ ನೀತಿ, ಧೋರಣೆ ಹೀಗೆ ಇರಬಾರದು. ನೆಲ, ಜಲ, ಭಾಷೆ ವಿಷಯ ಬಂದಾಗ ರಾಜಕೀಯ, ಭಿನ್ನಾಭಿಪ್ರಾಯ ಎಲ್ಲವನ್ನೂ ಬದಿಗೊತ್ತಬೇಕು. ಇಲ್ಲವಾದರೆ ನಮ್ಮ ರಾಜ್ಯಕ್ಕೆ ನ್ಯಾಯ ಸಿಗಲ್ಲ. 93 ವರ್ಷಗಳ ಇಳಿ ವಯಸ್ಸಿನಲ್ಲಿಯೂ ದೇವೇಗೌಡರು ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಸದನದಲ್ಲಿ ವೀಲ್‌ಚೇರ್ ಮೇಲೆ ಬಂದು ಹೋರಾಟ ಮಾಡುತ್ತಿದ್ದಾರೆ ಎಂಬುದನ್ನು ಯಾರು ಮರೆಯಬಾರದು ಎಂದು ಹೇಳಿದರು.
ಕಾವೇರಿ ಬಗ್ಗೆ ಹಿಂದೆ ರಾಜ್ಯದಲ್ಲಿ ನಡೆದಿರುವ ಹೋರಾಟ, ತ್ಯಾಗವನ್ನು ಮರೆಯುತ್ತಿದ್ದೇವೆ. ಚನ್ನಬಸಪ್ಪ, ಹೆಚ್.ಎನ್.ನಂಜೇಗೌಡ, ದೇವೇಗೌಡರು ನಡೆಸಿದ ಹೋರಾಟಗಳನ್ನು ನಾವು ನೆನಪಿಸಿಕೊಳ್ಳಬೇಕು. ಮುಂಚೂಣಿಯಲ್ಲಿ ನಿಂತು ರಾಜ್ಯಕ್ಕೆ ನ್ಯಾಯ ದೊರಕಿಸಿಕೊಟ್ಟವರು ಇವರು ಎಂದರು. ಇದನ್ನೂ ಓದಿ: ನ್ಯಾಮತಿ ಬ್ಯಾಂಕ್ ದರೋಡೆಗೂ ಮುನ್ನ ಪೂಜೆ ಸಲ್ಲಿಸಿದ್ದ ದೇವಾಲಯದಲ್ಲಿ ಕಳ್ಳತನ!
ನಮ್ಮ ತಂದೆ ಅವರು ಯಾವಾಗಲೂ ನನಗೆ ಹೇಳುತ್ತಿರುತ್ತಾರೆ. ರಾಜ್ಯಕ್ಕೆ ಆಗಿರುವ ನೀರಾವರಿ ಅನ್ಯಾಯಕ್ಕೆ ನಿನ್ನ ಒಬ್ಬನಿಂದಲೇ ಈ ಪರಿಹಾರ, ನ್ಯಾಯ ಸಿಗುತ್ತದೆ ಎಂದು ಅನೇಕ ಸಲ ಹೇಳಿದ್ದಾರೆ. ನಾನು ದೇವರಲ್ಲಿ ಅಚಲ ನಂಬಿಕೆ ಇಟ್ಟಿದ್ದೇನೆ. ನನ್ನ ಕನಸು ಈಡೇರುತ್ತದೆ ಎಂದು ಅವರು ಯಾವಾಗಲೂ ಹೇಳುತ್ತಿರುತ್ತಾರೆ ಎಂಬ ಮಾತನ್ನೂ ಹೇಳಿದರು.
