Tag: cauvery water

  • ಮಂಡ್ಯ ಬಂದ್‌ಗೆ ಕರೆ – ಪ್ರತಿಭಟನಾಕಾರರಿಗೆ ಎಚ್ಚರಿಕೆ ಕೊಟ್ಟ ಗೃಹಸಚಿವ ಜಿ.ಪರಮೇಶ್ವರ್

    ಮಂಡ್ಯ ಬಂದ್‌ಗೆ ಕರೆ – ಪ್ರತಿಭಟನಾಕಾರರಿಗೆ ಎಚ್ಚರಿಕೆ ಕೊಟ್ಟ ಗೃಹಸಚಿವ ಜಿ.ಪರಮೇಶ್ವರ್

    ಬೆಂಗಳೂರು/ಮಂಡ್ಯ: ಕಾವೇರಿಗಾಗಿ ನಾಳೆ ಮಂಡ್ಯ (Mandya) ಬಂದ್ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ ಅಂತ ಗೃಹ ಸಚಿವ ಪರಮೇಶ್ವರ್ (G Parameshwar) ತಿಳಿಸಿದ್ದಾರೆ.

    ಮಂಡ್ಯ ಬಂದ್ (Mandya Bandh) ವಿಚಾರವಾಗಿ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಕೆಆರ್‌ಎಸ್ (KSR), ಮಂಡ್ಯ ಜಿಲ್ಲೆಯಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ (Police Protection) ನಿಯೋಜನೆ ಮಾಡಲಾಗಿದೆ. ಹೆಚ್ಚುವರಿ ಕೆಎಸ್‌ಆರ್‌ಪಿ, ಆರ್‌ಎಎಫ್ ತುಕಡಿಯನ್ನ ನಿಯೋಜನೆ ಮಾಡಲಾಗಿದೆ. ಪ್ರತಿಭಟನೆ ಸ್ಥಳಗಳಲ್ಲಿ ಬಿಗಿ ಬಂದೋಬಸ್ತ್ ಮಾಡಿದ್ದೇವೆ. ಪ್ರತಿಭಟನೆ ಮಾಡೂರು ಕಾನೂನು ಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡಬಾರದು. ಒಂದು ವೇಳೆ ಆ ರೀತಿ ಮಾಡಿದ್ರೆ ಕಾನೂನು ರೀತಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

    ಬಂದ್, ಪ್ರತಿಭಟನೆ ಮಾಡೋದು ಅವರ ಹಕ್ಕು. ಪ್ರತಿಭಟನೆ ಬಗ್ಗೆ ನಮಗೇನು ತಕರಾರು ಇಲ್ಲ. ರಾಜ್ಯದ ಹಿತ ಕಾಪಾಡಬೇಕು ನೀರು ಬಿಡಬಾರದು ಅಂತ ಹೇಳಿ ಸಂಘಟನೆಗಳು ಪ್ರತಿಭಟನೆ ಮಾಡ್ತಿದ್ದಾರೆ. ಯಾರು ಬೇಕಾದ್ರು ಪ್ರತಿಭಟನೆ ಮಾಡಬಹುದು. ಅದರಲ್ಲಿ ತಪ್ಪಿಲ್ಲ. ಆದರೆ ಯಾವುದೇ ರೀತಿಯಲ್ಲಿ ಸಾರ್ವಜನಿಕ ಆಸ್ತಿ ನಾಶ ಮಾಡೋದು, ಜನ ಸಮುದಾಯಕ್ಕೆ ತೊಂದರೆ ಮಾಡೋದು ಮಾಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

    ಪ್ರತಿಭಟನೆ ಮೂಲಕ ಕಾನೂನು ಬಾಹಿರ ಚಟುವಟಿಕೆಗಳನ್ನ ಮಾಡಬಾರದು. ಒಂದು ವೇಳೆ ಅಂತಹ ಘಟನೆಗಳು ಕಂಡುಬಂದರೆ ಅದನ್ನ ನಿಯಂತ್ರಣ ಮಾಡಲು ಪೊಲೀಸ್ ಇಲಾಖೆ ಎಲ್ಲ ರೀತಿಯಲ್ಲೂ ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಯುಪಿ ರೈಲಿನಲ್ಲಿ ಮಹಿಳಾ ಪೊಲೀಸ್ ಮೇಲೆ ದಾಳಿ ಮಾಡಿದ್ದ ಆರೋಪಿಯನ್ನು ಎನ್‌ಕೌಂಟರ್ ನಡೆಸಿ ಹತ್ಯೆ

    ಇನ್ನೂ ಸುಪ್ರೀಂ (Supreme Court) ತೀರ್ಪಿನ ಕುರಿತು ಪ್ರತಿಕ್ರಿಯಿಸಿದ ಅವರು, ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವ ಬಗ್ಗೆ ಇವತ್ತಿನ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡುತ್ತೇವೆ. ಸುಗ್ರಿವಾಜ್ಞೆ ತರೋ ವಿಚಾರದ ಬಗ್ಗೆಯೂ ಚರ್ಚೆ ನಡೆಯಬಹುದು. ಸಿಎಂ ಮತ್ತು ನೀರಾವರಿ ಸಚಿವರು ದೆಹಲಿಗೆ ಹೋಗಿ ಬಂದಿದ್ದಾರೆ. ಎಲ್ಲಾ ವಿಚಾರಗಳ ಬಗ್ಗೆ ಕ್ಯಾಬಿನೆಟ್‌ನಲ್ಲಿ ಬ್ರೀಫ್ ಮಾಡೋ ಸಾಧ್ಯತೆ ಇದೆ. ಇವತ್ತು ಕ್ಯಾಬಿನೆಟ್ ಒಂದು ತೀರ್ಮಾನಕ್ಕೆ ಬರುತ್ತೇವೆ ಎಂದರು. ಇದನ್ನೂ ಓದಿ: ಇಸ್ಲಾಮಿಕ್‌ ಪ್ರಾರ್ಥನೆ ಬಳಿಕ ಹಂದಿ ಮಾಂಸ ಸೇವನೆ; ಟಿಕ್‌ಟಾಕ್‌ ಸ್ಟಾರ್‌ಗೆ 2 ವರ್ಷ ಜೈಲು

    ಇವತ್ತು ಕೂಡಾ ನೀರಿನ ಪ್ರಮಾಣ ಕೆಆರ್‌ಎಸ್‌ನಲ್ಲಿ ಕಡಿಮೆ ಇದೆ. ಒಳ ಹರಿವು ಕಡಿಮೆ ಇದೆ. ನೀರಿನ ಮಟ್ಟ ಹೆಚ್ಚುತ್ತಿಲ್ಲ ನಮ್ಮಲ್ಲಿ ನೀರಿಲ್ಲ ಅಂತ ಸುಪ್ರೀಂಕೋರ್ಟ್ಗೆ ಮನವರಿಕೆ ಮಾಡಿಕೊಡಲಾಗಿದೆ. ಆದರೂ ಸುಪ್ರೀಂ ಕೋರ್ಟ್ ಬೋರ್ಡ್ ಸೂಚನೆಯಂತೆ ನೀರು ಬಿಡಲು ಹೇಳಿದೆ. ಹೀಗಾಗಿ ಇವತ್ತಿನ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಿ ಚರ್ಚೆ ಬಳಿಕ ಯಾವ ತೀರ್ಮಾನ ಮಾಡೋದು ಅಂತ ನಿರ್ಧಾರ ಮಾಡಲಾಗುತ್ತದೆ ಎಂದರು. ಇದನ್ನೂ ಓದಿ: ತೀವ್ರ ಆಕ್ರೋಶದ ನಡುವೆಯೂ KRS, ಕಬಿನಿಯಿಂದ ತಮಿಳುನಾಡಿಗೆ 5,000 ಕ್ಯೂಸೆಕ್ ನೀರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾವೇರಿ ಕಿಚ್ಚು – ಶನಿವಾರ ಮಂಡ್ಯ ಬಂದ್‌ಗೆ ಕರೆ

    ಕಾವೇರಿ ಕಿಚ್ಚು – ಶನಿವಾರ ಮಂಡ್ಯ ಬಂದ್‌ಗೆ ಕರೆ

    ಮಂಡ್ಯ: ತಮಿಳುನಾಡಿಗೆ ನೀರು (Water For Tamil Nadu) ಬಿಡುವಂತೆ ಸುಪ್ರೀಂ ಕೋರ್ಟ್ (Supreme Court) ಆದೇಶ ನೀಡಿರುವ ಬೆನ್ನಲ್ಲೇ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಶನಿವಾರ ಮಂಡ್ಯ ಜಿಲ್ಲೆಯ ಬಂದ್‌ಗೆ ಕರೆ ನೀಡಿದೆ.

    ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು, ವರ್ತಕರು, ಸಂಘಟನೆಗಳ ಮುಖಂಡರೊಂದಿಗೆ ಗುರುವಾರ (ಇಂದು) ನಡೆದ ಸಭೆಯಲ್ಲಿ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಬಂದ್‌ ನಿರ್ಧಾರ ಕೈಗೊಂಡಿದೆ. ಶುಕ್ರವಾರ (ಸೆ.22) ಮತ್ತೊಂದು ಸುತ್ತಿನ ಸಭೆಯಲ್ಲಿ ಬಂದ್‌ (Mandya Bandh) ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಲು ನಿರ್ಧರಿಸಲಾಗಿದೆ.

    ತಮಿಳುನಾಡಿಗೆ ಕಾವೇರಿ ನೀರು (Cauvery Water) ಬಿಡುವ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದ ನಂತರ ರಾಜ್ಯದಲ್ಲಿ ರೈತರ ಆಕ್ರೋಶ ಹೆಚ್ಚಾಗಿದ್ದು, ಚಿಕ್ಕಬಳ್ಳಾಪುರದಲ್ಲೂ ರೈತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ KRSನಲ್ಲಿ ಕುಸಿದ ನೀರಿನ ಮಟ್ಟ – ಮಳೆ ಬಾರದಿದ್ರೆ ವರ್ಷಾಂತ್ಯಕ್ಕೆ ಕುಡಿಯುವ ನೀರಿಗೂ ತತ್ವಾರ

    ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ರೈತರು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಕಿಡಿ ಕಾರಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್‌ ಅವರು ರೈತಪರ ನಿಲುವುಗಳನ್ನ ಕೈಗೊಳ್ಳಬೇಕು, ತಮಿಳುನಾಡಿಗೆ ನೀರು ನಿಲ್ಲಿಸಲು ಬೇಕಾದ ಕ್ರಮ ಕೈಗೊಳ್ಳಿ. ಬೇಕಿದ್ದರೆ ನಿಮ್ಮ ಜೊತೆಗೆ ನಾವೂ ಜೈಲಿಗೆ ಬರ್ತೇವೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಕಾವೇರಿ ಪ್ರತಿಭಟನೆ ವೈಲೆಂಟ್ ಆದ್ರೆ ಕಾನೂ‌ನು ಕ್ರಮ – ಜಿ ಪರಮೇಶ್ವರ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾವೇರಿ ವಿಚಾರವಾಗಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು: M.B ಪಾಟೀಲ್

    ಕಾವೇರಿ ವಿಚಾರವಾಗಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು: M.B ಪಾಟೀಲ್

    ಬೆಂಗಳೂರು: ಕಾವೇರಿ ವಿಚಾರವಾಗಿ ಕೇಂದ್ರ ಸರ್ಕಾರ ಕೂಡಲೇ ಮಧ್ಯ ಪ್ರವೇಶ ಮಾಡಿ ಸಂಕಷ್ಟ ಸೂತ್ರ ಸಿದ್ಧ ಮಾಡಬೇಕು ಅಂತ ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ (M B Patil) ಒತ್ತಾಯ ಮಾಡಿದ್ದಾರೆ.

    ಸುಪ್ರೀಂಕೋರ್ಟ್ (Supreme Court) ನಿಂದ 5 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಆದೇಶಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸುಪ್ರೀಂಕೋರ್ಟ್ ತೀರ್ಪು ಅತ್ಯಂತ ದುರಾದೃಷ್ಟಕರ. ನಮ್ಮಲ್ಲಿ ಕುಡಿಯೋಕೆ ನೀರಿಲ್ಲ. ಕೆಲವೇ ತಿಂಗಳಲ್ಲಿ ಬೆಂಗಳೂರಿಗೂ ಕುಡಿಯೋ ನೀರಿಗೂ ಸಮಸ್ಯೆ ಆಗುತ್ತದೆ. ಇಂತಹ ಸಮಯದಲ್ಲಿ ಎರಡು ಬೋರ್ಡ್ ಗಳು ಮತ್ತು ಸುಪ್ರೀಂಕೋರ್ಟ್ ವಾಸ್ತವ ಸ್ಥಿತಿಯನ್ನು ನೋಡಿಲ್ಲ. ನಮ್ಮ ಅಣೆಕಟ್ಟು, ತಮಿಳುನಾಡಿನ ಅಣೆಕಟ್ಟಿನಲ್ಲಿ (Tamilnadu Dam) ನೀರಿದೆ ಅಂತ ನೋಡಿಲ್ಲ. ಹೀಗಾಗಿ ಕೇಂದ್ರ ಸರ್ಕಾರ ಕೂಡಲೇ ಎಕ್ಸ್ ಪರ್ಟ್ ಟೀಂ ಕಳಿಸಿ ಸ್ಥಿತಿಗತಿಗಳ ಬಗ್ಗೆ, ವಾಸ್ತವ ಅಂಶ ಪರಿಶೀಲನೆ ಮಾಡಿಸಬೇಕು.ನೀರು ಬಿಡುವ ಆದೇಶ ಪರಿಶೀಲನೆ ಮಾಡಲು ಕೇಂದ್ರ ಮುಂದಾಗಬೇಕು ಎಂದರು.

    ಕಾವೇರಿ ವಿಚಾರವಾಗಿ (Cauvery Water) ಕೇಂದ್ರ ಜಲಶಕ್ತಿ ಇಲಾಖೆ ಮಧ್ಯ ಪ್ರವೇಶ ಮಾಡಬೇಕು. ಎಕ್ಸ್ ಪರ್ಟ್ ಕಮಿಟಿ ಕಳಿಸಬೇಕು. ಅಲ್ಲಿವರೆಗೂ ನೀರು ಬಿಡೋದನ್ನ ತಾತ್ಕಾಲಿಕ ನಿಲ್ಲಿಸಬೇಕು. ಎಕ್ಸ್ ಪರ್ಟ್ ಕಮಿಟಿ ವರದಿ ಕೊಟ್ಟ ಮೇಲೆ ಮುಂದೆ ನೀರು ಬಿಡುವ ವ್ಯವಸ್ಥೆ ಮಾಡಬೇಕು ಎಂದರು. ಇದನ್ನೂ ಓದಿ: ಕಾವೇರಿ ವಿಚಾರದಲ್ಲಿ ಗಲಾಟೆಗಳಾದ್ರೆ ಸರ್ಕಾರವೇ ಹೊಣೆ: ಆರ್.ಅಶೋಕ್

