Tag: Cauvery Water Dispute

  • ಹೆಚ್‌ಡಿಕೆ ಮೇಲೆ ಮಂಡ್ಯ ಜನರ ಬೆಟ್ಟದಷ್ಟು ನಿರೀಕ್ಷೆ!

    ಹೆಚ್‌ಡಿಕೆ ಮೇಲೆ ಮಂಡ್ಯ ಜನರ ಬೆಟ್ಟದಷ್ಟು ನಿರೀಕ್ಷೆ!

    ಮಂಡ್ಯ: ಕ್ಷೇತ್ರದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ಮೋದಿ ಸಂಪುಟದಲ್ಲಿ ಸಚಿವರಾಗಿ (Modi Cabinet Minister) ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಇದೀಗ ಮಂಡ್ಯದ (Mandya) ಜನರು ಕುಮಾರಸ್ವಾಮಿ ಅವರ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

    ಕುಮಾರಸ್ವಾಮಿ ಮಂಡ್ಯದಲ್ಲಿನ ಚುನಾವಣೆ ಪ್ರಚಾರದ ವೇಳೆ ನಾನು ಸಂಸದನಾದರೇ ಕಾವೇರಿ ವಿವಾದ (Cauvery Water Dispute) ಪ್ರಾಮಾಣಿಕವಾಗಿ ಬಗೆಹರಿಸಲು ಪ್ರಯತ್ನ ಮಾಡುತ್ತೇನೆ ಎಂದು ಹೇಳಿದ್ದರು. ಇದೀಗ ಹೆಚ್‌ಡಿಕೆ ಮುಂದೆ ಈ ಸವಾಲು ಪ್ರಮುಖವಾಗಿದೆ. ಅಲ್ಲದೇ ನನ್ನ ಎಂಪಿ ಅವಧಿ ಮುಗಿಯುವ ಹೊತ್ತಿಗೆ ಮೇಕೆದಾಟು ಯೋಜನೆಯನ್ನು ಅನುಷ್ಠಾನಕ್ಕೆ ತಂದೇ ತರುತ್ತೇನೆ ಎಂಬ ಭರವಸೆಯನ್ನೂ ಮಂಡ್ಯದ ಜನತೆಗೆ ನೀಡಿದ್ದರು. ಈ ಮಾತನ್ನು ಕುಮಾರಸ್ವಾಮಿ ಎಷ್ಟರ ಮಟ್ಟಿಗೆ ಉಳಿಸಿಕೊಳ್ಳುತ್ತಾರೆ ಎಂಬುದನ್ನು ಕಾದುನೋಡಬೇಕಿದೆ. ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಪರ ಕೋಟಿ ಕೋಟಿ ಬೆಟ್ಟಿಂಗ್ – ಕಾಂಗ್ರೆಸ್ ಕಾರ್ಯಕರ್ತ ಬಲಿ

    ಇನ್ನೂ ಕುಮಾರಸ್ವಾಮಿ ಅವರಿಗೆ ಯಾವ ಖಾತೆ ಎಂದು ನಿಗದಿಯಾಗಿಲ್ಲ. ಸದ್ಯ ಕೃಷಿ ಖಾತೆಯ ನಿರೀಕ್ಷೆಯಲ್ಲಿ ಕುಮಾರಸ್ವಾಮಿ ಅವರು ಇದ್ದಂತೆ ಕಾಣಿಸುತ್ತಿದೆ. ಮಂಡ್ಯ ಜಿಲ್ಲೆ ಕೃಷಿ ಪ್ರಧಾನ ಜಿಲ್ಲೆಯಾದ್ದರಿಂದ ಕೃಷಿಯ ವಿಚಾರದಲ್ಲಿ ಇಲ್ಲಿನ ರೈತರು ಹಲವು ಭರವಸೆಗಳನ್ನು ಕುಮಾರಸ್ವಾಮಿ ಮೇಲೆ ಇಟ್ಟುಕೊಂಡಿದ್ದಾರೆ. ಹೆಚ್‌ಡಿಕೆ ಮಂಡ್ಯ ಜಿಲ್ಲೆಯ ಕೃಷಿಗೆ ಆಧುನಿಕ ಟಚ್ ನೀಡುವಲ್ಲಿ ಮುಂದಾಗಾಬೇಕಾಗಿದ್ದು, ಕೃಷಿ ಉದ್ಯಮಗಳನ್ನು ಜಿಲ್ಲೆಯಲ್ಲಿ ತೆರೆಯಬೇಕಾಗಿದೆ. ಇದನ್ನೂ ಓದಿ: ಲೈಂಗಿಕ ಕಿರುಕುಳ ಕೇಸ್‌ – ಜೂನ್‌ 24ರ ವರೆಗೆ ಪ್ರಜ್ವಲ್‌ ರೇವಣ್ಣಗೆ ಜೈಲು!

    ಅಲ್ಲದೇ ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಗೆ ಕೇಂದ್ರದ ಬಳಿ ಕುಮಾರಸ್ವಾಮಿ ಒತ್ತಡ ಹಾಕಬೇಕಾಗಿದೆ. ಇನ್ನೂ ಮಂಡ್ಯ ಜಿಲ್ಲೆಯಲ್ಲಿ ಕೃಷಿಗೆ ಸಂಬಂಧಿಸಿದ ಹಾಗೂ ಇತರ ಕಾರ್ಖಾನೆಗಳನ್ನು ತಂದು ನಿರುದ್ಯೋಗ ಸಮಸ್ಯೆ ಹೋಗಲಾಡಿಸಬೇಕಿದೆ. ಅಲ್ಲದೇ ಕೇಂದ್ರ ಸಚಿವ ಸ್ಥಾನದ ಕೆಲಸದ ಜೊತೆ ಮಂಡ್ಯ ಜಿಲ್ಲೆಯ ಜನರ ಕೈಗೆ ಕುಮಾರಸ್ವಾಮಿ ಅವರು ಸಿಗಬೇಕಾಗಿದೆ. ಇದನ್ನೂ ಓದಿ: ಮಾಸಾಂತ್ಯಕ್ಕೆ ಬನ್ನೇರುಘಟ್ಟದಲ್ಲಿ ಚಿರತೆ ಸಫಾರಿ: ಈಶ್ವರ ಖಂಡ್ರೆ

  • ಕಾವೇರಿ ವಿಚಾರದಲ್ಲಿ ಸುಪ್ರೀಂ ತೀರ್ಪು ಕರ್ನಾಟಕಕ್ಕೆ ಗಾಯದ ಮೇಲೆ ಬರ ಎಳೆದಂತಾಗಿದೆ: ಸಿ.ಟಿ.ರವಿ

