Tag: Cauvery Water Supply

  • ನಾಳೆಯಿಂದ ಬೆಂಗಳೂರಿನಲ್ಲಿ 3 ದಿನ ಕಾವೇರಿ ನೀರು ಬರಲ್ಲ – ಜಲಮಂಡಳಿ ಮಾಹಿತಿ

    ನಾಳೆಯಿಂದ ಬೆಂಗಳೂರಿನಲ್ಲಿ 3 ದಿನ ಕಾವೇರಿ ನೀರು ಬರಲ್ಲ – ಜಲಮಂಡಳಿ ಮಾಹಿತಿ

    ಬೆಂಗಳೂರು: ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸೆ.15, 16 ಮತ್ತು 17 ರಂದು ಕಾವೇರಿ ನೀರು ಸರಬರಾಜನ್ನು (Cauvery Water Supply) ಸ್ಥಗಿತಗೊಳಿಸಲಾಗುತ್ತಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.

    ಕಾವೇರಿ ನೀರು ಸರಬರಾಜು ಯೋಜನೆಯ ವಿವಿಧ ಹಂತಗಳ ಜಲರೇಚಕ ಯಂತ್ರಾಗಾರಗಳನ್ನು ಸೆ.15, 16 ಮತ್ತು 17 ರಂದು ಸ್ಥಗಿತಗೊಳಿಸಲಾಗುತ್ತಿದೆ. ಈ ಜಲರೇಚಕ ಯಂತ್ರಗಾರಗಳ ಸ್ಥಗಿತತೆಯಿಂದ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆ ಮೂರು ದಿನಗಳಲ್ಲಿ ಸಂಚಾರಿ ಕಾವೇರಿಯ ಯೋಜನೆಯ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಸೇವೆಯನ್ನು ಸ್ಥಗಿತಗೊಳಿಸಿ, ಈ ಟ್ಯಾಂಕರ್‌ಗಳನ್ನು ತುರ್ತು ನೀರು ಸರಬರಾಜಿಗಾಗಿ ಬಳಸಿಕೊಳ್ಳಲಾಗುವುದು ಎಂದಿದ್ದಾರೆ. ಇದನ್ನೂ ಓದಿ: ಪಾಕ್‌ ವಿರುದ್ಧ ಟೀಂ ಇಂಡಿಯಾ ಗೆಲುವಿಗೆ ವಿಶ್ವ ಹಿಂದೂ ರಕ್ಷಾ ಪರಿಷತ್‌ನಿಂದ ಹೋಮ-ಹವನ

    ಗ್ರೇಟರ್ ಬೆಂಗಳೂರು ನಗರದ ಜನತೆಗೆ ಯಾವುದೇ ಅಡೆತಡೆಯಿಲ್ಲದೇ ಕುಡಿಯುವ ನೀರನ್ನು ಸರಬರಾಜು ಮಾಡಲು, ಕಾವೇರಿ ನೀರು ಸರಬರಾಜು ಯೋಜನೆಯ ಜಲರೇಚಕ ಯಂತ್ರಗಾರಗಳು ಮತ್ತು ಮುಖ್ಯ ಕೊಳವೆ ಮಾರ್ಗಗಳ ಸುಲಲಿತ ಚಾಲನೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸುಸ್ಥಿತಿಯಲ್ಲಿಡುವ ಉದ್ದೇಶದಿಂದ ಜಲಮಂಡಳಿಯ ವಿವಿಧೆಡೆ ನಿಯಮಿತ ತುರ್ತು ನಿರ್ವಹಣೆಯ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅದೊಂದು ಹಾಡಿನಿಂದ ದಿಢೀರ್ ಫೇಮಸ್ ಆದ ಯುವತಿ – ಇನ್ಸ್ಟಾದಲ್ಲಿ 150 ಇದ್ದ ಫಾಲೋವರ್ಸ್ ಈಗ 40,000

    ಕಾವೇರಿ 5ನೇ ಹಂತದ ಜಲರೇಚಕ ಯಂತ್ರಗಾರಗಳು (ಪಂಪಿಂಗ್ ಸ್ಟೇಷನ್) ಸೆ.15 ರ ನಸುಕಿನ ಜಾವ 1 ಗಂಟೆಯಿಂದ ಸೆ.17ರ ಮಧ್ಯಾಹ್ನ 1 ಗಂಟೆವರೆಗೆ ಒಟ್ಟು 60 ಗಂಟೆಗಳು. ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1, ಹಂತ-2, ಹಂತ-3, ಹಂತ-4 ರ 1ನೇ ಘಟ್ಟ ಮತ್ತು 2ನೇ ಘಟ್ಟಗಳ ಜಲರೇಚಕ ಯಂತ್ರಗಾರಗಳನ್ನು ಸೆ.16 ರ ಬೆಳಗ್ಗೆ 6ರಿಂದ ಸೆ.17ರ ಬೆಳಗ್ಗೆ 6ರವರೆಗೆ ಒಟ್ಟು 24 ಗಂಟೆಗಳ ಕಾಲ ಸ್ಥಗಿತಗೊಳಿಸಲಾಗುತ್ತಿದೆ ಎಂದಿದ್ದಾರೆ.

