Tag: Cauvery Water Issue

  • ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ – ಸಿಎಂ ಖಡಕ್‌‌ ಮಾತು

    ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ – ಸಿಎಂ ಖಡಕ್‌‌ ಮಾತು

    – ಜು.14ರಂದು ಡಿಸಿಎಂ ಡಿಕೆಶಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ

    ಬೆಂಗಳೂರು: ನಮ್ಮ ರಾಜ್ಯದ ಎಲ್ಲಾ ಜಲಾಶಯಗಳಲ್ಲಿ 60 ಟಿಎಂಸಿ ನೀರು ಮಾತ್ರ ಇದೆ. ನಮಗೆ ಕುಡಿಯಲು, ಬೇಸಾಯಕ್ಕೆ ನೀರಿನ ಅಗತ್ಯವಿದೆ. ಹೀಗಾಗಿ ಜುಲೈ ವರೆಗೂ ನೀರು (Cauvery Water) ಕೊಡಲು ಸಾಧ್ಯವಿಲ್ಲ ಅಂತ ಹೇಳಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ.

    ಜುಲೈ 31ರ ವರೆಗೆ ತಮಿಳುನಾಡಿಗೆ (Tamil Nadu) ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣಾ ಸಮಿತಿ (CWRC) ಶಿಫಾರಸು ಮಾಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದು ತುರ್ತು ಸಭೆ ನಡೆಸಿದರು. ಜಲ ಸಂಪನ್ಮೂಲ ಇಲಾಖೆಯೊಂದಿಗೆ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್, ಇಲಾಖೆಯ ಹಿರಿಯ ಅಧಿಕಾರಿಗಳು, ಕಾವೇರಿ ಕಣಿವೆ ಭಾಗದ ಸಚಿವರು ಭಾಗವಹಿಸಿದ್ದರು. ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಸಿಎಂ ಮಾತನಾಡಿದರು.

    ಕಾವೇರಿ ನೀರು ನೀರಾವರಿ ನಿಯಂತ್ರಣಾ ಸಮಿತಿ ನಿತ್ಯ 1 ಟಿಎಂಸಿ ನೀರು ತಮಿಳುನಾಡಿಗೆ ಬಿಡಲು ಸೂಚನೆ ನೀಡಿದೆ. ಆದ್ರೆ ಇಂದಿನ ಸಭೆಯಲ್ಲಿ ನಾವು ಪರಿಸ್ಥಿತಿ ವಿವರಿಸಿದ್ದೇವೆ. ಆದರೂ ಸಹ, ಮಳೆಯಿದ್ದರೂ ಈವರೆಗೆಗೆ 28% ನೀರು ಕೊರತೆ ನಮಗೆ ಇದೆ.ಇದನ್ನ ನಾವು ಸಭೆಯಲ್ಲಿ ಬಹಳ ಸ್ಪಷ್ಟವಾಗಿ ಹೇಳಿದ್ದೇವೆ. ನಮ್ಮ ನಿಲುವನ್ನೂ ಹೇಳಿದ್ದೇವೆ. ಯಾವುದೇ ತೀರ್ಮಾನ ಮಾಡಬಾರದು ಅಂತ ಮನವಿ ಮಾಡಿದ್ದೇವೆ. ಜುಲೈ ಕೊನೆವರೆಗೂ ಪರಿಸ್ಥಿತಿ ನೋಡಿಕೊಳ್ಳಬೇಕು ಅಂತ ಮನವಿ ಮಾಡಿದ್ದೇವೆ. ಇದರ ಹೊರತಾಗಿಯೂ ಸಿಡಬ್ಲ್ಯೂಆರ್‌ಸಿ ನಿತ್ಯ 1 ಟಿಎಂಸಿ ನೀರು ಬಿಡುವಂತೆ ಹೇಳಿದೆ ಎಂದು ವಿವರಿಸಿದ್ದಾರೆ.