ಕರ್ನಾಟಕದ ಮುಖ್ಯಮಂತ್ರಿ ಒಬ್ಬರು ಬಹಳ ಹಿಂದೆ ತಮಿಳುನಾಡು ಮುಖ್ಯಮಂತ್ರಿ ಆಗಿದ್ದ ಕಾಮರಾಜ್ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅಂದಿನ ಮದರಾಸ(ಇಂದಿನ ಚೆನ್ನೈ)ಗೆ ಹೋಗುತ್ತಿದ್ದರು. ಆ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಅಂದಿನ ನಮ್ಮ ಮುಖ್ಯಮಂತ್ರಿಗಳು ಕಾಮರಾಜ್ ಅವರನ್ನು ಉದ್ದೇಶಿಸಿ, ನಾವು ನಿಮಗೆ ಎಷ್ಟು ಬೇಕಾದರೂ ಕಾವೇರಿ ನೀರು ಬಿಡುತ್ತೇವೆ. ನೀವು ನಮಗೆ ಭತ್ತ ಬೆಳೆದು ಕೊಡಿ ಸಾಕು ಎಂದು ಹೇಳಿದ್ದರಂತೆ. ಇದು ನಮ್ಮ ರಾಜ್ಯದ ಉದಾರತೆಗೆ ಪ್ರತೀಕ. ಇದೇ ಇವತ್ತು ನಮಗೆ ಮುಳುವಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು. ಇದನ್ನೂ ಓದಿ: ಹೆಡ್ ಕಾನ್‍ಸ್ಟೇಬಲ್ ಮನೆಗೆ ಕನ್ನ – 5 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು
ಆದರೆ ಆಗಷ್ಟೇ ಪಕ್ಷೇತರ ಶಾಸಕರಾಗಿ ವಿಧಾನಸಭೆಗೆ ಬಂದಿದ್ದ ದೇವೇಗೌಡರು, ಅಂದಿನ ಮುಖ್ಯಮಂತ್ರಿಯವರ ಹೇಳಿಕೆಯನ್ನು ಮುಲಾಜಿಲ್ಲದೇ ಖಂಡನೆ ಮಾಡಿದ್ದರು. ಸದನದಲ್ಲಿ ಖಾಸಗಿ ನಿರ್ಣಯ ಮಂಡಿಸಿ ರಾಜ್ಯಕ್ಕೆ ಕಾವೇರಿ ನೀರಿನಲ್ಲಿ ನ್ಯಾಯ ಸಿಗುವಲ್ಲಿ ಹೋರಾಟ ನಡೆಸಿದರು. ಅವರ ಹೋರಾಟದ ಫಲವೇ ಕಬಿನಿ, ಹಾರಂಗಿ ಮತ್ತು ಹೇಮಾವತಿ ಜಲಾಶಯಗಳು ನಿರ್ಮಾಣವಾದವು. ಇದನ್ನು ಯಾರೂ ಮರೆಯಬಾರದು ಎಂದು ಹೇಳಿದರು. ಇದನ್ನೂ ಓದಿ: ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರಾಗಿ ನ್ಯಾ. ವರ್ಮಾ ಪ್ರಮಾಣ ವಚನ ಸ್ವೀಕಾರ
ಕಾವೇರಿ ಕೊಳಕ್ಕೆ ಮಾತ್ರವಲ್ಲ, ಕೃಷ್ಣ ಕೊಳಕ್ಕೂ ನೀರು ಒದಗಿಸಲು ದೇವೇಗೌಡರು ಕೊಡುಗೆ ಕೊಟ್ಟರು. ಪ್ರಧಾನಿಯಾಗಿ ಉತ್ತರ ಕರ್ನಾಟಕದ ಭಾಗದ ಜನರಿಗೆ ಅಪಾರ ಸೇವೆ ಸಲ್ಲಿಸಿದರು. ಆದರೆ, ಕೆಲವರು ತುಂಡು ಗುತ್ತಿಗೆ ಎಂದು ಅಸತ್ಯವನ್ನು ಹಬ್ಬಿಸಿ ಅವರ ಹೆಸರಿಗೆ ಮಸಿ ಬಳಿಯುವ ಪ್ರಯತ್ನ ಮಾಡಿದರು ಕಿಡಿಕಾರಿದರು. ಇದನ್ನೂ ಓದಿ: ಪ್ರಸಿದ್ಧ ವಿದೇಶಿ ವೈದ್ಯರಂತೆ ನಟಿಸಿ ಹಾರ್ಟ್ ಆಪರೇಷನ್ – ನಕಲಿ ವೈದ್ಯನ ಹುಚ್ಚಾಟಕ್ಕೆ 7 ಜನ ಬಲಿ
ಕಾರ್ಯಗಾರದಲ್ಲಿ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನದ ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮಿ ಅವರು, ಶ್ರೀ ಸೌಮ್ಯನಾಥ ಸ್ವಾಮೀಜಿ, ಶ್ರೀ ಸಿದ್ಧರಾಮೇಶ್ವರ ಸ್ವಾಮೀಜಿ, ಶ್ರೀ ನಿಶ್ಚಲಾನಂದನಂದನಾಥ ಸ್ವಾಮೀಜಿ ಅವರು ದಿವ್ಯ ಸಾನ್ನಿಧ್ಯ ವಹಿಸಿದ್ದರು.
– ಜನರನ್ನ ಸುಲಿಗೆ ಮಾಡ್ತಿದೆ ಬೆಂಗಳೂರು ಟ್ಯಾಂಕರ್ ಮಾಫಿಯಾ ಎಂದು ಆಕ್ರೋಶ
ನವದೆಹಲಿ: ಬೆಂಗಳೂರಿನಲ್ಲಿ ಕುಡಿಯುವ ನೀರಿನ (Bengalur Drinking Water) ಸಮಸ್ಯೆ ತೀವ್ರವಾಗಿದ್ದು, ಟ್ಯಾಂಕರ್ ಮಾಫಿಯಾ ಜನರನ್ನು ಸುಲಿಗೆ ಮಾಡುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು (HD Devegowda) ಕಳವಳ ವ್ಯಕ್ತಪಡಿಸಿದರು.