    ಸಂಚಾರಿ ಕಾವೇರಿ ಯೋಜನೆ ಮೂರು ದಿನ ಸ್ಥಗಿತ:
    ಸಂಚಾರಿ ಕಾವೇರಿಯ ಯೋಜನೆಯ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಸೇವೆಯನ್ನು ಸ್ಥಗಿತಗೊಳಿಸಿ, ಈ ಟ್ಯಾಂಕರ್‌ಗಳನ್ನು ತುರ್ತು ನೀರು ಸರಬರಾಜಿಗಾಗಿ ಬಳಸಿಕೊಳ್ಳಲಾಗುವುದು. ಸಂಚಾರಿ ಕಾವೇರಿ ಯೋಜನೆಯ ಸೇವೆಯಲ್ಲಿ ಈ ಮೂರು ದಿನಗಳ ಕಾಲ ವ್ಯತ್ಯಯವಾಗಲಿದೆ. ಕಾವೇರಿ ನೀರು ಸರಬರಾಜಾಗುವ ಪ್ರದೇಶಗಳ ನಾಗರಿಕರು ಮುಂಜಾಗ್ರತೆಯಾಗಿ ಅಗತ್ಯವಿರುವ ನೀರನ್ನು ಸಂಗ್ರಹ ಮಾಡಿಕೊಳ್ಳುವಂತೆ ತಿಳಿಸಿದ್ದಾರೆ.

  • ಗಮನಿಸಿ: ನಾಳೆ ಬೆಂಗಳೂರಿನ ಯಾವ ಏರಿಯಾದಲ್ಲೂ ಒಂದು ಹನಿ ಕಾವೇರಿ ನೀರು ಬರಲ್ಲ

    ಗಮನಿಸಿ: ನಾಳೆ ಬೆಂಗಳೂರಿನ ಯಾವ ಏರಿಯಾದಲ್ಲೂ ಒಂದು ಹನಿ ಕಾವೇರಿ ನೀರು ಬರಲ್ಲ

    ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಜೂನ್ 19ರಂದು ಬೆಳಗ್ಗೆ 6 ರಿಂದ ಜೂನ್ 20ರ ಬೆಳಗ್ಗೆ 6 ಗಂಟೆವರೆಗೆ ನಗರದ ಬಹುತೇಕ ಭಾಗಗಳಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ (Cauvery Water Supply) ವ್ಯತ್ಯಯ ಉಂಟಾಗಲಿದೆ.

    ಕಾವೇರಿ 5ನೇ ಹಂತದ ಕಾಮಗಾರಿ ಹಾಗೂ ವಿದ್ಯುತ್ ನಿರ್ವಹಣೆ ಕಾರಣದಿಂದಾಗಿ ಕಾವೇರಿ ನೀರು ಸರಬರಾಜು ಸ್ಥಗಿತ ಅನಿವಾರ್ಯವಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ತಿಳಿಸಿದ್ದು, ಮುಂಜಾಗ್ರತೆಯಾಗಿ ಕಾವೇರಿ ನೀರು ಸಂಗ್ರಹಿಸಿಕೊಳ್ಳುವಂತೆ ನಾಗರಿಕರಿಗೆ BWSSB ಮನವಿ ಮಾಡಿದೆ. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಸರ್ಕಾರದ ತನಿಖೆ ಮೇಲೆ ಯಾರಿಗೂ ನಂಬಿಕೆ ಇಲ್ಲ: ಅಶೋಕ್

    ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುವ ಸಲುವಾಗಿ ಜೂನ್‌ 19ರ ಬೆಳಗ್ಗೆ 6 ರಿಂದ ಹಾಗೂ ಜೂ.20ರ ಬೆಳಗ್ಗೆ 6 ಗಂಟೆ ವರೆಗೆ ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1 ರಿಂದ ಹಂತ- 5ರ ವರೆಗಿನ ಎಲ್ಲಾ ಜಲರೇಚಕ ಯಂತ್ರಾಗಾರಗಳನ್ನು ಸ್ಥಗಿತಗೊಳಿಸಲಾಗುತ್ತಿದೆ. ಇದರಿಂದ ಬಿಬಿಎಂಪಿ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ. ಹೀಗಾಗಿ ಬೆಂಗಳೂರಿನ ನಾಗರಿಕರಿಗೆ, ವಾಣಿಜ್ಯ ಹಾಗೂ ಕೈಗಾರಿಕಾ ಪ್ರದೇಶಗಳಿಗೆ ಮುಂಜಾಗ್ರತೆಯಾಗಿ ಅಗತ್ಯವಿರುವ ನೀರನ್ನು ಸಂಗ್ರಹಣೆ ಮಾಡಿಕೊಳ್ಳುವಂತೆ ಜಲಮಂಡಳಿ ಸೂಚನೆ ನೀಡಿದೆ. ಇದನ್ನೂ ಓದಿ: ಮಲೆನಾಡಿನ ಮಳೆಗಾಲದ ಗೆಳೆಯರು!

    ಬೆಂಗಳೂರು ನಗರ ಹಾಗೂ ಉಪನಗರ ವ್ಯಾಪ್ತಿಯ ಪ್ರದೇಶಗಳಿಗೆ ಮುಂದಿನ ದಶಕಗಳ ನೀರಿನ ಅಗತ್ಯವನ್ನು ಪೂರೈಸುವ ನಿಟ್ಟಿನಲ್ಲಿ ಟಿ.ಕೆ. ಹಳ್ಳಿಯಲ್ಲಿ ನಡೆಯುತ್ತಿರುವ ಕಾವೇರಿ 5ನೇ ಹಂತದ ಕಾಮಗಾರಿ ಪ್ರಮುಖವಾಗಿದೆ. ಇದನ್ನೂ ಓದಿ: ಮಳೆ ಆರ್ಭಟಕ್ಕೆ ಮಂಜಿನ ನಗರಿ ಥಂಡಾ – ಭಾಗಮಂಡಲದ ತ್ರಿವೇಣಿ ಸಂಗಮ ಮುಳುಗಡೆ