    ಈಗ ನಮಗೆ ಸಂಕಷ್ಟದ ದಿನ. ಅತ್ಯಂತ ಗಂಭೀರವಾದ ಸಮಸ್ಯೆ ಇದೆ. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ (Pralhad Joshi), ಶೋಭಾ ಕರಂದ್ಲಾಜೆ (Shobha Karandlaje) ಅವರು, ರಾಜ್ಯದ ಸಂಸದರು, ಮಾಜಿ ಸಿಎಂ ಬೊಮ್ಮಾಯಿ (Basavaraj Bommai), ಯಡಿಯೂರಪ್ಪ (BS Yediyurappa) ಅವರು ಕೂಡಾ ಕೇಂದ್ರ ಸರ್ಕಾರಕ್ಕೆ, ಪ್ರಧಾನಿಗಳಿಗೆ ಮನವರಿಕೆ ಮಾಡಬೇಕು. ನಮ್ಮ ರಾಜ್ಯದ ಹಿತ ಕೇಂದ್ರದ ನಮ್ಮ ಸಚಿವರು ಕಾಯಬೇಕು. ಅನಂತ್ ಕುಮಾರ್ ಹೇಗೆ ಸಹಕಾರ ಕೊಡ್ತಿದ್ದರು ಅದರಂತೆ ಸಹಕಾರ ಕೊಡಬೇಕು. ಈಗಲೂ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವ ಕೆಲಸ ನಮ್ಮ ರಾಜ್ಯದ ಕೇಂದ್ರ ಸಚಿವರು, ಸಂಸದರು ಮಾಡಬೇಕು. ಎಕ್ಸ್ ಪರ್ಟ್ ಕಮಿಟಿ ಕಳಿಸಿ ಪರಿಸ್ಥಿತಿ ಸರಿ ಮಾಡೋ ಕೆಲಸ ಮಾಡಬೇಕು. ಸಂಕಷ್ಟ ಸೂತ್ರವನ್ನ ಕೂಡಲೇ ಸಿದ್ಧ ಮಾಡಬೇಕು. ವೈಜ್ಞಾನಿಕ, ವಸ್ತುಸ್ಥಿತಿ ಇರೋ ಸಂಕಷ್ಟ ಸೂತ್ರವನ್ನ ಕೇಂದ್ರ ಸರ್ಕಾರ ಮಾಡಬೇಕು ಅಂತ ಒತ್ತಾಯ ಹಾಕಿದ್ರು.

    ನಾನು ಮಂತ್ರಿ ಆಗಿದ್ದಾಗ ಕಾವೇರಿ ತೀರ್ಪು ಬಂದಿತ್ತು. ನಾವು 192 ಟಿಎಂಸಿ ಬಿಡಬೇಕಿತ್ತು. ಆಗ ನಮ್ಮ ಕಾನೂನು ತಂಡ ಬಲವಾದ ವಾದ ಮಾಡಿದ್ವಿ. ಬಳಿಕ 192 ರಿಂದ 177 ಟಿಎಂಸಿಗೆ ಇಳಿಸಿತ್ತು. ಬೆಂಗಳೂರಿಗೆ ನೀರು ಕೇಳಿದಾಗ ತಮಿಳುನಾಡು ವಿರೋಧ ಮಾಡಿತ್ತು. ಬಳಿಕ ನಮ್ಮ ವಕೀಲರ ತಂಡ ಸಮರ್ಪಕವಾಗಿ ವಾದ ಮಂಡನೆ ಮಾಡಿತ್ತು. ಕುಡಿಯುವ ನೀರಿಗಾಗಿ ವಾದ ಮಾಡಿದ್ರು. ವಾದ ಮಾಡೋವಾಗ ಇಂದಿರಾಗಾಂಧಿ ಕೇಸ್ ಕೂಡಾ ಉಲ್ಲೇಖ ಮಾಡಿ ನಾರಿಮನ್ ವಾದ ಮಾಡಿದ್ರು. ಮಾನವೀಯತೆ ಆಧಾರದಲ್ಲಿ ನೀರಿನ ಬಗ್ಗೆ ಅಂದು ಬೆಂಗಳೂರಿಗೆ ನೀರು ಕೊಡಲು ಸುಪ್ರೀಂಕೋರ್ಟ್ ಒಪ್ಪಿಗೆ ಕೊಟ್ಟಿತ್ತು. ನಮ್ಮ ಸಮರ್ಪಕ ವಾದದಿಂದ ನೀರು ನಮಗೆ ಸಿಕ್ಕಿತ್ತು. ಇದರಿಂದ ಮೇಕೆದಾಟು ಮಾಡೋಕೆ ಶಕ್ತಿ ಬಂತು. ಮೇಕೆದಾಟು ಯೋಜನೆಯೂ ಆಗಬೇಕು.ತಮಿಳುನಾಡಿಗೆ ಇದರಿಂದ ಲಾಭ ಆಗುತ್ತದೆ. ಆದ್ರೆ ತಮಿಳುನಾಡು ಅರ್ಥ ಅರ್ಥ ಮಾಡಿಕೊಂಡಿಲ್ಲ. ಮೇಕೆದಾಟು (Mekedatu Project) ವಿಚಾರದಲ್ಲೂ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಬೇಕು ಅಂತ ಆಗ್ರಹಿಸಿದ್ರು.

    ಕಾವೇರಿ ವಿಚಾರದಲ್ಲಿ ಸರ್ಕಾರದ ನಿರ್ಲಕ್ಷ್ಯ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ತಿರುಗೇಟು ಕೊಟ್ಟ ಅವರು, ಸರ್ಕಾರ ನಿರ್ಲಕ್ಷ್ಯ ಮಾಡಿಲ್ಲ. ಸಮರ್ಥವಾಗಿ ವಾದ ಮಂಡನೆ ಮಾಡಿದೆ. ನಮ್ಮ ಕಾನೂನು ತಂಡ ಇದೆ. ಈಗ ನಾರಿಮನ್ ಇಲ್ಲ. ಆದರು ಉತ್ತಮವಾಗಿ ಲಾಯರ್ ಗಳ ತಂಡ ವಾದ ಮಂಡನೆ ಮಾಡ್ತಿದ್ದಾರೆ.ಸರ್ಕಾರ ನಮ್ಮ ಕರ್ತವ್ಯ ನಾವು ಮಾಡಿದ್ದೇವೆ. ಲಾಯರ್ ಗಳು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಮೇಲ್ಮನವಿ ಸಲ್ಲಕೆ ಮಾಡಬೇಕಾ ಅಂತ ಕಾನೂನು ತಜ್ಞರು ನಿರ್ಧಾರ ಮಾಡ್ತಾರೆ. ಆದರೂ ಸರ್ಕಾರ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಬೇಕು. ಎಕ್ಸ್ ಪರ್ಟ್ ಕಮಿಟಿ ಕಳಿಸಬೇಕು ಮತ್ತು ಸಂಕಷ್ಟ ಸೂತ್ರ ಸಿದ್ದ ಮಾಡಬೇಕು ಅಂತ ಕೇಂದ್ರದ ಕಡೆ ಬೊಟ್ಟು ಮಾಡಿದ್ರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸುಪ್ರೀಂ ತೀರ್ಪಿನಲ್ಲಿ ಕರ್ನಾಟಕಕ್ಕೆ ಹಿನ್ನಡೆ- KRS ಡ್ಯಾಂ ಬಳಿ ಬಿಗಿ ಭದ್ರತೆ

    ಸುಪ್ರೀಂ ತೀರ್ಪಿನಲ್ಲಿ ಕರ್ನಾಟಕಕ್ಕೆ ಹಿನ್ನಡೆ- KRS ಡ್ಯಾಂ ಬಳಿ ಬಿಗಿ ಭದ್ರತೆ

    ಮಂಡ್ಯ: ಕಾವೇರಿ ನೀರು (Cauvery Water) ವಿಚಾರವಾಗಿ ಸುಪ್ರೀಂ ಕೋರ್ಟ್ (Supreme Court) ತೀರ್ಪು ಹಿನ್ನೆಲೆ ಕೆಆರ್ ಎಸ್ ಡ್ಯಾಂ (KRS Dam) ಬಳಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

    ಮುನ್ನೆಚ್ಚರಿಕೆ ಕ್ರಮವಾಗಿ ಡ್ಯಾಂನ ಮುಖ್ಯ ದ್ವಾರದಲ್ಲಿ ಬಿಗಿ ಭದ್ರತೆ ಒದಗಿಸಲಾಗುತ್ತಿದೆ. ಯಾಕಂದ್ರೆ ಸುಪ್ರೀಂ ಕೋರ್ಟ್ ತೀರ್ಪು ನೀಡುತ್ತಿದ್ದಂತೆಯೇ ಮಂಡ್ಯದಲ್ಲಿ ಪ್ರತಿಭಟನೆಯ ಕಾವು ಜೋರಾಗಿದೆ.