    ನೀರು ಬಿಡಲು ಸಾಧ್ಯವಿಲ್ಲ:
    ಸದ್ಯ ಜುಲೈ ಅಂತ್ಯದವರೆಗೂ ಯಾವುದೇ ತೀರ್ಮಾನ ಮಾಡಬಾರದು ಅಂತ ಮನವಿ ಮಾಡಿದ್ದೇವೆ. ಕಾವೇರಿ ರಿವರ್ ಮ್ಯಾನೇಜ್ಮೆಂಟ್ ಅಥಾರಿಟಿ ಮುಂದೆ ಅಪೀಲ್ ಹಾಕಲು ನಿರ್ಧರಿಸಿದ್ದೇವೆ. ಏಕೆಂದರೆ ನಮ್ಮ ರಾಜ್ಯದ ಎಲ್ಲಾ ಜಲಾಶಯಗಳಲ್ಲಿ 60 ಟಿಎಂಸಿ ಮಾತ್ರ ನೀರು ಇದೆ. ನಮಗೆ ಕುಡಿಯಲು, ಬೇಸಾಯಕ್ಕೆ ನೀರು ಬೇಕು. ಹೀಗಾಗಿ ಜುಲೈ ವರೆಗೂ ನೀರು ಬಿಡಲು ಸಾಧ್ಯವಿಲ್ಲ ಅಂತ ಹೇಳಿದ್ದೇವೆ. ನಿನ್ನೆ ಆದೇಶದ ವಿರುದ್ಧ ನಾವು ಅಪೀಲ್ ಹಾಕ್ತಿದ್ದೇವೆ ಎಂದು ಖಡಕ್ಕಾಗಿ ಹೇಳಿದ್ದಾರೆ.

    ಕಳೆದ ಮೂರು ದಿನಗಳಿಂದ ಕಬಿನಿ ಜಲಾಶಯದಿಂದ ನೀರು ಬಿಡುತ್ತಿದ್ದೇವೆ. ಕಬಿನಿಗೆ ಎಷ್ಟು ಒಳಹರಿವು ಇದೆಯೋ, ಅಷ್ಟೇ ಹೊರಹರಿವು ಸಹ ಬಿಡ್ತಿದ್ದೇವೆ. ಕಬಿನಿ ಜಲಾಶಯ 96% ತುಂಬಿರುವ ಕಾರಣ ನೀರು ಹರಿಸುತ್ತಿದ್ದೇವೆ ಎಂದು ವಿವರಿಸಿದ್ದಾರೆ.

    ಮೇಲ್ಮನವಿ ಸಲ್ಲಿಸಲು ನಿರ್ಧಾರ:
    ಸಿಡಬ್ಲ್ಯೂಆರ್‌ಸಿ ಆದೇಶದ ವಿರುದ್ಧವಾಗಿ ಅಪೀಲು ಹಾಕಲು ನಿರ್ಧಾರ ಮಾಡಿದ್ದೇವೆ. ನೀರು ಬಿಡಲು ಆಗೊಲ್ಲ ಅಂತ ಅಪೀಲ್ ಹಾಕಲು ನಿರ್ಧಾರ. ಕಾವೇರಿ ರಿವರ್ ಮ್ಯಾನೇಜ್ಮೆಂಟ್ ಅಥಾರಿಟಿ ಮುಂದೆ ಮೇಲ್ಮನವಿ ಹಾಕಲು ನಿರ್ಧಾರ ಮಾಡಿದ್ದೇವೆ.

    ಜು.14ರಂದು ಸರ್ವಪಕ್ಷ ಸಭೆ:
    ಸರ್ಕಾರ ಈ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಬೇಕೆಂಬ ಅಭಿಪ್ರಾಯ ಇಂದಿನ ಸಭೆಯಲ್ಲಿ ವ್ಯಕ್ತವಾಗಿದೆ. ಹಾಗಾಗಿ ಜುಲೈ 14ರ ಸಂಜೆ 4 ಗಂಟೆಗೆ ಸರ್ವಪಕ್ಷ ಸಭೆ ಕರೆಯಲು ನಿರ್ಧಾರ ಮಾಡಲಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಸಭೆಯ ನೇತೃತ್ವ ವಹಿಸಲಿದ್ದಾರೆ. ನಾನೂ ಸಭೆಯಲ್ಲಿ ಭಾಗವಹಿಸುತ್ತೇನೆ. ಕೇಂದ್ರ ಮಂತ್ರಿಗಳು, ಕಾವೇರಿ ಭಾಗದ ಲೋಕಸಭೆ, ರಾಜ್ಯಸಭೆ ಸದಸ್ಯರು ಮತ್ತು ಶಾಸಕರನ್ನು ಸಹ ಸಭೆಗೆ ಆಹ್ವಾನಿಸಲಾಗುವುದು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರದ ಮುಂದಿನ ಹೆಜ್ಜೆಯ ಬಗ್ಗೆ ತೀರ್ಮಾನಿಸಲಾಗುವುದು.