    ಕಾವೇರಿ ವಿಚಾರದಲ್ಲಿ ಸುಪ್ರೀಂ ತೀರ್ಪು ಕರ್ನಾಟಕಕ್ಕೆ ಗಾಯದ ಮೇಲೆ ಬರ ಎಳೆದಂತಾಗಿದೆ: ಸಿ.ಟಿ.ರವಿ

    ಬೆಂಗಳೂರು: ಕಾವೇರಿ (Cauvery Water Dispute) ವಿಚಾರದಲ್ಲಿ ಸುಪ್ರೀಂ ಕೋರ್ಟ್‌ (Supreme Court) ಕೊಟ್ಟ ತೀರ್ಪು ಕರ್ನಾಟಕಕ್ಕೆ ಗಾಯದ ಮೇಲೆ ಬರ ಎಳೆದಂತೆ ಆಗಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ (C.T.Ravi) ಹೇಳಿದರು.

    ಕಾವೇರಿ ವಿಚಾರದಲ್ಲಿ ರಾಜಕಾರಣ ಮಾಡಬೇಕೆಂಬ ದುರುದ್ದೇಶ ನಮಗೆ ಇಲ್ಲ. ಕಾಂಗ್ರೆಸ್ ಸರ್ಕಾರದ ವೈಫಲ್ಯ ಮುಂದಿಡಬೇಕಾದ ಉದ್ದೇಶ ಇದೆ. ನಾವು 42% ರಷ್ಟು ಮಳೆ ಕೊರತೆ ಇದ್ದರು ಕೂಡ, ವಾಸ್ತವ ಪರಿಸ್ಥಿತಿ ವಿವರಿಸಲಿಲ್ಲ. ಸಂಕಷ್ಟದ ಸ್ಥಿತಿಯಲ್ಲಿ ಇದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್‌ ಶಾಕ್‌ – ತ.ನಾಡಿಗೆ ನಿತ್ಯ 5,000 ಕ್ಯೂಸೆಕ್‌ ನೀರು ಹರಿಸುವಂತೆ ಸೂಚನೆ

    ಸುಪ್ರೀಂ ಕೋರ್ಟ್‌ನಲ್ಲೂ ನಮಗೆ ಸಹಾಯ ಆಗಲಿಲ್ಲ. ತಮಿಳುನಾಡು ಕೇಳುವ ಮುಂಚೆಯೇ ಜೂನ್‌ನಿಂದಲೇ ನೀರು ಬಿಡಲು ಶುರು ಮಾಡಿದ್ದೇಕೆ? ನನಗೆ ಸಂಶಯ ಇರೋದು, ಡಿಎಂಕೆ ಬೆದರಿಕೆ ಹಾಕಿರಬಹುದಾ? ಹೈಕಮಾಂಡ್ ಒತ್ತಡ ಇತ್ತಾ? ನೀರು ಬಿಟ್ಟು ಪಂಚಾಯಿತಿ ಕರೆಯುವಂತೆ ಮಾಡಿದ್ರಿ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

    ನೀರು ಬಿಟ್ಟ ಮೇಲೆ ಸರ್ವಪಕ್ಷ ಸಭೆ ಕರೆದ್ರಿ. ನೀರು ಬಿಟ್ಟ ಮೇಲೆ ಸಂಸದರ ಸಭೆ ಕರೆದ್ರಿ. ಎಲ್ಲ ಆದ್ಮೇಲೆ ನಿಮ್ಮ ಬೇಡಿಕೆ ಮುಂದಿಟ್ಟಿದ್ದೀರಿ. ಕಾಂಗ್ರೆಸ್ ರಾಜಕೀಯ ನಿರ್ಣಯಗಳಿಗಾಗಿ ಕರ್ನಾಟಕ ಬಲಿಪಶು ಮಾಡಿದ್ದಾರೆ. ವಾಸ್ತವಿಕ ಸಂಕಷ್ಟದ ಪರಿಸ್ಥಿತಿಯನ್ನ ಸುಪ್ರೀಂ ಕೋರ್ಟ್‌ಗೂ ಮನವರಿಕೆ ಮಾಡಿಕೊಡಲು ಆಗಲಿಲ್ಲ ಎಂದು ಬೇಸರಿಸಿದರು. ಇದನ್ನೂ ಓದಿ: ಕಾಂಗ್ರೆಸ್, ಬಿಜೆಪಿಯಿಂದ ಪ್ರತ್ಯೇಕ ಗಣೇಶನ ಪ್ರತಿಷ್ಠಾಪನೆ – ವಿಸರ್ಜನೆ ವೇಳೆ ಗುಂಪು ಘರ್ಷಣೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾವೇರಿ ವಿಚಾರವಾಗಿ CWMA ಆದೇಶಕ್ಕೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದೇವೆ: ಸಿಎಂ ಸಿದ್ದರಾಮಯ್ಯ

    ಕಾವೇರಿ ವಿಚಾರವಾಗಿ CWMA ಆದೇಶಕ್ಕೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದೇವೆ: ಸಿಎಂ ಸಿದ್ದರಾಮಯ್ಯ

    ನವದೆಹಲಿ: ಕಾವೇರಿ ನದಿಯಿಂದ ಹದಿನೈದು ದಿನಗಳ ಕಾಲ ನಿತ್ಯ ಐದು ಸಾವಿರ ಕ್ಯೂಸೆಕ್ ನೀರು ಹರಿಸಲು CWMA (ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ) ಆದೇಶ ನೀಡಿದ್ದು, ಈ ಆದೇಶಕ್ಕೆ ತಡೆ ಕೋರಿ ಸುಪ್ರೀಂ ಕೋರ್ಟ್‌ಗೆ (Supreme Court) ಅರ್ಜಿ ಸಲ್ಲಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

