Tag: CBSE

  • 9ನೇ ತರಗತಿ ವಿದ್ಯಾರ್ಥಿಗಳಿಗೆ ಪುಸ್ತಕ ನೋಡಿ ಪರೀಕ್ಷೆ ಬರೆಯಲು ಅವಕಾಶ – ಹೇಗಿರಲಿದೆ ಎಕ್ಸಾಂ?

    9ನೇ ತರಗತಿ ವಿದ್ಯಾರ್ಥಿಗಳಿಗೆ ಪುಸ್ತಕ ನೋಡಿ ಪರೀಕ್ಷೆ ಬರೆಯಲು ಅವಕಾಶ – ಹೇಗಿರಲಿದೆ ಎಕ್ಸಾಂ?

    ಷ್ಟು ದಿನ ಮನೆಯಲ್ಲಿ ಕಂಠಪಾಠ ಮಾಡಿಕೊಂಡು ಹೋಗಿ ಶಾಲೆಯಲ್ಲಿ ಪರೀಕ್ಷೆ ಬರೆಯುತ್ತಿದ್ದ ಮಕ್ಕಳಿಗೆ ಸಿಬಿಎಸ್‌ಇ ಗುಡ್‌ನ್ಯೂಸ್‌ ಕೊಟ್ಟಿದೆ. ಇನ್ಮುಂದೆ ಓದಿಕೊಂಡು ಹೋಗಿ ಪರೀಕ್ಷೆ ಬರೆಯುವ ಅಗತ್ಯವಿಲ್ಲ. ಮಕ್ಕಳ ಟೆನ್ಷನ್‌ ಪರಿಹರಿಸುವ ಸಲುವಾಗಿ 2026-27ನೇ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವಂತೆ 9ನೇ ತರಗತಿ ವಿದ್ಯಾರ್ಥಿಗಳಿಗೆ ತೆರೆದ ಪುಸ್ತಕ (ಓಪನ್ ಬುಕ್) ಪರೀಕ್ಷೆ ಜಾರಿಗೊಳಿಸಲು ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ ಸಿಬಿಎಸ್ಇ ನಿರ್ಧಾರ ಕೈಗೊಂಡಿದೆ.

    ಈ ಹೊಸ ನೀತಿ ಜಾರಿಯಾದಲ್ಲಿ ವಿದ್ಯಾರ್ಥಿಗಳು ಪಠ್ಯಪುಸ್ತಕ ನೋಡಿಕೊಂಡು ಪರೀಕ್ಷೆ ಬರೆಯಲು ಅವಕಾಶ ಸಿಗಲಿದೆ. ಹಾಗಿದ್ರೆ ಏನಿದು ತೆರೆದ ಪುಸ್ತಕ ಪರೀಕ್ಷಾ ಪದ್ಧತಿ? ಪರೀಕ್ಷೆಗಳು ಹೇಗೆ ನಡೆಯಲಿದೆ? ಪ್ರಯೋಜನಗಳೇನು ಎಂಬ ಕುರಿತು ಇಲ್ಲಿ ವಿವರಿಸಲಾಗಿದೆ.

    ತೆರೆದ ಪುಸ್ತಕ ಪರೀಕ್ಷೆ:
    ಕೇಂದ್ರೀಯ ಮಾಧ್ಯಮ ಶಿಕ್ಷಣ ಮಂಡಳಿ ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ ಮಾಡಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ತೆರೆದ ಪುಸ್ತಕ ಪರೀಕ್ಷಾ ಪದ್ಧತಿ ಜಾರಿ ಮಾಡಲಾಗುತ್ತಿದೆ. ಹೀಗಾಗಿ ಇನ್ಮುಂದೆ ವಿದ್ಯಾರ್ಥಿಗಳು ಪಠ್ಯ ಪುಸ್ತಕ ನೋಡಿ ಪರೀಕ್ಷೆ ಬರೆಯಲು ಅವಕಾಶ ಇರುತ್ತದೆ. ಹಳೆಯ ಪರೀಕ್ಷಾ ಪದ್ಧತಿ ಕಂಠ ಪಾಠಕ್ಕೆ ಸಮಯ ಕೊಡುತ್ತೆ ಅನ್ನೋ ವಾದ ಇತ್ತು. ಈಗಿನ ಹೊಸ ಪರೀಕ್ಷಾ ಪದ್ಧತಿ ವಿದ್ಯಾರ್ಥಿ ಸಾಮರ್ಥ್ಯವನ್ನ ಗಣನೆಗೆ ತೆಗೆದುಕೊಳ್ಳುತ್ತದೆ. ಇಂತಹ ಕ್ರಮ ಆಯ್ಕೆ ಮಾಡುವ ಅನುಸರಿಸುವ ಹಕ್ಕು ಆಯಾ ಶಾಲೆಗಳಿಗೆ ಬಿಟ್ಟಿರುತ್ತದೆ. ರಾಷ್ಟ್ರೀಯ ಪಠ್ಯಕ್ರಮದ ಚೌಕಟ್ಟು -2023 ರಾಷ್ಟ್ರೀಯ ಶಿಕ್ಷಣ ನೀತಿ 2020ರ ಸಮನ್ವಯದೊಂದಿಗೆ ಹೊಸ ಪಠ್ಯಕ್ರಮವನ್ನು ಜಾರಿಗೊಳಿಸಲಾಗುತ್ತಿದೆ.

    ಹಳೆಯ ಪರೀಕ್ಷಾ ಪದ್ಧತಿ ಕಂಠಪಾಠಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಿದರೆ ಹೊಸ ನೀತಿಯು ಸಾಮರ್ಥ್ಯ ಆಧಾರಿತ ಕಲಿಕೆಗೆ ಮಹತ್ವ ಕೊಡುತ್ತದೆ. ಮುಖ್ಯ ಕಲಿಕಾ ವಿಷಯಗಳಾದ ಭಾಷೆ, ಗಣಿತ, ವಿಜ್ಞಾನ ಸಮಾಜ ವಿಜ್ಞಾನವನ್ನು ಇದು ಒಳಗೊಳ್ಳಲಿದೆ. ಈ ಕ್ರಮವನ್ನು ಆಯ್ಕೆ ಮಾಡಿಕೊಳ್ಳುವ ಅಥವಾ ಬಿಡುವ ಸ್ವಾತಂತ್ರ್ಯವನ್ನು ಶಾಲೆಗಳಿಗೆ ನೀಡಲಾಗಿದೆ.

    ತೆರೆದ ಪುಸ್ತಕ ಪರೀಕ್ಷೆ ಎಂದರೇನು?
    ತೆರೆದ ಪುಸ್ತಕ ಪರೀಕ್ಷೆಗಳನ್ನು ಜಾರಿಗೆ ತಂದ ನಂತರ 9ನೇ ತರಗತಿಯ ವಿದ್ಯಾರ್ಥಿಗಳು ಪರೀಕ್ಷೆಯ ಸಮಯದಲ್ಲಿ ಪ್ರಶ್ನೆಗಳಿಗೆ ಉತ್ತರಿಸುವಾಗ ಪಠ್ಯಪುಸ್ತಕಗಳು, ತರಗತಿ ಟಿಪ್ಪಣಿಗಳು, ಗ್ರಂಥಾಲಯ ಪುಸ್ತಕಗಳನ್ನು ಬಳಸುವ ಅವಕಾಶವಿರುತ್ತದೆ. 9ನೇ ತರಗತಿಯಲ್ಲಿ ತೆರೆದ ಪುಸ್ತಕ ಪುಸ್ತಕ ಪರೀಕ್ಷೆಗಳನ್ನು ಪ್ರತಿ ಅವಧಿಗೆ 3 ಪೆನ್ನು-ಪೇಪರ್ ಮೌಲ್ಯಮಾಪನಗಳ ಭಾಗವಾಗಿ ಸಂಯೋಜಿಸಲಾಗುತ್ತದೆ. ಇದು ಭಾಷೆ, ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನಗಳಂತಹ ಪ್ರಮುಖ ವಿಷಯಗಳನ್ನು ಒಳಗೊಂಡಿದೆ. ಶಾಲೆಗಳು ಇದನ್ನು ಶಿಫಾರಸು ಮಾಡುತ್ತವೆ. ಆದರೆ ಅದರ ಅನುಷ್ಠಾನವು ಕಡ್ಡಾಯವಾಗಿರುವುದಿಲ್ಲ.