    ಕೆಆರ್‍ಎಸ್ ಪಕ್ಷದಿಂದ ಪ್ರತಿಭಟನೆ ನಡೆಯುತ್ತಿದ್ದು, ಬೈಕ್ ರ್ಯಾಲಿ ಮೂಲಕ ಆಕ್ರೋಶ ಹಾಕುತ್ತಿದ್ದಾರೆ. ಇತ್ತ ಹಿರಿಯ ಜೀವಗಳು ಕಣ್ಣೀರು ಹಾಕುತ್ತಾ ಆಕ್ರೋಶದ ಮಾತುಗಳನ್ನು ಹೊರಹಾಕುತ್ತಿದ್ದಾರೆ. ಇನ್ನೊಂದೆಡೆ ರೈತಪರ, ಕನ್ನಡಪರ, ಪ್ರಗತಿಪರ ಸಂಘಟನೆಗಳು ಮಂಡ್ಯದಲ್ಲಿ ಬೆಂ-ಮೈ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿವೆ. ಅಲ್ಲದೆ ಸುಪ್ರೀಂಕೋರ್ಟ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿವೆ.

    ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ನುಸುಳಿ ಹೋಗುತ್ತಿದ್ದ ಕಾರು ಚಾಲಕನಿಗೆ ರೈತರು ಫುಲ್ ಕ್ಲಾಸ್ ತೆಗೆದುಕೊಂಡ ಪ್ರಸಂಗ ಕೂಡ ನಡೆದಿದೆ. ಕುಡಿಯೋ ನೀರಿಗಾಗಿ ನಾವು ಪ್ರತಿಭಟನೆ ಮಾಡ್ತಾ ಇದ್ದೀವಿ. ಎಲ್ಲಿಗೆ ಹೋಗ್ತಾ ಇದ್ದೀಯಾ ಎಂದು ಕ್ಲಾಸ್ ಮಾಡಿದ್ದಾರೆ. ಕಾವೇರಿ ನೀರು ಇಲ್ಲದಿದ್ದೇರೆ ಏನ್ ಆಗುತ್ತೆ ಎಂದು ಬಣ್ಣಿಸಿ ಹಾಡಿನ ಮೂಲಕ ವಿಭಿನ್ನ ಪ್ರತಿಭಟನೆಗಳು ನಡೆಯುತ್ತಿವೆ.

    ಕೋರ್ಟ್ ಹೇಳಿದ್ದೇನು..?: ತಮಿಳುನಾಡಿಗೆ ನಿತ್ಯ 5,000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಆ ಮೂಲಕ ರಾಜ್ಯಕ್ಕೆ ಸರ್ವೋಚ್ಚ ನ್ಯಾಯಾಲಯದಲ್ಲೂ ಹಿನ್ನಡೆಯಾಗಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೊರಡಿಸಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕರ್ನಾಟಕ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಇಂದು (ಗುರುವಾರ) ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರಾಧಿಕಾರದ ಆದೇಶದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶಿವಕುಮಾರ್ ಒಬ್ಬ ನೀರಿನ ಕಳ್ಳ, ಅಯೋಗ್ಯ: ಈಶ್ವರಪ್ಪ ಕಿಡಿ

    ಶಿವಕುಮಾರ್ ಒಬ್ಬ ನೀರಿನ ಕಳ್ಳ, ಅಯೋಗ್ಯ: ಈಶ್ವರಪ್ಪ ಕಿಡಿ

    ಶಿವಮೊಗ್ಗ: ರಾಜ್ಯದ ರೈತರ ಹಿತವನ್ನು ಬಲಿಕೊಟ್ಟು ತಮಿಳುನಾಡಿಗೆ ನೀರು ಹರಿಸುತ್ತಿರುವ ಡಿಸಿಎಂ ಡಿ.ಕೆ ಶಿವಕುಮಾರ್ (D.K Shivakumar) ಒಬ್ಬ ನೀರಿನ ಕಳ್ಳ, ಅಯೋಗ್ಯ ಉಪಮುಖ್ಯಮಂತ್ರಿ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (K.S Eshwarappa ) ಕಿಡಿಕಾರಿದ್ದಾರೆ.

    ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯಾಗದೇ ಭೀಕರ ಬರಗಾಲ ಎದುರಾಗಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಸಹ ಎದುರಾಗಲಿದೆ. ಹೀಗಿರುವಾಗ ಕಾಂಗ್ರೆಸ್ ಸರ್ಕಾರ ಕಾವೇರಿ ನೀರನ್ನು (Cauvery Water) ತಮಿಳುನಾಡಿಗೆ ಹರಿಸಿ ರಾಜ್ಯದ ಜನರಿಗೆ ದ್ರೋಹ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಕಾವೇರಿ ವಿಚಾರದಲ್ಲಿ ಒಗ್ಗಟ್ಟು, ಸರ್ವಪಕ್ಷ ಸಂಸದರ ಬೆಂಬಲ: ಡಿಕೆಶಿ

    ಕಾಂಗ್ರೆಸ್‍ನವರು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಬೇಕೆಂಬ ಹಂಬಲದಲ್ಲಿದ್ದಾರೆ. I.N.D.I.A ಮೈತ್ರಿ ಕೂಟವನ್ನು ತೃಪ್ತಿ ಪಡಿಸುವ ಸಲುವಾಗಿ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದ್ದಾರೆ. ಡಿಕೆಶಿ ಒಬ್ಬ ನೀರಿನ ಕಳ್ಳ ಎಂದರೆ ತಪ್ಪಾಗಲಾರದು. ನಮ್ಮ ರಾಜ್ಯದ ರೈತರಿಗೆ ಅವರು ದ್ರೋಹ ಮಾಡಿದ್ದಾರೆ ಎಂದು ಅವರು ಕುಟುಕಿದ್ದಾರೆ.

    ತಮಿಳುನಾಡಿಗೆ ನೀರು ಬಿಟ್ಟಿಲ್ಲ, ಬಿಟ್ಟಿಲ್ಲ ಎಂದು ಹೇಳುತ್ತಲೇ ಪ್ರತಿನಿತ್ಯ ನೀರು ಹರಿಸುತ್ತಿದ್ದಾರೆ. ತಮಿಳುನಾಡನ್ನು I.N.D.I.A ಒಕ್ಕೂಟದ ತೆಕ್ಕೆಯಲ್ಲಿ ಇಟ್ಟುಕೊಳ್ಳಬೇಕು ಎಂಬ ಉದ್ದೇಶದಿಂದ ರಾಜ್ಯದ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ವಿಧಾನಸಭೆಯೊಳಗೆ ಮಾತ್ರ ಗಲಾಟೆ, ಹೊರಗಡೆ ಎಲ್ಲರೂ ಸ್ನೇಹಿತರೇ ಆಗಿರ್ತಾರೆ: ಯು.ಟಿ. ಖಾದರ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಮಿಳುನಾಡಿಗೆ ನೀರು ಬಿಟ್ಟು ಸುಪ್ರೀಂನಲ್ಲಿ ವಾದ ಮಾಡಲು ಏನಿದೆ?: ಬೊಮ್ಮಾಯಿ

    ತಮಿಳುನಾಡಿಗೆ ನೀರು ಬಿಟ್ಟು ಸುಪ್ರೀಂನಲ್ಲಿ ವಾದ ಮಾಡಲು ಏನಿದೆ?: ಬೊಮ್ಮಾಯಿ

    ಬೆಂಗಳೂರು: ಕಾವೇರಿ (Cauvery Water) ವಿಚಾರದಲ್ಲಿ ರಾಜ್ಯ ಸರ್ಕಾರ ಮೇಲಿಂದ ಮೇಲೆ ತಪ್ಪು ಮಾಡುವ ಮೂಲಕ ರಾಜ್ಯದ ಜನತೆಯನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದೆ. ಸಿಡಬ್ಲುಎಂಎ ಆದೇಶದಂತೆ ನೀರು ಬಿಡುವುದಾದರೆ ಸುಪ್ರೀಂ ಕೋರ್ಟ್‍ನಲ್ಲಿ ವಾದ ಮಾಡಲು ಏನಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಪ್ರಶ್ನಿಸಿದ್ದಾರೆ.

    ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸೆ.12ರ ನಂತರ ನೀರು ತಮಿಳುನಾಡಿಗೆ (Tamil Nadu) ಬಿಡಲು ಆಗುವುದಿಲ್ಲ ಎಂದು ಸುಪ್ರೀಂ ಕೊರ್ಟ್ ಮುಂದೆ ಅಫಿಡವಿಟ್ ಹಾಕಿದೆ. ಅದಕ್ಕೆ ತಾವು ಬದ್ಧರಾಗಿರಬೇಕು. ಸರ್ಕಾರದ ಅಫಿಡವಿಟ್ ಎಂದರೆ ಸುಮ್ಮನೆ ಆಗುವುದಿಲ್ಲ. ರಾಜ್ಯ ಸರ್ಕಾರ ಸುಪ್ರಿಂ ಕೋರ್ಟ್ ಮುಂದೆ ತಾನೇ ಸುಳ್ಳು ಹೇಳುತ್ತಿದೆ ಎಂದಾಯಿತು ಎಂದಿದ್ದಾರೆ. ಇದನ್ನೂ ಓದಿ: ಹಿಂದೆ ಏನಾಯ್ತು ಅನ್ನೋದು ಮುಖ್ಯವಲ್ಲ, ಇಂದು ಏನಾಯ್ತು ಎಂಬುದು ಮುಖ್ಯ: ದಿನೇಶ್ ಗುಂಡೂರಾವ್

    ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನಾನು ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದ್ದೇನೆ ಎಂದು ಹೇಳಿದ್ದಾರೆ. ಅವರನ್ನು ಇಕ್ಕಟ್ಟಿಗೆ ಸಿಲುಕಿಸುವುದರಿಂದ ನನಗೇನು ಆಗುವುದಿಲ್ಲ. ಅದರ ಅಗತ್ಯ ಕೂಡ ನನಗಿಲ್ಲ. ಸರ್ಕಾರದ ನಡೆ ರಾಜ್ಯದ ರೈತರನ್ನು, ಕಾವೇರಿ ಮಕ್ಕಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ರಾಜ್ಯದ ಹಿತ ದೃಷ್ಟಿಯಿಂದ ನಾನು ಸಲಹೆ ನೀಡಿದ್ದೇನೆ. ಸರ್ಕಾರ ನಮ್ಮ ಸಲಹೆಯನ್ನು ಸ್ವೀಕರಿಸಲು ತಯಾರಿಲ್ಲ. ಸರ್ಕಾರ ನಡೆಸುವವರಿಗೆ ಜವಾಬ್ದಾರಿ, ಅರಿವು ಇರಬೇಕು. ವಕೀಲರು ಯಾವಾಗಲೂ ನೀರು ಬಿಡುವಂತೆ ಸಲಹೆ ನಿಡುತ್ತಾರೆ. ನಾವು ಅದನ್ನು ಬದಲಾಯಿಸಿದ್ದೆವು. ನಮ್ಮ ಅವಧಿಯಲ್ಲಿ ರಾತ್ರೋರಾತ್ರಿ ನೀರು ಬಿಟ್ಟಿಲ್ಲ. ನೀವು ಸಿಡಬ್ಲುಎಂಎ ಆದೇಶ ಪಾಲನೆ ಮಾಡಿದ ಮೇಲೆ ಸುಪ್ರೀಂ ಕೋರ್ಟ್ ಮುಂದೆ ಹೇಳುವುದೇನಿದೆ ಎಂದು ಪ್ರಶ್ನಿಸಿದ್ದಾರೆ.

    ಈಗ ಪ್ರಧಾನಿ ಬಳಿ ಹೋಗುವುದರಲ್ಲಿ ಅರ್ಥವಿಲ್ಲ. ಮುಂಚೆಯೇ ಈ ವಿಚಾರ ಪ್ರಧಾನಿ ಬಳಿ ಚರ್ಚೆಯಾಗಿದೆ. ಈಗ ಅಲ್ಲಿ ಚರ್ಚೆ ಅಗತ್ಯವಿಲ್ಲ. ಸುಮ್ಮನೆ ರಾಜ್ಯದ ಜನರ ದಾರಿ ತಪ್ಪಿಸಲು ರಾಜ್ಯ ಸರ್ಕಾರ ಪ್ರಧಾನಿ ಬಳಿ ನಿಯೋಗ ತೆಗೆದುಕೊಂಡು ಹೋಗುವುದಾಗಿ ಹೇಳುತ್ತಿದೆ. ನಮ್ಮ ವಕೀಲರು ತಮಿಳುನಾಡಿನ ಅಣೆಕಟ್ಟುಗಳಲ್ಲಿನ ನೀರಿನ ವಸ್ತುಸ್ಥಿತಿ, ಅವರು ಬಳಕೆ ಮಾಡಿರುವ ನೀರಿನ ಪ್ರಮಾಣವನ್ನು ಸುಪ್ರೀಂ ಕೋರ್ಟ್‍ಗೆ ಮನವರಿಕೆ ಮಾಡುವ ಕೆಲಸ ಮಾಡದಿದ್ದರೆ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ರಾಜ್ಯದ ಪರ ವಕೀಲರು ಮೊದಲಿನಿಂದಲೂ ಇದ್ದಾರೆ. ನಮ್ಮ ಅವಧಿಯಲ್ಲಿಯೂ ಅವರೇ ಕೆಲಸ ಮಾಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಸೂಕ್ತ ಸಲಹೆ ಕೊಡಲು ನಾವು ತಯಾರಿದ್ದೇವೆ. ಅವರು ಸಲಹೆ ತೆಗೆದುಕೊಳ್ಳಲು ಸಿದ್ಧರಿಲ್ಲದಿದ್ದರೆ ಏನು ಮಾಡುವುದು ಎಂದಿದ್ದಾರೆ.

    ಮಾಜಿ ಪ್ರಧಾನಿ ದೇವೇಗೌಡರು ನ್ಯಾಯಾಲಯದ ಹೊರಗೆ ಈ ವಿಷಯ ಇತ್ಯರ್ಥ ಮಾಡಿಕೊಳ್ಳಬೇಕು ಎಂದು ನೀಡಿರುವ ಸಲಹೆ ಕುರಿತು, ಮಾತುಕತೆಗೆ ತಮಿಳುನಾಡು ಸಹಕಾರ ನೀಡುವುದಿಲ್ಲ. ಮೊದಲಿನಿಂದಲೂ ಅವರು ಅಸಹಕಾರ ತೋರುತ್ತಲೇ ಬಂದಿದ್ದಾರೆ. ತಮಿಳುನಾಡು ಸಂಸದರು ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡುತ್ತಿರುವ ಕುರಿತು, ನಮ್ಮ ಸಂಸತ್ ಸದಸ್ಯರು ಕೇಂದ್ರ ನಿರಾವರಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ಸೂಚಿಸಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಮಹಿಳಾ ಮೀಸಲಾತಿಯನ್ನ ಕಾಂಗ್ರೆಸ್ ಸ್ವಾಗತ ಮಾಡುತ್ತದೆ: ದಿನೇಶ್ ಗುಂಡೂರಾವ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಿಂದೆ ಏನಾಯ್ತು ಅನ್ನೋದು ಮುಖ್ಯವಲ್ಲ, ಇಂದು ಏನಾಯ್ತು ಎಂಬುದು ಮುಖ್ಯ: ದಿನೇಶ್ ಗುಂಡೂರಾವ್