    ನವದೆಹಲಿಯ ಖಾಸಗಿ ಹೋಟೇಲ್‌ನಲ್ಲಿ ನಡೆದ ಸರ್ವ ಪಕ್ಷ ಸಂಸದರ ಸಭೆ ಬಳಿಕ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಯುವ ಕೆಲಸ ಮಾಡಲಾಗುವುದು ಎಂದು ಭರವಸೆ‌ ನೀಡಿದರು. ಮಳೆಯ ಕೊರತೆ ಅವಧಿಯಲ್ಲಿ ಸಂಕಷ್ಟ ಸೂತ್ರ ಇಲ್ಲದಿರುವುದು ಸಮಸ್ಯೆ, ಈ ಸಂಕಷ್ಟ ಹೆಚ್ಚಲು ಕಾರಣವಾಗಿದೆ. ಕೇಂದ್ರ ಜಲ ಸಂಪನ್ಮೂಲ ಸಚಿವರ ಜತೆ ಸಂಜೆ ಸಭೆ ನಡೆಸುತ್ತಿದ್ದೇವೆ. ಎರಡೂ ರಾಜ್ಯದವರನ್ನು ಕರೆದು ಅಹವಾಲು ಕೇಳುವ ಅಧಿಕಾರ ವ್ಯಾಪ್ತಿ ಪ್ರಧಾನಿಯವರಿಗೆ ಇದೆ. ಹೀಗಾಗಿ ನಾವು ಪ್ರಧಾನಿ ಅವರ ಮಧ್ಯಪ್ರವೇಶಕ್ಕೆ ಮನವಿ ಮಾಡಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಕಾವೇರಿ ನೀರು ಹಂಚಿಕೆ ಸಂಕಷ್ಟ – ದಿಲ್ಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಭೇಟಿಯಾದ ಡಿಕೆಶಿ

    ಈಗಾಗಲೇ ರಾಜ್ಯದಲ್ಲಿ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಗುರುತಿಸಿದ್ದೇವೆ. 123 ವರ್ಷಗಳಲ್ಲೇ ಆಗಸ್ಟ್ ತಿಂಗಳಿನಲ್ಲಿ ಅತಿ ಕಡಿಮೆ ಮಳೆ ದಾಖಲಾಗಿದೆ. ವಾಡಿಕೆಗಿಂತ ಅತಿ ಕಡಿಮೆ ಮಳೆ ಸಂಕಷ್ಟ ಹೆಚ್ಚಲು ಕಾರಣ. 177.2 TMC ನೀರು ಸಾಮಾನ್ಯ ವರ್ಷದಲ್ಲಿ, ಮಳೆ ಚೆನ್ನಾಗಿದ್ದಾಗ ನೀರು ಬಿಡಬೇಕು ಎಂದು ಹೇಳಿದೆ. ಆದರೆ ಇಂಥಾ ಸಂಕಷ್ಟದ ಸಂದರ್ಭದಲ್ಲಿ ಎಷ್ಟು ನೀರು ಬಿಡಬೇಕು ಎನ್ನುವ ಸೂತ್ರ ಇಲ್ಲದಿರುವುದು ಸಮಸ್ಯೆಯಾಗಿದೆ. ನಮಗೆ ಕುಡಿಯುವ ನೀರು, ಬೆಳೆ ರಕ್ಷಣೆ, ಕೈಗಾರಿಕೆಗೂ ನೀರಿಲ್ಲ. ಹೀಗಾಗಿ ನಾವು ಬಹಳ ಕಷ್ಟದಲ್ಲಿದ್ದೇವೆ ಎಂದು ತಿಳಿಸಿದ್ದಾರೆ.

    CWMA, CWRA ಮುಂದೆ ಸಮರ್ಥವಾಗಿ ನಮ್ಮ ವಾಸ್ತವ ಪರಿಸ್ಥಿತಿಯನ್ನು ಮಂಡಿಸಿದ್ದೇವೆ. ತಮಿಳುನಾಡು ವಾದ ವಿರೋಧಿಸಿ ಸುಪ್ರೀಂ ಕೋರ್ಟ್‌ನಲ್ಲಿ ನಮ್ಮ ತಕರಾರು ಮಂಡಿಸಿದ್ದೇವೆ. ಒಟ್ಟು ಮೂರು ಬಾರಿ ಸರ್ವ ಪಕ್ಷ ಸಭೆ ನಡೆಸಿದ್ದೇವೆ. 5 ಸಾವಿರ ಕ್ಯೂಸೆಕ್ಸ್ ನೀರು ಬಿಡಲಾಗುತ್ತಿಲ್ಲ ಎಂದು CWMA ಮುಂದೆಯೂ ಮನವಿ ಸಲ್ಲಿಸಲಿದ್ದೇವೆ. 10 ಸಾವಿರ ಕ್ಯೂಸೆಕ್ಸ್ ನೀರು ಬಿಡಬೇಕು ಎನ್ನುವ ಆದೇಶ ಬಂದಾಗ, 5 ಸಾವಿರ ಕ್ಯೂಸೆಕ್ಸ್ ನೀರು ಬಿಡಬೇಕು ಅಂದಾಗೆಲ್ಲಾ ಒಟ್ಟು ಮೂರು ಬಾರಿ ನಾವು ಸರ್ವ ಪಕ್ಷ ಸಭೆ ಕರೆದಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಕರ್ನಾಟಕ ಸರ್ಕಾರಕ್ಕೆ ಮತ್ತೆ ಕಾವೇರಿ ಶಾಕ್ – ತ.ನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಹರಿಸಲು ಆದೇಶ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾವೇರಿ ನೀರು ಹಂಚಿಕೆ ಸಂಕಷ್ಟ – ದಿಲ್ಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಭೇಟಿಯಾದ ಡಿಕೆಶಿ

    ಕಾವೇರಿ ನೀರು ಹಂಚಿಕೆ ಸಂಕಷ್ಟ – ದಿಲ್ಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಭೇಟಿಯಾದ ಡಿಕೆಶಿ

    ನವದೆಹಲಿ: ತಮಿಳುನಾಡಿಗೆ (Tamil Nadu) ಕಾವೇರಿ ನೀರು (Cauvery Water Issue) ಹರಿಸುವ ವಿಚಾರವಾಗಿ ಕರ್ನಾಟಕಕ್ಕೆ ಸಂಕಷ್ಟ ಎದುರಾಗಿದೆ. ಈ ಸಂಬಂಧ ಸಮಾಲೋಚನೆ ನಡೆಸಲು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಅವರನ್ನು ಭೇಟಿಯಾದರು.