  • ಕಾವೇರಿ ತವರಿನಲ್ಲೇ ನೀರಿನ ಅಭಾವ ಹಿನ್ನೆಲೆ ಹಾರಂಗಿ ಜಲಾಶಯದಿಂದ 400 ಕ್ಯೂಸೆಕ್‌ ನೀರು ಬಿಡುಗಡೆ

    ಕಾವೇರಿ ತವರಿನಲ್ಲೇ ನೀರಿನ ಅಭಾವ ಹಿನ್ನೆಲೆ ಹಾರಂಗಿ ಜಲಾಶಯದಿಂದ 400 ಕ್ಯೂಸೆಕ್‌ ನೀರು ಬಿಡುಗಡೆ

    ಮಡಿಕೇರಿ: ಕಾವೇರಿ ತವರು ಕೊಡಗಿನ (Kodagu) ಐದು ಗ್ರಾಮ ಪಂಚಾಯತ್‌ಗಳ 15 ಉಪ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ಈ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯದಿಂದ (Harangi Reservoir) 400 ಕ್ಯೂಸೆಕ್‌ ನೀರನ್ನು ನದಿಗೆ ಹರಿಸಲಾಗಿದೆ.

    ಬಿರು ಬಿಸಿಲಿನ ಕಾರಣದಿಂದ ಕಾವೇರಿ ನದಿಯಲ್ಲಿ (Cauvery River) ನೀರಿನ ಹರಿವು ತೀರಾ ಕಡಿಮೆಯಾಗಿದ್ದು, ಹೆಬ್ಬಾಲೆ, ಶಿರಂಗಾಲ ಸೇರಿದಂತೆ ಐದು ಗ್ರಾಮ ಪಂಚಾಯಿತಿ ವ್ಯಾಪ್ತಿಯ 15 ಉಪ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಇದನ್ನೂ ಓದಿ: ತವರು ಜಿಲ್ಲೆಯನ್ನು ಗೆಲ್ಲಲು ನೇರವಾಗಿ ಅಖಾಡಕ್ಕೆ ಇಳಿದ ಸಿದ್ದರಾಮಯ್ಯ

    ಹೆಬ್ಬಾಲೆಯಲ್ಲಿರುವ ಗ್ರಾಮೀಣ ಕುಡಿಯುವ ನೀರಿನ ಘಟಕಕ್ಕೆ ಕಾವೇರಿ ನದಿಯಿಂದ ನೀರು ದೊರಕದ ಹಿನ್ನೆಲೆಯಲ್ಲಿ ಇದೀಗ ಹಾರಂಗಿಯಿಂದ ನೀರನ್ನು ನದಿಗೆ ಹರಿಸಲಾಗುತ್ತಿದೆ. ಇದರಿಂದ ಕೊಡಗು ಮತ್ತು ಹಾಸನ ಜಿಲ್ಲೆಯ ಕಾವೇರಿ ನದಿ ದಂಡೆಯ ಗ್ರಾಮಗಳ ದನಕರುಗಳಿಗೆ ಮತ್ತು ಕುಡಿಯುವ ನೀರಿನ ಸರಬರಾಜಿಗೆ ಅನುಕೂಲವಾಗಲಿದೆ.

    ಅಣೆಕಟ್ಟೆಯಿಂದ ದಿನ 100 ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿತ್ತು. ಆದರೆ ಇದೀಗ ಕಾವೇರಿ ನದಿಯಲ್ಲಿ ನೀರಿನ ಹರಿವು ಮತ್ತಷ್ಟು ಕಡಿಮೆಯಾದ ಹಿನ್ನೆಲೆಯಲ್ಲಿ ಜಲಚರಗಳಿಗೂ ನೀರು ಇಲ್ಲದಂತಾಗುವ ಪರಿಸ್ಥಿತಿ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಹಾರಂಗಿ ಅಣೆಕಟ್ಟೆಯಲ್ಲಿ ಸಂಗ್ರಹವಿರುವ 2 ಟಿಎಂಸಿ ನೀರಿನ ಪೈಕಿ 400 ಕ್ಯೂಸೆಕ್‌ ನೀರನ್ನು ಅಣೆಕಟ್ಟೆಯ ಕೆಳಭಾಗದಲ್ಲಿ ನದಿ ದಂಡೆಯಲ್ಲಿರುವ ಗ್ರಾಮಗಳ ಜನ- ಜಾನುವಾರುಗಳಿಗೆ ಕುಡಿಯುವುದಕ್ಕಾಗಿ ನೀರನ್ನು ಹರಿಸಲಾಗುತ್ತಿದೆ ಎಂದು ಮೂಲಗಳು ಹೇಳಿವೆ. ಇದನ್ನೂ ಓದಿ: ಸೋಲಿನ ಭಯದಿಂದ ಮಲ್ಲಿಕಾರ್ಜುನ ಖರ್ಗೆ ದೂರ ಸರಿದಿದ್ದಾರೆ – ಆರ್.ಅಶೋಕ್

