Tag: CBI raid

  • ಬೆಟ್ಟಿಂಗ್ ಆಪ್ ಕೇಸ್‌ | `ಕೈʼ ನಾಯಕ ಭೂಪೇಶ್ ಬಘೇಲ್‌ ಮನೆ ಮೇಲೆ ಸಿಬಿಐ ದಾಳಿ

    ಬೆಟ್ಟಿಂಗ್ ಆಪ್ ಕೇಸ್‌ | `ಕೈʼ ನಾಯಕ ಭೂಪೇಶ್ ಬಘೇಲ್‌ ಮನೆ ಮೇಲೆ ಸಿಬಿಐ ದಾಳಿ

    ರಾಯ್ಪುರ್‌: ಮಹಾದೇವ್‌ ಬೆಟ್ಟಿಂಗ್‌ ಆಪ್‌ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಛತ್ತಿಸ್‌ಗಢದ ಮಾಜಿ ಸಿಎಂ ಹಾಗೂ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಭೂಪೇಶ್‌ ಬಘೇಲ್‌ (Bhupesh Baghel) ಅವರ ನಿವಾಸದ ಮೇಲೆ ಕೇಂದ್ರೀಯ ತನಿಖಾ ದಳ (CBI) ಇಂದು ಬೆಳಗ್ಗೆ ದಾಳಿ ನಡೆಸಿದೆ.

    ಮೂಲಗಳ ಪ್ರಕಾರ, ಸಿಬಿಐ ಅಧಿಕಾರಿಗಳ ತಂಡ ರಾಯ್‌ಪುರ ಮತ್ತು ಭಿಲಾಯಿ ಎರಡೂ ಪ್ರದೇಶದಲ್ಲಿರುವ ಬಘೇಲ್‌ ನಿವಾಸದ ಮೇಲೆ ದಾಳಿನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಮನೆ ಓನರ್‌ ಹೆಂಡ್ತಿ ಜೊತೆಗೇ ಕಳ್ಳಸಂಬಂಧ – ಬಾಡಿಗೆದಾರನನ್ನ 7 ಅಡಿ ಗುಂಡಿಯಲ್ಲಿ ಜೀವಂತವಾಗಿ ಹೂತುಹಾಕಿದ ಪತಿ!

    ಕಳೆದ ಮಾರ್ಚ್ 10 ರಂದು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಪೇಶ್ ಬಘೇಲ್ ನಿವಾಸ ಮತ್ತು ಅವರ ಪುತ್ರ ಚೈತನ್ಯ ಬಘೇಲ್ ಅವರ ನಿವಾಸ, ಸೇರಿ ದುರ್ಗ್ ಜಿಲ್ಲೆಯ 14 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಸರಣಿ ದಾಳಿ ನಡೆಸಿತ್ತು. ಇದನ್ನೂ ಓದಿ: Tumakuru | 19 ಸಾವಿರ ಗಡಿ ದಾಟಿದ ಕ್ವಿಂಟಲ್ ಕೊಬ್ಬರಿ ಧಾರಣೆ – ಸಾರ್ವಕಾಲಿಕ ದಾಖಲೆ

    508 ಕೋಟಿ ಲಂಚ:
    ಮಹದೇವ್‌ ಬೆಟ್ಟಿಂಗ್‌ ಆ್ಯಪ್ ಪ್ರವರ್ತಕರು (Mahadev Betting App Promoters) ಭೂಪೇಶ್‌ ಬಘೇಲ್‌ ಅವರಿಗೆ ಸುಮಾರು 508 ಕೋಟಿ ರೂ. ಲಂಚ ನೀಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಈ ಹಿಂದೆಯೇ ಹೇಳಿತ್ತು. ಈ ಹಿಂದೆ ದಾಳಿ ನಡೆಸಿದಾಗ 5.39 ಕೋಟಿ ರೂ. ನಗದು ವಶಪಡಿಸಿಕೊಂಡಿತ್ತು. ಜೊತೆಗೆ ದಾಳಿ ವೇಳೆ 15 ಕೋಟಿ ರೂ. ಇರುವ ಬ್ಯಾಂಕ್‌ ಖಾತೆಯನ್ನೂ ಜಪ್ತಿ ಮಾಡಿತ್ತು.

    ಇದೀಗ ಭೂಪೇಶ್‌ ಬಘೇಲ್‌ಗೆ ಸಂಬಂಧಿಸಿದ ಎರಡು ನಿವಾಸಗಳ ಮೇಲೆ ದಾಳಿ ನಡೆಸಿರುವ ಸಿಬಿಐ ಶೋಧಕಾರ್ಯ ಮುಂದುವರಿದಿದೆ. ಇದನ್ನೂ ಓದಿ: ಬೆಟ್ಟಿಂಗ್‌ ಆ್ಯಪ್‌ನಿಂದ ಛತ್ತೀಸ್‌ಗಢ ಸಿಎಂಗೆ 508 ಕೋಟಿ ಲಂಚ

  • ರಷ್ಯಾ ಸೇನೆಯಲ್ಲಿ ಸಿಲುಕಿದ್ದ ಭಾರತೀಯನ ಸಾವು – ಮರುದಿನವೇ ಸಿಬಿಐ ಮಹತ್ವದ ಕಾರ್ಯಾಚರಣೆ

    ರಷ್ಯಾ ಸೇನೆಯಲ್ಲಿ ಸಿಲುಕಿದ್ದ ಭಾರತೀಯನ ಸಾವು – ಮರುದಿನವೇ ಸಿಬಿಐ ಮಹತ್ವದ ಕಾರ್ಯಾಚರಣೆ

    – ಮಾನವ ಕಳ್ಳಸಾಗಣೆಯ ಬೃಹತ್‌ ಜಾಲ ಭೇದಿಸಿದ ಸಿಬಿಐ
    – 7 ಮಹಾನಗರಗಳ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಾಏಕಿ ದಾಳಿ