ರಾಜ್ಯಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ದೇಶದ ಪ್ರಮುಖ ನಗರಗಳಲ್ಲಿ ಒಂದಾಗಿರುವ, ಭಾರತದ ಮಾಹಿತಿ ತಂತ್ರಜ್ಞಾನ ರಾಜಧಾನಿ ಆಗಿರುವ ಬೆಂಗಳೂರು ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಕೇಂದ್ರ ಸರ್ಕಾರದ (Central Government) ಗಮನ ಸೆಳೆದರು. ಬೆಂಗಳೂರಿನ ನೀರಿನ ಬವಣೆ ನೀಗಿಸಬೇಕಾದರೆ ಮೇಕೆದಾಟು ಯೋಜನೆಗೆ ಅನುಮತಿ ಸಿಗಬೇಕಿದೆ. ಎಲ್ಲಾ ರಾಜಕೀಯ ಬದಿಗಿಟ್ಟು ಈ ಯೋಜನೆಗೆ ಬೆಂಬಲ ಕೊಡಬೇಕಿದೆ ಎಂದು ಮನವಿ ಮಾಡಿದರು.
ರಾಜ್ಯದಲ್ಲಿ ಆಡಳಿತ ನಡೆಸಿದ ಎಲ್ಲಾ ಸರ್ಕಾರಗಳು ಮೇಕೆದಾಟು ಯೋಜನೆಗಾಗಿ (Mekedatu Project) ಕೆಲಸ ಮಾಡಿವೆ. ಆದರೆ ಇಲ್ಲಿಯವರೆಗೂ ಯಶಸ್ಸು ಸಿಕ್ಕಿಲ್ಲ. ಯೋಜನೆಗೆ ಅನುಮತಿ ನೀಡುವಂತೆ ಕೇಂದ್ರಕ್ಕೆ ಕರ್ನಾಟಕ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ಕೇಂದ್ರ ಸರ್ಕಾರ ಆದಷ್ಟು ಬೇಗ ಒಪ್ಪಿಗೆ ನೀಡಬೇಕು ಎಂದು ಅವರು ಕೋರಿದರು. ಇದನ್ನೂ ಓದಿ: ಮೇಕ್ ಇನ್ ಇಂಡಿಯಾದಿಂದ ಉದ್ಯಮಗಳಿಗೆ ಭಾರತದ ನಾಯಕತ್ವ ಉತ್ತೇಜನ ನೀಡಿದೆ: ಪುಟಿನ್ ಶ್ಲಾಘನೆ
ಟ್ಯಾಂಕರ್ ಮಾಫಿಯಾ ಬಗ್ಗೆ ಕಳವಳ:
ಬೆಂಗಳೂರು ನಗರ ಅಗಾಧವಾಗಿ ಬೆಳೆಯುತ್ತಿದೆ. ಉದ್ಯೋಗ ಅರಸಿ ದೇಶದ ಎಲ್ಲಾ ಮೂಲೆಗಳಿಂದ ಜನರು ಅಲ್ಲಿಗೆ ಹೋಗುತ್ತಿದ್ದಾರೆ. ಎಲ್ಲರಿಗೂ ಆಶ್ರಯ ನೀಡುವ ಬೆಂಗಳೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಹಳ ಗಂಭೀರವಾಗಿದೆ ಎಂದು ಮಾಜಿ ಪ್ರಧಾನಿಗಳು ಹೇಳಿದರು. ಇದನ್ನೂ ಓದಿ: ಮಾಜಿ ಪತಿ ಮದುವೆ ದಿನ ಸಮಂತಾ ಪೋಸ್ಟ್ ವೈರಲ್- ‘ಹುಡುಗಿಯಂತೆ ಹೋರಾಡಿ’ ಎಂದ ನಟಿ
1.45 ಕೋಟಿ ಜನಸಂಖ್ಯೆ ಇರುವ ಬೆಂಗಳೂರಿಗೆ 16 ಟಿಎಂಸಿ ಅಡಿಯಷ್ಟು ಕಾವೇರಿ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಆದರೆ, ನಗರದ ಬೇಡಿಕೆಗೆ ಹೋಲಿಸಿದರೆ ಈ ನೀರು ಬಹಳ ಕಡಿಮೆ. ಇದನ್ನೇ ಅಸ್ತ್ರ ಮಾಡಿಕೊಂಡಿರುವ ಟ್ಯಾಂಕರ್ ಮಾಫಿಯಾ ಜನರನ್ನು ಸುಲಿಗೆ ಮಾಡುತ್ತಿದೆ. ಒಂದು ಟ್ಯಾಂಕರ್ ನೀರಿಗೆ 3,000 ರೂ. ತೆರಬೇಕಿದೆ. ಇದು ಎಷ್ಟು ಅನ್ಯಾಯ ಎಂದರೆ ಕೇವಲ 4 ಜನರಿರುವ ಒಂದು ಕುಟುಂಬ ಪ್ರತೀ ತಿಂಗಳು ನೀರಿಗಾಗಿ 20,000 ರೂ. ಖರ್ಚು ಮಾಡಬೇಕಿದೆ. ಇದು ಕಳವಳಕಾರಿ ಎಂದು ಅವರು ಆತಂಕ ವ್ಯಕ್ತಪಡಿಸಿದರು.