  • ತೀವ್ರ ಜಲಕ್ಷಾಮದ ನಡುವೆಯೂ ತಮಿಳುನಾಡಿಗೆ ಹರಿದ ಕಾವೇರಿ

    ತೀವ್ರ ಜಲಕ್ಷಾಮದ ನಡುವೆಯೂ ತಮಿಳುನಾಡಿಗೆ ಹರಿದ ಕಾವೇರಿ

    – ಕೆಆರ್‌ಎಸ್‌ನಿಂದ 4,000 ಕ್ಯೂಸೆಕ್‌ಗೂ ಅಧಿಕ ನೀರು ಬಿಡುಗಡೆ

    ಮಂಡ್ಯ: ಬೇಸಿಗೆ ಆರಂಭವಾಗಿದ್ದು, ರಾಜ್ಯದಲ್ಲೇ ತೀವ್ರ ಜಲಕ್ಷಾಮ ಎದುರಾಗಿದೆ. ಈ ನಡುವೆಯೂ ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸಿದೆ. ಕೆಆರ್‌ಎಸ್‌ ಜಲಾಶಯದಿಂದ 4,000 ಕ್ಯೂಸೆಕ್‌ಗೂ ಅಧಿಕ ಪ್ರಮಾಣದ ನೀರನ್ನು ಬಿಡುಗಡೆ ಮಾಡಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

    ಬೆಂಗಳೂರಿಗೆ ಜಲಕ್ಷಾಮ ಎದಾರಾಗಿದ್ರೂ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯದಿಂದ ಶನಿವಾರ (ಮಾ.9) ಮಧ್ಯಾಹ್ನದಿಂದ ಕರ್ನಾಟಕ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿದೆ. ಇದನ್ನೂ ಓದಿ: ಬಿಜೆಪಿ ಜೊತೆ ಕೈಜೋಡಿಸಿದ ಟಿಡಿಪಿ, ಜೆಎಸ್‌ಪಿ – ಆಂಧ್ರದ ಲೋಕಸಭಾ, ವಿಧಾನಸಭಾ ಚುನಾವಣೆಗೆ ಮೈತ್ರಿ ಸ್ಪರ್ಧೆ

    ಸದ್ಯ ಬೆಳೆಗಳಿಗೆ ನೀರಿಲ್ಲದೇ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಬೆಂಗಳೂರಿಗೂ ಬೇಸಿಗೆಯ ಬಿಸಿ ತಟ್ಟಿದ್ದು, ಕುಡಿಯಲು ಟ್ಯಾಂಕರ್ ನೀರನ್ನು ಅವಲಂಬಿಸುತ್ತಿದ್ದಾರೆ. ಕೆಆರ್‌ಎಸ್ ಅಣೆಕಟ್ಟೆಯಲ್ಲಿ ಕೇವಲ 88 ಅಡಿಗಳಷ್ಟು ಮಾತ್ರ ನೀರು ಮಾತ್ರ ಲಭ್ಯವಿದೆ. ಹೀಗಿದ್ದರೂ ಸರ್ಕಾರ ತಮಿಳುನಾಡಿಗೆ ಭಾರೀ ಪ್ರಮಾಣದ ನೀರು ಹರಿಸುತ್ತಿರುವುದು ಸಾರ್ವಜನಿಕರು ಹಾಗೂ ಪ್ರತಿಪಕ್ಷ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.

    124.80 ಅಡಿಗಳಷ್ಟು ಗರಿಷ್ಠ ಸಾಮರ್ಥ್ಯ ಹೊಂದಿರುವ ಕೆಆರ್‌ಎಸ್ ಜಲಾಶಯದಲ್ಲಿ 89.46 ಅಡಿಗಳಷ್ಟು ಮಾತ್ರವೇ ನೀರನ್ನು ಒಳಗೊಂಡಿದೆ. ತಮಿಳುನಾಡಿಗೆ ನೀರು ಹರಿಸಿದ್ರೆ, 70 ಅಡಿಗಳಿಗೆ ನೀರಿನ ಮಟ್ಟ ಕುಸಿಯುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ.

    ಕೆಆರ್‌ಎಸ್ ಡ್ಯಾಮ್ ನೀರಿನ ಮಟ್ಟ
    ಗರಿಷ್ಠ ಮಟ್ಟ : 124.80 ಅಡಿ
    ಇಂದಿನ ಮಟ್ಟ: 89.46 ಅಡಿ
    ಸಂಗ್ರಹ ಸಾಮರ್ಥ್ಯ: 49.452 ಟಿಎಂಸಿ
    ಇಂದಿನ ಸಂಗ್ರಹ : 15.619 ಟಿಎಂಸಿ