    ನವದೆಹಲಿ: ವಂಚನೆಗೊಳಗಾಗಿ ರಷ್ಯಾ ಸೇನೆಯಲ್ಲಿ (Russia Army) ಸಿಲುಕಿದ್ದ ಹೈದರಾಬಾದ್‌ ಮೂಲದ ಯುವಕ ಸಾವನ್ನಪ್ಪಿದ ಒಂದು ದಿನದ ನಂತರ ಸಿಬಿಐ (CBI) ಮಹತ್ವದ ಕಾರ್ಯಾಚರಣೆ ನಡೆಸಿದೆ. ದೇಶಾದ್ಯಂತ ಸುಮಾರು 7 ಪ್ರಮುಖ ನಗರಗಳಲ್ಲಿ 10ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿ ಭಾರತೀಯರನ್ನು ವಿದೇಶಗಳಿಗೆ ಕಳ್ಳಸಾಗಣೆ ಮಾಡುತ್ತಿದ್ದ ಜಾಲವನ್ನು ಭೇದಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಹೆಚ್ಚಿನ ವೇತನ ನೀಡುವ ಆಸೆ ತೋರಿಸಿ, ಉದ್ಯೋಗಿಗಳನ್ನು ನೇಮಿಸಿಕೊಳ್ಳುವ ನೆಪದಲ್ಲಿ ವಿದೇಶಗಳಿಗೆ ಕಳ್ಳಸಾಗಣೆ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಸಿಬಿಐ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಸಿಬಿಐ, ಮಾನವ ಕಳ್ಳಸಾಗಣೆಯಲ್ಲಿ ತೊಡಗಿದ್ದ ಏಜೆಂಟರಿಗೆ (Human Trafficking Agents) ಸಂಬಂಧಿಸಿದ 7 ಮಹಾನಗರಗಳ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದೆ. ದೆಹಲಿ, ಮುಂಬೈ, ಚೆನ್ನೈ, ತಿರುವನಂತಪುರಂ, ಅಂಬಾಲಾ, ಚಂಡೀಗಢ ಮತ್ತು ಮಧುರೈನಲ್ಲಿ ದಾಳಿ ನಡೆಸಿದೆ. ಸಿಬಿಐ ಪ್ರಕರಣದಲ್ಲಿ ದುಬೈ ಮೂಲದ ಯೂಟ್ಯೂಬ್‌ ಬ್ಲಾಗರ್‌ ಫೈಸಲ್ ಖಾನ್ ಅಲಿಯಾಸ್ ಬಾಬಾ (Faisal Khan alias Baba) ಹೆಸರೂ ದಾಖಲಾಗಿದೆ. ಇದನ್ನೂ ಓದಿ: Shivaratri Speical: ಶಿವಭಕ್ತಿಗೆ ಒಲಿದ ಆಸ್ಟ್ರೇಲಿಯಾ – ಮುಕ್ತಿ ಗುಹೇಶ್ವರ ದೇವಾಲಯದಲ್ಲಿ ಹಲವು ವಿಶೇಷ!

    ಕಳ್ಳಸಾಗಣೆ ಮಾಡುತ್ತಿದ್ದದ್ದು ಹೇಗೆ?
    ಭದ್ರತಾ ಸಿಬ್ಬಂದಿ ಹಾಗೂ ಪೌರ ಕಾರ್ಮಿಕ ಕೆಲಸಗಳಿಗೆ ನೇಮಕ ಮಾಡಿಕೊಳ್ಳುತ್ತಿರುವುದಾಗಿ ಅದಕ್ಕಾಗಿ ಹೆಚ್ಚಿನ ವೇತನ ನೀಡುವುದಾಗಿ ಯುವಕರಿಗೆ ಆಮಿಷ ನೀಡುತ್ತಿದ್ದರು. ನಂತರ ಅವರನ್ನು ರಷ್ಯಾ ಸೇನೆಗೆ ತಳ್ಳಿದ್ದು, ಯುದ್ಧದಲ್ಲಿ ಹೋರಾಡುವಂತೆ ಒತ್ತಾಯಿಸಿದ್ದರು. ತಮ್ಮ ಮನೆ ಮಕ್ಕಳು ನಾಪತ್ತೆಯಾದ ಬಗ್ಗೆ ಅನೇಕ ಕುಟುಂಬಗಳು ಮಾಧ್ಯಮಗಳೊಂದಿಗೆ ತಮ್ಮ ಸಂಕಷ್ಟ ಹೇಳಿಕೊಂಡಿವೆ. ಈ ವೇಳೆ ಪದೇ ಪದೇ ಫೈಸಲ್ ಖಾನ್ ಹೆಸರು ಕೇಳಿಬಂದಿದೆ. ಇದನ್ನೂ ಓದಿ: ವಂಚನೆಯಿಂದ ರಷ್ಯಾ ಸೇನೆಯಲ್ಲಿ ಸಿಲುಕಿದ್ದ ಹೈದರಾಬಾದ್‌ ಯುವಕ – ಯುದ್ಧದಲ್ಲಿ ದುರಂತ ಸಾವು

    ಈಗಾಗಲೇ ರಷ್ಯಾ ಸೇನೆಯಲ್ಲಿ ಒಂದು ಡಜನ್‌ಗೂ ಹೆಚ್ಚು ಭಾರತೀಯ ಯುವಕರು ಸಿಲುಕಿರುವುದಾಗಿ ಮಾಹಿತಿ ಲಭ್ಯವಾಗಿದ್ದು, ಅವರನ್ನು ಕರೆತರಲು ಭಾರತೀಯ ರಾಯಭಾರ ಕಚೇರಿ ರಷ್ಯಾದ ರಕ್ಷಣಾ ಇಲಾಖೆಯೊಂದಿಗೆ ನಿರಂತರ ಸಂಪರ್ಕ ಸಾಧಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕೃತ್ಯದಲ್ಲಿ ದೆಹಲಿ, ಮುಂಬೈ, ಚಂಡೀಗಢ ಮೂಲದ ಖಾಸಗಿ ಕಂಪನಿಗಳು ಭಾಗಿಯಾಗಿವೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಆದ್ರೆ ಕಂಪನಿಗಳ ಹೆಸರನ್ನು ಬಹಿರಂಗಪಡಿಸಿಲ್ಲ. ಇದನ್ನೂ ಓದಿ: ಕ್ಷಿಪಣಿ ದಾಳಿಗೆ ಕೇರಳ ಮೂಲದ ವ್ಯಕ್ತಿ ಸಾವು – ಇಸ್ರೇಲ್‌ನಲ್ಲಿರುವ ಭಾರತೀಯರಿಗೆ ಎಚ್ಚರಿಕೆ ಸಂದೇಶ

  • ಡಿಕೆಶಿಗೆ ತಮ್ಮ ಪ್ರಾಮಾಣಿಕತೆ ಸಾಬೀತುಪಡಿಸಲು ಇದೊಂದು ಸದಾವಕಾಶ: ಸುಧಾಕರ್

    ಡಿಕೆಶಿಗೆ ತಮ್ಮ ಪ್ರಾಮಾಣಿಕತೆ ಸಾಬೀತುಪಡಿಸಲು ಇದೊಂದು ಸದಾವಕಾಶ: ಸುಧಾಕರ್

    ಮಡಿಕೇರಿ: ನಾನು ಪ್ರಮಾಣಿಕವಾಗಿದ್ದೇನೆ ಎಂದು ಮೊನ್ನೆಯಿಂದ ಹೇಳುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ತಮ್ಮ ಪ್ರಾಮಾಣಿಕತೆ ಸಾಬೀತುಪಡಿಸಲು ಇದೊಂದು ಸದಾವಕಾಶ. ಈಗ ಸಾಬೀತುಪಡಿಸಲಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.