    ಮಂಗಳವಾರ ತಡರಾತ್ರಿ ದೆಹಲಿಯ ಜೋಶಿ ಅವರ ನಿವಾಸದಲ್ಲಿ ಡಿಕೆಶಿ (D.K.Shivakumar) ಭೇಟಿಯಾದರು. ಈ ವೇಳೆ ಸಚಿವ ಟಿ.ಬಿ.ಜಯಚಂದ್ರ, ಸಂಸದರಾದ ಡಿ.ಕೆ.ಸುರೇಶ್‌, ಜಿ.ಸಿ.ಚಂದ್ರಶೇಖರ್‌ ಇದ್ದರು. ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕೇಂದ್ರ ಸಚಿವರ ಜೊತೆ ಸಮಾಲೋಚನೆ ನಡೆಸಿದರು. ಇದನ್ನೂ ಓದಿ: ಮಹಿಳಾ ಮೀಸಲಾತಿ ಶ್ರೇಯಸ್ಸು ಮೋದಿಗೆ ಸಲ್ಲಬೇಕು: ಕಂಗನಾ

    ಸೋಮವಾರ ನಡೆದ ಸಭೆಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡು ಪರವಾಗಿ ಆದೇಶ ಹೊರಡಿಸಿತ್ತು. ಸಿಡಬ್ಲ್ಯೂಆರ್‌ಸಿ ಆದೇಶದಂತೆ ಕರ್ನಾಟಕ ನಿತ್ಯ 5,000 ಕ್ಯೂಸೆಕ್‌ ನೀರನ್ನು 15 ದಿನಗಳ ಕಾಲ ತಮಿಳುನಾಡಿಗೆ ಹರಿಸಬೇಕು ಎಂದು ಸೂಚಿಸಿತ್ತು.

    ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕಾನೂನು ಹೋರಾಟಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಸೆ.21 ರಂದು ಸುಪ್ರೀಂ ಕೋರ್ಟ್‌ನಲ್ಲಿ ಕಾವೇರಿ ಅರ್ಜಿ ವಿಚಾರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ ವಕೀಲರ ಜೊತೆ ತಮಿಳುನಾಡು ಜಲಸಂಪನ್ಮೂಲ ಸಚಿವ ದುರೈಮುರುಗನ್‌ ಇಂದು ಸಭೆ ನಡೆಸಲಿದ್ದಾರೆ. ಇದನ್ನೂ ಓದಿ: ಸಿಎಂ ನೇತೃತ್ವದಲ್ಲಿ ದೆಹಲಿಯಲ್ಲಿ ರಾಜ್ಯದ ಎಲ್ಲಾ ಸಂಸದರೊಂದಿಗೆ ಸಭೆ: ಡಿಕೆಶಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೊಮ್ಮಾಯಿ ಅವರದ್ದು ನಮ್ಮನ್ನು ಇಕ್ಕಟ್ಟಿಗೆ ಸಿಲುಕಿಸುವ ಸಲಹೆ: ಡಿ.ಕೆ.ಶಿವಕುಮಾರ್

    ಬೊಮ್ಮಾಯಿ ಅವರದ್ದು ನಮ್ಮನ್ನು ಇಕ್ಕಟ್ಟಿಗೆ ಸಿಲುಕಿಸುವ ಸಲಹೆ: ಡಿ.ಕೆ.ಶಿವಕುಮಾರ್

    ಬೆಂಗಳೂರು: ಕಾವೇರಿ ನೀರು (Cauvery Water Dispute) ವಿಚಾರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ನಮ್ಮನ್ನು ಇಕ್ಕಟ್ಟಿಗೆ ಸಿಲುಕಿಸುವ ಸಲಹೆಯನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡುತ್ತಿದ್ದಾರೆ. ನೀರು ಬಿಡಲು ನಾವು ತಯಾರಿಲ್ಲ. ಹೀಗಾಗಿ ಕಾನೂನು ಹೋರಾಟ ನಡೆಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K.Shivakumar) ಹೇಳಿದ್ದಾರೆ.

    ಸದಾಶಿವನಗರದ ನಿವಾಸದ ಬಳಿ ಮಾಧ್ಯಮ ಪ್ರತಿಕ್ರಿಯೆ ನೀಡಿದ ಅವರು, ನೀರು ಬಿಡುಗಡೆ ಮಾಡದೆ ಕಾನೂನು ಹೋರಾಟ ನಡೆಸಬೇಕು ಎಂಬ ಬೊಮ್ಮಾಯಿ (Basavaraj Bommai) ಅವರ ಸಲಹೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಬೊಮ್ಮಾಯಿ ಅವರ ಕಾಲದಲ್ಲಿ ಎಷ್ಟು ನೀರು ಬಿಟ್ಟಿದ್ದರು ಎನ್ನುವ ದಾಖಲೆಗಳು ನಮ್ಮ ಬಳಿ ಇವೆ. ಆದರೆ ಸುಪ್ರೀಂ ಕೋರ್ಟನ್ನು ಗಮನದಲ್ಲಿ ಇರಿಸಿಕೊಳ್ಳಬೇಕಾಗುತ್ತದೆ. ನೀರು ಬಿಡಬೇಡಿ ಎಂದು ಬೊಮ್ಮಾಯಿ ಹೇಳುತ್ತಾರೆ. ಕಾವೇರಿ ನೀರು ನಿರ್ವಹಣಾ ಸಮಿತಿಯ ಆದೇಶ ಪಾಲನೆ ಮಾಡಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದರೆ, ಬೊಮ್ಮಾಯಿ ಹಾಗೂ ನನ್ನ ಬಳಿ ಯಾವ ಆಯ್ಕೆ ಇದೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಕೆಟ್ಟ ಸರ್ಕಾರ ಇದೆ, ಇದನ್ನು ತೆಗೆಯಲು ಮೈತ್ರಿ ಅವಶ್ಯಕ: ಹೆಚ್‌ಡಿಕೆ

    ಬೊಮ್ಮಾಯಿ ಅವರು ರಾಜಕಾರಣ ಬದಿಗಿಡಲಿ. ಕೂಡಲೇ ಪ್ರಧಾನಿಗಳಿಗೆ ಮಧ್ಯಸ್ತಿಕೆ ವಹಿಸುವಂತೆ ಒತ್ತಡ ತರಲಿ. ನೀರು ನಿರ್ವಹಣಾ ಸಮಿತಿಗೂ ಮನವಿ ಸಲ್ಲಿಸಲಿ. ರಾಜ್ಯದ ಹಿತವನ್ನು ಅವರು ಮೊದಲು ಕಾಪಾಡಲಿ, ರಾಜಕಾರಣ ಬದಿಗಿಡಲಿ. ನಾನು ಶೀಘ್ರದಲ್ಲೇ ದೆಹಲಿಗೆ ಹೋಗಲಿದ್ದು, ಸಂಸದರನ್ನು ಭೇಟಿ ಮಾಡಿ ಮನವಿ ಮಾಡಲಿದ್ದೇನೆ.‌ ಮಧ್ಯಸ್ತಿಕೆ ವಹಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುತ್ತೇವೆ ಎಂದಿದ್ದಾರೆ.