    ಹಿಂದೆ ಏನಾಯ್ತು ಅನ್ನೋದು ಮುಖ್ಯವಲ್ಲ, ಇಂದು ಏನಾಯ್ತು ಎಂಬುದು ಮುಖ್ಯ: ದಿನೇಶ್ ಗುಂಡೂರಾವ್

    ಬೆಂಗಳೂರು: ಹಿಂದೆ ಏನಾಯಿತು ಎಂಬುದು ಮುಖ್ಯ ಅಲ್ಲ, ಇವತ್ತು ಏನಾಯಿತು ಎಂಬುದು ಮುಖ್ಯ. ನೀರಿನ ವಿಚಾರ ಬಂದಾಗ ಎಲ್ಲಾ ರಾಜಕೀಯ ಪಕ್ಷಗಳು ಒಗ್ಗಟ್ಟಾಗಿ ಕೆಲಸ ಮಾಡಿದ್ದೇವೆ. ಈಗಲೂ ಒಗ್ಗಟ್ಟಾಗಿ ಇರಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ (Dinesh Gundurao) ಹೇಳಿದರು.

    ಕಾವೇರಿ ಜಲವಿವಾದ (Cauvery Water Disputes) ವಿಚಾರಕ್ಕೆ ಪ್ರತಿಕ್ರಿಯಿಸಿ, ಸರ್ಕಾರ ಕೆಲವು ತೀರ್ಮಾನ ತೆಗೆದುಕೊಂಡಿತ್ತು. ಈ ಬೆಳವಣಿಗೆ ನಂತರ ಸಿಎಂ, ಡಿಸಿಎಂ ಕುಳಿತು ಒಂದು ನಿರ್ಧಾರ ತೆಗೆದುಕೊಳ್ಳಬೇಕು. ರಾಜ್ಯದ ಪರವಾಗಿ ಏನೇನು ತೀರ್ಮಾನ ತೆಗೆದುಕೊಳ್ಳಬೇಕು. ಅದನ್ನು ನಮ್ಮ ಸರ್ಕಾರ ಖಂಡಿತಾ ಮಾಡುತ್ತದೆ. ಇದರಲ್ಲಿ ಯಾವುದೇ ಅನುಮಾನ ಪಡುವಂತದ್ದು ಇಲ್ಲ ಎಂದರು.

    ಒಂದೊಂದು ಸನ್ನಿವೇಶದಲ್ಲಿ ಒಂದೊಂದು ಬೇಡಿಕೆ ಬರುತ್ತಿರುತ್ತವೆ. ಮಳೆ ಕಡಿಮೆಯಾದಾಗ ಬೇಡಿಕೆಗಳು ಹೆಚ್ಚಾಗುತ್ತದೆ. ಬೇಡಿಕೆಗಳು ಹೆಚ್ಚಾದಾಗ ಒತ್ತಡಗಳು ಬರುತ್ತವೆ. ಎಸ್.ಎಂ ಕೃಷ್ಣ ಅವರ ಅವಧಿಯಲ್ಲಿ ಪಾದಯಾತ್ರೆ ಮಾಡಿದ್ವಿ, ನೀರು ಕೊಡಲು ಆಗಲ್ಲ ಎಂದು ಹೇಳಬೇಕಾಗಿತ್ತು. ತಮಿಳುನಾಡು – ಕರ್ನಾಟಕ ನಡುವೆ ಸಾಕಷ್ಟು ವ್ಯಾಜ್ಯಗಳು ನಡೆದಿವೆ. ಈಗ ಪ್ರಾಧಿಕಾರ ರಚನೆ ಆಗಿದೆ. ಒಂದೆಡೆ ಕಾನೂನಾತ್ಮಕ ಹೋರಾಟ ಮಾಡ್ತೇವೆ. ಪ್ರಾಧಿಕಾರ ರಚನೆ ಸಂಪೂರ್ಣ ನಿಯಂತ್ರಣ ಅದಕ್ಕೆ ನೀಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಆಸ್ಟ್ರೇಲಿಯಾ ಏಕದಿನ ಸರಣಿಗೆ ಭಾರತ ತಂಡ ಪ್ರಕಟ – ಕೆ.ಎಲ್‌ ರಾಹುಲ್‌ಗೆ ನಾಯಕತ್ವ, ಸೂರ್ಯನಿಗೂ ಚಾನ್ಸ್‌

    ಡಿಸಿಎಂ ಹುದ್ದೆ ಸೃಷ್ಟಿ ವಿಚಾರದ ಕುರಿತು ಮಾತನಾಡಿ, ನನಗೆ ಗೊತ್ತಿಲ್ಲ, ಈ ವಿಚಾರ ಸಾರ್ವಜನಿಕ ವಲಯದಲ್ಲಿ ಚರ್ಚೆ ಮಾಡೋದಲ್ಲ. ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ದ ಎಂದು ಸಿಎಂ ಈಗಾಗಲೇ ಹೇಳಿದ್ದಾರೆ. ಆ ಸಂದರ್ಭದ ಬಂದಾಗ ಸಿಎಂ, ಮತ್ತು ಕೇಂದ್ರ ನಾಯಕರು ಮಾಡುತ್ತಾರೆ. ಇದನ್ನು ಸಾರ್ವಜನಿಕ ವಲಯದಲ್ಲಿ ಚರ್ಚೆ ಮಾಡುವ ಅವಶ್ಯಕತೆಯಿಲ್ಲ ಎಂದು ಹೇಳಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಊಸರವಳ್ಳಿ ಸರ್ಕಾರ, ನೀರು ಬಿಡಲ್ಲ ಎಂದು ನೀರು ಬಿಡ್ತೀವಿ ಅಂತಿದ್ದಾರೆ: ಬೊಮ್ಮಾಯಿ ಕಿಡಿ

    ಊಸರವಳ್ಳಿ ಸರ್ಕಾರ, ನೀರು ಬಿಡಲ್ಲ ಎಂದು ನೀರು ಬಿಡ್ತೀವಿ ಅಂತಿದ್ದಾರೆ: ಬೊಮ್ಮಾಯಿ ಕಿಡಿ

    ಬೆಂಗಳೂರು: ಆರಂಭದಲ್ಲಿ ಸಿಎಂ ನೀರು ಬಿಡಲ್ಲ ಅಂದ್ರು, ಆಮೇಲೆ ನೀರು ಬಿಡ್ತೀವಿ ಅಂತಾರೆ. ಇದು ಊಸರವಳ್ಳಿ ಸರ್ಕಾರ ಅಂತ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ವಾಗ್ದಾಳಿ ನಡೆಸಿದ್ದಾರೆ.

    ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾವೇರಿ ನೀರು (Cauvery Water) ಬಿಡುವ ವಿಚಾರದಲ್ಲಿ ತಮಿಳುನಾಡಿನ (Tamil Nadu) ಪ್ರಭಾವ ರಾಜ್ಯ ಸರ್ಕಾರದ ಮೇಲೆ ಇದ್ದಂಗೆ ಇದೆ. ಸುಪ್ರೀಂ ಕೋರ್ಟ್ ನಲ್ಲಿ (Supreme Court) ವಿಚಾರಣೆ ಆಗಿಲ್ಲ. ಅದಕ್ಕಿಂತ ಮುಂಚೇನೇ ಇವರು ನೀರು ಬಿಡ್ತಾರೆ ಅಂದರೆ ಹೇಗೆ? ಕಾವೇರಿ ಜಲಾನಯನ ಜನರಿಗೆ ಮೋಸ ಮಾಡಿದಂತೆ ಆಗುತ್ತೆ. ಸರ್ವಪಕ್ಷ ಸಭೆಯಲ್ಲಿ ನಮ್ಮಲ್ಲೇ ನೀರಿಲ್ಲ ಅಂತ ಹೇಳಿದ್ರು. ಆಗಾಗ್ಗೆ ತನ್ನ ನಿರ್ಧಾರ ಬದಲಾವಣೆ ಮಾಡಿಕೊಳ್ಳುತ್ತಿದೆ. ನಿಜವಾಗಿಯೂ ತಾಕತ್‌, ಧಮ್ ಇದ್ರೆ ನೀರು ಬಿಡ್ತಿರಲಿಲ್ಲ. ತಾಕತ್, ಧಮ್ ಇದ್ರೆ ಸುಪ್ರೀಂ ಕೋರ್ಟ್ ಮುಂದೆ ನೀರು ಬೀಡಲ್ಲ ಎಂಬ ವಾದ ಮಂಡಿಸಲಿ ಎಂದು ಸವಾಲ್‌ ಹಾಕಿದ್ದಾರೆ.

    ಕಾವೇರಿ ವಿಚಾರದಲ್ಲಿ ಈ ರೀತಿಯಾಗಿ ಯಾವ ಸರ್ಕಾರವೂ ನಡೆದುಕೊಂಡಿಲ್ಲ. ಈ ವಿಚಾರದಲ್ಲಿ ಪ್ರಧಾನಿ ಮಧ್ಯಪ್ರವೇಶ ಆಗುವ ಪ್ರಶ್ನೆಯೇ ಇಲ್ಲ. ಏಕೆಂದರೆ ಸುಪ್ರೀಂ ಕೋರ್ಟ್ ನಲ್ಲಿ ಕೇಸ್ ಇದೆ. ತಮ್ಮ ತಪ್ಪು ಮುಚ್ಚಿಕೊಳ್ಳಲು ಈ ರೀತಿಯ ಹೇಳಿಕೆ ಕೊಡ್ತಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಒಂದು ದೇಶ, ಒಂದು ಚುನಾವಣೆ – ಸೆ.23 ರಂದು ಮಾಜಿ ರಾಷ್ಟ್ರಪತಿ ಕೋವಿಂದ್ ನೇತೃತ್ವದಲ್ಲಿ ಮೊದಲ ಸಭೆ

    ಯಾವುದೇ ಆಜ್ಞೆ ಇಲ್ಲದೇ ನೀರು ಬಿಟ್ಟಿದ್ದು ಕಾವೇರಿ ಇತಿಹಾಸದಲ್ಲೇ ಕರಾಳ ದಿನ ಇವತ್ತು. ಸುಪ್ರೀಂನಲ್ಲಿ ಕೇಸ್ ಇರುವಾಗ ಪ್ರಧಾನಿ ಹೇಗೆ ಎಂಟ್ರಿ ಆಗೋಕೆ ಆಗುತ್ತೆ? ಮನಮೋಹನ್ ಸಿಂಗ್ ಇದ್ದಾಗಲೂ ವಿವಾದ ಇತ್ತು. ಮನಮೋಹನ್ ಸಿಂಗ್ ಮಧ್ಯಪ್ರವೇಶ ಮಾಡಿದ್ರಾ? ಮಾಡೋದಕ್ಕೆ ಆಗುತ್ತಾ? ಗೊತ್ತಿದ್ದರೂ ರಾಜ್ಯ ಸರ್ಕಾರ, ಕೇಂದ್ರದ ಕಡೆ ಬೊಟ್ಟು ಮಾಡಿ ತೋರಿಸುತ್ತಿದೆ. ಕಾವೇರಿ ಕೊಳ್ಳದ ಮಕ್ಕಳಿಗೂ ಸರ್ಕಾರದ ಹಣೆಬರಹ ಗೊತ್ತಿದೆ. ತಮಿಳುನಾಡಿನ ಪ್ರಭಾವಕ್ಕೆ ಮಣಿದು ನೀರು ಬಿಟ್ಟಿದ್ದು ಆಘಾತಕಾರಿ ವಿಚಾರ. ಇದರ ವಿರುದ್ಧ ತೀವ್ರವಾದ ಪ್ರತಿಭಟನೆ ನಮ್ಮ ಪಕ್ಷ ಮಾಡುತ್ತೆ. ಬಿಜೆಪಿಯಿಂದ ಕಾವೇರಿ ರಕ್ಷಣೆಯಾತ್ರೆ ಇನ್ನೆರಡು ದಿನಗಳಲ್ಲಿ ಫೈನಲ್ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಗುಡ್‌ನ್ಯೂಸ್‌ː ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಳ, ಒಂದೇ ವಾರದಲ್ಲಿ 3 ಅಡಿ ನೀರು ಸಂಗ್ರಹ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೆ.21ರಂದು ಸುಪ್ರೀಂಗೆ ಕೆಆರ್‌ಎಸ್ ಚಿತ್ರಣ ಮನವರಿಕೆ ಮಾಡಿ – ಪ್ರತಿಭಟನಾಕಾರರ ಆಕ್ರೋಶ

    ಸೆ.21ರಂದು ಸುಪ್ರೀಂಗೆ ಕೆಆರ್‌ಎಸ್ ಚಿತ್ರಣ ಮನವರಿಕೆ ಮಾಡಿ – ಪ್ರತಿಭಟನಾಕಾರರ ಆಕ್ರೋಶ

    ಮಂಡ್ಯ: ಕೆಆರ್‌ಎಸ್ (KRS) ಡ್ಯಾಂನಲ್ಲಿ ನೀರಿನ ಮಟ್ಟ ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿದೆ. ಇದನ್ನು ಮುಂದಿನ ವಿಚಾರಣೆ ಸೆ.21ರಂದು ಸುಪ್ರೀಂ ಕೋರ್ಟ್‍ಗೆ (Supreme Court) ಮನವರಿಕೆ ಮಾಡಿಕೊಡಬೇಕು. ಇಲ್ಲಿಯವರೆಗೂ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿಲ್ಲ ಎಂದು ರೈತ ಹಿತರಕ್ಷಣಾ ಸಮಿತಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಹಳೆ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ರೈತ ಹಿತರಕ್ಷಣಾ ಸಮಿತಿ ಸದಸ್ಯರು, ರಾಜ್ಯ ಸರ್ಕಾರ ಕಾನೂನು ತಜ್ಞರ ಜೊತೆ ಚರ್ಚೆ ಮಾಡುತ್ತೇವೆ ಎಂದು ಹೇಳಿದೆ. ಸುಪ್ರೀಂ ಕೋರ್ಟ್ ಆದೇಶ ಎಂದು ಮತ್ತೆ ನೀರು ಬಿಟ್ಟರೆ ಕುಡಿಯುವ ನೀರು ಸಿಗುವುದಿಲ್ಲ. ಆದ್ದರಿಂದ ನಮ್ಮಲ್ಲಿ ಆತಂಕ ಮುಂದುವರೆದಿದೆ. ಇದರಿಂದಾಗಿ ನೀರು ಬಿಡುವುದಿಲ್ಲ ಎಂದು ಸ್ಪಷ್ಟವಾಗಿ ರಾಜ್ಯ ಸರ್ಕಾರ ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಇಂದು ಕಾವೇರಿ ನೀರು ನಿಯಂತ್ರಣಾ ಸಮಿತಿ ಹೈವೋಲ್ಟೇಜ್ ಸಭೆ

    ಈ ವೇಳೆ ಕಾವೇರಿ ನೀರು ನಿಯಂತ್ರಣ ಸಮಿತಿ, ಕಾವೇರಿ ಪ್ರಾಧಿಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆದ್ದಾರಿ ತಡೆಯಿಂದ ಕೆಲ ಕಾಲ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಸಹ ಉಂಟಾಗಿತ್ತು.