    ಕೊಡಗು ಜಿಲ್ಲಾ ಕೋವಿಡ್ ನಿರ್ವಹಣೆ ಸಂಬಂಧ ಪ್ರಗತಿ ಪರಿಶೀಲನಾ ಸಭೆಗೆ ಆಗಮಿಸಿದ ವೇಳೆ ಮಾತನಾಡಿದ ಸುಧಾಕರ್, ಡಿಕೆ ಶಿವಕುಮಾರ್ ಮನೆ ಸಿಬಿಐ ದಾಳಿ ನಡೆಸಿರುವುದು ಯಾವುದೇ ರಾಜಕೀಯ ಪ್ರೇರಿತ ದಾಳಿ ಅಲ್ಲ. ಬದಲಾಗಿ 2018-19 ರಲ್ಲಿ ಐಟಿ ಮತ್ತು ಇಡಿಗಳು ದಾಳಿ ನಡೆಸಿ ಚಾರ್ಜ್ ಶೀಟ್ ಸಲ್ಲಿಸಿದ್ದವು. ಅದರ ಮುಂದುವರಿದ ಭಾಗವಾಗಿ ಸಿಬಿಐ ದಾಳಿ ನಡೆಸಿದೆ ಅಷ್ಟೇ. ಇದರಲ್ಲಿ ಯಾವುದೇ ರಾಜಕೀಯ ಪ್ರೇರಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಈಗಾಗಲೇ ಸಿಬಿಐ ದಾಖಲಿಸಿರುವ ಐಫ್‍ಐಆರ್ ನೋಡಿದ್ದೇನೆ. ಅದರಲ್ಲಿ ಭ್ರಷ್ಟಾಚಾರ ನಡೆಸಿರುವ ವಿವರವನ್ನು ಹಾಕಲಾಗಿದೆ. ಹೀಗಾಗಿ ಯಾವ ರಾಜಕೀಯ ಪ್ರೇರಣೆ ಇಲ್ಲ. ಶಿವಕುಮಾರ್ ಅವರು ಈಗ ಅವರ ಪ್ರಾಮಾಣಿಕತೆಯನ್ನು ಸಾಬೀತುಪಡಿಸಲಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ತಿಳಿಸಿದ್ದಾರೆ.

  • 57 ಲಕ್ಷ ಹಣ ಪತ್ತೆ – ಡಿಕೆ ಸುರೇಶ್‌ ಅವರೇ ಈಗ ಏನು ಹೇಳ್ತೀರಿ?

    57 ಲಕ್ಷ ಹಣ ಪತ್ತೆ – ಡಿಕೆ ಸುರೇಶ್‌ ಅವರೇ ಈಗ ಏನು ಹೇಳ್ತೀರಿ?

    – ಪಬ್ಲಿಕ್‌ ಟಿವಿಗೆ ಎಲ್ಲ ಗೊತ್ತಾಗಿದ್ಯಲ್ಲ
    – ಅಣ್ಣನ ಮನೆಯಲ್ಲಿ ನನಗೆ ಗೊತ್ತಿದ್ದಂತೆ ನಗದು ಸಿಕ್ಕಿಲ್ಲ

    ಬೆಂಗಳೂರು: ಪಬ್ಲಿಕ್ ಟಿವಿ ಸಿಬಿಐ ಮೂಲಗಳನ್ನು ಆಧರಿಸಿ 50 ಲಕ್ಷ ನಗದನ್ನು ವಶಪಡಿಸಿಕೊಂಡಿರುವ ಬಗ್ಗೆ ಇಂದು ಮಧ್ಯಾಹ್ನವೇ  ಎಕ್ಸ್‌ಕ್ಲೂಸಿವ್‌ ವರದಿ ಬಿತ್ತರಿಸಿತ್ತು. ಆದರೆ ಸಿಬಿಐ ಅಧಿಕೃತ ಪ್ರಕಟಣೆ ಹೊರಡಿಸುವ ಮುನ್ನ ಮಾತನಾಡಿದ್ದ ಸಂಸದ ಡಿಕೆ ಸುರೇಶ್, ಪಬ್ಲಿಕ್ ಟಿವಿಗೆ ಎಲ್ಲಾ ಗೊತ್ತಾಗಿದ್ಯಂತಲ್ಲ ಎಂದಿದ್ದರು.

    50 ಲಕ್ಷ ಸಿಕ್ಕಿದ ವಿಚಾರದ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ, ನನ್ನ ಅಣ್ಣನ ಮನೆಯಲ್ಲಿ ನನಗೆ ಗೊತ್ತಿದ್ದಂತೆ ನಗದು ಸಿಕ್ಕಿಲ್ಲ. ಪಬ್ಲಿಕ್ ಟಿವಿ 50 ಲಕ್ಷ ಸಿಕ್ಕಿದೆ ಅಂತಾ ವರದಿ ಮಾಡಿದೆ. ಆ ಹಣ ಯಾರ ಮನೆಯಲ್ಲಿ ಸಿಕ್ಕಿದೆ ಅಂತಾ ಪಬ್ಲಿಕ್ ಟಿವಿ ಹೇಳಬೇಕು ಅಂತಾ ಡಿಕೆ ಸುರೇಶ್, ಪಬ್ಲಿಕ್‌ ಟಿವಿ ದೊಡ್ಡ ತಪ್ಪು ಮಾಡಿದ್ದೇವೆ ಎಂಬಂತೆ ಪ್ರಶ್ನೆ ಮಾಡಿದ್ದರು. ಇದನ್ನೂ ಓದಿ: ಈ ಡಿಕೆ ಶಿವಕುಮಾರ್‌ ಹೆದರುವ ಮಗ ಅಲ್ಲ, ಯಾವುದಕ್ಕೂ ಜಗ್ಗಲ್ಲ: ಡಿಕೆಶಿ

    ಸಂಜೆ ಸಿಬಿಐ ಅಧಿಕೃತ ಪ್ರಕಟಣೆ ಹೊರಡಿಸಿ, ಡಿಕೆಶಿಗೆ ಸಂಬಂಧಿಸಿದಂತೆ 14 ಕಡೆ ನಡೆದ ದಾಳಿಯಲ್ಲಿ 57 ಲಕ್ಷ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿತು. ಈ ಮೂಲಕ ಪಬ್ಲಿಕ್‌ ಟಿವಿ ವರದಿ ಮಾಡಿದ್ದ ಸುದ್ದಿ ನಿಜವಾಯಿತು.

    ಸಂಜೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಕೆ ಶಿವಕುಮಾರ್ 57 ಲಕ್ಷ ರೂ. ನಗದು ಸಿಕ್ಕಿದ ಬಗ್ಗೆ ಸರಿಯಾದ ಸ್ಪಷ್ಟನೆ ನೀಡಲಿಲ್ಲ. ಅಷ್ಟು ದುಡ್ಡು ಸಿಕ್ಕಿದರೆ ಸಂತೋಷ. ನಾನೇನು ಕದ್ದು ಮುಚ್ಚಿ ಏನು ಮಾಡಿಲ್ಲ. ನನ್ನ ಮನೆಯಲ್ಲಿ 1.77 ಲಕ್ಷ ಸಿಕ್ಕಿದೆ. ನನ್ನ ಕಚೇರಿಯಲ್ಲಿ ಸಿಬ್ಬಂದಿ ಖರ್ಚಿಗೆ ಅಂತಾ ಮೂರ್ನಾಲ್ಕು ಲಕ್ಷ ಸಿಕ್ಕಿರಬಹುದು. ದೆಹಲಿಯ ಸುರೇಶ್ ಮನೆಯಲ್ಲಿ ಎರಡ್ಮೂರು ಲಕ್ಷ ಸಿಕ್ಕಿರಬಹುದು. ಊರಿನಲ್ಲಿ ಎಷ್ಟು ಸಿಕ್ಕಿದೆ ಎನ್ನುವುದು ಗೊತ್ತಿಲ್ಲ ಎಂದರು. ಬೇರೆಯವರ ಮನೆಯಲ್ಲಿ ಏನು ಸಿಕ್ಕಿದ್ಯೋ ನಂಗೆ ಗೊತ್ತಿಲ್ಲ ಎಂದು ಹೇಳಿ ಜಾರಿಕೊಂಡರು

    ಇದಕ್ಕೂ ಮುನ್ನ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಡಿಕೆಶಿ, ಇಂದಿನ ದಾಳಿಯಲ್ಲಿ ನನ್ನ ಮನೆಯಲ್ಲಿ ಪಂಚೆ, ಪ್ಯಾಂಟು ಶರ್ಟು, ಸೀರೆಗಳ ಲೆಕ್ಕವನ್ನು ಸಿಬಿಐ ತಗೊಂಡಿದೆ ಎಂದು ಹೇಳಿದರು.

  • ಈ ಡಿಕೆ ಶಿವಕುಮಾರ್‌ ಹೆದರುವ ಮಗ ಅಲ್ಲ, ಯಾವುದಕ್ಕೂ ಜಗ್ಗಲ್ಲ: ಡಿಕೆಶಿ

    ಈ ಡಿಕೆ ಶಿವಕುಮಾರ್‌ ಹೆದರುವ ಮಗ ಅಲ್ಲ, ಯಾವುದಕ್ಕೂ ಜಗ್ಗಲ್ಲ: ಡಿಕೆಶಿ

    ಬೆಂಗಳೂರು: ಈ ರಾಜಕಾರಣಕ್ಕೆ ಡಿಕೆ ಶಿವಕುಮಾರ್‌ ಹೆದರುವ ಮಗ ಅಲ್ಲ. ಇದು ಸದ್ಯಕ್ಕೆ ಮುಗಿಯುವುದಿಲ್ಲ. ಚುನಾವಣೆ ನಡೆಯುವವರೆಗೂ ಇರುತ್ತದೆ ಎಂದು ಡಿಕೆಶಿ ಹೇಳಿದ್ದಾರೆ.

    ಸಿಬಿಐ ದಾಳಿ ಬಳಿಕ ನಿವಾಸದಿಂದ ಹೊರಬಂದು ಕಾರ್ಯರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, 30 ವರ್ಷಗಳಿಂದ ಇರುವ ಎಲ್ಲ ಮಂತ್ರಿಗಳು ಹರಿಶ್ಚಂದ್ರನ ಮೊಮ್ಮಕ್ಕಳು. ಈಗ ನನಗೆ ರಾಜಕೀಯವಾಗಿ ತೊಂದರೆ ನೀಡುತ್ತಿದ್ದರಲ್ಲ ಅವರೆಲ್ಲ ಚೆನ್ನಾಗಿರಲಿ ಎಂದರು.

    ನಾನು ನನ್ನ ಸಹೋದರ, ಕುಟುಂಬ ಮತ್ತು ಕಾಂಗ್ರೆಸ್ ಪಕ್ಷ ನಿಮ್ಮ ಅಭಿಮಾನಕ್ಕೆ ತಲೆ ಬಾಗಿ ವಂದಿಸುತ್ತೇನೆ. 2016 ರಲ್ಲಿ ಗುಜರಾತ್ ರಾಜ್ಯಸಭಾ ಚುನಾವಣೆಯ ವೇಳೆ ಆದಾಯ ತೆರಿಗೆ ಇಲಾಖೆಯವರು ದಾಳಿ ಮಾಡಿದ್ದರು. ಮತ್ತೆ ಇಡಿಯವರು ಕೇಸ್ ಹಾಕಿ ತಿಹಾರ್ ಜೈಲಿಗೆ ಕಳುಹಿಸಿದರು. ಈಗ 2020ರಲ್ಲಿ ಸಿಬಿಐ ಬಂದಿದೆ. ಯಾವುದಕ್ಕೂ ನಾನು ಜಗ್ಗುವ ವ್ಯಕ್ತಿಯಲ್ಲ ಎಂದು ಡಿಕೆಶಿ ಗುಡುಗಿದರು.  ಇದನ್ನೂ ಓದಿ: 2008ರಲ್ಲಿ 75 ಕೋಟಿ ಇದ್ದ ಡಿಕೆಶಿ ಆಸ್ತಿ ಈಗ 548 ಕೋಟಿ ರೂ.ಗೆ ಏರಿಕೆ!

    ಅಡ್ವೋಕೇಟ್ ಜನರಲ್ ಬೇಡ ಎಂದರೂ ಸಿಬಿಐನವರು ಬಂದಿದ್ದಾರೆ. ಇದು ಸಿಬಿಐ ತನಿಖೆ ನಡೆಸುವ ಕೇಸಲ್ಲ. ಪಾಪ ಅವರಿಗೆ ಏನು ಒತ್ತಡ ಇರುತ್ತೊ ಏನೋ ಎಂದು ಪ್ರಶ್ನೆ ಮಾಡಿದರು.

    ಬೆಳಗ್ಗೆಯಿಂದ ನೀವು ನನ್ನ ನಿವಾಸದ ಬಳಿ ಬಂದಿದ್ದೀರಿ. ನಾನುಂಟು ನೀವುಂಟು. ಭಕ್ತ ಉಂಟು, ಭಗವಂತ ಉಂಟು. ನಾಳೆಯಿಂದ ನಮ್ಮ ಕೆಲಸ ಮಾಡೋಣ. ಉಪಚುನಾವಣೆಯಲ್ಲಿ ಉತ್ತರ ನೀಡಬೇಕೆಂದು ಕೇಳಿಕೊಳ್ಳುತ್ತೇನೆ. ರಾಜಕೀಯವಾಗಿ ತೊಂದರೆ ನೀಡಿ ನನ್ನ ಬಾಯಿ ಮುಚ್ಚಿಸಲು ಹೊರಟಿದ್ದಾರೆ. ಆದರೆ ಇದು ಸಾಧ್ಯವಿಲ್ಲ ಎಂದು ಕಾರ್ಯಕರ್ತರಿಗೆ ತಿಳಿಸಿದರು.