    ರಾಜ್ಯಸಭೆಯಲ್ಲಿ ಸೋಮವಾರ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ನ್ಯಾಯಲಯದ ಹೊರಗಡೆ ಇತ್ಯರ್ಥ ಮಾಡಿಕೊಳ್ಳಿ ಎಂದು ಸಲಹೆ ನೀಡಿರುವುದು ಸರಿಯಾಗಿದೆ. ಹಿರಿತನದ ಅನುಭವದ ಮೇಲೆ ಅವರು ಮಾತನಾಡಿದ್ದಾರೆ. ಅವರ ಸಲಹೆ ಸ್ವೀಕಾರಾರ್ಹವಾಗಿದೆ. ನೀರಾವರಿ ಸಚಿವರಾಗಿದ್ದ ಬೊಮ್ಮಾಯಿ ಅವರು ಉಪಯುಕ್ತ ಸಲಹೆ ನೀಡಲಿ. ಅವರೇ ನೇಮಕ ಮಾಡಿದ ಕಾನೂನು ತಜ್ಞರೇ ಈಗಲೂ ಇದ್ದಾರೆ. ಅವರ ಮಾತನ್ನು ಕೇಳಬೇಕೊ ಅಥವಾ ಇವರ ಮಾತನ್ನು ಕೇಳಬೇಕೊ? ಒಳ್ಳೆ ಸಲಹೆ ನೀಡಿದರೆ ಮಾತ್ರ ಅವರ ಮಾತನ್ನು ಕೇಳುತ್ತೇವೆ ಎಂದು ಬಿಜೆಪಿ ನಾಯಕರಿಗೆ ಟಾಂಗ್‌ ಕೊಟ್ಟಿದ್ದಾರೆ. ಇದನ್ನೂ ಓದಿ: ತಮಿಳುನಾಡಿಗೆ ನೀರು ಬಿಟ್ಟು ಸುಪ್ರೀಂನಲ್ಲಿ ವಾದ ಮಾಡಲು ಏನಿದೆ?: ಬೊಮ್ಮಾಯಿ

    ಹಿರಿಯ ವಕೀಲರಾದ ನಾರಿಮನ್ ಅವರ ಸಲಹೆ ವಿಚಾರ ಇರಲಿ. ಈಗಿರುವ ತಂಡದಲ್ಲಿ ಅವರ ಶಿಷ್ಯರೇ ಇದ್ದಾರೆ, ಸಲಹೆ ಕೇಳಿದ್ದೇವೆ. ಇದರ ಬಗ್ಗೆ ಆನಂತರ ಮಾತನಾಡುವೆ ಎಂದು ಡಿಕೆಶಿ ಪ್ರತಿಕ್ರಿಯಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕರ್ನಾಟಕ ಸರ್ಕಾರಕ್ಕೆ ಮತ್ತೆ ಕಾವೇರಿ ಶಾಕ್ – ತ.ನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಹರಿಸಲು ಆದೇಶ

    ಕರ್ನಾಟಕ ಸರ್ಕಾರಕ್ಕೆ ಮತ್ತೆ ಕಾವೇರಿ ಶಾಕ್ – ತ.ನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಹರಿಸಲು ಆದೇಶ

    ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಕರ್ನಾಟಕಕ್ಕೆ ಮತ್ತೆ ಶಾಕ್ ನೀಡಲಾಗಿದೆ. ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲು ಕರ್ನಾಟಕಕ್ಕೆ‌ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಲಾಗಿದೆ.

    ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದ ಇಂದು (ಸೋಮವಾರ) ಸಭೆ ನಡೆಸಲಾಯಿತು. ಸಭೆಯಲ್ಲಿ, ಎರಡು ರಾಜ್ಯಗಳನ್ನು ನಿಭಾಯಿಸಲು ಸಿಡಬ್ಲ್ಯೂಆರ್‌ಸಿ ಆದೇಶ ಪಾಲಿಸಬೇಕು. 15 ದಿನ 5,000 ಕ್ಯೂಸೆಕ್ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. ಇದನ್ನೂ ಓದಿ: ಕಾವೇರಿ ವಿಚಾರವಾಗಿ ಸರ್ವ ಪಕ್ಷ ನಿಯೋಗ ಭೇಟಿಗೆ ಕೇಂದ್ರ ಸಮಯ ಕೊಡ್ತಿಲ್ಲ: ಡಿಕೆಶಿ

    ಸಭೆ ಆರಂಭದ ವೇಳೆ, ನೀರಿಗಾಗಿ ತಮಿಳುನಾಡು ಪಟ್ಟು ತೀವ್ರಗೊಳಿಸಿತ್ತು. ನಿತ್ಯ 12,500 ಕ್ಯೂಸೆಕ್ ನೀರು ಹರಿಸಲು ಪಟ್ಟು ಹಿಡಿದಿತ್ತು. ಆದರೆ ನೀರು ನಿರ್ವಹಣಾ ಪ್ರಾಧಿಕಾರ, ಸಿಡಬ್ಲ್ಯೂಆರ್‌ಸಿ ಆದೇಶವನ್ನು ಮುಂದುವರಿಸುವಂತೆ ಸೂಚಿಸಿದೆ.

    ಪ್ರಾಧಿಕಾರದ ಆದೇಶ ತಮಿಳುನಾಡಿನ ಪರ ಬಂದಿದೆ. ಈ ಆದೇಶದಿಂದ ಕರ್ನಾಟಕ ಸರ್ಕಾರಕ್ಕೆ ಹಿನ್ನಡೆಯಾಗಿದ್ದು, ಮತ್ತೆ ಕಾವೇರಿ ಸಂಕಷ್ಟ ಎದುರಾಗಿದೆ. ಇದನ್ನೂ ಓದಿ: ಕಾವೇರಿ ನೀರು ತಮಿಳುನಾಡಿಗೆ ಬಿಟ್ಟು ರಾಜ್ಯದ ಜನರ ಮೇಲೆ ಸರ್ಕಾರ ದಬ್ಬಾಳಿಕೆ ಮಾಡ್ತಿದೆ: ಕುಮಾರಸ್ವಾಮಿ

    ನೀರು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ.ಹಲ್ದಾರ್ ನೇತೃತ್ವದಲ್ಲಿ ತುರ್ತು ಸಭೆ ನಡೆಯಿತು. ಕಾವೇರಿ ನೀರು ನಿಯಂತ್ರಣ ಸಮಿತಿ ಅಧ್ಯಕ್ಷ ವಿನೀತ್ ಗುಪ್ತಾ ಹಾಜರಿದ್ದರು. 24ನೇ ಪ್ರಾಧಿಕಾರದ ಸಭೆಯಲ್ಲಿ ತಮಿಳುನಾಡು ಜಲಸಂಪನ್ಮೂಲ ಕಾರ್ಯದರ್ಶಿ ಸಂದೀಪ್ ಸಸೇನಾ, ಕಾವೇರಿ ತಾಂತ್ರಿಕ ಸಮಿತಿ ಅಧ್ಯಕ್ಷ ಸುಬ್ರಮಣಿಯನ್, ಕೇರಳದ ಅಧಿಕಾರಿಗಳೂ ಖುದ್ದು ಹಾಜರಿದ್ದರು.