    ಕೆಆರ್‍ಎಸ್ ಡ್ಯಾಂನ ನೀರು 20 ಟಿಎಂಸಿಗೆ ಕುಸಿತ ಕಂಡಿದೆ. 20 ಟಿಎಂಸಿ ನೀರಿನ ಪೈಕಿ ಬಳಕೆಗೆ ಕೇವಲ 15 ಟಿಎಂಸಿ ನೀರು ಮಾತ್ರ ಲಭ್ಯವಾಗುತ್ತದೆ. ಡ್ಯಾಂನಲ್ಲಿ ಇಂದು 97.52 ಅಡಿಯಷ್ಟು ಮಾತ್ರ ನೀರು ಇದ್ದು, ಡ್ಯಾಂನ ಒಳಹರಿವು 2,985 ಕ್ಯೂಸೆಕ್ ಆಗಿದೆ. ಹೊರ ಹರಿವು 4,742 ಕ್ಯೂಸೆಕ್ ಆಗಿದೆ. ಇದನ್ನೂ ಓದಿ: CWRC ಆದೇಶ ಪಾಲನೆ ಅಸಾಧ್ಯ, ತಮಿಳುನಾಡಿಗೆ ನೀರು ಬಿಡಲ್ಲ: ಕೇಂದ್ರಕ್ಕೆ ಸಿಎಂ ಪತ್ರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಮಿಳುನಾಡಿಗೆ ಕಾವೇರಿ ನೀರು – ಸರ್ಕಾರದ ಮುಂದಿನ ನಡೆ ಏನು?

    ತಮಿಳುನಾಡಿಗೆ ಕಾವೇರಿ ನೀರು – ಸರ್ಕಾರದ ಮುಂದಿನ ನಡೆ ಏನು?

    ಬೆಂಗಳೂರು: ಒಂದು ಕಡೆ ಮಳೆಯ ಸುಳಿವಿಲ್ಲ, ಕ್ಷಾಮ ಆವರಿಸುತ್ತಿದೆ, ಜಲಾಶಯಗಳಲ್ಲೂ ನೀರಿನ ಸಂಗ್ರಹ ಮಟ್ಟ ಗಣನೀಯವಾಗಿ ಕುಸಿದಿದೆ. ಈ ಹೊತ್ತಲ್ಲೇ ಗಾಯದ ಮೇಲೆ ಬರೆ ಎಳೆಯುವ ರೀತಿ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ (CWRC) ಕರುನಾಡಿಗೆ ಬಿಗ್ ಶಾಕ್ ನೀಡಿದೆ. ಕರ್ನಾಟಕ (Karnataka) ವಾಸ್ತವ ವರದಿಯನ್ನು ಮನವರಿಕೆ ಮಾಡಿಕೊಟ್ಟಿದ್ದರೂ ತಮಿಳುನಾಡು (Tamil Nadu) ವಾದಕ್ಕೆ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಮಣೆ ಹಾಕಿದೆ. ಮುಂದಿನ 15 ದಿನಗಳ ಕಾಲ ನಿತ್ಯ ಐದು ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

    ನಮ್ಮ ಬೆಳೆಗಳು ಒಣಗುತ್ತಿವೆ. ಕಳೆದ ಬಾರಿ ಆದೇಶದಂತೆ ನಿತ್ಯ 5000 ಕ್ಯೂಸೆಕ್ ನೀರು ಬಿಡಬೇಕಿತ್ತು. ಆದರೆ ಕರ್ನಾಟಕ ನಿತ್ಯ 3000-3400 ಕ್ಯೂಸೆಕ್ ಬಿಡುಗಡೆ ಮಾಡಿದೆ. 36.76 ಟಿಎಂಸಿ ಬಿಡುಗಡೆ ಬಾಕಿ ಉಳಿಸಿಕೊಂಡಿದೆ ಎಂದು ತಮಿಳುನಾಡು ವಾದ ಮಂಡಿಸಿತ್ತು. ಕರ್ನಾಟಕ ವಾಸ್ತವ ಪರಿಸ್ಥಿತಿ ವಿವರಿಸಿದರೂ ಕೂಡ ತಮಿಳುನಾಡು ವಾದಕ್ಕೆ ಸಮಿತಿ ಮಣೆ ಹಾಕಿದೆ. ನಿತ್ಯ 5000 ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡಿದೆ. ಹೀಗಾಗಿ ರಾಜ್ಯ ಸರ್ಕಾರದ ಮುಂದಿನ ನಡೆ ಏನು ಎಂಬುದು ಸದ್ಯದ ಕುತೂಹಲ. ಇದನ್ನೂ ಓದಿ: ಉಡುಪಿಯಲ್ಲಿ ಚೈತ್ರಾ ಕುಂದಾಪುರ ಅರೆಸ್ಟ್

     

    ಸರ್ಕಾರದ ಮುಂದಿನ ನಡೆ ಏನು?
    ಈಗಿನ ಪರಿಸ್ಥಿತಿಯಲ್ಲಿ ಸಿಡಬ್ಲ್ಯೂಆರ್‌ಸಿ ಶಿಫಾರಸು ಪಾಲನೆ ಕಷ್ಟ. ಇಂದು ಸಿಡಬ್ಲ್ಯೂಎಂಎ ಸಭೆಯಲ್ಲಿ ರಾಜ್ಯದ ಕಷ್ಟದ ಪರಿಸ್ಥಿತಿಯನ್ನು ವಿವರಿಸಿ ಸಿಡಬ್ಲ್ಯೂಆರ್‌ಸಿ ಶಿಫಾರಸು ಪಾಲನೆ ಸಾಧ್ಯವಿಲ್ಲ ಎಂದು ಮನವರಿಕೆ ಮಾಡಲಿದೆ.

    ಸಿಡಬ್ಲ್ಯೂಎಂಎ ನಿಯೋಗವನ್ನು ರಾಜ್ಯಕ್ಕೆ ಕಳಿಸಿ ಪರಿಸ್ಥಿತಿ ತಿಳಿದುಕೊಳ್ಳಬೇಕು ಜೊತೆಗೆ ಎರಡೂ ರಾಜ್ಯಗಳಿಗೂ ಸಂಕಷ್ಟ ಸೂತ್ರ ಸಿದ್ಧಪಡಿಸುವಂತೆ ಮನವಿ ಮಾಡುವ ಸಾಧ್ಯತೆಯಿದೆ. ಕಾನೂನು ತಜ್ಞರ ಜತೆ ಸಮಾಲೋಚನೆ ನಡೆಸಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ನಿರ್ಧಾರ ಮಾಡಿದ್ದಾರೆ.

    ಇದೇ 21 ರಂದು ಸುಪ್ರೀಂಕೋರ್ಟ್‌ನಲ್ಲಿ ಕಾವೇರಿ ನದಿ ವಿವಾದದ ವಿಚಾರಣೆ ನಡೆಯಲಿದ್ದು ಈ ವೇಳೆ ರಾಜ್ಯದ ಸಂಕಷ್ಟದ ಸ್ಥಿತಿ ಬಗ್ಗೆ ಮನವರಿಕೆ ಮಾಡಿ 2 ರಾಜ್ಯಗಳಿಗೂ ಸಂಕಷ್ಟ ಸೂತ್ರ ಸಿದ್ಧಪಡಿಸುವಂತೆ ಕೋರ್ಟ್‌ ಬಳಿ ಮನವಿ ಮಾಡಲು ಮುಂದಾಗಿದೆ ಎನ್ನಲಾಗುತ್ತಿದೆ. ಇದರೊಂದಿಗೆ ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕೊಂಡೊಯ್ದ ಮಧ್ಯಪ್ರವೇಶಕ್ಕೆ ಆಗ್ರಹಿಸುವ ಸಾಧ್ಯತೆಯಿದೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]