    ಹೇಗಿರಲಿದೆ ತೆರೆದ ಪುಸ್ತಕ ಪರೀಕ್ಷೆ?
    -ಅಧ್ಯಯನವು ಪೂರ್ಣಗೊಳಿಸಲು ತೆಗೆದುಕೊಂಡ ಸಮಯ ಹಾಗೂ ಪಾಲುದಾರರಿಂದ ಪ್ರತಿಕ್ರಿಯೆಯಂತಹ ಅಂಶಗಳನ್ನು ಮೌಲ್ಯಮಾಪನ ಮಾಡಿದೆ.
    -ಸಿಬಿಎಸ್‌ಇ ( CBSE) ತೆರೆದ ಪುಸ್ತಕ ಮೌಲ್ಯಮಾಪನ ಸ್ವರೂಪವು ಭಾಷೆಗಳು, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನದಂತಹ ಪ್ರಮುಖ ಮುಖ ವಿಷಯಗಳನ್ನು ಒಳಗೊಂಡಿರುತ್ತದೆ.
    -ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳು ಪಠ್ಯ ಪುಸ್ತಕಗಳು, ತರಗತಿ ಟಿಪ್ಪಣಿಗಳು ಮತ್ತು ಇತರ ಅನುಮೋದಿತ ಸಂಪನ್ಮೂಲಗಳನ್ನು ಉಲ್ಲೇಖಿಸಬಹುದು.
    -ಈ ಸ್ವರೂಪವನ್ನು ಅಳವಡಿಸಿಕೊಳ್ಳಬೇಕೋ ಅಥವಾ ಬೇಡವೋ ಎಂಬುದು ಶಾಲೆಗಳಿಗೆ ಬಿಟ್ಟದ್ದು, ಅದು ಒಂದು ಆಯ್ಕೆಯಾಗಿರುತ್ತದೆ ಎಂದು CBSE ಹೇಳಿದೆ. ಪ್ರತಿ ಶೈಕ್ಷಣಿಕ ಅವಧಿಯಲ್ಲಿ ನಡೆಸುವ ಮೂರು ಪೆನ್ನು-ಪೇಪರ್ ಪರೀಕ್ಷೆಗಳ ಭಾಗವಾಗಿ ಮೌಲ್ಯಮಾಪನ ಇರುತ್ತದೆ.
    -CBSE ಪರೀಕ್ಷೆಗಳು ವರ್ಷಕ್ಕೆ 2 ಬಾರಿ ನಡೆಯಲಿವೆ ಎಂದು ಕೆಲವು ತಿಂಗಳ ಹಿಂದೆಯೇ ಘೋಷಿಸಲಾಗಿತ್ತು.
    -ಈ ಎರಡನೇ ಹಂತದ ಪರೀಕ್ಷೆಯು ವಿದ್ಯಾರ್ಥಿಗಳಿಗೆ ಐಚ್ಛಿಕವಾಗಿರುತ್ತದೆ ಎಂದು ಸಿಬಿಎಸ್‌ಇ ತಿಳಿಸಿದೆ. ಎರಡನೇ ಹಂತದ ಪರೀಕ್ಷೆ ವಿಶೇಷವಾಗಿ ಸುಧಾರಣೆಗಾಗಿ ಇರುತ್ತದೆ.

    ತೆರೆದ ಪುಸ್ತಕ ಪರೀಕ್ಷೆ ಪ್ರಯೋಜನವೇನು?
    ಈ ಉಪಕ್ರಮವು ಮಕ್ಕಳು ಪರೀಕ್ಷೆಯ ಸಮಯದಲ್ಲಿ ನೀಡಲಾದ ಪುಸ್ತಕಗಳು ಹಾಗೂ ಟಿಪ್ಪಣಿಗಳನ್ನು ಹೇಗೆ ಬಳಸುತ್ತಿದ್ದಾರೆ ಎಂಬುದನ್ನು ತೋರಿಸುತ್ತದೆ. ಇದು ಅವರ ಸಾಮರ್ಥ್ಯವನ್ನು ನಿರ್ಣಯಿಸುತ್ತದೆ.

    ಈ ಪರೀಕ್ಷೆಯೂ ವಿದ್ಯಾರ್ಥಿಗಳಲ್ಲಿ ಕಂಠಪಾಠ ಮಾಡುವ ಅಭ್ಯಾಸವನ್ನು ತೆಗೆದುಹಾಕುವ ಪ್ರಯತ್ನವಾಗಿದೆ. ಬದಲಾಗಿ, ಅನ್ವಯಿಸುವ ಹಾಗೂ ವಿಶ್ಲೇಷಿಸುವ ಸಾಮರ್ಥ್ಯವನ್ನು ಪರೀಕ್ಷಿಸಲಾಗುತ್ತದೆ.

    2014ರಲ್ಲೂ ಸಹ ನಡೆದಿತ್ತು ಪರೀಕ್ಷೆ:
    CBSE ಓಪನ್-ಬುಕ್ ಪರೀಕ್ಷೆಯನ್ನು ಬಳಸುತ್ತಿರುವುದು ಇದೇ ಮೊದಲಲ್ಲ. ಇದಕ್ಕೂ ಮೊದಲು, ಮಂಡಳಿಯೂ 2014ರಲ್ಲಿ ಓಪನ್-ಬುಕ್ ಪರೀಕ್ಷೆಯನ್ನು ಸಹ ನಡೆಸಿತ್ತು. ನಂತರ ಅದನ್ನು ಓಪನ್ ಟೆಕ್ಸ್ ಬೇಸ್ಟ್ ಅಸೆಸ್ಟೆಂಟ್ (OTBA) ಎಂದು ಹೆಸರಿಸಲಾಯಿತು. ಈ ಅವಧಿಯಲ್ಲಿ, 9ನೇ ತರಗತಿಯಲ್ಲಿ ಹಿಂದಿ, ಇಂಗ್ಲಿಷ್, ಗಣಿತ ಮತ್ತು ಸಮಾಜ ವಿಜ್ಞಾನದ ಅಂತಿಮ ಪರೀಕ್ಷೆಗಳಲ್ಲಿ ಮತ್ತು 11ನೇ ತರಗತಿಯಲ್ಲಿ ಅರ್ಥಶಾಸ್ತ್ರ, ಜೀವಶಾಸ್ತ್ರ ಮತ್ತು ಭೂಗೋಳಶಾಸ್ತ್ರದಲ್ಲಿ OTBA ಅನ್ನು ಪ್ರಯತ್ನಿಸಲಾಯಿತು. ಆದಾಗ್ಯೂ, ವಿದ್ಯಾರ್ಥಿಗಳಲ್ಲಿ ವಿಮರ್ಶಾತ್ಮಕ ಚಿಂತನಾ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವಲ್ಲಿ OTRAಯಶಸ್ವಿಯಾಗಿಲ್ಲ ಎಂದು ಕಾರಣ ನೀಡಿ 2017-18ರಲ್ಲಿ ಅದನ್ನು ನಿಲ್ಲಿಸಲಾಯಿತು.

  • CBSE ಯಿಂದ ಸೇಫ್ಟಿ ಗೈಡ್‌ಲೈನ್ಸ್ ‌- ಶೌಚಾಲಯ ಹೊರತುಪಡಿಸಿ ಶಾಲೆಯ ಉಳಿದೆಲ್ಲಕಡೆ ಆಡಿಯೋವಿಶುವಲ್ ಸಿಸಿಟಿವಿ ಕಡ್ಡಾಯ

    CBSE ಯಿಂದ ಸೇಫ್ಟಿ ಗೈಡ್‌ಲೈನ್ಸ್ ‌- ಶೌಚಾಲಯ ಹೊರತುಪಡಿಸಿ ಶಾಲೆಯ ಉಳಿದೆಲ್ಲಕಡೆ ಆಡಿಯೋವಿಶುವಲ್ ಸಿಸಿಟಿವಿ ಕಡ್ಡಾಯ

    ನವದೆಹಲಿ: ಶಾಲೆಗಳಲ್ಲಿ ಸುರಕ್ಷತಾ ಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ಹೊಸ ಮಾರ್ಗಸೂಚಿಯನ್ನ ಬಿಡುಗಡೆಗೊಳಿಸಿದೆ. ಈ ಉಪಕ್ರಮದ ಭಾಗವಾಗಿ ತನ್ನೆಲ್ಲಾ ಅಂಗಸಂಸ್ಥೆಯ ಶಾಲೆಗಳಲ್ಲಿ ಹೈ-ರೆಸಲ್ಯೂಶನ್ (ಉತ್ತಮ ಗುಣಮಟ್ಟದ) ಆಡಿಯೋವಿಶುವಲ್‌ ರೆಕಾರ್ಡಿಂಗ್‌ ಸಾಮರ್ಥ್ಯದ ಸಿಸಿಟಿವಿ ಕ್ಯಾಮೆರಾಗಳನ್ನ (CCTV Cameras) ಅಳವಡಿಸಲು ನಿರ್ದೇಶನ ನೀಡಿದೆ.

    ವಿದ್ಯಾರ್ಥಿಗಳು (School Students) ಮತ್ತು ಶಾಲಾ ಸಿಬ್ಬಂದಿಯ ಸುರಕ್ಷತಾ ದೃಷ್ಟಿಯಿಂದ ಶೌಚಾಲಯ ಹೊರತುಪಡಿಸಿ ಶಾಲೆಯ ಉಳಿದೆಲ್ಲ ಕಡೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಸೂಚಿಸಿದೆ. ಅಲ್ಲದೇ ಕನಿಷ್ಠ 15 ದಿನಗಳವರೆಗೆ ರೆಕಾರ್ಡಿಂಗ್‌ ಸಂಗ್ರಹಿಸುವ ಶೇಖರಣಾ ಸಾಧನಗಳನ್ನ ಹೊಂದಿರಬೇಕು. ಅಗತ್ಯವಿದ್ದರೆ, ಅಧಿಕಾರಿಗಳು ಅದನ್ನು ಪರಿಶೀಲಿಸಬಹುದು ಎಂದು ಮಂಡಳಿ ಹೇಳಿದೆ. ಇದನ್ನೂ ಓದಿ: ಜಮ್ಮು ಕಾಶ್ಮೀರದ ಪೇದೆಗೆ ಕಸ್ಟಡಿಯಲ್ಲಿ ಚಿತ್ರಹಿಂಸೆ – ಸಿಬಿಐ ತನಿಖೆಗೆ ಆದೇಶಿಸಿದ ಸುಪ್ರೀಂ ಕೋರ್ಟ್

    ಎಲ್ಲೆಲ್ಲಿ ಸಿಸಿಟಿವಿ ಅಳವಡಿಕೆ?
    ಶೌಚಾಲಯ, ಸ್ನಾನಗೃಹ (ವಾಶ್‌ರೂಮ್‌) ಹೊರತುಪಡಿಸಿ, ಶಾಲೆಗಳ ಎಲ್ಲಾ ಪ್ರವೇಶ ಮತ್ತು ನಿರ್ಗಮನ ದ್ವಾರಗಳು, ಲಾಬಿಗಳು, ಕಾರಿಡಾರ್‌ಗಳು, ಮೆಟ್ಟಿಲುಗಳು, ಎಲ್ಲಾ ತರಗತಿ ಕೊಠಡಿಗಳು, ಪ್ರಯೋಗಾಲಯಗಳು (labs), ಗ್ರಂಥಾಲಯ, ಕಾಲೇಜು ಕ್ಯಾಂಪಸ್‌ನಲ್ಲಿರುವ ಕ್ಯಾಂಟೀನ್ ಪ್ರದೇಶ, ಸ್ಟೋರ್‌ರೂಮ್‌, ಆಟದ ಮೈದಾನ, ಇತರ ಸಾಮಾನ್ಯ ಪ್ರದೇಶಗಳಲ್ಲಿ ಸುರಕ್ಷತೆಯ ದೃಷ್ಟಿಯಿಂದ ಹೈ-ರೆಸಲ್ಯೂಶನ್ ಆಡಿಯೋವಿಶುವಲ್‌ ಸಿಸಿಟಿವಿ ಕ್ಯಾಮೆರಾ ಅಳವಡಿಸುವಂತೆ ನಿರ್ದೇಶನ ನೀಡಿದೆ. ಇದನ್ನೂ ಓದಿ: ಭಾರೀ ಸರಕು ವಾಹನ ಪರವಾನಗಿಯುಳ್ಳ ಚಾಲಕರು ಪ್ರಯಾಣಿಕ ವಾಹನ ಚಾಲನೆ ಮಾಡಲು ಅರ್ಹರು: ಕಾಶ್ಮೀರ ಹೈಕೋರ್ಟ್ 

    ಅಲ್ಲದೇ 15 ದಿನ ರೆಕಾರ್ಡಿಂಗ್‌ ಉಳಿಸಿಕೊಳ್ಳುವ ಶೇಖರಣಾ ಸಾಧನಗಳನ್ನ ಹೊಂದಿರಬೇಕು. ರೆಕಾರ್ಡಿಂಗ್‌ ಬ್ಯಾಕಪ್‌ ವ್ಯವಸ್ಥೆಯೊಂದಿಗೆ ನಿಯಮಿತವಾಗಿ ನಿರ್ವಹಣೆ ಮಾಡಬೇಕು ಎಂದು ಸಿಬಿಎಸ್‌ಇ ಮಂಡಳಿ ತನ್ನ ಅಂಗಸಂಸ್ಥೆಯ ಶಾಲೆಗಳಿಗೆ ಸೂಚನೆ ನೀಡಿದೆ. ಇದನ್ನೂ ಓದಿ: ಆಪರೇಷನ್ ಸಿಂಧೂರ ವೇಳೆ ಭಾರತದ ಸೇನಾ ಶಕ್ತಿಯನ್ನ ಇಡೀ ವಿಶ್ವವೇ ನೋಡಿದೆ; ಸಂಸತ್ ಅಧಿವೇಶನಕ್ಕೂ ಮುನ್ನ ಮೋದಿ ಮಾತು

  • CBSEಯಲ್ಲಿ ಮಹತ್ವದ ಬದಲಾವಣೆ – ವರ್ಷಕ್ಕೆ 2 ಬಾರಿ 10ನೇ ತರಗತಿ ಪರೀಕ್ಷೆ ನಡೆಸಲು ನಿರ್ಧಾರ

    CBSEಯಲ್ಲಿ ಮಹತ್ವದ ಬದಲಾವಣೆ – ವರ್ಷಕ್ಕೆ 2 ಬಾರಿ 10ನೇ ತರಗತಿ ಪರೀಕ್ಷೆ ನಡೆಸಲು ನಿರ್ಧಾರ

    ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) 2026ರಿಂದ ವರ್ಷಕ್ಕೆ ಎರಡು ಬಾರಿ 10ನೇ ತರಗತಿ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿದೆ.

    ಮಾಹಿತಿಗಳ ಪ್ರಕಾರ, ಫೆಬ್ರವರಿಯಲ್ಲಿ ನಡೆಯಲಿರುವ ಮೊದಲ ಹಂತದ ಪರೀಕ್ಷೆಯು 10ನೇ ತರಗತಿ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿರುತ್ತದೆ. ಮೇ ತಿಂಗಳಲ್ಲಿ ನಿಗದಿಯಾಗಿರುವ ಎರಡನೇ ಹಂತದ ಪರೀಕ್ಷೆ ತಮ್ಮ ಕಾರ್ಯಕ್ಷಮತೆಯನ್ನು ಸುಧಾರಿಸಲು ಬಯಸುವ ವಿದ್ಯಾರ್ಥಿಗಳಿಗೆ ಐಚ್ಛಿಕವಾಗಿರುತ್ತದೆ. ಶೈಕ್ಷಣಿಕ ಅವಧಿಯಲ್ಲಿ ಆಂತರಿಕ ಮೌಲ್ಯಮಾಪನವನ್ನು ಒಮ್ಮೆ ಮಾತ್ರ ನಡೆಸಲಾಗುತ್ತದೆ ಎಂದು ಸಿಬಿಎಸ್‌ಇ ತಿಳಿಸಿದೆ.ಇದನ್ನೂ ಓದಿ: Bengaluru | ವೃದ್ಧಾಶ್ರಮ ಸೇರಿಸಿದ್ದಕ್ಕೆ ನೊಂದು ವೃದ್ಧ ದಂಪತಿ ಆತ್ಮಹತ್ಯೆ

    ಈ ಕುರಿತು ಸಿಬಿಎಸ್‌ಇ ಪರೀಕ್ಷಾ ನಿಯಂತ್ರಕ ಸಂಯಮ್ ಭಾರದ್ವಾಜ್ ಮಾತನಾಡಿ, ಮೊದಲ ಹಂತ ಫೆಬ್ರವರಿಯಲ್ಲಿ ಮತ್ತು ಎರಡನೇ ಹಂತ ಮೇ ತಿಂಗಳಲ್ಲಿ ನಡೆಯಲಿದೆ. ಎರಡು ಹಂತಗಳ ಫಲಿತಾಂಶಗಳನ್ನು ಕ್ರಮವಾಗಿ ಏಪ್ರಿಲ್ ಮತ್ತು ಜೂನ್‌ನಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

    ವಿದ್ಯಾರ್ಥಿಗಳಿಗೆ ಮೊದಲ ಹಂತಕ್ಕೆ ಹಾಜರಾಗುವುದು ಕಡ್ಡಾಯವಾಗಿರುತ್ತದೆ. ಆದರೆ ಎರಡನೇ ಹಂತವು ಐಚ್ಛಿಕವಾಗಿರುತ್ತದೆ. ವಿಜ್ಞಾನ, ಗಣಿತ, ಸಮಾಜ ವಿಜ್ಞಾನ ಮತ್ತು ಇನ್ನೂ ಭಾಷೆಗಳಲ್ಲಿ ಯಾವುದೇ ಮೂರು ವಿಷಯಗಳಲ್ಲಿ ವಿದ್ಯಾರ್ಥಿಗಳು ತಮ್ಮ ಕಾರ್ಯಕ್ಷಮತೆಯನ್ನು ಸುಧಾರಿಸಲು ಅವಕಾಶ ನೀಡಲಾಗುವುದು ಎಂದು ಹೇಳಿದರು.

    ಕಳೆದ ತಿಂಗಳು, ಈ ಕುರಿತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು, ಒತ್ತಡರಹಿತ ಕಲಿಕೆಯ ವಾತಾವರಣವನ್ನು ಸೃಷ್ಟಿಸಲು ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಮೂಲಕ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಬಹುದಾಗಿದೆ. ಈ ನಿರ್ಧಾರ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಮುಖ ಹೆಜ್ಜೆಯಾಗಿದೆ ಎಂದರು.ಇದನ್ನೂ ಓದಿ: ಮಾವು ಬೆಳೆಗೆ ಬೆಂಬಲ ಬೆಲೆ ಕೊಡಿಸಿದ್ದು ಕುಮಾರಣ್ಣ, ಡಿಕೆ ಬ್ರದರ್ಸ್ ಏನ್ಮಾಡ್ತಿದ್ದಾರೆ: ನಿಖಿಲ್‌ ಕಿಡಿ

  • 2026 ರಿಂದ ವರ್ಷಕ್ಕೆ 2 ಬಾರಿ 10ನೇ ತರಗತಿ ಪರೀಕ್ಷೆ: ಸಿಬಿಎಸ್‌ಇ

    2026 ರಿಂದ ವರ್ಷಕ್ಕೆ 2 ಬಾರಿ 10ನೇ ತರಗತಿ ಪರೀಕ್ಷೆ: ಸಿಬಿಎಸ್‌ಇ

    ನವದೆಹಲಿ: 2026ರಿಂದ ವರ್ಷಕ್ಕೆ 2 ಬಾರಿ 10ನೇ ತರಗತಿ ಪರೀಕ್ಷೆ ನಡೆಸಲು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ಮುಂದಾಗಿದೆ.

    ಸಿಬಿಎಸ್‌ಇ ಪ್ರತಿ ವರ್ಷ 10ನೇ ತರಗತಿಗೆ 2 ಬಾರಿ ಬೋರ್ಡ್ ಪರೀಕ್ಷೆಗಳನ್ನು ನಡೆಸುವಂತೆ ಯೋಜಿಸಿದೆ. ಈ ನಿರ್ಧಾರದಿಂದ ವಿದ್ಯಾರ್ಥಿಗಳಿಗೆ ತಮ್ಮ ಕಾರ್ಯಕ್ಷಮತೆಯನ್ನು ಸುಧಾರಿಸಲು ಹೆಚ್ಚುವರಿ ಅವಕಾಶವನ್ನು ಒದಗಿಸುತ್ತದೆ ಎಂದು ಹೇಳಿದೆ.ಇದನ್ನೂ ಓದಿ: ನೆಲಮಂಗಲ| ಹಾವಾರ್ಡ್ ಶಾಲೆಯಲ್ಲಿ ಶಿವರಾತ್ರಿ ಆಚರಣೆ

    ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಸಿಬಿಎಸ್‌ಇ ಅಧಿಕಾರಿಗಳು, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ, ಕೇಂದ್ರೀಯ ವಿದ್ಯಾಲಯ ಸಂಘಟನೆ ಹಾಗೂ ನವೋದಯ ವಿದ್ಯಾಲಯ ಸಮಿತಿ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

    ಹೊಸದಾಗಿ ಅನುಮೋದಿಸಲಾದ ಕರಡು ಮಾರ್ಗಸೂಚಿಗಳ ಪ್ರಕಾರ, 10 ನೇ ತರಗತಿಯ ಬೋರ್ಡ್ ಪರೀಕ್ಷೆಗಳು ಎರಡು ಹಂತಗಳಲ್ಲಿ ನಡೆಯಲಿವೆ. ಮೊದಲ ಹಂತವು ಫೆಬ್ರವರಿ ಮತ್ತು ಮಾರ್ಚ್ ನಡುವೆ ನಡೆಯಲಿದ್ದು, ಎರಡನೇ ಹಂತವು ಮೇ ತಿಂಗಳಲ್ಲಿ ನಡೆಯಲಿದೆ. ಎರಡೂ ಪರೀಕ್ಷೆಗಳು ಪೂರ್ಣ ಪಠ್ಯಕ್ರಮವನ್ನು ಒಳಗೊಂಡಿರುತ್ತವೆ.

    ಈ ಯೋಜನೆ ಮೂಲಕ ಪರೀಕ್ಷೆಯಲ್ಲಿ ಸುಧಾರಣೆ ತರುವುದು ಪ್ರಮುಖ ಉದ್ದೇಶವಾಗಿದೆ. ಇದರಿಂದ ಒತ್ತಡ ಕಡಿಮೆ, ಪರೀಕ್ಷೆಯಲ್ಲಿ ಆತಂಕ, ಅನಾರೋಗ್ಯದ ತೊಂದರೆಗಳಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗೆ ಸಹಕಾರಿಯಾಗಲಿದೆ. ಒಂದೇ ಪರೀಕ್ಷೆಯಲ್ಲಿ ಹೆಚ್ಚಿನ ಒತ್ತಡವಿಲ್ಲದೇ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದಾಗಿದೆ ಎಂದು ತಿಳಿಸಿದೆ.

    ಬೋರ್ಡ್ ಪರೀಕ್ಷೆಗಳು ವರ್ಷಕ್ಕೆ ಎರಡು ಬಾರಿ ನಡೆದರೂ ಪ್ರಾಯೋಗಿಕ ಮತ್ತು ಆಂತರಿಕ ಮೌಲ್ಯಮಾಪನಗಳನ್ನು ಹೊಸ ಮಾನದಂಡಗಳ ಪ್ರಕಾರ ವರ್ಷಕ್ಕೊಮ್ಮೆ ಮಾತ್ರ ನಡೆಸಲಾಗುವುದು. ವಿದ್ಯಾರ್ಥಿಗಳು ಎರಡೂ ಅವಧಿಗಳಿಗೆ ಹಾಜರಾಗಲು ಮತ್ತು ಅವರ ತಯಾರಿಗೆ ಉತ್ತಮವಾಗಿ ಹೊಂದಿಕೆಯಾಗುವ ಒಂದನ್ನು ಆಯ್ಕೆ ಮಾಡಲು ಅವಕಾಶವನ್ನು ಹೊಂದಿರುತ್ತಾರೆ.

    ಮುಂದಿನ ಶೈಕ್ಷಣಿಕ ಅವಧಿಯಿಂದ ಪ್ರತಿ ವರ್ಷ ಎರಡು ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಯೋಜನೆಯ ಕುರಿತು ಶಿಕ್ಷಣ ಸಚಿವಾಲಯವು ಇತ್ತೀಚೆಗೆ ಸಿಬಿಎಸ್‌ಇ ಜೊತೆ ಚರ್ಚೆ ನಡೆಸಿತು.

    ಇದರ ಜೊತೆಗೆ 2026-27 ಶೈಕ್ಷಣಿಕ ಅವಧಿಗೆ ವಿದೇಶಿ ಶಾಲೆಗಳಿಗೆ ಜಾಗತಿಕ ಪಠ್ಯಕ್ರಮವನ್ನು ಪ್ರಾರಂಭಿಸಲು ಸಚಿವಾಲಯವು ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಸಚಿವ ಪ್ರಧಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಮುಂಬರುವ ಶೈಕ್ಷಣಿಕ ವರ್ಷದಲ್ಲಿ ವಿದೇಶಿ ಶಾಲೆಗಳಿಗೆ ಸಿಬಿಎಸ್‌ಇ ಜಾಗತಿಕ ಪಠ್ಯಕ್ರಮವನ್ನು ಪ್ರಾರಂಭಿಸಲು ವಿವರವಾದ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲು ಸಿಬಿಎಸ್‌ಇಗೆ ಸೂಚಿಸಲಾಯಿತು.ಇದನ್ನೂ ಓದಿ: ಈ ಬಾರಿಯ ಐಪಿಎಲ್‌ನಲ್ಲಿ ಹೊಸ ಬ್ಯಾಟ್ ಬಳಸಲಿದ್ದಾರೆ ಧೋನಿ

     

  • CBSE 2025: 10, 12ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

    CBSE 2025: 10, 12ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

    ನವದೆಹಲಿ: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯ (CBSE) 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷಾ ವೇಳಾಪಟ್ಟಿ ಪ್ರಕಟಗೊಂಡಿದೆ. 2025 ರ ಬೋರ್ಡ್ ಪರೀಕ್ಷೆಗಳು ಫೆ.15 ರಿಂದ ಪ್ರಾರಂಭವಾಗಲಿವೆ.

    CBSE ಇತ್ತೀಚೆಗೆ 10 ಮತ್ತು 12 ನೇ ತರಗತಿಗಳಿಗೆ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವುದರ ಕುರಿತು ವಿವರಗಳನ್ನು ಬಿಡುಗಡೆ ಮಾಡಿತ್ತು. 10 ನೇ ತರಗತಿಯ ಪ್ರಾಯೋಗಿಕ ಪರೀಕ್ಷೆಗಳು 2025ರ ಜ.1 ರಿಂದ ನಡೆಯಲಿದೆ. ಆದರೆ 12 ನೇ ತರಗತಿಯ ಪರೀಕ್ಷೆಗಳು ಫೆ.15 ರಂದು ಪ್ರಾರಂಭವಾಗುತ್ತವೆ ಎಂದು ತಿಳಿಸಿತ್ತು.

    ವೇಳಾಪಟ್ಟಿ ಡೌನ್‌ಲೋಡ್‌ ಮಾಡಿಕೊಳ್ಳುವುದು ಹೇಗೆ?
    ಸ್ಟೆಪ್‌ 1: cbse.gov.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ಕೊಡಿ.
    ಸ್ಟೆಪ್‌ 2: ಮುಖಪುಟದಲ್ಲಿ, “Main Website” ಲಿಂಕ್ ಅನ್ನು ಕ್ಲಿಕ್ ಮಾಡಿ.
    ಸ್ಟೆಪ್‌ 3: ಹೊಸ ಪುಟ ತೆರೆದುಕೊಳ್ಳುತ್ತದೆ. ಆಗ, ಬೋರ್ಡ್‌ ಪರೀಕ್ಷೆಗಳಿಗಾಗಿ X ಮತ್ತು XII ತರಗತಿಯ ದಿನಾಂಕದ ವೇಳಾಪಟ್ಟಿ 2025 (7.65 MB) 20/11/2024New_img ಮೇಲೆ ಕ್ಲಿಕ್ ಮಾಡಿ.
    ಸ್ಟೆಪ್‌ 4: ಪಿಡಿಎಫ್‌ ತೆಗೆದುಕೊಳ್ಳುವಂತೆ ಸೂಚಿಸುತ್ತದೆ.
    ಸ್ಟೆಪ್‌ 5: CBSE ಬೋರ್ಡ್ ಪರೀಕ್ಷೆಯ ವೇಳಾಪಟ್ಟಿ ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿಕೊಳ್ಳಿ.

  • ಯುಜಿಸಿಇಟಿ- 2024; CBSE/CISCE/IGCSE ತೇರ್ಗಡೆಯಾದವರಿಗೆ ಅಂಕ ದಾಖಲಿಸಲು ಮೇ 20ರವರೆಗೆ ಅವಕಾಶ

    ಯುಜಿಸಿಇಟಿ- 2024; CBSE/CISCE/IGCSE ತೇರ್ಗಡೆಯಾದವರಿಗೆ ಅಂಕ ದಾಖಲಿಸಲು ಮೇ 20ರವರೆಗೆ ಅವಕಾಶ

    ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) 12ನೇ ತರಗತಿಯನ್ನು ಸಿಬಿಎಸ್‌ಇ, (ಜಮ್ಮು ಮತ್ತು ಕಾಶ್ಮೀರ ಸೇರಿದಂತೆ) ಸಿಐಎಸ್‌ಸಿಇ, 10+2, ಐಜಿಸಿಎಸ್‌ಇ ಮತ್ತಿತರ ಬೋರ್ಡ್‌ಗಳಲ್ಲಿ 2024ರಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ ತಮ್ಮ ಅಂಕಗಳನ್ನು ದಾಖಲಿಸಲು ಮೇ 14ರಿಂದ 20ರವರೆಗೆ ಆನ್‌ಲೈನ್ ಪೋರ್ಟಲ್ ಲಿಂಕ್ ಅನ್ನು ಸಕ್ರಿಯಗೊಳಿಸಲಿದೆ.

    ಈ ಮೇಲೆ ತಿಳಿಸಿದ ಎಲ್ಲಾ ಅಭ್ಯರ್ಥಿಗಳು ಮೇ 20ರ ಒಳಗೆ ಕಡ್ಡಾಯವಾಗಿ ತಮ್ಮ 12ನೇ ತರಗತಿಯ ಅಂಕಗಳ ವಿವರಗಳನ್ನು ನಿಗದಿತ ಲಿಂಕ್‌ನಲ್ಲಿ ಅಂಕಗಳನ್ನು ದಾಖಲಿಸಿ, ಅಂಕಪಟ್ಟಿಯ ಪಿಡಿಎಫ್ ಪ್ರತಿಯನ್ನು ತಪ್ಪದೇ ಅಪ್‌ಲೋಡ್ ಮಾಡಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಸೋಮವಾರ ಪತ್ರಿಕಾ ಪ್ರಕಟಣೆಯಲ್ಲಿ ಸೂಚಿಸಿದ್ದಾರೆ. ಇದನ್ನೂ ಓದಿ: ಹೇಮಂತ್‌ ಸೊರೆನ್‌ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆ ನಡೆಸಲು ನಿರಾಕರಿಸಿದ ಸುಪ್ರೀಂ

    2024ಕ್ಕಿಂತ ಹಿಂದಿನ ವರ್ಷಗಳಲ್ಲಿ ಕರ್ನಾಟಕ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳು ಮತ್ತು 12ನೇ ತರಗತಿಯನ್ನು ಉತ್ತೀರ್ಣರಾಗಿರುವವರೂ ಅಂಕಗಳನ್ನು ದಾಖಲಿಸಬೇಕು ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಮಾವಿಗೆ ಬಿಸಿಲಿನ ಶಾಪ – ಬರೋಬ್ಬರಿ 400 ಕೋಟಿ ಮೌಲ್ಯದ ಮಾವು ನಷ್ಟ

    ಅರ್ಹತಾ ಕಂಡಿಕೆ Ckause-Y ಅನ್ನು ಆಯ್ಕೆ ಮಾಡಿರುವ ಅಭ್ಯರ್ಥಿಗಳೂ ಸಹ ಅಂಕಗಳನ್ನು ಪೋರ್ಟಲ್‌ನಲ್ಲಿ ದಾಖಲಿಸಬೇಕು. ಕರ್ನಾಟಕ ದ್ವಿತೀಯ ಪಿಯುಸಿ 2024ರ ಅಂಕಗಳನ್ನು ಪ್ರಾಧಿಕಾರವು ನೇರವಾಗಿ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಪಡೆದುಕೊಳ್ಳುತ್ತದೆ. ಇದನ್ನೂ ಓದಿ: ಇಂಡಿಯಾ ಒಕ್ಕೂಟ ಗೆದ್ದರೇ ಮರುದಿನವೇ ಜೈಲಿನಿಂದ ಹೊರಬರುವೆ: ಕೇಜ್ರಿವಾಲ್

    ಆರ್ಕಿಟೆಕ್ಚರ್ ಕೋರ್ಸುಗಳ ಪ್ರವೇಶಕ್ಕಾಗಿ ಅಭ್ಯರ್ಥಿಗಳು 2024ರ ‘ನಾಟಾ’ ಪರೀಕ್ಷೆಯ ಅಂಕಗಳನ್ನು ಅರ್ಹತೆಗೆ ಅನುಗುಣವಾಗಿ ದಾಖಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ http://kea.kar.nic.in ಗೆ ಭೇಟಿ ನೀಡಲು ಕೋರಿದೆ. ಇದನ್ನೂ ಓದಿ:  ಭದ್ರತಾ ಪಡೆಗಳಿಂದ ಎನ್‍ಕೌಂಟರ್ – ಇಬ್ಬರು ಮಹಿಳೆಯರು ಸೇರಿ ಮೂವರು ನಕ್ಸಲರ ಹತ್ಯೆ

  • ವಸತಿ ಶಾಲೆಗಳಲ್ಲಿ CBSE ಪಠ್ಯಕ್ರಮ ಜಾರಿ: ಮಹದೇವಪ್ಪ

    ವಸತಿ ಶಾಲೆಗಳಲ್ಲಿ CBSE ಪಠ್ಯಕ್ರಮ ಜಾರಿ: ಮಹದೇವಪ್ಪ

    ಬೆಂಗಳೂರು: ವಸತಿ ಶಾಲೆಗಳಲ್ಲಿ CBSE ಪಠ್ಯಕ್ರಮ ಅಳವಡಿಕೆಗೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್‌.ಸಿ.ಮಹದೇವಪ್ಪ (H.C.Mahadevappa) ತಿಳಿಸಿದ್ದಾರೆ.

    ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಅನಿಲ್ ಕುಮಾರ್ ಪ್ರಶ್ನೆ ಕೇಳಿದರು. ವಸತಿ ಶಾಲೆಗಳಲ್ಲಿ CBSE ಪಠ್ಯಕ್ರಮ ಅಳವಡಿಕೆ ಮಾಡಬೇಕು. ವಸತಿ ಶಾಲೆಗಳಲ್ಲಿ ಪಿಯುಸಿ ತರಗತಿಗಳನ್ನ ಪ್ರಾರಂಭ ಮಾಡಬೇಕು. ವಸತಿ ಇಲಾಖೆಯಲ್ಲಿ ಖಾಲಿ ಇರೋ ಶಿಕ್ಷಕರ ಹುದ್ದೆ ನೇಮಕ ಮಾಡಬೇಕು. ವಸತಿ ಶಾಲಾ ಶಿಕ್ಷಕರ ಸಂಬಳ ಪ್ರತಿ ತಿಂಗಳು ಬೇಗ ಬಿಡುಗಡೆ ಮಾಡಿ. ಶಿಕ್ಷಣ ಇಲಾಖೆ ಶಿಕ್ಷಕರ ವೇತನ ತಿಂಗಳ ಮೊದಲ ದಿನ ಬಿಡುಗಡೆ ಆಗುತ್ತದೆ. ಅದರಂತೆ ವಸತಿ ಶಾಲೆಗಳಲ್ಲಿ ಜಾರಿ ಮಾಡಿ. ವಸತಿ ಶಾಲೆ ಮಕ್ಕಳಿಗೆ ಬೆಡ್, ಶೂ, ಸೋಪ್ ಬಾಕ್ಸ್ ಕೊಟ್ಟಿಲ್ಲ ಎಂದು ಆರೋಪ ಮಾಡಿದರು. ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳಿಗೆ SCSP-TSP ಹಣ ಬಳಕೆ – ಸರ್ಕಾರದಿಂದ ಮಾಹಿತಿ

    ಇದಕ್ಕೆ ಸಚಿವ ಮಹದೇವಪ್ಪ ಉತ್ತರ ನೀಡಿ,‌ ವಸತಿ ಶಾಲೆಗಳಲ್ಲಿ ಸದ್ಯ ರಾಜ್ಯ ಪಠ್ಯಕ್ರಮ ಇದೆ. ಪ್ರತಿ ಜಿಲ್ಲೆಗೆ ಒಂದು ವಸತಿ ಶಾಲೆಯಲ್ಲಿ CBSE ಪಠ್ಯ ಅಳವಡಿಕೆಗೆ ಕ್ರಮವಹಿಸಲಾಗುತ್ತಿದೆ. ಪ್ರಸ್ತುತ 84 ಶಾಲೆಗಳ ಪಿಯುಸಿ ತರಗತಿ ಇವೆ. ಉಳಿದ ವಸತಿ ಶಾಲೆಗಳಲ್ಲಿ ಪಿಯುಸಿ ತರಗತಿ ಪ್ರಾರಂಭಕ್ಕೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆರ್ಥಿಕ ಇಲಾಖೆ ಇನ್ನು ಅನುಮತಿ ಕೊಟ್ಟಿಲ್ಲ. ವಸತಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಒದಗಿಸಲು ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

  • ಆಸಿಡ್ ದಾಳಿಯಲ್ಲಿ ಕಣ್ಣು ಕಳೆದುಕೊಂಡಿದ್ದ ವಿದ್ಯಾರ್ಥಿನಿಗೆ ಸಿಬಿಎಸ್‍ಸಿ ಪರೀಕ್ಷೆಯಲ್ಲಿ 95% ಫಲಿತಾಂಶ

    ಆಸಿಡ್ ದಾಳಿಯಲ್ಲಿ ಕಣ್ಣು ಕಳೆದುಕೊಂಡಿದ್ದ ವಿದ್ಯಾರ್ಥಿನಿಗೆ ಸಿಬಿಎಸ್‍ಸಿ ಪರೀಕ್ಷೆಯಲ್ಲಿ 95% ಫಲಿತಾಂಶ

    ಚಂಡೀಗಢ: ಮೂರು ವರ್ಷದವಳಿದ್ದಾಗ ಆಸಿಡ್ ದಾಳಿಯಿಂದ ಕಣ್ಣುಗಳನ್ನು ಕಳೆದುಕೊಂಡಿದ್ದ ಬಾಲಕಿಯೊಬ್ಬಳು, 10ನೇ ತರಗತಿ ಸಿಬಿಎಸ್‍ಇ (CBSE) ಪರೀಕ್ಷೆಯಲ್ಲಿ 95.02% ಅಂಕಗಳನ್ನು ಗಳಿಸುವ ಮೂಲಕ ತನ್ನ ಶಾಲೆಯಲ್ಲಿ ಅಗ್ರಸ್ಥಾನ ಗಳಿಸಿದ್ದಾಳೆ.

    15 ವರ್ಷದ ಕಾಫಿ (Kafi) ಎಂಬ ವಿದ್ಯಾರ್ಥಿನಿ ಈ ಸಾಧನೆಗೈದವಳು. ಬಾಲಕಿಯ ತಂದೆ ಸಂಸ್ಥೆ ಒಂದರಲ್ಲಿ ಗುಮಾಸ್ತರಾಗಿ ಕೆಲಸ ಮಾಡುತ್ತಿದ್ದಾರೆ. ಕಾಫಿ 3 ವರ್ಷದವಳಿದ್ದಾಗ ಪಕ್ಕದ ಮನೆಯವರು ಅಸೂಯೆಯಿಂದ ಆಕೆಯ ಮೇಲೆ ಆಸಿಡ್ ದಾಳಿ ಮಾಡಿದ್ದರು. ನಂತರ ಆಕೆಯ ಸಂಪೂರ್ಣ ಮುಖವು ಸುಟ್ಟುಹೋಗಿತ್ತು. 6 ವರ್ಷಗಳ ನಂತರ ಅವಳು ಕಣ್ಣುಗಳನ್ನು ಕಳೆದುಕೊಂಡಿದ್ದಳು. ಬಳಿಕ ವಿದ್ಯಾರ್ಥಿನಿ ಬ್ರೈಲ್ ಲಿಪಿಯ ಮೂಲಕ ಅಧ್ಯಯನ ಆರಂಭಿಸಿದ್ದಳು. ಅಲ್ಲದೆ ತುಂಬ ವೇಗವಾಗಿ ಬ್ರೈಲ್ ಲಿಪಿ ಓದುವ ಕೌಶಲ್ಯ ಕರಗತ ಮಾಡಿಕೊಂಡಿದ್ದಳು. ಇದನ್ನೂ ಓದಿ: ಈ ಬಾರಿ ಸಿಎಂ ಸ್ಥಾನವನ್ನು ಒಕ್ಕಲಿಗರಿಗೆ ನೀಡಬೇಕು: ಉಮಾಪತಿ ಶ್ರೀನಿವಾಸ ಗೌಡ

    ಮಾಧ್ಯಮ ಸಂದರ್ಶನವೊಂದರಲ್ಲಿ ಮಾತನಾಡಿರುವ ಬಾಲಕಿ, ಭೂಗೋಳಶಾಸ್ತ್ರ (Geography) ನನ್ನ ನೆಚ್ಚಿನ ವಿಷಯವಾಗಿದೆ. ಮುಂದೆ ಐಎಎಸ್ (IAS) ಅಧಿಕಾರಿಯಾಗಲು ಬಯಸುತ್ತೇನೆ. ಅಲ್ಲದೆ ನನ್ನ ತಂದೆ ತಾಯಿಯ ಹೆಮ್ಮೆಯ ಮಗಳಾಗುತ್ತೇನೆ. ನಾನು ಶಿಕ್ಷಣದಲ್ಲಿ ಪ್ರಗತಿ ಸಾಧಿಸಲು ಪೋಷಕರ ಹಾಗೂ ಶಿಕ್ಷಕರ ಬೆಂಬಲ ಬಹಳಷ್ಟಿದೆ. ಅದಕ್ಕಾಗಿ ನಾನು ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಪರೀಕ್ಷೆಗಳಿಗೆ ತಯಾರಿ ನಡೆಸಲು ಯೂಟ್ಯೂಬ್ (YouTube) ಮತ್ತು ಇಂಟರ್‌ನೆಟ್ (Internet) ಮೂಲಗಳು ಸಾಕಷ್ಟು ಸಹಾಯ ಮಾಡಿದೆ ಎಂದು ಹೇಳಿಕೊಂಡಿದ್ದಾಳೆ.

    ಮಗಳ ಸಾಧನೆಯ ಬಗ್ಗೆ ಕಾಫಿಯ ತಂದೆ ಮಾತನಾಡಿ, ನಾವು ಕಾಫಿ ಬಗ್ಗೆ ಹೆಮ್ಮೆಪಡುತ್ತೇವೆ. ಅವಳು ಮುಂದೆ ಏನಾಗಲೂ ಬಯಸುತ್ತಾಳೋ ಅದನ್ನು ಬೆಂಬಲಿಸುತ್ತೇವೆ. ಅವಳ ಕನಸುಗಳನ್ನು ಈಡೇರಿಸಲು ಹಗಲಿರುಳು ಶ್ರಮಿಸುತ್ತೇವೆ. ಆಸಿಡ್ ದಾಳಿ ನಡೆದಾಗ ನನ್ನ ನೈತಿಕ ಸ್ಥೈರ್ಯ ಕುಂದಿತ್ತು. ಆದರೆ ಒಬ್ಬರ ಸಲಹೆ ಮೇರೆಗೆ ಮಗಳಿಗೆ ಶಿಕ್ಷಣ ನೀಡಲು ನಿರ್ಧರಿಸಿದೆ. ಈಗ ಕಾಫಿ ಆ ನಿರ್ಧಾರ ಸರಿ ಎಂದು ಸಾಬೀತುಪಡಿಸಿದ್ದಾಳೆ ಎಂದು ಸಂಭ್ರಮಿಸಿದ್ದಾರೆ.‌ ಇದನ್ನೂ ಓದಿ: ಸಿ.ಟಿ ರವಿ ಸೋಲಿಸಿದ್ದಕ್ಕೆ ಭೋಜೇಗೌಡರಿಗೆ ಹಾಲಿನ ಅಭಿಷೇಕ

  • ಫೇರ್‌ವೆಲ್‌ಗೆ ಅನುಮತಿ ನೀಡಿ, ನೇಹಾಳನ್ನ ಸೀರೆಯಲ್ಲಿ ನೋಡಬೇಕು: ಪ್ರಧಾನಿಗೆ ವಿದ್ಯಾರ್ಥಿಯ ಮನವಿ

    ಫೇರ್‌ವೆಲ್‌ಗೆ ಅನುಮತಿ ನೀಡಿ, ನೇಹಾಳನ್ನ ಸೀರೆಯಲ್ಲಿ ನೋಡಬೇಕು: ಪ್ರಧಾನಿಗೆ ವಿದ್ಯಾರ್ಥಿಯ ಮನವಿ

    ನವದೆಹಲಿ: ಕೊರೊನಾದಿಂದಾಗಿ ದೇಶದಲ್ಲಿ ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‍ಇ) 12ನೇ ತರಗತಿ ಪರೀಕ್ಷೆಗಳನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್‌ನಲ್ಲಿ ತಿಳಿಸುತ್ತಿದ್ದಂತೆ, 12ನೇ ತರಗತಿ ವಿದ್ಯಾರ್ಥಿಯೊಬ್ಬ ನೇಹಾಳನ್ನು ಸೀರೆಯಲ್ಲಿ ನೋಡಬೇಕು ಫೇರ್‌ವೆಲ್‌ಗೆ ಅವಕಾಶ ಕೊಡಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾನೆ.

    ಮೋದಿ ಅವರು ಸಿಬಿಎಸ್‍ಇ 12ನೇ ತರಗತಿ ಪರೀಕ್ಷೆ ರದ್ದು ಗೊಳ್ಳುತ್ತಿದ್ದಂತೆ, ಭಾರತ ಸರ್ಕಾರ ಕೊರೊನಾ ಎರಡನೇ ಅಲೆಯ ಪರಿಣಾಮ ಸಿಬಿಎಸ್‍ಇ 12ನೇ ತರಗತಿ ಪರೀಕ್ಷೆ ರದ್ದು ಮಾಡಿದೆ. ನಮ್ಮ ದೇಶದ ವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆಗೆ ಸರ್ಕಾರ ಅತ್ಯಂತ ಮಹತ್ವ ನೀಡುತ್ತದೆ. ವಿದ್ಯಾರ್ಥಿಗಳ ಆರೋಗ್ಯದ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಹಾಗಾಗಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದರು. ಇದನ್ನೂ ಓದಿ:ಮುಂದುವರಿದ ಸಂಘರ್ಷ – ಸಿಎಂ ಮಮತಾ ಬ್ಯಾನರ್ಜಿ 9 ಪ್ರಶ್ನೆಗಳಿಗೆ ಕೇಂದ್ರದ ಉತ್ತರ

    ಈ ರೀತಿ ಮೋದಿ ಟ್ವೀಟ್ ಮಡುತ್ತಿದ್ದಂತೆ ಕುಕಿ ಅಗರ್ವಾಲ್ ಎಂಬ ಹೆಸರಿನ ವಿದ್ಯಾರ್ಥಿಯೊಬ್ಬ, ಮೋದಿ ಸರ್ ದಯಮಾಡಿ ಫೇರ್ ವೆಲ್ ಕಾರ್ಯಕ್ರಮಕ್ಕೆ ಅವಕಾಶ ಮಾಡಿಕೊಡಿ. ಏಕೆಂದರೆ ನಾನು 12ನೇ ತರಗತಿಯ ನೇಹಾಳನ್ನು ಸೀರೆಯಲ್ಲಿ ನೋಡಬೇಕು ಎಂದು ಕಮೆಂಟ್ ಮಾಡಿದ್ದಾನೆ. ಇದೀಗ ಈ ಕಮೆಂಟ್ ವೈರಲ್ ಆಗತೊಡಗಿದೆ.

    ಕುಕಿ ಅಗರ್ವಾಲ್‍ನ ಟ್ವೀಟ್ ನೋಡಿ ನೆಟ್ಟಿಗರು ಹಲವು ರೀತಿಯ ಪ್ರಶ್ನೆ ಮತ್ತು ಹಾಸ್ಯ ಮಡುತ್ತಿದ್ದಾರೆ. ಈ ಟ್ವೀಟ್‍ನ್ನು ಹಲವರು ಶೇರ್ ಹಾಗೂ ಲೈಕ್ ಮಾಡುತ್ತಿದ್ದಾರೆ.

  • ಸಿಬಿಎಸ್‍ಇ ಪರೀಕ್ಷೆ ರದ್ದು – ಕರ್ನಾಟದಲ್ಲಿ ಏನು?

    ಸಿಬಿಎಸ್‍ಇ ಪರೀಕ್ಷೆ ರದ್ದು – ಕರ್ನಾಟದಲ್ಲಿ ಏನು?

    – ಅಡಕತ್ತರಿಯಲ್ಲಿ ಸಿಲುಕಿದ ಶಿಕ್ಷಣ ಇಲಾಖೆ
    – ಪರೀಕ್ಷೆ ಮಾಡಿದ್ರೂ ಕಷ್ಟ, ಮಾಡದೇ ಇದ್ರೂ ಸಮಸ್ಯೆ

    ಬೆಂಗಳೂರು: ಕೊರೊನಾ ಎರಡನೇ ಅಲೆಗೆ ಸಿಬಿಎಸ್‍ಇ  12ನೇ ತರಗತಿಯ ಪರೀಕ್ಷೆ ರದ್ದಾದ ಬೆನ್ನಲ್ಲೇ ಕರ್ನಾಟಕದಲ್ಲಿ ಪರೀಕ್ಷೆ ರದ್ದಾಗುತ್ತಾ ಎಂಬ ಪ್ರಶ್ನೆ ಎದ್ದಿದೆ.

    ರಾಜ್ಯದಲ್ಲಿ ಪರೀಕ್ಷೆ ನಡೆಸುವುದು, ರದ್ದಾಗುವುದು ತಜ್ಞರು ನೀಡುವ ವರದಿಯ ಮೇಲೆ ನಿಂತಿದೆ. ತಜ್ಞರ ವರದಿ ಆಧಾರಿಸಿ ಸರ್ಕಾರ ಅಂತಿಮ ನಿರ್ಧಾರ ಪ್ರಕಟಿಸಲಿದೆ.

    2 ದಿನಗಳಲ್ಲಿ ತಜ್ಞರು, ಅಧಿಕಾರಿಗಳ ಜೊತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಭೆ ನಡೆಸಲಿದ್ದಾರೆ. ಕಳೆದ ವರ್ಷ ತಜ್ಞರು ನೀಡಿದ ಸಲಹೆಯ ಆಧಾರದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದಿತ್ತು. ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ. ಆದರೆ ಕೊರೊನಾ ಕಾಲದಲ್ಲಿ ಪರೀಕ್ಷೆ ನಡೆಸುವುದು ಬಹಳ ಅಪಾಯಕಾರಿ. ಪರೀಕ್ಷೆ ನಡೆಸದೇ ಹೋದರೂ ಸರ್ಕಾರಕ್ಕೆ ಸಮಸ್ಯೆಯಾಗಲಿದೆ. ಒಟ್ಟಿನಲ್ಲಿ ಪರೀಕ್ಷೆ ಎಂಬ ಅಡಕತ್ತರಿಯಲ್ಲಿ ಶಿಕ್ಷಣ ಇಲಾಖೆ ಸಿಲುಕಿದೆ. ಇದನ್ನೂ ಓದಿ: ಸಿಬಿಎಸ್‍ಇ 12ನೇ ತರಗತಿ ಪರೀಕ್ಷೆ ರದ್ದು

    ಸರ್ಕಾರದ ಮುಂದಿರುವ  ಆಯ್ಕೆಗಳೇನು?
    ರಾಜ್ಯದಲ್ಲೂ 12 ಮತ್ತು 10 ನೇ ತರಗತಿ ಪರೀಕ್ಷೆ ರದ್ದು ಮಾಡಬಹುದು. ಪರೀಕ್ಷೆ ರದ್ದತಿ ಬದಲು ಸೋಂಕು ನಿಯಂತ್ರಣಕ್ಕೆ ಬಂದ ಮೇಲೆ ಪರೀಕ್ಷೆ ಮಾಡಲೂಬಹುದು. ಪರೀಕ್ಷಾ ಮಾದರಿಯಲ್ಲಿ ಬದಲಾವಣೆ ತಂದು ಎಕ್ಸಾಂ ನಡೆಸಬಹುದು. ಪರೀಕ್ಷಾ ಅವಧಿ ಕಡಿತ, ಪ್ರಶ್ನೆ ಪತ್ರಿಕೆ ಮಾದರಿ ಬದಲಾವಣೆ ಮಾಡಬಹುದು. ಪರೀಕ್ಷಾ ಅಂಕಗಳನ್ನ ಕಡಿತ ಮಾಡಿ ಪರೀಕ್ಷೆ ನಡೆಸಬಹುದು. ಪಬ್ಲಿಕ್ ಪರೀಕ್ಷೆ ಬದಲಾಗಿ ಆಯಾ ಶಾಲಾ-ಕಾಲೇಜುಗಳ ಹಂತದಲ್ಲಿ ಪರೀಕ್ಷೆ. ಆಫ್‍ಲೈನ್ ಬದಲಾಗಿ ಆನ್‍ಲೈನ್ ಮೂಲಕ ಪರೀಕ್ಷೆ ನಡೆಸಬಹುದು. ತರಗತಿಗಳ ಆಧಾರದಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ನಡೆಸಿ ಫಲಿತಾಂಶ ಪ್ರಕಟಿಸಲೂಬಹುದು.

    ಪರೀಕ್ಷೆ ಇಲ್ಲದೆ ಪಾಸ್ ಏನಾಗಬಹುದು?
    ಶೈಕ್ಷಣಿಕ ಗುಣಮಟ್ಟಕ್ಕೆ ಭಾರೀ ಹೊಡೆತ ಬೀಳುವುದರ ಜೊತೆಗೆ ಬಡ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಬಹುದು. ನೀಟ್, ಸಿಇಟಿ ಸೀಟ್ ಹಂಚಿಕೆಯಲ್ಲಿ ಭಾರೀ ಗೊಂದಲವಾಗಲಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪರೀಕ್ಷೆಯ ಬಳಿಕ ವಿದ್ಯಾರ್ಥಿಗಳು ಕೋರ್ಟ್ ಮೆಟ್ಟಿಲು ಏರಬಹುದು. ಅತ್ಯುತ್ತಮ ಕಾಲೇಜುಗಳಲ್ಲಿ ಪ್ರವೇಶಕ್ಕೆ ಸಿಕ್ಕಾಪಟ್ಟೆ ಬೇಡಿಕೆ ಸೃಷ್ಟಿಯಾಗಬಹುದು. ಕೆಲ ವಿದ್ಯಾರ್ಥಿಗಳು ಮಾನಸಿಕ ಖಿನ್ನತೆಗೆ ಒಳಗಾಗಬಹುದು. ಇದನ್ನೂ ಓದಿ: ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆ ನಡೆಯುವುದು ಉಚಿತ – ಎಸ್.ಸುರೇಶ್ ಕುಮಾರ್

    ಪರೀಕ್ಷೆ ನಡೆಸಿದ್ರೆ ಏನಾಗಬಹುದು?
    ಶಿಕ್ಷಕರು, ವಿದ್ಯಾರ್ಥಿಗಳಿಗೆ ಕೋವಿಡ್ ಅಪಾಯವಾಗಿ ಸೋಂಕು ಸ್ಫೋಟ ಆಗಬಹುದು. ಕೋವಿಡ್ ಸಾವು ನೋವು ಹೆಚ್ಚಾಗಬಹುದು.

    ತಜ್ಞರು ಹೇಳೋದು ಏನು?
    ಕೊರೊನಾ ಸಮಯದಲ್ಲಿ ಪರೀಕ್ಷೆ ನಡೆಸುವುದು ಸೂಕ್ತ ಅಲ್ಲ. ಪರೀಕ್ಷೆಗೆ ಸರ್ಕಾರ ಆತುರ ಪಡಬಾರದು. ಪರೀಕ್ಷೆ ಮಾಡಲೇಬೇಕು ಅಂದರೆ ಸೋಂಕು ನಿಯಂತ್ರಣಗೊಂಡ ಬಳಿಕ ನಡೆಸಿ. ಶಾಲಾ-ಕಾಲೇಜುಗಳ ಹಂತದಲ್ಲಿಯೇ ಆಫ್‍ಲೈನ್ ಬದಲು ಆನ್‍ಲೈನ್ ಪರೀಕ್ಷೆ ನಡೆಸಬೇಕು.

    ಪರೀಕ್ಷೆ ಬೇಡ ಎನ್ನುವವರ ವಾದ ಏನು?
    ಕೊರೊನಾ ಪರಿಸ್ಥಿತಿಯಲ್ಲಿ ಪರೀಕ್ಷೆ ನಡೆಸಬಾರದು. ಮಕ್ಕಳ ಶಿಕ್ಷಣಕ್ಕಿಂತ ಮಕ್ಕಳ ಜೀವ ನಮಗೆ ಮುಖ್ಯ. ಈ ಕೊರೊನಾ ವರ್ಷದಲ್ಲಿ ಪರೀಕ್ಷೆಯೇ ಬೇಡ. ಕೇಂದ್ರದ ಮಾದರಿಯಲ್ಲಿ ಎಲ್ಲರನ್ನು ಪಾಸ್ ಮಾಡಿ.

    ಪರೀಕ್ಷೆ ಬೇಕು ಎನ್ನುವವರ ವಾದ ಏನು?
    ಸರ್ಕಾರ ಪರೀಕ್ಷೆ ರದ್ದು ಮಾಡಬಾರದು. ಎಸ್‍ಎಸ್‍ಎಲ್‍ಸಿ ಮತ್ತು ಸೆಕೆಂಡ್ ಪಿಯುಸಿ ಪರೀಕ್ಷೆ ಮುಖ್ಯ. ಸಾಮೂಹಿಕವಾಗಿ ಪಾಸ್ ನಿರ್ಧಾರ ಸರಿಯಲ್ಲ. ಒಂದು ವೇಳೆ ಎಲ್ಲರನ್ನೂ ಪಾಸ್ ಮಾಡಿದರೆ ಅಷ್ಟು ವಿದ್ಯಾರ್ಥಿಗಳಿಗೆ ಪಿಯು ಕಾಲೇಜುಗಳಲ್ಲಿ ಸೀಟ್ ಸಿಗಲಾರದು. ಬೇಡಿಕೆ ಜಾಸ್ತಿಯಾದರೆ ಕಾಲೇಜುಗಳೇ ಪರೀಕ್ಷೆ ನಡೆಸಿ ಪ್ರವೇಶ ನೀಡಬಹುದು. ಹೀಗಾಗಿ ಸೋಂಕು ನಿಯಂತ್ರಣಕ್ಕೆ ಬಂದ ಮೇಲೆ ಪರೀಕ್ಷೆ ನಡೆಸಲಿ. ಇಲ್ಲ ಅಂದ್ರೆ ನೀಟ್, ಸಿಇಟಿ ವೇಳೆ ಮಕ್ಕಳಿಗೆ ತೊಂದರೆ ಆಗುತ್ತದೆ.

    ಕರ್ನಾಟಕದಲ್ಲಿ ಪರೀಕ್ಷೆ ಬೇಕೇ? ರದ್ದು ಮಾಡಬೇಕೇ? ನಿಮ್ಮ ಅಭಿಪ್ರಾಯ ಏನು? ಕಮೆಂಟ್ ಮಾಡಿ ತಿಳಿಸಿ.