    ಕರ್ನಾಟಕ ಮತ್ತು ಪುದುಚೇರಿಯ ಅಧಿಕಾರಿಗಳು ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗಿಯಾಗಿದ್ದರು. ಸುಮಾರು 2 ಗಂಟೆಗಳ ಕಾಲ ಸಭೆ ನಡೆಯಿತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೆ.18 ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ತುರ್ತು ಸಭೆ

    ಸೆ.18 ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ತುರ್ತು ಸಭೆ

    ನವದೆಹಲಿ: ಕರ್ನಾಟಕದಿಂದ (Karnataka) ತಮಿಳುನಾಡಿಗೆ (Tamil Nadu) ಕಾವೇರಿ ನೀರು (Cauvery Water Dispute) ಹರಿಸುವ ವಿಚಾರಕ್ಕೆ ಸಂಬಂಧಿಸದಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೆ.18 ರಂದು ತುರ್ತು ಸಭೆ ಕರೆದಿದೆ. ಕಾವೇರಿ ವಿಚಾರದಲ್ಲಿ ಮಧ್ಯಪ್ರವೇಶ ಮಾಡುವಂತೆ ಸಿಎಂ ಸಿದ್ದರಾಮಯ್ಯ, ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್‌ಗೆ ಪತ್ರ ಬರೆದ ಬೆನ್ನಲ್ಲೇ ತುರ್ತು ಸಭೆಗೆ ದಿನಾಂಕ ನಿಗದಿಯಾಗಿದೆ.

    ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ. ಹಲ್ದಾರ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಅಚ್ಚುಕಟ್ಟು ಪ್ರದೇಶದ ಎಲ್ಲ ರಾಜ್ಯದ ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ. ತಮಿಳುನಾಡಿಗೆ ಹದಿನೈದು ದಿನಗಳ ಕಾಲ ನಿತ್ಯ ಐದು ಸಾವಿರ ಕ್ಯೂಸೆಕ್ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ಮೂರನೇ ಬಾರಿಗೆ ಆದೇಶ ನೀಡಿದ ಬಳಿಕ ಈ ಸಭೆ ನಡೆಯುತ್ತಿದ್ದು, ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಇದನ್ನೂ ಓದಿ: ಹಾಲಿಗಳನ್ನ ಸೇರಿಸಿಕೊಂಡ ನಾವೇ ಅಧಿಕಾರಕ್ಕೆ ಬರಲಿಲ್ಲ, ನೀವು ಮಾಜಿಗಳನ್ನು ಸೇರಿಸಿಕೊಂಡಿದ್ದೀರಿ- ಡಿಕೆಶಿಗೆ ಸಿಟಿ ರವಿ ತಿರುಗೇಟು

    ಪ್ರಾಧಿಕಾರದ ಸಭೆಯಲ್ಲಿ ನೀರು ನಿಯಂತ್ರಣ ಸಮಿತಿಯ ಆದೇಶವನ್ನು ಕರ್ನಾಟಕ ಪ್ರಶ್ನಿಸಲಿದೆ. ಅಚ್ಚುಕಟ್ಟು ಪ್ರದೇಶದಲ್ಲಿರುವ ಅಣೆಕಟ್ಟುಗಳಲ್ಲಿ ನೀರಿನ ಕೊರತೆ ಅಗಾಧವಾಗಿದ್ದು, ನೀರು ಹರಿಸಲು ನೀರು ನಿಯಂತ್ರಣ ಸಮಿತಿ ನಿರಂತರ ಆದೇಶ ನೀಡುತ್ತಿದೆ. ಇದರಿಂದ ಭವಿಷ್ಯದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಲಿದೆ ಎಂದು ಆಕ್ಷೇಪ ವ್ಯಕ್ತಪಡಿಸುವ ಸಾಧ್ಯತೆ ಇದೆ.

    ಇದೇ ರೀತಿಯ ಆಕ್ಷೇಪವನ್ನು ಕಾವೇರಿ ನೀರು ನಿಯಂತ್ರಣ ಸಭೆಯಲ್ಲಿ ಕರ್ನಾಟಕದ ಅಧಿಕಾರಿಗಳು ವ್ಯಕ್ತಪಡಿಸಿದರೂ ಫಲಿತಾಂಶ ಸಿಕ್ಕಿರಲಿಲ್ಲ. ತಮಿಳುನಾಡು ಕಡಿಮೆ ನೀರು ಬಿಡುವ ಆರೋಪ ಮಾಡುತ್ತಿದ್ದು, ಹೆಚ್ಚಿನ ನೀರಿಗೆ ಪಟ್ಟು ಹಿಡಿದಿದೆ. ಸೆ.21 ರಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ವಿಚಾರಣೆಗೆ ಬರಲಿದೆ. ಅದಕ್ಕೂ ಮುನ್ನ ಸಭೆ ನಡೆಸಿ, ಸಭೆಯ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲು ಪ್ರಾಧಿಕಾರ ನಿರ್ಧರಿಸಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧ ಮುಂದುವರಿದ ಎನ್‌ಕೌಂಟರ್‌ – ಓರ್ವ ಯೋಧ ನಾಪತ್ತೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಮಿಳುನಾಡಿಗೆ ಕಾವೇರಿ ನೀರು ಬಿಡಲ್ಲ: ಸರ್ವಪಕ್ಷ ಸಭೆಯಲ್ಲಿ ಒಮ್ಮತದ ನಿರ್ಣಯ

    ತಮಿಳುನಾಡಿಗೆ ಕಾವೇರಿ ನೀರು ಬಿಡಲ್ಲ: ಸರ್ವಪಕ್ಷ ಸಭೆಯಲ್ಲಿ ಒಮ್ಮತದ ನಿರ್ಣಯ

    ಬೆಂಗಳೂರು: ತಮಿಳುನಾಡಿಗೆ (Tamil Nadu) ಕಾವೇರಿ ನೀರು (Cauvery Water) ಹರಿಸದಿರುವ ಬಗ್ಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ. ಈ ಸಂಬಂಧ ಸಿಡಬ್ಲ್ಯೂಆರ್‌ಸಿಗೆ (CWRC) ಪತ್ರ ಬರೆಯಲು ಸರ್ಕಾರ ನಿರ್ಧರಿಸಿದೆ.