  • ಹೀಗೆ ಆದ್ರೆ ಮುಂದೆ ಕುಡಿಯೋಕು ಸಹ ನೀರು ಇರಲ್ಲ: ಕಾವೇರಿ ಹೋರಾಟದಲ್ಲಿ ಅಜ್ಜಿ ಕಣ್ಣೀರು

    ಹೀಗೆ ಆದ್ರೆ ಮುಂದೆ ಕುಡಿಯೋಕು ಸಹ ನೀರು ಇರಲ್ಲ: ಕಾವೇರಿ ಹೋರಾಟದಲ್ಲಿ ಅಜ್ಜಿ ಕಣ್ಣೀರು

    ಮಂಡ್ಯ: ಕಾವೇರಿ ನೀರು (Cauvery Water Issue) ವಿಚಾರದಲ್ಲಿ ಪದೇ ಪದೆ ನಮಗೆ ಅನ್ಯಾಯ ಆಗುತ್ತಿದೆ. ಮುಂದೆ ಹೀಗೆ ಆದ್ರೆ ಕುಡಿಯೋಕು ನೀರು ಇರಲ್ಲ ಎಂದು ಮಂಡ್ಯದಲ್ಲಿ ಪ್ರತಿಭಟನಾನಿರತ ಅಜ್ಜಿಯೊಬ್ಬರು ಕಣ್ಣೀರಿಟ್ಟರು.

    ತಮಿಳುನಾಡಿಗೆ (Tamil Nadu) ನೀರು ಹರಿಸುವ ವಿಚಾರವಾಗಿ ಕರ್ನಾಟಕಕ್ಕೆ (Karnataka) ಸಿಡಬ್ಲ್ಯೂಆರ್‌ಸಿ (CWRC) ನೀಡಿದ ಆದೇಶಕ್ಕೆ ಬೇಸರ ವ್ಯಕ್ತಪಡಿಸಿ ಮಂಡ್ಯದಲ್ಲಿ (Mandya) ಪ್ರತಿಭಟನೆ ನಡೆಸಲಾಯಿತು. ತಮಿಳುನಾಡಿಗೆ ನೀರು ಹರಿಸಲು ಹೊರಡಿಸಿದ ಶಿಫಾರಸಿನ ವಿರುದ್ಧ ಸೋಮವಾರ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಇದನ್ನೂ ಓದಿ: ಮುಂದಿನ 15 ದಿನ ನಿತ್ಯ ತಮಿಳುನಾಡಿಗೆ 2,600 ಕ್ಯೂಸೆಕ್ ನೀರು ಬಿಡಿ – ಕರ್ನಾಟಕಕ್ಕೆ CWRC ನಿರ್ದೇಶನ

    ಹಳೆ ಮೈಸೂರು-ಬೆಂಗಳೂರು ರಸ್ತೆ ತಡೆದು ಸಿಡಬ್ಲ್ಯೂಆರ್‌ಸಿ ಆದೇಶಕ್ಕೆ ಧಿಕ್ಕಾರ ಕೂಗಿದರು. ಹೆದ್ದಾರಿಯಲ್ಲಿಯೇ ಮಲಗಿ ಪ್ರಾಧಿಕಾರ, ನಿಯಂತ್ರಣ ಸಮಿತಿ ವಿರುದ್ಧ ಅಸಮಾಧಾನ ಹೊರಹಾಕಿದರು. ‘ಹೋಯ್ತಲಪ್ಪ ನೀರು’ ಎಂದು ಘೋಷಣೆ ಕೂಗಿ ಪ್ರತಿಭಟಿಸಿದರು.

    ಈ ವೇಳೆ ಮಾತನಾಡಿದ ಅವರು, ಪದೇ ಪದೆ ನಮಗೆ ಅನ್ಯಾಯವಾಗುತ್ತಿದೆ. ನಮ್ಮ ಹೊಲ, ಗದ್ದೆಗಳು ಒಣಗುತ್ತಿವೆ. ಮುಂದೆ ಹೀಗೆ ಆದರೆ ಕುಡಿಯೋಕು ಸಹ ನೀರು ಇರಲ್ಲ. ನಮ್ಮ ಗೋಳು ಕೇಳೋರು ಯಾರು ಎಂದು ಅಜ್ಜಿ ಕಣ್ಣೀರು ಹಾಕಿದರು. ಇದನ್ನೂ ಓದಿ: ಒಕ್ಕಲಿಗ ನಾಯಕತ್ವ ಮುಗಿಸಲು ಒಂದು ತಂಡ ಪ್ರಯತ್ನಿಸುತ್ತಿದೆ: ರವಿಕುಮಾರ್‌ ಗಣಿಗ

    ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧ ಕಾವೇರಿ ನೀರು ನಿಯಂತ್ರಣ ಸಮಿತಿ ಸೋಮವಾರ ಸಭೆ ನಡೆಸಿದ್ದು, ನವೆಂಬರ್ 1 ರಿಂದ ಮುಂದಿನ 15 ದಿನಗಳ ಕಾಲ ನಿತ್ಯ 26೦೦ ಕ್ಯೂಸೆಕ್ ನೀರು ಹರಿಸಲು ಕರ್ನಾಟಕಕ್ಕೆ ಶಿಫಾರಸು ಮಾಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶುಕ್ರವಾರ ಕರ್ನಾಟಕ ಬಂದ್ – ಏನಿರುತ್ತೆ? ಏನಿರಲ್ಲ?

    ಶುಕ್ರವಾರ ಕರ್ನಾಟಕ ಬಂದ್ – ಏನಿರುತ್ತೆ? ಏನಿರಲ್ಲ?

    ಬೆಂಗಳೂರು: ಜೀವನದಿ ಕಾವೇರಿಗಾಗಿ (Cauvery River) ಶುಕ್ರವಾರ ಕರ್ನಾಟಕ ಬಂದ್‌ಗೆ (Karnataka Bandh) ಕರೆ ನೀಡಲಾಗಿದೆ. ಬಂದ್‌ಗೆ 1,600ಕ್ಕೂ ಅಧಿಕ ಸಂಘಟನೆಗಳು ಬೆಂಬಲ ಸೂಚಿಸಿವೆ. ಬಿಜೆಪಿ-ಜೆಡಿಎಸ್ ಕೂಡ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದು, ಜೀವಜಲಕ್ಕಾಗಿ ತಮ್ಮ ಒಗ್ಗಟ್ಟು ಪ್ರದರ್ಶನ ಮಾಡಲಿವೆ.

    ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೂ ಬಂದ್ ನಡೆಯಲಿದೆ. ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳು ಬಂದ್ (National Highway) ಆಗುವ ಸಾಧ್ಯತೆಗಳಿವೆ. ರಾಜಧಾನಿಯಲ್ಲಿ  ಕನ್ನಡ ಒಕ್ಕೂಟ ಬೃಹತ್ ಮೆರವಣಿಗೆಗೆ ಪ್ಲಾನ್ ಮಾಡಿದೆ. ಬಂದ್‌ಗೆ ಬೆಂಬಲ ನೀಡುವಂತೆ  ಕನ್ನಡ ಹೋರಾಟಗಾರರು ಬೆಂಗಳೂರು ಜನತೆಯಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: Karnataka Bandh : ಶಾಲಾ, ಕಾಲೇಜುಗಳಿಗೆ ರಜೆ ನೀಡೋ ಅಧಿಕಾರ ಡಿಸಿಗಳಿಗೆ ಬಿಟ್ಟ ಶಿಕ್ಷಣ ಇಲಾಖೆ

    ಬೆಂಗಳೂರಿನಲ್ಲಿ ಶುಕ್ರವಾರ ಮಧ್ಯರಾತ್ರಿಯಿಂದಲೇ ಪೊಲೀಸ್ ಇಲಾಖೆ ನಿಷೇಧಾಜ್ಞೆ ಜಾರಿ ಮಾಡಿದೆ. ಫ್ರೀಡಂ ಪಾರ್ಕ್ ಬಿಟ್ಟು ಬೇರೆಡೆ ಯಾವುದೇ ಪ್ರತಿಭಟನೆ, ರ‍್ಯಾಲಿಗಳಿಗೆ ಅವಕಾಶ ಇರುವುದಿಲ್ಲ. ಬಂದ್ ವೇಳೆ ಸಾವು ನೋವು, ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯುಂಟಾದರೆ ಬಂದ್‌ಗೆ ಕರೆ ನೀಡಿರುವ ಸಂಘಟನೆಗಳೇ ಹೊಣೆ ಆಗುತ್ತವೆ ಎಂದು ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

    ಬಲವಂತವಾಗಿ ವಾಹನ ತಡೆ, ಅಂಗಡಿ ಮುಂಗಟ್ಟು ಮುಚ್ಚಿಸುವಂತಿಲ್ಲ. ಒಂದೊಮ್ಮೆ ಬಲವಂತದ ಕ್ರಮಗಳಿಗೆ ಮುಂದಾದ್ರೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ತೀವಿ ಎಂದು ತಾಕೀತು ಮಾಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಹ ಬಂದ್‌ಗೆ ಅವಕಾಶ ಇಲ್ಲವೆಂದು ಹೇಳಿದ್ದಾರೆ. ಆದ್ರೆ ಕನ್ನಡ ಒಕ್ಕೂಟಗಳು ಮಾತ್ರ ಇದಕ್ಕೆ ಡೋಂಟ್‌ಕೇರ್ ಎಂದಿವೆ. ಇದನ್ನೂ ಓದಿ: ಅಂತರ್ಜಾತಿ ವಿವಾಹವಾದ ವಿಕಲಚೇತನ ಜೋಡಿಗೆ ಬಹಿಷ್ಕಾರ – ಹಸುಗೂಸಿನೊಂದಿಗೆ ಬೀದಿಗೆ ಬಿದ್ದ ದಂಪತಿ

    ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ತುಮಕೂರು, ರಾಮನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು, ಧಾರವಾಡ, ಕೋಲಾರ, ದಾವಣಗೆರೆ, ಚಿಕ್ಕಬಳ್ಳಾಪುರ (ಚಿಕ್ಕಬಳ್ಳಾಪುರದ 2 ತಾಲೂಕಲ್ಲಿ ಮಾತ್ರ ಬಂದ್) ಜಿಲ್ಲೆಗಳು ಸಂಪೂರ್ಣ ಸ್ಥಬ್ಧವಾಗುವ ಸಾಧ್ಯತೆಗಳಿವೆ. ಬೆಳಗಾವಿ, ಬಾಗಲಕೋಟೆ, ಬೀದರ್, ವಿಜಯಪುರ, ಯಾದಗಿರಿ, ಕೊಡಗು, ಗದಗ, ಕಲಬುರಗಿ, ರಾಯಚೂರು, ಶಿವಮೊಗ್ಗ, ಕೊಪ್ಪಳ, ಹಾವೇರಿ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಬಂದ್‌ಗೆ ಕರೆ ನೀಡದಿರುವುದರಿಂದ ಎಂದಿನಂತೆ ಈ ಜಿಲ್ಲೆಗಳಲ್ಲಿ ಕೆಲ ನಡೆಯಲಿದೆ.

    ಏನೆಲ್ಲಾ ಸೇವೆ ಬಂದ್?
    ಓಲಾ ಊಬರ್, ಆಟೋ, ಗೂಡ್ಸ್ ವಾಹನ, ಹೋಟೆಲ್, ಚಿತ್ರಮಂದಿರ, ಜಿಮ್, ಹೋಟೆಲ್, ಮಾಲ್, ಬೀದಿ ಬದಿ ವ್ಯಾಪಾರ, ಕೆ.ಆರ್ ಮಾರ್ಕೆಟ್, ಶಾಲಾ ವಾಹನಗಳು, ಸಿನಿಮಾ ಶೂಟಿಂಗ್, ಆಭರಣ ಮಳಿಗೆಗಳು ಬಂದ್ ಆಗಿರಲಿವೆ.

    ಏನಿರುತ್ತೆ?
    ಆಸ್ಪತ್ರೆ, ಮೆಡಿಕಲ್ ಸ್ಟೋರ್, ಅಂಬುಲೆನ್ಸ್, ನಮ್ಮ ಮೆಟ್ರೋ, ರೈಲು, ವಿಮಾನ, ಹಾಲು, ತರಕಾರಿ, ಬ್ಯಾಂಕ್, ಪೋಸ್ಟ್ ಆಫೀಸ್ ಸೇವೆ ಇರಲಿವೆ.

    ಇರುತ್ತಾ? ಇರಲ್ವಾ?
    ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಖಾಸಗಿ ಬಸ್. ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ಗಳ ಕಾರ್ಯಾಚರಣೆ ಇರುತ್ತೆ ಎಂದು ಹೇಳಲಾಗಿದೆ. ಆದ್ರೆ, ನೌಕರರು ಕರ್ತವ್ಯಕ್ಕೆ ಹಾಜರಾಗ್ತಾರಾ ಅನ್ನುವ ಬಗ್ಗೆ ಸ್ಪಷ್ಟವಾಗಿಲ್ಲ.

    ಎಲ್ಲೆಲ್ಲೆ ಶಾಲಾ ಕಾಲೇಜುಗಳು ರಜೆ?
    ಬೆಂಗಳೂರು, ಕೋಲಾರ, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ. ಬೇರೆಡೆಗೆ ರಜೆ ಘೋಷಿಸುವ ನಿರ್ಧಾರವನ್ನು ಬಿಇಓಗಳ ವಿವೇಚನೆಗೆ ಬಿಡಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾವೇರಿ ಹೋರಾಟದ ಕಿಚ್ಚು; ಬಾಯಿಗೆ ಮಣ್ಣು ಹಾಕಿಕೊಂಡು ಸರ್ಕಾರದ ವಿರುದ್ಧ ರೈತರ ಆಕ್ರೋಶ

    ಕಾವೇರಿ ಹೋರಾಟದ ಕಿಚ್ಚು; ಬಾಯಿಗೆ ಮಣ್ಣು ಹಾಕಿಕೊಂಡು ಸರ್ಕಾರದ ವಿರುದ್ಧ ರೈತರ ಆಕ್ರೋಶ

    ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು (TamilNadu Cauvery Water) ಹರಿಸದಂತೆ ಆಗ್ರಹಿಸಿ ಮಂಡ್ಯದಲ್ಲಿ ಆರಂಭಿಸಿರುವ ರೈತರ ಹೋರಾಟದ ಕಿಚ್ಚು ಕಟ್ಟೆಯೊಡೆದಿದೆ.

    ಮಂಡ್ಯ ಬಂದ್ (Mandya Bandh) ಹಿನ್ನೆಲೆಯಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ರೈತರು (Farmers), ಕನ್ನಡಪರ ಹಾಗೂ ಪ್ರಗತಿ ಪರ ಸಂಘನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿವೆ. ಬಿಜೆಪಿ, ಜೆಡಿಎಸ್ ಕಾರ್ಯಕರ್ತರೂ ಸಹ ಪ್ರತಿಭಟನೆಗೆ ಧುಮುಕಿದ್ದು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಕಾವೇರಿ ನದಿ ನೀರಿನ ವಿಷಯದಲ್ಲಿ ನಾವು ಮೇಲ್ಮನವಿ ಸಲ್ಲಿಸಬೇಕು: ಬಿಎಸ್‍ವೈ

    ಈ ವೇಳೆ ಮಂಡ್ಯದಲ್ಲಿ ಕೆಲ ರೈತರು ತಾವೇ ಬಾಯಿಗೆ ಮಣ್ಣು ಹಾಕಿಕೊಂಡು ಆಕ್ರೋಶ ಹೊರಹಾಕಿದ್ದಾರೆ. ಕರ್ನಾಟಕ ಸರ್ಕಾರ ತಮಿಳುನಾಡಿಗೆ ನೀರುಬಿಟ್ಟು ರೈತರ ಬಾಯಿಗೆ ಮಣ್ಣುಹಾಕಿದೆ ಎಂದು ಹೇಳಿ ತಾವೇ ಬಾಯಿಗೆ ಮಣ್ಣು ಹಾಕಿಕೊಂಡು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಇಂದು ಮಂಡ್ಯ, ಮದ್ದೂರ್ ಬಂದ್- ಪೊಲೀಸ್ ಬಿಗಿ ಭದ್ರತೆ

    ಸಿದ್ದರಾಮಯ್ಯ (Siddaramaiah) ಬರಗಾಲದ ಸಿಎಂ, ಬರಗಾಲದ ಮುಖ್ಯಮಂತ್ರಿ ಬಂದ್ರೆ ಬರಗಾಲವೇ ಉಂಟಾಗುತ್ತೆ. ಜಲಸಂಪನ್ಮೂಲ ಸಚಿವರು ಮಂಡ್ಯ ಬಂದ್ ಮಾಡಿದ್ರೇ ಏನೂ ಆಗಲ್ಲ ಅಂತಾರೆ ಇವರಿಗೆ ಮಾನವೀಯತೆ ಇದೆಯಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಭುಗಿಲೆದ್ದ ಆಕ್ರೋಶದ ನಡುವೆಯೂ ತಮಿಳುನಾಡಿಗೆ ನೀರು; KRS ನೀರಿನ ಮಟ್ಟ 96 ಅಡಿಗೆ ಕುಸಿತ

    ಸಿದ್ದರಾಮಯ್ಯ ಅವರ ಭ್ರಷ್ಟ ಸರ್ಕಾರ ರೈತರ ಬಾಯಿಗೆ ಮಣ್ಣು ಹಾಕಿದೆ. ನಾವು ಹೆಂಡತಿಯ ತಾಳಿ ಅಡವಿಟ್ಟು ಬೋರ್‌ವೆಲ್ ಕೊರೆಸಿದ್ದೇವೆ. ಆದ್ರೆ ನೀರು ಬಾರದೇ ಬೆಳೆಗಳು ಹಾಳಾಗುತ್ತಿವೆ. ಈ ಸರ್ಕಾರ ಇಡೀ ಮಂಡ್ಯ ಜಿಲ್ಲೆಯ ರೈತರು ಮಣ್ಣು ತಿನ್ನುವಂತೆ ಮಾಡಿದೆ. ಅದಕ್ಕಾಗಿ ನಾವೇ ಮಣ್ಣು ಹಾಕಿಕೊಳ್ತಿದ್ದೇವೆ ಎಂದು ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]