     

  • ಭಂಡತನಕ್ಕೆ ಕೊನೆಯುಂಟೆ? ಮಾಡಿದ್ದುಣ್ಣೋ ಮಹಾರಾಯ: ಸಿ.ಟಿ.ರವಿ

    ಭಂಡತನಕ್ಕೆ ಕೊನೆಯುಂಟೆ? ಮಾಡಿದ್ದುಣ್ಣೋ ಮಹಾರಾಯ: ಸಿ.ಟಿ.ರವಿ

    ಬೆಂಗಳೂರು: ಭಂಡತನಕ್ಕೆ ಕೊನೆಯುಂಟೆ? ಮಾಡಿದ್ದುಣ್ಣೋ ಮಹಾರಾಯ. ವೇದ ಸುಳ್ಳಾದರೂ ಗಾದೆ ಸುಳ್ಳಾಗದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಟ್ವೀಟ್ ಮಾಡಿದ್ದಾರೆ.

    ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಆಪ್ತರ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದ್ದು, ಶೋಧ ಕಾರ್ಯ ಚುರುಕುಗೊಳಿಸಿದೆ. ಇತ್ತ ಕಾಂಗ್ರೆಸ್ ಕಾರ್ಯಕರ್ತರು ರಾಜಕೀಯ ಪ್ರೇರಿತ ದಾಳಿಯಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತ ಡಿ.ಕೆ.ಶಿವಕುಮಾರ್ ನಿವಾಸದ ಬಳಿಯೂ ಕೈ ಕಾರ್ಯಕರ್ತರು ಜಮಾವಣೆಗೊಂಡಿದ್ದು, ಬಿಜೆಪಿ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ಸಿಬಿಐ ದಾಳಿ ವೇಳೆ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಸಿಕ್ಕ 50 ಲಕ್ಷ ರೂ. ಹಣವನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಈ ಎಲ್ಲ ಬೆಳವಣಿಗೆಗಳ ನಡುವೆ ಸಿ.ಟಿ.ರವಿ ಅವರು ಹೆಸರು ಹೇಳದೇ ಪರೋಕ್ಷವಾಗಿ ಡಿ.ಕೆ.ಶಿವಕುಮಾರ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ.  ಇದನ್ನೂ ಓದಿ: ಟ್ರಬಲ್ ಶೂಟರ್ ಇಂದು ಸಿಬಿಐಗೆ ಲಾಕ್ ಆಗಿದ್ದು ಹೇಗೆ?

    ಇಂಧನ ಇಲಾಖೆಯಲ್ಲಿರುವಾಗ ಡಿಕೆಶಿಯವರ ಒಟ್ಟು 60 ಕೋಟಿ ಅಕ್ರಮ ಹಣದ ವಹಿವಾಟಿನ ಬಗ್ಗೆ ಇಡಿ ಹಾಗೂ ಐಟಿ ಲೆಕ್ಕ ಹಾಕಿದೆ. ವಿದ್ಯುತ್ ಇಲಾಖೆಯಲ್ಲಿ ಏಜೆನ್ಸಿ ಮೂಲಕ ಭಾರೀ ಅಕ್ರಮ ಹಣ ವಹಿವಾಟಿನ ಆರೋಪ ಇದ್ದು, ಇದಕ್ಕೆ ಪೂರಕ ಸಾಕ್ಷಿಯನ್ನು ಇಡಿ ಹಾಗೂ ಐಟಿ ಇಲಾಖೆ ಕಲೆ ಹಾಕಿವೆ. ಅದರ ಆಧಾರದ ಮೇಲೆ ಇಂದು ಸಿಬಿಐ ದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಡಿಕೆಶಿ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರಿಂದ ಭಾರೀ ಹೈಡ್ರಾಮಾ

    ಸಿಬಿಐ ದಾಳಿ ಕುರಿತು ಪ್ರತಿಕ್ರಿಯಿಸಿರುವ ಸಚಿವ ಸುಧಾಕರ್, ರಾಜಕೀಯ ಪ್ರೇರಿತ ದಾಳಿ ಆಗಿದ್ರೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟಾರ್ಗೆಟ್ ಆಗುತ್ತಿದ್ದರು. ಡಿ.ಕೆ.ಶಿವಕುಮಾರ್ ಮನೆಯ ಮೇಲೆ ಈ ಹಿಂದೆಯೂ ದಾಳಿಗಳು ನಡೆದಿದ್ದು, ಪ್ರಕರಣಗಳ ಮುಂದುವರಿದ ರೈಡ್ ಇದಾಗಿರಬಹುದು. ದಾಳಿ ಯಾಕಾಯ್ತು? ಹೇಗೆ ಆಯ್ತು ಎಂಬುದರ ಬಗ್ಗೆ ನನಗೆ ಮಾಹಿತಿ ಇಲ್ಲ. ಸಿದ್ದರಾಮಯ್ಯನವರಿಗಿಂತ ಡಿ.ಕೆ.ಶಿವಕುಮಾರ್ ದೊಡ್ಡ ನಾಯಕ ಅಲ್ಲ. ಹಾಗಾಗಿ ಇದು ರಾಜಕೀಯ ದುರುದ್ದೇಶ ಹೊಂದಿಲ್ಲ ಎಂದು ಹೇಳಿದ್ದರು. ಇದನ್ನೂ ಓದಿ: ಡಿಕೆಶಿ ಮನೆಯಲ್ಲಿದ್ದ 50 ಲಕ್ಷ ಹಣ ಸೀಜ್?

  • ಸಿದ್ದರಾಮಯ್ಯರಿಗಿಂತ ಡಿಕೆಶಿ ದೊಡ್ಡ ನಾಯಕ ಅಲ್ಲ: ಸುಧಾಕರ್

    ಸಿದ್ದರಾಮಯ್ಯರಿಗಿಂತ ಡಿಕೆಶಿ ದೊಡ್ಡ ನಾಯಕ ಅಲ್ಲ: ಸುಧಾಕರ್

    ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗಿಂತ ಡಿ.ಕೆ.ಶಿವಕುಮಾರ್ ದೊಡ್ಡ ನಾಯಕ ಅಲ್ಲ. ರಾಜಕೀಯ ಪ್ರೇರಿತ ದಾಳಿ ಆಗಿದ್ದರೆ ಸಿದ್ದರಾಮಯ್ಯವರನ್ನು ಟಾರ್ಗೆಟ್ ಮಾಡಬೇಕಿತ್ತು ಅಲ್ವಾ ಎಂದು ಸಚಿವ ಡಾ.ಕೆ.ಸುಧಾಕರ್ ಪ್ರಶ್ನೆ ಮಾಡಿದ್ದಾರೆ.

    ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸುಧಾಕರ್, ತನಿಖೆ ಮೂಲಕ ಸತ್ಯಾಂಶ ಹೊರಬೀಳಲಿ. ಇದು ಡಿ.ಕೆ.ಶಿವಕುಮಾರ್ ಅವರು ಪರಿಶುದ್ಧ ಎಂಬುದನ್ನ ಸಾಬೀತುಪಡಿಸಲು ಅವಕಾಶ. ರಾಜಕೀಯ ಪ್ರೇರಿತ ದಾಳಿಯಾಗಿದ್ರೆ ಕಾಂಗ್ರೆಸ್ ನಲ್ಲಿ ಶಿವಕುಮಾರ್ ಅವರಿಗಿಂತ ದೊಡ್ಡ ನಾಯಕರಿದ್ದಾರೆ ಎಂದರು. ಇದನ್ನೂ ಓದಿ: ಮನೆಯ ಇಟ್ಟಿಗೆಗಳನ್ನೂ ತೆಗೆದುಕೊಂಡು ಹೋಗಲಿ – ಸಿಬಿಐ ದಾಳಿಗೆ ಡಿಕೆಶಿ ತಾಯಿ ಗರಂ

    ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ದಾಳಿ ನಡೆದಿರೋದು ಇದು ಮೊದಲಲ್ಲ. ಹಾಗಾಗಿ ಐಟಿ, ಇಡಿ ಮತ್ತು ಸಿಬಿಐ ಅಧಿಕಾರಿಗಳು ತನಿಖೆಯ ಮುಂದುವರಿದ ಶೋಧ ನಡೆಸುತ್ತಿದ್ದಾರೆ. ದಾಳಿಯ ಬಗ್ಗೆ ಹೆಚ್ಚು ಮಾಹಿತಿ ನನಗಿಲ್ಲ. ತನಿಖೆ ಪಾರದರ್ಶಕವಾಗಿ ನಡೆಯುತ್ತಿದ್ದು, ಡಿ.ಕೆ.ಶಿವಕುಮಾರ್ ಅವರ ಪ್ರಾಮಾಣಿಕತೆ ತಿಳಿದು ಬರಲಿದೆ. ರಾಜಕಾರಣಕ್ಕೂ ಮತ್ತು ಸಿಬಿಐ ದಾಳಿಗೂ ಯಾವುದೇ ಸಂಬಂಧವಿಲ್ಲ. ಬಿಜೆಪಿಗೆ ರಾಜ್ಯದಲ್ಲಿ 117 ಸ್ಥಾನಗಳಿವೆ. ಈ ಎರಡು ಉಪಚುನಾವಣೆ ಸೋಲು-ಗೆಲುವಿನಿಂದ ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರಲ್ಲ ಎಂದು ಹೇಳಿದರು. ಇದನ್ನೂ ಓದಿ: ಡಿಕೆಶಿಗೆ ಮೊದಲ ಅಗ್ನಿ ಪರೀಕ್ಷೆಯಲ್ಲಿ ಬಿಗ್ ಶಾಕ್ ಕೊಟ್ಟ ಸಿಬಿಐ

    ಇಂದು ಬೆಳಗ್ಗೆಯಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆಯ ಮೇಲೆ ಸಿಬಿಐ ಅಧಿಕಾರಿಗಳು ಶೋಧ ಕಾರ್ಯ ಮಾಡುತ್ತಿದ್ದಾರೆ. ಇದೀಗ ಡಿಕೆಶಿ ಮನೆಯಲ್ಲಿ ಬರೋಬ್ಬರಿ 50 ಲಕ್ಷ ಹಣ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಮೋದಿ ಸರ್ಕಾರ ನಡೆಸಿರೋ ದಾಳಿ – ಡಿಕೆಶಿ ಮನೆ ಮೇಲಿನ CBI ರೇಡ್‍ಗೆ ಸಿದ್ದು ಖಂಡನೆ

    ರಾಜ್ಯ ಸರ್ಕಾರದ ಅನುಮತಿ ಪಡೆದ ನಂತರ ಸಿಬಿಐ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಮನೆಯ ಮೇಲೆ ದಾಳಿ ಮಾಡಿದ್ದಾರೆ. ರೇಡ್ ವೇಳೆ ಡಿಕೆಶಿಯ ನಿವಾಸದಲ್ಲಿ 50 ಲಕ್ಷ ಹಣ ಪತ್ತೆಯಾಗಿದ್ದು, ಸಿಬಿಐ ಅಧಿಕಾರಿಗಳು ಆ ವಶವನ್ನು ಸೀಜ್ ಮಾಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ. ಹೀಗಾಗಿ ಹಣದ ಬಗ್ಗೆ ವಿಚಾರಣೆ ಮಾಡುವ ಸಲುವಾಗಿ ಸಿಬಿಐ ಅಧಿಕಾರಿಗಳು ಡಿಕೆಶಿಯನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ. ಇದನ್ನೂ ಓದಿ: ಡಿಕೆಶಿ ಮನೆಯಲ್ಲಿದ್ದ 50 ಲಕ್ಷ ಹಣ ಸೀಜ್?

    ಸಿಬಿಐ ಅಧಿಕಾರಿಗಳು ಡಿಕೆಶಿಯನ್ನು ವಶಕ್ಕೆ ಪಡೆದು ಕಚೇರಿಗೆ ಕರೆದುಕೊಂಡು ಹೋಗಿ ವಿಚಾರಣೆ ಮಾಡುವ ಸಾಧ್ಯತೆ ಇದೆ. ಡಿಕೆಶಿ ಮನೆ ಮೇಲೆ ಮಾತ್ರವಲ್ಲದೇ ಸೋದರ ಡಿ.ಕೆ.ಸುರೇಶ್ ಮನೆಯ ಮೇಲೂ ಸಿಬಿಐ ದಾಳಿ ಮಾಡಿದೆ. ಡಿಕೆಶಿ, ಡಿ.ಕೆ.ಸುರೇಶ್ ಅವರಿಗೆ ಸಂಬಂಧಿಸಿದ ನಿವಾಸ, ಸಂಸ್ಥೆ, ಕಟ್ಟಡಗಳ ಮೇಲೆ ಸಿಬಿಐ ದಾಳಿ ಮಾಡಿದೆ. ಒಟ್ಟು 14 ವಿವಿಧ ಸ್ಥಳಗಳ ಮೇಲೆ ದಾಳಿ ಸಿಬಿಐ ತಂಡ ದಾಳಿ ಮಾಡಿದೆ.