    ತಮಿಳುನಾಡಿಗೆ (TamilNadu) ಮತ್ತೆ 15 ದಿನಗಳ ಕಾಲ ನಿತ್ಯ 5 ಸಾವಿರ ಕ್ಯೂಸೆಕ್‌ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಕಾವೇರಿ ನದಿ ನೀರು ನಿಯಂತ್ರಣಾ ಸಮಿತಿ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಕಾವೇರಿ ನೀರು ಹರಿಸುವ ಸಂಬಂಧ ವಿಶೇಷ ಸರ್ವಪಕ್ಷ ಸಭೆ ನಡೆಸಲಾಯಿತು. ಇದನ್ನೂ ಓದಿ: ತಮಿಳುನಾಡಿಗೆ ನೀರು – ಇಂದು ಸರ್ವಪಕ್ಷ ಸಭೆ ಕರೆದ ಸರ್ಕಾರ

    ಸಭೆ ಆರಂಭದಲ್ಲಿ ಸಿಡಬ್ಲ್ಯೂಆರ್‌ಸಿ ಆದೇಶ ಪಾಲನೆ ಮಾಡಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು. ಆದೇಶ ಪಾಲನೆ ಮಾಡದಿದ್ದರೆ ಎದುರಾಗುವ ಕಾನೂನು ತೊಡಕುಗಳ ಬಗ್ಗೆಯೂ ಆರಂಭದಲ್ಲಿ ಚರ್ಚಿಸಲಾಯಿತು. ನಂತರ ವಿಪಕ್ಷ ನಾಯಕರ ಸಲಹೆಗಳನ್ನು ಸಿಎಂ, ಡಿಸಿಎಂ ಪಡೆದರು.

    ಕಾವೇರಿ‌ ನೀರು ಹರಿಸದಂತೆ ಸಭೆಯಲ್ಲಿ ಅಭಿಪ್ರಾಯ ಕೇಳಿಬಂತು. ತಮಿಳುನಾಡಿಗೆ ಕಾವೇರಿ‌ ನೀರು ಬಿಡುವುದು ಬೇಡ. ಸಿಡಬ್ಲ್ಯೂಆರ್‌ಸಿ ಆದೇಶ ಪಾಲಿಸಬೇಡಿ. ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯದ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಮನವರಿಕೆ ಮಾಡಿಕೊಡುವಂತೆ ಬಿಜೆಪಿ ನಾಯಕರು ಸರ್ಕಾರಕ್ಕೆ ಸಲಹೆ ನೀಡಿದರು. ಇದನ್ನೂ ಓದಿ: ಸರ್ಕಾರ ನೀರು ಬಿಡಲ್ಲವೆಂದು ಗಟ್ಟಿಯಾಗಿ ನಿಂತ್ರೆ ನಾವೂ ಜೊತೆ ನಿಲ್ಲುತ್ತೇವೆ: ಬೊಮ್ಮಾಯಿ

    ಇದೇ 21 ರಂದು ಸುಪ್ರೀಂ ಕೋರ್ಟ್‌ನಲ್ಲಿ ಕಾವೇರಿ ನದಿ ವಿವಾದ ವಿಚಾರಣೆಗೆ ಬರಲಿದೆ. ತಮಿಳುನಾಡಿಗೆ ನೀರು ಹರಿಸದಿರುವ ನಿರ್ಣಯ ತೆಗೆದುಕೊಂಡರೆ, ಸರ್ಕಾರದ ಬೆನ್ನಿಗೆ ನಿಲ್ಲುವುದಾಗಿ ಬಿಜೆಪಿ ನಾಯಕರು ತಿಳಿಸಿದರು. ಗಂಭೀರ ಚರ್ಚೆಯ ನಂತರ ಸರ್ವಪಕ್ಷ ಸಭೆಯಲ್ಲಿ ತಮಿಳುನಾಡಿಗೆ ನೀರು ಬಿಡದಿರಲು ನಿರ್ಣಯ ಕೈಗೊಳ್ಳಲಾಯಿತು. ಸರ್ವ ಸದಸ್ಯರ ಒಮ್ಮತದ ಅಭಿಪ್ರಾಯದಂತೆ ನೀರು ಹರಿಸದಿರುವ ನಿರ್ಧರಿಸಲಾಯಿತು.

    ಸಭೆಯಲ್ಲಿ ಡಿಸಿಎಂ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಸಣ್ಣ ನೀರಾವರಿ ಸಚಿವ ಎಸ್.ಎನ್. ಬೋಸರಾಜು, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಗೃಹ ಸಚಿವ ಡಾ. ಜಿ. ಪರಮೇಶ್ವರ್, ಕಾನೂನು ಸಚಿವ ಹೆಚ್.ಕೆ. ಪಾಟೀಲ್, ಸಚಿವರಾದ ಕೆ.ಹೆಚ್. ಮುನಿಯಪ್ಪ, ಕೆ.ಎನ್. ರಾಜಣ್ಣ, ಮಂಕಾಳ ವೈದ್ಯ, ರಾಮಲಿಂಗಾರೆಡ್ಡಿ, ಸಂಸದರಾದ ಪ್ರತಾಪಸಿಂಹ, ಸುಮಲತಾ ಅಂಬರೀಶ್, ಪಿ.ಸಿ. ಮೋಹನ್, ಲೇಹರ್ ಸಿಂಗ್, ಶಾಸಕರಾದ ಜನಾರ್ದನ ರೆಡ್ಡಿ, ದರ್ಶನ್ ಪುಟ್ಟಣ್ಣಯ್ಯ, ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಸಭೆಯಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಅರ್ಧ ಬೆಂಗಳೂರಿಗೆ ಇಂದು ನೀರಿನ ಪೂರೈಕೆಯಲ್ಲಿ ವ್ಯತ್ಯಯ

    ಮಾಜಿ ಸಿಎಂಗಳಾದ ಹೆಚ್.ಡಿ. ದೇವೇಗೌಡ, ಎಸ್.ಎಂ. ಕೃಷ್ಣ, ಬಿ.ಎಸ್.‌ ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ‌, ಸಂಸದ ನಳಿನ್ ಕುಮಾರ್ ಕಟೀಲ್ ಗೈರಾಗಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕರ್ನಾಟಕಕ್ಕೆ ಕುಡಿಯುವ ನೀರಿನ ಚಿಂತೆ; ತಮಿಳುನಾಡಿಗೆ ಬೆಳೆ ಬಾಡುವ ಚಿಂತೆ – 15 ದಿನ 5,000 ಕ್ಯೂಸೆಕ್ ಹರಿಸಲು CWRC ಸೂಚನೆ

    ಕರ್ನಾಟಕಕ್ಕೆ ಕುಡಿಯುವ ನೀರಿನ ಚಿಂತೆ; ತಮಿಳುನಾಡಿಗೆ ಬೆಳೆ ಬಾಡುವ ಚಿಂತೆ – 15 ದಿನ 5,000 ಕ್ಯೂಸೆಕ್ ಹರಿಸಲು CWRC ಸೂಚನೆ

    ನವದೆಹಲಿ: ಕಾವೇರಿ (Cauvery Water Dispute) ಅಚ್ಚುಕಟ್ಟು ಪ್ರದೇಶದಲ್ಲಿ ಬರದ ಛಾಯೇ ಆವರಿಸುತ್ತಿರುವ ಹೊತ್ತಲ್ಲಿ ತಮಿಳುನಾಡಿಗೆ (Tamil Nadu) ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ನಿರಂತರ ಆದೇಶ ನೀಡುತ್ತಿದೆ. ಇಂದು (ಮಂಗಳವಾರ) ಸಭೆ ನಡೆಸಿರುವ ಸಮಿತಿ ನಿತ್ಯ ಐದು ಸಾವಿರ ಕ್ಯೂಸೆಕ್‌ನಂತೆ ಹದಿನೈದು‌ ದಿನಗಳ ಕಾಲ ನೀರು ಹರಿಸಲು ಶಿಫಾರಸು ಮಾಡಿದೆ.

    ಆಗಸ್ಟ್ 29 ರ ಆದೇಶ ಅಂತ್ಯವಾದ ಹಿನ್ನೆಲೆ ಇಂದು ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಕಾವೇರಿ ನೀರು ನಿಯಂತ್ರಣ ಸಮಿತಿ ತನ್ನ ಹಳೆ ಆದೇಶವನ್ನು ಮುಂದಿನ ಹದಿನೈದು ದಿನ ಮುಂದುವರಿಸಲು ಸೂಚನೆ ನೀಡಿದೆ. ಸಮಿತಿಯ ಈ ಆದೇಶದಿಂದ ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಕುಡಿಯುವ ನೀರಿಗೆ ತತ್ವಾರ ಎದುರಿಸುವ ಸಾಧ್ಯತೆಗಳಿದೆ. ಇದನ್ನೂ ಓದಿ: ಸನಾತನ ಧರ್ಮದ ವಿರುದ್ಧ ಮಾತನಾಡುವವರ ನಾಲಿಗೆ, ಕಣ್ಣು ಕಿತ್ತುಹಾಕಬೇಕು: ಗಜೇಂದ್ರ ಸಿಂಗ್‌ ಶೇಖಾವತ್‌

    ಇಂದು ಸಭೆಯಲ್ಲಿ ಭಾಗಿಯಾಗಿದ್ದ ತಮಿಳುನಾಡು ಪರ ಅಧಿಕಾರಿಗಳು ಕೃಷಿ ಬಗ್ಗೆ ತಮಿಳುನಾಡು ಪ್ರಸ್ತಾಪಿಸಿದ್ದಾರೆ. ಕಳೆದ ಆದೇಶದಲ್ಲಿ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಹದಿನೈದು ದಿನ ಹರಿಸಲು ಸೂಚಿಸಿತ್ತು. ಆದರೆ ಕರ್ನಾಟಕ ನಿತ್ಯ 3,000-3,400 ಕ್ಯೂಸೆಕ್ ನೀರು ಮಾತ್ರ ಬಿಡುಗಡೆ ಮಾಡಿದೆ. ನೀರು ಬಿಡುಗಡೆ ವಿಳಂಬವಾಗುತ್ತಿರುವ ಹಿನ್ನೆಲೆ ಬೆಳೆಗಳು ನಾಶವಾಗುತ್ತಿದೆ ಎಂದು ಆರೋಪಿಸಿದ್ದು, 36.76 ಟಿಎಂಸಿ ಬಾಕಿ ನೀರು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದೆ.

    ಮಳೆಯ ಪ್ರಮಾಣ ಕಡಿಮೆ ಇರುವ ಹಿನ್ನೆಲೆ ಜಲಾಶಯಗಳಲ್ಲಿ ನೀರಿನ ಕೊರತೆಯಾಗಿದೆ. ತಮಿಳುನಾಡಿಗೆ ನೀರು ಹರಿಸಿದರೆ ಕುಡಿಯುವ ನೀರಿಗೆ ತತ್ವಾರ ಎದುರಿಸಬೇಕಾಗುತ್ತದೆ. ಹೀಗಾಗಿ ನೀರು ಬಿಡಲು ಸಾಧ್ಯವಿಲ್ಲ ಎಂದು ಪ್ರತಿಭಟಿಸಿದರು. ಅಂತಿಮವಾಗಿ ಸಭೆಯಲ್ಲಿ ನೀರು ಹರಿಸಲು ಸಮಿತಿ ಸೂಚನೆ ನೀಡಿದೆ. ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದ ಕರ್ನಾಟಕ ಸೆ.12 ರ ಬಳಿಕ ನೀರು ಹರಿಸಲು ಕಷ್ಟವಾಗಲಿದೆ ಎಂದು‌ ಹೇಳಿತ್ತು. ಈ ಬೆನ್ನಲ್ಲೇ ಸಮಿತಿ ಈಗ ನೀರು ಹರಿಸಲು ಸೂಚನೆ ನೀಡಿದ್ದು, ಈ ಆದೇಶವನ್ನು ಕರ್ನಾಟಕ ಪಾಲಿಸಲಿದ್ಯಾ ಎಂದು ಕಾದು ನೋಡಬೇಕಿದೆ. ಇದನ್ನೂ ಓದಿ: ಕೇರಳದಲ್ಲಿ ಇಬ್ಬರು ಅಸಹಜ ಸಾವು – ನಿಫಾ ಸೋಂಕು ಶಂಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]