  • ಮೋದಿ ಸರ್ಕಾರ ನಡೆಸಿರೋ ದಾಳಿ – ಡಿಕೆಶಿ ಮನೆ ಮೇಲಿನ CBI ರೇಡ್‍ಗೆ ಸಿದ್ದು ಖಂಡನೆ

    ಮೋದಿ ಸರ್ಕಾರ ನಡೆಸಿರೋ ದಾಳಿ – ಡಿಕೆಶಿ ಮನೆ ಮೇಲಿನ CBI ರೇಡ್‍ಗೆ ಸಿದ್ದು ಖಂಡನೆ

    – ರಾಜಕೀಯ ದುಷ್ಟತನದ ಪರಮಾವಧಿ

    ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಿಬಿಐ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದು, ಮನೆಯ ಮೇಲೆ ರೇಡ್ ಮಾಡುತ್ತಿದ್ದಾರೆ. ಆದರೆ ಡಿಕೆಶಿ ಮನೆಯ ಮೇಲೆ ಸಿಬಿಐ ರೇಡ್‍ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡನೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಡಿಕೆಶಿಗೆ ಶಾಕ್- ಮನೆ ಮೇಲೆ ಸಿಬಿಐ ದಾಳಿ

    ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಡಿ.ಕೆ.ಶಿವಕುಮಾರ್ ಮನೆಯ ಮೇಲಿನ ಸಿಬಿಐ ರೇಡ್‍ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಮನೆ ಮೇಲೆ ನರೇಂದ್ರ ಮೋದಿ ಸರ್ಕಾರ ನಡೆಸಿರುವ ಸಿಬಿಐ ದಾಳಿ. ರಾಜಕೀಯ ದುಷ್ಟತನದ ಪರಮಾವಧಿ” ಎಂದು ಖಂಡಿಸಿದ್ದಾರೆ.

    ಅಷ್ಟೇ ಅಲ್ಲದೇ “ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ ಬಿಜೆಪಿ ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ” ಎಂದು ಸಿದ್ದರಾಮಯ್ಯ ಟ್ವಿಟ್ಟರಿನಲ್ಲಿ ಬರೆದುಕೊಂಡಿದ್ದಾರೆ.

    ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ಇಂದು ಐವರು ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಡಿಕೆಶಿ ಮನೆಯ ಮೇಲೆ ದಾಳಿ ಮಾಡುವಂತೆ ರಾಜ್ಯ ಸರ್ಕಾರ ಸಿಬಿಐ ಅಧಿಕಾರಿಗಳಿಗೆ ಅನುಮತಿ ನೀಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ರಾಜ್ಯ ಸರ್ಕಾರದ ಅನುಮತಿ ಮೇರೆಗೆ ಇಂದು ಬೆಳಗ್ಗೆ 8 ಗಂಟೆಗೆ ಸಿಬಿಐ ಅಧಿಕಾರಿಗಳು ಏಕಾಏಕಿ ದಾಳಿ ಮಾಡಿದ್ದು, ಮನೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ ಡಿಕೆಶಿಗೆ ಸೇರಿದ ಹಲವು ಕಡೆಗಳಲ್ಲಿ ಕೂಡ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

    ಕಳೆದ ವರ್ಷ ಸೆಪ್ಟೆಂಬರ್ 3ರಂದು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿ ಡಿಕೆಶಿ ಜೈಲು ಸೇರಿದ್ದರು. ಇದೀಗ ಒಂದು ವರ್ಷ ಕಳೆಯುವ ಬೆನ್ನಲ್ಲೇ ಮತ್ತೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಮನೆಯ ಮೇಲೂ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದು, ಅವರ ಮನೆಯಲ್ಲೂ ಶೋಧಕಾರ್ಯ ನಡೆಸುತ್ತಿದ್ದಾರೆ.

  • ನನ್ನ ಕಂಡ್ರೆ ಲವ್ ಜಾಸ್ತಿ, ಅದಕ್ಕೆ ಕಣ್ಣು ಹಾಕ್ತಾರೆ: ಡಿಕೆ ಶಿವಕುಮಾರ್

    ನನ್ನ ಕಂಡ್ರೆ ಲವ್ ಜಾಸ್ತಿ, ಅದಕ್ಕೆ ಕಣ್ಣು ಹಾಕ್ತಾರೆ: ಡಿಕೆ ಶಿವಕುಮಾರ್

    ಬೆಂಗಳೂರು: ನನ್ನನ್ನ ರೇವಣ್ಣಗೆ ಹೋಲಿಸಬೇಡಿ. ಇಬ್ಬರ ನಡುವೆ ಪವರ್ ಗಲಾಟೆ ಅನ್ನೋದು ತಪ್ಪು. ಅವರು ದೊಡ್ಡ ಕುಟುಂಬದ ಮಕ್ಕಳು ನಾನು ಸಾಮಾನ್ಯ ವ್ಯಕ್ತಿ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

    ಮಾಧ್ಯಮದೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಹಣ್ಣು ಪಕ್ವವಾಗಿ ಮರದಲ್ಲಿದ್ದರೆ ಎಲ್ಲಾ ಕಲ್ಲು ಹೊಡಿತಾರೆ. ನೀವು ನೋಡೋಕೆ ಚೆನ್ನಾಗಿದ್ದರೆ ಎಲ್ಲಾ ನೋಡುತ್ತಾರೆ. ಮೋರ್ ಸ್ಟ್ರಾಂಗ್ ಮೋರ್ ಎನಿಮಿಸ್ ಲೆಸ್ ಸ್ಟ್ರಾಂಗ್ ಲೆಸ್ ಎನಿಮಿಸ್. ನನಗು ಹಾಗೆ ಆಗಿದೆ. ನನ್ನ ಕಂಡರೆ ಪ್ರೀತಿ ಜಾಸ್ತಿ ಅದಕ್ಕೆ ನನ್ನ ಮೇಲೆ ಕಣ್ಣು ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.

    ಸಿಬಿಐ ದಾಳಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ನನ್ನ ಕಂಡರೆ ಅಸೂಯೆ ಅದಕ್ಕೆ ಸಿಬಿಐ ಮೂಲಕ ನಿಯಂತ್ರಣ ಮಾಡಲು ಯತ್ನಿಸುತ್ತಿದ್ದಾರೆ. ಸಿಬಿಐ ಅಧಿಕಾರಿಗಳು ಇಲ್ಲಿನ ಅಧಿಕಾರಿಗಳಿಗೆ ಹಿಂಸೆ ಮಾಡುತ್ತಿದ್ದಾರೆ. ಹಣ ವರ್ಗಾವಣೆಯಲ್ಲಿ ಸುರೇಶ್ ಪಾತ್ರ ಇದೆ ಅಂತ ಒಪ್ಪಿಸೋಕೆ ಯತ್ನಿಸಿದ್ದಾರೆ. ನಾನು ಹಳ್ಳಿಯಿಂದ ಬಂದವನು ನಾನೆ ಯಾಕೆ ಟಾರ್ಗೆಟ್ ಗೊತ್ತಿಲ್ಲ. ಅದ್ಯಾಕೆ ನನ್ನ ರಾಶಿಗೆ ಎಂಟ್ರಿ ಆಗಿದಾರೋ ಗೊತ್ತಿಲ್ಲ. ನಾನು ಚೆಸ್ ಪ್ಲೇಯರ್ ಟೈಮ್ ನೋಡಿ ಚಕ್ ಕೊಡುತ್ತೀನಿ ಎಂದು ತಿಳಿಸಿದರು.

    ನಾನು ಯಾರಿಗೂ ಅರ್ಜಿ ಹಾಕೊಂಡು ಹೋಗಿಲ್ಲ. ನಾನು ಕಾಂಗ್ರೆಸ್ ಪಾರ್ಟಿಯವನು. ರೇವಣ್ಣ ಅವರಿಗೂ ನನಗೂ ಹೋಲಿಕೆ ಮಾಡಬೇಡಿ. ನನಗೆ ರೇವಣ್ಣ ಸಹವಾಸ ಬೇಡವೇ ಬೇಡ. ರೇವಣ್ಣ ಬೇಕಾದರೆ ಎಲ್ಲಾ ಖಾತೆ ಇಟ್ಟುಕೊಳ್ಳಲಿ ಮುಖ್ಯಮಂತ್ರಿ ಆಗಲಿ ನನಗೇನು? ಅವರ ಪಾರ್ಟಿ ಬೇರೆ. ನಮ್ಮ ಪಾರ್ಟಿ ಬೇರೆ. ಇಬ್ಬರು ಒಟ್ಟಿಗೆ ಸೇರಿ ಸರ್ಕಾರ ರಚನೆ ಮಾಡಿದ್ದೇವೆ. ಇಬ್ಬರು ಒಟ್ಟಿಗೆ ಕೆಲಸ ಮಾಡುತ್ತೇವೆ. ಕಾಂಗ್ರೆಸ್ ಪಕ್ಷಕ್ಕೆ ನಾನು ಬೇಕಾದರೆ ಉಳಿಸಿ ಕೊಳ್ಳುತ್ತಾರೆ. ಎಲ್ಲದಕ್ಕೂ ಸಮಯ ಬರಬೇಕು ಕಾಲ ಕೂಡಿ ಬರಬೇಕು ಎಂದು ಶಿವಕುಮಾರ್ ಹೇಳಿದರು.

  • ಲಾಲೂ ಪ್ರಸಾದ್ ಯಾದವ್‍ಗೆ ಸಿಬಿಐ ಶಾಕ್- 12 ಕಡೆ ದಾಳಿ

    ಲಾಲೂ ಪ್ರಸಾದ್ ಯಾದವ್‍ಗೆ ಸಿಬಿಐ ಶಾಕ್- 12 ಕಡೆ ದಾಳಿ

    ನವದೆಹಲಿ: ಆರ್‍ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್‍ಗೆ ಬೆಳ್ಳಂಬೆಳಗ್ಗೆ ಸಿಬಿಐ ಶಾಕ್ ನೀಡಿದೆ.

    2006ರಲ್ಲಿ ಲಾಲೂ ಪ್ರಸಾದ್ ಯಾದವ್ ರೈಲ್ವೆ ಮಂತ್ರಿಯಾಗಿದ್ದಾಗ ಹೋಟೆಲ್‍ಗಳಿಗೆ ನೀಡಿದ ಗುತ್ತಿಗೆಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ಲಾಲೂ ವಿರುದ್ಧ ಸಿಬಿಐ ದೂರು ದಾಖಲಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 5.30ರ ವೇಳೆಗೆ ಲಾಲೂ ಮನೆ ಮೇಲೆ ಸಿಬಿಐ ದಾಳಿ ನಡೆಸಿದೆ. ಅಲ್ಲದೆ ದೆಹಲಿ, ಪಾಟ್ನಾ, ಗುರಗಾಂವ್ ಸೇರಿದಂತೆ ಒಟ್ಟು 12 ಕಡೆ ದಾಳಿ ನಡೆಸಿದೆ. ಲಾಲೂ ಪತ್ನಿ ರಾಬ್ರಿದೇವಿ, ಬಿಹಾರದಲ್ಲಿ ಸಚಿವರಾಗಿರೋ ಪುತ್ರ ತೇಜಸ್ವಿ ಯಾದವ್ ಮೇಲೆ ಕೂಡ ಸಿಬಿಐ ಕೇಸ್ ದಾಖಲಿಸಿಕೊಂಡಿದೆ.

    ಪುರಿ ಮತ್ತು ರಾಂಚಿಯಲ್ಲಿ ರೈಲ್ವೆಗಾಗಿ ಎರಡು ಹೋಟೆಲ್‍ಗಳನ್ನು ನಡೆಸಲು ಹರ್ಷ್ ಕೊಚ್ಚರ್ ಎಂಬವರಿಗೆ 15 ವರ್ಷಗಳ ಗುತ್ತಿಗೆ ನೀಡಿದ್ದು, ಅದಕ್ಕೆ ಪ್ರತಿಯಾಗಿ ಲಾಲೂ ಪ್ರಸಾದ್ ಯಾದವ್ ಕುಟುಂಬ ಪಾಟ್ನಾದಲ್ಲಿ ಎರಡು ಎಕರೆ ಜಮೀನನ್ನು ಪಡೆದಿದ್ದಾರೆ ಎಂದು ಸಿಬಿಐ ಆರೋಪಿಸಿದೆ. ಮೊದಲಿಗೆ ಕೊಚ್ಚರ್ ಎರಡು ಎಕರೆ ಜಮೀನನ್ನು ಲಾಲೂ ಪ್ರಸಾದ್ ಯಾದವ್‍ರ ಪಕ್ಷದ ಸಂಸದರೊಬ್ಬರ ಪತ್ನಿಯ ಕಂಪೆನಿಗೆ ಮಾರಾಟ ಮಾಡಿದ್ದು, ಅನಂತರ ಜಮೀನು ಲಾಲು ಪತ್ನಿ ಮತ್ತು ಮಕ್ಕಳ ಹೆಸರಿಗೆ ವರ್ಗಾವಣೆಯಾಗಿದೆ ಎಂದು ವರದಿಯಾಗಿದೆ.

    ಹೋಟೆಲ್ ಗುತ್ತಿಗೆಗೆ ಸಂಬಂಧಿಸಿದಂತೆ ಐಆರ್‍ಸಿಟಿಸಿ(ಇಂಡಿಯನ್ ರೈಲ್ವೆ ಕೇಟರಿಂಗ್ ಅಂಡ್ ಟೂರಿಸಂ ಕರ್ಪೊರೇಷನ್‍ನ) ಮುಖ್ಯಸ್ಥ ಪಿಕೆ ಗೋಯಲ್ ಮೇಲೂ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ.

    ಇನ್ನು ದಾಳಿ ಬಗ್ಗೆ ಆರ್‍ಜೆಡಿ ಕಾರ್ಯಕರ್ತರು ಗರಂ ಆಗಿದ್ದು, ಇದು ರಾಜಕೀಯ ಪ್ರೇರಿತ ಎಂದು ಅಪಾದಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ. ನಾವು ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡುತ್ತೇವೆ ಎಂದು ಆರ್‍ಜೆಡಿ ಮುಖಂಡ ಮನೋಜ್ ಜಾ ಹೇಳಿದ್ದಾರೆ. ಈ ಮಧ್ಯೆ ಸಿಎಂ ನಿತೀಶ್ ಕುಮಾರ್ ರಾಜ್‍ಗಿರ್‍ನಲ್ಲಿ ದಿಢೀರನೆ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ.